ನವದೆಹಲಿ: 2024-25ನೇ ಹಣಕಾಸು ವರ್ಷದ ಆದಾಯ ತೆರಿಗೆ ರಿಟರ್ನ್ (IT Return Filing) ಸಲ್ಲಿಸುವ ಕೊನೆಯ ದಿನಾಂಕವನ್ನು (Last Date) ಯಾವುದೇ ಕಾರಣಕ್ಕೂ ವಿಸ್ತರಣೆ ಮಾಡುವುದಿಲ್ಲ ಎಂದು ಆದಾಯ ತೆರಿಗೆ ಇಲಾಖೆ (Income Tax Department) ಸ್ಪಷ್ಟಪಡಿಸಿದೆ.
ಐಟಿಆರ್‌ಗಳನ್ನು ಸಲ್ಲಿಸುವ ಅಂತಿಮ ದಿನಾಂಕವನ್ನು ಸೆಪ್ಟೆಂಬರ್ 30 ರವರೆಗೆ ವಿಸ್ತರಿಸಲಾಗಿದೆ ಎಂದು ಸೂಚಿಸುವ ಸುಳ್ಳು ಸುದ್ದಿಯನ್ನು ತೆರಿಗೆ ಇಲಾಖೆ ತಳ್ಳಿಹಾಕಿದೆ. ತೆರಿಗೆದಾರರು ಅಧಿಕೃತ ಆದಾಯ ತೆರಿಗೆ ಆಫ್ ಇಂಡಿಯಾ ಎಕ್ಸ್ ಹ್ಯಾಂಡಲ್‌ನಲ್ಲಿ ಪ್ರಕಟವಾಗುವ ಮಾಹಿತಿಯನ್ನು ನಂಬಬೇಕು ಎಂದು ತಿಳಿಸಿದೆ.
ಐಟಿಆರ್ ಫೈಲಿಂಗ್, ತೆರಿಗೆ ಪಾವತಿ ಮತ್ತು ಇತರ ಸಂಬಂಧಿತ ಸೇವೆಗಳಿಗೆ ತೆರಿಗೆದಾರರಿಗೆ ಸಹಾಯ ಮಾಡಲು, ನಮ್ಮ ಸಹಾಯವಾಣಿ 24/7 ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿದೆ. ನಾವು ಕರೆಗಳು, ಲೈವ್ ಚಾಟ್‌ಗಳು, ವೆಬ್ ಎಕ್ಸ್ ಸೆಷನ್‌ಗಳು, ಮತ್ತು ಎಕ್ಸ್ ಮೂಲಕ ಬೆಂಬಲವನ್ನು ಒದಗಿಸುತ್ತಿದ್ದೇವೆ ಎಂದು ತೆರಿಗೆ ಇಲಾಖೆ ಹೇಳಿದೆ.
ಐಟಿಆರ್ ಫೈಲಿಂಗ್‌ಗೆ ಇಂದು(ಸೆ.15) ಕೊನೆಯ ದಿನವಾಗಿದೆ. ಆದರೆ ಸಾಮಾಜಿಕ ಜಾಲತಾಣದಲ್ಲಿ ಸೆ.30 ರವರೆಗೆ ವಿಸ್ತರಿಸಲಾಗಿದೆ ಎಂಬ ಸುಳ್ಳು ಸುದ್ದಿಗಳು ಪ್ರಕಟವಾಗುತ್ತಿದೆ.
– ಬೆಂಗಳೂರು, ಹಾಸನ, ಚಿಕ್ಕಬಳ್ಳಾಪುರ, ಚಿತ್ರದುರ್ಗ ಜಿಲ್ಲೆಗಳಲ್ಲಿ ದಾಳಿ
ಬೆಂಗಳೂರು: ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ (Lokayukta) ಬೆಳ್ಳಂಬೆಳಗ್ಗೆ ಬಿಸಿ ಮುಟ್ಟಿಸಿದೆ. ಬೆಂಗಳೂರು ಸೇರಿದಂತೆ ರಾಜ್ಯದ 4 ಜಿಲ್ಲೆಗಳಲ್ಲಿ 6 ಕಡೆ ದಾಳಿ ನಡೆಸಿದೆ.
ಬೆಂಗಳೂರು (Bengaluru), ಹಾಸನ, ಚಿಕ್ಕಬಳ್ಳಾಪುರ, ಚಿತ್ರದುರ್ಗ ಜಿಲ್ಲೆಗಳ 6 ಕಡೆ ಲೋಕಾಯುಕ್ತ ಅಧಿಕಾರಿಗಳ ತಂಡ ದಾಳಿ ನಡೆಸಿದೆ. ಬೆಂಗಳೂರಿನ ಕಂದಾಯ ಅಧಿಕಾರಿ ವೆಂಕಟೇಶ್, ಬಿಡಿಎ ಕಚೇರಿಯ ಸಿನಿಯರ್ ಅರ್ಟಿಕಲ್ಚರ್ ಡೈರೆಕ್ಟರ್, ಓಂ ಪ್ರಕಾಶ್, ರಾಷ್ಟ್ರೀಯ ಹೆದ್ದಾರಿ (NHAI) ಹಾಸನ ವಿಭಾಗದ ಕಾರ್ಯಪಾಲಕ ಇಂಜಿನಿಯರ್ ಜಯಣ್ಣ, ಚಿಕ್ಕಬಳ್ಳಾಪುರದ ಜ್ಯೂನಿಯರ್ ಎಂಜಿನಿಯರ್ ಆಂಜನೇಯ ಮೂರ್ತಿ, ಚಿತ್ರದುರ್ಗದ ತಾಲೂಕು ಆರೋಗ್ಯಾಧಿಕಾರಿ ವೆಂಕಟೇಶ್ ಮನೆ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಚಿತ್ರದುರ್ಗ:
ಚಿತ್ರದುರ್ಗದ ಟಿಎಚ್‌ಓ (THO) ಡಾ.ವೆಂಕಟೇಶ್ ಮನೆ ಮೇಲೆ ಲೋಕಾಯುಕ್ತ ಎಸ್ಪಿ ವಾಸುದೇವರಾಮ್, ಡಿವೈಎಸ್ಪಿ ಮೃತ್ಯುಂಜಯ ನೇತೃತ್ವದ ಅಧಿಕಾರಿಗಳ ತಂಡ ದಾಳಿ ನಡೆಸಿದೆ. ಹಿರಿಯೂರು ಪಟ್ಟಣದ ಯರಗುಂಟೇಶ್ವರ ಬಡಾವಣೆಯ ಮನೆ, ಆದಿವಾಲ ಗ್ರಾಮದ ಮನೆ & ಕ್ಲಿನಿಕ್ ಮೇಲೆ ದಾಳಿ ನಡೆಸಲಾಗಿದೆ. ಆದಾಯಕ್ಕೂ ಮೀರಿದ ಆಸ್ತಿ ಗಳಿಕೆ ಆರೋಪದ ಹಿನ್ನೆಲೆ ದಾಳಿ ನಡೆಸಿದ್ದು, ದಾಖಲೆಗಳನ್ನ ಪರಿಶೀಲಿಸಲಾಗುತ್ತಿದೆ. ಇದನ್ನೂ ಓದಿ: ಪಹಲ್ಗಾಮ್ ದಾಳಿ ಉಗ್ರರು ಪಾಕ್‌ನಿಂದ ಬಂದವರಲ್ಲ: ಚಿದಂಬರಂ ಕ್ಲೀನ್‍ಚಿಟ್
ಚಿಕ್ಕಬಳ್ಳಾಪುರ:
ಗೌರಿಬಿದನೂರು ತಾಲ್ಲೂಕಿನ ಗ್ರಾಮೀಣ ಕುಡಿಯುವ ನೀರು ಹಾಗೂ ನೈರ್ಮಲ್ಯ ವಿಭಾಗದ ಜೆಇ ಆಂಜನೇಯಮೂರ್ತಿ ಮನೆ ಮೇಲೆ ಲೋಕಾ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಯಲಹಂಕ ನ್ಯೂ ಟೌನ್‌ನಲ್ಲಿರುವ ಮನೆ ಹಾಗೂ ಸ್ವಗ್ರಾಮ ತುಮಕೂರಿನ ನಿವಾಸದ ಮೇಲೆ ದಾಳಿ ನಡೆಸಿದ್ದಾರೆ. ತೀವ್ರ ತಪಾಸಣೆ ಹಿನ್ನೆಲೆ ಗೌರಿಬಿದನೂರು ಕಚೇರಿ ಮೇಲೂ ಲೋಕಾ ಪೊಲೀಸರ ದಾಳಿ ನಡೆದಿದೆ. ಇದನ್ನೂ ಓದಿ: ಕೇಂದ್ರ ಸರ್ಕಾರದಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಕ್ಯಾನ್ಸರ್ ಡೇ ಕೇರ್ ಸೆಂಟರ್ ಮಂಜೂರು
ಹಾಸನ:
ಇನ್ನೂ ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪದ ಮೇಲೆ ರಾಷ್ಟ್ರೀಯ ಹೆದ್ದಾರಿ (ಎನ್‌ಎಚ್‌ಎಐ) ಹಾಸನ ವಿಭಾಗದ ಕಾರ್ಯಪಾಲಕ ಇಂಜಿನಿಯರ್ ಜಯಣ್ಣ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಲೋಕಾಯುಕ್ತ ಎಸ್ಪಿ ಸ್ನೇಹಾ ನೇತೃತ್ವದಲ್ಲಿ ಹಾಸನ ಡಿವೈಎಸ್‌ಪಿ, ಇನ್ಸ್‌ಪೆಕ್ಟರ್ ಹಾಗೂ ಚಿಕ್ಕಮಗಳೂರು ಲೋಕಾಯುಕ್ತ ಡಿವೈಎಸ್‌ಪಿ, ಇನ್ಸ್‌ಪೆಕ್ಟರ್‌ಗಳ ನೇತೃತ್ವದ ತಂಡ ದಾಳಿ ನಡೆಸಿದೆ. ಹಾಸನ ನಗರದ ಚನ್ನಪಟ್ಟಣ ಹೌಸಿಂಗ್ ಬೋರ್ಡ್ನಲ್ಲಿರುವ ಜಯಣ್ಣ ನಿವಾಸ, ಪತ್ನಿ ನಿವಾಸ, ಹಾರ್ಡ್ವೇರ್ ಅಂಗಡಿ, ಇತರೆ ಎರಡು ಕಡೆಗಳಲ್ಲಿ ದಾಳಿ ನಡೆಸಿ ದಾಖಲೆ ಪರಿಶೀಲಿಸಲಾಗುತ್ತಿದೆ. ಇದನ್ನೂ ಓದಿ: ಹಣ ಹೊರಗಡೆ ಸಿಕ್ಕಿದ್ರೆ ಜಡ್ಜ್ ದುರ್ವತನೆ ಹೇಗೆ ಆಗುತ್ತೆ: ಸಿಬಲ್ ವಾದ
ನವದೆಹಲಿ/ಬೆಂಗಳೂರು: ಆದಾಯ ತೆರಿಗೆ ರಿಟರ್ನ್ (IT Returns) ಸಲ್ಲಿಕೆಯಲ್ಲಿ ತಪ್ಪು ಮಾಹಿತಿ ನೀಡುವ ಅಥವಾ ಆದಾಯವನ್ನು ಮರೆಮಾಚುವ ತೆರಿಗೆದಾರರಿಗೆ ಆದಾಯ ತೆರಿಗೆ ಇಲಾಖೆ (Income Tax Department) ಕಠಿಣ ಎಚ್ಚರಿಕೆ ನೀಡಿದೆ.
ಹೌದು. ಹೊಸ ಆದಾಯ ತೆರಿಗೆ ನಿಯಮಗಳು ಜಾರಿಯಾಗಿದ್ದು, ತೆರಿಗೆದಾರರು ಸುಳ್ಳು ಕಡತಗಳನ್ನು ತೋರಿಸಿದರೆ ಅಥವಾ ಆದಾಯ ಮರೆಮಾಚಿದರೆ ಶೇ. 200ರವರೆಗೆ ದಂಡ, ವಾರ್ಷಿಕ ಶೇ. 24ವರೆಗೆ ಬಡ್ಡಿ ವಿಧಿಸಲಾಗುತ್ತದೆ. ಅಲ್ಲದೇ ಸೆಕ್ಷನ್ 276 ಸಿ ಅಡಿಯಲ್ಲಿ ಜೈಲು ಶಿಕ್ಷೆ ವಿಧಿಸುವ ಸಾಧ್ಯತೆಯೂ ಇದೆ. ಹಾಗಾಗಿ, ಇನ್ಮುಂದೆ ಸಣ್ಣ ತಪ್ಪುಗಳಿಗೂ ತೆರಿಗೆ ಪಾವತಿದಾರರು ದೊಡ್ಡ ಬೆಲೆ ತೆರಬೇಕಾಗುತ್ತದೆ. ಇದನ್ನೂ ಓದಿ: ಆಪರೇಷನ್ ಸಿಂಧೂರ ವೇಳೆ ನೌಕಾದಳದಿಂದ ಮಿಸೈಲ್ ದಾಳಿಗೆ ಟಾರ್ಗೆಟ್ ಫಿಕ್ಸ್ ಆಗಿತ್ತು – ಆದ್ರೆ ಅಂತಿಮ ಆದೇಶ ಬರಲಿಲ್ಲ
ಈ ಹೊಸ ಕಠಿಣ ನಿಯಮಗಳು ಯಾವುದೇ ವಿನಾಯಿತಿ ಇಲ್ಲದೇ ಎಲ್ಲರಿಗೂ ಅನ್ವಯಿಸುತ್ತವೆ. ಅಂದರೆ, ಸಂಬಳ ಪಡೆಯುವ ನೌಕರರು, ಫ್ರೀಲ್ಯಾನ್ಸರ್‌ಗಳು ಹಾಗೂ ಡಾಕ್ಟರ್, ವಕೀಲರು ಸೇರಿದಂತೆ ಇತರ ವೃತ್ತಿಪರರು ಮತ್ತು ಉದ್ಯಮಿಗಳಿಗೂ ಅನ್ವಯಿಸುತ್ತದೆ. ಇದನ್ನೂ ಓದಿ: ರಾಜ್ಯಾಧ್ಯಕ್ಷರ ಬದಲಿಸುವ ಪ್ರಸ್ತಾಪ ದೆಹಲಿಯಲ್ಲಿ ಕೇಳಿ ಬಂದಿಲ್ಲ: ಆರ್.ಅಶೋಕ್
ನವದೆಹಲಿ: 2025-26ನೇ ಸಾಲಿನ ಆದಾಯ ತೆರಿಗೆ ರಿಟರ್ನ್ಸ್ (Income Tax Returns) ಸಲ್ಲಿಸುವ ದಿನಾಂಕವನ್ನು ಸೆಪ್ಟೆಂಬರ್ 15ರ ವರೆಗೆ ವಿಸ್ತರಿಸಲಾಗಿದೆ.
ಜುಲೈ 31ಕ್ಕೆ ಇದ್ದ ಅವಧಿಯನ್ನು ಸೆಪ್ಟೆಂಬರ್ 15ಕ್ಕೆ ವಿಸ್ತರಿಸಲಾಗಿದೆ. ಅಧಿಸೂಚಿತ ITR ಫಾರ್ಮ್‌ಗಳಲ್ಲಿನ ವ್ಯಾಪಕವಾದ ರಚನಾತ್ಮಕ ಮತ್ತು ವಿಷಯ ಪರಿಷ್ಕರಣೆಗಳೇ ಈ ವಿಸ್ತರಣೆಗೆ ಕಾರಣವೆಂದು ಕೇಂದ್ರೀಯ ನೇರ ತೆರಿಗೆ ಮಂಡಳಿ (CBDT) ತಿಳಿಸಿದೆ. ಈ ಪರಿಷ್ಕರಣೆಗಳು ಅನುಸರಣೆ ಸರಳಗೊಳಿಸುವ, ಪಾರದರ್ಶಕತೆ ಹೆಚ್ಚಿಸುವ ಮತ್ತು ವರದಿ ಮಾಡುವ ನಿಖರತೆಯನ್ನು ಸುಧಾರಿಸುವ ಗುರಿಯನ್ನು ಹೊಂದಿವೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ. ಇದನ್ನೂ ಓದಿ: ಪಾಕ್, ಚೀನಾಗೆ ಟಕ್ಕರ್ ಕೊಡಲು ಹೊಸ ಫೈಟರ್ ಜೆಟ್‌ಗೆ ಭಾರತ ಅನುಮೋದನೆ
Kind Attention Taxpayers!
CBDT has decided to extend the due date of filing of ITRs, which are due for filing by 31st July 2025, to 15th September 2025
This extension will provide more time due to significant revisions in ITR forms, system development needs, and TDS credit… pic.twitter.com/MggvjvEiOP
ಇ-ಫೈಲಿಂಗ್ ಉಪಯುಕ್ತತೆಗಳ ವ್ಯವಸ್ಥೆಯ ಅಭಿವೃದ್ಧಿ, ಏಕೀಕರಣ ಮತ್ತು ಪರೀಕ್ಷೆಗೆ ಹೆಚ್ಚುವರಿ ಸಮಯ ಬೇಕಾಗುತ್ತದೆ ಎಂದು ಇಲಾಖೆ ಹೇಳಿದೆ. ಮೇ 31 ರೊಳಗೆ ಬಾಕಿ ಇರುವ ಟಿಡಿಎಸ್ ಕ್ರೆಡಿಟ್‌ಗಳು ಜೂನ್ ಆರಂಭದಲ್ಲಿ ಪ್ರತಿಫಲಿಸಲು ಪ್ರಾರಂಭಿಸುವ ನಿರೀಕ್ಷೆಯಿದೆ.
ತೆರಿಗೆದಾರರಿಗೆ ಸುಗಮ ಮತ್ತು ಅನುಕೂಲಕರ ಫೈಲಿಂಗ್ ಸಾಧ್ಯವಾಗಲೆಂದು ಕ್ರಮವಹಿಸಲಾಗಿದೆ ಎಂದು CBDT ಹೇಳಿದೆ. ವಿಸ್ತರಣೆಯು ಪಾಲುದಾರರಿಗೆ ನವೀಕರಿಸಿದ ಫಾರ್ಮ್‌ಗಳು ಮತ್ತು ಉಪಯುಕ್ತತೆಗಳನ್ನು ಅನುಸರಿಸಲು ಸಾಕಷ್ಟು ಸಮಯಾವಕಾಶ ನೀಡುತ್ತದೆ.
ನವದೆಹಲಿ: ಏ.1ರಿಂದ ಆದಾಯ ತೆರಿಗೆ ಸೇರಿದಂತೆ ಯುಪಿಐ (UPI) ಮತ್ತು ಮಿನಿಮಮ್ ಬ್ಯಾಂಕ್ ಬ್ಯಾಲೆನ್ಸ್ (Minimum Bank Balance) ನಿಯಮಗಳಲ್ಲಿ ಬದಲಾವಣೆಯಾಗಲಿದೆ.
ಇದೇ ಏ.1 ರಿಂದ ಹಣಕಾಸು ನಿಯಮಗಳಲ್ಲಿ ಹಲವಾರು ಬದಲಾವಣೆಗಳು ಜಾರಿಗೆ ಬರಲಿದ್ದು, ತೆರಿಗೆದಾರರು, ಯುಪಿಐ ಬಳಕೆದಾರರು, ಕ್ರೆಡಿಟ್ ಕಾರ್ಡ್ ಹೊಂದಿರುವವರು ಮತ್ತು ಪಿಂಚಣಿದಾರರ ಮೇಲೆ ಇದು ಪರಿಣಾಮ ಬೀರಲಿದೆ. 2025-26ರ ಹಣಕಾಸು ವರ್ಷ ಪ್ರಾರಂಭವಾಗುತ್ತಿದ್ದಂತೆ, ಆದಾಯ ತೆರಿಗೆ, ಕ್ರೆಡಿಟ್ ಕಾರ್ಡ್ಗಳು, ಯುಪಿಐ ಭದ್ರತೆ, ಜಿಎಸ್‌ಟಿ ಹಾಗೂ ಬ್ಯಾಂಕಿಂಗ್ ಸಂಬಂಧಿಸಿದ ನಿಯಮಗಳಲ್ಲಿ ಬದಲಾವಣೆ ತರಲಿದೆ.ಇದನ್ನೂ ಓದಿ:ಕೇಂದ್ರ ನೌಕರರಿಗೆ ಯುಗಾದಿ ಗಿಫ್ಟ್ – ಶೇ.2 ರಷ್ಟು ಡಿಎ ಏರಿಕೆ
2025ರ ಕೇಂದ್ರ ಬಜೆಟ್‌ನಲ್ಲಿ ಪರಿಷ್ಕೃತ ಆದಾಯ ತೆರಿಗೆ ಸ್ಲ್ಯಾಬ್‌ಗಳು ಮತ್ತು ಕಡಿತಗಳನ್ನು ಪರಿಚಯಿಸಿದೆ. ಅವುಗಳನ್ನು ಈದೀಗ ಜಾರಿಗೆ ತರಲಾಗುತ್ತಿದ್ದು, ಹೊಸ ತೆರಿಗೆ ಪದ್ಧತಿಯಡಿಯಲ್ಲಿ ವರ್ಷಕ್ಕೆ 12 ಲಕ್ಷ ರೂ.ವರೆಗೆ ಗಳಿಸುವವರು ಆದಾಯ ತೆರಿಗೆ ಪಾವತಿಸುವುದರಿಂದ ವಿನಾಯಿತಿ ಪಡೆಯುತ್ತಾರೆ. ಅದಕ್ಕೂ ಹೆಚ್ಚು ಸಂಬಳ ಪಡೆಯುವವರು 75,000 ರೂ.ಗಳ ಪ್ರಯೋಜನ ಪಡೆಯುತ್ತಾರೆ, ಇದರಿಂದಾಗಿ 12.75 ಲಕ್ಷ ರೂ.ವರೆಗಿನ ವಾರ್ಷಿಕ ಆದಾಯವು ತೆರಿಗೆ ಮುಕ್ತವಾಗಿರುತ್ತದೆ.
ಯುಪಿಐ ನಿಯಮಗಳು:
ಏ.1 ರಿಂದ ನಿಷ್ಕ್ರಿಯ ಮೊಬೈಲ್ ಸಂಖ್ಯೆಗಳಿಂದ ಯುಪಿಐ ವಹಿವಾಟು ನಡೆಸಲಾಗುವುದಿಲ್ಲ. ಭದ್ರತೆಯನ್ನು ಹೆಚ್ಚಿಸಲು, ಬ್ಯಾಂಕ್‌ಗಳು ಮತ್ತು ಫೋನ್ ಪೇ ಮತ್ತು ಗೂಗಲ್ ಪೇನಂತಹ ಥರ್ಡ್ ಪಾರ್ಟಿ ಅಪ್ಲಿಕೇಶನ್‌ಗಳಲ್ಲಿ ದೀರ್ಘಕಾಲದವರೆಗೆ ಬಳಕೆಯಾಗದೆ ಉಳಿದಿರುವ ಮೊಬೈಲ್ ಸಂಖ್ಯೆಗಳಿಗೆ ಲಿಂಕ್ ಮಾಡಲಾದ ಖಾತೆಗಳನ್ನು ಹಂತಹಂತವಾಗಿ ರದ್ದುಗೊಳಿಸಲು ಸೂಚಿಸಲಾಗಿದೆ. ಹೀಗಾಗಿ ಏ.1ರ ಮೊದಲು ಮೊಬೈಲ್ ಸಂಖ್ಯೆಗಳನ್ನು ನವೀಕರಿಸಬೇಕು ಎಂದು ಭಾರತೀಯ ರಾಷ್ಟ್ರೀಯ ಪಾವತಿ ನಿಗಮ ಆದೇಶಿಸಿದೆ.
ಪಿಂಚಣಿ ಯೋಜನೆ:
ಮತ್ತೊಂದು ಮಹತ್ವದ ಆರ್ಥಿಕ ಬದಲಾವಣೆಯೆಂದರೆ ಹಳೆಯ ಪಿಂಚಣಿ ವ್ಯವಸ್ಥೆಯನ್ನು ಬದಲಾಯಿಸುವ ಏಕೀಕೃತ ಪಿಂಚಣಿ ಯೋಜನೆ. 2024ರ ಆಗಸ್ಟ್ನಲ್ಲಿ ಪರಿಚಯಿಸಲಾದ ಯುಪಿಎಸ್, ಏ.1 ರಿಂದ ಅಧಿಕೃತವಾಗಿ ಜಾರಿಗೆ ಬರಲಿದೆ. ಈ ಬದಲಾವಣೆಯಿಂದ ಸುಮಾರು 23 ಲಕ್ಷ ಕೇಂದ್ರ ಸರ್ಕಾರಿ ನೌಕರರ ಮೇಲೆ ಪರಿಣಾಮ ಬೀರಲಿದೆ. ಕನಿಷ್ಠ 25 ವರ್ಷಗಳ ಸೇವೆಯನ್ನು ಹೊಂದಿರುವವರು ತಮ್ಮ ಕೊನೆಯ 12 ತಿಂಗಳ ಸರಾಸರಿ ಮೂಲ ವೇತನದ ಶೇ.50 ರಷ್ಟಕ್ಕೆ ಸಮಾನವಾದ ಪಿಂಚಣಿಯನ್ನು ಪಡೆಯಲಿದ್ದಾರೆ.
ಕನಿಷ್ಠ ಬ್ಯಾಲೆನ್ಸ್:
ಬ್ಯಾಂಕಿಂಗ್ ವಲಯದಲ್ಲಿ, ಎಸ್‌ಬಿಐ, ಪಂಜಾಬ್ ನ್ಯಾಷನಲ್ ಬ್ಯಾಂಕ್ ಮತ್ತು ಕೆನರಾದಂತಹ ಪ್ರಮುಖ ಬ್ಯಾಂಕ್‌ಗಳು ಕನಿಷ್ಠ ಬ್ಯಾಲೆನ್ಸ್ ನಿಯಮಗಳನ್ನು ನವೀಕರಿಸುತ್ತಿದ್ದು, ಪರಿಷ್ಕೃತ ಕನಿಷ್ಠ ಬ್ಯಾಲೆನ್ಸ್ ಕಾಯ್ದುಕೊಳ್ಳಲು ಸಾಧ್ಯವಾಗದಿದ್ದರೆ ಗ್ರಾಹಕರು ಹೊಸ ಬ್ಯಾಂಕಿಂಗ್ ಮಾರ್ಗಸೂಚಿಗಳ ಪ್ರಕಾರ ದಂಡ ಪಾವತಿಸಬೇಕಾಗುತ್ತದೆ.ಇದನ್ನೂ ಓದಿ:ಮೇ.1 ರಿಂದ ಎಟಿಎಂ ವಿತ್ ಡ್ರಾ ಶುಲ್ಕ 2 ರೂ. ಹೆಚ್ಚಳ
ನವದೆಹಲಿ: ಬಜೆಟ್ 2025ರಲ್ಲಿ ಮಧ್ಯಮ ವರ್ಗಕ್ಕೆ ಕೇಂದ್ರ ಸರ್ಕಾರ ಬಂಪರ್ ಗಿಫ್ಟ್ ಕೊಟ್ಟಿದೆ. ವಾರ್ಷಿಕ 12 ಲಕ್ಷದವರೆಗೆ ಆದಾಯ ಹೊಂದಿರುವವರು ತೆರಿಗೆ ಕಟ್ಟುವಂತಿಲ್ಲ ಎಂದು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಘೋಷಿಸಿದ್ದಾರೆ.
ಪ್ರತಿ ಬಾರಿ ಬಜೆಟ್‌ನಲ್ಲಿ ಆದಾಯ ತೆರಿಗೆ (Income Tax) ವಿನಾಯಿತಿಯನ್ನು ಹೆಚ್ಚಿಸಬೇಕು ಎಂಬ ಆಗ್ರಹ ಕೇಳಿ ಬರುತ್ತಿತ್ತು. ಹೀಗಾಗಿ ಈ ಬಾರಿ ಗರಿಷ್ಠ 10 ಲಕ್ಷ ರೂ.ವರೆಗೆ ತೆರಿಗೆ ವಿನಾಯಿತಿ ನೀಡಬಹುದು ಎಂಬ ಮಾತು ಕೇಳಿ ಬಂದಿತ್ತು. ಆದರೆ ಈ ಬಾರಿ ನಿರ್ಮಲಾ ಸೀತಾರಾಮನ್ ಅವರು ಬರೋಬ್ಬರಿ 12 ಲಕ್ಷ ರೂ. ವರೆಗೆ ತೆರಿಗೆ ವಿನಾಯಿತಿ ಘೋಷಣೆ ಮಾಡಿ ಮಧ್ಯಮ ವರ್ಗದವರಿಗೆ ಬಂಪರ್ ಘೋಷಣೆ ಮಾಡಿದ್ದಾರೆ. ಇದನ್ನೂ ಓದಿ: Budget 2025: ರೈತರಿಗಾಗಿ ‘ಧನ್ ಧಾನ್ಯ ಕೃಷಿ’ ಯೋಜನೆ ಘೋಷಿಸಿದ ಸೀತಾರಾಮನ್
ಮುಂದಿನ ವಾರ ಸೀತಾರಾಮನ್ ಅವರು ಹೊಸ ಆದಾಯ ತೆರಿಗೆ ಮಸೂದೆಯನ್ನು ಮಂಡಿಸಲಿದ್ದಾರೆ. ಈ ಮಸೂದೆಯಲ್ಲಿ ಈ ವಿಚಾರದ ಬಗ್ಗೆ ಹೆಚ್ಚಿನ ಸ್ಪಷ್ಟತೆ ಸಿಗಲಿದೆ.
ನವದೆಹಲಿ: ಕೇಂದ್ರ ಬಜೆಟ್ 2025 (Union Budget 2025) ಇದೇ ಫೆ.1 ರಂದು ಮಂಡನೆಯಾಗಲಿದೆ. ಕೇಂದ್ರ ಹಣಕಾಸು ಸಚಿವರು ಆಯವ್ಯಯ ಮಂಡಿಸಲು ಸಜ್ಜಾಗಿದ್ದಾರೆ. ಜನರ ನಿರೀಕ್ಷೆಗಳು ಗರಿಗೆದರಿವೆ. ನಮ್ಮ ವಲಯಕ್ಕೆ ಏನೇನು ಸಿಗಲಿದೆ ಎಂಬ ಕುತೂಹಲ ಎಲ್ಲರಲ್ಲೂ ಮನೆ ಮಾಡಿದೆ. ಸಂಬಳ ಪಡೆಯುವ ಉದ್ಯೋಗಿಗಳು, ಕಾರ್ಪೊರೇಟ್‌ಗಳು ಮತ್ತು ಉದ್ಯಮಿಗಳಿಗೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಏನು ನೀಡಲಿದ್ದಾರೆ ಎಂಬುದರ ಮೇಲೆ ಎಲ್ಲರ ಗಮನ ಕೇಂದ್ರೀಕರಿಸಿದೆ. ಆದಾಯ ತೆರಿಗೆ ಸೇರಿದಂತೆ ಯಾವೆಲ್ಲಾ ಕ್ಷೇತ್ರಗಳಲ್ಲಿ ಬದಲಾವಣೆ ತರಲಿದ್ದಾರೆಂದು ಕುತೂಹಲದ ಕಣ್ಣಿನಿಂದ ಕಾಯುತ್ತಿದ್ದಾರೆ.
ಬೆಲೆ ಏರಿಕೆಯಿಂದ ಜನರು ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಆದಾಯ ತೆರಿಗೆ, ಎಲೆಕ್ಟ್ರಿಕ್ ವೆಹಿಕಲ್ಸ್ (ಇವಿ) ಮತ್ತು ಕ್ರಿಪ್ಟೋ, ಗೃಹ ಸಾಲ, ಉಳಿತಾಯಕ್ಕೆ ಪ್ರೋತ್ಸಾಹ ಸಿಗುವ ನಿರೀಕ್ಷೆಯಲ್ಲಿದ್ದಾರೆ. ಇವುಗಳಲ್ಲಿ ಬದಲಾವಣೆಗಳನ್ನು ತರುವ ಸಂಬಂಧ ಹಲವು ಶಿಫಾರಸುಗಳನ್ನು ತಜ್ಞರು ನೀಡಿದ್ದಾರೆ. ಈ ಪ್ರಸ್ತಾವಿತ ಸುಧಾರಣೆಗಳು ತೆರಿಗೆದಾರರಿಗೆ ಒಂದಷ್ಟು ಪರಿಹಾರ ಒದಗಿಸುವ ಗುರಿಯನ್ನು ಹೊಂದಿವೆ. ಇದನ್ನೂ ಓದಿ: Union Budget 2025| ಯಾವಾಗ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡನೆ ಮಾಡುತ್ತಾರೆ?
ಆದಾಯ ತೆರಿಗೆ ಸ್ಲ್ಯಾಬ್‌ಗಳಲ್ಲಿ ಬದಲಾವಣೆ
ವೈಯಕ್ತಿಕ ಆದಾಯ ತೆರಿಗೆ ದರಗಳನ್ನು ಸಂಭಾವ್ಯವಾಗಿ ಕಡಿಮೆ ಮಾಡುವ ಮೂಲಕ ಮಧ್ಯಮ ವರ್ಗದ ತೆರಿಗೆದಾರರಿಗೆ ಪರಿಹಾರವನ್ನು ಒದಗಿಸಲು ತೆರಿಗೆ ಸ್ಲ್ಯಾಬ್‌ಗಳನ್ನು ಪರಿಷ್ಕರಿಸಲು ಸರ್ಕಾರವು ಪರಿಗಣಿಸಬೇಕು ಎಂಬ ಕೂಗು ಕೇಳಿಬಂದಿದೆ.
ಆದಾಯ ತೆರಿಗೆ ಆಡಳಿತದ ಅಡಿಯಲ್ಲಿ ವಿನಾಯಿತಿ ಮಿತಿಯನ್ನು ಹೆಚ್ಚಿಸುವ ಮೂಲಕ ಹಣದುಬ್ಬರವನ್ನು ಪರಿಹರಿಸಬಹುದು. ಆದಾಯ ತೆರಿಗೆಗೆ ಕನಿಷ್ಠ 10 ಲಕ್ಷ ರೂ. ಮಿತಿ ಅಳವಡಿಸಿಕೊಳ್ಳಬೇಕು ಎಂದು ಅನೇಕ ತೆರಿಗೆದಾರರು ನಿರೀಕ್ಷಿಸಿದ್ದಾರೆ. ಸರ್ಕಾರವು ವಾರ್ಷಿಕವಾಗಿ 15 ಲಕ್ಷದವರೆಗೆ ಗಳಿಸುವವರಿಗೆ ಆದಾಯ ತೆರಿಗೆ ದರಗಳನ್ನು ಕಡಿಮೆ ಮಾಡಬೇಕು. ಇದರಿಂದ ವೈಯಕ್ತಿಕ ಆದಾಯ ಹೆಚ್ಚಳವಾಗಲಿದೆ. ಆಗ ಮಾರುಕಟ್ಟೆಯಲ್ಲಿ ವಿನಿಯೋಗವು ಹೆಚ್ಚಲಿದೆ ಎಂದು ಕ್ಲಿಯರ್‌ಟ್ಯಾಕ್ಸ್‌ನ ತೆರಿಗೆ ತಜ್ಞ ಶೆಫಾಲಿ ಮುಂದ್ರಾ ಅಭಿಪ್ರಾಯಪಟ್ಟಿದ್ದಾರೆ. ಇದನ್ನೂ ಓದಿ: ಫೈನಾನ್ಸ್ ಕಿರುಕುಳ: 3 ವರ್ಷ ಜೈಲು, 1 ಲಕ್ಷದ ವರೆಗೆ ದಂಡ – ಗುರುವಾರ ಸರ್ಕಾರದಿಂದ ಸುಗ್ರೀವಾಜ್ಞೆ
ಹೊಸ ತೆರಿಗೆ ವ್ಯವಸ್ಥೆಯಲ್ಲಿ ಗೃಹ ಸಾಲದ ಪ್ರಯೋಜನಗಳು
ಹೊಸ ತೆರಿಗೆ ವ್ಯವಸ್ಥೆಯ ಅಡಿಯಲ್ಲಿ ಮನೆ ಹೊಂದುವವರನ್ನು ಪ್ರೋತ್ಸಾಹಿಸಬೇಕು. ಹಳೆ ತೆರಿಗೆ ಪದ್ಧತಿಯಲ್ಲಿ ಕಡಿಮೆ ತೆರಿಗೆ ಇರುವವರಿಗೂ ಇದರ ಲಾಭ ಸಿಗಬೇಕು ಎಂದು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ತೆರಿಗೆ ತಜ್ಞರು ಸಲಹೆ ನೀಡಿದ್ದಾರೆ.
ಮನೆ ಮಾಲೀಕರಿಗೆ ಪ್ರೋತ್ಸಾಹ
ಮನೆ ಹೊಂದುವವರು ಸೆಕ್ಷನ್ 24(ಬಿ) ಅಡಿಯಲ್ಲಿ ಗೃಹ ಸಾಲಗಳ ಮೇಲಿನ ಹೆಚ್ಚಿನ ಬಡ್ಡಿ ಕಡಿತದ ಮಿತಿಗಳಿಂದ ಪ್ರಯೋಜನ ಪಡೆಯಬಹುದು. ಕನಿಷ್ಠ ಒಂದು ಮನೆಗಾದರೂ, ಪೂರ್ತಿ ಬಡ್ಡಿ ಪಾವತಿಸುವವರಿಗೆ ರಿಯಾಯಿತಿ ಮಿತಿಯನ್ನು ಹೆಚ್ಚಿಸಬೇಕು. ಪ್ರಸ್ತುತ ಈ ಮಿತಿಯನ್ನು 2 ಲಕ್ಷದಿಂದ 3 ಲಕ್ಷಕ್ಕೆ ಹೆಚ್ಚಿಸಬೇಕು ದಿವಾನ್ ಪಿ.ಎನ್‌ನ ವ್ಯವಸ್ಥಾಪಕ ಪಾಲುದಾರ ಧ್ರುವ ಚೋಪ್ರಾ ತಿಳಿಸಿದ್ದಾರೆ.
ಎನ್‌ಪಿಎಸ್ ಕಡಿತ ಮಿತಿ ಹೆಚ್ಚಿಸುವುದು
ಹೆಚ್ಚುವರಿ ಎನ್‌ಪಿಎಸ್ ಕಡಿತದ ಮಿತಿಯನ್ನು 50,000 ದಿಂದ 1 ಲಕ್ಷಕ್ಕೆ ಹೆಚ್ಚಿಸಬೇಕು. ಅದಕ್ಕೆ ಸಂಪೂರ್ಣ ತೆರಿಗೆ ವಿನಾಯಿತಿ ನೀಡಬೇಕು ಎಂಬ ಕೂಗು ಕೇಳಿಬಂದಿದೆ.
ಶ್ರೇಣಿ-2 ನಗರಗಳಿಗೆ ಹೆಚ್‌ಆರ್‌ಎ
ದ್ವಿತೀಯ ದರ್ಜೆ ನಗರಗಳಾದ ಬೆಂಗಳೂರು, ಹೈದರಾಬಾದ್, ಪುಣೆಯಲ್ಲಿ ಉದ್ಯೋಗಿಗಳಿಗೆ ಮನೆ ಬಾಡಿಗೆ ಭತ್ಯೆಯನ್ನು 50%ಗೆ ವಿಸ್ತರಿಸಬೇಕು ಎಂದು ಬೇಡಿಕೆಯೂ ಇದೆ.
ಪಿಎಫ್ ಬಡ್ಡಿಯ ಮೇಲಿನ ಟಿಡಿಎಸ್‌ಗೆ ವಿನಾಯಿತಿ ನೀಡಬೇಕು
ಪಿಎಫ್ ಮೇಲಿನ ಬಡ್ಡಿಯು 2.5 ಲಕ್ಷ ರೂ. ಮೀರಿದಾಗ ವಿಧಿಸುವ ಟಿಡಿಎಸ್ ಅನ್ನು ಹಣ ಹಿಂಪಡೆಯುವ ವರೆಗೂ ಕಡಿತ ಮಾಡಬಾರದು ಎಂಬ ಬೇಡಿಕೆ ಇದೆ.
ಹೂಡಿಕೆ ಮೇಲಿನ ತೆರಿಗೆ
ಹೂಡಿಕೆಯ ಲಾಭದ ಮೇಲಿನ ತೆರಿಗೆಗಳಿಗೆ ಸಂಬಂಧಿಸಿದಂತೆ ಕೆಲವು ಬದಲಾವಣೆಯ ಅಗತ್ಯತೆಗಳನ್ನು ನಿರೀಕ್ಷಿಸಲಾಗಿದೆ. ಭಾರತೀಯ ಹಾಗೂ ವಿದೇಶಿ ಷೇರು ಮಾರುಕಟ್ಟೆಯಲ್ಲಿನ ಹೂಡಿಕೆ, ಚಿನ್ನದ ಮೇಲಿನ ಹೂಡಿಕೆಯಿಂದ ಸಿಗುವ ಲಾಭಕ್ಕೆ ತೆರಿಗೆ ಪ್ರಮಾಣ ತಗ್ಗಿಸಬೇಕು. ಸ್ಟಾಕ್ ಲಾಭದ ಮೇಲಿನ ತೆರಿಗೆಗಳು ಹೆಚ್ಚಾಗಿರುವುದರಿಂದ (ಅಲ್ಪಾವಧಿಗೆ 15% ರಿಂದ 20% ಮತ್ತು ದೀರ್ಘಾವಧಿಗೆ 10% ರಿಂದ 12.5% ವರೆಗೆ), ಷೇರುಗಳನ್ನು ಖರೀದಿಸುವಾಗ ಮತ್ತು ಮಾರಾಟ ಮಾಡುವಾಗ ಪಾವತಿಸುವ ತೆರಿಗೆಯನ್ನು ತೆಗೆದುಹಾಕಬೇಕು.
ಹಿರಿಯ ನಾಗರಿಕರ ಮೇಲಿನ ಆರ್ಥಿಕ ಹೊರೆ ಕಡಿಮೆ ಮಾಡುವುದು
ಹಿರಿಯ ನಾಗರಿಕರಿಗೆ ಹಣಕಾಸಿನ ಒತ್ತಡ ಕಡಿಮೆ ಮಾಡಬೇಕಿದೆ. ಅವರಿಗೆ ಉದಾರವಾದ ವಿನಾಯಿತಿ ಮಿತಿಯನ್ನು ಒದಗಿಸಬೇಕಿದೆ. ಹೆಚ್ಚಿನ ವಿನಾಯಿತಿ ನೀಡಬೇಕಿದೆ ಎಂಬುದು ತಜ್ಞರ ಸಲಹೆ.
ಸೆಕ್ಷನ್ 80ಸಿ ಅಡಿಯಲ್ಲಿ ಮಿತಿ ಹೆಚ್ಚಳ
ಸೆಕ್ಷನ್ 80ಸಿ ಮಿತಿಯನ್ನು ಪರಿಷ್ಕರಿಸಬೇಕು ಎಂದು ಮಧ್ಯಮ ವರ್ಗ ಆಶಯ ವ್ಯಕ್ತಪಡಿಸಿದೆ. ಈಗ ಇರುವ 1.5 ಲಕ್ಷ ಮಿತಿಯು 2014ರಿಂದಲೂ ಬದಲಾಗಿಲ್ಲ. ಎಫ್‌ಡಿ, ಪಿಪಿಎಫ್ ಮೊದಲಾದ ಹೂಡಿಕೆ ಉತ್ತೇಜನಕ್ಕೆ ಇದು ತುಂಬಾ ಅವಶ್ಯಕ ಎಂದು ತಜ್ಞರು ತಿಳಿಸಿದ್ದಾರೆ.
ನವದೆಹಲಿ: ಫೆಬ್ರವರಿ 1 ರಂದು ಮಂಡನೆಯಾಗಲಿರುವ 2025-26ನೇ ಸಾಲಿನ ವಾರ್ಷಿಕ ಬಜೆಟ್‌ನಲ್ಲಿ 15 ಲಕ್ಷ ರೂ.ಗಳ ವರೆಗೆ ಆದಾಯ ತೆರಿಗೆ (Income Tax) ಕಡಿತಗೊಳಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ ಎಂದು ಉನ್ನತ ಮೂಲಗಳು ತಿಳಿಸಿರುವುದಾಗಿ ವರದಿಯಾಗಿದೆ.
Kind Attention Taxpayers!
A validated bank account is necessary for receipt of refunds.
Here’s how you can check your bank a/c validation status on e-filing portal. pic.twitter.com/7OKmc4t8QX
ಮಧ್ಯಮ ವರ್ಗಗಳ ಮೇಲಿನ ಆರ್ಥಿಕ ಹೊರೆಯನ್ನು ತಗ್ಗಿಸುವ ಉದ್ದೇಶ ಹಾಗೂ ಆರ್ಥಿಕತೆ ವೇಗವಾಗಿ ಬೆಳೆಯಲು ಅವಕಾಶ ಮಾಡಿಕೊಡುವ ಉದ್ದೇಶದಿಂದ ಸರ್ಕಾರ ಈ ಚಿಂತನೆ ಮಾಡಿದೆ. ಸದ್ಯಕ್ಕೆ ಯಾವುದೇ ಕಡಿತದ ಗಾತ್ರವನ್ನು ನಿರ್ಧರಿಸಿಲ್ಲ. ಬಜೆಟ್ ಮಂಡನೆಗೆ ದಿನಾಂಕ ಸಮೀಪವಾಗುತ್ತಿದ್ದಂತೆ ನಿರ್ಧಾರ ಸ್ಪಷ್ಟವಾಗಲಿದೆ ಎಂದು ಹೆಸರು ಹೇಳಲಿಚ್ಚಿಸದ ಸರ್ಕಾರಿ ಮೂಲಗಳು ತಿಳಿಸಿವೆ ಎನ್ನಲಾಗಿದೆ. ಇದನ್ನೂ ಓದಿ: ಬಿಜೆಪಿಗೆ 2,244 ಕೋಟಿ, ಕಾಂಗ್ರೆಸ್‌ಗೆ 289 ಕೋಟಿ – ಯಾವ ಪಕ್ಷಕ್ಕೆ ಎಷ್ಟು ದೇಣಿಗೆ ಸಿಕ್ಕಿದೆ?
ಪ್ರಮುಖವಾಗಿ ವಸತಿ ಬಾಡಿಗೆಗಳಂತಹ ವಿನಾಯಿತಿಗಳನ್ನು ತೆಗೆದುಹಾಕುವ 2020ರ ತೆರಿಗೆ ವ್ಯವಸ್ಥೆಯನ್ನು ಆರಿಸಿಕೊಂಡರೆ, ಈ ಕ್ರಮವು ಕೋಟ್ಯಂತರ ತೆರಿಗೆದಾರರಿಗೆ, ವಿಶೇಷವಾಗಿ ಹೆಚ್ಚಿನ ಜೀವನ ವೆಚ್ಚದಿಂದ ಹೊರೆಯಾಗಿರುವ ನಗರವಾಸಿಗಳಿಗೆ ಪ್ರಯೋಜನ ನೀಡುತ್ತದೆ. 2020ರ ತೆರಿಗೆ ಪದ್ದತಿಯಲ್ಲಿ 3 ಲಕ್ಷ ರೂ.ಗಳಿಂದ 15 ಲಕ್ಷ ರೂ.ಗಳ ವರೆಗಿನ ವಾರ್ಷಿಕ ಆದಾಯಕ್ಕೆ ಶೇ.5 ರಿಂದ ಶೇ.20ರ ವರೆಗೆ ತೆರಿಗೆ ವಿಧಿಸಲಾಗುತ್ತಿತ್ತು. ಈ ಪ್ರಮಾಣ ಗರಿಷ್ಠ 30% ರಷ್ಟಿತ್ತು.
ಇದೀಗ ಕೇಂದ್ರ ಸರ್ಕಾರ ಮುಂದಿಟ್ಟಿರುವ ನೂತನ ಪ್ರಸ್ತಾಪದಲ್ಲಿ ದೇಶದ ತೆರಿಗೆದಾರರು 2 ತೆರಿಗೆ ವ್ಯವಸ್ಥೆಗಳಲ್ಲಿ ಒಂದನ್ನು ಆಯ್ಕೆ ಮಾಡಬಹುದು. ಅದೇನೆಂದರೆ ವಸತಿ ಬಾಡಿಗೆ ಮತ್ತು ವಿಮೆಯ ಮೇಲೆ ವಿನಾಯಿತಿ ಅನುಮತಿಸುವ ಒಂದು ತೆರಿಗೆ ಪದ್ದತಿ ಮತ್ತು ಮತ್ತೊಂದು 2020ರಲ್ಲಿ ಪರಿಚಯಿಸಲಾದ ತೆರಿಗೆ ಪದ್ದತಿ. ಇದು ಸ್ವಲ್ಪ ಕಡಿಮೆ ತೆರಿಗೆ ದರಗಳನ್ನು ನೀಡುತ್ತದೆಯಾದರೂ ಪ್ರಮುಖ ವಿನಾಯಿತಿಗಳನ್ನ ಅನುಮತಿಸುವುದಿಲ್ಲ ಎಂದು ವರದಿ ಹೇಳಿದೆ.
ಇತ್ತೀಚೆಗಷ್ಟೇ ಪ್ರಧಾನಿ ಮೋದಿ ಅವರು ಅರ್ಥಶಾಸ್ತ್ರಜ್ಞರನ್ನು ಭೇಟಿಯಾಗಿದ್ದರು. ಈ ವೇಳೆ ತಜ್ಞರು ನಾಗರಿಕರ ಮೇಲಿನ ಹೊರೆ ಕಡಿಮೆ ಮಾಡಲು ಆದಾಯ ತೆರಿಗೆ ಕಡಿತಗೊಳಿಸುವಂತೆ ಮೋದಿ ಅವರಿಗೆ ಮನವಿ ಮಾಡಿಕೊಂಡಿದ್ದರು. ಅಲ್ಲದೇ ಕಸ್ಟಮ್ಸ್ ಸುಂಕಗಳನ್ನು ತರ್ಕಬದ್ಧಗೊಳಿಸಬೇಕು ಮತ್ತು ರಫ್ತುಗಳನ್ನು ಬೆಂಬಲಿಸುವ ಕ್ರಮಗಳನ್ನ ಪರಿಚಯಿಸಬೇಕು ಎಂದು ಸಹ ಮನವಿ ಮಾಡಿದ್ದರು.
ಭೋಪಾಲ್: ಮಿಂದೋರಿ ಕಾಡಿನಲ್ಲಿ ನಿಂತಿದ್ದ ಕಾಲಿನಲ್ಲಿ ಬರೋಬ್ಬರಿ 40 ಕೋಟಿ ರೂ. ಮೌಲ್ಯದ 52 ಕೆಜಿ ಚಿನ್ನವನ್ನು ಕಾರ್ಯಾಚರಣೆ ನಡೆಸಿ ಐಟಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.
ರಾತ್ರಿ 2 ಗಂಟೆ ವೇಳೆಗೆ ಅಧಿಕಾರಿಗಳಿಗೆ ಖಚಿತ ಮಾಹಿತಿ ಬಂದಿತ್ತು. 30 ವಾಹನಗಳಲ್ಲಿ 100 ಪೊಲೀಸರು ಕಾರ್ಯಾಚರಣೆ ತೆರಳಿದ್ದರು. ಜಾರಿ ನಿರ್ದೇಶನಾಲಯ (ED), ಲೋಕಾಯುಕ್ತ ಮತ್ತು ಐಟಿ ಇಲಾಖೆಯಿಂದ ರಿಯಲ್ ಎಸ್ಟೇಟ್ ಉದ್ಯಮಿಗಳ ಮೇಲೆ ದಾಳಿ ನಡೆಸುವ ಸಂದರ್ಭದಲ್ಲಿ ಇದು ಬೆಳಕಿಗೆ ಬಂದಿದೆ. ಇದನ್ನೂ ಓದಿ: ಬಿಹಾರದಲ್ಲಿ ಥರ್ಮಲ್ ಪವರ್ ಪ್ಲಾಂಟ್ ಸ್ಥಾಪಿಸಲು ಅದಾನಿ ಗ್ರೂಪ್ 20,000 ಕೋಟಿ ಹೂಡಿಕೆ
ಇಲಾಖೆಗೆ ಮಧ್ಯರಾತ್ರಿ 2 ಗಂಟೆ ಸುಮಾರಿಗೆ ಸುಳಿವು ಸಿಕ್ಕಿತು. ನಾವು ಕರೆ ಸ್ವೀಕರಿಸಿದ ನಂತರ 30 ವಾಹನಗಳಲ್ಲಿ 100 ಪೊಲೀಸರ ತಂಡವು ಸ್ಥಳಕ್ಕೆ ಹೋದೆವು. ಪೊಲೀಸರು ಬಂಧಿಸಲು ಪ್ರಯತ್ನಿಸುತ್ತಿರುವ ಬಿಲ್ಡರ್ ಹೆಸರಿನಲ್ಲಿ ಕಾರನ್ನು ನೋಂದಾಯಿಸಲಾಗಿದೆ ಎಂದು ಐಟಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪ್ರಾದೇಶಿಕ ಸಾರಿಗೆ ಕಚೇರಿಯ (ಆರ್‌ಟಿಒ) ಮಾಜಿ ಕಾನ್‌ಸ್ಟೆಬಲ್ ಸೌರಭ್ ಶರ್ಮಾ ಅವರ ನಿವಾಸದ ಮೇಲೆ ದಾಳಿ ನಡೆಸಿದ ಲೋಕಾಯುಕ್ತ ಅಧಿಕಾರಿಗಳು 1 ಕೋಟಿ ಮತ್ತು 40 ಕೆಜಿ ಬೆಳ್ಳಿಯನ್ನು ವಶಪಡಿಸಿಕೊಂಡಿದ್ದಾರೆ. ಶರ್ಮಾ ಅವರು ಒಂದು ವರ್ಷದ ಹಿಂದೆ ಕೆಲಸ ತೊರೆದು ರಿಯಲ್ ಎಸ್ಟೇಟ್ ಉದ್ಯಮಕ್ಕೆ ಸೇರಿದ್ದರು.
ನವದೆಹಲಿ: ತೆರಿಗೆ ಪಾವತಿದಾರರಿಗೆ (Salaried Class) ಬಜೆಟ್‌ನಲ್ಲಿ (Union Budget) ಗುಡ್ ನ್ಯೂಸ್ ಸಿಕ್ಕಿದೆ. ಹೊಸ ತೆರಿಗೆ ಪದ್ಧತಿಯಲ್ಲಿ ಸಂಬಳ ಪಡೆಯುವ ಉದ್ಯೋಗಿಗಳು ವರ್ಷಕ್ಕೆ 17,500 ರೂ. ಆದಾಯ ತೆರಿಗೆ ಉಳಿತಾಯ ಮಾಡಬಹುದು.
ಎಷ್ಟು ತೆರಿಗೆ?
0-3 ಲಕ್ಷ ರೂ. ವರೆಗೆ ಯಾವುದೇ ತೆರಿಗೆ ಇಲ್ಲ (ಯಾವುದೇ ಬದಲಾವಣೆ ಇಲ್ಲ)
3-7 ಲಕ್ಷ ರೂ. ವರೆಗೆ 5% (ಮೊದಲು 3-6 ಲಕ್ಷ ರೂ. ಗೆ 5% ಇತ್ತು)
7-10 ಲಕ್ಷ ರೂ. ವರೆಗೆ 10 % (ಮೊದಲು 6-9 ಲಕ್ಷ ರೂ. 10% ಇತ್ತು)
10-12 ಲಕ್ಷ ರೂ. ವರೆಗೆ 15% ( ಮೊದಲು 9-12 ಲಕ್ಷ ರೂ. 15% ಇತ್ತು)
12-15 ಲಕ್ಷ ರೂ. ವರೆಗೆ 20% (ಯಾವುದೇ ಬದಲಾವಣೆ ಇಲ್ಲ)
15 ಲಕ್ಷ ರೂ. ಗಿಂತ ಮೇಲ್ಪಟ್ಟು 30% (ಯಾವುದೇ ಬದಲಾವಣೆ ಇಲ್ಲ)
Tax Relief and Revised Tax Slabs in New Tax Regime ????
???? Income tax saving of up to ₹ 17,500/- for salaried employee in new tax regime
???? #IncomeTax Relief for around Four Crore Salaried Individuals and Pensioners