Tag: ಅಶ್ಲೀಲ ಚಿತ್ರ

  • ಪತ್ನಿಯೊಂದಿಗೆ ಜಗಳ – ಬೀದಿಗಳಲ್ಲಿ ಆಕೆಯ ನಂಬರ್‌ನೊಂದಿಗೆ ಅಶ್ಲೀಲ ಪೋಸ್ಟರ್ ಹಚ್ಚಿದ ಆಸಾಮಿ

    ಪತ್ನಿಯೊಂದಿಗೆ ಜಗಳ – ಬೀದಿಗಳಲ್ಲಿ ಆಕೆಯ ನಂಬರ್‌ನೊಂದಿಗೆ ಅಶ್ಲೀಲ ಪೋಸ್ಟರ್ ಹಚ್ಚಿದ ಆಸಾಮಿ

    ಲಕ್ನೋ: ಪತ್ನಿಯೊಂದಿಗೆ (Wife) ಜಗಳವಾಡಿ ಕೋಪಗೊಂಡಿದ್ದ ವ್ಯಕ್ತಿ (Man) ಆಕೆಯ ಮೇಲೆ ಸೇಡು ತೀರಿಸಿಕೊಳ್ಳಲು ಅಶ್ಲೀಲ ಫೋಟೋದೊಂದಿಗೆ (Obscene Phot0) ಆಕೆಯ ನಂಬರ್ ಅನ್ನು ಬರೆದು ಬೀದಿಗಳಲ್ಲಿ ಪೋಸ್ಟರ್ (Poster) ಹಚ್ಚಿರುವ ವಿಚಿತ್ರ ಘಟನೆ ಉತ್ತರ ಪ್ರದೇಶದಲ್ಲಿ (Uttar Pradesh) ನಡೆದಿದೆ.

    ಉತ್ತರ ಪ್ರದೇಶದ ಆಗ್ರಾದ (Agra) ವ್ಯಕ್ತಿ ತನ್ನದೇ ಪತ್ನಿಯ ಅಶ್ಲೀಲ ಫೋಟೋ ಇರುವ ಪೋಸ್ಟರ್‌ಗಳನ್ನು ಬೀದಿಗಳಲ್ಲಿ ಹಚ್ಚಿರುವ ವೀಡಿಯೋ ಸಿಸಿಟಿವಿಗಳಲ್ಲಿ ಸೆರೆಯಾಗಿದೆ. ಕಳೆದ 6 ವರ್ಷಗಳಿಂದ ಪತಿ ಹಾಗೂ ಪತ್ನಿ ಜಗಳವಾಡುತ್ತಿದ್ದು, ವ್ಯಕ್ತಿ ಆಕೆಯ ಮೇಲೆ ಸೇಡು ತೀರಿಸಿಕೊಳ್ಳಲು ಇಂತಹ ಕೃತ್ಯ ಮಾಡಿದ್ದಾನೆ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ರೂಮಿಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಪರಾರಿ!

    ಘಟನೆ ಬಗ್ಗೆ ಮಹಿಳೆ ತನ್ನ ಪತಿಯ ವಿರುದ್ಧ ಕಮಲನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ. ಮಾತ್ರವಲ್ಲದೇ ತಾನು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆಯನ್ನು ಹಾಕಿದ್ದಾಳೆ. ಇದನ್ನೂ ಓದಿ: ಯುವತಿಯನ್ನು ಕೊಲೆಗೈದು ಮ್ಯಾನ್‍ಹೋಲ್‍ಗೆ ಬಿಸಾಕಿದ ಅರ್ಚಕ!

  • ನಾನು ಅಶ್ಲೀಲ ಚಿತ್ರ ತಯಾರಿಕೆಯಲ್ಲಿ ತೊಡಗಿಕೊಂಡಿಲ್ಲ: ರಾಜ್ ಕುಂದ್ರಾ

    ನಾನು ಅಶ್ಲೀಲ ಚಿತ್ರ ತಯಾರಿಕೆಯಲ್ಲಿ ತೊಡಗಿಕೊಂಡಿಲ್ಲ: ರಾಜ್ ಕುಂದ್ರಾ

    – ಕಾಣದ ಕೈಗಳ  ಪಿತೂರಿಗೆ ನಾನು ಬಲಿಯಾಗಿದ್ದೇನೆ
    – ನನ್ನ ಮೌನವನ್ನು ದೌರ್ಬಲ್ಯ ಎಂದು ಪರಿಗಣಿಸಲಾಗಿದೆ

    ಮುಂಬೈ: ನಾನೆಂದೂ ಅಶ್ಲೀಲ ಚಿತ್ರ ತಯಾರಿಕೆಯಲ್ಲಿ ತೊಡಗಿಕೊಂಡಿಲ್ಲ. ನನ್ನ ಕುರಿತು ಆಧಾರವಿಲ್ಲದ ಅನೇಕ ಮಾಹಿತಿ, ಲೇಖನಗಳು ಹರಿದಾಡುತ್ತಿವೆ. ನನ್ನ ಮೌನವನ್ನು ದೌರ್ಬಲ್ಯ ಎಂದು ಪರಿಗಣಿಸಲಾಗಿದೆ ಎಂದು ಉದ್ಯಮಿ ಹಾಗೂ ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ಹೇಳಿದ್ದಾರೆ.

    ಮಾಧ್ಯಮವೊಂದಕ್ಕೆ ಹೇಳಿಕೆ ನೀಡಿರುವ ರಾಜ್ ಕುಂದ್ರಾ ಅವರು, ಪ್ರಕರಣ ಈಗ ವಿಚಾರಣೆಯ ಹಂತದಲ್ಲಿದೆ. ಹೀಗಾಗಿ ನಾನು ಸ್ಪಷ್ಟನೆಗಳನ್ನು ನೀಡಲಾಗುವುದಿಲ್ಲ. ನ್ಯಾಯಾಂಗ ವ್ಯವಸ್ಥೆಯ ಮೇಲೆ ನನಗೆ ಸಂಪೂರ್ಣ ನಂಬಿಕೆ ಇದೆ. ಅದರಲ್ಲಿ ಸತ್ಯ ಗೆಲ್ಲುತ್ತದೆ. ನಾನು ವಿಚಾರಣೆ ಎದುರಿಸಲು ಸಿದ್ಧನಿದ್ದೇನೆ ಎಂದು ತಮ್ಮ ವಿರುದ್ಧದ ಆರೋಪವನ್ನು ತಳ್ಳಿಹಾಕಿದ್ದಾರೆ. ಇದನ್ನೂ ಓದಿ: ರಿಷಭ್ ಪಂತ್ ಈಗ ಉತ್ತರಾಖಂಡ್ ಬ್ರಾಂಡ್ ಅಂಬಾಸಿಡರ್

    ನಾನು ಅಶ್ಲೀಲ ಸಿನಿಮಾ ಮಾಡಿಲ್ಲ. ನಾಚಿಕೆಯಿಂದ ಮುಖ ಮುಚ್ಕೊಂಡು ಓಡಾಡುವುದಿಲ್ಲ. ಕಾನೂನಿನ ರೀತಿಯಲ್ಲಿ ವಿಚಾರಣೆ ಎದುರಿಸುತ್ತೇನೆ. ನನ್ನ ವಿರುದ್ಧದ ಇಡೀ ಪ್ರಕರಣ ದೊಡ್ಡ ಪಿತೂರಿಯಾಗಿದ್ದು, ಕಾಣದ ಕೈಗಳ ಆಟವಾಡುತ್ತಿವೆ. ಪಿತೂರಿಗೆ ನಾನು ಬಲಿಯಾಗಿದ್ದೇನೆ ಎಂದು ಹೇಳಿದ್ದಾರೆ. ಇದನ್ನೂ ಓದಿ:  ಮತ್ತೊಮ್ಮೆ ಒಟ್ಟಿಗೆ ಕಾಣಿಸಿಕೊಂಡ ರಶ್ಮಿಕಾ, ವಿಜಯ್ ದೇವರಕೊಂಡ

    ಈಗಾಗಲೇ ಮಾಧ್ಯಮಗಳಿಂದ ತಪ್ಪಿತಸ್ಥನೆಂದು ಘೋಷಿಸಲ್ಪಟ್ಟಿದ್ದೇನೆ. ವಿವಿಧ ಹಂತಗಳಲ್ಲಿ ಮಾನವ ಮತ್ತು ಸಾಂವಿಧಾನಿಕ ಹಕ್ಕುಗಳನ್ನು ಉಲ್ಲಂಘಿಸಿ ನಿರಂತರವಾಗಿ ನನ್ನ ವಿರುದ್ಧ ಸುದ್ದಿ ಮಾಡುವ ಮೂಲಕ ಬಹಳಷ್ಟು ನೋವು ನೀಡಿದ್ದಾರೆ. ಟ್ರೋಲ್‍ಗಳಿಂದ, ನೆಗೆಟಿವ್ ಮಾತುಗಳಿಂದ, ಸಾರ್ವಜನಿಕ ಅಭಿಪ್ರಾಯದಿಂದ ನಮಗೆ ತೊಂದರೆ ಆಗಿದೆ. ನಾನು ಮುಖ ಮುಚ್ಚಿಕೊಂಡು ಓಡಾಡುವುದಿಲ್ಲ. ನನ್ನ ಖಾಸಗಿತನಕ್ಕೆ ಬೆಲೆ ನೀಡಿ ಎಂದು ಬಯಸುತ್ತೇನೆ. ನನ್ನ ಕುಟುಂಬವೇ ನನಗೆ ಮುಖ್ಯ. ಈ ಸಂದರ್ಭದಲ್ಲಿ ಅದಕ್ಕಿಂತ ಬೇರೆ ಏನೂ ನನಗೆ ಮುಖ್ಯವಲ್ಲ. ನಾನು ವಿಚಾರಣೆಯನ್ನು ಎದುರಿಸಲು ಸಿದ್ಧನಿದ್ದೇನೆ ಮತ್ತು ನ್ಯಾಯಾಂಗದಲ್ಲಿ ಸಂಪೂರ್ಣ ನಂಬಿಕೆ ಹೊಂದಿದ್ದೇನೆ, ಅಲ್ಲಿ ಸತ್ಯವು ಮೇಲುಗೈ ಸಾಧಿಸುತ್ತದೆ ಎಂಬ ವಿಶ್ವಾಸ ನನಗಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಇಂದೇ ಎಂಇಎಸ್‍ಗೆ ನಿಷೇಧ ಹೇರಿ ಇಲ್ಲದಿದ್ದರೆ ಕರ್ನಾಟಕ ಬಂದ್‍ಗೆ ಕರೆ: ವಾಟಾಳ್ ನಾಗರಾಜ್

  • ಪತಿ ಕಾಮಪ್ರಚೋದಕ ಚಿತ್ರಗಳನ್ನು ತೆಗೆಯುತ್ತಿದ್ದರೆ ವಿನಃ ಅಶ್ಲೀಲ ಚಿತ್ರವಲ್ಲ: ಶಿಲ್ಪಾ ಶೆಟ್ಟಿ

    ಪತಿ ಕಾಮಪ್ರಚೋದಕ ಚಿತ್ರಗಳನ್ನು ತೆಗೆಯುತ್ತಿದ್ದರೆ ವಿನಃ ಅಶ್ಲೀಲ ಚಿತ್ರವಲ್ಲ: ಶಿಲ್ಪಾ ಶೆಟ್ಟಿ

    ಮುಂಬೈ: ಬಾಲಿವುಟ್ ನಟಿ ಶಿಲ್ಪಾ ಶೆಟ್ಟಿ ಅವರ ಪತಿ ರಾಜ್ ಕುಂದ್ರ ನೀಲಿ ಚಿತ್ರೀಕರಣ ಪ್ರಕರಣದಲ್ಲಿ ಪೊಲೀಸ್ ಬಂಧಿಯಾಗಿದ್ದಾರೆ. ಈ ಕುರಿತಾಗಿ ಶಿಲ್ಪಾ ಶೆಟ್ಟಿ ವಿಚಾರಣೆಗೆ ಒಳಪಟ್ಟಿದ್ದಾರೆ.

     

    ಮುಂಬೈ ಕ್ರೈಂ ಬ್ರ್ಯಾಂಚ್ ಪೊಲೀಸರು ಶಿಲ್ಪಾ ಶೆಟ್ಟಿ ಅವರ ನಿವಾಸದ ಮೇಲೆ ಶುಕ್ರವಾರ (ಜು.23) ದಾಳಿ ನಡೆಸಿ ತಪಾಸಣೆ ಮಾಡಲಾಗಿದೆ. ಈ ವೇಳೆ ಪತಿಯ ಪರವಾಗಿ ಮಾತನಾಡಿರುವ ಶಿಲ್ಪಾ ಶೆಟ್ಟಿ ಅವರು ರಾಜ್ ಕುಂದ್ರಾ ನಿರಪರಾಧಿ ಎಂದು ವಾದ ಮಾಡಿದ್ದಾರೆ ಎಂಬ ಮಾಹಿತಿ ಕೇಳಿಬರುತ್ತಿದೆ.

    ಅಶ್ಲೀಲ ಸಿನಿಮಾ ಚಿತ್ರೀಕರಣದ ವಿಚಾರದಲ್ಲಿ ತನ್ನ ಸಹಭಾಗಿತ್ವ ಏನೂ ಇಲ್ಲ ರಾಜ್ ಕುಂದ್ರಾ ಅವರ ಹಾಟ್ ಶಾಟ್ಸ್ ಆ್ಯಪ್ ಜೊತೆ ನನಗೆ ಯಾವುದೇ ಸಂಬಂಧ ಇಲ್ಲ. ಅದರಲ್ಲಿ ಯಾವ ರೀತಿ ಕಂಟೆಂಟ್ ಇರುತ್ತದೆ ಎಂಬುದು ಕೂಡ ನನಗೆ ಗೊತ್ತಿಲ್ಲ. ನನ್ನ ಗಂಡ ಮಾಡಿದ್ದು ಕಾಮೋದ್ರೇಕದ ಸಿನಿಮಾಗಳು ಮಾತ್ರ. ಅವುಗಳು ಅಶ್ಲೀಲ ಸಿನಿಮಾಗಳಲ್ಲ. ಹಾಗಾಗಿ ನನ್ನ ಗಂಡ ನಿರಪರಾಧಿ ಎಂದು ಅವರು ವಾದಿಸುತ್ತಿದ್ದಾರೆ ಎಂಬ ಸುದ್ದಿ ಕೇಳಿಬರುತ್ತಿದೆ.

    ರಾಜ್ ಕುಂದ್ರಾ ಕೂಡ ಪೊಲೀಸರ ಎದುರು ಇದನ್ನೇ ವಾದಿಸುತ್ತಿದ್ದಾರೆ. ಅವರು ತನಿಖೆಗೆ ಸರಿಯಾಗಿ ಸಹಕರಿಸುತ್ತಿಲ್ಲ ಎನ್ನಲಾಗಿದೆ. ಆ ಕಾರಣದಿಂದಲೇ ಜು.27ರವರೆಗೆ ಅವರನ್ನು ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ನಟಿಯರನ್ನು ಮತ್ತು ಮಾಡೆಲ್‍ಗಳನ್ನು ಬಳಸಿಕೊಂಡು ರಾಜ್ ಕುಂದ್ರಾ ಅವರು ನೀಲಿ ಚಿತ್ರಗಳನ್ನು ತಯಾರಿಸುತ್ತಿದ್ದರು ಎಂಬುದಕ್ಕೆ ಪೊಲೀಸರ ಬಳಿ ಹಲವು ಸಾಕ್ಷ್ಯಗಳು ಇವೆ ಎನ್ನಲಾಗಿದೆ. ಇದನ್ನೂ ಓದಿ:   ಕುಟುಂಬ ಸಮೇತರಾಗಿ ಈ ಸಿನಿಮಾ ನೋಡಿ: ಶಿಲ್ಪಾ ಶೆಟ್ಟಿ

    ಓಟಿಟಿಯಲ್ಲಿ ಶಿಲ್ಪಾ ಶೆಟ್ಟಿ ನಟನೆಯ ‘ಹಂಗಾಮಾ 2’ ಸಿನಿಮಾ ರಿಲೀಸ್ ಆಗಿದ್ದು, ಒಳ್ಳೆಯ ಚಿತ್ರ ನಿರ್ಮಾಣ ಮಾಡಲು ಕಷ್ಟಪಟ್ಟ ಚಿತ್ರತಂಡಕ್ಕೆ ಸಮಸ್ಯೆ ಆಗಬಾರದು, ಮನೆಯಲ್ಲಿ ಕೂತು ಸಿನಿಮಾ ನೋಡಿ ಎಂದು ಶಿಲ್ಪಾ ಶೆಟ್ಟಿ ಸೋಶಿಯಲ್ ಮೀಡಿಯಾ ಪೋಸ್ಟ್ ಹಾಕುವುದರ ಮೂಲಕ ಮನವಿ ಮಾಡಿದ್ದಾರೆ.