Tag: ಆಡಿಯೋ ರೈಟ್ಸ್

  • ರೂಪೇಶ್ ಶೆಟ್ಟಿಯ ‘ಅಧಿಪತ್ರ’ ಚಿತ್ರದ ಆಡಿಯೋ ರೈಟ್ಸ್  ಲಹರಿ ಆಡಿಯೋ ಪಾಲು

    ರೂಪೇಶ್ ಶೆಟ್ಟಿಯ ‘ಅಧಿಪತ್ರ’ ಚಿತ್ರದ ಆಡಿಯೋ ರೈಟ್ಸ್ ಲಹರಿ ಆಡಿಯೋ ಪಾಲು

    ಬಿಗ್ ಬಾಸ್ ಖ್ಯಾತಿಯ ರೂಪೇಶ್ ಶೆಟ್ಟಿ (RupeshShetty) ನಟನೆಯ‌ ಬಹು ನಿರೀಕ್ಷಿತ ಸಿನಿಮಾ ಅಧಿಪತ್ರ (Adhipatra). ಈಗಾಗಲೇ ಮೇಕಿಂಗ್ ಹಾಗೂ ಕಂಟೆಂಟ್ ಮೂಲಕ ನಿರೀಕ್ಷೆ ಹೆಚ್ಚಿಸಿರುವ ಈ ಚಿತ್ರದ ಆಡಿಯೋ ಹಕ್ಕು ಪ್ರತಿಷ್ಠಿತ ಆಡಿಯೋ‌ ಸಂಸ್ಥೆ ಲಹರಿ (Lahari Audio) ಖರೀದಿ ಮಾಡಿದೆ. 2024 ಬಹು ನಿರೀಕ್ಷಿತ ಸಿನಿಮಾ ಸಾಲಿನಲ್ಲಿ ಅಧಿಪತ್ರ ಕೂಡ ಒಂದು.

    ಅಧಿಪತ್ರ ಸಿನಿಮಾದ ಶೂಟಿಂಗ್ ಹಾಗೂ ಮೇಕಿಂಗ್ ನಿಂದಲೂ ಎಲ್ಲರ ಗಮನ ಸೆಳದಿದೆ. ಸದ್ಯ ಪೋಸ್ಟ್ ಪ್ರೊಡಕ್ಷನ್ ಕೆಲಸ ಭರದಿಂದ ಸಾಗುತ್ತಿದೆ. ತೆರೆಗೆ ಬರಲು ರೆಡಿಯಾಗ್ತಿರುವ ಅಧಿಪತ್ರ ಸಿನಿಮಾದ ಟೀಸರ್ ಬಿಡುಗಡೆಗೆ ತಯಾರಿ ನಡೆದಿದೆ. ಇದೇ ತಿಂಗಳ 10ರಂದು ಲಹರಿ ಆಡಿಯೋದಲ್ಲಿ ಚಿತ್ರದ ಮೊದಲ ಝಲಕ್ ಹೊರಬೀಳಲಿದೆ.

    ಚಿತ್ರಕ್ಕೆ ಚಯನ್ ಶೆಟ್ಟಿ ಆಕ್ಷನ್ ಕಟ್ ಹೇಳಿದ್ದು, ಇದು ಇವರ ಚೊಚ್ಚಲ  ಚಿತ್ರ. ಆಡ್ ಇಂಡಸ್ಟ್ರಿ ನಲ್ಲಿ ಕ್ರಿಯೇಟಿವ್ ಆಡ್ಸ್ ಮೂಲಕ ಗಮನ ಸೆಳೆದಿದ ಚಯನ್ ಶೆಟ್ಟಿ ಈಗ ಅಧಿಪತ್ರ ಆಕ್ಷನ್  ಕಟ್ ಹೇಳಿದ್ದಾರೆ , ರೂಪೇಶ್ ಗೆ ಜೋಡಿಯಾಗಿ ಗಿಚ್ಚಿ ಗಿಲಿಗಿಲಿ ಖ್ಯಾತಿಯ ಜಾಹ್ನವಿ ಸಾಥ್ ಕೊಟ್ಟಿದ್ದಾರೆ. ಕಾಂತಾರ ಖ್ಯಾತಿಯ ಪ್ರಕಾಶ್ ತುಮಿನಾಡು, ರಘು ಪಾಂಡೇಶ್ವರ್, ಎಂಕೆ‌ ಮಠ, ದೀಪಕ್ ರೈ, ಅನಿಲ್ ಉಪ್ಪಾಲ್, ಕಾರ್ತಿಕ್ ಭಟ್, ಪ್ರಶಾಂತ್ ತಾರಾಬಳಗದಲ್ಲಿದ್ದಾರೆ.

     

    ಸಸ್ಪೆನ್ಸ್ ಥ್ರಿಲ್ಲರ್ ಶೈಲಿಯಲ್ಲಿ ಅಧಿಪತ್ರ ಸಿನಿಮಾವನ್ನು . ಕೆ ಆರ್ ಸಿನಿಕಂಬೈನ್ಸ್ ಬ್ಯಾನರ್‌ನಡಿ‌ ದಿವ್ಯಾ ನಾರಾಯಣ್,  ಕುಲದೀಪ್ ರಾಘವ್ ಲಕ್ಷ್ಮೇ ಗೌಡ ‌ಬಂಡವಾಳ ಹೂಡಿದ್ದು, ಕಾರ್ತಿಕ್ ಶೆಟ್ಟಿ ಹಾಗೂ ಸತೀಶ್ ಶೆಟ್ಟಿ ಸಹ ನಿರ್ಮಾಣದಲ್ಲಿ ಹೆಗಲು ಕೊಟ್ಟಿದ್ದಾರೆ.

  • ಬಾಹುಬಲಿಯನ್ನ ಹಿಂದಿಕ್ಕಿದ ಕೆಜಿಎಫ್ – ದಾಖಲೆ ಮೊತ್ತಕ್ಕೆ ಆಡಿಯೋ ರೈಟ್ಸ್ ಮಾರಾಟ!

    ಬಾಹುಬಲಿಯನ್ನ ಹಿಂದಿಕ್ಕಿದ ಕೆಜಿಎಫ್ – ದಾಖಲೆ ಮೊತ್ತಕ್ಕೆ ಆಡಿಯೋ ರೈಟ್ಸ್ ಮಾರಾಟ!

    ಬೆಂಗಳೂರು: ಭಾರತೀಯ ಚಲನ ಚಿತ್ರರಂಗದಲ್ಲಿ ಹೊಸ ದಾಖಲೆಗಳನ್ನು ಬರೆಯಲು ಸಿದ್ಧವಾಗಿರುವ ರಾಕಿಂಗ್ ಸ್ಟಾರ್ ಅಭಿನಯದ ಕೆಜಿಎಫ್ ಚಿತ್ರ 2015 ರಲ್ಲಿ ಬಿಡುಗಡೆಯಾಗಿದ್ದ ಬಾಹುಬಲಿ ಚಿತ್ರದ ದಾಖಲೆಯನ್ನು ಹಿಂದಿಕ್ಕಿದೆ.

    ಕೆಜಿಎಫ್ ಚಿತ್ರದ ಆಡಿಯೋ ರೈಟ್ಸ್ ಲಹರಿ ಸಂಸ್ಥೆ ಖರೀದಿ ಮಾಡಿದ್ದು, ಹಿಂದಿ ಭಾಷೆ ಬಿಟ್ಟು ಉಳಿದ 4 ಭಾಷೆಗಳ ಹಕ್ಕುಗಳನ್ನು ಪಡೆದುಕೊಂಡಿದೆ. ಈ ಹಿಂದೆ ಬಾಹುಬಲಿ ಸಿನಿಮಾ ಆಡಿಯೋವನ್ನು 3 ಕೋಟಿ ರೂ.ಗೆ ಖರೀದಿ ಮಾಡಿದ್ದ ಲಹರಿ ಸಂಸ್ಥೆ ಕೆಜಿಎಫ್ ಚಿತ್ರದ ಆಡಿಯೋವನ್ನು 3.60 ಕೋಟಿ ರೂ.ಗೆ ಖರೀದಿ ಮಾಡಿದೆ. ಇದರೊಂದಿಗೆ ದಕ್ಷಿಣ ಭಾರತದ ಸಿನಿ ಇತಿಹಾಸದಲ್ಲಿ ಕೆಜಿಎಫ್ ಹೊಸ ದಾಖಲೆ ಬರೆದಿದೆ.

    ಪಂಚಭಾಷೆಯಲ್ಲಿ ಕೆಜಿಎಫ್ ತೆರೆಗೆ ಬರುತ್ತಿದ್ದು, ಈಗಾಗಲೇ ಚಿತ್ರದ ಟ್ರೇಲರ್ ಮೂಲಕ ದೇಶಾದ್ಯಂತ ತನ್ನ ಹವಾ ಸೃಷ್ಟಿ ಮಾಡಿದೆ. ಚಿತ್ರೀಕರಣದ ಆರಂಭದಿಂದ ಒಂದಿಲ್ಲೊಂದು ವಿಷಯಕ್ಕೆ ಕೆಜಿಎಫ್ ಸದ್ದು ಮಾಡುತ್ತಾ ಬರುತ್ತಿದೆ. ಡಿಸೆಂಬರ್ 21ರಂದು ಚಿತ್ರ ತೆರೆಕಾಣಲಿದೆ. ಟ್ರೇಲರ್ ಹವಾ ಮೂಲಕವೇ ಸ್ಯಾಂಡಲ್‍ವುಡ್‍ಗೆ ಸೀಮಿತವಾಗಿದ್ದ ಕೆಜಿಎಫ್ ಬಾಲಿವುಡ್ ಅನ್ನೂ ಮೀರಿ ವಿಶ್ವ ಮಟ್ಟದಲ್ಲಿಯೂ ಹೆಸರು ಮಾಡಲಿದೆ ಎಂಬ ಮಾತುಗಳೂ ವ್ಯಾಪಕವಾಗಿಯೇ ಕೇಳಿ ಬಂದಿದೆ.

    ಸದ್ಯ ಎಲ್ಲರ ಚಿತ್ತ ಕೆಜಿಎಫ್ ಚಿತ್ರದ ಮೇಲಿದ್ದು, ಭೂಗತ ಲೋಕದ ಕರಾಳ ಸತ್ಯವನ್ನು ಕೆಜಿಎಫ್ ತೋರಿಸಲಿದೆ ಎಂಬುವುದನ್ನು ಟ್ರೇಲರ್ ಸಾರಿ ಸಾರಿ ಹೇಳುತ್ತಿದೆ. ಓರ್ವ ಕಥಾನಾಯಕನ ಜೀವನದ ಏರುಪೇರುಗಳನ್ನು ತುಂಬಾ ಸ್ಪಷ್ಟವಾಗಿ ಪ್ರಶಾಂತ್ ನೀಲ್ ತೋರಿಸುವ ಪ್ರಯತ್ನ ಟ್ರೇಲರ್ ನಲ್ಲಿ ಕಾಣುತ್ತಿದೆ. ಇನ್ನು ಟೀಸರ್ ಆರಂಭದಲ್ಲಿ ಕೇಳಿಬರುವ ಹಿನ್ನೆಲೆ ಧ್ವನಿ ಟ್ರೇಲರ್ ನಲ್ಲಿ ನೋಡುಗರಲ್ಲಿ ರೋಮ ರೋಮಗಳಲ್ಲಿ ರೋಮಾಂಚನ ಮಾಡುವಲ್ಲಿ ಯಶ್ವಸಿಯಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv