Tag: ಆಜಾನ್

  • ಆಜಾನ್‌ ವಿರೋಧಿಸಿ ರಾಜ್ಯಾದ್ಯಂತ ಜೂ. 1ರಿಂದ ಎರಡನೇ ಸುತ್ತಿನ ಹೋರಾಟ: ಮುತಾಲಿಕ್

    ಆಜಾನ್‌ ವಿರೋಧಿಸಿ ರಾಜ್ಯಾದ್ಯಂತ ಜೂ. 1ರಿಂದ ಎರಡನೇ ಸುತ್ತಿನ ಹೋರಾಟ: ಮುತಾಲಿಕ್

    ಹಾಸನ: ಆಜಾನ್ ವಿಷಯದಲ್ಲಿ ಸರ್ಕಾರ ದೃಢ ನಿಲುವಿನೊಂದಿಗೆ ಅಗತ್ಯ ಕ್ರಮ ಕೈಗೊಳ್ಳದಿದ್ದಲ್ಲಿ ರಾಜ್ಯಾದ್ಯಂತ ಜೂನ್ 1ರಿಂದ ಎರಡನೇ ಸುತ್ತಿನ ಹೋರಾಟವನ್ನು ಶ್ರೀರಾಮ ಸೇನೆ ವತಿಯಿಂದ ಹಮ್ಮಿಕೊಳ್ಳಲಾಗುವುದು ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ತಿಳಿಸಿದರು.

    ಹಾಸನದಲ್ಲಿ ಮಾತನಾಡಿದ ಅವರು, ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಮಸೀದಿಗಳಲ್ಲಿ ಆಜಾನ್ ನಿಲ್ಲಿಸಬೇಕಾಗಿದೆ ಹಾಗೂ ನಿರ್ದಿಷ್ಟ ಪ್ರಮಾಣದ ಧ್ವನಿಯೊಂದಿಗೆ ಆಜಾನ್ ಮಾಡುವುದಕ್ಕೆ ಸೂಚನೆ ನೀಡಲಾಗಿದ್ದರೂ ಸಹ ಬಹುತೇಕ ಮಸೀದಿಗಳಲ್ಲಿ ಇದು ಪಾಲನೆ ಆಗುತ್ತಿಲ್ಲ. ಮುಖ್ಯಮಂತ್ರಿ ಹಾಗೂ ಗೃಹಮಂತ್ರಿ ಸಹ ಈ ಬಗ್ಗೆ ದೃಢ ನಿಲುವನ್ನು ಕೈಗೊಳ್ಳುವಲ್ಲಿ ವಿಫಲರಾಗಿದ್ದಾರೆ. ಮುಂದಿನ ದಿನಗಳಲ್ಲಿ ಸರ್ಕಾರ ಅಗತ್ಯ ಕ್ರಮ ಕೈಗೊಂಡು ಆಜಾನ್ ನಿಲ್ಲಿಸದಿದ್ದರೆ ಜೂನ್ 1ರಿಂದ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದರು.

    loud speaker

    ಪಠ್ಯದಲ್ಲಿ ಹೆಡ್ಗೆವಾರ್ ವಿಷಯ ಸೂಕ್ತ: ಪಠ್ಯ-ಪುಸ್ತಕಗಳಲ್ಲಿ ಆರ್‌ಎಸ್‍ಎಸ್ ಸಂಸ್ಥಾಪಕರಾದ ಹೆಡ್ಗೆವಾರ್ ಅವರ ವಿಷಯಗಳನ್ನು ಅಳವಡಿಸುವುದು ಸೂಕ್ತವಾಗಿದೆ. ಅವರು ಎಂದೂ ಸಹ ದೇಶವಿರೋಧಿ ಕೆಲಸ ಮಾಡಿಲ್ಲ. ಅಂಥವರ ಬಗ್ಗೆ ಪಠ್ಯ-ಪುಸ್ತಕದಲ್ಲಿ ಪ್ರಕಟಿಸುವುದಕ್ಕೆ ಮುಖ್ಯಮಂತ್ರಿ ಹಾಗೂ ಗೃಹ ಮಂತ್ರಿಗಳು ಯಾಕೆ ಮೀನಮೇಷ ಎಣಿಸುತ್ತಿದ್ದಾರೆ ತಿಳಿಯುತ್ತಿಲ್ಲ. ಯಾವುದೇ ಕಾರಣಕ್ಕೂ ಹೆಡ್ಗೆವಾರ್ ಅವರ ವಿಷಯಗಳನ್ನು ಪಠ್ಯ-ಪುಸ್ತಕದಲ್ಲಿ ಅಳವಡಿಸುವುದರಿಂದ ಹಿಂಜರಿಯಬಾರದು ಎಂದು ಒತ್ತಾಯಿಸಿದರು.

    ಆರ್‌ಎಸ್‍ಎಸ್ ರಾಜಕೀಯೇತರ ದೇಶದ ನಂಬರ್ 1 ಸಂಘವಾಗಿದೆ. ಇದು ಭಯೋತ್ಪಾದಕರ ಸಂಘಟನೆಯಲ್ಲ. ದೇಶಭಕ್ತಿಯ ಸಂಘಟನೆಯಾಗಿದ್ದು, ಅದರ ಸಂಸ್ಥಾಪಕರಾದ ಹೆಡ್ಗೆವಾರ್ ಅವರ ವಿಷಯವನ್ನು ಪಠ್ಯದಲ್ಲಿ ಅಳವಡಿಸುವುದು ಸೂಕ್ತವಾಗಿದೆ.  ಇದನ್ನೂ ಓದಿ: 12 ಜ್ಯೋತಿರ್ಲಿಂಗಗಳಲ್ಲಿ ಜ್ಞಾನವಾಪಿಯಲ್ಲಿ ಸಿಕ್ಕ ಶಿವಲಿಂಗವೂ ಒಂದು: ವಿಹೆಚ್‌ಪಿ

    tippu

    ಹಲವು ದಶಕ ದೇಶವನ್ನಾಳಿದ ಕಾಂಗ್ರೆಸ್ ಸರ್ಕಾರದಲ್ಲಿ ಆಡಳಿತ ನಡೆಸಿದ ಐದು ಮಂದಿ ಮುಸ್ಲಿಂ ಕೇಂದ್ರ ಶಿಕ್ಷಣ ಸಚಿವರು, ಕೇವಲ ಔರಂಗಜೇಬ್, ಟಿಪ್ಪು, ಬಾಬರ್‌ರಂತಹ ದೇಶವಿರೋಧಿ ವ್ಯಕ್ತಿಗಳ ವಿಷಯಗಳನ್ನು ಪಠ್ಯದಲ್ಲಿ ಅಳವಡಿಸುವ ಮೂಲಕ ಹಿಂದೂ ರಾಷ್ಟ್ರಕ್ಕೆ ತಪ್ಪು ಸಂದೇಶವನ್ನು ಸಾರುವಂತೆ ಮಾಡಿದರು. ಇದೀಗ ದೇಶಭಕ್ತರ ವಿಷಯಗಳನ್ನು ಪಠ್ಯದಲ್ಲಿ ಅಳವಡಿಸುವುದಕ್ಕೆ ವಿರೋಧ ವ್ಯಕ್ತಪಡಿಸುವುದು ಏಕೆ ಎಂದು ಪ್ರಶ್ನಿಸಿದರು.

    ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ತಲೆಯೆತ್ತಿರುವ ಅನಧಿಕೃತ ಚರ್ಚ್‍ಗಳನ್ನು ನೆಲಸಮಮಾಡಬೇಕು ಎಂಬುದಾಗಿ ಮುಖ್ಯಮಂತ್ರಿ ಹಾಗೂ ಗೃಹ ಮಂತ್ರಿಗಳಿಗೆ ಮನವಿ ಸಲ್ಲಿಸಿ ಈ ಬಗ್ಗೆ ಹೋರಾಟ ನಡೆಸಲಾಗುವುದು ಎಂದು ತಿಳಿಸಿದರು. ಇದನ್ನೂ ಓದಿ: ಬೆಣ್ಣೆ ಹಳ್ಳದಲ್ಲಿ ಪ್ರವಾಹ – ನಾಲ್ವರು ಕಾರ್ಮಿಕರನ್ನ ರಕ್ಷಿಸಿದ ಅಗ್ನಿಶಾಮಕ ದಳ

  • ಇನ್ಮುಂದೆ ಬೆಳಗಿನ ಜಾವ ಮೈಕ್‌ ಮೂಲಕ ಆಜಾನ್‌ ಕೂಗದಿರಲು ಮುಸ್ಲಿಂ ಧರ್ಮ ಗುರುಗಳು ನಿರ್ಧಾರ

    ಇನ್ಮುಂದೆ ಬೆಳಗಿನ ಜಾವ ಮೈಕ್‌ ಮೂಲಕ ಆಜಾನ್‌ ಕೂಗದಿರಲು ಮುಸ್ಲಿಂ ಧರ್ಮ ಗುರುಗಳು ನಿರ್ಧಾರ

    ಬೆಂಗಳೂರು: ಧಾರ್ಮಿಕ ಕೇಂದ್ರಗಳಲ್ಲಿ ಲೌಡ್‌ಸ್ಪೀಕರ್‌ ಬಳಕೆಗೆ ಸಂಬಂಧಿಸಿದಂತೆ ಎದ್ದಿರುವ ವಿವಾದವು ನಂತರದ ದಿನಗಳಲ್ಲಿ ಧರ್ಮ ಸಂಘರ್ಷಕ್ಕೆ ಕಾರಣವಾಯಿತು. ಸಂಘರ್ಷ ಬಿಟ್ಟು ಸೌಹಾರ್ದತೆ ಕಾಪಾಡಿಕೊಳ್ಳಬೇಕು ಎಂಬ ನಿಟ್ಟಿನಲ್ಲಿ ಮುಸ್ಲಿಂ ಧರ್ಮ ಗುರುಗಳು ಉತ್ತಮ ನಿರ್ಧಾರವೊಂದಕ್ಕೆ ಬಂದಿದ್ದಾರೆ.

    ಹೌದು, ಇನ್ಮುಂದೆ ಬೆಳಗಿನ ಜಾವ ಮೈಕ್‌ ಮೂಲಕ ಆಜಾನ್‌ ಕೂಗದಿರಲು ಮುಸ್ಲಿಂ ಧರ್ಮ ಗುರುಗಳು ನಿರ್ಧಾರ ಕೈಗೊಂಡಿದ್ದಾರೆ. ಶರಿಯತ್ ಎ ಹಿಂದ್ ಸಂಘಟನೆಯ ಅಡಿಯಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ. ಸಭೆಯಲ್ಲಿ ಶಾಸಕ ಜಮೀರ್‌ ಅಹ್ಮದ್‌, ಹ್ಯಾರಿಸ್‌ ವಕ್ಫ್‌ ಬೋರ್ಡ್‌ ಅಧ್ಯಕ್ಷ ಶಫಿ ಸಅದಿ ಉಪಸ್ಥಿತರಿದ್ದರು. ಇದನ್ನೂ ಓದಿ: ಶ್ರೀರಂಗಪಟ್ಟಣದ ಜಾಮಿಯಾ ಮಸೀದಿ ಹಿಂದೂಗಳಿಗೆ ಬಿಟ್ಟು ಕೊಡುವಂತೆ ಆಗ್ರಹ

    loudspeakers

    ಮೈಕ್‌ ಮೂಲಕ ಆಜಾನ್‌ ಕೂಗುವುದಕ್ಕೆ ಹಿಂದೂಪರ ಸಂಘಟನೆಗಳು ವಿರೋಧ ವ್ಯಕ್ತಪಡಿಸಿದ್ದರು. ಇದು ದೇಶಾದ್ಯಂತ ಭಾರಿ ಚರ್ಚೆ ಹಾಗೂ ವಿವಾದಕ್ಕೆ ಕಾರಣವಾಯಿತು. ಮಸೀದಿಗಳಲ್ಲಿ ಆಜಾನ್‌ ಕೂಗಿದರೆ, ಹಿಂದೂ ದೇವಾಲಯಗಳಲ್ಲಿ ಮಂತ್ರಘೋಷ ಮೊಳಗಿಸಲಾಗುವುದು, ಹನುಮಾನ್‌ ಚಾಲೀಸಾ ಪಠಿಸಲಾಗುವುದು ಎಂದು ಹಿಂದೂಪರ ಸಂಘಟನೆಗಳು ಘೋಷಿಸಿದ್ದವು. ಅಲ್ಲದೇ ಲೌಡ್‌ಸ್ಪೀಕರ್‌ ಬಳಕೆಗೆ ಸಂಬಂಧಿಸಿದಂತೆ ಹೈಕೋರ್ಟ್‌ ಆದೇಶ ಪಾಲನೆಗೆ ಕಟ್ಟುನಿಟ್ಟಿನ ಕ್ರಮಕೈಗೊಳ್ಳುವಂತೆ ಸರ್ಕಾರವನ್ನು ಒತ್ತಾಯಿಸಿದ್ದವು.

    ಈ ಸಂಬಂಧ ಆರಂಭದಲ್ಲಿ ಸರ್ಕಾರ ಯಾವುದೇ ಕ್ರಮಕೈಗೊಳ್ಳದೇ ಇದ್ದಾಗ, ಹಿಂದೂಪರ ಸಂಘಟನೆಗಳು ಹೋರಾಟಕ್ಕೆ ಮುಂದಾಗಿದ್ದವು. ಕೂಡಲೇ ಎಚ್ಚೆತ್ತ ಸರ್ಕಾರ, ಧಾರ್ಮಿಕ ಕೇಂದ್ರಗಳಲ್ಲಿ ನಿಯಮ ಉಲ್ಲಂಘಿಸಿ ಅನಧಿಕೃತವಾಗಿ ಲೌಡ್‌ಸ್ಪೀಕರ್‌ ಬಳಸುವವರ ವಿರುದ್ಧ ಕ್ರಮಕೈಗೊಳ್ಳಲಾಗುವುದು ಎಂದು ಎಚ್ಚರಿಸಿತು. ಇದರ ಬೆನ್ನಲ್ಲೇ ಅನೇಕ ಹಿಂದೂ ದೇವಾಲಯಗಳು, ಮಸೀದಿಗಳು ಹಾಗೂ ಚರ್ಚ್‌ಗಳಿಗೆ ನೋಟಿಸ್‌ ನೀಡಲಾಯಿತು. ಸುಪ್ರೀಂ ಕೋರ್ಟ್‌ ದೇಶದಂತೆ ಸರ್ಕಾರ ಸುತ್ತೋಲೆ ಹೊರಡಿಸಿತ್ತು. ಇದನ್ನೂ ಓದಿ: ಆರೋಪಿ ನಾಗೇಶ್ ಬಂಧಿಸಿದ ಪೊಲೀಸರಿಗೆ ಆರಗ ಜ್ಞಾನೇಂದ್ರ ಧನ್ಯವಾದ

    ಇದರಿಂದ ಎಚ್ಚೆತ್ತ ಮುಸ್ಲಿಂ ಧರ್ಮ ಗುರುಗಳು ಬೆಳಗಿನ ಜಾವ ಆಜಾನ್‌ ಕೂಗದಿರಲು ನಿರ್ಧರಿಸಿದ್ದಾರೆ. ಈ ಸಂಬಂಧ ಎಲ್ಲ ಮಸೀದಿಗಳಿಗೂ ಸೂಚನೆ ನೀಡಲಾಗುವುದು ಎಂದು ಸಭೆಯಲ್ಲಿ ಹೇಳಿದ್ದಾರೆ.

  • ಭ್ರಷ್ಟಾಚಾರದ ಮಸಿ ಬಳಿದುಕೊಂಡಿರುವ ಬಿಜೆಪಿಯವರಿಗೆ ಮುಖ ತೋರಿಸಲು ಆಗುತ್ತಿಲ್ಲ: ಡಿಕೆಶಿ

    ಭ್ರಷ್ಟಾಚಾರದ ಮಸಿ ಬಳಿದುಕೊಂಡಿರುವ ಬಿಜೆಪಿಯವರಿಗೆ ಮುಖ ತೋರಿಸಲು ಆಗುತ್ತಿಲ್ಲ: ಡಿಕೆಶಿ

    ಬೆಂಗಳೂರು: ಭ್ರಷ್ಟಾಚಾರದ ಮಸಿ ಬಳಿದುಕೊಂಡಿರುವ ಬಿಜೆಪಿಯವರಿಗೆ ಮುಖ ತೋರಿಸಲು ಆಗುತ್ತಿಲ್ಲ ಎಂದು ಬಿಜೆಪಿ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದರು.

    ಸದಾಶಿವನಗರದ ತಮ್ಮ ನಿವಾಸದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್ ಅವರು, ಆಜಾನ್ ವಿಚಾರದಲ್ಲಿ ಸುಪ್ರೀಂ ಕೋರ್ಟ್ ಈಗಾಗಲೇ ತೀರ್ಮಾನ ಮಾಡಿದೆ. ಈಗಾಗಲೇ ಪೊಲೀಸರು ಕೂಡ ನೊಟೀಸ್ ಜಾರಿ ಮಾಡಿದ್ದಾರೆ. ನಮ್ಮ ಪಕ್ಷದ ನಾಯಕರ ತಂಡ ಸಿಎಂ ಬೊಮ್ಮಾಯಿ ಅವರನ್ನು ಭೇಟಿ ಮಾಡಿ, ಮನವಿ ಸಲ್ಲಿಸಿದ್ದಾರೆ. ಈ ಬಗ್ಗೆ ಕ್ರಮ ಕೈಗೊಳ್ಳುವುದು ಮುಖ್ಯಮಂತ್ರಿಗಳ ಜವಾಬ್ದಾರಿ ಎಂದರು. ಇದನ್ನೂ ಓದಿ: ನಿದ್ರೆ ಮಾಡುತ್ತಿರುವಾಗಲೇ ಗುಂಡಿಕ್ಕಿ ಬಿಜೆಪಿ ಮುಖಂಡನ ಹತ್ಯೆ 

    ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಕಾಂಗ್ರೆಸ್ ಅಜೆಂಡಾ ಭ್ರಷ್ಟಾಚಾರ ಹಾಗೂ ಭಯೋತ್ಪಾದನೆ ಎಂಬ ಹೇಳಿಕೆ ಬಗ್ಗೆ ಉತ್ತರಿಸಿದ ಅವರು, ದಿನ ಬೆಳಗಾದರೆ ಸರ್ಕಾರದ ಅಕ್ರಮ, ಭ್ರಷ್ಟಾಚಾರಗಳು ಬೆಳಕಿಗೆ ಬರುತ್ತಿವೆ. ನಿನ್ನೆ ಪತ್ರಿಕೆಯಲ್ಲಿ ಯಾವ ಸರ್ಕಾರಿ ಹುದ್ದೆಗೆ ಎಷ್ಟೆಷ್ಟು ದರ ನಿಗದಿಯಾಗಿದೆ ಎಂದು ವರದಿಯಾಗಿದೆ. ಇಷ್ಟೊಂದು ಭ್ರಷ್ಟಾಚಾರದ ಮಸಿ ಬಳಿದುಕೊಂಡಿರುವ ಬಿಜೆಪಿಯವರಿಗೆ ಮುಖ ತೋರಿಸಲು ಆಗುತ್ತಿಲ್ಲ. ಜನ ಹಾದಿ-ಬೀದಿಯಲ್ಲಿ ಉಗಿಯುತ್ತಿದ್ದು, ಮೊದಲು ಅವರು ತಮ್ಮ ಮುಖವನ್ನು ತೊಳೆದುಕೊಳ್ಳಲಿ. ನಂತರ ನಮ್ಮ ಬಗ್ಗೆ ಮಾತನಾಡಲಿ ಎಂದು ತಿರುಗೇಟು ಕೊಟ್ಟರು.

    ಉದ್ದೇಶಪೂರ್ವಕವಾಗಿ ಈ ವಿಚಾರವನ್ನು ಕೆದಕಿ, ಜಗಳ ಹಚ್ಚುವ ಕೆಲಸ ಮಾಡುತ್ತಿದ್ದಾರೆ. ಇದು ಸರ್ಕಾರದ ವೈಫಲ್ಯ. ಇದನ್ನು ನಿಯಂತ್ರಿಸದಿದ್ರೆ ರಾಜ್ಯದಲ್ಲಿ ಅಶಾಂತಿ, ಕೋಮು ಸಂಘರ್ಷ ಹೆಚ್ಚುತ್ತದೆ. ಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರು ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ಕೆಲಸ ಮಾಡಬೇಕು ಎಂದು ಕರೆ ಕೊಟ್ಟರು.

    ಬೆಂಗಳೂರಿನಲ್ಲಿ ಮತ್ತೊಂದು ಕೋಮುಗಲಭೆಗೆ ಸಿದ್ಧತೆ ನಡೆದಿತ್ತು ಎಂಬ ಬಗ್ಗೆ ಪ್ರತಿಕ್ರಿಯಿಸಿದ ಅವರು, ಈ ವಿಚಾರದಲ್ಲಿ ಕ್ರಮ ಕೈಗೊಳ್ಳುವುದು ಪೊಲೀಸರ ಕರ್ತವ್ಯ. ಈ ಬಗ್ಗೆ ನನಗೆ ಹೆಚ್ಚಿನ ಮಾಹಿತಿ ಇಲ್ಲ. ಮಾಹಿತಿ ಪಡೆದ ನಂತರ ಮಾತನಾಡುತ್ತೇನೆ ಎಂದರು. ಇದನ್ನೂ ಓದಿ:  ಕೆಲವೊಂದು ಕೋಮುವಾದಿ ಸಂಘಟನೆಗಳು ನಿರಂತರವಾಗಿ ಸಮಾಜ ಒಡೆಯುವ ಕೆಲಸ ಮಾಡುತ್ತಿವೆ: ಸಲೀಂ 

    ಕಾಂಗ್ರೆಸ್ ಪಕ್ಷದಲ್ಲಿ ಡಿ.ಕೆ.ಶಿವಕುಮಾರ್ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಅವರ ನಡುವೆ ಹೊಂದಾಣಿಕೆ ಇಲ್ಲ ಅಂದ ಕಟೀಲ್, ಅವರ ಪಕ್ಷದಲ್ಲಿ ಆಂತರಿಕ ಕಚ್ಛಾಟ, ಮಂತ್ರಿ ಬದಲಾವಣೆ, ನಾಯಕತ್ವ ಬದಲಾವಣೆ ಸೇರಿದಂತೆ ಅನೇಕ ಹುಳುಕುಗಳಿವೆ. ಅವರು ಮೊದಲು ತಮ್ಮ ಮನೆಯ ಸಮಸ್ಯೆಗಳನ್ನು ನೋಡಿಕೊಳ್ಳಲಿ. ನಂತರ ನಮ್ಮ ಬಗ್ಗೆ ಮಾತನಾಡಲಿ ಎಂದು ಟಾಂಗ್ ಕೊಟ್ಟರು.

  • ದೇವಸ್ಥಾನದ ಮೈಕ್‍ನಲ್ಲಿ ಮೊಳಗಿದ ರಾಮಜಪ, ಶಿವನಜಪ

    ದೇವಸ್ಥಾನದ ಮೈಕ್‍ನಲ್ಲಿ ಮೊಳಗಿದ ರಾಮಜಪ, ಶಿವನಜಪ

    ಹಾಸನ: ಆಜಾನ್ ವಿರುದ್ಧ ಶ್ರೀರಾಮಸೇನೆ ಸಂಘಟನೆ ವತಿಯಿಂದ ಹಾಸನದ ದೇವಸ್ಥಾನಗಳಲ್ಲಿ ರಾಮಜಪ, ಶಿವನಜಪ ಹಮ್ಮಿಕೊಳ್ಳಲಾಗಿದೆ.

    ಹಾಸನದ ಸಂಗಮೇಶ್ವರ ಬಡಾವಣೆಯಲ್ಲಿರುವ, ಸಂಗಮೇಶ್ವರ ದೇವಾಲಯದಲ್ಲಿ ಇಂದಿನಿಂದ ಮೈಕ್ ಮೂಲಕ ದೇವರ ಜಪ ಮಾಡುವುದಕ್ಕೆ ಚಾಲನೆ ನೀಡಲಾಯಿತು. ಶ್ರೀರಾಮಸೇನೆ ಸಂಘಟನೆಯ ಜಿಲ್ಲಾಧ್ಯಕ್ಷ ಜಾನಕೆರೆ ಹೇಮಂತ್ ಮತ್ತು ಪ್ರಧಾನ ಕಾರ್ಯದರ್ಶಿ ಹೇಮಂತ್ ಬೇಲೂರು ಬೆಳಗ್ಗೆ ಐದು ಗಂಟೆಗೆ ಮೈಕ್ ಮೂಲಕ ರಾಮಜಪ, ಶಿವನಜಪ ಆರಂಭಿಸಿದರು. ಇದನ್ನೂ ಓದಿ:  500ಕ್ಕೂ ಹೆಚ್ಚು ಮಸೀದಿಗಳು ಸೇರಿ ಸೂಕ್ಷ್ಮ ಪ್ರದೇಶದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್‌

    ಇನ್ನು ಮುಂದೆ ಪ್ರತಿದಿನ ದೇವಾಲಯದಲ್ಲಿ ಸುಪ್ರಭಾತ, ಭಜನೆ, ರಾಮಜಪವನ್ನು ಮೈಕ್‍ನಲ್ಲಿ ಹಾಕಲಾಗುವುದು ಎಂದು ತಿಳಿಸಿದರು. ನಾವು ಮೈಕ್ ಮೂಲಕ ಸುಪ್ರಭಾತ, ಭಜನೆ, ಜಪ ಮಾಡಬಾರದು ಎಂದರೆ ಬೇರೆ ಧರ್ಮದವರಿಗೂ ಅದಕ್ಕೆ ಅವಕಾಶ ಮಾಡಿಕೊಡಬಾರದು ಎಂದು ಆಗ್ರಹಿಸಿದರು.

  • ಸರ್ಕಾರದ ವಿರುದ್ಧ ಕಾನೂನಾತ್ಮಕ ಹೋರಾಟ: ಪ್ರಮೋದ್ ಮುತಾಲಿಕ್

    ಸರ್ಕಾರದ ವಿರುದ್ಧ ಕಾನೂನಾತ್ಮಕ ಹೋರಾಟ: ಪ್ರಮೋದ್ ಮುತಾಲಿಕ್

    ಮೈಸೂರು: ಮೈಕ್ ಹಾಕುವ ದೇವಸ್ಥಾನಗಳಿಗೆ ನೋಟಿಸ್ ನೀಡುತ್ತಿದ್ದಾರೆ. ಆದರೆ ಮಸೀದಿಗೆ ಯಾಕೆ ಕೊಡಲ್ಲ. ಈ ರೀತಿ ಮಾಡುತ್ತಿರುವ ಸರ್ಕಾರದ ವಿರುದ್ಧ ಕಾನೂನಾತ್ಮಕ ಹೋರಾಟ ಮಾಡುತ್ತೇವೆ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕಿಡಿಕಾರಿದರು.

    ಸುಪ್ರಭಾತಕ್ಕೆ ಚಾಲನೆ ನೀಡಿ ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ ಅವರು, ಮಸೀದಿ ಮೇಲಿನ ಮೈಕ್ ತೆಗೆಸಲು ಸರ್ಕಾರಕ್ಕೆ ಗಡುವು ನೀಡಿದ್ದೆವು. ಆದರೆ ಸರ್ಕಾರ ಈ ಬಗ್ಗೆ ಕ್ರಮ ಜರುಗಿಸಲಿಲ್ಲ. ಹೀಗಾಗಿ ದೇವಾಲಯಗಳಲ್ಲಿ ಸುಪ್ರಭಾತಕ್ಕೆ ಚಾಲನೆ ನೀಡಿದ್ದೇವೆ ಎಂದು ತಿಳಿಸಿದರು.

    loud speaker

    ಬಿಜೆಪಿ ಸರ್ಕಾರಕ್ಕೆ ಧಿಕ್ಕಾರ ಇರಲಿ. ಮುಸ್ಲಿಮರ ಸೊಕ್ಕು, ಹಠದಿಂದ ಜನರಿಗೆ ತೊಂದರೆ ಆಗುತ್ತಿದೆ. ಇದು ತಾಲಿಬಾನ್ ಅಲ್ಲ, ಪಾಕಿಸ್ತಾನವಲ್ಲ. ಈ ರೀತಿ ಹಠ ಸರಿಯಲ್ಲ. ಸಂಘರ್ಷಕ್ಕೆ ನೀವೇ ಅವಕಾಶ ಮಾಡಿ ಕೊಡುತ್ತಿದ್ದೀರಿ. ಈ ಆಂದೋಲನ ಹತ್ತಿಕ್ಕುವ ಕೆಲಸವನ್ನು ಸರ್ಕಾರ ಮಾಡುತ್ತಿದೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಹಳೇ ಹುಬ್ಬಳ್ಳಿಯ ದಿಡ್ಡಿ ಹನುಮಂತ ದೇವಸ್ಥಾನದಲ್ಲಿ ಮೊಳಗಿದ ಸುಪ್ರಭಾತ

    ಅಜಾನ್, ಪ್ರಾರ್ಥನೆಗೆ ವಿರುದ್ಧವಿಲ್ಲ. ಆದರೆ ಶಬ್ದಕ್ಕೆ ವಿರೋಧವಿದೆ. ಇದರಿಂದಾಗಿ ಮುಂಜಾನೆಯಿಂದಲೇ ಪ್ರಾರ್ಥನೆ ಮಾಡಿದ್ದೇವೆ. ಇದು ಹೀಗೆ ಮುಂದುವರಿದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸುತ್ತೇವೆ. ಇದನ್ನೂ ಓದಿ: ಪ್ರಸಿದ್ಧ ಸಿದ್ಧಾರೂಢ ಮಠದಲ್ಲಿ ಇಂದಿನ ವಿಶೇಷ ಪೂಜೆಯ ಜೊತೆಗೆ ಮಂತ್ರಘೋಷ

  • ಸುಪ್ರಭಾತ ಅಭಿಯಾನ- ಯಾರೂ ಕಾನೂನನ್ನು ಕೈಗೆತ್ತಿಕೊಳ್ಳಬಾರದು: ಪ್ರಹ್ಲಾದ್ ಜೋಶಿ

    ಸುಪ್ರಭಾತ ಅಭಿಯಾನ- ಯಾರೂ ಕಾನೂನನ್ನು ಕೈಗೆತ್ತಿಕೊಳ್ಳಬಾರದು: ಪ್ರಹ್ಲಾದ್ ಜೋಶಿ

    ಹುಬ್ಬಳ್ಳಿ: ಅಜಾನ್ ವಿರುದ್ಧ ನಾಳೆ ಭಜನೆ ಮತ್ತು ಸುಪ್ರಭಾತ ಅಭಿಯಾನದ ಹಿನ್ನೆಲೆಯಲ್ಲಿ ಸರ್ಕಾರ ಸುಮ್ಮನಿದೆ ಎಂದು ಭಾವಿಸಿ ಯಾರೂ ಕಾನೂನನ್ನು ಕೈಗೆತ್ತಿಕೊಳ್ಳಬಾರದು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದರು.

    ಶರೇವಾಡ ಗ್ರಾಮದಲ್ಲಿ ಮಾತನಾಡಿದ ಅವರು, ಹಿಂದೂ ಸಂಘಟನೆಗಳು ಸರ್ಕಾರಕ್ಕೆ ಗಡುವು ಕೊಟ್ಟಿದ್ದು ಗೊತ್ತಿಲ್ಲ. ಕಾನೂನು ಪ್ರಕಾರ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳುತ್ತದೆ. ಆದರೆ ಯಾರೂ ಕಾನೂನು ಕೈಗೆತ್ತಿಕೊಳ್ಳಬಾರದು ಎಂದು ಹೇಳಿದರು. ಇದನ್ನೂ ಓದಿ: ಬುರ್ಕಾ ಹಾಕ್ಕೊಂಡು ಓಡಾಡಿದ್ರೂ ಬಿಜೆಪಿಗೆ ಒಂದು ವೋಟು ಬರಲ್ಲ: ಮುತಾಲಿಕ್

    loud speaker

    ಪಿಎಸ್‍ಐ ಅಕ್ರಮ ನೇಮಕಾತಿಯಲ್ಲಿ ಕಿಂಗ್‍ಪಿನ್ ಹೆಸರು ಬಹಿರಂಗ ಪಡಿಸಿದರೆ ಸರ್ಕಾರ ಉರುಳುತ್ತದೆ ಎನ್ನುವ ಹೆಚ್‍ಡಿಕೆ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಸರ್ಕಾರವನ್ನು ಉರುಳಿಸೋದು, ಬಿಡುವುದು ಅವರ ಜವಾಬ್ದಾರಿಯಲ್ಲ ಎಂದು ವಾಗ್ದಾಳಿ ನಡೆಸಿದರು.

    ಅಕ್ರಮ ನೇಮಕಾತಿಯ ಬಗ್ಗೆ ಯಾರ ಹತ್ತಿರ ಮಾಹಿತಿ ಇದೆ ಅದನ್ನು ಅವರು ಕೊಡಲಿ. ಸಿಐಡಿ ಈ ಕುರಿತು ಮುಂದಿನ ಕ್ರಮ ಕೈಗೊಳ್ಳುತ್ತದೆ. ಈಗಾಗಲೇ ಪಿಎಸ್‍ಐ ಅಕ್ರಮ ನೇಮಕಾತಿಯಲ್ಲಿ ಬ್ಲಾಕ್ ಕಾಂಗ್ರೆಸ್ ಕಮಿಟಿ ಅಧ್ಯಕ್ಷನನ್ನೇ ಬಂಧಿಸಲಾಗಿದೆ ಎಂದರು. ಇದನ್ನೂ ಓದಿ: ಆಸ್ಪತ್ರೆಗಳಲ್ಲಿ ಅಗ್ನಿ ಸುರಕ್ಷತಾ ಕ್ರಮ ಅಳವಡಿಸುವುದು ಕಡ್ಡಾಯ: ಸುಧಾಕರ್

  • ಮೇ 9ಕ್ಕೆ ದೇವಸ್ಥಾನಗಳಲ್ಲಿ ಹನುಮಾನ್ ಚಾಲೀಸಾ

    ಮೇ 9ಕ್ಕೆ ದೇವಸ್ಥಾನಗಳಲ್ಲಿ ಹನುಮಾನ್ ಚಾಲೀಸಾ

    ಬೆಂಗಳೂರು: ರಾಜ್ಯದಲ್ಲಿ ಮತ್ತೆ ಆಜಾನ್ ದಂಗಲ್ ಮತ್ತಷ್ಟು ತೀವ್ರಗೊಳ್ಳುವ ಲಕ್ಷಣ ಕಾಣ್ತಿದೆ. ಮಸೀದಿಗಳಲ್ಲಿ ಮೈಕ್ ತೆರವಿಗೆ ಶ್ರೀರಾಮಸೇನೆ ನೀಡಿದ್ದ ಗಡುವು ನಿನ್ನೆಗೆ ಮುಕ್ತಾಯವಾಗಿದೆ.

    ಮೇ 9ರಂದು ಸಾವಿರ ದೇಗುಲಗಳಲ್ಲಿ ಬೆಳಗ್ಗೆ ಐದಕ್ಕೆ ಹನುಮಾನ್ ಚಾಲೀಸಾ ಹಾಕ್ತೀವಿ. ತಾಕತ್ ಇದ್ರೆ ತಡೆಯಿರಿ ಎಂದು ಸರ್ಕಾರಕ್ಕೆ ಶ್ರೀರಾಮಸೇನೆ ಸವಾಲು ಹಾಕಿದೆ. ಇದಕ್ಕೆ ಪ್ರತಿಕ್ರಿಯೆ ನೀಡಿದ ಸಚಿವ ಸುನೀಲ್ ಕುಮಾರ್, ಒಂದು ಧ್ವನಿವರ್ಧಕದಿಂದ ನೂರಾರು ಜನಕ್ಕೆ ತೊಂದರೆ ಆಗಬಾರದು. ಮುಸಲ್ಮಾನ ಸಮುದಾಯ ಈ ಬಗ್ಗೆ ಮರು ಆಲೋಚನೆ ಮಾಡಬೇಕು. ಪರಿಸ್ಥಿತಿ ನೋಡಿಕೊಂಡು ಸರ್ಕಾರ ನಿರ್ಧಾರ ತೆಗೆದುಕೊಳ್ಳುತ್ತೆ ಎಂದಿದ್ದಾರೆ. ಇದನ್ನೂ ಓದಿ: ಈದ್ ಹಬ್ಬದಂದು ಆರತಿ ಮಾಡಬೇಡಿ: ರಾಜ್ ಠಾಕ್ರೆ ಮನವಿ

    ಮಾಜಿ ಮಂತ್ರಿ ಹೆಚ್ ವಿಶ್ವನಾಥ್ ಮಾತನಾಡಿ, ಮುಖ್ಯಮಂತ್ರಿಗಳೇ ನಿಮ್ಮ ಹಾರ್ಡ್‍ವೆಪನ್ ಶಾಂತಿ ಕದಡ್ತಿರೋ ಆರ್‍ಎಸ್‍ಎಸ್, ಭಜರಂಗದಳದವರ ಮೇಲೆ ಬಳಸಿ.. ಸರ್ಕಾರಕ್ಕೆ ನಿತ್ಯವೂ ಕೆಟ್ಟ ಹೆಸರು ತರ್ತಾ ಇದ್ದಾರೆ ಎಂದು ಗರಂ ಆಗಿದ್ದಾರೆ. ಅತ್ತ ರಂಜಾನ್ ಹಬ್ಬಕ್ಕೆ ಅಡ್ಡಿಯಾಗಬಾರದು ಎಂಬ ಕಾರಣಕ್ಕೆ ಅಕ್ಷಯ ತೃತೀಯವಾದ ನಾಳೆ ಮಹಾರಾಷ್ಟ್ರದಲ್ಲಿ ಮಹಾ ಆರತಿ ನಡೆಸಬಾರದು ಎಂದು ಎಂಎನ್‍ಎಸ್‍ನ ರಾಜ್ ಠಾಕ್ರೆ ಸೂಚಿಸಿದ್ದಾರೆ. ಇದ್ರ ಬದಲು ಜೂನ್ 5ರಂದು ರಂದು ಚಲೋ ಅಯೋಧ್ಯೆಗೆ ರಾಜ್ ಠಾಕ್ರೇ ಕರೆ ನೀಡಿದ್ದಾರೆ.

  • ಶಿಕ್ಷಣ ಕೇಂದ್ರವನ್ನು ಧಾರ್ಮಿಕ ಆಚರಣೆಗಳ ಸ್ಥಳವನ್ನಾಗಿ ಮಾಡುವುದು ಸರಿಯಲ್ಲ – ಸಂಜಯ್ ಸರೋಗಿ

    ಶಿಕ್ಷಣ ಕೇಂದ್ರವನ್ನು ಧಾರ್ಮಿಕ ಆಚರಣೆಗಳ ಸ್ಥಳವನ್ನಾಗಿ ಮಾಡುವುದು ಸರಿಯಲ್ಲ – ಸಂಜಯ್ ಸರೋಗಿ

    ಪಾಟ್ನಾ: ಶಿಕ್ಷಣ ಕೇಂದ್ರವನ್ನು ಧಾರ್ಮಿಕ ಆಚರಣೆಗಳ ಸ್ಥಳವನ್ನಾಗಿ ಮಾಡುವುದು ಸರಿಯಲ್ಲ ಎಂದು ಹೇಳುವ ಮೂಲಕ ಬಿಹಾರದ ಲಲಿತ್ ನಾರಾಯಣ ಮಿಥಿಲಾ ವಿಶ್ವವಿದ್ಯಾನಿಲಯದಲ್ಲಿ ಏಪ್ರಿಲ್ 26 ರಂದು ಆಯೋಜಿಸಲಾದ ಆಜಾನ್ ಮತ್ತು ಇಫ್ತಾರ್ ಕೂಟಕ್ಕೆ ಬಿಜೆಪಿ ಶಾಸಕ ಸಂಜಯ್ ಸರೋಗಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

    ಇದೊಂದು ಗಂಭೀರ ವಿಚಾರ. ಶಿಕ್ಷಣ ಸಂಸ್ಥೆಗಳನ್ನು ಧಾರ್ಮಿಕ ಸ್ಥಳಗಳನ್ನಾಗಿ ಪರಿವರ್ತಿಸುವುದನ್ನು ಸಹಿಸಲಾಗುವುದಿಲ್ಲ. ಈ ಬಗ್ಗೆ ರಾಜ್ಯಪಾಲರಿಗೆ ಪತ್ರ ಬರೆಯುತ್ತೇನೆ ಎಂದು ವಿಶ್ವವಿದ್ಯಾನಿಲಯ ಉಪಕುಲಪತಿ ಹಾಗೂ ರಿಜಿಸ್ಟ್ರಾರ್ ಮುಷ್ತಾಕ್ ಅಹ್ಮದ್ ವಿರುದ್ಧ ಸಂಜಯ್ ಸರೋಗಿ ಕಿಡಿಕಾರಿದ್ದಾರೆ. ಇದನ್ನೂ ಓದಿ: ಆ್ಯಸಿಡ್ ಎರಚಿದ ಕಿರಾತಕನಿಗೆ ಲುಕ್‍ಔಟ್ ನೊಟೀಸ್ ಜಾರಿ

    ಇದಕ್ಕೆ ಪ್ರತಿಕ್ರಿಯಿಸಿದ ಮುಷ್ತಾಕ್ ಅಹ್ಮದ್ ಅವರು, ಇಫ್ತಾರ್ ಕೂಟವನ್ನು ವಿಶ್ವವಿದ್ಯಾಲಯದ ಆಡಳಿತ ಆಯೋಜಿಸಿಲ್ಲ. ವಿಶ್ವವಿದ್ಯಾಲಯಕ್ಕೂ ಇದಕ್ಕೂ ಯಾವುದೇ ಸಂಬಂಧವಿಲ್ಲ. ಈ ಕಾರ್ಯಕ್ರಮವನ್ನು ಕೆಲವು ವಿದ್ಯಾರ್ಥಿಗಳು ಆಯೋಜಿಸಿದ್ದರು. ತಪ್ಪು ಮನಸ್ಥಿತಿ ಹೊಂದಿರುವ ಜನರು ಈ ರೀತಿಯ ಆರೋಪಗಳನ್ನು ಮಾಡುತ್ತಿದ್ದಾರೆ ಎಂದಿದ್ದಾರೆ. ಇದನ್ನೂ ಓದಿ: ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ – ಪ್ರಾಧ್ಯಾಪಕ ಅಮಾನತು

  • ಆಜಾನ್ ವಿರುದ್ಧ ಆರತಿ, ಹನುಮಾನ್ ಚಾಲೀಸಾ ಪಠಿಸಲು ಹಿಂದೂಪರ ಸಂಘಟನೆಗಳ ನಿರ್ಧಾರ

    ಆಜಾನ್ ವಿರುದ್ಧ ಆರತಿ, ಹನುಮಾನ್ ಚಾಲೀಸಾ ಪಠಿಸಲು ಹಿಂದೂಪರ ಸಂಘಟನೆಗಳ ನಿರ್ಧಾರ

    ಬೆಂಗಳೂರು: ಆಜಾನ್ ವಿಚಾರದಲ್ಲಿ ಹಿಂದೂಪರ ಸಂಘಟನೆಗಳು ಸರ್ಕಾರಕ್ಕೆ ನೀಡಿದ್ದ ಗಡುವು ಮುಕ್ತಾಯಗೊಂಡಿದೆ. ಆದರೆ ಸರ್ಕಾರದಿಂದ ಯಾವುದೇ ಕ್ರಮ ಆಗಿಲ್ಲ ಎಂದು ಬೇಸರ ವ್ಯಕ್ತಪಡಿಸಿರುವ ಹಿಂದೂಪರ ಸಂಘಟನೆಗಳು ದೇವಾಲಯಗಳಲ್ಲಿ ಆರತಿ, ಹನುಮಾನ್ ಚಾಲೀಸಾ ಪಠಿಸಲು ನಿರ್ಧರಿಸಿವೆ.

    ಈ ಕುರಿತು ಬಿಜೆಪಿ ಸರ್ಕಾರದ ವಿರುದ್ಧ ಪ್ರಮೋದ್ ಮುತಾಲಿಕ್ ಮತ್ತು ಆಂದೋಲ ಶ್ರೀ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಿಂದೂಪರ ಸಂಘಟನೆಗಳು ಆಜಾನ್ ಕೂಗುವುದನ್ನು ನಿಷೇಧಿಸಲು ಮೇ 1 ರವರೆಗೂ ಗಡುವು ನೀಡಿದ್ದವು. ಮೇ 1ರ ಒಳಗೆ ಮಸೀದಿಯ ಧ್ವನಿವರ್ಧಕ ತೆರವಿಗೆ ಶ್ರೀರಾಮಸೇನೆ ಗಡುವು ನೀಡಿತ್ತು. ಆದರೆ ಸರ್ಕಾರ ಮೇ 1 ಆದರೂ ಯಾವುದೇ ಕ್ರಮ ಜರುಗಿಸಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿವೆ.

    court order law

    ಸಾರ್ವಜನಿಕ, ವಸತಿ ಸ್ಥಳಗಳಲ್ಲಿ ಆಜಾನ್ ಕೂಗಬಾರದು ಎಂದು ಸುಪ್ರೀಂ ಕೋರ್ಟ್ ಆದೇಶ ಇದೆ. ಡೆಸಿಬಲ್ ಕಡಿಮೆ ಇಡಬೇಕು ಅಂತಾ ಸುಪ್ರೀಂ ಕೋರ್ಟ್ ಸ್ಪಷ್ಟವಾದ ಆದೇಶ ನೀಡಿದೆ. ಆದರೆ ಸರ್ಕಾರ ಮಾತ್ರ ಯಾವುದೇ ಕ್ರಮ ಜರುಗಿಸಿಲ್ಲ. ಸರ್ಕಾರಕ್ಕೆ ನೀಡಿದ್ದ ಗಡುವು ಅಂತ್ಯವಾದ ಹಿನ್ನೆಲೆ ಹಿಂದೂಪರ ಸಂಘಟನೆಗಳಿಂದ ಆಜಾನ್ ವಿರುದ್ಧ ಹೋರಾಟ ನಡೆಯಲಿದೆ ಎಂದು ಸಂಘಟನೆಗಳು ತಿಳಿಸಿವೆ.

    ರಾಜ್ಯಾದ್ಯಂತ ಮೇ 9 ನೇ ತಾರೀಖು ಮೈಕ್ ಪ್ರಾರ್ಥನೆ ತಡೆಯದಿದ್ದರೆ ಹಿಂದೂ ಸಂಘಟನೆಗಳಿಂದ ಸಂಘರ್ಷವಾಗಲಿದ್ದು, ಆಜಾನ್ ವಿರುದ್ಧ ಆರತಿ, ಹನುಮಾನ್ ಚಾಲೀಸಾ ಪಠಣ ಪಠಿಸಲಾಗುವುದು. ಹಿಂದೂ ದೇವಾಲಯಗಳ ಬಳಿ ಶ್ರೀರಾಮನ ಭಜನೆ ಮಾಡಲು ಶ್ರೀರಾಮ ಸೇನೆ ನಿರ್ಧರಿಸಿದೆ.

    ಮೇ 9 ರ ಬೆಳ್ಳಗ್ಗೆ 5 ಗಂಟೆಗೆ ದೇಗುಲ, ಮಠದಲ್ಲಿ ಭಜನೆ ನಡೆಸುವ ಪ್ಲ್ಯಾನ್ ಹಾಕಿಕೊಂಡಿದೆ. ಹಿಂದೂಪರ ಸಂಘಟನೆಗಳು ಅಂದು ರಾಜ್ಯದ ದೇವಾಲಯಗಳಲ್ಲಿ ಮೈಕ್ ಹಾಕಿ ಕೀರ್ತನೆ, ಭಜನೆ ಪಠಣೆ ಮಾಡಲಿವೆ.

  • ಸಾಮರಸ್ಯ ಬೇಕು ಅಂದ್ರೆ ಆಜಾನ್ ಸೌಂಡ್ ಕಡಿಮೆ ಮಾಡಿ: ಕೆ.ಜಿ ಬೋಪಯ್ಯ

    ಸಾಮರಸ್ಯ ಬೇಕು ಅಂದ್ರೆ ಆಜಾನ್ ಸೌಂಡ್ ಕಡಿಮೆ ಮಾಡಿ: ಕೆ.ಜಿ ಬೋಪಯ್ಯ

    ಮಡಿಕೇರಿ: ರಾಜ್ಯದಲ್ಲಿ ಸಾಮರಸ್ಯ ಬೇಕು ಅಂದ್ರೆ ಆಜಾನ್ ಸೌಂಡ್ ಕಡಿಮೆ ಮಾಡಿ ಎಂದು ಮಸೀದಿಗಳಿಗೆ ವಿರಾಜಪೇಟೆ ಶಾಸಕ ಕೆ.ಜಿ ಬೋಪಯ್ಯ ಎಚ್ಚರಿಕೆ ನೀಡಿದ್ದಾರೆ.

    ಮಡಿಕೇರಿಯಲ್ಲಿ ಮಾತಾನಾಡಿದ ಅವರು, ಈ ಹಿಂದೆಯೇ ಮಸೀದಿ ಆಗಲಿ, ಮಂದಿರ ಆಗಲಿ ಮೈಕ್ ಬಳಸದಂತೆ ಸುಪ್ರೀಂಕೋರ್ಟ್ ಹೇಳಿದೆ. ಆದರೆ ಇದುವರೆಗೆ ಆ ಕಾನೂನನ್ನು ಯಾರು ಪಾಲನೆ ಮಾಡಿಲ್ಲ. ಈಗ ಅಂತಿಮ ಸಮಯ ಅಂತ ಬಂದಿದೆ .ಹೀಗಾಗಿ ಕಾನೂನು ಮುಂದಿನ ದಿನಗಳಲ್ಲಿ ಅದರ ಕೆಲಸ ಮಾಡುತ್ತದೆ ಎಂದರು.  ಇದನ್ನೂ ಓದಿ: ಧರ್ಮ ಸಂಸತ್‍ನಲ್ಲಿ ದ್ವೇಷ ಭಾಷಣ – ದೆಹಲಿ ಪೊಲೀಸ್ ಸಲ್ಲಿಸಿದ್ದ ಅಫಿಡವಿಟ್‍ಗೆ ಸುಪ್ರೀಂ ಅಸಮಾಧಾನ

    mosque-loudspeakers

    ಈಗಾಗಲೇ ಅಜಾನ್ ಶಬ್ಧದಿಂದ ಹಾರ್ಟ್ ಪೇಷೆಂಟ್ಸ್ ಸಾಯುವಂತಾಗಿದೆ. ಬೆಳಗ್ಗೆ ಐದು ಗಂಟೆ ಆಗಿತ್ತೆಂದರೆ ಮತ್ತೆ ಮಲಗುವಂತಿಲ್ಲ ಎನ್ನುವಂತಾಗಿದೆ. ಮಸೀದಿಗಳಲ್ಲಿ ಎಷ್ಟು ಎತ್ತರಲ್ಲಿ ಮೈಕ್ ಕಟ್ಟಬೇಕು ಎಂಬ ಹಠಕ್ಕೆ ಬಿದ್ದು ಕಟ್ಟುತ್ತಿದ್ದಾರೆ. ಈಗಾಲದರೂ ಸಾಮರಸ್ಯ ಬೇಕು ಎನ್ನುವವರು ಮೈಕ್ ಸೌಂಡ್ ಕಡಿಮೆ ಮಾಡಿ ಎಂದು ಶಾಸಕ ಹೇಳಿದ್ದಾರೆ.