Tag: ಆಂಧ್ರ ಪ್ರದೇಶ

  • ಮನೆಗೆ ಬಂದ ಪಾರ್ಸೆಲ್‌ನಲ್ಲಿತ್ತು ವ್ಯಕ್ತಿಯ ಮೃತದೇಹ – ಬಾಕ್ಸ್‌ ಓಪನ್‌ ಮಾಡಿ ಮಹಿಳೆ ಶಾಕ್‌!

    ಮನೆಗೆ ಬಂದ ಪಾರ್ಸೆಲ್‌ನಲ್ಲಿತ್ತು ವ್ಯಕ್ತಿಯ ಮೃತದೇಹ – ಬಾಕ್ಸ್‌ ಓಪನ್‌ ಮಾಡಿ ಮಹಿಳೆ ಶಾಕ್‌!

    ಅಮರಾವತಿ: ಮನೆಗೆ ಬಂದ ಪಾರ್ಸೆಲ್‌ನಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮೃತದೇಹ ಕಂಡು ಮಹಿಳೆ ಶಾಕ್‌ ಆಗಿರುವ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ.

    ಜಿಲ್ಲೆಯ ಉಂಡಿ ಮಂಡಲದ ಯಂಡಗಂಡಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಪಾರ್ಸೆಲ್‌ನಲ್ಲಿ ಮೃತದೇಹದ ಜೊತೆಗೆ ಒಂದು ಪತ್ರ ಕೂಡ ಇತ್ತು. ನಾಗ ತುಳಸಿ ಎಂದು ಗುರುತಿಸಲಾದ ಮಹಿಳೆ ತನ್ನ ಮನೆ ನಿರ್ಮಿಸಲು ಹಣಕಾಸಿನ ನೆರವು ಕೋರಿ ಕ್ಷತ್ರಿಯ ಸೇವಾ ಸಮಿತಿಗೆ ತೆರಳಿದ್ದರು. ಆಕೆಯ ಅರ್ಜಿಯ ಆಧಾರದ ಮೇಲೆ ಸಮಿತಿಯು ಆಕೆಗೆ ಟೈಲ್ಸ್ ಕಳುಹಿಸಿತ್ತು.

    ಆಕೆ ಮತ್ತೆ ಸಮಿತಿಗೆ ಮನವಿ ಸಲ್ಲಿಸಿದ್ದರು. ನಿರ್ಮಾಣಕ್ಕೆ ಹೆಚ್ಚಿನ ಸಹಾಯವನ್ನು ಕೇಳಿದ್ದರು. ಸಂಸ್ಥೆಯು ಆಕೆಗೆ ವಿದ್ಯುತ್ ಉಪಕರಣಗಳನ್ನು ಒದಗಿಸುವ ಭರವಸೆ ನೀಡಿತ್ತು. ಮಹಿಳೆಗೆ ವಾಟ್ಸಾಪ್ ಸಂದೇಶದಲ್ಲಿ, ಲೈಟ್‌ಗಳು, ಫ್ಯಾನ್‌ಗಳು ಮತ್ತು ಸ್ವಿಚ್‌ಗಳಂತಹ ವಸ್ತುಗಳನ್ನು ಕಳುಹಿಸಲಾಗುವುದು ಎಂದು ಸಮಿತಿ ತಿಳಿಸಿತ್ತು.

    ಗುರುವಾರ ರಾತ್ರಿ ಮಹಿಳೆ ಮನೆಗೆ ಪಾರ್ಸೆಲ್‌ವೊಂದು ತಲುಪಿತು. ಅದರಲ್ಲಿ ಎಲೆಕ್ಟ್ರಾನಿಕ್ ಉಪಕರಣಗಳು ಇದ್ದವು ಎಂದು ಡೆಲಿವರಿ ಮಾಡುವಾತ ತಿಳಿಸಿದ್ದ. ಮಹಿಳೆ ನಂತರ ಪಾರ್ಸೆಲ್ ತೆರೆದು ನೋಡುತ್ತಿದ್ದಂತೆ ಆಘಾತಕ್ಕೆ ಒಳಗಾಗಿದ್ದಾರೆ. ಪಾರ್ಸೆಲ್‌ನಲ್ಲಿ ವಿದ್ಯುತ್‌ ಉಪಕರಣಗಳಿಗೆ ಬದಲಾಗಿ, ವ್ಯಕ್ತಿಯೊಬ್ಬರ ದೇಹ ಇತ್ತು.

    ಕೂಡಲೇ ಆಕೆಯ ಕುಟುಂಬಸ್ಥರು ಮೃತದೇಹದ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದರು. ಪೊಲೀಸ್ ತಂಡವೊಂದು ಸ್ಥಳಕ್ಕೆ ಧಾವಿಸಿ‌ ಪರಿಶೀಲನೆ ನಡೆಸಿತು. ಅಧಿಕಾರಿಗಳು ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ಸ್ಥಳಾಂತರಿಸಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ತನಿಖೆ ಕೈಗೊಳ್ಳಲಾಗಿದೆ.

    ಮೃತದೇಹದ ಜೊತೆಗೆ ಪಾರ್ಸೆಲ್‌ನಲ್ಲಿ ಪತ್ರವೊಂದು ಸಿಕ್ಕಿದ್ದು, ಅದರಲ್ಲಿ 1.30 ಕೋಟಿ ಕೊಡಬೇಕು ಎಂದು ಮಹಿಳೆಗೆ ಬೇಡಿಕೆ ಇಡಲಾಗಿದೆ. ಬೇಡಿಕೆ ಈಡೇರಿಸಲು ವಿಫಲವಾದರೆ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಕುಟುಂಬಕ್ಕೆ ಎಚ್ಚರಿಕೆ ನೀಡಲಾಗಿದೆ.

  • 1 ತಿಂಗಳ ಹಿಂದೆಯಷ್ಟೇ ನೀತಿ ಸಂಹಿತೆ ಉಲ್ಲಂಘನೆ ಕೇಸ್‌ನಿಂದ ರಿಲೀಫ್‌ ಪಡೆದಿದ್ದ ಅಲ್ಲು ಅರ್ಜುನ್‌

    1 ತಿಂಗಳ ಹಿಂದೆಯಷ್ಟೇ ನೀತಿ ಸಂಹಿತೆ ಉಲ್ಲಂಘನೆ ಕೇಸ್‌ನಿಂದ ರಿಲೀಫ್‌ ಪಡೆದಿದ್ದ ಅಲ್ಲು ಅರ್ಜುನ್‌

    ಅಮರಾವತಿ: ನಟ ಅಲ್ಲು ಅರ್ಜುನ್‌ (Allu Arjun) ಬಂಧನ ಪ್ರಕರಣ ಈಗ ಬಿಸಿ ಬಿಸಿ ಚರ್ಚೆಯ ಸುದ್ದಿಯಾಗಿದೆ. ಆದ್ರೆ ನಟ ಪೊಲೀಸ್‌ ಪ್ರಕರಣ ಎದುರಿಸುತ್ತಿರುವುದು ಇದೇ ಮೊದಲಲ್ಲ. ಒಂದು ತಿಂಗಳ ಹಿಂದೆಯಷ್ಟೇ ತಮ್ಮ ವಿರುದ್ಧ ದಾಖಲಾಗಿದ್ದ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣವನ್ನು ಆಂಧ್ರಪ್ರದೇಶ ಹೈಕೋರ್ಟ್‌ (Andhra Pradesh HC) ವಜಾಗೊಳಿಸಿತ್ತು.

    ಹೌದು. ಕಳೆದ ಮೇ ತಿಂಗಳಲ್ಲಿ ನಡೆದ ವಿಧಾನಸಭಾ ಚುನಾವಣೆ ವೇಳೆ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದ ಮೇಲೆ ನಂದ್ಯಾಲ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದರು. ಇದರ ವಿರುದ್ಧ ಅಲ್ಲು ಅರ್ಜುನ್‌ ಹೈಕೋರ್ಟ್‌ ಮೆಟ್ಟಿಲೇರಿದ್ದರು. ವಿಚಾರಣೆ ನಡೆಸಿದ ಬಳಿಕ ಕೋರ್ಟ್‌ ಈ ಪ್ರಕರಣವನ್ನ ವಜಾಗೊಳಿಸಿತ್ತು.

    ಏನದು ಪ್ರಕರಣ?
    ಕಳೆದ ಮೇ ನಲ್ಲಿ ನಡೆದ ವಿಧಾನಸಭಾ ಚುನಾವಣೆ ವೇಳೆ ನಂದ್ಯಾಲ (Nandyal) ಕ್ಷೇತ್ರದ ವೈಎಸ್‌ಆರ್‌ ಕಾಂಗ್ರೆಸ್‌ ಅಭ್ಯರ್ಥಿ ಶಿಲ್ಪಾ ರವಿ ಚಂದ್ರ ಕಿಶೋರ್ ರೆಡ್ಡಿ (Silpa Ravi Chandra Kishore Reddy) ಮನೆಗೆ ಅಲ್ಲು ಅರ್ಜುನ್‌ ಭೇಟಿ ನೀಡಿದ್ದರು. ಪ್ರಚಾರದ ಕೊನೆಯ ದಿನ ತನ್ನ ಸ್ನೇಹಿತನೂ ಆಗಿರುವ ಅಭ್ಯರ್ಥಿಗೆ ಬೆಂಬಲ ಸೂಚಿಸಲು ತೆರಳಿದ್ದರು. ಈ ವೇಳೆ ಅಲ್ಲು ಅರ್ಜುನ್‌ ಅವರ ಲಕ್ಷಾಂತರ ಅಭಿಮಾನಿಗಳು ಒಂದೇ ಕಡೆ ಜಮಾಯಿಸಿದ್ದರು. ಅಂದು ನಿಷೇಧಾಜ್ಞೆ ಸೆಕ್ಷನ್‌ 144 ಜಾರಿಯಲ್ಲಿದ್ದ ಕಾರಣ ಸರ್ಕಾರಿ ಆದೇಶ ಪಾಲನೆ ಮಾಡಿಲ್ಲ ಎಂದು ಅಧಿಕಾರಿಯೊಬ್ಬರು ಟು ಟೌನ್ ಪೊಲೀಸ್ ಠಾಣೆಯಲ್ಲಿ ನಟ ಮತ್ತು ವೈಎಸ್‌ಆರ್‌ಸಿಪಿ ಅಭ್ಯರ್ಥಿ ವಿರುದ್ಧ ದೂರು ದಾಖಲಿಸಿದ್ದರು.

    ಅಲ್ಲದೇ ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದ ಭಾರತೀಯ ಚುನಾವಣಾ ಆಯೋಗ (ECI) ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿ ವಿಫಲವಾದ ಕಾರಣ ಅಂದಿನ ನಂದ್ಯಾಲ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಘುವೀರ್ ರೆಡ್ಡಿ ವಿರುದ್ಧ ಕ್ರಮಕ್ಕೆ ಆದೇಶಿಸಿತ್ತು. ಆಂಧ್ರಪ್ರದೇಶದ ಪೊಲೀಸ್ ಮಹಾನಿರ್ದೇಶಕರಿಗೆ ಎಸ್‌ಪಿ, ಇತರ ಸಿಬ್ಬಂದಿ ವಿರುದ್ಧ ಇಲಾಖಾ ತನಿಖೆಗೆ ಆದೇಶಿಸಿತ್ತು.

    ಈ ಬೆನ್ನಲ್ಲೇ ಅಲ್ಲು ಅರ್ಜುನ್ ತಮ್ಮ ವಿರುದ್ಧದ ಪ್ರಕರಣ ರದ್ದುಗೊಳಿಸುವಂತೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಅಕ್ಟೋಬರ್ 25 ರಂದು ಮಧ್ಯಂತರ ಆದೇಶ ಪ್ರಕಟಿಸಿದ ಕೋರ್ಟ್‌ ನವೆಂಬರ್ 6ಕ್ಕೆ ವಿಚಾರಣೆ ಮುಂದೂಡಿ, ಯಾವುದೇ ಕಾನೂನು ಕ್ರಮ ಕೈಗೊಳ್ಳದಂತೆ ಸೂಚಿಸಿತ್ತು. ನ.6ರಂದು ನಡೆದ ವಿಚಾರಣೆಯಲ್ಲಿ ವಾದ-ಪ್ರತಿವಾದ ಆಲಿಸಿದ ಬಳಿಕ ಕೋರ್ಟ್‌ ಪ್ರಕರಣವನ್ನು ವಜಾಗೊಳಿಸಿತ್ತು. ಒಂದು ತಿಂಗಳ ಹಿಂದೆಯಷ್ಟೇ ಒಂದು ಕೇಸ್‌ನಿಂದ ಬಿಗ್‌ ರಿಲೀಫ್‌ ಪಡೆದಿದ್ದ ಅಲ್ಲು ಅರ್ಜುನ್‌ ಇದೀಗ ಮತ್ತೊಂದು ಪ್ರಕರಣದಲ್ಲಿ ಬಂಧನವಾಗಿದ್ದಾರೆ.

    ಅಲ್ಲು ಅರ್ಜುನ್‌ ಅರೆಸ್ಟ್:‌
    ಪುಷ್ಪ 2′ ಪ್ರೀಮಿಯರ್ ಶೋ ವೇಳೆ ಕಾಲ್ತುಳಿತ ಸಂಭವಿಸಿ ಮಹಿಳೆ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿಂತೆ ನಟ ಅಲ್ಲು ಅರ್ಜುನ್ ಅವರನ್ನು ಹೈದರಾಬಾದ್‌ನ ಚಿಕ್ಕಡಪಲ್ಲಿ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಅಲ್ಲು ಅರ್ಜುನ್‌ನನ್ನು ಬಂಧಿಸಿರುವ ಪೊಲೀಸರು ಮೆಡಿಕಲ್ ಟೆಸ್ಟ್‌ಗೆ ಉಸ್ಮಾನಿಯಾ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಬಳಿಕ ನಾಂಪಲ್ಲಿ ಕೋರ್ಟ್‌ಗೆ ಹಾಜರು ಪಡಿಸಲಿದ್ದಾರೆ.

    ಏನಿದು ಕೇಸ್?
    ಇದೇ ತಿಂಗಳ ಡಿಸೆಂಬರ್ 4 ರಂದು ನಡೆದ ʻಪುಷ್ಪ 2: ದಿ ರೂಲ್ʼನ ಪ್ರೀಮಿಯರ್ ಶೋ ವೇಳೆ ಹೈದರಾಬಾದ್‌ನ ಸಂಧ್ಯಾ ಥಿಯೇಟರ್‌ನಲ್ಲಿ ಕಾಲ್ತುಳಿತ ಸಂಭವಿಸಿ ರೇವತಿ (39) ಎಂಬ ಮಹಿಳೆ ಸಾವನ್ನಪ್ಪಿದ್ದರು. ಅವರ 9 ವರ್ಷದ ಮಗ ಕಾಲ್ತುಳಿತಕ್ಕೆ ಸಿಕ್ಕಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಈ ಪ್ರಕರಣದಲ್ಲಿ ಅಲ್ಲು ಅರ್ಜುನ್ ಸಹ ಆರೋಪಿಯಾಗಿದ್ದರು. ಬಿಎನ್‌ಎಸ್ 105, 118, 105 ಅಡಿ ಪ್ರಕರಣ ದಾಖಲಿಸಿದ್ದ ಪೊಲೀಸರು ಇಂದು ಬಂಧಿಸಿದ್ದಾರೆ.

    ಈ ಪ್ರಕರಣ ವಜಾಗೊಳಿಸುವಂತೆ ನಟ ಈಗಾಗಲೇ ಹೈಕೋರ್ಟ್‌ ಅರ್ಜಿ ಸಲ್ಲಿಸಿದ್ದಾರೆ. ಈನಡುವೆ ಚಿಕ್ಕಡಪಲ್ಲಿ ಪೊಲೀಸರು ಏಕಾಏಕಿ ಬಂಧಿಸಿದ್ದಾರೆ. ಇದು ಪುಷ್ಪಾ-2 ಸಕ್ಸಸ್ ಸಂಭ್ರಮದಲ್ಲಿರುವ ಚಿತ್ರತಂಡಕ್ಕೆ ಹಾಗೂ ಅಲ್ಲು ಅರ್ಜುನ್ ಅಭಿಮಾನಿಗಳಿಗೆ ಶಾಕ್ ಕೊಟ್ಟಂತಾಗಿದೆ.

    25 ಲಕ್ಷ ಪರಿಹಾರ ಘೋಷಿಸಿದ್ದ ನಟ:
    ಇತ್ತೀಚೆಗೆ ನಟ ಅಲ್ಲು ಅರ್ಜುನ್ ಸಂಧ್ಯಾ ಥಿಯೇಟರ್‌ನಲ್ಲಿ ಸಂಭವಿಸಿದ ದುರಂತ ನೆನೆದು ಸಂತಾಪ ಸೂಚಿಸಿದ್ದರು. ಅಲ್ಲದೇ ಮೃಥ ರೇವತಿ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದರು.

  • ಪತ್ನಿಯ ಮಾರ್ಫ್‌ ಫೋಟೋ ಬಳಸಿ ಆ್ಯಪ್‌ ಏಜೆಂಟರ ಕಿರುಕುಳ – 2,000 ರೂ. ಸಾಲ ಪಡೆದಿದ್ದ ವ್ಯಕ್ತಿ ಆತ್ಮಹತ್ಯೆ

    ಪತ್ನಿಯ ಮಾರ್ಫ್‌ ಫೋಟೋ ಬಳಸಿ ಆ್ಯಪ್‌ ಏಜೆಂಟರ ಕಿರುಕುಳ – 2,000 ರೂ. ಸಾಲ ಪಡೆದಿದ್ದ ವ್ಯಕ್ತಿ ಆತ್ಮಹತ್ಯೆ

    ಅಮರಾವತಿ: ತ್ವರಿತ ಸಾಲ ನೀಡುವ ಆ್ಯಪ್‌ (Loan App) ಮೂಲಕ 2,000 ರೂ. ಸಾಲ ಪಡೆದಿದ್ದ ವ್ಯಕ್ತಿಯೊಬ್ಬ ಆ್ಯಪ್‌ ಏಜೆಂಟರ ಕಿರುಕುಳದಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆಂಧ್ರಪ್ರದೇಶದಲ್ಲಿ (Andhra Pradesh) ನಡೆದಿದೆ.

    ಹೈದರಾಬಾದ್‌ ಮೂಲದ ನರೇಂದ್ರ (25) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಆ್ಯಪ್‌ ಏಜೆಂಟರು ತನ್ನ ಪತ್ನಿಯ ಮಾರ್ಫ್‌ ಮಾಡಿದ ಅಶ್ಲೀಲ ಫೋಟೋವನ್ನು ನರೇಂದ್ರ ಕುಟುಂಬಸ್ಥರು ಹಾಗೂ ಸ್ನೇಹಿತರಿಗೆ ಕಳುಹಿಸಿದ್ದಾರೆ. ಇದರಿಂದ ಮನನೊಂದ ನರೇಂದ್ರ ಆತ್ಮಹತ್ಯೆಗೆ ಶರಣಾಗಿದ್ದಾನೆ. ಇದನ್ನೂ ಓದಿ: ಮುಂದಿನ 5 ವರ್ಷದಲ್ಲಿ ಆಟೋಮೊಬೈಲ್ ಉದ್ಯಮದಲ್ಲಿ ವಿಶ್ವದಲ್ಲೇ ಭಾರತ ನಂಬರ್‌ 1: ಗಡ್ಕರಿ ಭವಿಷ್ಯ

    25 ವರ್ಷದ ನರೇಂದ್ರ ಕಳೆದ 6 ತಿಂಗಳ ಹಿಂದೆಯಷ್ಟೇ ಅಖಿಲಾ ಎಂಬಾಕೆಯೊಂದಿಗೆ ಪ್ರೇಮ ವಿವಾಹವಾಗಿದ್ದ. ದಂಪತಿ ಇಬ್ಬರೂ ವಿಶಾಖಪಟ್ಟಂನಲ್ಲಿ ನೆಲೆಸಿದ್ದರು. ನರೇಂದ್ರ ಮೀನುಗಾರಿಕೆ ಕೆಲಸ ಮಾಡುತ್ತಿದ್ದ. ಇತ್ತೀಚೆಗೆ ಹಮಾವಾನ ವೈಪರಿತ್ಯದಿಂದಾಗಿ ಆರ್ಥಿಕ ನಷ್ಟ ಉಂಟಾಗಿತ್ತು. ಈ ವೇಳೆ ತನ್ನ ಖರ್ಚು ನಿಭಾಯಿಸಲು ತ್ವರಿತ ಸಾಲ ನೀಡುವ ಆ್ಯಪ್‌ನಿಂದ 2,000 ರೂ. ಸಾಲ ಪಡೆದುಕೊಂಡಿದ್ದ. ಸಾಲ ಪಡೆದ ಕೆಲದಿನಗಳ ನಂತರ ಆ್ಯಪ್‌ ಏಜೆಂಟರು ಸಾಲ ಮರುಪಾವತಿ ಮಾಡುವಂತೆ ಕಿರುಕುಳ ನೀಡಲು ಶುರು ಮಾಡಿದ್ದಾರೆ. ಅಸಭ್ಯ ಭಾಷೆಗಳಿಂದ ಸಂದೇಶ ಕಳುಹಿಸಿದ್ದಾರೆ. ಇಷ್ಟಕ್ಕೆ ಬಿಡದೇ ನರೇಂದ್ರ ಪತ್ನಿಯ ಮಾರ್ಫ್‌ ಮಾಡಿದ ಅಶ್ಲೀಲ ಫೋಟೋವನ್ನ ಕುಟುಂಬಸ್ಥರು, ಸ್ನೇಹಿತರಿಗೆ ಕಳುಹಿಸಿದ್ದಾರೆ. ಕೊನೆಗೆ ಆತನ ಪತ್ನಿಗೂ ಫೋಟೋ ಕಳುಹಿಸಿದ ಬಳಿಕ ಈ ವಿಷಯ ನರೇಂದ್ರನಿಗೆ ಗೊತ್ತಾಗಿದೆ.

    ಬಳಿಕ 2 ಸಾವಿರ ರೂ. ಸಾಲ ತೀರಿಸಲು ಬೇರೊಬ್ಬರ ಬಳಿ ಸಹಾಯ ಕೇಳಿದ್ದರು. ಆದ್ರೆ ಹಣ ಸಿಗದೇ ಸಾಲ ಮರುಪಾವತಿ ಮಾಡಲಾಗಲಿಲ್ಲ. ಇದರಿಂದ ಆ್ಯಪ್‌ ಏಜೆಂಟರು ನಿರಂತರವಾಗಿ ಕಿರುಕುಳ ನೀಡಲು ಶುರು ಮಾಡಿದರು. ಕೊನೆಗೆ ಮನನೊಂದ ನರೇಂದ್ರ ಆತ್ಮಹತ್ಯೆಗೆ ಶರಣಾಗಿದ್ದಾನೆ. ಇದನ್ನೂ ಓದಿ: ಅತುಲ್ ಸುಭಾಷ್ ಆತ್ಮಹತ್ಯೆ | ಹಣಕ್ಕಾಗಿ ಕೇಸ್‌ ಮೇಲೆ ಕೇಸ್‌ – ಪತ್ನಿ ಸೇರಿದಂತೆ ನಾಲ್ವರ ವಿರುದ್ಧ ಎಫ್‌ಐಆರ್‌

    ಒಂದೇ ವಾರದಲ್ಲಿ 3 ಕೇಸ್‌:
    ಆಂಧ್ರಪ್ರದೇಶದಲ್ಲಿ ಕಳೆದ ಒಂದು ವಾರದಲ್ಲಿ ತ್ವರಿತ ಆ್ಯಪ್‌ನಿಂದ ಸಾಲ ಪಡೆದವರ 3ನೇ ಆತ್ಮಹತ್ಯೆ ಪ್ರಕರಣ ಇದಾಗಿದೆ. ಇದಲ್ಲದೇ ನೆಂದ್ಯಾಲ್‌ ಜಿಲ್ಲೆಯಲ್ಲಿ ಇಂದು (ಡಿ.11) ಸಹ ಯುವತಿಯೊಬ್ಬಳು ಆಪ್‌ ಏಜೆಂಟರ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ್ದಳು, ಅದೃಷ್ಟವಶಾತ್‌ ಪೊಲೀಸರು ಆಕೆಯನ್ನ ರಕ್ಷಣೆ ಮಾಡಿದ್ದಾರೆ ಎಂದು ವರದಿಯಾಗಿದೆ. ಇದನ್ನೂ ಓದಿ: ಶರಾವತಿ ಜಲವಿದ್ಯುತ್‌ ಯೋಜನೆ – ಸಂಸತ್‌ನಲ್ಲಿ ಕನ್ನಡದಲ್ಲೇ ಪ್ರಸ್ತಾಪಿಸಿದ ಬಿ.ವೈ.ರಾಘವೇಂದ್ರ

  • ನಿನ್ನ ನೋಡ್ಬೇಕು ಬಾ ಅಂತ ಕರೆಸಿ ಪ್ರಿಯತಮೆಯಿಂದ್ಲೇ ಪ್ರಿಯಕರನ ಕಿಡ್ನ್ಯಾಪ್‌, 5 ಲಕ್ಷ ಸುಲಿಗೆ!

    ನಿನ್ನ ನೋಡ್ಬೇಕು ಬಾ ಅಂತ ಕರೆಸಿ ಪ್ರಿಯತಮೆಯಿಂದ್ಲೇ ಪ್ರಿಯಕರನ ಕಿಡ್ನ್ಯಾಪ್‌, 5 ಲಕ್ಷ ಸುಲಿಗೆ!

    – ಚಿನ್ನಾಭರಣ ಹಾಕ್ಕೊಂಡು ಇನ್ನೋವಾ ಕಾರಿನಲ್ಲಿ ಬಾ ಎಂದಿದ್ದ ಪ್ರಿಯತಮೆ

    ಬೆಂಗಳೂರು: ಪ್ರಿಯತಮೆ (Lover) ಮೀಟ್‌ ಮಾಡೋಕೆ ಬಂದಿದ್ದವನನ್ನ ಕಿಡ್ನ್ಯಾಪ್‌ ಮಾಡಿ ಸುಲಿಗೆ ಮಾಡಿ ಸಿನಿಮೀಯ ರೀತಿಯಲ್ಲಿ ತಗಲಾಕ್ಕೊಂಡ ಘಟನೆ ಬೆಂಗಳೂರಿನ ಕೋರಮಂಗಲ ಪೊಲೀಸ್‌ ಠಾಣಾ (Koramangala Police Station) ವ್ಯಾಪ್ತಿಯಲ್ಲಿ ನಡೆದಿದೆ. ಪ್ರಿಯತಮೆಯೇ ಸುಲಿಗೆ ಹಿಂದಿನ ಕಿಂಗ್‌ಪಿನ್‌ ಎಂದು ತಿಳಿದು ಪ್ರಿಯಕರ ಬೆಚ್ಚಿಬಿದ್ದಿದ್ದಾನೆ.

    ಪ್ರಿಯತಮೆ ಸ್ಕೆಚ್‌ ಹಾಕಿದ್ದು ಹೇಗೆ?
    ಆಂಧ್ರಪ್ರದೇಶದ ನೆಲ್ಲೂರಿನಲ್ಲಿ ಶಿವ ಮತ್ತು ಮೋನಿಕಾ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು. ಎಲ್ಲವೂ ಚೆನ್ನಾಗಿಯೇ ಇತ್ತು. ಹೀಗಿರುವಾಗ ಶಿವನಿಗೆ ಕರೆ ಮಾಡಿ ನನ್ನ ಸ್ನೇಹಿತರು ನಿನ್ನ ನೋಡಬೇಕಂತೆ, ನಿನ್ನ ಹತ್ರ ಇರುವ ಚಿನ್ನಾಭರಣ ಹಾಕ್ಕೊಂಡು, ಇನ್ನೋವಾ ಕಾರಿನಲ್ಲಿ ಬಾ ಅಂತಾ ಫೋನ್‌ ಮಾಡಿದ್ಲು. ಮೋನಿಕಾ ಮಾತು ನಂಬಿದ ಪ್ರಿಯಕರ 60 ಗ್ರಾಂ ಚಿನ್ನಾಭರಣದ ಜೊತೆಗೆ ಇನ್ನೋವಾ ಕಾರಿನಲ್ಲಿ ಬಂದಿದ್ದಾನೆ.

    ಈ ವೇಳೆ ಮೋನಿಕಾ ಅಂಡ್ ಗ್ಯಾಂಗ್ ಶಿವನನ್ನ ಕಿಡ್ನ್ಯಾಪ್ ಮಾಡಿ ಮೈಮೇಲಿದ್ದ ಚಿನ್ನಾಭರಣ ದೋಚಿ 10 ಲಕ್ಷ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ. ಆದ್ರೆ ಪ್ರಿಯತಮೆ ಶಿವನಿಗೆ 5 ಲಕ್ಷ ರೂ. ಕೊಡೋಕೆ ಒಪ್ಪಿಸಿದ್ದಳು. ಎಟಿಎಂ ಕಾರ್ಡ್ ಬೆಂಗಳೂರಿನ ಮೆಜೆಸ್ಟಿಕ್ ಅಡ್ರೆಸ್‌ಗೆ ಕೋರಿಯರ್ ಮಾಡಿಸಿಕೊಡು ಕೋರಮಂಗಲಕ್ಕೆ ಹಣ ಡ್ರಾ ಮಾಡಿಕೊಳ್ಳೋಕೆ ಬಂದಿದ್ದರು. ಆದ್ರೆ ಕೋರಮಂಗಲದ ಎಟಿಎಂನಲ್ಲಿ ಹಣ ಡ್ರಾ ಮಾಡುವ ವೇಳೆ ಆರೋಪಿಗಳ ಮಧ್ಯೆ ಗಲಾಟೆ ನಡೆದಿದೆ. ಇದೇ ವೇಳೆ ರೌಂಡ್ಸ್‌ನಲ್ಲಿದ್ದ ಪಿಎಸ್‌ಐ ಮಾದೇಶ್‌ ಅನುಮಾನಗೊಂಡು ವಿಚಾರಣೆ ನಡೆಸಿದಾಗ ಕಿಡ್ನ್ಯಾಪ್ ಮತ್ತು ಸುಲಿಗೆ ಪ್ರಕರಣ ಬೆಳಕಿಗೆ ಬಂದಿದೆ.

    ಪ್ರಿಯತಮೆ ಮೋನಿಕಾಳೇ ಕಿಂಗ್ ಪಿನ್ ಅನ್ನೋದನ್ನು ಕೇಳಿ ಪ್ರಿಯಕರ ಶಿವ ಶಾಕ್ ಆಗಿದ್ದಾನೆ. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಕೋರಮಂಗಲ ಪೊಲೀಸರು ಆರೋಪಿಗಳಾದ ಮೋನಿಕಾ, ಹರೀಶ್, ಹರಿಕೃಷ್ಣ, ನರೇಶ್, ರಾಜ್ ಕುಮಾರ್, ನರಸಿಂಹ, ಅಂಜನೀಲ್‌ನನ್ನ ಬಂಧಿಸಿದ್ದಾರೆ. ಬಂಧಿತ ಏಳು ಮಂದಿಯೂ ಆಂಧ್ರದ ನೆಲ್ಲೂರು ಮೂಲದವರು ಎಂದು ತಿಳಿಸಿದ್ದಾರೆ.

    ಸೌತ್ ಈಸ್ಟ್ ಡಿಸಿಪಿ ಹೇಳಿದ್ದೇನು?
    ಇನ್ನೂ ಪ್ರಕರಣದ ಕುರಿತು ಮಾತನಾಡಿದ ಸೌತ್ ಈಸ್ಟ್ ಡಿಸಿಪಿ ಸಾರಾ ಫಾತಿಮಾ, ಪ್ರಕರಣದಲ್ಲಿ ಯುವತಿ ಸೇರಿ 7 ಆರೋಪಿಗಳ ಬಂಧನವಾಗಿದೆ. 7 ಜನ ಆರೋಪಿಗಳಲ್ಲಿ ಇಬ್ಬರ ಮೇಲೆ 5ಕ್ಕೂ ಹೆಚ್ಚು ಪ್ರಕರಣಗಳಿವೆ. ದೂರುದಾರ, ಆರೋಪಿ ಯುವತಿಗೆ 3-4 ವರ್ಷದಿಂದ ಪರಿಚಯದಲ್ಲಿದ್ದ, ನೆಲ್ಲೂರಿನಲ್ಲಿ ಮೆಡಿಕಲ್ ಶಾಪ್ ನಡೆಸುತ್ತಿದ್ದ. ಕೋರಮಂಗಲ ಎಸ್‌ಐ ರಾತ್ರಿ ರೌಂಡ್ಸ್‌ನಲ್ಲಿದ್ದಾ ಗ ಎಟಿಎಂ ಬಳಿ ಆರೋಪಿಗಳ ನಡುವೆ ಗಲಾಟೆ ನಡೆದಿದೆ. 3 ಜನ ಕಿತ್ತಾಡಿಕೊಳ್ಳೋದು ಕಂಡು ಬಂದಾಗ ಅದನ್ನ ಗಮನಿಸಿದ್ದಾರೆ. ಅವರ ಮೇಲೆ ಸಂದೇಹ ಬಂದು ಸ್ಟೇಷನ್‌ಗೆ ಕರೆದುಕೊಂಡು ಬಂದಿದ್ದಾರೆ. ವಿಚಾರಣೆ ಮಾಡಿದಾಗ ಕಿಡ್ನಾಪ್ ಆಗಿರೋದು ಬೆಳಕಿಗೆ ಬಂದಿದೆ. ಹಣ ಡ್ರಾ ಮಾಡ್ತಾ ಇರೋದು ಸುಲಿಗೆ ಹಣ ತಿಳಿದುಬಂದಿದೆ ಎಂದು ತಿಳಿಸಿದ್ದಾರೆ.

    ಆರೋಪಿ ಮೋನಿಕಾ ಅವಳೇ ಶಿವನನ್ನ ಆಂಧ್ರದಿಂದ ಹಿಂದೂಪುರದ ಬಳಿಯ ಪೆನುಕೊಂಡ ಪಾವಗಡ ಹತ್ರ ಕರೆಸಿದ್ದಾಳೆ. ಬಳಿಕ 4 ಆರೋಪಿಗಳು ಕಿಡ್ನ್ಯಾಪ್‌ ಮಾಡಿ ಪಾವಗಡದ ಒಂದು ಖಾಸಗಿ ಹೋಟೇಲ್‌ನಲ್ಲಿ 3 ದಿನ ಕೂಡಿ ಹಾಕಿದ್ದಾರೆ. ಅವನ ಬಳಿ ಇರುವ ಚಿನ್ನಾಭರಣ ಪಡೆದು ಅಡವಿಟ್ಟಿದ್ದಾರೆ. ಮತ್ತೆ ಹೆಚ್ಚಿನ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ. ದೂರುದಾರ ತನ್ನ ಸ್ನೇಹಿತರಿಂದ ಬ್ಯಾಂಕ್‌ಗೆ 5 ಲಕ್ಷ ಹಾಕಿಸಿಕೊಂಡಿದ್ದಾನೆ. ನಂತರ ಡೆಬಿಟ್ ಕಾರ್ಡ್ ಮನೆಯಲ್ಲಿ ಬಿಟ್ಟು ಬಂದಿದ್ದೇನೆ ಅದನ್ನ ಬೆಂಗಳೂರು ಅಡ್ರೆಸ್‌ಗೆ ಕೋರಿಯರ್ ಮಾಡಿ ಎಂದು ಹೇಳಿದ್ದಾನೆ. ಹಣವನ್ನ ವಿತ್‌ಡ್ರಾ ಮಾಡುವ ವೇಳೆ ಆರೋಪಿಗಳು ಸಿಕ್ಕಿ ಬಿದ್ದಿದ್ದಾರೆ. 5 ಲಕ್ಷ ರೂ. ನೀಡಿರುವುದಾಗಿ ದೂರುದಾರ ಹೇಳಿದ್ದಾನೆ, ಈ ಸಂಬಂಧ ತನಿಖೆ ನಡೆಯುತ್ತಿದೆ ಎಂದು ತಿಳಿದಿದ್ದಾರೆ.

  • ಬಿಹಾರ, ಆಂಧ್ರಕ್ಕೆ ಬಂಪರ್‌ ಗಿಫ್ಟ್‌ – 6,798 ಕೋಟಿ ಮೊತ್ತದ 2 ರೈಲ್ವೇ ಯೋಜನೆಗಳಿಗೆ ಕೇಂದ್ರ ಕ್ಯಾಬಿನೆಟ್ ಅಸ್ತು

    ಬಿಹಾರ, ಆಂಧ್ರಕ್ಕೆ ಬಂಪರ್‌ ಗಿಫ್ಟ್‌ – 6,798 ಕೋಟಿ ಮೊತ್ತದ 2 ರೈಲ್ವೇ ಯೋಜನೆಗಳಿಗೆ ಕೇಂದ್ರ ಕ್ಯಾಬಿನೆಟ್ ಅಸ್ತು

    ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (Narendra Modi) ನೇತೃತ್ವದ ಕ್ಯಾಬಿನೆಟ್‌ ಗುರುವಾರ ಬಿಹಾರ ಮತ್ತು ಆಂಧ್ರ ಪ್ರದೇಶದ 2 ರೈಲ್ವೆ ಯೋಜನೆಗಳಿಗೆ ಅನುಮೋದನೆ ನೀಡಿದೆ. ಆಂಧ್ರ ಪ್ರದೇಶದ ಅಮರಾವತಿ ಮತ್ತು ಉತ್ತರ ಬಿಹಾರದಿಂದ ಈಶಾನ್ಯ ರಾಜ್ಯಗಳೊಂದಿಗೆ ಸಂಪರ್ಕ ಕಲ್ಪಿಸುವ ಯೋಜನೆ ಇದಾಗಿದೆ.

    ಅಮರಾವತಿ ರೈಲ್ವೆ ಯೋಜನೆಯು (Amaravati Railway Projects) 87 ಕಿಮೀ ರೈಲುಮಾರ್ಗ ನಿರ್ಮಿಸುವ ಯೋಜನೆಯಾಗಿದ್ದು, ಸುಮಾರು 2,245 ಕೋಟಿ ರೂ. ವೆಚ್ಚ ಆಗಲಿದೆ ಎಂದು ಅಂದಾಜಿಸಲಾಗಿದೆ. ಈ ಹೊಸ ರೈಲ್ವೆ ಯೋಜನೆಯು ಹೈದರಾಬಾದ್‌, ಚೆನ್ನೈ ಮತ್ತು ಕೋಲ್ಕತ್ತಾದಂತಹ ಪ್ರಮುಖ ನಗರಗಳಿಗೆ ನೇರ ರೈಲ್ವೆ ಸಂಪರ್ಕವನ್ನು ಕಲ್ಪಿಸುತ್ತದೆ. ಅಲ್ಲದೇ ಮಚಲಿಪಟ್ಟಣಂ, ಕೃಷ್ಣಪಟ್ಟಣಂ ಮತ್ತು ಕಾಕಿನಾಡ ಬಂದರುಗಳಿಗೂ ಸಂಪರ್ಕ ಕಲ್ಪಿಸುತ್ತದೆ. ಇದನ್ನೂ ಓದಿ: ಶಿವಮೊಗ್ಗ | ವಾಹನ ತಪಾಸಣೆ ವೇಳೆ ಟ್ರಾಫಿಕ್ ಪೊಲೀಸ್‌ನನ್ನೇ ಬಾನೆಟ್ ಮೇಲೆ ಹೊತ್ತೋಯ್ದ ಕಾರು ಚಾಲಕ

    2ನೇ ಯೋಜನೆಯು ಉತ್ತರ ಬಿಹಾರ (North Bihar) ಮತ್ತು ಈಶಾನ್ಯ ರಾಜ್ಯಗಳ ನಡುವಿನ ಸಂಪರ್ಕ ಹೆಚ್ಚಿಸುವ ಗುರಿ ಹೊಂದಿದೆ, ಇದು 256 ಕಿಮೀ ಉದ್ದದ ರೈಲು ಮಾರ್ಗ ನಿರ್ಮಿಸುವ ಯೋಜನೆಯಾಗಿದೆ. ಡಬಲ್‌ ಲೈನ್‌ ರೈಲು ಮಾರ್ಗ ಇದಾಗಿದ್ದು, 4,553 ಕೋಟಿ ರೂ. ವೆಚ್ಚ ತಗುಲಲಿದೆ ಎಂದು ಅಂದಾಜಿಸಲಾಗಿದೆ. ಈ ಮಾರ್ಗದಲ್ಲಿ ಸುಮಾರು 40 ಸೇತುವೆಗಳೂ ಇರಲಿವೆ. ಜೊತೆಗೆ ಪವಿತ್ರ ನಗರವಾದ ಅಯೋಧ್ಯೆಯನ್ನು ಸೀತಾಮರ್ಹಿಯೊಂದಿಗೆ ಸಂಪರ್ಕಿಸುತ್ತದೆ.

    ಎರಡೂ ಯೋಜನೆಗಳಿಗೆ 6,798 ಕೋಟಿ ರೂ. ವೆಚ್ಚವಾಗಲಿದೆ ಎಂದು ಅಂದಾಜಿಸಲಾಗಿದ್ದು, ಪ್ರಧಾನಿ ಮೋದಿ ನೇತೃತ್ವದ ಕ್ಯಾಬಿನೆಟ್‌ ಸಮಿತಿ ಹಸಿರು ನಿಶಾನೆ ತೋರಿದೆ. ಇದನ್ನೂ ಓದಿ: ಮಹಾ ಚುನಾವಣೆ: ಅಜಿತ್ ಪವಾರ್ ಬಣಕ್ಕೆ ಸಿಕ್ತು ಗಡಿಯಾರ ಚಿಹ್ನೆ – ಸುಪ್ರೀಂ ಕೋರ್ಟ್ ಅನುಮತಿ

    ಈ ಯೋಜನೆಯ ಅನುಕೂಲವೇನು?
    ಸುಮಾರು 313 ಕಿಮೀ ರೈಲು ಮಾರ್ಗ ಸ್ಥಾಪಿಸುವ ಈ ಯೋಜನೆಯು 168 ಹಳ್ಳಿಗಳನ್ನು ಸಂಪರ್ಕಿಸುತ್ತವೆ. ಸುಮಾರು 12 ಲಕ್ಷ ಜನರಿಗೆ ಅನುಕೂಲ ಒದಗಿಸಲಿದೆ. ಕೃಷಿ ಉತ್ಪನ್ನಗಳು, ರಸಗೊಬ್ಬರ, ಕಲ್ಲಿದ್ದಲು, ಕಬ್ಬಿಣದ ಅದಿರು, ಉಕ್ಕು ಮತ್ತು ಸಿಮೆಂಟ್ ಮುಂತಾದ ಸರಕುಗಳನ್ನು ಸಾಗಾಟಕ್ಕೆ ಹೊಸ ಮಾರ್ಗ ಸಿಕ್ಕಂತಾಗುತ್ತದೆ. ಇದನ್ನೂ ಓದಿ: ಜಾತಿ ನಿಂದನೆ ಪ್ರಕರಣದಲ್ಲಿ 98 ಜನಕ್ಕೆ ಜೀವಾವಧಿ – ಕೊಪ್ಪಳ ಜಿಲ್ಲಾ ಕೋರ್ಟ್‌ ಐತಿಹಾಸಿಕ ತೀರ್ಪು!

  • ತಿಮ್ಮಪ್ಪನ ದರ್ಶನಕ್ಕೆ ಹೆಚ್ಚಾಯ್ತು ಡಿಮ್ಯಾಂಡ್ – ಪ್ರತಿದಿನ 1,000 ಜನರಿಗೆ ನೇರ ದರ್ಶನಕ್ಕೆ ಅವಕಾಶ ನೀಡುವಂತೆ KSTDC ಮನವಿ

    ತಿಮ್ಮಪ್ಪನ ದರ್ಶನಕ್ಕೆ ಹೆಚ್ಚಾಯ್ತು ಡಿಮ್ಯಾಂಡ್ – ಪ್ರತಿದಿನ 1,000 ಜನರಿಗೆ ನೇರ ದರ್ಶನಕ್ಕೆ ಅವಕಾಶ ನೀಡುವಂತೆ KSTDC ಮನವಿ

    – ಆಂಧ್ರಪ್ರದೇಶದ ಸಿಎಂಗೆ ಕೆಎಸ್‌ಟಿಡಿಸಿ ಅಧ್ಯಕ್ಷ ಬೇಡಿಕೆ
    – ಭಕ್ತಾದಿಗಳಿಗೆ 350 ರೂಮ್‌ಗಳ ವ್ಯವಸ್ಥೆ

    ಅಮರಾವತಿ/ಬೆಂಗಳೂರು: ಭಾರತದ ಅತೀ ಶ್ರೀಮಂತ ದೇಗುಲಗಳಲ್ಲಿ ತಿರುಪತಿ ವೆಂಕಟೇಶ್ವರ ದೇವಾಲಯವೂ (Tirumala Tirupati Devasthanam) ಒಂದು. ತಿರುಪತಿ ತಿಮ್ಮಪ್ಪನಿಗೆ ಲಕ್ಷಾಂತರ ಭಕ್ತರಿದ್ದು, ತಿರುಪತಿ ಲಡ್ಡು ವಿವಾದದ (Tirupati Laddu Row) ನಂತರವೂ ಭಕ್ತಾದಿಗಳ ಸಂಖ್ಯೆ ಕಡಿಮೆಯಾಗಿಲ್ಲ. ಅದರಲ್ಲೂ ಕರ್ನಾಟಕದಿಂದಲೂ (Karnataka) ಭಕ್ತಾದಿಗಳ ಸಂಖ್ಯೆ ಹೆಚ್ಚಾಗಿದೆ. ಈ ನಿಟ್ಟಿನಲ್ಲಿ ರಾಜ್ಯ ಪ್ರವಾಸೋದ್ಯಮ ಇಲಾಖೆ (KSTDC), ಆಂಧ್ರ ಸಿಎಂಗೆ ಹೊಸ ಮನವಿ ಮಾಡಿದೆ.

    ತಿರುಪತಿ ಭಕ್ತರ ಪಾಲಿಗೆ ಕಲಿಯುಗದ ವೈಕುಂಠ. ತಿರುಮಲಕ್ಕೆ ಪ್ರತಿದಿನ ಲಕ್ಷಾಂತರ ಭಕ್ತರು ಭೇಟಿ ನೀಡುತ್ತಾರೆ. ಎರಡು ತೆಲುಗು ರಾಜ್ಯಗಳಲ್ಲದೆ, ವಿವಿಧ ರಾಜ್ಯಗಳು ಮತ್ತು ವಿದೇಶಗಳಿಂದಲೂ ಭಕ್ತರು ಇಲ್ಲಿಗೆ ಬರುತ್ತಾರೆ. ಆಪತ್ತುಗಳನ್ನು ನಿವಾರಿಸುವ ಏಡುಕೊಂಡಲವಾಡ ದರ್ಶನ ಪಡೆಯಲು ಜನ ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಥವಾ ಕೆಎಸ್‌ಟಿಡಿಸಿಯ ಸೀಟ್‌ಗಳಿಗಾಗಿ ಪ್ರತಿದಿನ ಕಾಯುತ್ತಾರೆ. ಪ್ರತಿದಿನ ಟಿಟಿಡಿಯು ಕೆಎಸ್‌ಟಿಡಿಸಿಗೆ ಕರ್ನಾಟಕದ 250 ಭಕ್ತಾದಿಗಳಿಗೆ ನೇರ ದರ್ಶನಕ್ಕೆ ಸದ್ಯ ಅವಕಾಶ ನೀಡಿದೆ. ಆದರೂ ನೇರ ದರ್ಶನಕ್ಕೆ ಭಕ್ತಾದಿಗಳ ಸಂಖ್ಯೆ ಹೆಚ್ಚಾಗಿದೆ. ಇದು ತಿರುಪತಿ ಲಡ್ಡು ವಿವಾದದ ನಂತರವೂ ಮುಂದುವರೆದಿದೆ. ಈ ನಿಟ್ಟಿನಲ್ಲಿ ಕೆಎಸ್‌ಟಿಡಿಸಿಯು ಪ್ರತಿದಿನ 250 ಜನರಿಗೆ ನೇರ ದರ್ಶನದ ಸಂಖ್ಯೆಯನ್ನು, ಒಂದು ಸಾವಿರಕ್ಕೆ ಹೆಚ್ಚಿಸಬೇಕೆಂದು ಆಂಧ್ರ ಸಿಎಂಗೆ ಮನವಿ ಮಾಡಿದ್ದು, ಸದ್ಯ ಮಾತುಕತೆ ನಡೆದಿದೆ. ಇದನ್ನೂ ಓದಿ: ದೇಶದ ರೈತರಿಗೆ ನವರಾತ್ರಿ ಗಿಫ್ಟ್‌ – ಶನಿವಾರ ಪ್ರಧಾನಿ ಮೋದಿಯಿಂದ 20,000 ಕೋಟಿ ರೂ. ಬಿಡುಗಡೆ

    ಇನ್ನೂ ಸದ್ಯ 250 ಜನ ಭಕ್ತಾದಿಗಳಿಗೆ ನಿಗಮದಿಂದ ಪ್ರತಿನಿತ್ಯ 5-6 ಬಸ್‌ಗಳು ರಾಜ್ಯದಿಂದ ತೆರಳುತ್ತಿದ್ದವು. ಸಾವಿರ ಜನರಿಗೆ ಅವಕಾಶ ಸಿಕ್ಕರೇ, ರಾಜ್ಯದಿಂದ ತಿರುಪತಿಯತ್ತ 10-12 ಬಸ್‌ಗಳು ಪ್ರವಾಸೋದ್ಯಮ ಇಲಾಖೆಯಿಂದ ಸಂಚರಿಸಲಿವೆ. ಭಕ್ತಾದಿಗಳ ಸಂಖ್ಯೆ ಹೆಚ್ಚಾದರೂ ಅಲ್ಲಿನ ವಸತಿ ವ್ಯವಸ್ಥೆಗೆ ಆತಂಕಪಡಬೇಕಿಲ್ಲ. ಏಕೆಂದರೆ ತಿರುಪತಿಯಲ್ಲಿ ಧಾರ್ಮಿಕ ದತ್ತಿ ಇಲಾಖೆಯಿಂದ 350 ರೂಮ್‌ಗಳ ವ್ಯವಸ್ಥೆ ಮಾಡಲಾಗಿದೆ ಎಂದು ಅಧ್ಯಕ್ಷರು ತಿಳಿಸಿದ್ದಾರೆ. ಇದನ್ನೂ ಓದಿ: ಬೆಳಗಾವಿ ಡಿಸಿಸಿ ಬ್ಯಾಂಕ್‌ನಲ್ಲಿ ಭಿನ್ನಮತ ಸ್ಫೋಟ – ಅಧ್ಯಕ್ಷ ಸ್ಥಾನಕ್ಕೆ ರಮೇಶ್ ಕತ್ತಿ ರಾಜೀನಾಮೆ

  • ಆಂಧ್ರ, ತೆಲಂಗಾಣದಲ್ಲಿ ಭಾರಿ ಮಳೆ ಪ್ರವಾಹ; 35 ಮಂದಿ ಸಾವು

    ಆಂಧ್ರ, ತೆಲಂಗಾಣದಲ್ಲಿ ಭಾರಿ ಮಳೆ ಪ್ರವಾಹ; 35 ಮಂದಿ ಸಾವು

    ಹೈದರಬಾದ್: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆ ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ (Andhra Pradesh, Telangana Rain) ಭಾರಿ ಮಳೆಯಾಗುತ್ತಿದ್ದು, 35 ಮಂದಿ ಸಾವನ್ನಪ್ಪಿದ್ದಾರೆ. ಆಂಧ್ರಪ್ರದೇಶದಲ್ಲಿ ಮಳೆ ಸಂಬಂಧಿತ ಘಟನೆಗಳಿಂದ 19 ಜನರು ಸಾವನ್ನಪ್ಪಿದ್ದರೆ, ತೆಲಂಗಾಣದಲ್ಲಿ ಮಳೆ ಮತ್ತು ಪ್ರವಾಹದ ಪ್ರಕೋಪಕ್ಕೆ 16 ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಎರಡೂ ರಾಜ್ಯಗಳಲ್ಲಿ 47,000 ಕ್ಕೂ ಹೆಚ್ಚು ಜನರನ್ನು ಪರಿಹಾರ ಶಿಬಿರಗಳಿಗೆ ಸ್ಥಳಾಂತರಿಸಲಾಗಿದೆ. ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್ ಸಿಬ್ಬಂದಿ ಸೇರಿದಂತೆ ಒಟ್ಟು 47 ರಕ್ಷಣಾ ತಂಡಗಳನ್ನು ರಾಜ್ಯದಲ್ಲಿ ಪರಿಹಾರ ಕಾರ್ಯಾಚರಣೆಗೆ ನಿಯೋಜಿಸಲಾಗಿದೆ. 3.5 ಲಕ್ಷಕ್ಕೂ ಅಧಿಕ ಜನರಿಗೆ ಆಹಾರ ಪೊಟ್ಟಣಗಳು, ಕುಡಿಯುವ ನೀರು ವಿತರಿಸಲಾಗಿದೆ. ಇದನ್ನೂ ಓದಿ: ಭಾರೀ ಮಳೆಗೆ ಆಂಧ್ರಪ್ರದೇಶ ತತ್ತರ – ರೈಲು ಸಂಚಾರ ಅಸ್ತವ್ಯಸ್ತ; 30ಕ್ಕೂ ಅಧಿಕ ಮಂದಿ ಸಾವು!

    ಅದಿಲಾಬಾದ್, ಮಂಚೇರಿಯಲ್, ಖಮ್ಮಂ, ಸೂರ್ಯಪೇಟ್, ಕೊಮಾರಂ ಭೀಮ್ ಆಸಿಫಾಬಾದ್, ಪೆದ್ದಪಲ್ಲಿ, ಜಯಶಂಕರ್ ಭೂಪಾಲಪಲ್ಲಿ, ಮುಲುಗು, ಭದ್ರಾದ್ರಿ ಕೊತಗುಡೆಂ, ಮತ್ತು ಮಹಬೂಬಾಬಾದ್ ಸೇರಿದಂತೆ ತೆಲಂಗಾಣದ 10 ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಮಳೆಯಾಗುವ ಕುರಿತು ಹವಮಾನ ಇಲಾಖೆ ಹಳದಿ ಎಚ್ಚರಿಕೆ ನೀಡಿದೆ.

    ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ರಾಜ್ಯದಲ್ಲಿ ಸಂಭವಿಸಿದ ಪ್ರವಾಹವನ್ನು ಅದರಲ್ಲೂ ವಿಶೇಷವಾಗಿ ವಿಜಯವಾಡದಲ್ಲಿ ಅವಘಡ ರಾಜ್ಯ ಕಂಡ “ದೊಡ್ಡ ದುರಂತ” ಎಂದು ಕರೆದಿದ್ದಾರೆ. ಸದ್ಯ ಎನ್‌ಟಿಆರ್ ಜಿಲ್ಲೆಯ ಕಲೆಕ್ಟರೇಟ್‌ನಲ್ಲಿ ತಂಗಿರುವ ಅವರು ಆಂಧ್ರಪ್ರದೇಶದ ಪ್ರವಾಹವನ್ನು ನೈಸರ್ಗಿಕ ವಿಕೋಪ ಎಂದು ಘೋಷಿಸಲು ಕೇಂದ್ರಕ್ಕೆ ಮನವಿ ಮಾಡುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ಬಂಗಾಳ ವಿಧಾನಸಭೆಯಲ್ಲಿ ಅತ್ಯಾಚಾರ ವಿರೋಧಿ ಮಸೂದೆ ಮಂಡನೆ

    ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರು ಪ್ರವಾಹವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಲು ಮನವಿ ಮಾಡಿದ್ದಾರೆ. ರಾಜ್ಯದಲ್ಲಿ ಪ್ರವಾಹದಿಂದಾಗಿ ಇದುವರೆಗೆ 5,000 ಕೋಟಿ ರೂಪಾಯಿಗೂ ಹೆಚ್ಚು ಹಾನಿಯಾಗಿದೆ. ಕೇಂದ್ರದಿಂದ 2,000 ಕೋಟಿ ರೂಪಾಯಿಗಳ ತಕ್ಷಣದ ಪರಿಹಾರ ನೆರವು ಕೋರಿದ್ದಾರೆ. ಇದೇ ವೇಳೆ ಮೃತರ ಕುಟುಂಬಕ್ಕೆ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.

  • ಪ್ರೀತಿಸಿ ಎಲ್ಲಾ ಮುಗಿದ್ಮೇಲೆ ಕೈಕೊಟ್ಟ ಪ್ರಿಯಕರ – ಮದುವೆ ದಿನವೇ ಆಸಿಡ್‌ ದಾಳಿಗೆ ಮುಂದಾದ ವಿಧವೆ ಪ್ರೇಯಸಿ!

    ಪ್ರೀತಿಸಿ ಎಲ್ಲಾ ಮುಗಿದ್ಮೇಲೆ ಕೈಕೊಟ್ಟ ಪ್ರಿಯಕರ – ಮದುವೆ ದಿನವೇ ಆಸಿಡ್‌ ದಾಳಿಗೆ ಮುಂದಾದ ವಿಧವೆ ಪ್ರೇಯಸಿ!

    ಅಮರಾವತಿ: ಪ್ರೀತಿಯೊಂದು (Love) ಸುಂದರ ಅನುಭವ. ಅದನ್ನ ಅನುಭವಿಸಬೇಕೇ ಹೊರತು ಹೇಳಿಕೊಳ್ಳಲಾಗಲ್ಲ. ಅದಕ್ಕಾಗಿ ಕೆಲವರು ಪ್ರೀತಿಯೆಂಬುದೇ ಮಾಯೆ ಎನ್ನುತ್ತಾರೆ. ಕೆಲವರಿಗೆ ಹೇಳಿಕೊಳ್ಳಲು ಸಂಕೋಚ, ಹೇಳಿಕೊಂಡರೇ ಇದ್ದ ಸಂಬಂಧವೂ ಬಿಟ್ಟುಹೋಗುತ್ತದೆ ಅನ್ನೋ ಆತಂಕ. ಆದ್ರೆ ಆನ್‌ಲೈನ್‌ ಯುಗದಲ್ಲಿ ಪ್ರೀತಿ – ಪ್ರೇಮ ಎಂಬುದು ಕ್ಷಣಿಕ ಸುಃಖವಾಗಿದೆ. ಬೆಳಗ್ಗೆ ಪ್ರಪೋಸ್‌ ಮಾಡಿ, ಸಂಜೆ ಹೊತ್ತಿಗೆ ಶೇಕ್‌ ಹ್ಯಾಂಡ್‌ ಮಾಡಿ ಬ್ರೇಕಪ್‌ ಮಾಡಿಕೊಳ್ಳುವುದು ಸರ್ವೇ ಸಾಮಾನ್ಯವಾಗಿದೆ. ಆದ್ರೆ ಇಲ್ಲೊಬ್ಬಳು ವಿಧವೆ ತನ್ನ ಪ್ರಿಯಕರ (Lover) ಕೈಕೊಟ್ಟಿದ್ದಕ್ಕಾಗಿ ಅವನ ಮೇಲೆ ಆಸಿಡ್‌ ದಾಳಿಗೆ ಮುಂದಾಗಿದ್ದಾಳೆ.

    44 ವರ್ಷದ ವಿಧವೆಯೊಬ್ಬಳು ತನ್ನ ಮಾಜಿ ಪ್ರಿಯಕರನ ಮದುವೆ (Marriage) ದಿನವೇ ಆತನ ಮೇಲೆ ಆಸಿಡ್‌ ದಾಳಿಗೆ ಯತ್ನಿಸಿದ್ದು, ಪೊಲೀಸರಿಗೆ ಸಿಕ್ಕಿಬಿದ್ದಿರುವ ಘಟನೆ ಆಂಧ್ರಪ್ರದೇಶದ (Andhra Pradesh) ನಂಡಲೂರಿನಲ್ಲಿ ನಡೆದಿದೆ. ಘಟನೆ ನಂತರ ಯುವಕನ ವಿವಾಹ ಕಾರ್ಯಕ್ರಮ ರದ್ದಾಗಿದೆ. ಆಸಿಡ್‌ ದಾಳಿ (Acid Attack) ನಡೆಸಿದ ಆರೋಪಿ ಮಹಿಳೆ ಸಾಫ್ಟ್‌ವೇರ್‌ ಎಂಜಿನಿಯರ್‌ ಜಯಾ. ಈಕೆಗೆ 22 ವರ್ಷದ ಮಗನಿದ್ದಾನೆ. ಇನ್ನೂ ಆಸಿಡ್‌ ದಾಳಿಗೆ ಒಳಗಾದ ಮಾಜಿ ಪ್ರಿಯಕರ ಶೇಖ್ ಸೈಯದ್ (32), ಮದುವೆಯಾಗಲು ತಯಾರಾಗಿದ್ದ. ತನ್ನೊಂದಿಗೆ ಎಲ್ಲಾ ಮುಗಿದ ಮೇಲೆ ಕೈಕೊಟ್ಟನೆಂದು ಆಸಿಡ್‌ ದಾಳಿಗೆ ಮುಂದಾಗಿದ್ದಾಳೆ. ಇದನ್ನೂ ಓದಿ: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಶಿಕ್ಷಕರಿಂದ ಹೋರಾಟ – ಸರ್ಕಾರಿ ಶಾಲೆಗಳಲ್ಲಿ ತರಗತಿ ವ್ಯತ್ಯಯ?

    ಏನಿದು ಪ್ರೇಮಕಥೆ?
    ಸಯ್ಯದ್‌ ಮತ್ತು ಜಯಾ 10 ವರ್ಷಗಳಿಂದ ಪ್ರೀತಿಸುತ್ತಿದ್ದರು. ಆದ್ರೆ ಕಳೆದ 3 ವರ್ಷಗಳಲ್ಲಿ ಸೈಯ್ಯದ್‌ ಡ್ರೈವರ್‌ ಕೆಲಸಕ್ಕಾಗಿ ಕುವೈತ್‌ಗೆ ತೆರಳಿದ್ದ. ಭಾರತಕ್ಕೆ ಮರಳಿದ ನಂತರ ಜಯಾಳ ಸಂಪರ್ಕವನ್ನು ಬಿಟ್ಟು, ಇದೇ ಆಗಸ್ಟ್‌ 11ರಂದು ಬೇರೊಬ್ಬ ಮಹಿಳೆಯೊಂದಿಗೆ ಮದುವೆಯಾಗಲು ಸಿದ್ಧತೆ ಮಾಡಿಕೊಂಡಿದ್ದ. ಮದುವೆ ನಿಲ್ಲಿಸುವ ಸಲುವಾಗಿ ಜಯಾ ಕೂಡ ಅಲ್ಲಿಗೆ ಬಂದಿದ್ದಳು. ಆದ್ರೆ ಸಯ್ಯದ್‌ ಆಕೆಯೊಂದಿಗೆ ಇರಲ್ಲ ಎಂದು ಹೇಳಿದ. ಇದರಿಂದ ಕೋಪಗೊಂಡ ಮಹಿಳೆ ಬಾತ್‌ರೂಮ್‌ ಕ್ಲೀನರ್‌ ಆಸಿಡ್‌ ತಂಡು ಅವನ ಮೇಲೆ ಎರಚಿದ್ದಾಳೆ. ಆದ್ರೆ ಅವನು ತಪ್ಪಿಸಿಕೊಂಡಿದ್ದರಿಂದ ಸಯ್ಯದ್‌ ಚಿಕ್ಕಮ್ಮನಿಗೆ ಆಸಿಡ್‌ ತಾಗಿದೆ. ಇದೇ ಕೋಪದಿಂದ ಅಲ್ಲೇ ಇದ್ದ ಚಾಕು ತೆಗೆದುಕೊಂಡು ಸಯ್ಯದ್‌ ಜಯಾಳಿಗೆ ಇರಿದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ತುಂಗಭದ್ರಾ ಡ್ಯಾಂ ವಾರ್ಷಿಕ ನಿರ್ವಹಣಾ ಗುತ್ತಿಗೆಗೆ ಎಷ್ಟು ಕೋಟಿ ಹಣ ಸಂದಾಯವಾಗಿದೆ? – ಜನಾರ್ದನ ರೆಡ್ಡಿ ಪ್ರಶ್ನೆ 

    ಬಾತ್ ರೂಂ ಕ್ಲೀನಿಂಗ್ ಆಸಿಡ್ ಆಗಿದ್ದರಿಂದ ಸೈಯದ್ ಚಿಕ್ಕಮ್ಮನಿಗೆ ಗಂಭೀರ ಗಾಯಗಳಾಗಿಲ್ಲ. ಇಯ್ಯ ಜಯಾಗೆ ಸಣ್ಣಪುಟ್ಟ ಗಾಯಗಳಾಗಿವೆ. ಪೊಲೀಸರು ಇಬ್ಬರ ವಿರುದ್ಧವೂ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಕೇಸ್‌ ದಾಖಲಿಸಿಕೊಂಡು ಬಂಧಿಸಿದ್ದಾರೆ. ಇದನ್ನೂ ಓದಿ: Tungabhadra Dam | 5 ದಿನಗಳಲ್ಲಿ ಗೇಟ್‌ ರಿಪೇರಿ – ಸರ್ಕಾರಕ್ಕೆ ಅಧಿಕಾರಿಗಳ ಭರವಸೆ 

  • ಬಜೆಟ್‌ನಲ್ಲಿ ಯಾವ ರಾಜ್ಯಕ್ಕೂ ಏನನ್ನೂ ನಿರಾಕರಿಸಿಲ್ಲ, ಹಣ ತರಬೇಕೆಂದು ತೆರಿಗೆ ಹೆಚ್ಚಿಸಿಲ್ಲ: ನಿರ್ಮಲಾ ಸೀತಾರಾಮನ್‌

    ಬಜೆಟ್‌ನಲ್ಲಿ ಯಾವ ರಾಜ್ಯಕ್ಕೂ ಏನನ್ನೂ ನಿರಾಕರಿಸಿಲ್ಲ, ಹಣ ತರಬೇಕೆಂದು ತೆರಿಗೆ ಹೆಚ್ಚಿಸಿಲ್ಲ: ನಿರ್ಮಲಾ ಸೀತಾರಾಮನ್‌

    ನವದೆಹಲಿ: 2024ರ ಕೇಂದ್ರ ಬಜೆಟ್‌ನಲ್ಲಿ (Union Budget 2024) ಯಾವ ರಾಜ್ಯಗಳಿಗೂ ಏನನ್ನೂ ನಿರಾಕರಿಸಿಲ್ಲ ಕಡೆಗಣಿಸಿಲ್ಲ. ಹಿಂದಿನಂತೆಯೇ ಎಲ್ಲಾ ರಾಜ್ಯಗಳೂ ಹಂಚಿಕೆ ಪಡೆದಿವೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ (Nirmala Sitharaman) ಸ್ಪಷ್ಟಪಡಿಸಿದ್ದಾರೆ.

    ಖಾಸಗಿ ವಾಹಿನಿಯೊಂದಕ್ಕೆ ನೀಡಿದ ವಿಶೇಷ ಸಂದರ್ಶನದಲ್ಲಿ ಮಾತನಾಡಿದ ಅವರು, 2024-25ರ ಕೇಂದ್ರ ಬಜೆಟ್‌ನಲ್ಲಿ ಕೇವಲ ಆಂಧ್ರ ಪ್ರದೇಶ (Andhra Pradesh) ಮತ್ತು ಬಿಹಾರ (Bihar) ರಾಜ್ಯಗಳನ್ನು ಮಾತ್ರ ಪರಿಗಣಿಸಿ, ಉಳಿದ ರಾಜ್ಯಗಳನ್ನು ಕಡೆಗಣಿಸಲಾಗಿದೆ ಎಂಬ ವಿಪಕ್ಷಗಳ ಟೀಕೆಗೆ ಪ್ರತಿಕ್ರಿಯಿಸಿದ್ದಾರೆ. ಇದನ್ನೂ ಓದಿ: ಮೆಟ್ರೊಪಾಲಿಟನ್ ಸಿಟಿಗಳ ಪೈಕಿ ಬೆಂಗಳೂರಿನಲ್ಲಿ ಹೆಚ್ಚು ವಾಹನಗಳಿವೆ: ಪರಮೇಶ್ವರ್

    ಈ ಬಾರಿಯ ಕೇಂದ್ರ ಬಜೆಟ್‌ನಲ್ಲಿ ಯಾವುದೇ ರಾಜ್ಯವನ್ನು ಕಡೆಗಣಿಸಿಲ್ಲ. 2014 ರಲ್ಲಿ ಆಂಧ್ರಪ್ರದೇಶವನ್ನು ವಿಭಜಿಸಿದ ನಂತರ ಕೇಂದ್ರವು ಕಾನೂನಿನ ಪ್ರಕಾರ ಆಂಧ್ರಪ್ರದೇಶವನ್ನ ಬೆಂಬಲಿಸುವ ಅಗತ್ಯವಿದೆ. ಬಜೆಟ್‌ನಲ್ಲಿ ಎಲ್ಲಾ ರಾಜ್ಯಗಳು ಹಿಂದಿನಂತೆ ಹಂಚಿಕೆ ಸ್ವೀಕರಿಸಿವೆ. ಆಂಧ್ರ ಪ್ರದೇಶವು ಆಂಧ್ರ ಪ್ರದೇಶ ಮರುಸಂಘಟನೆ ಕಾಯ್ದೆ ಅಡಿಯಲ್ಲಿ ರಾಜಧಾನಿ ನಿರ್ಮಿಸಲು ಹಾಗೂ ಹಿಂದುಳಿದ ಪ್ರದೇಶಗಳನ್ನು ಅಭಿವೃದ್ಧಿ ಪಡಿಸಲು ಕೇಂದ್ರದ ಬೆಂಬಲ ಬಯಸಿದೆ. ನಾವೂ ಸಹ ಹೊಸ ರಾಜಧಾನಿ ನಿರ್ಮಾಣವನ್ನು ಬೆಂಬಲಿಸುತ್ತೇವೆ ಎಂದು ಹೇಳಿದ್ದಾರೆ.

    ಮುಂದುವರಿದು ಮಾತನಾಡಿದ ಅವರು, ಈ ಬಜೆಟ್ ಯುವ ಸಮೂಹದ ಅಭಿವೃದ್ಧಿಗೆ ಪೂರಕಗಿದೆ, ಸಮಗ್ರ ಪ್ಯಾಕೇಜ್‌ ಒದಗಿಸಿದೆ. ಅಸ್ತಿತ್ವದಲ್ಲಿರುವ ನಗರಗಳನ್ನು ಹೆಚ್ಚು ವಾಸಕ್ಕೆ ಯೋಗ್ಯ ಮತ್ತು ಫ್ಯೂಚರಿಸ್ಟಿಕ್ ಮಾಡಲು ನಾವು ತಂತ್ರಜ್ಞಾನ ಮತ್ತು ನವೀನ ನಗರ ಯೋಜನೆಗಳ ಮೇಲೆ ಕೇಂದ್ರೀಕರಿಸುತ್ತಿದ್ದೇವೆ ಎಂದು ನುಡಿದಿದ್ದಾರೆ. ಇದನ್ನೂ ಓದಿ: ರಾಮ ಅಲ್ಲೇ ಇರ್ತಾನೆ, ರಾಮನಗರವೂ ಅಲ್ಲೇ ಇರುತ್ತೆ – ಪರಮೇಶ್ವರ್ ತಿರುಗೇಟು

    ಅಲ್ಲದೇ ಸರ್ಕಾರಕ್ಕೆ ಹಣ ತರಬೇಕೆಂದು ತೆರಿಗೆ ಹೆಚ್ಚಿಸಿಲ್ಲ, ಅದು ಉತ್ತಮ ಮಾರ್ಗವೂ ಅಲ್ಲ. ಬೆಳೆಯುತ್ತಿರುವ ಆರ್ಥಿಕತೆಯು ಅದರ ಅಗತ್ಯತೆಗಳು ಮತ್ತು ಆಕಾಂಕ್ಷೆಗಳನ್ನು ಪೂರೈಸಲು ಸಾಲ ಪಡೆಯುವುದು ಅತ್ಯಗತ್ಯ. ಆದ್ರೆ ಆರ್ಥಿಕ ಬೆಳವಣಿಗೆಯ ಮೇಲೆ ಪರಿಣಾಮ ಬೀರದಂತೆ ಸಾಲ ಕಡಿಮೆಗೊಳಿಸುವುದು ಹಣಕಾಸು ಇಲಾಖೆಯ ಉದ್ದೇಶವಾಗಿದೆ. ಅಂತಿಮವಾಗಿ ವಿತ್ತೀಯ ಕೊರತೆಗೆ ಸಂಖ್ಯೆಯನ್ನು ನಿಗದಿಪಡಿಸುವುದು ಮತ್ತು ಪ್ರತಿ ವರ್ಷ ತಾತ್ಕಾಲಿಕ ಪರಿಹಾರಗಳೊಂದಿಗೆ ಅದರ ಕಡೆಗೆ ಕೆಲಸ ಮಾಡಬೇಕಾಗಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: 2028ರೊಳಗೆ ಮತ್ತೆ ರಾಮನಗರ ಅಂತ ಬರುತ್ತೆ – ರಾಮನ ಹೆಸರು ತೆಗೆಯಲು ಸಾಧ್ಯವಿಲ್ಲ: ಹೆಚ್‌ಡಿಕೆ ತಿರುಗೇಟು

  • ಪೊದೆಯೊಂದರಲ್ಲಿ ಬೆತ್ತಲೆ ಸ್ಥಿತಿಯಲ್ಲಿ ಮಹಿಳೆಯ ಮೃತದೇಹ ಪತ್ತೆ – ಅತ್ಯಾಚಾರ ಶಂಕೆ

    ಪೊದೆಯೊಂದರಲ್ಲಿ ಬೆತ್ತಲೆ ಸ್ಥಿತಿಯಲ್ಲಿ ಮಹಿಳೆಯ ಮೃತದೇಹ ಪತ್ತೆ – ಅತ್ಯಾಚಾರ ಶಂಕೆ

    – ತನಿಖೆಗೆ 5 ವಿಶೇಷ ತಂಡ ರಚನೆ

    ಅಮರಾವತಿ: ಆಂಧ್ರಪ್ರದೇಶದ (Andhra Pradesh) ಎಪುರುಪಾಲೆಂ ಕುಗ್ರಾಮವೊಂದರಲ್ಲಿ ಸಾರ್ವಜನಿಕರನ್ನು ಬೆಚ್ಚಿಬೀಳಿಸುವ ಘಟನೆ ನಡೆದಿದೆ. ಇಲ್ಲಿನ ಬಾಲಕಿಯರ ಪ್ರೌಢಶಾಲೆ ಬಳಿಯ ಪೊದೆಗಳಲ್ಲಿ 21 ವರ್ಷದ ಮಹಿಳೆಯೊಬ್ಬರ (Women) ಶವ ಬೆತ್ತಲೆ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಸಾರ್ವಜನಿಕರ ಆತಂಕಕ್ಕೆ ಕಾರಣವಾಗಿದೆ.

    ಬಾಪಟ್ಲಾ ಜಿಲ್ಲೆಯ ಎಪುರುಪಾಲೆಂ ಗ್ರಾಮದಲ್ಲಿ ಘಟನೆ ನಡೆದಿದ್ದು, ಮಹಿಳೆಯನ್ನು ಹತ್ಯೆಗೈಯುವ ಮುನ್ನ ಅತ್ಯಾಚಾರ ಎಸಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಸೂರಜ್ ರೇವಣ್ಣ ವಿರುದ್ಧ ಅಸಹಜ ಲೈಂಗಿಕ ದೌರ್ಜನ್ಯ ಆರೋಪ – ಸಂತ್ರಸ್ತನ ವಿರುದ್ಧವೇ ಕೇಸ್‌ ದಾಖಲು

    ಏನಿದು ಘಟನೆ?
    ಬಾಪಟ್ಲಾ ಜಿಲ್ಲೆಯ ಎಪುರುಪಾಲೆಂ ಗ್ರಾಮದ ಮಹಿಳೆ ಮುಂಜಾನೆ 5:30ರ ಸುಮಾರಿಗೆ ನಿತ್ಯಕರ್ಮಗಳನ್ನು ಮುಗಿಸಿ, ರೈಲ್ವೇ ಟ್ರ್ಯಾಕ್‌ಗೆ (Railway Track) ಸಮೀಪವಿರುವ ಶಾಲೆಯ ಬಳಿ ಸ್ನಾನಕ್ಕೆ ಹೋಗಿದ್ದಾರೆ. ಮತ್ತೆ ಅವರು ಮನೆಗೆ ಹಿಂದಿರುಗಲಿಲ್ಲ. ಇದರಿಂದ ಆತಂಕಗೊಂಡಿದ್ದ ಆಕೆಯ ಕುಟುಂಬದ ಸದಸ್ಯರು ತುಂಬ ಹೊತ್ತು ಹುಡುಕಾಟ ನಡೆಸಿದ್ದಾರೆ. ನಂತರ ಪೊದೆಯಲ್ಲಿ ಬೆತ್ತಲೆ ಸ್ಥಿತಿಯಲ್ಲಿ ಮಹಿಳೆ ಸಾವನ್ನಪ್ಪಿರುವುದು ಕಂಡುಬಂದಿದೆ ಎಂದು ಬಪಟ್ಲಾ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಕುಲ್ ಜಿಂದಾಲ್ ತಿಳಿಸಿದ್ದಾರೆ.

    10 ಲಕ್ಷ ರೂ. ಪರಿಹಾರ ಘೋಷಣೆ:
    ಮಹಿಳೆಯನ್ನು ಹತ್ಯೆ ಮಾಡುವುದಕ್ಕೂ ಮುನ್ನ ಕಾಮುಕರು, ಅತ್ಯಾಚಾರ ಎಸಗಿದ್ದಾರೆ. ಸದ್ಯ ಪ್ರಕರಣದ ತನಿಖೆಗಾಗಿ 5 ವಿಶೇಷ ತಂಡಗಳನ್ನ ರಚಿಸಲಾಗಿದೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಈ ನಡುವೆ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಮೃತರ ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರ ಘೋಷಣೆ ಮಾಡಿರುವುದಾಗಿ ಗೃಹ ಸಚಿವರಾದ ವಂಗಲಪುಡಿ ಅನಿತಾ ತಿಳಿಸಿದ್ದಾರೆ. ಇದನ್ನೂ ಓದಿ: ಚಿಕ್ಕಮಗಳೂರಿನ ಸುಪ್ರಸಿದ್ಧ ಪ್ರವಾಸಿ ತಾಣ ಎತ್ತಿನಭುಜಕ್ಕೆ ಪ್ರವಾಸಿಗರಿಗೆ ನಿರ್ಬಂಧ 

    48 ಗಂಟೆಗಳಲ್ಲಿ ಆರೋಪಿಗಳನ್ನು ಬಂಧಿಸಿ:
    ಸದ್ಯ ಈ ಘಟನೆ ಆಂಧ್ರ ಪ್ರದೇಶದಲ್ಲಿ ಸರ್ಕಾರದ ಮಟ್ಟದಲ್ಲಿ ಸದ್ದು ಮಾಡುತ್ತಿದ್ದು, ಯಾವುದೇ ಲೋಪಕ್ಕೆ ಅವಕಾಶ ನೀಡದಂತೆ 48 ಗಂಟೆಗಳ ಒಳಗೆ ಆರೋಪಿಗಳನ್ನು ಬಂಧಿಸುವಂತೆ ಸರ್ಕಾರ ಅಧಿಕಾರಿಗಳಿಗೆ ಸೂಚನೆ ನೀಡಿದೆ. ಅಲ್ಲದೇ ಹೆಚ್ಚಿದ ಮಾದಕ ದ್ರವ್ಯ ಸೇವನೆಯಿಂದ ಇಂತಹ ಅಪರಾಧಗಳು ಹೆಚ್ಚಾಗುತ್ತಿವೆ ಎಂದು ಶಂಕಿಸಿದೆ.