Tag: ಆಕಾಶ ಏರ್‌ಫ್ಲೈಟ್‌

  • ವಿಮಾನದಲ್ಲಿ ಬೀಡಿ ಸೇದಿದ ಪ್ರಯಾಣಿಕ – ಬೆಂಗ್ಳೂರಲ್ಲಿ ಇಳಿಯುತ್ತಿದ್ದಂತೆ ಪೊಲೀಸರಿಗೆ ಲಾಕ್‌

    ವಿಮಾನದಲ್ಲಿ ಬೀಡಿ ಸೇದಿದ ಪ್ರಯಾಣಿಕ – ಬೆಂಗ್ಳೂರಲ್ಲಿ ಇಳಿಯುತ್ತಿದ್ದಂತೆ ಪೊಲೀಸರಿಗೆ ಲಾಕ್‌

    – ಬೀಡಿ ಸೇದಿದ ಬಗ್ಗೆ ಪೊಲೀಸರ ಬಳಿ ಪ್ರಯಾಣಿಕ ಹೇಳಿದ್ದೇನು ಗೊತ್ತಾ?

    ನವದೆಹಲಿ: ಮೊದಲ ಬಾರಿಗೆ ವಿಮಾನದಲ್ಲಿ ಪ್ರಯಾಣ ಮಾಡುವಾಗ ಬೀಡಿ ಸೇದಿದ ಆರೋಪದಡಿ ವ್ಯಕ್ತಿಯೊಬ್ಬನನ್ನು ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Kempegowda International Airport) ಪೊಲೀಸರು ಬಂಧಿಸಿದ್ದಾರೆ.

    ಬೆಂಗಳೂರಿಗೆ (Bengaluru) ಹೊರಟಿದ್ದ ಆಕಾಶ ಏರ್‌ಫ್ಲೈಟ್‌ನಲ್ಲಿ (Akasa Air flight) ಬೀಡಿ ಸೇದಿ ನಿಯಮ ಉಲ್ಲಂಘಿಸಿದ್ದಕ್ಕೆ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ. ಈತ ರಾಜಸ್ಥಾನದಿಂದ ಮೊದಲ ಬಾರಿಗೆ ಪ್ರಯಾಣಿಸುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ವಿದ್ಯುತ್‌ ಬಿಲ್‌ ನೀಡಲು ಬಂದ ಸಿಬ್ಬಂದಿಗೆ ಮಹಿಳೆ ಹಿಗ್ಗಾಮುಗ್ಗ ಕ್ಲಾಸ್‌

    ಮಾರ್ವಾರ್ ಪ್ರದೇಶದ 56 ವರ್ಷದ ವ್ಯಕ್ತಿ, ಮಂಗಳವಾರ ಅಹಮದಾಬಾದ್‌ನಿಂದ ವಿಮಾನ ಪ್ರಯಾಣ ಕೈಗೊಂಡಿದ್ದರು. ಹಾರಾಟದ ವೇಳೆ ವಿಮಾನದಲ್ಲಿ ಪ್ರಯಾಣಿಕ ಶೌಚಾಲಯಕ್ಕೆ ಹೋಗಿ ಧೂಮಪಾನ ಮಾಡಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

    ಫ್ಲೈಟ್ ಅಟೆಂಡೆಂಟ್‌ಗಳು ತಕ್ಷಣ ಕಾರ್ಯಪ್ರವೃತ್ತರಾಗಿ, ಆತನನ್ನು ವಶಕ್ಕೆ ಪಡೆದು ಬೆಂಗಳೂರು ತಲುಪಿದ ನಂತರ ಪೊಲೀಸರಿಗೆ ಒಪ್ಪಿಸಿದ್ದಾರೆ. ವಿಚಾರಣೆ ವೇಳೆ ಪ್ರಯಾಣಿಕ, ತಾನು ಮೊದಲ ಬಾರಿಗೆ ವಿಮಾನದಲ್ಲಿ ಪ್ರಯಾಣಿಸುತ್ತಿದ್ದೆ. ನಿಯಮಗಳ ಬಗ್ಗೆ ತಿಳಿದಿರಲಿಲ್ಲ ಎಂದು ಪೊಲೀಸರಿಗೆ ಹೇಳಿದ್ದಾನೆ. ಇದನ್ನೂ ಓದಿ: ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷೆಗೆ ಕಿರುಕುಳ – ಬಿವಿ ಶ್ರೀನಿವಾಸ್‍ಗೆ ಸುಪ್ರೀಂ ಜಾಮೀನು

    ರೈಲು ಪ್ರಯಾಣದ ವೇಳೆ ಶೌಚಾಲಯದಲ್ಲಿ ಧೂಮಪಾನ ಮಾಡಿದ್ದೆ. ವಿಮಾನದಲ್ಲಿಯೂ ಅದೇ ರೀತಿ ಮಾಡಿದೆ ಎಂದು ಪ್ರಯಾಣಿಕ ತಿಳಿಸಿದ್ದಾನೆ. ಇತರರ ಜೀವಕ್ಕೆ ಅಪಾಯ ತಂದೊಡ್ಡಿದ ಆರೋಪದ ಮೇಲೆ ಪ್ರಯಾಣಿಕನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.