Tag: ಆಕರ್ಷ್

  • ‘ಡೇರ್ ಡೆವಿಲ್ ಮುಸ್ತಾಫ’ ತಂಡದಿಂದ ‘ಫ್ಯಾಮಿಲಿ ಡ್ರಾಮ’: ಟ್ರೈಲರ್ ರಿಲೀಸ್

    ‘ಡೇರ್ ಡೆವಿಲ್ ಮುಸ್ತಾಫ’ ತಂಡದಿಂದ ‘ಫ್ಯಾಮಿಲಿ ಡ್ರಾಮ’: ಟ್ರೈಲರ್ ರಿಲೀಸ್

    ಲೋಕಸಭಾ ಚುನಾವಣಾ ಪ್ರಚಾರ ಜೋರಾಗಿ ನಡೆಯುತ್ತಿದೆ.  ಈಗ ಎಲ್ಲಿ ನೋಡಿದರೂ ರಾಜಕೀಯದ್ದೆ ಸುದ್ದಿ ಸದ್ದು. ಈ ನಡುವೆ ಸಿನಿಮಾ ಕ್ಷೇತ್ರ ಕೊಂಚ ಮಂಕಾಗಿದೆ. ಚುನಾವಣಾ ಬಿಸಿಯ ನಡುವೆಯೂ ‘ಫ್ಯಾಮಿಲಿ ಡ್ರಾಮ’ ಸಿಕ್ಕಾಪಟ್ಟೆ ಸದ್ದು  ಮಾಡುತ್ತಿದೆ. ಇದ್ಯಾವ ಫ್ಯಾಮಿಲಿ ಡ್ರಾಮ (Family Drama) ಅಂತೀರಾ? ಸ್ಯಾಂಡಲ್‌ವುಡ್ ನಲ್ಲಿ ರಿಲೀಸ್‌ಗೆ ಸಿದ್ದವಾಗುತ್ತಿರುವ ಹೊಸ ಸಿನಿಮಾ. ಸದ್ಯ ಸಿನಿಮಾತಂಡ ಟ್ರೈಲರ್ (Trailer) ಮೂಲಕ ಸಿನಿಮಾ ಅಭಿಮಾನಿಗಳ ಮುಂದೆ ಬಂದಿದೆ. ಸಾಕಷ್ಟು ಹೊಸಬರೇ ಸೇರಿಕೊಂಡು ಮಾಡಿರುವ ಸಿನಿಮಾ ‘ಫ್ಯಾಮಿಲಿ ಡ್ರಾಮ’.

    ಕ್ರಿಯೇಟಿವ್ ಆಗಿ ಮೂಡಿ ಬಂದಿರುವ ಈ ಟ್ರೈಲರ್ ಸಿನಿಮಾ ಮೇಲಿನ ಕುತೂಹಲವನ್ನು ಹೆಚ್ಚಿಸಿದೆ. ಸಿನಿಮಾದ ಕಂಟೆಂಟ್ ಜೊತೆಗೆ ಟೆಕ್ನಿಕಲ್ ವಿಚಾಗಳು ಸಹ ಗಮನ ಸೆಳೆಯುತ್ತಿದೆ. ಯುವ ಪ್ರತಿಭೆ ಆಕರ್ಷ್ (Aakarsh) ನಿರ್ದೇಶನದಲ್ಲಿ  ಮೂಡಿ ಬಂದಿರುವ ಸಿನಿಮಾವಿದು. ಆಕರ್ಷ್‌ಗೆ ಇದು ಮೊದಲ ನಿರ್ದೇಶನದ ಸಿನಿಮಾ. ಹಾಗಂತ ಸಿನಿಮಾರಂಗ ಹೊಸದೇನಲ್ಲ. ಕಾಂತಾರ ಸ್ಚಾರ್ ರಿಷಬ್ ಶೆಟ್ಟಿ ಅವರ ಟೀಮ್‌ನಲ್ಲಿ ಕೆಲಸ ಮಾಡಿ ಅನುಭವ ಪಡೆದುಕೊಂಡಿರುವ ನಿರ್ದೇಶಕ. ಸದ್ಯ ರಿಲೀಸ್‌ಗೆ ರೆಡಿಯಾಗಿರುವ ‘ಲಾಫಿಂಗ್ ಬುದ್ದ’ ಸಿನಿಮಾದಲ್ಲಿ ಆಕರ್ಷ್ ಕೆಲಸ ಮಾಡಿದ್ದಾರೆ. ಜೊತೆಗೆ ಒಂದಿಷ್ಟು ಶಾರ್ಟ್ ಫಿಲ್ಮ್‌ಗಳನ್ನು ಮಾಡಿದ್ದಾರೆ.

    ಇನ್ನೂ ಈ ಸಿನಿಮಾದಲ್ಲಿ ಆಚಾರ್ ಆಂಡ್ ಕೋ ಸಿನಿಮಾದ  ನಿರ್ದೇಶಕಿ ಸಿಂಧು ಶ್ರೀನಿವಾಸ್ ಮೂರ್ತಿ (Sindhu Srinivas Murthy), ಡೇರ್ ಡೆವಿಲ್  ಮುಸ್ತಾಫ ಸಿನಿಮಾದಲ್ಲಿ ನಟಿಸಿರುವ ಅಭಯ್, ಪೂರ್ಣ ಮೈಸೂರು ಹಾಗೂ ಅನನ್ಯ ಅಮರ್ ಸೇರಿದಂತೆ ಸಾಕಷ್ಟು ಕಲಾವಿದರು ನಟಿಸಿದ್ದಾರೆ. ಆಚಾರ್ ಅಂಡ್ ಕೋ ಬಳಿಕ ಸಿಂಧು ಒಪ್ಪಿಕೊಂಡ ಚಿತ್ರ ಇದಾಗಿದೆ. ‘ಫ್ಯಾಮಿಲಿ ಡ್ರಾಮ’ ಡಾರ್ಕ್ ಕಾಮಿಡಿ ಸಿನಿಮಾ. ಮುಗ್ದ ಕುಟುಂಬವೊಂದು ಕೊಲೆ ಮಾಡಿ ಸಂಕಷ್ಚಕ್ಕೆ ಸಿಲುಕುವ  ಕಥೆಯೇ ಫ್ಯಾಮಿಲಿ ಡ್ರಾಮ. ಸಾಕಷ್ಟು ಹೊಸತನದೊಂದಿಗೆ, ವಿಭಿನ್ನವಾಗಿ, ಕ್ರಿಯೇಟಿವ್ ಆಗಿ ಸಿನಿಮಾ ಮಾಡಿದ್ದಾರೆ ನಿರ್ದೇಶಕ ಆಕರ್ಷ್ ಅಂಡ್ ಟೀಂ.

    ಚಿತ್ರದ ಟ್ರೈಲರ್  ಎಷ್ಟು ಗಮನ ಸೆಳೆಯುತ್ತಿದೆಯೂ ಹಾಗೆ ಪೋಸ್ಚರ್ ಕೂಡ ಅಷ್ಟೇ ಕ್ರಿಯೇಟಿವ್ ಆಗಿ ಮಾಡಿದ್ದಾರೆ. ಫಿಲಿಫೈನ್ಸ್ ನ ಕ್ರಿಯೇಟಿವ್ ಡಿಸೈನರ್ ಬಳಿ  ಫ್ಯಾಮಿಲಿ ಡ್ರಾಮ ಚಿತ್ರದ ಪೋಸ್ಟರ್ ಅನ್ನು ಡಿಸೈನ್ ಮಾಡಿಸಿದ್ದು ವಿಶೇಷವಾಗಿದೆ. ರೆಟ್ರೋ ಶೈಲಿಯಲ್ಲಿ ಡಿಸೈನ್‌ಗಳನ್ನು ನೋಡಬಹುದು. ಇನ್ನೂ ವಿಶೇಷ ಎಂದರೆ ಸಿನಿಮಾದ ಸಂಗೀತ ಕೂಡ  ರೆಟ್ರೋ ಶೈಲಿಯಲ್ಲಿ ಇದೆ. ಇವತ್ತಿನ ಕಾಲಘಟ್ಟದ ಕಥೆಯಾದರೂ ಸಂಗೀತ ರೆಟ್ರೋ ಶೈಲಿಯಲ್ಲಿ ಇರುವುದು ಈ ಸಿನಿಮಾದ ವಿಶೇಷವಾಗಿದೆ. ಅಂದಹಾಗೆ ಚಿತ್ರಕ್ಕೆ ಚೇತನ್ ಅಮಯ್ಯ ಸಂಗೀತ ಸಂಯೋಜನೆ ಮಾಡದ್ದಾರೆ.

  • ರಿಯಲ್ ಲೈಫಿನಲ್ಲಿ ‘ರಾಧಾ ಕಲ್ಯಾಣ’ ಖ್ಯಾತಿಯ ರಾಧಾ ಮದ್ವೆ

    ರಿಯಲ್ ಲೈಫಿನಲ್ಲಿ ‘ರಾಧಾ ಕಲ್ಯಾಣ’ ಖ್ಯಾತಿಯ ರಾಧಾ ಮದ್ವೆ

    ಬೆಂಗಳೂರು: ಕಿರುತೆರೆ ನಟಿ ರಾಧಿಕಾ ರಾವ್ ಅವರು ತಮ್ಮ ಗೆಳೆಯನ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

    ಮೂಲತಃ ಮಂಗಳೂರಿನವರಾಗಿರುವ ರಾಧಿಕಾ ರಾವ್ ಬುಧವಾರ ತಮ್ಮ ಗೆಳೆಯ ಆಕರ್ಷ್ ಭಟ್ ಜೊತೆ ಸಪ್ತಪದಿ ತುಳಿದಿದ್ದಾರೆ. ಈ ದಂಪತಿಯೆ ಮದುವೆ ಮೂಡಬಿದಿರೆಯಲ್ಲಿ ಅದ್ಧೂರಿಯಾಗಿ ನಡೆದಿದೆ. ಗುರು-ಹಿರಿಯರು ನಿಶ್ಚಯಿಸಿದ್ದ ಮುಹೂರ್ತದಲ್ಲಿ ಅವರ ಸಮ್ಮುಖದಲ್ಲಿ ಆಕರ್ಷ್ ತಮ್ಮ ಗೆಳತಿ ರಾಧಿಕಾಗೆ ಮಾಂಗಲ್ಯಧಾರಣೆ ಮಾಡಿದ್ದಾರೆ.

    ರಾಧಿಕಾ ಮತ್ತು ಆಕರ್ಷ್ ವಿವಾಹ ಕಾರ್ಯಕ್ರಮಕ್ಕೆ ಸಂಬಂಧಿಕರು, ಆತ್ಮೀಯರು ಮತ್ತು ಕಿರುತೆರೆ ಕಲಾವಿದರು ಬಂದು ನವ ಜೋಡಿಗೆ ಶುಭಾ ಹಾರೈಸಿದ್ದಾರೆ. ಎಂಜಿನಿಯರಿಂಗ್ ಓದಿರುವ ವರ ಆಕರ್ಷ್ ಭಟ್ ಇಂಟರ್ ನ್ಯಾಷನಲ್ ಮ್ಯಾಜಿಷಿಯನ್ ಮತ್ತು ಮೈಂಡ್ ರೀಡರ್ ಆಗಿದ್ದಾರೆ. ಇವರು ಸದ್ಯಕ್ಕೆ ಬೆಂಗಳೂರಿನಲ್ಲಿ ನೆಲೆಸಿದ್ದಾರೆ.

    ರಾಧಿಕಾಗೆ ಅವರ ಗೆಳತಿಯ ಮೂಲಕ ಆಕರ್ಷ್ ಪರಿಚಯ ಆಗಿದೆ. ಪರಿಚಯ ಸ್ನೇಹವಾಗಿ ಇಬ್ಬರೂ ಆಗಾಗ ಭೇಟಿ ಮಾಡುತ್ತಿದ್ದರು. ಸ್ನೇಹ ಪ್ರೀತಿಯಾಗಿ ಆಕರ್ಷ್, ರಾಧಾ ಅವರಿಗೆ ಪ್ರಪೋಸ್ ಮಾಡಿದ್ದಾರೆ. ರಾಧಿಕಾ ಕೂಡ ಸಂತಸದಿಂದಲೇ ಆಕರ್ಷ್ ಪ್ರೀತಿಯನ್ನು ಒಪ್ಪಿಕೊಂಡಿದ್ದರು. ನಂತರ ಇಬ್ಬರೂ ತಮ್ಮ ತಮ್ಮ ಮನೆಯಲ್ಲಿ ಪ್ರೀತಿಯ ವಿಚಾರವನ್ನು ತಿಳಿಸಿದ್ದರು. ಬಳಿಕ ಎರಡೂ ಕುಟುಂಬದವರು ಒಪ್ಪಿ ಅಕ್ಟೋಬರ್ 13 ರಂದು ಎಂಗೇಜ್‍ಮೆಂಟ್ ಮಾಡಿದ್ದರು.

    ರಾಧಿಕಾ ತನ್ನ ನಿಶ್ಚಿತಾರ್ಥದ ಫೋಟೋವನ್ನು ಇನ್‍ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿ, “ಇವನು ನನ್ನ ಹೃದಯವನ್ನು ಕದ್ದನು. ಹಾಗಾಗಿ ನಾನು ಅವನ ಕೊನೆಯ ಹೆಸರನ್ನು ಕದಿಯಲು ಹೋಗುತ್ತಿದ್ದೇನೆ. ಈ ನಿಶ್ಚಿತಾರ್ಥದಿಂದ ನಾವಿಬ್ಬರು ಜೀವನದಾದ್ಯಂತ ಒಟ್ಟಾಗಿ ಇರುತ್ತೇನೆ ಎಂದು ನಾನು ಭರವಸೆ ನೀಡುತ್ತೇನೆ” ಎಂದು ಬರೆದುಕೊಂಡಿದ್ದರು.

    https://www.instagram.com/p/B9mXDGVHAAD/

    ರಾಧಿಕಾ ರಾವ್ ಈ ಹಿಂದೆ ‘ಮಂಗಳೂರು ಹುಡ್ಗಿ, ಹುಬ್ಬಳ್ಳಿ ಹುಡ್ಗ’ ಸೀರಿಯಲ್‍ನಲ್ಲಿ ಅಭಿನಯಿಸುತ್ತಿದ್ದರು. ಈ ಸೀರಿಯಲ್‍ನಲ್ಲಿ ಅಮೂಲ್ಯಾ ಪಾತ್ರದಲ್ಲಿ ಕಾಣಿಸಿಕೊಂಡಿದ್ದರಿಂದ ಈಕೆ ಅಮುಲ್ಯಾ ಎಂದೇ ಪ್ರೇಕ್ಷಕರಿಗೆ ಚಿರಪರಿಚಿತಾಗಿದ್ದರು. ಈಗ ‘ರಾಧಾ ಕಲ್ಯಾಣ’ ಧಾರವಾಹಿಯಲ್ಲಿ ರಾಧಾ ಪಾತ್ರಧಾರಿಯಾಗಿ ಜನರ ಮನ ಸೆಳೆದಿದ್ದಾರೆ.