Tag: ಆತ್ಮಹತ್ಮೆ

  • ಸೌಂದರ್ಯ ಆತ್ಮಹತ್ಯೆ – ಕೊಠಡಿಯಲ್ಲಿ ಪತ್ತೆಯಾಗಿಲ್ಲ ಯಾವುದೇ ಡೆತ್‌ನೋಟ್‌

    ಸೌಂದರ್ಯ ಆತ್ಮಹತ್ಯೆ – ಕೊಠಡಿಯಲ್ಲಿ ಪತ್ತೆಯಾಗಿಲ್ಲ ಯಾವುದೇ ಡೆತ್‌ನೋಟ್‌

    ಬೆಂಗಳೂರು: ಯಡಿಯೂರಪ್ಪ ಮೊಮ್ಮಗಳು ಸೌಂದರ್ಯ ಆತ್ಮಹತ್ಯೆಗೆ ನಿಜವಾದ ಕಾರಣ ಏನು ಎನ್ನುವದು ತಿಳಿದು ಬಂದಿಲ್ಲ.

    ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿರುವ ಅಪಾರ್ಟ್ಮೆಂರ್ಟ್‌ಮೆಂಟ್‌ನಲ್ಲಿ ಸೌಂದರ್ಯ ಬೆಳಗ್ಗೆ 10 ಗಂಟೆಯ ವೇಳೆ ನೇಣಿಗೆ ಶರಣಾಗಿದ್ದು, ಪೊಲೀಸರಿಗೆ 11 ಗಂಟೆಗೆ ಗೊತ್ತಾಗಿದೆ. ಇದನ್ನೂ ಓದಿ: ಯಡಿಯೂರಪ್ಪ ಮೊಮ್ಮಗಳು ನೇಣು ಬಿಗಿದು ಆತ್ಮಹತ್ಯೆ

    ಘಟನಾ ಸ್ಥಳಕ್ಕೆ ಹೋಗಿ ಪರಿಶೀಲನೆ ಮಾಡಿದಾಗ ಕೊಠಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಸೌಂದರ್ಯ ಪತ್ತೆಯಾಗಿದ್ದಾರೆ. ಕೂಡಲೇ ಮಹಿಳಾ ಸಿಬ್ಬಂದಿ ದೇಹವನ್ನು ಇಳಿಸಿದಾಗ ಮೃತಪಟ್ಟಿರುವುದು ಖಚಿತವಾಗಿದೆ.

    ಕೊಠಡಿಯಲ್ಲಿ ಯಾವುದೇ ಡೆತ್‌ನೋಟ್‌ ಪತ್ತೆಯಾಗಿಲ್ಲ. ಹೀಗಾಗಿ ಯಾವ ಕಾರಣಕ್ಕೆ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನುವುದು ತನಿಖೆಯಿಂದ ತಿಳಿಯಬೇಕಿದೆ. ಇದನ್ನೂ ಓದಿ: ಸೌಂದರ್ಯ ಸಾವು ನಿಜಕ್ಕೂ ಶಾಕ್ ನೀಡಿದೆ: ಸಹ ವೈದ್ಯರು

     

    ಸೌಂದರ್ಯ ದಂಪತಿ ಯಶವಂತಪುರ ಬಳಿಯ ಫ್ಲಾಟ್‌ನಲ್ಲಿ ವಾಸವಾಗಿದ್ದಾರೆ. ಆದರೆ ಇಂದು ಸೌಂದರ್ಯ ಡಾಲರ್ಸ್ ಕಾಲೋನಿಯ ಲೆಗೆಸ್ಸಿ ಅಪಾರ್ಟ್ ಮೆಂಟ್ ಫ್ಲಾಟ್ ನಲ್ಲಿ ನೇಣಿಗೆ ಶರಣಾಗಿದ್ದಾರೆ.

    ಗಂಡ ನಿರಜ್ ಕೊಟ್ಟ ದೂರಿನ ಆಧಾರದ ಮೇಲೆ ಯುಡಿಆರ್ ಕೇಸ್ ದಾಖಲಿಸಿಕೊಳ್ಳಲಾಗಿದೆ. ಗಂಡ ಡಾ.ನಿರಜ್ ಬೆಳಗ್ಗೆ ಡ್ಯೂಟಿಗೆ ಹೋಗಿದ್ದರು. ಈ ವೇಳೆ ಹತ್ತು ಗಂಟೆಗೆ ಮನೆ ಕೆಲಸದವರು ಕರೆ ಮಾಡಿ‌, ಮೇಡಂ ರೂಂ ಓಪನ್‌ ಮಾಡುವುದಿಲ್ಲ ಎಂದು ಹೇಳಿದ್ದಾರೆ. ಅರ್ಧಗಂಟೆಯಲ್ಲಿ ನಿರಜ್‌ ಆಸ್ಪತ್ರೆಯಿಂದ ಮನೆಗೆ ಬಂದಿದ್ದಾರೆ. ಬಾಗಿಲು ಒಡೆದು ಒಳಗಡೆ ಹೋಗಿ ನೋಡಿದಾಗ ಸೀಲಿಂಗ್ ಫ್ಯಾನ್‌ಗೆ ನೇಣು ಹಾಕಿಕೊಂಡಿರುವ ವಿಚಾರ ಗೊತ್ತಾಗಿದೆ.

  • ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಪ್ರೇಮಿಗಳ ಆತ್ಮಹತ್ಯೆ

    ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಪ್ರೇಮಿಗಳ ಆತ್ಮಹತ್ಯೆ

    ದಾವಣಗೆರೆ: ಪ್ರೇಮಿಗಳಿಬ್ಬರು ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಕಂಚಿಕೇರಿ ಗ್ರಾಮದಲ್ಲಿ ನಡೆದಿದೆ.

    ಕಂಚಿಕೇರಿ ಗ್ರಾಮದ 10ನೇ ತರಗತಿಯ ಕಾವೇರಿ ಹಾಗೂ ಶಶಿ(22) ಆತ್ಮಹತ್ಯೆ ಶರಣಾದ ಪ್ರೇಮಿಗಳು. ಗ್ರಾಮದ ಸಿದ್ದೇಶ್ವರ ಪ್ರೌಢಶಾಲೆಯಲ್ಲಿ ಓದುತ್ತಿದ್ದ ಕಾವೇರಿ ಹಾಗೂ ಆಕೆಯ ಸೋದರ ಮಾವ ಶಶಿ ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದರು. ಮದುವೆಗೆ ಪೋಷಕರು ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ  ಗುರುವಾರವೇ ಇಬ್ಬರು ಮನೆ ಬಿಟ್ಟು ಹೋಗಿದ್ದರು. ಆದರೆ ಶನಿವಾರ ಏಕಾಏಕಿ ಗ್ರಾಮದ ಬಳಿ ಇಬ್ಬರು ಒಂದೇ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

    ವಿಷಯ ತಿಳಿದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಇಬ್ಬರ ಮದುವೆಗೆ ಪೋಷಕರು ನಿರಾಕರಿಸಿದ್ದ ಹಿನ್ನೆಲೆಯಲ್ಲಿ ಮನೆ ಬಿಟ್ಟು ತೆರಳಿದ್ದರು ಎಂದು ತಿಳಿದು ಬಂದಿದ್ದು, ಘಟನೆ ಸಂಬಂಧ ಅರಸೀಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv