Tag: ಅಸನಿ ಚಂಡಮಾರುತ

  • ಅಸನಿ ಎಫೆಕ್ಟ್‌ನಿಂದ ಬಿಟ್ಟು ಬಿಡದೆ ಮಳೆ –  ಡೆಂಗ್ಯೂ, ಮಲೇರಿಯಾ, ಚಿಕನ್ ಗುನ್ಯಾ ಹೆಚ್ಚಳ ಭೀತಿ

    ಅಸನಿ ಎಫೆಕ್ಟ್‌ನಿಂದ ಬಿಟ್ಟು ಬಿಡದೆ ಮಳೆ – ಡೆಂಗ್ಯೂ, ಮಲೇರಿಯಾ, ಚಿಕನ್ ಗುನ್ಯಾ ಹೆಚ್ಚಳ ಭೀತಿ

    ಬೆಂಗಳೂರು: ರಾಜ್ಯದಲ್ಲಿ ಕಳೆದ ಒಂದು ವಾರದಿಂದ ವರುಣನ ಆರ್ಭಟ ಜೋರಿದೆ. ದಿನಕಳೆದಂತೆ ಸಾಂಕ್ರಾಮಿಕ ರೋಗಗಳ ಭೀತಿ ಹೆಚ್ಚಾಗ್ತಾ ಇದೆ ಈಗಾಗಿ ಆರೋಗ್ಯ ಇಲಾಖೆ ಮೂರು ಖಾಯಿಲೆಗಳ ಬಗ್ಗೆ ಎಚ್ಚರವಹಿಸುವಂತೆವ ಅಲರ್ಟ್ ಮಾಡ್ತಿದೆ.

    ರಾಜ್ಯದಲ್ಲಿ ಬಿರು ಬೇಸಿಗೆ ಮಧ್ಯೆ ವರುಣನ ಆರ್ಭಟ ಹೆಚ್ಚಾಗ್ತಿದೆ. ಇದರ ಮಧ್ಯೆ ಮತ್ತೊಂದು ಆತಂಕವೂ ಸೃಷ್ಟಿ ಆಗಿದೆ. ಅದೇ ಸಾಂಕ್ರಾಮಿಕ ರೋಗಗಳ ಹರಡುವ ಭೀತಿ. ಈ ಬಗ್ಗೆ ಈಗಾಗಲೇ ಆರೋಗ್ಯ ಇಲಾಖೆ ಎಚ್ಚರಿವಹಿಸುವಂತೆ ಸಾರ್ವಜನಿಕರಿಗೆ ಸೂಚಿಸಿದೆ. ಮಳೆಗಾಲ ಆರಂಭ ಹಿನ್ನೆಲೆ ಪ್ರಮುಖವಾಗಿ ಡೆಂಗ್ಯೂ, ಚಿಕನ್ ಗುನ್ಯ ಮತ್ತು ಮಲೇರಿಯಾ ಬಗ್ಗೆ ಜನರಿಗೆ ಜಾಗೃತಿ ಮೂಡಿಸ್ತಿದ್ದಾರೆ. ಇದನ್ನೂ ಓದಿ: ಕೊರೊನಾಗೂ ಟೊಮ್ಯಾಟೊ ಫ್ಲೂಗೂ ಸಂಬಂಧವಿಲ್ಲ, ಇದು ಈಗಾಗಲೇ ಇರುವ ಕಾಯಿಲೆ: ಸುಧಾಕರ್‌

    ಆರೋಗ್ಯ ಇಲಾಖೆ ಡೆಂಗ್ಯೂ, ಚಿಕನ್ ಗುನ್ಯಾ, ಮಲೇರಿಯಾ ವಿರುದ್ಧ ಮುನ್ನೆಚ್ಚರಿಕಾ ಕ್ರಮಗಳನ್ನ ಬಿಡುಗಡೆ ಮಾಡಿದೆ. ಮನೆ ಮುಂದೆ ನೀರು ನಿಂತುಕೊಳ್ಳದಂತೆ ಸ್ವಚ್ಛತೆ ಕಾಪಾಡಬೇಕು. ನಿಂತ ನೀರು ಸೊಳ್ಳೆಗಳ ಉತ್ಪತ್ತಿ ತಾಣವಾಗದಂತೆ ಕಟ್ಟೆಚ್ಚರ ವಹಿಸಬೇಕು. ನೀರು ಸಂಗ್ರಹಿಸುವ ಡ್ರಮ್‍ಗಳನ್ನು ಮುಚ್ಚಳದಿಂದ ಮುಚ್ಚಿಡಬೇಕು. ನೀರು ಸಂಗ್ರಹ ತೊಟ್ಟಿ, ಡ್ರಮ್‍ಗಳನ್ನು ವಾರಕ್ಕೊಮ್ಮೆ ಸ್ವಚ್ಛಗೊಳಿಸಬೇಕು. ಸ್ವಯಂ ರಕ್ಷಣಾ ವಿಧಾನಗಳನ್ನ ಬಳಸಿ. ಸೊಳ್ಳೆ ಪರದೆ ಮತ್ತು ಸೊಳ್ಳೆ ನಿರೋಧಕಗಳನ್ನ ಬಳಸಬೇಕು.

    ಮಲೇರಿಯಾ ಮತ್ತು ಡೆಂಗ್ಯೂ ಕೇಸ್‍ಗಳ ಸಂಖ್ಯೆ ಹೆಚ್ಚಾಗ್ತಿದ್ದು ತಕ್ಷಣವೇ ಮುನ್ನೆಚ್ಚರಿಕಾ ಕ್ರಮ ವಹಿಸದಿದ್ದರೆ ಅಪಾಯ ಎಂದು ವೈದ್ಯರು ತಿಳಿಸಿದ್ದಾರೆ. ಒಟ್ಟಾರೆ ಮಳೆಗಾಲ ಆರಂಭದ ಹೊತ್ತಲ್ಲೆ ಸಾಂಕ್ರಾಮಿಕ ರೋಗಗಳ ಬಗ್ಗೆ ಮುನ್ನೆಚ್ಚರಿಕಾ ಕ್ರಮ ವಹಿಸಲು ಆರೋಗ್ಯ ಇಲಾಖೆ ಜನರ ಜಾಗೃತಿ ಮೂಡಿಸ್ತಾ ಇದೆ. ಜನ ಇದನ್ನ ಎಷ್ಟರ ಮಟ್ಟಿಗೆ ಪಾಲನೇ ಮಾಡ್ತಾರೋ ಕಾದು ನೋಡಬೇಕಿದೆ.

  • ಅಸನಿ ಚಂಡಮಾರುತದಿಂದಾಗಿ ಬೆಂಗಳೂರಲ್ಲಿ ಇಂದು ಸಹ ವಾತಾವರಣ ಕೂಲ್ ಕೂಲ್

    ಅಸನಿ ಚಂಡಮಾರುತದಿಂದಾಗಿ ಬೆಂಗಳೂರಲ್ಲಿ ಇಂದು ಸಹ ವಾತಾವರಣ ಕೂಲ್ ಕೂಲ್

    ಬೆಂಗಳೂರು: ಅಸನಿ ಚಂಡಮಾರುತ ಎಫೆಕ್ಟ್ ನಿಂದಾಗಿ ಬೆಂಗಳೂರಿನ ವಾತಾವರಣ ಕಂಪ್ಲೀಟ್ ಕೂಲ್ ಆಗಿದೆ. ಇಂದು ಕೂಡ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಮೋಡದ ಮರೆಯಲ್ಲೇ ಸೂರ್ಯ ದೇವನ ಜಾರಿಹೋಗಲಿದ್ದಾನೆ.

    ಬಂಗಾಳಕೊಲ್ಲಿಯನ್ನ ತೀವ್ರ ವಾಯುಭಾರ ಕುಸಿತದಿಂದ ಉಂಟಾಗಿರುವ ಅಸನಿ ಚಂಡಮಾರುತದ ಎಫೆಕ್ಟ್ ನಿಂದ ರಾಜ್ಯದ ಹಲವು ಕಡೆ ಜೋರು ಮಳೆ ಆಗ್ತಿದೆ. ಬೆಂಗಳೂರಿನಲ್ಲೂ ಚಂಡಮಾರುತದ ಪರಿಣಾಮ ಬೇಸಿಗೆ ಬೇಗೆಯಿಂದ ತತ್ತರಿಸಿದ್ದ ಜನರಿಗೆ ತಂಪೆರೆದಿದೆ. ನಗರದಲ್ಲಿ ನೆನ್ನೆಯಿಂದಲೂ ಸಹ ಮೋಡ ಕವಿದ ವಾತಾವರಣವಿದೆ. ನಿನ್ನೆ ನಗರದ ಬಹು ಭಾಗಗಳಲ್ಲಿ ಗಾಳಿ ಜೊತೆಗೆ ತುಂತುರು ಮಳೆ ಆಗಿತ್ತು. ಇಂದು ಸಹ ಅಂತಹದ್ದೆ ಪರಿಸ್ಥಿತಿ ಮುಂದುವರೆಯುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದನ್ನೂ ಓದಿ: ಅಸನಿ ಸೈಕ್ಲೋನ್ ಎಫೆಕ್ಟ್ – 3 ದಿನ ಮಳೆ ಸಂಭವ

    ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಜೊತೆಗೆ ಗುಡುಗು, ಮಿಂಚು ಸಹಿತ ಮಳೆಯ ಎಚ್ಚರಿಕೆ ನೀಡಲಾಗಿದೆ. ಜೊತೆಗೆ ಗಾಳಿಯ ವೇಗ ಸಹ ಹೆಚ್ಚಾಗುವ ಸಾಧ್ಯತೆ ಇದೆ. ಬೆಂಗಳೂರು ಹೊರತು ಪಡಿಸಿ ರಾಜ್ಯದ ದಕ್ಷಿಣ ಮತ್ತು ಉತ್ತರ ಒಳನಾಡು ಹಾಗೂ ಕರಾವಳಿ ಭಾಗದಲ್ಲೂ ಅನೇಕ ಕಡೆ ಅಸನಿ ಎಫೆಕ್ಟ್ ಇರಲಿದೆ. ಜೊತೆಗೆ ಮುಂದಿನ ಮೂರು ದಿನಗಳ ಮಳೆ ಎಚ್ಚರಿಕೆಯನ್ನು ಸಹ ನೀಡಿದ್ದು, ಮನೆಯಿಂದ ಅನವಶ್ಯಕವಾಗಿ ಆಚೆ ಬರುವವರು ಕೊಂಚ ಯೋಚಿಸಿ ಆಚೆ ಬಂದ್ರೆ ಒಳ್ಳೆಯದು.

    ಒಟ್ಟಾರೆ ಬೇಸಿಗೆಯ ಬಿಸಿಲಿನಿಂದ ಬಸವಳಿದಿದ್ದ ಬೆಂಗಳೂರನ್ನ ಅಸನಿ ಕೂಲ್ ಮಾಡಿದೆ.

  • ಅಸನಿ ಸೈಕ್ಲೋನ್ ಎಫೆಕ್ಟ್ – 3 ದಿನ ಮಳೆ ಸಂಭವ

    ಅಸನಿ ಸೈಕ್ಲೋನ್ ಎಫೆಕ್ಟ್ – 3 ದಿನ ಮಳೆ ಸಂಭವ

    ಬೆಂಗಳೂರು: ಅಸನಿ ಚಂಡಮಾರುತದ ಎಫೆಕ್ಟ್ ರಾಜ್ಯದಲ್ಲಿ ವ್ಯಾಪಕ ಮಳೆ ಆಗ್ತಿದೆ. ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಯಲ್ಲಿ ಮಳೆ ಮುಂದುವರಿದಿದೆ.

    ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ರಾಮೇಶ್ವರ ಬಂಡೆ ಗ್ರಾಮದಲ್ಲಿ ಮರ ಬಿದ್ದು ಇಬ್ಬರಿಗೆ ಗಂಭೀರ ಗಾಯ. ಅಲ್ಲದೇ ಮನೆಯ ಮುಂದೆ ನಿಲ್ಲಿಸಿದ್ದ ಟ್ರಾಕ್ಟರ್ ಹಾಗೂ ಬೈಕ್ ಮೇಲೆ ಮರ ಬಿದ್ದಿದೆ. ಭತ್ತ, ಮಾವು, 14 ಎಕರೆಯ ಪಪ್ಪಾಯ ಬೆಳೆಗಳ ಸಂಪೂರ್ಣ ಹಾನಿ ಆಗಿದೆ.

    ಕೊಪ್ಪಳದಲ್ಲಿ ಅರ್ಧಗಂಟೆ ಸುರಿದ ಮಳೆಗೆ ಮನೆಯ ತಗಡುಗಳು ಹಾರಿ ಹೋಗಿದೆ. ಕೊಪ್ಪಳ ತಾಲೂಕಿನ ಟನಕನಕಲ್ ಗ್ರಾಮದಲ್ಲಿ ಸುಮಾರು 40ಕ್ಕೂ ಹೆಚ್ಚು ಮನೆಗಳಿಗೆ ಹಾನಿ ಆಗಿದೆ. ಸಂಸದ ಸಂಗಣ್ಣ ಕರಡಿ ಸಹೋದರನಿಗೆ ಸೇರಿದ 12 ಎಕರೆ ಪಪ್ಪಾಯಿ ತೋಟ ಸಂಪೂರ್ಣ ಹಾನಿ ಆಗಿದೆ. ಇದನ್ನೂ ಓದಿ: ಧ್ವನಿವರ್ಧಕ ಬಳಕೆಗೆ ನಿಯಮ ಜಾರಿ – ಮಾರ್ಗಸೂಚಿಯಲ್ಲಿ ಏನಿದೆ?

    ಕೋಲಾರದಲ್ಲೂ ಮಳೆ ಆಗಿದ್ದು, ಶ್ರೀನಿವಾಸಪುರ ತಾಲೂಕಿನ ಕಂಬಾಲಪಲ್ಲಿ ಗ್ರಾಮದಲ್ಲಿ ವಿದ್ಯುತ್ ಕಂಬಗಳು ನೆಲಕ್ಕುರುಳಿವೆ. ಹಸುವಿನ ಕೊಟ್ಟಿಗೆಗಗಳಿಗೆ ಹಾನಿ ಆಗಿದೆ. ಇತ್ತ ಚಿತ್ರದುರ್ಗದಲ್ಲಿ ಮಳೆಯಿಂದಾಗಿ ಹಾನಿ ಉಂಟಾಗಿದ್ದು ಸೂಕ್ತ ಪರಿಹಾರಕ್ಕಾಗಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಬಳಿ ರೈತ ಮಹಿಳೆಯೊಬ್ಬರು ಅಂಗಲಾಚಿದ್ರು. ಮಳೆ ಗಾಳಿಗೆ ಏನು ಮಾಡಲು ಸಾಧ್ಯ, ಅತ್ತರೆ ಸಮಸ್ಯೆ ಪರಿಹಾರ ಆಗಲ್ಲ ಎಂದು ಶಾಸಕಿ ಸಮಾಧಾನ ಪಡಿಸಿದ್ರು. ಇದನ್ನೂ ಓದಿ: ಸ್ಥಳೀಯ ಸಂಸ್ಥೆ ಚುನಾವಣೆ – ಸುಪ್ರೀಂ ಕೋರ್ಟ್ ಆದೇಶ ಅಧ್ಯಯನಕ್ಕೆ ಸಿಎಂ ಸೂಚನೆ

  • ಅಸನಿ ಚಂಡಮಾರುತದ ಎಫೆಕ್ಟ್ – ಬೆಂಗಳೂರಿನಲ್ಲಿ ಎರಡು ದಿನಗಳ ಕಾಲ ಮಳೆ

    ಅಸನಿ ಚಂಡಮಾರುತದ ಎಫೆಕ್ಟ್ – ಬೆಂಗಳೂರಿನಲ್ಲಿ ಎರಡು ದಿನಗಳ ಕಾಲ ಮಳೆ

    ಬೆಂಗಳೂರು: ಅಸನಿ ಚಂಡಮಾರುತದ ಪರಿಣಾಮವಾಗಿ ನಗರದಲ್ಲಿ ಎರಡು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

    ಹವಾಮಾನ ಇಲಾಖೆ ವಿಜ್ಞಾನಿ ಪ್ರಸಾದ್ ಪ್ರತಿಕ್ರಿಯಿಸಿ, ಅಸನಿ ಚಂಡಮಾರುತದ ತೀವ್ರತೆಯಿಂದಾಗಿ ಮಳೆಯಾಗುವ ವೇಳೆ ಗಾಳಿ ಹೆಚ್ಚಾಗಲಿದ್ದು, ಗುಡುಗು ಹಾಗೂ ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನಲ್ಲಿ ಅತಿಯಾಗಿ ಮಳೆಯಾಗಲಿದ್ದು, ಸೈಕ್ಲೋನ್‍ನಿಂದಲೇ ನಗರದಲ್ಲಿ ಮೋಡ ಕವಿದ ವಾತಾವರಣವಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಯುವಮೋರ್ಚಾ ಸಭೆಯಲ್ಲಿ ದ್ರಾವಿಡ್ ಭಾಗಿಯಾಗಲಿದ್ದಾರೆ: ಬಿಜೆಪಿ ಶಾಸಕ

    bengaluru weather

    ಬುಧವಾರ ಸಹಿತ ಮೋಡ ಕವಿದ ವಾತಾವರಣ ಹೀಗೆಯೇ ಇರಲಿದೆ. ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ದಕ್ಷಿಣ ಒಳನಾಡು ಬಿಟ್ಟು ಬೇರೆ ಎಲ್ಲ ಕಡೆ ಮಳೆ ಬರಲಿದೆ. ಮುಂದಿನ ಮೂರು ದಿನಗಳು ಬಹುತೇಕ ಕಡೆ ಮಳೆ ಸಾಧ್ಯತೆಯಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ವಂಶಾಡಳಿತ ರಾಜಕಾರಣಕ್ಕೆ ಬಿಜೆಪಿಯಲ್ಲಿ ಸ್ಥಾನವಿಲ್ಲ: ಜ್ಯೋತಿರಾದಿತ್ಯ ಸಿಂಧಿಯಾ

  • ಮೇ10 ರಿಂದ ಒಡಿಶಾ, ಬಂಗಾಳ, ಆಂಧ್ರಪ್ರದೇಶದಲ್ಲಿ ಭಾರೀ ಮಳೆ ಸಾಧ್ಯತೆ

    ಮೇ10 ರಿಂದ ಒಡಿಶಾ, ಬಂಗಾಳ, ಆಂಧ್ರಪ್ರದೇಶದಲ್ಲಿ ಭಾರೀ ಮಳೆ ಸಾಧ್ಯತೆ

    ನವದೆಹಲಿ: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆ ಭಾನುವಾರ ಸಂಜೆ ವೇಳೆಗೆ ಅಸನಿ ಚಂಡಮಾರುತವು ಗಂಟೆಗೆ 75 ಕಿ.ಮೀ. ವೇಗದಲ್ಲಿ ಉತ್ತರ ಪ್ರದೇಶ ಮತ್ತು ಒಡಿಶಾ ಕರಾವಳಿಗೆ ಅಪ್ಪಳಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

    ಮಂಗಳವಾರದಿಂದ ಒಡಿಶಾ, ಪಶ್ಚಿಮ ಬಂಗಾಳ ಮತ್ತು ಆಂಧ್ರಪ್ರದೇಶದ ಪ್ರತ್ಯೇಕ ಸ್ಥಳಗಳಲ್ಲಿ ಅಸನಿ ಚಂಡಮಾರುತದಿಂದ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದೆ. ಭಾನುವಾರ ಸಂಜೆಯವರೆಗೆ ಸೈಕ್ಲೋನಿಕ್ ಚಂಡಮಾರುತದ ರೂಪದಲ್ಲಿದ್ದು, ನಂತರ ಚಂಡಮಾರುತ ತೀವ್ರಗೊಂಡು ಮೇ10ರವರೆಗೂ ಇರಲಿದೆ. ಮೇ 11 ಮತ್ತು 12 ರಂದು ಮತ್ತೊಂದು ಚಂಡಮಾರುತವಾಗಿ ಪರಿಣಮಿಸುತ್ತದೆ. ಇದನ್ನೂ ಓದಿ:  ಉಕ್ರೇನ್‌ಗೆ ಬ್ರಿಟನ್‌ನಿಂದ ಮತ್ತೆ 12 ಸಾವಿರ ಕೋಟಿ ಮಿಲಿಟರಿ ನೆರವು

    ಮಂಗಳವಾರ ಸಂಜೆಯಿಂದ ಮಳೆ ಆರಂಭವಾಗಲಿದ್ದು, ಒಡಿಶಾದ ಗಜಪತಿ, ಗಂಜಾಂ ಮತ್ತು ಪುರಿ 3 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಮತ್ತು ಬುಧವಾರ ಜಗತ್‍ಸಿಂಗ್‍ಪುರ, ಪುರಿ, ಖುರ್ದಾ, ಕಟಕ್ ಮತ್ತು ಗಂಜಾಂ ಎಂಬ 5 ಜಿಲ್ಲೆಗಳಿಗೆ ಭಾರೀ ಮಳೆಯಾಗಲಿದೆ ಎಂದು ಎಚ್ಚರಿಕೆ ನೀಡಲಾಗಿದೆ. ಇದನ್ನೂ ಓದಿ: ಬಿಜೆಪಿ ಮುಖಂಡ ತಜೀಂದರ್ ಪಾಲ್ ಸಿಂಗ್ ಬಗ್ಗಾಗೆ ಸದ್ಯಕ್ಕಿಲ್ಲ ಬಂಧನ

  • ವಾಯುಭಾರ ಕುಸಿತದಿಂದ ಬಂಗಾಳಕೊಲ್ಲಿಯಲ್ಲಿ ‘ಅಸನಿ’ ಚಂಡಮಾರುತ

    ವಾಯುಭಾರ ಕುಸಿತದಿಂದ ಬಂಗಾಳಕೊಲ್ಲಿಯಲ್ಲಿ ‘ಅಸನಿ’ ಚಂಡಮಾರುತ

    ಟುಟಿಕೋರಿನ್: ವಾಯುಭಾರ ಕುಸಿತದಿಂದ ಬಂಗಾಳಕೊಲ್ಲಿಯಲ್ಲಿ ಭಾನುವಾರ ‘ಅಸನಿ’ ಚಂಡಮಾರುತವಾಗಲಿದೆ ಎಂದು ತಜ್ಞರು ಸೂಚನೆ ಕೊಟ್ಟಿದ್ದಾರೆ.

    ಮಾರ್ಚ್ 21ಕ್ಕೆ ಅಂಡಮಾನ್ ಮತ್ತು ನಿಕೋಬರ್ ದ್ವೀಪಕ್ಕೆ ‘ಅಸನಿ’ ಚಂಡಮಾರುತ ಅಪ್ಪಳಿಸುತ್ತೆ ಎಂದು ಭಾರತೀಯ ಹವಾಮಾನ ಇಲಾಖೆ(ಐಂಡಿ) ಮುನ್ಸೂಚನೆಯನ್ನು ಕೊಟ್ಟಿದೆ. ಇದನ್ನೂ ಓದಿ: ಭಗವದ್ಗೀತೆ ಯಾವುದೇ ಧಾರ್ಮಿಕ ಗ್ರಂಥವಲ್ಲ: ಪ್ರತಾಪ್ ಸಿಂಹ

    ʼಅಸನಿ’ ಚಂಡಮಾರುತ ಮೊದಲು ಅಂಡಮಾನ್ ಮತ್ತು ನಿಕೋಬರ್‌ ನಲ್ಲಿ ಪ್ರಾರಂಭವಾಗಿ ಉತ್ತರಾಭಿಮುಖವಾಗಿ ಸಾಗಲಿದ್ದು, ಬಾಂಗ್ಲಾದೇಶ ಮತ್ತು ಮ್ಯಾನ್ಮಾರ್ ಉತ್ತರ ಕರಾವಳಿಯತ್ತ ಬರುತ್ತೆ ಎಂದು ಸೂಚನೆ ಕೊಟ್ಟಿದೆ.

    Cyclone Asani, First In 2022, To Form Over Bay Of Bengal Next Week; All You Need To Know

    ಈ ಹಿನ್ನೆಲೆ ಬಂಗಾಳಕೊಲ್ಲಿ ಮತ್ತು ಅಂಡಮಾನ್ ಸಮುದ್ರದಲ್ಲಿ ಮೀನುಗಾರರು ಮಾರ್ಚ್ 20 ರಿಂದ ಮೂರು ದಿನಗಳ ಕಾಲ ಮೀನುಗಾರಿಕೆ ಮಾಡಬಾರದು ಎಂದು ಎಚ್ಚರಿಕೆ ಕೊಟ್ಟಿದೆ. ಅದರಲ್ಲಿಯೂ ಅಂಡಮಾನ್ ಮತ್ತು ನಿಕೋಬರ್ ದ್ವೀಪದ ತೀರ ಪ್ರದೇಶಗಳಲ್ಲಿ ಜನರು ಎಚ್ಚರಿಕೆಯಿಂದ ಇರಬೇಕು ಎಂದು ಘೋಷಣೆ ಮಾಡಬೇಕು. ಆಯಕಟ್ಟಿನ ಪ್ರದೇಶದಲ್ಲಿ ವಿಪತ್ತು ನಿರ್ವಹಣಾ ತಂಡಗಳನ್ನು ನಿಯೋಜಿಸಬೇಕು ಎಂದು ಸಂಸದ ಕುಲದೀಪ್ ರೈ ಅಗ್ರಹಿಸಿದ್ದಾರೆ. ಇದನ್ನೂ ಓದಿ: ಭಗವದ್ಗೀತೆ ಅಳವಡಿಸುವುದು ಕೊರೊನಾ ಮಹಾಮಾರಿಗಿಂತ ಮಾರಕ: ತನ್ವೀರ್ ಸೇಠ್

    ಮಾರ್ಚ್ 19(ಇಂದು) ಮತ್ತು 21ರಂದು ಶಾಲಾ ಕಾಲೇಜಯಗಳಿಗೆ ರಜೆ ಫೋಷಿಸುವಂತೆ ಲೆಫ್ಟಿನೆಂಟ್ ಗವರ್ನರ್ ನಿವೃತ್ತ ಅಡ್ಮಿರಲ್ ಡಿ.ಕೆ.ಜೋಶಿಗೆ ಪತ್ರ ಬರೆದಿದ್ದಾರೆ.