Tag: ಆಥಿಯಾ

  • ಗೆಳತಿ ಜೊತೆ ಬೆಂಗಳೂರಿನಲ್ಲಿ ಕಾಣಿಸಿಕೊಂಡ ಕೆಎಲ್ ರಾಹುಲ್

    ಗೆಳತಿ ಜೊತೆ ಬೆಂಗಳೂರಿನಲ್ಲಿ ಕಾಣಿಸಿಕೊಂಡ ಕೆಎಲ್ ರಾಹುಲ್

    ಬೆಂಗಳೂರು: ಕ್ರಿಕೆಟ್ ಆಟಗಾರ ಕೆಎಲ್ ರಾಹುಲ್ ಗೆಳತಿ ಆಥಿಯಾ ಜೊತೆ ಬೆಂಗಳೂರಿನಲ್ಲಿ ಕಾಣಿಸಿಕೊಂಡಿದ್ದು, ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ.

    ಖಾಸಗಿ ಕಂಪನಿಯೊಂದರ ಪ್ರಚಾರ ಕಾರ್ಯದ ನಿಮಿತ್ತ ಇಬ್ಬರು ಬೆಂಗಳೂರಿಗೆ ಆಗಮಿಸಿದ್ದರು. ಈ ವೇಳೆ ರಾಹುಲ್, ಆಥಿಯಾ ಫೋಟೋಗಳಿಗೆ ಭರ್ಜರಿ ಪೋಸ್ ನೀಡಿದ್ದಾರೆ. ರಾಹುಲ್ ಈ ಫೋಟೋಗಳನ್ನು ತಮ್ಮ ಇನ್‍ಸ್ಟಾಗ್ರಾಮ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

     

    View this post on Instagram

     

    A post shared by KL Rahul???? (@rahulkl)

    ಈ ಹಿಂದೆಯೂ ರಾಹುಲ್, ಆಥಿಯಾ ಒಟ್ಟಾಗಿ ಜಾಹಿರಾತುಗಳಲ್ಲಿ ಕಾಣಿಸಿಕೊಂಡಿದ್ದರು. ಆಥಿಯಾ ಶೆಟ್ಟಿ ಬಾಲಿವುಡ್ ನಟ ಸುನೀಲ್ ಶೆಟ್ಟಿ ಅವರ ಮಗಳಾಗಿದ್ದಾರೆ. ಕೆಎಲ್ ರಾಹುಲ್ ಮತ್ತು ನಟಿ ಆಥಿಯಾ ಶೆಟ್ಟಿ ಕಳೆದ ವರ್ಷ ತಮ್ಮ ಹುಟ್ಟುಹಬ್ಬದ ದಿನ ಪ್ರೀತಿಯ ಕುರಿತಾಗಿ ಹೇಳಿಕೊಂಡಿದ್ದರು. ಅಥಿಯಾ ಕುಟುಂಬಕ್ಕೂ ರಾಹುಲ್ ತುಂಬಾ ಆತ್ಮೀಯರಾಗಿದ್ದಾರೆ. ಇತ್ತೀಚೆಗೆ ಪ್ರೇಮಿಗಳ ದಿನದಂದು ರಾಹುಲ್ ಆಥಿಯಾ ಜೊತೆಗಿರುವ ಫೋಟೋ ಹಂಚಿಕೊಂಡು ಶುಭಾಶಯ ಕೋರಿದ್ದರು. ಇದನ್ನೂ ಓದಿ: ಭಾರತ Vs ಶ್ರೀಲಂಕಾ ಟೆಸ್ಟ್ – ಅಪ್ಪು ಫೋಟೋ ಜೊತೆ ಚಿನ್ನಸ್ವಾಮಿಯಲ್ಲಿ ಕಾಣಿಸಿಕೊಂಡ ಸುದೀಪ್

    ದಕ್ಷಿಣ ಆಫ್ರಿಕಾ ಸರಣಿಯ ನಂತರ ಅವರ ಮದುವೆಯ ಬಗ್ಗೆ ಊಹಾಪೋಹಗಳು ಹೆಚ್ಚಾದವು, ಆದರೆ ಅದನ್ನು ಅಥಿಯಾ ತಂದೆ ಸುನೀಲ್ ಶೆಟ್ಟಿ ಸ್ಪಷ್ಟನೆ ನೀಡುವ ಮೂಲಕವಾಗಿ ಗಾಸಿಪ್‍ಗೆ ತೆರೆ ಎಳೆದಿದ್ದರು.