Tag: ಅಶೋಕ್

  • ಬಿಡದಿ ಟೌನ್‌ಶಿಪ್ ಜಟಾಪಟಿ – ಡಿಕೆಶಿ ವಿರುದ್ಧ ಬಿಜೆಪಿ ನಾಯಕರು ವಾಗ್ದಾಳಿ

    ಬಿಡದಿ ಟೌನ್‌ಶಿಪ್ ಜಟಾಪಟಿ – ಡಿಕೆಶಿ ವಿರುದ್ಧ ಬಿಜೆಪಿ ನಾಯಕರು ವಾಗ್ದಾಳಿ

    -ರಿಯಲ್ ಎಸ್ಟೇಟ್ ದಂಧೆಗಾಗಿ ರೈತ ವಿರೋಧಿ ಯೋಜನೆ ಎಂದು ಕಿಡಿ

    ಬೆಂಗಳೂರು: ಬಿಡದಿ ಟೌನ್‌ಶಿಪ್ (Bidadi Township) ವಿರುದ್ಧ ಜೆಡಿಎಸ್ (JDS) ಹೋರಾಟ ಬೆನ್ನಲ್ಲೇ ರಾಜಕೀಯ ಸ್ವರೂಪ ಪಡೆದುಕೊಂಡಿದೆ. ಟೌನ್‌ಶಿಪ್ ವಿಚಾರದಲ್ಲಿ ಬಿಜೆಪಿ ನಾಯಕರು ಡಿಕೆಶಿ (DK Shivakumar) ವಿರುದ್ಧ ವಾಗ್ದಾಳಿ ನಡೆಸಿದರು.

    ಬೆಂಗಳೂರಿನಲ್ಲಿ ಮಾತನಾಡಿದ ಶಾಸಕ ಅಶ್ವಥ್ ನಾರಾಯಣ್, ಬಿಡದಿ ಟೌನ್‌ಶಿಪ್‌ಗೆ ಪ್ರಾಥಮಿಕ ನೋಟಿಫಿಕೇಷನ್ ಹೊರಡಿಸಿದ್ದೇ ಡಿಕೆಶಿ. ಈಗ ಗೊಂದಲ ಮೂಡಿಸುವ ಹೇಳಿಕೆ ಕೊಡ್ತಿರೋದು ಸರಿಯಲ್ಲ. ಡಿಕೆಶಿಯವರು ಇದರಲ್ಲಿ ಎಷ್ಟು ಹಣ ಮಾಡಿಕೊಳ್ಳುತ್ತಿದ್ದಾರೆ ಅನ್ನೋದು ನಮಗೆ ಮುಖ್ಯ ಅಲ್ಲ. ಆದ್ರೆ ಬೇಡಿಕೆ ಆಧರಿಸಿ ಮುಂದುವರೆಯಿರಿ, ಯಾವ ಕಂಪೆನಿಗಳು ಭೂಮಿ ಕೇಳಿದ್ದಾರೆ? ಎಷ್ಟು ಕೃಷಿ ಭೂಮಿ ಬೇಕು? ಪರಿಹಾರ ಎಷ್ಟು ಕೊಡುತ್ತೀರಿ? ಇದೆಲ್ಲದರ ಸ್ಪಷ್ಟತೆ ಕೊಡಿ ಮೊದಲು ಎಂದು ಡಿಕೆಶಿಗೆ ಕೌಂಟರ್ ಕೊಟ್ಟರು. ಇದನ್ನೂ ಓದಿ: ಸರ್ಕಾರದಿಂದ ಉತ್ತರ ಕರ್ನಾಟಕಕ್ಕೆ 3,000 ಕೋಟಿ ಪ್ರವಾಹ ಪರಿಹಾರ ನೀಡಬೇಕು – ಅಶೋಕ್ ಆಗ್ರಹ

    ರೈತರು ಟೌನ್‌ಶಿಪ್ ಮಾಡಬೇಡಿ ಅಂತ ಹೇಳುತ್ತಿಲ್ಲ. ಎಲ್ಲಿ ಅಗತ್ಯ ಇದೆಯೋ ಅಲ್ಲಿ ಮಾಡಬೇಕು. ಜವಾಬ್ದಾರಿಯಿಂದ ಎಷ್ಟು ಬೇಕೋ ಅಷ್ಟೇ ಭೂಸ್ವಾಧೀನ ಮಾಡಿ. ಸೂಕ್ತ ಪರಿಹಾರ ಕೊಡಿ. ಯಾರೋ ಕೆಲವರ ಅನುಕೂಲಕ್ಕಾಗಿ ರೈತರನ್ನು ಒಕ್ಕಲೆಬ್ಬಿಸುವ ಕೆಲಸ ಬೇಡ ಎಂದು ಕಿಡಿಕಾರಿದರು.  ರಿಯಲ್ ಎಸ್ಟೇಟ್ ದಂಧೆ ಮಾಡೋದು, ಕೃಷಿ ಭೂಮಿ ಸ್ವಾಧೀನ ಮಾಡೋದು, ಇದೇನಾ ಸರ್ಕಾರ ನಡೆಸುವ ರೀತಿ? ವ್ಯಾಪಾರ, ಹಣ, ಲಾಭ, ಅವರ ಅನುಕೂಲಕ್ಕೆ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿದ್ದಾರೆ ಎಂದು ಆರೋಪಿಸಿದರು. ಇದನ್ನೂ ಓದಿ: ದಸರಾ ಆನೆ ಬಳಿ ರೀಲ್ಸ್‌ ನಿಷೇಧ, ಕಮಾಂಡೋ ಕಾವಲು: ಈಶ್ವರ್ ಖಂಡ್ರೆ

    ಇನ್ನು ವಿಪಕ್ಷ ನಾಯಕ ಆರ್ ಅಶೋಕ್ ಮಾತನಾಡಿ, 2009ರಲ್ಲಿ ಬಿಜೆಪಿ ಅವಧಿಯಲ್ಲಿ ಬಿಡದಿ ಟೌನ್‌ಶಿಪ್ ಪ್ರಾಜೆಕ್ಟ್ ಕೈಬಿಟ್ಟಿದ್ದೆವು. ರೈತರಿಗೆ ಸಮಸ್ಯೆ ಆಗುತ್ತೆ ಅನ್ನೋ ಕಾರಣಕ್ಕೆ ಯೋಜನೆ ಕೈಬಿಟ್ಟಿದ್ದೆವು. ನಮ್ಮ ಅವಧಿಯಲ್ಲಿ ಭೂಸ್ವಾಧೀನಕ್ಕೆ ನೋಟಿಫಿಕೇಷನ್ ಆಗಿರಲಿಲ್ಲ, ಡಿಕೆಶಿ ಆರೋಪ ಸುಳ್ಳು. ಬಿಡದಿ ಟೌನ್‌ಶಿಪ್ ಸತ್ತು ಹೋಗಿದ್ದ ಪ್ರಾಜೆಕ್ಟ್. ಈಗ ಡಿಕೆಶಿ ಅವರು ರಿಯಲ್ ಎಸ್ಟೇಟ್ ದಂಧೆಗಾಗಿ ಯೋಜನೆಗೆ ಜೀವ ಕೊಟ್ಟಿದ್ದಾರೆ. ಯಾರಿಗೋಸ್ಕರ ಈ ಯೋಜನೆ, ಯಾರಿಗೆ ಸೈಟ್ ಹಂಚ್ತೀರ? ಡಿಕೆಶಿ ಹೇಳಲಿ. 20 ವರ್ಷಗಳ ಹಿಂದೆಯೇ ಈ ಪ್ರಾಜೆಕ್ಟ್ ಕೈಬಿಡಲಾಗಿತ್ತು. ನಾವು, ಜೆಡಿಎಸ್ ಇದ್ದಾಗ ಈ ಯೋಜನೆ ಮುಟ್ಟಿಲ್ಲ. ಈಗ ಡಿಕೆಶಿ ಯಾಕೆ ಈ ಯೋಜನೆಗೆ ಕೈಹಾಕಿದ್ದಾರೆ? ರಿಯಲ್ ಎಸ್ಟೇಟ್‌ಗಾಗಿ ಡಿಕೆಶಿ ಆಸಕ್ತಿ ತೋರುತ್ತಿದ್ದಾರೆ ಎಂದು ಆರೋಪ ಮಾಡಿದರು. ಇದನ್ನೂ ಓದಿ: 1 ಗಂಟೆ ಹೈಡ್ರಾಮಾ, ಟ್ರೋಫಿ ಜೊತೆ ಓಡಿದ ನಖ್ವಿ – ಮಧ್ಯರಾತ್ರಿ ಏನಾಯ್ತ? ಇಲ್ಲಿದೆ ಪೂರ್ಣ ವಿವರ

  • ಕಾಲ್ತುಳಿತ ಸರ್ಕಾರದ ಪ್ರಾಯೋಜಿತ ಅಮಾಯಕರ ಹತ್ಯಾಕಾಂಡ: ಅಶೋಕ್ ಕಿಡಿ

    ಕಾಲ್ತುಳಿತ ಸರ್ಕಾರದ ಪ್ರಾಯೋಜಿತ ಅಮಾಯಕರ ಹತ್ಯಾಕಾಂಡ: ಅಶೋಕ್ ಕಿಡಿ

    ಬೆಂಗಳೂರು: ಕಾಲ್ತುಳಿತ (Chinnaswamy Stampede) ಸರ್ಕಾರದ ಪ್ರಾಯೋಜಿತ ಅಮಾಯಕರ ಹತ್ಯಾಕಾಂಡ ಎಂದು ವಿಪಕ್ಷ ನಾಯಕ ಆರ್ ಅಶೋಕ್ (R Ashok) ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

    ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತಕ್ಕೊಳಗಾಗಿ 11 ಮಂದಿ ಮೃತಪಟ್ಟ ಕುರಿತು ಬಿಜೆಪಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಪ್ಪು ನಮ್ಮದು ಸರಿ, ಆದರೆ ತಪ್ಪು ಯಾರದ್ದೆಂದು ಜನರು ಕೇಳುತ್ತಿದ್ದಾರೆ. ಕೂಗಳತೆ ಅಂತರದಲ್ಲೇ ಎರಡೆರಡು ಕಾರ್ಯಕ್ರಮಗಳು. ಈ ಕಾರ್ಯಕ್ರಮದ ಬಗ್ಗೆ ಐಪಿಎಲ್ ಚೇರ್‌ಮ್ಯಾನ್ ಗೊತ್ತೇ ಇಲ್ಲ ಎಂದಿದ್ದಾರೆ. ಸರ್ಕಾರ ಕೇಳಿದ್ದಕ್ಕೆ ಗ್ರೌಂಡ್ ಕೊಟ್ಟಿದ್ದೇನೆ ಎಂದು ಕೆಎಸ್‌ಸಿಎ ಹೇಳಿದೆ. ಇದರಲ್ಲಿ ಕೆಎಸ್‌ಸಿಎ ಅವರದ್ದು ತಪ್ಪಿಲ್ಲ. ಆರ್‌ಸಿಬಿಯವರು ಎರಡು ಕಿ.ಮೀ ಮೆರವಣಿಗೆಗೆ ಕೇಳಿದ್ದರು. ಆದರೆ ಅವರನ್ನು ವಿಧಾನಸೌಧಕ್ಕೆ ಕರೆದುಕೊಂಡು ಬಂದಿದ್ದು ಯಾರು ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ ಕೇಸ್‌ – ಪೊಲೀಸರನ್ನ ಸಂಪರ್ಕಿಸದೇ ವಿಕ್ಟರಿ ಪೆರೇಡ್‌ ಘೋಷಿಸಿದ್ದ RCB ಫ್ರಾಂಚೈಸಿ

    ಪಂದ್ಯ ಮುಗಿದ ಮೇಲೆ ನಮ್ಮ ಪೊಲೀಸರು ಬೆಳಗ್ಗೆ 3 ಗಂಟೆವರೆಗೂ ಕೆಲಸ ಮಾಡಿದ್ದಾರೆ. ಪಾಪ ನಮ್ಮ ಪೊಲೀಸರಿಗೆ ರಾತ್ರಿ ಎಲ್ಲಾ ನಿದ್ದೆನೇ ಇರಲಿಲ್ಲ. ಆದರೆ ನಮ್ಮ ಸರ್ಕಾರಕ್ಕೆ ಕಾಮನ್ ಸೆನ್ಸ್ ಇಲ್ಲ. ಅದೇ ಪೊಲೀಸರನ್ನು ನಿಯೋಜನೆ ಮಾಡಿದರೆ ಅವರು ಹೇಗೆ ಕೆಲಸ ಮಾಡಲು ಆಗುತ್ತದೆ? ಪೊಲೀಸರು ಈ ಕಾರ್ಯಕ್ರಮಕ್ಕೆ ನಿರಾಕರಣೆ ಮಾಡಿದ್ದಾರೆ. ಆದರೆ ಬಲತ್ಕಾರದಿಂದ ಸರ್ಕಾರದಲ್ಲಿರುವುದು ನಾನಾ ನೀನಾ ಎಂದು ಪ್ರಶ್ನೆ ಕೇಳಿದೆ. ವಿಧಾನ ಸೌಧದ ಮುಂದೆ ಡ್ರೋನ್ ಎಲ್ಲಾ ಬಳಕೆ ಮಾಡಿದ್ದಾರೆ. ಹೈಕೋರ್ಟ್ ನಿರ್ಬಂಧಿತ ಸ್ಥಳ, ಎಂತಹ ಮುಠ್ಠಾಳ ಕೆಲಸ ಮಾಡಿದೆ. ಇವತ್ತು ಕೋರ್ಟ್ ಕೂಡ ಸುಮೊಟೋ ಕೇಸ್ ದಾಖಲಿಸಿಕೊಂಡಿದೆ. ಇಷ್ಟಾದರೂ ಕೂಡ ಮುಖ್ಯಮಂತ್ರಿಗಳು, ಇಷ್ಟು ಜನ ಸೇರುತ್ತಾರೆ ಎಂದು ನಾವು ಅಂದಾಜಿಸಿಲ್ಲ ಅಂದಿದ್ದಾರೆ. ಎಲ್ಲೆಲ್ಲಿ ಎಷ್ಟೆಷ್ಟು ಜನರು ಸೇರುತ್ತಾರೆ ಎಂದು ಸರ್ಕಾರಕ್ಕೆ ಸಾಮಾನ್ಯ ಜ್ಞಾನವೂ ಇಲ್ಲವೇ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಎಂಟ್ರಿ ಫ್ರೀ ಅಂತಾ ಹೇಳಿ ಸ್ಟೇಡಿಯಂ ಗೇಟ್ ಓಪನ್ ಮಾಡಿಲ್ಲ ಯಾಕೆ? – ದಿವ್ಯಾಂಶಿ ತಾಯಿ ಪ್ರಶ್ನೆ

  • ಬಿಜೆಪಿಯಲ್ಲಿನ ಭಿನ್ನಮತಕ್ಕೆ 10-15 ದಿನಗಳಲ್ಲಿ ಪರಿಹಾರ- ಆರ್.ಅಶೋಕ್

    ಬಿಜೆಪಿಯಲ್ಲಿನ ಭಿನ್ನಮತಕ್ಕೆ 10-15 ದಿನಗಳಲ್ಲಿ ಪರಿಹಾರ- ಆರ್.ಅಶೋಕ್

    ಬೆಂಗಳೂರು: ಬಿಜೆಪಿಯಲ್ಲಿನ (BJP) ಭಿನ್ನಮತಗಳು 10-15 ದಿನಗಳಲ್ಲಿ ಸರಿ ಹೋಗಲಿದೆ ಎಂದು ವಿಪಕ್ಷ ನಾಯಕ ಅಶೋಕ್ (R Ashok) ತಿಳಿಸಿದ್ದಾರೆ.

    ಬಿಜೆಪಿ ಭಿನ್ನಮತ ವಿಚಾರದ ಕುರಿತು ವಿಧಾನಸೌಧದಲ್ಲಿ ಮಾತನಾಡಿದ ಅವರು, ಬಿಜೆಪಿಯಲ್ಲಿ ಸಮಸ್ಯೆ ಇದೆ. ಈಗಾಗಲೇ ಕೇಂದ್ರದ ನಾಯಕರು ಗಮನ ಕೊಟ್ಟಿದ್ದಾರೆ. 10-15 ದಿನಗಳಲ್ಲಿ ಎಲ್ಲವೂ ಸರಿ ಆಗುತ್ತದೆ. ನಮ್ಮಲ್ಲಿ ಸಣ್ಣಪುಟ್ಟ ಸಮಸ್ಯೆ ಇದ್ದರೂ ಸರ್ಕಾರದ ವಿರುದ್ಧ ಹೋರಾಟ ನಿಂತಿಲ್ಲ. ಎಲ್ಲವನ್ನೂ ಹೈಕಮಾಂಡ್ ನಾಯಕರು ಸರಿ ಮಾಡುತ್ತಾರೆ ಎಂದು ತಿಳಿಸಿದರು. ಇದನ್ನೂ ಓದಿ: ನಿಲ್ಲದ ಫೈನಾನ್ಸ್‌ ಕಿರುಕುಳ – ದಾವಣಗೆರೆಯಲ್ಲಿ ಶಿಕ್ಷಕಿ ಆತ್ಮಹತ್ಯೆ

    ಶ್ರೀರಾಮುಲು (Sriramulu) ನಾಳೆ ಬೆಂಗಳೂರಿಗೆ ಬರುತ್ತಾರೆ. ಅವರೇ ನನಗೆ ಹೇಳಿದ್ದಾರೆ. ನಾಳೆ ಬಂದ ಮೇಲೆ ಅವರ ಜೊತೆ ಮಾತನಾಡುತ್ತೇನೆ. ಎಲ್ಲವೂ ಸರಿ ಆಗುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇದನ್ನೂ ಓದಿ: ಕೈ ನಾಯಕರಿಗೆ ನೀಡಿದ್ರೆ ಮಾತ್ರ ರಾಜಕೀಯ ಪ್ರೇರಿತ: ಬಿಎಸ್‌ವೈಗೆ ನೀಡಿದ ನೋಟಿಸ್‌ ಏನು ಎಂದ ಅಶೋಕ್‌

  • ಕೈ ನಾಯಕರಿಗೆ ನೀಡಿದ್ರೆ ಮಾತ್ರ ರಾಜಕೀಯ ಪ್ರೇರಿತ: ಬಿಎಸ್‌ವೈಗೆ ನೀಡಿದ ನೋಟಿಸ್‌ ಏನು ಎಂದ ಅಶೋಕ್‌

    ಕೈ ನಾಯಕರಿಗೆ ನೀಡಿದ್ರೆ ಮಾತ್ರ ರಾಜಕೀಯ ಪ್ರೇರಿತ: ಬಿಎಸ್‌ವೈಗೆ ನೀಡಿದ ನೋಟಿಸ್‌ ಏನು ಎಂದ ಅಶೋಕ್‌

    ಬೆಂಗಳೂರು : ಮುಡಾ ಪ್ರಕರಣದಲ್ಲಿ (MUDA Case) ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಮತ್ತು ಸಚಿವ ಬೈರತಿ ಸುರೇಶ್ (Byrathi Suresh) ಅವರಿಗೆ ಜಾರಿ ನಿರ್ದೇಶನಾಲಯ (ED) ನೀಡಿರುವ ನೋಟಿಸ್‌ನಲ್ಲಿ ವಿಶೇಷತೆಯೂ ಇಲ್ಲ. ರಾಜಕೀಯ ಪ್ರೇರಿತವೂ ಅಲ್ಲ ಎಂದು ವಿಪಕ್ಷ ನಾಯಕ ಅಶೋಕ್ (Ashok) ತಿಳಿಸಿದ್ದಾರೆ.

    ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಯಡಿಯೂರಪ್ಪ (Yediyurappa) ಸಿಎಂ ಆಗಿದ್ದಾಗ ಸಿಬಿಐ, ಲೋಕಾಯುಕ್ತ, ಇಡಿ ನೋಟಿಸ್‌ ಕೊಟ್ಟಿತ್ತು.ಆಗ ಯಾಕೆ ಸುದ್ದಿ ಆಗಲಿಲ್ಲ. ಈಗ ಯಾಕೆ ಸುದ್ದಿ ಆಗ್ತಿದೆ ಅಂತ ಪ್ರಶ್ನೆ ಮಾಡಿದರು.

    ಇಡಿ ನೋಟಿಸ್‌ ರಾಜಕೀಯ ಪ್ರೇರಿತ ಎಂಬ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಹೇಳಿಕೆಗೆ ತಿರುಗೇಟು ಕೊಟ್ಟ ಅಶೋಕ್, ಅವರೇನು ಸತ್ಯ ಹರಿಶ್ಚಂದ್ರರಾ? ಯಡಿಯೂರಪ್ಪ, ಜನಾರ್ದನ ರೆಡ್ಡಿಗೆ ಹಿಂದೆ  ನೋಟಿಸ್‌ ಕೊಟ್ಟಾಗ ರಾಜಕೀಯ ಪ್ರೇರಿತ ಅಲ್ಲವಾ? ಸಿಎಂ, ಡಿಕೆ ಶಿವಕುಮಾರ್‌,  ಕಾಂಗ್ರೆಸ್ ಮೇಲೆ ಕೊಟ್ಟರೆ ಮಾತ್ರ ರಾಜಕೀಯ ಪ್ರೇರಿತನಾ ಅಂತ ಪ್ರಶ್ನೆ ಮಾಡಿದರು.

     

    ಕಾಂಗ್ರೆಸ್‌ನವರಿಗೆ ನೋಟಿಸ್‌ ಕೊಟ್ಟರೆ ಅದು ರಾಜಕೀಯ ಪ್ರೇರಿತ ಅಂತ ಪುಸ್ತಕ ತಂದು ಬಿಡಿ ಅಂತ ಲೇವಡಿ ಮಾಡಿದರು. ಸಿಬಿಐ ಮತ್ತು ಇಡಿ ಅವತ್ತು ಇತ್ತು. ಇವತ್ತು ಇದೆ. ಏನು ಬದಲಾವಣೆ ಆಗಿಲ್ಲ ಅಂತ ಡಿಕೆಶಿಗೆ ಅಶೋಕ್ ತಿರುಗೇಟು ಕೊಟ್ಟರು.  ಇದನ್ನೂ ಓದಿ: MUDA Scam| ಸಿಎಂಗೆ ಸಂಕಷ್ಟ – ವಿಚಾರಣೆಗೆ ಹಾಜರಾಗುವಂತೆ ಪತ್ನಿಗೆ ಇಡಿ ಸಮನ್ಸ್‌

    ಇಡಿ ಕಾನೂನಾತ್ಮಕ ಸಂಸ್ಥೆಯಾಗಿದೆ. ಲ್ಯಾಂಡ್ ಕನ್ವರ್ಷನ್, 50:50 ಅನುಪಾತದಲ್ಲಿ ಸೈಟ್ ನೀಡಿದ್ದು ಅಧಿಕಾರಿಗಳು. ಲೋಕಾಯುಕ್ತ ರಿಪೋರ್ಟ್ ಕೂಡಾ ಅಧಿಕಾರಿಗಳು ಅಂತಾನೇ ರಿಪೋರ್ಟ್ ಕೊಡೋದು‌. ಈ ಸರ್ಕಾರದಲ್ಲಿ ವಾಲ್ಮೀಕಿ ಹಗರಣದಲ್ಲಿ ಎಸ್‌ಐಟಿ ಏನು ಮಾಡಿತ್ತು? ತನಿಖೆ ನಡೆಸಿ ಕ್ಲೀನ್ ಚಿಟ್ ಕೊಟ್ಟರು‌. ಮುಡಾ ಪ್ರಕರಣಕ್ಕೂ ಕ್ಲೀನ್ ಚಿಟ್ ಕೊಡ್ತಾರೆ ಅಂತ ಭವಿಷ್ಯ ನುಡಿದರು.

    ಲೋಕಾಯುಕ್ತ ಪೊಲೀಸರು ಸಿಎಂ ಅಡಿಯಲ್ಲಿ ಬರುತ್ತಾರೆ. ಪಾಪ ಅವರಿಗೆ ಪ್ರಮೋಷನ್ ಬೇಕು. ಪ್ರಮೋಷನ್ ಬೇಕಾಗಿರುವವರು ಹೇಗೆ ಅವರ ವಿರುದ್ದ ತನಿಖೆ ಮಾಡುತ್ತಾರೆ? ನಾನು ಅವರ ಮೇಲೆ ಆರೋಪ ಮಾಡುವದಿಲ್ಲ.  ವರದಿಯಲ್ಲಿ ಸಿದ್ದರಾಮಯ್ಯಗೆ ಕ್ಲೀನ್ ಚಿಟ್ ಕೊಡ್ತಾರೆ ಅಂತ ಲೋಕಾಯುಕ್ತ ತನಿಖೆಗೆ ವಿರೋಧ ಮಾಡಿದರು.

     

  • ಇಡಿಯಿಂದ 300 ಕೋಟಿ ಮೌಲ್ಯದ ಆಸ್ತಿ ಜಪ್ತಿ – ಮುಡಾ ಕೇಸ್‌ ಸಿಬಿಐಗೆ ನೀಡಬೇಕು: ಅಶೋಕ್‌

    ಇಡಿಯಿಂದ 300 ಕೋಟಿ ಮೌಲ್ಯದ ಆಸ್ತಿ ಜಪ್ತಿ – ಮುಡಾ ಕೇಸ್‌ ಸಿಬಿಐಗೆ ನೀಡಬೇಕು: ಅಶೋಕ್‌

    – ಭಿನ್ನಮತವನ್ನು ಹೈಕಮಾಂಡ್ ಸರಿ ಮಾಡುತ್ತೆ

    ಬೆಂಗಳೂರು: ಮುಡಾ ಹಗರಣಕ್ಕೆ (MUDA Scam) ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ 300 ಕೋಟಿ ಮೌಲ್ಯ ಆಸ್ತಿ ಜಪ್ತಿ ಮಾಡಿದೆ. ಕೂಡಲೇ ಈ ಪ್ರಕರಣವನ್ನ ಸಿಬಿಐಗೆ (CBI) ವಹಿಸಬೇಕು ಎಂದು ವಿಪಕ್ಷ ನಾಯಕ ಅಶೋಕ್‌ (Ashok) ಆಗ್ರಹಿಸಿದರು.

    ವಿಧಾನಸೌಧದಲ್ಲಿ ಮಾತನಾಡಿದ ಅವರು , ಮುಡಾ ಹಗರಣ ಬಗೆದಷ್ಟು ಹೊರಗೆ ಬರುತ್ತಿದೆ. ನಾನು ಅರ್ಜಿ ಹಾಕಿ ಎರಡು ತಿಂಗಳು ಆದರೂ 50:50 ಅಡಿ ಎಷ್ಟು ಸೈಟ್ ಕೊಟ್ಟಿದ್ದೀರಾ ಅಂತ ಮುಡಾ ಇನ್ನು ಮಾಹಿತಿ ಕೊಟ್ಟಿಲ್ಲ.ಇದೆಲ್ಲವನ್ನು ನೋಡಿದರೆ ಲೋಕಾಯುಕ್ತಗೆ ಈ ಕೇಸ್ ತನಿಖೆ ಮಾಡೋಕೆ ಆಸಕ್ತಿ ಇದ್ದಂತೆ ಕಾಣ್ತಿಲ್ಲ. ಲೋಕಾಯುಕ್ತದವರು ಮುಡಾ ಕೇಸ್ ನಲ್ಲಿ ಕ್ಲೀನ್ ಚಿಟ್ ಕೊಡೋ ಪ್ರಯತ್ನ ಮಾಡ್ತಿದ್ದಾರೆ ಅನ್ನಿಸುತ್ತೆ ಅಂತ ಆರೋಪ ಮಾಡಿದರು. ಇದನ್ನೂ ಓದಿ: MUDA ಅಕ್ರಮದಲ್ಲಿ ʼಕೋಕನಟ್‌ʼ ಡೀಲ್‌ – 50, 100 ಕೋಕನಟ್‌ ಕಳುಹಿಸಿ ಸಿಕ್ಕಿಬಿದ್ದ ಬಿಲ್ಡರ್‌

    ಇಡಿ ಲೋಕಾಯುಕ್ತಗೆ ದಾಖಲೆಗಳನ್ನು ಕೊಟ್ಟರೂ ಅದನ್ನ ಬಳಸಿಕೊಳ್ಳಲಿಲ್ಲ. ಲೋಕಾಯುಕ್ತ ಕೂಡಾ ಇಡಿ ರೀತಿ ಸೀಜ್ ಮಾಡಿಲ್ಲ ಯಾಕೆ? ಇದೆಲ್ಲವನ್ನೂ ನೋಡಿದರೆ ಲೋಕಾಯುಕ್ತ ಪೊಲೀಸರು ಪ್ರಮೋಷನ್ ಪಡೆಯೋಕೆ ಹೀಗೆಲ್ಲ ಮಾಡ್ತಿದ್ದಾರೆ ಅಂತ ಅನ್ನಿಸುತ್ತೆ. ಲೋಕಾಯುಕ್ತಗೆ ಯಾರ ಒತ್ತಡ ಇದೆ. ಯಾರ ಕೈವಾಡ ಇದೆ ಗೊತ್ತಿಲ್ಲ.ಮೊದಲ ದಿನದಿಂದಲೂ ನಾವು ಇದನ್ನೇ ಹೇಳ್ತಿದ್ದೇವೆ.ಹೀಗಾಗಿ ನಾವು ಮುಡಾ ಕೇಸ್ ಅನ್ನ ಸಿಬಿಐ ತನಿಖೆಗೆ ಕೊಡಿ ಅಂತ ಹೇಳ್ತಿದ್ದೇವೆ. ಈಗಲೂ ಮುಡಾ ಕೇಸ್ ಅನ್ನ ಸಿಬಿಐಗೆ ಕೊಡಬೇಕು ಅಂತ ಅಶೋಕ್ ಅಗ್ರಹ ಮಾಡಿದ್ರು. ಇದನ್ನೂ ಓದಿ: MUDA Scam | ಅಕ್ರಮವಾಗಿ ಮಾರಾಟ, ಸಹಕಾರಿ ಸಂಘ ಬಳಸಿ ದುರ್ಬಳಕೆ, 300 ಕೋಟಿ ಆಸ್ತಿ ಜಪ್ತಿ – ಇಡಿ ಹೇಳಿದ್ದೇನು?

     

    ವಿಧಾನಸೌಧದಲ್ಲಿ ಯತ್ನಾಳ್ ಟೀಂ ಮತ್ತು ರೇಣುಕಾಚಾರ್ಯ ಟೀಂಗಳಿಂದ ಪದೇ ಪದೇ ಸಭೆ ಮಾಡುತ್ತಿರುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿಯ ಆಂತರಿಕ ಕಿತ್ತಾಟ ಎಲ್ಲವನ್ನು ಪಾರ್ಟಿ ನೋಡಿಕೊಳ್ಳುತ್ತೆ.ನಾನು ಸಾಮಾನ್ಯರಲ್ಲಿ ಸಾಮಾನ್ಯ ಕಾರ್ಯಕರ್ತ. ಯಡಿಯೂರಪ್ಪ,  ಅನಂತ್ ಕುಮಾರ್, ನಾವೆಲ್ಲ ಪಾರ್ಟಿ ಕಟ್ಟಿ ಬೆಳೆಸಿದ್ದೇವೆ. ಪಾರ್ಟಿಗೆ ಸಂಬಂಧಿಸಿದ ವಿಷಯ ಇದ್ದರೆ ನಾಲ್ಕು ಗೋಡೆ ಮಧ್ಯೆ ಮಾತಾಡ್ತೀವಿ. ನಮ್ಮದು ಕೇಡರ್ ಪಾರ್ಟ್. ಭಿನ್ನಮತದ ವಿಚಾರಗಳನ್ನು ಹೈಕಮಾಂಡ್ ನೋಡಿಕೊಳ್ಳುತ್ತೆ ಅಂತ ತಿಳಿಸಿದರು.

    ಇನ್ನು ರಾಜ್ಯಾಧ್ಯಕ್ಷ ಸ್ಥಾನ ಚುನಾವಣೆಗೆ ಯತ್ನಾಳ್ ಟೀಂನಿಂದ ಸ್ಪರ್ಧೆ ಮಾಡೋ ವಿಷಯಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿ ರಾಜ್ಯಾಧ್ಯಕ್ಷರ ಚುನಾವಣೆ ಪ್ರತಿಕ್ರಿಯೆ ಇನ್ನು ಶುರುವಾಗಿಲ್ಲ. ಚುನಾವಣೆ ಘೋಷಣೆ ಆಗಿಲ್ಲ ಅಂದ ಮೇಲೆ ಏನು ಪ್ರತಿಕ್ರಿಯೆ ಕೊಡಲಿ. ಇನ್ನು ತಾಲೂಕು ಮಟ್ಟದಲ್ಲಿ ಚುನಾವಣೆ ಪ್ರಕ್ರಿಯೆಗಳು ನಡೆಯುತ್ತಿವೆ. ರಾಜ್ಯಾಧ್ಯಕ್ಷರ ಚುನಾವಣೆ ಪ್ರಕ್ರಿಯೆ ಬಂದಾಗ ಅದರ ಬಗ್ಗೆ ಮಾತಾಡ್ತೀನಿ ಅಂತ ಜಾರಿಕೊಂಡರು.

  • ಬೆಂಬಲ ಬೆಲೆಗಿಂತಲೂ ಕಡಿಮೆ ದರಕ್ಕೆ ದಲ್ಲಾಳಿಗಳಿಗೆ ಭತ್ತ ಮಾರಾಟ – ಖರೀದಿ ಕೇಂದ್ರ ತೆರೆಯದ್ದಕ್ಕೆ ಅಶೋಕ್‌ ಆಕ್ರೋಶ

    ಬೆಂಬಲ ಬೆಲೆಗಿಂತಲೂ ಕಡಿಮೆ ದರಕ್ಕೆ ದಲ್ಲಾಳಿಗಳಿಗೆ ಭತ್ತ ಮಾರಾಟ – ಖರೀದಿ ಕೇಂದ್ರ ತೆರೆಯದ್ದಕ್ಕೆ ಅಶೋಕ್‌ ಆಕ್ರೋಶ

    – ಕರ್ನಾಟಕದಲ್ಲಿರೋದು ದರಿದ್ರ ಸರ್ಕಾರ
    – ಕೃಷಿ ಸಚಿವರ ತವರು ಜಿಲ್ಲೆಯ ರೈತರಿಗೆ ಅನ್ಯಾಯ

    ಬೆಂಗಳೂರು: ಮಂಡ್ಯದಲ್ಲಿ (Mandya) ಭತ್ತದ ಖರೀದಿ ಕೇಂದ್ರಗಳು ತೆರೆಯದ ಸರ್ಕಾರದ ವಿರುದ್ದ ವಿಪಕ್ಷ ನಾಯಕ ಅಶೋಕ್ (Ashok) ಕಿಡಿಕಾರಿದ್ದಾರೆ. ಎಕ್ಸ್‌ನಲ್ಲಿ ಸರ್ಕಾರದ ವಿರುದ್ದ ಕಿಡಿಕಾರಿದ ಅಶೋಕ್ ಕಾಂಗ್ರೆಸ್ (Congress) ಸರ್ಕಾರ ದರಿದ್ರ ಸರ್ಕಾರ ಅಂತ ವಾಗ್ದಾಳಿ ನಡೆಸಿದ್ದಾರೆ.

    ಅಶೋಕ್ ಪೋಸ್ಟ್‌ನಲ್ಲಿ ಏನಿದೆ?
    ಈ ದರಿದ್ರ ಕಾಂಗ್ರೆಸ್ ಸರ್ಕಾರದಲ್ಲಿ ಒಬ್ಬರು ಕುರ್ಚಿ ಉಳಿಸಿಕೊಳ್ಳಲು ತಂತ್ರ ಹೆಣೆಯುತ್ತಿದ್ದರೆ, ಇನ್ನೊಬ್ಬರು ಕುರ್ಚಿ ಕಿತ್ತುಕೊಳ್ಳಲು ಕತ್ತಿ ಮಸಿಯುತ್ತಿದ್ದಾರೆ. ಇವರಿಬ್ಬರ ನಡುವೆ ಆತಂತ್ರವಾಗಿರುವ ಮಂತ್ರಿಗಳು ಅವರವರ ಅಸ್ತಿತ್ವ ಉಳಿಸಿಕೊಳ್ಳಲು ಡಿನ್ನರ್ ಮೀಟಿಂಗ್, ಸೀಕ್ರೆಟ್ ಸಭೆ ಮಾಡಿ ಕಾಲಹರಣ ಮಾಡುತ್ತಿದ್ದಾರೆ. ಗಂಡ ಹೆಂಡತಿ ಜಗಳದಲ್ಲಿ ಕೂಸು ಬಡವಾಯಿತು ಎಂಬಂತೆ ಇವೆಲ್ಲದರ ನಡುವೆ ರಾಜ್ಯದಲ್ಲಿ ಆಡಳಿತ ಯಂತ್ರ ಸಂಪೂರ್ಣ ಕುಸಿದು ರೈತರ ಕಷ್ಟ ಕೇಳಲು ಸರ್ಕಾರವೇ ಇಲ್ಲದಂತಾಗಿದೆ.

    ಮಂಡ್ಯದಲ್ಲಿ ಭತ್ತ ಖರೀದಿ ಕೇಂದ್ರಗಳು ಆರಂಭವಾಗದ ಕಾರಣ ರೈತರು ಬೆಂಬಲ ಬೆಲೆಗಿಂತ ಕಡಿಮೆ ದರಕ್ಕೆ ಭತ್ತದ ದಲ್ಲಾಳಿಗಳಿಗೆ ಮಾರಾಟ ಮಾಡುವ ಅನಿವಾರ್ಯತೆ ಎದುರಾಗಿದೆ. ಕ್ವಿಂಟಾಲ್ ಭತ್ತಕ್ಕೆ 3,000 ರೂ. ಬೆಂಬಲ ಬೆಲೆ ನಿಗದಿಯಾಗಿದ್ದರೂ ಸರ್ಕಾರ ಭತ್ತ ಖರೀದಿ ಕೇಂದ್ರಗಳು ತೆರೆಯದ ಕಾರಣ ದಲ್ಲಾಳಿಗಳಿಗೆ 1,800 ರೂ. – 2,000 ರೂ. ಮಾರಿ ನಷ್ಟ ಅನುಭವಿಸುತ್ತಿದ್ದಾರೆ. ಕೃಷಿ ಸಚಿವ ಚೆಲುವರಾಯಸ್ವಾಮಿ ಅವರ ತವರು ಜಿಲ್ಲೆಯಲ್ಲೇ ಈ ಗತಿ ಆದರೆ ಇನ್ನು ಬೇರೆ ಜಿಲ್ಲೆಗಳ ಗತಿ ಏನಾಗಿರಬಹುದು ಎನ್ನುವುದನ್ನ ಹೇಳಬೇಕಿಲ್ಲ. ಇದನ್ನೂ ಓದಿ: ತಂದೆಯನ್ನೇ ಹತ್ಯೆಗೈದು ಹೃದಯಾಘಾತದ ಕತೆಕಟ್ಟಿದ್ದ ಮಗ ಅರೆಸ್ಟ್

    ಕಲ್ಯಾಣ ಕರ್ನಾಟಕದ ಪ್ರಮುಖ ವಾಣಿಜ್ಯ ಬೆಳೆಯಾದ ತೊಗರಿ ಬೆಲೆ ದಿನದಿಂದ ದಿನಕ್ಕೆ ಇಳಿಕೆ ಕಾಣುತ್ತಿದ್ದು, ಸರಕಾರ ಯಾವಾಗ ತೊಗರಿ ಖರೀದಿ ಕೇಂದ್ರ ತೆರೆಯಲಿದೆ ಎಂದು ರೈತರು ಕಾತರದಿಂದ ಎದುರು ನೋಡುತ್ತಿದ್ದಾರೆ. ಕಲ್ಯಾಣ ಕರ್ನಾಟಕ ಜಿಲ್ಲೆಗಳಲ್ಲಿ ಈ ಬಾರಿ ತೇವಾಂಶ ಕಡಿಮೆಯಿಂದ 1.82 ಲಕ್ಷ ಹೆಕ್ಟೇರ್‌ ತೊಗರಿ ಬೆಳೆ ಹಾನಿಯಾಗಿದೆ ಎಂದು ಸರಕಾರಿ ದಾಖಲೆಗಳೇ ಹೇಳುತ್ತವೆ. ಆದರೆ ಇದುವರೆಗೂ ರಾಜ್ಯ ಸರಕಾರ ಪರಿಹಾರದ ಮಾತೇ ಆಡಿಲ್ಲ. ಜಿಲ್ಲೆಯ ಉಸ್ತುವಾರಿ ಸಚಿವರು ಕೂಡ ಚಕಾರ ಎತ್ತುತ್ತಿಲ್ಲ. ಒಟ್ಟಿನಲ್ಲಿ ಈ ರೈತ ವಿರೋಧಿ ಸಿಎಂ ಸಿದ್ದರಾಮಯ್ಯ ಸರ್ಕಾರ ತೊಲಗುವವರೆಗೂ ನಾಡಿನ ಅನ್ನದಾತರಿಗೆ ನೆಮ್ಮದಿಯಿಲ್ಲ ಅಂತ ಅಶೋಕ್ ಕಿಡಿಕಾರಿದ್ದಾರೆ‌.

     

  • ಸಿಎಂ ಪಟ್ಟಕ್ಕೆ ಕುಮಾರಸ್ವಾಮಿ, ಅಶೋಕ್‌ ಕನಸು – 5 ವರ್ಷ ನಮ್ಮದೇ ಸರ್ಕಾರ ಎಂದ ಸಿದ್ದರಾಮಯ್ಯ

    ಸಿಎಂ ಪಟ್ಟಕ್ಕೆ ಕುಮಾರಸ್ವಾಮಿ, ಅಶೋಕ್‌ ಕನಸು – 5 ವರ್ಷ ನಮ್ಮದೇ ಸರ್ಕಾರ ಎಂದ ಸಿದ್ದರಾಮಯ್ಯ

    ಬಳ್ಳಾರಿ: ಕುಮಾರಸ್ವಾಮಿ (HD Kumaraswamy), ಆರ್ ಆಶೋಕ್‌ (R Ashok) ಮುಖ್ಯಮಂತ್ರಿಯಾಗಲು ಕಾಯುತ್ತಿದ್ದಾರೆ. ಆದರೆ ಐದು ವರ್ಷ ನಾವೇ ಅಧಿಕಾರ ನಡೆಸುತ್ತೇವೆ. ನಮ್ಮನ್ನು ಯಾರೂ ಏನೂ ಮಾಡಲು ಸಾಧ್ಯವಿಲ್ಲ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಗುಡುಗಿದ್ದಾರೆ.

    ಸಂಡೂರು ಉಪಚುನಾವಣೆಯಲ್ಲಿ (Sanduru By Election) ಅನ್ನಪೂರ್ಣ ತುಕಾರಾಂ ಜಯಗಳಿಸಿದ ಹಿನ್ನೆಲೆಯಲ್ಲಿ ಇಂದು ಸಂಡೂರಿನಲ್ಲಿ ಕಾಂಗ್ರೆಸ್‌ (Congress) ಅಭಿನಂದನಾ ಸಮಾವೇಶವನ್ನು ಆಯೋಜಿಸಿತ್ತು. ಈ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ, ಜನರ ಆಶೀರ್ವಾದ ಇರುವವರೆಗೂ ನಮ್ಮನ್ನು ಬಗ್ಗಿಸಲು ಸಾಧ್ಯವಿಲ್ಲ, ಜಗ್ಗಿಸಲು ಸಾಧ್ಯವಿಲ್ಲ ಎಂದರು.

    ಶಿಗ್ಗಾವಿ, ಚನ್ನಪಟ್ಟಣದಲ್ಲಿ ತಮ್ಮ ಮಕ್ಕಳನ್ನು ಅಭ್ಯರ್ಥಿ ಮಾಡಿ ನೂರಾರು ಕೋಟಿ ಖರ್ಚು ಮಾಡಿದರು. ಅವರು ಗೆದ್ದ ಕ್ಷೇತ್ರದಲ್ಲಿ ನಮ್ಮನ್ನು ಗೆಲ್ಲಿಸಿದ್ರು. ಮೊದಲು ಜನರ ಮನಸ್ಸು ಗೆಲ್ಲಿ, ಅಪಪ್ರಚಾರ ಮಾಡುವುದನ್ನು ಬಿಡಿ. ಮಾನ ಮರ್ಯದೆ ಇದ್ದರೆ ಸರ್ಕಾರದ ಜೊತೆಗೆ ಸಹಕರಿಸಿ. ಟೀಕೆ ಮಾಡಲು ಸುಳ್ಳು ಆರೋಪ, ಅಪಪ್ರಚಾರ ಮಾಡಬೇಡಿ ಎಂದು ಬಿಜೆಪಿ, ಜೆಡಿಎಸ್‌ ನಾಯಕರ ವಿರುದ್ಧ ಕಿಡಿಕಾರಿದರು.

    ವಕ್ಫ್ ಆಸ್ತಿ, ಮೂಡಾ ಬಗ್ಗೆ ಅನಗತ್ಯ ಅಪ್ರಚಾರ ಮಾಡಿದರು. ವಾಲ್ಮೀಕಿ ಹಗರಣದಲ್ಲಿ ಮಂತ್ರಿ, ಮುಖ್ಯಮಂತ್ರಿ ಪಾತ್ರ ಇದೆ ಎಂದು ದೂರಿದರು. ಮಹಾರಾಷ್ಟ್ರ ಚುನಾವಣೆಯಲ್ಲಿ ಕರ್ನಾಟಕದ ಹಣ ಬಳಸಿದೆ ಎಂದು ಸುಳ್ಳು ಹೇಳಿದರು. 2028ರವರೆಗೂ ಅಧಿಕಾರದಲ್ಲಿ ಇರುತ್ತೇವೆ. ಯಾವುದೇ ಗ್ಯಾರಂಟಿಯನ್ನು ಅಲ್ಲಿಯವರೆಗೂ ನಿಲ್ಲಿಸಲ್ಲ. 2028ರಲ್ಲಿ ಮತ್ತೊಮ್ಮೆ ಅಧಿಕಾರಕ್ಕೆ ಬಂದು ಯೋಜನೆ ಮುಂದುವರೆಸುತ್ತೇವೆ. ಅಭಿವೃದ್ಧಿ ಕೆಲಸಕ್ಕೆ ದುಡ್ಡಿಲ್ಲ ಎನ್ನುವುದು ಸುಳ್ಳು ಎಂದು ಪ್ರತಿಪಕ್ಷಗಳಿಗೆ ಮಾತಿನಲ್ಲಿ ಚಾಟಿ ಬೀಸಿದರು. ಇದನ್ನೂ ಓದಿ: ತುಮಕೂರು| ಹೇಮಾವತಿ ಎಕ್ಸ್‌ಪ್ರೆಸ್ ಕೆನಾಲ್ ವಿರುದ್ಧ ಹೋರಾಟ – ಗೃಹ ಸಚಿವರ ಮನೆಗೆ ಮುತ್ತಿಗೆ

    ಅನ್ನಪೂರ್ಣಗೆ ನಿಮ್ಮ ಆಶೀರ್ವಾದ ಇರಲಿ ಎಂದು ಮನವಿ ಮಾಡಿದ್ದೆ. ಇಂದು ಸಂವಿಧಾನ ಉಳಿವಿಗೆ, ಪ್ರಜಾಪ್ರಭುತ್ವ ಉಳಿಯಲು ಕಾಂಗ್ರೆಸ್‌ನಿಂದ ಮಾತ್ರ ಸಾಧ್ಯ. ಬಿಜೆಪಿ ಬಡವರ ಪರವಾದ ಪಕ್ಷ ಅಲ್ಲ ಎಂದು ನಾನು ಮನವಿ ಮಾಡಿದ್ದೆ. ಧರ್ಮ, ಜಾತಿ ಇಲ್ಲದೆ 5 ಗ್ಯಾರಂಟಿ ಯೋಜನೆ ಜನರಿಗೆ ನೀಡಿದ್ದೇವೆ ಎಂದು ಹೇಳಿದರು.

     

  • ಸಿದ್ದರಾಮಯ್ಯ ಸುಳ್ಳುರಾಮಯ್ಯ ಎಂದು ಹೆಸರು ಬದಲಾಯಿಸಿಕೊಳ್ಳಲಿ – ಆರ್.ಅಶೋಕ್ ವಾಗ್ದಾಳಿ

    ಸಿದ್ದರಾಮಯ್ಯ ಸುಳ್ಳುರಾಮಯ್ಯ ಎಂದು ಹೆಸರು ಬದಲಾಯಿಸಿಕೊಳ್ಳಲಿ – ಆರ್.ಅಶೋಕ್ ವಾಗ್ದಾಳಿ

    ಬೆಂಗಳೂರು: ಸಿಎಂ ಸಿದ್ದರಾಮಯ್ಯ (CM Siddaramaiah) ಸುಳ್ಳುರಾಮಯ್ಯ ಎಂದು ಹೆಸರು ಬದಲಾಯಿಸಿಕೊಳ್ಳಲಿ ಎಂದು ವಿಪಕ್ಷ ನಾಯಕ ಆರ್.ಅಶೋಕ್ (R Ashok) ವಾಗ್ದಾಳಿ ನಡೆಸಿದ್ದಾರೆ.

    ಸುದ್ದಿಗೋಷ್ಠಿಯಲ್ಲಿ 40% ಕಮೀಷನ್ ವಿಚಾರವಾಗಿ ಮಾತನಾಡಿದ ಅವರು, ಪ್ರಧಾನಿಯವರಿಂದ ಸಿದ್ದರಾಮಯ್ಯ ಸಾಕ್ಷಿ ಕೇಳ್ತಾರೆ, ಅವರಿಗೆ ನಾಚಿಕೆ ಆಗಬೇಕು. ಸಿದ್ದರಾಮಯ್ಯ, ಡಿಕೆಶಿ, ಅಂಬಿಕಾಪತಿ ಈ ಸುಳ್ಳಿನ ಮಹಲ್ ಕಟ್ಟಿದ್ದರು ಅದು ಈಗ ಕುಸಿದು ಬಿದ್ದಿದೆ. ರಾಜ್ಯದ ಜನತೆಗೆ ಸುಳ್ಳು ಹೇಳಿ, ತಾವು ಸುಳ್ಳುರಾಮಯ್ಯ ಎಂದು ಖುದ್ದು ಸಿಎಂ ಸಾಬೀತು ಪಡಿಸಿದ್ದಾರೆ. ತಪ್ಪು ಮಾಡಿಲ್ಲ ಎಂದು ಸೈಟು ವಾಪಸ್ ಕೊಟ್ಟರು. ಈಗ ಅವರು ಮಾಡಿದ 40% ಕಮೀಷನ್ ಆರೋಪವೂ ಸುಳ್ಳಾಗಿದೆ. ಇನ್ಮುಂದೆ ಸಿದ್ದರಾಮಯ್ಯ ತಮ್ಮ ಹೆಸರನ್ನು ಸುಳ್ಳು ರಾಮಯ್ಯ ಎಂದು ಬದಲಾಯಿಸಿಕೊಳ್ಳಲಿ ಎಂದರು.ಇದನ್ನೂ ಓದಿ: ಹೆಚ್‌ಡಿಕೆ ಬಣ್ಣದ ಬಗ್ಗೆ ಜಮೀರ್ ಮಾತಾಡಿದ್ದು ಸರಿಯಲ್ಲ- ಪ್ರಿಯಾಂಕ್ ಖರ್ಗೆ

    ನಾನು ಇವತ್ತಿಗೆ ಪ್ರತಿಪಕ್ಷ ನಾಯಕನಾಗಿ ಒಂದು ವರ್ಷವಾಗಿದೆ. ಹಾಗೇ ಇದೇ ಹೊತ್ತಿನಲ್ಲಿ ನಮ್ಮ ಸರ್ಕಾರದ ಮೇಲಿನ 40% ಕಮೀಷನ್ ಆರೋಪ ಸುಳ್ಳು ಎನ್ನುವುದು ಸಾಬೀತಾಗಿದೆ. ಕಮೀಷನ್ ಆರೋಪ ಮಾಡಿರುವುದು ಕಾಂಗ್ರೆಸ್‌ನ ಟೂಲ್‌ಕಿಟ್‌ನ ಭಾಗವಾಗಿದೆ. ಇದುವರೆಗೆ 40% ಕಮೀಷನ್ ಆರೋಪಕ್ಕೆ ಕಾಂಗೆಸ್‌ನವರು ದಾಖಲೆ ಕೊಟ್ಟಿಲ್ಲ. ಆಧಾರರಹಿತ, ಸುಳ್ಳು ಆರೋಪ ಮಾಡಿದ್ದರು. ನಮ್ಮ ಮೇಲಿನ ಆರೋಪ ಸುಳ್ಳು ಎಂದು ಲೋಕಾಯುಕ್ತ ತನಿಖೆಯಿಂದಲೇ ಗೊತ್ತಾಗಿದೆ. ಈಗಿನ ಕಾಂಗ್ರೆಸ್ ಸರ್ಕಾರ 60% ಕಮೀಷನ್ ಸರ್ಕಾರ ಆಗಿದೆ ಎಂದು ಕಿಡಿಕಾರಿದ್ದಾರೆ.

    ವಾಲ್ಮೀಕಿ ಹಗರಣ ವಿಚಾರ:
    ವಾಲ್ಮೀಕಿ ಹಗರಣದಲ್ಲಿ ಸಾಕ್ಷಿ ಸಿಕ್ಕಿದೆ. ಇಡಿ ಇದನ್ನು ಅನುಮೋದನೆ ಮಾಡಿದೆ. ಬಳ್ಳಾರಿಯಲ್ಲಿ ಯಾರ್ಯಾರಿಗೆ ಹಣ ಹೋಗಿದೆ ಎಂದು ರಿಪೋರ್ಟ್ ಬಂದಿದೆ. ಸಿದ್ದರಾಮಯ್ಯ ತಮ್ಮ ಜೀವನ ತೆರೆದ ಪುಸ್ತಕ ಎಂದಿದ್ದಾರೆ. ತೆರೆದ ಪುಸ್ತಕ ನಾವು ನೋಡಿದರೆ ಕಪ್ಪು ಚುಕ್ಕೆ ಇಡುವುದಕ್ಕೆ ಜಾಗನೇ ಇಲ್ಲ. ಸಿದ್ದರಾಮಯ್ಯ ಅವರ ಕುಟುಂಬ ಲೂಟಿ ಮಾಡುತ್ತಿದೆ. ದಿನ ಒಬ್ಬೊಬ್ಬ ಮಂತ್ರಿ ದರೋಡೆಯ ಪುಸ್ತಕ ತೆರೆಯುತ್ತಿದ್ದಾರೆ. ರಾಜ್ಯದಲ್ಲಿ ಕನ್ನ ಹಾಕುವ ಮಂತ್ರಿಗಳು ಇದ್ದಾರೆ. ನನ್ನ ಮುಟ್ಟಿ ನೋಡಿ, ಕೇಸ್ ಹಾಕಿ ನೋಡಿ, ಸಿಎಂ ಪದವಿಯಿಂದ ಇಳಿಯುವುದಿಲ್ಲ ಎಂದು ಅವರ ಹೈಕಮಾಂಡ್‌ಗೆ ಹೇಳುತ್ತಿದ್ದಾರೆ. ತಪ್ಪು ಮಾಡಿಲ್ಲ ಅಂದ ಮೇಲೆ ಯಾಕೆ ಹೀಗೆ ಹೇಳುತ್ತೀರಾ? 14 ಸೈಟ್‌ಗಳನ್ನು ಯಾಕೆ ವಾಪಸ್ಸು ಕೊಟ್ಟಿದೀರಿ? ಏಕವಚನದಲ್ಲಿ ಮಾತನಾಡುತ್ತಾರೆ, ಕೇಳಿದರೆ ಹಳ್ಳಿಯಿಂದ ಬಂದವನು ಎನ್ನುತ್ತಾರೆ. ನಾನು ಸೈಟ್ ವಾಪಸ್ಸು ಮಾಡಿಲ್ಲ. ನನ್ನ ಹೆಂಡ್ತಿ ನನಗೆ ಗೊತ್ತಿಲ್ಲದೇ ಕೊಟ್ಟಿದ್ದಾರೆ ಎಂದರು. ಅವರು ಅಹಿಂದ ನಾಯಕರಾಗಿಲ್ಲ ಈಗ ಅವರು ಅಲ್ಪಸಂಖ್ಯಾತರ ಚಾಂಪಿಯನ್ ಆಗಿದ್ದಾರೆ. ಮುಸ್ಲಿಮರ ಹೀರೋ ಆಗಲು ಹೊರಟಿದ್ದಾರೆ ಎಂದು ಹೇಳಿದರು.

    ಬೆಳಗಾವಿ ಅಧಿವೇಶನ ಕರೆಯಲು ಸರ್ಕಾರ ಹೆದರುತ್ತಿದ್ದಾರೆ. ಸಾಕಷ್ಟು ಭ್ರಷ್ಟಾಚಾರ ಮಾಡಿ ಈಗ ಅಧಿವೇಶನ ಕರೆಯಲೂ ಹೆದರುತ್ತಿದ್ದಾರೆ. ಅದಕ್ಕೆ ಅಧಿವೇಶನದ ದಿನಾಂಕ ಸಹ ಪ್ರಕಟ ಮಾಡಲು ಹಿಂಜರಿಯುತ್ತಿದ್ದಾರೆ. ಅಧಿವೇಶನದಲ್ಲಿ ಸರ್ಕಾರದ ಎಲ್ಲ ಲೋಪಗಳ ಬಗ್ಗೆ ಚರ್ಚೆ, ಹೋರಾಟ ಮಾಡುತ್ತೇವೆ. ಈ ಸರ್ಕಾರ ಕಾಣೆಯಾಗಿದೆ, ಕೇವಲ ಗುರುವಾರ ಸಂಪುಟ ಸಭೆಯಲ್ಲಿ ಎಲ್ಲರೂ ಕಾಣಿಸಿಕೊಳುತ್ತಾರೆ. ಇದೊಂದು ಗುರುವಾರ ವೀರರ ಸರ್ಕಾರ. ಗುರುವಾರ ಬಳಿಕ ಎಲ್ಲರೂ ನಾಪತ್ತೆಯಾಗಿ ಹೋಗುತ್ತಾರೆ. ಇದು ಗುರುವಾರದ ಸರ್ಕಾರ. ಕ್ಯಾಬಿನೆಟ್ ದಿನ ಮಾತ್ರ ಈ ಸರ್ಕಾರ ಎದ್ದಿರುತ್ತದೆ. ಬಾಕಿ ದಿನ ಮಲಗಿರುತ್ತದೆ. ಅಬಕಾರಿ ಸಚಿವ ಒಂದೇ ದಿನ 18 ಕೋಟಿ ರೂ. ಲೂಟಿ ಹೊಡೆದು ಮಹಾರಾಷ್ಟ್ರಕ್ಕೆ ಕಳಿಸಿದ್ದಾರೆ. ಕಾಂಗ್ರೆಸ್ ಸಚಿವರು ಸಂಪುಟ ಸಭೆ ಮಾಡುವುದು ಸರ್ಕಾರದ ಬೊಕ್ಕಸಕ್ಕೆ ಹಣ ತರುವುದು ಹೇಗೆ ಎಂಬ ಕಾರಣಕ್ಕಲ್ಲ. ಹೇಗೆ ಲೂಟಿ ಮಾಡಬೇಕು? ಎಷ್ಟು ಕಮಿಷನ್ ತರಬಹುದು? ಎಂದು ಸಭೆ ಮಾಡುತ್ತಾರೆ ಎಂದು ಆರೋಪಿಸಿದರು.

    ಬಿಪಿಎಲ್ ಕಾರ್ಡ್ ಎಪಿಎಲ್ ಆಗಿ ಬದಲಾವಣೆ ವಿಚಾರ: 
    ಬಿಪಿಎಲ್ ಕಾರ್ಡುಗಳನ್ನು (BPL Card) ಸರ್ಕಾರ ರದ್ದು ಮಾಡುತ್ತಿದೆ. ಎಪಿಎಲ್‌ಗೆ ಈಗಾಗಲೇ ಒಂದು ಲಕ್ಷ ಕಾರ್ಡ್‌ಗಳನ್ನು ಪರಿವರ್ತನೆ ಮಾಡಿದ್ದಾರೆ. ಇದು ಸರ್ಕಾರದ ಆರನೇ ಗ್ಯಾರಂಟಿಯಾಗಿದೆ. ಗ್ಯಾರಂಟಿಗಳಿಗೆ ಹಣ ಹೊಂದಿಸಲಾಗದೇ ಈ ಕೆಲಸ ಮಾಡುತ್ತಿದ್ದಾರೆ. ಉಚಿತ ಗ್ಯಾರಂಟಿಗಳಲ್ಲಿ ಪ್ರತೀ ವರ್ಷ 10% ಕಡಿತ ಮಾಡಲು ಅಧಿಕಾರಿಗಳಿಗೆ ಸರ್ಕಾರ ಟಾರ್ಗೆಟ್ ಕೊಟ್ಟಿದೆ. ಉಚಿತ ಗ್ಯಾರಂಟಿ ಕೊಡಲಾಗದೇ ಸರ್ಕಾರ ಆರ್ಥಿಕ ಹೊರೆಯಲ್ಲಿದೆ. ಹಣ ಹೊಂದಿಸಲು ಸರ್ಕಾರಕ್ಕೆ ಆಗುತ್ತಿಲ್ಲ. ಅದಕ್ಕಾಗಿ ಬಿಪಿಎಲ್ ಕಾರ್ಡ್‌ಗೆ ಕತ್ತರಿ ಹಾಕುವ ಮೂಲಕ ಕಾರ್ಡ್ಗಳನ್ನು ರದ್ದು ಮಾಡಿ, ಎಪಿಎಲ್‌ಗೆ (APL Card) ಪರಿವರ್ತನೆ ಮಾಡುತ್ತಿದ್ದಾರೆ ಎಂದರು.ಇದನ್ನೂ ಓದಿ: ವಕ್ಫ್ ಪ್ರಕರಣದಲ್ಲಿ ಶಾಂತಿ ಕದಡಲು ಬಿಡಲ್ಲ: ಪರಮೇಶ್ವರ್ ಎಚ್ಚರಿಕೆ

  • ಸಿದ್ದರಾಮಯ್ಯ ಪುಸ್ತಕ ತೆರೆದ್ರೆ ಬರೀ ಕಪ್ಪು ಕಾಣಿಸ್ತದೆ, ಅಧಿಕಾರಿಗಳು ಕಾಂಗ್ರೆಸ್ ಪರ ಕೆಲಸ: ಅಶೋಕ್

    ಸಿದ್ದರಾಮಯ್ಯ ಪುಸ್ತಕ ತೆರೆದ್ರೆ ಬರೀ ಕಪ್ಪು ಕಾಣಿಸ್ತದೆ, ಅಧಿಕಾರಿಗಳು ಕಾಂಗ್ರೆಸ್ ಪರ ಕೆಲಸ: ಅಶೋಕ್

    –  ಸರ್ಕಾರದಿಂದ ಸಾವಿನ ಭಾಗ್ಯ ಬಂದಿದೆ

    ಬಳ್ಳಾರಿ: ಕಾಂಗ್ರೆಸ್ ಸರ್ಕಾರ (Congress Government) ಹಗರಣಗಳ ಮೇಲೆ ಹಗರಣ (Scam) ಮಾಡುತ್ತಿದೆ. ಸಿದ್ದರಾಮಯ್ಯ (Siddaramaiah) ತೆರೆದ ಪುಸ್ತಕ ಎನ್ನುತ್ತಾರೆ. ಆದರೆ ಅವರ ಪುಸ್ತಕ ತೆರೆದರೆ ಬರೀ ಕಪ್ಪು ಕಾಣಿಸುತ್ತದೆ ಎಂದು ವಿರೋಧ ಪಕ್ಷದ ನಾಯಕ ಆರ್ ಅಶೋಕ್ (R Ashok) ಸಿಎಂ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

    ಸಂಡೂರು (Sanduru) ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಮೂಡಾ ಹಗರಣ (MUDA Scam) ನಡೆದಿದೆ. ನನಗೆ 14 ಸೈಟ್ ಯಾವ ಲೆಕ್ಕ ಅಂತಾರೆ. ಸಿದ್ದರಾಮಯ್ಯ ಲೆಕ್ಕದಲ್ಲಿ 3-4 ಸಾವಿರ ಕೋಟಿ ಯಾವ ಲೆಕ್ಕ ಅಂತಾ ಹೇಳೋದನ್ನ ಜನ ಅರ್ಥ ಮಾಡ್ಕೋಬೇಕು. ವಾಲ್ಮೀಕಿ ಅಭಿವೃದ್ಧಿ ನಿಗಮದ 187 ಕೋಟಿ ರೂ. ಹಗರಣ ಆಗಿದೆ. ‌ವಾಲ್ಮೀಕಿ ಜನಾಂಗಕ್ಕೆ ಬಳಕೆಯಾಗಬೇಕಿದ್ದ ಹಣವನ್ನೂ ನುಂಗಿ ನೀರು ಕುಡಿದಿದ್ದಾರೆ. ಅದ್ಯಾವ ಮುಖ ಇಟ್ಕೊಂಡು ಇಲ್ಲಿ ಪ್ರಚಾರಕ್ಕೆ ಬರ್ತಾರೆ ಗೊತ್ತಿಲ್ಲ. ನಾನು ಅಧಿವೇಶನದಲ್ಲಿ ಪ್ರಶ್ನೆ ಕೇಳಿದಾಗ ಬರೀ 87 ಕೋಟಿ ರೂ. ಮಾತ್ರ ಎಂದು ಹೇಳಿದರು ಎಂದು ಕಿಡಿಕಾರಿದರು.

     

    ಈ ಸರ್ಕಾರ ಬಂದ ಮೇಲೆ ಹಗರಣಗಳ ಜೊತೆಗೆ ಅಧಿಕಾರಿಗಳ ಸರಣಿ ಆತ್ಮಹತ್ಯೆ ನಡೆತಿದೆ. ವಾಲ್ಮೀಕಿ ನಿಗಮದ ಚಂದ್ರಶೇಖರ್ ಆತ್ಮಹತ್ಯೆ ಮಾಡಿಕೊಂಡ್ರು. ಹೆಬ್ಬಾಳ್ಕರ್ ಪಿಎ 2 ಲಕ್ಷ ರೂ. ಪಡೆದು ವರ್ಗಾವಣೆ ಮಾಡದೇ ಇದ್ದಿದ್ರಿಂದ ಅವರೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಸರ್ಕಾರ ಬಂದ್ಮೇಲೆ ಸಾವಿನ ಭಾಗ್ಯ ಕೊಟ್ಟಿದೆ. ಲಂಚ ಕೊಡಿ ಇಲ್ಲ ನೇಣು ಹಾಕಿಕೊಳ್ಳಿ ಎಂದು ಹೇಳ್ತಿದೆ. ಅಬಕಾರಿ ಮಂತ್ರಿ ಒಂದು ವಾರದಲ್ಲಿ 18 ಕೋಟಿ ರೂ. ಕಲೆಕ್ಟ್ ಮಾಡಿದ್ದಾರೆ. ವರ್ಷಕ್ಕೆ 500 ಕೋಟಿ ರೂ. ಕಲೆಕ್ಟ್ ಮಾಡ್ತಿದ್ದಾರೆ ಎಂದು ದೂರಿದರು. ಇದನ್ನೂ ಓದಿ: ದರ್ಶನ್ ಪರ ವಕೀಲರಿಂದ ಹೈಕೋರ್ಟ್‌ಗೆ ಮೆಡಿಕಲ್ ರಿಪೋರ್ಟ್ ಸಲ್ಲಿಕೆ – ವರದಿಯಲ್ಲಿ ಏನಿದೆ?

    ಸ್ವತಃ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಲೋಕಾಯುಕ್ತ ಆಫೀಸ್ ಮುಂದೆ ಕುಂತಿದ್ದಾರೆ. ವಿಚಾರಣೆ ಎದುರಿಸುತ್ತಿದ್ದರೂ ಪ್ರಚಾರಕ್ಕೆ ಹೋಗುವ ಸಮಯವನ್ನು ಟಿಪಿಯಲ್ಲಿ ಹಾಕಿದ್ದಾರೆ. ಟಿಪಿಯಲ್ಲಿ ಹಾಕಿ ವಿಚಾರಣೆ ಹೋಗುತ್ತಾರೆ ಎಂದರೆ ಏನದು ಎಂದು ಆಕ್ರೋಶ ವ್ಯಕ್ತಪಡಿಸಿದರು.

     

    ಉಪಚುನಾವಣೆಯಲ್ಲಿ ಅಧಿಕಾರಿಗಳು ಕಾಂಗ್ರೆಸ್ ಪರವಾಗಿ ಕೆಲಸ ಮಾಡ್ತಿರೋದು ಗೊತ್ತಾಗುತ್ತಿದೆ. ಅಂಗನವಾಡಿ, ಆಶಾ ಕಾರ್ಯಕರ್ತೆಯರು ಕಾಂಗ್ರೆಸ್ ಪರವಾಗಿ ಪ್ರಚಾರ ಮಾಡ್ತಾರೆ. ಕಾಂಗ್ರೆಸ್ ಅಭ್ಯರ್ಥಿ ಪ್ರಚಾರದ ವೇಳೆಯೂ ಅದನ್ನ ಒಪ್ಪಿಕೊಂಡಿದ್ದಾರೆ. ಪೊಲೀಸ್ ಕಾನ್ಸ್‌ಟೇಬಲ್ ಒಬ್ಬ ಮೋದಿ, ಮಾಧ್ಯಮದವ್ರನ್ನ ಅವಮಾನ ಮಾಡೋ ರೀತಿ ಸ್ಟೇಟಸ್ ಹಾಕಿದ್ದಾನೆ. ಕಾರ್ಟೂನ್ ಒಂದನ್ನ ಸ್ಟೇಟಸ್ ಹಾಕಿದ್ದಾನೆ. ಸ್ಟೇಟಸ್ ಹಾಕಿ ಇಂಡೈರೆಕ್ಟ್ ಆಗಿ ಪ್ರಚಾರ ಮಾಡ್ತಿದ್ದಾನೆ. ಇದು ಅಧಿಕಾರಿಗಳಿಗೆ ಕಾಣಿಸೋದಿಲ್ವಾ? ಎಸ್‌ಪಿ, ಡಿಸಿ ಏನು ಮಾಡುತ್ತಿದ್ದಾರೆ ಎಂದು ಪ್ರಶ್ನಿಸಿದರು.

    ಇನ್ನೊಬ್ಬ ಇನ್ಸ್ಪೆಕ್ಟರ್ 12 ವರ್ಷಗಳಿಂದ ಇಲ್ಲೇ ಇದ್ದಾರೆ. ಸರ್ಕಾರಿ ಯಂತ್ರದ ನೇರ ದುರುಪಯೋಗ ಕಾಂಗ್ರೆಸ್ ಮಾಡಿಕೊಳ್ಳುತ್ತಿದೆ. ಹೀಗಾಗಿ ಇಲ್ಲಿ ನಿಷ್ಪಕ್ಷಪಾತ ಚುನಾವಣೆ ಆಗುತ್ತೆ ಎನ್ನುವ ವಿಶ್ವಾಸ ನನಗಿಲ್ಲ. ಹೀಗಾಗಿ ನಾನು ಚುನಾವಣಾ ಆಯೋಗಕ್ಕೆ 8ನೇ ತಾರೀಖು ಮನವಿ ಕೊಡ್ತೇನೆ. ಕೆಲಸ ಮಾಡುವ ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ಕೊಡಲಾಗ್ತಿದೆ. ನಿನ್ನೆ ಎಫ್‌ಐಆರ್‌ ದಾಖಲು ಮಾಡಿದ್ದಾರೆ. ಹೀಗಾಗಿ ಇಲ್ಲಿ ನಿಷ್ಪಕ್ಷಪಾತ ಚುನಾವಣೆ ನಡೆಯುತ್ತಿದೆ ಎನ್ನುವುದು ಅನುಮಾನ. ಕೂಡಲೇ ಆ ರೀತಿಯ ಅಧಿಕಾರಿಗಳನ್ನ ಎತ್ತಂಗಡಿ ಮಾಡಬೇಕು ಎಂದು ಒತ್ತಾಯಿಸಿದರು.

     

  • ವಕ್ಫ್‌ ಮಂಡಳಿಯ ಎಲ್ಲಾ ಬಗೆಯ ಜಮೀನು ನೋಂದಣಿ ಸ್ಥಗಿತಗೊಳಿಸಲು ಸೂಚಿಸಿ: ಜೆಪಿಸಿಗೆ ಅಶೋಕ್‌ ಮನವಿ

    ವಕ್ಫ್‌ ಮಂಡಳಿಯ ಎಲ್ಲಾ ಬಗೆಯ ಜಮೀನು ನೋಂದಣಿ ಸ್ಥಗಿತಗೊಳಿಸಲು ಸೂಚಿಸಿ: ಜೆಪಿಸಿಗೆ ಅಶೋಕ್‌ ಮನವಿ

    – ಕೇಂದ್ರ ಸಚಿವರಿಗೆ ಹಾಗೂ ಜಂಟಿ ಸಂಸದೀಯ ಸಮಿತಿಗೆ ಪತ್ರ

    ಬೆಂಗಳೂರು: ಕರ್ನಾಟಕದ ವಕ್ಫ್‌ ಮಂಡಳಿಗೆ (Karnataka Waqf Board) ಸಂಬಂಧಿಸಿದ ಎಲ್ಲಾ ಬಗೆಯ ಜಮೀನು ನೋಂದಣಿಯನ್ನು ಸ್ಥಗಿತಗೊಳಿಸಲು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸೂಚಿಸಬೇಕೆಂದು ಕೋರಿ ಪ್ರತಿಪಕ್ಷ ನಾಯಕ ಆರ್‌.ಅಶೋಕ್‌ (R Ashok) ಅವರು ಕೇಂದ್ರ ಸಚಿವರಿಗೆ ಹಾಗೂ ವಕ್ಫ್‌ ಜಂಟಿ ಸಮಿತಿಗೆ ಪತ್ರ ಬರೆದಿದ್ದಾರೆ.

    ರೈತರ ಜಮೀನು (Farmers Land) ಹಾಗೂ ಹಿಂದೂ ಸಂಸ್ಥೆಗಳಿಗೆ ಸಂಬಂಧಿಸಿದ ಜಮೀನುಗಳನ್ನು ವಕ್ಫ್‌ ಮಂಡಳಿ ಕಬಳಿಸುತ್ತಿರುವ ಕುರಿತು ಆತಂಕ ವ್ಯಕ್ತಪಡಿಸಿರುವ ಅವರು, ಈ ಕುರಿತು ಕೇಂದ್ರ ಗೃಹ ಸಚಿವ ಅಮಿತ್‌ ಶಾ (Amit Shah), ಕೇಂದ್ರ ಆರೋಗ್ಯ ಸಚಿವ ಜೆ.ಪಿ.ನಡ್ಡಾ (JP Nadda) ಹಾಗೂ ವಕ್ಫ್‌ ತಿದ್ದುಪಡಿ ಮಸೂದೆಯ ಜಂಟಿ ಸಂಸದೀಯ ಸಮಿತಿಯ ಅಧ್ಯಕ್ಷ ಜಗದಾಂಬಿಕಾ ಪಾಲ್‌ (Jagdambika Pal) ಅವರಿಗೆ ಪತ್ರ ಬರೆದಿದ್ದಾರೆ.

    ಕೇಂದ್ರ ಸರ್ಕಾರದಲ್ಲಿ ವಕ್ಫ್‌ ತಿದ್ದುಪಡಿ ಮಸೂದೆ ತರಲು ಜಂಟಿ ಸಂಸದೀಯ ಸಮಿತಿ ರಚಿಸಿದ್ದು, ವಕ್ಫ್‌ ಆಸ್ತಿಗಳ ನಿರ್ವಹಣೆಯಲ್ಲಿ ದಕ್ಷತೆ ಹಾಗೂ ಪಾರದರ್ಶಕತೆ ತರಲು ಈ ಸಮಿತಿ ಶ್ರಮಿಸುತ್ತಿದೆ. ಆದರೆ ಕರ್ನಾಟಕದಲ್ಲಿ ರಾಜ್ಯ ಸರ್ಕಾರ ಮತ್ತು ವಕ್ಫ್‌ ಮಂಡಳಿಯು ಕಂದಾಯ ದಾಖಲೆಗಳನ್ನು ತಿದ್ದುವ ಹಾಗೂ ರೈತರ ಜಮೀನುಗಳ ಮಾಲೀಕತ್ವ ವರ್ಗಾಯಿಸಿಕೊಳ್ಳುವ ಪ್ರಯತ್ನ ಆರಂಭವಾಗಿದೆ. ಈ ರೀತಿ ತರಾತುರಿಯಲ್ಲಿ ಜಮೀನುಗಳನ್ನು ವಕ್ಫ್‌ ಮಂಡಳಿ ನೋಂದಾಯಿಸಿಕೊಳ್ಳುತ್ತಿರುವ ಪರಿಣಾಮ ಸಾವಿರಾರು ಬಡವರು ಹಾಗೂ ರೈತರು ವಂಶಪಾರಂಪರ್ಯವಾಗಿ ಬಂದ ಭೂಮಿಯನ್ನು ಕಳೆದುಕೊಳ್ಳುತ್ತಿದ್ದಾರೆ ಎಂದು ಆರ್‌.ಅಶೋಕ್‌ ಪತ್ರದಲ್ಲಿ ವಿವರಿಸಿದ್ದಾರೆ. ಇದನ್ನೂ ಓದಿ: ಜಮೀರ್ ಇಸ್ಲಾಂ ಧರ್ಮ, ವಕ್ಫ್ ಬೋರ್ಡ್‌ಗೆ ನ್ಯಾಯ ಒದಗಿಸೋ ಪ್ರಯತ್ನದಲ್ಲಿದ್ದಾರೆ: ಮಾದಾರ ಚನ್ನಯ್ಯ ಶ್ರೀ

     

    ವಿಜಯಪುರ ಜಿಲ್ಲೆಯಲ್ಲಿ 15,000 ಎಕರೆ ಜಮೀನನ್ನು ವಶಪಡಿಸಿಕೊಳ್ಳಲು ನೋಟಿಸ್‌ ನೀಡಲಾಗಿದೆ ಎಂದು ನೂರಾರು ರೈತರು ಹೇಳಿದ ಬಳಿಕ ಈ ಸಂಗತಿ ಬೆಳಕಿಗೆ ಬಂದಿದೆ. ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ತಲಾ 10,000 ಎಕರೆ ಜಮೀನನ್ನು ವಕ್ಫ್‌ ನೋಂದಣಿ ಮಾಡಿಕೊಳ್ಳುವ ಪ್ರಯತ್ನ ಮಾಡಿದೆ ಎಂದು ಹೇಳಲಾಗಿದೆ. ಇಷ್ಟೇ ಅಲ್ಲದೆ ವಕ್ಫ್‌ ಮಂಡಳಿಯು ದೇವಸ್ಥಾನ, ಮಠ ಹಾಗೂ ಇತರೆ ಹಿಂದೂ ಧಾರ್ಮಿಕ ಸಂಸ್ಥೆಗಳ ಜಮೀನುಗಳನ್ನು ಕೂಡ ತನ್ನದು ಎಂದು ಹೇಳಿಕೊಂಡಿದೆ. ಹಿಂದೂ ಸ್ಮಶಾನ ಕೂಡ ತನ್ನದು ಎಂದು ವಕ್ಫ್‌ ಉಲ್ಲೇಖಿಸಿರುವುದು ಇನ್ನಷ್ಟು ಆಘಾತದ ಸಂಗತಿ. 13ನೇ ಶತಮಾನದಷ್ಟು ಇತಿಹಾಸ ಹೊಂದಿರುವ ವಿರಕ್ತ ಮಠಕ್ಕೆ ಸೇರಿದ ಸಿಂಧಗಿಯ 1.28 ಎಕರೆ ಜಮೀನು, ವಿಜಯಪುರದ ಐತಿಹಾಸಿಕ ಸೋಮೇಶ್ವರ ದೇವಾಲಯ, ಕಲಬುರ್ಗಿಯ ಬೀರದೇವರ ಗುಡಿ ಸೇರಿದಂತೆ ಅನೇಕ ಜನಪ್ರಿಯ ಸ್ಥಳಗಳನ್ನು ಕೂಡ ವಕ್ಫ್‌ ತನ್ನದೆಂದು ಘೋಷಿಸಿಕೊಂಡಿದೆ ಎಂದು ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

    ಇದು ಜನರಲ್ಲಿ ಆತಂಕ ಉಂಟುಮಾಡಿದ್ದು, ಹಾವೇರಿಯಲ್ಲಿ ಹಿಂಸಾಚಾರ, ಗಲಭೆ ಕೂಡ ನಡೆದಿದೆ. ಈ ಎಲ್ಲ ಘಟನೆಗಳ ಹಿನ್ನೆಲೆಯಲ್ಲಿ, ಜಂಟಿ ಸಮಿತಿಯು ಕೂಡಲೇ ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿಯ ಜೊತೆ ಮಾತನಾಡಬೇಕು ಹಾಗೂ ವಕ್ಫ್‌ಗೆ ಸಂಬಂಧಿಸಿದ ಜಮೀನು ನೋಂದಣಿ ಸ್ಥಗಿತಗೊಳಿಸಲು ಸೂಚಿಸಬೇಕೆಂದು ಆರ್‌.ಅಶೋಕ್‌ ಮನವಿ ಮಾಡಿದ್ದಾರೆ.