Tag: ಅಸ್ವಸ್ಥ

  • ಕೇಕ್ ತಿಂದು ಮಂಡ್ಯದ 5 ಮಕ್ಕಳು ಅಸ್ವಸ್ಥ

    ಕೇಕ್ ತಿಂದು ಮಂಡ್ಯದ 5 ಮಕ್ಕಳು ಅಸ್ವಸ್ಥ

    ಮಂಡ್ಯ: ಕೇಕ್ ತಿಂದು 5 ಮಕ್ಕಳು ವಾಂತಿ ಭೇದಿಯಿಂದ ನರಳಾಡಿದಂತ ಘಟನೆ ಮಂಡ್ಯದಲ್ಲಿ ನಡೆದಿದೆ.

    ಬುಧವಾರ ಸಂಜೆ ಮಂಡ್ಯದ ಕೆ.ಎಂ ದೊಡ್ಡಿಯ ಭೈರವೇಶ್ವರ ಬೇಕರಿಯಲ್ಲಿ ಸುತ್ತಮುತ್ತಲ ಗ್ರಾಮದ ಕೆಲವರು ಕೇಕ್ ಖರೀದಿಸಿದ್ದಾರೆ. ಬಳಿಕ ಆ ಕೇಕನ್ನು ಮನೆಗೆ ತೆಗೆದುಕೊಂಡು ಹೋಗಿ ತಮ್ಮ ಮಕ್ಕಳಿಗೆ ತಿನ್ನಿಸಿದ್ದಾರೆ. ಪರಿಣಾಮ ಕೆಎಂ ದೊಡ್ಡಿ ಪಕ್ಕದ ಮಾದರಹಳ್ಳಿ ಗ್ರಾಮದ ಧನುಷ್ (6), ಹುಲಿಗೆರೆಪುರ ಗ್ರಾಮದ ದರ್ಶನ್ (9), ಕೊಳ್ಳೇಗಾಲದ ಶ್ರೇಯ (3), ಅಜ್ಜಳ್ಳಿಯ ಅನುಷಾ (4) ಹಾಗೂ ನಿಶ್ಚಿತ ಕೇಕ್ ತಿಂದು ಅಸ್ವಸ್ಥಗೊಂಡಿದ್ದಾರೆ.

    ಬಳಿಕ ಆತಂಕಗೊಂಡ ಮಕ್ಕಳ ಪೋಷಕರು ಕೆಎಂ ದೊಡ್ಡಿಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸದ್ಯ ಮಿಮ್ಸ್ ನಲ್ಲಿ ಮಕ್ಕಳಿಗೆ ಚಿಕಿತ್ಸೆ ನೀಡಲಾಗಿದ್ದು, ಮಕ್ಕಳ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ.

  • ಈಗ ಯಾರೇ ನೀ ಮೋಹಿನಿ ಕಾಟ: ಧಾರಾವಾಹಿಯಲ್ಲಿನ ಭೂತ ನೋಡಿ ವಿದ್ಯಾರ್ಥಿನಿಗೆ ಚಳಿ ಜ್ವರ!

    ಈಗ ಯಾರೇ ನೀ ಮೋಹಿನಿ ಕಾಟ: ಧಾರಾವಾಹಿಯಲ್ಲಿನ ಭೂತ ನೋಡಿ ವಿದ್ಯಾರ್ಥಿನಿಗೆ ಚಳಿ ಜ್ವರ!

    ತುಮಕೂರು: ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ನಂದಿನಿ ಧಾರಾವಾಹಿಯ ಪಾತ್ರ ಅನುಕರಣೆ ಮಾಡಿ ಬಾಲಕಿಯೊರ್ವಳು ಬಲಿಯಾದ ಘಟನೆ ಮಾಸುವ ಮುನ್ನವೇ `ಯಾರೇ ನೀ ಮೋಹಿನಿ’ ಯ ಕಥೆ ಕೇಳಿ ವಿದ್ಯಾರ್ಥಿನಿಯೊಬ್ಬಳು ಅಸ್ವಸ್ಥಳಾಗಿದ್ದಾಳೆ.

    ಹೌದು. ತುಮಕೂರು ನಗರದ ಬೈಲಾಂಜನೇಯಸ್ವಾಮಿ ದೇವಸ್ಥಾನದ ಬಳಿ ಇರುವ ಇಂಡೋಕಿಟ್ಸ್ ಪೂರ್ವ ಪ್ರಾಥಮಿಕ ಶಾಲೆಯಲ್ಲಿ ಧಾರಾವಾಹಿಯಲ್ಲಿನ ಭೂತದ ಕಥೆ ಕೇಳಿ ಇಬ್ಬರು ಮಕ್ಕಳು ಹೆದರಿ ಅದರಲ್ಲಿ ಓರ್ವ ಬಾಲಕಿ ಚಳಿ ಜ್ವರದಿಂದ ಅಸ್ವಸ್ಥಳಾಗಿದ್ದಾಳೆ. ಇದನ್ನೂ ಓದಿ: ಶಾಕಿಂಗ್.. ಸೀರಿಯಲ್ ಸೀನ್ ನೋಡಿ ಬೆಂಕಿ ಹಚ್ಚಿಕೊಂಡು ಬಾಲಕಿ ಸಾವು!

    ಯಾರೇ ನೀ ಮೋಹಿನಿ ಧಾರವಾಹಿ ವೀಕ್ಷಿಸಿದ ಬಾಲಕಿ ಪುಷ್ಮಿತಾ ಶಾಲೆಗೆ ಬಂದು ತನ್ನ ಸಹಪಾಠಿ ಪ್ರತಿಕ್ಷಾಗೆ ಹೇಳಿದ್ದಾಳೆ. ಧಾರಾವಾಹಿಯಲ್ಲಿ ಇರುವಂತೆ ಶಾಲೆಯಲ್ಲೂ ಕೂಡ ಭೂತ-ಪಿಶಾಚಿ ಇದೆ ಎಂದು ಪುಷ್ಮಿತಾ ತಾನು ಹೆದರಿದ್ದಲ್ಲದೇ ಪ್ರತಿಕ್ಷಾಗೂ ಹೆದರಿಸಿದ್ದಾಳೆ.

    ಈ ಭಯದಲ್ಲೇ ಮನೆಗೆ ಹೋಗಿದ್ದ ಪ್ರತಿಕ್ಷಾಗೆ ಚಳಿ-ಜ್ವರ ಕಾಣಿಸಿಕೊಂಡಿದೆ. ಇದನ್ನು ಗಮನಿಸಿದ ಪೋಷಕರು ಚಿಕಿತ್ಸೆ ನೀಡಿ ವಿಚಾರಿಸಿದಾಗ ಪ್ರತಿಕ್ಷಾ ಧಾರಾವಾಹಿಯಲ್ಲಿನ ಭೂತದ ಕಥೆ ಹೇಳಿದ್ದಾಳೆ ಎಂದು ತಿಳಿದು ಬಂದಿದೆ. ಇದನ್ನೂ ಓದಿ: ಸೀರಿಯಲ್ ಗೆ ಬಾಲಕಿ ಬಲಿ ಪ್ರಕರಣ- ಟಿವಿ ಒಡೆದು ನೊಂದ ಪೋಷಕರ ಆಕ್ರೋಶ

  • ಹನಿ ಕೇಕ್ ತಿಂದು 2 ವರ್ಷದ ಮಕ್ಕಳು ಸೇರಿ ಒಂದೇ ಕುಟುಂಬದ 10 ಮಂದಿ ಅಸ್ವಸ್ಥ

    ಹನಿ ಕೇಕ್ ತಿಂದು 2 ವರ್ಷದ ಮಕ್ಕಳು ಸೇರಿ ಒಂದೇ ಕುಟುಂಬದ 10 ಮಂದಿ ಅಸ್ವಸ್ಥ

    ಗದಗ: ಹನಿ ಕೇಕ್ ತಿಂದು ಮಕ್ಕಳೂ ಸೇರಿದಂತೆ ಒಂದೇ ಕುಟುಂಬದ 10 ಜನ ಅಸ್ವಸ್ಥಗೊಂಡಿರುವ ಘಟನೆ ಗದಗ ಜಿಲ್ಲೆ ಶಿರಹಟ್ಟಿ ತಾಲೂಕಿನ ಆದ್ರಹಳ್ಳಿ ಗ್ರಾಮದಲ್ಲಿ ನಡೆದಿದೆ.

    ಅಸ್ವಸ್ಥಗೊಂಡವರು ಎಲ್ಲರೂ ಆದ್ರಹಳ್ಳಿ ಉಮೇಶ ವಡ್ಡರ್ ಎಂಬವರ ಕುಟುಂಬಸ್ಥರು ಎನ್ನಲಾಗಿದೆ. ಸಮೀಪದ ಲಕ್ಷ್ಮೇಶ್ವರ ಪಟ್ಟಣದ ಲಕ್ಷ್ಮೀ ವೆಂಕಟೇಶ ಬೇಕರಿಯಿಂದ ನಿನ್ನೆ ಹನಿ ಕೇಕ್ ತರಲಾಗಿತ್ತು. 19 ವರ್ಷದ ಯುವತಿ ಸೇರಿ ಇನ್ನುಳಿದವರು 2 ರಿಂದ 14 ವಯಸ್ಸಿನ ಮಕ್ಕಳು ಎನ್ನಲಾಗಿದೆ.

    ತನುಶ್ರೀ(2), ಅಶ್ವಿನಿ(2), ಜಯಶ್ರೀ(3), ಸಪ್ನ(4), ನೀಲವ್ವ, ಸುವರ್ಣ, ನೇತ್ರಾ, ಷಣ್ಮುಖ, ಉಡಚವ್ವ, ಪ್ರವೀಣ ಅಸ್ವಸ್ಥಗೊಂಡವರು. ಗುರುವಾರ ರಾತ್ರಿ ಹನಿ ಕೇಕ್ ತಿಂದು ಮಲಗಿದವರು ಮಧ್ಯ ರಾತ್ರಿ ವಾಂತಿ ಭೇದಿಯಿಂದ ನರಳಾಡಲಾರಂಭಿಸಿದರು.

    ಅಸ್ವಸ್ಥರನ್ನು ಲಕ್ಷ್ಮೇಶ್ವರ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದುಕೊಂಡು ನಂತರ ಹೆಚ್ಚಿನ ಚಿಕಿತ್ಸೆಗೆ ಗದಗ ಜಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತದೆ.

  • ಭಟ್ಕಳದಲ್ಲಿ ಹಾಸ್ಟೆಲ್ ಆಹಾರ ಸೇವಿಸಿ 4 ವಿದ್ಯಾರ್ಥಿನಿಯರು ಅಸ್ವಸ್ಥ- ಓರ್ವಳ ಸ್ಥಿತಿ ಗಂಭೀರ

    ಭಟ್ಕಳದಲ್ಲಿ ಹಾಸ್ಟೆಲ್ ಆಹಾರ ಸೇವಿಸಿ 4 ವಿದ್ಯಾರ್ಥಿನಿಯರು ಅಸ್ವಸ್ಥ- ಓರ್ವಳ ಸ್ಥಿತಿ ಗಂಭೀರ

    ಕಾರವಾರ: ಭಟ್ಕಳದ ಕಿತ್ತೂರು ರಾಣಿ ಚೆನ್ನಮ್ಮ ವಸತಿ ನಿಲಯದಲ್ಲಿ ಆಹಾರ ಸೇವಿಸಿ 4 ವಿದ್ಯಾರ್ಥಿನಿಯರು ಅಸ್ವಸ್ಥರಾಗಿದ್ದು, ಓರ್ವ ವಿದ್ಯಾರ್ಥಿನಿಯ ಸ್ಥಿತಿ ಗಂಭೀರವಾಗಿದೆ.

    ವಿದ್ಯಾರ್ಥಿನಿ ವರ್ಷಿಣಿ ನಾಯ್ಕ ತೀವ್ರ ಅಸ್ವಸ್ಥಗೊಂಡಿದ್ದು, ವಿದ್ಯಾರ್ಥಿನಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಕುಂದಾಪುರ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಕಳೆದ ಸೋಮವಾರ ವಸತಿ ನಿಲಯದಲ್ಲಿ ದೋಷಪೂರಿತ ಆಹಾರ ಸೇವಿಸಿ 12 ಜನ ಅಸ್ವಸ್ಥರಾಗಿದ್ದರು ಆದರೂ ಕೂಡ ಹಾಸ್ಟೆಲ್ ವಾರ್ಡನ್ ಯಾವುದೇ ಕ್ರಮ ಕೈಗೊಳ್ಳದೇ ಅಸಡ್ಡೆ ತೋರಿದ್ದು ಮತ್ತಷ್ಟು ವಿದ್ಯಾರ್ಥಿನಿಯರು ಅಸ್ವಸ್ಥರಾಗುವಂತೆ ಮಾಡಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ.

    ಘಟನೆ ಕುರಿತು ಪ್ರತಿಕ್ರಿಯೆ ನೀಡಿರುವ ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರಾದ ಎಸ್. ಪುರುಷೋತ್ತಮ್, ಕಳೆದ ಬಾರಿ ವಿದ್ಯಾರ್ಥಿಗಳು ಗ್ಯಾಸ್ಟಿಕ್ ಸಮಸ್ಯೆಯಿಂದ ಅಸ್ಪಸ್ಥರಾಗಿದ್ದಾರೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ. ಘಟನೆ ನಡೆದ ಬಳಿಕ ಸ್ಥಳಕ್ಕೆ ಭೇಟಿ ನೀಡಿ ಪರೀಶಿಲನೆ ನಡೆಸಿದ್ದೆ. ಈ ಸಂದರ್ಭದಲ್ಲಿ ಯಾವುದೇ ಸಮಸ್ಯೆ ಕಂಡು ಬರಲಿಲ್ಲ. ಪ್ರಸ್ತುತ ಘಟನೆಯ ಕುರಿತು ಹಾಸ್ಟೆಲ್ ಅಧಿಕಾರಿಗಳು ಮಾಹಿತಿ ನೀಡಿಲ್ಲ. ಈ ಬಗ್ಗೆ ಹೆಚ್ಚಿನ ಮಾಹಿತಿ ಪಡೆದು ಅಧಿಕಾರಿಗಳ ನಿರ್ಲಕ್ಷದಿಂದ ಘಟನೆ ನಡೆದಿದ್ದಾರೆ ಸೂಕ್ತ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

      

  • ತುಮಕೂರು: ಆರತಕ್ಷತೆಯಲ್ಲಿ ಊಟ ಸೇವಿಸಿ 30ಕ್ಕೂ ಹೆಚ್ಚು ಮಂದಿ ಅಸ್ವಸ್ಥ

    ತುಮಕೂರು: ಆರತಕ್ಷತೆಯಲ್ಲಿ ಊಟ ಸೇವಿಸಿ 30ಕ್ಕೂ ಹೆಚ್ಚು ಮಂದಿ ಅಸ್ವಸ್ಥ

    ತುಮಕೂರು: ಆರತಕ್ಷತೆಯಲ್ಲಿ ಊಟ ಸೇವಿಸಿ ಸುಮಾರು 30ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡ ಘಟನೆ ತುಮಕೂರು ತಾಲೂಕಿನ ಮಲ್ಲೆನಳ್ಳಿಯಲ್ಲಿ ನಡೆದಿದೆ.

    ಮಲ್ಲೆನಳ್ಳಿ ನಿವಾಸಿಗಳಾದ ರಮೇಶ್ ಮತ್ತು ವೀಣಾ ಎಂಬವರ ಮದುವೆ ಶುಕ್ರವಾರ ನಡೆದಿತ್ತು. ಶನಿವಾರ ಆರತಕ್ಷತೆ ಇಟ್ಟುಕೊಂಡಿದ್ರು. ಹೀಗಾಗಿ ಇಲ್ಲಿ ಊಟ ಮಾಡಿದ 30ಕ್ಕೂ ಹೆಚ್ಚು ಜನರು ಅಸ್ವಸ್ಥ ಗೊಂಡಿದ್ದಾರೆ.

    ಅನ್ನ ಸಾಂಬಾರ್, ಪಾಯಸ, ಚಿತ್ರಾನ್ನ ಸೇರಿದಂತೆ ವಿವಿಧ ರೀತಿಯ ಆಹಾರ ಸೇವಿಸಿದ್ದಾರೆ. ಊಟ ಮಾಡುತ್ತಿದ್ದಂತೆ ಕೆಲವರಿಗೆ ವಾಂತಿ, ಹೊಟ್ಟೆ ನೋವು ಕಾಣಿಸಿಕೊಂಡಿದೆ. ತಕ್ಷಣ ಅವರನ್ನು ಶನಿವಾರ ರಾತ್ರಿಯೇ ಜಿಲ್ಲಾ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗಿದೆ.

    ಈ ಸಂಬಂಧ ಬೆಳ್ಳಾವಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಯಾದಗಿರಿ: ಹಾಸ್ಟೆಲ್‍ನಲ್ಲಿ ಊಟ ಮಾಡಿದ 20 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

    ಯಾದಗಿರಿ: ಹಾಸ್ಟೆಲ್‍ನಲ್ಲಿ ಊಟ ಮಾಡಿದ 20 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

    ಯಾದಗಿರಿ: ಹಾಸ್ಟೆಲ್ ನಲ್ಲಿ ಮಧ್ಯಾಹ್ನದ ಊಟ ಮಾಡಿದ ನಂತರ 20 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಯಾದಗಿರಿ ನಗರದ ಗಂಜ್ ಪ್ರದೇಶದಲ್ಲಿ ನಡೆದಿದೆ.

    ನಗರದ ಗಂಜ್ ಪ್ರದೇಶದ ಬಳಿಯಿರುವ ಎಸ್‍ಸಿ-ಎಸ್‍ಟಿ ಹಾಸ್ಟೆಲ್‍ನ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದಾರೆ. ಮಧ್ಯಾಹ್ನದ ಊಟ ಮಾಡಿದ ನಂತರ ಪಿಯುಸಿ ಮತ್ತು ಡಿಗ್ರಿ ಕಾಲೇಜಿನ ವಿದ್ಯಾರ್ಥಿಗಳು ವಾಂತಿ ಮಾಡಿಕೊಳ್ಳುವುದು ಹಾಗೂ ತಲೆಸುತ್ತು ಕಂಡುಬಂದ ಹಿನ್ನೆಲೆಯಲ್ಲಿ ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

    ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಇತರೆ ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಫುಡ್ ಪಾಯ್ಸನ್‍ನಿಂದ ವಿದ್ಯಾರ್ಥಿಗಳಿಗೆ ಈ ರೀತಿ ಆಗಿರಬಹುದೆಂದು ವೈದ್ಯರು ಹೇಳಿದ್ದಾರೆ.