Tag: ಅಶ್ಲೀಲ ವಿಡಿಯೋ

  • ಹೆಂಡತಿ ಮೊಬೈಲ್ ಎಂದು ಮಾವನಿಗೆ ಅಶ್ಲೀಲ ವಿಡಿಯೋ ಸೆಂಡ್ ಮಾಡಿದ್ದ ಅಳಿಯ ಅರೆಸ್ಟ್!

    ಹೆಂಡತಿ ಮೊಬೈಲ್ ಎಂದು ಮಾವನಿಗೆ ಅಶ್ಲೀಲ ವಿಡಿಯೋ ಸೆಂಡ್ ಮಾಡಿದ್ದ ಅಳಿಯ ಅರೆಸ್ಟ್!

    ಹುಬ್ಬಳ್ಳಿ: ಹೆಂಡತಿ ಎಂದು ತಿಳಿದು ಮಾವನ ಮೊಬೈಲ್‍ಗೆ ಅಶ್ಲೀಲ ವಿಡಿಯೋ ಸಂದೇಶ ಕಳುಹಿಸುತ್ತಿದ್ದ ಅಳಿಯನನ್ನು ಪೊಲೀಸರು ಬಂಧಿಸಿದ್ದಾರೆ.

    ಬಾಗಲಕೋಟೆ ಜಿಲ್ಲೆಯ ಮುಧೋಳ ಪಟ್ಟಣದ ನಿವಾಸಿ ಅರುಣ್ ನಾಯಕ್ ಬಂಧಿತ ಆರೋಪಿ. ಎರಡು ವರ್ಷಗಳ ಹಿಂದೆ ಹುಬ್ಬಳ್ಳಿಯಲ್ಲಿ ನೆಲೆಸಿದ್ದ ಡಾಕ್ಟರ್ ಜೊತೆ ಮದುವೆಯಾಗಿತ್ತು. ಆದರೆ ಮದುವೆ ನಂತರ ಪತ್ನಿ ಗಂಡನ ಮನೆ ತೊರೆದು ಹುಬ್ಬಳ್ಳಿಯ ತವರು ಮನೆಗೆ ಬಂದು ನೆಲೆಸಿದ್ದರು.

    ಕೆಲವು ದಿನಗಳ ಹಿಂದೆ ಪತ್ನಿ ತಮ್ಮ ತಂದೆಯ ಮೊಬೈಲ್‍ನಿಂದ ಪತಿ ಅರುಣ್‍ಗೆ ಕರೆ ಮಾಡಿದ್ದರು. ಅರುಣ್ ಇದುವೇ ತನ್ನ ಪತ್ನಿ ನಂಬರ್ ಎಂದು ತಿಳಿದು ನಿರಂತರವಾಗಿ ಮೊಬೈಲ್‍ಗೆ ಅಶ್ಲೀಲ ವಿಡಿಯೋ, ಚಿತ್ರ ಹಾಗೂ ಸಂದೇಶಗಳನ್ನು ಕಳುಹಿಸಿ ಮಾನಸಿಕ ಹಿಂಸೆ ನೀಡುತ್ತಿದ್ದನು. ಅಳಿಯನ ಕಾಮಾವತಾರ ಕಂಡ ಮಾವ ಮೋಹನ್ ಹೆಗಡೆ ಅಶೋಕ್ ನಗರದ ಪೊಲೀಸ್ ಠಾಣೆ ದೂರು ನೀಡಿದ್ದರು.

    ಕಳೆದ ಒಂದು ವರ್ಷದ ಹಿಂದೆ ವಿಚ್ಚೇದನ ಕೋರಿ ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದ್ದರು. ಕೋರ್ಟ್ ವಿಚಾರಣೆಗಾಗಿ ಮಾರ್ಚ್ 19 ಅಂದರೆ ಸೋಮವಾರ ಹುಬ್ಬಳ್ಳಿ ನಗರಕ್ಕೆ ಬಂದಿದ್ದ ಅರುಣ್ ನಾಯಕ್‍ನನ್ನು ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ನೀಡಿದ್ದಾರೆ.

  • ಪತಿ ಸ್ನೇಹಿತನಿಂದ ಅಶ್ಲೀಲ ವಿಡಿಯೋ ಅಪ್ಲೋಡ್: ಮನನೊಂದು ಗೃಹಿಣಿ ಆತ್ಮಹತ್ಯೆ

    ಪತಿ ಸ್ನೇಹಿತನಿಂದ ಅಶ್ಲೀಲ ವಿಡಿಯೋ ಅಪ್ಲೋಡ್: ಮನನೊಂದು ಗೃಹಿಣಿ ಆತ್ಮಹತ್ಯೆ

    ಮಂಡ್ಯ: ಪತಿಯ ಸ್ನೇಹಿತನೊಬ್ಬ ತನ್ನ ಅಶ್ಲೀಲ ದೃಶ್ಯ ಸೆರೆಹಿಡಿದು ಸಾಮಾಜಿಕ ಜಾಲತಾಣಗಳಲ್ಲಿ ಹಾಕಿದ್ದರಿಂದ ಮನನೊಂದ ಗೃಹಿಣಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಲ್ಲೆಯ ಮದ್ದೂರು ತಾಲೂಕಿನ ಸೋಮಮಹಳ್ಳಿ ಗ್ರಾಮದಲ್ಲಿ ನಡೆದಿದೆ.

    ಸಂಗೀತಾ (25) ಆತ್ಮಹತ್ಯೆಗೆ ಶರಣಾದ ಗೃಹಿಣಿ. ಸಂಗೀತಾ ಅವರು ನವೀನ್ ಎಂಬವರ ಜೊತೆ ಪ್ರೇಮ ವಿವಾಹವಾಗಿದ್ದಳು. ಸಂಗೀತಾ ತನ್ನ ಪತಿಯ ಗೆಳೆಯ ಹೊಸಬೂದನೂರು ಗ್ರಾಮದ ನಿವಾಸಿ ಅನಿಲ್ ಜೊತೆಗೆ ಅಕ್ರಮ ಸಂಬಂಧ ಹೊಂದಿದ್ದಳು. ಅನಿಲ್ ಅಶ್ಲೀಲ ದೃಶ್ಯಗಳನ್ನು ತನ್ನ ಮೊಬೈಲನಲ್ಲಿ ಸೆರೆಹಿಡಿದು ಬ್ಲಾಕ್‍ಮೇಲ್ ಮಾಡುತ್ತಿದ್ದನು.

    ಅನಿಲ್

    ಕೊನೆಗೆ ಅನಿಲ್ ಸಂಗೀತಾ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಾಕಿದ್ದನು. ವಿಡಿಯೋ ವೈರಲ್ ಆಗುತ್ತಿದ್ದಂತೆ ಮನನೊಂದು ಮನೆಯಲ್ಲಿ ಡೆತ್ ನೋಟ್ ಬರೆದಿಟ್ಟು ಸಂಗೀತಾ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಡೆತ್ ನೋಟ್‍ನಲ್ಲಿ ನನ್ನ ಸಾವಿಗೆ ಪತಿ ಗೆಳೆಯ ಅನಿಲ್ ಎಂದು ಬರೆಯಲಾಗಿದೆ.

    ಸ್ಥಳಕ್ಕೆ ಮದ್ದೂರು ಠಾಣಾ ಪೊಲೀಸರು ಆಗಮಿಸಿದ್ದು, ಪ್ರಕರಣ ದಾಖಲಿಸಿಕೊಂಡು ಅನಿಲ್ ಬಂಧನಕ್ಕಾಗಿ ಜಾಲ ಬೀಸಿದ್ದಾರೆ.