Tag: ಆಧುನಿಕ ಭಗೀರಥ

  • ಆಧುನಿಕ ಭಗೀರಥ ಖ್ಯಾತಿಯ ಕಾಮೇಗೌಡ ನಿಧನ

    ಆಧುನಿಕ ಭಗೀರಥ ಖ್ಯಾತಿಯ ಕಾಮೇಗೌಡ ನಿಧನ

    ಮಂಡ್ಯ: ಪರಿಸರ ಪ್ರೇಮಿ, ರಾಜ್ಯೋತ್ಸವ ಸೇರಿದಂತೆ ಹಲವು ಪ್ರಶಸ್ತಿಗಳನ್ನು ಪಡೆದಿದ್ದ ಆಧುನಿಕ ಭಗೀರಥ ಖ್ಯಾತಿಯ (Modern Bhagirath) ಮಂಡ್ಯ (Mandya) ಜಿಲ್ಲೆಯ ಮಳವಳ್ಳಿ ತಾಲೂಕಿನ ದಾಸದೊಡ್ಡಿಯ ಕೆರೆ ಕಾಮೇಗೌಡ (84) (Kamegowda) ಇಂದು ಅನಾರೋಗ್ಯದಿಂದ ಸಾವನ್ನಪ್ಪಿದ್ದಾರೆ.

    ನೀಲಿ ವೆಂಕಟಗೌಡ, ರಾಜಮ್ಮ ದಂಪತಿಯ ಮಗ ಕಾಮೇಗೌಡರು ಶಾಲೆಯ ಮೆಟ್ಟಿಲು ಏರಿದವರಲ್ಲ. ಆದರೆ ತಮಗಿದ್ದ ಪರಿಸರ ಕಾಳಜಿಯಿಂದ ಅನೇಕರ ಮೆಚ್ಚುಗೆಗೆ ಪಾತ್ರರಾಗಿದ್ದರು.

    ಮಳವಳ್ಳಿ ತಾಲೂಕಿನ ಕುಂದೂರು ಬೆಟ್ಟದಲ್ಲಿ ಅಂತರ್ಜಲ ಹೆಚ್ಚಳಕ್ಕೆ ಹಾಗೂ ಪ್ರಾಣಿ ಪಕ್ಷಿಗಳಿಗೆ ಉಪಯೋಗವಾಗಲಿ ಎಂದು ಕಾಮೇಗೌಡ ಅವರು ಸ್ವತಃ ತಮ್ಮ ಕೈಯಲ್ಲಿ 16 ಕೆರೆಗಳನ್ನು ನಿರ್ಮಾಣ ಮಾಡಿದ್ದರು. ಜೊತೆಗೆ ಸಾವಿರಾರು ಗಿಡಗಳನ್ನು ನೆಟ್ಟು ಬೆಟ್ಟದಲ್ಲಿ ಹಸಿರು ಕ್ರಾಂತಿ ಮಾಡುವ ಮೂಲಕ ಪರಿಸರ ಕಾಳಜಿಯನ್ನು ಕಾಮೇಗೌಡರು ಮೆರೆದಿದ್ದರು. ಇದನ್ನೂ ಓದಿ: ಪರೇಶ್ ಮೇಸ್ತಾ ಕೇಸ್ ರೀ ಓಪನ್‍ಗೆ ಒತ್ತಡ – ಸರ್ಕಾರ ಸೈಲೆಂಟ್

    ಇವರ ಈ ಕಾರ್ಯವನ್ನು ಮೆಚ್ಚಿ ಪ್ರಧಾನ ಮಂತ್ರಿ ಅವರ ಜನಪ್ರಿಯ ಕಾರ್ಯಕ್ರಮವಾದ ಮನ್ ಕೀ ಬಾತ್ ಕಾರ್ಯಕ್ರಮಕ್ಕೆ ಕಾಮೇಗೌಡರನ್ನು ಆಹ್ವಾನ ಮಾಡಲಾಗಿತ್ತು. ಆ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕಾಮೇಗೌಡರ ಕಾರ್ಯವನ್ನು ಶ್ಲಾಘನೆ ಮಾಡಿ ಹೊಗಳಿದ್ದರು. ಕಾಮೇಗೌಡರ ಕೆಲಸವನ್ನು ಗುರುತಿಸಿ ರಾಜ್ಯೋತ್ಸವ ಸೇರಿದಂತೆ ಹಲವು ಪ್ರಶಸ್ತಿಗಳನ್ನು ನೀಡಲಾಗಿದೆ.

    ಕಳೆದ ರಾತ್ರಿ ಕಾಮೇಗೌಡ ಅವರಿಗೆ ತೀವ್ರವಾದ ಹೊಟ್ಟೆ ನೋವು ಕಾಣಿಸಿಕೊಂಡಿದ್ದು, ಇದಾದ ನಂತರ ವಾಂತಿಯನ್ನು ಮಾಡಿಕೊಂಡಿದ್ದಾರೆ. ಬಳಿಕ ಮನೆಯಲ್ಲಿ ಕಾಮೇಗೌಡರು ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ರಿಷಿ ಸುನಾಕ್‌ಗೆ ಸಿಗುತ್ತಾ ಬ್ರಿಟನ್ ಪ್ರಧಾನಿ ಹುದ್ದೆ?

    ಕೆರೆ ನಿರ್ಮಾಣಕ್ಕೆ ಕೈ ಹಾಕಿದ್ಯಾಕೆ ಕಾಮೇಗೌಡರು?
    ಕುರಿಗಾಹಿಯಾಗಿದ್ದ ಕಾಮೇಗೌಡರು ಸುಮಾರು 15 ವರ್ಷಗಳ ಹಿಂದೆ ಕುಂದೂರು ಬೆಟ್ಟಕ್ಕೆ ಕುರಿ ಮೇಯಿಸಲು ಹೋಗಿದ್ದರು. ಆಗ ವಿಪರೀತ ದಾಹವಾಗಿ ನೀರಿಗಾಗಿ ಪರದಾಡಿದ್ದರು. ಬಳಿಕ ಸ್ವಲ್ಪ ದೂರದ ಮನೆಗೆ ಹೋಗಿ ನೀರು ಕೇಳಿ ಪಡೆದಿದ್ದರು. ಆಗ ನಾನು ದಾಹ ತೀರಿಸಿಕೊಂಡೆ ಆದರೆ ಪ್ರಾಣಿಗಳ ಪರಿಸ್ಥಿತಿ ಏನು ಎನ್ನುವ ಚಿಂತೆ ಅವರಿಗೆ ಕಾಡಿತ್ತು. ಹೀಗಾಗಿ ಗುಡ್ಡದಲ್ಲಿ ಕೆರೆ ನಿರ್ಮಾಣಕ್ಕೆ ಮುಂದಾದರು.

    ಕಾಮೇಗೌಡರು ಗುಡ್ಡದಲ್ಲಿ ಕೆರೆ ತೋಡುತ್ತಿದ್ದನ್ನು ಕಂಡು ಆರಂಭದಲ್ಲಿ ಅನೇಕರು ಗೇಲಿ ಮಾಡಿದ್ದರು. ಇವನಿಗೆ ಹುಚ್ಚು ಹಿಡಿದಿದೆ, ಅದಕ್ಕೆ ಇಲ್ಲಿ ಕೆರೆ ತೋಡುತ್ತಿದ್ದಾನೆ ಎಂದು ಮಾತನಾಡಿದ್ದರು. ಆದರೆ ಇದಕ್ಕೆಲ್ಲ ತಲೆ ಕೆಡಿಸಿಕೊಳ್ಳದ ಕಾಮೇಗೌಡರು, ತಮ್ಮ ಕೆಲಸವನ್ನು ಮುಂದುವರಿಸಿದ್ದರು. ಬಳಿಕ 16 ಕೆರೆಗಳನ್ನು ನಿರ್ಮಿಸಿ ಪ್ರಧಾನಿ ಮೋದಿ, ದೇಶದ ಜನರ ಮೆಚ್ಚುಗೆಗೆ ಪಾತ್ರರಾಗಿದ್ದರು.

    ಕಾಮೇಗೌಡರು ತೋಡಿದ ಕೆರೆಗಳಲ್ಲಿ ಕಡು ಬೇಸಿಗೆಯಲ್ಲಿ ಕೂಡ ನೀರು ತುಂಬಿರುತ್ತದೆ. ದಕ್ಷಿಣ ಕರ್ನಾಟಕದ ಇತರ ಭಾಗಗಳಲ್ಲಿ ನೀರು ಕಡಿಮೆಯಾದರೂ ಇವರು ತೋಡಿದ ಕೆರೆಗಳಲ್ಲಿ ನೀರು ತುಂಬಿರುತ್ತಿತ್ತು. ತಮ್ಮ ಕುರಿಗಳನ್ನು ಮತ್ತು ಜಾನುವಾರುಗಳನ್ನು ಮೇಯಿಸುವಾಗ ಪರ್ವತ ಪ್ರದೇಶದ ಕಣಿವೆಗಳಲ್ಲಿ ನೀರು ಸಿಗದೇ ಪರಿತಪಿಸುತ್ತಿರುವ ಪ್ರಾಣಿ-ಪಕ್ಷಿಗಳನ್ನು ಕಂಡು ಕೆರೆಗಳನ್ನು ಅಗೆಯುವ ಆಲೋಚನೆ ಹೊಳೆಯಿತು ಎಂದು ಕಾಮೇಗೌಡರು ಈ ಹಿಂದೆ ಹೇಳಿದ್ದರು.

    Live Tv
    [brid partner=56869869 player=32851 video=960834 autoplay=true]

  • ಏಕಾಂಗಿಯಾಗಿ ಬಾವಿ ತೋಡಿ ನೀರು ತಂದ ಎಂಟೆಕ್ ಪದವೀಧರ

    ಏಕಾಂಗಿಯಾಗಿ ಬಾವಿ ತೋಡಿ ನೀರು ತಂದ ಎಂಟೆಕ್ ಪದವೀಧರ

    ಬೀದರ್: ಕೃಷಿಗಾಗಿ ಸತತ 5 ತಿಂಗಳಿನಿಂದ ಏಕಾಂಗಿಯಾಗಿ ಬಾವಿ ತೋಡಿದ ಎಂಟೆಕ್ ಪದವೀಧರರೊಬ್ಬರು ನೀರು ತಂದು ಆಧುನಿಕ ಭಗೀರಥ ಎನಿಸಿಕೊಂಡಿದ್ದಾರೆ.

    ಜಿಲ್ಲೆಯ ಔರಾದ್ ತಾಲೂಕಿನ ಸೂರ್ಯಕಾಂತ್ ಪ್ರಭು ಎಂಟೆಕ್ ಓದಿದ್ದಾರೆ. 25/30 ವಿಸ್ತೀರ್ಣದ 14 ಅಡಿ ಬಾವಿಯನ್ನು ಬಬ್ಬರೇ ತೋಡಿ ನೀರು ತೆಗೆದಿದ್ದಾರೆ. ಎಂಟೆಕ್ ಮಾಡಿ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಸೂರ್ಯಕಾಂತ್ ಲಾಕ್‍ಡೌನ್ ವೇಳೆ ಕೃಷಿಯಲ್ಲಿ ಏನಾದರೂ ಸಾಧನೆ ಮಾಡಬೇಕು ಎಂಬ ಛಲದಿಂದ ಈ ಸಾಧನೆ ಮಾಡಿದ್ದಾರೆ. ಇದನ್ನೂ ಓದಿ: ಇಂದು ಕೇಂದ್ರ ಬಜೆಟ್ – ಆರ್ಥಿಕತೆಗೆ ಸಿಗುತ್ತಾ ‘ಬೂಸ್ಟರ್ ಡೋಸ್’..?

    ಮೊದ ಮೊದಲು ಈ ಪದವೀಧರನ ಈ ಸಾಹಸ ನೋಡಿ ಗ್ರಾಮಸ್ಥರು ಹುಚ್ಚು ಎನ್ನುತ್ತಿದ್ದರು. ಈಗ ಅದೇ ಗ್ರಾಮಸ್ಥರು ಅವರ ಬಾವಿಯಿಂದ ನೀರು ತೆಗೆದುಕೊಂಡು ಹೋಗುತ್ತಿದ್ದಾರೆ. ಬಾವಿ ನೀರಿನಿಂದ 400 ಗಡಿಗಳನ್ನು ಬೆಳಸಿರುವ ಸೂರ್ಯಕಾಂತ್ ಛಲಕ್ಕೆ ಜಿಲ್ಲೆಯ ಜನರು ಜೈಕಾರ ಹಾಕುತ್ತಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ಭ್ರಷ್ಟಾಚಾರದ ಬಗ್ಗೆ ಮಾತನಾಡಲು ಬಿಜೆಪಿಗೆ ನೈತಿಕತೆಯಿಲ್ಲ: ಲಕ್ಷ್ಮೀ ಹೆಬ್ಬಾಳ್ಕರ್

    ತಮ್ಮ ಸಾಧನೆ ಕುರಿತು ಪಬ್ಲಿಕ್ ಟಿವಿ ಜೊತೆಗೆ ಮಾತನಾಡಿದ ಸೂರ್ಯಕಾಂತ್‍ರವರು, ಮೊದಲು ಎಲ್ಲರು ಹುಚ್ಚ ಎಂದು ಕರೆಯುತ್ತಿದ್ದರು. ಈಗ ಅದೇ ಗ್ರಾಮಸ್ಥರು ಇಲ್ಲಿಂದಲೇ ನೀರು ತೆಗೆದುಕೊಂಡು ಹೋಗುತ್ತಿದ್ದು ನನಗೆ ಬಹಳ ಖುಷಿಯಾಗುತ್ತದೆ ಎಂದು ಸಂತಸ ವ್ಯಕ್ತಪಡಿಸಿದರು.