Tag: ಅಸ್ಸಾಂ ಕಾರ್ಮಿಕರು

  • ರಸ್ತೆ ಬಳಿ ನಡೆದುಕೊಂಡು ಹೋಗುತ್ತಿದ್ದ ಕೂಲಿ ಕಾರ್ಮಿಕರಿಗೆ ವಾಹನ ಡಿಕ್ಕಿ – ಮೂವರು ಸ್ಥಳದಲ್ಲೇ ಸಾವು

    ರಸ್ತೆ ಬಳಿ ನಡೆದುಕೊಂಡು ಹೋಗುತ್ತಿದ್ದ ಕೂಲಿ ಕಾರ್ಮಿಕರಿಗೆ ವಾಹನ ಡಿಕ್ಕಿ – ಮೂವರು ಸ್ಥಳದಲ್ಲೇ ಸಾವು

    ಬೆಂಗಳೂರು: ರಸ್ತೆ ಬಳಿ ನಡೆದುಕೊಂಡು ಹೋಗುತ್ತಿದ್ದ ಕೂಲಿ ಕಾರ್ಮಿಕರಿಗೆ ವಾಹನ ಡಿಕ್ಕಿ ಹೊಡೆದು ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಆನೇಕಲ್ ತಾಲೂಕಿನ ಅತ್ತಿಬೆಲೆ ಮುಖ್ಯರಸ್ತೆಯ ಮಾಯಸಂದ್ರದ ಬಳಿ ನಡೆದಿದೆ.

    ಕೆಲಸ ಮುಗಿಸಿಕೊಂಡು ಮನೆಗೆ ಹೋಗುತ್ತಿದ್ದ ಮೂವರು ಕಾರ್ಮಿಕರಿಗೆ ಈಚರ್ ವಾಹನ ಡಿಕ್ಕಿ ಹೊಡೆದು ಮೂವರು ಕಾರ್ಮಿಕರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಮೃತಪಟ್ಟಿರುವ ಕಾರ್ಮಿಕರು ಅಸ್ಸಾಂ ಮೂಲದವರು. ಇದನ್ನೂ ಓದಿ: ಬೆಂಗಳೂರಿನಲ್ಲಿ ಜಿ20 ಶೃಂಗಸಭೆ – ರೆಸಾರ್ಟ್‌ ರಸ್ತೆಯಲ್ಲಿ ಭಾರೀ ವಾಹನಗಳ ಸಂಚಾರಕ್ಕೆ ನಿಷೇಧ

    ಕೆಲಸ ಮುಗಿಸಿ ಕಾರ್ಮಿಕರು ರಸ್ತೆ ಬಳಿ ನಡೆದುಕೊಂಡು ಮನೆಗೆ ಹೋಗುತ್ತಿದ್ದರು. ಈ ವೇಳೆ ಹಿಂದಿನಿಂದ ಬಂದ ವಾಹನ ಕಾರ್ಮಿಕರಿಗೆ ಡಿಕ್ಕಿ ಹೊಡೆದಿದೆ. ವಾಹನ ಚಾಲಕ ಅಪಘಾತ ಮಾಡಿ ಸ್ಥಳದಿಂದ ಪರಾರಿಯಾಗಿದ್ದಾನೆ. ಡಿಕ್ಕಿಯ ರಭಸಕ್ಕೆ ವಾಹನದ ಮುಂಭಾಗದ ಬಿಡಿ ಭಾಗಗಳು ಬಿದ್ದಿರುವುದನ್ನು ನೋಡಿ ಸ್ಥಳೀಯರು ಕೂಡಲೇ ಅತ್ತಿಬೆಲೆ ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಮೃತದೇಹಗಳನ್ನು ಅತ್ತಿಬೆಲೆ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ. ವಾಹನ ಸಮೇತ ಪರಾರಿಯಾಗಿರುವ ಚಾಲಕನ ಬಂಧನಕ್ಕೆ ಬಲೆ ಬೀಸಿದ್ದಾರೆ‌.

    ಅಸ್ಸಾ ಮೂಲದ ಕಾರ್ಮಿಕರ ಸಂಬಂಧಿಕರು ಸಿಕ್ಕ ಬಳಿಕ ಅವರ ಹೆಸರು ಹಾಗೂ ಎಲ್ಲಿ ವಾಸ ಇದ್ದರೂ ಎನ್ನುವ ಬಗ್ಗ ಇನ್ನಷ್ಟೇ ಮಾಹಿತಿ ಸಿಗಬೇಕಾಗಿದೆ. ಇನ್ನು ಸ್ಥಳಕ್ಕೆ ಭೇಟಿ ನೀಡಿದ ಡಿವೈಎಸ್ಪಿ ಹಾಗೂ ಅತ್ತಿಬೆಲೆ ಇನ್‌ಸ್ಪೆಕ್ಟರ್‌ ಪರಿಶೀಲನೆ ಮಾಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ. ಇದನ್ನೂ ಓದಿ: ಮಕ್ಕಳಿಗೆ ಪಾಠ ಮಾಡುವ ಶಿಕ್ಷಕನಿಂದ 18 ಕ್ಕೂ ಹೆಚ್ಚು ದೇವಸ್ಥಾನ ದರೋಡೆ

    Live Tv
    [brid partner=56869869 player=32851 video=960834 autoplay=true]

  • ಅತ್ತಿಗೆಯನ್ನು ಕೊಲ್ಲಲು ಮನೆಕೆಲಸದವರಿಗೆ ಸುಪಾರಿ – ಜೈಲು ಸೇರಿದ ಮೈದುನ

    ಅತ್ತಿಗೆಯನ್ನು ಕೊಲ್ಲಲು ಮನೆಕೆಲಸದವರಿಗೆ ಸುಪಾರಿ – ಜೈಲು ಸೇರಿದ ಮೈದುನ

    ಮಡಿಕೇರಿ: ತಂದೆ ಮಾಡಿರುವ ಅಪಾರ ಆಸ್ತಿಯನ್ನು ತಾನೊಬ್ಬನೇ ಕಬಳಿಸಬೇಕೆಂಬ ದುರಾಸೆಯಿಂದ ಅಣ್ಣನ ಹೆಂಡತಿಯನ್ನೇ ಕೊಲೆ ಮಾಡಲು ಸುಪಾರಿ ಕೊಡಲು ಮುಂದಾಗಿದ್ದ ಮೈದುನನೋರ್ವ ಪೊಲೀಸರ ಅಥಿತಿಯಾಗಿದ್ದಾನೆ.

    ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನ ಚೇಲಾವಾರದಲ್ಲಿ ಘಟನೆ ನಡೆದಿದೆ. ಚೇಲಾವರದಲ್ಲಿರುವ 70 ಎಕರೆ ಕಾಫಿ ಎಸ್ಟೇಟ್ ಮತ್ತು ಎರಡು ಹೋಂ ಸ್ಟೇಗಳನ್ನು ತಾನೇ ಕಬಳಿಸಬೇಕು ಎನ್ನುವ ದುರಾಸೆಗೆ ಬಿದ್ದಿದ್ದ ಆರೋಪಿ ಸುಬ್ಬಯ್ಯ, ತನ್ನ ತೋಟದಲ್ಲಿ ಕೆಲಸ ಮಾಡುತ್ತಿದ್ದ ಅಸ್ಸಾಂ ಕಾರ್ಮಿಕರಿಗೆ 5 ಲಕ್ಷ ಕೊಡುತ್ತೇನೆ ತನ್ನ ಅತ್ತಿಗೆಯನ್ನ ಕೊಲೆ ಮಾಡಿ ಬಿಡಿ ಸುಪಾರಿ ಕೊಟ್ಟಿದ್ದಾನೆ.

    ಆದರೆ ಇದನ್ನು ಒಪ್ಪದ ಅಸ್ಸಾಂ ಕಾರ್ಮಿಕರು ಅವರ ಮನೆಯನ್ನೇ ಬಿಟ್ಟುಹೋಗಲು ರೆಡಿಯಾಗಿದ್ದಾರೆ. ಈ ಕಾರಣದಿಂದ ಸಿಟ್ಟಿಗೆದ್ದ ಸುಬ್ಬಯ್ಯ ಕಾರ್ಮಿಕರ ಆಧಾರ್ ಕಾರ್ಡ್ ಮತ್ತು ವೋಟರ್ ಐಡಿಗಳನ್ನು ಕಿತ್ತುಕೊಂಡು ಕೊಡೋದಿಲ್ಲ ಎಂದು ಧಮ್ಕಿ ಹಾಕಿದ್ದಾನೆ. ಇದರಿಂದ ಹೆದರಿದ ಅಸ್ಸಾಂ ಕಾರ್ಮಿಕರು ಕೊಡಗಿನ ಎಸ್‍ಪಿಗೆ ದೂರು ನೀಡಿದ್ದಾರೆ.

    ಅಷ್ಟೇ ಅಲ್ಲದೇ ಅಣ್ಣನ ಹೆಂಡತಿ ರೇಖಾ ಪೂವಯ್ಯ ಅವರನ್ನು ಮುಗಿಸಲು ಅನೇಕ ದಿನಗಳಿಂದ ಪ್ಲಾನ್ ಮಾಡುತ್ತಿದ್ದಾನೆ ಎಂದು ರೇಖಾ ಪೂವಯ್ಯ ಪೋಲಿಸರಿಗೆ ಮಾಹಿತಿ ನೀಡಿದ್ದಾರೆ. ಹೀಗಾಗಿ ಅತ್ತಿಗೆಯನ್ನೇ ಮುಗಿಸಲು ಸುಪಾರಿ ನೀಡಲು ಮುಂದಾಗಿದ್ದ ಸುಬ್ಬಯ್ಯನನ್ನು ಬಂಧಿಸಿದ ಪೊಲೀಸರು ಕಂಬಿ ಹಿಂದೆ ತಳ್ಳಿದ್ದಾರೆ.