Tag: ಅಹಮದಾಬಾದ್‌ ವಿಮಾನ ಪತನ

  • ನೀವು ಯಾಕೆ ಇಂಧನ ಸ್ಥಗಿತಗೊಳಿಸಿದ್ದೀರಿ? – ದುರಂತಕ್ಕೀಡಾದ ಏರ್ ಇಂಡಿಯಾ ಪೈಲಟ್‌ಗಳ ಸಂಭಾಷಣೆ

    ನೀವು ಯಾಕೆ ಇಂಧನ ಸ್ಥಗಿತಗೊಳಿಸಿದ್ದೀರಿ? – ದುರಂತಕ್ಕೀಡಾದ ಏರ್ ಇಂಡಿಯಾ ಪೈಲಟ್‌ಗಳ ಸಂಭಾಷಣೆ

    ನವದೆಹಲಿ: ಅಹಮದಾಬಾದ್‌ನಲ್ಲಿ 270 ಜನರನ್ನು ಬಲಿ ಪಡೆದ ಏರ್ ಇಂಡಿಯಾ ವಿಮಾನ ದುರಂತ ಕುರಿತು ಏರ್‌ಕ್ರಾಫ್ಟ್ ಆಕ್ಸಿಡೆಂಟ್ ಇನ್ವೆಸ್ಟಿಗೇಷನ್ ಬ್ಯೂರೋ (ಎಎಐಬಿ) 15 ಪುಟಗಳ ಪ್ರಾಥಮಿಕ ವರದಿಯನ್ನು ಪ್ರಕಟಿಸಿದೆ.

    ‘ನೀವು ಯಾಕೆ ಇಂಧನ ಸ್ಥಗಿತಗೊಳಿಸಿದ್ದೀರಿ?’ ಎಂದು ಕಾಕ್‌ಪಿಟ್ ಧ್ವನಿ ರೆಕಾರ್ಡಿಂಗ್‌ನಲ್ಲಿ ಒಬ್ಬ ಪೈಲಟ್ ಇನ್ನೊಬ್ಬರನ್ನು ಕೇಳುತ್ತಿರುವುದು ರೆಕಾರ್ಡ್ ಆಗಿದೆ. ಇನ್ನೊಬ್ಬ ಪೈಲಟ್ ತಾನು ಹಾಗೆ ಮಾಡಲಿಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ. ಇಬ್ಬರೂ ಪೈಲಟ್‌ಗಳ ಸಂಭಾಷಣೆ ಅದರಲ್ಲಿದೆ. ಇದನ್ನೂ ಓದಿ: Air India Crash | ವಿಮಾನ ದುರಂತಕ್ಕೂ ಮುನ್ನವೇ ಏರ್‌ ಇಂಡಿಯಾಕ್ಕೆ ಎಚ್ಚರಿಕೆ ನೀಡಿತ್ತು ಅಮೆರಿಕ

    ಜೂ.12 ರಂದು ಬೋಯಿಂಗ್ ಡ್ರೀಮ್‌ಲೈನರ್ 787-8 ಅಪಘಾತಕ್ಕೀಡಾಗಲು ಕಾರಣ ಏನೆಂಬುದು ಯಕ್ಷ ಪ್ರಶ್ನೆಯಾಗಿತ್ತು. ವಿಮಾನದ ಎರಡು ಎಂಜಿನ್‌ಗಳಿಗೆ ಇಂಧನ ಪೂರೈಕೆ ಸ್ಥಗಿತಗೊಂಡಿದ್ದೇ ಅಪಘಾತಕ್ಕೆ ಕಾರಣ ಎಂಬುದು ತನಿಖೆಯಿಂದ ತಿಳಿದುಬಂದಿದೆ.

    ವಿಮಾನವು ಹಾರಾಟದ ಸಮಯದಲ್ಲಿ ಗರಿಷ್ಠ ವೇಗ ಪಡೆದುಕೊಂಡ ಹೊತ್ತಿಗೆ ಎಂಜಿನ್-1 ಮತ್ತು ಎಂಜಿನ್-2ಕ್ಕೆ ಇಂಧನ ಪೂರೈಕೆ ಸ್ಥಗಿತಗೊಂಡಿದೆ. ಇದು ‘ರನ್’ ಸ್ಥಿತಿಯಿಂದ ‘ಕಟ್‌ಆಫ್’ ಸ್ಥಿತಿಗೆ ತಲುಪಿದೆ. ಈ ಎರಡೂ ಎಂಜಿನ್‌ಗಳು ಒಂದು ಸೆಕೆಂಡು ಅಂತರದಲ್ಲಿ ತಮ್ಮ ಕಾರ್ಯ ಸ್ಥಗಿತಗೊಳಿಸಿವೆ. ಕಾಕ್‌ಪಿಟ್‌ನ ಸಂಭಾಷಣೆಯು ಬ್ಲ್ಯಾಕ್‌ಬಾಕ್ಸ್‌ನಲ್ಲಿ ದಾಖಲಾಗಿದೆ. ಇದನ್ನೂ ಓದಿ: Air India Crash | 2 ಎಂಜಿನ್‌ಗಳಿಗೆ ಇಂಧನ ಪೂರೈಕೆ ಆಗದಿದ್ದೇ ದುರಂತಕ್ಕೆ ಕಾರಣ – AAIB ಪ್ರಾಥಮಿಕ ವರದಿ ಬಹಿರಂಗ

  • Plane Crash | ಬ್ಲ್ಯಾಕ್‌ ಬಾಕ್ಸ್‌ಗಳನ್ನು ವಿದೇಶಕ್ಕೆ ಕಳಿಸಿಲ್ಲ: ಸುಳ್ಳು ಸುದ್ದಿ ಹರಡದಂತೆ ಕೇಂದ್ರ ಸರ್ಕಾರ ಮನವಿ

    Plane Crash | ಬ್ಲ್ಯಾಕ್‌ ಬಾಕ್ಸ್‌ಗಳನ್ನು ವಿದೇಶಕ್ಕೆ ಕಳಿಸಿಲ್ಲ: ಸುಳ್ಳು ಸುದ್ದಿ ಹರಡದಂತೆ ಕೇಂದ್ರ ಸರ್ಕಾರ ಮನವಿ

    ನವದೆಹಲಿ: ದುರಂತಕ್ಕೀಡಾದ ಏರ್ ಇಂಡಿಯಾ ವಿಮಾನದ ಬ್ಲ್ಯಾಕ್‌ ಬಾಕ್ಸ್‌ಗಳನ್ನು (Black Boxes) ವಿದೇಶಕ್ಕೆ ಕಳುಹಿಸಲಾಗುತ್ತಿದೆ ಎಂಬ ವರದಿಗಳನ್ನು ನಾಗರಿಕ ವಿಮಾನಯಾನ ಸಚಿವಾಲಯ (Ministry of Civil Aviation) ತಳ್ಳಿಹಾಕಿದೆ.

    ಅಪಘಾತಕ್ಕೀಡಾದ ಏರ್‌ ಇಂಡಿಯಾ 171 ವಿಮಾನದ CVR/DFDR ಅನ್ನು ವಿಶ್ಲೇಷಣೆಗಾಗಿ ವಿದೇಶಕ್ಕೆ ಕಳುಹಿಸಲಾಗುತ್ತಿದೆ ಎಂದು ಕೆಲವು ಮಾಧ್ಯಮಗಳಲ್ಲಿ ವರದಿಯಾಗಿದೆ. ಫ್ಲೈಟ್ ರೆಕಾರ್ಡರ್‌ಗಳನ್ನು ಡಿಕೋಡ್ ಮಾಡುವ ಸ್ಥಳದ ಬಗ್ಗೆ ಸೂಕ್ತ ಮೌಲ್ಯಮಾಪನದ ನಂತರ AAIB ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಸಚಿವಾಲಯ ಎಕ್ಸ್‌ ಪೋಸ್ಟ್‌ನಲ್ಲಿ ಸ್ಪಷ್ಟಪಡಿಸಿದೆ. ಇಂತಹ ಸೂಕ್ಷ್ಮ ವಿಷಯಗಳ ಬಗ್ಗೆ ಊಹಾಪೋಹಗಳನ್ನು ಹರಡದಂತೆ ಸಚಿವಾಲಯವು ಮನವಿ ಮಾಡಿಕೊಂಡಿದೆ. ಇದನ್ನೂ ಓದಿ: ಏರ್ ಇಂಡಿಯಾ ದುರಂತದ ಬಳಿಕ ಎಚ್ಚೆತ್ತ DGCA – ಏರ್‌ಪೋರ್ಟ್‌ ಬಳಿಯ ಕಟ್ಟಡಗಳಿಗೆ ಹೊಸ ರೂಲ್ಸ್‌

    ನಾಗರಿಕ ವಿಮಾನಯಾನ ಸಚಿವಾಲಯವು ಎಲ್ಲಾ ಪಾಲುದಾರರನ್ನು ಇಂತಹ ಸೂಕ್ಷ್ಮ ವಿಷಯಗಳ ಬಗ್ಗೆ ಊಹಾಪೋಹಗಳಿಂದ ದೂರವಿರಲು ಮತ್ತು ತನಿಖಾ ಪ್ರಕ್ರಿಯೆಯು ಅದು ಖಾತರಿಪಡಿಸುವ ಗಂಭೀರತೆ ಮತ್ತು ವೃತ್ತಿಪರತೆಯೊಂದಿಗೆ ಮುಂದುವರಿಯಲು ಅನುವು ಮಾಡಿಕೊಡುವಂತೆ ಒತ್ತಾಯಿಸುತ್ತದೆ.

    ಅಹಮದಾಬಾದ್ ಬಳಿ ಸಂಭವಿಸಿದ ಏರ್ ಇಂಡಿಯಾ ವಿಮಾನ 171 ರ ದುರಂತ ಅಪಘಾತದ ತನಿಖೆ ನಡೆಯುತ್ತಿದೆ. ವಿಮಾನ ಅಪಘಾತ ತನಿಖಾ ಬ್ಯೂರೋ (AAIB) ಔಪಚಾರಿಕ ತನಿಖೆಯ ನೇತೃತ್ವ ವಹಿಸಿದೆ. ಇದನ್ನೂ ಓದಿ: Air India Plane crash | ಡೇಟಾ ರಿಕವರಿಗಾಗಿ ಬ್ಲ್ಯಾಕ್‌ ಬಾಕ್ಸ್ ಅಮೆರಿಕಕ್ಕೆ ರವಾನೆ

    ಅಂತರರಾಷ್ಟ್ರೀಯ ನಾಗರಿಕ ವಿಮಾನಯಾನ ಸಂಸ್ಥೆ (ICAO) ಪ್ರೋಟೋಕಾಲ್‌ಗಳಿಗೆ ಅನುಸಾರವಾಗಿ, ಬಹು-ಶಿಸ್ತಿನ AAIB ತಂಡವು ಜೂ.12 ರಂದು ತನಿಖೆ ಪ್ರಾರಂಭಿಸಿತು. ಇದಕ್ಕೆ US ರಾಷ್ಟ್ರೀಯ ಸಾರಿಗೆ ಸುರಕ್ಷತಾ ಮಂಡಳಿ (NTSB) ಮತ್ತು ಮೂಲ ಸಲಕರಣೆ ತಯಾರಕರ (OEM) ತಜ್ಞರ ಬೆಂಬಲವಿದೆ.

    ಏರ್ ಇಂಡಿಯಾ ವಿಮಾನ ಅಪಘಾತ ಸ್ಥಳದಿಂದ ಡಿಜಿಟಲ್ ಫ್ಲೈಟ್ ಡೇಟಾ ರೆಕಾರ್ಡರ್ (DFDR) ಮತ್ತು ಕಾಕ್‌ಪಿಟ್ ವಾಯ್ಸ್ ರೆಕಾರ್ಡರ್ (CVR) ಸಾಧನಗಳ ಬ್ಲ್ಯಾಕ್‌ ಬಾಕ್ಸ್‌ಗಳನ್ನು ವಶಕ್ಕೆ ಪಡೆಯಲಾಗಿದೆ. ಮೊದಲನೆಯದು ಜೂ.13 ಮತ್ತು ಎರಡನೆಯದನ್ನು ಜೂ.16 ರಂದು ಪತ್ತೆಹಚ್ಚಲಾಯಿತು. ಇದನ್ನೂ ಓದಿ: ತಿರುಪತಿಗೆ ಹೊರಟಿದ್ದ ವಿಮಾನ ವಾಪಸ್‌ – ಹೈದರಾಬಾದ್‌ನಲ್ಲಿ ಯೂಟರ್ನ್‌ ಹೊಡೆದ ಸ್ಪೈಸ್‌ಜೆಟ್‌ ಫ್ಲೈಟ್‌

  • ಏರ್‌ ಇಂಡಿಯಾ ವಿಮಾನ ದುರಂತದಲ್ಲಿ ಸಾವು ಗೆದ್ದು ಬಂದಿದ್ದ ವಿಶ್ವಾಸ್‌ ಆಸ್ಪತ್ರೆಯಿಂದ ಡಿಸ್ಚಾರ್ಜ್‌

    ಏರ್‌ ಇಂಡಿಯಾ ವಿಮಾನ ದುರಂತದಲ್ಲಿ ಸಾವು ಗೆದ್ದು ಬಂದಿದ್ದ ವಿಶ್ವಾಸ್‌ ಆಸ್ಪತ್ರೆಯಿಂದ ಡಿಸ್ಚಾರ್ಜ್‌

    – ಸಹೋದರನ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿ ಕಣ್ಣೀರಿಟ್ಟ ವಿಶ್ವಾಸ್‌ ಕುಮಾರ್‌

    ಗಾಂಧೀನಗರ: ಅಹಮದಾಬಾದ್‌ನಲ್ಲಿ ಸಂಭವಿಸಿದ್ದ ಏರ್‌ ಇಂಡಿಯಾ (Air India Plane Crash) ವಿಮಾನ ಭೀಕರ ಅಪಘಾತದಲ್ಲಿ ಬದುಕುಳಿದಿದ್ದ ಏಕೈಕ ಪ್ರಯಾಣಿಕ ವಿಶ್ವಾಸ್‌ ಕುಮಾರ್‌ ರಮೇಶ್‌ (Vishwas Kumar Ramesh) ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗಿದ್ದಾರೆ.

    ಹಾಸ್ಟೆಲ್‌ವೊಂದಕ್ಕೆ ವಿಮಾನ ಡಿಕ್ಕಿಯಾಗಿ ಅವಘಡ ಸಂಭವಿಸಿದಾಗ, ತುರ್ತು ನಿರ್ಗಮನ ಬಾಗಿಲು ತೆರೆದು ವಿಶ್ವಾಸ್‌ ಜಿಗಿದು ಬದುಕುಳಿದಿದ್ದರು. ಸಣ್ಣಪುಟ್ಟ ಗಾಯಗಳಿಂದ ಅಹಮದಾಬಾದ್‌ನ ಸಿವಿಲ್‌ ಆಸ್ಪತ್ರೆಗೆ ದಾಖಲಾಗಿದ್ದರು. ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್‌ ಶಾ ಸೇರಿದಂತೆ ಅನೇಕ ಗಣ್ಯರು ಗಾಯಾಳು ಆರೋಗ್ಯ ವಿಚಾರಿಸಿದ್ದರು. ಇದನ್ನೂ ಓದಿ: ಬೆಂಗಳೂರು – ಲಂಡನ್‌ ಸೇರಿದಂತೆ ದಿಢೀರ್‌ 7 ಏರ್‌ ಇಂಡಿಯಾ ಅಂತರಾಷ್ಟ್ರೀಯ ವಿಮಾನಗಳ ಹಾರಾಟ ರದ್ದು

    ಚಿಕಿತ್ಸೆ ಬಳಿಕ ವಿಶ್ವಾಸ್‌ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆದರು. ನಂತರ ತನ್ನ ಸಹೋದರನ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದರು. ತನ್ನ ಜೊತೆ ಪ್ರಯಾಣಿಸಿದ್ದ ಸಹೋದರ ವಿಮಾನ ಪತನದಲ್ಲಿ ಮೃತಪಟ್ಟಿದ್ದ.

    ಜೂನ್ 12 ರಂದು ನಡೆದ ಏರ್ ಇಂಡಿಯಾ ವಿಮಾನ ಅಪಘಾತದಲ್ಲಿ ಬದುಕುಳಿದ ಏಕೈಕ ವ್ಯಕ್ತಿ 40 ವರ್ಷದ ಬ್ರಿಟಿಷ್ ಪ್ರಜೆ ವಿಶ್ವಾಸ್. ವಿಮಾನ ಅಪಘಾತದ ಸುದ್ದಿ ತಿಳಿದ ನಂತರ ವಿಶ್ವಾಸ್ ಅವರ ಕುಟುಂಬ ಯುಕೆಯಿಂದ ಆಗಮಿಸಿತು. ವಿಶ್ವಾಸ್ ಮತ್ತು ಅವರ ಸಹೋದರ ಇಬ್ಬರೂ ದಿಯು ಮೂಲದವರಾಗಿದ್ದು, ಕೇಂದ್ರಾಡಳಿತ ಪ್ರದೇಶದಲ್ಲಿ ತಮ್ಮ ಕುಟುಂಬದೊಂದಿಗೆ ಸಮಯ ಕಳೆಯಲು ಭಾರತಕ್ಕೆ ವಿಮಾನದಲ್ಲಿ ಬಂದಿದ್ದರು.‌ ಇದನ್ನೂ ಓದಿ: ಏರ್‌ ಇಂಡಿಯಾ ಎಂಜಿನಿಯರಿಂಗ್ ಮುಖ್ಯಸ್ಥನಿಗೆ ಡಿಜಿಸಿಎ ಬುಲಾವ್ – ಬೋಯಿಂಗ್ 787 ವಿಮಾನಗಳ ತಾಂತ್ರಿಕ ಸಮಸ್ಯೆ ಬಗ್ಗೆ ಚರ್ಚೆ

    ಬುಧವಾರ ಬೆಳಗ್ಗೆ ಅಜಯ್ ಅವರ ಅಂತ್ಯಕ್ರಿಯೆಯನ್ನು ಕುಟುಂಬವು ದಿಯುನಲ್ಲಿ ನಡೆಸಿದೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ. ಡಿಎನ್ಎ ಮಾದರಿಯು ಅವರ ಗುರುತನ್ನು ದೃಢಪಡಿಸಿದ ನಂತರ ದೇಹವನ್ನು ಕುಟುಂಬಕ್ಕೆ ಹಸ್ತಾಂತರಿಸಲಾಗಿತ್ತು.

    ಅಹಮದಾಬಾದ್‌ನ ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಟ ಕೆಲವೇ ನಿಮಿಷಗಳಲ್ಲಿ ಬೋಯಿಂಗ್ 787 ಡ್ರೀಮ್‌ಲೈನರ್ ಏರ್‌ ಇಂಡಿಯಾ ವಿಮಾನ 171 ಅಪಘಾತಕ್ಕೀಡಾಗಿದೆ. ದುರಂತದಲ್ಲಿ 270 ಮಂದಿ ಮೃತಪಟ್ಟಿದ್ದಾರೆ. ಅಪಘಾತದ ಕೆಲವೇ ಕ್ಷಣಗಳ ನಂತರ ವೈರಲ್ ಆಗಿರುವ ವೀಡಿಯೊದಲ್ಲಿ, ಗಾಯಗೊಂಡಿದ್ದ ವಿಶ್ವಾಸ್ ಅಂಬುಲೆನ್ಸ್‌ ಕಡೆಗೆ ನಡೆದುಕೊಂಡು ಹೋಗುತ್ತಿರುವುದು ಕಂಡುಬಂದಿದೆ. ಇದನ್ನೂ ಓದಿ: ಏರ್ ಇಂಡಿಯಾದ ಮತ್ತೊಂದು ವಿಮಾನದಲ್ಲಿ ತಾಂತ್ರಿಕ ದೋಷ – ಕೋಲ್ಕತ್ತಾದಲ್ಲಿ ಪ್ರಯಾಣಿಕರನ್ನು ಕೆಳಗಿಳಿಸಿದ ಸಿಬ್ಬಂದಿ

  • 100 ಕೋಟಿ ಪ್ರಯಾಣಿಕರನ್ನ ಸೇಫ್ ಲ್ಯಾಂಡ್ ಮಾಡಿದ್ದ ವಿಮಾನಕ್ಕೆ ಏನಾಯ್ತು?

    100 ಕೋಟಿ ಪ್ರಯಾಣಿಕರನ್ನ ಸೇಫ್ ಲ್ಯಾಂಡ್ ಮಾಡಿದ್ದ ವಿಮಾನಕ್ಕೆ ಏನಾಯ್ತು?

    – ಬೋಯಿಂಗ್ ಮಾರುಕಟ್ಟೆಗೆ ಬಹುದೊಡ್ಡ ಆರ್ಥಿಕ ಹೊಡೆತ ಸಾಧ್ಯತೆ!

    ಅಹಮದಾಬಾದ್: ಬೋಯಿಂಗ್‌ನ 787-ಡ್ರೀಮ್ ಲೈನರ್ (Dreamliner 787) ಮಾಡೆಲ್ ಅತ್ಯಂತ ವಿಶ್ವಾಸಾರ್ಹದ ಜೊತೆಗೆ ಇಂಧನ ದಕ್ಷತೆ, ಸುರಕ್ಷತೆ, ಆರಾಮದಾಯಕ ಪ್ರಯಾಣಕ್ಕೆ ಹೆಸರುವಾಸಿಯಾಗಿದೆ. 14 ವರ್ಷಗಳಲ್ಲಿ ಸುಮಾರು 1 ಸಾವಿರ ಡ್ರೀಮ್ ಲೈನರ್ ವಿಮಾನಗಳನ್ನ ಮಾರಾಟ ಮಾಡುವ ಮೂಲಕ ಬೋಯಿಂಗ್ ದಾಖಲೆ ಬರೆದಿದೆ.

    ಸಾರ್ವಕಾಲಿಕ ಅತ್ಯುತ್ತಮ ಮಾರಾಟ ಕಂಡ ವೈಡ್-ಬಾಡಿ ಪ್ಯಾಸೆಂಜರ್ ವಿಮಾನ ಡ್ರೀಮ್ ಲೈನರ್ 100 ಕೋಟಿಗೂ ಹೆಚ್ಚು ಪ್ರಯಾಣಿಕರನ್ನ ಸಾಗಿಸಿದ ವಿಮಾನ ಎಂಬ ಬ್ರ‍್ಯಾಂಡ್ ಅನ್ನು ಅಲ್ಪಾವಧಿಯಲ್ಲಿಯೇ ಪಡೆದಿತ್ತು. ಇದನ್ನೂ ಓದಿ: ದುರಂತಕ್ಕೀಡಾದ ಏರ್ ಇಂಡಿಯಾ ವಿಮಾನದ 12ರಲ್ಲಿ 9 ಸಿಬ್ಬಂದಿ ಮುಂಬೈ ವಾಸಿಗಳು

    ಈ ಹಿಂದೆ ಸುರಕ್ಷತೆಯ ಕುರಿತು ಬೋಯಿಂಗ್ (Boeing) ಕಂಪನಿಗೆ ಹಲವು ಸವಾಲುಗಳು ಎದುರಾಗಿದ್ದವು. ಹಲವು ಆರೋಪಗಳನ್ನ ಎದುರಿಸಿದ್ದ ಬೋಯಿಂಗ್‌ನ ಡ್ರೀಮ್ ಲೈನರ್ ಹಾರಾಟವನ್ನ 3 ತಿಂಗಳ ಕಾಲ ವಿಶ್ವದಾದ್ಯಂತ ನಿಷೇಧಿಸಲಾಗಿತ್ತು. ಆರೋಪ, ಸವಾಲುಗಳನ್ನ ಎದುರಿಸಿ ಮತ್ತೆ ವಿಶ್ವಾಸಾರ್ಹತೆ ಗಳಿಸಿದ್ದ ಬೋಯಿಂಗ್ ಪುನಃ ಆಕಾಶಕ್ಕೆ ಚಿಮ್ಮಿತ್ತು. ಆದ್ರೆ ಈಗ ಕಂಡು ಕೇಳರಿಯದ ದುರಂತಕ್ಕೆ ಸಾಕ್ಷಿಯಾಗಿದೆ. ಇದನ್ನೂ ಓದಿ: Plane Crash – ನಗುಮೊಗದ ಗಗನಸಖಿ ಮನೀಷಾ ಥಾಪಾ ದುರಂತ ಅಂತ್ಯ

    ಡ್ರೀಮ್ ಲೈನರ್ ವಿಮಾನದ ಆಯಸ್ಸು 30 ರಿಂದ 50 ವರ್ಷ ಎನ್ನಲಾಗಿದೆ. 210-250 ಸೀಟ್‌ಗಳೊಂದಿಗೆ 9,800 ಮೈಲುಗಳು ಪ್ರಯಾಣಿಸಬಲ್ಲವು. ಆದ್ರೆ ಅಹಮದಾಬಾದ್‌ನಲ್ಲಿ ಉರುಳಿದ ವಿಮಾನ ಆಯಸ್ಸು ಕೇವಲ 11 ವರ್ಷ. ಈ ಹಿಂದೆ ಸುರಕ್ಷತೆ ವಿಚಾರದಲ್ಲಿ ಎದ್ದ ಆರೋಪ, ಸವಾಲುಗಳನ್ನ ಮೆಟ್ಟಿ ನಿಂತು ವ್ಯಾಪಾರವನ್ನ ವಿಸ್ತರಿಸಿಕೊಳ್ತಿದ್ದ ವೇಳೆಯೇ ಬೋಯಿಂಗ್ ಕಂಪನಿಗೆ ಈ ದುರಂತ ದೊಡ್ಡ ಆರ್ಥಿಕ ಹೊಡೆತ ಕೊಡುವ ಭೀತಿ ಶುರುವಾಗಿದೆ. ಅದೇನೇ ಇರಲಿ ಅತಿ ಸುರಕ್ಷತೆಯ ವಿಮಾನ ಎಂದು ಹೇಳಿಕೊಂಡಿದ್ದ ವಿಮಾನ ಪತನಕ್ಕೆ (Plane Crash) ಸಾಕ್ಷಿಯಾಗಿರೋದು ನಿಜಕ್ಕೂ ದುರಂತವೇ ಸರಿ.

  • ಏರ್‌ ಇಂಡಿಯಾ ವಿಮಾನ ದುರಂತ – ಸಾವಿನ ಸಂಖ್ಯೆ 274ಕ್ಕೆ ಏರಿಕೆ

    ಏರ್‌ ಇಂಡಿಯಾ ವಿಮಾನ ದುರಂತ – ಸಾವಿನ ಸಂಖ್ಯೆ 274ಕ್ಕೆ ಏರಿಕೆ

    ಗಾಂಧೀನಗರ: ಅಹಮದಾಬಾದ್‌ನಲ್ಲಿ (Ahmedabad) ಸಂಭವಿಸಿದ ಏರ್‌ ಇಂಡಿಯಾ (Air India) ಬೋಯಿಂಗ್‌ ಡ್ರೀಮ್‌ಲೈನರ್‌ ವಿಮಾನ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 274ಕ್ಕೆ ಏರಿಕೆಯಾಗಿದೆ.

    ಈ ಸಾವು-ನೋವುಗಳಲ್ಲಿ ವಿಮಾನದಲ್ಲಿದ್ದ ಪ್ರಯಾಣಿಕರು, ಪೈಲಟ್‌ ಹಾಗೂ ಸಿಬ್ಬಂದಿ, ವಿಮಾನ ಅಪಘಾತಕ್ಕೀಡಾದ ಸ್ಥಳದಲ್ಲಿದ್ದ ಜನರು ಸೇರಿದ್ದಾರೆ. ಇದನ್ನೂ ಓದಿ: ಅಹಮದಾಬಾದ್ ವಿಮಾನ ಪತನ – 5 ತಂಡಗಳಿಂದ ತನಿಖೆ

    ಗುರುವಾರ ಅಹಮದಾಬಾದ್‌ನಿಂದ ಲಂಡನ್ ಗ್ಯಾಟ್ವಿಕ್ ವಿಮಾನ ನಿಲ್ದಾಣಕ್ಕೆ ಟೇಕಾಫ್ ಆದ ಕೆಲವೇ ಸೆಕೆಂಡುಗಳಲ್ಲಿ ಅಪಘಾತಕ್ಕೀಡಾದ ವಿಮಾನದಲ್ಲಿ 230 ಪ್ರಯಾಣಿಕರು, ಇಬ್ಬರು ಪೈಲಟ್‌ಗಳು ಮತ್ತು 10 ಸಿಬ್ಬಂದಿ ಸೇರಿದಂತೆ 242 ಜನರಿದ್ದರು. ಈ ಪೈಕಿ ಭಾರತೀಯ ಮೂಲದ ಬ್ರಿಟಿಷ್ ಪ್ರಜೆ ಮಾತ್ರ ಅಪಘಾತದಲ್ಲಿ ಬದುಕುಳಿದರು.

    ದುರಂತಕ್ಕೆ ಕಾರಣವೇನು ಎಂಬ ಬಗ್ಗೆ ತನಿಖೆ ನಡೆಯುತ್ತಿದೆ. ವಿಮಾನದಲ್ಲಿದ್ದ ಎರಡು ಬ್ಲ್ಯಾಕ್‌ಬಾಕ್ಸ್‌ಗಳ ಪೈಕಿ ಒಂದು ಪತ್ತೆಯಾಗಿದೆ. ಅದನ್ನು ಅಧಿಕಾರಿಗಳ ತಂಡ ಕೊಂಡೊಯ್ದಿದೆ. ಮತ್ತೊಂದು ಬ್ಲ್ಯಾಕ್‌ಬಾಕ್ಸ್‌ಗಾಗಿ ಹುಡುಕಾಟ ನಡೆದಿದೆ. ಇದನ್ನೂ ಓದಿ: ಬ್ಲ್ಯಾಕ್‌ಬಾಕ್ಸ್‌ನಲ್ಲಿ ಅಡಗಿದೆ ವಿಮಾನ ದುರಂತದ ರಹಸ್ಯ – ನಾಳೆಯೊಳಗೆ ಅಪಘಾತಕ್ಕೆ ಅಸಲಿ ಕಾರಣ ಸಿಗುತ್ತಾ?

    ಅಪಘಾತ ಸಂಭವಿಸಿದ ಮಾರನೇ ದಿನ ಸ್ಥಳಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿದ್ದರು. ಆಸ್ಪತ್ರೆಗೆ ತೆರಳಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು.

  • Photo Gallery: ಅಹಮದಾಬಾದ್‌ನಲ್ಲಿ ವಿಮಾನ ದುರಂತ ನಡೆದ ಸ್ಥಳಕ್ಕೆ ಮೋದಿ ಭೇಟಿ

    Photo Gallery: ಅಹಮದಾಬಾದ್‌ನಲ್ಲಿ ವಿಮಾನ ದುರಂತ ನಡೆದ ಸ್ಥಳಕ್ಕೆ ಮೋದಿ ಭೇಟಿ

    ಅಹಮದಾಬಾದ್‌ನಲ್ಲಿ ಏರ್‌ ಇಂಡಿಯಾ ವಿಮಾನ ಪತನಗೊಂಡು 241 ಮಂದಿ ಮೃತಪಟ್ಟಿದ್ದಾರೆ. ದುರಂತ ನಡೆದ ಸ್ಥಳಕ್ಕೆ ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಭೇಟಿ ಕೊಟ್ಟರು. ನಂತರ ಆಸ್ಪತ್ರೆಗೆ ತೆರಳಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು.

  • ವಿಮಾನ ದುರಂತ: ವಿಮಾನಯಾನ ಸಚಿವರ ರಾಜೀನಾಮೆಗೆ ಸಚಿವ ಈಶ್ವರ ಖಂಡ್ರೆ ಒತ್ತಾಯ

    ವಿಮಾನ ದುರಂತ: ವಿಮಾನಯಾನ ಸಚಿವರ ರಾಜೀನಾಮೆಗೆ ಸಚಿವ ಈಶ್ವರ ಖಂಡ್ರೆ ಒತ್ತಾಯ

    ಕಲಬುರಗಿ: ಅಹಮದಾಬಾದ್ ವಿಮಾನ ದುರಂತ (Ahmedabad Plane Crash) ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ವಿಮಾನಯಾನ ಖಾತೆ ಸಚಿವ ರಾಮ ಮೋಹನ್ ನಾಯ್ಡು ಕೂಡಲೇ ರಾಜೀನಾಮೆ ನೀಡಬೇಕು ಎಂದು ಸಚಿವ ಈಶ್ವರ ಖಂಡ್ರೆ (Eshwara Khandre) ಒತ್ತಾಯಿಸಿದರು.

    ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ವಿಮಾನ ದುರಂತಕ್ಕೆ ಕೇಂದ್ರ ಸರ್ಕಾರ ಹೊಣೆ ಹೊತ್ತು ಕೂಡಲೇ ಕೇಂದ್ರ ವಿಮಾನಯಾನ ಸಚಿವರು ರಾಜೀನಾಮೆ ನೀಡಬೇಕು. ಇದು ಒಂದು ಅತಿದೊಡ್ಡ ದುರಂತವಾಗಿದೆ. ಅತ್ಯಂತ ನೋವಿನ ಸಂಗತಿಯಾಗಿದೆ. ಇಂತಹ ದುರಂತ ನಡೆಯದಂತೆ ಸರ್ಕಾರ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು. ಇದನ್ನೂ ಓದಿ: ವಿಮಾನ ದುರಂತ ಬೆನ್ನಲ್ಲೇ ಥೈಲ್ಯಾಂಡಲ್ಲಿ ಏರ್‌ ಇಂಡಿಯಾ ತುರ್ತು ಭೂಸ್ಪರ್ಶ

    ಈ ದುರಂತದ ಬಗ್ಗೆ ನಿಷ್ಪಕ್ಷಪಾತ ತನಿಖೆ ಕೈಗೊಂಡು ವರದಿ ಜನರ ಮುಂದೆ ಇಡಬೇಕು. ಆರ್‌ಸಿಬಿ ಗೆಲುವಿನ ಸಂಭ್ರಮದ ವೇಳೆ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜೀನಾಮೆ ಕೇಳುವವರು ಕುಂಭಮೇಳದ ಕಾಲ್ತುಳಿತಕ್ಕೂ ರಾಜೀನಾಮೆ ಕೇಳಬೇಕು. ಸಾವಿನಲ್ಲಿ ರಾಜಕೀಯ‌ ಮಾಡಬಾರದು ಬಿಜೆಪಿಗೆ ಟಾಂಗ್‌ ಕೊಟ್ಟರು.

    ದುರಂತದ ಬೆನ್ನಲ್ಲೇ ಟಾಟಾ ಸಮೂಹ ಪ್ರತಿ ಮೃತ ವ್ಯಕ್ತಿಯ ಸಂತ್ರಸ್ತ ಕುಟುಂಬಕ್ಕೆ 1 ಕೋಟಿ ರೂ. ಪರಿಹಾರ ಘೋಷಿಸಿದೆ. ಹಾಗಂತ ಸಂತ್ರಸ್ತ ಕುಟುಂಬಗಳಿಗೆ ಇಂತಹ ದುರಂತದ ಬಳಿಕ ಎಷ್ಟೇ ಕೋಟಿ ಕೊಟ್ಟರೂ ಕಡಿಮೆ ಎಂದರು. ಇದನ್ನೂ ಓದಿ:

  • ಏರ್‌ ಇಂಡಿಯಾ ವಿಮಾನ ಪತನ – ದುರಂತದಲ್ಲಿ ಮಾರ್ಬಲ್‌ ವ್ಯಾಪಾರಿ ಪಿಂಕು ಮೋದಿ ಮಕ್ಕಳು ಸಾವು

    ಏರ್‌ ಇಂಡಿಯಾ ವಿಮಾನ ಪತನ – ದುರಂತದಲ್ಲಿ ಮಾರ್ಬಲ್‌ ವ್ಯಾಪಾರಿ ಪಿಂಕು ಮೋದಿ ಮಕ್ಕಳು ಸಾವು

    – ಲಂಡನ್‌ ಪ್ರವಾಸಕ್ಕೆ ಹೊರಟಿದ್ದ ಅಣ್ಣ-ತಂಗಿ ದುರಂತ ಅಂತ್ಯ

    ಗಾಂಧೀನಗರ: ಅಹಮದಾಬಾದ್‌ನಲ್ಲಿ (Ahmedabad) ಸಂಭವಿಸಿದ ಏರ್‌ ಇಂಡಿಯಾ (Air India) ವಿಮಾನ ಅಪಘಾತದ ಹಿಂದೆ ಹಲವು ಕರುಣಾಜನಕ ಕಥೆಗಳಿವೆ. ಪತನಗೊಂಡ ವಿಮಾನದಲ್ಲಿ ಲಂಡನ್‌ಗೆ ಪ್ರಯಾಣ ಬೆಳೆಸಿದ್ದ ಅಣ್ಣ-ತಂಗಿ ದುರಂತ ಅಂತ್ಯ ಕಂಡಿದ್ದಾರೆ.

    ಅಣ್ಣ ಶಗುನ್ ಮತ್ತು ತಂಗಿ ಶುಭಾ ಇಬ್ಬರೂ ಸಾವನ್ನಪ್ಪಿದ್ದಾರೆ. ರಾಜಸ್ಥಾನದ ಉದಯಪುರದವರಾಗಿ ಇವರು ಎಂಬಿಎ ಮುಗಿಸಿದ್ದರು. ಮಾರ್ಬಲ್‌ ವ್ಯಾಪಾರಿ ಪಿಂಕು ಮೋದಿ ಅವರ ಮಕ್ಕಳು. ಇದನ್ನೂ ಓದಿ: ಕನಸಿನ ಮನೆಗೆ ಕಾಲಿಡುವ ಮೊದಲೇ ಸಾವಿನ ಮನೆ ಸೇರಿದ ನರ್ಸ್ ರಂಜಿತಾ

    ತಂದೆ ಜೊತೆ ಮಾರ್ಬಲ್‌ ಬ್ಯುಸಿನೆಸ್‌ಗೆ ಸೇರಿದ್ದರು. ಅಣ್ಣ-ತಂಗಿ ಇಬ್ಬರೂ ಲಂಡನ್‌ ಪ್ರವಾಸಕ್ಕೆ ಹೊರಟಿದ್ದರು. ಆದರೆ, ವಿಮಾನ ಅಪಘಾತದಲ್ಲಿ ಮೃತಪಟ್ಟಿದ್ದಾರೆ.

    230 ಪ್ರಯಾಣಿಕರು, 12 ಸಿಬ್ಬಂದಿ ಹೊತ್ತು ಲಂಡನ್‌ಗೆ ಹೊರಟಿದ್ದ ಏರ್‌ ಇಂಡಿಯಾ ಬೋಯಿಂಗ್‌ ಡ್ರೀಮ್‌ಲೈನರ್‌ ವಿಮಾನ ಗುರುವಾರ ಪತನಗೊಂಡಿತು. ಪ್ರಯಾಣ ಆರಂಭಿಸಿದ ಕೆಲಹೊತ್ತಿನಲ್ಲೇ ಹಾಸ್ಟೆಲ್‌ವೊಂದಕ್ಕೆ ಡಿಕ್ಕಿ ಹೊಡೆದು ವಿಮಾನ ಪತನವಾಯಿತು. ಇದನ್ನೂ ಓದಿ: ಅಹಮದಾಬಾದ್ ವಿಮಾನ ದುರಂತ – ಏರ್ ಇಂಡಿಯಾ ಸಿಇಒ ಕ್ಯಾಂಪ್ಬೆಲ್ ವಿಲ್ಸನ್ ವಿಷಾದ

    ದುರ್ಘಟನೆಯಲ್ಲಿ ವಿಮಾನದಲ್ಲಿದ್ದ 241 ಮಂದಿ ಮೃತಪಟ್ಟಿದ್ದಾರೆ. ಪವಾಡ ಸದೃಶ ರೀತಿಯಲ್ಲಿ ಓರ್ವ ಮಾತ್ರ ದುರಂತದಿಂದ ಪಾರಾಗಿದ್ದಾರೆ. ಆತನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.