Tag: ಆನಂದ್ ಶರ್ಮಾ

  • ಅಜಾದ್‌ ಬೆನ್ನಲ್ಲೇ ಕಾಂಗ್ರೆಸ್‌ನ ಮಹತ್ವದ ಹುದ್ದೆಗೆ ಆನಂದ್‌ ಶರ್ಮಾ ರಾಜೀನಾಮೆ

    ಅಜಾದ್‌ ಬೆನ್ನಲ್ಲೇ ಕಾಂಗ್ರೆಸ್‌ನ ಮಹತ್ವದ ಹುದ್ದೆಗೆ ಆನಂದ್‌ ಶರ್ಮಾ ರಾಜೀನಾಮೆ

    ನವದೆಹಲಿ: ಗುಲಾಂ ನಬಿ ಅಜಾದ್‌ ಬೆನ್ನಲ್ಲೇ ಕೇಂದ್ರದ ಮಾಜಿ ಸಚಿವ ಆನಂದ್ ಶರ್ಮಾ ಅವರು ಹಿಮಾಚಲ ಪ್ರದೇಶ ಕಾಂಗ್ರೆಸ್‌ನ ಸಂಚಾಲಕ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

    ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಪತ್ರ ಬರೆದು ರಾಜೀನಾಮೆ ನೀಡಿರುವುದಾಗಿ ತಿಳಿಸಿದ್ದಾರೆ. ಸಮಾಲೋಚನೆ ಪ್ರಕ್ರಿಯೆಯಲ್ಲಿ ತಮ್ಮನ್ನು ಕಡೆಗಣಿಸಲಾಗಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

    ಕಾಂಗ್ರೆಸ್‌ನ ಹಿರಿಯ ನಾಯಕ ಗುಲಾಂ ನಬಿ ಆಜಾದ್ ಅರು ರಾಜೀನಾಮೆ ನೀಡಿದ 5 ದಿನದ ಬಳಿಕ ಆನಂದ್‌ ಶರ್ಮಾ ರಾಜೀನಾಮೆ ನೀಡಿದ್ದಾರೆ. ಆಜಾದ್ ಅವರು ಆಗಸ್ಟ್ 16 ರಂದು ಜಮ್ಮು ಮತ್ತು ಕಾಶ್ಮೀರ ಕಾಂಗ್ರೆಸ್ ಪ್ರಚಾರ ಸಮಿತಿಯ ಮುಖ್ಯಸ್ಥರ ಹುದ್ದೆಗೆ ರಾಜೀನಾಮೆ ನೀಡಿದ್ದರು.  ಇದನ್ನೂ ಓದಿ: ಕಾಂಗ್ರೆಸ್ ನಾಯಕ ಆನಂದ್ ಶರ್ಮಾ, ಜೆಪಿ ನಡ್ಡಾ ಭೇಟಿ- ಬಿಜೆಪಿ ಸೇರ್ಪಡೆ?

    ರಾಜೀನಾಮೆ ನೀಡಿದ್ದರೂ ರಾಜ್ಯದಲ್ಲಿ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ಮಾಡುತ್ತೇನೆ ಎಂದು ಆನಂದ್‌ ಸಿಂಗ್‌ ಹೇಳಿದ್ದಾರೆ.

    ರಾಜ್ಯಸಭೆಯಲ್ಲಿ ಕಾಂಗ್ರೆಸ್‌ನ ಉಪ ನಾಯಕನಾಗಿರುವ ಶರ್ಮಾ ಅವರನ್ನು ಏಪ್ರಿಲ್ 26 ರಂದು ಹಿಮಾಚಲ ಪ್ರದೇಶದ ಸಂಚಾಲಕ ಸಮಿತಿಯ ಅಧ್ಯಕ್ಷರನ್ನಾಗಿ ನೇಮಿಸಲಾಗಿತ್ತು

    ಆಜಾದ್‌, ಆನಂದ್‌ ಶರ್ಮಾ, ಭೂಪಿಂದರ್ ಸಿಂಗ್ ಹೂಡಾ ಮತ್ತು ಮನೀಶ್ ತಿವಾರಿ ಸೇರಿದಂತೆ ಹಿರಿಯ ನಾಯಕರು ಕಾಂಗ್ರೆಸ್‌ ಪಕ್ಷದ ಬಲವರ್ಧನೆಗೆ ಆಂತರಿಕ ಚುನಾವಣೆ ನಡೆಸಬೇಕು ಎಂದು ಆಗ್ರಹಿಸುತ್ತಿದ್ದಾರೆ.

    ಈ ವರ್ಷಾಂತ್ಯದಲ್ಲಿ ಹಿಮಾಚಲ ಪ್ರದೇಶದಲ್ಲಿ ಚುನಾವಣೆ ನಡೆಯಲಿದ್ದು ಆಡಳಿತಾರೂಢ ಬಿಜೆಪಿಯನ್ನು ಸೋಲಿಸಲು ಕಾಂಗ್ರೆಸ್‌ ಹರಸಾಹಸ ಪಡುತ್ತಿದೆ.

    Live Tv
    [brid partner=56869869 player=32851 video=960834 autoplay=true]

  • ಕಾಂಗ್ರೆಸ್ ನಾಯಕ ಆನಂದ್ ಶರ್ಮಾ, ಜೆಪಿ ನಡ್ಡಾ ಭೇಟಿ- ಬಿಜೆಪಿ ಸೇರ್ಪಡೆ?

    ಕಾಂಗ್ರೆಸ್ ನಾಯಕ ಆನಂದ್ ಶರ್ಮಾ, ಜೆಪಿ ನಡ್ಡಾ ಭೇಟಿ- ಬಿಜೆಪಿ ಸೇರ್ಪಡೆ?

    ಶಿಮ್ಲಾ: ಹಿಮಾಚಲ ಪ್ರದೇಶ ಕಾಂಗ್ರೆಸ್ ನಾಯಕ ಆನಂದ್ ಶರ್ಮಾ ಗುರುವಾರ ಸಂಜೆ ಬಿಜೆಪಿ ಮುಖ್ಯಸ್ಥ ಜೆಪಿ ನಡ್ಡಾ ಅವರನ್ನು ಭೇಟಿಯಾಗಿದ್ದಾರೆ. ಈ ಮೂಲಕ ಆನಂದ್ ಶರ್ಮಾ ಬಿಜೆಪಿ ಸೇರ್ಪಡೆ ಬಗ್ಗೆ ಊಹಾಪೋಹಗಳಿಗೆ ಎಡೆಮಾಡಿ ಕೊಟ್ಟಿದ್ದಾರೆ.

    ಆನಂದ್ ಶರ್ಮಾ ಸಂಸತ್ತಿನ ಮೇಲ್ಮನೆಗೆ ಆಯ್ಕೆಯಾಗಿದ್ದು, ಹಿಮಾಚಲ ಪ್ರದೇಶ ಅಸೆಂಬ್ಲಿ ಚುನಾವಣೆಗೆ ತಿಂಗಳು ಬಾಕಿಯಿರುವ ಮೊದಲೇ ಜೆಪಿ ನಡ್ಡಾ ಅವರನ್ನು ಭೇಟಿಯಾಗಿದ್ದಾರೆ. ಮೂಲಗಳ ಪ್ರಕಾರ ಆನಂದ್ ಶರ್ಮಾ ಬಿಜೆಪಿ ಸೇರ್ಪಡೆಯಾಗುವ ಕುರಿತು ಮಾತುಕತೆ ನಡೆಸಿದ್ದಾರೆ ಎಂದು ವರದಿಯಾಗಿದೆ. ಇದನ್ನೂ ಓದಿ: ವಿವಾದಾತ್ಮಕ ಟ್ವೀಟ್ – ಹರಿಯಾಣ ಬಿಜೆಪಿಯ ಐಟಿ ಸೆಲ್ ಮುಖ್ಯಸ್ಥ ವಜಾ

    ಈ ಬಗ್ಗೆ ಮಾತನಾಡಿರುವ ಶರ್ಮಾ, ನಾನು ಬಿಜೆಪಿ ನಾಯಕರನ್ನು ಬೇಟಿಯಾಗಬೇಕಿದ್ದರೆ ಬಹಿರಂಗವಾಗಿಯೇ ಹೋಗುತ್ತೇನೆ. ಅದರಲ್ಲಿ ತಪ್ಪೇನಿಲ್ಲ. ಮಾನು ಕಾಂಗ್ರೆಸ್‌ನಲ್ಲಿಯೇ ಇದ್ದೇನೆ. ಇದರರ್ಥ ನಾವು ಕೇವಲ ಸೈದ್ಧಾಂತಿಕ ವಿರೋಧಿಗಳು, ವೈಯಕ್ತಿಕವಾಗಿ ಅಲ್ಲ. ಸೈದ್ಧಾಂತಿಕ ವಿರೋಧಿಗಳು ಸಾಮಾಜಿಕವಾಗಿ ಶತ್ರುಗಳಾಗುವುದಿಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: ಜಪಾನ್ ಮಾಜಿ ಪ್ರಧಾನಿ ಶಿಂಜೋ ಅಬೆಗೆ ಗುಂಡೇಟು

    ಆನಂದ್ ಶರ್ಮಾ ತಮ್ಮ ಪಕ್ಷದ ನಾಯಕತ್ವದ ವಿರುದ್ಧ ಆಗಾಗ ಸಾರ್ವಜನಿಕವಾಗಿಯೂ ಅಸಮಾಧಾನವನ್ನು ಹೊರ ಹಾಕಿದ್ದರು. ಇದೀಗ ಜೆಪಿ ನಡ್ಡಾ ಭೇಟಿಯ ಬಳಿಕ ಕುತೂಹಲ ಹೆಚ್ಚಾಗಿದೆ.

    ಕಾಂಗ್ರೆಸ್ ಜಿ-23 ನಾಯಕರ ಪೈಕಿ ಒಬ್ಬರಾಗಿರುವ ಆನಂದ್ ಶರ್ಮಾ ಪಕ್ಷದಲ್ಲಿ ಬದಲಾವಣೆಗೆ ಆಗ್ರಹಿಸಿದ್ದರು.

    Live Tv
    [brid partner=56869869 player=32851 video=960834 autoplay=true]