Tag: ಆಂಬ್ಯುಲೆನ್ಸ್

  • ಅಪ್ಪು ಹೆಸರಿನಲ್ಲಿ ಆಂಬ್ಯುಲೆನ್ಸ್ ಸೇವೆ: ಪ್ರಕಾಶ್ ರೈ, ಯಶ್ ಘೋಷಣೆ

    ಅಪ್ಪು ಹೆಸರಿನಲ್ಲಿ ಆಂಬ್ಯುಲೆನ್ಸ್ ಸೇವೆ: ಪ್ರಕಾಶ್ ರೈ, ಯಶ್ ಘೋಷಣೆ

    ಪುನೀತ್ ರಾಜ್ ಕುಮಾರ್ (Puneeth Rajkumar) ಹೆಸರಿನಲ್ಲಿ ಈಗಾಗಲೇ ಪ್ರಕಾಶ್ ರೈ ಅಪ್ಪು ಎಕ್ಸ್ ಪ್ರೆಸ್ ಆಂಬ್ಯುಲೆನ್ಸ್ ಸೇವೆ ಶುರು ಮಾಡಿದ್ದಾರೆ. ಜಿಲ್ಲೆಗೊಂದು ಆಂಬ್ಯುಲೆನ್ಸ್ (Ambulance) ಕೊಡಬೇಕು ಎನ್ನುವುದು ಪ್ರಕಾಶ್ ರೈ ಸಂಕಲ್ಪವಾಗಿತ್ತು. ಈಗಾಗಲೇ ಮೈಸೂರು ಜಿಲ್ಲೆಗೆ ಅದನ್ನು ಮಾಡಿದ್ದಾರೆ. ಈ ಸಂಗತಿಯನ್ನು ಅವರು ನಿನ್ನೆ ನಡೆದ ಪುನೀತ ಪರ್ವ ಕಾರ್ಯಕ್ರಮದಲ್ಲಿ ಹಂಚಿಕೊಂಡರು. ಅಲ್ಲದೇ, ತಮಿಳು ನಟ ಸೂರ್ಯ, ತೆಲುಗು ನಟ ಚಿರಂಜೀವಿ ಮತ್ತು ಶಿವರಾಜ್ ಕುಮಾರ್ ಕೂಡ ತಲಾ ಒಂದು ಆಂಬ್ಯುಲೆನ್ಸ್ ಕೊಡುವುದಾಗಿ ಹೇಳಿರುವ ವಿಚಾರವನ್ನೂ ಹಂಚಿಕೊಂಡರು.

    ಪ್ರಕಾಶ್ ರೈ (Prakash Raj) ಅವರು ಈ ವಿಚಾರವನ್ನು ಪ್ರಸ್ತಾಪಿಸುತ್ತಿದ್ದಂತೆಯೇ ಯಶ್ (Yash) ಕೂಡ ಅದಕ್ಕೆ ಕೈ ಜೋಡಿಸಿದರು. ಯಶ್ ವೇದಿಕೆಯ ಮೇಲೆ ಬಂದು ಪ್ರಕಾಶ್ ರೈ ಅವರು ಮಾಡುತ್ತಿರುವ ಕೆಲಸವನ್ನು ಮೆಚ್ಚಿಕೊಂಡು ಅದಕ್ಕೆ ತಾವೂ ಕೈ ಜೋಡಿಸುತ್ತೇನೆ ಅಂದರು. ಅಲ್ಲದೇ, ಉಳಿದಿರುವ 25 ಜಿಲ್ಲೆಗಳಿಗೆ ತಾವೇ ಆಂಬ್ಯುಲೆನ್ಸ್ ಕೊಡುವುದಾಗಿ ಘೋಷಣೆ ಮಾಡಿದರು. ಯಶ್ ಮಾತಿಗೆ ಎದ್ದು ನಿಂತು ಚೆಪ್ಪಾಳೆ ತಟ್ಟಿ, ವೇದಿಕೆಗೆ ಬಂದು ಯಶ್ ನನ್ನು ತಬ್ಬಿಕೊಂಡರು ಪ್ರಕಾಶ್ ರೈ.  ಇದನ್ನೂ ಓದಿ: ಕಾಂತಾರ ನೋಡಿ, ಆದ್ರೆ ಓ.. ಎಂದು ಕೂಗ್ಬೇಡಿ – ಆಚಾರಕ್ಕೆ ಧಕ್ಕೆಯಾಗುತ್ತೆ ಎಂದ ರಿಷಬ್

    ನಿನ್ನೆ ನಡೆದ ಕಾರ್ಯಕ್ರಮದಲ್ಲಿ ಹಲವು ಅಚ್ಚರಿಗಳು ನಡೆದಿವೆ. ಪುನೀತ್ ರಾಜ್ ಕುಮಾರ್ ಜೊತೆಗಿನ ಒಡನಾಟವನ್ನು ಅನೇಕ ಕಲಾವಿದರು ಮತ್ತು ತಂತ್ರಜ್ಞರ ನೆನಪಿಸಿಕೊಂಡರು. ಅಲ್ಲದೇ, ಪ್ರಕಾಶ್ ರೈ, ಯಶ್ ಸೇರಿದಂತೆ ಹಲವು ಕಲಾವಿದರು ಪುನೀತ್ ಅವರ ಜನಪರ ಕಾಳಜಿಯನ್ನು ಮುಂದುವರೆಸಿಕೊಂಡು ಹೋಗುವ ಕುರಿತು ಮಾತನಾಡಿದರು. ಪುನೀತ್ ಅವರ ಗಂಧದ ಗುಡಿ ಚಿತ್ರಕ್ಕೆ ತೆರಿಗೆ ವಿನಾಯತಿಯನ್ನು ಮುಖ್ಯಮಂತ್ರಿಗಳು ಘೋಷಿಸಿದರು.

    ಈ ವರ್ಣರಂಜಿತ ಕಾರ್ಯಕ್ರಮದಲ್ಲಿ ಶಿವರಾಜ್ ಕುಮಾರ್, ರಮ್ಯಾ ಸೇರಿದಂತೆ ಹಲವು ಕಲಾವಿದರು ನೃತ್ಯ ಮಾಡಿದರೆ, ಗುರುಕಿರಣ್, ವಿಜಯ ಪ್ರಕಾಶ್ ಅಪ್ಪು ಹಾಡುಗಳನ್ನು ಹೇಳಿದರು. ಗೊಂಬೆ ಹೇಳುತೈತಿ ಹಾಡುವಾಗ ಡಾ.ರಾಜ್ ಅವರ ಅಷ್ಟೂ ಕುಟುಂಬ ಭಾಗಿಯಾಗಿತ್ತು. ಹಾಡು ಕೇಳುತ್ತಲೇ ಪುನೀತ್ ಪತ್ನಿ ಅಶ್ವಿನಿ ಕಣ್ಣೀರು ಹಾಕಿದರು. ಇಡೀ ಕಾರ್ಯಕ್ರಮ ಈ ಕ್ಷಣ ಭಾವುಕ ಪ್ರಪಂಚಕ್ಕೆ ಕರೆದುಕೊಂಡು ಹೋಗಿತ್ತು.

    Live Tv
    [brid partner=56869869 player=32851 video=960834 autoplay=true]

  • ಆಂಬ್ಯುಲೆನ್ಸ್‌ನಲ್ಲೇ ಹೆರಿಗೆ ಮಾಡಿಸಿದ 108 ಸಿಬ್ಬಂದಿ

    ಆಂಬ್ಯುಲೆನ್ಸ್‌ನಲ್ಲೇ ಹೆರಿಗೆ ಮಾಡಿಸಿದ 108 ಸಿಬ್ಬಂದಿ

    ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಬೆಳಗುರ್ಕಿ ಗ್ರಾಮದ ಗರ್ಭಿಣಿಗೆ ಆಸ್ಪತ್ರೆ ಮಾರ್ಗ ಮಧ್ಯೆಯೇ ಆಂಬ್ಯುಲೆನ್ಸ್‍ನಲ್ಲಿ ಹೆರಿಗೆಯಾಗಿದೆ.

    ಹೆರಿಗೆ ನೋವು ತೀವ್ರವಾಗಿ ಕಾಣಿಸಿಕೊಂಡಿದ್ದರಿಂದ 108 ಸಿಬ್ಬಂದಿ ಹೆರಿಗೆ ಮಾಡಿಸಿದ್ದಾರೆ. ಪ್ರಸ್ತುತ ತಾಯಿ ಪಾರ್ವತಿ ಮುದ್ದಾದ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ.  ತಾಯಿ-ಮಗಳು ಆರೋಗ್ಯವಾಗಿ ಇದ್ದಾರೆ.

    ಹೆರಿಗೆ ನೋವು ಕಾಣಿಸಿಕೊಂಡ ಹಿನ್ನೆಲೆ ಬಾದರ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲು ಆಂಬ್ಯುಲೆನ್ಸ್‌ಗೆ ಕರೆ ಮಾಡಲಾಗಿತ್ತು. ಆದರೆ ಆಸ್ಪತ್ರೆ ಮಾರ್ಗ ಮಧ್ಯೆದಲ್ಲೇ ನೋವು ತೀವ್ರಗೊಂಡಿದ್ದರಿಂದ ಶುಶ್ರೂಷಕ ಬಸವರಾಜ್ ಮಾರ್ಗ ಮಧ್ಯೆ ಆಂಬ್ಯುಲೆನ್ಸ್‌ನಲ್ಲೇ ಮಹಿಳೆಗೆ ಸುರಕ್ಷಿತವಾಗಿ ಹೆರಿಗೆ ಮಾಡಿಸಿದ್ದಾರೆ. ಇದನ್ನೂ ಓದಿ: ಹೋಟೆಲ್‍ಗಳಿಗೆ ನಿಗದಿತ ವಿದ್ಯುತ್ ಶುಲ್ಕ ವಿನಾಯಿತಿ: ಬೆಸ್ಕಾಂ ಭರವಸೆ 

    ಹೆರಿಗೆಯಾದ ನಂತರ ತಾಯಿ ಮಗುವನ್ನು ಬಾದರ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದ್ದು, ತಾಯಿ ಮಗು ಆರೋಗ್ಯವಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

  • ಆಕ್ಸಿಜನ್ ಇಲ್ಲದಿದ್ರೂ ಚಿಕಿತ್ಸೆಗೆ ಕರೆದೊಯ್ದ ಚಾಲಕ: ಉಸಿರಾಟದ ಕೊರತೆಯಿಂದ ನವಜಾತ ಶಿಶು ಸಾವು

    ಆಕ್ಸಿಜನ್ ಇಲ್ಲದಿದ್ರೂ ಚಿಕಿತ್ಸೆಗೆ ಕರೆದೊಯ್ದ ಚಾಲಕ: ಉಸಿರಾಟದ ಕೊರತೆಯಿಂದ ನವಜಾತ ಶಿಶು ಸಾವು

    ದಾವಣಗೆರೆ: ರಾಜ್ಯ ಸರ್ಕಾರ ತುರ್ತು ಚಿಕಿತ್ಸಾ ಸಹಾಯಕ್ಕಾಗಿ 108 ಅಂಬುಲೆನ್ಸ್ ಸೇವೆ ಪ್ರಾರಂಭಿಸಿದೆ. ಆದರೆ ಆಂಬುಲೆನ್ಸ್ ನಲ್ಲಿ ಪ್ರಥಮ ಚಿಕಿತ್ಸೆಗೆ ಬೇಕಾದ ಸೂಕ್ತ ಸೌಲಭ್ಯವಿಲ್ಲದೆ ನವಜಾತ ಶಿಶುವೊಂದನ್ನು ಬಲಿ ಪಡೆದುಕೊಂಡಿದೆ.

    ಹೌದು… ಅಂಬುಲೆನ್ಸ್ ನಲ್ಲಿ ಆಕ್ಸಿಜನ್ ಇಲ್ಲದ ಕಾರಣ ಉಸಿರಾಟದ ಕೊರತೆಯಾಗಿ ನವಜಾತ ಶಿಶುವೊಂದು ಮೃತಪಟ್ಟಿರುವ ಘಟನೆ ಚೆನ್ನಗಿರಿ ತಾಲ್ಲೂಕಿನ ಬಸವಪಟ್ಟಣ ಗ್ರಾಮದಲ್ಲಿ ನಡೆದಿದೆ. ಇಲ್ಲಿನ ಶೃಂಗಾಯಬಾಬು ತಾಂಡದ ಹಾಲೇಶ್ ನಾಯಕ್ ಹಾಗೂ ಸ್ವಾತಿ ದಂಪತಿಯ ಮೊದಲ ಮಗುವೇ ಮೃತಪಟ್ಟಿರುವುದು. ಇದನ್ನೂ ಓದಿ: ಚಂದ್ರು ಹತ್ಯೆ ಕೇಸ್‌ಗೆ ಬಿಗ್ ಟ್ವಿಸ್ಟ್- ಘಟನೆಯ ಇಂಚಿಂಚು ಮಾಹಿತಿ ನೀಡಿದ ಸ್ನೇಹಿತ ಸೈಮನ್ ರಾಜ್

    HOSPITAL

    ಏನಿದು ಘಟನೆ?
    ಶುಕ್ರವಾರ ರಾತ್ರಿ 2 ಗಂಟೆ ವೇಳೆ ಸ್ವಾತಿ ಅವರಿಗೆ ಹೆರಿಗೆ ನೋವು ಕಾಣಿಸಿಕೊಂಡಿದೆ. ಈ ವೇಳೆ ಬಸವಪಟ್ಟಣ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಿದ್ದು, ಬೆಳಗ್ಗೆ 7 ಗಂಟೆ ವೇಳೆಗೆ ಹೆರಿಗೆ ಮಾಡಿಸಲಾಗಿದೆ. ಮಗುವಿಗೆ ಉಸಿರಾಟ ತೊಂದರೆಯಿದ್ದ ಕಾರಣ ಹೆಚ್ಚಿನ ಚಿಕಿತ್ಸೆಗಾಗಿ ಹೊನ್ನಾಳಿಗೆ ಕರೆದೊಯ್ಯಲು ಪೋಷಕರು ಮುಂದಾಗಿದ್ದಾರೆ. ಆದರೆ, ಆಸ್ಪತ್ರೆಗೆ ಕರೆದೊಯ್ಯಬೇಕಿದ್ದ ಆಂಬ್ಯುಲೆನ್ಸ್‌ನಲ್ಲಿ ಆಕ್ಸಿಜನ್ ಇಲ್ಲದಿದ್ದರೂ ಚಾಲಕ ಮಾರ್ಗಮಧ್ಯೆ ಬೇರೊಂದು ಆಂಬುಲೆನ್ಸ್ ಬರುತ್ತದೆ ಎಂದು ಹೇಳಿ ಕರೆದೊಯ್ದಿದ್ದಾನೆ. ಹೊನ್ನಾಳಿಗೆ ತಲುಪುವವರೆಗೂ ಆಕ್ಸಿಜನ್ ಸಿಗದ ಕಾರಣ ಮಗು ಮಾರ್ಗಮಧ್ಯೆಯೇ ಮೃತಪಟ್ಟಿದೆ. ಇದನ್ನೂ ಓದಿ: ಕೆನಡಾ ತುಂಬಾ ಸೇಫ್ ಎನ್ನುತ್ತಿದ್ದ ಭಾರತದ ವಿದ್ಯಾರ್ಥಿ ಗುಂಡೇಟಿಗೆ ಬಲಿ

    108 ambulance karnataka A copy
    ಸಾಂದರ್ಭಿಕ ಚಿತ್ರ

    ಇದರಿಂದಾಗಿ ಪೋಷಕರು ಹಾಗೂ ಮಗುವಿನ ಸಂಬಂಧಿಕರು ಆಸ್ಪತ್ರೆ ಸಿಬ್ಬಂದಿ ವಿರುದ್ಧ ಆಕ್ರೋಶಗೊಂಡಿದ್ದು, ಆಸ್ಪತ್ರೆಯ ಮುಂಭಾಗ ಪ್ರತಿಭಟನೆ ನಡೆಸುತ್ತಿದ್ದಾರೆ. ಮೊದಲೇ ಇಲ್ಲಿ ಸರಿಯಾದ ಸಮಯಕ್ಕೆ 108 ಅಂಬುಲೆನ್ಸ್ ಬರುತ್ತಿಲ್ಲ. ಇದ್ದ ಅಂಬುಲೆನ್ಸ್ ನಲ್ಲಿ ಸರಿಯಾದ ಚಿಕಿತ್ಸಾ ವ್ಯವಸ್ಥೆಯಿಲ್ಲ ಎಂದು ದೂರುತ್ತಿದ್ದಾರೆ. ಜಿಲ್ಲಾ ಆರೋಗ್ಯಾಧಿಕಾರಿಗಳು ಬರುವವರೆಗೂ ಸ್ಥಳದಿಂದ ಕದಲುವುದಿಲ್ಲ ಎಂದು ಪಟ್ಟುಹಿಡಿದಿದ್ದಾರೆ. ಸದ್ಯ ಸ್ಥಳಕ್ಕೆ ಬಸವಪಟ್ಟಣ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

  • ಕೈಗಾಡಿಯಲ್ಲಿ ಮಲಗಿಸಿ ಪತ್ನಿಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋದ ವೃದ್ಧ

    ಕೈಗಾಡಿಯಲ್ಲಿ ಮಲಗಿಸಿ ಪತ್ನಿಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋದ ವೃದ್ಧ

    ಲಕ್ನೋ: ವಯಸ್ಸಾದ ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಗಾಡಿಯಲ್ಲಿ ಆಸ್ಪತ್ರೆಗೆ ಕರೆದುಕೊಂಡು ಹೋಗಿರುವುದು ಉತ್ತರ ಪ್ರದೇಶದ ಬಲ್ಲಿಯಾದಲ್ಲಿ ಬೆಳಕಿಗೆ ಬಂದಿದೆ.

    ವೀಡಿಯೊದಲ್ಲಿ ಏನಿದೆ?: ಚಿಲ್ಖರ್ ಬ್ಲಾಕ್‍ನ ಗ್ರಾಮದ ನಿವಾಸಿ ಸಕುಲ್ ಪ್ರಜಾಪತಿ ಅವರು, ಅನಾರೋಗ್ಯದಿಂದ ಬಳಲುತ್ತಿರುವ ತನ್ನ ಪತ್ನಿ ಜೋಗ್ನಿ (55) ಅವರನ್ನು ಗಾಡಿಯಲ್ಲಿ ಮಲಗಿಸಿಕೊಂಡು ತನ್ನ ಕೈಗಳಿಂದ ಎಳೆಯುತ್ತಾ ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿರುವುದು ಕಂಡುಬಂದಿದೆ. ಇದನ್ನೂ ಓದಿ: ಬ್ಲಾಕ್ ಹಾಟ್ ಗೌನ್ ನಲ್ಲಿ ರಿಚಾ ಚಡ್ಡಾ : ಪಡ್ಡೆಗಳ ರಾಣಿಜೇನಿನ ಹಾಟ್ ಫೋಟೋ ಶೂಟ್

    ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ, ಉಪಮುಖ್ಯಮಂತ್ರಿ ಬ್ರಜೇಶ್ ಪಾಠಕ್ ಅವರು ಈ ಬಗ್ಗೆ ತನಿಖೆಗೆ ಆದೇಶಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಸಲ್ಮಾನ್ ಖಾನ್‌ಗೆ ಮತ್ತೆ ಕೋರ್ಟ್ ಸಂಕಷ್ಟ: ಫೋನ್ ಕಿತ್ತುಕೊಂಡ ಪ್ರಕರಣಕ್ಕೆ ಸಲ್ಲು ಕಟಕಟೆಯಲ್ಲಿ

    ಮಾರ್ಚ್ 28 ರಂದು, ಪ್ರಜಾಪತಿ ತನ್ನ ಹೆಂಡತಿಯನ್ನು ತನ್ನ ಮನೆಯಿಂದ ಮೂರು ಕಿಲೋಮೀಟರ್ ದೂರದಲ್ಲಿರುವ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದರು. ಅಲ್ಲಿನ ವೈದ್ಯರು ಕೆಲವು ಔಷಧಿಗಳನ್ನು ನೀಡಿ ಪತ್ನಿಯನ್ನು ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಹೋಗುವಂತೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

    ಚಿಕಿತ್ಸೆ ಫಲಕಾರಿಯಾಗದೆ ಜೋಗ್ನಿ ಆಸ್ಪತ್ರೆಯಲ್ಲಿ ರಾತ್ರಿ 11 ಗಂಟೆ ಸುಮಾರಿಗೆ ಸಾವನ್ನಪ್ಪಿದ್ದಾರೆ. ಶವವನ್ನು ಮನೆಗೆ ಕೊಂಡೊಯ್ಯಲು ಅಂಬುಲೆನ್ಸ್ ನೀಡಲು ಆಸ್ಪತ್ರೆ ನಿರಾಕರಿಸಿತು, ರಾತ್ರಿ ಸೇವೆ ಲಭ್ಯವಿಲ್ಲ ಎಂದು ಹೇಳಿದರು. ನಂತರ 1,100 ರೂ.ಗೆ ಖಾಸಗಿ ಅಂಬುಲೆನ್ಸ್ ಬಾಡಿಗೆಗೆ ಪಡೆದರು ಎಂದು ಪೊಲೀಸರು ತಿಳಿಸಿದ್ದಾರೆ.

    ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್, ವಯಸ್ಸಾದ ರೋಗಿಯನ್ನು ಆಸ್ಪತ್ರೆಗೆ ಸಾಗಿಸುತ್ತಿರುವ ಫೋಟೋವನ್ನು ಟ್ಯಾಗ್ ಮಾಡಿ, ಟ್ವೀಟ್‍ನಲ್ಲಿ ರಾಜ್ಯದ ಬಿಜೆಪಿ ಸರ್ಕಾರವು ಖರ್ಚು ಮಾಡುತ್ತಿಲ್ಲ. ಯುಪಿಯಲ್ಲಿ ಆರೋಗ್ಯ ಕ್ಷೇತ್ರದಲ್ಲಿ ಸಾಧನೆಗಳ ಸುಳ್ಳು ಜಾಹೀರಾತುಗಳಿಗೆ ಖರ್ಚು ಮಾಡಲಾಗುತ್ತಿರುವ ಸ್ವಲ್ಪ ಭಾಗವನ್ನು ವೈದ್ಯಕೀಯ ಸೇವೆಗಳಿಗೆ ವಿನಿಯೋಗಿಸಬೇಕು. ಸ್ಟ್ರೆಚರ್ ಮತ್ತು ಆಂಬ್ಯುಲೆನ್ಸ್‌ಗಳ ಕೊರತೆಯಿಂದ ಜನರು ಸಾಯುತ್ತಿದ್ದಾರೆ ಎಂದು ಯಾದವ್ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

  • ಆಂಬ್ಯುಲೆನ್ಸ್​ನಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ!

    ಆಂಬ್ಯುಲೆನ್ಸ್​ನಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ!

    ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡಿನ ಆಂಬ್ಯುಲೆನ್ಸ್‌ನಲ್ಲಿ ಮಹಿಳೆ ಮಗುವಿಗೆ ಜನ್ಮ ನೀಡಿದ್ದಾರೆ.

    ಮುಂಡಗೋಡು ತಾಲೂಕಿನ ಇಂದೂರ ಗ್ರಾಮದ ದಾವಲಬಿ ಮಹಬೂಬಷಾ ಹನಕನಹಳ್ಳಿ(19) ಹೆಣ್ಣು ಮಗುವಿಗೆ ಜನ್ಮನೀಡಿದ ಗರ್ಭಿಣಿಯಾಗಿದ್ದಾಳೆ. ಈ ಘಟನೆ ಇಂದು ರಾತ್ರಿ ನಡೆಯಿತು.

    ಇದು ಗರ್ಭಿಣಿಯ ಮೊದಲನೇ ಹೆರಿಗೆಯಾಗಿದ್ದು, ಅಧಿಕ ರಕ್ತದೊತ್ತಡ ಹಾಗೂ ಹೆರಿಗೆ ನೋವು ಕಾಣಿಸಿದ್ದರಿಂದ ತಾಲೂಕು ಆಸ್ಪತ್ರೆಯಯವರು ಹುಬ್ಬಳ್ಳಿ ಕಿಮ್ಸ್ ಗೆ ಕಳಿಸಿಕೊಟ್ಟಿದ್ದರು. ಹೆರಿಗೆ ನೋವು ಹೆಚ್ಚಾಗಿದ್ದರಿಂದ ವರೂರ ಬಳಿ ವಾಹನವನ್ನು ರಸ್ತೆ ಬದಿಗೆ ನಿಲ್ಲಿಸಿ ತುರ್ತು ವೈದ್ಯಕೀಯ ತಂತ್ರಜ್ಞ ಧನರಾಜ್ ಬಳೂರ ಸುರಕ್ಷಿತವಾಗಿ ಹೆರಿಗೆ ಮಾಡಿಸಿದ್ದಾರೆ. ಇದನ್ನೂ ಓದಿ: ಭಾರತದ ಮೇಲೆ ಯುದ್ಧದ ಎಫೆಕ್ಟ್: ಖಾದ್ಯತೈಲ, ಗೋಧಿ, ಸಿಮೆಂಟ್, ಕಬ್ಬಿಣ ದುಬಾರಿ

    ತಾಯಿ ಮಗು ಇಬ್ಬರು ಸುರಕ್ಷಿತವಾಗಿ ಇದ್ದು, ಹುಬ್ಬಳ್ಳಿ  ಕಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಚಾಲಕ ಕೆಂಚೇಶ್.ಇ.ಎನ್ ಇದ್ದರು.

  • ನಂದಿಬೆಟ್ಟದಲ್ಲಿ ಸಿಲುಕಿದ ಯುವಕ – ಹೆಲಿಕಾಪ್ಟರ್ ಮೂಲಕ ರಕ್ಷಣೆ!

    ನಂದಿಬೆಟ್ಟದಲ್ಲಿ ಸಿಲುಕಿದ ಯುವಕ – ಹೆಲಿಕಾಪ್ಟರ್ ಮೂಲಕ ರಕ್ಷಣೆ!

    ಚಿಕ್ಕಬಳ್ಳಾಪುರ: ನಂದಿಬೆಟ್ಟದಲ್ಲಿ ಪ್ರವಾಸಿಗ ಅಪಾಯದಲ್ಲಿ ಸಿಲುಕಿಕೊಂಡಿದ್ದು, ಹೆಲಿಕಾಪ್ಟರ್ ಮೂಲಕ ಏರ್ ಫೋರ್ಸ್ ಅಧಿಕಾರಿಗಳು ಆತನನ್ನು ರಕ್ಷಣೆ ಮಾಡಿದ್ದಾರೆ.

    ದೆಹಲಿ ಮೂಲದ 19 ವರ್ಷದ ನಿಶಾಂತ್ ಗುಲ್ ಅವರನ್ನು ಏರ್ ಫೋರ್ಸ್ ಅಧಿಕಾರಿಗಳ ಸಹಾಯದಿಂದ ರಕ್ಷಣೆ ಮಾಡಲಾಗಿದೆ. ಬೆಟ್ಟದಿಂದ ಅಪಾಯಕಾರಿ ಜಾಗಕ್ಕೆ ಬಿದ್ದ ಹಿನ್ನೆಲೆ ನಿಶಾಂತ್ ಬೆನ್ನಿಗೆ ಗಂಭೀರ ಗಾಯವಾಗಿದೆ. ಪರಿಣಾಮ ಹೆಲಿಕಾಪ್ಟರ್ ಮೂಲಕವೇ ಯಲಹಂಕ ಏರ್ ಬೇಸ್‍ಗೆ ನಿಶಾಂತ್‍ನನ್ನು ರವಾನೆ ಮಾಡಲಾಗಿತ್ತು. ಅಲ್ಲಿಂದ ಅಸ್ಟರ್ ಆಸ್ಪತ್ರೆಗೆ ಆಂಬ್ಯುಲೆನ್ಸ್ ನಲ್ಲಿ ಕಳುಹಿಸಲಾಗಿದೆ. ಇದನ್ನೂ ಓದಿ: ನಂದಿಬೆಟ್ಟಕ್ಕೆ ಬಂದು ಅಪಾಯಕ್ಕೆ ಸಿಲುಕಿದ ಪ್ರವಾಸಿಗ!

    ಹೆಲಿಕಾಪ್ಟರ್ ಮೂಲಕ ನಿಶಾಂತ್ ರಕ್ಷಣೆಗಾಗಿ ವಿಂಗ್ ಕಮಾಂಡರ್ ಹರಸಾಹಸ ಪಡುತ್ತಿದ್ರು. ಅಲ್ಲದೆ ಈ ವೇಳೆ ನಿಶಾಂತ್ ಫೋನ್ ಸ್ವಿಚ್ ಆಫ್ ಆಗಿದ್ದು, ಆತನನ್ನು ಹುಡುಕಲು ಇನ್ನೂ ಕಷ್ಟವಾಗುತ್ತೆ ಎಂದು ಎಲ್ಲರೂ ಭಾವಿಸಿದ್ದರು. ಆದರೆ ಕೊನೆಯಲ್ಲಿ NDRF ತಂಡ ಸಹ ನಿಶಾಂತ್ ಸಹಾಯಕ್ಕೆ ಆಗಮಿಸಿತು. ಈ ಎಲ್ಲದರ ಪರಿಣಾಮವಾಗಿ ಆತ ಇಂದು ಬದುಕುಳಿದಿದ್ದಾನೆ.

    ಏನಿದು ಘಟನೆ?
    ದೆಹಲಿ ಮೂಲದ ನಿಶಾಂತ್ ಬೆಂಗಳೂರಿನಲ್ಲಿ ವ್ಯಾಸಂಗ ಮಾಡುತ್ತಿದ್ದನು. ವೀಕೆಂಡ್ ಎಂದು ಸ್ನೇಹಿತರ ಜೊತೆ ನಂದಿಬೆಟ್ಟಕ್ಕೆ ಬಂದಿದ್ದಾನೆ. ಈ ವೇಳೆ ಅವರು ಬ್ರಹ್ಮಗಿರಿ ಬೆಟ್ಟದಲ್ಲಿ ಟ್ರೆಕ್ಕಿಂಗ್ ಮಾಡಲು ಮುಂದಾಗಿದ್ದಾರೆ. ಟ್ರೆಕ್ಕಿಂಗ್ ಮಾಡುವ ವೇಳೆ ನಿಶಾಂತ್ ಕಾಲು ಜಾರಿ ಕೆಳಗೆ ಬಿದ್ದಿದ್ದಾನೆ. ಆತನೇ ಸಹಾಯಕ್ಕಾಗಿ ಸರ್ಕಾರದ ಕಂಟ್ರೋಲ್ ರೂಂ ಗೆ ಕರೆ ಮಾಡಿದ್ದಾನೆ. ಪರಿಣಾಮ ನಿಶಾಂತ್ ಉಳಿಸಲು ಆಗ್ನಿಶಾಮಕದಳದ ಸಿಬ್ಬಂದಿ ಕಾರ್ಯಾಚರಣೆ ಮಾಡಿದ್ದಾರೆ. ಅವರಿಗೆ ಈ ಯುವಕ ಕಡಿದಾದ ಪ್ರದೇಶ ದುರ್ಗಮ ಹಾದಿಯಲ್ಲಿ ಪತ್ತೆಯಾಗಿದ್ದನು. ಇದನ್ನೂ ಓದಿ: ಮಹಾ ಶಿವರಾತ್ರಿ: ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ಭಕ್ತರಿಗಾಗಿ ಹೊಸ ಆ್ಯಪ್ ಬಿಡುಗಡೆ

  • ಸೆಲ್ಫಿ ತೆಗೆಯುವಾಗ 80 ಅಡಿ ಜಲಪಾತಕ್ಕೆ ಬಿದ್ದ ಯುವಕ

    ಸೆಲ್ಫಿ ತೆಗೆಯುವಾಗ 80 ಅಡಿ ಜಲಪಾತಕ್ಕೆ ಬಿದ್ದ ಯುವಕ

    ಚಿಕ್ಕಮಗಳೂರು: ಇಳಿ ಸಂಜೆಯಲ್ಲಿ ಜಲಪಾತದ ಬಳಿ ಸೆಲ್ಫಿ ತೆಗೆಯಲು ಹೋಗಿ ಯುವಕನೋರ್ವ ಕಾಲು ಜಾರಿ ಬಿದ್ದಿರೋ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ಆಲೇಖಾನ್ ಜಲಪಾತದಲ್ಲಿ ನಡೆದಿದೆ.

    ಸಂಜೆಯಾದ್ದರಿಂದ ಸೆಲ್ಫಿ ತೆಗೆಯುವಾಗ ಕಾಲು ಜಾರಿ ಬಿದ್ದ ಯುವಕ ಸುಮಾರು 80 ಅಡಿ ಆಳಕ್ಕೆ ಬಿದ್ದಿದ್ದಾನೆ. ನೀರಿನ ಜೊತೆಯೇ ಬಿದ್ದಿದ್ದರಿಂದ ಅದೃಷ್ಟವಶಾತ್ ಸಾವಿನಿಂದ ಪಾರಾಗಿದ್ದಾನೆ. 80 ಅಡಿ ಆಳದಿಂದ ಬಿದ್ದ ರಭಸಕ್ಕೆ ಯುವಕನ ಕೈ-ಕಾಲು ಮುರಿದು ಹೋಗಿದ್ದು, ಗಂಭೀರ ಗಾಯದಿಂದ ತೀವ್ರ ಅಸ್ವಸ್ತನಾಗಿದ್ದ ಯುವಕನನ್ನ ದಕ್ಷಿಣ ಕನ್ನಡ ಜಿಲ್ಲೆಯ ಉಜಿರೆ ಆಸ್ಪತ್ರೆಗೆ ರವಾನಿಸಲಾಗಿದೆ.

    ಗಾಯಾಳುವನ್ನು ಅಭಿಷೇಕ್ ಎಂದು ಗುರುತಿಸಲಾಗಿದೆ. ಬೆಂಗಳೂರಿನಿಂದ ಮಂಗಳೂರಿಗೆ ಖಾಸಗಿ ಕಂಪನಿಯೊಂದರ ಟವರ್ ಸಾಮಾಗ್ರಿಗಳನ್ನು ಸಾಗಿಸುತ್ತಿದ್ದ ವಾಹನದಲ್ಲಿದ್ದ ತುಮಕೂರು ಜಿಲ್ಲೆ ಪಾವಗಡ ಮೂಲದ ಮೂವರು ಯುವಕರಿದ್ದರು. ಸಂಜೆ 7 ಗಂಟೆ ಸುಮಾರಿಗೆ ಚಾರ್ಮಾಡಿ ಘಾಟಿಯ ಆಲೇಕಾನ್ ಜಲಪಾತ ಬಂದ ವೇಳೆ ಸೆಲ್ಫಿ ತೆಗೆಯುವ ಭರದಲ್ಲಿ ಅಭಿಷೇಕ್ ಕಾಲು ಜಾರಿ ಜಲಪಾತದ ಪ್ರಪಾತಕ್ಕೆ ಬಿದ್ದಿದ್ದಾನೆ. ಇದನ್ನೂ ಓದಿ: ಅಲ್ಪಸಂಖ್ಯಾತರ ಓಲೈಕೆಗಾಗಿ RSS ವಿರುದ್ಧ ಕಾಂಗ್ರೆಸ್ ಹೇಳಿಕೆ ನೀಡುತ್ತಿದೆ: ಬೊಮ್ಮಾಯಿ

    ವಿಷಯ ತಿಳಿಯುತ್ತಿದ್ದಂತೆ ಬಣಕಲ್ ಠಾಣೆ ಪೊಲೀಸರು ಹಾಗೂ ಆಂಬ್ಯುಲೆನ್ಸ್ ಸ್ಥಳಕ್ಕೆ ಧಾವಿಸಿದ್ದು, ಜಲಪಾತದ ಪ್ರಪಾತಕ್ಕೆ ಬಿದ್ದು ಕೈ-ಕಾಲು ಮುರಿದುಕೊಂಡಿದ್ದ ಕೂಡಲೇ ಉಜಿರೆಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಲೇಖಾನ್ ಜಲಪಾತದ ಬಳಿ ಈ ಹಿಂದೆ ಕೂಡ ಹಲವರು ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ. ಕೈ-ಕಾಲು ಮುರಿದುಕೊಂಡಿದ್ದಾರೆ. ಜಲಪಾತದ ಬಳಿ ಎಚ್ಚರಿಕೆಯ ಸೂಚನಾ ಫಲಕವನ್ನು ಅಳವಡಿಸಲಾಗಿತ್ತು. ಆದರೆ 2019ರಲ್ಲಿ ಸುರಿದ ಮಳೆಗೆ ಸೂಚನಾ ಫಲಕ ಕೊಚ್ಚಿ ಹೋಗಿದ್ದು ಸೂಚನಾ ಫಲಕ ಇಲ್ಲದಿರುವುದಿಂದ ಜಲಪಾತಕ್ಕೆ ಪ್ರವಾಸಿಗರು ಇಳಿಯುವುದು ಹೆಚ್ಚಾಗಿದೆ. ಜಲಪಾತದ ಬಳಿ ಸಂಬಂಧಪಟ್ಟ ಅಧಿಕಾರಿಗಳು ಸೂಚನಾ ಫಲಕ ಅಳವಡಿಸಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಬಿಜೆಪಿ ಸಾಧನೆ ಶೂನ್ಯ, ಅವಹೇಳನಕಾರಿ ಮಾತಾಡ್ತಿದ್ದಾರೆ: ಡಿಕೆಶಿ ಕಿಡಿ

  • ನೂರಾರು ಕೋವಿಡ್ ಸೋಂಕಿತರನ್ನು ಉಳಿಸಿದವನ ಪತ್ನಿಯೇ ಕೋವಿಡ್‍ಗೆ ಬಲಿ – ಡಿಕೆಶಿ ಸಾಂತ್ವನ

    ನೂರಾರು ಕೋವಿಡ್ ಸೋಂಕಿತರನ್ನು ಉಳಿಸಿದವನ ಪತ್ನಿಯೇ ಕೋವಿಡ್‍ಗೆ ಬಲಿ – ಡಿಕೆಶಿ ಸಾಂತ್ವನ

    ತುಮಕೂರು: ಕೋವಿಡ್ ನಿಂದ ಅನೇಕರ ಕುಟುಂಬಗಳು ಬೀದಿಗೆ ಬಿದ್ದಿವೆ. ಆತ್ಮೀಯರ ಅಗಲಿಕೆಯಿಂದ ಅನೇಕರು ಕಂಗಾಲಾಗಿದ್ದಾರೆ. ಕುಣಿಗಲ್ ತಾಲೂಕಿನಲ್ಲಿ ಹೀಗೆ ನೋವಿನ ಕಡಲಿಗೆ ಸಿಕ್ಕಿರುವ ಕೆಲವರನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಗುರುವಾರ ಭೇಟಿ ಮಾಡಿ ಸಾಂತ್ವನ ಹೇಳಿದರು.

    ಕುಣಿಗಲ್‍ನ ಕೊತ್ತಗೆರೆಪಾಳ್ಯದ ಶಿವರಾಮ್ ವೃತ್ತಿಯಿಂದ ಅಂಬುಲೆನ್ಸ್ ಚಾಲಕರು. ಕೋವಿಡ್ ಸಮಯದಲ್ಲಿ ತಮ್ಮ ಪ್ರಾಣ ಪಣಕ್ಕಿಟ್ಟು, ನೂರಾರು ಸೋಂಕಿತರನ್ನು ಆಸ್ಪತ್ರೆಗೆ ದಾಖಲಿಸಿದ್ದರು. ಜೊತೆಗೆ ಸೋಂಕಿನಿಂದ ಸತ್ತ ಕೆಲವರ ಶವಗಳತ್ತ ವಾರಸುದಾರರು ತಿರುಗಿ ನೋಡದೇ ಹೋದಾಗ ಆ ಶವಗಳ ಅಂತ್ಯ ಸಂಸ್ಕಾರವನ್ನೂ ಇವರೇ ನೆರವೇರಿಸಿದರು. ಆದರೆ ವಿಧಿ ಇವರ ಬದುಕಿನಲ್ಲೇ ಆಟವಾಡಿಬಿಟ್ಟಿತು. ಗುರುತು ಪರಿಚಯ ಇಲ್ಲದ ಯಾರು, ಯಾರನ್ನೋ ಸಕಾಲಕ್ಕೆ ಆಸ್ಪತ್ರೆಗೆ ಸಾಗಿಸಿ ಪ್ರಾಣ ಉಳಿಸಿದ್ದ ಶಿವರಾಮ್ ಅವರಿಗೆ ಕೊರೊನಾ ಸೋಂಕಿಗೆ ಒಳಗಾದ ತಮ್ಮ ಪತ್ನಿ ಲಕ್ಷ್ಮಿದೇವಿ ಅವರನ್ನೇ ಉಳಿಸಿಕೊಳ್ಳಲು ಆಗಲಿಲ್ಲ. ಒಂದಷ್ಟು ದಿನ ಸೋಂಕಿನಿಂದ ನರಳಿದ ಅವರು ಕೊನೆಗೊಮ್ಮೆ ಕಣ್ಮುಚ್ಚಿದರು. ಇದನ್ನೂ ಓದಿ: ಅಪಘಾತವಾಗಿ ನರಳಾಡುತ್ತಿದ್ದ ಗಾಯಾಳು- ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದ ಡಿಕೆಶಿ

    ಡಿ.ಕೆ. ಶಿವಕುಮಾರ್ ಅವರು ಶಿವರಾಮ್ ಮನೆಗೆ ಭೇಟಿ ನೀಡಿದಾಗ ಶಿವರಾಮ್ ಕುಟುಂಬ ಸದಸ್ಯರ ದುಃಖದ ಕಟ್ಟೆಯೊಡೆಯಿತು. ಅವರೆಲ್ಲ ತಮ್ಮ ಅಳಲು ಹೇಳಿಕೊಂಡು ಗದ್ಗದಿತರಾದರು. ಅವರಿಗೆ ಸಾಂತ್ವನ ಹೇಳಿದ ಡಿ.ಕೆ. ಶಿವಕುಮಾರ್ ಧೈರ್ಯ ತುಂಬುವ ಪ್ರಯತ್ನ ಮಾಡಿದರು. ಸಾಂಕೇತಿಕವಾಗಿ 10 ಸಾವಿರ ಸಹಾಯ ಧನವನ್ನೂ ನೀಡಿದರು. ಅವರ ನೋವಿನಲ್ಲಿ ಭಾಗಿಯಾದ ಶಿವಕುಮಾರ್ ಭಾರವಾದ ಹೆಜ್ಜೆಯೊಡನೆ ಅಲ್ಲಿಂದ ತೆರಳಿದರು.

  • 250 ಟಾಕ್ಸಿಗಳನ್ನು ಮಿನಿ ಅಂಬುಲೆನ್ಸ್ ಆಗಿ ಪರಿವರ್ತಿಸಿದ ಚೆನ್ನೈ ನಾಗರಿಕ ಸಂಸ್ಥೆ

    250 ಟಾಕ್ಸಿಗಳನ್ನು ಮಿನಿ ಅಂಬುಲೆನ್ಸ್ ಆಗಿ ಪರಿವರ್ತಿಸಿದ ಚೆನ್ನೈ ನಾಗರಿಕ ಸಂಸ್ಥೆ

    ಚೆನ್ನೈ: ಕೊರೊನಾ ವೈರಸ್ ಸಂಕಷ್ಟದಲ್ಲಿರುವ ಜನರಿಗೆ ಹಲವಾರು ಸಂಸ್ಥೆಗಳು, ಎನ್‍ಜಿಒಗಳು ಮತ್ತು ಅನೇಕ ವ್ಯಕ್ತಿಗಳು ಸಹಾಯ ಮಾಡಲು ಮುಂದೆ ಬರತ್ತಿದ್ದಾರೆ. ಸದ್ಯ ಚೆನ್ನೈನಲ್ಲಿಯೂ ಸಹ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿದ್ದು, ಚೆನ್ನೈನ ನಾಗರಿಕ ಸಂಸ್ಥೆ 250 ಟ್ಯಾಕ್ಸಿಗಳನ್ನು ಅಂಬುಲೆನ್ಸ್‌ಗಳಾಗಿ ಪರಿವರ್ತಿಸಿದ್ದು, ರೋಗಿಗಳಿಗೆ ಸಾರಿಗೆ ಸೌಲಭ್ಯವನ್ನು ಒದಗಿಸಿದೆ.

    ಗ್ರೇಟರ್ ಚೆನ್ನೈ ಕಾಪೋರೇಷನ್ 250 ಕೋವಿಡ್-ವಿಶೇಷ ಟ್ಯಾಕ್ಸಿಗಳನ್ನು ಮಿನಿ ಅಂಬುಲೆನ್ಸ್‌ಗಳಾಗಿ ಪರಿವರ್ತಿಸಿದ್ದು, ಇಪ್ಪತ್ತು ವಾಹನಗಳಿಗೆ ಮುನ್ಸಿಪಲ್ ಅಡ್ಮಿನಿಸ್ಟ್ರೇಶನ್ ಸಚಿವ ಕೆ.ಎನ್. ನೆಹರುರವರು ಚಾಲನೆ ನೀಡಿದರು.

    ಈ ಕುರಿತಂತೆ ಗ್ರೇಟರ್ ಚೆನ್ನೈ ಕಾರ್ಪೋರೇಶನ್ ಆಯುಕ್ತ ಗಗನ್ ಸಿಂಗ್ ಬೇಡಿ, 108 ಅಂಬುಲೆನ್ಸ್ ಮೇಲಿನ ಒತ್ತಡವನ್ನು ಕಡಿಮೆ ಮಾಡುವ ಸಲುವಾಗಿ ಮತ್ತು ಆಕ್ಸಿಜನ್ ಅಗತ್ಯವಿಲ್ಲದವರು ಕೂಡ 108 ಅಂಬುಲೆನ್ಸ್‌ ಸೇವೆಗಳನ್ನು ಬಳಸುತ್ತಿದ್ದಾರೆ. ಇದು ಆಕ್ಸಿಜನ್ ಅಗತ್ಯವಿರುವವರ ಮೇಲೆ ಪರಿಣಾಮ ಬೀರುತ್ತಿದೆ. ಹಾಗಾಗಿ ಟ್ಯಾಕ್ಸಿ ಹಾಗೂ ಕಾರುಗಳನ್ನು ತಾತ್ಕಾಲಿಕ ಅಂಬುಲೆನ್ಸ್‌ಗಳಾಗಿ ಪರಿವರ್ತಿಸಲು ನಿರ್ಧರಿಸಲಾಯಿತು. ನಾಗರಿಕ ಸಂಘವು ಪ್ರತಿ ವಲಯದಲ್ಲಿ 15 ವಾಹನಗಳನ್ನು ನಿಗದಿಪಡಿಸಿದೆ ಮತ್ತು 250 ವಾಹನಗಳನ್ನು ಕಾರನ್ನು ಅಂಬುಲೆನ್ಸ್‌ಗಳಾಗಿ ಪರಿವರ್ತಿಸಲು ಆದೇಶಿಸಿದೆ ಎಂದರು.

  • ಅಂಬುಲೆನ್ಸ್ ತಲುಪಲು ಎತ್ತಿನಗಾಡಿಯಲ್ಲಿ ಬಂದ ರೋಗಿಗಳು!

    ಅಂಬುಲೆನ್ಸ್ ತಲುಪಲು ಎತ್ತಿನಗಾಡಿಯಲ್ಲಿ ಬಂದ ರೋಗಿಗಳು!

    ಭುವನೇಶ್ವರ: ಸರಿಯಾದ ರಸ್ತೆ ಇಲ್ಲದ ಕಾರಣ ರೋಗಿಗಳನ್ನು ಅಂಬುಲೆನ್ಸ್ ಗೆ ತಲುಪಿಸಲು 5 ಕಿಲೋಮೀಟರ್ ಎತ್ತಿನ ಗಾಡಿಯಲ್ಲಿ ಕರೆದುಕೊಂಡು ಹೋಗಿರುವ ಘಟನೆ ಓಡಿಶಾದ ನಬರಂಗ್‍ಪುರ ಜಿಲ್ಲೆಯ ಚಂದಹಂಡಿ ಬ್ಲಾಕ್‍ನ ಅಡಿಯಲ್ಲಿರುವ ಪಟಖಲಿಯಾ ಪ್ರದೇಶದ ನಡೆದಿದೆ.

    ಈ ಗ್ರಾಮದಲ್ಲಿ ಅತಿಸಾರ ಮತ್ತು ವಾಂತಿಯಿಂದ ಮೂವರು ರೋಗಿಗಳು ಬಳಲುತ್ತಿದ್ದರು. ಗ್ರಾಮಕ್ಕೆ ಬರಲು ಪಕ್ಕಾ ರಸ್ತೆ ಇಲ್ಲದ ಕಾರಣ ಅಂಬುಲೆನ್ಸ್ ಬರಲು ಸಾಧ್ಯವಾಗಲಿಲ್ಲ. ಆಗ ಸ್ಥಳೀಯರು ಸೇರಿಕೊಂಡು 5ಕಿ.ಮೀ ಎತ್ತಿನಗಾಡಿಯಲ್ಲಿ ರೋಗಿಗಳನ್ನು ಕರೆದುಕೊಂಡು ಬಂದು ಅಂಬುಲೆನ್ಸ್ ಇರುವಲ್ಲಿಗೆ ತಲುಪಿಸಿದ್ದಾರೆ.

    ಆರೋಗ್ಯ ಸ್ಥಿತಿ ಹದಗೆಟ್ಟಿದ್ದರಿಂದ ಸ್ಥಳೀಯರು ಅಂಬುಲೆನ್ಸ್ ಸೇವೆ ಮೋರೆ ಹೋಗಿದ್ದಾರೆ. ಆದರೆ ರೋಗಿಗಳನ್ನು ಸಂಪರ್ಕಿಸುವ ರಸ್ತೆಗಳ ಕಳಪೆ ಸ್ಥಿತಿಯಲ್ಲಿತ್ತು. ಹೀಗಾಗಿ ಅಂಬುಲೆನ್ಸ್ ಬಂದು ಗ್ರಾಮವನ್ನು ತಲುಪಲು ಸಾಧ್ಯವಾಗಲಿಲ್ಲ. ಆಗ ಈ ಊರಿಗೆ ಬೇರೆ ದಾರಿಯಿಲ್ಲದ ಕಾರಣ ಮೂವರು ರೋಗಿಗಳನ್ನು ಎತ್ತಿನ ಬಂಡಿಯಲ್ಲಿ ಕೂರಿಸಿಕೊಂಡು 5 ಕಿ.ಮೀ ದೂರದಲ್ಲಿರುವ ಅಂಬುಲೆನ್ಸ್ ಬಳಿ ಕರೆದುಕೊಂಡು ಹೋಗಿದ್ದಾರೆ.

    ನಂತರ ಅಂಬುಲೆನ್ಸ್ ನಲ್ಲಿ ರೋಗಿಗಳನ್ನು ಕರೆದುಕೊಂಡು ಹೋಗಿ ಹತ್ತಿರದ ಚಂದಹಂಡಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲು ಮಾಡಲಾಗಿದೆ. ಮೂವರು ರೋಗಿಗಳಿಗೆ ಅಗತ್ಯ ಚಿಕಿತ್ಸೆ ನೀಡಲಾಗುತ್ತಿದೆ. ಅವರ ಆರೋಗ್ಯ ಸ್ಥಿತಿ ಈಗ ಸ್ಥಿರವಾಗಿದೆ ಎಂದು ಸಮುದಾಯ ಆರೋಗ್ಯ ಕೇಂದ್ರದ ವೈದ್ಯರು ಮಾಹಿತಿ ನೀಡಿದ್ದಾರೆ.

    ಅಂಬುಲೆನ್ಸ್ ನ ಬೇಡಿಕೆಯನ್ನು ಪೂರೈಸುವ ಸಲುವಾಗಿ, ಸಿಎಂ ನವೀನ್ ಪಟ್ನಾಯಕ್ ಅವರು ರಾಜ್ಯದಲ್ಲಿ ಆರೋಗ್ಯ ಸೇವೆಗಳನ್ನು ಬಲಪಡಿಸಲು ಹೆಚ್ಚುವರಿ 108 ಮತ್ತು 102 ಅಂಬುಲೆನ್ಸ್ ಗಳನ್ನು ಸೇರಿಸುತ್ತಿದ್ದಾರೆ. ಆದರೂ ಗ್ರಾಮೀಣ ಭಾಗಗಳಲ್ಲಿ ಇದನ್ನು ಅನುಷ್ಠಾನಗೊಳಿಸುವುದು ಒಂದು ಕಳವಳವಾಗಿದೆ.