ಮುಂಬೈ: ಆದಾಯ ತೆರಿಗೆ (Income Tax) ಇಲಾಖೆ ನಾಸಿಕ್‌ನಲ್ಲಿರುವ (Nashik) ಪ್ರಸಿದ್ಧ ಜುವೆಲ್ಲರಿ ಅಂಗಡಿ ಮೇಲೆ ದಾಳಿ ನಡೆಸಿ 26 ಕೋಟಿ ರೂ. ನಗದು ಹಣವನ್ನು ಜಪ್ತಿ ಮಾಡಿದೆ.
ಅಕ್ರಮ ವಹಿವಾಟು ನಡೆಸಿದ ಆರೋಪದ ಮೇಲೆ ಸುರಾನಾ ಜ್ಯುವೆಲರ್ಸ್ (Surana Jewellers) ಮೇಲೆ ದಾಳಿ ನಡೆಸಿದೆ. ಈ ವೇಳೆ 26 ಕೋಟಿ ರೂ. ನಗದು, 90 ಕೋಟಿ ರೂ. ಮೌಲ್ಯದ ಲೆಕ್ಕಕ್ಕೆ ಸಿಗದ ಸಂಪತ್ತಿನ ದಾಖಲೆಗಳನ್ನು ವಶಪಡಿಸಿಕೊಂಡಿದೆ. ಇದನ್ನೂ ಓದಿ: ನಿಂತಿದ್ದ ಬಸ್‌ಗೆ ಟ್ರಕ್ ಡಿಕ್ಕಿ – 11 ಭಕ್ತರು ದುರ್ಮರಣ, 10 ಜನರಿಗೆ ಗಾಯ
#WATCH | The Income Tax Department launched a raid on Surana Jewellers in Nashik, in response to alleged undisclosed transactions by the proprietor. About Rs 26 crore in cash and documents of unaccounted wealth worth Rs 90 crore have been seized in raids carried out by the Income… pic.twitter.com/lnv9wAGi3N
ಬೆಂಗಳೂರು: ಬಿನ್ನಿಮಿಲ್ ಬಳಿ ಶನಿವಾರ ಸಂಜೆ 2 ಕೋಟಿ ರೂ. ಹಣ ಜಪ್ತಿ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಈ ಹಣ ತಮ್ಮದು ಎಂದು ಬಿಜೆಪಿ (BJP) ಹೇಳಿಕೊಂಡಿದ್ದು, ಇದಕ್ಕೆ ಪೂರಕವಾದ ಬ್ಯಾಂಕ್ ದಾಖಲೆಗಳನ್ನು ಒದಗಿಸಿದೆ.
ಇದು ಮಾರ್ಚ್ 27ರಂದು ಕೆನರಾ ಬ್ಯಾಂಕ್‌ನಲ್ಲಿ ಡ್ರಾ ಮಾಡಿದ್ದ ಹಣ. ಪಕ್ಷದ ಕಚೇರಿಯಲ್ಲಿ (Party Office) ಇರಿಸಲಾಗಿತ್ತು. ಇದನ್ನು ನಾಲ್ಕು ಲೋಕಸಭೆ ಕ್ಷೇತ್ರಗಳ (Lok Sabha Election) ಚುನಾವಣಾ ಕಾರ್ಯಕ್ಕೆ ಹಂಚಲು ತೆಗೆದುಕೊಂಡು ಹೋಗುತ್ತಿದ್ದೆವು ಎಂದು ಬಿಜೆಪಿ ವಿವರಣೆ ನೀಡಿದೆ. ಇದನ್ನು ಆದಾಯ ತೆರಿಗೆ (Income Tax) ಇಲಾಖೆ ಮೂಲಕ ಪರಿಶೀಲಿಸಿದ ಚುನಾವಣಾ ಆಯೋಗ (Election Commission) ಜಪ್ತಿ ಮಾಡಿದ್ದ ಹಣವನ್ನು ಬಿಜೆಪಿಗೆ ಮರಳಿಸಿದೆ.
ಮೋದಿಯವರ ಬಳಿ ಇರುವುದು ಖಾಲಿ ಚೊಂಬೇ ಹೊರತು ಅಕ್ಷಯ ಪಾತ್ರೆಯಲ್ಲ.
ಅದು ಅಕ್ಷಯ ಪಾತ್ರೆ ಎಂದಾದರೆ, ಅದರಿಂದ ನಮ್ಮ ರೈತರಿಗೆ ಬರ ಪರಿಹಾರವನ್ನು, ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಬರಬೇಕಾದ ಅನುದಾನವನ್ನು ದೇವೇಗೌಡ ಅವರು ಪ್ರಧಾನಿಗಳಿಗೆ ಹೇಳಿಕೆ ಕೊಡಿಸಲಿ. – @krishnabgowdapic.twitter.com/t12CpwhaV7
ಈ ಪ್ರಕರಣದ ಬಗ್ಗೆ ಕಾಂಗ್ರೆಸ್ ಹಲವು ಅನುಮಾನ ವ್ಯಕ್ತಪಡಿಸಿ ಪ್ರಶ್ನೆಗಳನ್ನು ಕೇಳಿದೆ. ಐಟಿ ಇಲಾಖೆಯ ಸೂಪರ್‌ಫಾಸ್ಟ್ ಕಾರ್ಯವೈಖರಿ. ಎರಡ್ಮೂರು ಗಂಟೆಯಲ್ಲೇ ನೀಡಿದ ಕ್ಲೀನ್‌ಚಿಟ್ ಉಲ್ಲೇಖಿಸಿ, ಇದು ಪ್ರಜಾಪ್ರಭುತ್ವದ ಮೇಲಿನ ಸರ್ಜಿಕಲ್ ಸ್ಟ್ರೈಕ್ ಎಂದು ಬಿಜೆಪಿ ವಿರುದ್ಧ ಕಾಂಗ್ರೆಸ್ ಆಕ್ರೋಶ ಹೊರಹಾಕಿದೆ. ಈ ಬಗ್ಗೆ ತನಿಖೆಗೆ ಆಗ್ರಹಿಸಿದೆ. ಆಯೋಗಕ್ಕೆ ದೂರು ನೀಡಲು ಮುಂದಾಗಿದೆ. ಈ ಬೆಳವಣಿಗೆಗಳ ನಡುವೆ ಚುನಾವಣಾ ಆಯೋಗ, ಬಿಜೆಪಿ ಕಾರ್ಯದರ್ಶಿ ವಿರುದ್ಧ ದೂರು ನೀಡಿದೆ.
But as per ECI direction cash more than 10000 given to party functionaries and candidates agents for political activities shall be done through cheque or online mode. ECI also advised political parties not to carry huge cash.
— Chief Electoral Officer, Karnataka (@ceo_karnataka) April 21, 2024
ಐಟಿ ಅಧಿಕಾರಿಗಳು ಸೂಪರ್ ಸ್ಪೀಡ್ ನಲ್ಲಿ ಕೆಲಸ ಮಾಡಿದ್ದಾರೆ. 6-7 ಗಂಟೆಯಲ್ಲಿ ಘಟನೆ ನಡೆಯುತ್ತೆ, ರಾತ್ರಿ 10 ಗಂಟೆಗೆ ಆ ಹಣ ಪರಿಶೀಲನೆ ಮಾಡಿದ್ದೇವೆ, ಆ ಹಣ ವಾಪಸ್ ಕೊಡಿ ಎಂದು ಐಟಿ ಆರ್ಡರ್ ಮಾಡುತ್ತೆ. 2 ಕೋಟಿ ನಗದು ವರ್ಗಾವಣೆ ಆಗ್ತಿದೆ, ಚುನಾವಣಾ ನೀತಿ ಸಂಹಿತೆ ಕೂಡ ಇದೆ. ಆದರೆ ಎರಡ್ಮೂರು ಗಂಟೆಯಲ್ಲೇ ಕ್ಲೀನ್ ಚಿಟ್ ಕೊಡುತ್ತಾರೆ. ಇದು ಪ್ರಜಾಪ್ರಭುತ್ವಕ್ಕೆ ಸರ್ಜಿಕಲ್ ಸ್ಟ್ರೈಕ್, ಇದನ್ನ ಪ್ರಜಾಪ್ರಭುತ್ವ ಅಂತಾ ಕರಿಬೇಕಾ? ಐಟಿ ನಡೆ, ಆರ್ಡರ್ ಬಗ್ಗೆ ತನಿಖೆ ಮಾಡಬೇಕು ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ಕಿಡಿಕಾರಿದ್ದಾರೆ.
Permission of court is obtained for booking FIR at 11 am, on 21.04.24, against Lokesh ambekallu, secretary,BJP state office,Venkatesh Prasad and Gangadhar by the SST of 168-Chamrajpet Assembly Constituency of the Bengaluru Central Parliamentary Constituency at Cottonpet.
— Chief Electoral Officer, Karnataka (@ceo_karnataka) April 21, 2024
ಧಾರವಾಡ: ದಾಸನಕೊಪ್ಪ ಸರ್ಕಲ್ ಬಳಿ ಇರುವ ಅರ್ನಾ ಅಪಾರ್ಟ್‌ಮೆಂಟ್‌ನಲ್ಲಿರುವ ಯು.ಬಿ.ಶೆಟ್ಟಿ ಅವರ ಅಕೌಂಟೆಂಟ್ ಬಸವರಾಜ ದತ್ತುನವರ ಅವರ ಮನೆಯಲ್ಲಿ ಜಪ್ತಿ ಮಾಡಲಾದ 18 ಕೋಟಿ ರೂ. ಹಣವನ್ನು ಐಟಿ (Income Tax) ಅಧಿಕಾರಿಗಳು ಹುಬ್ಬಳ್ಳಿಯ ಕೇಶ್ವಾಪುರದಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ (SBI) ರವಾನಿಸಿದ್ದಾರೆ.
ಮಂಗಳವಾರ ರಾತ್ರಿ ಚುನಾವಣಾ ವಿಚಕ್ಷಣಾ ದಳದ ಅಧಿಕಾರಿಗಳು ಬಸವರಾಜ ದತ್ತುನವರ ಅವರ ಮನೆಯಲ್ಲಿ ಮದ್ಯ (Liquor) ಶೇಖರಿಸಿ ಇಡಲಾಗಿದೆ ಎಂಬ ಶಂಕೆ ಮೇಲೆ ದಾಳಿ ನಡೆಸಿದ್ದರು. ದಾಳಿ ವೇಳೆ ಅವರ ಮನೆಯಲ್ಲಿ 18 ಕೋಟಿ ರೂ. ಬೃಹತ್ ಮೊತ್ತದ ಹಣ ಪತ್ತೆಯಾಗಿತ್ತು.ಕೂಡಲೇ ಈ ಪ್ರಕರಣವನ್ನು ಆದಾಯ ತೆರಿಗೆ ಇಲಾಖೆಗೆ ಹಸ್ತಾಂತರಿಸಲಾಗಿತ್ತು. ಇದನ್ನೂ ಓದಿ: ಜನತಂತ್ರದ ಹಬ್ಬ – ಚುನಾವಣಾ ಖರ್ಚು ವೆಚ್ಚ ಹೇಗೆ ನಡೆಯುತ್ತೆ? – ಈ ಬಾರಿ ಅಂದಾಜಿಸಿರುವ ವೆಚ್ಚ ಎಷ್ಟು?
20 ಜನ ಅಧಿಕಾರಿಗಳು ದತ್ತುನವರ ಮನೆಯಲ್ಲಿ ನಿನ್ನೆ ರಾತ್ರಿಯಿಡೀ ಕಾರ್ಯಾಚರಣೆ ನಡೆಸಿ ಮಶಿನ್ ಮುಖಾಂತರ ಹಣ ಎಣಿಕೆ ಮಾಡಿದ್ದಾರೆ. ಇಂದು ಮಧ್ಯಾಹ್ನದವರೆಗೂ ಅಧಿಕಾರಿಗಳು ತಪಾಸಣೆ ನಡೆಸಿ 18 ಕೋಟಿ ರೂ. ಹಣವನ್ನು 18 ಬ್ಯಾಗ್‌ಗಳಲ್ಲಿ ತುಂಬಿ ಪೊಲೀಸ್ ಭದ್ರತೆ ಮಧ್ಯೆ ಹುಬ್ಬಳ್ಳಿಯ ಕೇಶ್ವಾಪುರದಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಸಾಗಿಸಿದ್ದಾರೆ. ಇದನ್ನೂ ಓದಿ: ದಕ್ಷಿಣ ಭಾರತದ ಏವಿಯೇಷನ್ ಹಬ್ ಆಗುತ್ತಾ ಬೆಂಗ್ಳೂರು ಏರ್‌ಪೋರ್ಟ್?- ಏನಿದು ಏವಿಯೇಷನ್ ಹಬ್?
ಬಸವರಾಜ ದತ್ತುನವರ ತಾನು ಯು.ಬಿ.ಶೆಟ್ಟಿ ಅವರ ಅಕೌಂಟೆಂಟ್ ಎಂದು ಹೇಳಿಕೊಂಡಿದ್ದರಿಂದ ಐಟಿ ಅಧಿಕಾರಿಗಳು ಶೆಟ್ಟಿ ಅವರ ಕಚೇರಿ ಮೇಲೂ ದಾಳಿ ಮಾಡಿ ಪರಿಶೀಲನೆ ನಡೆಸಿದ್ದರು. ಬುಧವಾರ ಮಧ್ಯಾಹ್ನ 2 ಗಂಟೆವರೆಗೂ ಐಟಿ ಅಧಿಕಾರಿಗಳು ಪರಿಶೀಲನೆ ನಡೆಸಿ ಎರಡು ಪೊಲೀಸ್ ಎಸ್ಕಾರ್ಟ್ ವಾಹನದ ಸಮೇತ ಭದ್ರತೆಯೊಂದಿಗೆ 18 ಕೋಟಿ ಹಣವನ್ನು 18 ಬ್ಯಾಗ್‌ಗಳಲ್ಲಿ ತುಂಬಿಕೊಂಡು ಹುಬ್ಬಳ್ಳಿಯ ಕೇಶ್ವಾಪುರದಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ರವಾನಿಸಿದ್ದಾರೆ.
ನವದೆಹಲಿ: ಕಾಂಗ್ರೆಸ್ (Congress) ಪಕ್ಷಕ್ಕೆ ಕೇಂದ್ರ ಸರ್ಕಾರ ಬಿಗ್ ರಿಲೀಫ್ ನೀಡಿದೆ. ಲೋಕಸಭಾ ಚುನಾವಣೆ (Lok Sabha Election) ಮುಗಿಯುವರೆಗೂ ಬಾಕಿ ಉಳಿಸಿಕೊಂಡಿರುವ ಸುಮಾರು 3,500 ಕೋಟಿ ರೂ. ತೆರಿಗೆ ವಸೂಲಿ ಮಾಡಲು ಯಾವುದೇ ಕ್ರಮ ತೆಗೆದುಕೊಳ್ಳುವುದಿಲ್ಲ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ಗೆ (Supreme Court) ಭರವಸೆ ನೀಡಿದೆ.
ಈ ವೇಳೆ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಚುನಾವಣೆ ನಡೆಯುತ್ತಿರುವುದರಿಂದ ಮತ್ತು ಚುನಾವಣೆಯ ನಂತರದ ವಿಚಾರಣೆಯವರೆಗೆ ಬಾಕಿ ಉಳಿಸಿರುವ ತೆರಿಗೆ ವಸೂಲಿ ಮಾಡಲು ಯಾವುದೇ ಕ್ರಮ ತೆಗೆದುಕೊಳ್ಳುವುದಿಲ್ಲ. ದಯವಿಟ್ಟು ಜೂನ್ ಎರಡನೇ ವಾರದಲ್ಲಿ ಈ ವಿಚಾರವನ್ನು ಪಟ್ಟಿ ಮಾಡಿ ಎಂದು ಮನವಿ ಮಾಡಿದರು.
ಸರ್ಕಾರದ ಈ ಮನವಿಯನ್ನು ಕೇಳಿ ನ್ಯಾ. ನಾಗರತ್ನ ಅವರು, ನೀವು ಯಾರೊಬ್ಬರ ಬಗ್ಗೆ ಯಾವಾಗಲೂ ನಕಾರಾತ್ಮಕವಾಗಿ ಗ್ರಹಿಸಬಾರದು ಎಂದು ಕಾಂಗ್ರೆಸ್ ಪರ ಹಾಜರಾಗಿದ್ದ ವಕೀಲ ಅಭಿಷೇಕ್ ಮನು ಸಿಂಘ್ವಿ ಲಘುವಾಗಿ ಹೇಳಿದರು. ಇದಕ್ಕೆ ಸಿಂಘ್ವಿ, ನಾನು ಮೂಖನಾಗಿದ್ದೇನೆ. ಕೆಲವೇ ಬಾರಿ ನಾನು ಮೂಖನಾಗಿದ್ದೇನೆ ಎಂದು ಅಚ್ಚರಿ ವ್ಯಕ್ತಪಡಿಸಿದರು. ಇದನ್ನೂ ಓದಿ: ತಾಯಿ ಪ್ರಮೋದಾ ದೇವಿ ಮುಂದೆ ಬಿ ಫಾರಂ ಪಡೆದ ಯದುವೀರ್
ಕೇಂದ್ರ ಸರ್ಕಾರದ ಮನವಿಯನ್ನು ಪುರಸ್ಕರಿಸಿದ ಕೋರ್ಟ್ ಮುಂದಿನ ವಿಚಾರಣೆಯನ್ನು ಜುಲೈ ಎರಡನೇ ವಾರಕ್ಕೆ ಮುಂದೂಡಿತು.
ನವದೆಹಲಿ: 1,800 ಕೋಟಿ ರೂಪಾಯಿಗೂ ಹೆಚ್ಚು ತೆರಿಗೆ ನೋಟಿಸ್ ಸ್ವೀಕರಿಸಿದ ಒಂದು ದಿನದ ನಂತರ ಶುಕ್ರವಾರ ರಾತ್ರಿ ಆದಾಯ ತೆರಿಗೆ ಇಲಾಖೆಯಿಂದ (Income Tax Department) ಮತ್ತೆ ಎರಡು ನೋಟಿಸ್‌ಗಳು ಬಂದಿವೆ ಎಂದು ರಾಷ್ಟ್ರೀಯ ಕಾಂಗ್ರೆಸ್ (AICC) ಶನಿವಾರ ಹೇಳಿದೆ.
ಈ ಸಂಬಂಧ ಶನಿವಾರ (ಇಂದು) ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಹಿರಿಯ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ (Jairam Ramesh), ಶುಕ್ರವಾರ ರಾತ್ರಿ ನಮಗೆ ಮತ್ತೆರಡು ನೋಟಿಸ್ ಕಳುಹಿಸಲಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ನಮ್ಮ ಕುಟುಂಬ ಮೊಸಳೆ ಕಣ್ಣೀರು ಹಾಕಲ್ಲ: ನಿಖಿಲ್ ಕುಮಾರಸ್ವಾಮಿ
ಕಾಂಗ್ರೆಸ್ ಪಕ್ಷವು ʻತೆರಿಗೆ ಭಯೋತ್ಪಾದನೆʼಗೆ ಗುರಿಯಾಗಿದೆ ಎಂದು ರಮೇಶ್ ಪುನರುಚ್ಚರಿಸಿದರು. ಪ್ರಧಾನಿ ನರೇಂದ್ರ ಮೋದಿ ಅವರು ವಿರೋಧ ಪಕ್ಷಗಳನ್ನು ನಿಷ್ಕ್ರಿಯಗೊಳಿಸಲು ಬಯಸುತ್ತಿದ್ದಾರೆ ಎಂದು ಆರೋಪಿಸಿದರು. ಈ ನಡುವೆ ಕರ್ನಾಟಕದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಆದಾಯ ತೆರಿಗೆ ಇಲಾಖೆಯಿಂದ ನೋಟಿಸ್ ಪಡೆದಿದ್ದಾರೆ ಎಂದು ಹೇಳಿದರು.
ಕಳೆದ ಗುರುವಾರ ದೆಹಲಿ ಹೈಕೋರ್ಟ್ ತನ್ನ ವಿರುದ್ಧ ತೆರಿಗೆ ಅಧಿಕಾರಿಗಳು 4 ವರ್ಷಗಳ ಅವಧಿಗೆ ತೆರಿಗೆ ಮರುಮೌಲ್ಯಮಾಪನ ಪ್ರಕ್ರಿಯೆಗಳನ್ನು ಪ್ರಾರಂಭಿಸುವುದನ್ನು ಪ್ರಶ್ನಿಸಿ ಕಾಂಗ್ರೆಸ್ ಸಲ್ಲಿಸಿದ ಅರ್ಜಿಗಳನ್ನು ತಿರಸ್ಕರಿಸಿತ್ತು. ನ್ಯಾ. ಯಶವಂತ್ ವರ್ಮಾ ಮತ್ತು ಪುರುಷೇಂದ್ರ ಕುಮಾರ್ ಕೌರವ್ ಅವರ ಪೀಠವು ಮರುಮೌಲ್ಯಮಾಪನವನ್ನು ಇನ್ನೊಂದು ವರ್ಷದವರೆಗೆ ತೆರೆಯಲು ಮಧ್ಯಪ್ರವೇಶಿಸಲು ನಿರಾಕರಿಸಿತ್ತು.
ನವದೆಹಲಿ : ಜಾರಿ ನಿರ್ದೇಶನಾಲಯದ (Enforcement Directorate) ಇಕ್ಕಳದಲ್ಲಿ ಸಿಲುಕಿ ನಲುಗಿದ್ದ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಅವರಿಗೆ ಸುಪ್ರೀಂಕೋರ್ಟ್ (Supreme Court) ಬಿಗ್ ರಿಲೀಫ್ ನೀಡಿದೆ.
2018 ರಲ್ಲಿ ಡಿಕೆಶಿ ವಿರುದ್ಧ ದಾಖಲಿಸಿದ್ದ ಅಕ್ರಮ ಹಣ ವರ್ಗಾವಣೆ ಪ್ರಕರಣವನ್ನು ನ್ಯಾ. ಸೂರ್ಯ ಕಾಂತ್ ಮತ್ತು ಕೆವಿ ವಿಶ್ವನಾಥನ್ ಅವರಿದ್ದ ದ್ವಿಸದಸ್ಯ ಪೀಠ ಇಂದು ರದ್ದುಗೊಳಿಸಿದೆ. ಲೋಕಸಭೆ ಚುನಾವಣೆ ಹೊತ್ತಲ್ಲಿ ಸುಪ್ರೀಂ ಕೋರ್ಟ್‌ನ ಈ ಆದೇಶ ಡಿಕೆಶಿಗೆ ಸಿಕ್ಕಿದ ದೊಡ್ಡ ಗೆಲುವು ಎಂದೇ ವಿಶ್ಲೇಷಿಸಲಾಗುತ್ತಿದೆ.
ಆಗಸ್ಟ್ 2019 ರಲ್ಲಿ ಪ್ರಕರಣ ರದ್ದುಪಡಿಸಲು ಕರ್ನಾಟಕ ಹೈಕೋರ್ಟ್ (Karnataka High Court) ನಿರಾಕರಿಸಿದ್ದ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್‌ಗೆ ಡಿ.ಕೆ ಶಿವಕುಮಾರ್ ಮತ್ತು ಇತರೇ ಆರೋಪಿಗಳು ಅರ್ಜಿ ಸಲ್ಲಿಸಿದ್ದರು. ಪ್ರಕರಣ ಸುದೀರ್ಘ ವಿಚಾರಣೆ ನಡೆಸಿದ್ದ ಪೀಠ ಇಂದು ಮಹತ್ವದ ಆದೇಶ ನೀಡಿದೆ. ಇದನ್ನೂ ಓದಿ: ಮಮತಾ ಸವಾಲು ಸ್ವೀಕಾರ – ಕೋಲ್ಕತ್ತಾ ಹೈಕೋರ್ಟ್ ಜಡ್ಜ್ ರಾಜೀನಾಮೆ, ಮಾ.7 ರಂದು ಬಿಜೆಪಿ ಸೇರ್ಪಡೆ
ರದ್ದಾಗಿದ್ದು ಯಾಕೆ?
ಇಂದು ಡಿ.ಕೆ ಶಿವಕುಮಾರ್ ಪರ ಹಿರಿಯ ವಕೀಲ ಸಿದ್ಧಾರ್ಥ್ ಲೂತ್ರಾ, ಇತರ ಆರೋಪಿಗಳ ಪರ ಹಿರಿಯ ವಕೀಲ ಡಾ.ಅಭಿಷೇಕ್ ಮನು ಸಿಂಘ್ವಿ ಮತ್ತು ಎಸ್.ನಾಗಮುತ್ತು ವಾದ ಮಂಡಿಸಿದರು. ಐಪಿಸಿ ಸೆಕ್ಷನ್ 120 ಬಿ (ಕ್ರಿಮಿನಲ್ ಪಿತೂರಿ) ಪ್ರಕರಣ ಕೇವಲ ಶೆಡ್ಯೂಲ್ ಅಪರಾಧಗಳಲ್ಲಿ ಮಾತ್ರ ಬಳಕೆ ಮಾಡಲಾಗುತ್ತದೆ. ಡಿ. ಕೆ ಶಿವಕುಮಾರ್ ಅವರದ್ದು ಆದಾಯ ತೆರಿಗೆ (Income Tax) ಪ್ರಕರಣವಾಗಿದೆ. ಆದಾಯ ತೆರಿಗೆ ಪ್ರಕರಣದಲ್ಲಿ 120 ಬಿ ಬಳಕೆ ಸಾಧ್ಯವಿಲ್ಲ. 120 ಬಿ ಆಧರಿಸಿಯೇ ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆಯ (PMLA) ಅಡಿಯಲ್ಲಿ ಇಡಿ ಪ್ರಕರಣ ದಾಖಲಿಸಿದೆ. ಆದರೆ 120 ಬಿ ಏಕಾಂಗಿಯಾಗಿ ಬಳಕೆ ಮಾಡಲು ಸಾಧ್ಯವಿಲ್ಲ, ಯಾವುದಾದರೂ ಇತರೇ ಕ್ರಿಮಿನಲ್ ಪ್ರಕರಣಗಳಲ್ಲಿ ಪೂರಕವಾಗಿರುವ 120 ಬಿ ಬಳಕೆ ಮಾಡಬಹುದು. ಆದರೆ ಜಾರಿ ನಿರ್ದೇಶನಾಲಯ 120 ಬಿ ಆಧರಿಸಿಯೇ ಪ್ರಕರಣ ದಾಖಲಿಸಿ ವಿಚಾರಣೆ ನಡೆಸಿಕೊಂಡು ಬಂಧಿಸಿದೆ. ಇದು ಕಾನೂನು ಬಾಹಿರನಡೆ ಎಂದು ವಾದಿಸಿದರು. ವಾದ ಆಲಿಸಿದ ಕೋರ್ಟ್ ಡಿ.ಕೆ ಶಿವಕುಮಾರ್ ಮತ್ತು ಇತರೆ ಆರೋಪಿಗಳ ಅರ್ಜಿ ಮಾನ್ಯ ಮಾಡಿದ ಕೋರ್ಟ್ 120 ಬಿ ಅಡಿ ದಾಖಲಾಗಿದ್ದ ಪ್ರಕರಣವನ್ನೇ ರದ್ದು ಮಾಡಿತು.
120 ಬಿ ರದ್ದಾದ ಹಿನ್ನಲೆ ಡಿ.ಕೆ ಶಿವಕುಮಾರ್ ಮತ್ತು ಇತರೇ ಆರೋಪಿಗಳ ವಿರುದ್ಧ ಇಡಿ ದಾಖಲಿಸಿದ್ದ ಪ್ರಕರಣ ರದ್ದಾಂತಾಗಲಿದೆ. ಈ ನಡುವೆ ಡಿ.ಕೆ ಶಿವಕುಮಾರ್ ವಿರುದ್ಧ ಆದಾಯ ತೆರಿಗೆ ಕೇಸ್ ಮುಂದುವರಿಯಲಿದ್ದು ಈ ಬಗ್ಗೆ ಮಾಹಿತಿ ಸಲ್ಲಿಸಲು ಸುಪ್ರೀಂ ಕೋರ್ಟ್ ಆರು ವಾರಗಳ ಸಮಯ ನೀಡಿದೆ. ಇದನ್ನೂ ಓದಿ: ಭಾರತದ ಮೊದಲ ನೀರೊಳಗಿನ ಮೆಟ್ರೋ ಉದ್ಘಾಟನೆ – ನಾಳೆ ಪ್ರಧಾನಿ ಮೋದಿ ಚಾಲನೆ
ಏನಿದು ಪ್ರಕರಣ?
2017 ರಲ್ಲಿ ಡಿ.ಕೆ ಶಿವಕುಮಾರ್ ನಿವಾಸದ ಮೇಲೆ ಆದಾಯ ತೆರಿಗೆ ದಾಳಿ ನಡೆಸಿತು. ಅವರ ದೆಹಲಿಯ ನಿವಾಸದಲ್ಲಿ ಸುಮಾರು 7 ಕೋಟಿ ನಗದು ವಶಪಡಿಸಿಕೊಳ್ಳಲಾಗಿತ್ತು. ಐಟಿ ಮಾಹಿತಿ ಆಧರಿಸಿ ಪ್ರಕರಣ ದಾಖಲಿಸಿದ್ದ ಇಡಿ ಸುದೀರ್ಘ ವಿಚಾರಣೆಯ 2019ರ ಸೆಪ್ಟೆಂಬರ್‌ನಲ್ಲಿ ಇಡಿ ಬಂಧಿಸಿತ್ತು. 2019 ರ ಅಕ್ಟೋಬರ್‌ನಲ್ಲಿ ದೆಹಲಿ ಹೈಕೋರ್ಟ್ ಅವರಿಗೆ ಜಾಮೀನು ನೀಡಿತ್ತು. ನಂತರ ಅದನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿಯಿತು.
ತಮ್ಮ ಬಂಧನಕ್ಕೂ ಮುನ್ನ ಡಿ.ಕೆ ಶಿವಕುಮಾರ್ ಮತ್ತು ಇತರರು ತಮಗೆ ಜಾರಿ ಮಾಡಿರುವ ಇಡಿ ಸಮನ್ಸ್ ಪ್ರಶ್ನಿಸಿ ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಆಗಸ್ಟ್ 2019 ರಲ್ಲಿ ನ್ಯಾಯಮೂರ್ತಿ ಅರವಿಂದ್ ಕುಮಾರ್ ಅವರು ಈ ರಿಟ್ ಅರ್ಜಿಗಳನ್ನು ವಜಾಗೊಳಿಸಿದ್ದರು. ಈ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಅರ್ಜಿ ಸಲ್ಲಿಸಲಾಗಿತ್ತು.
ಗದಗ: ಕೇಂದ್ರ ಸರ್ಕಾರ ಅವರಪ್ಪನ ಮನೆ ಆಸ್ತಿನಾ? ಕರ್ನಾಟಕ ಜನರು ಕಟ್ಟಿದ ತೆರಿಗೆ ಹಣ ಅದು ಎಂದು ಸಿಎಂ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ (Yathindra Siddaramaiah), ಸಂಸದ ಅನಂತಕುಮಾರ್ ಹೆಗಡೆ ವಿರುದ್ಧ ಗುಡುಗಿದ್ದಾರೆ.
ʻಕೇಂದ್ರ ಸರ್ಕಾರದ ಹಣ ಅವರಪ್ಪನ ಮನೆ ಆಸ್ತೀನಾ?ʼ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ವಿರುದ್ಧ ವಾಗ್ದಾಳಿ ನಡೆಸಿದ್ದ ಸಂಸದ ಅನಂತಕುಮಾರ್ ಹೆಗಡೆ (AnanthKumar Hegde) ವಿರುದ್ಧ ಯತೀಂದ್ರ ಹರಿಹಾಯ್ದಿದ್ದಾರೆ. ಕರ್ನಾಟಕದ ಜನರು ಕಟ್ಟಿದ ತೆರಿಗೆ ಹಣ ಅದು, ಕೇಂದ್ರ ಸರ್ಕಾರ ಎಲ್ಲರಿಗೂ ನ್ಯಾಯವಾಗಿ ಹಂಚಿಕೆ ಮಾಡಲಿ ಅಂತ ಕೇಳ್ತಿದ್ದೇವೆ. ಹಿಂದುಳಿದ ರಾಜ್ಯಗಳಿಗೆ ಹೆಚ್ಚಿನ ಅನುದಾನ ಕೊಡಿ, ನಾವು ಬೇಡ ಅನ್ನೊದಿಲ್ಲ. ಆದ್ರೆ ನಮಗೆ ಅನ್ಯಾಯ ಆಗ್ತಿದೆ, ಅದನ್ನ ಸರಿಪಡಿಸಿಕೊಡಿ. ನಾವು 1 ರೂಪಾಯಿ ಕೊಟ್ರೆ, ನಮಗೆ 12 ಅಥವಾ 13 ಪೈಸೆ ಅಷ್ಟೇ ಬರ್ತಿದೆ, 25 ಪೈಸೆಯನ್ನಾದ್ರೂ ಕೊಡಿ ಅಂತ ಕೇಳ್ತಿದ್ದೇವೆ ಅಂತ ಹೇಳಿದ್ದಾರೆ.
ಅಲ್ಲದೇ ಹಿಂದೂ ದೇವಾಲಯಗಳ ಹಣ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಅಂತಾ ಸುಳ್ಳು ಆರೋಪ ಮಾಡ್ತಿದ್ದಾರೆ. ಅದು ಫೇಕ್ ನ್ಯೂಸ್ ಅಂತ ಸರ್ಕಾರ ಸ್ಪಷ್ಟೀಕರಣ ಕೊಟ್ಟಿದೆ. ಸಚಿವ ರಾಮಲಿಂಗಾರೆಡ್ಡಿ ಅವರು ಫೇಸ್ಬುಕ್, ಎಕ್ಸ್ ಖಾತೆಗಳಲ್ಲಿ ಈ ಬಗ್ಗೆ ಸಂದೇಶ ಹಂಚಿಕೊಂಡಿದ್ದಾರೆ. ದೇವಾಲಯಗಳ ಹಣ ದೇವಾಲಯಗಳಿಗೇ ಉಪಯೋಗಿಸುತ್ತೇವೆ. ಬೇರೆ ಯಾವ ಸಂಸ್ಥೆಗೆ ಉಪಯೋಗಿಸುವುದಿಲ್ಲ ಅಂತ ಸ್ಪಷ್ಟೀಕರಣ ಕೊಟ್ಟಿದ್ದಾರೆ. ಆದ್ರೂ ಬಿಜೆಪಿಯವರು ಸುಳ್ಳು ಸುದ್ದಿ ಹರಡುತ್ತಿದ್ದಾರೆ. ಅಂತಹವರ ವಿರುದ್ಧ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಅಂತ ಆಗ್ರಹಿಸಿದ್ದಾರೆ. ಇದನ್ನೂ ಓದಿ: ಇತರರ ಗ್ಯಾರಂಟಿಗಳು ಎಲ್ಲಿ ಕೊನೆಗೊಳ್ಳುತ್ತೆ, ಅಲ್ಲಿಂದ ಮೋದಿ ಗ್ಯಾರಂಟಿ ಆರಂಭವಾಗುತ್ತೆ: ಪ್ರಧಾನಿ ಅಭಯ
ವಿಧಾನ ಪರಿಷತ್ ನಲ್ಲಿ ಬಹುಮತ ಇರಲಿಲ್ಲ. ಹಾಗಾಗಿ ಧಾರ್ಮಿಕ ತಿದ್ದುಪಡಿ ಮಸೂದೆ ಅಂಗೀಕಾರ ಆಗಲಿಲ್ಲ. ಸಿ-ದರ್ಜೆ ದೇವಾಲಯಗಳಿಗೆ ಹೆಚ್ಚಿನ ಹಣ ಬರಬೇಕು. ಯಾವ ದೇವಸ್ಥಾನದಲ್ಲಿ ಆದಾಯ ಹೆಚ್ಚಿರುತ್ತೋ ಆ ದೇವಾಲಯಗಳ ಹಣ ಸಿ-ದರ್ಜೆಯ ದೇವಾಲಯಗಳಿಗೆ ಬಳಕೆ ಮಾಡಬೇಕು ಎಂಬುದು ಸರ್ಕಾರದ ಉದ್ದೇಶವಾಗಿತ್ತು. ತಮ್ಮ ರಾಜಕೀಯಕ್ಕೋಸ್ಕರ ನಿಜವಾಗಿಯೂ ಹಿಂದೂಗಳಿಗೆ ನೋವುಂಟು ಮಾಡ್ತಿರೋದು ಬಿಜೆಪಿ ಎಂದು ಕಿಡಿ ಕಾರಿದ್ದಾರೆ. ಇದನ್ನೂ ಓದಿ: ಈಗ ನಡೆಯುವುದು ಗ್ಯಾರಂಟಿ ಬೇಕಾ? ಬೇಡವಾ? ಎನ್ನುವ ಚುನಾವಣೆ: ಹೆಚ್.ಸಿ.ಬಾಲಕೃಷ್ಣ
ಇನ್ನೂ ಮೈಸೂರು ಲೋಕಸಭಾ ಕ್ಷೇತ್ರದಿಂದ ಟಿಕೆಟ್ ಸಿಗುತ್ತಾ ಅನ್ನೋ ಪ್ರಶ್ನೆಗೆ ಪ್ರತಿಕ್ರಿಯಿಸಿ, ನಾನು ಮೈಸೂರು ಕ್ಷೇತ್ರದಿಂದ ಟಿಕೆಟ್ ಕೊಡಿ ಅಂತ ಕೇಳಿಕೊಂಡಿಲ್ಲ. ಲೋಕಸಭಾ ಆಕಾಂಕ್ಷಿ ನಾನಲ್ಲ, ಮೈಸೂರಿಗೆ ಯಾರು ಸೂಕ್ತ ಅಭ್ಯರ್ಥಿ ಅಂತ ಹೈಕಮಾಂಡ್ ತೀರ್ಮಾನ ಮಾಡುತ್ತೆ ಎಂದು ಹೇಳಿದ್ದಾರೆ.
– ರಾಜ್ಯ ಸರ್ಕಾರವನ್ನ ಭಿಕ್ಷುಕರ ಸರ್ಕಾರವನ್ನಾಗಿ ಮಾಡೋಕೆ ಹೊರಟಿದ್ದೀರಾ? – ಹೆಚ್‌ಡಿಕೆ ಪ್ರಶ್ನೆ
ಬೆಂಗಳೂರು: ವಿಧಾನಪರಿಷತ್ ನಲ್ಲಿ ಅಮ್ಮಾ.. ತಾಯಿ.. 6 ಸಾವಿರ ಕೋಟಿ ಕೊಡು ತಾಯಿ ಅಂತ ಬೇಡ್ತಾ ಸಿಎಂ ಪ್ರಸ್ತಾಪ ಮಾಡಿದ್ದಾರೆ. ರಾಜ್ಯದ ಗೌರವ ಎಲ್ಲಿಗೆ ತೆಗೆದುಕೊಂಡು ಹೋಗ್ತಿದ್ದಾರೆ? ಈ ರಾಜ್ಯದ ಸರ್ಕಾರವನ್ನ ಭಿಕ್ಷುಕರ ಸರ್ಕಾರವನ್ನಾಗಿ ಮಾಡಲು ಹೊರಟಿದ್ದೀರಾ? ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ (HD Kumaraswamy), ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದರು.
ರಾಜ್ಯದ ಮುಖ್ಯಮಂತ್ರಿ (Chief Minister) ಅಮ್ಮಾ.. ತಾಯಿ.. ಅಂತಾ ದಯನೀಯ ಸ್ಥಿತಿಯಲ್ಲಿ ಬೇಡುವ ಸನ್ನಿವೇಶ ಉದ್ಭವವಾಗಿದೆ. ಏತಕ್ಕಾಗಿ ಇಂತಹ ಪರಿಸ್ಥಿತಿಯನ್ನ ತಂದುಕೊಂಡಿದ್ದೀರಾ? ಈ ರಾಜ್ಯದ ಸರ್ಕಾರವನ್ನ ಭಿಕ್ಷುಕರ ಸರ್ಕಾರವನ್ನಾಗಿ ಮಾಡಲು ಹೊರಟಿದ್ದೀರಾ? ಅಂತ ಪ್ರಶ್ನೆ ಮಾಡಿದರು. ಕೇಂದ್ರ ಸರ್ಕಾರದ ವಿರುದ್ಧ ಬಿಲ್ ಬೇರೆ ಪಾಸ್ ಮಾಡಿದ್ದೀರಿ, ನಾಚಿಕೆ ಆಗಬೇಕು ನಿಮಗೆ ಅಂತಾ ವಾಗ್ದಾಳಿ ನಡೆಸಿದರು.
ಕರ್ನಾಟಕ ಸಂಪತ್ ಭರಿತ ರಾಜ್ಯ. ಹಣದ ಕೊರತೆಯಿಲ್ಲ, ರಸ್ತೆ ತೆರಿಗೆ ಆದಾಯ ವಿಚಾರದಲ್ಲಿ ಕರ್ನಾಟಕ ದೇಶದಲ್ಲೇ ನಂ.1 ಸ್ಥಾನದಲ್ಲಿದೆ. ಸ್ವಂತ ಟ್ಯಾಕ್ಸ್ ಕಲೆಕ್ಟ್ ಮಾಡೋದ್ರಲ್ಲಿ ಮೊದಲನೆ ಸ್ಥಾನದಲ್ಲಿದ್ದೇವೆ, ಹಣದ ಕೊರತೆಯಿಲ್ಲ. ಆದ್ರೆ ನಿಮ್ಮ ಲೂಟಿಯ ದಾಹಕ್ಕೆ ರಾಜ್ಯದ ಖಜಾನೆ ಖಾಲಿ ಮಾಡ್ತಿದ್ದೀರಾ? ಕೇಂದ್ರ ಸರ್ಕಾರದ ಮುಂದೆ ಪದೇ ಪದೇ ಕೆದಕಿಕೊಂಡು ಹೋಗ್ತಾ ಇದ್ದೀರಿ. ಇದು ರಾಜ್ಯದ ಜನತೆಗೆ ಅವಮಾನ. ಇದು ಸಿಎಂಗೆ ಶೋಭೆ ತರುವಂತದಲ್ಲ ಅಂತಾ ಮಾಜಿ ಸಿಎಂ ಹೆಚ್‌ಡಿಕೆ ಆಕ್ರೋಶ ಹೊರಹಾಕಿದರು. ಇದನ್ನೂ ಓದಿ: ಸಂಚಾರ ನಿಯಮ ಉಲ್ಲಂಘನೆ; 50,000 ರೂ.ಗಿಂತ ಹೆಚ್ಚಿದ್ದ ದಂಡ ವಸೂಲಿ ಮಾಡಿದ ಪೊಲೀಸರು
ಬೆಂಗಳೂರು: ಸರ್ಕಾರಕ್ಕೆ ತೆರಿಗೆ (Tax) ವಂಚಿಸಿದ ಆರೋಪದ ಹಿನ್ನೆಲೆಯಲ್ಲಿ ಖಾಸಗಿ ಕಂಪನಿಗಳಿಗೆ ಆದಾಯ ತೆರಿಗೆ ಇಲಾಖೆ ಬಿಸಿ ಮುಟ್ಟಿಸಿದೆ. ಎಸ್.ಜೆ ಪಾರ್ಕ್, ಜಯನಗರ ಸೇರಿದಂತೆ 8 ಕಡೆಗಳಲ್ಲಿ ಖಾಸಗಿ ಕಂಪನಿಗಳ ಮೇಲೆ ಇಲಾಖೆ ದಾಳಿ (IT Raid) ನಡೆಸಿದೆ.
ಇದರೊಂದಿಗೆ ರಸ್ತೆ ಗುತ್ತಿಗೆದಾರ ಹಾಗೂ ಉದ್ಯಮಿಯೂ ಆಗಿರುವ ವಂಶಿ ಮನೆ ಮೇಲೆಯೂ ದಾಳಿ ನಡೆಸಿದ್ದಾರೆ. ವಂಶಿ ಪತ್ನಿ ವೈದ್ಯೆಯಾಗಿದ್ದು, ಕುಟುಂಬ ಜಯನಗರದಲ್ಲಿ ನೆಲೆಸಿದೆ. ವಂಶಿ ಅವರು ಗುತ್ತಿಗೆ ಕಾಮಗಾರಿಗಳಲ್ಲಿ ತೆರಿಗೆ ವಂಚಿಸಿರುವ ಆರೋಪ ಕೇಳಿಬಂದಿದ್ದು, ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ಐಟಿ ಅಧಿಕಾರಿ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಯಾವುದೇ ಧರ್ಮದವರಿಗೂ 2ನೇ ಮದುವೆ ಅವಕಾಶವಿಲ್ಲ, ಲಿವ್ ಇನ್ ಸಂಬಂಧಕ್ಕೆ ನೋಂದಣಿ ಕಡ್ಡಾಯ – UCC ಮಸೂದೆಯಲ್ಲಿ ಏನಿದೆ?