Tag: ಆದಿವಾಸಿಗಳು

  • ಮಣಿಪುರದಲ್ಲಿ ಭಯೋತ್ಪಾದಕರಿಂದ ಗುಂಡಿನ ದಾಳಿ – ಮೂವರು ಆದಿವಾಸಿಗಳ ಹತ್ಯೆ

    ಮಣಿಪುರದಲ್ಲಿ ಭಯೋತ್ಪಾದಕರಿಂದ ಗುಂಡಿನ ದಾಳಿ – ಮೂವರು ಆದಿವಾಸಿಗಳ ಹತ್ಯೆ

    ಇಂಫಾಲ: ಮಣಿಪುರದಲ್ಲಿ (Manipur) ಮತ್ತೆ ಹಿಂಸಾಚಾರ ಭುಗಿಲೆದ್ದಿದ್ದು, ಕಾಂಗ್‌ಪೋಕಿ (Kangpopki) ಜಿಲ್ಲೆಯಲ್ಲಿ ನಿಷೇಧಿತ ಭಯೋತ್ಪಾದಕ ಗುಂಪುಗಳು (Banned Terror Groups)  ಮಂಗಳವಾರ ಬೆಳಗ್ಗೆ ಕುಕಿ-ಜೋ ಸಮುದಾಯಕ್ಕೆ ಸೇರಿದ ಮೂವರು ಆದಿವಾಸಿಗಳನ್ನು (Tribals) ಗುಂಡಿಕ್ಕಿ ಕೊಂದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ನಿಷೇಧಿತ ಭಯೋತ್ಪಾದಕರು ಇಂಫಾಲ ಮತ್ತು ಕಾಂಗ್‌ಪೋಕಿ ಜಿಲ್ಲೆಗಳ ಗಡಿಭಾಗದಲ್ಲಿರುವ ಇರೆಂಗ್ ಮತ್ತು ಕರಮ್ ಪ್ರದೇಶಗಳ ಗ್ರಾಮಸ್ಥರ ಮೇಲೆ ದಾಳಿ (Attack) ನಡೆಸಿ ಮೂವರನ್ನು ಹತ್ಯೆಗೈದಿದ್ದಾರೆ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ಮುಂಬೈ-ಗುವಾಹಟಿ ವಿಮಾನದಲ್ಲಿ ಅನುಚಿತವಾಗಿ ವರ್ತಿಸಿದ ಪ್ರಯಾಣಿಕ ಅರೆಸ್ಟ್

    ಈ ಗ್ರಾಮವು ಬೆಟ್ಟದ ತುದಿಯಲ್ಲಿದ್ದು, ಬುಡಕಟ್ಟು ಜನರ ಪ್ರಾಬಲ್ಯವನ್ನು ಹೊಂದಿದೆ. ಮಣಿಪುರದಲ್ಲಿ ಮೈತೇಯಿ ಸಮುದಾಯ ಮತ್ತು ಬುಡಕಟ್ಟು ಸಮುದಾಯಗಳ ಮಧ್ಯೆ ಆಗಾಗ ಘರ್ಷಣೆ ನಡೆಯುತ್ತಿದ್ದು, ಇದುವರೆಗೆ 160ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಸೆಪ್ಟೆಂಬರ್ 8ರಂದು ತೆಂಗ್ನೌಪಾಲ್  ಜಿಲ್ಲೆಯ ಪಲ್ಲೆಲ್‌ನಲ್ಲಿ ನಡೆದ ಹಿಂಸಾಚಾರದಲ್ಲಿ ಮೂವರು ಸಾವನ್ನಪ್ಪಿದ್ದು, 50ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. ಇದನ್ನೂ ಓದಿ: ಪತಿಯಿಂದ್ಲೇ ಸುಪ್ರೀಂಕೋರ್ಟ್ ವಕೀಲೆಯ ಬರ್ಬರ ಹತ್ಯೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಗೋಹತ್ಯೆ ಮಾಡಿದ್ದೀರೆಂದು ಮನೆಗೆ ನುಗ್ಗಿ ಇಬ್ಬರು ಆದಿವಾಸಿಗಳ ಮೇಲೆ ಹಲ್ಲೆ ನಡೆಸಿ ಕೊಲೆ

    ಗೋಹತ್ಯೆ ಮಾಡಿದ್ದೀರೆಂದು ಮನೆಗೆ ನುಗ್ಗಿ ಇಬ್ಬರು ಆದಿವಾಸಿಗಳ ಮೇಲೆ ಹಲ್ಲೆ ನಡೆಸಿ ಕೊಲೆ

    ಭೋಪಾಲ್: ಗೋಹತ್ಯೆ ಮಾಡಿದ್ದಾರೆಂದು ಆರೋಪಿಸಿ ಆದಿವಾಸಿಗಳ ಮನೆಗೆ ನುಗ್ಗಿ ಗುಂಪೊಂದು ಇಬ್ಬರು ಆದಿವಾಸಿಗಳ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಹತ್ಯೆ ಮಾಡಿರುವ ಘಟನೆ ಮಧ್ಯಪ್ರದೇಶದ ಸಿಯೋನಿ ಜಿಲ್ಲೆಯಲ್ಲಿ ನಡೆದಿದೆ.

    20 ಮಂದಿಯಿರುವ ಗುಂಪೊಂದು ಆದಿವಾಸಿಗಳ ಮನೆಗೆ ನುಗ್ಗಿದೆ. ನೀವು ಗೋಹತ್ಯೆ ಮಾಡಿದ್ದೀರಿ ಎಂದು ಆರೋಪಿಸಿ ಏಕಾಏಕಿ ಆದಿವಾಸಿಗಳ ಮೇಲೆ ದಾಳಿ ನಡೆಸಿದೆ. ಮಾರಣಾಂತಿಕ ಹಲ್ಲೆಗೆ ಒಳಗಾದ ಇಬ್ಬರನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಸಾವಿಗೀಡಾಗಿದ್ದಾರೆ. ಮತ್ತೊಬ್ಬ ಗಂಭೀರ ಗಾಯಗೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಪೊಲೀಸ್ ಠಾಣೆಯಲ್ಲೇ ಅರೆನಗ್ನವಾಗಿ ಓಡಾಡಿದ ಹೆಡ್‍ಕಾನ್‍ಸ್ಟೇಬಲ್

    ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಕಾಂಗ್ರೆಸ್ ಶಾಸಕ ಅರ್ಜುನ್ ಸಿಂಗ್ ಕಕೋಡಿಯಾ ಅವರು ಜಬಲ್‌ಪುರ-ನಾಗ್ಪುರ ಹೆದ್ದಾರಿಯಲ್ಲಿ ಪ್ರತಿಭಟನೆ ನಡೆಸಿದರು. ಈ ವೇಳೆ ಸಿಯೋನಿ ಪೊಲೀಸರು ಆದಿವಾಸಿಗಳ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

    ಕೊಲೆ ಪ್ರಕರಣ ದಾಖಲಾಗಿದೆ. ಪೊಲೀಸ್ ತಂಡಗಳು ಆರೋಪಿಗಳಿಗಾಗಿ ಶೋಧ ನಡೆಸುತ್ತಿವೆ. ಆರೋಪಿಗಳಲ್ಲಿ ಕೆಲವರ ಹೆಸರು (ದೂರಿನಲ್ಲಿ) ಮತ್ತು ಇನ್ನೂ ಕೆಲವರು ಗುರುತು ಪತ್ತೆಯಾಗಿಲ್ಲ. ಎರಡು-ಮೂರು ಶಂಕಿತರನ್ನು ವಶಕ್ಕೆ ತೆಗೆದುಕೊಂಡಿದ್ದೇವೆ. ಸುಮಾರು 12 ಕೆಜಿ ಮಾಂಸ ಸಂತ್ರಸ್ತರ ಮನೆಯಲ್ಲಿ ಪತ್ತೆಯಾಗಿದೆ ಎಂದು ಎಸ್‌ಪಿ ಮಾರವಿ ತಿಳಿಸಿದ್ದಾರೆ. ಇದನ್ನೂ ಓದಿ: ರಾಹುಲ್‌ ಮದುವೆಯಲ್ಲಿ ಭಾಗವಹಿಸಿದ್ರೆ ಸಂಘಿಗಳಿಗೆ ಭಯ ಯಾಕೆ: ಕಾಂಗ್ರೆಸ್‌ ಪ್ರಶ್ನೆ

    ಈ ಘಟನೆಯ ಕುರಿತು ಉನ್ನತ ಮಟ್ಟದ ತನಿಖೆಗೆ ಸೂಚಿಸುವ ಮೂಲಕ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ನಾನು ಸರ್ಕಾರವನ್ನು ಒತ್ತಾಯಿಸುತ್ತೇನೆ. ಸಂತ್ರಸ್ತರ ಕುಟುಂಬಗಳಿಗೆ ನೆರವು ನೀಡಬೇಕು. ಗಾಯಗೊಂಡಿರುವ ವ್ಯಕ್ತಿಗೆ ಸರ್ಕಾರ ಚಿಕಿತ್ಸೆ ವೆಚ್ಚ ಭರಿಸಬೇಕು ಎಂದು ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಕಮಲ್‌ ನಾಥ್‌ ಒತ್ತಾಯಿಸಿದ್ದಾರೆ.

  • ಬೇಡಿಕೆ ಈಡೇರಿಸುವಂತೆ ಪ್ರತಿಭಟಿಸಿದ 100ಕ್ಕೂ ಹೆಚ್ಚು ಆದಿವಾಸಿಗಳು ಪೊಲೀಸರ ವಶಕ್ಕೆ

    ಬೇಡಿಕೆ ಈಡೇರಿಸುವಂತೆ ಪ್ರತಿಭಟಿಸಿದ 100ಕ್ಕೂ ಹೆಚ್ಚು ಆದಿವಾಸಿಗಳು ಪೊಲೀಸರ ವಶಕ್ಕೆ

    ಮುಂಬೈ: ಆದಿವಾಸಿಗಳು ತಮ್ಮ ಹಕ್ಕುಗಳಿಗಾಗಿ ಬೇಡಿಕೆ ಇಟ್ಟಿದಕ್ಕೆ 100ಕ್ಕೂ ಹೆಚ್ಚು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿರುವ ಘಟನೆ ಥಾಣೆಯಲ್ಲಿ ನಡೆದಿದೆ.

    ಥಾಣೆಯ ಆದಿವಾಸಿಗಳು ನಿನ್ನೆ ಉಪವಿಭಾಗಾಧಿಕಾರಿಗಳ ಆವರಣದಲ್ಲಿ ಅರಣ್ಯ ಹಕ್ಕುಗಳು, ಜಾತಿ ಪ್ರಮಾಣ ಪತ್ರಗಳು ಮತ್ತು ಇತರ ಸೌಕರ್ಯಗಳಿಗೆ ಒತ್ತಾಯಿಸಿ ಪ್ರತಿಭಟನೆಯನ್ನು ಮಾಡುತ್ತಿದ್ದರು. ಈ ಸಂಬಂಧ 100ಕ್ಕೂ ಹೆಚ್ಚು ಆದಿವಾಸಿಗಳನ್ನು ಥಾಣೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

    ವಶಕ್ಕೆ ಪಡೆದುಕೊಂಡ ಆದಿವಾಸಿಗಳನ್ನು ಪೊಲೀಸರು ನಂತರ ಬಿಡುಗಡೆ ಮಾಡಿದ್ದಾರೆ. ಆದರೆ ಎನ್‍ಜಿಒ ಅಡಿಯಲ್ಲಿ ಆದಿವಾಸಿಗಳ ನಿಯೋಗವು ತಮ್ಮ ಬೇಡಿಕೆಗಳನ್ನು ಒಳಗೊಂಡ ಜ್ಞಾಪಕ ಪತ್ರವನ್ನು ಉಪವಿಭಾಗಾಧಿಕಾರಿ ಅವಿನಾಶ್ ಶಿಂಧೆ ಅವರನ್ನು ಭೇಟಿ ಮಾಡಿ ಸಲ್ಲಿಸಿತ್ತು. ಇದನ್ನೂ ಓದಿ:  ಸೋಶಿಯಲ್ ಮೀಡಿಯಾದಲ್ಲಿ ನಿಂದಿಸಿದ್ದಕ್ಕೆ ಯುವಕನ ಅಪಹರಿಸಿ ಕೊಂದರು!

    ಈ ಪತ್ರದಲ್ಲಿ ಬಾಕಿ ಉಳಿದಿರುವ 1,200 ಅರಣ್ಯ ಹಕ್ಕುಗಳ ಅರ್ಜಿಗಳನ್ನು ಪರಿಶೀಲಿಸುವಂತೆ ಮನವಿ ಮಾಡಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

  • ಆದಿವಾಸಿಗಳ ದುಸ್ಥಿತಿಗೆ ಕಾಂಗ್ರೆಸ್ ಕಾರಣ: ಮೋದಿ

    ಆದಿವಾಸಿಗಳ ದುಸ್ಥಿತಿಗೆ ಕಾಂಗ್ರೆಸ್ ಕಾರಣ: ಮೋದಿ

    ಭೋಪಾಲ್: ಆದಿವಾಸಿಗಳನ್ನು ಕಾಂಗ್ರೆಸ್ ಪಕ್ಷ ನಿರ್ಲಕ್ಷ ಮಾಡಿತ್ತು. ಅವರ ಇಂದಿನ ದುಸ್ಥಿತಿಗೆ ಕಾಂಗ್ರೆಸ್ ಕಾರಣ ಎಂದು ಪ್ರಧಾನಿ ನರೇಂದ್ರ ಮೋದಿ ದೂರಿದ್ದಾರೆ.

    PM MODI

    ಬುಡಕಟ್ಟು ಜನಾಂಗದ ಸ್ವಾತಂತ್ರ್ಯ ಯೋಧ ಬಿರ್ಸಾಮುಡಾ ಜನ್ಮ ದಿನೋತ್ಸವದಲ್ಲಿ ಗೌರವ ನಮನಸಲ್ಲಿಸಿದ ಮೋದಿ ಕಾಂಗ್ರೆಸ್ ಆಡಳಿತದಲ್ಲಿ ಸೌಲಭ್ಯ ಪಡೆಯಲು ಆದಿವಾಸಿಗಳು ದಶಕಗಳ ಕಾಲ ಕಾಯಬೇಕಿತ್ತು ಎಂದು ಆರೋಪ ಮಾಡಿದ್ದಾರೆ. ಇದನ್ನೂ ಓದಿ:  ಜಗತ್ತಿನಲ್ಲಿ ಮೊಟ್ಟ ಮೊದಲು ವಿಮಾನ ಹಾರಿಸಿದವನು ರಾವಣನೇ?- ಲಂಕಾ ಅಧ್ಯಯನ

    ಕಾಂಗ್ರೆಸ್ ಸರ್ಕಾರ ಬುಡಕಟ್ಟು ಜನರ 9ರಿಂದ 10 ಉತ್ಪನ್ನಗಳಿಗೆ ಮಾತ್ರ ಬೆಂಬಲ ಬೆಲೆ ನೀಡಿತ್ತು. ಆದರೆ ಬಿಜೆಪಿ ಸರ್ಕಾರ 90 ಉತ್ಪನ್ನಗಳಿಗೆ ಬೆಂಬಲ ಬೆಲೆ ನೀಡುತ್ತಿದೆ. ಆದಿವಾಸಿಗಳಿಗಾಗಿ 50 ಏಕಲವ್ಯ ಶಾಲೆಗಳ ಸ್ಥಾಪನೆಗೆ ಅವರು ಶಂಕುಸ್ಥಾಪನೆ ನೆರೆವೇರಿಸಿದರು. ಇದನ್ನೂ ಓದಿ:  ದಲಿತರೊಂದಿಗೆ ಚಹಾ ಸೇವಿಸಿ, ಬಿಜೆಪಿಗೆ ಮತ ಹಾಕುವಂತೆ ಮನವೊಲಿಸಿ: ಸ್ವತಂತ್ರ ದೇವ್

  • ಲಾಕ್‍ಡೌನ್ ಸಮಯದಲ್ಲಿ ಅದಿವಾಸಿಗಳು ಜಾಗ ಖಾಲಿ ಮಾಡುವಂತೆ ಪಿಡಿಓ ನೋಟಿಸ್

    ಲಾಕ್‍ಡೌನ್ ಸಮಯದಲ್ಲಿ ಅದಿವಾಸಿಗಳು ಜಾಗ ಖಾಲಿ ಮಾಡುವಂತೆ ಪಿಡಿಓ ನೋಟಿಸ್

    ಮಡಿಕೇರಿ: ಜಿಲ್ಲೆಯ ಗ್ರಾಮ ಒಂದರಲ್ಲಿ ಪೈಸಾರಿ ಜಾಗದಲ್ಲಿ ಗುಡಿಸಲು ನಿರ್ಮಾಣ ಮಾಡಿಕೊಂಡು ಬದುಕು ಸಾಗಿಸುತ್ತಿದ್ದ ಆದಿವಾಸಿಗಳಿಗೆ ಲಾಕ್‍ಡೌನ್ ಸಮಯದಲ್ಲಿ ಗ್ರಾಮ ಪಂಚಾಯತಿ ಪಿಡಿಓ ಆ ಜಾಗವನ್ನು ಖಾಲಿ ಮಾಡಿ ತೆರಳುವಂತೆ ನೋಟಿಸ್ ಹೊರಡಿಸಿದ್ದಾರೆ.

    ಕೊಡಗಿನ ಕಾಫಿ ತೋಟಗಳಲ್ಲಿ ಜೀತ ಪದ್ಧತಿಯಲ್ಲಿ ಕೆಲಸ ಮಾಡುತ್ತಿದ್ದ ಲೈನ್ ಮನೆಯ ಕೂಲಿ ಕಾರ್ಮಿಕರು ಸ್ವಾಭಿಮಾನವಾಗಿ ಬದುಕು ನಡೆಸಬೇಕು ಎಂದು ಸುಮಾರು 21 ಕುಟುಂಬಸ್ಥರು ಕಾಫಿ ತೋಟವನ್ನು ಬಿಟ್ಟು ಹೊರಗೆ ಬಂದು ಗ್ರಾಮ ಒಂದರಲ್ಲಿ ಪೈಸಾರಿ ಜಾಗದಲ್ಲಿ ಗುಡಿಸಲು ನಿರ್ಮಾಣ ಮಾಡಿಕೊಂಡು ಬದುಕು ಸಾಗಿಸುತ್ತಿದ್ದರು. ಆದರೆ ಇದೀಗ ಗ್ರಾಮ ಪಂಚಾಯತಿ ಪಿಡಿಓ ಆ ಜಾಗವನ್ನು ಖಾಲಿ ಮಾಡುವಂತೆ ನೋಟಿಸ್ ನೀಡಿದ್ದಾರೆ.

    ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಬಾಳುಗೋಡು ಗ್ರಾಮದಲ್ಲಿ ವಾಸವಾಗಿರುವ ಅದಿವಾಸಿಗಳಿಗೆ ಪಂಚಯತ್‍ನ ಪಿಡಿಓ ನೋಟಿಸ್ ನೀಡಿದ್ದಾರೆ. ರಾಜ್ಯದಲ್ಲಿ ಕೋವಿಡ್ ನಿಯಂತ್ರಣಕ್ಕೆ ಎಲ್ಲೆಡೆ ಕಫ್ರ್ಯೂ ಜಾರಿಯಾಗಿದ್ದರು ಕೂಡ ಇಲ್ಲಿ ಮಾತ್ರ 21 ಕುಟುಂಬಗಳನ್ನು ಮನೆಯಿಂದಲೇ ಹೊರ ಹಾಕಲು ನೋಟಿಸ್ ನೀಡಿದ್ದಾರೆ. ಲಾಕ್ ಡೌನ್ ಸಮಯವೇ ನೋಡಿಕೊಂಡು ಏಳು ದಿನಗಳ ಒಳಗಾಗಿ ಜಾಗ ಖಾಲಿ ಮಾಡಬೇಕು ಇಲ್ಲ ಕಾನೂನು ರೀತಿಯಲ್ಲಿ ಕ್ರಮ ಜರುಗಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಇದರಿಂದಾಗಿ ನಿರಾಶ್ರಿತರು ಕಂಗಾಲಾಗಿದ್ದಾರೆ.

    ಕಾಫಿ ತೋಟಗಳ ಲೈನ್ ಮನೆ ಬಿಟ್ಟು ಗುಡಿಸಲು ಹಾಕಿಕೊಂಡು ಹೇಗೋ ಜೀವನ ನಡೆಸುತ್ತಿದ್ದೇವು ಅದರೆ ಈಗ ಇದ್ದಕ್ಕಿದ್ದಂತೆ ಗುಡಿಸಲು ಖಾಲಿ ಮಾಡುವಂತೆ ನೋಟಿಸ್ ನೀಡಿದ್ದಾರೆ. ಲಾಕ್ ಡೌನ್ ಸಮಯದಲ್ಲಿ ಎಲ್ಲಿಗೆ ಹೋಗುವುದೆಂದು ಗೊತ್ತಾಗುತ್ತಿಲ್ಲ. ಒಕ್ಕಲೆಬ್ಬಿಸಿದರೆ ಮತ್ತೆ ನಮಗೆ ಜೀತವೇ ಗತಿ. ಇದರ ಬದಲು ಅಧಿಕಾರಿಗಳೇ ವಿಷಕೊಟ್ಟು ಸಾಯಿಸಲಿ ಎಂದು ಆದಿವಾಸಿಗಳು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

    ಕೊರೊನಾದಂತಹ ಕಷ್ಟದ ಪರಿಸ್ಥಿತಿಯಲ್ಲಿ ಸೌಲಭ್ಯ ಕಲ್ಪಿಸುವ ಬದಲು ಜಾಗ ಖಾಲಿ ಮಾಡುವಂತೆ ನೋಟಿಸ್ ನೀಡಲಾಗಿದ್ದು, ಕೋವಿಡ್ ನಿಯಮವನ್ನು ಉಲ್ಲಂಘನೆ ಮಾಡಿ. ನೋಟಿಸ್ ಜೊತೆಗೆ ನಿರ್ಗತಿಕರ ಸಭೆ ಕರೆದು ಗುಡಿಸಲು ತೆರವು ಮಾಡಲು ಪಿಡಿಓ ಸೂಚಿಸಿದ್ದಾರೆ. ನಾವು ಪಂಚಾಯತ್ ವ್ಯಾಪ್ತಿಯಲ್ಲಿ ಸ್ವಚ್ಚತೆ ಕಾಪಾಡಬೇಕು ಹೀಗಾಗಿ ನೀವಿರುವ ಜಾಗದಲ್ಲಿ ಕಸದ ಪ್ಲಾಂಟ್ ಸಿದ್ಧ ಮಾಡಲು ಜಾಗ ಖಾಲಿ ಮಾಡಿ ಎಂದು ಪಿಡಿಓ ಕಾರಣ ಕೊಟ್ಟಿದ್ದಾರೆ ಎಂದು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.

  • ಮನೆಗಾಗಿ ಬೆತ್ತಲೆ ಪ್ರತಿಭಟನೆ- ಸರ್ಕಾರ ಮನೆ ಕಟ್ಟಿಕೊಟ್ಟರೂ ಪ್ರವೇಶಿಸದ 49 ಆದಿವಾಸಿ ಕುಟುಂಬಗಳು

    ಮನೆಗಾಗಿ ಬೆತ್ತಲೆ ಪ್ರತಿಭಟನೆ- ಸರ್ಕಾರ ಮನೆ ಕಟ್ಟಿಕೊಟ್ಟರೂ ಪ್ರವೇಶಿಸದ 49 ಆದಿವಾಸಿ ಕುಟುಂಬಗಳು

    ಮಡಿಕೇರಿ: ನಮಗೂ ಒಂದು ಮನೆ ಬೇಕೆಂದು ಕೊಡಗಿನ ದಿಡ್ಡಳ್ಳಿಯ ಆದಿವಾಸಿಗಳು 2016 ರಲ್ಲಿ ರಾಷ್ಟ್ರದ ಗಮನಸೆಳೆಯುವಂತೆ ಬೆತ್ತಲೆ ಹೋರಾಟ ಮಾಡಿದ್ದು, ನಂತರ ಸರ್ಕಾರ ಮನೆ ನಿರ್ಮಿಸಿ ವಿತರಣೆ ಮಾಡಿದ್ದು ಗೊತ್ತೇ ಇದೆ. ಆದರೆ ಮನೆ ನಿರ್ಮಿಸಿ ಫಲಾನುಭವಿಗಳಿಗೆ ವಿತರಣೆ ಮಾಡಿದ್ದರೂ 49 ಕುಟುಂಬಗಳು ಹೊಸ ಮನೆಗಳಿಗೆ ಪ್ರವೇಶಿಸಿಲ್ಲ. ಹೀಗಾಗಿ ಐಟಿಡಿಪಿ ಇಲಾಖೆ ಈ 49 ಮನೆಗಳನ್ನು ಬೇರೆ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಿ, ಅವರಿಗೆ ವಿತರಣೆ ಮಾಡಲು ಮುಂದಾಗಿದೆ. ಆದರೆ ಜಿಲ್ಲಾಡಳಿತದ ಈ ನಿರ್ಧಾರಕ್ಕೆ ಆದಿವಾಸಿ ಬುಡಕಟ್ಟು ಜನಾಂಗದ ಮುಖಂಡರಿಂದ ತೀವ್ರ ವಿರೋಧ ವ್ಯಕ್ತವಾಗುತ್ತಿದೆ.

    2016 ರಲ್ಲಿ ವಿರಾಜಪೇಟೆ ತಾಲೂಕಿನ ದಿಡ್ಡಳ್ಳಿ ಹಾಡಿಯ 611 ಕುಟುಂಬಗಳನ್ನು ಅಲ್ಲಿಂದ ಒಕ್ಕಲೆಬ್ಬಿಸಲು ಸರ್ಕಾರ ಮುಂದಾಗಿತ್ತು. ಈ ವೇಳೆ ಶಾಶ್ವತ ಸೂರು ಒದಗಿಸದ ಹೊರತು ಅಲ್ಲಿಂದ ಮೇಲೇಳುವುದಿಲ್ಲ ಎಂದು ಬುಡಕಟ್ಟು ಜನರು ತಿಂಗಳುಗಟ್ಟಲೆ ಪ್ರತಿಭಟನೆ ಮಾಡಿದ್ದರು. ಅಷ್ಟೇ ಅಲ್ಲ ಬುಡಕಟ್ಟು ಜನಾಂಗದ ಮುತ್ತಮ್ಮ ಎಂಬುವರು ಮರವೇರಿ ಬೆತ್ತಲೆ ಹೋರಾಟ ನಡೆಸಿದ್ದರು. ಈ ವೇಳೆ 528 ಕುಟುಂಬಗಳ ದಾಖಲೆಗಳನ್ನು ಪಡೆದು, ಅಷ್ಟೂ ಕುಟುಂಬಗಳಿಗೆ ಕುಶಾಲನಗರ ಸಮೀಪದ ಬ್ಯಾಡಗೊಟ್ಟದಲ್ಲಿ 350 ಮತ್ತು ಬಸವನಹಳ್ಳಿಯಲ್ಲಿ 178 ಮನೆಗಳನ್ನು ನಿರ್ಮಿಸಲಾಗಿತ್ತು. ಆದರೆ 479 ಕುಟುಂಬಗಳು ಮಾತ್ರವೇ ಮನೆಗಳಿಗೆ ಬಂದಿದ್ದು, ಹಕ್ಕುಪತ್ರ ಪಡೆದು, ವಾಸಿಸುತ್ತಿವೆ. ಇನ್ನೂ 49 ಕುಟುಂಬಗಳು ಇಂದಿಗೂ ಹೊಸ ಮನೆಗಳಿಗೆ ಬಂದಿಲ್ಲ ಎನ್ನಲಾಗುತ್ತಿದೆ.

    ಈ 49 ಕುಟುಂಬಗಳು ಇಂದಿಗೂ ವಿವಿಧ ಎಸ್ಟೇಟ್‍ಗಳ ಲೈನ್ ಮನೆಗಳಲ್ಲಿ ವಾಸಿಸುತ್ತಿವೆ. ಮನೆಗಳಿಗೆ ಬರುವಂತೆ ಮೂರು ಬಾರಿ ನೋಟಿಸ್ ನೀಡಲಾಗಿದೆ. ಇನ್ನು ಹದಿನೈದು ದಿನಗಳಲ್ಲಿ ಮನೆಗಳಿಗೆ ಬಾರದಿದ್ದರೆ, ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಅರ್ಹ ಫಲಾನುಭವಿಗಳ ಆಯ್ಕೆ ಮಾಡಿ, ಅವರಿಗೆ ಮನೆಗಳನ್ನು ವಿತರಣೆ ಮಾಡುವುದಾಗಿ ಐಟಿಡಿಪಿ ಅಧಿಕಾರಿ ಶಿವಕುಮಾರ್ ತಿಳಿಸಿದ್ದಾರೆ.

    ಬುಡಕಟ್ಟು ಸಮುದಾಯದ ಮುಖಂಡರು ಮಾತ್ರ ಇದಕ್ಕೆ ವಿರೋಧ ವ್ಯಕ್ತಪಡಿಸುತ್ತಿದ್ದು, ಹೋರಾಟ ಮಾಡಿ ಮನೆಗಳನ್ನು ಪಡೆದಿದ್ದೇವೆ. 49 ಕುಟುಂಬಗಳು ತಮ್ಮ ದಾಖಲನೆಗಳನ್ನು ವಿರಾಜಪೇಟೆ ತಾಲೂಕಿನಿಂದ ಸೋಮವಾರಪೇಟೆ ತಾಲೂಕಿಗೆ ಬದಲಾವಣೆ ಮಾಡಿಕೊಂಡಿಲ್ಲ. ಜೊತೆಗೆ ಕಾಫಿ ತೋಟಗಳಲ್ಲಿ ಈಗ ಕೂಲಿ ಸಿಗುವುದರಿಂದ ಲೈನ್ ಮನೆಗಳಲ್ಲಿ ಇದ್ದಾರೆ. ಈಗಾಗಲೇ 49 ಕುಟುಂಬಗಳ ಸಂಬಂಧಿಕರೇ ಅವರ ಈ ಮನೆಗಳಲ್ಲಿ ಇದ್ದಾರೆ. ಹೀಗಾಗಿ ಬೇರೆಯವರಿಗೆ ಮನೆಗಳನ್ನು ವಿತರಣೆ ಮಾಡಲು ಬಿಡುವುದಿಲ್ಲ. ಹಾಗೇನಾದರೂ ಮಾಡಿದರೆ ಮತ್ತೆ ತೀವ್ರ ಹೋರಾಟ ನಡೆಸುತ್ತೇವೆ ಎನ್ನುತ್ತಿದ್ದಾರೆ.

  • ಆದಿವಾಸಿಗಳ ಶೆಡ್ ತೆರವುಗೊಳಿಸಿದ ಅರಣ್ಯ ಇಲಾಖೆ

    ಆದಿವಾಸಿಗಳ ಶೆಡ್ ತೆರವುಗೊಳಿಸಿದ ಅರಣ್ಯ ಇಲಾಖೆ

    -ಹಕ್ಕುಪತ್ರಗಳಿಗಾಗಿ ಹೋರಾಟ

    ರಾಮನಗರ: ಬನ್ನೇರುಘಟ್ಟ ರಾಷ್ಟ್ರೀಯ ಅರಣ್ಯ ವ್ಯಾಪ್ತಿಯಲ್ಲಿನ ಕನಕಪುರ ತಾಲೂಕಿನ ಬುಡಗಯ್ಯನದೊಡ್ಡಿ ಅರಣ್ಯ ಪ್ರದೇಶದಲ್ಲಿ ಆದಿವಾಸಿಗಳ ಶೆಡ್ ಗಳನ್ನು ತೆರವುಗೊಳಿಸಲಾಗಿದೆ.

    2006ರ ಅರಣ್ಯ ಕಾಯ್ದೆಯಡಿ ಕಳೆದ ಮೂರು ತಿಂಗಳಿನಿಂದ ಅರಣ್ಯದಲ್ಲಿ ಶೆಡ್ ಗಳನ್ನು ಹಾಕಿಕೊಂಡು ಪ್ರತಿಭಟನೆ ನಡೆಸುತ್ತಿದ್ದರು. ಆದಿವಾಸಿಗಳ 76 ಕ್ಕೂ ಹೆಚ್ಚು ಶೆಡ್ ಗಳನ್ನು ಅರಣ್ಯ ಇಲಾಖೆ ಸಿಬ್ಬಂದಿ ತೆರವುಗೊಳಿಸಿದ್ದಾರೆ. ಅರಣ್ಯ ಪ್ರದೇಶದಲ್ಲಿ ಬುಡುಗಯ್ಯನ ದೊಡ್ಡಿ ಗ್ರಾಮದ ಇರುಳಿಗ ಬುಡಕಟ್ಟು ಸಮುದಾಯದವರು ಕಳೆದ ಮೂರು ತಿಂಗಳಿನಿಂದ ಹಕ್ಕುಪತ್ರಗಳಿಗಾಗಿ ಹೋರಾಟ ನಡೆಸುತ್ತಿದ್ದರು.

    ಹಕ್ಕುಪತ್ರ ಸಿಗುವ ತನಕ ಅರಣ್ಯ ಬಿಟ್ಟು ಹೊರಬರವುದಿಲ್ಲವೆಂದು ಅರಣ್ಯದಲ್ಲಿಯೇ ಶೆಡ್ ಗಳನ್ನು ಕಟ್ಟಿಕೊಂಡು ವಾಸ ಮಾಡುತ್ತಿದ್ದರು. ಕೊರೊನಾ ವೈರಸ್ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಪ್ರತಿಭಟನೆ ಕೈ ಬಿಟ್ಟಿದ್ದ ಆದಿವಾಸಿಗಳು ಶೆಡ್ ಗಳಲ್ಲಿ ವಾಸವಾಗಿದ್ದರು. ಬುಧವಾರ ಬೆಳಗ್ಗೆ 100 ಜನ ಸಿಬ್ಬಂದಿ ಜೊತೆ ಹೋಗಿ ಶೆಡ್ ಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ತೆರವುಗೊಳಿಸಿದ್ದಾರೆ.

    ಕಳೆದ ಮೂರು ತಿಂಗಳಿನಿಂದ ಸುಮ್ಮನಿದ್ದ ಅರಣ್ಯ ಇಲಾಖೆ ಅಧಿಕಾರಿ ಏಕಾಏಕಿ ಅರಣ್ಯ ಇಲಾಖೆ ಅಧಿಕಾರಿಗಳು ಶೆಡ್ ಗಳನ್ನು ತೆರವುಗೊಳಿಸಿ, ಧ್ವಂಸಗೊಳಿಸಿರುವುದು ಇರುಳಿಗರ ಆಕ್ರೋಶಕ್ಕೆ ಕಾರಣವಾಗಿದೆ.

  • ನಿರಾಶ್ರಿತರನ್ನ ಒಕ್ಕಲೆಬ್ಬಿಸಲು ಜಿಲ್ಲಾಡಳಿತ ಪ್ಲಾನ್!- 11ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ

    ನಿರಾಶ್ರಿತರನ್ನ ಒಕ್ಕಲೆಬ್ಬಿಸಲು ಜಿಲ್ಲಾಡಳಿತ ಪ್ಲಾನ್!- 11ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ

    ಮಡಿಕೇರಿ: ನಿವೇಶನಕ್ಕೆ ಆಗ್ರಹಿಸಿ ನಿರಾಶ್ರಿತ ಆದಿವಾಸಿ, ದಲಿತ 55 ಕುಟುಂಬಗಳು ನಡೆಸುತ್ತಿರುವ ಆಹೋರಾತ್ರಿ ಧರಣಿ 11ನೇ ದಿನಕ್ಕೆ ಕಾಲಿಟ್ಟಿದೆ. ಕಳೆದ 10 ದಿನಗಳಿಂದ ಪ್ರತಿಭಟನೆ ನಡೆಯುತ್ತಿದ್ದರೂ ತಿರುಗಿಯೂ ನೋಡದ ಅಧಿಕಾರಿ ವರ್ಗ, ಇದೀಗ ಪ್ರತಿಭಟನಾ ಸ್ಥಳಕ್ಕೆ ಭೇಟಿಕೊಟ್ಟಿದ್ದು, ಪ್ರತಿಭಟನಾಕಾರರನ್ನು ಒಕ್ಕಲೆಬ್ಬಿಸಲು ಮುಂದಾಗಿದೆ. ಆದರೆ ಪ್ರತಿಭಟನಾಕಾರರು ನಿವೇಶನ ಸಿಗೋವರೆಗೆ ನಿರಂತರ ಧರಣಿ ನಡೆಸುವುದಾಗಿ ಪಟ್ಟುಹಿಡಿದು ಕುಳಿತಿದ್ದಾರೆ.

    ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನ ಬಾಳುಗೋಡಿನ ಪರಂಬು ಪೈಸಾರಿ ಜಾಗದಲ್ಲಿ ನಿವೇಶನ ರಹಿತ ಆದಿವಾಸಿ, ದಲಿತ ಹಾಗೂ ಇತರೆ ಹಿಂದುಳಿದ ಸಮುದಾಯದ 55 ಕುಟುಂಬಗಳು ನಡೆಸುತ್ತಿರುವ ಆಹೋರಾತ್ರಿ ಪ್ರತಿಭಟನೆ 11ನೇ ದಿನಕ್ಕೆ ಕಾಲಿಟ್ಟಿದೆ. ಕಡಕೊಲ್ಲಿಯ ಸರ್ವೇ ನಂಬರ್ 337/1 ರ ಸರ್ಕಾರಿ ಪೈಸಾರಿ ಜಾಗದಲ್ಲಿ ಪ್ರತಿಭಟನಾಕಾರರು ಹಾಕಿದ್ದ ಗುಡಿಸಲುಗಳನ್ನು ಜನವರಿ 5 ರಂದು ಕಂದಾಯ ಅಧಿಕಾರಿಗಳು ಕಿತ್ತೆಸೆದಿದ್ದರು. ಇದನ್ನು ಖಂಡಿಸಿ ಹಾಗೂ ನಿವೇಶನಕ್ಕಾಗಿ ಅಂದಿನಿಂದ ಪ್ರತಿಭಟನೆ ನಡೆಸುತ್ತಲೇ ಇದ್ದಾರೆ. ಸ್ಥಳದಲ್ಲಿಯೇ ಅಡುಗೆ ಮಾಡಿ ಪ್ರತಿಭಟನಾಕಾರರು ಹಸಿವು ನೀಗಿಸಿಕೊಳ್ಳುತ್ತಿದ್ದಾರೆ.

    ಇಂದು ಸ್ಥಳಕ್ಕೆ ಆಗಮಿಸಿದ ತಹಶೀಲ್ದಾರ್ ಮಹೇಶ್ ಪ್ರತಿಭಟನಾಕಾರರನ್ನು ಅಲ್ಲಿಂದಲೂ ಹೊರದಬ್ಬಲು ಪ್ಲಾನ್ ರೂಪಿಸಿದ್ದಾರೆ. ಪ್ರತಿಭಟನೆ ನಡೆಸುತ್ತಿರುವವರು ಬೇರೆ ಬೇರೆ ಪಂಚಾಯಿತಿ ವ್ಯಾಪ್ತಿಯವರಾಗಿದ್ದು, ಅವರು ಆಯಾ ಪಂಚಾಯಿತಿಗಳಲ್ಲೇ ಅರ್ಜಿ ಸಲ್ಲಿಸಲಿ. ಬಳಿಕ ಅವರಿಗೆ ಅಲ್ಲಿಯೇ ಅವರಿಗೆ ನಿವೇಶನ ಕೊಡಲಾಗುವುದು ಎನ್ನುತ್ತಿದ್ದಾರೆ. ಆದರೆ ನಿವೇಶನ ಸಿಗೋವರೆಗೆ ಇಲ್ಲಿಂದ ಕದಲೋದಿಲ್ಲ ಎಂದು ಪ್ರತಿಭಟನಾಕಾರರು ಪಟ್ಟುಹಿಡಿದು ಕುಳಿತಿದ್ದಾರೆ.

    ಗುಡಿಸಲುಗಳನ್ನು ಕಿತ್ತೆಸೆದಿದ್ದ ಜಾಗದಲ್ಲೇ ಪ್ರತಿಭಟನಾಕಾರರು ಮತ್ತೆ ಗುಡಿಸಲು ಕಟ್ಟಿ ಪ್ರತಿಭಟನೆ ನಡೆಸುತ್ತಿದ್ದಾರೆ. ಇಂದು ಸ್ಥಳಕ್ಕೆ ಬಂದಿದ್ದ ಅಧಿಕಾರಿಗಳು ಪ್ರತಿಭಟನೆ ನಡೆಸುತ್ತಿರುವ ಕುಟುಂಬಗಳ ಮಾಹಿತಿ ಪಡೆದುಕೊಂಡರು. ಈ ವೇಳೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಪ್ರತಿಭಟನಾಕಾರರು, ಸರ್ಕಾರಿ ಜಾಗದಲ್ಲಿ ಶೆಡ್ಡು ಹಾಕಿದ್ರೆ ಕಿತ್ತು ಬಿಸಾಡಿ ಹೋದವರು ಇಂದು ಬಂದಿದ್ದೀರಾ. ಇದೀಗ ಬಂದಿರುವುದಾದ್ರೂ ನಿವೇಶನ ನೀಡುವ ಭರವಸೆ ನೀಡುತ್ತಿಲ್ಲ. ಬದಲಾಗಿ ಆಯಾ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಅರ್ಜಿ ಸಲ್ಲಿಸಲಿ. ಬಳಿಕ ಪರಿಶೀಲನೆ ಮಾಡುತ್ತೇವೆ ಎಂದು ಹೇಳುತ್ತಿದ್ದೀರಾ. ಇಂತಹ ಭರವಸೆಗಳನ್ನು 20 ವರ್ಷಗಳಿಂದ ಕೇಳಿ ಸಾಕಾಗಿ ಹೋಗಿದೆ. ಹೀಗಾಗಿ ನಮಗೇ ಇದೇ ಸ್ಥಳದಲ್ಲಿ ನಿವೇಶ ಸಿಗೋವರೆಗೆ ಸ್ಥಳ ಬಿಟ್ಟು ಕದಲೋದಿಲ್ಲ ಎಂದಿದ್ದಾರೆ.

  • ಹಕ್ಕುಪತ್ರಕ್ಕಾಗಿ ಆದಿವಾಸಿಗಳ ಅನಿರ್ಧಿಷ್ಟಾವಧಿ ಪ್ರತಿಭಟನೆ- ಕಾಡಿನಲ್ಲೇ ವಾಸ್ತವ್ಯ

    ಹಕ್ಕುಪತ್ರಕ್ಕಾಗಿ ಆದಿವಾಸಿಗಳ ಅನಿರ್ಧಿಷ್ಟಾವಧಿ ಪ್ರತಿಭಟನೆ- ಕಾಡಿನಲ್ಲೇ ವಾಸ್ತವ್ಯ

    ರಾಮನಗರ: ಆದಿವಾಸಿ ಇರುಳಿಗ ಜನಾಂಗದವರು ಅರಣ್ಯ ಹಕ್ಕು ಕಾಯಿದೆ ಪ್ರಕಾರ ಭೂಮಿಯ ಹಕ್ಕು ಪತ್ರಕ್ಕಾಗಿ ನಡೆಸಿಸುತ್ತಿರುವ ಅನಿರ್ಧಿಷ್ಟಾವಧಿ ಹಾಗೂ ಆಹೋರಾತ್ರಿ ಪ್ರತಿಭಟನೆ ಎರಡೇ ದಿನಕ್ಕೆ ಕಾಲಿಟ್ಟಿದೆ.

    ಕನಕಪುರ ತಾಲೂಕಿನ ಮರಳವಾಡಿ ಹೋಬಳಿಯ ಬುಡಗಯ್ಯನದೊಡ್ಡಿ ಸಮೀಪದ ಬನ್ನೇರುಘಟ್ಟ ರಾಷ್ಟ್ರೀಯ ಅರಣ್ಯ ಪ್ರದೇಶದಲ್ಲಿ ಆದಿವಾಸಿ ಇರುಳಿಗರು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ರಾಮನಗರ ಉಪ ವಿಭಾಗಧಿಕಾರಿ ದಾಕ್ಷಾಯಿಣಿ ಸ್ಥಳಕ್ಕೆ ಭೇಟಿ ನೀಡಿ, ಹೋರಾಟಗಾರರ ಮನವೊಲಿಕೆಗೆ ಪ್ರಯತ್ನಿಸಿದರೂ ಸಫಲವಾಗಿಲ್ಲ. ಹೀಗಾಗಿ ಪ್ರತಿಭಟನಾಕಾರರು ಅರಣ್ಯದಲ್ಲೇ ಪ್ರತಿಭಟನೆ ಮುಂದುವರಿಸಿದ್ದಾರೆ.

    ರಾಮನಗರ ಜಿಲ್ಲಾಡಳಿತ ಅರಣ್ಯ ಹಕ್ಕು ಕಾಯಿದೆ ಪ್ರಕಾರ ಭೂಮಿಯ ಹಕ್ಕು ಪತ್ರ ನೀಡದೆ ಪದೇ ಪದೇ ಮರುಪರಿಶೀಲನೆ ಮಾಡುತ್ತೇವೆ ಎಂದು ದಿಕ್ಕು ತಪ್ಪಿಸುತ್ತಿದೆ. ನಮಗೆ ಕೂಡಲೇ ಹಕ್ಕು ಪತ್ರ ನೀಡಬೇಕು ಎಂದು ಆಗ್ರಹಿಸಿ ಇರುಳಿಗ ಸಮುದಾಯದ ಜನರು ಕಳೆದ ಎರಡು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ.

    ಪ್ರತಿಭಟನಾಕಾರರ ಮನವೊಲಿಸುವ ಪ್ರಯತ್ನ ವಿಫಲವಾದ ಬಳಿಕ ಮಾತನಾಡಿದ ಉಪವಿಭಾಗಧಿಕಾರಿ ದಾಕ್ಷಾಯಿಣಿ ಅವರು, ಹಕ್ಕುಪತ್ರಕ್ಕೆ ಆಗ್ರಹಿಸಿ ಇರುಳಿಗ ಜನಾಂಗದವರು ಧರಣಿ ಕುಳಿತುಕೊಂಡಿದ್ದಾರೆ. ಸರ್ವೇ ಮಾಡಿಸಿ ಹಕ್ಕು ಪತ್ರ ನೀಡುವಂತೆ ಒತ್ತಾಯಿಸುತ್ತಿದ್ದಾರೆ. ಈಗಾಗಲೇ ಸರ್ವೇ ಕಾರ್ಯ ಮಾಡಲಾಗಿದೆ ಅಂತ ತಾಲೂಕು ಕಂದಾಯ ಇಲಾಖೆ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಾರ್ವಜನಿಕರು ಹೇಳುತ್ತಿದ್ದಾರೆ. ಈ ಕುರಿತು ದೂರವಾಣಿ ಕರೆಯ ಮೂಲಕ ಹಿಂದೆ ಕಾರ್ಯ ನಿರ್ವಹಿಸುತ್ತಿದ್ದ ವಲಯ ಅರಣ್ಯಾಧಿಕಾರಿ (ಆರ್‌ಎಫ್‌ಓ) ಮನ್ಸೂರ್ ಅವರನ್ನು ವಿಚಾರಿಸಿ ಮಾಹಿತಿ ಪಡೆದಿದ್ದೇನೆ. ಹಂತ ಹಂತವಾಗಿ ಹಕ್ಕು ಪತ್ರ ವಿತರಣೆಗೆ ಈಗಾಗಲೇ ಕ್ರಮ ತೆಗೆದುಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.

    ಅರಣ್ಯದಲ್ಲಿ ಜನತೆ ಇರುವುದು ಕಷ್ಟವಾಗುತ್ತದೆ. ಪ್ರತಿಭಟನೆ ಕೈಬಿಡಬೇಕು ಎಂದು ಉಪವಿಭಾಗಧಿಕಾರಿ ಮನವಿ ಮಾಡಿಕೊಂಡರು. ಸರ್ವೇ ನೀಲ ನಕ್ಷೆ ಬಂದ ಕೂಡಲೇ ಸಮಸ್ಯೆ ಬಗೆಹರಿಸಲಾಗುತ್ತದೆ ಎಂದು ಪ್ರತಿಭಟನಾ ನಿರತರಿಗೆ ತಿಳಿಸಿದರು. ಆದರೆ ಅಧಿಕಾರಿಗಳ ಮನವಿಗೆ ಸೊಪ್ಪು ಹಾಕದ ಇರುಳಿಗರು ಅರಣ್ಯದಲ್ಲೇ ಮಕ್ಕಳು, ಮನೆಯವರ ಜೊತೆ ಟೆಂಟ್‍ಗಳನ್ನು ಹಾಕಿಕೊಂಡು ಪ್ರತಿಭಟನೆ ಮುಂದುವರಿಸಿದ್ದಾರೆ.

  • ಅರಣ್ಯ ಹಕ್ಕು ಕಾಯ್ದೆಯಡಿ ಭೂಮಿಗಾಗಿ ಆಗ್ರಹಿಸಿ ಆದಿವಾಸಿಗಳ ಅಹೋರಾತ್ರಿ ಧರಣಿ

    ಅರಣ್ಯ ಹಕ್ಕು ಕಾಯ್ದೆಯಡಿ ಭೂಮಿಗಾಗಿ ಆಗ್ರಹಿಸಿ ಆದಿವಾಸಿಗಳ ಅಹೋರಾತ್ರಿ ಧರಣಿ

    ರಾಮನಗರ: ಅರಣ್ಯ ಹಕ್ಕು ಕಾಯ್ದೆಯಡಿ ಭೂಮಿ ನೀಡುವಂತೆ ಆಗ್ರಹಿಸಿ ಕನಕಪುರ ತಾಲೂಕಿನ ಮರಳವಾಡಿಯ ಬುಡಗಯ್ಯನ ದೊಡ್ಡಿ ಗ್ರಾಮಸ್ಥರು ಅಹೋರಾತ್ರಿ ಪ್ರತಿಭಟನೆ ನಡೆಸುತ್ತಿದ್ದಾರೆ.

    ಅರಣ್ಯದಲ್ಲಿ ವಾಸವಿದ್ದ ಬಗ್ಗೆ ಪರಿಶೀಲನೆ ನಡೆಸಿ ಸರ್ಕಾರಕ್ಕೆ ವರದಿ ನೀಡಲು ಬಂದಿದ್ದ ಅಧಿಕಾರಿಗಳನ್ನು ಆದಿವಾಸಿ ಇರುಳಿಗ ಸಮುದಾಯದವರು ತಡೆದು, ಜಿಲ್ಲಾ ಉಪ ವಿಭಾಗಾಧಿಕಾರಿಯೇ ಸ್ಥಳಕ್ಕೆ ಬರಬೇಕು. ಈ ಹಿಂದೆ ನಡೆಸಿದ ಸರ್ವೆ ವರದಿ ಏನಾಯ್ತು ಎಂದು ತಿಳಿಸಬೇಕು ಎಂದು ಸರ್ವೇ ಕಾರ್ಯವನ್ನ ಅಡ್ಡಿಪಡಿಸಿದ್ದಾರೆ. ಅಲ್ಲದೇ ಸಂಜೆಯಾದರೂ ಅಧಿಕಾರಿಗಳು ಸ್ಥಳಕ್ಕೆ ಬಾರದ ಹಿನ್ನೆಲೆಯಲ್ಲಿ ಅಹೋರಾತ್ರಿ ಪ್ರತಿಭಟನೆ ನಡೆಸಿದ್ದಾರೆ.

    ಮರಳವಾಡಿ ಹೋಬಳಿ ಬುಡಗಯ್ಯನ ದೊಡ್ಡಿ ಗ್ರಾಮ ಸಮೀಪದ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನ ಅರಣ್ಯ ಭೂಮಿಯಲ್ಲಿ ಆದಿವಾಸಿಗಳು ವಾಸವಿದ್ದಾರೆ. ಈ ಹಿಂದೆ ಕೂಡ ನಾವು ಇಲ್ಲಿಯೇ ಅರಣ್ಯವಾಸಿಗಳಾಗಿ ವಾಸವಿದ್ದೆವು. ನಮ್ಮನ್ನು ಬಲವಂತವಾಗಿ ಇಲ್ಲಿಂದ ಒಕ್ಕಲೆಬ್ಬಿಸಲಾಯಿತು. ಅರಣ್ಯವಾಸಿಗಳ ಅರಣ್ಯ ಹಕ್ಕು ಕಾಯ್ದೆಯಡಿ ನಮಗೆ ಭೂಮಿ ಕೊಡುವುದಾಗಿ 93 ಮಂದಿಯಿಂದ ಅರ್ಜಿಯನ್ನು ಪಡೆದುಕೊಳ್ಳಲಾಗಿತ್ತು. ಆದರೆ ಇಲ್ಲಿಯವರೆಗೂ ಭೂಮಿ ಕೊಟ್ಟಿಲ್ಲ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.

    2017ರಲ್ಲಿ ಇದೇ ರೀತಿ 93 ಮಂದಿ ಆದಿವಾಸಿಗಳು ಪ್ರತಿಭಟನೆ ನಡೆಸಿದ್ದ ಪರಿಣಾಮ ಸರ್ಕಾರವು ಸರ್ವೇ ನಡೆಸಿ ಭೂಮಿ ನೀಡುವಂತೆ ಸೂಚಿಸಿತ್ತು. ವಾಸವಿದ್ದ ಕುರುಹುಗಳನ್ನು ಆಧರಿಸಿ ಸರ್ವೇ ಮಾಡಿಸಿ ಶೀಘ್ರವೇ ಭೂಮಿ ನೀಡಿ ಹಕ್ಕುಪತ್ರ ನೀಡುವುದಾಗಿ ಭರವಸೆ ನೀಡಿತ್ತು. ಆದರೆ ಇಲ್ಲಿಯ ತನಕ ನೀಡಿಲ್ಲ ಎಂದು ಪ್ರತಿಭಟನಾಕಾರರು ಅಹೋರಾತ್ರಿ ಹಾಗೂ ಅನಿರ್ಧಿಷ್ಟಾವಧಿ ಪ್ರತಿಭಟನೆ ಮಾಡಿ ಆಕ್ರೋಶ ಹೊರಹಾಕಿದ್ದಾರೆ.

    ಈಗಾಗಲೇ ಆದಿವಾಸಿ ಇರುಳಿಗರು ಅರಣ್ಯಕ್ಕೆ ಕಾಲಿಟ್ಟು ಟೆಂಟ್‍ಗಳನ್ನು ನಿರ್ಮಿಸಿಕೊಂಡು ಇದೇ ಸ್ಥಳದಲ್ಲಿ ವಾಸ ಮಾಡುವುದಾಗಿ ಮಕ್ಕಳು, ಮನೆಯವರನ್ನ ಕರೆದುಕೊಂಡು ಹೋಗಿ ಠಿಕಾಣಿ ಹೂಡಿದ್ದಾರೆ.