Tag: ಆಂಟೊ ಆಂಟೋನಿ

  • ಪುಲ್ವಾಮಾ ದಾಳಿಯಲ್ಲಿ ಪಾಕಿಸ್ತಾನದ ಕೈವಾಡವಿಲ್ಲ- ಕೈ ಸಂಸದ ವಿವಾದಾತ್ಮಕ ಹೇಳಿಕೆ

    ಪುಲ್ವಾಮಾ ದಾಳಿಯಲ್ಲಿ ಪಾಕಿಸ್ತಾನದ ಕೈವಾಡವಿಲ್ಲ- ಕೈ ಸಂಸದ ವಿವಾದಾತ್ಮಕ ಹೇಳಿಕೆ

    ತಿರುವನಂತಪುರಂ: ಇನ್ನೇನು ಕೆಲವೇ ದಿನಗಳಲ್ಲಿ ಲೋಕಸಭಾ ಚುನಾವಣಾ (Loksabha Elections 2024) ದಿನಾಂಕ ಘೋಷಣೆಯಾಗಲಿದೆ. ಈ ಮಧ್ಯೆ ರಾಜಕೀಯ ಪಕ್ಷಗಳ ನಾಯಕರು ವಿವಾದಾತ್ಮಕ ಹೇಳಿಕೆಗಳನ್ನು ನೀಡಲು ಶುರುಮಾಡಿದ್ದಾರೆ. ಅಂತೆಯೇ ಕೇರಳದಲ್ಲಿ ಕಾಂಗ್ರೆಸ್‌ ಸಂದರೊಬ್ಬರು ಹೇಳಿಕೆಯೊಂದನ್ನು ನೀಡುವ ಮೂಲಕ ಇದೀಗ ಬಿಜೆಪಿ ನಾಯಕರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

    ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕಾಂಗ್ರೆಸ್ ಸಂಸದ ಆಂಟೊ ಆಂಟೋನಿ (Anto Antony), ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ ಯೋಧರ ಬಲಿದಾನದ ಲಾಭ ಪಡೆದು 2019ರಲ್ಲಿ ಬಿಜೆಪಿ ಗೆದ್ದಿದೆ ಎಂದು ಹೇಳಿದ್ದಾರೆ. ಜೊತೆಗೆ ಪುಲ್ವಾಮಾ ದಾಳಿಯಲ್ಲಿ ಪಾಕಿಸ್ತಾನದ ಕೈವಾಡವಿಲ್ಲ ಅಂತಾನೂ ಹೇಳಿದ್ದಾರೆ. ಸಂಸದರ ಈ ಹೇಳಿಕೆ ಇದೀಗ ರಾಜಕೀಯ ವಲಯದಲ್ಲಿ ತೀವ್ರ ವಿವಾದ ಹುಟ್ಟುಹಾಕಿದೆ.

    ಕ್ರಮಕ್ಕೆ ಬಿಜೆಪಿ ಆಗ್ರಹ: ಪುಲ್ವಾಮಾ ದಾಳಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ಸಂಸದ ನೀಡಿರುವ ವಿವಾದಾತ್ಮಕ ಹೇಳಿಕೆಗೆ ಬಿಜೆಪಿ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಆಂಟನಿ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸುವಂತೆ ಒತ್ತಾಯಿಸಿದೆ. ಪುಲ್ವಾಮಾ ದಾಳಿಯಲ್ಲಿ (Pulwama Attack) ಪಾಕಿಸ್ತಾನದ ಪಾತ್ರವನ್ನು ನಿರಾಕರಿಸುವ ಮೂಲಕ ಕಾಂಗ್ರೆಸ್ ಸಂಸದರು ದೇಶಕ್ಕೆ ಅವಮಾನ ಮಾಡಿದ್ದಾರೆ ಎಂದು ಕೇರಳ ಬಿಜೆಪಿ ಅಧ್ಯಕ್ಷ ಕೆ ಸುರೇಂದ್ರನ್ ಕಿಡಿಕಾರಿದ್ದಾರೆ. ಆ್ಯಂಟನಿ ವಿರುದ್ಧ ದೇಶದ್ರೋಹದ ಆರೋಪ ಹೊರಿಸಿ ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಉತ್ತರಾಖಂಡದ ಏಕರೂಪ ನಾಗರಿಕ ಸಂಹಿತೆ ಮಸೂದೆಗೆ ರಾಷ್ಟ್ರಪತಿ ಅನುಮೋದನೆ

    ಪುಲ್ವಾಮಾ ದಾಳಿ: 2019 ರ ಫೆಬ್ರವರಿ 14 ರಂದು ಜಮ್ಮು ಮತ್ತು ಕಾಶ್ಮೀರದ ಶ್ರೀನಗರ-ಜಮ್ಮು ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಪುಲ್ವಾಮಾದಲ್ಲಿ ಭಯೋತ್ಪಾದಕರು ಸಿಆರ್‌ಪಿಎಫ್ ಬೆಂಗಾವಲು ಪಡೆಯನ್ನು ಗುರಿಯಾಗಿಸಿಕೊಂಡು ದಾಳಿ ಮಾಡಿದ್ದರು. ಇದರಲ್ಲಿ ಸುಮಾರು 40 ಸೈನಿಕರು ಹುತಾಮರಾಗಿದ್ದರು. ಈ ದಾಳಿಯಲ್ಲಿ ಪಾಕಿಸ್ತಾನದೊಂದಿಗೆ (Pakistan) ನಂಟು ಹೊಂದಿರುವ ಜೈಶ್-ಎ-ಮೊಹಮ್ಮದ್ ಉಗ್ರ ಸಂಘಟನೆಯ ಹೆಸರು ಬೆಳಕಿಗೆ ಬಂದಿತ್ತು. ಇದಕ್ಕೆ ಪ್ರತಿಯಾಗಿ ಭಾರತ ಕೂಡ ಪಾಕಿಸ್ತಾನದಲ್ಲಿರುವ ಭಯೋತ್ಪಾದಕ ಶಿಬಿರಗಳ ಮೇಲೆ ವೈಮಾನಿಕ ದಾಳಿ ನಡೆಸಿತ್ತು.