ಓರ್ವ ಯುವತಿ ಜೆಪಿ ನಗರದ ಏಳನೇ ಹಂತದಿಂದ ಆಟೋ ಬುಕ್ ಮಾಡಿದ್ದರು. ಆಟೋ ಲೋಕೇಶನ್‌ಗೆ ಬಂದ ತಕ್ಷಣ ಚಾಲಕ ಬ್ಯಾಗ್ ಇಡುವ ನೆಪದಲ್ಲಿ ಯುವತಿಯ ಮೈ ಮುಟ್ಟಿದ್ದ. ಅಲ್ಲದೇ ನೀನು ಸಿನಿಮಾ ಹಿರೋಯಿನ್ ತರಾ ಇದೀಯಾ ಎಂದಿದ್ದನಂತೆ. ಬಳಿಕ ಯುವತಿ ಆಟೋ ಒಳಗೆ ಕುಳಿತುಕೊಳ್ಳುತ್ತಿದ್ದಂತೆ ಜ್ವರ ಇದೀಯಾ ಎಂದು ಹಣೆ ಮುಟ್ಟಿ ಖಾಸಗಿ ಅಂಗಕ್ಕೆ ಕೈ ಹಾಕಿದ್ದಾನೆ. ಕೂಡಲೇ ಯುವತಿ ಆಟೋದಿಂದ ಜಿಗಿದು ಓಡಿಹೋಗಿದ್ದಾರೆ.
ಈ ಕುರಿತು ಯುವತಿ ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ದೂರಿನ ಆಧಾರದ ಮೇಲೆ ಪೊಲೀಸರು ಕಾಮುಕನನ್ನು ಬಂಧಿಸಿದ್ದಾರೆ. ಜೊತೆಗೆ ಆತ ಕೆಲಸ ಮಾಡುತ್ತಿದ್ದ ಕ್ಯಾಬ್ ಕಂಪನಿಗೂ ಮಾಹಿತಿ ನೀಡಿ, ಆತನ ಲೈಸೆನ್ಸ್ ವಿರುದ್ಧ ಕ್ರಮ ತೆಗದುಕೊಳ್ಳಲು ಸೂಚಿಸಿದ್ದಾರೆ. ಸದ್ಯ ಪುಟ್ಟೇನಹಳ್ಳಿ ಪೊಲೀಸರಿಂದ ತನಿಖೆ ಮುಂದುವರಿದಿದೆ.ಇದನ್ನೂ ಓದಿ: ಬಂಗ್ಲೆಗುಡ್ಡೆಯಲ್ಲಿ ಉತ್ಖನನ ಮಾಡುವಂತೆ ರಿಟ್ ಅರ್ಜಿ – ಅರಣ್ಯ ಇಲಾಖೆಯಿಂದಲೂ ಮಾಹಿತಿ ಪಡೆದ ಎಸ್‌ಐಟಿ
ಚಿತ್ರದುರ್ಗ: ಅಕ್ರಮ ಸಂಬಂಧಕ್ಕಾಗಿ (Illicit Relationship) ಗಂಡನನ್ನೇ ಕೊಲೆಗೈದು ಮೂಟೆಕಟ್ಟಿ ಎಸೆದಿದ್ದ ಪತ್ನಿ ಪೊಲೀಸರ ಬಲೆಗೆ ಸಿಲುಕಿರುವ ಘಟನೆ ಚಿತ್ರದುರ್ಗದಲ್ಲಿ (Chitradurga) ನಡೆದಿದೆ.
ಮೃತ ಆಟೋ ಚಾಲಕ ರವಿಕುಮಾರ್
ಚಿತ್ರದುರ್ಗ ತಾಲೂಕಿನ ಈರಜ್ಜನಹಟ್ಟಿ ಗ್ರಾಮದ ಬಳಿ ಜುಲೈ 20ರಂದು ಆಟೋ ಚಾಲಕ ರವಿಕುಮಾರ್ (51) ಕೊಲೆ ನಡೆದಿದ್ದು, ಮೂಟೆ ಕಟ್ಟಿ ಬಿಸಾಕಿದ ಸ್ಥಿತಿಯಲ್ಲಿ ರವಿಕುಮಾರ್ ಮೃತದೇಹ ಪತ್ತೆಯಾಗಿತ್ತು. ಈ ವೇಳೆ ಪೊಲೀಸರ ಬಳಿ ಹೈಡ್ರಾಮ ಮಾಡಿದ್ದ ಪತ್ನಿ ಸುನಿತಾ, ತನ್ನ ಮಗಳ ಗಂಡನ ಮೇಲೆ ಕೊಲೆ ಆರೋಪ ಹೊರಿಸಿದ್ದಳು. ಆದರೆ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿದ ಪೊಲೀಸರು ಅಸಲಿ ಸತ್ಯ ಬಯಲಿಗೆಳೆದಿದ್ದು, ಮೃತ ರವಿಕುಮಾರ್ ಪತ್ನಿ ಸುನೀತಾ, ಪುತ್ರ ವಿಷ್ಣು ಹಾಗು ಆಕೆಯ ಪ್ರಿಯಕರ ಗಣೇಶನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇದನ್ನೂ ಓದಿ: ಬಿಕ್ಲು ಶಿವ ಕೊಲೆ ಕೇಸ್ – ಶಾಸಕ ಬೈರತಿ ಬಸವರಾಜ್‌ಗೆ ಬಿಗ್ ರಿಲೀಫ್
ಬೆಂಗಳೂರು ಮೂಲದವನಾದ ಗಣೇಶ್ ಹಲವು ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಿಯಾಗಿದ್ದು, ಕೆಲ ತಿಂಗಳಿಂದ ಕೆಳಗೋಟೆ ಬಡಾವಣೆಯಲ್ಲಿ ವಾಸವಾಗಿದ್ದ. ಈ ವೇಳೆ ಸುನೀತಾ ಜೊತೆ ಅನೈತಿಕ ಸಂಬಂಧ ಹೊಂದಿದ್ದು, ಇವರ ಕಳ್ಳಾಟಕ್ಕೆ ಅಡ್ಡಿಯಾಗಿದ್ದ ರವಿಕುಮಾರ್ ಕೊಲೆಗೆ ಸಂಚು ರೂಪಿಸಿದ್ದರು. ಸುನಿತಾ, ಗಣೇಶನಲ್ಲಿದ್ದ ಹಣದಾಸೆಗೆ ಬಲಿಯಾಗಿ ತನ್ನ ಗಂಡನನ್ನೆ ಕೊಲ್ಲಲು ಸಾಥ್ ನೀಡಿದ್ದಾಳೆ. ಡಿವೈಎಸ್ಪಿ ದಿನಕರ್ ಹಾಗು ಸಿಪಿಐ ಮುದ್ದುರಾಜ್ ನೇತೃತ್ವದಲ್ಲಿ ತನಿಖೆ ನಡೆಸಲಾಗಿದ್ದು, ಚಿತ್ರದುರ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಕರ್ತವ್ಯ ಲೋಪ; ಧಾರವಾಡ ಜಿಲ್ಲಾ ಪಂಚಾಯಿತಿ ಯೋಜನಾಧಿಕಾರಿ ಅಮಾನತು
ಮರಾಠಿಯಲ್ಲಿ (Marathi) ಏಕೆ ಮಾತನಾಡುತ್ತಿಲ್ಲ ಎಂದು ಕೇಳಿದಾಗ ರಿಕ್ಷಾ ಚಾಲಕ, ‘ನಾನು ಹಿಂದಿಯಲ್ಲಿ ಮಾತನಾಡುತ್ತೇನೆ’ ಎಂದು ಪದೇ ಪದೇ ಹೇಳಿರುವುದು ವೀಡಿಯೊದಲ್ಲಿದೆ. ಸಾರ್ವಜನಿಕವಾಗಿ ಮರಾಠಿ ಬಳಸದಿರುವ ಬಗ್ಗೆ ಚಾಲಕನನ್ನು ಪ್ರಶ್ನಿಸಿದ್ದರು. ಚಾಲಕ ಹಿಂದಿ ಮತ್ತು ಭೋಜ್‌ಪುರಿಯಲ್ಲಿ ಮಾತನಾಡಲು ಇಷ್ಟಪಡುತ್ತೇನೆ ಎಂದು ಪ್ರತಿಕ್ರಿಯಿಸಿದ್ದ.
‘ಯಾರಾದರೂ ಮರಾಠಿ ಭಾಷೆ, ಮಹಾರಾಷ್ಟ್ರ ಅಥವಾ ಮರಾಠಿ ಜನರನ್ನು ಅವಮಾನಿಸಲು ಧೈರ್ಯ ಮಾಡಿದರೆ, ಅವರಿಗೆ ನಿಜವಾದ ಶಿವಸೇನಾ ಶೈಲಿಯಲ್ಲಿ ಉತ್ತರ ಸಿಗುತ್ತದೆ. ನಾವು ಸುಮ್ಮನಿರುವುದಿಲ್ಲ’ ಎಂದು ಶಿವಸೇನೆ ಉದ್ಧವ್ ಬಣದ ಉದಯ್ ಜಾಧವ್ ಎಚ್ಚರಿಸಿದ್ದಾರೆ.
ಆ ಚಾಲಕ ಮಹಾರಾಷ್ಟ್ರ ಮತ್ತು ಮರಾಠಿ ಮನೂಸ್ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದ. ಅವನಿಗೆ ತಕ್ಕ ಪಾಠ ಕಲಿಸಿದ್ದೇವೆ. ರಾಜ್ಯದ ಜನರ ಕ್ಷಮೆಯಾಚಿಸುವಂತೆ ಮಾಡಿದ್ದೇವೆಂದು ತಿಳಿಸಿದ್ದಾರೆ.
-ರೀಲ್ಸ್ ನೋಡಿಕೊಂಡು ಲಾರಿ ಚಲಾಯಿಸಿದ್ದು ಘಟನೆಗೆ ಕಾರಣ ಎಂದು ಆರೋಪ
ಆನೇಕಲ್: ಶಾಲಾ ಬಸ್ ಹಾಗೂ ಲಾರಿ ನಡುವೆ ಸಿಲುಕಿ ಆಟೋ ಅಪ್ಪಚ್ಚಿಯಾಗಿದ್ದು, ಚಾಲಕ ಪವಾಡ ಸದೃಶವಾಗಿ ಪಾರಾಗಿರುವ ಘಟನೆ ಹೊಸೂರು (Hosuru) ಮುಖ್ಯರಸ್ತೆಯ ಕೂಡ್ಲು ಗೇಟ್ (Kudlu Gate) ಬಳಿ ನಡೆದಿದೆ.
ಕೂಡ್ಲು ಗೇಟ್ ಬಳಿ ಹೋಗುತ್ತಿದ್ದಾಗ ಶಾಲಾ ಬಸ್‌ನ ಚಾಲಕ ದಿಢೀರ್ ಬ್ರೇಕ್ ಹಾಕಿದ್ದಾನೆ. ಇದರಿಂದ ಹಿಂದೆ ಇದ್ದ ಆಟೋ ಚಾಲಕ ಕೂಡ ತಕ್ಷಣ ಬ್ರೇಕ್ ಹಾಕಿದ್ದಾನೆ. ಆದರೆ ಆಟೋ ಹಿಂದಿದ್ದ ಲಾರಿ ಚಾಲಕ ಬ್ರೇಕ್ ಹಾಕದೇ ಆಟೋಗೆ ಡಿಕ್ಕಿ ಹೊಡೆದಿದ್ದಾನೆ. ಡಿಕ್ಕಿಯಾದ ರಭಸಕ್ಕೆ ಶಾಲಾ ಬಸ್ ಹಾಗೂ ಲಾರಿ ನಡುವೆ ಸಿಲುಕಿ ಆಟೋ ಅಪ್ಪಚ್ಚಿಯಾಗಿದೆ.ಇದನ್ನೂ ಓದಿ: ನಮ್ಮ ಸರ್ಕಾರ 5 ವರ್ಷ ಬಂಡೆ ರೀತಿ ಇರುತ್ತೆ: ಒಟ್ಟಾಗಿಯೇ ಇದ್ದೇವೆ ಎಂದು ಹೇಳಿ ಡಿಕೆಶಿಯ ಕೈ ಎತ್ತಿದ ಸಿಎಂ
ಇದೆಲ್ಲದರ ನಡುವೆ ಆಟೋ ಚಾಲಕ ಸಿಲುಕಿ ನರಳಾಡಿದ್ದು, ಸ್ಥಳೀಯರು ಬಂದು ರಕ್ಷಣೆ ಮಾಡಿದ್ದಾರೆ. ಆಟೋ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಸಣ್ಣ-ಪುಟ್ಟ ಗಾಯಗಳಿಂದ ಆಟೋ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ.
ಹಾಸನ: ಎದೆನೋವು ಕಾಣಿಸಿಕೊಂಡ ಹಿನ್ನೆಲೆ ತಾನೇ ಆಟೋ ಚಲಾಯಿಸಿಕೊಂಡು ಆಸ್ಪತ್ರೆಗೆ ಸೇರಿದ್ದ ಚಾಲಕ ಹೃದಯಾಘಾತದಿಂದ (Heart Attack) ಮೃತಪಟ್ಟಿರುವ ಘಟನೆ ಹಾಸನ (Hassan) ಜಿಲ್ಲೆಯಲ್ಲಿ ನಡೆದಿದೆ.
ಗೋವಿಂದ (37) ಹೃದಯಾಘಾತದಿಂದ ಸಾವನ್ನಪ್ಪಿದ ಆಟೋ ಚಾಲಕ. ಹಾಸನದ ಸಿದ್ದೇಶ್ವರ ನಗರದಲ್ಲಿ ಘಟನೆ ನಡೆದಿದೆ. ಇಂದು ಬೆಳಗ್ಗೆ ಏಳು ಗಂಟೆ ಸಮಯದಲ್ಲಿ ಆಟೋ ಚಲಾಯಿಸುವಾಗ (Auto Driver) ಗೋವಿಂದ ಅವರಿಗೆ ಎದೆನೋವು ಕಾಣಿಸಿಕೊಂಡಿದೆ. ಇದನ್ನೂ ಓದಿ: ಕೆಆರ್‌ಎಸ್ ಡ್ಯಾಂ ಐತಿಹಾಸಿಕ ದಾಖಲೆಗೆ 1 ಅಡಿಯಷ್ಟೇ ಬಾಕಿ
ತಕ್ಷಣವೇ ಆಟೋ ಚಲಾಯಿಸಿಕೊಂಡು ಗೋವಿಂದ ಜಿಲ್ಲಾಸ್ಪತ್ರೆಗೆ ತೆರಳಿದ್ದರು. ಸರ್ಕಾರಿ ಆಸ್ಪತ್ರೆಯಲ್ಲಿ ಗೋವಿಂದ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಒಂದು ತಿಂಗಳ ಅಂತರದಲ್ಲಿ ಹಾಸನ ಜಿಲ್ಲೆಯಲ್ಲಿ ಹದಿನೇಳು ಮಂದಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಇದನ್ನೂ ಓದಿ: ಐದು ಹುಲಿಗಳ ಸಾವು – ಹಸು ಕೊಂದಿದ್ದಕ್ಕೆ ವಿಷ ಹಾಕಿದ್ನಾ ಹಸು ಮಾಲೀಕ?
ಮಡಿಕೇರಿ: ಪ್ರಯಾಣಿಕರೊಬ್ಬರು 40 ರೂ. ಬದಲಿಗೆ 34 ಸಾವಿರ ರೂ. ಗೂಗಲ್ ಪೇ ಮಾಡಿದ್ದರು. 34 ಸಾವಿರ ಹಣವನ್ನು ಹಿಂತಿರುಗಿಸುವ ಮೂಲಕ ಮಡಿಕೇರಿಯ ಆಟೋ ಚಾಲಕ (Auto Driver) ಸತೀಶ್ ಹಾಗೂ ಆಟೋ ಮಾಲೀಕರ, ಚಾಲಕರ ಸಂಘದವರು ಪ್ರಾಮಾಣಿಕತೆ ಮೆರೆದಿದ್ದಾರೆ.
ಜೂ. 11ರಂದು ಎಮ್ಮೆಮಾಡು ನಿವಾಸಿ ಆಲಿ ಎಂಬವರು ಮಡಿಕೇರಿಯ (Madikeri) ಕಾನ್ವೆಂಟ್ ಜಂಕ್ಷನ್ ಬಳಿಯಿಂದ ಆಟೋ ಏರಿದ್ದು, ಸಬ್ ರಿಜಿಸ್ಟ್ರಾರ್ ಕಛೇರಿ ಬಳಿ ಇಳಿದಿದ್ದರು. ಅವರು ಆಟೋ ಬಾಡಿಗೆಯ ಹಣ 40 ರೂ. ನೀಡಬೇಕಿತ್ತು. ಆದರೆ ಅವರ ಕೈಯಲ್ಲಿ ಹಣವಿರದ ಕಾರಣ ಬಾಡಿಗೆಯ ಹಣ ಸೇರಿಸಿ 500 ರೂ. ಗೂಗಲ್ ಪೇ ಮಾಡುವುದಾಗಿ ಹೇಳಿ, ಬಾಡಿಗೆ ಹಣ ಕಳೆದು ಉಳಿದ 460 ರೂ. ನಗದನ್ನು ನೀಡುವಂತೆ ಕೇಳಿಕೊಂಡಿದ್ದರು. ಇದನ್ನೂ ಓದಿ: ದುರಂತಕ್ಕೀಡಾದ ಏರ್ ಇಂಡಿಯಾ ವಿಮಾನದ 12ರಲ್ಲಿ 9 ಸಿಬ್ಬಂದಿ ಮುಂಬೈ ವಾಸಿಗಳು
ಆಟೋ ಚಾಲಕ ಸತೀಶ್ ಅವರು ತಮ್ಮ ಬಳಿ ಅಷ್ಟು ಹಣ ಇಲ್ಲದಿರುವುದರಿಂದ 340 ರೂ. ಗೂಗಲ್ ಪೇ ಮಾಡುವಂತೆ ಹೇಳಿ, ಆಲಿ ಅವರಿಗೆ 300 ರೂ. ಕೊಟ್ಟಿದ್ದರು. ಆದರೆ ಆಲಿಯವರು 340 ರೂ.ಗಳನ್ನು ಗೂಗಲ್ ಪೇ ಮಾಡುವ ಬದಲಾಗಿ ಅರಿವಿಲ್ಲದೆ 34,000 ರೂ.ಗಳನ್ನು ಚಾಲಕನ ಸ್ಕ್ಯಾನರ್ ಮೂಲಕ ಗೂಗಲ್ ಪೇ ಮಾಡಿದ್ದರು. ನಂತರ ಇದ್ಯಾವುದರ ಅರಿವಿಲ್ಲದೆ ಇಬ್ಬರೂ ಅವರವರ ಪಾಡಿಗೆ ಹೊರಟು ಹೋಗಿದ್ದರು. ಇದನ್ನೂ ಓದಿ: 1.57 ಕೋಟಿ ಮೌಲ್ಯದ ಚಿನ್ನಾಭರಣ ದೋಚಿದ ಕೇರ್ ಟೇಕರ್ ಲೇಡಿ ಅರೆಸ್ಟ್
ಇದಾದ ಸ್ವಲ್ಪ ಹೊತ್ತಿನ ಬಳಿಕ ಟ್ರಾನ್ಸಾಕ್ಷನ್ ಹಿಸ್ಟರಿ ಪರಿಶೀಲಿಸಿದ ಚಾಲಕ ಸತೀಶ್ ಅವರಿಗೆ ವಿಷಯ ಗಮನಕ್ಕೆ ಬಂದಿದೆ. ಹೆಚ್ಚು ಹಣ ಜಮೆ ಮಾಡಿದ ಆಲಿಯವರನ್ನು ಸಂಪರ್ಕಿಸಲು ಯಾವುದೇ ಸಂಪರ್ಕ ಸಂಖ್ಯೆ ಸ್ಕ್ಯಾನರ್‌ನಲ್ಲಿ ಕೂಡ ಸಿಗದ ಕಾರಣ ಅವರನ್ನು ಸಂಪರ್ಕಿಸಲು ಕಷ್ಟವಾಗಿತ್ತು. ಹಾಗೆಯೇ ಹೆಚ್ಚುವರಿ ಹಣ ನೀಡಿದ ಆಲಿಯವರಿಗೆ ಜೂ. 12ರ ಮಧ್ಯಾಹ್ನದವರೆಗೂ ವಿಷಯ ಗಮನಕ್ಕೆ ಬಂದಿರಲಿಲ್ಲ.
ಬಳಿಕ ಬ್ಯಾಂಕಿಗೆ ಬಂದು ಪಾಸ್ ಪುಸ್ತಕವನ್ನು ಪರಿಶೀಲಿಸಿದಾಗ 34,000 ರೂ.ಗಳನ್ನು ಹಿಂದಿನ ದಿನ ಆಟೋ ಚಾಲಕನಿಗೆ ನೀಡಿರುವುದು ಗೋಚರಿಸಿದೆ. ಈ ಕುರಿತು ಆಟೋ ಮಾಲೀಕರ, ಚಾಲಕರ ಸಂಘಕ್ಕೆ ಮಾಹಿತಿ ನೀಡಿದ ಮೇರೆಗೆ ಸಂಘದ ಮೂಲಕ ಮಾಹಿತಿಯನ್ನು ಗ್ರೂಪ್‌ನಲ್ಲಿ ಶೇರ್ ಮಾಡಲಾಗಿತ್ತು. ಇತರೆ ಚಾಲಕರು ಜೂ. 11ರಂದು ನಡೆದ ಘಟನೆಯ ಬಗ್ಗೆ ಚಾಲಕ ಸತೀಶ್ ತಿಳಿಸಿರುವುದಾಗಿ ಸಂಘದವರಲ್ಲಿ ಮಾಹಿತಿ ನೀಡಿದ್ದರು. ಇದನ್ನೂ ಓದಿ: ಕೆಆರ್‌ಎಸ್ ಅಣೆಕಟ್ಟೆಯಲ್ಲಿ ಭದ್ರತಾ ವೈಫಲ್ಯ?- ಡ್ಯಾಂನ ಕ್ರಸ್ಟ್ ಗೇಟ್ ಬಳಿ ಓಡಾಡುತ್ತ ಸೆಲ್ಫಿ ವೀಡಿಯೋ
ಸಂಘದಿಂದ ಚಾಲಕ ಸತೀಶ್ ಅವರನ್ನು ಸಂಪರ್ಕಿಸಿ, ಘಟನೆಯ ಸಂಪೂರ್ಣ ಮಾಹಿತಿಯನ್ನು ಕಲೆ ಹಾಕಲಾಗಿತ್ತು. ಜೂ. 11ರಂದೇ ಆಲಿರವರ ಖಾತೆಗೆ 1 ರೂ. ಗೂಗಲ್ ಪೇ ಮಾಡಿ ಅವರದ್ದೇ ಖಾತೆ ಎಂಬ ಬಗ್ಗೆ ಖಾತರಿ ಪಡಿಸುವಂತೆ ಮೆಸೇಜ್ ಮಾಡಿರುವುದಾಗಿ ಚಾಲಕ ಸತೀಶ್ ಸ್ಪಷ್ಟಪಡಿಸಿದ್ದರು. ಆದರೆ ಆಲಿ ಅವರು ಅದನ್ನು ಗಮನಿಸಿರಲಿಲ್ಲ. ಇದನ್ನೂ ಓದಿ: ನಾರಾಯಣಪುರ ಜಲಾಶಯಕ್ಕೆ ಒಳಹರಿವು ಹೆಚ್ಚಳ – ಕೃಷ್ಣಾ ನದಿಗೆ 29,226 ಕ್ಯೂಸೆಕ್ ನೀರು ಬಿಡುಗಡೆ
ಜೂ. 12ರಂದು ಚಾಲಕ ಸತೀಶ್ ಅವರು ಆಲಿರವರಿಗೆ ಸಂಘದ ಮಧ್ಯಸ್ಥಿಕೆಯಲ್ಲಿ ಹಣವನ್ನು ಹಿಂತಿರುಗಿಸಿ ಮಾನವೀಯತೆ ಮೆರೆದಿದ್ದಾರೆ. ಹಣ ಕಳೆದುಕೊಂಡಿದ್ದ ಆಲಿ ಅವರು ಸಂಘದ ಈ ಸೇವೆಯನ್ನು ಮೆಚ್ಚಿ ಸಂಘಕ್ಕೆ ಧನ ಸಹಾಯ ನೀಡಲು ಮುಂದಾದರು. ಆದರೆ ಇದಕ್ಕೆ ಸಂಘವು ನಿರಾಕರಿಸಿರುವುದಾಗಿ ಸಂಘದ ಪ್ರಧಾನ ಕಾರ್ಯದರ್ಶಿ ದಿನು ಬಾರನ ಅವರು ತಿಳಿಸಿದ್ದಾರೆ. ಇದನ್ನೂ ಓದಿ: ಬ್ಲ್ಯಾಕ್‌ಬಾಕ್ಸ್‌ನಲ್ಲಿ ಅಡಗಿದೆ ವಿಮಾನ ದುರಂತದ ರಹಸ್ಯ – ನಾಳೆಯೊಳಗೆ ಅಪಘಾತಕ್ಕೆ ಅಸಲಿ ಕಾರಣ ಸಿಗುತ್ತಾ?
ಇಂತಹ ಪ್ರಾಮಾಣಿಕ ಸೇವೆಯ ಪ್ರತಿಫಲವಾಗಿ ಆಟೋ ಚಾಲಕರ ಬಗ್ಗೆ ಉತ್ತಮ ಅಭಿಪ್ರಾಯ ಮೂಡಿರುವುದು ದೊಡ್ಡ ಕೊಡುಗೆಯಾಗಿದೆ. ಯಾವುದೇ ವಸ್ತು ಆಗಿರಲಿ, ಕಳೆದುಕೊಂಡವರು ಯಾರೇ ಆಗಿರಲಿ ವಾಸ್ತವ ಅರಿತಲ್ಲಿ ಈ ರೀತಿ ಸಹಕರಿಸಲು ಸಂಘ ಸದಾ ಸಿದ್ಧವಾಗಿರುತ್ತದೆ ಎಂದು ಇತರೆ ಚಾಲಕರಿಗೆ ಮಾದರಿಯಾಗಿ ಪ್ರಾಮಾಣಿಕತೆ ಮೆರೆದ ಆಟೋ ಚಾಲಕ ಸತೀಶ್ ಅವರಿಗೆ ಸಂಘದ ಪರವಾಗಿ ಕೃತಜ್ಞತೆ ಸಲ್ಲಿಸಿದ್ದಾರೆ.
ಚಿಕ್ಕಬಳ್ಳಾಪುರ: ಲಾಂಗ್ ಮೂಲಕ ಕೇಕ್ ಕಟ್ ಮಾಡಿ ಹುಟ್ಟುಹಬ್ಬ (Birthday) ಆಚರಣೆ ಮಾಡಿದ ಆಟೋ ಚಾಲಕನನ್ನು (Auto Driver) ಚಿಕ್ಕಬಳ್ಳಾಪುರ (Chikkaballapura) ಜಿಲ್ಲೆಯ ಗೌರಿಬಿದನೂರು ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.
ಗೌರಿಬಿದನೂರು ತಾಲೂಕಿನ ವೈಚಕೂರಹಳ್ಳಿ ನಿವಾಸಿ ಆಟೋ ಚಾಲಕ ಅನಿಲ್ ಕುಮಾರ್ ತನ್ನ ಹುಟ್ಟು ಹಬ್ಬದಂದು ಕಿಂಗ್ ಎಂದು ಕೇಕ್ ಮಾಡಿಸಿ ಮಾರಕಾಸ್ತç ಲಾಂಗ್‌ನಲ್ಲಿ ಕಟ್ ಮಾಡಿ ಬರ್ತ್‌ಡೇ ಆಚರಿಸಿಕೊಂಡಿದ್ದ. ಬಳಿಕ ಆ ವೀಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದ. ಇದನ್ನೂ ಓದಿ: ಏಕದಿನಕ್ಕೆ ಆಸೀಸ್ ಆಲ್‌ರೌಂಡರ್ ಮ್ಯಾಕ್ಸ್‌ವೆಲ್ ದಿಢೀರ್ ನಿವೃತ್ತಿ
ಬೆಂಗಳೂರು: ಚಪ್ಪಲಿಯಿಂದ ಹೊಡೆದಾಗ ನನ್ನ ಮನಸ್ಸಿಗೆ ತುಂಬಾ ಬೇಜಾರಾಗಿದೆ, ಯಾವುದೇ ಕಾರಣಕ್ಕೂ ಕೇಸ್ ವಾಪಸ್ ಪಡೆಯಲ್ಲ ಎಂದು ಹಿಂದಿ ಮಹಿಳೆಯಿಂದ ಹಲ್ಲೆಗೊಳಗಾದ ಆಟೋ ಚಾಲಕ ಲೋಕೇಶ್ ಹೇಳಿದ್ದಾರೆ.
ಈ ಕುರಿತು ‘ಪಬ್ಲಿಕ್ ಟಿವಿ’ ಜೊತೆ ಮಾತನಾಡಿದ ಅವರು, ಹಲ್ಲೆ ಮಾಡಿದ ಮಹಿಳೆಯಲ್ಲಿ ಪಶ್ಚಾತ್ತಾಪ ಕಾಣುತ್ತಿದೆ. ಭಾನುವಾರ ಮಹಿಳೆ ಹಾಗೂ ಆಕೆಯ ಪತಿ ಬಂದು ಕ್ಷಮೆ ಕೇಳಿದ್ದಾರೆ. ಆದರೆ ಚಪ್ಪಲಿಯಿಂದ ಹೊಡೆದಾಗ ನನ್ನ ಮನಸ್ಸಿಗೆ ತುಂಬಾ ಬೇಸರ ಆಗಿತ್ತು. ನಾನು ಎರಡು ದಿನ ಮನೆಯವರ ಜೊತೆ ಮಾತನಾಡಿಲ್ಲ. ಮುಖ ತೋರಿಸಲು ಆಗುತ್ತಿರಲಿಲ್ಲ. ಯಾವುದೇ ಕಾರಣಕ್ಕೂ ಕೇಸ್ ವಾಪಸ್ ಪಡೆಯಲ್ಲ ಎಂದು ತಿಳಿಸಿದ್ದಾರೆ.ಇದನ್ನೂ ಓದಿ: ಚಪ್ಪಲಿಯಿಂದ ಹೊಡೆದ ಪ್ರಕರಣ – ಆಟೋ ಚಾಲಕನ ಕಾಲಿಗೆ ಬಿದ್ದು ಕ್ಷಮೆ ಕೇಳಿದ ದಂಪತಿ
ಚಪ್ಪಲಿಯಿಂದ ಹೊಡೆದ ವೀಡಿಯೋ ವೈರಲ್ ಆದ ಬಳಿಕ ಮಹಿಳೆಯ ವಿರುದ್ಧ ಆಕ್ರೋಶ ಹೆಚ್ಚಾಗಿತ್ತು. ಇದರ ಬೆನ್ನಲ್ಲೇ ಮಹಿಳೆ ಹಾಗೂ ಆಕೆಯ ಪತಿ ಆಟೋ ಚಾಲಕನ ಕಾಲಿಗೆ ಬಿದ್ದು ಕ್ಷಮೆಯಾಚಿಸಿದ್ದರು. ಜೊತೆಗೆ ಎಲ್ಲಾ ಕನ್ನಡಿಗರು ನಮ್ಮನ್ನು ಕ್ಷಮಿಸಿ. ಆಟೋ ಚಾಲಕರ ಬಗ್ಗೆ ಗೌರವವಿದೆ. ಬೆಂಗಳೂರನ್ನು ಪ್ರೀತಿಸುತ್ತೇವೆ. ಇಲ್ಲಿನ ವಾತಾವರಣವನ್ನು ಪ್ರೀತಿಸುತ್ತೇವೆ ಎಂದಿದ್ದರು.
ಘಟನೆ ಸಂಬಂಧ ಬೆಳ್ಳಂದೂರು ಪೊಲೀಸ್ ಠಾಣೆಯಲ್ಲಿ (Bellanduru Police Station) ಮಹಿಳೆ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು. ಭಾನುವಾರ ಪೊಲೀಸರು ಮಹಿಳೆಯನ್ನು ಕರೆಸಿ, ವಿಚಾರಣೆ ನಡೆಸಿ ಹೇಳಿಕೆ ದಾಖಲಿಸಿಕೊಂಡಿದ್ದರು. ವಿಚಾರಣೆ ವೇಳೆ, ಆಟೋ ಚಾಲಕನ ಮೇಲೆ ಹಲ್ಲೆ ಮಾಡಿರುವುದನ್ನು ಮಹಿಳೆ ಒಪ್ಪಿಕೊಂಡಿದ್ದಳು.
ಘಟನೆ ಏನು?
ಬೆಳ್ಳಂದೂರಿನ ಸೆಂಟ್ರಲ್ ಮಾಲ್ ಬಳಿ ಗರ್ಭಿಣಿ ಮಹಿಳೆಯೊಬ್ಬರು ಆಸ್ಪತ್ರೆಗೆ ತೆರಳಿ ವಾಪಸ್ ಆಗುತ್ತಿದ್ದರು. ಈ ವೇಳೆ ಬೆಳ್ಳಂದೂರು ಬಳಿ ಆಕೆಯ ದ್ವಿಚಕ್ರ ವಾಹನಕ್ಕೆ ಹಿಂದಿನಿಂದ ಆಟೋ ಡಿಕ್ಕಿಯಾಗಿತ್ತು. ಇದನ್ನು ಪ್ರಶ್ನಿಸಿದ್ದಕ್ಕೆ ಆಟೋ ಡ್ರೈವರ್ ಬೈದು ಹಲ್ಲೆಗೆ, ಯತ್ನಿಸಿದ್ದ. ಹೀಗಾಗಿ ಕೋಪಗೊಂಡು ಚಪ್ಪಲಿಯಿಂದು ಹಲ್ಲೆ ಮಾಡಿದೆ ಎಂದು ಪೊಲೀಸರ ಮುಂದೆ ಮಹಿಳೆ ಹೇಳಿಕೊಂಡಿದ್ದರು. ಇದನ್ನೂ ಓದಿ: ಬೆಂಗಳೂರು | ಆಟೋ ಚಾಲಕನ ಮೇಲೆ ಚಪ್ಪಲಿಯಿಂದ ಹಲ್ಲೆ ಮಾಡಿದ್ದ ಮಹಿಳೆಯ ವಿಚಾರಣೆ
ಬೆಂಗಳೂರು: ಆಟೋ ಚಾಲಕನಿಗೆ (Auto Driver) ಹಿಂದಿ ಮಹಿಳೆ ಚಪ್ಪಲಿಯಿಂದ ಹೊಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಕ್ರೋಶ ಹೆಚ್ಚಾದ ಬೆನ್ನಲ್ಲೇ ಬಿಹಾರ ಮೂಲದ ಮಹಿಳೆ ಹಾಗೂ ಆಕೆಯ ಪತಿ ಆಟೋ ಚಾಲಕನ ಕಾಲಿಗೆ ಬಿದ್ದು ಕ್ಷಮೆಯಾಚಿಸಿದ್ದಾರೆ.
ನಾವು ಹೋಗುವಾಗ ಏನೋ ಘಟನೆ ಆಯ್ತು. ಬೇಕು ಬೇಕು ಅಂತ ಮಾಡಿದ್ದಲ್ಲ. ನಾನು ಕ್ಷಮೆ ಕೇಳುತ್ತೇನೆ. ನಾನು ಗರ್ಭಿಣಿ. ಗರ್ಭಪಾತ ಆಗುವ ಭಯದಲ್ಲಿ ಹೀಗೆ ಮಾತನಾಡಿದೆ. ಬೆಂಗಳೂರು (Bengaluru) ಅಂದರೆ ತುಂಬಾ ಇಷ್ಟ.ಬೆಂಗಳೂರು, ಬೆಂಗಳೂರು ಸಂಸ್ಕೃತಿಯನ್ನು ತುಂಬಾ ಗೌರವಿಸುತ್ತೇವೆ ಹಾಗೂ ಪ್ರೀತಿಸುತ್ತೇವೆ ಎಂದು ಮಹಿಳೆ ಹೇಳಿದ್ದಾಳೆ. ಇದನ್ನೂ ಓದಿ: ತಪ್ಪಿಲ್ಲದಿದ್ರೂ ನನ್ನ ಮೇಲೆ ಚಪ್ಪಲಿಯಿಂದ ಹಲ್ಲೆ ಮಾಡಿದ್ದಾರೆ: ಆಟೋ ಚಾಲಕ
ಗರ್ಭಿಣಿಯಾಗಿರುವ ಮಹಿಳೆ, ಆಸ್ಪತ್ರೆಗೆ ತೆರಳಿ ವಾಪಸ್ ಆಗುತ್ತಿದ್ದಳು. ಈ ವೇಳೆ ಬೆಳ್ಳಂದೂರು ಬಳಿ ಆಕೆಯ ದ್ವಿಚಕ್ರ ವಾಹನಕ್ಕೆ ಹಿಂದಿನಿಂದ ಆಟೋ ಡಿಕ್ಕಿಯಾಗಿತ್ತು ಎಂದು ಹೇಳಿಕೊಂಡಿದ್ದಾಳೆ. ಇದನ್ನು ಪ್ರಶ್ನಿಸಿದ್ದಕ್ಕೆ ಆಟೋ ಡ್ರೈವರ್ ಬೈದು ಹಲ್ಲೆಗೆ, ಯತ್ನಿಸಿದ್ದಾನೆ ಎಂದು ಮಹಿಳೆ ಆರೋಪಿಸಿದ್ದಳು. ಘಟನೆ ವೇಳೆ ಕೋಪಗೊಂಡು ಚಪ್ಪಲಿಯಿಂದು ಹಲ್ಲೆ ಮಾಡಿದೆ ಎಂದು ಪೊಲೀಸರ ಮುಂದೆ ಮಹಿಳೆ ಹೇಳಿಕೊಂಡಿದ್ದಳು. ಮಹಿಳೆಯ ಹೇಳಿಕೆ ದಾಖಲಿಸಿಕೊಂಡು ಪೊಲೀಸರು ಆಕೆಯನ್ನು ವಾಪಸ್ ಕಳುಹಿಸಿದ್ದರು. ಇದನ್ನೂ ಓದಿ: ಮುಂಬೈ ವಿರುದ್ಧ ಪಂಜಾಬ್‌ಗೆ ಜಯ – ಐಪಿಎಲ್‌ನಲ್ಲಿ ನಾಳೆ ಆರ್‌ಸಿಬಿ Vs ಕಿಂಗ್ಸ್ ಫೈನಲ್
– ಹೊರ ರಾಜ್ಯದಿಂದ ಬಂದವರ ಹಾವಳಿ ಹೆಚ್ಚಾಗಿದೆ ಎಂದ ಚಾಲಕ – ಕೂಡಲೇ ಆಕೆಯನ್ನ ಅರೆಸ್ಟ್ ಮಾಡಬೇಕು ಎಂದು ಒತ್ತಾಯ
ಬೆಂಗಳೂರು: ಆಟೋ ಚಾಲಕನಿಗೆ (Auto Driver) ಹಿಂದಿಯಲ್ಲಿ ಆವಾಜ್ ಹಾಕಿ ಚಪ್ಪಲಿಯಿಂದ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನನ್ನ ತಪ್ಪು ಇಲ್ಲದಿದ್ದರೂ ನನ್ನ ಮೇಲೆ ಚಪ್ಪಲಿಯಿಂದ ಹಲ್ಲೆ ಮಾಡಿದ್ದಾರೆ ಎಂದು ಹಲ್ಲೆಗೊಳಗಾದ ಆಟೋ ಚಾಲಕ ಲೋಕೇಶ್ ಹೇಳಿದ್ದಾರೆ.
ಈ ಕುರಿತು ‘ಪಬ್ಲಿಕ್ ಟಿವಿ’ ಜೊತೆ ಮಾತನಾಡಿದ ಅವರು, ನನ್ನ ಪಾಡಿಗೆ ನಾನು ರೈಟ್ ಸೈಡಿಗೆ ಆಟೋ ಚಲಾಯಿಸಿದೆ. ಯಾರೋ ಕೂಗಾಡೋದು ಕೇಳಿಸಿತು. ಹಿಂದೆ ತಿರುಗಿ ನೋಡಿದೆ. ಮಹಿಳೆಯೊಬ್ಬರು ಕೈ ತೋರಿಸಿ ಬೈಯುತ್ತಿದ್ದರು. ಆಟೋ ಸೈಡಿಗೆ ಹಾಕಿದ ಕೂಡಲೇ ಬಂದು ಹಿಂದಿಯಲ್ಲಿ ಕೆಟ್ಟದಾಗಿ ಬೈಯ್ಯಲು ಶುರು ಮಾಡಿದರು. ಕೂಡಲೇ ನಾನು ಮೊಬೈಲ್ ಅಲ್ಲಿ ರೆಕಾರ್ಡ್ ಮಾಡಲು ಶುರು ಮಾಡಿದೆ. ನೀವು ನನ್ನ ಯಾಕೆ ಬೈತೀರಿ? ನಾನೇನು ಮಾಡಿದೆ ಎಂದೆ. ಆಟೋ ನನ್ನ ಕಾಲಿಗೆ ಟಚ್ ಮಾಡಿದೆ, ನನ್ನ ಕಾಲ ಮೇಲೆ ಚಕ್ರ ಹತ್ತಿಸಿದ್ಯಾ ಎಂದರು. ಇಲ್ಲ ಎಂದು ಹೇಳಿದ ಕೂಡಲೇ ಚಪ್ಪಲಿಯಲ್ಲಿ ಹೊಡೆಯಲು ಶುರು ಮಾಡಿದರು. ಇಷ್ಟೆಲ್ಲಾ ಆಗುತ್ತಿದ್ದರೂ ಆಕೆಯ ಜೊತೆಗೆ ಇದ್ದ ಗಂಡ ವೀಡೀಯೊ ಮಾಡುತ್ತಿದ್ದ ಎಂದರು. ಇದನ್ನೂ ಓದಿ: ಬೆಂಗಳೂರು | ಆಟೋ ಚಾಲಕನಿಗೆ ಹಿಂದಿಯಲ್ಲಿ ಯುವತಿಯ ಆವಾಜ್ – ಚಪ್ಪಲಿಯಲ್ಲಿ ಹಲ್ಲೆ ನಡೆಸಿ ಕ್ರೌರ್ಯ
ಸುತ್ತಲು ಇದ್ದ ವಾಹನ ಸವಾರರು ಮಾತಲ್ಲಿ ಬಗೆಹರಿಸಿ ಎಂದು ಹೇಳಿದರೂ ಕೇಳಲಿಲ್ಲ. ಏಕಾಏಕಿ ಚಪ್ಪಲಿಯಿಂದ ಮುಖ, ಎದೆ, ಮೈ ಮೇಲೆ ಹೊಡೆದರು. ಪೊಲೀಸ್ ಸ್ಟೇಷನ್‌ಗೆ ಹೋಗೋಣ ಎಂದು ಯುವತಿ ಹೇಳಿದರು. ಸರಿ ಎಂದು ನಾನು ಸ್ಟೇಷನ್ ಬಳಿ ಬಂದೆ. ಆದರೇ ಆಕೆ ಮಾತ್ರ ಬಂದಿಲ್ಲ. ಈಗಾಗಲೇ ಮಹಿಳೆ ಮೇಲೆ ಎಫ್‌ಐಆರ್ ಆಗಿದೆ. ಚಪ್ಪಲಿಯಲ್ಲಿ ಹಲ್ಲೆ ಮಾಡಿದ ಆಕೆಯ ಬಗ್ಗೆ ಇನ್ನೂ ಮಾಹಿತಿ ಸಿಕ್ಕಿಲ್ಲ. ಪತ್ತೆ ಹಚ್ಚುತ್ತೇವೆ ಎಂದು ಪೊಲೀಸರು ಹೇಳಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ಬೆಂಗಳೂರು ಹೊರವಲಯದಲ್ಲಿ ಚಿರತೆ ಪ್ರತ್ಯಕ್ಷ – ಬೋನ್ ಅಳವಡಿಸಿ ಪತ್ತೆ ಕಾರ್ಯಾಚರಣೆ
ನನಗೆ ನ್ಯಾಯ ಸಿಗಬೇಕು, ಆಕೆಯ ವಿರುದ್ಧ ಕ್ರಮ ಆಗಬೇಕು. ಚಪ್ಪಲಿಯಲ್ಲಿ ಏಕಾಏಕಿ ಹಲ್ಲೆ ಮಾಡುತ್ತಾರೆ ಅಂದರೆ ಏನರ್ಥ? ನಾನು ಕೇಂದ್ರ ಸರ್ಕಾರದ ಉದ್ಯೋಗಿ ಅಂದರು. ಹೊರ ರಾಜ್ಯದಿಂದ ಬಂದವರ ಹಾವಳಿ ಹೆಚ್ಚಾಗಿದೆ. ಚಪ್ಪಲಿಯಲ್ಲಿ ಹೊಡೆದರೂ ಹೆಣ್ಣು ಎಂಬ ಕಾರಣಕ್ಕೆ ನಾನು ಸುಮ್ಮನಾದೆ. ಕೂಡಲೇ ಆಕೆಯನ್ನು ಅರೆಸ್ಟ್ ಮಾಡಬೇಕು. ಮುಂದೆ ಈ ರೀತಿ ಆಗದಂತೆ ಕ್ರಮ ಜರುಗಿಸಿ ಎಂದು ಒತ್ತಾಯಿಸಿದರು. ಇದನ್ನೂ ಓದಿ: Miss World | ಥಾಯ್ಲೆಂಡ್‌ನ ಒಪಾಲ್ ಸುಚಾತಾಗೆ 72ನೇ ವಿಶ್ವ ಸುಂದರಿ ಕಿರೀಟ
ಇನ್ನು ಆಟೋ ಚಾಲಕನ ಮೇಲೆ ಚಪ್ಪಲಿಯಿಂದ ಹಲ್ಲೆ ನಡೆಸಿದ್ದನ್ನು ಆಟೋ ಚಾಲಕರು ಖಂಡಿಸಿದ್ದಾರೆ. ಚಪ್ಪಲಿಯಿಂದ ಹಲ್ಲೆ ವಿಚಾರ ತಿಳಿಯುತ್ತಿದ್ದಂತೆ ಠಾಣೆ ಬಳಿ ನೂರಾರು ಆಟೋ ಚಾಲಕರು ಸೇರಿದ್ದಾರೆ. ಎಫ್‌ಐಆರ್ ಆಗುವವರೆಗೆ ಠಾಣೆ ಮುಂದೆ ಆಟೋ ಚಾಲಕರು ಜಮಾಯಿಸಿದ್ದರು. ಕೂಡಲೇ ಚಪ್ಪಲಿಯಿಂದ ಹಲ್ಲೆ ಮಾಡಿದ ಮಹಿಳೆ ಬಂಧನ ಮಾಡಬೇಕು. ಆಟೋ ಚಾಲಕರ ಮೇಲೆ ಈ ರೀತಿ ಪರರಾಜ್ಯದವರ ಹಲ್ಲೆಗಳು ಹೆಚ್ಚಾಗುತ್ತಿವೆ. ಹಲ್ಲೆ ಮಾಡಿದರೆ ಯಾರೂ ಕೇಳಲ್ಲ ಎನ್ನುವಂತಾಗಿದೆ. ಎಲ್ಲಾ ಆಟೋ ಸಂಘಟನೆಗಳು ಒತ್ತಾಯ ಮಾಡುತ್ತಿದ್ದೇವೆ. ಕೂಡಲೇ ಆಕೆಯ ಬಂಧನ ಆಗಬೇಕು. ಹೊರರಾಜ್ಯದವರಿಗೆ ಕಡಿವಾಣ ಹಾಕಬೇಕು. ಆಟೋ ಚಾಲಕರ ತಪ್ಪಿದ್ದರೇ ಇಷ್ಟೊತ್ತಿಗೆ ಸೋಶಿಯಲ್ ಮೀಡಿಯಾದಲ್ಲಿ ಬೆಂಗಳೂರು ಸೇಫ್ ಅಲ್ಲ ಎಂದು ಟ್ರೆಂಡ್ ಮಾಡುತ್ತಿದ್ದರು. ಈಗ ಎಲ್ಲರೂ ಬಾಯಿ ಮುಚ್ಚಿಕೊಂಡಿದ್ದಾರೆ ಎಂದು ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ಮಳೆ ಅಬ್ಬರ; 5 ತಿಂಗಳು ಬೆಂಗಳೂರು, ಮಂಗಳೂರು ರೈಲು ಸಂಚಾರ ಸ್ಥಗಿತ