Tag: ಆಟೋಮೊಬೈಲ್

  • ಬೆಂಗಳೂರಿನಲ್ಲಿ ICAT ಕೇಂದ್ರ ಸ್ಥಾಪನೆ ಖಚಿತ – ಉನ್ನತ ಅಧಿಕಾರಿಗಳೊಂದಿಗೆ ಹೆಚ್‌ಡಿಕೆ ಚರ್ಚೆ

    ಬೆಂಗಳೂರಿನಲ್ಲಿ ICAT ಕೇಂದ್ರ ಸ್ಥಾಪನೆ ಖಚಿತ – ಉನ್ನತ ಅಧಿಕಾರಿಗಳೊಂದಿಗೆ ಹೆಚ್‌ಡಿಕೆ ಚರ್ಚೆ

    ಮಾನೇಸರ್ (ನವದೆಹಲಿ): ಬೆಂಗಳೂರು ನಗರದಲ್ಲಿ ಅಂತಾರಾಷ್ಟ್ರೀಯ ಆಟೋಮೋಟಿವ್ ಟೆಕ್ನಾಲಜಿ ಕೇಂದ್ರ -ಐಕ್ಯಾಟ್‌ನ 3ನೇ ಕೇಂದ್ರ ಸ್ಥಾಪನೆಯಾಗಲಿದೆ ಎಂದು ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ ಹೇಳಿದ್ದಾರೆ. ಈ ಬಗ್ಗೆ ಅವರು ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ.

    ಹರಿಯಾಣದ ಗುರುಗ್ರಾಮದಲ್ಲಿರುವ ಐಕ್ಯಾಟ್ (ICAT- The International Centre for Automotive Technology)ನ ಎರಡು ಕೇಂದ್ರಗಳಿಗೆ ಭೇಟಿ ನೀಡಿದ ಸಚಿವರು, ಮಾಹಿತಿ ಹಾಗೂ ಜೈವಿಕ ತಂತ್ರಜ್ಞಾನದ ನೆಲೆವೀಡಾದ ಬೆಂಗಳೂರಿನಲ್ಲಿ ಇದರ ಮೂರನೇ ಕೇಂದ್ರ ಸ್ಥಾಪನೆ ಮಾಡುವ ಬಗ್ಗೆ ಐಕ್ಯಾಟ್‌ನ ಉನ್ನತ ಅಧಿಕಾರಿಗಳ ಜತೆ ಚರ್ಚೆ ನಡೆಸಿದರು. ಇದನ್ನೂ ಓದಿ: ಟೆಕ್ಕಿ ಅತುಲ್‌ ಸುಭಾಷ್‌ ಮಗ ಆತನ ತಾಯಿಯ ಜೊತೆಯೇ ಇರಲಿ: ಸುಪ್ರೀಂ ಕೋರ್ಟ್‌ ಅವಕಾಶ

    ಅಲ್ಲದೇ, ದಕ್ಷಿಣದಲ್ಲಿಯೇ ಅತ್ಯಂತ ಆಯಕಟ್ಟಿನ ಹಾಗೂ ವ್ಯೂಹಾತ್ಮಕ ನಗರವೂ ಆಗಿರುವ ಬೆಂಗಳೂರಿನಲ್ಲಿ ಐಕ್ಯಾಟ್ ನ ಹೊಸ ಕೇಂದ್ರ ಬರುವುದು ಅತ್ಯಗತ್ಯವಾಗಿದೆ. ನಾವೀನ್ಯತೆ, ಆವಿಷ್ಕಾರ ಹಾಗೂ ಉದ್ಯಮಶೀಲತೆಯಲ್ಲಿ ಬೆಂಗಳೂರು ಮುಂಚೂಣಿಯಲ್ಲಿದೆ. ಅಟೋಮೊಬೈಲ್ ಕ್ಷೇತ್ರದ ಹಬ್ ಆಗಿಯೂ ಬೆಳೆಯುತ್ತಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಐಕ್ಯಾಟ್ ಕೇಂದ್ರ ಸ್ಥಾಪನೆ ಬಗ್ಗೆ ಕೇಂದ್ರದ ನಿರ್ದೇಶಕ ಸೌರಭ್ ದಲೇಲ ಅವರೊಂದಿಗೆ ಚರ್ಚಿಸಿದರು. ಬೆಂಗಳೂರಿನಲ್ಲಿ ಆದಷ್ಟು ಬೇಗ ಐಕ್ಯಾಟ್ ಕೇಂದ್ರ ಆರಂಭ ಮಾಡುವ ಬಗ್ಗೆ ಪ್ರಕ್ರಿಯೆಗಳನ್ನು ಆರಂಭ ಮಾಡುವುದಾಗಿ ಅಧಿಕಾರಿಗಳು ಸಚಿವರಿಗೆ ಸ್ಪಷ್ಟ ಭರವಸೆ ನೀಡಿದರು.

    ಬೆಂಗಳೂರಿನಲ್ಲಿ ಸ್ಥಾಪನೆ ಆಗಲಿರುವ ಈ ಕೇಂದ್ರವು ಎಲೆಕ್ಟ್ರಿಕ್ ವಾಹನ (ಇವಿ) ತಂತ್ರಜ್ಞಾನ, ಸಾಫ್ಟ್‌ವೇರ್ ನಿಯಂತ್ರಿತ ವಾಹನಗಳು (ಎಸ್‌ಡಿವಿಗಳು), ಸ್ವಾಯತ್ತ ವ್ಯವಸ್ಥೆಗಳು ಮತ್ತು ದತ್ತಾಂಶ ಸುರಕ್ಷತೆಯಲ್ಲಿ ಐಕ್ಯಾಟ್ ಕೇಂದ್ರವು ನಿರ್ಣಾಯಕವಾಗಿ ಕೆಲಸ ಮಾಡುತ್ತದೆ. ಅಲ್ಲದೆ, ಈ ಕೇಂದ್ರವು ಬೆಂಗಳೂರಿನಲ್ಲಿ ಸ್ಥಾಪನೆ ಆಗುವುದರಿಂದ ಕರ್ನಾಟಕದ ಜತೆಗೆ ಅದರ ಅಕ್ಕಪಕ್ಕದ ರಾಜ್ಯಗಳಲ್ಲಿಯೂ ಅಟೋಮೊಬೈಲ್ ಆವಿಷ್ಕಾರಕ್ಕೆ ಭಾರೀ ಪ್ರಮಾಣದ ಉತ್ತೇಜನ ದೊರೆಯಲಿದೆ ಎಂದು ಸಚಿವ ಕುಮಾರಸ್ವಾಮಿ ಅವರು ಇದೇ ಸಂದರ್ಭದಲ್ಲಿ ಹೇಳಿದರು.

    ಬೆಂಗಳೂರಿನಲ್ಲಿ ಐಕ್ಯಾಟ್ ಕೇಂದ್ರ ಸ್ಥಾಪನೆಗೆ ಕೇಂದ್ರದ ಬೃಹತ್ ಕೈಗಾರಿಕೆ ಸಚಿವಾಲಯದಿಂದ ಅಗತ್ಯವಿರುವ ಎಲ್ಲಾ ಸೌಲಭ್ಯಗಳನ್ನು ನೀಡಲಾಗುವುದು ಹಾಗೂ ಅದೇ ರೀತಿ ಕರ್ನಾಟಕ ಸರ್ಕಾರದಿಂದ ಸಿಗಬೇಕಿರುವ ಅನುಕೂಲಗಳನ್ನು ಒದಗಿಸಿಕೊಡುವ ಪ್ರಯತ್ನ ಮಾಡಲಾಗುವುದು ಎಂದು ಸಚಿವರು ಐಕ್ಯಾಟ್ ನಿರ್ದೇಶಕರಿಗೆ ಭರವಸೆ ನೀಡಿದರು.

    ಬೆಂಗಳೂರಿನಲ್ಲಿ ಐಕ್ಯಾಟ್ ನ ಮೂರನೇ ಕೇಂದ್ರ ಬಂದರೆ ಅಟೋಮೊಬೈಲ್ ಕ್ಷೇತ್ರಕ್ಕೆ ಮಾತ್ರವಷ್ಟೇ ಅಲ್ಲದೇ, ರಕ್ಷಣೆ ಮತ್ತು ರೇಲ್ವೆ ಕ್ಷೇತ್ರಗಳಿಗೂ ಹೆಚ್ಚು ಉಪಯೋಗ ಆಗುತ್ತದೆ. ಹೊಸ ಅವಕಾಶದ ಬಾಗಿಲುಗಳನ್ನು ತೆರೆಯುತ್ತದೆ. ಅಟೋಮೊಬೈಲ್ ತಂತ್ರಜ್ಞಾನದ ಅಭಿವೃದ್ಧಿಗೆ ಸಹಕಾರಿ ಆಗಲಿದೆ ಎಂದು ಸಚಿವರು ಹೇಳಿದರು. ಇದನ್ನೂ ಓದಿ: ವೈರಲ್ ಆಗಿದ್ದ ಸುಂದರ ಕಣ್ಣಿನ ಮೊನಾಲಿಸಾ ಕುಂಭಮೇಳದಿಂದ ಹೊರನಡೆದಿದ್ಯಾಕೆ?

    ಐಕ್ಯಾಟ್ 3ನೇ ಕೇಂದ್ರದ ವೈಶಿಷ್ಟ್ಯಗಳು?
    * ಐಕ್ಯಾಟ್ 3ನೇ ಕೇಂದ್ರ ಕೇವಲ ಒಂದು ತಂತ್ರಜ್ಞಾನ ಆಧಾರಿತ ಕೇಂದ್ರವಷ್ಟೇ ಆಗಿರದೇ, ಒಟ್ಟಾರೆ ಆರ್ಥಿಕತೆ ಮೇಲೆ ಪ್ರತಿಕೂಲಕರ ಪ್ರಭಾವ ಬೀರುತ್ತದೆ.
    * ಸುಧಾರಿತ ಎಲೆಕ್ಟ್ರಿಕ್ ತಂತ್ರಜ್ಞಾನ ಅಭಿವೃದ್ಧಿ ಮತ್ತು ಮಾಪನಾಂಕ ನಿರ್ಣಯದ ಪ್ರಯೋಗಾಲಯಗಳನ್ನು ಹೊಂದಿರುತ್ತದೆ.
    * ಎಲೆಕ್ಟ್ರಾನಿಕ್ ನಿಯಂತ್ರಿತ ವ್ಯವಸ್ಥೆ (ECU) ಹಾಗೂ ಸೆನ್ಸಾರ್ ತಂತ್ರಜ್ಞಾನ ಅಭಿವೃದ್ಧಿ ವ್ಯವಸ್ಥೆ ಹೊಂದಿರುತ್ತದೆ.
    * ಸೈಬರ್ ಸುರಕ್ಷತೆ ಲ್ಯಾಬ್‌ಗಳು ಮತ್ತು ಅತ್ಯಾಧುನಿಕ ಚಾಲನಾ ನೆರವು ವ್ಯವಸ್ಥೆ (ADAS) ಸಂಶೋಧನೆ ವ್ಯವಸ್ಥೆ ಹೊಂದಿರುತ್ತದೆ.
    * ಸಂಪರ್ಕಿತ ಮತ್ತು ಸ್ವಾಯತ್ತ ಇಲ್ಲವೇ ಏಕೀಕೃತ ನಿಯಂತ್ರಣ ವ್ಯವಸ್ಥೆಯುಳ್ಳ ವಾಹನ ತಂತ್ರಜ್ಞಾನಗಳಿಗೆ ಸೌಲಭ್ಯಗಳನ್ನು ಹೊಂದಿರುತ್ತದೆ.
    * ಸಾಫ್ಟ್‌ವೇರ್ ಆಧಾರಿತ ಅಥವಾ ನಿಯಂತ್ರಿತ ವಾಹನಗಳ (SDVs) ಸಾಫ್ಟ್‌ವೇರ್ ಪರೀಕ್ಷೆ ಮತ್ತು ಅಭಿವೃದ್ಧಿಯನ್ನು ಮಾಡುತ್ತದೆ.
    * ಮಹತ್ವದ್ದಾದ ಆಟೋಮೋಟಿವ್ ದತ್ತಾಂಶವನ್ನು ಸುರಕ್ಷಿತವಾಗಿ ಕಾಪಾಡುವ ವ್ಯವಸ್ಥೆಯನ್ನು ಹೊಂದಿರುತ್ತದೆ.

    ಸಚಿವರ ಕನಸು ನನಸು:
    ಪ್ರಧಾನಿಗಳ ಆತ್ಮನಿರ್ಭರ್ ಭಾರತ್ ಹಾಗೂ ಮೆಕ್ ಇನ್‌ ಇಂಡಿಯಾ ಮೂಲಕ ವಿಕಸಿತ ಭಾರತದ ಕನಸು ಸಾಕಾರಕ್ಕೆ ಐಕ್ಯಾಟ್ ನ ಎರಡು ಕೇಂದ್ರಗಳ ಕೊಡುಗೆ ದೊಡ್ಡದು. ಅದೇ ರೀತಿ ಬೆಂಗಳೂರಿನಲ್ಲಿ ಮೂರನೇ ಅತಿದೊಡ್ಡ ಕೇಂದ್ರ ಸ್ಥಾಪನೆಯಾದರೆ ರಾಜ್ಯಕ್ಕೆ ಹೆಚ್ಚು ಅನುಕೂಲ ಆಗುವುದು ಮಾತ್ರವಲ್ಲದೇ, ದಕ್ಷಿಣದ ರಾಜ್ಯಗಳಲ್ಲಿ ಆಟೋಮೊಟೀವ್ ತಂತ್ರಜ್ಞಾನದ ಬೃಹತ್ ಕ್ರಾಂತಿಯೇ ಆಗಲಿದೆ ಎಂದು ಸಚಿವರು ವಿಶ್ವಾಸ ವ್ಯಕ್ತಪಡಿಸಿದರು.

    ಸೋಮವಾರ ಐಕ್ಯಾಟ್ ಕೇಂದ್ರದಲ್ಲಿನ ಚಟುವಟಿಕೆಗಳ ಬಗ್ಗೆ ಹೆಚ್‌ಡಿಕೆ ಸಂಪೂರ್ಣ ಮಾಹಿತಿ ಪಡೆದುಕೊಂಡರು. ಆ ನಂತರ ಇಡೀ ಕೇಂದ್ರದ ಪ್ರಯೋಗಾಲಯಗಳು, ಅಪಘಾತ ಪರೀಕ್ಷೆ ಪ್ರಯೋಗಾಲಯಗಳು, ಪ್ರತಿಧ್ವನಿ ಅಧ್ಯಯನ ಕೇಂದ್ರಗಳು ಹಾಗೂ ಇಂಧನ ಹರಿವಿನ ಪರೀಕ್ಷಾ ಕಾರ್ಯವಿಧಾನಗಳನ್ನು ಸಚಿವರು ಪರಿಶೀಲನೆ ವೀಕ್ಷಿಸಿದರು.

    ಈ ಭೇಟಿಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಕೇಂದ್ರ ಸಚಿವರು, ಭಾರತದ ವಾಹನಗಳ ಉತ್ಕೃಷ್ಟತೆಗೆ ಐಕ್ಯಾಟ್ ಕೇಂದ್ರ ಅತಿದೊಡ್ಡ ಕೊಡುಗೆ ನೀಡುತ್ತಿದೆ. ಆವಿಷ್ಕಾರ, ನಾವೀನ್ಯತೆ ಕ್ಷೇತ್ರಗಳಿಗೆ ಇದು ಹೆಚ್ಚು ಆದ್ಯತೆ ಕೊಡುತ್ತಿದೆ. ಇಲ್ಲಿಗೆ ಬಂದಿರುವುದು ನನಗೆ ಬಹಳ ಸಂತೋಷ ತಂದಿದೆ. ಇಲ್ಲಿನ ಸುಧಾರಿತ ಪ್ರಯೋಗಾಲಯಗಳು ಮತ್ತು ಪರೀಕ್ಷಾ ಮೂಲಸೌಕರ್ಯಗಳನ್ನು ಒಳಗೊಂಡಂತೆ ICATನ ಅತ್ಯಾಧುನಿಕ ಸೌಲಭ್ಯಗಳು ಆಟೋಮೋಟಿವ್ ನಾವೀನ್ಯತೆಯಲ್ಲಿ ಭಾರತದ ಸಾಮರ್ಥ್ಯಗಳಿಗೆ ಸಾಕ್ಷಿಯಾಗಿವೆ ಎಂದು ಸಚಿವರು ಹೇಳಿದರು. ಇದೇ ವೇಳೆ ಸಚಿವರು ಅತ್ಯಾಧುನಿಕ ಐಟಿ ಆಟೋಮ್ಯಾಟಿವ್ ಕೇಂದ್ರಕ್ಕೆ ಅಡಿಗಲ್ಲು ಹಾಕಿದರು.

  • ಭಾರತೀಯ ಆಟೋ ಕ್ಷೇತ್ರಕ್ಕೆ ಹಸಿರು ಬಲ – ಕೇಂದ್ರದ ಒತ್ತಾಸೆಯಿಂದ ಇವಿ ವಾಹನ ಮಾರಾಟ ಹೆಚ್ಚಳ: ಹೆಚ್‌ಡಿಕೆ

    ಭಾರತೀಯ ಆಟೋ ಕ್ಷೇತ್ರಕ್ಕೆ ಹಸಿರು ಬಲ – ಕೇಂದ್ರದ ಒತ್ತಾಸೆಯಿಂದ ಇವಿ ವಾಹನ ಮಾರಾಟ ಹೆಚ್ಚಳ: ಹೆಚ್‌ಡಿಕೆ

    ನವದೆಹಲಿ: ಭಾರತೀಯ ಆಟೋ ಮೊಬೈಲ್ (Indian Automobile) ಕ್ಷೇತ್ರವು ಪರಿಸರ ಸ್ನೇಹಿ ಹೆಜ್ಜೆಗಳ ಮೂಲಕ ಸುರಕ್ಷಿತ, ದಕ್ಷತೆ ಹಾಗೂ ಕ್ಷಮತೆಯ ಭವಿಷ್ಯಕ್ಕೆ ನಾಂದಿ ಹಾಡಿದ್ದು, ಮುಂಬರುವ ದಿನಗಳಲ್ಲಿ ದೇಶೀಯ ವಾಹನ ಕ್ಷೇತ್ರ ಅದ್ಭುತಗಳಿಗೆ ಸಾಕ್ಷಿಯಾಗಲಿದೆ ಎಂದು ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಹೆಚ್.ಡಿ ಕುಮಾರಸ್ವಾಮಿ (HD Kumaraswamy) ಹೇಳಿದರು.

    ನವದೆಹಲಿಯಲ್ಲಿ ಶನಿವಾರ ಭಾರತೀಯ ಆಟೋಮೊಬೈಲ್ ಡೀಲರ್ಸ್ ಫೆಡರೇಶನ್ (Federation of Automobile Dealers Associations-FADA) 13ನೇ ಆಟೋ ಶೃಂಗಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು. ಇದನ್ನೂ ಓದಿ:  BBK 11: ಕಿಚ್ಚನ ಕೊನೆಯ ಪಂಚಾಯ್ತಿಯಲ್ಲಿ ಡಬಲ್ ಎಲಿಮಿನೇಷನ್‌ಗೆ ಬಲಿಯಾಗೋದು ಯಾರು?

    ದೇಶದಲ್ಲಿ ಹಸಿರು, ಸುರಕ್ಷಿತ ಮತ್ತು ಹೆಚ್ಚು ಪರಿಣಾಮಕಾರಿ ಭವಿಷ್ಯವನ್ನು ರೂಪಿಸುವಲ್ಲಿ ಭಾರತದ ವಾಹನ ಕ್ಷೇತ್ರದ ಪರಿವರ್ತಕ ಪಾತ್ರ ವಹಿಸುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಸದ್ಯದ ಅಗತ್ಯತೆಗಳನ್ನು ಪೂರೈಸಿಕೊಳ್ಳುತ್ತಾ ನಾಳೆಯ ಚಲನಶೀಲತೆಯನ್ನು ಬಲವಾಗಿ ರೂಪಿಸುವುದು ಅತ್ಯಗತ್ಯ. ಈ ನಿಟ್ಟಿನಲ್ಲಿ ಭಾರತೀಯ ವಾಹನ ಕ್ಷೇತ್ರ ಉತ್ತಮವಾಗಿ ಕೆಲಸ ಮಾಡುತ್ತಿದೆ ಎಂದರು.

    ಆಟೋ ಕ್ಷೇತ್ರವು ಅತ್ಯುತ್ತಮ ಬೆಳವಣಿಗೆ ದರವನ್ನು ದಾಖಲಿಸಿದೆ. 2024ರಲ್ಲಿ ಭಾರತವು 26.1 ದಶಲಕ್ಷ ವಾಹನಗಳನ್ನು ಚಿಲ್ಲರೆ ಮಾರುಕಟ್ಟೆಯಲ್ಲಿ ಮಾರಾಟ ಮಾಡಿದೆ. ವರ್ಷದಿಂದ ವರ್ಷಕ್ಕೆ ಸರಾಸರಿ ಶೇ.9ರಷ್ಟು ಬೆಳವಣಿಗೆಯನ್ನು ದಾಖಲಿಸಿದೆ ಎಂದು ಉಲ್ಲೇಖಿಸಿದರು. ಇದನ್ನೂ ಓದಿ: Champions Trophy 2025 | ಟೀಂ ಇಂಡಿಯಾ ಪ್ರಕಟ – ರೋಹಿತ್‌ ಸಾರಥಿ, 15 ತಿಂಗಳ ಬಳಿಕ ಶಮಿ ಕಂಬ್ಯಾಕ್‌

    ಜಾಗತಿಕ ಮಟ್ಟದಲ್ಲಿ ನಿರಂತರ ಅನಿಶ್ಚಿತತೆಯ ಹೊರತಾಗಿಯೂ ಭಾರತೀಯ ವಾಹನೋದ್ಯಮವು ಸುಸ್ಥಿರವಾಗಿ ಅಭಿವೃದ್ಧಿ ಹೊಂದುತ್ತಿದೆ. ಸಾಂಪ್ರದಾಯಿಕ ಮತ್ತು ಎಲೆಕ್ಟ್ರಿಕ್ ವಾಹನ ಎರಡರಲ್ಲೂ ಗಮನಾರ್ಹ ಮೈಲಿಗಲ್ಲುಗಳನ್ನು ಸಾಧಿಸುತ್ತಿದೆ. ಇದು ಅತ್ಯಂತ ಹರ್ಷದಾಯಕ ಸಂಗತಿ ಎಂದು ಅವರು ಹೇಳಿದರು. ಇದನ್ನೂ ಓದಿ: ಸತತ ಸೋಲಿನ ಬಳಿಕ ಬಿಸಿ ಮುಟ್ಟಿಸಿದ ಬಿಸಿಸಿಐ – ಟೀಂ ಇಂಡಿಯಾ ಆಟಗಾರರಿಗೆ ಮತ್ತೊಂದು ಟಫ್‌ ರೂಲ್ಸ್‌

    ಎಲೆಕ್ಟ್ರಿಕ್ ವಾಹನ ಮಾರಾಟದಲ್ಲಿ ದಾಖಲೆ:
    ದೇಶದಲ್ಲಿ ವಾಯುಮಾಲಿನ್ಯ ಶೂನ್ಯ ಮಟ್ಟಕ್ಕೆ ಇಳಿಸುವ ಎಲೆಕ್ಟ್ರಿಕ್ ವಾಹನಗಳ ಮಾರಾಟ ದೊಡ್ಡ ಪ್ರಮಾಣದಲ್ಲಿ ಆಗುತ್ತಿದೆ. 2023ರಲ್ಲಿ 10,22,994 ಎಲೆಕ್ಟ್ರಿಕ್ ವಾಹನಗಳು ಮಾರಾಟವಾಗಿದ್ದವು. 2024ರಲ್ಲಿ 14,08,245 ವಾಹನಗಳು ಮಾರಾಟ ಆಗಿದ್ದು, 5.59% ಹೆಚ್ಚಳ ಆಗಿದೆ. ಎಲೆಕ್ಟ್ರಿಕ್ ವಾಹನಗಳಿಗೆ ಉತ್ತೇಜನ ಹಾಗೂ ಪರಿಸರ ಸ್ನೇಹಿಯಾಗಿ ಕೇಂದ್ರ ಸರ್ಕಾರ ಕೈಗೊಂಡಿರುವ ಪರಿಣಾಮಕಾರಿ ಕ್ರಮಗಳಿಗೆ ಈ ಸಾಧನೆ ಸಾಕ್ಷಿಯಾಗಿದೆ ಎಂದು ಸಚಿವರು ಹೇಳಿದರು.

    ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಎಲೆಕ್ಟ್ರಿಕ್ ವಾಹನ ಕ್ಷೇತ್ರಕ್ಕೆ ದೊಡ್ಡ ಮಟ್ಟದ ಉತ್ತೇಜನ ನೀಡುತ್ತಿದೆ. ಉತ್ಪಾದನಾ ಸಂಪರ್ಕ ಉತ್ತೇಜನ (ಪಿಎಲ್‌ಐ) ಮತ್ತು ಹೈಬ್ರಿಡ್ ಮತ್ತು ಎಲೆಕ್ಟ್ರಿಕ್ ವಾಹನಗಳ ವೇಗದ ಅಳವಡಿಕೆ ಮತ್ತು ತಯಾರಿಕೆ (ಫೇಮ್-II) ಯೋಜನೆಯಂತಹ ಪ್ರಮುಖ ನೀತಿಗಳನ್ನು ಅನುಷ್ಠಾನಕ್ಕೆ ತರಲಾಗಿದೆ. ಪಿಎಲ್‌ಐ ಯೋಜನೆಯಡಿ 25,938 ಕೋಟಿ ರೂ. ಹಂಚಿಕೆ ಮಾಡಲಾಗಿದ್ದು, ಸೆಪ್ಟೆಂಬರ್ 2024ರ ವೇಳೆಗೆ 20,715 ಕೋಟಿ ರೂ. ಹೂಡಿಕೆ ಮತ್ತು 10,472 ಕೋಟಿ ರೂ.ನಷ್ಟು ಹೆಚ್ಚಿನ ಮಾರಾಟ ವಹಿವಾಟು ನಡೆದಿದೆ ಎಂದು ಅವರು ಹೇಳಿದರು.

    ಭಾರತೀಯ ಆಟೋಮೊಬೈಲ್ ಡೀಲರ್ಸ್ ಫೆಡರೇಶನ್ ಅಧ್ಯಕ್ಷ ಸಿ.ಎಸ್ ವಿಘ್ನೇಶ್ವರ್ ಸೇರಿದಂತೆ ಅನೇಕ ಪದಾಧಿಕಾರಿಗಳು ಉಪಸ್ಥಿತರಿದ್ದರು.

  • ಪರಿಸರಸ್ನೇಹಿ ಆಟೋಮೊಬೈಲ್ ಕ್ಷೇತ್ರಕ್ಕೆ ಪಿಎಂ ಇ-ಡ್ರೈವ್, ಪಿಎಲ್‌ಐ ಕೊಡುಗೆ ನಿರ್ಣಾಯಕ: ಹೆಚ್‌ಡಿಕೆ

    ಪರಿಸರಸ್ನೇಹಿ ಆಟೋಮೊಬೈಲ್ ಕ್ಷೇತ್ರಕ್ಕೆ ಪಿಎಂ ಇ-ಡ್ರೈವ್, ಪಿಎಲ್‌ಐ ಕೊಡುಗೆ ನಿರ್ಣಾಯಕ: ಹೆಚ್‌ಡಿಕೆ

    ನವದೆಹಲಿ: ಕಳೆದ ಹತ್ತು ವರ್ಷಗಳಲ್ಲಿ ಭಾರತದ ಆಟೋಮೊಬೈಲ್ (Automobile) ಕ್ಷೇತ್ರದಲ್ಲಿ ಅಭೂತಪೂರ್ವ ಕ್ರಾಂತಿ ಆಗಿದ್ದು, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ನೇತೃತ್ವದಲ್ಲಿ ಜಾರಿಗೆ ಬಂದಿರುವ ಪಿಎಂ ಇ-ಡ್ರೈವ್ ಯೋಜನೆಯಿಂದ ಮಾಲಿನ್ಯರಹಿತ ಸಾರಿಗೆ ವ್ಯವಸ್ಥೆಯ ಪರಿಣಾಮಕಾರಿ ಅನುಷ್ಠಾನ ಸಾಧ್ಯವಾಗಿದೆ ಎಂದು ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (HD Kumaraswamy) ಅವರು ಹೇಳಿದರು.

    ನವದೆಹಲಿಯ ಭಾರತ್ ಮಂಟಪದಲ್ಲಿ ಐದು ದಿನಗಳ ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್ಪೋ ಕಾರ್ಯಕ್ರಮಕ್ಕೆ ಪ್ರಧಾನಿ ಮೋದಿ ಚಾಲನೆ ನೀಡಿದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಇದನ್ನೂ ಓದಿ: ಹೊನ್ನಾವರದಲ್ಲಿ ಯಕ್ಷಗಾನದ ಚಂಡೆಯ ಪೆಟ್ಟಿಗೆ ಹೆಜ್ಜೆ ಹಾಕಲಿದ್ದಾರೆ ನಟಿ ಉಮಾಶ್ರೀ

    ವಾಯುಮಾಲಿನ್ಯ ನಿವಾರಣೆ ನಿಟ್ಟಿನಲ್ಲಿ ಅನುಷ್ಠಾನಕ್ಕೆ ತರಲಾಗಿರುವ ಹಸಿರುಪೂರಕ ಉಪಕ್ರಮಗಳಿಂದ ದೇಶೀಯ ಎಕೋ ಆಟೋಮೊಬೈಲ್ ಕ್ಷೇತ್ರಕ್ಕೆ ಹೆಚ್ಚು ಅನುಕೂಲ ಆಗಿದೆ. ಎಲೆಕ್ಟ್ರಿಕ್ ವಾಹನಗಳು (ಇವಿಗಳು), ಶುದ್ಧ ಇಂಧನ ಪರಿಹಾರಗಳು ಮತ್ತು ಅತ್ಯಾಧುನಿಕ ತಂತ್ರಜ್ಞಾನಗಳನ್ನು ಒಳಗೊಂಡಿರುವ ಪರಿಸರ ಸ್ನೇಹಿ ಸಾರಿಗೆಯಲ್ಲಿ ಭಾರತವು ನಾಗಲೋಟದಲ್ಲಿ ಅಭಿವೃದ್ಧಿ ಹೊಂದುತ್ತಿದೆ ಎಂದು ಹೇಳಿದರು. ಇದನ್ನೂ ಓದಿ: ಕೆನಡಾ ಪ್ರಧಾನಿ ಹುದ್ದೆಗೆ ಕನ್ನಡಿಗನ ನಾಮಪತ್ರ – ಭಾಷಣದ ಕೊನೆಯಲ್ಲಿ ಕನ್ನಡವೇ ಸತ್ಯ ಕನ್ನಡವೇ ನಿತ್ಯ ಎಂದ ಚಂದ್ರ ಆರ್ಯ

    ಸ್ವಚ್ಛ ಭಾರತ್ ಅಭಿಯಾನವೂ ಸೇರಿದಂತೆ ಪ್ರಧಾನಮಂತ್ರಿಗಳ ಪರಿಸರ ಸ್ನೇಹಿ ನೀತಿಗಳು ಭಾರತದ ಹಸಿರು ಆಟೋಮೊಬೈಲ್ ಭವಿಷ್ಯಕ್ಕೆ ಖಾತರಿಯಾಗಿವೆ. ಪಿಎಂ ಇ-ಡ್ರೈವ್ ಯೋಜನೆಯಿಂದ ಈ ಕ್ಷೇತ್ರವು ಪರಿಣಾಮಕಾರಿಯಾಗಿ ವಾಯುಮಾಲಿನ್ಯ ಹೊರಸೂಸುವಿಕೆಯನ್ನು ಕಡಿಮೆ ಮಾಡುತ್ತಿದೆ ಎಂದು ತಿಳಿಸಿದರು.ಇದನ್ನೂ ಓದಿ: ಆನ್‌ಲೈನ್ ಗೇಮ್‌ನಲ್ಲಿ 20 ಸಾವಿರ ರೂ. ನಷ್ಟ – ಬುದ್ಧಿ ಹೇಳಿದ್ದಕ್ಕೆ ಯುವಕ ಆತ್ಮಹತ್ಯೆ

    ಹಸಿರು ಆಟೋಮೊಬೈಲ್ ಕ್ಷೇತ್ರದ ಪ್ರಯೋಗಶೀಲತೆ ಹಾಗೂ ಸುಸ್ಥಿರ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಪಿಎಂ ಇ-ಡ್ರೈವ್ ಯೋಜನೆ ಹಾಗೂ ಉತ್ಪಾದನಾ ಸಂಪರ್ಕ ಸೌಲಭ್ಯದಿಂದ (ಪಿಎಲ್‌ಐ) ಹೆಚ್ಚು ಅನುಕೂಲ ಆಗಿದೆ ಎಂದು ಒತ್ತಿ ಹೇಳಿದರು. ಇದನ್ನೂ ಓದಿ: ಓಂ ಶಕ್ತಿ ಮಾಲೆ ಧರಿಸಿದ್ದ ಪ್ರಿಯತಮೆಗೆ ಪೂಜಾ ಸಾಮಾಗ್ರಿ ಕೊಡಿಸಲು ಕಳ್ಳತನ

    ಕೇಂದ್ರದ ಹೆದ್ದಾರಿ ಮತ್ತು ಭೂಸಾರಿಗೆ ಸಚಿವರಾದ ನಿತಿನ್ ಗಡ್ಕರಿ, ವಸತಿ ಮತ್ತು ನಗರಾಭಿವೃದ್ಧಿ ಸಚಿವ ಮನೋಹರ್ ಲಾಲ್ ಖಟ್ಟರ್, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ಖಾತೆ ಸಚಿವರಾದ ಜಿತನ್ ರಾಮ್ ಮಾಂಝ, ವಾಣಿಜ್ಯ ಮತ್ತು ಕೈಗಾರಿಕೆ ಸಚಿವ ಪೀಯೂಷ್ ಗೋಯಲ್ ಹಾಗೂ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಖಾತೆ ಸಚಿವ ಹರ್ದೀಪ್ ಸಿಂಗ್ ಪುರಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಇದನ್ನೂ ಓದಿ: ಸಿಐಡಿ ತನಿಖೆಯಲ್ಲಿ ನನಗೆ ವಿಶ್ವಾಸ ಇಲ್ಲ: ಸಿ.ಟಿ ರವಿ

    ಸುಧಾರಿತ ಆಟೋಮೋಟಿವ್ ಟೆಕ್ನಾಲಜಿ ಉತ್ಪನ್ನಗಳನ್ನು ಉತ್ತೇಜಿಸುವ ಸಲುವಾಗಿ ಕೇಂದ್ರ ಸರ್ಕಾರ ಪಿಎಲ್‌ಐ ಯೋಜನೆಯನ್ನು ಅನುಷ್ಠಾನಕ್ಕೆ ತಂದಿದೆ. ಪಿಎಂ ಇ-ಡ್ರೈವ್ ಯೋಜನೆಯಿಂದ ಎಲೆಕ್ಟ್ರಿಕ್ ಅಂಬುಲೆನ್ಸ್ಗಳು, ಬಸ್‌ಗಳು, ಟ್ರಕ್‌ಗಳು ಮತ್ತು ಮೂಲಸೌಕರ್ಯಗಳನ್ನು ಉತ್ತೇಜಿಸುವ ಉಪಕ್ರಮಗಳನ್ನು ಕೈಗೊಳ್ಳಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಮಾರ್ಗದರ್ಶನದಿಂದ ಇದೆಲ್ಲಾ ಸಾಧ್ಯವಾಗಿದೆ ಎಂದರು. ಇದನ್ನೂ ಓದಿ: ಕುಂಭಮೇಳದಲ್ಲಿ 7 ಅಡಿ ಎತ್ತರದ ರಷ್ಯಾದ ಬಾಬಾ – ‘ಪರಶುರಾಮನ ಅವತಾರ’ ಎಂದ ಭಕ್ತರು

    ಭಾರತದ ಆಟೋಮೊಬೈಲ್ ಉದ್ಯಮವು ಈಗಾಗಲೇ ಜಾಗತಿಕವಾಗಿ 3ನೇ ಅತಿ ದೊಡ್ಡ ಉದ್ಯಮವಾಗಿ ಬೆಳೆದಿದೆ. ಸುಧಾರಿತ ವಾಹನ ತಂತ್ರಜ್ಞಾನ ಅಳವಡಿಕೆಯಲ್ಲಿ ಮುಂಚೂಣಿಯಲ್ಲಿದೆ. ಪ್ರಧಾನಿ ಮೋದಿ ಅವರ ಆತ್ಮನಿರ್ಭರ ಭಾರತ ಅಡಿಯಲ್ಲಿ ನಾವು ದೇಶೀಯ ಸ್ವಾವಲಂಬನೆಯತ್ತ ಮುನ್ನಡೆಯುತ್ತಿದ್ದೇವೆ. ಜಾಗತಿಕ ಮಾರುಕಟ್ಟೆಯಲ್ಲಿ ಪ್ರಮುಖ ರಫ್ತುದಾರರಾಗಿ ಹೊರಹೊಮ್ಮುತ್ತಿದ್ದೇವೆ ಎಂದು ನುಡಿದರು. ಇದನ್ನೂ ಓದಿ: ಬಸ್‌ ಆಯ್ತು, ಈಗ ಮೆಟ್ರೋ ದರ ಏರಿಕೆ – ನಾಳೆಯೇ ಅಧಿಕೃತ ಘೋಷಣೆ

    ಎಲೆಕ್ಟ್ರಿಕ್ ವಾಹನಗಳ ಅಳವಡಿಕೆಯಲ್ಲಿ ಭಾರತ ವೇಗವಾಗಿ ದಾಪುಗಾಲು ಇಡುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಮಾರ್ಗದರ್ಶನದಲ್ಲಿ ನಾವು ಮುಂದಿನ ಪೀಳಿಗೆಗಳು ಹೆಮ್ಮೆಪಡುವಂತಹ ಭಾರತವನ್ನು ನಿರ್ಮಿಸುತ್ತಿದ್ದೇವೆ. ನಾವು ಪರಿಸರಪೂರಕ ಉಪಕ್ರಮಗಳನ್ನು ಬೆಂಬಲಿಸೋಣ ಮತ್ತು ಸ್ವಚ್ಛವಾದ, ಹಸಿರು ಭೂಮಿಯನ್ನು ಖಚಿತಪಡಿಸಿಕೊಳ್ಳೋಣ ಎಂದು ಪ್ರತಿಪಾದಿಸಿದರು. ಇದನ್ನೂ ಓದಿ: ಸಿಎಂ ಮಂಗ್ಳೂರಿನಲ್ಲಿ‌ ಇರುವಾಗಲೇ ಬ್ಯಾಂಕ್‌ ಲೂಟಿ – ಬಂದೂಕು ತೋರಿಸಿ ದರೋಡೆ

  • ಆಟೋಮೊಬೈಲ್‌ ಇಂಡಸ್ಟ್ರಿಯಲ್ಲಿ ಜಪಾನ್‌ ಹಿಂದಿಕ್ಕಿ ಭಾರತ 3ನೇ ಸ್ಥಾನಕ್ಕೆ ಬಂದಿದೆ: ಗಡ್ಕರಿ

    ಆಟೋಮೊಬೈಲ್‌ ಇಂಡಸ್ಟ್ರಿಯಲ್ಲಿ ಜಪಾನ್‌ ಹಿಂದಿಕ್ಕಿ ಭಾರತ 3ನೇ ಸ್ಥಾನಕ್ಕೆ ಬಂದಿದೆ: ಗಡ್ಕರಿ

    ಬೆಂಗಳೂರು: ಆಟೋಮೊಬೈಲ್‌ ಇಂಡಸ್ಟ್ರಿ ಹೆಚ್ಚಿನ ಆದಾಯ ನೀಡುತ್ತಿದೆ. 7ನೇ ಸ್ಥಾನದಲ್ಲಿ ಆಟೋಮೊಬೈಲ್‌ ಇಂಡಸ್ಟ್ರಿ ಇತ್ತು. ಈಗ ನಾವು ಜಪಾನ್‌ ಮೀರಿಸಿ 3ನೇ ಸ್ಥಾನಕ್ಕೆ ಬಂದಿದ್ದೇವೆ ಎಂದು ಕೇಂದ್ರ ಸಚಿವ ನಿತಿನ್‌ ಗಡ್ಕರಿ (Nitin Gadkari) ತಿಳಿಸಿದರು.

    ಬಿಜೆಪಿ (BJP) ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ಅವರು, ಆಟೋಮೊಬೈಲ್‌ (Automobile) ಕ್ಷೇತ್ರದಲ್ಲಿ ಮುಂದಿನ 5 ವರ್ಷದಲ್ಲಿ ಮೊದಲ ಸ್ಥಾನಕ್ಕೆ ಬರುತ್ತೇವೆ. ಮರ್ಸಿಡಿಸ್ ಎಲೆಕ್ಟ್ರಿಕ್ ಕಾರು ಉತ್ಪಾದನೆ ಇಲ್ಲಿ ಆಗಲಿದೆ. ಹೈಡ್ರೋಜನ್, ಎಥೆನಾಲ್‌ನಲ್ಲಿ ಓಡುವ ಗಾಡಿ ಇದೆ. ಈಗ ಇಡಿ ದೇಶದಲ್ಲಿ ಎಲೆಕ್ಟ್ರಿಕ್ ವಾಹನ ಓಡಲಿದೆ. ಡೀಸೆಲ್ ಬಸ್‌ಗಿಂತ 30% ಕಡಿಮೆ ಟಿಕೆಟ್ ದರದ ಎಲೆಕ್ಟ್ರಕ್ ಬಸ್ ಸಿದ್ಧವಾಗುತ್ತಿದೆ ಎಂದು ಹೇಳಿದರು. ಇದನ್ನೂ ಓದಿ: ಪೋಕ್ಸೋ ಪ್ರಕರಣದಲ್ಲಿ ಬಿಎಸ್‍ವೈಗೆ ಮತ್ತೆ ಸಮನ್ಸ್

    ಭಾರತದ ಸಾಫ್ಟ್‌ವೇರ್‌ ಹುಡುಗರಲ್ಲಿ ಮೆತಮೆಟಿಕ್ ಜೀನ್ ಇದೆಯಾ ಎಂದು ಜಪಾನ್ ಪ್ರಧಾನಿ ಕೇಳುತ್ತಿದ್ದರು. ಅಷ್ಟು ಪ್ರಭಾವಿಯಾಗಿದೆ ನಮ್ಮ ಭಾರತ ಎಂದರು.

    ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿದ ಗಡ್ಕರಿ, ಲೋಕತಂತ್ರ, ಸಂವಿಧಾನ ಮುಗಿಸಲು ಹೊರಟವರು ಯಾರು? ಇದು ಮುಂದಿನ ಜನಸಾಮಾನ್ಯರಿಗೆ ಪೀಳಿಗೆಗೆ ತಿಳಿಸಬೇಕು. ಎಮರ್ಜೆನ್ಸಿ ಮೂಲಕ ಸಂವಿಧಾನ ಹತ್ತಿಕ್ಕಿದ್ದು‌ ಕಾಂಗ್ರೆಸ್. ಸಂವಿಧಾನ, ಲೋಕತಂತ್ರದ ರಕ್ಷಣೆಗೆ ಬಿಜೆಪಿ ಶ್ರಮಿಸುತ್ತಿದೆ. ತುರ್ತು ಪರಿಸ್ಥಿತಿ ವೇಳೆ ಎಲ್ಲರ ಹಕ್ಕು ಕಿತ್ತುಕೊಳ್ಳಲಾಯ್ತು, ಅಪಾಯಕರ ಬಂಧನ ಆಯ್ತು ಎಂದರು. ಇದನ್ನೂ ಓದಿ: ಇನ್ನೊಂದು ವರ್ಷದಲ್ಲಿ ರಾಮಮಂದಿರ ಪೂರ್ಣ: ಪೇಜಾವರ ಶ್ರೀ

    ಕಾಂಗ್ರೆಸ್ ತನ್ನ ಘೋಷಣೆಗಳನ್ನು ಜಾರಿ ಮಾಡಲ್ಲ. ಗರೀಬೀ ಹಟಾವೋ ಅಂತಾ ಅಧಿಕಾರಕ್ಕೆ ಬಂತು. ಬಡತ‌ನ ನಿರ್ಮೂಲನೆ ಆಯ್ತಾ? ಇಲ್ಲ. ಕಾಂಗ್ರೆಸ್‌ನವರ ಬಡತನ ತೊಲಗಿದೆ ಅಷ್ಟೆ ಎಂದು ಟಾಂಗ್‌ ಕೊಟ್ಟರು.

    ಇತಿಹಾಸದ ಅಧ್ಯಯನ ಇರಬೇಕು. ಎಂದಿಗೂ ಮರೆಯಬಾರದು. ಯುವ ಜನತೆಗೆ ಈ ವಿಚಾರ ಹೇಳಬೇಕು. ಪ್ರಜಾಪ್ರಭುತ್ವದ ಹತ್ಯೆ ಮಾಡಿದ್ದು ಯಾರು ಎಂದು ಹೇಳಬೇಕು. ಯಾವತ್ತಿಗೂ ಪ್ರಜಾಪ್ರಭುತ್ವದ ರಕ್ಷಣೆ ಬಿಜೆಪಿ ಮಾಡಲಿದೆ. ನಮ್ಮದು ಕೌಟುಂಬಿಕ ಹಿಡಿತ ಇರುವ ಪಕ್ಷ ಅಲ್ಲ. 75 ವರ್ಷಗಳ ಕಾಲ ಕಾಂಗ್ರೆಸ್ ಅಧಿಕಾರ ನಡೆಸಿದೆ. ಗರೀಬೀ ಹಠಾವು ಘೋಷಣೆ ಮಾಡುತ್ತಲೇ ಬಂದಿದೆ. ಆದರೆ ಪರಿಸ್ಥಿತಿ ಬದಲಾಗಿಲ್ಲ. ನೆಹರೂ ಪ್ರಧಾನಿ ಆದಾಗ ಕಮ್ಯುನಿಸ್ಟ್ ವಿಚಾರದಲ್ಲಿ ನಡೆಯುತ್ತಿದ್ದರು ಎಂದು ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿದರು.

    ಚೀನಾದ ಕಮ್ಯುನಿಸ್ಟ್ ಪಾರ್ಟಿ ನನಗೆ ಆಹ್ವಾನ ನೀಡಿತ್ತು.‌ ಅಲ್ಲಿನ ಪ್ರೆಸಿಡೆಂಟ್‌ಗೆ ಹೇಳಿದೆ, ಕೆಂಪು ಬಾವುಟ ಬಿಟ್ಟು ಎಲ್ಲ ಬದಲಾಗಿದೆ ಎಂದು ಹೇಳಿದ್ದೆ. ಮಾರ್ಕ್ಸ್, ಲೆನಿನ್ ಎಲ್ಲರನ್ನೂ ಮರೆತಿದ್ದೀರಿ ಎಂದಿದ್ದೆ. ಕ್ರಮೇಣ ಕಮ್ಯುನಿಸ್ಟ್‌ ಪಾರ್ಟಿಯನ್ನು ಜನ ದೂರ ಮಾಡುತ್ತಿದ್ದಾರೆ. ಆದರೆ ಬಿಜೆಪಿ ಜನಪರ ಕೆಲಸ ಮಾಡುತ್ತಿದೆ. ವಿಶ್ವದಲ್ಲಿ ಭಾರತ ಹೆಸರು ಮಾಡುತ್ತಿದೆ. ಕಾಂಗ್ರೆಸ್ ಮಾಡಲಾಗದ ಸಾಧನೆಯನ್ನು 10 ವರ್ಷದಲ್ಲಿ ಮೋದಿ ಸರ್ಕಾರ ಮಾಡಿದೆ. ಮೋದಿ ಸರ್ಕಾರ ತೆಗೆದುಕೊಂಡ ನಿರ್ಣಯದ ಪರಿಣಾಮ ಎಲ್ಲಾ ಕ್ಷೇತ್ರದಲ್ಲೂ ಕಾಣುತ್ತಿದೆ. ಆದಾಯ ದ್ವಿಗುಣವಾಗಿದೆ, ಉದ್ಯೋಗ ಸೃಷ್ಟಿಯಾಗಿದೆ ಎಂದು ತಮ್ಮ ಸರ್ಕಾರದ ಸಾಧನೆಯನ್ನು ಬಣ್ಣಿಸಿದರು. ಇದನ್ನೂ ಓದಿ: MUDA Site Allotment Scam | ನನಗೆ 62 ಕೋಟಿ ಕೊಡಬೇಕು: ಸಿಎಂ

  • FAME II ಸಬ್ಸಿಡಿ ಕಡಿತ; ಜೂನ್ 1ರಿಂದ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ದುಬಾರಿ

    FAME II ಸಬ್ಸಿಡಿ ಕಡಿತ; ಜೂನ್ 1ರಿಂದ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ದುಬಾರಿ

    ಜೂನ್ 1, 2023ರಿಂದ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳ ಬೆಲೆ ಭಾರೀ ಏರಿಕೆಯಾಗಲಿದೆ. ಇದಕ್ಕೆ ಕಾರಣ ಏನೆಂದರೆ ಕೇಂದ್ರ ಸರ್ಕಾರ FAME II ಸಬ್ಸಿಡಿಯನ್ನು ಪ್ರತಿ ಕಿಲೋವ್ಯಾಟ್‌ಗೆ 5 ಸಾವಿರ ಕಡಿತಗೊಳಿಸಿದೆ. ಹೊಸ ಅಧಿಸೂಚನೆ ಬರುವ ಮುನ್ನ FAME II ಸಬ್ಸಿಡಿ ಪ್ರತಿ ಕಿಲೋವ್ಯಾಟ್‌ಗೆ 15 ಸಾವಿರ ರೂ. ಇತ್ತು.

    ಎಲೆಕ್ಟ್ರಿಕ್ ವಾಹನಗಳಿಗೆ ಸರ್ಕಾರ ಸಬ್ಸಿಡಿ ನೀಡುತ್ತಿದ್ದರೂ ಪೆಟ್ರೋಲ್ ವಾಹನಗಳಿಗಿಂತ ಅವು ದುಬಾರಿ. ಈಗ ಕೇಂದ್ರ ಸರ್ಕಾರವು ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳ ಮೇಲಿನ ಸಬ್ಸಿಡಿಯನ್ನು ಕಡಿತಗೊಳಿಸಿರುವುದರಿಂದ ಅವುಗಳ ಬೆಲೆಗಳು ಮತ್ತಷ್ಟು ಹೆಚ್ಚಾಗೋದಂತೂ ಗ್ಯಾರಂಟಿ. ಇದನ್ನೂ ಓದಿ: ಪೆಟ್ರೋಲ್ ಬೇಕಿಲ್ಲ – ಬಿಯರ್ ಹಾಕಿದ್ರೆ ಓಡುತ್ತೆ ಈ ಬೈಕ್!

    ಈ ಪರಿಷ್ಕರಣೆಯ ಪರಿಣಾಮವಾಗಿ, FAME II ಸಬ್ಸಿಡಿಗೆ ಅರ್ಹವಾಗಿರುವ ಎಲ್ಲಾ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ತಯಾರಕರು ತಮ್ಮ ಉತ್ಪನ್ನದ ಬೆಲೆಗಳನ್ನು ಸರಿಸುಮಾರು 25.000-35,000 ರೂ.ಗಳಷ್ಟು ಹೆಚ್ಚಿಸಬೇಕಾಗುತ್ತದೆ. ಉದಾಹರಣೆಗೆ, ಏಥರ್ 450X ಮತ್ತು OLA S1 Proಗೆ ಲಭ್ಯವಿರುವ ಸಬ್ಸಿಡಿ ಮೊತ್ತವು ಪ್ರಸ್ತುತ ರೂ 55,000-60,000ದ ನಡುವೆ ಇದೆ ಮತ್ತು ಪರಿಷ್ಕೃತ ದರಗಳೊಂದಿಗೆ, ಸಬ್ಸಿಡಿ ಮೊತ್ತವನ್ನು ಅರ್ಧಕ್ಕಿಂತ ಹೆಚ್ಚುಗೊಳಿಸಬೇಕಾದ ಅನಿವಾರ್ಯತೆ ತಯಾರಕರದ್ದು. ಎಲೆಕ್ಟ್ರಿಕ್ ವಾಹನಗಳ ಮಾರಾಟ ಪ್ರತಿ ತಿಂಗಳು ಇಳಿಮುಖವಾಗುತ್ತಿರುವಾಗ, ಕೇಂದ್ರ ಸರ್ಕಾರದ ಈ ನಿರ್ಧಾರದಿಂದ ಮಾರಾಟ ಇನ್ನಷ್ಟು ಕಡಿಮೆಯಾಗುವ ಸಂಭವವಿದೆ.

    ನಿಮಗೆ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಬೇಕು ಎಂಬ ಆಸೆ ಇದ್ದಲ್ಲಿ ಮೇ 31ರ ಒಳಗೆ ಕೊಂಡುಕೊಳ್ಳಿ ಮತ್ತು FAME II ಸಬ್ಸಿಡಿಯ ಪೂರ್ಣ ಲಾಭವನ್ನು ಪಡೆದುಕೊಳ್ಳಿ. ಇದನ್ನೂ ಓದಿ: Harley-Davidson Pan America 1250 ಅಡ್ವೆಂಚರ್‌ ಸ್ಪೆಷಲ್‌ ಬೈಕ್‌ ಭಾರತದಲ್ಲಿ ಬಿಡುಗಡೆ

  • ಲಿಫ್ಟ್‌ಗೆ ಸಿಲುಕಿ 26ರ ಯುವಕ ಸಾವು

    ಲಿಫ್ಟ್‌ಗೆ ಸಿಲುಕಿ 26ರ ಯುವಕ ಸಾವು

    ಬೆಂಗಳೂರು: ಲಿಫ್ಟ್‌ಗೆ (Lift) ಸಿಲುಕಿ ಉತ್ತರಪ್ರದೇಶದ (UP) ಮೂಲದ ಯುವಕ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ (Bengaluru) ನಡೆದಿದೆ.

    ಇಲ್ಲಿನ ಜೆ.ಸಿ ರಸ್ತೆಯ ಭರತ್‌ ಸರ್ಕಲ್‌ ಬಳಿ ಘಟನೆ ನಡೆದಿದ್ದು, ಯುಪಿ ಮೂಲದ ವಿಕಾಸ್‌ (26) ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಸಿಲಿಕಾನ್ ಸಿಟಿಯಲ್ಲೊಂದು ಖತರ್ನಾಕ್ ಜೋಡಿ – ಬಾಯ್‌ಫ್ರೆಂಡ್ ಜೊತೆಗೂಡಿ ಬೈಕ್‌ ಕಳ್ಳತನಕ್ಕಿಳಿದಿದ್ದ ಯುವತಿ

    ಆಟೋಮೊಬೈಲ್‌‌ನಲ್ಲಿ (Automobile) ಕೆಲಸ ಮಾಡುತ್ತಿದ್ದ ವಿಕಾಸ್‌ ಲಿಫ್ಟ್‌ಗೆ ಸಿಲುಕಿ ಸಾವನ್ನಪ್ಪಿದ್ದಾರೆ. ಈ ಸಂಬಂಧ ಕಲಾಸಿಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: 1 ಕೆಜಿ ಗಾಂಜಾ ಕಳ್ಳಸಾಗಣೆ ಆರೋಪ – ಭಾರತ ಮೂಲದ ವ್ಯಕ್ತಿಯನ್ನು ಗಲ್ಲಿಗೇರಿಸಿದ ಸಿಂಗಾಪುರ

  • 5,70,000ಕ್ಕೂ ಹೆಚ್ಚು ಕಾರುಗಳನ್ನ ಹಿಂಪಡೆದ ಹುಂಡೈ, ಕಿಯಾ

    5,70,000ಕ್ಕೂ ಹೆಚ್ಚು ಕಾರುಗಳನ್ನ ಹಿಂಪಡೆದ ಹುಂಡೈ, ಕಿಯಾ

    ವಾಷಿಂಗ್ಟನ್‌: ಶಾರ್ಟ್‌ ಸರ್ಕ್ಯೂಟ್‌ನಿಂದಾಗಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಹುಂಡೈ ಮೋಟರ್ಸ್‌ (Hyundais Motors) ಮತ್ತು ಕಿಯಾ ಕಾರ್ಪೋರೇಷನ್‌ (Kia Corporation) ಕಂಪನಿಗಳು 5.70 ಲಕ್ಷಕ್ಕೂ ಹೆಚ್ಚು ಕಾರುಗಳನ್ನ ಹಿಂಪಡೆದಿವೆ. ಆದರೆ ಇದು ಭಾರತದಲ್ಲಿ ಅಲ್ಲ ಅಮೆರಿಕದಲ್ಲಿ.

    ವಾಹನಗಳಲ್ಲಿ ವಿದ್ಯುತ್‌ ಶಾರ್ಟ್‌ ಸರ್ಕ್ಯೂಟ್‌ನಿಂದಾಗಿ ಬೆಂಕಿ ಕಾಣಿಸಿಕೊಳ್ಳುತ್ತಿದೆ. ಕಾರುಗಳನ್ನ ಆಫ್‌ ಮಾಡಿದ ಸಂದರ್ಭದಲ್ಲೂ ಈ ಸಮಸ್ಯೆ ಎದುರಾಗುತ್ತಿರುವುದರಿಂದ ವಾಹನ ಹೊಂದಿರುವ ಗ್ರಾಹಕರು ಮನೆಯಿಂದ ಸ್ವಲ್ಪ ದೂರದಲ್ಲಿ ಅಥವಾ ಹೊರಗಡೆ ಪಾರ್ಕಿಂಗ್‌ ಮಾಡುವಂತೆ ಯುಎಸ್ ರಾಷ್ಟ್ರೀಯ ಹೆದ್ದಾರಿ ಸಂಚಾರ ಸುರಕ್ಷತಾ ಆಡಳಿತ (NHTSA) ತಿಳಿಸಿದೆ.

    ಅಲ್ಲದೇ ಹುಂಡೈ ಕಾರುಗಳನ್ನು ಹೊಂದಿರುವ ಗ್ರಾಹಕರು ಉಚಿತವಾಗಿ ರಿಪೇರಿ ಮಾಡಿಸಿಕೊಳ್ಳಲು ಬಯಸುವವರು ಕೂಡಲೇ ಸ್ಥಳೀಯ ಹುಂಡೈ ಹಾಗೂ ಕಿಯಾ ಡೀಲರ್‌ಶಿಪ್‌ಗಳನ್ನ ಸಂಪರ್ಕಿಸುವಂತೆ ಕಂಪನಿಗಳು ಸಲಹೆ ನೀಡಿವೆ. ಇದನ್ನೂ ಓದಿ: ವಾಣಿಜ್ಯ ವಾಹನಗಳ ಖರೀದಿದಾರರಿಗೆ Tata Motors ಶಾಕ್‌ – ಏಪ್ರಿಲ್‌ 1ರಿಂದ ಬೆಲೆ ಏರಿಕೆ

    ಇದೇ ಸಮಸ್ಯೆಯಿಂದ 2022ರ ಆಗಸ್ಟ್‌ ತಿಂಗಳಲ್ಲಿ 2.45 ಲಕ್ಷ ಕಾರುಗಳನ್ನು ಹುಂಡೈ ಹಿಂಪಡೆದಿತ್ತು ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ಬೋಲ್ಟ್ ಬಿಗಿಯಿಲ್ಲವೆಂದು 3,470 ಕಾರುಗಳನ್ನು ಹಿಂದಕ್ಕೆ ಪಡೆದ ಟೆಸ್ಲಾ

    ಇತ್ತೀಚೆಗಷ್ಟೇ ರಾಯಲ್‌ ಎನ್‌ಫೀಲ್ಡ್‌ ಹಿಮಾಲಯ ಬೈಕ್‌ನಲ್ಲಿ ಬ್ರೇಕ್‌ ಸಮಸ್ಯೆಯಿಂದಾಗಿ 5 ಸಾವಿರ ಬೈಕ್‌ಗಳನ್ನು ಕಂಪನಿ ಹಿಂದಕ್ಕೆ ಪಡೆದಿತ್ತು. ಇದಕ್ಕೂ ಮುನ್ನ ಸೀಟ್‌ಬ್ಯಾಕ್ ಫ್ರೇಮ್‌ಗಳನ್ನು ಭದ್ರಪಡಿಸುವ ಬೋಲ್ಟ್‌ಗಳು ಸುರಕ್ಷಿತವಾಗಿ ಮತ್ತು ಬಿಗಿಯಾಗಿ ಇಲ್ಲವೆಂದು ಕಾರಣ ನೀಡಿ ಟೆಸ್ಲಾ ಕಂಪನಿ 3,470 ಕಾರುಗಳನ್ನ ಹಿಂದಕ್ಕೆ ಪಡೆದಿತ್ತು.

  • ವಾಣಿಜ್ಯ ವಾಹನಗಳ ಖರೀದಿದಾರರಿಗೆ Tata Motors ಶಾಕ್‌ – ಏಪ್ರಿಲ್‌ 1ರಿಂದ ಬೆಲೆ ಏರಿಕೆ

    ವಾಣಿಜ್ಯ ವಾಹನಗಳ ಖರೀದಿದಾರರಿಗೆ Tata Motors ಶಾಕ್‌ – ಏಪ್ರಿಲ್‌ 1ರಿಂದ ಬೆಲೆ ಏರಿಕೆ

    ಮುಂಬೈ: ದೇಶದ ಅತಿದೊಡ್ಡ ವಾಣಿಜ್ಯ ವಾಹನಗಳ ತಯಾರಕ ಸಂಸ್ಥೆಯಾದ ಟಾಟಾ ಮೋಟರ್ಸ್‌ (Tata Motors) ತನ್ನ ವಾಣಿಜ್ಯ ವಾಹನಗಳ (Commercial Vehicle) ಮೇಲಿನ ಬೆಲೆಯನ್ನು ಶೇ.5ರಷ್ಟು ಹೆಚ್ಚಿಸಲಿದೆ. ಏಪ್ರಿಲ್‌ 1ರಿಂದಲೇ ಪರಿಷ್ಕೃತ ದರ ಜಾರಿಗೆ ಬರಲಿದೆ ಎಂದು ಕಂಪನಿ ತಿಳಿಸಿದೆ.

    BS6ನ 2ನೇ ಹಂತದ ನಿಯಮಗಳ ಪಾಲನೆಯು ಜಾರಿಗೆ ಬರುತ್ತಿರುವ ಹೊತ್ತಿನಲ್ಲಿ ಬೆಲೆ ಏರಿಕೆ ತೀರ್ಮಾನ ಹೊರಬಿದ್ದಿದೆ. ಬೆಲೆ ಏರಿಕೆಯಲ್ಲಿ ಮಾದರಿಯಿಂದ ಮಾದರಿಗೆ ವ್ಯತ್ಯಾಸ ಇರಲಿದೆ. ಈ ಮಾನದಂಡಗಳನ್ನು ಪೂರೈಸಲು ಟಾಟಾ ಮೋಟರ್ಸ್ ತನ್ನ ಸಂಪೂರ್ಣ ವಾಹನ ಪೋರ್ಟ್‌ಫೋಲಿಯೊವನ್ನು ಪರಿವರ್ತಿಸುವುದರಿಂದ ಗ್ರಾಹಕರಿಗೆ ಲಾಭದಾಯಕವಾಗಲಿದೆ. ಇದನ್ನೂ ಓದಿ: ಗ್ಲಾಮರಸ್‌ ಲುಕ್‌ನ ಕವಾಸಕಿ Versys 1000 ಭಾರತದಲ್ಲಿ ಬಿಡುಗಡೆ – ಬೆಲೆ ಕೇಳಿದ್ರೆ ಶಾಕ್‌ ಆಗ್ತೀರಾ?

    ಈ ಬದಲಾವಣೆಯಿಂದ ಟಾಟಾ ಮೋಟರ್ಸ್‌ ಗ್ರಾಹಕರು ಹೆಚ್ಚಿನ ಪ್ರಯೋಜನ ಪಡೆಯಲಿದ್ದಾರೆ. ಕೆಡಿಮೆ ವೆಚ್ಚದಲ್ಲಿ ಸ್ವಚ್ಛತೆ, ಪರಿಸರ ಸ್ನೇಹಿ ಹಾಗೂ ತಾಂತ್ರಿಕವಾಗಿಯೂ ಉನ್ನತ ಕೊಡುಗೆಗಳನ್ನ ನಿರೀಕ್ಷಿಸಬಹುದು ಎಂದು ಕಂಪನಿ ತಿಳಿಸಿದೆ.  ಇದನ್ನೂ ಓದಿ: ಅತ್ಯಾಕರ್ಷಕ ಹೋಂಡಾ H’ness CB350, CB350RS ಬೈಕ್‌ ಭಾರತದಲ್ಲಿ ಬಿಡುಗಡೆ

  • ಭಾರತದಲ್ಲೂ ಶುರುವಾಗಲಿದೆ ಕ್ರ್ಯಾಶ್‌ ಟೆಸ್ಟಿಂಗ್‌ – ಆಟೋಮೊಬೈಲ್‌ಗಳಿಗೆ ಸ್ಟಾರ್ ರೇಟಿಂಗ್‌: ನಿತಿನ್‌ ಗಡ್ಕರಿ

    ಭಾರತದಲ್ಲೂ ಶುರುವಾಗಲಿದೆ ಕ್ರ್ಯಾಶ್‌ ಟೆಸ್ಟಿಂಗ್‌ – ಆಟೋಮೊಬೈಲ್‌ಗಳಿಗೆ ಸ್ಟಾರ್ ರೇಟಿಂಗ್‌: ನಿತಿನ್‌ ಗಡ್ಕರಿ

    ನವದೆಹಲಿ: ಭಾರತದ ಮಾರುಕಟ್ಟೆಯಲ್ಲಿರುವ ಕಾರುಗಳಿಗೆ ಸ್ಟಾರ್ ರೇಟಿಂಗ್ ನೀಡುವ ಹೊಸ ಪ್ರಸ್ತಾವನೆಯೊಂದಕ್ಕೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಒಪ್ಪಿಗೆ ಸೂಚಿಸಿದ್ದಾರೆ.

    ಕಾರುಗಳ ಹೊಸ ಮೌಲ್ಯಮಾಪನ ಕಾರ್ಯಕ್ರಮದ ಮೂಲಕ ಕ್ರ‍್ಯಾಶ್ ಟೆಸ್ಟ್‌ಗಳಲ್ಲಿನ ಕಾರ್ಯಕ್ಷಮತೆಯ ಆಧಾರದ ಮೇಲೆ ಭಾರತದಲ್ಲಿನ ಆಟೋ ಮೊಬೈಲ್‌ಗಳಿಗೆ ಸ್ಟಾರ್ ರೇಟಿಂಗ್‌ಗಳನ್ನು ನೀಡುವ ಕಾರ್ಯವಿಧಾನ ಇದಾಗಿದೆ. ಇದನ್ನೂ ಓದಿ: ಆಫ್ಘನ್‌ನಲ್ಲಿ ಭೂಕಂಪನ: ಸಾವಿನ ಸಂಖ್ಯೆ 1,150ಕ್ಕೆ ಏರಿಕೆ, 3 ಸಾವಿರ ಮನೆಗಳು ನಾಶ

    ಈ ಕುರಿತು ಸರಣಿ ಟ್ವೀಟ್ ಮಾಡಿರುವ ಕೇಂದ್ರ ಸಚಿವ ನಿತಿನ್ ಗಡ್ಕರಿ, ಕಾರುಗಳ ಹೊಸ ಮೌಲ್ಯಮಾಪನ ಪದ್ಧತಿ ಭಾರತ್ ಎನ್‌ಸಿಎಪಿ ಗ್ರಾಹಕ ಕೇಂದ್ರಿತ ವೇದಿಕೆಯಾಗಿ ಕಾರ್ಯನಿರ್ವಹಿಸುತ್ತದೆ. ಇದು ಗ್ರಾಹಕರು ತಮ್ಮ ಸ್ಟಾರ್-ರೇಟಿಂಗ್‌ಗಳ ಆಧಾರದ ಮೇಲೆ ಸುರಕ್ಷಿತ ಕಾರುಗಳನ್ನು ಆಯ್ಕೆ ಮಾಡಲು ಅನುವು ಮಾಡಿಕೊಡುತ್ತದೆ. ಇದು ಮೂಲ ಉಪಕರಣ ನಡುವೆ ಆರೋಗ್ಯಕರ ಸ್ಪರ್ಧೆಯನ್ನೂ ಉತ್ತೇಜಿಸುತ್ತದೆ. ಸುರಕ್ಷಿತ ವಾಹನಗಳನ್ನು ತಯಾರಿಸಲು ಭಾರತದಲ್ಲಿ ತಯಾರಕರು ಸಹ ನಿಯಮಗಳನ್ನು ಅನುಸರಿಸಬೇಕಾಗುತ್ತದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಕೇರಳದಲ್ಲಿ ರಾಹುಲ್ ಗಾಂಧಿ ಕಚೇರಿ ಧ್ವಂಸ

    ನಾನು ಕಾರುಗಳ ಹೊಸ ಅಸೆಸ್‌ಮೆಂಟ್ ಪ್ರೋಗ್ರಾಂ ಭಾರತ್ ಎನ್‌ಸಿಎಪಿಯನ್ನು ಪರಿಚಯಿಸಲು ಕರಡು ಜಿಎಸ್‌ಆರ್ ಅಧಿಸೂಚನೆಯನ್ನೂ ಅನುಮೋದಿಸಿದ್ದೇನೆ. ಇದರಲ್ಲಿ ಭಾರತದಲ್ಲಿನ ಆಟೋ ಮೊಬೈಲ್‌ಗಳು ಕ್ರ‍್ಯಾಶ್ ಟೆಸ್ಟ್‌ಗಳಲ್ಲಿನ  ಕಾರ್ಯಕ್ಷಮತೆಯ ಆಧಾರದ ಮೇಲೆ ಸ್ಟಾರ್ ರೇಟಿಂಗ್‌ಗಳನ್ನು ನೀಡಲಿವೆ ಎಂದು ಗಡ್ಕರಿ ಮಾಹಿತಿ ನೀಡಿದ್ದಾರೆ.

    ಪ್ರಯಾಣಿಕರ ಸುರಕ್ಷತೆಗೆ ಆದ್ಯತೆ: ಕ್ರ‍್ಯಾಶ್ ಟೆಸ್ಟ್‌ಗಳ ಆಧಾರದ ಮೇಲೆ ಭಾರತೀಯ ಕಾರುಗಳ ಸ್ಟಾರ್ ರೇಟಿಂಗ್‌ಗಳು ಕಾರುಗಳಲ್ಲಿ ಪ್ರಯಾಣಿಕರ ಸುರಕ್ಷತೆಯನ್ನು ಖಚಿತಪಡಿಸುತ್ತವೆ. ಮಾತ್ರವಲ್ಲದೆ ಭಾರತೀಯ ಆಟೋ ಮೊಬೈಲ್‌ಗಳ ರಫ್ತು – ಯೋಗ್ಯತೆ ಹೆಚ್ಚಿಸಲೂ ನಿರ್ಣಾಯಕವಾಗಿದೆ ಎಂದು ಹೇಳಿದ್ದಾರೆ.

    ಆಟೋಮೊಬೈಲ್ ಹಬ್ ಆಗಿಸುವ ಉದ್ದೇಶ: ಭಾರತ್ ಎನ್‌ಸಿಎಪಿಯ ಪರೀಕ್ಷಾ ಪ್ರೋಟೋಕಾಲ್ ಅನ್ನು ಜಾಗತಿಕ ಕ್ರ‍್ಯಾಶ್-ಟೆಸ್ಟ್ ಪ್ರೋಟೋಕಾಲ್‌ಗಳೊಂದಿಗೆ ಜೋಡಿಸಲಾಗುತ್ತದೆ. ಈ ಮೂಲಕ EOMಗಳು ತಮ್ಮ ವಾಹನಗಳನ್ನು ಭಾರತದ ಆಂತರಿಕ ಪರೀಕ್ಷಾ ಸೌಲಭ್ಯಗಳಲ್ಲೇ ಪರೀಕ್ಷಿಸಲು ಅನುವು ಮಾಡಿಕೊಡುತ್ತದೆ. ಅಲ್ಲದೇ ಭಾರತ್ ಎನ್‌ಸಿಎಪಿ ನಮ್ಮ ಆಟೋಮೊಬೈಲ್ ಉದ್ಯಮವನ್ನು ಆತ್ಮನಿರ್ಭರ್ ಮಾಡುವಲ್ಲಿ ಭಾರತವನ್ನು ವಿಶ್ವದ ಅಗ್ರ ಆಟೋ ಮೊಬೈಲ್ ಹಬ್ ಮಾಡುವ ಉದ್ದೇಶ ಹೊಂದಿದ್ದೇವೆ. ಈ ಉದ್ದೇಶವನ್ನು ಸಾಧಿಸಿ ತೋರಿಸಲು ಆಟೋಮೊಬೈಲ್ ಉದ್ಯಮದಲ್ಲಿ ಕ್ರ‍್ಯಾಶ್ ಕಾರು ಟೆಸ್ಟಿಂಗ್ ಆಧರಿಸಿ ಸ್ಟಾರ್ ರೇಟಿಂಗ್ ನೀಡುವುದು ನಿರ್ಣಾಯಕ ಸಾಧನವಾಗಿದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ವ್ಯಾಖ್ಯಾನಿಸಿದ್ದಾರೆ.

    ಏನಿದು ಕ್ರ್ಯಾಶ್‌ ಟೆಸ್ಟ್?: ಕ್ರ‍್ಯಾಶ್ ಪರೀಕ್ಷೆಯು ತುರ್ತು ಪರಿಸ್ಥಿತಿಯ ಉದ್ದೇಶಗಳಿಗಾಗಿ ಮಾಡುವ ಪರೀಕ್ಷಾ ವಿಧಾನ. ಅಪಘಾತಗಳಲ್ಲಿ ಪ್ರಯಾಣಿಕರು ಮತ್ತು ಚಾಲಕರಿಗೆ ಅಪಾಯಗಳನ್ನು ಕಡಿಮೆ ಮಾಡುವ ರೀತಿಯಲ್ಲಿ ವಾಹನದ ರಚನೆಯ ಸುರಕ್ಷತೆಯನ್ನು ನಿರ್ಣಯಿಸುವುದು. ದೋಷಗಳನ್ನು ಗುರುತಿಸುವುದು ಹಾಗೂ ರಕ್ಷಣಾ ವ್ಯವಸ್ಥೆಯ ದಕ್ಷತೆಯನ್ನು ಸುಧಾರಿಸುವುದು.

    Live Tv

  • ರಾಜ್ಯದ ಆಟೋಮೊಬೈಲ್  ಕ್ಷೇತ್ರದಲ್ಲಿ ಎಲೆಕ್ಟ್ರಿಕ್ ಕ್ರಾಂತಿಗೆ ದಿನಗಣನೆ : ಅಶ್ವತ್ಥನಾರಾಯಣ

    ರಾಜ್ಯದ ಆಟೋಮೊಬೈಲ್ ಕ್ಷೇತ್ರದಲ್ಲಿ ಎಲೆಕ್ಟ್ರಿಕ್ ಕ್ರಾಂತಿಗೆ ದಿನಗಣನೆ : ಅಶ್ವತ್ಥನಾರಾಯಣ

    – ಜಾಗತಿಕ ತಂತ್ರಜ್ಞಾನ ಆಡಳಿತ ಶೃಂಗಸಭೆ
    – ಪೆಟ್ರೋಲ್ ಬಂಕ್‍ಗಳು ಇರುವಂತೆಯೇ ಚಾರ್ಜಿಂಗ್ ಪಾಯಿಂಟ್

    ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ಎಲೆಕ್ಟ್ರೀಕರಣ ಮಾಡುವುದು ಸೇರಿದಂತೆ ಆಡಳಿತ, ಅಭಿವೃದ್ಧಿ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲೂ ತಂತ್ರಜ್ಞಾನವನ್ನು ಪರಿಣಾಮಕಾರಿಯಾಗಿ ಬಳಕೆ ಮಾಡಿಕೊಳ್ಳಲಾಗುವುದು ಎಂದು ವಿಜ್ಞಾನ-ತಂತ್ರಜ್ಞಾನ, ಐಟಿ-ಬಿಟಿ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಮಂಗಳವಾರ ಹೇಳಿದರು.

    ಜಪಾನ್ ನಲ್ಲಿ ನಡೆಯುತ್ತಿರುವ ಜಾಗತಿಕ ತಂತ್ರಜ್ಞಾನ ಆಡಳಿತ ಶೃಂಗಸಭೆಯಲ್ಲಿ ವರ್ಚುಯಲ್ ನಲ್ಲಿ ಪ್ರಧಾನ ಭಾಷಣ ಮಾಡಿದ ಅವರು; ಈಗಾಗಲೇ ಬೆಂಗಳೂರು ಮೆಟ್ರೋ ವಿದ್ಯುತ್‍ನಿಂದಲೇ ನಡೆಯುತ್ತಿದೆ. ಮುಂದಿನ ದಿನಗಳಲ್ಲಿ ಇತರೆ ಸಾರ್ವಜನಿಕ ಸಾರಿಗೆ ವ್ಯವಸ್ಥೆಯೂ ಎಲೆಕ್ಟ್ರೀಕರಣ ಆಗಲಿದೆ. ಜತೆಗೆ, ಸರಕಾರದ ಮಟ್ಟದಲ್ಲೂ ಪೆಟ್ರೋಲ್-ಡೀಸೆಲ್ ವಾಹನಗಳಿಗೆ ಬದಲು ಎಲೆಕ್ಟ್ರಿಕ್ ವಾಹನಗಳನ್ನೇ ಬಳಸಲಾಗುವುದು. ಎಲೆಕ್ಟ್ರಿಕ್ ವಾಹನ ಕ್ರಾಂತಿಗೆ ದಿನಗಣನೆ ಶುರುವಾಗಿದೆ ಎಂದರು.

    ಸಾಂಪ್ರದಾಯಿಕ ಮೂಲಗಳ ಜತೆಗೆ ಅಸಂಪ್ರದಾಯಿಕ ಮೂಲಗಳಿಂದ ಕರ್ನಾಟಕ ಉತ್ತಮ ರೀತಿಯಲ್ಲಿ ವಿದ್ಯುತ್ ಉತ್ಪಾದನೆ ಮಾಡುತ್ತಿದ್ದು, ರಾಜ್ಯದಲ್ಲಿ ವಿದ್ಯುತ್ ಕೊರತೆ ಇಲ್ಲ. ಹೀಗಾಗಿ ಕೈಗಾರಿಕೆ ಹೂಡಿಕೆಗೆ ಇದಕ್ಕಿಂತ ಉತ್ತಮ ರಾಜ್ಯ ಮತ್ತೊಂದಿಲ್ಲ. ವಿದ್ಯುತ್ ಸ್ವಾವಲಂಭನೆ ಸಾಧಿಸುವ ಮೂಲಕ ರಾಜ್ಯದ ಆಟೋಮೊಬೈಲ್ ಕ್ಷೇತ್ರದಲ್ಲಿ ದೊಡ್ಡ ಕ್ರಾಂತಿಯೇ ಆಗುತ್ತಿದೆ. ಇನ್ನು ಕೆಲ ದಿನಗಳಲ್ಲಿಯೇ ರಾಜ್ಯದ ಉದ್ದಗಲಕ್ಕೂ ಎಲೆಕ್ಟ್ರಿಕ್ ವಾಹನಗಳೇ ರಸ್ತೆಗಳ ಮೇಲೆ ರಾರಾಜಿಸಲಿವೆ ಎಂದು ಹೇಳಿದರು.

    ಎಲೆಕ್ಟ್ರಿಕ್ ವಾಹನ ಮತ್ತು ಇಆರ್&ಡಿ ನೀತಿ:
    ಹೊಸ ತಲೆಮಾರಿನ ವಾಹನಗಳಿಗೆ ಪೂರಕವಾದ ಎಲ್ಲ ವ್ಯವಸ್ಥೆಗಳನ್ನು ರಾಜ್ಯ ಸರಕಾರ ಮಾಡಿದೆ. ಇಡೀ ದೇಶದಲ್ಲಿಯೇ ಮೊತ್ತ ಮೊದಲಿಗೆ ಎಲೆಕ್ಟ್ರಿಕ್ ವಾಹನ ನೀತಿಯನ್ನು ಜಾರಿಗೆ ತಂದ ರಾಜ್ಯವೆಂದರೆ ಕರ್ನಾಟಕ ಮಾತ್ರ. ಇದಕ್ಕೆ ಪೂರಕವಾಗಿ ಕೆಲ ದಿನಗಳ ಹಿಂದೆ ಇಆರ್&ಡಿ (ಎಂಜಿನಿಯರಿಂಗ್ ಸಂಶೋಧನೆ ಮತ್ತು ಅಭಿವೃದ್ಧಿ ನೀತಿ) ನೀತಿಯನ್ನು ಜಾರಿಗೆ ತರಲಾಗಿದೆ. ಇಂಥ ನೀತಿಯನ್ನು ಅಳವಡಿಸಿಕೊಂಡ ಭಾರತದ ಮೊದಲ ರಾಜ್ಯ ಕರ್ನಾಟವೇ ಆಗಿದೆ ಎಂದರು.

    ಇನ್ನು ಕೆಲ ದಿನಗಳಲ್ಲಿಯೇ ಎಲ್ಲೆಲ್ಲೂ ಪೆಟ್ರೋಲ್ ಬಂಕ್‍ಗಳು ಇರುವಂತೆಯೇ ವಾಹನಗಳಿಗೆ ಬೇಕಾದ ಚಾರ್ಜಿಂಗ್ ಪಾಯಂಟ್‍ಗಳು ಹಾಗೂ ಬ್ಯಾಟರಿ ಬ್ಯಾಂಕ್ ಕಾಣಸಿಗಲಿವೆ. ನಮ್ಮಲ್ಲಿ ನೂರಕ್ಕೆ ನೂರರಷ್ಟು ವಿದ್ಯುತ್ ಸ್ವಾವಲಂಬನೆ ಇರುವುದರಿಂದ ಇದು ಸಾಧ್ಯವಾಗುತ್ತಿದೆ ಎಂದು ಡಾ.ಅಶ್ವತ್ಥನಾರಾಯಣ ನುಡಿದರು.

    ಕರ್ನಾಟಕವನ್ನು ದೇಶದ ಅತ್ಯುತ್ತಮ ಕೈಗಾರಿಕಾ ನೆಲೆಯಾಗಿಸುವ ನಿಟ್ಟಿನಲ್ಲಿ ಸರಕಾರ ವಿದೇಶಿ ಬಂಡವಾಳ ಹೂಡಿಕೆ, ಆವಿಷ್ಕಾರ, ತಂತ್ರಜ್ಞಾನ, ಮೂಲಸೌಕರ್ಯಕ್ಕೆ ಹೆಚ್ಚು ಒತ್ತು ನೀಡಿದೆಯಲ್ಲದೆ, ವಿವಿಧ ನೀತಿಗಳನ್ನು ಜಾರಿಗೆ ತರುವ ಮೂಲಕ ಆಮೂಲಾಗ್ರ ಸುಧಾರಣೆಗಳನ್ನು ಜಾರಿಗೊಳಿಸಿದೆ. ಕೋವಿಡ್ಡೋತ್ತರ ಕಾಲದಲ್ಲಿ ರಾಜ್ಯದಲ್ಲಿ ಉದ್ಯೋಗಾವಕಾಶಗಳನ್ನು ಹೆಚ್ಚಿಸಲು ಸರಕಾರ ಅತ್ಯಗತ್ಯವಾದ ಎಲ್ಲ ಉಪ ಕ್ರಮಗಳನ್ನು ಕೈಗೊಂಡಿದ್ದು, ಆ ನಿಟ್ಟಿನಲ್ಲಿ ಕೆಲಸ ಮಾಡುತ್ತಿದೆ ಎಂದರು.

    ಮೂಲಸೌಕರ್ಯವೆಂದರೆ, ಮುಖ್ಯವಾಗಿ ವಿದ್ಯುತ್, ರಸ್ತೆ, ನೀರು ಇತ್ಯಾದಿಗಳನ್ನು ಆದ್ಯತೆಯ ಮೇರೆಗೆ ಒದಗಿಸುವುದು ಹಾಗೂ ಕೈಗಾರಿಕಾ ಪೂರಕ ವ್ಯವಸ್ಥೆ, ಹೂಡಿಕೆದಾರ ಸ್ನೇಹಿ ನೀತಿ ಇತ್ಯಾದಿಗಳ ಮೂಲಕ ಕರ್ನಾಟಕವು ಹೂಡಿಕೆದಾರರ ನೆಚ್ಚಿನ ತಾಣವಾಗಿದೆ ಎಂದರು ಡಿಸಿಎಂ.

    ಶೃಂಗದಲ್ಲಿ ವಲ್ರ್ಡ್ ಎಕಾನಾಮಿಕ್ ಫೋರಂ ಕ್ರಿಸ್ಟೋಫ್ ವುಲ್ಫ್, ಬಿಸ್ನೆಸ್ ಎಕ್ಸ್‍ಪರ್ಟ್ ಆಂಡ್ರೆ ಆಂಡೋನಿಯನ್, ಟೆಕ್ನಾಲಜಿ ನಿಪುಣ ಯಾಶಿಫುಮಿ ಕಾಟೋ, ಲಾಜಿಸ್ಟಿಕ್ಸ್ ಪರಿಣಿತರಾದ ಮಾರಿಯಮ್ ಅಲ್-ಫೌಂಡ್ರೆ ಮುಂತಾದವರು ವರ್ಚುವಲ್ ಸಭೆಯಲ್ಲಿ ಪಾಲ್ಗೊಂಡು ತಮ್ಮ ವಿಚಾರಗಳನ್ನು ಮಂಡಿಸಿದರು.