ಮುಂಬೈ: ಆಸ್ಟ್ರೇಲಿಯಾ ವಿರುದ್ಧದ ಮೂರು ಟಿ20 ಪಂದ್ಯಗಳಿಗೆ ಟೀಂ ಇಂಡಿಯಾ ಪ್ರಕಟವಾಗಿದ್ದು, ಪಟ್ಟಿಯಲ್ಲಿ ಯುವರಾಜ್ ಸಿಂಗ್ ಅವರನ್ನು ಕೈ ಬಿಟ್ಟದ್ದಕ್ಕೆ ಬಿಸಿಸಿಐ ಆಯ್ಕೆ ಸಮಿತಿ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅಭಿಮಾನಿಗಳು ಭಾರೀ ವಿರೋಧ ವ್ಯಕ್ತಪಡಿಸಿದ್ದಾರೆ.

ಅಕ್ಟೋಬರ್ 7ರಿಂದ ಆಸ್ಟ್ರೇಲಿಯಾ ವಿರುದ್ಧ ಟಿ20 ಸರಣಿ ಪ್ರಾರಂಭವಾಗಲಿದ್ದು ರಾಂಚಿಯಲ್ಲಿ ಮೊದಲ ಪಂದ್ಯ ನಡೆಯಲಿದೆ. ಈ ಸರಣಿಗೆ ಬಿಸಿಸಿಐ ಆಯ್ಕೆ ಸಮಿತಿಯ ಎಂಎಸ್‍ಕೆ ಪ್ರಸಾದ್ ಅವರ ನೇತೃತ್ವದಲ್ಲಿ 15 ಜನ ಆಟಗಾರರ ಆಯ್ಕೆ ನಡೆದಿದೆ.
ಆಸ್ಟ್ರೇಲಿಯಾ ವಿರುದ್ಧ ಏಕದಿನ ಪಂದ್ಯಗಳಲ್ಲಿ ಯುವರಾಜ್ ಸ್ಥಾನ ಸಿಗದೇ ಇದ್ದರೂ ಟಿ20ಗೆ ಆಯ್ಕೆಯಾಗುವ ತಂಡದಲ್ಲಿ ಸ್ಥಾನ ಸಿಗಬಹುದು ಎಂದು ಅಭಿಮಾನಿಗಳು ನಿರೀಕ್ಷೆ ಮಾಡಿದ್ದರು. ಆದರೆ ಬಿಸಿಸಿಐ ಆಯ್ಕೆ ಸಮಿತಿ ಯುವಿ ಯನ್ನು ಕೈಬಿಟ್ಟದ್ದಕ್ಕೆ ಅಭಿಮಾನಿಗಳಿಗೆ ನಿರಾಸೆಯಾಗಿದೆ.
http://twitter.com/anuragd123/status/914709755158962176
ಮಾಜಿ ನಾಯಕ ಸೌರವ್ ಗಂಗೂಲಿ ಬಿಸಿಸಿಐ ನ ನಡೆ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ಯುವರಾಜ್ ಸಿಂಗ್ ಮತ್ತೆ ಕಮ್ ಬ್ಯಾಕ್ ಮಾಡಲು ಬಿಸಿಸಿಐ ಅವಕಾಶ ನೀಡಬೇಕಿತ್ತು. ಆದರೆ ಯುವರಾಜ್ ಆಯ್ಕೆಯಲ್ಲಿ ಬಿಸಿಸಿಐ ಯಾಕೆ ನಿರ್ಲಕ್ಷ್ಯ ವಹಿಸುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಯುವರಾಜ್ ಸಿಂಗ್ ಆಸ್ಟ್ರೇಲಿಯಾ ವಿರುದ್ಧ ಏಕದಿನ ಹಾಗೂ ಟಿ20 ಪಂದ್ಯಗಳಲ್ಲಿ ಉತ್ತಮ ಸ್ಟ್ರೈಕ್ ರೇಟ್ ಹೊಂದಿರುವ ಆಟಗಾರನಾಗಿದ್ದು, ಬೌಲಿಂಗ್ ಹಾಗೂ ಬ್ಯಾಟಿಂಗ್ ವಿಭಾಗದಲ್ಲೂ ಸಹ ಆಸ್ಟ್ರೇಲಿಯಾ ತಂಡವನ್ನು ಕಾಡಬಲ್ಲ ಸಾಮಥ್ರ್ಯ ಹೊಂದಿದ್ದಾರೆ. ಅಲ್ಲದೇ ಭಾರತ ಆಡಿದ ಹಲವು ಟಿ20 ಪಂದ್ಯಗಳಲ್ಲಿ ಯುವಿ ಗೆಲುವಿಗೆ ಮುಖ್ಯ ಪಾತ್ರವಾಹಿಸುತ್ತಿದ್ದರು.
ಸುರೇಶ್ ರೈನಾ ಕೂಡ ಟಿ20 ಸರಣಿಗೆ ಆಯ್ಕೆಯಾಗಿಲ್ಲ. ಜೊತೆಗೆ ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಅಜಿಂಕ್ಯಾ ರಹಾನೆಯನ್ನು ಕೂಡ ಕೈ ಬಿಡಲಾಗಿದೆ. ಆದರೆ ವೇಗದ ಬೌಲರ್ 38 ವರ್ಷದ ಆಶಿಶ್ ನೆಹ್ರಾ ಅವರನ್ನು ಸರಣಿಗೆ ಆಯ್ಕೆ ಮಾಡಿದ್ದಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ.
ಟಿ20 ಸ್ಟ್ರೈಕ್ ರೇಟ್:
ಯುವರಾಜ್ ಸಿಂಗ್ ಆಸ್ಟ್ರೇಲಿಯಾ ವಿರುದ್ಧ ಅಕ್ಟೋಬರ್ 10 2013ರಲ್ಲಿ ರಾಜ್‍ಕೋಟ್ ನಲ್ಲಿ ನಡೆದ ಪಂದ್ಯದಲ್ಲಿ 57 ಬಾಲ್‍ಗಳಲ್ಲಿ 5 ಸಿಕ್ಸ್ 8 ಬೌಂಡರಿ ಸಹಿತ 77 ರನ್‍ಗಳನ್ನು ಬಾರಿಸಿದ್ದರು. ಜೊತೆಗೆ 2007ರ ಟಿ 20 ವಿಶ್ವಕಪ್ ಸೆಮಿ ಫೈನಲ್ ನಲ್ಲಿ ಆಸ್ಟ್ರೇಲಿಯಾ ವಿರುದ್ಧ 38 ಬಾಲ್‍ಗೆ 70 ರನ್ ಬಾರಿಸಿ ಭಾರತ ವಿಶ್ವ ಕಪ್ ಫೈನಲ್ ಪ್ರವೇಶ ಮಾಡಲು ಪ್ರಮುಖ ಪಾತ್ರ ವಹಿಸಿದ್ದರು. 2017 ಫೆ.1ರಂದು ಬೆಂಗಳೂರಿನಲ್ಲಿ ಇಂಗ್ಲೆಂಡ್ ವಿರುದ್ಧ ಆಡಿದ ಪಂದ್ಯವೇ ಯುವಿ ಕೊನೆಯ ಟಿ 20 ಪಂದ್ಯವಾಗಿದ್ದು, ಈ ಪಂದ್ಯದಲ್ಲಿ 27 ರನ್ ಹೊಡೆದಿದ್ದರು.
https://youtu.be/MHFgWsfZBk4