ಕಾಳಿ ದೇವಿಯನ್ನು ನಿರಂತರವಾಗಿ ಅಪಮಾನಿಸುತ್ತಿರುವ ನಿರ್ಮಾಪಕಿ ಲೀನಾ ಮಣಿಮೇಕಲೈ ಅವರ ಮೇಲೆ ಕ್ರಮಕ್ಕೆ ಯಾಕೆ ಸಾಧ್ಯವಾಗುತ್ತಿಲ್ಲ ಎಂದು ಹಿಂದೂಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ. ಆಕೆ ಯಾವುದೇ ದೇಶದಲ್ಲಿ ಇದ್ದರೂ, ಕನಿಷ್ಠ ಅವಳ ಟ್ವಿಟರ್ ಮತ್ತು ಫೇಸ್ ಬುಕ್ ಪೇಜ್ ಗಳನ್ನು ಡಿಲಿಟ್ ಮಾಡಲೂ ಸಾಧ್ಯವಾಗುತ್ತಿಲ್ಲ ಎನ್ನುವುದು ನಾಚಿಕೆಗೇಡಿನ ಸಂಗತಿ ಎಂದು ಹಲವರು ಪ್ರಶ್ನೆ ಮಾಡಿದ್ದಾರೆ. ಅವರ ಮೇಲೆ ಕ್ರಮ ತಗೆದುಕೊಳ್ಳದೇ ಇರುವ ಕಾರಣಕ್ಕಾಗಿ ಹೀಗೆ ನಿರಂತರವಾಗಿ ಅವರು ಅಪಮಾನದ ಪೋಸ್ಟ್ ಮಾಡುತ್ತಿದ್ದಾರೆ ಎಂದು ಆಕ್ರೋಶ ಹೊರ ಹಾಕಿದ್ದಾರೆ.
ಮೊದಲ ಸಲ ಕಾಳಿ ಕೈಯಲ್ಲಿ ಸಿಗರೇಟು ಮತ್ತು ಎಲ್‍ಜಿಬಿಡಿಕ್ಯೂ ಧ್ವಜ ಕೊಟ್ಟು ಹಿಂದೂಗಳ ಕಂಗೆಣ್ಣಿಗೆ ಗುರಿಯಾಗಿದ್ದಾರೆ. ಆನಂತರ ಶಿವ ಪಾರ್ವತಿ ಕೈಯಲ್ಲೂ ಸಿಗರೇಟು ಕೊಟ್ಟು ಅಪಮಾನ ಮಾಡಿದ್ದಾರೆ. ಇದೀಗ ಕಾಳಿಯ ಕುರಿತಾಗಿ ಮತ್ತಷ್ಟು ಬರಹಗಳನ್ನು ಬರೆದಿದ್ದು, ಸಲಿಂಗಿಗಳನ್ನು ಕಾಳಿ ಇಷ್ಟಪಡುತ್ತಾಳೆ ಎಂದೂ, ಮತ್ತು ಹಿಂದುತ್ವವನ್ನು ನಾಶ ಮಾಡಲು ಕಾಳಿ ಬರುತ್ತಾಳೆ ಎಂದು ಟ್ವಿಟರ್ ಖಾತೆಯಲ್ಲಿ ಲೀನಾ ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಕಾಳಿ ಕೈಗೆ ಸಿಗರೇಟು : ಮಾಳವಿಕಾ ಅವಿನಾಶ್ ಛೀಮಾರಿ, ನಟ ಕಿಶೋರ್ ವಿಭಿನ್ನ ಪ್ರತಿಕ್ರಿಯೆ
ಲೀನಾ ವಿರುದ್ಧ ದೂರುಗಳ ಮಹಾಪುರವೇ ಹರಿದು ಬರುತ್ತಿದ್ದರೂ, ಅವರನ್ನು ಕೂಡಲೇ ಬಂಧಿಸಬೇಕು ಎಂಬ ಆಗ್ರಹ ಶುರುವಾಗಿದ್ದರೂ, ಇವರಿಗೂ ಯಾವುದೇ ಕ್ರಮ ತಗೆದುಕೊಳ್ಳದೇ ಇರುವುದಕ್ಕೆ ಹಲವರು ಹಲವು ಅನುಮಾನಗಳನ್ನು ಹೊರಹಾಕಿದ್ದಾರೆ. ಆ ಲೀನಾ ಹಿಂದೆ ಯಾರು ಇದ್ದಾರೆ ಎಂದು ಪತ್ತೆ ಹಚ್ಚಬೇಕು ಹಾಗೂ ಕೂಡಲೇ ಸೋಷಿಯಲ್ ಮೀಡಿಯಾದಿಂದ ಅವರ ಖಾತೆಗಳನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
Live Tv
[brid partner=56869869 player=32851 video=960834 autoplay=true]
ಬೆಂಗಳೂರು: ದೇವರಾಜ್ ಅರಸು ಟ್ರಕ್ ಟರ್ಮಿನಲ್‌ಗೆ ಸಂಪರ್ಕ ಕಲ್ಪಿಸಲು ರಸ್ತೆ ನಿರ್ಮಾಣಕ್ಕಾಗಿ ಭೂ ಸ್ವಾಧಿನ ಪಡಿಸಿಕೊಂಡ ಸರ್ಕಾರ ರೈತರಿಗೆ ಪರಿಹಾರ ವಿತರಣೆ ಮಾಡಿಲ್ಲ ಎಂದು ರೈತರು ಆಕ್ರೋಶ ಹೊರ ಹಾಕಿದ್ದಾರೆ.
ಬೆಂಗಳೂರು ಹೊರವಲಯ ನೆಲಮಂಗಲ ಸಮೀಪದ ದಾಸನಪುರ ಗ್ರಾಮದಲ್ಲಿ ರೈತರು ಸಿಡಿದೆದ್ದಿದ್ದಾರೆ. 2012ರಲ್ಲಿ ದೇವರಾಜ್ ಅರಸು ಟ್ರಕ್ ಟರ್ಮಿನಲ್‌ಗೆ ಸಂಪರ್ಕ ಕಲ್ಪಿಸುವ ಸಲುವಾಗಿ ಗ್ರಾಮದ ರೈತರ ಕೆಲ ಭೂಮಿಯನ್ನು ಸ್ವಾಧೀನ ಪಡಿಸಿಕೊಂಡಿದ್ದರು. ಆದರೆ ಇದುವರೆಗೂ ಯಾವುದೇ ಪರಿಹಾರ ನೀಡದೆ ಗುರುವಾರ ಭೂ ಸ್ವಾಧೀನ ಅಧಿಕಾರಿಗಳು ಆಗಮಿಸಿ ಸ್ಥಳ ವೀಕ್ಷಣೆ ಮಾಡಿದ್ದಾರೆ. ಇದರಿಂದ ರೈತರು ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ತಾಕತ್ತಿದ್ದರೆ ನನ್ನನ್ನು ತುಂಡು, ತುಂಡು ಮಾಡಲಿ ನೋಡೋಣ: ಆಂದೋಲಾ ಶ್ರೀ ಕಿಡಿ
ಭೂ ಸ್ವಾಧೀನ ಅಧಿಕಾರಿಗಳು ರೈತರಿಗೆ ಯಾವುದೇ ಮಾಹಿತಿ ನೀಡದೆ ಭೂಮಿ ಸರ್ವೆಗೆ ಏಕಾಏಕಿ ಪೊಲೀಸರ ಜೊತೆಗೆ ಆಗಮಿಸಿದ್ದಾರೆ. ಇದರಿಂದ ರೈತರು ಹಾಗೂ ಅಧಿಕಾರಿಗಳ ನಡುವೆ ಮಾತಿನ ಚಕಮಕಿ ನಡೆದಿದೆ.
2012ರಲ್ಲಿ ಸ್ವಾಧೀನ ಪಡೆದುಕೊಂಡು ಪರಿಹಾರ ನೀಡದೆ ಸತಾಯಿಸುತ್ತಿದ್ದಾರೆ. ಸುಪ್ರಿಂ ಕೋರ್ಟ್ ಆದೇಶದಂತೆ 1:3 ಹಣವನ್ನು ಪರಿಹಾರವಾಗಿ ನೀಡಬೇಕು. ಆದರೆ ಇಲ್ಲಿ ಕೆಲ ಸ್ಥಳೀಯ ಏಜೆಂಟ್ ಜೊತೆಗೆ ಅಧಿಕಾರಿಗಳು ಶಾಮೀಲಾಗಿರುವುದರಿಂದ ಯಾವುದೇ ಪರಿಹಾರ ನೀಡುತ್ತಿಲ್ಲ ಎಂದು ರೈತರು ಆರೋಪಿಸಿದ್ದಾರೆ. ಇದನ್ನೂ ಓದಿ: ಸ್ಥಳೀಯರಿಗೆ ಖಾಸಗಿ ವಲಯದಲ್ಲಿ ಶೇ.75ರಷ್ಟು ಉದ್ಯೋಗವಕಾಶ – ಸುಪ್ರೀಂನಲ್ಲಿ ಹರ್ಯಾಣಕ್ಕೆ ಜಯ
ಇದೀಗ ರೈತರು ಸೂಕ್ತ ಪರಿಹಾರ ನೀಡಿ ನಂತರ ಭೂಮಿ ಸ್ವಾಧೀನ ಪಡಿಸಿಕೊಳ್ಳುವಂತೆ ಆಗ್ರಹಿಸಿದ್ದಾರೆ.
ಚಿಕ್ಕೋಡಿ (ಬೆಳಗಾವಿ): ಚಿಕ್ಕೋಡಿ ತಾಲೂಕಿನ ಯಕ್ಸಂಬಾ ಪಟ್ಟಣದಲ್ಲಿ ಮಾಸ್ಕ್ ಧರಿಸುವಂತೆ ಹೇಳಿದ್ದಕ್ಕೆ ಕರ್ತವ್ಯ ನಿರತ ಪೊಲೀಸರು ಸಿ.ಆರ್.ಪಿ.ಎಫ್ ಯೋಧನ ಮೇಲೆ ಹಲ್ಲೆ ನಡೆಸಿ ಬೇಡಿ ತೋಡಿಸಿದ್ದು ಈಗ ಚರ್ಚೆಗೆ ಗ್ರಾಸವಾಗಿದೆ.
ಏಪ್ರಿಲ್ 23ರಂದು ಈ ಘಟನೆ ನಡೆದಿದ್ದು, ಯೋಧ ಸಚಿನ ಸಾವಂತ್ ಅವರನ್ನು ಪೊಲೀಸ್ ಠಾಣೆಯಲ್ಲಿ ಕೈಗೆ ಬೇಡಿ ಹಾಕಿ ಕೂರಿಸಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಸದಲಾಗ ಪೊಲೀಸ್ ಠಾಣೆಯಲ್ಲಿ ಸಿ.ಆರ್.ಪಿ.ಎಫ್ ಕೋಬ್ರಾ ಕಮಾಂಡೋ ಯೋಧನಿಗೆ ಬೇಡಿ ಹಾಕಿ ಕೂರಿಸಿದ್ದ ಪೊಲೀಸರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ತೀವ್ರ ಅಸಮಾಧಾನ ವ್ಯಕ್ತವಾಗುತ್ತಿದೆ. ಸಿ.ಆರ್.ಪಿ.ಎಫ್ ಕೊಬ್ರಾ ಬಟಾಲಿಯನ್ ಕಾನ್ಸ್‍ಟೇಬಲ್ ಆಗಿರುವ ಸಚಿನ್ ಸಾವಂತ್‍ಗೆ ಇನ್ನೂ ಜಾಮೀನು ಕೂಡ ಸಿಕ್ಕಿಲ್ಲ.
ಕೊರೊನಾ ವಾರಿಯರ್ಸ್ ಮೇಲೆ ಹಲ್ಲೆ ಮಾ ಡಿದ ಮಂಡ್ಯ ಎಂ.ಎಲ್.ಸಿ ಶ್ರೀಕಂಠೇಗೌಡ ಹಾಗೂ ಅವರ ಪಟಾಲಂಗೆ ಬೇಲ್ ಸಿಕ್ಕಿದೆ. ಆದರೆ ದೇಶವನ್ನು ಕಾಪಾಡಿದ ಕೋಬ್ರಾ ಕಮಾಂಡೋ ಇನ್ನು ಜೈಲಿನಲ್ಲೇ ಇದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಸಖತ್ ಚರ್ಚೆ ನಡೆಯುತ್ತಿದೆ. ಮಾಸ್ಕ್ ಹಾಕಿಲ್ಲವೆಂಬ ಕಾರಣಕ್ಕೆ ಯೋಧನನ್ನು ಅಮಾನವೀಯವಾಗಿ ನಡೆಸಿಕೊಂಡ ಸದಲಗಾ ಪೊಲೀಸರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ.
ಪೊಲೀಸರ ಕ್ರಮಕ್ಕೆ ಸಿ.ಆರ್.ಪಿ.ಎಫ್ ಕೋಬ್ರಾ ಬಟಾಲಿಯನ್ ಅಸಿಸ್ಟೆಂಟ್ ಕಮಾಂಡಂಟ್ ಶ್ಯಾಮ್ ಸುಂದರ್ ಅವರು ಕೂಡ ಕರ್ನಾಟಕ ಡಿಜಿಪಿಗೆ ಟ್ವೀಟ್ ಹಾಗೂ ಪತ್ರದ ಮೂಲಕ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಘಟನೆ ನಂತರ ಎಫ್‍ಐಆರ್ ದಾಖಲಿಸುವ ಮುನ್ನ ನಮ್ಮ ಗಮನಕ್ಕೂ ತರಬೇಕಿತ್ತು. ಪೊಲೀಸರು ಲಾಟಿಯಿಂದ ಹೊಡೆಯುವಾಗ ಆತ್ಮರಕ್ಷಣೆಗೆ ಪ್ರತಿದಾ ಳಿ ಮಾಡಿದ್ದಾನೆ. ಆದರೆ ಪೊಲೀಸರು ಯೋಧ ಎಂದು ತಿಳಿದ ಮೇಲೂ ಠಾಣೆಯಲ್ಲಿ ಕೈಗೆ ಬೇಡಿ ಹಾಕಿ ಕೂರಿಸಿದ್ದು ಸರಿಯಲ್ಲ ಎಂದು ಖಾರವಾಗಿ ಪತ್ರ ಬರೆದಿದ್ದಾರೆ.
ಪ್ರಕರಣದ ಕುರಿತು ಬೆಳಗಾವಿ ಎಸ್‍ಪಿ ಲಕ್ಷ್ಮಣ ನಿಂಬರಗಿ ಪ್ರತಿಕ್ರಿಯೆ ನೀಡಿದ್ದು, ಠಾಣೆಯಲ್ಲಿ ಮಹಿಳಾ ಸಿಬ್ಬಂದಿ ಹಾಗೂ ಕೆಲ ಪೊಲೀಸರು ಮಾತ್ರ ಇದ್ದರು. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಕೈಗೆ ಬೇಡಿ ಹಾಕಿ ಕೂರಿಸಲಾಗಿದೆ. ಪೊಲೀಸರು ಲಾಕ್‍ಡೌನ್ ಕರ್ತವ್ಯದಲ್ಲಿ ಇರುವುದರಿಂದ ಠಾಣೆಯಲ್ಲಿ ಕಡಿಮೆ ಸಿಬ್ಬಂದಿ ಇರುತ್ತಾರೆ. ಘಟನೆ ನಡೆದ ದಿನ ಯೋಧ ಬಹಳ ಅಕ್ರಮಣಕಾರಿಯಾಗಿದ್ದ ಆದ್ದರಿಂದ ಹಾಗೆ ಮಾಡಿದ್ದಾರೆ ಎಂದು ಸ್ಪಷ್ಟನೆ ನೀಡಿದ್ದಾರೆ.
ಜೊತೆಗೆ ಕೋರ್ಟ್ ಮಂಗಳವಾರ ಹಾಗೂ ಶುಕ್ರವಾರ ಕಾರ್ಯ ನಿರ್ವಹಣೆ ಮಾಡುವ ಹಿನ್ನೆಲೆಯಲ್ಲಿ ಯೋಧ ಸಚಿನ್ ಸಾಂವತ್‍ಗೆ ಇನ್ನೂ ಬೇಲ್ ಸಿಕ್ಕಿಲ್ಲ. ಮಂಗಳವಾರ ಕೋರ್ಟ್ ನಲ್ಲಿ ಬೇಲ್ ಸಿಗುವ ಸಾಧ್ಯತೆಯಿದೆ ಎಂದು ಲಕ್ಷ್ಮಣ ನಿಂಬರಗಿ ತಿಳಿಸಿದ್ದಾರೆ.
ಹಾಸನ: ರಾತ್ರೋರಾತ್ರಿ ಗುಂಪು ಸೇರಿದ ಯುವಕರನ್ನು ಸ್ಥಳೀಯರು ಪ್ರಶ್ನೆ ಮಾಡಿ ಗದರಿಸಿ ವಾಪಸ್ ಕಳಿಸಿರುವ ಘಟನೆ ಹಾಸನ ಜಿಲ್ಲೆ, ಅರಸೀಕೆರೆ ನಗರದ ಮುಜಾವರ್ ಮೊಹಲ್ಲಾ ಬಡಾವಣೆಯಲ್ಲಿ ನಡೆದಿದೆ.
ಕೊರೊನಾ ಭಯದಿಂದ ದೇಶ ಲಾಕ್‍ಡೌನ್ ಆಗಿದೆ. ಗುಂಪಾಗಿ ಸೇರದೆ ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಎಂದು ಸರ್ಕಾರ ಮನವಿ ಮಾಡಿಕೊಳ್ಳುತ್ತದೆ. ಆದರೆ ಅರಸೀಕೆರೆ ನಗರದಲ್ಲಿ 20 ಜನ ಯುವಕರು ಒಟ್ಟಿಗೆ ಸೇರಿಕೊಂಡಿದ್ದರು. ಇವರನ್ನು ಪ್ರಶ್ನಿಸಿದರೆ ನಾವು ನಮಾಜ್ ಮಾಡಲು ಬಂದಿದ್ದೇವೆ. ನಮಗೆ ಕೊರೊನಾ ಬರಲ್ಲ ಎಂದು ಉಡಾಫೆ ಉತ್ತರ ನೀಡಿದ್ದಾರೆ.
ಇದರಿಂದ ಕೋಪಗೊಂಡ ಸ್ಥಳೀಯ ಯುವಕನೋರ್ವ ವಿಡಿಯೋ ಮಾಡುತ್ತಾ ತಕ್ಷಣ ಇಲ್ಲಿಂದ ತೆರಳಿ. ಇಲ್ಲದಿದ್ದರೆ ಪೊಲೀಸರಿಗೆ ಫೋನ್ ಮಾಡಬೇಕಾಗುತ್ತದೆ ಎಂದು ಆಕ್ರೋಶ ಹೊರಹಾಕಿದ್ದಾನೆ. ಜೊತೆಗೆ ಕೊರೊನಾ ಕರ್ಫ್ಯೂ ಇರುವುದರಿಂದ ಗುಂಪಾಗಿ ಸೇರಬಾರದು ಎಂಬುದು ಗೊತ್ತಿಲ್ವಾ ಎಂದು ಪ್ರಶ್ನೆ ಮಾಡಿದ್ದಾನೆ. ಯುವಕನ ಪ್ರಶ್ನೆಗೆ ಹೆದರಿದ ಯುವಕರು ನಂತರ ಅಲ್ಲಿಂದ ಕಾಲ್ಕಿತ್ತಿದ್ದಾರೆ.
ಚಿಕ್ಕಮಗಳೂರು: ರೋಗಿ ಆಸ್ಪತ್ರೆಗೆ ಬಂದಾಗ ಆಸ್ಪತ್ರೆಯಲ್ಲಿದ್ದ ವೈದ್ಯರು ಮದ್ಯಪಾನ ಸೇವನೆ ಮಾಡುವುದರಲ್ಲಿ ಬ್ಯುಸಿ ಇದ್ದ ಕಾರಣ ರೋಗಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ತರೀಕೆರೆ ತಾಲೂಕಿನ ಅಜ್ಜಂಪುರದ ಸರ್ಕಾರಿ ಆಸ್ಪತ್ರೆಯ ವೈದ್ಯ ಚನ್ನಕೇಶವನ ನಿರ್ಲಕ್ಷ್ಯದಿಂದ ಈ ದುರ್ಘಟನೆ ಸಂಭವಿಸಿದ್ದು, ವೈದ್ಯ ಚನ್ನಕೇಶವ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಅಜ್ಜಂಪುರ ಸಮೀಪದ ಹೆಬ್ಬುರು ಮೂಲದ ಪುಟ್ಟಮ್ಮಗೆ ಬಿಪಿ ಹಾಗೂ ಶುಗರ್ ಹೆಚ್ಚಿದ್ದ ಪರಿಣಾಮ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದರು. ಆಗ ಡ್ಯೂಟಿಯಲ್ಲಿದ್ದ ಚನ್ನಕೇಶವ ಮದ್ಯಪಾನ ಮಾಡಿ ರೋಗಿಗೆ ಚಿಕಿತ್ಸೆ ನೀಡಿಲ್ಲ. ಆಸ್ಪತ್ರೆಯಲ್ಲಿದ್ದ ನರ್ಸ್‍ಗಳು ರೋಗಿಗೆ ಚಿಕಿತ್ಸೆ ನೀಡಿದ್ದಾರೆ.
ಆಸ್ಪತ್ರೆಗೆ ಬಂದ ಸ್ವಲ್ಪ ಹೊತ್ತಿನಲ್ಲೇ ರೋಗಿ ಸಾವನ್ನಪ್ಪಿದ್ದಾರೆ. ರೋಗಿ ಪುಟ್ಟಮ್ಮ ಬಿಪಿ ಹಾಗೂ ಶುಗರ್‍ನಿಂದಲೇ ಸಾವನ್ನಪ್ಪಿದರೋ ಅಥವಾ ವೈದ್ಯರ ನಿರ್ಲಕ್ಷ್ಯದಿಂದ ಸಾವನ್ನಪ್ಪಿದರೋ ಎಂಬುದು ಸ್ಪಷ್ಟವಾಗಿಲ್ಲ. ಆದರೆ ವೈದ್ಯರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಸ್ಥಳೀಯರು ವೈದ್ಯರ ಕೊಠಡಿಗೆ ಹೋದಾಗ, ವೈದ್ಯರು ಫುಲ್ ಎಣ್ಣೆ ಕುಡಿದು ಬೆತ್ತಲೆ ಮಲಗಿದ್ದಾರೆ. ಮೈಮೇಲೆ ಒಂದಿಂಚು ಬಟ್ಟೆ ಹಾಗೂ ಪ್ರಜ್ಞೆ ಇಲ್ಲದಂತೆ ಮಲಗಿದ್ದ ವೈದ್ಯನ ಕಂಡು ಸ್ಥಳೀಯರು ಮತ್ತಷ್ಟು ರೊಚ್ಚಿಗೆದ್ದಿದ್ದಾರೆ.
ಕೂಡಲೇ ವೈದ್ಯರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಸ್ಥಳೀಯರು ಈ ರೀತಿಯ ವೈದ್ಯರು ಯಾವ ಆಸ್ಪತ್ರೆಗೂ ಬೇಡ, ಇವರನ್ನು ಸೇವೆಯಿಂದ ವಜಾ ಮಾಡಬೇಕು ಎಂದು ಆಗ್ರಹಿಸಿದ್ದಾರೆ.
ಹಾಸನ: ದಸರಾ ನಂತರ ನಡೆಯುವ ಹಾಸನದ ಹಾಸನಾಂಬೆ ಉತ್ಸವಕ್ಕೆ ದಿನಗಣನೆ ಆರಂಭವಾಗಿದೆ. ಪ್ರತಿಬಾರಿಯಂತೆ ಈ ಬಾರಿಯೂ ಸಹ ಲಕ್ಷಾಂತರ ಭಕ್ತರು ಬರುವ ನಿರೀಕ್ಷೆ ಇದೆ. ಆದರೆ ನಗರದಲ್ಲಿ ರಸ್ತೆ ಸೇರಿದಂತೆ ಮೂಲಭೂತ ಸೌಕರ್ಯ ಒದಗಿಸುವ ಸಿದ್ಧತಾ ಕಾರ್ಯ ಆಮೆಗತಿಯಲ್ಲಿ ಸಾಗುತ್ತಿದ್ದು, ಭಕ್ತರ ಆತಂಕಕ್ಕೆ ಕಾರಣವಾಗಿದೆ.
ತಿಂಗಳು 17ರ ಗುರುವಾರ ದೇವಿಯ ಜಾತ್ರೆ ಮಹೋತ್ಸವ ಆರಂಭ ಆಗಲಿದ್ದು. ಅಂದೇ ಹಾಸನಾಂಬೆಯ ಗರ್ಭಗುಡಿಯ ಬಾಗಿಲು ತೆರೆಯಲಾಗುತ್ತದೆ. ಇದಕ್ಕೆ ಕೇವಲ 15 ದಿನಗಳು ಮಾತ್ರ ಬಾಕಿ ಇವೆ. ನಗರದಿಂದ ದೇವಸ್ಥಾನಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗಳೆಲ್ಲ ಹಾಳಾಗಿವೆ.
ರಸ್ತೆ ಕಾಮಗಾರಿ ಹಿನ್ನಲೆಯಲ್ಲಿ ವಾಹನ ಸವಾರರಿಗೆ ಅರ್ಧ ರಸ್ತೆಯಲ್ಲಿ ಮಾತ್ರ ಸಂಚರಿಸುವ ಅನಿವಾರ್ಯತೆ ಇದೆ. ಪರಿಣಾಮ ಇಡೀ ನಗರ ತುಂಬ ಇರುವ ರಸ್ತೆಗಳಲ್ಲಿ ಟ್ರಾಫಿಕ್ ಸಮಸ್ಯೆ ಕಾಡುತ್ತಿದೆ. ದೇವಾಲಯಕ್ಕೆ ಸಂಪರ್ಕದ ಬಿಎಂ ರಸ್ತೆ, ಹೊಸ ಲೈನ್ ರಸ್ತೆ, ಗೊರೂರು ವೃತ್ತ, ಸೇರಿದಂತೆ ನಾಲ್ಕು ಕಡೆಗಳಿಂದಲೂ ಸಹ ಸಂಚಾರ ಸುಗಮವಾಗಿಲ್ಲ. ರಸ್ತೆಗಳ ದುರಸ್ತಿ ಕಾರ್ಯ ಆಮೆ ಗತಿಯಲ್ಲಿ ಸಾಗುತ್ತಿದೆ.
ಎನ್ ಆರ್ ವೃತ್ತದಿಂದ ಸಂತೆಪೇಟೆ ಮಾರ್ಗವಾಗಿ ದೇವಾಲಯಕ್ಕೆ ಹೋಗುವ ರಸ್ತೆ ಕಾಮಗಾರಿ ನಡೆಯುತ್ತಿದ್ದು ಶೇ.25 ರಷ್ಟು ಕೆಲಸ ಬಾಕಿ ಇದೆ. ಉಳಿದಿರುವ ಕಾಮಗಾರಿ 15 ದಿನಗಳಲ್ಲಿ ಮುಗಿಯುವುದು ಅನುಮಾನ ಆಗಿದೆ. ಪ್ರತಿ ದಿನ 50 ಸಾವಿರಕ್ಕೂ ಹೆಚ್ಚು ಮಂದಿ ಭಕ್ತರು ಬರುವ ಹಿನ್ನಲೆ ರಸ್ತೆ ಸರಿಪಡಿಸದಿದ್ದರೆ ಟ್ರಾಫಿಕ್ ಸಮಸ್ಯೆ ಉಂಟಾಗುವ ಸಾಧ್ಯತೆ ಇದೆ.
ದೇವಾಲಯ ಸುತ್ತಮುತ್ತ ರಸ್ತೆಗಳಲ್ಲಿ ಅಪಘಾತ ಉಂಟು ಮಾಡುವ ದೊಡ್ಡ ದೊಡ್ಡ ಗುಂಡಿಗಳೇ ನಿರ್ಮಾಣವಾಗಿದ್ದು, ನಗರಸಭೆ ಅಧಿಕಾರಿಗಳು ಅಲ್ಲಲ್ಲಿ ಕಲ್ಲು ಮಣ್ಣು ಸುರಿದು ಕೆಲ ರಸ್ತೆಗಳು ಬಂದ್ ಆಗಿವೆ. ಅಲ್ಲದೆ ಪ್ರತಿವರ್ಷ ಕೋಟಿ ಕೋಟಿ ಆದಾಯ ದೇವಾಲಯಕ್ಕೆ ಕಾಣಿಕೆ ರೂಪದಲ್ಲಿ ಬರುತ್ತಿದ್ದರೂ ಜಿಲ್ಲಾಡಳಿತ ಮಾತ್ರ ದೇವಾಲಯದ ಅಭಿವೃದ್ಧಿಗೆ ತಲೆ ಕೆಡಿಸಿಕೊಂಡಂತೆ ಕಾಣುತ್ತಿಲ್ಲ. ನೂರಾರು ವರ್ಷಗಳಿಂದ ಅಪಾರ ಭಕ್ತರನ್ನು ದೇವಾಲಯ ಹೊಂದಿದ್ದರೂ ಇಲ್ಲಿಯವರೆಗೂ ಶಾಶ್ವತ ಶೌಚಾಲಯದ ವ್ಯವಸ್ಥೆ ಸಮರ್ಪಕವಾಗಿಲ್ಲ. ಕೇವಲ ಎರಡು ವಾರ ಮಾತ್ರ ಬಾಕಿ ಇರುವಾಗ ಶೌಚಾಲಯಕ್ಕೆ ಮಾರ್ಕ್ ಮಾಡುತ್ತಿದ್ದು, ಜಿಲ್ಲಾಡಳಿತದ ಕ್ರಮಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹಲವಾರು ಪವಾಡಗಳನ್ನು ಹೊಂದಿರುವ ವರ್ಷಕೊಮ್ಮೆ ಮಾತ್ರ ದರ್ಶನ ನೀಡುವ ಹಾಸನಾಂಬೆ ದೇವಾಲಯಕ್ಕೆ ಕಳೆದ ಕೆಲವರ್ಷಗಳಿಂದ ಕೋಟ್ಯಂತರ ರೂಪಾಯಿ ಆದಾಯ ಬಂದಿದೆ. ಇದನ್ನು ದೇವಾಲಯ ಅಭಿವೃದ್ಧಿಗೆ ಬಳಸುವ ಅವಕಾಶ ಇದ್ದರೂ ಜಿಲ್ಲಾಡಳಿತ ಅಭಿವೃದ್ಧಿ ಮಾಡುತ್ತಿಲ್ಲ ಎಂದು ಸಾರ್ವಜನಿಕರ ಅಸಮಾಧಾನಕ್ಕೆ ಕಾರಣವಾಗಿದೆ. ರಾಜ್ಯ ಮತ್ತು ಹೊರ ರಾಜ್ಯದ ಲಕ್ಷಾಂತರ ಭಕ್ತರನ್ನು ಹೊಂದಿರುವ ದೇವಿಯ ದರ್ಶನಕ್ಕೆ ಯಾವುದೇ ತೊಂದರೆಯಾಗದೆ ಕಾಮಗಾರಿ ಶೀಘ್ರವಾಗಿ ಮುಗಿಸಲಿ, ಹಾಸನಾಂಬೆ ಉತ್ಸವ ಅದ್ಧೂರಿಯಾಗಿ ಜರುಗಲಿ ಎಂಬುದು ಜನರ ಆಶಯವಾಗದೆ.
ಗದಗ: ಕಳೆದ ಮೂರು ತಿಂಗಳಿಂದ ರೇಷನ್ ನೀಡದೆ ಸತಾಯಿಸುತ್ತಿರುವ ನ್ಯಾಯಬೆಲೆ ಅಂಗಡಿ ವಿತರಕರ ವಿರುದ್ಧ ಫಲಾನುಭವಿಗಳು ಆಕ್ರೋಶಗೊಂಡಿರುವ ಘಟನೆ ಗದಗ ನಗರದಲ್ಲಿ ನಡೆದಿದೆ.
ಬೆಟಗೇರಿ ವಲಯದ ನ್ಯಾಯಬೆಲೆ ಅಂಗಡಿ ಸಂಖ್ಯೆ 24, 26 ಹಾಗೂ 27 ಈ ಮೂರು ಅಂಗಡಿಗಳು ಒಂದೇ ಗೊದಾಮಿನಲ್ಲಿವೆ. ಆದರೆ ಕಳೆದ ಮೂರು ತಿಂಗಳಿಂದ ಇಲ್ಲಿ ಯಾವೊಬ್ಬ ಫಲಾನುಭವಿಗಳಿಗೆ ರೇಷನ್ ನೀಡುತ್ತಿಲ್ಲ. ಈ ವಾರ ಮುಂದಿನ ವಾರ ಎಂದು ಮುಂದೂಡ್ತಾ ಮೂರು ತಿಂಗಳು ಮಾಡಿದ್ದಾರೆ ಎಂದು ಜನರು ವಿತರಕರ ಮೇಲೆ ಕಿಡಿಕಾರಿದ್ದಾರೆ.
ಇದರಿಂದ ರೋಸಿಹೊದ ಸಾರ್ವಜನಿಕರು ರಾತ್ರಿಯಿಡಿ ಇಲ್ಲಿಯೇ ಉಳಿದು ವಿತರಕರು, ಗುತ್ತಿಗೆದಾರರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಅಂಗಡಿ ಸಂಖ್ಯೆ 24 ರ ಗುತ್ತಿಗೆದಾರ ಎ.ಎ ದೇವರಡ್ಡಿ, 26ನೇ ಅಂಗಡಿ ಜನತಾ ಕಂಪನಿ ಸೊಸೈಟಿ ಹಾಗೂ 27ನೇ ಅಂಗಡಿ ಎಮ್.ಎಸ್ ರಕ್ಕಸಗಿ ಎಂಬ ಗುತ್ತಿಗೆದಾರರು ಅಕ್ಕಿ ವಿತರಣೆ ಮಾಡಬೇಕು. ಆದರೆ ಈ ಮೂವರ ಪಾಲಿನ ಪಡಿತರ ರೇಷನ್‍ನ್ನು ಗುರುಪಾದಯ್ಯ ಸ್ವಾಮಿ ಎಂಬುವರು ಹಂಚಿಕೆ ಮಾಡುತ್ತಾರೆ ಎಂದು ಆರೋಪ ಮಾಡಿದ್ದಾರೆ.
ನ್ಯಾಯಬೆಲೆ ಅಂಗಡಿನಲ್ಲಿ ಅನ್ಯಾಯವೇ ಹೆಚ್ಚಾಗುತ್ತಿದೆ. ಸರಿಯಾಗಿ ಹಂಚಿಕೆ ಮಾಡದೇ ಫಲಾನುಭವಿಗಳನ್ನು ಪ್ರತಿ ತಿಂಗಳು ಯಾಮಾರಿಸ್ತಾರೆ. ಕಳೆದ ಮೂರು ತಿಂಗಳಿಂದ ಫಲಾನುಭವಿಗಳಿಂದ ಥಂಬ್ ಹಾಕಿಸಿಕೊಂಡು ರೇಷನ್ ನೀಡಿಲ್ಲ. ಜೊತೆಗೆ ಪ್ರತಿ ತಿಂಗಳು ಕೊಡಬೇಕಾದ ಅಕ್ಕಿ ಫಲಾನುಭವಿಗೆ ನೀಡದೆ, ಕಾಳಸಂತೆಯಲ್ಲಿ ಮಾರಾಟವಾಗುತ್ತೆ ಎಂಬ ಆರೋಪ ಕೇಳಿ ಬರುತ್ತಿದೆ.
ಕಾರವಾರ: ಎರಡನೇ ಬಾರಿ ಉತ್ತರ ಕನ್ನಡ ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಗಳಿಗೆ ಮುಖ್ಯಮಂತ್ರಿ ಯಡಿಯೂರಪ್ಪನವರು ಭೇಟಿ ಕಾರ್ಯಕ್ರಮ ರದ್ದಾಗಿರುವುದಕ್ಕೆ ಸಂತ್ರಸ್ತರು ಅಕ್ರೋಶ ವ್ಯಕ್ತಪಡಿಸಿದ್ದಾರೆ.
ಇಂದು ಮುಂಜಾನೆಯಿಂದ ಕಾರವಾರದ ಸರ್ಕಿಟ್ ಹೌಸ್ ಬಳಿ ನರೆದಿದ್ದು ನೆರೆ ಸಂತ್ರಸ್ತರು ತಮ್ಮ ಊರಿನ ಸಮಸ್ಯೆ ಕುರಿತು ಸಿಎಂ ಬಳಿ ಮನವಿ ಸಲ್ಲಿಸುವವರಿದ್ದರು. ಆದರೆ ಹವಾಮಾನ ವೈಪರಿತ್ಯದಿಂದ ಸಿಎಂ ಅವರ ಅಧಿಕೃತ ಕಾರ್ಯಕ್ರಮ ಮೊಟಕುಗೊಳಿಸಿ, ಹಾವೇರಿಗೆ ಮಾತ್ರ ನಿಗದಿಮಾಡಲಾಗಿತ್ತು. ಇದರಿಂದ ಸಿಎಂ ಬಿಎಸ್‍ವೈಗಾಗಿ ಕಾದು ಕುಳಿತ ಜನರು ಅಸಮಾಧಾನ ಹೊರ ಹಾಕಿದರು.
ಸಿಎಂ ಬಾರದ ಕಾರಣ ಸಂತ್ರಸ್ತರು ಆಕ್ರೋಶಗೊಂಡಿದ್ದು, ಈ ಹಿಂದೆ ಸಹ ಕಾರ್ಯಕ್ರಮ ನಿಗದಿಯಾಗಿತ್ತು ಆದರೆ ರದ್ದಾಗಿತ್ತು. ಜಿಲ್ಲೆಗೆ ಕೇಂದ್ರ ನಿಯೋಗ ಸಹ ಬರಲಿಲ್ಲ. ವಿರೋಧ ಪಕ್ಷದ ನಾಯಕರೂ ಬರಲಿಲ್ಲ. ನಮ್ಮ ಕಷ್ಟವನ್ನು ಕೇಳಲು ನಾಯಕರಿಗೆ ಸಮಯ ಇಲ್ಲ. ಪ್ರವಾಹ ಪೀಡಿತ ಎಲ್ಲಾ ಪ್ರದೇಶಗಳಿಗೆ ಭೇಟಿ ನೀಡುತ್ತಾರೆ. ಆದರೆ ಉತ್ತರ ಕನ್ನಡ ಜಿಲ್ಲೆಗೆ ಮಾತ್ರ ಮಲತಾಯಿ ಧೋರಣೆ ತೋರಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಸಿಎಂಗಾಗಿ ಕಾದು ಕುಳಿತ ಅಧಿಕಾರಿಗಳಿಂದ ಹಿಡಿದು ಎಲ್ಲರೂ ಮರಳಿ ಹೋದರು.
ಚಿತ್ರದುರ್ಗ: ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದ ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಹಿರಿಯ ಶಾಸಕ ತಿಪ್ಪಾರೆಡ್ಡಿ ಬಹಿರಂಗವಾಗಿಯೇ ಅಸಮಾಧಾನ ಹೊರ ಹಾಕಿದ್ದಾರೆ. ಜಿಲ್ಲೆಯಲ್ಲಿ ಬಿಜೆಪಿ ತಳಮಟ್ಟದವರೆಗೆ ಬೇರೂರಲು ಶಕ್ತಿಯಾಗಿದ್ದ ತಿಪ್ಪಾರೆಡ್ಡಿ ಬಿಜೆಪಿ ಹೈಕಮಾಂಡ್ ಹಾಗು ಯಡಿಯೂರಪ್ಪನವರ ನಡೆಗೆ ಬೇಸರ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಪದೇ ಪದೇ ಈ ಜಿಲ್ಲೆಗೆ ವಲಸಿಗರೇ ಉಸ್ತುವಾರಿ ಸಚಿವರಾಗ್ತಿರೋದು ಚಿತ್ರದುರ್ಗದ ದೌರ್ಭಾಗ್ಯ ಎಂದಿದ್ದಾರೆ. ಶಾಸಕರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಗೈರಾಗಿದ್ದ ಅವರು ಇಂದು ಮಧ್ಯಾಹ್ನ ಬೆಂಗಳೂರಿನ ಶಾಸಕರ ಭವನದಲ್ಲಿ ಸಚಿವ ಸ್ಥಾನ ವಂಚಿತ ಹಿರಿಯ ಶಾಸಕರೊಂದಿಗೆ ಸಭೆ ನಡೆಸಿ ಅಂತಿಮ ತೀರ್ಮಾನ ಕೈಗೊಳ್ಳುವುದಾಗಿ ಹೇಳಿದ್ದಾರೆ.
ನಾನು ಸುಮಾರು 50 ವರ್ಷಗಳಿಂದ ರಾಜಕೀಯದಲ್ಲಿದ್ದೇನೆ. 6 ಬಾರಿ ಶಾಸಕನಾಗಿದ್ದೇನೆ. ಕಳೆದ 16-17 ವರ್ಷದಿಂದ ಹೊರಗಿನವರೇ ನಮ್ಮ ಜಿಲ್ಲೆಯ ಉಸ್ತವಾರಿ ಸಚಿವರಾಗುತ್ತಿರೋದು ದುರಂತ. ನಮ್ಮಲ್ಲಿ ಒಂದು ಅಭಿವೃದ್ಧಿ ಕೆಲಸ ಕೂಡ ಆಗಿರುವ ಉದಾಹರಣೆ ಇಲ್ಲ. ನನ್ನ ರಾಜಕೀಯ ಇತಿಹಾಸದಲ್ಲಿ ಯಾವುದೇ ಮೈನಸ್ ಪಾಯಿಂಟ್ ಇಲ್ಲ. ಯಾರೊಬ್ಬರು ಬೆರಳು ಮಾಡಿ ತೋರಿಸುವಂತ ಕೆಲಸ ಕೂಡ ನಾನು ಮಾಡಿಲ್ಲ. ನಿಷ್ಪಕ್ಷಪಾತವಾಗಿ ಪಕ್ಷದ ಸಂಘಟನೆಗೆ ನಾವು ದುಡಿದಿದ್ದೇವೆ. ಪಕ್ಷ ಸೋತಾಗಲೂ ಜಿಲ್ಲೆಯಲ್ಲಿ ನಾವು ಲೀಡ್ ಪಡೆದು ಗೆದ್ದಿದ್ದೇವೆ. ನಾವು ಆರು ಬಾರಿ ಗೆದ್ದು, ಜನರ ವಿಸ್ವಾಸ ಗಳಿಸಿ, ಜಿಲ್ಲೆಯ ಎಲ್ಲಾ ಜನಾಂಗಕ್ಕೆ ಭೇದ ಭಾವ ಮಾಡದೇ ಕೆಲಸ ಮಾಡಿದ್ದೇವೆ. ನಮಗೆ ಯಾವಾಗ ಅವಕಾಶ ಕೊಡುತ್ತಾರೆ ಎಂದು ಪ್ರಶ್ನಿಸಿದ್ದಾರೆ.
ಬೇರೆಯವರ ಹಾಗೆ ಜನ ಕಟ್ಟಿಕೊಂಡು ಲಾಬಿ ಮಾಡುವ ಅವಶ್ಯಕತೆ ನನಗಿಲ್ಲ. ಯಾಕೆಂದರೆ ನಾನು ವಯಸ್ಸಿನಲ್ಲಿ ಹಾಗೂ ಶಾಸಕರಲ್ಲಿ ಅತ್ಯಂತ ಹಿರಿಯ ನಾಯಕ. ಈ ರೀತಿ ಇರುವಾಗ ನಮಗೆ ಅವಕಾಶ ಕೊಡದಿರುವುದು ಬಹಳ ನೋವಿನ ಸಂಗತಿ. ಈ ವಿಚಾರದಲ್ಲಿ ನಮ್ಮ ಸಿಎಂ ಹಾಗೂ ಕೇಂದ್ರದ ನಾಯಕರಿಗೆ ನಾನು ವಿನಂತಿ ಮಾಡಿಕೊಳ್ಳುತ್ತೇನೆ. ಸದ್ಯದಲ್ಲೇ ಹಿರಿಯ ನಾಯಕರೆಲ್ಲ ಸೇರಿ ಸಭೆ ನಡೆಸಿ ತೀರ್ಮಾನ ಕೈಗೊಳ್ಳುತ್ತೇವೆ. ಇಂದು ಪ್ರಮಾಣ ವಚನ ಸಮಾರಂಭಕ್ಕೆ ಹೋಗಬಾರದೆಂದು ನಾನು ನಿರ್ಧರಿಸಿದ್ದೆ. ಆದರೆ ನಮ್ಮ ಸ್ನೇಹಿತರು ಹಾಗೂ ಶಾಸಕರು ಕರೆ ಮಾಡಿ ಬರಲು ಹೇಳಿದ್ದಾರೆ, ಹೀಗಾಗಿ ಬೆಂಗಳೂರಿಗೆ ತೆರೆಳುತ್ತೇನೆ. ಅಲ್ಲಿ ರಾಜ್ಯದ ಅಭಿವೃದ್ಧಿಗೆ, ಪಕ್ಷಕ್ಕೆ ಅನುಕೂಲವಾಗುವ ರೀತಿ ಹೇಗೆ ನಮ್ಮ ನೋವನ್ನು ಹಿರಿಯ ನಾಯಕರಿಗೆ ತಿಳಿಸಬೇಕು ಎನ್ನುವುದನ್ನು ಚರ್ಚೆ ಮಾಡುತ್ತೇವೆ ಎಂದರು.
ಜಿಲ್ಲೆಯಲ್ಲಿ ಎಲ್ಲರೂ ಪಕ್ಷಕ್ಕಾಗಿ ಕೆಲಸ ಮಾಡಿದ್ದೇವೆ. ಆದರೆ ಕೆಲ ಜನಾಂಗಕ್ಕೆ ಮಾನ್ಯತೆ ಕೊಡುತ್ತಿಲ್ಲ. ಹಿಂದಿನ ಕ್ಯಾಬಿನೆಟ್‍ನಲ್ಲಿ ಹಿಂದುಳಿದ ಜನಾಂಗದವರು ಕೆಲಸ ಮಾಡಿದ್ದಾರೆ. ಆದರೆ ಈಗ ಯಾವ ದೃಷ್ಟಿಯಿಂದ ನಮಗೆ ಅವಕಾಶ ಕೊಡುತ್ತಿಲ್ಲ ಎಂದು ಗೊತ್ತಿಲ್ಲ. ನಾನು ಬೇರೆಯವರಿಗೆ ಸಚಿವ ಸ್ಥಾನ ಕೊಟ್ಟಿರುವ ಬಗ್ಗೆ ಟೀಕೆ ಮಾಡಲ್ಲ. ಆದರೆ ನನಗೆ ಸಚಿವ ಸ್ಥಾನ ಕೊಡದಿದ್ದಕ್ಕೆ ನನ್ನ ನೋವನ್ನು ವ್ಯಕ್ತಪಡಿಸುತ್ತಿದ್ದೇನೆ ಎಂದು ಬಹಿರಂಗವಾಗಿಯೇ ಅಸಮಾಧಾನ ಹೊರಹಾಕಿದರು.
ಸಿಎಂ ಯಡಿಯೂರಪ್ಪ ಅವರಿಗೆ ನನ್ನ ಮೇಲೆ ಯಾವುದೇ ಮುನಿಸು, ದ್ವೇಷವಿಲ್ಲ. ಹಾಗೆಯೇ ಯಾರಿಗೆ ಸಚಿವ ಸ್ಥಾನ ನೀಡಬೇಕು ಎಂಬ ಬಗ್ಗೆ ಯಾರಾದರೂ ಕುತಂತ್ರ ನಡೆಸಿದ್ದಾರೋ ಗೊತ್ತಿಲ್ಲ. ಮುಂದಿನ ದಿನಗಳಲ್ಲಿ ಈ ಬಗ್ಗೆ ಮಾಹಿತಿ ಪಡೆಯುತ್ತೇವೆ. ಕಳೆದ 4-5 ಸರ್ಕಾರದ ಬಂದ ಅವಧಿಯಲ್ಲೂ ನಮ್ಮ ಜಿಲ್ಲೆಯವರು ಸಚಿವರಾಗದಿರುವುದು ದುರಂತ. ಹೊಸ ಸರ್ಕಾರ ರಚನೆಯಾದಗಲೆಲ್ಲಾ 4ರಿಂದ 5 ಮಂದಿ ಸಚಿವರಾಗುತ್ತಾರೆ ಆದರೆ ಎಲ್ಲರೂ ಹೊರ ಜಿಲ್ಲೆಯವರು. ಹೀಗಾಗಿ ಜನರು ಬೇಸರ ವ್ಯಕ್ತಪಡಿಸುತ್ತಿದ್ದಾರೆ ಎಂದರು.
ಯಾವೆಲ್ಲ ಹಿರಿಯ ಶಾಸಕರು ಸೇರಿ ಸಭೆ ನಡೆಸುತ್ತೇವೆ ಎಂದು ಮುಂದಿನ ದಿನಗಳಲ್ಲಿ ನಿಮಗೆ ತಿಳಿಯುತ್ತೆ. ಈಗಲೇ ಅದರ ಬಗ್ಗೆ ಹೇಳುವ ಅವಶ್ಯಕತೆ ಇಲ್ಲ. ಎಬಿವಿಪಿ, ಭಜರಂಗದಳ, ಹಿಂದೂ ಸಂಘಟನೆ, ಆರ್‍ಎಸ್‍ಎಸ್ ಹೀಗೆ ಹಲವು ಸಂಘಟನೆ ಜೊತೆ ಸಕ್ರಿಯವಾಗಿದ್ದೇನೆ. ಬಿಜೆಪಿಯ ಯಾವುದೇ ಕಾರ್ಯಾಕ್ರವಿದ್ದರೂ ಕ್ರಿಯಾಶೀಲವಾಗಿ ಭಾಗಿಯಾಗಿದ್ದೇನೆ. ಆದರೂ ಸಚಿವ ಸ್ಥಾನ ಸಿಗದೇ ಇರುವುದು ಅಘಾತವಾಗಿದೆ ಎಂದು ನೋವನ್ನು ಹಂಚಿಕೊಂಡರು.
ಇತ್ತ ಶಾಸಕ ತಿಪ್ಪಾರೆಡ್ಡಿಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿ ಅವರ ಬೆಂಬಲಿಗರು ಪ್ರತಿಭಟನೆ ಮಾಡಿದ್ದಾರೆ. ಚಿತ್ರದುರ್ಗದ ಗಾಂಧಿಸರ್ಕಲ್‍ನಲ್ಲಿ ಜಿಲ್ಲಾ ಪಂಚಾಯತ್ ಸದಸ್ಯರು, ನಗರಸಭೆ ಸದಸ್ಯರು ಸೇರಿದಂತೆ ಬಿಜೆಪಿ ಕಾರ್ಯಕರ್ತರು ಸೇರಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಹೀರೋ ಸ್ಕೂಟಿ ಬೈಕಿಗೆ ಬೆಂಕಿ ಹಚ್ಚಿ ಬೆಂಬಲಿಗರು ಆಕ್ರೋಶ ಹೊರಹಾಕಿದ್ದಾರೆ. ಸದ್ಯ ಸ್ಥಳಕ್ಕೆ ಚಿತ್ರದುರ್ಗ ಎಸ್‍ಪಿ ಡಾ.ಕೆ.ಅರುಣ್ ಹಾಗೂ ಇತರೆ ಪೊಲೀಸರು ಭೇಟಿ ನೀಡಿ, ಪ್ರತಿಭಟನಾ ಲಘು ಲಾಠಿ ಪ್ರಹಾರ ಮಾಡಿದ್ದಾರೆ. ಪರಿಣಾಮ ದಿಕ್ಕಾಪಾಲಾಗಿ ಪ್ರತಿಭಟನಾಕಾರರು ಓಡಿಹೋಗಿದ್ದಾರೆ. ಅಲ್ಲದೆ ಮುಂಜಾಗೃತ ಕ್ರಮವಾಗಿ 10ಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಕರಕಲಾದ ಸ್ಕೂಟಿಯನ್ನು ಪೊಲೀಸರು ಸ್ಥಳಾಂತರಿಸಿದ್ದಾರೆ.
ಗದಗ: ಮಲಪ್ರಭಾ ಪ್ರವಾಹಕ್ಕೆ ಸಿಲುಕಿ ಅನಾರೋಗ್ಯಕ್ಕಿಡಾಗಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೆ ಇಂದು ಸಾವನ್ನಪ್ಪಿರುವ ಘಟನೆ ಗದಗ ಜಿಲ್ಲೆ ರೋಣ ತಾಲೂಕಿನ ಹೊಳೆಆಲೂರ ಗ್ರಾಮದಲ್ಲಿ ನಡೆದಿದೆ.
66 ವರ್ಷದ ಹನುಮಂತಪ್ಪ ಚಲವಾದಿ ಮೃತಪಟ್ಟಿದ್ದಾರೆ. ಮಲಪ್ರಭಾ, ಬೆಣ್ಣೆಹಳ್ಳ ಪ್ರವಾಹದ ವೇಳೆ ಮನೆಯಲ್ಲಿ ಸಿಲುಕಿಕೊಂಡಿದ್ದರು, ನಂತರ ಸಂಬಂಧಿಕರು ಹಾಗೂ ಸ್ಥಳೀಯರು ಹನುಮಂತಪ್ಪ ಅವರನ್ನು ರಕ್ಷಣೆ ಮಾಡಿ ಆಸ್ಪತ್ರೆಗೆ ದಾಖಲು ಮಾಡಿದರು. ಆದರೆ ಚಿಕಿತ್ಸೆ ಫಲಿಸದೇ ಇಂದು ಮೃತಪಟ್ಟಿದ್ದಾರೆ.
ಪ್ರವಾಹದಿಂದ ಮೃತಪಟ್ಟ ಹಿನ್ನೆಲೆಯಲ್ಲಿ ಪರಿಹಾರಕ್ಕಾಗಿ ಸಂಬಂಧಿಸಿದ ಅಧಿಕಾರಿಗಳ ಗಮನಕ್ಕೆ ತಂದಿದ್ದರೂ ಕ್ಯಾರೆ ಅಂತಿಲ್ಲ ಎಂಬುದು ಕುಟುಂಬದವರ ಆಕ್ರೋಶಕ್ಕೆ ಕಾರಣವಾಗಿದೆ. ಇದರಿಂದ ರೋಸಿಹೋದ ಕುಟುಂಬದವರು ತಾಲೂಕು ಹಾಗೂ ಜಿಲ್ಲಾಮಟ್ಟದ ಅಧಿಕಾರಿಗಳು ಸ್ಥಳಕ್ಕೆ ಬರುವವರೆಗೆ ಅಂತ್ಯಕ್ರಿಯೆ ಮಾಡುವುದಿಲ್ಲ ಎಂದು ಪಟ್ಟುಹಿಡಿದಿದ್ದಾರೆ. ಅಂತ್ಯಕ್ರಿಯೇಗಾದರು ಪ್ರವಾಹ ಪರಿಹಾರ ನೀಡಬೇಕು ಎಂಬುದು ಮೃತನ ಕುಟುಂಬದವರ ಆಗ್ರಹಿಸಿದ್ದಾರೆ.