Tag: ಅಸ್ಪೃಶ್ಯತೆ

  • ಕೊಪ್ಪಳದಲ್ಲಿ ಅಸ್ಪೃಶ್ಯತೆ ಆಚರಣೆಗೆ ಗಲಭೆ ಕೇಸ್: 101 ಜನರನ್ನು ತಪ್ಪಿತಸ್ಥರು ಎಂದು ತೀರ್ಪು ನೀಡಿದ ನ್ಯಾಯಾಲಯ

    ಕೊಪ್ಪಳದಲ್ಲಿ ಅಸ್ಪೃಶ್ಯತೆ ಆಚರಣೆಗೆ ಗಲಭೆ ಕೇಸ್: 101 ಜನರನ್ನು ತಪ್ಪಿತಸ್ಥರು ಎಂದು ತೀರ್ಪು ನೀಡಿದ ನ್ಯಾಯಾಲಯ

    ಕೊಪ್ಪಳ: 10 ವರ್ಷಗಳ ಹಿಂದೆ ನಡೆದಿದ್ದ ಪ್ರಕರಣವೊಂದರಲ್ಲಿ ಭಾಗಿಯಾಗಿದ್ದ 101 ಜನರನ್ನು ತಪ್ಪಿತಸ್ಥರು ಎಂದು ನ್ಯಾಯಾಲಯ ಇಂದು (ಅ.22) ತೀರ್ಪು ನೀಡಿದೆ.

    ಅಸ್ಪೃಶ್ಯತೆ ಆಚರಣೆಯ ಹಿನ್ನೆಲೆಯಲ್ಲಿ 10 ವರ್ಷಗಳ ಹಿಂದೆ ನಡೆದ ಗಲಭೆಯಲ್ಲಿ ಭಾಗಿಯಾದ 101 ಜನರ ವಿರುದ್ಧ ಆರೋಪ ಸಾಬೀತಾಗಿದ್ದು, ಅ.24ರಂದು ಆರೋಪಿಗಳಿಗೆ ಶಿಕ್ಷೆಯ ಪ್ರಮಾಣವನ್ನು ನ್ಯಾಯಾಧೀಶರು ಪ್ರಕಟಿಸಲಿದ್ದಾರೆ.ಇದನ್ನೂ ಓದಿ: ಸ್ಟೈಲೀಶ್ ಆಗಿ ಸೀರೆಯುಟ್ಟು ಹಾಟ್ ಆಗಿ ಕಾಣಿಸಿಕೊಂಡ ನಿಶ್ವಿಕಾ‌ ನಾಯ್ಡು

    2014ರಲ್ಲಿ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಮರಕುಂಬಿ ಗ್ರಾಮದಲ್ಲಿ ಹೊಟೇಲ್ ಹಾಗೂ ಕ್ಷೌರದ ಅಂಗಡಿಯನ್ನು ಧ್ವಂಸ ಮಾಡಿದ್ದರು. ಜೊತೆಗೆ ದಲಿತ ಕೇರಿಯ 4 ಗುಡಿಸಲುಗಳನ್ನು ಸುಟ್ಟು ಹಾಕಿದ್ದರು. ಈ ಕುರಿತು ಗಂಗಾವತಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಇದೇ ವೇಳೆ ದಲಿತರ ಮೇಲೆಯೂ ಪ್ರಕರಣ ದಾಖಲಿಸಲಾಗಿತ್ತು. ಇದೀಗ ಘಟನೆಯಲ್ಲಿ ಭಾಗಿಯಾದ 117 ಜನರಲ್ಲಿ 101 ಜನರ ಮೇಲಿನ ಆರೋಪ ಸಾಬೀತಾಗಿದೆ. ಇದರಿಂದಾಗಿ ಭಾರಿ ಪ್ರಮಾಣದಲ್ಲಿ ಆರೋಪಿಗಳನ್ನು ಜೈಲಿಗಟ್ಟಿದ್ದಾರೆ.

    ಈ ಪ್ರಕರಣದ ವಿಚಾರಣೆ ನಡೆಸಿದ ಕೊಪ್ಪಳ (Koppala) ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಪ್ರಕರಣದ ಆರೋಪ ಸಾಬೀತಾಗಿದೆ ಎಂದು ತೀರ್ಮಾನಿಸಿದ್ದಾರೆ. ಅದರಲ್ಲಿ ಕೆಲವರು ಸಾವನ್ನಪ್ಪಿದ್ದು, 101 ಜನರು ಮಾತ್ರ ಜೀವಂತವಾಗಿದ್ದಾರೆ. ಅವರಲ್ಲಿ ನ್ಯಾಯಲಯಕ್ಕೆ ಹಾಜರಾಗಿದ್ದ 100 ಜನರನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ. ಅಸ್ಪೃಶ್ಯತೆಯ ಕಾರಣಕ್ಕೆ ಶಿಕ್ಷೆಯಾಗುತ್ತಿರುವುದು ಇದು ದೊಡ್ಡ ಪ್ರಕರಣವಾಗಿದೆ ಎಂದು ಅಭಿಯೋಜಕರು ತಿಳಿಸಿದ್ದಾರೆ.

    ಕೆಲವರು ಮಾಡಿರುವ ದೌರ್ಜನ್ಯದಿಂದಾಗಿ ಈಗ ಗ್ರಾಮದ ಕೆಲವು ಅಮಾಯಕರು ಶಿಕ್ಷೆ ಅನುಭವಿಸುವಂತಾಗಿದೆ. ದಲಿತರ ಮೇಲಿನ ದೌರ್ಜನ್ಯಕ್ಕೆ ಈಗ ಶಿಕ್ಷೆಯಾಗುತ್ತಿದೆ. ನ್ಯಾಯಲಯದ ತೀರ್ಪಿಗೆ ಎಲ್ಲರೂ ಬದ್ಧರಾಗಿರಬೇಕು. ಮುಂದಿನ ದಿನಗಳಲ್ಲಿ ಅಮಾಯಕರು ಹೊರಬರಲಿ ಎಂದು ಗ್ರಾಮಸ್ಥರು ಹೇಳಿದ್ದಾರೆ.

    ಅ.24 ರಂದು ನ್ಯಾಯಾಧೀಶರು ಶಿಕ್ಷೆ ಪ್ರಮಾಣ ಪ್ರಕಟಿಸಲಿದ್ದು, ತೀರ್ಪಿನ ಬಗ್ಗೆ ಕುತೂಹಲವಿದೆ.ಇದನ್ನೂ ಓದಿ: ದೃಶ್ಯ ಸಿನಿಮಾ ಮಾದರಿಯಲ್ಲಿ ಗೆಳತಿಯ ಹತ್ಯೆ – ಯೋಧ ಅರೆಸ್ಟ್‌

  • ಡಿಸೆಂಬರ್‌ನಲ್ಲಿ ಅಸ್ಪೃಶ್ಯತೆ ನಿವಾರಣೆಯ ಜಾಗೃತಿ ಸಮಾವೇಶ – ಏನಿದು ವಿನಯ ಸಾಮರಸ್ಯ ಯೋಜನೆ

    ಡಿಸೆಂಬರ್‌ನಲ್ಲಿ ಅಸ್ಪೃಶ್ಯತೆ ನಿವಾರಣೆಯ ಜಾಗೃತಿ ಸಮಾವೇಶ – ಏನಿದು ವಿನಯ ಸಾಮರಸ್ಯ ಯೋಜನೆ

    ಬೆಂಗಳೂರು: ಅಸ್ಪೃಶ್ಯತೆ (Untouchability) ನಿವಾರಣೆಗಾಗಿ ರೂಪಿಸಲಾಗಿರುವ ವಿನಯ ಸಾಮರಸ್ಯ ವಿನೂತನ ಯೋಜನೆಯ ಬೃಹತ್ ಸಮಾವೇಶ ಡಿಸೆಂಬರ್ ತಿಂಗಳಲ್ಲಿ ಹಮ್ಮಿಕೊಂಡಿರುವುದಾಗಿ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ (kota srinivas poojary) ತಿಳಿಸಿದ್ದಾರೆ.

    ಅನಾರೋಗ್ಯದಿಂದ ಶಸ್ತ್ರಚಿಕಿತ್ಸೆಗೆ ಒಳಗಾಗಿ ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅವರು, ವಿನಯ ಸಾಮರಸ್ಯ ಯೋಜನೆಯ (Vinaya Samarasya Yojana) ಚಾಲನಾ ಸಮಾವೇಶ ಸಂಬಂಧ ಇಲಾಖೆ ಅಧಿಕಾರಿಗಳೊಂದಿಗೆ ವೀಡಿಯೋ ಸಂವಾದ ಮೂಲಕ ಸಭೆ ನಡೆಸಿದರು. ಅಸ್ಪೃಶ್ಯತೆ ನಿವಾರಣೆಗಾಗಿ ಇಲಾಖೆಯಿಂದ ರೂಪಿಸಿರುವ ವಿನೂತನ ವಿನಯ ಸಾಮರಸ್ಯ ಯೋಜನೆಗೆ ವಿದ್ಯುಕ್ತವಾಗಿ ಚಾಲನೆ ನೀಡಬೇಕಿದ್ದು, ಡಿಸೆಂಬರ್ ತಿಂಗಳ ಎರಡನೇ ವಾರದಲ್ಲಿ ಬೃಹತ್ ಸಮಾವೇಶ ಹಮ್ಮಿಕೊಳ್ಳಲು ಸಿದ್ಧತೆ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಇದನ್ನೂ ಓದಿ: ಪುರುಷರು ಜೊತೆಯಲ್ಲಿರದಿದ್ದರೆ ಮಹಿಳೆಯರಿಗಿಲ್ಲ ಜಾಮಾ ಮಸೀದಿ ಪ್ರವೇಶ

    kota srinivas poojary

    ಅಸ್ಪೃಶ್ಯತೆಯಂತಹ ಅನಿಷ್ಠ ಪದ್ಧತಿಯನ್ನು ಅನುಭವಿಸುವವರಿಗಿಂತ ಅನುಸರಿಸುವವರಿಗೆ ಜಾಗೃತಿ ಮೂಡಿಸಬೇಕಿದೆ. ಈ ಹಿನ್ನೆಲೆಯಲ್ಲಿ ಪರಿಶಿಷ್ಟೇತರ ಸಮುದಾಯಗಳ ಧುರೀಣರು, ಮಠಾಧಿಪತಿಗಳು, ಧಾರ್ಮಿಕ ಮುಖಂಡರನ್ನು ಸಮಾವೇಶಕ್ಕೆ ಆಹ್ವಾನಿಸಬೇಕು. ಈ ಮೂಲಕ ಸಮಾಜದಲ್ಲಿನ ಅಸ್ಪೃಶ್ಯತೆ ನಿವಾರಣೆಯ ಜಾಗೃತಿ ಸಮಾವೇಶ ಅರ್ಥಪೂರ್ಣವಾಗಿ ಯಶಸ್ವಿಯಾಗಬೇಕು ಎಂದಿದ್ದಾರೆ. ಇದನ್ನೂ ಓದಿ: ಹಿಂದೂ ಸಂಘಟನೆಗಳನ್ನು ಟಾರ್ಗೆಟ್ ಮಾಡಲಾಗ್ತಿದ್ದು, ದೇವರ ದಯೆಯಿಂದ ಇದು ಸಾಧ್ಯವಾಗಲಿಲ್ಲ: ಸಿಟಿ ರವಿ

    ಬೆಂಗಳೂರು ಅಥವಾ ಕೊಪ್ಪಳದಲ್ಲಿ ಸಮಾವೇಶ ಹಮ್ಮಿಕೊಳ್ಳುವ ಬಗ್ಗೆ ಸದ್ಯದಲ್ಲಿಯೇ ಸ್ಥಳ ಹಾಗೂ ದಿನಾಂಕ ಅಂತಿಮಗೊಳಿಸಲಾಗುವುದು. ಬೃಹತ್ ಸಮಾವೇಶದಲ್ಲಿ ಮುಖ್ಯಮಂತ್ರಿಯವರು ವಿನಯ ಸಾಮರಸ್ಯ ಯೋಜನೆಗೆ ವಿದ್ಯುಕ್ತವಾಗಿ ಚಾಲನೆ ನೀಡಲಿದ್ದಾರೆ. ಬರುವ ದಿನಗಳಲ್ಲಿ ಪ್ರತಿ ಗ್ರಾಮ ಪಂಚಾಯ್ತಿ ಹಂತದಲ್ಲೂ ಈ ಕಾರ್ಯಕ್ರಮವನ್ನು ಅನುಷ್ಠಾನಕ್ಕೆ ತರಬೇಕಿದ್ದು, ಇಲಾಖೆಯ ಅಧಿಕಾರಿಗಳು ಕಾರ್ಯಕ್ರಮ ಅನುಷ್ಠಾನಕ್ಕೆ ಸಿದ್ಧತೆ ಮಾಡಿಕೊಳ್ಳಬೇಕು ಹಾಗೂ ಚಾಲನಾ ಸಮಾವೇಶ ಅರ್ಥಪೂರ್ಣ ಕಾರ್ಯಕ್ರಮವಾಗಿಸುವ ಮೂಲಕ ಯಶಸ್ವಿಗೊಳಿಸಲು ಶ್ರಮಿಸಬೇಕೆಂದು ಹೇಳಿದ್ದಾರೆ.

    ಏನಿದು ವಿನಯ ಸಾಮರಸ್ಯ ಯೋಜನೆ?
    2021ರ ಸೆಪ್ಟೆಂಬರ್‍ನಲ್ಲಿ ಕೊಪ್ಪಳ ಜಿಲ್ಲೆ ಮಿಯಾಪುರದಲ್ಲಿ ದಲಿತ ಸಮುದಾಯದ ನಾಲ್ಕು ವರ್ಷದ ಬಾಲಕ ವಿನಯ್ ಮಾರುತಿ ದೇವಸ್ಥಾನ ಪ್ರವೇಶಿಸಿದ್ದನು. ಇದರಿಂದ ಗ್ರಾಮದ ಸವರ್ಣಿಯರು ಬಾಲಕನ ಪೋಷಕರಿಗೆ 25 ಸಾವಿರ ರೂ. ದಂಡ ವಿಧಿಸಿ ಊರಿಂದ ಭಹಿಷ್ಕರಿಸಿದ್ದರು. ಸುದ್ದಿ ತಿಳಿದ ಜಿಲ್ಲಾಡಳಿತ ಹಾಗೂ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರು ಗ್ರಾಮಕ್ಕೆ ಭೇಟಿ ನೀಡಿ ಸಮಸ್ಯೆ ಬಗೆಹರಿಸಿದ್ದರು. ಅಲ್ಲದೇ ಪ್ರಸಕ್ತ ಸಾಲಿನ ಆಯವ್ಯಯದಲ್ಲಿ ವಿನಯ್ ಹೆಸರಿನಲ್ಲಿ ಅಸ್ಪೃಶ್ಯತೆ ನಿವಾರಣೆಯ ವಿನಯ ಸಾಮರಸ್ಯ ಯೋಜನೆಯನ್ನು ಸರ್ಕಾರ ಘೋಷಿಸಿದೆ.

    Live Tv
    [brid partner=56869869 player=32851 video=960834 autoplay=true]

  • ಅಸ್ಪೃಶ್ಯತೆ, ಮತಾಂತರದ ಕುರಿತು ಪರಿಷತ್‍ನಲ್ಲಿ ಚರ್ಚೆ

    ಅಸ್ಪೃಶ್ಯತೆ, ಮತಾಂತರದ ಕುರಿತು ಪರಿಷತ್‍ನಲ್ಲಿ ಚರ್ಚೆ

    ಬೆಂಗಳೂರು: ಅಸ್ಪೃಶ್ಯರ ಸ್ಥಿತಿಗತಿ, ಮತಾಂತರಕ್ಕೆ ಕಾರಣಗಳೇನು. ಸಂವಿಧಾನ ಬದ್ಧ ಹಕ್ಕುಗಳು ಅವಕಾಶಗಳಿಂದ ಅಸ್ಪೃಶ್ಯರು ವಂಚಿತವಾಗುತ್ತಿರುವ ಕುರಿತು ಬೆಳಕು ಚೆಲ್ಲುವ ಅರ್ಥಪೂರ್ಣ ಚರ್ಚೆ ವಿಧಾನ ಪರಿಷತ್ ಕಲಾಪದಲ್ಲಿ ನಡೆಯಿತು.

    ವಿಧಾನ ಪರಿಷತ್ ಕಲಾಪ ಆರಂಭಗೊಳ್ಳುತ್ತಿದ್ದಂತೆ ಸಂವಿಧಾನದ ಮೇಲಿನ ಚರ್ಚೆಗೆ ಸಭಾಪತಿ ಪ್ರತಾಪ್ ಚಂದ್ರಶೆಟ್ಟಿ ಅವಕಾಶ ನೀಡಿದರು. ಕಾಂಗ್ರೆಸ್ ಸದಸ್ಯ ಧರ್ಮಸೇನಾ ಮಾತನಾಡಿ, ಇಂದು ಕೂಡ ಮತಾಂತರ ಆಗುತ್ತಿದೆ. ಯಾಕೆ ಆಗುತ್ತಿದೆ ಎನ್ನುವ ಹಿನ್ನಲೆ ಹುಡುಕಬೇಕಿದೆ ಎಂದರು.

    1976-77ರಲ್ಲಿ ತಮಿಳುನಾಡಿನ ವೈದ್ಯನಾಥೇಶ್ವರ ಕೋಯಲ್‍ನಲ್ಲಿ ದಲಿತರು ಸಾಮೂಹಿಕ ಮತಾಂತರಕ್ಕೆ ಮುಂದಾಗಿದ್ದರು. ಆಗ ಅಂದಿನ ಪ್ರಧಾನಿ ಇಂದಿರಾಗಾಂಧಿ ಮತಾಂತರ ಬೇಡ ಎಂದು ಕಠಿಣ ಸಂದೇಶ ನೀಡುತ್ತಾರೆ. ಆದರೂ ಅಲ್ಲಿನ ದಲಿತರು ನಾವು ಇಲ್ಲಿ ಉಳಿಯಲ್ಲ. ಬೌದ್ಧ ಧರ್ಮ ಸ್ವೀಕಾರ ಮಾಡುತ್ತೇವೆ ಎಂದಾಗ ವೈದ್ಯನಾಥೇಶ್ವರ ಕೋಯಲ್‍ಗೆ ಬಾಬು ಜಗಜೀವನ್ ರಾಮ್‍ರನ್ನು ಕಳಿಸಿಕೊಟ್ಟರು. ಅವರು ತಿಳಿಹೇಳಿ ಮತಾಂತರ ತಪ್ಪಿಸಿದರು. ಈಗಲೂ ನನ್ನ ಕ್ಷೇತ್ರವಾದ ಟಿ.ನರಸೀಪುರಲ್ಲಿ ಬಹಳ ಜನ ಮತಾಂತರ ಆಗುತ್ತಿದ್ದಾರೆ. ಅಲ್ಲಿ ಯಾರೂ ಕ್ರಿಶ್ಚಿಯನ್ ಇಲ್ಲ. ಕ್ರಿಶ್ಚಿಯನ್‍ಗೆ ಮತಾಂತರದವರೇ ಇದ್ದಾರೆ. ಅಸ್ಪೃಶ್ಯರಿಗೆ ರಕ್ಷಣೆ ಇಲ್ಲದ ಕಾರಣಕ್ಕೆ ಹೀಗಾಗುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದರು.

    ಅಸ್ಪೃಶ್ಯತೆ ನಿವಾರಣೆಗೆ ಕಾಂಗ್ರೆಸ್ ಏನು ಮಾಡಿತು ಎನ್ನುತ್ತಾರೆ. ಅಂದು ಹೋಟೆಲ್ ನಲ್ಲಿ ಅವರ ಲೋಟ ಅವರೇ ತೊಳೆಯಬೇಕಿತ್ತು. ದೇವಾಲಯಕ್ಕೆ ಪ್ರವೇಶ ಇರಲಿಲ್ಲ. ಇದೆಲ್ಲ ಕಾಂಗ್ರೆಸ್ ತೊಡೆದು ಹಾಕಿದೆ ಎಂದರು. ಅಸ್ಪೃಶ್ಯತೆ ನಡೆದಾಗ ಆ ಜವಾಬ್ದಾರಿ ಶಾಸಕರೇಕೆ ತೆಗೆದುಕೊಳ್ಳಲ್ಲ. ಕ್ಷೇತ್ರ ನನ್ನದು ಎನ್ನುವ ಶಾಸಕ, ಡಿಸಿ, ಎಸಿ, ತಹಶೀಲ್ದಾರ್, ಗ್ರಾಮ ಪಂಚಾಯತಿ ಅಧ್ಯಕ್ಷರು ಜವಾಬ್ದಾರಿ ತೆಗೆದುಕೊಳ್ಳಬೇಕು. ಧರ್ಮ ಹಾಗೂ ಸಂವಿಧಾನದಿಂದ ಅಸ್ಪೃಶ್ಯರಿಗೆ ರಕ್ಷಣೆ ಬೇಕಿದೆ. ಸಂವಿಧಾನ ತಿದ್ದುಪಡಿ ಸಾಕಷ್ಟು ಬಾರಿ ಆಗಿದೆ ಅದಕ್ಕೆ ನನ್ನದು ವಿರೋಧ ಇಲ್ಲ. ಆದರೆ ಅಸ್ಪೃಶ್ಯರಿಗೆ ಅನುಕೂಲ ಮಾಡಿಕೊಡಬೇಕು. ಕಾನೂನು ತಿದ್ದುಪಡಿ, ಸಂವಿಧಾನದ ಮೂಲಕವೇ ಒಳಮೀಸಲಾತಿ ತರಬೇಕಿದೆ ಎಂದು ಸದಾಶಿವ ಆಯೋಗ, ಒಳಮೀಸಲಾತಿ ಹೋರಾಟದ ಪ್ರಸ್ತಾಪ ಮಾಡಿದರು.

    ಇಂದು ಕೂಡ ದೇಶದ ಸಂವಿಧಾನ ಮತ್ತು ಧರ್ಮದದಿಂದ ಅಸ್ಪೃಶ್ಯರಿಗೆ ರಕ್ಷಣೆ ಇಲ್ಲದಂತಾಗಿದೆ. ಇಂತಹ ಸಂದರ್ಭದಲ್ಲಿ, ಮೀಸಲಾತಿ ತೆಗೆಯುವ ಚಿಂತನೆ ಬರುತ್ತಿದೆ. ಕೆಲವರು ಈ ಕುರಿತು ಮಾತನಾಡುತ್ತಿದ್ದಾರೆ. ಒಂದು ವೇಳೆ ಮೀಸಲಾತಿ ರದ್ದುಪಡಿಸಿದರೆ ಅಂದೇ ಪ್ರಜಾಪ್ರಭುತ್ವ ಹೊರಟು ಹೋಗಲಿದೆ ಎಂದು ಆತಂಕ ವ್ಯಕ್ತಪಡಿಸಿದರು.

    ಇದಕ್ಕೆ ಪೂರಕವಾಗಿ ಮಾತನಾಡಿದ ತೇಜಸ್ವಿನಿ ರಮೇಶ್ ಮತಾಂತರಕ್ಕೆ ಕೇವಲ ಅಸ್ಪೃಶ್ಯತೆ ಕಾರಣವಲ್ಲ. ಬಡತನ ಹಾಗೂ ಮುಗ್ಧತೆಯ ಕಾರಣಕ್ಕೆ ಮತಾಂತರ ನಡೆಯುತ್ತಿದೆ ಎಂದರು. ಈ ವೇಳೆ ಆರ್.ಬಿ ತಿಮ್ಮಾಪೂರ್, ಮೇಲ್ವರ್ಗದ ರಾಜಕಾರಣಿಗಳು ಇಂದು ಕೂಡ ಜೇಬಿನಲ್ಲಿ ಲೋಟ ಕೊಂಡೊಯ್ದು ಹೋಗಿ ಅಸ್ಪೃಶ್ಯರ ಮನೆಗಳಲ್ಲಿ ಟೀ ಹಾಕಿಸಿಕೊಂಡು ಕುಡಿಯುತ್ತಾರೆ ಅಂತಹ ಪದ್ಧತಿ ಇನ್ನು ಇದೆ ಎಂದರು.

    ಇದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಬಿಜೆಪಿ ಸದಸ್ಯ ರವಿಕುಮಾರ್, ನಾವು ಯಾವ ಕಾಲದಲ್ಲಿ ಇದ್ದೇವೆ. ನಾಚಿಕೆಯಾಗಬೇಕು. ತಮ್ಮ ಲೋಟ ತೆಗೆದುಕೊಂಡು ಹೋಗಿ ಅಸ್ಪೃಶ್ಯರ ಮನೆಯಲ್ಲಿ ಟೀ ಹಾಕಿಸಿಕೊಳ್ಳುತ್ತಾರೆ ಎಂದರೆ ಖಂಡಿಸಬೇಕು. ಇವರಿಗೆ ಮನುಷ್ಯತ್ವ ಇದೆ ಅನ್ನಬೇಕಾ? ಶಾಸಕ, ಸಂಸದ, ಮಂತ್ರಿ ಯಾರೇ ಆಗಲಿ ಇಂತಹ ಕೆಲಸ ಮಾಡಿದಲ್ಲಿ ಅದು ಖಂಡನೀಯ ಎಂದರು. ಪಕ್ಷಾತೀತವಾಗಿ ಇದರ ವಿರುದ್ಧ ಧ್ವನಿ ಕೇಳಿ ಬಂತು.

  • ಹೋಟೆಲ್‍ಗೆ ಎಂಟ್ರಿ ಕೊಡಂಗಿಲ್ಲ, ಲೋಟ ಮುಟ್ಟಂಗಿಲ್ಲ – ಕೊಪ್ಪಳದಲ್ಲಿ ಅಸ್ಪೃಶ್ಯತೆ ಜೀವಂತ

    ಹೋಟೆಲ್‍ಗೆ ಎಂಟ್ರಿ ಕೊಡಂಗಿಲ್ಲ, ಲೋಟ ಮುಟ್ಟಂಗಿಲ್ಲ – ಕೊಪ್ಪಳದಲ್ಲಿ ಅಸ್ಪೃಶ್ಯತೆ ಜೀವಂತ

    ಕೊಪ್ಪಳ: ಹೋಟೆಲಿನಲ್ಲಿ ಇನ್ನೂ ಅಸ್ಪೃಶ್ಯತೆ ಜೀವಂತವಿರುವ ಪ್ರಕರಣ ಕೊಪ್ಪಳದ ತಾಲೂಕಿನ ತಿಗರಿ ಗ್ರಾಮದಲ್ಲಿ ಬಯಲಿಗೆ ಬಂದಿದೆ.

    ಗ್ರಾಮದ ಹೋಟೆಲ್‍ಗಳಲ್ಲಿ ದಲಿತರಿಗೆ ಹೊರಗಡೆ ನಿಲ್ಲಿಸಿ ನೀರು ಹಾಕಲಾಗುತ್ತಿದೆ. ಸವರ್ಣೀಯರ ಹೋಟೆಲಿನಲ್ಲಿ ಇನ್ನೂ ಅಸ್ಪೃಶ್ಯತೆ ಜೀವಂತವಿದ್ದು, ಜಾತಿ ತಾರತಮ್ಯ ಮಾಡಲಾಗುತ್ತಿದೆ. ಹೋಟೆಲಿನಲ್ಲಿ ದಲಿತರಿಗೆ ನೀರು ಎತ್ತಿ ಹಾಕುವ ದೃಶ್ಯಗಳು ಮೊಬೈಲಿನಲ್ಲಿ ಸೆರೆಯಾಗಿದೆ. ದಲಿತರು ಹೋಟೆಲ್‍ಗಳಲ್ಲಿ ನೀರು ಮುಟ್ಟುವ ಹಾಗಿಲ್ಲ. ಹೀಗಾಗಿ ದಲಿತರಿಗೆ ಪ್ಲಾಸ್ಟಿಕ್ ಜಗ್ ಮೂಲಕ ನೀರು ಹಾಕಲಾಗುತ್ತದೆ.

    ಈ ಹೋಟೆಲಿನಲ್ಲಿ ದಲಿತರಿಗೆ ತಿನ್ನಲು ಪ್ಲೇಟ್ ಬದಲಾಗಿ ಪೇಪರ್ ಪ್ಲೇಟಿನಲ್ಲಿ ತಿಂಡಿ ಕೊಡುತ್ತಾರೆ. ಅಲ್ಲದೆ ನೀರು ಕೇಳಿದರೆ, ಮೇಲಿಂದ ಕೈಯಿಗೆ ನೀರು ಹಾಕುತ್ತಾರೆ. ಅವರಿಗೆ ಕುಡಿಯೋಕೆ ನೀರು ಕೊಡುವುದಿಲ್ಲ. ಈ ಬಗ್ಗೆ ಜಿಲ್ಲಾಡಳಿತಕ್ಕೆ ಮಾಹಿತಿ ಸಿಕ್ಕಿದ್ದು, ಜಿಲ್ಲಾಧಿಕಾರಿಗಳು ಆ ವ್ಯಕ್ತಿಯ ಮೇಲೆ ಪ್ರಕರಣ ದಾಖಲಿಸಲು ಸೂಚನೆ ನೀಡಿದ್ದಾರೆ.

    ಈ ಬಗ್ಗೆ ಪ್ರತಿಕ್ರಿಯಿಸಿದ ಡಿಸಿಎಂ ಗೋವಿಂದ ಕಾರಜೋಳ, ನಾನು ತಕ್ಷಣವೇ ಜಿಲ್ಲಾಧಿಕಾರಿ ಹಾಗೂ ಎಸ್‍ಪಿ ಜೊತೆ ಮಾತನಾಡುತ್ತೇನೆ. ಏನೇ ಸಮಸ್ಯೆ ಇದ್ದರೂ ತಕ್ಷಣ ಪರಿಹಾರ ನೀಡಬೇಕು ಎಂದು ಸೂಚನೆ ನೀಡುತ್ತೇನೆ. ಈ ರೀತಿಯ ಘಟನೆಗಳು ನಡೆಯಬಾರದು ಎಂದು ನಾನು ಅವರಿಗೆ ಹೇಳುತ್ತೇನೆ ಎಂದು ಹೇಳಿದರು.

  • ಕೊಪ್ಪಳದಲ್ಲಿ ಅಸ್ಪೃಶ್ಯತೆ ಇನ್ನೂ ಜೀವಂತ..!

    ಕೊಪ್ಪಳದಲ್ಲಿ ಅಸ್ಪೃಶ್ಯತೆ ಇನ್ನೂ ಜೀವಂತ..!

    ಕೊಪ್ಪಳ: ಆಧುನಿಕವಾಗಿ ಎಷ್ಟೇ ಮುಂದುವರಿದಿದ್ದರೂ ಅಸ್ಪೃಶ್ಯತೆ ಅನ್ನೋ ಅನಿಷ್ಠ ಪದ್ಧತಿ ಕೊಪ್ಪಳದ ಗಂಗಾವತಿ ತಾಲೂಕಿನ ಗುಡೂರು, ಹಿರೇಖೇಡ ಗ್ರಾಮದಲ್ಲಿ ಇಂದಿಗೂ ಜೀವಂತವಾಗಿದೆ.

    ದೇಶದ ಪ್ರಗತಿಗೆ ಮಾರಕವಾದ ಕೆಲ ಅನಿಷ್ಠ ಪದ್ಧತಿಗಳಲ್ಲಿ ಅಸ್ಪೃಶ್ಯತೆಯೂ ಒಂದು. ಈ ಅನಿಷ್ಟ ತಡೆಯಲು ಸ್ವಾತಂತ್ರ್ಯ ಪೂರ್ವದಿಂದಲೂ ಸಾಕಷ್ಟು ಹೋರಾಟ ನಡೆಯಿತು. ಕಾನೂನು ರಚಿಸಿದರೂ ರಾಜ್ಯದ ಹಲವೆಡೆ ಅಸ್ಪೃಶ್ಯತೆ ಪದ್ಧತಿ ಇನ್ನೂ ಜೀವಂತವಾಗಿದೆ.

    ಜಿಲ್ಲೆಯ ಕನಕಗಿರಿಯಿಂದ ಕೇವಲ 20 ಕಿಮೀ ದೂರದಲ್ಲಿರುವ ಗುಡೂರು ಗ್ರಾಮದಲ್ಲಿ ದಲಿತರಿಗೆ ಇನ್ನೂ ಹೋಟೆಲ್‍ಗಳಲ್ಲಿ ಪ್ರವೇಶವಿಲ್ಲ. ಇವತ್ತಿಗೂ ಕೂಡ ದಲಿತರು ಬೊಗಸೆಯಲ್ಲಿ ನೀರು ಕೊಡುವ ಪದ್ಧತಿ ಈ ಭಾಗದಲ್ಲಿದೆ.

    ಇಲ್ಲಿನ ಜನರು ದಲಿತರಿಗೆ ದೂರದಿಂದಲೇ ನೀರನ್ನು ಎತ್ತಿ ಹಾಕುತ್ತಾರೆ. ಅದನ್ನೇ ದಲಿತರು ಬೊಗಸೆಯಲ್ಲಿ ಕುಡಿಯುತ್ತಾರೆ. ಮೇಲ್ವರ್ಗದ ಹೋಟೆಲ್‍ನಲ್ಲಿ ದಲಿತರು ನೀರು ಮುಟ್ಟೋ ಹಾಗಿಲ್ಲ. ಹೋಟೆಲ್ ಹೊರಗಡೆ ಬಂದು ನೀರು ಹಾಕುತ್ತಿರೋ ದೃಶ್ಯವನ್ನು ಸ್ಥಳದಲ್ಲಿದ್ದವರು ತಮ್ಮ ಮೊಬೈಲ್‍ನಲ್ಲಿ ಸೆರೆ ಹಿಡಿದು ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟಿದ್ದಾರೆ.

    ವಿಡಿಯೋದಲ್ಲಿ, ಹೋಟೆಲ್‍ವೊಂದರಲ್ಲಿ ದಲಿತ ವ್ಯಕ್ತಿಯೋರ್ವನನ್ನು ಒಳಗೆ ಸೇರಿಸದೆ ದೂರದಿಂದಲೇ ಆಹಾರ ಮತ್ತು ನೀರು ಕೊಡುತ್ತಿರುವುದನ್ನು ನಾವು ಕಾಣಬಹುದಾಗಿದೆ. ಈ ರೀತಿ ಮಾಡಿದ ಹೋಟೆಲ್ ಮಾಲೀಕರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಮತ್ತೆ ಅಸ್ಪೃಶ್ಯತೆ ವಿಚಾರದಲ್ಲಿ ಸುದ್ದಿಯಾಗ್ತಿದೆ ಸಿಎಂ ಓದಿದ ಶಾಲೆ!

    ಮತ್ತೆ ಅಸ್ಪೃಶ್ಯತೆ ವಿಚಾರದಲ್ಲಿ ಸುದ್ದಿಯಾಗ್ತಿದೆ ಸಿಎಂ ಓದಿದ ಶಾಲೆ!

    ಮೈಸೂರು: ಸಿಎಂ ಸಿದ್ದರಾಮಯ್ಯ ಓದಿದ ಶಾಲೆ ಮತ್ತೆ ಅಸ್ಪೃಶ್ಯತೆ ವಿಚಾರವಾಗಿ ಸುದ್ದಿಯಾಗುತ್ತಿದೆ. ಸಿಎಂ ಹುಟ್ಟೂರು ಸಿದ್ದರಾಮನಹುಂಡಿ ಪಕ್ಕದಲ್ಲಿನ ಕುಪ್ಪೆಗಾಲ ಸರ್ಕಾರಿ ಶಾಲೆಯಲ್ಲಿ ಸಿಎಂ ಓದಿದ್ದರು. ಇದೇ ಶಾಲೆಯಲ್ಲಿ ಈಗ ಮತ್ತೆ ಅಸ್ಪೃಶ್ಯತೆ ಮರುಕಳಿಸಿದೆ.

    ಶಾಲೆಯ ಅಡುಗೆ ಸಹಾಯಕ ಹುದ್ದೆಗೆ ಪರಿಶಿಷ್ಟ ಜಾತಿಯವರು ಅರ್ಜಿಯನ್ನೇ ಹಾಕುತ್ತಿಲ್ಲ. ಅರ್ಜಿ ಹಾಕಲು ಮುಂದೆಯೂ ಬರುತ್ತಿಲ್ಲ. ಈ ಹುದ್ದೆ ಇರೋದು ಪರಿಶಿಷ್ಟ ಜಾತಿಯ ಮಹಿಳೆಯರಿಗಾಗಿ ಮಾತ್ರ. ಈ ವರ್ಷದ ಶೈಕ್ಷಣಿಕ ವರ್ಷದ ಆರಂಭದಿಂದಲೂ ಹುದ್ದೆ ಖಾಲಿಯಿದೆ.

    ಜೂನ್ ತಿಂಗಳಿನಲ್ಲಿ ಅಡುಗೆ ಸಹಾಯಕಿ ಹುದ್ದೆ ತೊರೆದು ಹೋಗಿದ್ದರು. ನಂತರ ಆ ಜಾಗಕ್ಕೆ ಅನಧಿಕೃತವಾಗಿ ಸರ್ವಣಿಯ ಮಹಿಳೆಯನ್ನು ನೇಮಕ ಮಾಡಲಾಗಿತ್ತು. ಈ ವಿಚಾರಕ್ಕೆ ಅಸಮಾಧಾನಗೊಂಡ ಗ್ರಾಮದ ದಲಿತ ಸಮುದಾಯ ಅರ್ಜಿ ಹಾಕಲು ಮುಂದೆ ಬರುತ್ತಿಲ್ಲ. ಆದರೆ, ಕೆಲ ಮುಖಂಡರ ಪ್ರಕಾರ ಅರ್ಜಿ ಸಲ್ಲಿಸಲು ಕೆಲವರು ಬಿಡುತ್ತಿಲ್ಲ ಎಂದು ಆರೋಪಿಸಿದ್ದಾರೆ.

    1000 ದಲಿತರಿರುವ ಗ್ರಾಮದಿಂದ ಒಂದೂ ಅರ್ಜಿ ಬಂದಿಲ್ಲ. ನಾವು ದಲಿತರನ್ನು ಬಿಟ್ಟು ಬೇರೆ ಜಾತಿಯವರು ನೇಮಕಕ್ಕೆ ಮುಂದಾಗಿಲ್ಲ ಎಂದು ದಲಿತ ಮುಖಂಡರ ಆರೋಪವನ್ನು ಶಾಲಾ ಮುಖ್ಯ ಶಿಕ್ಷಕ ತಳ್ಳಿ ಹಾಕಿದ್ದಾರೆ.

    ಈ ಹಿಂದೆ ದಲಿತರು ಅಡುಗೆ ಮಾಡಿ ಬಡಿಸುತ್ತಾರೆ ಎಂದು ಸರ್ವಣಿಯರು ತಕರಾರು ತೆಗೆದಿದ್ದರಿಂದ ದೊಡ್ಡ ಮಟ್ಟದ ವಿವಾದ ಸೃಷ್ಟಿಯಾಗಿತ್ತು. ಹಲವು ಬೆಳವಣಿಗೆ ನಂತರ ಪರಿಸ್ಥಿತಿ ತಿಳಿಗೊಂಡು ಶಾಲೆಯಲ್ಲಿ ದಲಿತ ಅಡುಗೆ ಸಹಾಯಕರು ಕೆಲಸ ನಿರ್ವಹಿಸಿದ್ದರು. 2014ರಲ್ಲಿ ನಡೆದಿದ್ದ ಘಟನೆಯಿಂದ ರಾಜ್ಯದಲ್ಲಿ ಸಂಚಲನ ಸೃಷ್ಟಿಸಿತ್ತು. ಈಗ ಮತ್ತೆ ಸರ್ವಣಿಯರ ನೇಮಕದಿಂದ ಅಸ್ಪೃಶ್ಯತೆ ಆಚರಣೆಯ ಆರೋಪ ಕೇಳಿಬಂದಿದೆ.

    https://www.youtube.com/watch?v=CzGc6L6BiJI

     

  • ಚಿಕ್ಕಬಳ್ಳಾಪುರದ ಈ ಗ್ರಾಮದ ದಲಿತರಿಗಿಲ್ಲ ಕ್ಷೌರ ಭಾಗ್ಯ

    ಚಿಕ್ಕಬಳ್ಳಾಪುರದ ಈ ಗ್ರಾಮದ ದಲಿತರಿಗಿಲ್ಲ ಕ್ಷೌರ ಭಾಗ್ಯ

    ಚಿಕ್ಕಬಳ್ಳಾಪುರ: ಜಿಲ್ಲಾ ಕೇಂದ್ರದಿಂದ ಕೂಗಳತೆ ದೂರದಲ್ಲಿರುವ ಮಂಚನಬೆಲೆ ಗ್ರಾಮದಲ್ಲಿ ಅಸ್ಪೃಶ್ಯತೆ ಇನ್ನೂ ತಾಂಡವಾಡುತ್ತಿದೆ. ಈ ಗ್ರಾಮದ ದಲಿತರಿಗೆ ಕ್ಷೌರ ಮಾಡುವುದಿಲ್ಲ ಹಾಗೂ ಇವರಿಗೆ ದೇವಸ್ಥಾನದ ಪ್ರವೇಶಕ್ಕೂ ನಿರ್ಬಂಧ ಹೇರಲಾಗಿದೆ.

    ಒಂದು ವರ್ಷದ ಹಿಂದೆ ಅಂದಿನ ಜಿಲ್ಲಾಧಿಕಾರಿ ಡಾ.ಎಂ.ವಿ ವೆಂಕಟೇಶ್ ಗ್ರಾಮಸ್ಥರ ಜೊತೆ ಶಾಂತಿ ಸಭೆ ನಡೆಸಿ, ದಲಿತರನ್ನ ದೇವಾಲಯಕ್ಕೆ ಪ್ರವೇಶ ಮಾಡಿಸುವುದರ ಮೂಲಕ ಅಸ್ಪೃಶ್ಯತೆಗೆ ಬ್ರೇಕ್ ಹಾಕಿಸುವ ಕೆಲಸ ಮಾಡಿಸಿದ್ದರು. ಆದ್ರೆ ಇದೀಗ ಅಸ್ಪೃಶ್ಯತೆಯ ಕರಿ ನೆರಳು ಮತ್ತೆ ಮರುಕಳುಸಿದ್ದು ಗ್ರಾಮದಲ್ಲಿನ ದಲಿತರಿಗೆ ಕ್ಷೌರ ಮಾಡಲಾಗುತ್ತಿಲ್ಲ.

    ಗ್ರಾಮದಲ್ಲಿ ಮೂರು ಕ್ಷೌರದ ಅಂಗಡಿಗಳಿದ್ದು, ದಲಿತರಿಗೆ ಕ್ಷೌರ ಮಾಡಬೇಕಾಗುತ್ತದೆ ಎಂದು ಅಂಗಡಿಗಳನ್ನು ಮುಚ್ಚಲಾಗಿದೆ. ಆದರೆ ಸವರ್ಣಿಯರಿಗೆ ಮಾತ್ರ ಕದ್ದು ಮುಚ್ಚಿ ಕ್ಷೌರ ಮಾಡಲಗುತ್ತಿದೆ ಎಂಬ ಆರೋಪ ಕೇಳಿಬರುತ್ತಿದೆ. ಹೀಗಾಗಿ ಗ್ರಾಮದ ದಲಿತರು ಚಿಕ್ಕಬಳ್ಳಾಪುರ ನಗರಕ್ಕೆ ಬಂದು ಕ್ಷೌರ ಮಾಡಿಸಿಕೊಂಡು ಹೋಗುವ ಅನಿವಾರ್ಯ ಪರಿಸ್ಥಿತಿ ನಿರ್ಮಾಣವಾಗಿದೆ.