ಮಂಗಳೂರು: ಸಿಎಂ ಸಿದ್ದರಾಮಯ್ಯ (Siddaramaiah) ಭಾಗವಹಿಸಿದ್ದ ʻಅಶೋಕ ಜನಮನ -2025ʼ ಹಾಗೂ ದೀಪಾವಳಿ ಪ್ರಯುಕ್ತ ವಸ್ತ್ರದಾನ ಕಾರ್ಯಕ್ರಮದಲ್ಲಿ ನೂಕುನುಗ್ಗಲು ಸಂಭವಿಸಿ 11ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಮಹಿಳೆಯರು ಮಕ್ಕಳು ಸೇರಿ 11ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದಾರೆ.
ಹೌದು. ಪುತ್ತೂರು ಶಾಸಕ ಅಶೋಕ್ ರೈ (Ashok Rai) ಮಾಲೀಕತ್ವದ ರೈ ಎಸ್ಟೇಟ್ ಮತ್ತು ಚಾರಿಟೇಬಲ್ ಟ್ರಸ್ಟ್ ವತಿಯಿಂದ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕು ಕ್ರೀಡಾಂಗಣದಲ್ಲಿ ʻಅಶೋಕ ಜನಮನ -2025ʼ ಹಾಗೂ ದೀಪಾವಳಿ ಪ್ರಯುಕ್ತ ವಸ್ತ್ರದಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ದೀಪಾವಳಿ ಹಿನ್ನೆಲೆ ಸಾರ್ವಜನಿಕರಿಗೆ ತಟ್ಟೆ, ವಸ್ತ್ರ ಹಂಚುವ ಕಾರ್ಯಕ್ರಮ ಇದಾಗಿತ್ತು. ಸಿಎಂ ಸಿದ್ದರಾಮಯ್ಯ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಕ್ರೀಡಾಂಗಣದಲ್ಲಿ ಸಾಮರ್ಥ್ಯಕ್ಕಿಂತ ಹೆಚ್ಚು ಜನ ಭಾಗಿಯಾಗಿದ್ದ ಹಿನ್ನೆಲೆ ನೂಕುನುಗ್ಗಲು ಉಂಟಾಗಿದೆ. ಈ ವೇಳೆ ಕೆಲವರಿಗೆ ಉಸಿರಾಟದಲ್ಲಿ ಸಮಸ್ಯೆ ಉಂಟಾಗಿದ್ದು, ಅಸ್ವಸ್ಥರಾಗಿದ್ದಾರೆ. ಪುಟ್ಟ ಪುಟ್ಟ ಮಕ್ಕಳನ್ನು ಕಂಕುಳಲ್ಲಿ ಹೊತ್ತುಬಂದಿದ್ದ ಕೆಲವರು ನೀರು ಸಿಗದೇ ಪರದಾಡಿದ್ದಾರೆ. ಇದರಿಂದ ಕೆಸರು ತುಂಬಿದ್ದ ಮೈದಾನದಲ್ಲಿ ಅವ್ಯವಸ್ಥೆ ಉಂಟಾಗಿದೆ.
ಸದ್ಯ ಅಸ್ವಸ್ಥರನ್ನ ಪುತ್ತೂರು ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತದೆ.
ಬೆಳಗಾವಿ: ಪ್ರಸಾದ ಸೇವಿಸಿ 46 ಮಂದಿ ಅಸ್ವಸ್ಥರಾಗಿದ್ದು, ಐವರ ಸ್ಥಿತಿ ಗಂಭೀರವಾದ ಘಟನೆ ಬೆಳಗಾವಿ (Belagavi) ಜಿಲ್ಲೆಯ ಸವದತ್ತಿ ತಾಲೂಕಿನ ಹೂಲಿಕಟ್ಟಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದಲ್ಲಿ ಭೀರೇಶ್ವರ ಮತ್ತು ಕರೆಮ್ಮ ಜಾತ್ರೆ ನಡೆದಿತ್ತು. ಈ ಜಾತ್ರೆಯಲ್ಲಿ ಗ್ರಾಮದ ಜನ ಅನ್ನ ಪ್ರಸಾದ ಮತ್ತು ಮನೆಯಲ್ಲಿ ಮಾವಿನ ಹಣ್ಣಿನ ಶಿಖರಣಿ ಸೇವಿಸಿದ್ದರು. ಆದರೆ ಪ್ರಸಾದ ಸೇವಿಸಿದವರಲ್ಲಿ ಇಂದು ಏಕಾಏಕಿ ವಾಂತಿ-ಭೇದಿ ಆರಂಭವಾಗಿದೆ. ಕೂಡಲೇ ಅಸ್ವಸ್ಥಗೊಂಡವರಿಗೆ ಸ್ಥಳೀಯ ಆಸ್ಪತ್ರೆ, ಸವದತ್ತಿ ಸಾರ್ವಜನಿಕ ಆಸ್ಪತ್ರೆ ಹಾಗೂ ಬೆಳಗಾವಿ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.
ತೀವ್ರ ಅಸ್ವಸ್ಥಗೊಂಡ ಐವರನ್ನ ಧಾರವಾಡ ಜಿಲ್ಲಾಸ್ಪತ್ರೆಗೆ ರವಾನಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಸದ್ಯ ಆರೋಗ್ಯ ಇಲಾಖೆ ಅಧಿಕಾರಿಗಳು ಗ್ರಾಮದಲ್ಲಿಯೇ ಬೀಡುಬಿಟ್ಟಿದ್ದಾರೆ. ಇನ್ನು ಅಹಿತಕರ ಘಟನೆ ಆಗದಂತೆ ತಾಲೂಕಾಧಿಕಾರಿಗಳು ಗ್ರಾಮದಲ್ಲಿ ಕ್ಯಾಂಪ್ ತೆರೆದು ಪ್ರತಿಯೊಬ್ಬರ ಆರೋಗ್ಯ ತಪಾಸಣೆ ಮಾಡುತ್ತಿದ್ದಾರೆ. ಈವರೆಗೂ ಯಾರಿಗೂ ಪ್ರಾಣಾಪಾಯ ಸಂಭವಿಸಿಲ್ಲ ಎಂದು ಪಬ್ಲಿಕ್ ಟಿವಿಗೆ ಡಿಎಚ್‍ಓ ಮಾಹಿತಿ ನೀಡಿದ್ದಾರೆ.
ಪ್ರಸಾದ ಸೇವಿಸಿದವರಲ್ಲಿ ವಾಂತಿ-ಭೇದಿ ಕಂಡುಬಂದ ತಕ್ಷಣವೇ ಎಲ್ಲರನ್ನೂ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಲಾಗಿದೆ. ಪ್ರತಿಗಂಟೆಗೂ ರೋಗಿಗಳ ಮಾನಿಟರ್ ಮಾಡಲಾಗುತ್ತಿದೆ. ಯಾವುದೇ ರೀತಿಯ ಸಮಸ್ಯೆ ಆಗದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ ಎಂದ ಡಿಎಚ್‍ಓ ಡಾ.ಮಹೇಶ ಕೋಣಿ ತಿಳಿಸಿದ್ದಾರೆ.
ಮಂಗಳೂರು: ಎಳನಿರು ಕುಡಿದು ಸುಮಾರು 15 ಮಂದಿ ಸಾರ್ವಜನಿಕರು ಅಸ್ವಸ್ಥಗೊಂಡ ಘಟನೆ ಮಂಗಳೂರು ನಗರ ಹೊರವಲಯದ ಅಡ್ಯಾರ್ ಬಳಿ ನಡೆದಿದೆ.
ಅಡ್ಯಾರ್‍ನಲ್ಲಿರುವ ಎಳನೀರು (Tender Coconut) ಮತ್ತು ಐಸ್ ಕ್ರೀಮ್ ಮಾರಾಟ ಸಂಸ್ಥೆಯಿಂದ ಒಂದಷ್ಟು ಮಂದಿ ಎಳನೀರು ಖರೀದಿಸಿದ್ದರು. ಈ ಎಳನೀರು ಕುಡಿದ ಬಳಿಕ ಅಡ್ಯಾರ್ ಕಣ್ಣೂರು ಮತ್ತು ತುಂಬೆ ಪರಿಸರದ ನಿವಾಸಿಗಳು ವಾಂತಿ ಮತ್ತು ಭೇದಿಯಿಂದ ಬಳಲಿದ್ದಾರೆ.
ಸದ್ಯ ಅಸ್ವಸ್ಥಗೊಂಡ ಮೂವರಿಗೆ ಮಂಗಳೂರು ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಉಳಿದ 12 ಮಂದಿ ಹೊರರೋಗಿಗಳಾಗಿ ಔಷಧಿ ಪಡೆದಿದ್ದಾರೆ. ಘಟನೆ ಬಳಿಕ ಆಸ್ಪತ್ರೆ ಹಾಗೂ ಫ್ಯಾಕ್ಟರಿಗೆ ಆರೋಗ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬೆಂಗಳೂರು: ಹನುಮ ಜಯಂತಿ (Hanuma Jayanthi) ಹಿನ್ನೆಲೆ ದೇವಾಲಯಗಳಲ್ಲಿ (Temples) ಪ್ರಸಾದ (Prasadam) ಸೇವಿಸಿ ನೂರಾರು ಜನ ಅಸ್ವಸ್ಥಗೊಂಡಿದ್ದು, ಓರ್ವ ಮಹಿಳೆ ಸಾವನ್ನಪ್ಪಿದ ಘಟನೆ ಬೆಂಗಳೂರು ಗ್ರಾಮಾಂತರ (Bengaluru Rural) ಜಿಲ್ಲೆಯ ಹೊಸಕೋಟೆ (Hoskote) ನಗರದಲ್ಲಿ ನಡೆದಿದೆ.
ಸಿದ್ದಗಂಗಮ್ಮ (65) ಸಾವನ್ನಪ್ಪಿದ ಮಹಿಳೆ. ಹನುಮ ಜಯಂತಿ ಅಂಗವಾಗಿ ಭಾನುವಾರ ಭಕ್ತರು ನಗರದ ವೆಂಕಟರಮಣಸ್ವಾಮಿ, ಊರುಬಾಗಿಲು ಆಂಜನೇಯ ಸ್ವಾಮಿ, ಕೋಟೆ ಆಂಜನೇಯ ಸ್ವಾಮಿ ದೇವಾಲಯಗಳಿಗೆ ತೆರಳಿದ್ದರು. ಅಲ್ಲಿ ಪುಳಿಯೊಗರೆ, ಪಾಯಸ ಹಾಗೂ ಲಡ್ಡನ್ನು ಪ್ರಸಾದದ ರೂಪದಲ್ಲಿ ನೆರೆದಿದ್ದ ಭಕ್ತರು ಸೇವಿಸಿದ್ದಾರೆ. ಪ್ರಸಾದ ಸೇವನೆ ಬಳಿಕ ಭಕ್ತರಿಗೆ ವಾಂತಿ ಹಾಗೂ ಭೇದಿ ಪ್ರಾರಂಭವಾಗಿದ್ದು, ನೂರಾರು ಜನ ಅಸ್ವಸ್ಥಗೊಂಡಿದ್ದಾರೆ. ಅಸ್ವಸ್ಥಗೊಂಡ ಭಕ್ತರನ್ನು ಹೊಸಕೋಟೆ ಖಾಸಗಿ ಆಸ್ಪತ್ರೆ, ಕೋಲಾರ ಹಾಗೂ ಬೆಂಗಳೂರಿನ ಆಸ್ಪತ್ರೆಗಳಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಇದನ್ನೂ ಓದಿ: ರಾಜ್ಯದ 8 ಮಂದಿಯಲ್ಲಿ JN.1 ವೈರಸ್ ಪತ್ತೆ
ಇನ್ನು ಈ ಪ್ರಕರಣದಲ್ಲಿ ಹೊಸಕೋಟೆ ನಗರದ ಕಾವೇರಿ ನಗರ ನಿವಾಸಿ ಸಿದ್ದಗಂಗಮ್ಮ ಎಂಬ ಮಹಿಳೆ ಸಾವನ್ನಪ್ಪಿದ್ದಾರೆ. ಮಹಿಳೆ ಇಂದು ಬೆಳಗ್ಗೆ ವಾಂತಿ ಭೇದಿ ಎಂದು ಆಸ್ಪತ್ರೆಗೆ ದಾಖಲಾಗಿದ್ದು, ಹೊಸಕೋಟೆಯ ಸಿಲಿಕಾನ್ ಸಿಟಿ ಆಸ್ವತ್ರೆಯಲ್ಲಿ ಮೃತಪಟ್ಟಿದ್ದಾರೆ. ಘಟನೆಯಿಂದ 15ಕ್ಕೂ ಅಧಿಕ ಜನರ ಸ್ಥಿತಿ ಗಂಭೀರವಾಗಿದ್ದು, ಸ್ಥಳಕ್ಕೆ ಹೊಸಕೋಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಗೆಳತಿ ಮೇಲೆ ಪ್ರೀತಿ; ಲಿಂಗ ಬದಲಿಸಿಕೊಂಡ್ರೂ ಮದುವೆಗೆ ಒಪ್ಪದ ಮಹಿಳಾ ಟೆಕ್ಕಿಯನ್ನ ಜೀವಂತ ಸುಟ್ಟು ಹತ್ಯೆ
ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸಕೋಟೆಯ ಖಾಸಗಿ ಆಸ್ಪತ್ರೆಗಳಲ್ಲಿ ಮೂರು ಠಾಣಾ ವ್ಯಾಪ್ತಿಯ ಜನರು ದಾಖಲಾಗಿದ್ದಾರೆ. ಅವಲಹಳ್ಳಿ, ನಂದಗುಡಿ ಹಾಗೂ ಹೊಸಕೋಟೆ ಠಾಣಾ ವ್ಯಾಪ್ತಿಯ ಜನರು ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದು, ಅಸ್ವಸ್ಥತೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಹೊಸಕೋಟೆ ಠಾಣೆ ಪೊಲೀಸರು ಸದ್ಯ ಅಸ್ವಸ್ಥಗೊಂಡವರ ಮಾಹಿತಿ ಕಲೆ ಹಾಕುತ್ತಿದ್ದಾರೆ. ಆದರೆ ತಾಲೂಕು ಆರೋಗ್ಯಾಧಿಕಾರಿಗಳಿಂದ ಪೊಲೀಸರಿಗೆ ಯಾವುದೇ ಮಾಹಿತಿ ಇಲ್ಲ. ಸದ್ಯ ಎಲ್ಲಾ ಖಾಸಗಿ ಆಸ್ಪತ್ರೆಗಳಿಂದ ಅಸ್ವಸ್ಥತೆಗೆ ಕಾರಣ ಏನು ಎಂಬ ಮಾಹಿತಿಯನ್ನು ತಾಲೂಕು ವೈದ್ಯಾಧಿಕಾರಿಗಳು ಪಡೆಯುತ್ತಿದ್ದಾರೆ. ಇದನ್ನೂ ಓದಿ: ಡ್ರಗ್ಸ್ ತೆಗೆದುಕೊಳ್ತಿದ್ದಿದ್ದಕ್ಕೆ ರಿಲೇಷನ್‍ಶಿಪ್ ಬೇಡ ಎಂದಿದ್ದೇನೆ: ಕಾರಿಯಪ್ಪ
ಈ ಕುರಿತು ಹೊಸಕೋಟೆ ಪ್ರಭಾರ ಟಿಹೆಚ್‌ಒ ಡಾ. ಸುಮಾ ಮಾಹಿತಿ ನೀಡಿದ್ದು, ಸುಮಾರು ನಾಲ್ಕು ಖಾಸಗಿ ಆಸ್ಪತ್ರೆಗಳಲ್ಲಿ 80ಕ್ಕೂ ಹೆಚ್ಚು ಜನ ದಾಖಲಾಗಿದ್ದಾರೆ. ಎಲ್ಲಾ ಸ್ಯಾಂಪಲ್‌ಗಳನ್ನು ಲ್ಯಾಬ್‌ಗೆ ಕಳುಹಿಸಲಾಗಿದೆ. ಇದರ ಬಗ್ಗೆ ಕಾರಣ ಏನು ಎಂಬುದು ಲ್ಯಾಬ್ ವರದಿ ಬಳಿಕ ಗೊತ್ತಾಗಲಿದೆ. ನೀರಿನಿಂದ ಅಥವಾ ಕೆಲವು ದೇವಸ್ಥಾನಗಳಲ್ಲಿ ಪ್ರಸಾದ ಸೇವನೆ ಮಾಡಿರುವ ಬಗ್ಗೆ ಮಾಹಿತಿ ಬಂದಿದೆ. ಇದರ ಬಗ್ಗೆ ಪರಿಶೀಲನೆ ಆಗುತ್ತಿದೆ ಎಂದರು. ಇದನ್ನೂ ಓದಿ: ಆಕ್ಸಿಡೆಂಟ್ ಆಗಿ ಕಟ್ ಆದ ತಲೆ ಮೂರೂವರೆ ಗಂಟೆ ಶೋಧದ ಬಳಿಕ ಸಿಕ್ತು..!
ಇನ್ನು ಸಿಲಿಕಾನ್ ಸಿಟಿ ಆಸ್ವತ್ರೆಗೆ ಜಿಲ್ಲಾ ಆರೋಗ್ಯ ಇಲಾಖೆ ಅಧಿಕಾರಿಗಳು (Health Department officials) ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪರಿಶೀಲನೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಡಾ. ನಾಗೇಶ್, ಶನಿವಾರ ಹಾಗೂ ಭಾನುವಾರ ಪ್ರಸಾದ ತಿಂದ ಹಿನ್ನೆಲೆ ಅಸ್ವಸ್ಥರಾಗಿರುವುದು ಪ್ರಾಥಮಿಕ ಮಾಹಿತಿಯಲ್ಲಿ ಕಂಡು ಬಂದಿದೆ. ಎಲ್ಲೆಲ್ಲಿ ಪ್ರಸಾದ ಸೇವಿಸಿದ್ದಾರೆ ಎನ್ನುವ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದೇವೆ. ನೀರಿನಿಂದಲೂ ಆಗಿರುವ ಶಂಕೆ ವ್ಯಕ್ತವಾಗಿದೆ. ಈ ಎಲ್ಲಾ ಬಗ್ಗೆ ನಮ್ಮ ಆರೋಗ್ಯ ಇಲಾಖೆ ಅಧಿಕಾರಿಗಳು ತನಿಖೆ ನಡೆಸುತ್ತಿದ್ದೇವೆ. ಈಗಾಗಲೆ 80 ಜನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸರ್ಕಾರಿ ಆಸ್ಪತ್ರೆಯಲ್ಲಿರುವವರಿಗೆ ಉಚಿತ ಚಿಕಿತ್ಸೆ ನೀಡಲಾಗುತ್ತಿದೆ. ಖಾಸಗಿ ಆಸ್ಪತ್ರೆಯಲ್ಲಿರುವವರ ಬಗ್ಗೆ ಚರ್ಚೆ ಮಾಡಿ ನಿರ್ಧಾರ ಮಾಡುತ್ತೇವೆ. ಅಗತ್ಯ ಬಿದ್ದಲ್ಲಿ ಹೆಚ್ಚಿನ ಬೆಡ್ ಹಾಗೂ ಅಂಬುಲೆನ್ಸ್‌ಗಳ ನಿಯೋಜನೆ ಮಾಡಿಕೊಂಡಿದ್ದೇವೆ ಎಂದು ತಿಳಿಸಿದರು. ಇದನ್ನೂ ಓದಿ: ಹೇಮಾವತಿ ಹಿನ್ನೀರಿನಲ್ಲಿ ಮುಳುಗಿ ಯುವತಿ ಸಾವು- ಮೃತದೇಹಕ್ಕಾಗಿ ಶೋಧ
ದಿಸ್ಪುರ್: ಅಸ್ಸಾಂನ ಮಜುಲಿ ಜಿಲ್ಲೆಯ ಗರ್ಮುರ್ ಬಳಿಯ ಮಹರಿಚುಕ್ ಪ್ರದೇಶದಲ್ಲಿ ಶುಕ್ರವಾರ ರಾತ್ರಿ ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ಪ್ರಸಾದ ಸೇವಿಸಿದ ನಂತರ 18 ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿದ್ದಾರೆ.
ಈ ಕುರಿತು ಜಿಲ್ಲಾಧಿಕಾರಿ ಪುಲಕ್ ಮಹಾಂತ್ ಮಾತನಾಡಿದ್ದು, ಸುಮಾರು 18ಕ್ಕೂ ಹೆಚ್ಚು ಜನರು ದೇವಾಯದ ಪ್ರಸಾದ ಸೇವಿಸಿ ಅಸ್ವಸ್ಥರಾಗಿದ್ದರು. ಸಂತ್ರಸ್ತ ಜನರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಸ್ತುತ ಅವರು ಸುಧಾರಿಸಿದ್ದಾರೆ ಎಂದು ವಿವರಿಸಿದ್ದಾರೆ. ಇದನ್ನೂ ಓದಿ: ಸ್ಪಾ ಮ್ಯಾನೇಜರ್, ಗ್ರಾಹಕರು ಸೇರಿ ಯುವತಿ ಮೇಲೆ ಅತ್ಯಾಚಾರ – ಪೊಲೀಸರಿಗೆ ನೋಟಿಸ್
ವೈದ್ಯರು ಈ ಕುರಿತು ಮಾಹಿತಿ ಕೊಟ್ಟಿದ್ದು, ಕಳೆದ ರಾತ್ರಿ ಹೊಟ್ಟೆ ನೋವು ಮತ್ತು ವಾಂತಿ ಎಂದು 12 ಜನರು ಆಸ್ಪತ್ರೆಗೆ ಬಂದಿದ್ದರು. ಇಂದು ಬೆಳಗ್ಗೆ ಮತ್ತೆ ಆರು ಮಂದಿಯನ್ನು ಆಸ್ಪತ್ರೆಗೆ ದಾಖಲಿಸಿಕೊಳ್ಳಲಾಗಿದೆ. ಅವರ ಸ್ಥಿತಿ ಈಗ ಸುಧಾರಿಸಿದೆ. ಇವರು ತಿಂದಿರುವ ಆಹಾರ ವಿಷಪೂರಿತವಾಗಿರಬಹುದು ಎಂದು ನಾವು ಶಂಕಿಸುತ್ತೇವೆ ಎಂದು ಸಂಶಯ ವ್ಯಕ್ತಪಡಿಸಿದ್ದಾರೆ.
ಸ್ಥಳೀಯರ ಪ್ರಕಾರ, ಗ್ರಾಮಸ್ಥರೆಲ್ಲ ಶುಕ್ರವಾರ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದೆವು. ಪ್ರಸಾದವನ್ನು ಸೇವಿಸಿದ ಕೂಡಲೇ ಹೊಟ್ಟೆನೋವು ಮತ್ತು ವಾಂತಿ ಕಾಣಿಸಿಕೊಂಡಿದೆ. ಮೂವರು ಮಕ್ಕಳು ಸೇರಿದಂತೆ 18 ಜನರನ್ನು ತಕ್ಷಣ ಶ್ರೀ ಶ್ರೀ ಪಿತಾಂಬರ ದೇವ್ ಗೋಸ್ವಾಮಿ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯಲಾಯಿತು ಎಂದು ಹೇಳಿದ್ದಾರೆ. ಇದನ್ನೂ ಓದಿ: ಐವರ ಪ್ರಾಣ ಉಳಿಸಿದೆ ಅಂಗಾಂಗ ದಾನ – ಮಗನ ಸಾವಿನಲ್ಲಿ ಸಾರ್ಥಕತೆ ಕಂಡ ಕುಟುಂಬ
Live Tv
[brid partner=56869869 player=32851 video=960834 autoplay=true]
ಬೆಳಗಾವಿ: ಕಲುಷಿತಗೊಂಡಿದ್ದ ಕುಡಿಯುವ ನೀರನ್ನು ಸೇವಿಸಿ ಅಸ್ವಸ್ಥಗೊಂಡಿದ್ದ 40 ಜನರ ಪೈಕಿ ಚಿಕಿತ್ಸೆ ಫಲಿಸದೇ ವೃದ್ಧರೊಬ್ಬರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆ ಬೆನ್ನೂರ ಗ್ರಾಮದಲ್ಲಿ ನಡೆದಿದೆ.
ಬೆಳಗಾವಿ ಜಿಲ್ಲೆಯ ರಾಮದುರ್ಗ ಸುರೇಬಾನ ಪಂಚಾಯತಿ ವ್ಯಾಪ್ತಿಯ ಬೆನ್ನೂರ ಗ್ರಾಮದಲ್ಲಿ ಕಲುಷಿತ ನೀರನ್ನು ಸೇವಿಸಿ ಸುಮಾರು 40ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದರು. ಅವರನ್ನು ರಾಮದುರ್ಗ ತಾಲೂಕಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದ್ರೆ, ಕಳೆದ ರಾತ್ರಿ ಚಿಕಿತ್ಸೆ ಫಲಿಸದೇ ಬೆನ್ನೂರ ಗ್ರಾಮದ ಬಸಪ್ಪ ಖಾನಾಪೂರ(85) ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಶಿಂಧೆ ನಿಷ್ಠಾವಂತ ಅಧಿಕಾರಿ ಕಾರಿನ ಮೇಲೆ ಶಿವಸೈನಿಕರ ದಾಳಿ
ಕಲುಷಿತ ಕುಡಿಯುವ ನೀರು ಸೇವಿಸಿದ 40ಕ್ಕೂ ಹೆಚ್ಚು ಜನ ಏಕಾಏಕಿ ವಾಂತಿಭೇದಿಯಿಂದ ಬಳಲುತ್ತಿದ್ದಾರೆ. ಸದ್ಯ ಎಲ್ಲರಿಗೂ ಚಿಕಿತ್ಸೆ ಮುಂದುವರೆದಿದ್ದು, ಇನ್ನೂ ಮೂವರ ಸ್ಥಿತಿ ಗಂಭೀರವಾಗಿದೆ. ಇತ್ತ ವೃದ್ಧನ ಸಾವಿಗೆ ಗ್ರಾಮ ಪಂಚಾಯಿತಿ ಅಧಿಕಾರಿಗಳು ಹಾಗೂ ಜೆಜಿಎಂ ಕಾಮಗಾರಿ ಮಾಡುತ್ತಿರುವ ಗುತ್ತಿಗೆದಾರರ ನಿರ್ಲಕ್ಷ್ಯವೇ ಕಾರಣ ಎನ್ನಲಾಗಿದ್ದು, ಮೃತರ ಕುಟುಂಬಕ್ಕೆ ಸರ್ಕಾರ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
Live Tv
[brid partner=56869869 player=32851 video=960834 autoplay=true]
ಬೀದರ್: ಧರಣಿ ನಿರತ ವಯೋವೃದ್ಧ ಅಸ್ವಸ್ಥಗೊಂಡ ಘಟನೆ ಬೀದರ್ ಜಿಲ್ಲೆಯ ಭಾಲ್ಕಿ ಪಟ್ಟಣದಲ್ಲಿ ನಡೆದಿದೆ.
‘ಬೇಡ ಜಂಗಮ’ ಜಾತಿ ಪ್ರಮಾಣ ಪತ್ರ ನೀಡುವಂತೆ ಜಂಗಮರು ಅಹೋ ರಾತ್ರಿ ಧರಣಿ ಸತ್ಯಾಗ್ರಹ ಮಾಡುತ್ತಿದ್ದಾರೆ. 28 ದಿನಗಳಿಂದ ಭಾಲ್ಕಿ ತಹಶಿಲ್ದಾರ್ ಕಚೇರಿ ಮುಂಭಾಗ ಜಂಗಮರು ಧರಣಿ ಸತ್ಯಾಗ್ರಹ ಮಾಡುತ್ತಿದ್ದು, ತಡರಾತ್ರಿ ಧರಣಿ ನಿರತ ರಾಚಯ್ಯ ಸ್ವಾಮಿ ವಯೋವೃದ್ಧ ಏಕಾಏಕಿ ಅಸ್ವಸ್ಥಗೊಂಡಿದ್ದಾರೆ. ಇದನ್ನೂ ಓದಿ: ಪೊಲೀಸರಿಗಿಂತ ಇಡಿಗೆ ಹೆಚ್ಚಿನ ಅಧಿಕಾರ ನೀಡಲಾಗಿದೆ: ಮೋದಿ ವಿರುದ್ಧ ಅಶೋಕ್ ಗೆಹ್ಲೋಟ್ ಕಿಡಿ
ಅಸ್ವಸ್ಥಗೊಂಡ ರಾಚಯ್ಯ ಸ್ವಾಮಿ ಅವರನ್ನು ತಕ್ಷಣವೇ ಅಂಬುಲೆನ್ಸ್ ಮೂಲಕ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಭಾಲ್ಕಿ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
28 ದಿನಗಳಿಂದ ‘ಬೇಡ ಜಂಗಮ’ ಜಾತಿ ಪ್ರಮಾಣ ಪತ್ರಕ್ಕಾಗಿ ಜಂಗಮರು ನಿರಂತರವಾಗಿ ಧರಣಿ ಸತ್ಯಾಗ್ರಹ ಮಾಡುತ್ತಿದ್ರು ಸ್ಪಂದಿಸದ ಅಧಿಕಾರಿಗಳು ಹಾಗೂ ಸರ್ಕಾರದ ವಿರುದ್ಧ ಧರಣಿ ನಿರತ ಜಂಗಮರು ತೀವ್ರ ಆಕ್ರೋಶ ವ್ಯಕ್ತ ಪಡಿಸುತ್ತಿದ್ದಾರೆ. ಇದನ್ನೂ ಓದಿ: ಕೋಮು ಪ್ರಚೋದಿಸುತ್ತಿದ್ದ ದೆಹಲಿ ಮೂಲದ ಓರ್ವ ಸೇರಿ ಇಬ್ಬರು ಅರೆಸ್ಟ್
Live Tv
[brid partner=56869869 player=32851 video=960834 autoplay=true]
ಶಿವಮೊಗ್ಗ: ಬೇರೆ-ಬೇರೆ ಕಾಯಿಲೆಗೆ ತುತ್ತಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸುಮಾರು 14 ಮಕ್ಕಳು ಆ್ಯಂಟಿ-ಬಯೋಟಿಕ್ ಇಂಜೆಕ್ಷನ್ ಪಡೆದ ನಂತರ ಅಸ್ವಸ್ಥಗೊಂಡ ಘಟನೆ ಸಾಗರದ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ.
ಆಸ್ಪತ್ರೆಗೆ ದಾಖಲಾಗಿದ್ದ ಮಕ್ಕಳಿಗೆ ಸಂಜೆ ವೇಳೆ ಆಸ್ಪತ್ರೆಯ ದಾದಿ ಆ್ಯಂಟಿ-ಬಯೋಟಿಕ್ ಇಂಜೆಕ್ಷನ್ ನೀಡಿದ್ದಾರೆ. ಇಂಜೆಕ್ಷನ್ ಕೊಟ್ಟ ತಕ್ಷಣ ಮಕ್ಕಳು ಚಳಿ-ಚಳಿ ಎಂದು ನಡುಗುತ್ತ ಅಸ್ವಸ್ಥಗೊಂಡಿದ್ದಾರೆ. ತೀವ್ರ ಅಸ್ವಸ್ಥಗೊಂಡ 4 ಮಕ್ಕಳನ್ನು ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿದೆ. ಇನ್ನುಳಿದ ಮಕ್ಕಳಿಗೆ ಉಪವಿಭಾಗೀಯ ಆಸ್ಪತ್ರೆಯಲ್ಲೇ ಚಿಕಿತ್ಸೆ ಮುಂದುವರಿಸಲಾಗಿದೆ. ಇದನ್ನೂ ಓದಿ: ಸ್ಟಾರ್ ನಟರ ಸಿನಿಮಾ ನಿರ್ಮಾಣ ಮಾಡಿದ್ದ ಖ್ಯಾತ ನಿರ್ಮಾಪಕನ ಕಾರು ಅಪಘಾತ
ಘಟನೆ ನಂತರ ಮಕ್ಕಳ ಪೋಷಕರು, ಆಸ್ಪತ್ರೆ ಸಿಬ್ಬಂದಿ ಹಾಗೂ ವೈದ್ಯರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಶಾಸಕ ಹರತಾಳು ಹಾಲಪ್ಪ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಘಟನೆ ಬಗ್ಗೆ ಪೋಷಕರು ಹಾಗೂ ವೈದ್ಯರಿಂದ ಮಾಹಿತಿ ಪಡೆದರು.
ರಾಯಚೂರು: ನಗರಸಭೆ ಸರಬರಾಜು ಮಾಡುವ ನೀರನ್ನು ಕುಡಿದು ನೂರಾರು ಜನ ಹಾಗೂ ಮಕ್ಕಳು ಆಸ್ಪತ್ರೆಗೆ ದಾಖಲಾಗಿದ್ದು, ಕಲುಷಿತ ನೀರು ಕುಡಿದ ಓರ್ವ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ ಘಟನೆ ನಡೆದಿದೆ.
ನಗರದ ಇಂದಿರಾನಗರ ನಿವಾಸಿ ಮಲ್ಲಮ್ಮ(40) ನಿರ್ಜಲೀಕರಣದಿಂದ ಸಾವನ್ನಪ್ಪಿದ ಮಹಿಳೆ. ಇನ್ನೂ ರಿಮ್ಸ್ ಆಸ್ಪತ್ರೆಯಲ್ಲಿ 60 ಕ್ಕೂ ಹೆಚ್ಚು ಜನ ದಾಖಲಾಗಿದ್ದಾರೆ. ಅವರಲ್ಲಿ ಹಲವರಿಗೆ ಕಿಡ್ನಿ ಸಮಸ್ಯೆ ಎದುರಾಗಿದೆ. ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ನಿರ್ಜಲೀಕರಣದ ರೋಗಿಗಳ ಸಂಖ್ಯೆ ಹೆಚ್ಚುತ್ತಲೇ ಇದೆ.
ನಿರ್ಜಲೀಕರಣದಿಂದ ಖಾಸಗಿ ಆಸ್ಪತ್ರೆಗಳಲ್ಲೂ ಸಾಕಷ್ಟು ಸಂಖ್ಯೆಯಲ್ಲಿ ದಾಖಲಾಗುತ್ತಿದ್ದಾರೆ. ಇದರಲ್ಲಿ 23ಕ್ಕೂ ಹೆಚ್ಚು ಚಿಕ್ಕಮಕ್ಕಳು ವಾಂತಿ, ಭೇದಿಯಿಂದ ಬಳಲುತ್ತಿದ್ದಾರೆ. ಕಲುಷಿತ ನೀರು ಕುಡಿದ ಹಿನ್ನೆಲೆ ಹಲವರಲ್ಲಿ ಮೂತ್ರಪಿಂಡ ಸಮಸ್ಯೆ ಎದುರಾಗಿದೆ. ರೋಗಿಗಳಿಗೆ ಡಯಾಲೈಸಿಸ್ ಮಾಡಲಾಗುತ್ತಿದೆ. ಆಸ್ಪತ್ರೆಗಳಲ್ಲಿ ನಿರ್ಜಲೀಕರಣ ಸಮಸ್ಯೆಯಿಂದ ಬಳಲುತ್ತಿರುವ ರೋಗಿಗಳಿಂದಲೇ ವಾರ್ಡ್‍ಗಳು ತುಂಬುತ್ತಿವೆ. ನಗರಸಭೆಯ ನಿರ್ಲಕ್ಷ್ಯಕ್ಕೆ ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಪಠ್ಯ ಪುಸ್ತಕದ ಪರಿಷ್ಕರಣೆ- ಅನುಮತಿ ಹಿಂತೆಗೆದುಕೊಂಡ ಮತ್ತಿಬ್ಬರು ಸಾಹಿತಿಗಳು
ಕಳೆದ ಒಂದು ವಾರದಿಂದ ಕಲುಷಿತ ನೀರನ್ನು ಕುಡಿದ ಕಾರಣಕ್ಕೆ ಜನ ತೊಂದರೆ ಅನುಭವಿಸುತ್ತಿದ್ದಾರೆ. ಚಿಕ್ಕಮಕ್ಕಳು ಹಾಗೂ ದೊಡ್ಡವರಿಗೆ ಅಗತ್ಯ ಚಿಕಿತ್ಸೆಯನ್ನು ನೀಡುತ್ತಿದ್ದೇವೆ ಎಂದು ರಿಮ್ಸ್ ವೈದ್ಯರು ತಿಳಿಸಿದ್ದಾರೆ. ಕೆಲವರಿಗೆ ರಕ್ತದೊತ್ತಡ ನಿಯಂತ್ರಣವಾಗುತ್ತಿದ್ದರೂ, ಕಿಡ್ನಿ ಮೇಲೆ ಪರಿಣಾಮ ಬೀರುತ್ತಿದೆ. ಕಲುಷಿತ ನೀರು ಕುಡಿದ ಹಿನ್ನೆಲೆ ಮೂವರಲ್ಲಿ ಮೂತ್ರಪಿಂಡ ಸಮಸ್ಯೆ ಎದುರಾಗಿದೆ. ಒಬ್ಬರಿಗೆ ಡಯಾಲೈಸಿಸ್ ಮಾಡಲಾಗುತ್ತಿದೆ ಎಂದು ರಿಮ್ಸ್ ವೈದ್ಯರು ಮಾಹಿತಿ ನೀಡಿದರು. ಇದನ್ನೂ ಓದಿ:130 ಕೋಟಿ ಜನರಿಗೆ ನಾನು ಸೇವಕನಷ್ಟೇ: ನರೇಂದ್ರ ಮೋದಿ
ಹೆಸರಿಗೆ ಮಾತ್ರ ರಾಯಚೂರಿನಲ್ಲಿ ಕುಡಿಯುವ ನೀರಿನ ಶುದ್ಧೀಕರಣ ಘಟಕಗಳಿವೆ. ಆದರೆ ನಗರಸಭೆಯ ನಿರ್ಲಕ್ಷ್ಯದಿಂದ ಘಟಕ ನಿರ್ವಹಣೆ ಮಾಡದೆ ಕಲುಷಿತ ನೀರನ್ನೇ ಸರಬರಾಜು ಮಾಡಲಾಗುತ್ತಿದೆ. ಕನಿಷ್ಠ ಈಗಲಾದರೂ ಜಿಲ್ಲಾಡಳಿತ ಹಾಗೂ ನಗರಸಭೆ ಎಚ್ಚೆತ್ತುಕೊಳ್ಳಬೇಕು ಅಂತ ಸಾರ್ವಜನಿಕರು ಆಕ್ರೋಶಗೊಂಡಿದ್ದಾರೆ.
ಬಳ್ಳಾರಿ: ಹೋಟೆಲ್‍ನಲ್ಲಿ ಇಡ್ಲಿ ತಿಂದು 15 ಮಂದಿ ಅಸ್ವಸ್ಥಗೊಂಡಿರುವ ಘಟನೆ ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲೂಕಿನ ಕುರುವಳ್ಳಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಹೋಟೆಲ್‍ನಲ್ಲಿ ಇಡ್ಲಿ ತಿಂದು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಬೆಳಗ್ಗೆಯಿಂದ ಪ್ರಾಥಮಿಕ ಆರೋಗ್ಯ ಕೆಂದ್ರದಲ್ಲಿ ಚಿಕಿತ್ಸೆ ಪಡೆದರು. ನಂತರ ಇದೀಗ ಎಲ್ಲರನ್ನೂ ಸಿರಗುಪ್ಪ ತಾಲೂಕು ಸರ್ಕಾರಿ ಅಸ್ಪತ್ರೆಗೆ ದಾಖಲು ಮಾಡಲಾಗಿದೆ.