Tag: ಆದರ್ಶ

  • ಕರುಳುಬಳ್ಳಿಯ ರೋಚಕ ಕಥೆ ಹೇಳುವ ‘2nd ಲೈಫ್’ ಸಿನಿಮಾ

    ಕರುಳುಬಳ್ಳಿಯ ರೋಚಕ ಕಥೆ ಹೇಳುವ ‘2nd ಲೈಫ್’ ಸಿನಿಮಾ

    ಗು ಜನಿಸಿದ ಕೆಲವೇ ದಿನಗಳಲ್ಲಿ ಕರುಳಬಳ್ಳಿ(ಹೊಕ್ಕಳು ಬಳ್ಳಿ) ಬೀಳುತ್ತದೆ. ಅದನ್ನು ಕ್ಯಾನ್ಸರ್‌ ರೋಗಿಗಳ ಔಷದಿಗೆ ಬಳಸಿಕೊಳ್ಳಲಾಗುತ್ತದೆ. ಕರ್ನಾಟಕ ಒಂದರಲ್ಲೆ 70..80 ಸಾವಿರ ಜನರು ಕ್ಯಾನ್ಸರ್ ಗೆ ತುತ್ತಾಗುತ್ತಿದ್ದಾರೆ. ಅಂತಹವರಿಗೆ ಇದು ಉಪಯೋಗವಾಗುತ್ತದೆ.  ಕರುಳಬಳ್ಳಿಯನ್ನು ಶೇಖರಿಸಿಡುವ ಕಾರ್ಯ ಕೂಡ ಎಲ್ಲೆಡೆ ನಡೆಯುತ್ತಿದೆ. ಈ ಅಂಶವನ್ನೇ ಪ್ರಮುಖವಾಗಿಟ್ಟು ಕೊಂಡು “2 nd ಲೈಫ್” ಚಿತ್ರ ತಯಾರಾಗಿದೆ. ಇತ್ತೀಚಿಗೆ ಈ ಚಿತ್ರದ ಟ್ರೇಲರ್ ಬಿಡುಗಡೆಯಾಯಿತು. ಜಯಣ್ಣ ಫಿಲಂಸ್ ಹಾಗೂ ಶುಕ್ರ ಫಿಲಂಸ್ ಜಂಟಿಯಾಗಿ ಈ ಚಿತ್ರವನ್ನು ನಿರ್ಮಿಸಿದೆ.

    ಜೀವನದಲ್ಲಿ ಯಾವುದೋ ದೊಡ್ಡ ಅನಾಹುತ ನಡೆದು ಅದರಿಂದ ಪಾರಾದಾಗ ಎಲ್ಲರೂ ಹೇಳುವುದು. ನಿನ್ನ ಹೊಸಜೀವನ ಆರಂಭವಾಗಿದೆ ಅಂತ.  ಈ ರೀತಿಯ ಘಟನೆ ಚಿತ್ರದಲ್ಲಿ ನಡೆಯುವುದರಿಂದ ಚಿತ್ರಕ್ಕೆ “2nd ಲೈಫ್” ಅಂತ ಹೆಸರಿಡಲಾಗಿದೆ. ಈಗ ಟ್ರೇಲರ್ ಬಿಡುಗಡೆಯಾಗಿದೆ ಎಂದು ನಿರ್ದೇಶಕ ರಾಜು ದೇವಸಂದ್ರ ಚಿತ್ರದ ಕುರಿತು ವಿವರಣೆ ನೀಡಿದರು. ನಾನು ಈ ಹಿಂದೆ “ಸ್ವಾರ್ಥ ರತ್ನ” ಎಂಬ ಚಿತ್ರದಲ್ಲಿ ‌ಅಭನಯಸಿದ್ದೆ. ಈಗ “2 nd ಲೈಫ್” ಚಿತ್ರದಲ್ಲಿ ನಟಿಸಿದ್ದೇನೆ. ನಾನು ಮೂಲತಃ ಆಡಿಟರ್. ಮಂಜುಳಾ ರಮೇಶ್ ಅವರು ಬರೆದಿರುವ ಈ ಚಿತ್ರದ ಕಥೆ ಹಿಡಿಸಿತು. ಪಿ.ಆರ್.ಕೆ ಆಡಿಯೋ ಮೂಲಕ ಹಾಡು ಬಿಡುಗಡೆಯಾಗಿದೆ. ಕನ್ನಡ, ತೆಲುಗು ಹಾಗೂ ತಮಿಳು ಮೂರು ಭಾಷೆಗಳಲ್ಲಿ ನಮ್ಮ ಚಿತ್ರ ನಿರ್ಮಾಣವಾಗಿದೆ. ಸದ್ಯದಲ್ಲೇ ಚಿತ್ರ ತೆರೆಗೆ ಬರಲಿದೆ ಪ್ರೋತ್ಸಾಹಿಸಿ ಎಂದರು ನಾಯಕ ಆದರ್ಶ ಗುಂಡುರಾಜ್.  ಇದನ್ನೂ ಓದಿ:ಶಿರಡಿ ಸಾಯಿಬಾಬಾ ದೇವಸ್ಥಾನಕ್ಕೆ ಸುದೀಪ್‌ ದಂಪತಿ ಭೇಟಿ

    ಈ‌ ಚಿತ್ರದಲ್ಲಿ ನನ್ನದು ಕುರುಡಿಯ ಪಾತ್ರ ಎಂದು ತಮ್ಮ ಪಾತ್ರದ ಬಗ್ಗೆ  ನಾಯಕಿ ಸಿಂಧೂ ರಾವ್ ತಿಳಿಸಿದರು. ಸಂಗೀತ ನಿರ್ದೇಶಕ ಆರವ್ ರಿಶಿಕ್, ಛಾಯಾಗ್ರಹಕ ರಮೇಶ್ ಕೊಯಿರ,  ನಟ ಶಿವಪ್ರದೀಪ್ ಹಾಗೂ ಸಹ ನಿರ್ಮಾಪಕ – ನಟ ರುದ್ರಮುನಿ ಮುಂತಾದವರು ಚಿತ್ರದ ಕುರಿತು ಮಾತನಾಡಿದರು.

    Live Tv
    [brid partner=56869869 player=32851 video=960834 autoplay=true]

  • ಒಕ್ಕಲಿಗ ಸಮುದಾಯದವರಿಗೆ ಯಾರು ಆದರ್ಶವಾಗಬೇಕು ತೀರ್ಮಾನ ಮಾಡಲಿ: ಸಿ.ಟಿ ರವಿ

    ಒಕ್ಕಲಿಗ ಸಮುದಾಯದವರಿಗೆ ಯಾರು ಆದರ್ಶವಾಗಬೇಕು ತೀರ್ಮಾನ ಮಾಡಲಿ: ಸಿ.ಟಿ ರವಿ

    ಮೈಸೂರು: ಒಕ್ಕಲಿಗ ಸಮುದಾಯದವರಿಗೆ ಯಾರು ಆದರ್ಶ ಆಗಬೇಕು ಎಂಬುದನ್ನು ಅವರೇ ತೀರ್ಮಾನ ಮಾಡಿಕೊಳ್ಳಲಿ ಎಂದು ಪ್ರವಾಸೋದ್ಯಮ ಸಚಿವ ಸಿ.ಟಿ ರವಿ ಹೇಳಿದ್ದಾರೆ.

    ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಕ್ಕಲಿಗ ಸಮುದಾಯದವರಿಗೆ ಶಾಂತವೇರಿ ಗೋಪಾಲಗೌಡರು, ಕುವೆಂಪು, ಕೆಂಗಲ್ ಹನುಮಂತಯ್ಯ ಅವರಂಥ ಮಹನೀಯರು ಆದರ್ಶರಾಗಬೇಕೋ ಅಥವಾ ಇನ್ಯಾರು ಆದರ್ಶ ಆಗಬೇಕು ಎಂಬುದನ್ನು ಅವರೇ ತೀರ್ಮಾನ ಮಾಡಿಕೊಳ್ಳಲಿ ಎಂದು ಹೇಳುವ ಮೂಲಕ ಪ್ರತಿಭಟನಾಕಾರರಿಗೆ ಮಾರ್ಮಿಕವಾಗಿ ತಿರುಗೇಟು ನೀಡಿದ್ದಾರೆ.

    ಸತ್ಯವಂತರಿಗೆ ಇದು ಕಾಲವಲ್ಲ. ನಾನು ಸತ್ಯ ಹೇಳಿದರೆ ಕೆಲವರಿಗೆ ಅಪಥ್ಯವಾಗುತ್ತದೆ. ಇ.ಡಿ.ಗೆ ಯಾವ ಜಾತಿ ಇದೆ, ಯಾವ ಪಕ್ಷ ಇದೆ. ಇಡಿ ಹುಟ್ಟಿಹಾಕಿದವರು ಯಾರು? ಇಡಿ ಹುಟ್ಟುಹಾಕಿದ್ದು ಭಾರತೀಯ ಜನತಾ ಪಾರ್ಟಿ ಅಲ್ಲ. ಕೋಟ್ಯಂತರ ರೂಪಾಯಿ ಅಕ್ರಮ ಆಸ್ತಿ ಸಂಬಂಧ ಇಡಿ ತನಿಖೆ ಮಾಡುತ್ತಿದೆ. ತನಿಖೆ ಮಾಡೋದೇ ತಪ್ಪು ಎಂದರೆ ಹೇಗೆ ಎಂದು ಪ್ರಶ್ನೆ ಮಾಡಿದರು.

    ಇದೇ ವೇಳೆ ಟ್ರಾಫಿಕ್ ರೂಲ್ಸ್ ಬಗ್ಗೆ ಮಾತನಾಡಿ, ತಪ್ಪು ಮಾಡದೇ ಇರುವವರಿಗೆ ದಂಡದ ಪ್ರಶ್ನೆ ಬರೋದಿಲ್ಲ. ತಪ್ಪು ಮಾಡುವವರಿಗೆ ಟ್ರಾಫಿಕ್ ದಂಡ ಬೀಳುತ್ತೆ. ನಾನೂ ಮೊದಲು ಸೀಟ್ ಬೆಲ್ಟ್ ಹಾಕುತ್ತಿರಲಿಲ್ಲ. ಟ್ರಾಫಿಕ್ ಫೈನ್ ಜಾಸ್ತಿಯಾದ ಮೇಲೆ ಕಡ್ಡಾಯವಾಗಿ ಹಾಕುತ್ತಿದ್ದೇನೆ. ನಾನು ತಪ್ಪು ಮಾಡಿದರೆ ಮೊದಲು ನನ್ನಂಥವರಿಗೆ ದಂಡ ಹಾಕಬೇಕು. ಮಿನಿಸ್ಟರ್ ಇರಲಿ, ಸಿಎಂ ಇರಲಿ ಎಲ್ಲರಿಗೂ ದಂಡ ಹಾಕಬೇಕು ಎಂದು ತಿಳಿಸಿದರು.

    ದಂಡದ ಹಣದಲ್ಲಿ ರಸ್ತೆ ರಿಪೇರಿ ಮಾಡಬೇಕೆಂಬ ಕೂಗು ಎದ್ದಿದೆ. ಈಗ ಕೂಗು ಎತ್ತಿರುವವರು ಮೊದಲು ದೇಶದಲ್ಲಿ ಎಷ್ಟು ಜನ ತೆರಿಗೆ ಕಟ್ಟುತ್ತಿದ್ದಾರೆ ಎಂದು ನೋಡಿಕೊಳ್ಳಲಿ. ಅಮೆರಿಕಾದಲ್ಲಿ ಶೇ. 97ರಷ್ಟು ಜನ ತೆರಿಗೆ ಕಟ್ಟುತ್ತಾರೆ. ನಮ್ಮಲ್ಲಿ ತೆರಿಗೆ ಕದಿಯುವುದು ಹೇಗೆ ಎಂದು ನೂರು ಮಾರ್ಗ ಹುಡುಕುತ್ತಾರೆ. ಆದರೂ ಅಮೆರಿಕಾದಂತಹ ರಸ್ತೆಗಳನ್ನು ಬಯಸುತ್ತಾರೆ. ಮನಸ್ಥಿತಿ ಬದಲಾಗದ ಹೊರತು ಪರಿಸ್ಥಿತಿ ಬದಲಾಗಲ್ಲ ಎಂದು ಕೇಂದ್ರ ಸರ್ಕಾರದ ದಂಡ ಪರಿಷ್ಕರಣೆಯನ್ನು ಸಿಟಿ ರವಿ ಸಮರ್ಥಿಸಿಕೊಂಡರು.