Tag: ಅಶ್ವಿನಿ ಪುನೀತ್

  • ಅಪ್ಪು ಇಲ್ಲ ಅಂತ ಹೇಳೋಕೆ ಕಷ್ಟ ಆಗತ್ತೆ : ಅಮಿತಾಭ್ ಬಚ್ಚನ್

    ಅಪ್ಪು ಇಲ್ಲ ಅಂತ ಹೇಳೋಕೆ ಕಷ್ಟ ಆಗತ್ತೆ : ಅಮಿತಾಭ್ ಬಚ್ಚನ್

    ಅಂದುಕೊಂಡಂತೆ ಆಗಿದ್ದರೆ ಗಂಧದ ಗುಡಿ ಪ್ರಿ ರಿಲೀಸ್ ಇವೆಂಟ್ ಗೆ ಅಮಿತಾಭ್ ಬಚ್ಚನ್ (Amitabh Bachchan) ಬರಬೇಕಿತ್ತು. ಅಲ್ಲದೇ, ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭಕ್ಕೂ ಅವರನ್ನು ಆಹ್ವಾನಿಸಲು ತೀರ್ಮಾನಿಸಲಾಗಿತ್ತು. ಅನಿವಾರ್ಯ ಕಾರಣಗಳಿಂದಾಗಿ ಅವರು ಬರಲಿಲ್ಲ. ಹಾಗಂತ ಬಚ್ಚನ್ ಅಪ್ಪು ಅವರನ್ನು ನೆನಪಿಸಿಕೊಳ್ಳುವ ದಿನಗಳೇ ಇಲ್ಲವಂತೆ. ಅದರಲ್ಲೂ ಅಪ್ಪು ಇಲ್ಲ ಎನ್ನುವುದನ್ನು ಅವರಿಗೆ ಅರಗಿಸಿಕೊಳ್ಳಲು ಕಷ್ಟವಾಗುತ್ತಿದೆಯಂತೆ. ಈ ಕುರಿತು ಅವರು ಸೋಷಿಯಲ್ ಮೀಡಿಯಾದಲ್ಲಿ ಸುದೀರ್ಘವಾಗಿ ಬರೆದುಕೊಂಡಿದ್ದಾರೆ.

    ‘ಅಪ್ಪು (Puneet Rajkumar) ಇಲ್ಲ ಎಂಬುದನ್ನು ಅಂದುಕೊಂಡು ಮಾತನಾಡಲು ಕಷ್ಟ ಆಗುತ್ತದೆ. ಅಪ್ಪು ಮಗುವಾಗಿದ್ದಾಗಲೇ ನಾನು ಅವರನ್ನು ಮೊದಲು ನೋಡಿದ್ದು. ಅಪ್ಪುವಿನಲ್ಲಿ ಸದಾ ಸೆಳೆಯುವ ಸಂಗತಿ ಅಂದ್ರೆ ಅವರ ನಗು. ಎಲ್ಲಾ ಕಡೆ, ಎಲ್ಲಾ ಸಂದರ್ಭದಲ್ಲೂ, ಯಾವಾಗಲೂ ಅವರ ಮುಖದಲ್ಲಿ ನಗು ಇರುತ್ತದೆ. ಅಪ್ಪು ಅಸಂಖ್ಯಾತ ಅಭಿಮಾನಿಗಳನ್ನು ಹೊಂದಿದ್ದಾರೆ. ಅವರ ಕೊನೆಯ ಚಿತ್ರ ಗಂಧದಗುಡಿಯಲ್ಲಿ ಅವರು ಅಭಿನಯಿಸಿಲ್ಲ. ಅವರು ಅವರಾಗಿಯೇ ಕಾಣಿಸ್ಕೊಂಡಿದ್ದಾರೆ’ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ:ಸ್ಯಾಂಡಲ್ ವುಡ್ ನಲ್ಲಿ ಮತ್ತೆ ಕೇಳಿ ಬರಲಿದೆ ‘ಮೆಲ್ಲುಸಿರೆ ಸವಿಗಾನ’ ಹಾಡು

    ಗಂಧದ ಗುಡಿಯ (Gandhad Gudi) ಬಗ್ಗೆ ಮಾತನಾಡಿರುವ ಬಿಗ್ ಬಿ ‘ಗಂಧದ ಗುಡಿಯಲ್ಲಿ ಕರ್ನಾಟಕ  ವೈಭವದ ವನ್ಯ ಸಂಪತ್ತನ್ನು ತೆರೆದಿಟ್ಟಿದ್ದಾರೆ. ಅಪ್ಪು ಜೊತೆಗಿನ ಗಂಧದ ಗುಡಿ ಪಯಣ ಮಿಸ್ ಮಾಡ್ಕೋಬೇಡಿ. ಕಡ್ಡಾಯವಾಗಿ ಮಕ್ಕಳು ನೋಡಲೇಬೇಕಾದ ಸಿನಿಮಾ.  ವನ್ಯ ಸಂಪತ್ತಿನ ಕುರಿತು ಅರಿಯ ಬೇಕಾದ ಚಿತ್ರ. ಅಪ್ಪು ನಮ್ಮ ಜೊತೆ ನಮ ನೆನಪಿನಲ್ಲಿ ಸದಾ ಜೀವಂತ’ ಎಂದು ಬರೆದಿದ್ದಾರೆ.

    ಅಮಿತಾಭ್ ಬಚ್ಚನ್ ಮಾತನ್ನು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿರುವ ಅಶ್ವಿನಿ (Ashwini Puneet) ಪುನೀತ್ ರಾಜ್ ಕುಮಾರ್, ಮೇರುನಟನಿಗೆ ಈ ಮೂಲಕ ಧನ್ಯವಾದಗಳನ್ನೂ ಅರ್ಪಿಸಿದ್ದಾರೆ. ಅಮಿತಾಭ್ ಮತ್ತು ಡಾ.ರಾಜ್ ಕುಟುಂಬ ಬಾಂಧವ್ಯ ಹಲವು ವರ್ಷಗಳದ್ದು. ಅನೇಕ ಬಾರಿ ಅಮಿತಾಭ್ ಮತ್ತು ರಾಜ್ ಕುಮಾರ್ ಭೇಟಿ ಮಾಡಿದ್ದಾರೆ. ಅಮಿತಾಭ್ ಅವರಿಗಾಗಿ ಡಾ.ರಾಜ್ ಕುಮಾರ್ ಮರೆಯದೇ ಇರುವಂತಹ ಸಹಾಯವನ್ನೂ ಮಾಡಿದ್ದಾರೆ. ಆ ಋಣವನ್ನು ಬಿಗ್ ಬಿ ಹೀಗೆ ತೀರಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಪುನೀತ್ ರಾಜಕುಮಾರ್ ಹೆಸರಿನಲ್ಲಿ ಅಪ್ಪು ಅಮರ ಹೆಲ್ತ್ ಪ್ರೆವಿಲೈಜ್ ಕಾರ್ಡ್

    ಪುನೀತ್ ರಾಜಕುಮಾರ್ ಹೆಸರಿನಲ್ಲಿ ಅಪ್ಪು ಅಮರ ಹೆಲ್ತ್ ಪ್ರೆವಿಲೈಜ್ ಕಾರ್ಡ್

    ರ್ನಾಟಕ ಟೆಲಿವಿಷನ್ ಅಸೋಸಿಯೇಷನ್ ಕಳೆದ ವರ್ಷ ನವಂಬರ್ ತಿಂಗಳಲ್ಲಿ ‘ಅಪ್ಪು ಅಮರ’  ಕಾರ್ಯಕ್ರಮದ ಮೂಲಕ ನಟ ಪವರ್ ಸ್ಟಾರ್ ಪುನೀತ್ ರಾಜಕುಮಾರ್ (Puneeth Rajkumar) ಅವರಿಗೆ ಗೌರವ  ಸಲ್ಲಿಸಲಾಗಿತ್ತು. ಇದೇ ಸಂದರ್ಭದಲ್ಲಿ ಪ್ರತಿಷ್ಠಿತ ಕಾವೇರಿ ಆಸ್ಪತ್ರೆಯು, ಸಾಯಿ ಸಂಗಮ ಡಯಾಗ್ನೋಸ್ಟಿಕ್ ಮತ್ತು ಹೆಲ್ತ್ ಕೇರ್ ಸಹಯೋಗದಲ್ಲಿ ಕರ್ನಾಟಕ ಟೆಲಿವಿಷನ್ ಅಸೋಷಿಯೇಷನ್ (KTVA) ಸದಸ್ಯರುಗಳಿಗೆ ‘ಅಪ್ಪು ಅಮರ ಹೆಲ್ತ್ ಪ್ರೆವಿಲೈಜ್ ಕಾರ್ಡ್” ವಿತರಿಸುವ ಭರವಸೆ ನೀಡಿತ್ತು. ಅದರಂತೆ ಇದೇ ನವೆಂಬರ್ 13ರಂದು ಭಾನುವಾರ ಸಂಜೆ ಐದು ಗಂಟೆಗೆ ನಡೆಯುವ ಕಾರ್ಯಕ್ರಮದಲ್ಲಿ ‘ಅಪ್ಪು ಅಮರ ಹೆಲ್ತ್ ಪ್ರಿವೀಲೇಜ್ ಕಾರ್ಡ್” ವಿತರಿಸಲಿದೆ.

    ಈ ಕುರಿತು ಮಾತನಾಡಿದ ಕೆಟಿವಿಎ ಅಧ್ಯಕ್ಷ ಎಸ್.ವಿ. ಶಿವಕುಮಾರ್ (Shivakumar), ‘ಈ ಕಾರ್ಡ್ ಪಡೆದ ಸದಸ್ಯರುಗಳಲ್ಲಿ ಅವಶ್ಯಕತೆ ಇರುವ ಹಾಗೂ ಆರ್ಥಿಕವಾಗಿ ದುರ್ಬಲರಾದ  ಸದಸ್ಯರುಗಳಿಗೆ ಶಸ್ತ್ರಚಿಕಿತ್ಸೆಗಳನ್ನು ಸಂಪೂರ್ಣ ಉಚಿತವಾಗಿ ಮಾಡಲು ಕಾವೇರಿ ಆಸ್ಪತ್ರೆ ಮತ್ತು ಸಾಯಿ ಸಂಗಮ ಡಯಾಗ್ನೋಸ್ಟಿಕ್ ಮತ್ತು ಹೆಲ್ತ್ ಕೇರ್ ನಿರ್ಧರಿಸಿದೆ. ಇದಲ್ಲದೆ ಈ ಹೆಲ್ತ್ ಕಾರ್ಡ್ ಅಡಿಯಲ್ಲಿ ಎಲ್ಲಾ ಸ್ಪೆಷಾಲಿಟಿ ಸವಲತ್ತುಗಳನ್ನು ಕಡಿಮೆ ದರದಲ್ಲಿ ಪಡೆದುಕೊಳ್ಳಬಹುದು. ಈ  ಸವಲತ್ತನ್ನು ಸುಮಾರು 5000 ಸದಸ್ಯರು ಮತ್ತು ಅವರ ಕುಟುಂಬದವರು ಪಡೆಯಲಿದ್ದಾರೆ’ ಎನ್ನುತ್ತಾರೆ. ಇದನ್ನೂ ಓದಿ:`ಮಿಸ್ ಯೂ ಸಾನ್ಯ’ ಎಂದು ಬಿಕ್ಕಿ ಬಿಕ್ಕಿ ಅತ್ತ ರೂಪೇಶ್ ಶೆಟ್ಟಿ

    ಭಾನುವಾರ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಪುನೀತ್ ಅವರ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್  (Ashwini Puneeth) ಭಾಗಿಯಾಗಲಿದ್ದು, ಅವತ್ತು ಅವರೇ ಕಾರ್ಡ್ ಅನ್ನು ವಿತರಿಸಲಿದ್ದಾರೆ. ಈಗಾಗಲೇ ಕಾರ್ಯಕ್ರಮ‍ಕ್ಕೆ ಅಶ್ವಿನಿ ಪುನೀತ್ ರಾಜ್ ಕುಮಾರ್ ಅವರನ್ನು ಆಹ್ವಾನಿಸಲಾಗಿದೆ. ಅಲ್ಲದೇ, ಗಣ್ಯರು ಕೂಡ ಕಾರ್ಯಕ್ರಮದಲ್ಲಿ ಭಾಗಿ ಆಗುತ್ತಿರುವುದು ವಿಶೇಷ.

    Live Tv
    [brid partner=56869869 player=32851 video=960834 autoplay=true]

  • ‘ಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಪುನೀತ್ ಕುಟುಂಬಕ್ಕೆ ಆಹ್ವಾನ

    ‘ಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಪುನೀತ್ ಕುಟುಂಬಕ್ಕೆ ಆಹ್ವಾನ

    ನಾಳೆ ಬೆಂಗಳೂರಿನಲ್ಲಿ ಪುನೀತ್ ರಾಜ್ ಕುಮಾರ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯುತ್ತಿದ್ದು, ಈ ಕಾರ್ಯಕ್ರಮಕ್ಕೆ ಸರಕಾರವು ಅಧಿಕೃತವಾಗಿ ಪುನೀತ್ ಕುಟುಂಬಕ್ಕೆ ಆಹ್ವಾನ ನೀಡಿದೆ. ಪುನೀತ್ ಮನೆಗೆ ಆಗಮಿಸಿದ್ದ ಸಚಿವರಾದ ಆರ್.ಅಶೋಕ್ ಮತ್ತು ಸುನೀಲ್ ಕುಮಾರ್ ಆಗಮಿಸಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಮತ್ತು ರಾಘವೇಂದ್ರ ರಾಜ್ ಕುಮಾರ್ ಅವರನ್ನು ಗೌರವಿಸುವ ಮೂಲಕ ಆಹ್ವಾನ ನೀಡಲಾಯಿತು.

    ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಅತಿಥಿಗಳಾಗಿ ಸೂಪರ್ ಸ್ಟಾರ್ ರಜನಿಕಾಂತ್ ಮತ್ತು ತೆಲುಗಿನ ಸ್ಟಾರ್ ನಟ ಜ್ಯೂನಿಯರ್ ಎನ್.ಟಿ.ಆರ್ ಹಾಗೂ ಸುಧಾಮೂರ್ತಿ ಆಗಮಿಸಲಿದ್ದಾರೆ. ಸಂಜೆ 4 ಗಂಟೆಗೆ ವಿಧಾನ ಸೌಧ ಮುಂಭಾಗದಲ್ಲಿ ಬೃಹತ್ ಕಾರ್ಯಕ್ರಮವನ್ನು ಆಯೋಜಿಸಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು  ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಇದನ್ನೂ ಓದಿ:ದಆಮೀರ್‌ ಖಾನ್‌ ತಾಯಿಗೆ ಹೃದಯಾಘಾತ

    ಸಂಜೆ 4 ಗಂಟೆಗೆ ಖ್ಯಾತ ಗಾಯಕ ವಿಜಯ್ ಪ್ರಕಾಶ್ ಅವರಿಂದ ಗೀತ ಗಾಯನ ಕಾರ್ಯಕ್ರಮ ನಡೆಯಲಿದ್ದು, ಸಂಜೆ 5 ಗಂಟೆಗೆ ಪುನೀತ್ ರಾಜ್ ಕುಮಾರ್ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ನೀಡಲಾಗುತ್ತಿದೆ. ಇಂದು ಪುನೀತ್ ಮನೆಗೆ ಆಗಮಿಸಿದ್ದ ಸಚಿವ ಆರ್. ಅಶೋಕ್ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನೀಲ್ ಕುಮಾರ್ ಕಾರ್ಯಕ್ರಮದ ಆಹ್ವಾನ ಪತ್ರಿಕೆ ನೀಡಿದ್ದಾರೆ.

    ಬೆಂಗಳೂರಿನ ಶಿವಾಜಿ ನಗರ ವಿಧಾನಸಭಾ ಕ್ಷೇತ್ರದ ಶಾಸಕ ರಿಜ್ವಾನ್ ಅರ್ಷದ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡರೆ, ಸಭಾಪತಿ ರಘುನಾಥ್ ರಾವ್ ಮಲ್ಕಾಪುರೆ ಹಾಗೂ ವಿಧಾನ ಸಭೆ ಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೆರೆ ಅವರು ಗೌರವ ಉಪಸ್ಥಿತಿ ಇರಲಿದೆ. ಸಚಿವರಾದ ಆರ್. ಅಶೋಕ್ ಹಾಗೂ ವಿ ಸುನೀಲ್ ಕುಮಾರ್ ಅವರ ಘನ ಉಪಸ್ಥಿತಿ ಮತ್ತು ಮಾಜಿ ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯ ಸೇರಿದಂತೆ ಹಲವರು ಅತಿಥಿಗಳಾಗಿ ಆಗಮಿಸುತ್ತಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಪುನೀತ್ ಪ್ರಥಮ ಪುಣ್ಯಸ್ಮರಣೆ: ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಭಾವುಕ ಪತ್ರ

    ಪುನೀತ್ ಪ್ರಥಮ ಪುಣ್ಯಸ್ಮರಣೆ: ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಭಾವುಕ ಪತ್ರ

    ಪುನೀತ್ ರಾಜ್ ಕುಮಾರ್  ಅಗಲಿ ಇಂದಿಗೆ ಒಂದು ವರ್ಷ. ಬೆಂಗಳೂರಿನ ಕಂಠೀರವ ಸ್ಟುಡಿಯೋ ಬಳಿ ಇರುವ ಅಪ್ಪು ಸಮಾಧಿಗೆ ಪುನೀತ್ ಕುಟುಂಬಸ್ಥರು ಆಗಮಿಸಿ ಪೂಜೆ ಸಲ್ಲಿಸಿದರು. ಜೊತೆಗೆ ಡಾ.ರಾಜ್ ಕುಮಾರ್ ಮತ್ತು ಪಾರ್ವತಮ್ಮ ರಾಜ್ ಕುಮಾರ್ ಸಮಾಧಿಗೂ ಪೂಜೆ ಸಲ್ಲಿಸಲಾಯಿತು. ಪೂಜೆ ಸಲ್ಲಿಸುತ್ತಲೇ ಪುನೀತ್ ಪತ್ನಿ ಅಶ್ವಿನಿ ಕಣ್ಣೀರು ಹಾಕಿದರು. ಪೂಜೆ ಸಲ್ಲಿಸಿದ ನಂತರ ಅಭಿಮಾನಿಗಳಿಗೆ ಅಶ್ವಿನಿ ಭಾವುಕ ಪತ್ರ ಬರೆದಿದ್ದಾರೆ.

    ನೆನಪಿನ ಸಾಗರದಲ್ಲಿ. ಅಪ್ಪು ಅವರು ನಮ್ಮ ನೆನಪುಗಳಲ್ಲಿ ಮಾತ್ರವಲ್ಲದೇ, ನಮ್ಮ ಆಲೋಚನೆಗಳು ಹಾಗೂ ನಾವು ಮಾಡುವ ಸತ್ಕಾರ್ಯಗಳಲ್ಲಿಯೂ ನಮ್ಮ ನಡುವೆ ಸದಾ ಜೀವಂತವಾಗಿದ್ದಾರೆ. ಅವರ ಕನಸು ಮತ್ತು ಮೌಲ್ಯಗಳನ್ನು ಜೀವಂತವಾಗಿಡಲು ನೂರಾರು ಕುಟುಂಬ ಸದಸ್ಯರು, ಅವರ ಸಾವಿರಾರು ಸ್ನೇಹಿತರು ಹಾಗೂ ಕೋಟ್ಯಂತರ ಅಭಿಮಾನಿಗಳಿಂದ ನಾನು ಪಡೆದ ಬೆಂಬಲದ ಶಕ್ತಿಯೇ ನನಗೆ ದಾರಿ ಮಾಡಿಕೊಟ್ಟಿದೆ. ಅಪ್ಪು ಅವರ ಮೇಲೆ ನಿಮ್ಮೆಲ್ಲರಿಗೆ ಇರುವ ಪ್ರೀತಿ ಮತ್ತು ಗೌರವದಿಂದ, ಸದಾ ಕಾಲ ಅವರನ್ನು ಜೀವಂತವಾಗಿರಿಸಿದ್ದಕ್ಕಾಗಿ ಎಲ್ಲರಿಗೂ ನನ್ನ ನಮನಗಳು ಎಂದು ಬರೆದಿದ್ದಾರೆ ಅಶ್ವಿನಿ. ಇದನ್ನೂ ಓದಿ:ಸಾನ್ಯ ಕ್ಯಾಪ್ಟೆನ್ಸಿಗೆ ಕಳಪೆ ಎಂದ ರೂಪೇಶ್‌ ಶೆಟ್ಟಿ

    ಪುನೀತ್ ರಾಜ್ ಕುಮಾರ್ ಅವರ ಮೊದಲ ಪುಣ್ಯಸ್ಮರಣೆ ಸಂದರ್ಭದಲ್ಲೇ ಸರಕಾರ ಕೂಡ ಅವರಿಗೆ ನವೆಂಬರ್ 1 ರಂದು ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದ್ದು, ದಕ್ಷಿಣ ಇಬ್ಬರು ಸ್ಟಾರ್ ನಟರು ಅತಿಥಿಗಳಾಗಿ ಆಗಮಿಸಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಇದರಲ್ಲಿ ಒಬ್ಬ ನಟರು ಈಗಾಗಲೇ ಒಪ್ಪಿಕೊಂಡಿದ್ದು, ಮತ್ತೋರ್ವ ನಟರು ಇನ್ನೂ ಉತ್ತರಿಸಬೇಕಿದೆ ಎಂದಿದ್ದಾರೆ. ಇಬ್ಬರಿಗೂ ಕರ್ನಾಟಕದ ನಂಟಿರುವುದು ಮತ್ತೊಂದು ವಿಶೇಷ.

    ಸೂಪರ್ ಸ್ಟಾರ್ ರಜನಿಕಾಂತ್ ಹಾಗೂ ತೆಲುಗಿನ ಖ್ಯಾತ ನಟ ಜ್ಯೂನಿಯರ್ ಎನ್.ಟಿ.ಆರ್ ಅವರಿಗೆ ಕರ್ನಾಟಕ ಸರಕಾರವು ಆಹ್ವಾನ ನೀಡಿದ್ದು, ಜ್ಯೂನಿಯರ್ ಎನ್.ಟಿ.ಆರ್ ಕಾರ್ಯಕ್ರಮಕ್ಕೆ ಬರಲು ಒಪ್ಪಿಕೊಂಡಿದ್ದು, ರಜನಿಕಾಂತ್ ಅವರ ಒಪ್ಪಿಗೆ ಪತ್ರ ಇನ್ನಷ್ಟೇ ಸಿಗಬೇಕಿದೆ. ಈ ಕಾರ್ಯಕ್ರವನ್ನು ನವೆಂಬರ್ 1 ರಂದು ವಿಧಾನಸೌಧದ ಮುಂಭಾಗದಲ್ಲಿ ಆಯೋಜನೆ ಮಾಡಿದ್ದು, ಡಾ.ರಾಜ್ ಕುಟುಂಬ ಹಾಗೂ ಅಭಿಮಾನಿಗಳು ಸಾಕ್ಷಿಯಾಗಲಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ‘ಗಂಧದ ಗುಡಿ’ ಚಿತ್ರದಲ್ಲಿ ಅಪ್ಪು ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಕೂಡ ಇದ್ದಾರೆ

    ‘ಗಂಧದ ಗುಡಿ’ ಚಿತ್ರದಲ್ಲಿ ಅಪ್ಪು ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಕೂಡ ಇದ್ದಾರೆ

    ಇಂದು ರಾಜ್ಯಾದ್ಯಂತ ಬಿಡುಗಡೆ ಆಗಿರುವ ಪುನೀತ್ ರಾಜ್ ಕುಮಾರ್ ಕನಸಿನ ಗಂಧದ ಗುಡಿ (Gandhad Gudi) ಚಿತ್ರದಲ್ಲಿ ಪುನೀತ್ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ (Ashwini Puneeth) ಕೂಡ ಇದ್ದಾರೆ. ಚಿತ್ರ ಶುರುವಾಗುವುದು ಅಶ್ವಿನಿ ಅವರ ಮಾತಿನ ಮೂಲಕ. ಅವರು ಅಪ್ಪುವನ್ನು ಬಣ್ಣಿಸುವ ರೀತಿಯೇ ಸೊಗಸು. ಒಂದಷ್ಟು ಅಚ್ಚರಿ, ಒಂದಷ್ಟು ಭಾವುಕತೆ ಮತ್ತಷ್ಟು ಚಿತ್ರ ನೋಡುವ ಕುತೂಹಲವನ್ನು ಅಶ್ವಿನಿ ಹುಟ್ಟು ಹಾಕುತ್ತಾರೆ. ಆನಂತರ ಪುನೀತ್ ಹೊಸ ಲೋಕಕ್ಕೆ ನೋಡುಗರನ್ನು ಕರೆದುಕೊಂಡು ಹೋಗುತ್ತಾರೆ.

    ಪುನೀತ್ ರಾಜ್ ಕುಮಾರ್ (Puneeth Rajkumar) ನಟನೆಯ ಗಂಧದ ಗುಡಿ ಡಾಕ್ಯುಡ್ರಾಮಾ ಚಿತ್ರ ಇಂದು ರಾಜ್ಯಾದ್ಯಂತ 200ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿದೆ. ಈ ಚಿತ್ರದ ವಿಶೇಷ ಅಂದರೆ, ಅಪ್ಪು ಅಪ್ಪು ಆಗಿಯೇ ಕಾಣಿಸಿಕೊಂಡಿದ್ದಾರೆ. ಯಾವುದೇ ಮೇಕಪ್ ಇಲ್ಲದೇ, ಡೈಲಾಗ್ ಹೊಡೆಯದೇ ಸರಳವಾಗಿ ಹಾಗೂ ಸಹಜವಾಗಿದ್ದಾರೆ. ಹಾಗಾಗಿ ಪುನೀತ್ ಮತ್ತಷ್ಟು ಹತ್ತಿರವಾಗುತ್ತಾರೆ. ಈ ಚಿತ್ರದಲ್ಲಿ ಪುನೀತ್ ಕಾಡಿನ ಮಧ್ಯೆ ಹೋದಾಗ, ವಿಷ ಸರ್ಪಗಳನ್ನು ಕಾಣುತ್ತಾರೆ. ಹುಲಿ, ಚಿರತೆಗಳನ್ನು ನೋಡುತ್ತಾರೆ. ಈ ಸಂದರ್ಭದಲ್ಲಿ ಅವರು ಮಾತೊಂದನ್ನು ಆಡುತ್ತಾರೆ. ಆ ಮಾತು ನೋಡುಗನನ್ನು ಭಾವುಕನಾಗಿಸುತ್ತದೆ. ಇದನ್ನೂ ಓದಿ: ಗಂಧದಗುಡಿ ಸಿನಿಮಾ ಅಲ್ಲವೇ ಅಲ್ಲ, ಅದೊಂದು ಅನುಭೂತಿ

    ಕಾಡಿನೊಳಗೆ ವಿಷದ ಹಾವು ಕಾಣುತ್ತಾ, ನಿರ್ದೇಶಕ ಅಮೋಘ ವರ್ಷ (Amogha Varsha) ಜೊತೆ ತಮಾಷೆಯಾಗಿ ಮಾತನಾಡಿದರೂ ಅದೀಗ ಪ್ರೇಕ್ಷಕರನ್ನು ಕಣ್ಣೀರು ಹಾಕಿಸುತ್ತದೆ. ಹಾವು ನೋಡುತ್ತಾ, ‘ಹೆಂಡ್ತಿ ಮಕ್ಕಳನ್ನು ಮನೇಲಿ ಬಿಟ್ಟು ಬಂದಿದ್ದೀನಿ. ಸೇಫ್ ಆಗಿ ಮನೆ ಸೇರ್ತೀನಿ ತಾನೆ?’ ಎಂದು ಪ್ರಶ್ನೆ ಮಾಡುತ್ತಾರೆ. ಅಂದು ಸೇಫ್ ಆಗಿಯೇ ಮನೆಗೆ ಬಂದ ಪುನೀತ್ ರಾಜ್ ಕುಮಾರ್, ಆ ನಂತರ ಆಸ್ಪತ್ರೆಗೆ ಹೋದವರು ಮತ್ತೆ ಸೇಫ್ ಆಗಿ ಬರಲಿಲ್ಲ ಎನ್ನುವುದು ನೋವಿನ ಸಂಗತಿ. ಈ ಮಾತು ಕೇಳುತ್ತಿದ್ದಂತೆಯೇ ಕಣ್ಣೀರು ಬರುವುದು ಸತ್ಯ.

    ಗಂಧದ ಗುಡಿ ಡಾಕ್ಯುಡ್ರಾಮಾ ಸಿನಿಮಾ ಇಂದು ಬಿಡುಗಡೆ ಆಗಿ, ಬೆಳಗ್ಗೆಯೇ ನೂರಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಸ್ಪೆಷಲ್ ಶೋ ಆಯೋಜನೆಗೊಂಡಿದ್ದವು. ಮೊದಲ ಪ್ರದರ್ಶನದಲ್ಲೇ ನೆಚ್ಚಿನ ನಟನ ಚಿತ್ರವನ್ನು ಕಣ್ತುಂಬಿಕೊಂಡ ಅಭಿಮಾನಿಗಳು ಭಾವುಕರಾದರು. ಅಭಿಮಾನಿಗಳ ಜೊತೆಯೇ ಡಾ.ರಾಜ್ ಕುಟುಂಬ ಕೂಡ ಸಿನಿಮಾ ವೀಕ್ಷಿಸಿದೆ.

    ಇಂದು ಬೆಳಗ್ಗೆ ಹತ್ತು ಗಂಟೆಯೊಳಗೆ ಬೆಂಗಳೂರಿನಲ್ಲೇ 50ಕ್ಕೂ ಹೆಚ್ಚು ಪ್ರದರ್ಶನಗಳನ್ನು ಆಯೋಜನೆ ಮಾಡಿದ್ದು, ಬೆಳಗಿನ ಜಾವವೇ 50 ಬಾರಿ ಈ ಸಿನಿಮಾ ಬೆಂಗಳೂರಿನ ಮಲ್ಟಿಪ್ಲೆಕ್ಸ್ ಚಿತ್ರ ಮಂದಿರಗಳಲ್ಲಿ ಪ್ರದರ್ಶನ ಕಾಣುತ್ತಿದೆ ಎಂದು ವಿತರಕ ಕಾರ್ತಿಕ್ ಗೌಡ ಮಾಹಿತಿ ಹಂಚಿಕೊಂಡಿದ್ದಾರೆ. ಇದೊಂದು ನೂತನ ದಾಖಲೆ ಎಂದೂ ಅವರು ತಿಳಿಸಿದ್ದಾರೆ. ಬೆಳಗಿನ ಜಾವ 6 ಗಂಟೆಯಿಂದಲೇ ಸಿನಿಮಾ ಪ್ರದರ್ಶನ ಶುರುವಾಗಿದೆ.

    Live Tv
    [brid partner=56869869 player=32851 video=960834 autoplay=true]

  • ‘ಹೆಂಡ್ತಿ ಮಕ್ಳನ್ನು ಬಿಟ್ ಬಂದಿದ್ದೀನಿ, ಸೇಫ್ ಆಗಿ ಮನೆಗೆ ಹೋಗ್ತೀನಾ?’: ಗಂಧದ ಗುಡಿಯಲ್ಲಿ ಕಣ್ಣೀರು ತರಿಸುತ್ತೆ ಅಪ್ಪು ಡೈಲಾಗ್

    ‘ಹೆಂಡ್ತಿ ಮಕ್ಳನ್ನು ಬಿಟ್ ಬಂದಿದ್ದೀನಿ, ಸೇಫ್ ಆಗಿ ಮನೆಗೆ ಹೋಗ್ತೀನಾ?’: ಗಂಧದ ಗುಡಿಯಲ್ಲಿ ಕಣ್ಣೀರು ತರಿಸುತ್ತೆ ಅಪ್ಪು ಡೈಲಾಗ್

    ಪುನೀತ್ ರಾಜ್ ಕುಮಾರ್ ನಟನೆಯ ಗಂಧದ ಗುಡಿ (Gandhad Gudi) ಡಾಕ್ಯುಡ್ರಾಮಾ ಚಿತ್ರ ಇಂದು ರಾಜ್ಯಾದ್ಯಂತ 200ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿದೆ. ಈ ಚಿತ್ರದ ವಿಶೇಷ ಅಂದರೆ, ಅಪ್ಪು (Appu) ಅಪ್ಪು ಆಗಿಯೇ ಕಾಣಿಸಿಕೊಂಡಿದ್ದಾರೆ. ಯಾವುದೇ ಮೇಕಪ್ ಇಲ್ಲದೇ, ಡೈಲಾಗ್ ಹೊಡೆಯದೇ ಸರಳವಾಗಿ ಹಾಗೂ ಸಹಜವಾಗಿದ್ದಾರೆ. ಹಾಗಾಗಿ ಪುನೀತ್ ಮತ್ತಷ್ಟು ಹತ್ತಿರವಾಗುತ್ತಾರೆ. ಈ ಚಿತ್ರದಲ್ಲಿ ಪುನೀತ್ ಕಾಡಿನ ಮಧ್ಯೆ ಹೋದಾಗ, ವಿಷ ಸರ್ಪಗಳನ್ನು ಕಾಣುತ್ತಾರೆ. ಹುಲಿ, ಚಿರತೆಗಳನ್ನು ನೋಡುತ್ತಾರೆ. ಈ ಸಂದರ್ಭದಲ್ಲಿ ಅವರು ಮಾತೊಂದನ್ನು ಆಡುತ್ತಾರೆ. ಆ ಮಾತು ನೋಡುಗನನ್ನು ಭಾವುಕನಾಗಿಸುತ್ತದೆ.

    ಕಾಡಿನೊಳಗೆ ವಿಷದ ಹಾವು ಕಾಣುತ್ತಾ, ನಿರ್ದೇಶಕ ಅಮೋಘ ವರ್ಷ (Amogha Varsha) ಜೊತೆ ತಮಾಷೆಯಾಗಿ ಮಾತನಾಡಿದರೂ ಅದೀಗ ಪ್ರೇಕ್ಷಕರನ್ನು ಕಣ್ಣೀರು ಹಾಕಿಸುತ್ತದೆ. ಹಾವು ನೋಡುತ್ತಾ, ‘ಹೆಂಡ್ತಿ ಮಕ್ಕಳನ್ನು ಮನೇಲಿ ಬಿಟ್ಟು ಬಂದಿದ್ದೀನಿ. ಸೇಫ್ ಆಗಿ ಮನೆ ಸೇರ್ತೀನಿ ತಾನೆ?’ ಎಂದು ಪ್ರಶ್ನೆ ಮಾಡುತ್ತಾರೆ. ಅಂದು ಸೇಫ್ ಆಗಿಯೇ ಮನೆಗೆ ಬಂದ ಪುನೀತ್ ರಾಜ್ ಕುಮಾರ್, ಆ ನಂತರ ಆಸ್ಪತ್ರೆಗೆ ಹೋದವರು ಮತ್ತೆ ಸೇಫ್ ಆಗಿ ಬರಲಿಲ್ಲ ಎನ್ನುವುದು ನೋವಿನ ಸಂಗತಿ. ಈ ಮಾತು ಕೇಳುತ್ತಿದ್ದಂತೆಯೇ ಕಣ್ಣೀರು ಬರುವುದು ಸತ್ಯ. ಇದನ್ನೂ ಓದಿ: ಗಂಧದಗುಡಿ ಸಿನಿಮಾ ಅಲ್ಲವೇ ಅಲ್ಲ, ಅದೊಂದು ಅನುಭೂತಿ

    ಡಾಕ್ಯುಮೆಂಟರಿ ಮಾದರಿಯ ಈ ಚಿತ್ರ ನಿಜಕ್ಕೂ ತುಂಬಾ ಚೆನ್ನಾಗಿ ಮೂಡಿ ಬಂದಿದೆ. ಪುನೀತ್ ರಾಜ್‍ಕುಮಾರ್ (Puneeth Rajkumar) ಗಂಧದ ಗುಡಿ ಹೆಸರಿನಲ್ಲಿ ಡಾಕ್ಯುಮೆಂಟರಿ ಮಾಡಿದ್ದಾರೆ ಅಂದಾಗ, ಕುತೂಹಲಕ್ಕಿಂತ ಅನುಮಾನಿಸಿದವರೆ ಹೆಚ್ಚು. ಓಟಿಟಿ ಮೂಲಕ ಜಗತ್ತಿನ ಸಿನಿಮಾಗಳು ನಮ್ಮುಂದಿರುವಾಗ, ಡಿಸ್ಕವರಿ ಚಾನೆಲ್ ಗಳು ನಮ್ಮ ಬೆರಳ ತುದಿಯಲ್ಲೇ ನಲಿಯುತ್ತಿರುವಾಗ, ಅದಕ್ಕಿಂತ ಅಪ್ಪು ಇನ್ನೇನು ಮಾಡುವುದಕ್ಕೆ ಸಾಧ್ಯ? ಅಂತ ಅನಿಸಿದ್ದೂ ಇದೆ. ಪುನೀತ್ ಡ್ಯಾನ್ಸ್, ಪುನೀತ್ ಡೈಲಾಗ್, ಪುನೀತ್ ನಟನೆ, ಪುನೀತ್ ನಗುವನ್ನು ಬೆಳ್ಳಿ ಪರದೆಯಲ್ಲಿ ನೋಡಿ, ಕಣ್ತುಂಬಿಕೊಂಡಿರುವ ಅಭಿಮಾನಿಗಳು, ಇದ್ಯಾವುದೂ ಇಲ್ಲದ ಕಾಡು ಮೇಡುಗಳನ್ನು ನೋಡುವುದಕ್ಕೆ ಇಷ್ಟ ಪಡುತ್ತಾರಾ ಅಂತ ಚರ್ಚೆ ಮಾಡಿದ್ದೂ ಇದೆ. ಆದರೆ, ಅದೆಲ್ಲದರ ಆಚೆ ಗಂಧದ ಗುಡಿ ಹೊಸ ಅನುಭವವನ್ನು ನೀಡುತ್ತದೆ.

    ಸಿನಿಮಾ ಕೊಡುವ ಥ್ರಿಲ್ ಗಿಂತ ಅಪ್ಪು ಇಲ್ಲಿ ಹೊಸ ಅನುಭೂತಿಯನ್ನು ಕಟ್ಟಿ ಕೊಡ ಯತಿ ಡೆತ್ ಕಟ್ಟಿ ಕೊಡುತ್ತಾರೆ. ಅವರು ಬೆಟ್ಟ ಹತ್ತಿದರೇ ನಾವೇ ಬೆಟ್ಟ ಹತ್ತಿದಷ್ಟು ಖುಷಿ, ಅವರು ಕಾಡಲ್ಲಿ ನಡೆದು ಹೊರಟರೇ ಅವರನ್ನು ನಾವೇ ಹಿಂಬಾಲಿಸುವಂತಹ ಅನುಭವ, ನಡು ನಡುವೆ ಅಪ್ಪು ಮಾತು, ತಮಾಷೆ, ಭಯ ಎಲ್ಲವೂ ಇಷ್ಟ ಇಷ್ಟ.

    ಆನೆ, ಹುಲಿ, ಕರಡಿ, ಚಿರತೆ, ಕಪ್ಪೆ, ಹಾವು, ಚೇಳು, ಜಿಂಕೆ, ಪಾತರಗಿತ್ತಿ, ಮೀನು, ಮೊಸಳೆ ಅಬ್ಬಬ್ಬಾ ಎಷ್ಟೊಂದು ಪಾತ್ರಗಳು? ಅವಕ್ಕೆ ನಟನೆ ಕಲಿಸಿದವರಾರು, ಹಾಡು ಹೇಳಿಕೊಟ್ಟವರು ಯಾರು? ಅವು ಏಕೆ ಹಾಗೆ ಜೀವಿಸುತ್ತವೆ? ಇವೆಲ್ಲ ಪ್ರಶ್ನೆಗಳು ಪುನೀತ್ ಉತ್ತರ ಕೊಡುತ್ತಾ, ಕೊಡಿಸುತ್ತಾ ಸಾಗುತ್ತಾರೆ. ಇದೇ ಗಂಧದ ಗುಡಿಯ ಬ್ಯುಟಿ.

    ಕರ್ನಾಟಕ ಸಂಸ್ಕೃತಿಗಳ ತವರು. ಕಾಡು ಮೇಡುಗಳ ನಾಡು, ಆರಾಧನೆಗಳ ಬೀಡು. ಎಲ್ಲವನ್ನೂ 96 ನಿಮಿಷಗಳಲ್ಲಿ ಹಿಡಿದಿಟ್ಟು ನಮ್ಮನ್ನು ಹೊಸ ಲೋಕಕ್ಕೆ ಕರೆದುಕೊಂಡು ಹೋಗುತ್ತಾರೆ. ನಿರ್ದೇಶಕ ಅಮೋಘ ವರ್ಷ, ಕ್ಯಾಮರಾ ಟೀಮ್, ಹಿನ್ನೆಲೆ ಸಂಗೀತ ಈ ಗಂಧದ ಗುಡಿಯ ಘಮವನ್ನು ಮತ್ತಷ್ಟು ಹೆಚ್ಚಿಸಿದೆ.

    Live Tv
    [brid partner=56869869 player=32851 video=960834 autoplay=true]

  • ‘ಗಂಧದ ಗುಡಿ’ಗಾಗಿ ಫಸ್ಟ್ ಟೈಮ್ ಧ್ವನಿದಾನ ಮಾಡಿದ ಅಶ್ವಿನಿ ಪುನೀತ್ ರಾಜ್‌ಕುಮಾರ್

    ‘ಗಂಧದ ಗುಡಿ’ಗಾಗಿ ಫಸ್ಟ್ ಟೈಮ್ ಧ್ವನಿದಾನ ಮಾಡಿದ ಅಶ್ವಿನಿ ಪುನೀತ್ ರಾಜ್‌ಕುಮಾರ್

    ಪುನೀತ್ ರಾಜ್‌ಕುಮಾರ್ ಕನಸಿನ ಪ್ರಾಜೆಕ್ಟ್ ಗಂಧದ ಗುಡಿ (Gandhad Gudi) ಇನ್ನೇನು ಬಿಡುಗಡೆಗೆ ಸಿದ್ಧವಾಗಿದೆ. ಇದೇ ತಿಂಗಳು 28 ರಂದು ದೇಶಾದ್ಯಂತ ಹಲವು ಭಾಷೆಗಳಲ್ಲಿ ಬಿಡುಗಡೆ ಆಗುತ್ತಿದೆ. ಅದಕ್ಕೂ ಮುನ್ನ ಬೆಂಗಳೂರಿನ ಅರಮನೆ ಮೈದಾನದಲ್ಲಿ ಅದ್ಧೂರಿಯಾಗಿ ಪ್ರಿ ರಿಲೀಸ್ ಇವೆಂಟ್ ಆಯೋಜನೆ ಮಾಡಿದೆ. ಭಾರತೀಯ ಸಿನಿಮಾ ರಂಗದ ಅನೇಕ ಗಣ್ಯರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಹೀಗೆ ಗಂಧದ ಗುಡಿಗೆ ಏನೆಲ್ಲ ಶಕ್ತಿ ತುಂಬಬೇಕೋ ಆ ಕೆಲಸವನ್ನು ಪುನೀತ್ ಅವರ ಪತ್ನಿ ಅಶ್ವಿನಿ (Ashwini Puneeth) ಮಾಡುತ್ತಿದ್ದಾರೆ.

    ಗಂಧದ ಗುಡಿ ವಿಚಾರವಾಗಿ ಪುನೀತ್ (Puneeth Rajkumar) ಅಭಿಮಾನಿಗಳಿಗೆ ಮತ್ತೊಂದು ಸಿಹಿ ಸುದ್ದಿ ಕೊಟ್ಟಿರುವ ಅಶ್ವಿನಿ ಅವರು, ಇದೇ ಮೊದಲ ಬಾರಿಗೆ ಹಿನ್ನೆಲೆ ಧ್ವನಿ ನೀಡಿದ್ದಾರೆ. ಗಂಧದ ಗುಡಿಯ ಆಶಯವನ್ನು ಸ್ವತಃ ಅಶ್ವಿನಿ ಪುನೀತ್ ರಾಜ್‌ಕುಮಾರ್ ಅವರೇ ಹೇಳಿದ್ದಾರಂತೆ. ಹಾಗಾಗಿ ಈ ಡಾಕ್ಯುಮೆಂಟರಿ (Documentary) ಮಾದರಿ ಸಿನಿಮಾದಲ್ಲಿ ಡಾ.ರಾಜ್‌ಕುಮಾರ್, ಪುನೀತ್ ರಾಜ್‌ಕುಮಾರ್ ಹಾಗೂ ಅಶ್ವಿನಿ ರಾಜ್‌ಕುಮಾರ್ ಧ್ವನಿಯನ್ನು (Voiceover) ಕೇಳಬಹುದಾಗಿದೆ. ಇದನ್ನೂ ಓದಿ:ರೂಪೇಶ್-ಸಾನ್ಯ ಲವ್‌ಸ್ಟೋರಿಯಲ್ಲಿ ಹೊಸ ಟ್ವಿಸ್ಟ್: ಗುರೂಜಿ ಸೊಸೆಯಂತೆ ಸಾನ್ಯ

    ಪ್ರಿ ರಿಲೀಸ್ ಇವೆಂಟ್‌ಗಾಗಿ ಈಗಿನಿಂದಲೇ ಬೆಂಗಳೂರಿನ ಅರಮನೆ ಮೈದಾನ ಸಿದ್ಧವಾಗುತ್ತಿದೆ. ಸಾವಿರಾರು ಅಭಿಮಾನಿಗಳು ಈ ಕಾರ್ಯಕ್ರಮದಲ್ಲಿ ಭಾಗಿ ಆಗುತ್ತಿದ್ದು, ಭಾರತೀಯ ಸಿನಿಮಾ ರಂಗದ ದಿಗ್ಗಜರು ಈ ಇವೆಂಟ್‌ಗೆ ಸಾಕ್ಷಿಯಾಗಲಿದ್ದಾರೆ. ಅಲ್ಲದೇ, ಕನ್ನಡದ ಬಹುತೇಕ ನಟ-ನಟಿಯರು ಹಾಗೂ ತಂತ್ರಜ್ಞರಿಗೆ ಈಗಾಗಲೇ ಆಹ್ವಾನ ನೀಡಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೂ ರಾಜ್ ಕುಟುಂಬ ಆಹ್ವಾನ ನೀಡಿದೆ.

    ಗಂಧದ ಗುಡಿ ಟೀಸರ್ ಈಗಾಗಲೇ ರಿಲೀಸ್ ಆಗಿದ್ದು, ಅನೇಕರು ಟೀಸರ್ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಪುನೀತ್ ವೃತ್ತಿ ಜೀವನದಲ್ಲಿ ಇದೊಂದು ಅಪರೂಪದ ಸಿನಿಮಾ ಆಗಲಿದೆ ಎಂದು ವಿಶ್ಲೇಷಿಸಿದ್ದಾರೆ. ನಾಡಿನ ಕಾಡು, ಜಲ ಸಂಪತ್ತು, ಜೀವ ಸಂಪತ್ತು ಹಾಗೂ ಕಾಡು ಪ್ರಾಣಿಗಳ ಹೊಸ ಲೋಕವನ್ನೇ ಈ ಸಿನಿಮಾದಲ್ಲಿ ಪುನೀತ್ ರಾಜ್‌ಕುಮಾರ್ ಹಿಡಿದಿಟ್ಟಿದ್ದಾರೆ. ಪುನೀತ್ ರಾಜ್‌ಕುಮಾರ್ ನಟನೆಯ ಕೊನೆ ಸಿನಿಮಾ ಇದಾಗಿದೆ.

    Live Tv
    [brid partner=56869869 player=32851 video=960834 autoplay=true]