Tag: ಅಶೋಕನಗರ

  • ಬೆಂಗಳೂರಲ್ಲಿ ಕಾಂಗ್ರೆಸ್ ಮುಖಂಡನ ಬರ್ಬರ ಹತ್ಯೆ

    ಬೆಂಗಳೂರಲ್ಲಿ ಕಾಂಗ್ರೆಸ್ ಮುಖಂಡನ ಬರ್ಬರ ಹತ್ಯೆ

    – ಶಾಸಕ ಹ್ಯಾರಿಸ್ ಜೊತೆ ಗುರುತಿಸಿಕೊಂಡಿದ್ದ ಹೈದರ್

    ಬೆಂಗಳೂರು: ಶನಿವಾರ ತಡರಾತ್ರಿ ಲೈವ್ ಬ್ಯಾಂಡ್‌ನಿಂದ ಹೊರ ಬರುತ್ತಿದ್ದ ಕಾಂಗ್ರೆಸ್ ಶಾಸಕನನ್ನು (Congress Leader) ಅಡ್ಡಗಟ್ಟಿ ಭೀಕರ ಹತ್ಯೆಗೈದಿರುವ ಘಟನೆ ಬೆಂಗಳೂರಿನ (Bengaluru) ಅಶೋಕನಗರದ (Ashoknagar) ಗರುಡ ಮಾಲ್ ಬಳಿ ನಡೆದಿದೆ.

    ಶೇಖ್ ಹೈದರ್ ಅಲಿ ಕೊಲೆಯಾದ ಕಾಂಗ್ರೆಸ್ ಮುಖಂಡ. ತಡರಾತ್ರಿ 1 ಗಂಟೆ ಸುಮಾರಿಗೆ ಘಟನೆ ನಡೆದಿದೆ. ಹೈದರ್ ಅಲಿ ಲೈವ್ ಬ್ಯಾಂಡ್‌ನಿಂದ ರಾತ್ರಿ ಸ್ನೇಹಿತನ ಜೊತೆಗೆ ಬೈಕ್‌ನಲ್ಲಿ ಬರುತ್ತಿದ್ದ ವೇಳೆ ಆರೋಪಿಗಳು ಬೈಕ್‌ನಲ್ಲಿ ಹಿಂಬಾಲಿಸಿಕೊಂಡು ಬಂದು ಅಡ್ಡಗಟ್ಟಿಕೊಲೆ ಮಾಡಿದ್ದಾರೆ. ಘಟನೆಯಲ್ಲಿ ಜೊತೆಯಲ್ಲಿದ್ದ ಸ್ನೇಹಿತನಿಗೆ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ರಕ್ತದ ಮಡುವಲ್ಲಿ ಬಿದಿದ್ದ ಹೈದರ್ ಅವರನ್ನು ಪೊಲೀಸರು ಬೌರಿಂಗ್ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಅಷ್ಟರಲ್ಲಾಗಲೇ ಆನೆಪಾಳ್ಯ ನಿವಾಸಿ ಹೈದರ್ ಸಾವನ್ನಪ್ಪಿದ್ದರು. ಇದನ್ನೂ ಓದಿ: Champions Trophy | ಇಂಡೋ-ಪಾಕ್ ಕಾದಾಟದ ರೋಚಕ ಇತಿಹಾಸ – ಹೈವೋಲ್ಟೇಜ್ ಕದನದಲ್ಲಿ ಯಾರ ಕೈ ಮೇಲು?

    ವಿಚಾರ ತಿಳಿದು ಬೌರಿಂಗ್ ಆಸ್ಪತ್ರೆ ಬಳಿ ನೂರಾರು ಜನ ಜಮಾಯಿಸಿದ್ದು, ಲಾಂಗು-ಮಚ್ಚು ಝಳಪಿಸಿ ಆಸ್ಪತ್ರೆ ಗೇಟ್ ತಳ್ಳಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸದ್ಯ ಪೊಲೀಸರು ಪರಿಸ್ಥಿತಿ ನಿಯಂತ್ರಿಸಿದ್ದಾರೆ. ಶೇಖ್ ಹೈದರ್ ಅಲಿ ಶಾಸಕ ಎನ್.ಎ.ಹ್ಯಾರಿಸ್ ಜೊತೆ ಗುರುತಿಸಿಕೊಂಡಿದ್ದರು. ಹೈದರ್ ಅಲಿ ಹ್ಯಾರಿಸ್ ಪರ ಪ್ರಚಾರದಲ್ಲಿ ಭಾಗಿಯಾಗುತ್ತಿದ್ದರು. ಘಟನೆ ಸಂಬಂಧ ಅಶೋಕನಗರ ಠಾಣೆಯಲ್ಲಿ ಕೊಲೆ ಕೇಸ್ ದಾಖಲಾಗಿದೆ. ಕೊಲೆ ಆರೋಪಿಗಳ ಪತ್ತೆಗೆ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ.  ಇದನ್ನೂ ಓದಿ: ಪಾಕಿಸ್ತಾನಕ್ಕಿಂದು ಮಾಡು ಇಲ್ಲವೇ ಮಡಿ ಪಂದ್ಯ – ಸೋತರೆ ಬಹುತೇಕ ಮನೆಗೆ

    ಘಟನೆ ಸಂಬಂಧ ಡಿಸಿಪಿ ಶೇಖರ್ ಮಾತನಾಡಿ, ತಡರಾತ್ರಿ 1 ಗಂಟೆ ವೇಳೆ ಫುಟ್ಬಾಲ್ ಸ್ಟೇಡಿಯಂ ಗೇಟ್ ಬಳಿ ಘಟನೆ ನಡೆದಿದೆ. ಕೊಲೆಯಾದ ವ್ಯಕ್ತಿ ರೌಡಿಶೀಟರ್. ಹೈದರ್ ಅಲಿ ವಿರುದ್ಧ 11 ಪ್ರಕರಣಗಳಿವೆ. ಮಾರಣಾಂತಿಕ ಹಲ್ಲೆ, ಸಾಮಾನ್ಯ ಹಲ್ಲೆ, ಎನ್ಡಿಪಿಎಸ್ ಕೇಸ್‌ಗಳು ಇದೆ. ಹೈದರ್ ಅಶೋಕನಗರ ಪೊಲೀಸ್ ಠಾಣಾ ರೌಡಿಶೀಟರ್. 2016ರಿಂದ ರೌಡಿಶೀಟರ್ ಮಾಡಲಾಗಿದೆ. ಪ್ರಾಥಮಿಕ ಮಾಹಿತಿ ಪ್ರಕಾರ, ಕೊಲೆಯಾದ ವ್ಯಕ್ತಿಗೆ ರಾಜಕೀಯ ಹಿನ್ನೆಲೆ ಇಲ್ಲ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಪ್ರೀತಿಸುತ್ತಿದ್ದ ಹುಡುಗಿ ಕೈಕೊಟ್ಟಿದ್ದಕ್ಕೆ ಸಿಟ್ಟು; ಆಕೆಯ ಗಂಡನಿಗೆ ಇರಿದು ಹತ್ಯೆ ಮಾಡಿದ ಪಾಗಲ್‌ ಪ್ರೇಮಿ

  • ಯುವತಿಗೆ ಮದ್ಯ ಕುಡಿಸಿ ಬಿಜೆಪಿ ಮುಖಂಡನಿಂದ ಅತ್ಯಾಚಾರ – ಎಫ್‌ಐಆರ್ ದಾಖಲು

    ಯುವತಿಗೆ ಮದ್ಯ ಕುಡಿಸಿ ಬಿಜೆಪಿ ಮುಖಂಡನಿಂದ ಅತ್ಯಾಚಾರ – ಎಫ್‌ಐಆರ್ ದಾಖಲು

    – ಮದುವೆಗೆ ಸಾಲ ಕೊಡುವುದಾಗಿ ಕರೆಸಿಕೊಂಡು ಕೃತ್ಯ

    ಬೆಂಗಳೂರು: ಮದುವೆಗೆ ಸಾಲ ಕೊಡುವುದಾಗಿ ಯುವತಿಯನ್ನು ಫ್ಲ್ಯಾಟ್‌ಗೆ ಕರೆದೊಯ್ದು ಮದ್ಯ ಕುಡಿಸಿ ಆಕೆಯ ಮೇಲೆ ಬಿಜೆಪಿ ಮುಖಂಡನೋರ್ವ ಅತ್ಯಾಚಾರವೆಸಗಿದ ಘಟನೆ ಬೆಂಗಳೂರಿನಲ್ಲಿ (Bengaluru) ನಡೆದಿದೆ.

    26 ವರ್ಷದ ಯುವತಿ ನೀಡಿದ ದೂರಿನ ಆಧಾರದ ಮೇಲೆ ಬಿಜೆಪಿ (BJP) ಮುಖಂಡ ಜಿಮ್ ಸೋಮ ಅಲಿಯಾಸ್ ಸೋಮಶೇಖರ್ ಮೇಲೆ ಅಶೋಕನಗರ (Ashoknagar) ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಸಂತ್ರಸ್ತ ಯುವತಿಗೆ ಆಕೆಯ ಸ್ನೇಹಿತೆ ಮೂಲಕ ಸೋಮಶೇಖರ್ ಪರಿಚಯವಾಗಿತ್ತು. ಕಳೆದ ವರ್ಷ ಯುವತಿಗೆ ಮದುವೆ ಫಿಕ್ಸ್ ಆಗಿತ್ತು. ಈ ಸಮಯದಲ್ಲಿ ಯುವತಿ ಮದುವೆಗಾಗಿ ಸೋಮಶೇಖರ್ ಬಳಿ ಸುಮಾರು 6 ಲಕ್ಷ ಹಣದ ಸಹಾಯ ಕೇಳಿದ್ದರು. ಇದನ್ನೂ ಓದಿ: ಚೀನಿ ವೈರಸ್‌ ಪತ್ತೆಯಾದ 8 ತಿಂಗಳ ಮಗು ಇಂದು ಡಿಸ್ಚಾರ್ಜ್‌

    ಕಳೆದ ವರ್ಷ ಅಕ್ಟೋಬರ್‌ನಲ್ಲಿ ಹಣ ಕೊಡುವುದಾಗಿ ಸಂತ್ರಸ್ತೆಯನ್ನು ಪಿಜಿಯಿಂದ ಲ್ಯಾಂಗ್ ಫೋರ್ಡ್ ರಸ್ತೆಯ ತನ್ನ ಫ್ಲಾಟ್‌ಗೆ ಕರೆದೊಯ್ದು ಇಚ್ಚೆಗೆ ವಿರುದ್ಧವಾಗಿ ಮದ್ಯಕುಡಿಸಿ ಅತ್ಯಾಚಾರವೆಸಗಿದ್ದಾನೆ. ಈ ವಿಚಾರ ಹೊರಗಡೆ ಹೇಳಿದರೆ ಪ್ರಾಣ ತೆಗೆಯೋದಾಗಿ ಬೆದರಿಕೆ ಹಾಕಿದ್ದು, ಮಾನ ಹರಾಜು ಹಾಕುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಸಂತ್ರಸ್ತೆ ದೂರು ನೀಡಿದ್ದಾಳೆ. ಇದನ್ನೂ ಓದಿ: Tumakuru| ಚಿರತೆ ಬಾಲ ಹಿಡಿದು ಬೋನಿಗೆ ಹಾಕಿದ ಯುವಕ – ಅರಣ್ಯ ಇಲಾಖೆ ಸಿಬ್ಬಂದಿ ಶಾಕ್

    ಘಟನೆ ನಡೆದು ಮೂರು ತಿಂಗಳ ಬಳಿಕ ಸಂತ್ರಸ್ತೆ ಅಶೋಕನಗರ ಠಾಣೆಗೆ ದೂರು ನೀಡಿದ್ದಾಳೆ. ಸಕಲೇಶಪುರ ಕ್ಷೇತ್ರದಿಂದ ಶಾಸಕ ಸ್ಥಾನಕ್ಕೆ ಸ್ಫರ್ಧಿಸಿ ಪರಾಜಯಗೊಂಡಿದ್ದ ಸೋಮಶೇಖರ್ ಪ್ರಕರಣ ದಾಖಲಾಗುತ್ತಿದ್ದಂತೆ ತಲೆಮರೆಸಿಕೊಂಡಿದ್ದು, ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಇದನ್ನೂ ಓದಿ: ಇಂದು ಮಧ್ಯಾಹ್ನ 2 ಗಂಟೆಗೆ ದೆಹಲಿ ಚುನಾವಣಾ ದಿನಾಂಕ ಪ್ರಕಟ

  • ಪಾನಿಪುರಿ ಕೊಡಿಸ್ತೇನೆ ಅಂತ ಕರೆದುಕೊಂಡು ಹೋಗಿ ಬಾಲಕಿ ಮೇಲೆ ಅತ್ಯಾಚಾರ

    ಬೆಂಗಳೂರು: ಪಾನಿಪುರಿ (Panipuri) ಕೊಡಿಸುತ್ತೇನೆ ಎಂದು ಕರೆದುಕೊಂಡು ಹೋಗಿ 7 ವರ್ಷದ ಬಾಲಕಿ ಮೇಲೆ ನೀಚ ವ್ಯಕ್ತಿಯೋರ್ವ ಅತ್ಯಾಚಾರ (Rape) ಎಸಗಿದ ಘಟನೆ ಅಶೋಕನಗರ (Ashok Nagar) ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

    ಬಾಲಕಿಯ ತಾಯಿ ಮೂಕರಾಗಿದ್ದು, ತಾಯಿ ಹಾಗೂ ಮಗು ಪ್ರತಿಷ್ಠಿತ ಮಾಲ್‌ವೊಂದರ ಬಳಿ ಭಿಕ್ಷೆ ಬೇಡುತ್ತಿದ್ದರು. ಈ ವೇಳೆ ಬಾಲಕಿ ಮೇಲೆ 54 ವರ್ಷದ ವ್ಯಕ್ತಿ ಅತ್ಯಾಚಾರ ಎಸಗಿದ್ದಾನೆ. ಮೆಗ್ರತ್ ರೋಡ್ ಮುಖ್ಯರಸ್ತೆ ಕಾಮಗಾರಿ ಹಿನ್ನೆಲೆ ರಸ್ತೆಯಲ್ಲಿ ಹಿಟಾಚಿಯೊಂದು ನಿಂತಿತ್ತು. ಆ ಹಿಟಾಚಿ ಕೆಳಭಾಗದಲ್ಲಿ ಮಗುವಿನ ಮೇಲೆ ನೀಚ ವ್ಯಕ್ತಿ ಅತ್ಯಾಚಾರವೆಸಗಿದ್ದಾನೆ. ಇದನ್ನೂ ಓದಿ: ಮಂಗಳೂರು ಮತಗಟ್ಟೆಯಲ್ಲಿ ಬಿಜೆಪಿ ಕಾರ್ಯಕರ್ತನ ಗೂಂಡಾಗಿರಿ

    ರಕ್ತಸ್ರಾವ ಗಮನಿಸಿ ಮಗುವನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಸದ್ಯ ಮಗುವಿಗೆ ಮೆಡಿಕಲ್ ಮಾಡಿಸಿ ಅಶೋಕನಗರ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಇದನ್ನೂ ಓದಿ: ಕಡ್ಡಾಯ ಮತದಾನ ಕಾನೂನು ತರಬೇಕು: ಸಿದ್ದಗಂಗಾ ಶ್ರೀ ಆಗ್ರಹ