2024ನೇ ಸಾಲಿನ ದಕ್ಷಿಣ ಭಾರತದ ಪ್ರತಿಷ್ಠಿತ ಪ್ರಶಸ್ತಿ ಸೈಮಾ ಸಮಾರಂಭ ದುಬೈನಲ್ಲಿ ಸೆಪ್ಟಂಬರ್ 14 ಮತ್ತು 15ರಂದು ನಡೆಯಲಿದೆ. ಇದರ ಭಾಗವಾಗಿ ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ನಿನ್ನೆ ಸುದ್ದಿಗೋಷ್ಠಿ ಆಯೋಜಿಸಲಾಗಿದೆ. ಸೈಮಾ ಅಧ್ಯಕ್ಷರಾದ ಬೃಂದಾ ಪ್ರಸಾದ್, ನಟರಾದ ಡಾಲಿ ಧನಂಜಯ್, ರಿಷಿ, ನಟಿಯರಾದ ನೇಹಾ ಶೆಟ್ಟಿ, ನಿಧಿ ಅಗರ್ವಾಲ್, ಅವಿಕಾ ಗೋರ್, ಶಾನ್ವಿ ಶ್ರೀವಾಸ್ತವ್, ಶುಭ್ರ ಅಯ್ಯಪ್ಪ, ಮಾರುತಿ ಸುಜುಕಿ ಇಂಡಿಯಾಲಿಮಿಟೆಡ್ ಸೀನಿಯರ್ ಎಕ್ಸಿಕ್ಯೂಟಿವ್ ಆಫೀಸರ್ ನೊಬುಟಾಕಾ ಸುಜುಕಿ, ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ರಾಯ್ ಸಿಜೆ ಸೇರಿದಂತೆ ಹಲವರು ಭಾಗಿಯಾಗಿದ್ದರು. ಬೃಂದಾ ಪ್ರಸಾದ್ ಮಾತನಾಡಿ, ಈ ಬಾರಿ ನಡೆಯುತ್ತಿರುವುದು 12ನೇ ಆವೃತ್ತಿ ಸೈಮಾ. 12 ಬರೀ ನಂಬರ್ ಅಲ್ಲ. ಅದೊಂದು ಸುಂದರ ಪಯಣ. ದಕ್ಷಿಣ ಭಾರತದಲ್ಲಿ ಪ್ರತಿ ವರ್ಷ ನಡೆಯುವ ಪ್ರತಿಷ್ಠಿತ ಪ್ರಶಸ್ತಿ ಎಂಬ ಹೆಗ್ಗಳಿಕೆಗೆ ಸೈಮಾ ಭಾಜನವಾಗಿದೆ. ದಕ್ಷಿಣ ಸಿನಿರಂಗದ ಪ್ರತಿಭೆಗಳನ್ನು ಗುರುತಿಸಿ ಅಂತರಾಷ್ಟ್ರೀಯ ಮಟ್ಟದಲ್ಲಿ ಸಂಭ್ರಮಿಸುವ ಸೈಮಾದಲ್ಲಿ ನಾಲ್ಕು ಇಂಡಸ್ಟ್ರೀಗಳು ಒಂದೇ ಕುಟುಂಬದಂತೆ ಭಾಗಿಯಾಗುತ್ತಾರೆ ಎಂದು ತಿಳಿಸಿದರು.
ನಟ ಡಾಲಿ ಧನಂಜಯ್ (Dolly Dhananjay) ಮಾತನಾಡಿ, ಸೈಮಾ ಎಂದರೆ ನಮಗೆ ಖುಷಿ. ಈ ಬಾರಿ ದುಬೈನಲ್ಲಿ ಮತ್ತೆ ಸೈಮಾ ಆಗುತ್ತಿದೆ. ಸೈಮಾ ನನಗೆ ಅದ್ಭುತ ಮೆಮೋರಿ ಕ್ರಿಯೇಟ್ ಮಾಡುವ ಜಾಗ. ಲಾಸ್ಟ್ ಇಯರ್ ನನ್ನ ಹುಟ್ಟುಹಬ್ಬಕ್ಕೆ ಇಂಡಸ್ಟ್ರೀಗೆಲ್ಲಾ ನಾನು ಪಾರ್ಟಿ ಕೊಟ್ಟಿದೆ. ಈ ಬಾರಿ ನನಗೆ ಸೈಮಾದಿಂದ ಪಾರ್ಟಿ ಕೊಡುತ್ತಿದ್ದಾರೆ. ಎಲ್ಲಾ ಇಂಡಸ್ಟ್ರೀಯ ಕಲಾವಿದರು, ನಿರ್ದೇಶಕರನ್ನು ನೋಡುವ ಒಳ್ಳೆ ವೇದಿಕೆ. ಈ ರೀತಿಯ ಇವೆಂಟ್ ಚೆನ್ನಾಗಿರುತ್ತವೆ, ಸೈಮಾ ಎಂದಾಗ ನಮ್ಮ ಪ್ರೆಸೆಂಟ್ ಇರುತ್ತದೆ. ಲಿರಿಕ್ಸ್ ಕೆಟಗರಿಯಲ್ಲಿ ನಾನು ನಾಮಿನೇಟ್ ಮಾಡಲಾಗಿದೆ. ಸೈಮಾ ಅನ್ನುವುದು ಸೆಲೆಬ್ರೆಷನ್ ಎಂದು ಸಂತಸ ಹಂಚಿಕೊಂಡರು.
ನಿಧಿ ಅಗರ್ವಾಲ್ ಮಾತನಾಡಿ, ನಾನು ಇಲ್ಲಿ ಭಾಗಿಯಾಗಿರುವುದಕ್ಕೆ ಬಹಳಷ್ಟು ಖುಷಿಯಾಗಿದೆ. ಪ್ರತಿ ವರ್ಷ ನಡೆಯುವ ಸೈಮಾ ಸಂಭ್ರಮದಲ್ಲಿ ನಾನು ಭಾಗಿಯಾಗುತ್ತಿದ್ದೇನೆ. ಸೈಮಾ ಎನ್ನುವುದು ಅಮೇಜಿಂಗ್ ಶೋ. ಸೈಮಾದಲ್ಲಿ ಎಲ್ಲರನ್ನೂ ನೋಡುವುದು ಖುಷಿ ಎಂದರು. ಶಾನ್ವಿ ಶ್ರೀವಾಸ್ತವ್ ಮಾತನಾಡಿ, ಸೈಮಾ ಎನ್ನುವುದು ಹೋಳಿ, ದೀಪಾವಳಿ ರೀತಿ ಹಬ್ಬ. ಪ್ರತಿ ವರ್ಷದಂತೆ ಈ ವರ್ಷ ಸೈಮಾ ಮತ್ತೆ ಬಂದಿದೆ. ನಾನು ಸೆಲೆಬ್ರೆಟ್ ಮಾಡಲು ಕಾಯುತ್ತಿದ್ದೇವೆ. ಎಲ್ಲಾ ಇಂಡಸ್ಟ್ರೀಯ ಕಲಾವಿದರು ಒಂದು ಜಾಗದಲ್ಲಿ ಒಂದು ಸಮಾರಂಭದಲ್ಲಿ ಭಾಗಿಯಾಗಿ ಸಿನಿಮಾವನ್ನು ಸಂಭ್ರಮಿಸುತ್ತೇವೆ ಎಂದರು.
ಈಗಾಗಲೇ ಸೈಮಾ ಪ್ರಶಸ್ತಿಗೆ ನಾಮಿನೇಷನ್ಸ್ ಆರಂಭವಾಗಿದೆ. ‘ಕಾಟೇರ’ (Katera) ಹಾಗೂ ಸಪ್ತಸಾಗರದಾಚೆ ಎಲ್ಲೋ ಸೈಡ್-ಎ (Saptasagaradache Yello) ಸಿನಿಮಾಗಳು ಸೈಮಾ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿವೆ. ತರುಣ್ ಸುಧೀರ್ ನಿರ್ದೇಶನದ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ಕಾಟೇರ ಚಿತ್ರ 8 ವಿಭಾಗಗಳಲ್ಲಿ ನಾಮಿನೇಟ್ ಆಗಿದೆ. ಅತ್ತ ರಕ್ಷಿತ್ ಶೆಟ್ಟಿ ನಟನೆಯ, ಹೇಮಂತ್ ರಾವ್ ನಿರ್ದೇಶನದ ಸಪ್ತಸಾಗರದಾಚೆ ಎಲ್ಲೋ ಸೈಡ್-ಎ ಚಿತ್ರ 7 ವಿಭಾಗಗಳಲ್ಲಿ ನಾಮನಿರ್ದೇಶನಗೊಂಡಿದೆ.
ತೆಲುಗಿನಲ್ಲಿ, ನಾನಿ ಮತ್ತು ಕೀರ್ತಿ ಸುರೇಶ್ ಅಭಿನಯದ ಶ್ರೀಕಾಂತ್ ಒಡೆಲಾ ನಿರ್ದೇಶನದ ‘ದಸರಾ’ ಚಿತ್ರ 11 ವಿಭಾಗಗಳಲ್ಲಿ ನಾಮನಿರ್ದೇಶನಗೊಂಡಿದ್ದು, ನಾನಿ ಮತ್ತು ಮೃಣಾಲ್ ಠಾಕೂರ್ ಅಭಿನಯದ ‘ಹಾಯ್ ನನ್ನಾ’ 10 ವಿಭಾಗಗಳಲ್ಲಿ ನಾಮಿನೇಷನ್ ಗೊಂಡಿದೆ. ತಮಿಳಿನಲ್ಲಿ, ರಜನಿಕಾಂತ್ ಅಭಿನಯದ ನೆಲ್ಸನ್ ದಿಲೀಪ್‌ಕುಮಾರ್ ನಿರ್ದೇಶನದ ‘ಜೈಲರ್’ 11 ವಿಭಾಗದಲ್ಲಿ ನಾಮನಿರ್ದೇಶನಗಳೊಂದಿಗೆ ಮುಂಚೂಣಿಯಲ್ಲಿದ್ದರೆ, ಉದಯನಿಧಿ ಸ್ಟಾಲಿನ್ ಮತ್ತು ಕೀರ್ತಿ ಸುರೇಶ್ ಅಭಿನಯದ ‘ಮಾಮಣ್ಣನ್’ ಸಿನಿಮಾ 9 ವಿಭಾಗಗಳಲ್ಲಿ ನಾಮನಿರ್ದೇಶನಗೊಂಡಿದೆ. ಮಲಯಾಳಂನಲ್ಲಿ, ಟೊವಿನೋ ಥಾಮಸ್ ಮತ್ತು ಆಸಿಫ್ ಅಲಿ ಅಭಿನಯದ ಜೂಡ್ ಆಂಥನಿ ಜೋಸೆಫ್ ನಿರ್ದೇಶನದ ‘2018’ ಸಿನಿಮಾ 8 ವಿಭಾಗಗಳಲ್ಲಿ ನಾಮನಿರ್ದೇಶನಗೊಂಡಿದೆ, ಮಮ್ಮುಟ್ಟಿ ಮತ್ತು ಜ್ಯೋತಿಕಾ ಅಭಿನಯದ ‘ಕಾತಲ್ – ದಿ ಕೋರ್’ 7 ವಿಭಾಗಗಳಲ್ಲಿ ನಾಮಿನೇಷನ್ ಆಗಿದೆ.
ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿಯ (Chandanavan, Film, Critics, Award) 5ನೇ ವರ್ಷದ ಪ್ರಶಸ್ತಿಗಳ ನಾಮ ನಿರ್ದೇಶನ ಘೋಷಣೆ ಮತ್ತು ಟ್ರೋಫಿ ಅನಾವರಣ ಕಾರ್ಯಕ್ರಮ ಜನವರಿ 16ರಂದು ಬೆಂಗಳೂರಿನಲ್ಲಿ ನಡೆಯಿತು. ಖ್ಯಾತ ನಿರ್ದೇಶಕ ಇಂದ್ರಜಿತ್ ಲಂಕೇಶ್ ಮತ್ತು ನಟಿ ಅಮೂಲ್ಯ ಟ್ರೋಫಿಯನ್ನು ಅನಾವರಣಗೊಳಿಸಿದರು. ಇದೇ ಸಂದರ್ಭದಲ್ಲಿ 5ನೇ ವರ್ಷದ ಪ್ರಶಸ್ತಿಗಳಿಗಾಗಿ ನಾಮ ನಿರ್ದೇಶನ ಆಯ್ಕೆಗಳನ್ನು ಘೋಷಣೆ ಮಾಡಿದ್ದು ದರ್ಶನ್ ನಟನೆಯ ಕಾಟೇರ ಚಿತ್ರವು ಅತೀ ಹೆಚ್ಚು ವಿಭಾಗಗಳಲ್ಲಿ ನಾಮ ನಿರ್ದೇಶನಗೊಂಡಿದ್ದು, ರಕ್ಷಿತ್ ನಟನೆಯ ಸಪ್ತ ಸಾಗರದಾಚೆ ಎಲ್ಲೋ ಎರಡನೇ ಸ್ಥಾನವನ್ನು ಅಲಂಕರಿಸಿದೆ. ಅತ್ಯುತ್ತಮ ನಟ (ದರ್ಶನ್) ಅತ್ಯುತ್ತಮ ಚಿತ್ರ, ಅತ್ಯುತ್ತಮ ನಿರ್ದೇಶಕ (ತರುಣ್ ಸುಧೀರ್) ಸೇರಿದಂತೆ ಕಾಟೇರ ಸಿನಿಮಾ ಬರೋಬ್ಬರಿ 15 ವಿಭಾಗಗಳಲ್ಲಿ ನಾಮ ನಿರ್ದೇಶನಗೊಂಡಿದ್ದು, ಅತ್ಯುತ್ತಮ ನಟ (ರಕ್ಷಿತ್ ಶೆಟ್ಟಿ) ಸೇರಿದಂತೆ ಸಪ್ತಸಾಗರದಾಚೆ ಎಲ್ಲೋ 13 ವಿಭಾಗಗಳಲ್ಲಿ ಕಾಣಿಸಿಕೊಂಡಿದೆ.
ಐದು ಚೊಚ್ಚಲ ಪ್ರಶಸ್ತಿಗಳು ಸೇರಿದಂತೆ ಒಟ್ಟು 25 ವಿಭಾಗಗಳಲ್ಲಿ ಈ ನಾಮ ನಿರ್ದೇಶನಗೊಂಡಿದ್ದು, ಚೊಚ್ಚಲ ವಿಭಾಗದಲ್ಲಿ ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ, ಡೇರ್ ಡೆವಿಲ್ ಮುಸ್ತಫಾ, ಆಚಾರ್ ಅಂಡ್ ಕೋ ಚಿತ್ರಗಳು ಕೂಡ ನಾನಾ ವಿಭಾಗಗಳಲ್ಲಿ ಕಾಣಿಸಿಕೊಂಡು ಪೈಪೋಟಿ ನಡೆಸಿವೆ. ಟ್ರೋಫಿ ಅನಾವರಣಗೊಳಿಸಿ ಮಾತನಾಡಿದ ಇಂದ್ರಜಿತ್ ಲಂಕೇಶ್, ನಾನೂ ಒಬ್ಬ ಪತ್ರಕರ್ತನಾಗಿ ಅಕಾಡಮಿ ಮತ್ತು ವಿಮರ್ಶಕರ ಪ್ರಶಸ್ತಿಗಳು ನಿಷ್ಪಕ್ಷಪಾತವಾಗಿ ಮತ್ತು ವಿಶ್ವಾಸ ಮೂಡಿಸುವಂತಹ ಆಯ್ಕೆಗಳು ಆಗಿವೆ. ಈ ಕುರಿತು ನನಗೆ ಹೆಮ್ಮೆ ಅನಿಸುತ್ತದೆ. ಕನ್ನಡದ ಅತ್ಯುತ್ತಮ ಮನರಂಜನೆಯನ್ನು ಗುರುತಿಸುವಲ್ಲಿ ಮತ್ತು ಚಿತ್ರೋದ್ಯಮವನ್ನು ಉತ್ತೇಜಿಸಲು ಚಲನಚಿತ್ರ ಪತ್ರಕರ್ತರು ಪ್ರಶಸ್ತಿಯನ್ನು ನೀಡುವ ಮೂಲಕ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ’ ಎಂದು ಶ್ಲ್ಯಾಘಿಸಿದರು.
ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡಮಿ ಪ್ರಶಸ್ತಿ ಅಂದರೆ, ಅದೊಂದು ದೊಡ್ಡ ಗೌರವ. ಟೀಕಿಸುವ ಪತ್ರಕರ್ತರೇ ಮೆಚ್ಚಿ ಪ್ರಶಸ್ತಿ ಕೊಡುವಾಗ ಆಗುವ ಖುಷಿಯೇ ಬೇರೆ. ನಾಮ ನಿರ್ದೇಶನಗೊಂಡ ಎಲ್ಲರಿಗೂ ಮತ್ತು ಪ್ರಶಸ್ತಿ ಪಡೆಯುವ ಪ್ರತಿಯೊಬ್ಬರಿಗೂ ಶುಭಾಶಯಗಳು ಎಂದರು ನಟಿ ಅಮೂಲ್ಯ. ಅಕಾಡೆಮಿಯು ಪ್ರಶಸ್ತಿಗಳನ್ನು ನೀಡುವುದರ ಜೊತೆ ಪ್ರಶಸ್ತಿ ಪ್ರತಿ ವರ್ಷವೂ ಸಮಾಜಮುಖಿ ಕೆಲಸಗಳನ್ನು ಉತ್ತೇಜಿಸುವಂತಹ ಕೆಲಸಕ್ಕೆ ಮುಂದಾಗಿದ್ದು ಗೊತ್ತೇ ಇದೆ. ಈ ಬಾರಿ ಕರ್ನಾಟಕ ಸರಕಾರದ ಆರೋಗ್ಯ ಇಲಾಖೆಯ ಜೊತೆ ಅಂಗಾಂಗ ದಾನ ಅಭಿಯಾನಕ್ಕೆ ಕೈ ಜೋಡಿಸಿದೆ. ಸಾಕಷ್ಟು ಕಲಾವಿದರು ಮತ್ತು ತಂತ್ರಜ್ಞರು ನಮ್ಮ ಈ ಅಭಿಯಾನಕ್ಕೆ ಬೆಂಬಲ ಸೂಚಿಸಿ, ಮಾತನಾಡಿದ್ದಾರೆ.
ಅಂಗಾಂಗ ದಾನ ಅಭಿಯಾನಕ್ಕೆ ಅಕಾಡಮಿ ಜೊತೆ ಬೆಂಗಳೂರಿನ ಕಾವೇರಿ ಆಸ್ಪತ್ರೆ ಕೂಡ ಜೊತೆಯಾಗಿದ್ದು, ಈ ಕುರಿತಂತೆ ಮಾತನಾಡಿದ ಆಸ್ಪತ್ರೆಯ ಉಪಾಧ್ಯಕ್ಷ ವೆಲ್ ಫ್ರೆಡ್ ಸ್ಯಾಮ್ಸನ್, ‘ಅಂಗಾಂಗ ದಾನ ಪ್ರಚಾರಕ್ಕೆ ಚಿತ್ರೋದ್ಯಮದ ಕೊಡುಗೆ ಅಪಾರ. ಡಾ.ರಾಜ್ ಕುಮಾರ್, ಪುನೀತ್ ರಾಜ್ ಕುಮಾರ್ ಅವರು ಕಣ್ಣುದಾನ ಮಾಡುವ ಮೂಲಕ ಸಾಕಷ್ಟು ಜನರಿಗೆ ಪ್ರೇರಣೆ ನೀಡಿದ್ದಾರೆ. ಸಂಚಾರಿ ವಿಜಯ್ ಅವರು ಅಂಗಾಂಗ ದಾನ ಮಾಡಿದ್ದರೆ, ಲೋಕೇಶ್ ಹಾಗೂ ಲೋಹಿತಾಶ್ವ ಅವರು ದೇಹದಾನ ಮಾಡಿದ್ದಾರೆ. ಇಂತಹ ಉದ್ಯಮಕ್ಕೆ ಬೆಂಬಲವಾಗಿ ನಿಂತಿರುವ ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡಮಿಯ ಕಾರ್ಯಕ್ರಮಕ್ಕೆ ನಾವು ಭಾಗವಾಗಿದ್ದು ಹೆಮ್ಮೆ ಅನಿಸುತ್ತದೆ ಎಂದರು.
ನಟ ಶರಣ್ ನಾಮ ನಿರ್ದೇಶನದ ಪಟ್ಟಿಯನ್ನು ಬಿಡುಗಡೆ ಮಾಡಿ, ವಿಮರ್ಶಕರು ನೀಡುವ ಪ್ರಶಸ್ತಿ ಅತ್ಯಂತ ಜವಾಬ್ದಾರಿಯಿಂದ ಕೂಡಿರುತ್ತದೆ. ಇಂತಹ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದು ಹೆಮ್ಮೆ ತಂದಿದೆ ಎಂದರು. ಪ್ರತಿ ವರ್ಷದಂತೆ ಈ ಬಾರಿಯೂ ಅಚ್ಚರಿ ಹೆಸರುಗಳು ನಾಮ ನಿರ್ದೇಶನ ಪಟ್ಟಿಯಲ್ಲಿದ್ದು, ಜನವರಿ 28 ರವಿವಾರದಂದು ಸಂಜೆ ನಡೆಯುವ ಅದ್ಧೂರಿ ಸಮಾರಂಭದಲ್ಲಿ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ.
ಅತ್ಯುತ್ತಮ ಚೊಚ್ಚಲ ನಿರ್ಮಾಣ ~ Dr ಪುನೀತ್ ರಾಜಕುಮಾರ್ ಪ್ರಶಸ್ತಿ
೧. ಸ್ವಾತಿ ಮುತ್ತಿನ ಮಳೆ ಹನಿಯೇ (ರಮ್ಯ – ಆಪಲ್ ಬಾಕ್ಸ್ ಸ್ಟುಡಿಯೋಸ್)
೨. ಹಾಸ್ಟೇಲ್ ಹುಡುಗರು ಬೇಕಾಗಿದ್ದಾರೆ (ವರುಣ್ ಸ್ಟುಡಿಯೋಸ್)
೩. ಡೇರ್‌ಡೆವಿಲ್ ಮುಸ್ತಫಾ (ಸಿನೆಮಾ ಮರ)
೪. ಸೌತ್ ಇಂಡಿಯನ್ ಹೀರೋ (ಶಿಲ್ಪಾ ಎಲ್.ಎಸ್)
೫. ಮಂಡಲ (ಅಜಯ್ ಸರ್ಪೆಷ್ಕರ್)
ಅತ್ಯುತ್ತಮ ಚೊಚ್ಚಲ ನಟಿ ~ ತ್ರಿಪುರಾಂಬ ಅವಾರ್ಡ್
೧. ಆರಾಧನಾ ರಾಮ್ (ಕಾಟೇರ)
೨. ನಿರೀಕ್ಷಾ ರಾವ್ (ರಾಜಯೋಗ)
೩. ಅಮೃತಾ ಪ್ರೇಮ್ (ಟಗರು ಪಲ್ಯ)
೪. ಚೈತ್ರ ಹೆಚ್.ಜಿ (ಮಾವು ಬೇವು)
೫. ಪ್ರೀತಿಕ ದೇಶಪಾಂಡೆ (ಪೆಂಟಗನ್)
ಅತ್ಯುತ್ತಮ ಚೊಚ್ಚಲ ನಟ ~ ಸಂಚಾರಿ ವಿಜಯ್ ಪ್ರಶಸ್ತಿ
೧. ಶಿಶಿರ ಬೈಕಾಡಿ (ಡೇರ್‌ಡೆವಿಲ್ ಮುಸ್ತಫಾ)
೨. ರಾಜೇಶ್ ಧ್ರುವ ( ಶ್ರೀ ಬಾಲಾಜಿ ಫೋಟೋ ಸ್ಟುಡಿಯೋ)
೩. ಶಿವಣ್ಣ ಬೀರುಹುಂಡಿ (ದೊಡ್ಡಹಟ್ಟಿ ಬೋರೇಗೌಡ)
೪. ಕಿರಣ್ ನಾರಾಯಣ್ (ಸ್ನೇಹಶ್ರೀ)
೫. ಸಾರ್ಥಕ್ (ಸೌತ್ ಇಂಡಿಯನ್ ಹೀರೋ)
ಅತ್ಯುತ್ತಮ ಚೊಚ್ಚಲ ಬರಹಗಾರ ~ ಚಿ ಉದಯಶಂಕರ್ ಪ್ರಶಸ್ತಿ
೧. ರಾಮೇನಹಳ್ಳೀ ಜಗನ್ನಾಥ್ (ಹೊಂದಿಸಿ ಬರೆಯಿರಿ)
೨. ನಿತಿನ್ ಕೃಷ್ಣಮೂರ್ತಿ (ಹಾಸ್ಟೇಲ್ ಹುಡುಗರು ಬೇಕಾಗಿದ್ದಾರೆ)
೩. ಸಿಂಧು ಶ್ರೀನಿವಾಸಮೂರ್ತಿ (ಆಚಾರ್ ಅಂಡ್ ಕೋ)
೪. ಉಮೇಶ್ ಕೃಪಾ (ಟಗರು ಪಲ್ಯ)
೫. ಅಜಯ್ ಸರ್ಪೆಶ್ಕರ್ (ಮಂಡಲ)
ಅತ್ಯುತ್ತಮ ಚೊಚ್ಚಲ ನಿರ್ದೇಶನ ಶಂಕರ್ ನಾಗ್ ಅವಾರ್ಡ್
೧. ಸಿಂಧು ಶ್ರೀನಿವಾಸಮೂರ್ತಿ (ಆಚಾರ್ ಅಂಡ್ ಕೋ)
೨. ನಿತಿನ್ ಕೃಷ್ಣಮೂರ್ತಿ (ಹಾಸ್ಟೇಲ್ ಹುಡುಗರು ಬೇಕಾಗಿದ್ದಾರೆ)
೩. ಶಶಾಂಕ್ ಸೋಗಲ್ (ಡೇರ್ ಡೆವಿಲ್ ಮುಸ್ತಾಫಾ)
೪. ದೇವೇಂದ್ರ ಬಡಿಗೇರ್ (ರುದ್ರಿ)
೫. ಉಮೇಶ್ ಕೃಪಾ (ಟಗರು ಪಲ್ಯ)
ಅತ್ಯುತ್ತಮ ವಿಎಫ್‍್ಎಕ್ಸ್
ಸಪ್ತಸಾಗರದಾಚೆ ಎಲ್ಲೋ (ಎಮತ್ತುಬಿ) ಪಿಂಕ್ ಸ್ಟುಡಿಯೋಸ್ – ರಾಹುಲ್ ವಿ. ಗೋಪಾಲಕೃಷ್ಣ
ಕಳೆದ ವರ್ಷ ತಮ್ಮ ವಿಭಿನ್ನ ಪ್ರಯತ್ನದಿಂದ ಕನ್ನಡ ಚಿತ್ರರಂಗಕ್ಕೆ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಜನಪ್ರಿಯತೆ ತಂದುಕೊಟ್ಟ ‘ಕಾಂತಾರ’ ಖ್ಯಾತಿಯ ರಿಷಭ್ ಶೆಟ್ಟಿ (Rishab Shetty) ಈಗ ‘ಐಕಾನಿಕ್ ಡೈರೆಕ್ಟರ್’ ಆಗಿ ಹೊರಹೊಮ್ಮಿದ್ದಾರೆ. ಇನ್ನು, ‘777 ಚಾರ್ಲಿ’ ಚಿತ್ರದಲ್ಲಿ ತಮ್ಮ ಅದ್ಭುತ ಅಭಿನಯದಿಂದ ಎಲ್ಲರ ಮೆಚ್ಚುಗೆಗೆ ಪಾತ್ರವಾದ ರಕ್ಷಿತ್ ಶೆಟ್ಟಿ (Rakshit Shetty) ‘ಟ್ರೆಂಡಿಂಗ್ ಆ್ಯಕ್ಟರ್’ ಆಗಿದ್ದಾರೆ. ಅವರಿಬ್ಬರಿಗೂ ಇಂಥದ್ದೊಂದು ಪ್ರಶಸ್ತಿಗೆ (Award) ಭಾಜನರಾಗಿರುವುದು ಇನ್ನೋವೇಟೀವ್ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಉದ್ಘಾಟನಾ ಸಮಾರಂಭದಲ್ಲಿ.
ಇನ್ನೋವೇಟೀವ್ ಫಿಲಂ ಅಕಾಡೆಮಿ ಮತ್ತು ಇನ್ನೋವೇಟೀವ್ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಸಂಸ್ಥಾಪಕ ಶರವಣ ಪ್ರಸಾದ್, ಮಾರತ್‍ಹಳ್ಳಿಯ ಇನ್ನೋವೇಟೀವ್ ಮಲ್ಟಿಪ್ಲೆಕ್ಸ್ ನಲ್ಲಿ ಆಯೋಜಿಸಿರುವ ನಾಲ್ಕು ದಿನಗಳ 6ನೇ ಇನ್ನೋವೇಟೀವ್ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ಉದ್ಘಾಟನಾ ಸಮಾರಂಭ ಇತ್ತೀಚೆಗೆ ನಡೆಯಿತು. ಈ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಐ.ಎ.ಎಸ್ ಅಧಿಕಾರಿ ಅಪೂರ್ವ ಚಂದ್ರ ಭಾಗವಹಿಸಿ, ಚಿತ್ರೋತ್ಸವವನ್ನು ಉದ್ಘಾಟಿಸಿದರು. ಚಿತ್ರೋತ್ಸವದ ಅಧ್ಯಕ್ಷ ರಾಕ್‍ಲೈನ್ ವೆಂಕಟೇಶ್, ಫಿಲಂ ಫೆಡರೇಶನ್ ಆಫ್ ಇಂಡಿಯಾದ ಅಧ್ಯಕ್ಷ ರವಿ ಕೊಟ್ಟಾರ್ಕರ ಮತ್ತು ಹಲವು ಅಂತಾರಾಷ್ಟ್ರೀಯ ಖ್ಯಾತಿಯ ನಿರ್ದೇಶಕರು ಅತಿಥಿಗಳಾಗಿ ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ ರಕ್ಷಿತ್ ಶೆಟ್ಟಿ ಮತ್ತು ರಿಷಭ್ ಶೆಟ್ಟಿ ಅವರಿಗೆ ಪ್ರಶಸ್ತಿ ನೀಡಿ ಆತ್ಮೀಯವಾಗಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ರಿಷಭ್ ಶೆಟ್ಟಿ, ‘’ಕಾಂತಾರ’ ಚಿತ್ರಕ್ಕೆ ಸಿಕ್ಕ ಪ್ರಶಸ್ತಿಗಳು ಮತ್ತು ಜನಪ್ರಿಯತೆ ಇವೆಲ್ಲವೂ ಸಲ್ಲಬೇಕಾಗಿರುವುದು ಕನ್ನಡಿಗರಿಗೆ. ಅವರು ಈ ಚಿತ್ರಕ್ಕೆ ಅದ್ಭುತ ಯಶಸ್ಸು ಕೊಟ್ಟು ಅಲ್ಲಿಂದ ಅದು ಬೇರೆಬೇರೆ ಭಾಷೆಗಳಿಗೆ ತಲುಪಿತು. ಹಾಗಾಗಿ, ಕನ್ನಡಿಗರಿಗೆ ಚಿರಋಣಿ. ಕನ್ನಡ ಚಿತ್ರಗಳು ರಾಷ್ಟ್ರ ಮಟ್ಟದಲ್ಲಿ ಜನಪ್ರಿಯತೆ ಪಡೆಯುತ್ತಿವೆ. ಹಲವು ಅಂತಾರಾಷ್ಟ್ರೀಯ ಚಿತ್ರೋತ್ಸವಗಳಲ್ಲಿ ಪ್ರದರ್ಶನಗೊಂಡಿವೆ. ಆದರೆ, ಆ ಚಿತ್ರಗಳಿಗೆ ಇಲ್ಲಿ ಚಿತ್ರಮಂದಿರಗಳು ಸಿಗುವುದಿಲ್ಲ. ಹಾಗೆಯೇ, ಓಟಿಟಿಗಳಲ್ಲೂ ಪ್ರಾಧಾನ್ಯತೆ ಸಿಗುವುದಿಲ್ಲ. ಎನ್.ಎಫ್.ಡಿ.ಸಿ ಮತ್ತು ಫಿಲಂ ಬಜಾರ್ ಗಳಿಗೆ ಆಯ್ಕೆಯಾಗುವ ಚಿತ್ರಗಳಿಗೆ ಪ್ರದರ್ಶನವಾಗುವಂತೆ ಒಂದು ವೇದಿಕೆ ಕಲ್ಪಿಸಬೇಕು’ ಎಂದು ಐ.ಎ.ಎಸ್ ಅಧಿಕಾರಿ ಅಪೂರ್ವ ಚಂದ್ರ ಅವರಿಗೆ ಮನವಿ ಸಲ್ಲಿಸಿದರು. ಇದನ್ನೂ ಓದಿ:ಬಳಕುವ ಬಳ್ಳಿಯಂತೆ ಹಾಟ್ ಆಗಿ ಕಾಣಿಸಿಕೊಂಡ ‘ಕೆಜಿಎಫ್’ ನಟಿ
ರಕ್ಷಿತ್ ಶೆಟ್ಟಿ ಮಾತನಾಡಿ, ‘’777 ಚಾರ್ಲಿ’ ನನ್ನ ವೃತ್ತಿಜೀವನದ ವಿಶೇಷವಾದ ಸಿನಿಮಾ. ಪರಂವಾ ಸ್ಟುಡಿಯೋಸ್‍ನಡಿ ನಿರ್ಮಾಣವಾದ ಮೊದಲ ಪ್ಯಾನ್ ಇಂಡಿಯಾ ಚಿತ್ರ ಅದು. ಪರಂವಾದಲ್ಲಿ ನಾವು ಕಿರುಚಿತ್ರಗಳನ್ನು ಮಾಡುತ್ತಿದ್ದೆವು. ನಮ್ಮ ಬಳಿ ಬಜೆಟ್ ಇರಲಿಲ್ಲ. ಎರಡನೆಯ ಚಿತ್ರಕ್ಕೆ 20 ಸಾವಿರ ರೂ. ಬಜೆಟ್ ಇತ್ತು. ಹೀಗೆ ಮಾಡುತ್ತಾ ಮಾಡುತ್ತಾ ನಮ್ಮ ಚಿತ್ರವೊಂದು ರಾಷ್ಟ್ರ ಪ್ರಶಸ್ತಿ ಪಡೆದಿದೆ. ಬಹಳ ಖುಷಿಯ ವಿಚಾರ ಇದು. ಇನ್ನು, ಮನುಷ್ಯರ ಜೊತೆಗೆ ನಟನೆ ಮಾಡಬಹುದು. ಚಾರ್ಲಿ ಜೊತೆಗೆ ನಟನೆ ಮಾಡುವುದು ಸುಲಭದ ವಿಷಯವಾಗಿರಲಿಲ್ಲ. 170 ದಿನಗಳ ಚಿತ್ರೀಕರಣ, ಪ್ರತೀ ದೃಶ್ಯಕ್ಕೂ 40 ಟೇಕ್‍ಗಳು, ಪ್ರತೀ ಟೇಕ್‍ನಲ್ಲೂ ನಮ್ಮ ಅತ್ಯುತ್ತಮವಾದುದನ್ನೇ ಕೊಡಬೇಕು. ಹಾಗಾಗಿ, ಬಹಳ ಕಷ್ಟವಾದ ಸಿನಿಮಾ ಇದು. ಚಿತ್ರೀಕರಣದ ಕೊನೆಯ ದಿನ ನಿರ್ದೇಶಕ ಕಿರಣ್ ರಾಜ್ ಬಂದು, ‘ಚಾರ್ಲಿ 2’ ಮಾಡುವುದಕ್ಕೆ ಒಳ್ಳೆಯ ಐಡಿಯಾ ಇದೆ ಎಂದರು. ಅದಕ್ಕೆ ನಾನು, ಚಾರ್ಲಿಯನ್ನು ಇಟ್ಟುಕೊಂಡು ಸಿನಿಮಾ ಮಾಡಿ, ನಾನು ಬರಲ್ಲ ಎಂದೆ. ಚಾರ್ಲಿ ಜೊತೆಗೆ ಕೆಲಸ ಮಾಡುವುದು ಕಷ್ಟ. ಆದರೆ, ಇಂಥ ಪ್ರಶಸ್ತಿಗಳಿಂದ ಆ ಕಷ್ಟಗಳು ಮರೆತು ಹೋಗುತ್ತವೆ’ ಎಂದರು. ‘ಟ್ರೆಂಡಿಂಗ್ ಆ್ಯಕ್ಟರ್’ ಜೊತೆಗೆ ಎಂ.ಎಸ್.ಕೆ ಟ್ರಸ್ಟ್ ನೀಡುವ ‘ದಾದಾ ಸಾಹೇಬ್ ಫಾಲ್ಕೆ – ಎಂ.ಎಸ್.ಕೆ ಟ್ರಸ್ಟ್’ ಪ್ರಶಸ್ತಿಯನ್ನೂ ನೀಡಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ರಾಷ್ಟ್ರಪ್ರಶಸ್ತಿ ಪುರಸ್ಕೃತ ನಿರ್ದೇಶಕರಾದ ಭಾರತೀರಾಜ, ರಾಜೇಂದ್ರ ಸಿಂಗ್ ಬಾಬು, ಚಿತ್ರರಂಗದಲ್ಲಿ 50 ವರ್ಷ ಪೂರೈಸಿರುವ ನಟ ಸಾಯಿಕುಮಾರ್ ಮುಂತಾದವರನ್ನು ಆತ್ಮೀಯವಾಗಿ ಸನ್ಮಾನಿಸಲಾಯಿತು. ತೆಲುಗು ನಟಿ ಮತ್ತು ಸಚಿವೆ ರೋಜಾ, ಹಿರಿಯ ನಟಿ ಅಂಬಿಕಾ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಎನ್.ಎಂ. ಸುರೇಶ್ ಸೇರಿದಂತೆ ಹಲವು ಗಣ್ಯರು ಹಾಜರಿದ್ದರು.
ಬಾಲಿವುಡ್ (Bollywood) ನ ಹೆಸರಾಂತ ಹಿರಿಯ ನಟಿ, ನೃತ್ಯಗಾರ್ತಿ ವಹೀದಾ ರೆಹಮಾನ್ (Waheeda Rahman) ಅವರಿಗೆ 2023ನೇ ಸಾಲಿನ ದಾದಾ ಸಾಹೇಬ್ ಫಾಲ್ಕೆ (Dada Saheb Phalke) ಪ್ರಶಸ್ತಿಯನ್ನು (Award) ಕೇಂದ್ರ ಸರ್ಕಾರ ಘೋಷಣೆ ಮಾಡಿದೆ. ಈ ಕುರಿತು ಕೇಂದ್ರ ಸಚಿವ ಅನುರಾಗ್ ಠಾಕೋರ್ (Anurag Thakur) ಕೂಡ ಟ್ವೀಟ್ ಮಾಡಿ, ಹಿರಿಯ ನಟಿಯನ್ನು ಅಭಿನಂದಿಸಿದ್ದಾರೆ.
ಅಪ್ರತಿಮ ಸುಂದರಿ ಮತ್ತು ಅದ್ಭುತ ನಟಿಯಾಗಿರುವ ವಹೀದಾ ರೆಹಮಾನ್, ಮೂಲತಃ ದಕ್ಷಿಣ ಭಾರತದವರು. ಬಾಲಿವುಡ್ ಸಿನಿಮಾ ರಂಗಕ್ಕೆ ಎಂಟ್ರಿ ಕೊಟ್ಟು ಇಡೀ ದೇಶವನ್ನೇ ಬೆರಗುಗೊಳಿಸುವಂತೆ ಮಿಂಚಿದರು. ತೆಲುಗು ಸಿನಿಮಾ ರಂಗದ ಮೂಲಕ ಬಣ್ಣದ ಪ್ರಪಂಚಕ್ಕೆ ಕಾಲಿಟ್ಟ ವಹೀದಾ ನಂತರ ತಮಿಳಿನಲ್ಲೂ ಸಿನಿಮಾ ಮಾಡಿದರು. ಅಲ್ಲಿಂದ ಸೀದಾ ಹೊರಟಿದ್ದು ಬಾಲಿವುಡ್ ನತ್ತ.
ಬಾಲಿವುಡ್ ನ ಸೂಪರ್ ಸ್ಟಾರ್ ಗಳಾದ ರಾಜೇಶ್ ಖನ್ನಾ, ರಾಜ್ ಕಪೂರ್, ಅಮಿತಾಬ್ ಬಚ್ಚನ್, ದಿಲೀಪ್ ಕುಮಾರ್ ಹೀಗೆ ಅಷ್ಟೂ ಹೆಸರಾಂತ ನಟರ ಜೊತೆ ತೆರೆ ಹಂಚಿಕೊಂಡ ಹೆಗ್ಗಳಿಕೆ ಇವರದ್ದು. ಸಾಂಪ್ರದಾಯಿಕ ಉರ್ದು ಕುಟುಂಬದಲ್ಲಿ ಜನಸಿದ ವಹೀದಾ ಹತ್ತು ವರ್ಷದವಳಿದ್ದಾಗಲೇ ತಂದೆ ತಾಯಿಯನ್ನು ಕಳೆದುಕೊಂಡು, ಕಷ್ಟದಲ್ಲಿ ಬೆಳೆಯುತ್ತಾರೆ. ಆ ನಂತರ ಚಿತ್ರರಂಗವೇ ಅವರನ್ನು ಅಪ್ಪಿ ಎಲ್ಲವನ್ನೂ ಕೊಡುತ್ತದೆ.
ಬಾಲಿವುಡ್ ಸಿನಿಮಾ ರಂಗದಲ್ಲಿ ಮೊದಲು ವಹೀದಾರನ್ನು ಗುರುತಿಸಿದ್ದು ಗುರುದತ್. ಮೊದಲ ಬಾರಿಗೆ ಅವರೇ ಹಿಂದಿ ಚಿತ್ರದಲ್ಲಿ ನಟಿಸುವಂತೆ ಅವಕಾಶ ನೀಡುತ್ತಾರೆ. ಸಿಐಡಿ ವಹೀದಾ ಅವರ ಮೊದಲ ಸಿನಿಮಾ. ಪ್ಯಾಸಾ, ತ್ರಿಶೂಲ್, ಅದಾಲತ್, ಕಭಿ ಕಭಿ, ದೆಹಲಿ 6 ಸೇರಿದಂತೆ ಸಾಕಷ್ಟು ಚಿತ್ರಗಳಲ್ಲಿ ಅವರು ವಿವಿಧ ಪಾತ್ರಗಳನ್ನು ಮಾಡಿದ್ದಾರೆ.
ತಮ್ಮನ್ನು ಬಾಲಿವುಡ್ ಸಿನಿಮಾ ರಂಗಕ್ಕೆ ಪರಿಚಯಿಸಿದ ಗುರುದತ್ ಜೊತೆಯಾಗಿ ಐದು ಸಿನಿಮಾಗಳನ್ನು ಮಾಡಿದ್ದರು. ಐದೂ ಸಿನಿಮಾಗಳು ಸೂಪರ್ ಹಿಟ್ ಆಗಿದ್ದವು. ಹಾಗಾಗಿ ಗುರುದತ್ ಜೊತೆ ಆತ್ಮೀಯ ಸಂಬಂಧ ಹೊಂದಿದ್ದಾರೆ ಎಂದು ದೊಡ್ಡ ಸುದ್ದಿಯೇ ಆಗಿತ್ತು. ಆದರೆ, ವಹೀದಾ 1974ರಲ್ಲಿ ಶಗೂನ್ ಚಿತ್ರದಲ್ಲಿ ನಾಯಕನಾಗಿ ತಮ್ಮೊಂದಿಗೆ ನಟಿಸಿದ್ದ ಕಮಲ್ ಜಿತ್ ಸಿಂಗ್ ಅವರನ್ನು ಮದುವೆಯಾದರು.
ಸಾಹಿತಿ, ನಿರ್ಮಾಪಕ ನಿಡಸಾಲೆ ಎಂ ಪುಟ್ಟಸ್ವಾಮಿಯ್ಯ ನಿರ್ಮಾಣದಲ್ಲಿ ಮೂಡಿ ಬಂದಿರುವ ಅಗ್ನಿವರ್ಷ ಚಿತ್ರಕ್ಕೆ ಈಗಾಗಲೇ ಹಲವಾರು ಅಂತಾರಾಷ್ಟ್ರೀಯ ಪ್ರಶಸ್ತಿಗಳು ಸಂದಿವೆ. ಈಗ ಮತ್ತಷ್ಟು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲಿ ಭಾಗಿ ಆಗುವಂತಹ ಅವಕಾಶವನ್ನು ಈ ಸಿನಿಮಾ ಪಡೆದಿದೆ. ವಿಜಯ್ ನಿಡಸಾಲೆ ಅವರ ಚೊಚ್ಚಲ ನಿರ್ದೇಶನದ ಸಿನಿಮಾ ಇದಾಗಿದ್ದು, ಪ್ರತಿಭಾವಂತ ತಾರಾ ಬಳಗವೇ ಸಿನಿಮಾದಲ್ಲಿದೆ.
ಈಗಾಗಲೇ ಕಲ್ಕತ್ತಾ ಕಲ್ಟ್ ಇಂಟರ್ ನ್ಯಾಷನಲ್ ಫಿಲ್ಮ್ ಫೆಸ್ಟಿವಲ್, ಗ್ಯಾಂಗ್ ಟಾಕ್ ಇಂಟರ್ ನ್ಯಾಷನಲ್ ಫಿಲ್ಮ್ ಫೆಸ್ಟಿವಲ್, ವೈಟ್ ಪರ್ಲ್ ಇಂಟರ್ ನ್ಯಾಷನಲ್ ಫಿಲ್ಮ್ ಫೆಸ್ಟಿವಲ್, ರಾಂಗೋ ಫಿಲ್ಮ್ ಫೆಸ್ಟಿವಲ್, 16ನೇ ಇಂಟರ್ ನ್ಯಾಷನಲ್ ಫಿಲ್ಮ್ ಫೆಸ್ಟಿವಲ್ ಆಫ್ ಜೈಪುರ, 10ನೇ ನೋಯ್ಡಾ ಇಂಟರ್ ನ್ಯಾಷನಲ್ ಫಿಲ್ಮ್ ಫೆಸ್ಟಿವಲ್, ಇಂಟರ್ ನ್ಯಾಷನಲ್ ಫಿಲ್ಮ್ ಫೆಸ್ಟಿವಲ್ ಆಫ್ ಶ್ರೀಗಂಗಾನರ್, ಬೊಲಿವಿಯಾ ದೇಶದ ಬ್ಲ್ಯಾಕ್ ಕ್ಯಾಟ್ ಅವಾರ್ಡ್ ಇಂಟರ್ ನ್ಯಾಷನಲ್, ಬ್ರೆಜಿಲ್ ದೇಶದ ಪುಪಿಲಾ ಫಿಲ್ಮ್ ಫೆಸ್ಟಿವಲ್, ಫಿಲಿಫೈನ್ಸ್ ದೇಶದ 9ನೇ ಪಂಬುಜಾನ್ ಇಂಟರ್ ನ್ಯಾಷನಲ್ ಫಿಲ್ಮ್ ಫೆಸ್ಟಿವಲ್ಗಳಲ್ಲಿ ಸಿನಿಮಾ ಆಯ್ಕೆಯಾಗಿ ಪ್ರದರ್ಶನಗಳನ್ನು ಕಂಡಿದೆ.
ಅಂತಾರಾಷ್ಟ್ರೀಯ ಚಿತ್ರೋತ್ಸವಗಳಲ್ಲಿ ಪ್ರದರ್ಶನಕ್ಕೆ ಮಾತ್ರ ಆಯ್ಕೆಯಾಗಿಲ್ಲ, ಹಲವಾರು ಪ್ರಶಸ್ತಿಗಳನ್ನು ಸಿನಿಮಾ ಪಡೆದುಕೊಂಡಿದೆ. ಚೊಚ್ಚಲ ನಿರ್ದೇಶನದ ಸಿನಿಮಾದಲ್ಲೇ ನಿರ್ದೇಶಕ ವಿಜಯ್ ನಿಡಸಾಲೆ ಅತ್ಯುತ್ತಮ ಚಿತ್ರ ಪ್ರಶಸ್ತಿಗಳನ್ನೂ ಪಡೆದಿದ್ದಾರೆ. ಅಲ್ಲದೇ, ಕಲಾವಿದರಿಗೂ ಕೂಡ ಹಲವು ಪ್ರಶಸ್ತಿಗಳು ಸಂದಿವೆ. ಪ್ರೇಕ್ಷಕರು ಕೂಡ ಉತ್ತಮ ಪ್ರತಿಕ್ರಿಯೆಯನ್ನು ನೀಡಿದ್ದಾರೆ.
ಈ ಸಿನಿಮಾದಲ್ಲಿ ಪ್ರಮುಖ ಪಾತ್ರವಹಿಸಿ, ಚಿತ್ರವನ್ನು ನಿರ್ಮಾಣ ಮಾಡಿರುವ ನಿಡಸಾಲೆ ಪುಟ್ಟಸ್ವಾಮಿಯ್ಯ ಅವರು ಈ ಕುರಿತು ಮಾತನಾಡಿ, ‘ಚಿಗುರು ಕ್ರಿಯೇಷನ್ಸ್ ಸಂಸ್ಥೆಯಿಂದ ಈಗಾಗಲೇ ಸಿದ್ಧಗಂಗಾ, ವಾವ್ ಮುರುಗೇಶ್, ನೀರು ತಂದವರು ಹಾಗೂ ಅನುತ್ತರ ಸಿನಿಮಾಗಳನ್ನು ಮಾಡಿದ್ದೇವೆ. ಅಗ್ನಿವರ್ಷ ನಮ್ಮ ನಿರ್ಮಾಣ ಸಂಸ್ಥೆಯನ್ನು ಮೂಡಿ ಬಂದಿರುವ ಐದನೇ ಸಿನಿಮಾ. ಮಲೆನಾಡಿನ ಜ್ವಲಂತ ಸಮಸ್ಯೆಗಳಾದ ವೃದ್ಧರ ಬದುಕು ಬವಣೆ, ಮಹಿಳಾ ಸಬಲೀಕರ, ಅರಣ್ಯ ಒತ್ತುವರೆ ಸೇರಿದಂತೆ ಹಲವು ವಿಷಯಗಳನ್ನು ಹೇಳಲಾಗಿದೆ’ ಎಂದರು. ಇದನ್ನೂ ಓದಿ: `ಕಾಂತಾರ’ ಸಕ್ಸಸ್: ದೈವಕ್ಕೆ ಹರಕೆ ತೀರಿಸಿದ ರಿಷಬ್ ಶೆಟ್ಟಿ
ಈ ಸಿನಿಮಾದಲ್ಲಿ ರಮೇಶ್ ಭಟ್, ನಿಡಸಾಲೆ ಪುಟ್ಟಸ್ವಾಮಯ್ಯ, ಪ್ರತಿಮಾ ನಾಯಕ್, ಶೀಲಾ ರಾಮನ್ ಸೇರಿದಂತೆ ಹಲವು ಕಲಾವಿದರು ತಾರಾ ಬಳಗದಲ್ಲಿ ಇದ್ದಾರೆ. ಮುಂಬೈನಲ್ಲಿ ಅನುಭವ ಪಡೆದಿರುವ ಶಿವಕುಮಾರ್ ಅಂಬ್ಲಿ ಅವರ ಸಿನಿಮಾಟೋಗ್ರಫಿ, ರಂಗಕಹಳೆ ಎಲ್ ಮೋಹನ್ ಅವರ ಸಂಕಲನ, ಪ್ರವೀಣ್ ಗೋಡ್ಖಿಂಡಿ ಅವರ ಸಂಗೀತ ಮತ್ತು ಗಾರ್ಗಿ ಕಾರೇಹಕ್ಲು ಅವರ ಸಂಭಾಷಣೆ ಚಿತ್ರಕ್ಕಿದೆ.
Live Tv
[brid partner=56869869 player=32851 video=960834 autoplay=true]
ಶನಿವಾರ ಮತ್ತು ಭಾನುವಾರ ಎರಡು ದಿನಗಳ ಕಾಲ ಬೆಂಗಳೂರಿನಲ್ಲಿ (Bangalore) ನಡೆದ ಸೈಮಾ (SIIMA) ಪ್ರಶಸ್ತಿ (Award) ಪ್ರದಾನ ಸಮಾರಂಭದಲ್ಲಿ ಬಾಲಿವುಡ್ ಖ್ಯಾತ ನಟ, ಬೆಂಗಳೂರಿನ ಅಳಿಯ ರಣವೀರ್ ಸಿಂಗ್ ಕೂಡ ಭಾಗಿಯಾಗಿದ್ದರು. ಅವರು ಕಾರ್ಯಕ್ರಮದ ಮುಖ್ಯ ನಿರೂಪಕರಾಗಿ ಆಗಮಿಸಿದ್ದರು. ಈ ಸಂದರ್ಭದಲ್ಲಿ ಅಚಾತುರ್ಯವೊಂದು ನಡೆದು ಹೋಗಿದೆ. ರಣವೀರ್ ಸಿಂಗ್ ಅವರಿಗೆ ಕಪಾಳ ಮೋಕ್ಷ ಮಾಡಿದ ಘಟನೆ ನಡೆದಿದೆ. ಆ ವಿಡಿಯೋ ವೈರಲ್ ಕೂಡ ಆಗಿದೆ.
ಅಭಿಮಾನಿಯೊಬ್ಬ ಸೆಲ್ಫಿಗಾಗಿ ರಣವೀರ್ ಸಿಂಗ್ (Ranveer Singh) ದುಂಬಾಲು ಬೀಳುತ್ತಾನೆ. ರಣವೀರ್ ಸೆಲ್ಫಿ ಕೊಡಲು ನಿರಾಕರಿಸುತ್ತಾರೆ. ಆಗ ರಣವೀರ್ ಸಿಂಗ್ ಗೆ ಕಪಾಳಮೋಕ್ಷ ಮಾಡುವಂತಹ ಸನ್ನಿವೇಶ ಎದುರಾಗುತ್ತದೆ. ವ್ಯಕ್ತಿಯು ರಣವೀರ್ ಗೆ ಕಪಾಳಕ್ಕೆ ಏಟು ಕೊಡುತ್ತಾನೆ. ಈ ಘಟನೆ ಗುಂಪಿನ ಮಧ್ಯ ನಡೆದಿದ್ದರಿಂದ ಕೆಲವರು ಅಚ್ಚರಿ ವ್ಯಕ್ತ ಪಡಿಸುತ್ತಾರೆ. ಇನ್ನೂ ಕೆಲವರು ನೋಡಿಯೋ ನೋಡದಂತೆ ಉಳಿದು ಬಿಡುತ್ತಾರೆ. ಇದನ್ನೂ ಓದಿ:ನಂದಿನಿ ಔಟ್ ಆದ್ಮೇಲೆ ಸಾನ್ಯ ಜೊತೆ ಜಶ್ವಂತ್ ಲವ್ವಿ-ಡವ್ವಿ: ರೂಪೇಶ್‌ಗೆ ಟೆನ್ಷನ್ ಶುರು
ಮೂಲಗಳ ಪ್ರಕಾರ ರಣವೀರ್ ಸಿಂಗ್ ಕಪಾಳಕ್ಕೆ ಹೊಡೆದ್ದು ಬಾಡಿಗಾರ್ಡ್ ಎಂದು ಹೇಳಲಾಗುತ್ತಿದೆ. ಅಲ್ಲದೇ, ಇದು ಉದ್ದೇಶ ಪೂರ್ವಕವಾಗಿ ನಡೆದ ಘಟನೆಯಲ್ಲ, ಆಕಸ್ಮಿಕವಾಗಿ ಹಾಗೆ ಆಗಿದೆ ಎನ್ನುವ ಮಾತಿದೆ. ರಣವೀರ್ ಸಿಂಗ್ ಕಪಾಳ ಮುಟ್ಟುವಷ್ಟು ಧೈರ್ಯ ಯಾರಿಗಿದೆ? ಹಾಗಾಗಿ ಏನೋ ಮಾಡಲು ಹೋಗಿ, ಇನ್ನೇನೋ ಆಗಿದೆ. ಹಾಗಾಗಿ ರಣವೀರ್ ಸುಮ್ಮನೆ ಆಗಿದ್ದಾರಂತೆ. ಸೈಮಾ ಅವಾರ್ಡ್ ಕಾರ್ಯಕ್ರಮಕ್ಕೆ ಶುರುವಾಗುವ ಮುನ್ನವೇ ಈ ಘಟನೆ ನಡೆದಿದೆ. ಈ ವಿಡಿಯೋ ವೈರಲ್ ಆಗಿದೆ. ಅಲ್ಲದೇ, ಹೊಡದವ ರಣವೀರ್ ಅಭಿಮಾನಿ ಅಂತಾನೂ ಹೇಳಲಾಗುತ್ತಿದೆ.
Live Tv
[brid partner=56869869 player=32851 video=960834 autoplay=true]
ನಿನ್ನೆಯಷ್ಟೇ ತಮ್ಮ ಗ್ರ್ಯಾಮಿ ಪ್ರಶಸ್ತಿ ಪದಕವು ಎರಡು ತಿಂಗಳಿಂದ ಕಸ್ಟಮ್‌ನಲ್ಲಿದೆ. ಕೊರಿಯರ್ ಮತ್ತು ಕಸ್ಟಮ್ ಅಧಿಕಾರಿಗಳ ಅಸಹಕಾರದಿಂದಾಗಿ ಇನ್ನೂ ನನ್ನ ಕೈಗೆ ಪದಕ ಸಿಕ್ಕಿಲ್ಲವೆಂದು ರಿಕಿ ಟ್ವೀಟ್ ಮಾಡಿದ್ದರು. ಟ್ವೀಟ್ ಮಾಡುತ್ತಿದ್ದಂತೆಯೇ ರಿಕಿ ಅಭಿಮಾನಿಗಳು ಕಸ್ಟಮ್ ಅಧಿಕಾರಿಗಳನ್ನು ತರಾಟೆಗೆ ತಗೆದುಕೊಂಡಿದ್ದರು. ರಿಕಿ ಟ್ವೀಟ್ ವೈರಲ್ ಆಗುತ್ತಿದ್ದಂತೆಯೇ ಎಚ್ಚೆತ್ತುಕೊಂಡ ಕಸ್ಟಮ್ ಅಧಿಕಾರಿಗಳು, ಆಗಿರುವ ಸಮಸ್ಯೆಯನ್ನು ಬೇಗ ಸರಿಪಡಿಸಿ ಪದಕ ತಲುಪಿಸಲಾಗುವುದು ಎಂದಿದ್ದರು.
ಕಸ್ಟಮ್ಸ್ ಅಧಿಕಾರಿಗಳಿಗೆ ಅದರಲ್ಲಿ ಗ್ರ್ಯಾಮಿ ಅವಾರ್ಡ್ ಇರುವುದು ಗೊತ್ತಿರದೇ ಇರುವ ಕಾರಣಕ್ಕಾಗಿ ತಮ್ಮ ನಿಯಮಗಳನ್ನು ಅನುಸರಿಸಿದ್ದಾರೆ. ಈಗ ಪ್ರಕ್ರಿಯೆ ಎಲ್ಲ ಮುಗಿದಿದೆ. ಹಾಗಾಗಿ ಶೀಘ್ರದಲ್ಲೇ ಪದಕಗಳು ಕೈ ಸೇರಲಿವೆ ಎಂದು ಸಂಜೆ ಮತ್ತೆ ರಿಕಿ ಟ್ವಿಟ್ಟರ್ ಮೂಲಕ ಸ್ಪಷ್ಟನೆ ನೀಡಿದ್ದರು. ಕಸ್ಟಮ್ ಅಧಿಕಾರಿಗಳು ಅಂದುಕೊಂಡಂತೆ ನಡೆದುಕೊಂಡಿದ್ದಾರೆ. ಆಗಿದ್ದ ಸಮಸ್ಯೆಯನ್ನು ಸರಿಪಡಿಸಿ ಇಂದು ಗ್ರ್ಯಾಮಿ ಪದಕವನ್ನು ರಿಕಿ ಕೇಜ್ ಅವರಿಗೆ ಮುಟ್ಟಿಸಿದ್ದಾರೆ. ಈ ಕುರಿತು ಅವರು ಟ್ವೀಟ್ ಮಾಡಿ, ಧನ್ಯವಾದಗಳನ್ನು ಕೂಡ ಹೇಳಿದ್ದಾರೆ. ಇದನ್ನೂ ಓದಿ: ಬಿಜೆಪಿ ರಾಷ್ಟ್ರೀಯ ವಕ್ತಾರೆ ನೂಪರ್ ಶರ್ಮಾ ಪರ ಧ್ವನಿ ಎತ್ತಿದ ಕಂಗನಾ ರಣಾವತ್
ರಿಕಿ ಕೇಜ್ ಅವರಿಗೆ ಎರಡನೇ ಬಾರಿಗೆ ಗ್ರ್ಯಾಮಿ ಪ್ರಶಸ್ತಿ ಬಂದಿದೆ. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ, ನಾಡಿನ ಸಾಕಷ್ಟು ದಿಗ್ಗಜರು ರಿಕಿ ಕೇಜ್‌ಗೆ ಅಭಿನಂದಿಸಿದ್ದಾರೆ. ಅದರಲ್ಲೂ ಕನ್ನಡದ ನೆಲೆ ರಿಕಿ ಕೇಜ್ ಬಗ್ಗೆ ಗುಣಗಾನ ಕೂಡ ಮಾಡಿದೆ. ಗ್ರ್ಯಾಮಿ ಪ್ರಶಸ್ತಿ ಬಂದಾಗ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಕರ್ನಾಟಕದ ಸಾಕಷ್ಟು ಗಣ್ಯರು ರಿಕಿಯನ್ನು ಅಭಿನಂದಿಸಿದ್ದಾರೆ.
ಖ್ಯಾತ ಸಂಗೀತ ನಿರ್ದೇಶಕ ರಿಕಿ ಕೇಜ್ ಎರಡನೇ ಬಾರಿಗೆ ಗ್ರ್ಯಾಮಿ ಪ್ರಶಸ್ತಿ ಪಡೆದು ಬೀಗುತ್ತಿದ್ದರು. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ, ನಾಡಿನ ಸಾಕಷ್ಟು ದಿಗ್ಗಜರು ರಿಕಿ ಕೇಜ್‌ಗೆ ಅಭಿನಂದಿಸಿದ್ದರು. ಅದರಲ್ಲೂ ಕನ್ನಡದ ನೆಲೆ ರಿಕಿ ಕೇಜ್ ಬಗ್ಗೆ ಗುಣಗಾನ ಕೂಡ ಮಾಡಿತ್ತು. ಆದರೆ ಎರಡು ತಿಂಗಳಿಂದ ಗ್ರ್ಯಾಮಿ ಅವಾರ್ಡ್ ಅವರ ಕೈಗೆ ಬಂದಿರಲಿಲ್ಲ ಎನ್ನುವುದು ಅಚ್ಚರಿ ಸಂಗತಿ. ಇದನ್ನೂ ಓದಿ: ಡೊಳ್ಳು ಚಿತ್ರಕ್ಕೆ ಪ್ರಶಸ್ತಿಗಳ ಸುರಿಮಳೆ : ದಾಖಲೆಯ ರೀತಿಯಲ್ಲಿ ಪ್ರಶಸ್ತಿ ಪಡೆದ ಪವನ್ ಒಡೆಯರ್
ಗ್ರ್ಯಾಮಿ ಪ್ರಶಸ್ತಿ ಬಂದಾಗ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಕರ್ನಾಟಕದ ಸಾಕಷ್ಟು ಗಣ್ಯರು ರಿಕಿಯನ್ನು ಅಭಿನಂದಿಸಿದ್ದರು. ಆದರೆ ಎರಡು ತಿಂಗಳುಗಳ ಕಾಲ ಗ್ರ್ಯಾಮಿ ಪದಕವು ಬೆಂಗಳೂರಿನ ಕಸ್ಟಮ್ಸ್ ಇಲಾಖೆಯಲ್ಲಿ ಸಿಲುಕಿಕೊಂಡಿತ್ತು ಎನ್ನುವುದು ನೋವಿನ ಸಂಗತಿಯಾಗಿತ್ತು. ಹಾಗಾಗಿ ಅವರು ಇಂದು ಈ ಕುರಿತು ಟ್ವೀಟ್ ಮಾಡಿದ್ದರು. ಟ್ವೀಟ್ ಮಾಡಿದ ಕೆಲವೇ ಗಂಟೆಗಳಲ್ಲೇ ಆಗಿರುವ ಸಮಸ್ಯೆಯನ್ನು ಬಗೆಹರಿಸಲಾಗಿದೆ ಎಂದು ಅವರು ಮತ್ತೆ ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ : Exclusive – ವಾಣಿಜ್ಯ ಮಂಡಳಿಯಲ್ಲಿ ಕೋಟ್ಯಂತರ ದುರುಪಯೋಗ? : ರಾಜೇಂದ್ರ ಸಿಂಗ್ ಬಾಬು ಹೇಳಿದ್ದೇನು?
ಮುಂಜಾನೆ ಟ್ವೀಟ್ ಮಾಡಿದ್ದ ರಿಕಿ, ‘ನನಗೆ ಗ್ರ್ಯಾಮಿ ಪ್ರಶಸ್ತಿ ಬಂದಿದೆ. ಆದರೆ, ಮೆಡಲ್ 2 ತಿಂಗಳ ಕಾಲದಿಂದ ಬೆಂಗಳೂರು ಕಸ್ಟಮ್ಸ್‌ನಲ್ಲಿದೆ. ಸಂಬಂಧಪಟ್ಟವರು ಸರಿಯಾದ ರೀತಿಯಲ್ಲಿ ಪ್ರತಿಕ್ರಿಯೆ ನೀಡುತ್ತಿಲ್ಲ’ ಎಂದು ಬರೆದು, ಸಂಬಂಧಪಟ್ಟ ಸಂಸ್ಥೆಗಳಿಗೆ ಟ್ಯಾಗ್ ಮಾಡಿದ್ದರು. ಟ್ವೀಟ್ ಮಾಡುತ್ತಿದ್ದಂತೆಯೇ ಕಸ್ಟಮ್ಸ್ ಅಧಿಕಾರಿಗಳನ್ನು ನೆಟ್ಟಿಗರು ತರಾಟೆಗೆ ತಗೆದುಕೊಂಡರು. ಆನಂತರ ಸಮಸ್ಯೆ ಸರಿ ಹೋಗಿದೆ ಎಂದು ರಿಕಿ ಮರು ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ಚಿರು ಮಗನನ್ನು ನಾನೇ ಲಾಂಚ್ ಮಾಡುತ್ತೇನೆ : ಅರ್ಜುನ್ ಸರ್ಜಾ
ಕಸ್ಟಮ್ಸ್ ಅಧಿಕಾರಿಗಳಿಗೆ ಅದರಲ್ಲಿ ಗ್ರ್ಯಾಮಿ ಅವಾರ್ಡ್ ಇರುವುದು ಗೊತ್ತಿರದೇ ಇರುವ ಕಾರಣಕ್ಕಾಗಿ ತಮ್ಮ ನಿಯಮಗಳನ್ನು ಅನುಸರಿಸಿದ್ದಾರೆ. ಈಗ ಪ್ರಕ್ರಿಯೆ ಎಲ್ಲ ಮುಗಿದಿದೆ. ಹಾಗಾಗಿ ಶೀಘ್ರದಲ್ಲೇ ಪದಕಗಳು ಕೈ ಸೇರಲಿವೆ ಎಂದು ಅವರು ಸ್ಪಷ್ಟನೆ ನೀಡಿದ್ದಾರೆ.
ಏಳು ದಿನಗಳಿಂದ ಬೆಂಗಳೂರಿನಲ್ಲಿ ನಡೆಯುತ್ತಿರುವ 13ನೇ ಅಂತಾರಾಷ್ಟ್ರೀಯ ಚಿತ್ರೋತ್ಸವದ ಸಮಾರೋಪ ಸಮಾರಂಭ ಇಂದು ಬೆಂಗಳೂರಿನ ಜೆ.ಎನ್.ಟಾಟಾ ಆಡಿಟೋರಿಯಂನಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಚಿತ್ರೋತ್ಸವದಲ್ಲಿ ಭಾಗಿಯಾಗಿ, ನಾನಾ ವಿಭಾಗಗಳಲ್ಲಿ ಸ್ಪರ್ಧಿಸಿದ್ದ ಸಿನಿಮಾಗಳಿಗೆ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಪ್ರಶಸ್ತಿ ಪ್ರದಾನ ಮಾಡಿದರು.
ಮುಖ್ಯ ಅಥಿಗಳಾಗಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷ ಡಿ.ಆರ್. ಜೈರಾಜ್, ಚಿತ್ರೋತ್ಸವದ ಕಲಾತ್ಮಾಕ ನಿರ್ದೇಶಕ ನರಹರಿರಾವ್, ಕರ್ನಾಟಕ ಚಲನಚಿತ್ರ ಅಕಾಡಮಿಯ ಅಧ್ಯಕ್ಷ ಸುನೀಲ್ ಪುರಾಣಿಕ್ ಮುಂತಾದವರು ಭಾಗಿಯಾಗಿದ್ದರು.
2020 ನೇ ಸಾಲಿನ ಪ್ರಶಸ್ತಿಗಳು
ಕನ್ನಡ ಪಾಪ್ಯೂಲರ್ ಎಂಟರ್ ಟೇನ್ಮೆಂಟ್ : ಮೋಸ್ಟ್ ಪಾಪ್ಯುಲರ್ ಕನ್ನಡ ಸಿನಿಮಾ ಅವಾರ್ಡ್
ಅತ್ಯುತ್ತಮ ಚಿತ್ರ : ದಿಯಾ ( ನಿರ್ದೇಶಕ ಕೆ.ಎಸ್.ಅಶೋಕ್)
ಅತ್ಯುತ್ತಮ ಎರಡನೇ ಸಿನಿಮಾ : ಶಿವಾಜಿ ಸುರತ್ಕಲ್ (ನಿರ್ದೇಶಕ ಆಕಾಶ್ ಶ್ರೀವಾತ್ಸ್)
ಅತ್ಯುತ್ತಮ ಮೂರನೇ ಸಿನಿಮಾ : ಲವ್ ಮಾಕ್ಟೆಲ್ (ಡಾರ್ಲಿಂಗ್ ಕೃಷ್ಣ)
ಕನ್ನಡ ಸಿನಿಮಾ ಕಾಂಪಿಟೇಷನ್ : ಬೆಸ್ಟ್ ಫಿಲ್ಮ್ ಅವಾರ್ಡ್
ಅತ್ಯುತ್ತಮ ಚಿತ್ರ : ಪಿಂಕಿ ಎಲ್ಲಿ? (ನಿರ್ದೇಶಕ ಪೃಥ್ವಿ ಕೋನನೂರು)
ಅತ್ಯುತ್ತಮ ಎರಡನೇ ಸಿನಿಮಾ : ದಾರಿ ಯಾವುದಯ್ಯ ವೈಕುಂಟಕೆ (ನಿರ್ದೇಶಕ ಸಿದ್ದು ಪೂರ್ಣಚಂದ್ರ)
ಅತ್ಯತ್ತಮ ಮೂರನೇ ಸಿನಿಮಾ : ಓ ನನ್ನ ಚೇತನ (ಅಪೂರ್ವ ಆಶಾ ದೇವಿ ನಿರ್ದೇಶಕರು)
– ಮಹಿಳಾ ಪಟ್ಟಿಯಲ್ಲಿ ಮಿಥಾಲಿ ರಾಜ್, ಜುಲಾನ್ ಗೋಸ್ವಾಮಿಗೆ ಸ್ಥಾನ
– ಐಸಿಸಿಯಿಂದ ಟಾಪ್ ಆಟಗಾರರ ಪಟ್ಟಿ ಬಿಡುಗಡೆ
ನವದೆಹಲಿ: ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಮೂರು ಮಾದರಿಯ ಕ್ರಿಕೆಟ್‍ನಲ್ಲಿ ದಶಕದ ಆಟಗಾರ ಪ್ರಶಸ್ತಿಗೆ ನಾಮಿನೇಟ್ ಆದವರ ಪಟ್ಟಿಗಳನ್ನು ಬಿಡುಗಡೆ ಮಾಡಿದ್ದು, ಇದರಲ್ಲಿ ಭಾರತದ ನಾಯಕ ವಿರಾಟ್ ಕೊಹ್ಲಿ ದಾಖಲೆ ಬರೆದಿದ್ದಾರೆ.
ಐಸಿಸಿಐ ಮಂಗಳವಾರ ಟೆಸ್ಟ್, ಏಕದಿನ ಮತ್ತು ಟಿ-20 ಸೇರಿದಂತೆ ಮೂರು ಮಾದರಿಯ ಮಹಿಳಾ ಮತ್ತು ಪುರುಷರ ನಾಮಿನೇಟ್ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಇದರಲ್ಲಿ ಮೂರು ಮಾದರಿಯ ಆಟದಲ್ಲೂ ಕೊಹ್ಲಿ ನಾಮಿನೇಟ್ ಆಗಿ, ಮೂರು ಮಾದರಿಯ ಲಿಸ್ಟ್ ನಲ್ಲಿ ಆಯ್ಕೆಯಾದ ಮೊದಲ ಆಟಗಾರ ಎಂಬ ದಾಖಲೆ ಬರೆದಿದ್ದಾರೆ. ಕೊಹ್ಲಿಯವರನ್ನು ಬಿಟ್ಟರೆ ಬೇರೆ ಯಾವುದೇ ಆಟಗಾರ ಈ ಮೂರು ಪಟ್ಟಿಯಲ್ಲಿ ಕಾಣಿಸಿಕೊಂಡಿಲ್ಲ.
ಕಳೆದ ಒಂದು ದಶಕದಲ್ಲಿ ಮೂರು ಮಾದರಿಯ ಕ್ರಿಕೆಟಿನಲ್ಲಿ ಸಾಧನೆ ಮಾಡಿದ ಆಟಗಾರಿಗೆ ಈ ಪ್ರಶಸ್ತಿಯನ್ನು ಐಸಿಸಿ ನೀಡುತ್ತದೆ. ಕಳೆದ ಒಂದು ದಶಕದಿಂದ ಮೂರು ಮಾದರಿಯ ಕ್ರಿಕೆಟ್‍ನಲ್ಲಿ ರನ್ ಹೊಳೆಯನ್ನು ಹರಿಸುತ್ತಿರುವ ಕೊಹ್ಲಿಯವರು ರನ್ ಮಷಿನ್ ಎಂಬ ಹೆಸರು ಪಡೆದುಕೊಂಡಿದ್ದಾರೆ. ಹೀಗಾಗಿ ಈ ಮೂರು ಮಾದರಿಯ ಕ್ರಿಕೆಟ್‍ನಲ್ಲಿ ಕಳೆದ ಒಂದು ದಶಕದಿಂದ ಕೊಹ್ಲಿ ಉತ್ತಮವಾಗಿ ಆಡುವ ಮೂಲಕ ಸ್ಥಾನ ಪಡೆದಿದ್ದಾರೆ.
ಕೊಹ್ಲಿಯವರ ಜೊತೆಯಲ್ಲಿ ಭಾರತದಿಂದ ಮಾಜಿ ನಾಯಕ ಎಂಎಸ್ ಧೋನಿ, ಉಪನಾಯಕ ರೋಹಿತ್ ಶರ್ಮಾ ಮತ್ತು ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅವರು ಕಾಣಿಸಿಕೊಂಡಿದ್ದಾರೆ. ಪುರಷರ ಜೊತೆಯಲ್ಲಿ ಮಹಿಳೆಯರ ದಶಕದ ಆಟಗಾರ್ತಿಯರ ಪ್ರಶಸ್ತಿಗೆ ನಾಮಿನೇಟ್ ಆದ ಪಟ್ಟಿಯನ್ನು ಐಸಿಸಿ ಘೋಷಣೆ ಮಾಡಿದ್ದು, ಈ ಪಟ್ಟಿಯಲ್ಲಿ ಭಾರತದಿಂದ ಮಾಜಿ ನಾಯಕಿ ಮಿಥಾಲಿ ರಾಜ್ ಮತ್ತು ಅನುಭವಿ ಬೌಲರ್ ಜುಲಾನ್ ಗೋಸ್ವಾಮಿ ಕಾಣಿಸಿಕೊಂಡಿದ್ದಾರೆ.
ನಾಮಿನೇಟ್ ಆದವರ ಪಟ್ಟಿ ದಶಕದ ಪುರುಷ ಆಟಗಾರ ಪ್ರಶಸ್ತಿ: ವಿರಾಟ್ ಕೊಹ್ಲಿ (ಭಾರತ), ರವಿಚಂದ್ರನ್ ಅಶ್ವಿನ್ (ಭಾರತ), ಜೋ ರೂಟ್ (ಇಂಗ್ಲೆಂಡ್), ಕೇನ್ ವಿಲಿಯಮ್ಸನ್ (ನ್ಯೂಜಿಲೆಂಡ್), ಸ್ಟೀವ್ ಸ್ಮಿತ್ (ಆಸ್ಟ್ರೇಲಿಯಾ), ಎಬಿ ಡಿವಿಲಿಯರ್ಸ್ (ದಕ್ಷಿಣ ಆಫ್ರಿಕಾ) ಮತ್ತು ಕುಮಾರ ಸಂಗಕ್ಕಾರ (ಶ್ರೀಲಂಕಾ)
ಪುರುಷರ ದಶಕದ ಏಕದಿನ ಆಟಗಾರ ಪ್ರಶಸ್ತಿ: ವಿರಾಟ್ ಕೊಹ್ಲಿ (ಭಾರತ), ಲಸಿತ್ ಮಾಲಿಂಗ (ಶ್ರೀಲಂಕಾ), ಮಿಚೆಲ್ ಸ್ಟಾರ್ಕ್ (ಆಸ್ಟ್ರೇಲಿಯಾ), ಎಬಿ ಡಿವಿಲಿಯರ್ಸ್ (ದಕ್ಷಿಣ ಆಫ್ರಿಕಾ), ರೋಹಿತ್ ಶರ್ಮಾ (ಭಾರತ), ಎಂಎಸ್ ಧೋನಿ (ಭಾರತ) ಮತ್ತು ಕುಮಾರ ಸಂಗಕ್ಕಾರ (ಶ್ರೀಲಂಕಾ)
ಪುರುಷರ ದಶಕದ ಟೆಸ್ಟ್ ಆಟಗಾರ ಪ್ರಶಸ್ತಿ: ವಿರಾಟ್ ಕೊಹ್ಲಿ (ಭಾರತ), ಕೇನ್ ವಿಲಿಯಮ್ಸನ್ (ನ್ಯೂಜಿಲೆಂಡ್), ಸ್ಟೀವನ್ ಸ್ಮಿತ್ (ಆಸ್ಟ್ರೇಲಿಯಾ), ಜೇಮ್ಸ್ ಆಂಡರ್ಸನ್ (ಇಂಗ್ಲೆಂಡ್), ರಂಗನಾ ಹೆರಾತ್ (ಶ್ರೀಲಂಕಾ) ಮತ್ತು ಯಾಸಿರ್ ಷಾ (ಪಾಕಿಸ್ತಾನ)
ಪುರುಷರ ದಶಕದ ಟಿ-20 ಆಟಗಾರ ಪ್ರಶಸ್ತಿ: ರಶೀದ್ ಖಾನ್ (ಅಫ್ಘಾನಿಸ್ತಾನ), ವಿರಾಟ್ ಕೊಹ್ಲಿ (ಭಾರತ), ಇಮ್ರಾನ್ ತಾಹಿರ್ (ದಕ್ಷಿಣ ಆಫ್ರಿಕಾ), ಆರೋನ್ ಫಿಂಚ್ (ಆಸ್ಟ್ರೇಲಿಯಾ), ಲಸಿತ್ ಮಾಲಿಂಗ (ಶ್ರೀಲಂಕಾ), ಕ್ರಿಸ್ ಗೇಲ್ (ವೆಸ್ಟ್ ಇಂಡೀಸ್) ಮತ್ತು ರೋಹಿತ್ ಶರ್ಮಾ (ಭಾರತ)
ಮಹಿಳೆಯರ ದಶಕದ ಏಕದಿನ ಆಟಗಾರ್ತಿ ಪ್ರಶಸ್ತಿ: ಮೆಗ್ ಲ್ಯಾನಿಂಗ್ (ಆಸ್ಟ್ರೇಲಿಯಾ), ಎಲಿಸ್ ಪೆರ್ರಿ (ಆಸ್ಟ್ರೇಲಿಯಾ), ಮಿಥಾಲಿ ರಾಜ್ (ಭಾರತ), ಸುಜಿ ಬೇಟ್ಸ್ (ನ್ಯೂಜಿಲೆಂಡ್), ಸ್ಟಫಾನಿ ಟೇಲರ್ (ವೆಸ್ಟ್ ಇಂಡೀಸ್) ಮತ್ತು ಜುಲಾನ್ ಗೋಸ್ವಾಮಿ (ಭಾರತ)
ಮಹಿಳೆಯರ ದಶಕದ ಆಟಗಾರ್ತಿ ಪ್ರಶಸ್ತಿ: ಎಲಿಸ್ ಪೆರ್ರಿ (ಆಸ್ಟ್ರೇಲಿಯಾ), ಮೆಗ್ ಲ್ಯಾನಿಂಗ್ (ಆಸ್ಟ್ರೇಲಿಯಾ), ಸುಜಿ ಬೇಟ್ಸ್ (ನ್ಯೂಜಿಲೆಂಡ್), ಸ್ಟಫಾನಿ ಟೇಲರ್ (ವೆಸ್ಟ್ ಇಂಡೀಸ್), ಮಿಥಾಲಿ ರಾಜ್ (ಭಾರತ), ಸಾರಾ ಟೇಲರ್ (ಇಂಗ್ಲೆಂಡ್)