Tag: ಆದೇಶ

  • ಗರ್ಭಪಾತದ ಹಕ್ಕನ್ನು ರದ್ದುಗೊಳಿಸಿದ ಅಮೆರಿಕ – ಭುಗಿಲೆದ್ದ ಪ್ರತಿಭಟನೆ

    ಗರ್ಭಪಾತದ ಹಕ್ಕನ್ನು ರದ್ದುಗೊಳಿಸಿದ ಅಮೆರಿಕ – ಭುಗಿಲೆದ್ದ ಪ್ರತಿಭಟನೆ

    ವಾಷಿಂಗ್ಟನ್: ಗರ್ಭಪಾತದ ಸಾಂವಿಧಾನಿಕ ಹಕ್ಕನ್ನು ಅಮೆರಿಕದ ಸುಪ್ರೀಂ ಕೋರ್ಟ್ ರದ್ದುಗೊಳಿಸಿದ್ದು, ಈ ಆದೇಶದಿಂದ ಕೆಲವು ಪ್ರಮುಖ ನಗರಗಳಲ್ಲಿ ಮಹಿಳೆಯರು ವಿರೋಧ ವ್ಯಕ್ತಪಡಿಸಿ, ಪ್ರತಿಭಟನೆ ನಡೆಸುತ್ತಿದ್ದಾರೆ.

    ಗರ್ಭಪಾತಕ್ಕೆ ಸಂಬಂಧಿಸಿದಂತೆ ಸಾಂವಿಧಾನಿಕ ಹಕ್ಕು ಎಂದು ಘೋಷಿಸಲಾಗಿದ್ದ 1973ರ ತೀರ್ಪನ್ನು ಅಮೆರಿಕ ಸುಪ್ರೀಂ ಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದನ್ನು ವಿರೋಧಿಸುತ್ತಿರುವ ಮಹಿಳೆಯರು ‘ನಮ್ಮ ದೇಹ, ನಮ್ಮ ಹಕ್ಕು’ ಎಂದು ಬರೆದಿರುವ ಪೋಸ್ಟರ್‌ಗಳನ್ನು ಹಿಡಿದುಕೊಂಡು ಪ್ರತಿಭಟನೆ ನಡೆಸಿದ್ದಾರೆ. ಇದನ್ನೂ ಓದಿ: ಮುಂಬೈಯಲ್ಲಿ ಜೂನ್ 30ರವರೆಗೂ 144 ಸೆಕ್ಷನ್ ಜಾರಿ

    ಅಮೆರಿಕದ ಸುಪ್ರೀಂ ಕೋರ್ಟ್ ತೀರ್ಪಿನಿಂದಾಗಿ ದೇಶದ ಅರ್ಧಕ್ಕಿಂತಲೂ ಹೆಚ್ಚಿನ ರಾಜ್ಯಗಳು ಗರ್ಭಪಾತವನ್ನು ನಿರ್ಬಂಧಿಸುವ ನಿರೀಕ್ಷೆಯಿದೆ. ಮಹಿಳೆಯರು ತಮ್ಮ ಗರ್ಭಪಾತ ಮಾಡಿಸಲೇ ಬೇಕೆಂದರೆ ಅನುಮತಿಯಿರುವ ದೇಶಗಳಿಗೆ ಹೋಗುವುದು ಅನಿವಾರ್ಯವಾಗಿದೆ. ಇದನ್ನೂ ಓದಿ: ನಾರ್ವೆಯಲ್ಲಿ ಗುಂಡಿನ ದಾಳಿಗೆ ಇಬ್ಬರು ಬಲಿ, 14 ಮಂದಿಗೆ ಗಂಭೀರ ಗಾಯ

    ಅಮೆರಿಕದಲ್ಲಿ ಗರ್ಭಪಾತದ ಹಕ್ಕನ್ನು ರದ್ದುಗೊಳಿಸಿದ್ದರೂ ವಾಲ್ಟ್ ಡಿಸ್ನಿ, ಮೆಟಾದಂತಹ ಹಲವಾರು ದೈತ್ಯ ಕಂಪನಿಗಳು ತಮ್ಮ ಉದ್ಯೋಗಿಗಳಿಗೆ ಗರ್ಭಪಾತ ಮಾಡಿಸಲು ಇತರ ದೇಶಗಳಿಗೆ ಹೋಗಲು ಸಹಾಯ ಮಾಡುವುದಾಗಿ ತಿಳಿಸಿದೆ.

    ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸುಪ್ರೀಂ ಕೋರ್ಟ್ ತೀರ್ಪನ್ನು ಸ್ವಾಗತಿಸಿದ್ದಾರೆ.

    Live Tv

  • ಆದೇಶಕ್ಕೆ ಕ್ಯಾರೇ ಎನ್ನದ ಎಸ್‍ಪಿ ಮೇಲೆ ಸಿಎಂ ಗರಂ

    ಆದೇಶಕ್ಕೆ ಕ್ಯಾರೇ ಎನ್ನದ ಎಸ್‍ಪಿ ಮೇಲೆ ಸಿಎಂ ಗರಂ

    ವಿಜಯಪುರ: ತಾವು ಮಾಡಿದ ಆದೇಶಕ್ಕೆ ಕಿಮ್ಮತ್ತು ನೀಡದ ಕಾರಣ ಸಿಎಂ ಇಂದು ಎಸ್‍ಪಿ ಮೇಲೆ ಗರಂ ಆದ ಘಟನೆ ವಿಜಯಪುರದಲ್ಲಿ ನಡೆದಿದೆ.

    ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಆಲಮಟ್ಟಿ ಲಾಲಬಾಹ್ದೂರು ಶಾಸ್ತ್ರೀ ಜಲಾಶಯಕ್ಕೆ ಬಾಗೀನ ಅರ್ಪಣೆಗೆ ಸಿಎಂ ಬಸವರಾಜ್ ಬೊಮ್ಮಾಯಿ ಆಗಮಿಸಿದ್ದರು. ಹೆಲಿಕಾಪ್ಟರ್ ಮೂಲಕ ಆಲಮಟ್ಟಿಯ ಹೆಲಿಪ್ಯಾಡ್‍ಗೆ ಬೆಳಗ್ಗೆ 11 ಗಂಟೆ ಸುಮಾರಿಗೆ ಆಗಮಿಸಿದರು. ಹೆಲಿಕಾಪ್ಟರ್ ನಿಂದ ಕೆಳಗೆ ಇಳಿಯುತ್ತಿದ್ದಂತೆ ಪೊಲೀಸ್ ಸಿಬ್ಬಂದಿ ಸಿಎಂಗೆ ಗೌರವ ವಂದನೆ ಕೊಡಲು ಸಿದ್ಧವಾಗಿದ್ದರು. ಇದನ್ನೂ ಓದಿ: ಸಭೆಗಳಲ್ಲಿ ಹೂಗುಚ್ಛ, ಹಾರ, ಶಾಲು ನಿಷೇಧ: ಬೊಮ್ಮಾಯಿ ಆದೇಶ

    ಇದನ್ನ ನೋಡುತ್ತಿದ್ದಂತೆ ವಿಜಯಪುರ ಎಸ್‍ಪಿ ಆನಂದ್ ಕುಮಾರ್ ಮೇಲೆ ಸಿಎಂ ಗರಂ ಆಗಿದ್ದಾರೆ. ಇದು ಸರಿಯಲ್ಲ, ಇದರ ಬಗ್ಗೆ ನಾನು ಕ್ಲಿಯರ್ ಆಗಿ ಸೂಚನೆ ನೀಡಿದ್ದೇನೆ. ಅದಾದ ಮೇಲೂ ಇದನ್ನ ಮಾಡೋದು ಸರಿಯಲ್ಲ. ನಿಮ್ಮ ಜ್ಯೂನಿಯರ್ಸ್‍ಗಳಿಗೆ ಹೇಳಬೇಕಿತ್ತು ಎಂದು ಎಸ್‍ಪಿ ಮೇಲೆ ಸಿಎಂ ಆಕ್ರೋಶ ಹೊರಹಾಕಿದ್ದಾರೆ.

  • ಕೊಡಗು ಜಿಲ್ಲೆಯಲ್ಲಿ ಭಾರೀ ವಾಹನಗಳ ನಿರ್ಬಂಧ ಸಡಿಲಿಕೆ

    ಕೊಡಗು ಜಿಲ್ಲೆಯಲ್ಲಿ ಭಾರೀ ವಾಹನಗಳ ನಿರ್ಬಂಧ ಸಡಿಲಿಕೆ

    ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮರಳುಗಾರಿಕೆ, ಮರದ ದಿಮ್ಮಿಗಳ ಸಾಗಾಣಿಕೆ ಹಾಗೂ ಭಾರೀ ವಾಹನ ಸಂಚಾರದ ನಿರ್ಬಂಧ ವಿಧಿಸಿ ಹೊರಡಿಸಲಾದ ಆದೇಶವನ್ನು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಮಾರ್ಪಾಡು ಮಾಡಿದ್ದಾರೆ.

    ವಾಹನದ ನೋಂದಣಿ ತೂಕ 16,200 ಕೆ.ಜಿ.ಗಿಂತ ಹೆಚ್ಚಿನ ತೂಕದ ಸರಕು ಸಾಗಾಣಿಕೆ ಮಾಡುವ ವಾಹನಗಳನ್ನು ಮಾತ್ರ ನಿರ್ಭಂದಿಸಲಾಗಿದೆ. ಉಳಿದ ವಾಹನಗಳು ಸಂಚರಿಸಬಹುದಾಗಿದೆ. ಈ ಆದೇಶ ತಕ್ಷಣದಿಂದ ಜಾರಿಗೆ ಬರಲಿದೆ ಹಾಗೂ ಆಗಸ್ಟ್ 16ರವರೆಗೆ ಜಾರಿಯಲ್ಲಿರುತ್ತದೆ ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಆದೇಶದಲ್ಲಿ ತಿಳಿಸಿದ್ದಾರೆ.

    ಉಳಿದಂತೆ ಅಡುಗೆ ಅನಿಲ, ಇಂಧನ, ಹಾಲು ಪೂರೈಕೆ, ಸರ್ಕಾರಿ ಕೆಲಸದ ನಿಮಿತ್ತ ಉಪಯೋಗಿಸುವ ವಾಹನಗಳು, ಶಾಲಾ ಕಾಲೇಜು ಮತ್ತು ಸಾರ್ವಜನಿಕ ಪ್ರಯಾಣಿಕರ ವಾಹನಗಳ(ಮಲ್ಟಿ ಆಕ್ಸಿಲ್ ಬಸ್‍ಗಳು ಸೇರಿದಂತೆ) ಸಂಚಾರಕ್ಕೆ ಯಾವುದೇ ನಿರ್ಬಂಧ ಇಲ್ಲ. ಸಂಬಂಧಪಟ್ಟ ಇಲಾಖೆಗಳು ಹೊರಡಿಸಿರುವ ಅಥವಾ ಇಲಾಖೆ ವತಿಯಿಂದ ಚಾಲ್ತಿಯಲ್ಲಿರುವ ಆದೇಶ, ನಿಯಮ, ನಿರ್ಬಂದ, ಮಾರ್ಗಸೂಚಿಗಳು ಜಾರಿಯಲ್ಲಿರುತ್ತವೆ. ಉಲ್ಲಂಘನೆಯು ಸಂಬಂಧಪಟ್ಟ ಕಾಯ್ದೆಯಡಿ ದಂಡನೀಯವಾಗಿದೆ ಎಂದು ಹೇಳಿದ್ದಾರೆ.

  • ದಕ್ಷಿಣ ಕನ್ನಡದಲ್ಲಿ ಮತ್ತಷ್ಟು ಅನ್‍ಲಾಕ್- ವೀಕೆಂಡ್ ಕರ್ಫ್ಯೂ ಮುಂದುವರಿಕೆ

    ದಕ್ಷಿಣ ಕನ್ನಡದಲ್ಲಿ ಮತ್ತಷ್ಟು ಅನ್‍ಲಾಕ್- ವೀಕೆಂಡ್ ಕರ್ಫ್ಯೂ ಮುಂದುವರಿಕೆ

    ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆಯಿಂದ ಮತ್ತಷ್ಟು ಅನ್‍ಲಾಕ್ ಮಾಡಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಜಿಲ್ಲೆಯಾದ್ಯಂತ ಬೆಳಗ್ಗೆ 7ರಿಂದ ಸಂಜೆ 5ರವರೆಗೆ ವ್ಯಾಪಾರ ವಹಿವಾಟಿಗೆ ಅನುಮತಿ ನೀಡಿದ್ದು, ಬಸ್ ಸಂಚಾರ ಸೇರಿ ಎಲ್ಲ ಚಟುವಟಿಕೆಗಳಿಗೆ ಸಂಜೆ 5ರವರೆಗೆ ಅನುಮತಿ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಆದೇಶಿಸಿದ್ದಾರೆ.

    ಅನ್‍ಲಾಕ್ ಇದ್ದರೂ ಜಿಲ್ಲೆಯಲ್ಲಿ ಶನಿವಾರ ಮತ್ತು ಭಾನುವಾರ ಎಂದಿನಂತೆ ವೀಕೆಂಡ್ ಕರ್ಫ್ಯೂ ಇರಲಿದೆ. ಈ ಬಾರಿಯ ವೀಕೆಂಡ್ ಕರ್ಫ್ಯೂ ಅವಧಿಯಲ್ಲಿ ಬೆಳಗ್ಗೆ 6ರಿಂದ ಮಧ್ಯಾಹ್ನ 2ರವರೆಗೆ ಅಗತ್ಯ ವಸ್ತುಗಳ ಖರೀದಿದೆ ಅವಕಾಶ ಇದ್ದು, ಹಾಲು, ತರಕಾರಿ, ಮೀನು, ಮಾಂಸ ಮತ್ತು ದಿನಸಿ ಖರೀದಿಗಷ್ಟೇ ವಾರಾಂತ್ಯ ಅವಕಾಶವಿದೆ.

    ವೀಕೆಂಡ್ ವೇಳೆ ಅಗತ್ಯ ವಸ್ತು ಹೊರತುಪಡಿಸಿ ಯಾವುದೇ ಅಂಗಡಿ ತೆರೆಯಲು ಹಾಗೂ ಬಸ್ ಸಂಚಾರಕ್ಕೂ ಅವಕಾಶ ಇಲ್ಲ. ಈ ಹೊಸ ಆದೇಶ ಜುಲೈ 5ರವರೆಗೆ ಜಾರಿಯಲ್ಲಿ ಇರಲಿದೆ ಎಂದು ಜಿಲ್ಲಾಡಳಿತ ಸ್ಪಷ್ಟಪಡಿಸಿದೆ.

  • ದಕ್ಷಿಣ ಕನ್ನಡದಲ್ಲಿ ಜು.5ರವರೆಗೆ ಲಾಕ್‍ಡೌನ್ ವಿಸ್ತರಣೆ- ಡಿಸಿ ಆದೇಶ

    ದಕ್ಷಿಣ ಕನ್ನಡದಲ್ಲಿ ಜು.5ರವರೆಗೆ ಲಾಕ್‍ಡೌನ್ ವಿಸ್ತರಣೆ- ಡಿಸಿ ಆದೇಶ

    – ಬೆಳಗ್ಗೆ 7ರಿಂದ ಮಧ್ಯಾಹ್ನ 1ರವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ

    ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜುಲೈ 5ರವರೆಗೂ ಲಾಕ್‍ಡೌನ್ ವಿಸ್ತರಿಸಿ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ.ಆದೇಶಿಸಿದ್ದಾರೆ.

    ದ.ಕ ಜಿಲ್ಲೆಯಲ್ಲಿ ಬೆಳಗ್ಗೆ 7 ರಿಂದ ಮಧ್ಯಾಹ್ನ 1ರವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಿದ್ದು, ಅನ್‍ಲಾಕ್ 1.0 ಭಾಗವಾಗಿ ಅಗತ್ಯವಸ್ತುಗಳ ಖರೀದಿಗೆ ಅವಧಿ ವಿಸ್ತರಣೆ ಮಾಡಲಾಗಿದೆ. ಆಹಾರ, ದಿನಸಿ, ಹಣ್ಣು-ತರಕಾರಿ, ಮೀನು-ಮಾಂಸ, ಬೀದಿಬದಿ ವ್ಯಾಪಾರ ಮತ್ತು ಮದ್ಯ ಪಾರ್ಸಲ್ ಗಷ್ಟೇ ಮಧ್ಯಾಹ್ನ 1ರವರೆಗೆ ಅವಕಾಶ ನೀಡಲಾಗಿದೆ. ಜೊತೆಗೆ ನಿರ್ಮಾಣ ಚಟುವಟಿಕೆ ಮತ್ತು ಸ್ಟೀಲ್, ಸಿಮೆಂಟ್ ಅಂಗಡಿಗಳಿಗೆ ಅನುಮತಿ ನೀಡಲಾಗಿದೆ. ಇದನ್ನೂ ಓದಿ: 16 ಜಿಲ್ಲೆಗಳಲ್ಲಿ ಸಂಜೆ 5ರವರೆಗೆ ಅನ್‍ಲಾಕ್- ನಿಯಮಗಳೇನು?

    ಈ ಸಮಯದಲ್ಲಿ ಮಾತ್ರ ಆಟೋ ರಿಕ್ಷಾ ಮತ್ತು ಟ್ಯಾಕ್ಸಿಗಳು ಇಬ್ಬರು ಪ್ರಯಾಣಿಕರ ಸಹಿತ ಸಂಚರಿಸಬಹುದು. ಜಿಲ್ಲೆಯಲ್ಲಿ ಪಾರ್ಕ್ ಮತ್ತು ಸಾರ್ವಜನಿಕ ಉದ್ಯಾನ ತೆರೆಯಲು ಅವಕಾಶ ಇಲ್ಲ. ಖಾಸಗಿ ಹಾಗೂ ಕೆಎಸ್‍ಆರ್ ಟಿಸಿ ಬಸ್‍ಗಳು ಜಿಲ್ಲೆಯಿಂದ ಹೊರಗೆ ಹಾಗೂ ಒಳಗೆ ಓಡಾಟ ಮಾಡುವಂತಿಲ್ಲ. ಅಲ್ಲದೆ ಹೊರ ಜಿಲ್ಲೆಗಳಿಂದಲೂ ಕೆಎಸ್‍ಆರ್ ಟಿಸಿ ಬಸ್‍ಗಳ ಓಡಾಟಕ್ಕೆ ನಿರ್ಬಂಧ ಹೇರಲಾಗಿದೆ.

    ಜುಲೈ 5 ರವರೆಗೂ ಜಿಲ್ಲೆಯಾದ್ಯಂತ ಪ್ರತಿದಿನ ಸಂಜೆ 7ರಿಂದ ಬೆಳಗ್ಗೆ 7ರವರೆಗೆ ನೈಟ್ ಕಪ್ರ್ಯೂ ಜಾರಿ ಇರುತ್ತದೆ, ಯಾವುದೇ ವಾಹನ ಓಡಾಟಕ್ಕೂ ಅನುಮತಿ ಇಲ್ಲ. ಅಲ್ಲದೆ ಶುಕ್ರವಾರ ಸಂಜೆ 7ರಿಂದ ಸೋಮವಾರ ಬೆಳಗ್ಗೆ 7ರವರೆಗೆ ವೀಕೆಂಡ್ ಕಪ್ರ್ಯೂ ಜಾರಿ ಇದ್ದು, ಈ ವೇಳೆ ಯಾರೂ ಮನೆಯಿಂದ ಹೊರ ಬರುವಂತಿಲ್ಲ ಎಂದು ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

  • ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ರಚನೆಗೆ ಸಿಎಂ ಆದೇಶ

    ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ರಚನೆಗೆ ಸಿಎಂ ಆದೇಶ

    ಬೆಂಗಳೂರು: ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ರಚನೆಗೆ ಸಿಎಂ ಯಡಿಯೂರಪ್ಪ ಅವರು ಆದೇಶ ಮಾಡಿದ್ದಾರೆ.

    ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ಬೆನ್ನಲ್ಲೇ ವೀರಶೈವ ಲಿಂಗಾಯತ ಸಮುದಾಯದ ನಾಯಕರು ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ರಚನೆ ಮಾಡುವಂತೆ ಸಿಎಂ ಯಡಿಯೂರಪ್ಪ ಅವರಿಗೆ ಒತ್ತಡ ಹೇರಿದ್ದರು. ಈ ಒತ್ತಡಕ್ಕೆ ಮಣಿದ ಯಡಿಯೂರಪ್ಪನವರು ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ರಚನೆ ಮಾಡುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಆದೇಶ ನೀಡಿದ್ದಾರೆ.

    ರಾಜ್ಯದಲ್ಲೀಗ ಪ್ರಾಧಿಕಾರ ಮತ್ತು ಮೀಸಲು ಪಾಲಿಟಿಕ್ಸ್ ಜೋರಾಗ್ತಿದೆ. ಬೈ ಎಲೆಕ್ಷನ್ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡುತ್ತಲೇ, ವೀರಶೈವ ಲಿಂಗಾಯತರು ಧ್ವನಿ ಮುನ್ನಲೆಗೆ ಬಂದಿದೆ. ವೀರಶೈವ ಲಿಂಗಾಯತ ಸಮುದಾಯದ ಅಭಿವೃದ್ಧಿಗೆ ಪ್ರಾಧಿಕಾರ ರಚನೆ ಮಾಡಬೇಕೆಂದು ಡಿಸಿಎಂ ಲಕ್ಷ್ಮಣ ಸವದಿ, ಸಚಿವರಾದ ಸೋಮಣ್ಣ, ಬಿಸಿ ಪಾಟೀಲ್, ಶಾಸಕ ರಾಜಕುಮಾರ್ ಪಾಟೀಲ್ ತೇಲ್ಕೂರು ಅವರಿದ್ದ ನಿಯೋಗ ಮುಖ್ಯಮಂತ್ರಿಗೆ ಮನವಿ ಮಾಡಿದೆ.

    ಜೊತೆಗೆ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡಿದ ನಂತರ ವೀರಶೈವ ಲಿಂಗಾಯತ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡಿ ಎಂದು ಅಖಿಲ ಭಾರತ ವೀರಶೈವ ಮಹಾಸಭಾ ರಾಜ್ಯ ಯುವ ಘಟಕದ ರಾಜ್ಯಾಧಕ್ಷರು ಸಿಎಂ ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದರು. ನಮ್ಮ ಸಮಾಜದ ಕಡು ಬಡವರು, ಸಮಾಜದ ಹಿಂದುಳಿದ ವರ್ಗಕ್ಕೆ ಮತ್ತು ಯುವಕರಿಗೆ ಸಹಾಯ ಆಗಬೇಕು. ಹೀಗಾಗಿ ವೀರಶೈವ ಲಿಂಗಾಯತ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡುವಂತೆ ಆಗ್ರಹಿಸಿದ್ದರು.

    ಬೆಳಗಾವಿ ಬಸವ ಕಲ್ಯಾಣ ಉಪ ಚುನಾವಣೆ ಘೋಷಣೆಗೂ ಮುನ್ನವೇ, ಮರಾಠ ಸಮುದಾಯ ಓಲೈಸುವ ಸಲುವಾಗಿ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡಿ ಸಿಎಂ ಬಿಎಸ್‍ವೈ ಆದೇಶ ಹೊರಡಿಸಿದ್ದರು. ಅಲ್ಲದೇ 50 ಕೋಟಿ ರೂ. ಅನುದಾನವನ್ನು ಮೀಸಲಿಟ್ಟಿದ್ದಾರೆ. ರಾಜ್ಯ ಸರ್ಕಾರದ ಈ ತೀರ್ಮಾನಕ್ಕೆ ತೀವ್ರ ವಿರೋಧ ವ್ಯಕ್ತವಾಗಿದ್ದು, ಕನ್ನಡ ಪರ ಸಂಘಟನೆಗಳು ಡಿಸೆಂಬರ್ 5ರಂದು ಕರ್ನಾಟಕ ಬಂದ್‍ಗೆ ಕರೆಕೊಟ್ಟಿದೆ.

  • ಆಗಸ್ಟ್ 22ರಿಂದ ಮದ್ಯ ಮಾರಾಟ ನಿಷೇಧ: ಡಿಸಿ

    ಆಗಸ್ಟ್ 22ರಿಂದ ಮದ್ಯ ಮಾರಾಟ ನಿಷೇಧ: ಡಿಸಿ

    ಧಾರವಾಡ: ಅಗಸ್ಟ್ 22ರಿಂದ ಸೆಪ್ಟಂಬರ್ 4ರವರೆಗೆ ಗಣೇಶ ಹಬ್ಬದ ಆಚರಣೆ ಪ್ರಯುಕ್ತ ಧಾರವಾಡ ಜಿಲ್ಲೆಯ ನಗರ ಮತ್ತು ಗ್ರಾಮಗಳಲ್ಲಿ ಗಣೇಶ ವಿಗ್ರಹಗಳ ವಿಸರ್ಜನಾ ನಡೆಯುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ ಮದ್ಯ ಮಾರಾಟ ನಿಷೇಧಿಸಿ ಧಾರವಾಡ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಆದೇಶ ಹೊರಡಿಸಿದ್ದಾರೆ.

    ಗಣೇಶ ಹಬ್ಬಕ್ಕೆ ಸಂಬಂಧಿಸಿದಂತೆ ಕರ್ನಾಟಕ ಅಬಕಾರಿ ಕಾಯ್ದೆ 1965ರ ಕಲಂ 21(1) ಕಾಯ್ದೆಯಡಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಿಕೊಂಡು ಮುಂಜಾಗ್ರತಾ ಕ್ರಮವಾಗಿ ಈ ಆದೇಶ ಹೊರಡಿಸಲಾಗಿದೆ. ಸಮಾರಂಭ, ಸಂಗೀತ, ನೃತ್ಯ, ಮುಂತಾದ ಮನರಂಜನಾ ಕಾರ್ಯಕ್ರಮಗಳನ್ನು ನಿರ್ಬಂಧಿಸಲಾಗಿದೆ.

    ಗಣೇಶ ಮೂರ್ತಿಯನ್ನು ತಮ್ಮ ಮನೆಯ ಆವರಣದಲ್ಲಿ, ನೀರಿನ ಬ್ಯಾರಲ್, ಬಕೆಟ್‍ಗಳಲ್ಲಿ ವಿಸರ್ಜನೆ ಮಾಡಬೇಕು. ಯಾವುದೇ ರೀತಿಯಾಗಿ ಜನ ಸಂದಣಿ ಉಂಟು ಮಾಡಬಾರದು. ಭಕ್ತಾದಿಗಳಿಗೆ ಸ್ಯಾನಿಟೈಸರ್, ಮಾಸ್ಕ್ ಧರಿಸಲು ಸೂಚಿಸಬೇಕು, ಸಾಮಾಜಿಕ ಅಂತರ ಕಾಯ್ದು ಕೊಳ್ಳಬೇಕು, ಪರಿಸರ ಸ್ನೇಹಿ ಗಣೇಶ ಮೂರ್ತಿಯನ್ನು ಪ್ರತಿಷ್ಟಾಪಿಸಲು ಜಿಲ್ಲಾಧಿಕಾರಿಗಳು ಸೂಚನೆ ನೀಡಿದ್ದಾರೆ.

  • ಶಿವಮೊಗ್ಗದಲ್ಲಿ ಬೆಳಗ್ಗೆ ಗಣಪತಿ ಪ್ರತಿಷ್ಠಾಪನೆ, ಸಂಜೆ ವಿಸರ್ಜನೆ – ಜಿಲ್ಲಾಡಳಿತ ಆದೇಶ

    ಶಿವಮೊಗ್ಗದಲ್ಲಿ ಬೆಳಗ್ಗೆ ಗಣಪತಿ ಪ್ರತಿಷ್ಠಾಪನೆ, ಸಂಜೆ ವಿಸರ್ಜನೆ – ಜಿಲ್ಲಾಡಳಿತ ಆದೇಶ

    ಶಿವಮೊಗ್ಗ: ಕೊರೊನಾ ಹಿನ್ನೆಲೆ ಜಿಲ್ಲೆಯಲ್ಲಿ ಈ ಬಾರಿಯ ಗಣಪತಿ ಉತ್ಸವವನ್ನು ರಾಜ್ಯ ಸರ್ಕಾರದ ಆದೇಶದ ಅನ್ವಯ ಆಚರಿಸಲು ನಿರ್ಧರಿಸಲಾಗಿದೆ. ಹೀಗಾಗಿ ಈ ಬಾರಿಯ ಗಣೇಶೋತ್ಸವವನ್ನು ಕೇವಲ ಒಂದು ದಿನಕ್ಕೆ ಮಾತ್ರ ಸೀಮಿತಗೊಳಿಸಲಾಗಿದೆ. ಈಗಾಗಿ ನಾಗರಿಕರು ಮುಂಜಾನೆ ಗಣಪತಿ ಪ್ರತಿಷ್ಠಾಪಿಸಿ ಸಂಜೆ ವಿಸರ್ಜನೆ ಮಾಡುವ ಮೂಲಕ ಗಣೇಶ ಹಬ್ಬವನ್ನು ಸರಳವಾಗಿ ಆಚರಿಸುವಂತೆ ಸಾರ್ವಜನಿಕರಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್ ಈಶ್ವರಪ್ಪ ಮನವಿ ಮಾಡಿದ್ದಾರೆ.

    ಜಿಲ್ಲಾಧಿಕಾರಿ ಕಚೇರಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಕೊರೊನಾ ಸೋಂಕು ಎಲ್ಲೆಡೆ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಗಣೇಶೋತ್ಸವವನ್ನು ಕೇವಲ ಒಂದು ದಿನಕ್ಕೆ ಮಾತ್ರ ಸೀಮಿತಗೊಳಿಸಲಾಗಿದೆ. ಗಣಪತಿ ಹಬ್ಬ ಕೇವಲ ಈ ವರ್ಷಕ್ಕೆ ಅಷ್ಟೇ ಸೀಮಿತವಾಗಿಲ್ಲ. ಮುಂದಿನ ಬಾರಿಯೂ ಗಣೇಶ ಹಬ್ಬ ಬರುತ್ತದೆ. ಈಗಾಗಿ ಜೀವ ಉಳಿದರೆ ಮುಂದಿನ ಬಾರಿ ಹಬ್ಬವನ್ನು ಅದ್ಧೂರಿಯಾಗಿ ಆಚರಿಸಬಹುದು ಎಂದರು.

    ಜಿಲ್ಲೆಯಲ್ಲಿ ಎಲ್ಲಿ ಬೇಕಾದರೂ ಗಣಪತಿ ಪ್ರತಿಷ್ಠಾಪನೆ ಮಾಡಿ. ಆದರೆ ಗಣಪತಿ ತರುವ ವೇಳೆಯಲ್ಲಿ ಆಗಲಿ, ವಿಸರ್ಜನೆ ಮಾಡುವ ಸಂದರ್ಭದಲ್ಲಿ ಆಗಲಿ ಮೆರವಣಿಗೆ ಮಾಡುವಂತಿಲ್ಲ. ಮನೆಯಲ್ಲಿ ಕೂರಿಸುವ ಗಣಪತಿ ಮೂರ್ತಿ 2 ಅಡಿ ಮೀರಬಾರದು. ಜೊತೆಗೆ 4 ಜನಕ್ಕಿಂತ ಹೆಚ್ಚಿನ ಮಂದಿ ಭಾಗವಹಿಸಬಾರದು. ಅದೇ ರೀತಿ ಸಾರ್ವಜನಿಕವಾಗಿ ಕೂರಿಸುವ ಗಣಪತಿ 4 ಅಡಿಗಿಂತ ಮೀರಿರಬಾರದು ಹಾಗೂ ಗಣಪತಿ ತರಲು 20ಕ್ಕಿಂತ ಹೆಚ್ಚು ಮಂದಿ ಭಾಗವಹಿಸುವಂತಿಲ್ಲ. ಅಲ್ಲದೇ ಮುಂಜಾನೆ ಗಣಪತಿ ಪ್ರತಿಷ್ಠಾಪಿಸಿದರೆ ಸಂಜೆ ಕತ್ತಲು ಕಳೆಯುವುದರೊಳಗೆ ಗಣಪತಿ ವಿಜರ್ಜನೆ ಮಾಡಬೇಕು ಎಂದು ಸಚಿವರು ತಿಳಿಸಿದ್ದಾರೆ.

    ರಾಜ್ಯ ಸರ್ಕಾರದ ತೀರ್ಮಾನದಂತೆ ಜಿಲ್ಲಾಡಳಿತ ತೆಗೆದುಕೊಂಡಿರುವ ತೀರ್ಮಾನಕ್ಕೆ ಎಲ್ಲಾ ಗಣಪತಿ ಸಂಘಟನೆಗಳು ಬದ್ಧರಾಗಿರಬೇಕು. ಗಣಪತಿ ಪ್ರತಿಷ್ಠಾಪಿಸಬೇಡಿ ಎಂದು ಜಿಲ್ಲಾಡಳಿತ ಹೇಳುತ್ತಿಲ್ಲ. ಯಾವುದೇ ಸಂಘಟನೆಯವರಾಗಲಿ ಕೂಡ ಇದನ್ನು ಪ್ರತಿಷ್ಠೆಯಾಗಿ ತೆಗೆದುಕೊಳ್ಳಬಾರದು. ಪ್ರತಿಷ್ಠೆಯಾಗಿ ತೆಗೆದುಕೊಂಡರೆ ನಮ್ಮ ಜೀವಕ್ಕೆ ಆಪತ್ತು ಉಂಟಾಗಲಿದೆ. ಕೊರೊನಾ ಹಿನ್ನೆಲೆಯಲ್ಲಿ ಜಿಲ್ಲಾಡಳಿತದ ತೀರ್ಮಾನಕ್ಕೆ ಎಲ್ಲರೂ ಬದ್ಧರಾಗಿರಬೇಕು ಎಂದು ಸಚಿವ ಈಶ್ವರಪ್ಪ ತಿಳಿಸಿದ್ದಾರೆ.

  • ಇಂದು ಸಂಜೆಯಿಂದ ಸೋಮವಾರದ ಬೆಳಗ್ಗೆವರೆಗೆ ಕೊಡಗು ಸಂಪೂರ್ಣ ಲಾಕ್‍ಡೌನ್

    ಇಂದು ಸಂಜೆಯಿಂದ ಸೋಮವಾರದ ಬೆಳಗ್ಗೆವರೆಗೆ ಕೊಡಗು ಸಂಪೂರ್ಣ ಲಾಕ್‍ಡೌನ್

    ಮಡಿಕೇರಿ: ಇಂದು ಸಂಜೆಯಿಂದ ಸೋಮವಾರದ ಬೆಳಗ್ಗೆವರೆಗೆ ಕೊಡಗಿನಲ್ಲಿ ಸಂಪೂರ್ಣವಾಗಿ ಲಾಕ್‍ಡೌನ್ ಮಾಡುವುದಾಗಿ ಕೊಡಗಿನ ಜಿಲ್ಲಾಧಿಕಾರಿ ಅನೀಸ್ ಕೆ.ಜಾಯ್ ತಿಳಿಸಿದ್ದಾರೆ.

    ಜಿಲ್ಲೆಗೆ ವಾರಾಂತ್ಯದಲ್ಲಿ ಹೊರಗಿನಿಂದ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಸೇರಿದಂತೆ ಬೇರೆ ಬೇರೆ ಕಡೆಗಳಿಂದ ಜನರು ಬರುತ್ತಿದ್ದಾರೆ. ಅಲ್ಲದೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಉಲ್ಬಣಿಸುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಇಂದು ಸಂಜೆಯಿಂದ ಸೋಮವಾರದವರೆಗೆ ಜಿಲ್ಲಾ ಮಟ್ಟದಲ್ಲಿ ಲಾಕ್‍ಡೌನ್ ಮಾಡಲು ನಿರ್ಧರಿಸಲಾಗಿದೆ.

    ತರಕಾರಿ, ಮೆಡಿಕಲ್ ಶಾಪ್‍ಗಳು, ಪೆಟ್ರೋಲ್ ಬಂಕ್‍ಗಳು ಸೇರಿದಂತೆ ಕಾರ್ಮಿಕರ ಅನುಕೂಲ ನೋಡಿಕೊಂಡು ಸರ್ಕಾರಿ ಆಹಾರ ಮಳಿಗೆಗಳಿಗೆ ಮಾತ್ರ ವಿನಾಯಿತಿ ಕೊಡಲಾಗಿದೆ. ಜಿಲ್ಲೆಯಲ್ಲಿ ಸರ್ಕಾರಿ ಸಾರಿಗೆ ಸ್ತಬ್ಧವಾಗಲಿದ್ದು, ಮೆಡಿಕಲ್, ಆಸ್ಪತ್ರೆ ಒಳಗೊಂಡಂತೆ ತುರ್ತು ಸೇವೆಗಳಿಗೆ ಮಾತ್ರ ಆಟೋ ಇತ್ಯಾದಿ ವಾಹನಗಳನ್ನು ಬಳಸಬಹುದು ಎಂದು ಅನೀಸ್ ಕೆ.ಜಾಯ್ ಅವರು ತಿಳಿಸಿದ್ದಾರೆ.

    ಈಗಾಗಲೇ ಎಸ್‍ಎಸ್‍ಎಲ್‍ಸಿ ಪರೀಕ್ಷೆಯ ಮೌಲ್ಯಮಾಪನ ನಡೆಯುತ್ತಿದ್ದು, ಇಲ್ಲಿಗೆ ಹಾಜರಾಗುವ ಶಿಕ್ಷಕರಿಗೆ ಸ್ವಂತ ವಾಹನ ಅಥವಾ ನಿಗದಿಪಡಿಸಿರುವ ಬಸ್‍ಗಳಲ್ಲಿ ಬರುವಂತೆ ಸೂಚಿಸಿದ್ದೇವೆ. ಕರ್ತವ್ಯಕ್ಕೆ ಹಾಜರಾಗುವಾಗ ತಮ್ಮ ಗುರುತಿನ ಚೀಟಿಯನ್ನು ಕಡ್ಡಾಯವಾಗಿ ತರಬೇಕು. ಇದೇ ನಿಯಮಗಳನ್ನು ಜುಲೈ 31ರವಗೆ ಮುಂದುವರೆಸಲು ತೀರ್ಮಾನಿಸಲಾಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಪಬ್ಲಿಕ್ ಟಿವಿಗೆ ತಿಳಿಸಿದ್ದಾರೆ.

  • ಮುಂಬೈನಲ್ಲಿ ಮಾಸ್ಕ್ ಕಡ್ಡಾಯ – ಧರಿಸದೇ ಹೊರಬಂದರೆ ಅರೆಸ್ಟ್

    ಮುಂಬೈನಲ್ಲಿ ಮಾಸ್ಕ್ ಕಡ್ಡಾಯ – ಧರಿಸದೇ ಹೊರಬಂದರೆ ಅರೆಸ್ಟ್

    – ಮನೆಯಲ್ಲಿ ತಯಾರಿಸಿದ ಮಾಸ್ಕ್ ಧರಿಸಬಹುದು
    – ಹೆಚ್ಚಾಗುತ್ತಿರುವ ಕೊರೊನಾ ತಡೆಗಟ್ಟಲು ಕ್ರಮ

    ಮುಂಬೈ: ಭಾರತದಲ್ಲಿ ಕೊರೊನಾ ವೈರಸ್ ನ ಹಾಟ್‍ಸ್ಪಾಟ್ ಆಗಿರುವ ಮುಂಬೈನಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯ. ಒಂದೇ ವೇಳೆ ಮಾಸ್ಕ್ ಧರಿಸದೇ ಹೊರಬಂದರೆ ಅಂತವರನ್ನು ಅರೆಸ್ಟ್ ಮಾಡಲಾಗುವುದು ಎಂದು ಮಹಾನಗರ ಪಾಲಿಕೆ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

    ಜನರು ಧರಿಸುವ ಮಾಸ್ಕ್ ಗಳು ಕೆಮಿಕಲ್ ಇರುವ ಉತ್ತಮ ಗುಣಮಟ್ಟದ್ದು ಆಗಿರಬಹುದು ಅಥವಾ ಮನೆಯಲ್ಲಿ ತಯಾರಿಸಿದ ತೊಳೆಯಬಹುದಾದ ಮಾಸ್ಕ್ ಗಳನ್ನಾದರು ಧರಿಸಬಹುದು. ಆದರೆ ಎಲ್ಲಾ ಸಾರ್ವಜನಿಕ ಸ್ಥಳಗಳು, ಕಚೇರಿಗಳು, ಸಭೆಗಳು ಮತ್ತು ವಾಹನಗಳ ಒಳಗೂ ಮಾಸ್ಕ್ ಗಳನ್ನು ಧರಿಸುವುದು ಕಡ್ಡಾಯವಾಗಿರುತ್ತದೆ ಎಂದು ಮುಂಬೈ ನಗರ ಪಾಲಿಕೆ ಆಯುಕ್ತ ಪ್ರವೀಣ್ ಪರದೇಶಿ ಆದೇಶಿಸಿದ್ದಾರೆ.

    ಈ ವಿಚಾರವಾಗಿ ಇಂದು ಮಾತನಾಡಿದ್ದ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು, ಜನರು ದಿನಬಳಕೆ ವಸ್ತುಗಳನ್ನು ಕೊಂಡುಕೊಳ್ಳಲು ತಮ್ಮ ಮನೆಗಳಿಂದ ಹೊರಗೆ ಹೋಗುವಾಗ ಮಾಸ್ಕ್ ಬಳಸಬೇಕೆಂದು ಒತ್ತಾಯಿಸಿದ್ದರು.

    ಈಗಾಗಲೇ ಚಂಡೀಗಢ, ನಾಗಾಲ್ಯಾಂಡ್ ಮತ್ತು ಒಡಿಶಾದಲ್ಲಿ ಅಲ್ಲಿನ ಅಧಿಕಾರಿಗಳು ಮಾಸ್ಕ್ ಧರಿಸುವುದನ್ನು ಕಡ್ಡಾಯ ಎಂದು ಆದೇಶ ಮಾಡಿದ್ದಾರೆ.

    2 ಕೋಟಿಗಿಂತ ಹೆಚ್ಚು ಜನಸಂಖ್ಯೆ ಹೊಂದಿರುವ ಮುಂಬೈ ಮತ್ತು ಅದರ ಉಪನಗರಗಳಲ್ಲಿ ಇಲ್ಲಿಯವರೆಗೆ 782 ಕೊರೊನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ. ಇದರ ಜೊತೆಗೆ 50 ಜನರು ಕೊರೊನಾದಿಂದ ಸಾವನ್ನಪ್ಪಿದ್ದಾರೆ ಎಂದು ಇಂದಿನ ಆರೋಗ್ಯ ಬುಲೆಟಿನ್ ನಲ್ಲಿ ವರದಿಯಾಗಿದೆ. ಈ ಅಂಕಿಅಂಶಗಳ ಮೂಲಕ ಮಹಾರಾಷ್ಟ್ರ ದೇಶದಲ್ಲೇ ಅತಿ ಹೆಚ್ಚು ಕೊರೊನಾ ಪ್ರಕರಣ ಹೊಂದಿರುವ ರಾಜ್ಯ ಎಂದು ಗುರುತಿಸಿಕೊಂಡಿದೆ.

    ಮಹಾರಾಷ್ಟ್ರದಲ್ಲಿ ಇನ್ನೊಂದು ಅಘಾತಕಾರಿ ಸಂಗತಿ ಎಂದರೆ, ಇಂದು ಕೂಡ ಹೆಚ್ಚು ಜನರು ವಾಸಿಸುವ ಧಾರವಿ ಸ್ಲಂನಲ್ಲಿ ಎರಡು ಹೊಸ ಕೊರೊನಾ ಪ್ರಕರಣಗಳು ಕಂಡು ಬಂದಿವೆ. ಈ ಮೂಲಕ ಏಷ್ಯಾದ ಅತೀ ದೊಡ್ಡ ಸ್ಲಂ ಆಗಿರುವ ಧಾರವಿಯಲ್ಲಿ ಸುಮಾರು 9 ಕೊರೊನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ.