Tag: ಆಂಧ್ರ ಸರ್ಕಾರ

  • ಕರ್ನೂಲ್ ಬಸ್ ದುರಂತದ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಲು ಆಂಧ್ರ ಸರ್ಕಾರಕ್ಕೆ ಹೇಳಿದ್ದೇವೆ: ಡಿಕೆಶಿ

    ಕರ್ನೂಲ್ ಬಸ್ ದುರಂತದ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಲು ಆಂಧ್ರ ಸರ್ಕಾರಕ್ಕೆ ಹೇಳಿದ್ದೇವೆ: ಡಿಕೆಶಿ

    ಬೆಂಗಳೂರು: ಕರ್ನೂಲ್ ಬಸ್ ದುರಂತದ (Karnool Bus Fire) ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸುವಂತೆ ಆ ರಾಜ್ಯ ಸರ್ಕಾರಕ್ಕೆ ಹೇಳಿದ್ದೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ಅವರು ಹೇಳಿದ್ದಾರೆ.

    ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕರ್ನೂಲ್‌ನಲ್ಲಿ ಸಂಭವಿಸಿರುವ ಬಸ್ ಅಪಘಾತ ದುರಾದೃಷ್ಟಕರ. ಇತ್ತೀಚೆಗೆ ಬೆಂಗಳೂರಿನಿಂದ ಹೈದರಾಬಾದ್‌ಗೆ ತೆರಳುತ್ತಿದ್ದ ಗ್ರೀನ್ ಲೈನ್ ಬಸ್ ಕೂಡ ಇದೇ ರೀತಿ ದುರಂತಕ್ಕೆ ಒಳಗಾಗಿತ್ತು. ಆಗ ನಮ್ಮ ಪಕ್ಷದ ರಾಯಚೂರು ಅಧ್ಯಕ್ಷೆ ಚಾಲಕನನ್ನು ಎಚ್ಚರಿಸಿದ ಪರಿಣಾಮ, ಬಸ್‌ನಲ್ಲಿದ್ದ 20 ಮೆಡಿಕಲ್ ವಿದ್ಯಾರ್ಥಿಗಳು ಸುರಕ್ಷಿತವಾಗಿದ್ದರು. ಕೆಲವು ಸಣ್ಣಪುಟ್ಟ ಗಾಯಗಳಾಗಿದ್ದವು. ಆದರೆ ಆ ರಾಜ್ಯದ ಪೊಲೀಸರು ಅಗತ್ಯ ಕ್ರಮ ಕೈಗೊಂಡಿರಲಿಲ್ಲ. ನಾನು ರಾಯಚೂರಿಗೆ ಹೋದಾಗ ಅಲ್ಲಿ ಕೆಲವರು ನನಗೆ ಅದರ ವಿಡಿಯೋ ತೋರಿಸಿದರು ಎಂದು ಹೇಳಿದರು.ಇದನ್ನೂ ಓದಿ: ಡ್ರೈವರ್‌, ಕಂಡಕ್ಟರ್ ಬೆಂಕಿ ನಂದಿಸ್ತಿದ್ದರು, 5 ಸೆಕೆಂಡ್‌ಲ್ಲಿ ಜೀವ ಉಳಿಸಿಕೊಂಡ್ವಿ – ಪ್ರಾಣಾಪಾಯದಿಂದ ಪಾರಾದ ಆಕಾಶ್ ಮಾತು

    ಈ ದುರಂತ ಬೇರೆ ರಾಜ್ಯದಲ್ಲಿ ಆಗಿದ್ದರೂ ಈ ಬಗ್ಗೆ ಗಮನಹರಿಸುವಂತೆ ಸಾರಿಗೆ ಸಚಿವರು ಹಾಗೂ ಗೃಹ ಸಚಿವರಿಗೆ ಸೂಚಿಸುತ್ತೇವೆ. ಯಾವುದೇ ರಾಜ್ಯದ ಸರ್ಕಾರವಾಗಲಿ ಮುಂಜಾಗ್ರತಾ ಕ್ರಮಗಳ ಬಗ್ಗೆ ಗಮನಹರಿಸಬೇಕು. ಈ ಪ್ರಕರಣದಲ್ಲಿ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ. ಹೀಗಾಗಿ ಅಪಘಾತಕ್ಕೆ ಕಾರಣ ತಿಳಿಯಲು ತನಿಖೆ ನಡೆಸಬೇಕಿದೆ. ಇದು ಸಣ್ಣ ಘಟನೆಯಲ್ಲ. ಇಂತಹ ದುರ್ಘಟನೆ ಮತ್ತೆ ಸಂಭವಿಸದಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು.

    ಇದೇ ವೇಳೆ ತೇಜಸ್ವಿ ಸೂರ್ಯ ಬಗ್ಗೆ ಮಾತನಾಡಿದ ಅವರು, ಎಷ್ಟು ಬಾರಿ ಪ್ರಧಾನಿಯವರನ್ನು ಭೇಟಿ ಮಾಡಿ ಬೆಂಗಳೂರಿನ ಅಭಿವೃದ್ಧಿಗೆ ಎಷ್ಟು ಅನುದಾನ ಕೋರಿದ್ದಾರೆ. ಲೋಕಸಭಾ ಸದಸ್ಯನಾಗಿ ಆತ ಕರ್ನಾಟಕಕ್ಕೆ ಎಷ್ಟು ಅನುದಾನ ತಂದಿದ್ದಾನೆ? ನಿಗದಿತವಾಗಿ ದೊರೆಯುವ ಅನುದಾನ ಬೇರೆಯಾದರೆ ವಿಶೇಷ ಅನುದಾನದ ಬಗ್ಗೆ ನಾನು ಪ್ರಶ್ನೆ ಮಾಡುತ್ತಿದ್ದೇನೆ. ಬೆಂಗಳೂರಿನ ಜನ ಆತನಿಗೆ ಮತ ನೀಡಿದ್ದಾರೆ. ಬೆಂಗಳೂರಿಗೆ ಆತನ ಕೊಡುಗೆ ಏನೆಂದು ಉತ್ತರಿಸಲಿ ಎಂದು ತಿರುಗೇಟು ನೀಡಿದರು.ಇದನ್ನೂ ಓದಿ: ಚಿತ್ತಾಪುರದಲ್ಲಿ RSS ಪಥಸಂಚಲನ ವಿವಾದ – ಅ.28ಕ್ಕೆ ಶಾಂತಿ ಸಭೆ ನಡೆಸಲು ಕೋರ್ಟ್ ಸೂಚನೆ

  • ಬೆಂಗ್ಳೂರಿಗೆ ಸೆಡ್ಡು ಹೊಡೆಯಲು ಆಂಧ್ರ ಸರ್ಕಾರದಿಂದ ಭಾರೀ ಆಫರ್ – ಟಿಸಿಎಸ್‌ಗೆ 99 ಪೈಸೆಗೆ 21 ಎಕ್ರೆ ಭೂಮಿ

    ಬೆಂಗ್ಳೂರಿಗೆ ಸೆಡ್ಡು ಹೊಡೆಯಲು ಆಂಧ್ರ ಸರ್ಕಾರದಿಂದ ಭಾರೀ ಆಫರ್ – ಟಿಸಿಎಸ್‌ಗೆ 99 ಪೈಸೆಗೆ 21 ಎಕ್ರೆ ಭೂಮಿ

    -ಐಟಿ ಕಂಪನಿಗಳ ಸೆಳೆಯಲು ಟಿಡಿಪಿ ಪ್ಲ್ಯಾನ್‌

    ಅಮರಾವತಿ: ರಾಜ್ಯಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಐಟಿ (IT) ಕಂಪನಿಗಳನ್ನು ಆಕರ್ಷಿಸುವ ನಿಟ್ಟಿನಲ್ಲಿ ಟಾಟಾ ಸಮೂಹದ (Tata Groups) ಒಡೆತನದ ಟಿಸಿಎಸ್ ಕಂಪನಿಗೆ ಆಂಧ್ರ ಸರ್ಕಾರ (Andhra Government) ವಿಶಾಖಪಟ್ಟಣದಲ್ಲಿ ಕಚೇರಿ ತೆರೆಯಲು ಕೇವಲ 99 ಪೈಸೆಗೆ 21.6 ಎಕರೆ ಭೂಮಿಯನ್ನು ನೀಡಿದೆ.

    ಮಂಗಳವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು (Chandrababu Naidu) ಅವರು ಈ ಪ್ರಸ್ತಾಪಕ್ಕೆ ಅನುಮೋದನೆ ನೀಡಿದ್ದಾರೆ. ದೇಶದ ಐಟಿ ಹಬ್ ಆಗಿರುವ ಬೆಂಗಳೂರಿಗೆ ಸೆಡ್ಡುಹೊಡೆಯಲು ಈ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಆಂಧ್ರ ಸರ್ಕಾರದ ವಿಶ್ಲೇಷಿಸಿದೆ.ಇದನ್ನೂ ಓದಿ: ಬೆಟ್ಟಿಂಗ್ ಆಪ್ ಪ್ರಮೋಟ್ ಆರೋಪ – ಸೋನು ಗೌಡ ಸೇರಿ ಹಲವು ರೀಲ್ಸ್‌ ಸ್ಟಾರ್‌ಗಳಿಂದ ಕ್ಷಮೆಯಾಚನೆ

    ವಿಶಾಖಪಟ್ಟಣದ 21.6 ಎಕರೆ ಭೂಮಿಯಲ್ಲಿ ಟಾಟಾ ಕನ್ಸಲ್ಟೆನ್ಸಿ ಸರ್ವೀಸ್ ಕಂಪನಿಯು ಕಚೇರಿ ತೆರೆಯಲಿದೆ. ಈ ಕಚೇರಿಗೆ ಕಂಪನಿ 1370 ಕೋಟಿ ರೂ. ಹೂಡಿಕೆ ಮಾಡಲಿದ್ದು, ಮುಂದಿನ 2-3 ವರ್ಷದಲ್ಲಿ 12,000 ಉದ್ಯೋಗ ಸೃಷ್ಟಿಯಾಗಲಿದೆ. ರಾಜ್ಯಕ್ಕೆ ಈ ಕಂಪನಿಯನ್ನು ಕರೆತರುವಲ್ಲಿ ಐಟಿ ಸಚಿವ ನಾರಾ ಲೋಕೇಶ್ ಪಾತ್ರ ಅಧಿಕವಾಗಿದೆ ಎಂದು ಸರ್ಕಾರದ ಉನ್ನತ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    ಆಂಧ್ರ ಸರ್ಕಾರದಿಂದ ಈ ಆಫರ್ ಯಾಕೆ?
    ಈ ಹಿಂದೆ ಬೆಂಗಳೂರಿನಲ್ಲಿ ಮಳೆ ಅವಾಂತರವಾಗಿ ಮೂಲಸೌಕರ್ಯದ ಬಗ್ಗೆ ಭಾರೀ ಟೀಕೆ ವ್ಯಕ್ತವಾದಾಗ ಆಂಧ್ರದ ರಾಜಕಾರಣಿಗಳು ಕರ್ನಾಟಕ ಬಿಟ್ಟು ಆಂಧ್ರಕ್ಕೆ ಬನ್ನಿ ಎಂದು ಜಾಲತಾಣದ ಮೂಲಕವೇ ಐಟಿ-ಬಿಟಿ ಕಂಪನಿಗಳಿಗೆ ಆಫರ್ ನೀಡುತ್ತಿದ್ದರು. ಆದರೂ ಯಾವುದೇ ಕಂಪನಿಗಳು ಐಟಿ ಸಿಟಿ ಬಿಟ್ಟಿರಲಿಲ್ಲ. ಹೀಗಾಗಿ ಆಂಧ್ರ ಸರ್ಕಾರವೀಗ ಆಫರ್ ಮೂಲಕ ಐಟಿ ಕಂಪನಿಗಳ ಸೆಳೆಯಲು ಪ್ಲ್ಯಾನ್‌ ಹಾಕಿಕೊಂಡಿದೆ.

    ಮೋದಿ ನೀತಿ ಅನುಸರಿಸಿದ ಆಂಧ್ರ:
    ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತ್ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಟಾಟಾ ಮೋಟರ್ಸ್ ಕಂಪನಿಗೆ ಗುಜರಾತ್‌ನ ಸನ್ನದ್‌ನಲ್ಲಿ ಕೇವಲ 99 ಪೈಸೆಗೆ ಸ್ಥಳ ನೀಡಿದ್ದರು. ಈ ಕ್ರಮದಿಂದಾಗಿ ಗುಜರಾತ್‌ನಲ್ಲಿ ಉದ್ಯಮಗಳ ಹರಿವು ಹೆಚ್ಚಾಗಿತ್ತು. ಹೀಗಾಗಿ ಆಂಧ್ರ ಸರ್ಕಾರದ ಈ ಕ್ರಮವು ಐಟಿ ಕ್ಷೇತ್ರದ ಸನ್ನದ್ ಕ್ಷಣ ಎಂದು ಆಂಧ್ರ ಅಧಿಕಾರಿಗಳು ಕೊಂಡಾಡಿದ್ದಾರೆ.ಇದನ್ನೂ ಓದಿ:ಮೆಟ್ರೋ ಯಡವಟ್ಟಿಗೆ ಮತ್ತೊಂದು ಬಲಿ – ವಯಾಡೆಕ್ಟ್ ಉರುಳಿ ಬಿದ್ದು ಆಟೋ ಅಪ್ಪಚ್ಚಿ, ಚಾಲಕ ಸಾವು!

  • ಅಪ್ಪು ಪೋಸ್ಟರ್ ತೆರವುಗೊಳಿಸಿದ ಆಂಧ್ರ ಸಿಬ್ಬಂದಿ: ಕರವೇ ಗಜಸೇನೆ ಖಡಕ್ ವಾರ್ನಿಂಗ್

    ಅಪ್ಪು ಪೋಸ್ಟರ್ ತೆರವುಗೊಳಿಸಿದ ಆಂಧ್ರ ಸಿಬ್ಬಂದಿ: ಕರವೇ ಗಜಸೇನೆ ಖಡಕ್ ವಾರ್ನಿಂಗ್

    ತಿರುಪತಿ ದೇವಸ್ಥಾನಕ್ಕೆ ಹೋಗುವಾಗ ಕಾರಿನ ಮೇಲಿದ್ದ ಫೋಟೋ ಮತ್ತು ನಾಡಧ್ವಜವನ್ನು ತೆರವುಗೊಳಿಸಿದ್ದಕ್ಕೆ ಆಂಧ್ರ ರಕ್ಷಣಾ ಸಿಬ್ಬಂದಿ ವರ್ತನೆ ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆ ಗಜಸೇನೆ ಹೋರಾಟ ಮಾಡಿತು.

    ತಿರುಪತಿ ತಿರುಮಲ ದೇವಸ್ಥಾನಕ್ಕೆ ಹೋಗುವಾಗ ಕಾರಿನ ಮೇಲಿದ್ದ ಫೋಟೋ ಮತ್ತು ನಾಡಧ್ವಜವನ್ನು ತೆರೆವು ಮಾಡಿದ್ದ ಟಿಟಿಡಿ ಸಿಬ್ಬಂದಿ ಕ್ರಮ ವಿರೋಧಿಸಿ ಕರವೇ ಗಜಸೇನೆ ಹೋರಾಟ ಮಾಡಿದ್ದಾರೆ. ತಿರುಪತಿಯ ಅಮಾನವೀಯ ಘಟನೆಯನ್ನು ವಿರೋಧಿಸಿ ಟಿಟಿಡಿ ದೇವಸ್ಥಾನದ ಬೆಂಗಳೂರು ಮಲ್ಲೇಶ್ವರ ಆವರಣದಲ್ಲಿ ಕರವೇ ಗಜಸೇನೆ ಉಗ್ರ ಹೋರಾಟ ಮಾಡಲಾಗಿದೆ.

    ಈ ವೇಳೆ ಟಿಟಿಡಿ ಆಂಧ್ರಪ್ರದೇಶದ ಸಿಬ್ಬಂದಿಗಳಿಂದ ನಟ ಪುನೀತ್ ಅವರ ಭಾವಚಿತ್ರ ಇರುವ ಗಾಡಿಯನ್ನು ತಿರುಮಲ ಬೆಟ್ಟ ಹತ್ತಲು ಬಿಡದೇ ಇರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಟಿಟಿಡಿ ದೇವಸ್ಥಾನದ ಒಳಗಡೆ ಪುನೀತ್ ಫೋಟೋ ಇಟ್ಟು ಕರವೇ ಗಜಸೇನೆ ಪೂಜೆ ಮಾಡಿದ್ದಾರೆ. ಇದೇ ವೇಳೆ ಕರ್ನಾಟಕದ ಗಜಸೇನೆ ಮತ್ತು ಪುನೀತ್ ಅಭಿಮಾನಿಗಳು ತಿರುಮಲದ ಟಿಟಿಡಿ ಭದ್ರತಾ ಸಿಬ್ಬಂದಿಗಳಿಗೆ ಎಚ್ಚರಿಕೆ ನೀಡಿದ್ದಾರೆ. ಇದನ್ನು ಓದಿ:ತಿರುಪತಿಯಲ್ಲಿ ಅಪ್ಪು ಪೋಸ್ಟರ್ ತೆರವು: ನಟ ಶಿವಣ್ಣ ಬೇಸರ

    ಅಪ್ಪು ಪೋಸ್ಟರ್ ಜತೆಗೆ ಕನ್ನಡ ಧ್ವಜಕ್ಕೂ ಅವಮಾನಿಸಿದ್ದಕ್ಕೆ ತಿರುಪತಿಯ ರಕ್ಷಣಾ ಸಿಬ್ಬಂದಿ ಈ ಕೂಡಲೇ ಕ್ಷಮೆ ಕೋರಬೇಕು. ಅಪ್ಪು ವಿಚಾರ ಕನ್ನಡಿಗರಿಗೆ ನೋವು ತಂದಿದೆ. ಈ ಅನ್ಯಾಯವನ್ನು ಆಂಧ್ರ ಸರ್ಕಾರ ಸರಿಪಡಿಸಬೇಕು ಇಲ್ಲವಾದಲ್ಲಿ ತೀವ್ರ ಹೋರಾಟ ಮಾಡಲಾಗುವುದು ಎಂದು ಕರವೇ ಗಜಸೇನೆ ಖಡಕ್ ಎಚ್ಚರಿಕೆ ನೀಡಿದ್ದಾರೆ. ಈ ಹೋರಾಟಕ್ಕೆ ಪುನೀತ್ ಅಭಿಮಾನಿಗಳು ಸಾಥ್ ನೀಡಿದ್ದಾರೆ.

  • ರೈತರ ಭಾರತ್ ಬಂದ್‌ಕರೆಗೆ ಆಂಧ್ರ ಪ್ರದೇಶ ಸರ್ಕಾರ ಬೆಂಬಲ

    ರೈತರ ಭಾರತ್ ಬಂದ್‌ಕರೆಗೆ ಆಂಧ್ರ ಪ್ರದೇಶ ಸರ್ಕಾರ ಬೆಂಬಲ

    ಹೈದರಾಬಾದ್: ಕೃಷಿ ಕಾಯ್ದೆಗಳನ್ನು ವಿರೋಧಿಸಿ ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿರುವ ಭಾರತ ಬಂದ್‍ಗೆ ಆಂಧ್ರ ಪ್ರದೇಶ ಸರ್ಕಾರ ಬೆಂಬಲ ಘೋಷಿಸಿದೆ ಎಂದು ಆಂಧ್ರ ಪ್ರದೇಶದ ಮಾಹಿತಿ ಮತ್ತು ಸಾರಿಗೆ ಸಚಿವ ಪೆರ್ನಿ ವೆಂಕಟರಾಮಯ್ಯ ತಿಳಿಸಿದ್ದಾರೆ.

    ಆಂಧ್ರ ಪ್ರದೇಶ ಸರ್ಕಾರ, ವೈಎಸ್‍ಆರ್ ಕಾಂಗ್ರೆಸ್ ಬಂದ್‍ಗೆ ಬೆಂಬಲ ನೀಡುತ್ತಿವೆ. ಸೆಪ್ಟೆಂಬರ್ 26ರ ಮಧ್ಯರಾತ್ರಿಯಿಂದ 27ರ ಸಂಜೆಯವರೆಗೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್‍ಗಳೂ ರಸ್ತೆಗಿಳಿಯುವುದಿಲ್ಲ ಎಂದು ಸಚಿವರು ತಿಳಿಸಿದ್ದಾರೆ. ಇದನ್ನೂ ಓದಿ:  ಒಳ್ಳೆಯ ಕೆಲಸ ಮಾಡಿದ್ದರೆ ಯಡಿಯೂರಪ್ಪರನ್ನ ಸಿಎಂ ಸ್ಥಾನದಿಂದ ಇಳಿಸುತ್ತಿರಲಿಲ್ಲ: ಡಿಕೆಶಿ

    ವಿಶಾಖಪಟ್ಟಣ ಉಕ್ಕಿನ ಕಾರ್ಖಾನೆಯ ಕಾರ್ಮಿಕರೂ ಬಂದ್‍ಗೆ ಬೆಂಬಲ ಸೂಚಿಸಿದ್ದಾರೆ.ವಿಶಾಖಪಟ್ಟಣ ಉಕ್ಕಿನ ಕಾರ್ಖಾನೆಯ ಖಾಸಗೀಕರಣವನ್ನು ವಿರೋಧಿಸುವುದಾಗಿ ಆಂಧ್ರ ಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ಎಡಪಕ್ಷಗಳು, ಕಾಂಗ್ರೆಸ್ ಮತ್ತು ತೆಲುಗುದೇಶಂ ಪಕ್ಷಗಳೂ ಬಂದ್‍ಗೆ ಬೆಂಬಲ ಘೋಷಿಸಿವೆ.