Tag: ಆನೆ

  • ರೈಲ್ವೆ ಹಳಿ ಮೇಲೆ ಮರಿಗೆ ಜನ್ಮ ನೀಡಿದ ಕಾಡಾನೆ; 2 ಗಂಟೆ ನಿಂತ ರೈಲು – Video ನೋಡಿ..

    ರೈಲ್ವೆ ಹಳಿ ಮೇಲೆ ಮರಿಗೆ ಜನ್ಮ ನೀಡಿದ ಕಾಡಾನೆ; 2 ಗಂಟೆ ನಿಂತ ರೈಲು – Video ನೋಡಿ..

    ರಾಂಚಿ: ಕಾಡಾನೆಯೊಂದು (Elephant) ರೈಲ್ವೆ ಹಳಿಗಳ ಮೇಲೆ ಮರಿಗೆ ಜನ್ಮ ನೀಡಿದ ಪರಿಣಾಮ ಜಾರ್ಖಂಡ್‌ನಲ್ಲಿ (Jarkhand) ಸುಮಾರು ಎರಡು ಗಂಟೆಗಳ ಕಾಲ ರೈಲು ಸಂಚಾರ ಸ್ಥಗಿತಗೊಳಿಸಿದ ಅಪರೂಪದ ಘಟನೆ ನಡೆದಿದೆ.

    ಆನೆ ಮತ್ತು ಅದರ ಮರಿ ಸುರಕ್ಷಿತವಾಗಿವೆ. ಈ ಅಪರೂಪದ ದೃಶ್ಯವನ್ನು ಕ್ಯಾಮೆರಾದಲ್ಲಿ ಸೆರೆ ಹಿಡಿಯಲಾಗಿದೆ. ಕೇಂದ್ರ ಪರಿಸರ ಸಚಿವ ಭೂಪೇಂದರ್ ಯಾದವ್ ಅವರು ಈ ವೀಡಿಯೊವನ್ನು X ನಲ್ಲಿ ಹಂಚಿಕೊಂಡಿದ್ದು, ಇದು ಕರುಣೆಗೆ ಉದಾಹರಣೆ ಎಂದು ಬಣ್ಣಿಸಿದ್ದಾರೆ. ಇದನ್ನೂ ಓದಿ: ಕಳ್ಳ ಸಂಬಂಧ ಆರೋಪ – ಯುವಕನನ್ನ ಥಳಿಸಿ ಚಿಕ್ಕಮ್ಮನೊಂದಿಗೆ ಮದುವೆ ಮಾಡಿಸಿದ ಗ್ಯಾಂಗ್‌

    ಮಾನವ-ಪ್ರಾಣಿ ಸಂಘರ್ಷದ ಸುದ್ದಿಗಳ ಹೊರತಾಗಿ, ಮಾನವ-ಪ್ರಾಣಿಗಳ ಸಾಮರಸ್ಯದ ಅಸ್ತಿತ್ವದ ಈ ಉದಾಹರಣೆಯನ್ನು ಹಂಚಿಕೊಳ್ಳಲು ಸಂತೋಷವಾಗಿದೆ ಎಂದು ಯಾದವ್ ತಮ್ಮ ಪೋಸ್ಟ್‌ನಲ್ಲಿ ಹೇಳಿದ್ದಾರೆ.

    ಇಂತಹ ಹೃದಯಸ್ಪರ್ಶಿ ಫಲಿತಾಂಶಗಳನ್ನು ನೀಡುವ ಪ್ರಯತ್ನಗಳನ್ನು ನೋಡುವುದು ಸಂತೋಷಕರವಾಗಿದೆ. ಆನೆ ತನ್ನ ಮರಿಗೆ ಜನ್ಮ ನೀಡಲು ಸಹಾಯ ಮಾಡಿದ ಜಾರ್ಖಂಡ್ ಅರಣ್ಯ ಅಧಿಕಾರಿಗಳಿಗೆ ವಿಶೇಷ ಪ್ರಶಂಸೆ ಸಲ್ಲಿಸುತ್ತೇನೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಹಳಸಿದ ದಾಲ್ ಬಡಿಸಿದ್ದಕ್ಕೆ ಕ್ಯಾಂಟೀನ್ ಮಾಲೀಕನಿಗೆ ಹಿಗ್ಗಾಮುಗ್ಗಾ ಥಳಿಸಿದ ಶಾಸಕ

    ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ (MoEFCC), ರೈಲ್ವೆ ಸಚಿವಾಲಯದ ಸಮನ್ವಯದೊಂದಿಗೆ ಭಾರತದಾದ್ಯಂತ 3,500 ಕಿಮೀ ರೈಲ್ವೆ ಹಳಿಗಳನ್ನು ಸಮೀಕ್ಷೆ ಮಾಡಿದ ನಂತರ 110 ಕ್ಕೂ ಹೆಚ್ಚು ಸೂಕ್ಷ್ಮ ವನ್ಯಜೀವಿ ವಲಯಗಳನ್ನು ಗುರುತಿಸಿದೆ ಎಂದು ಯಾದವ್ ತಮ್ಮ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

    ಈ ಉಪಕ್ರಮವು ಪ್ರಾಣಿಗಳಿಗೆ ಸಂಬಂಧಿಸಿದ ಅಪಘಾತಗಳನ್ನು ತಡೆಗಟ್ಟುವ ಗುರಿಯನ್ನು ಹೊಂದಿದೆ. ವಿಶೇಷವಾಗಿ ಹಳಿಗಳು ಹೆಚ್ಚಾಗಿ ವನ್ಯಜೀವಿ ಕಾರಿಡಾರ್‌ಗಳೊಂದಿಗೆ ಛೇದಿಸುವ ಅರಣ್ಯ ಪ್ರದೇಶಗಳಲ್ಲಿವೆ.

  • ಮೇ 21 ರಂದು ವಿಧಾನಸೌಧದ ಮುಂದೆ ಆಂಧ್ರಕ್ಕೆ ಆನೆಗಳ ಹಸ್ತಾಂತರ

    ಮೇ 21 ರಂದು ವಿಧಾನಸೌಧದ ಮುಂದೆ ಆಂಧ್ರಕ್ಕೆ ಆನೆಗಳ ಹಸ್ತಾಂತರ

    – ಪವನ್ ಕಲ್ಯಾಣ್‌ಗೆ ಕುಮ್ಕಿ ಆನೆ ಹಸ್ತಾಂತರಿಸಲಿರುವ ಸಿಎಂ, ಡಿಸಿಎಂ

    ಬೆಂಗಳೂರು: ನೆರೆಯ ಆಂಧ್ರಪ್ರದೇಶಕ್ಕೆ ಮೇ 21 ರಂದು ಕುಮ್ಕಿ ಆನೆಗಳನ್ನು ಹಸ್ತಾಂತರಿಸಲಾಗುತ್ತಿದ್ದು, ಇದು ನೆರೆ ರಾಜ್ಯದೊಂದಿಗಿನ ಸೌಹಾರ್ದ ಸಂಬಂಧ ಹೆಚ್ಚಿಸುವುದರ ಜೊತೆಗೆ, ಕರ್ನಾಟಕ ಗಡಿ ಮತ್ತು ಆಂಧ್ರದ ಆನೆ-ಮಾನವ ಸಂಘರ್ಷಕ್ಕೆ ಪರಿಹಾರ ಒದಗಿಸಲಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ (Eshwara Khandre) ತಿಳಿಸಿದ್ದಾರೆ.

    ವಿಧಾನಸೌಧದ (Vidhan Soudha) ಮುಂಭಾಗದ ಮೆಟ್ಟಿಲುಗಳ ಮೇಲೆ ನಡೆಯಲಿರುವ ವಿಧ್ಯುಕ್ತ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (D.K.Shivakumar) ಅವರು, ಆಂಧ್ರಪ್ರದೇಶದ ಉಪ ಮುಖ್ಯಮಂತ್ರಿ ಹಾಗೂ ಅರಣ್ಯ ಸಚಿವ ಪವನ್ ಕಲ್ಯಾಣ್ (Pawan Kalyan) ಅವರಿಗೆ ಪಳಗಿಸಿದ ಆನೆಗಳನ್ನು ಹಸ್ತಾಂತರ ಮಾಡುವರು ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್‌ನ ಕೆಲ ಅಯೋಗ್ಯರು ದೇಶವಿರೋಧಿ ಹೇಳಿಕೆ ಕೊಡುತ್ತಿದ್ದಾರೆ – ಬಿವೈ ವಿಜಯೇಂದ್ರ ಕಿಡಿ

    ಕಳೆದ ಆಗಸ್ಟ್‌ನಲ್ಲಿ ಬೆಂಗಳೂರಿನಲ್ಲಿ ನಡೆದ ಆನೆ-ಮಾನವ ಸಂಘರ್ಷ ಕುರಿತ ಅಂತಾರಾಷ್ಟ್ರೀಯ ಸಮ್ಮೇಳನದ ವೇಳೆ ಕರ್ನಾಟಕ- ಆಂಧ್ರಪ್ರದೇಶ, ತೆಲಂಗಾಣ ಹಾಗೂ ಕೇರಳ ರಾಜ್ಯಗಳ ನಡುವೆ ಆಗಿರುವ ಉತ್ತಮ ರೂಢಿಗಳ ವಿನಿಮಯ ಒಪ್ಪಂದದ ಭಾಗವಾಗಿ ಈ ಆನೆಗಳನ್ನು ಆಂಧ್ರಪ್ರದೇಶಕ್ಕೆ ಹಸ್ತಾಂತರಿಸಲಾಗುತ್ತಿದೆ ಎಂದೂ ಖಂಡ್ರೆ ತಿಳಿಸಿದ್ದಾರೆ.

    ಕಳೆದ ವರ್ಷ ಆಗಸ್ಟ್ 8ರಂದು ಪವನ್ ಕಲ್ಯಾಣ್ ಅವರು ಬೆಂಗಳೂರಿಗೆ ಆಗಮಿಸಿ ತಮ್ಮನ್ನು ಭೇಟಿ ಮಾಡಿ ಆಂಧ್ರದಲ್ಲಿ ಹೆಚ್ಚುತ್ತಿರುವ ಪುಂಡಾನೆಗಳ ಸೆರೆಗೆ ಕುಮ್ಕಿ ಆನೆ ನೀಡುವಂತೆ ಮತ್ತು ತಮ್ಮ ರಾಜ್ಯದ ಮಾವುತರು ಮತ್ತು ಅರಣ್ಯ ಸಿಬ್ಬಂದಿಗೆ ಆನೆ ಸೆರೆ ಕಾರ್ಯಾಚರಣೆಯ ತರಬೇತಿ ನೀಡುವಂತೆ ಮನವಿ ಮಾಡಿದ್ದರು. ಸೆಪ್ಟೆಂಬರ್ 27ರಂದು ತಮ್ಮ ನೇತೃತ್ವದ ನಿಯೋಗ ವಿಜಯವಾಡಕ್ಕೆ ಭೇಟಿ ನೀಡಿದ್ದ ವೇಳೆ ಈ ಸಂಬಂಧ ಎರಡೂ ರಾಜ್ಯಗಳ ನಡುವೆ ತಿಳಿವಳಿಕೆ ಒಪ್ಪಂದಕ್ಕೆ ಸಹಿ ಹಾಕಲಾಗಿತ್ತು. ಮೇ 21ರಂದು ಈ ಆನೆಗಳನ್ನು ಹಸ್ತಾಂತರ ಮಾಡಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ. ಇದನ್ನೂ ಓದಿ: ಮುಂದಿನ ನಾಲ್ಕು ದಿನ ರಾಜ್ಯದಲ್ಲಿ ಭಾರೀ ಮಳೆಯ ಮುನ್ಸೂಚನೆ – ಎಲ್ಲೆಲ್ಲಿ?

    ಗಡಿ ಜಿಲ್ಲೆ ಆನೆ ಸಮಸ್ಯೆಗೂ ಪರಿಹಾರ:
    ಆಂಧ್ರಪ್ರದೇಶದ ಚಿತ್ತೂರು ಗಡಿಗೆ ಹೊಂದಿಕೊಂಡಿರುವ ಕೋಲಾರ ಜಿಲ್ಲೆ ವ್ಯಾಪ್ತಿಯಲ್ಲೂ ಆನೆ- ಮಾನವ ಸಂಘರ್ಷ ಹೆಚ್ಚುತ್ತಿದ್ದು, ನೆರೆಯ ಆಂಧ್ರಪ್ರದೇಶದಿಂದ ನಮ್ಮ ರಾಜ್ಯಕ್ಕೆ ಪುಂಡಾನೆಗಳು ಬಾರದಂತೆ ತಡೆಯಲೂ ಆಂಧ್ರ ನಡೆಸಲಿರುವ ಆನೆ ಸೆರೆ ಕಾರ್ಯಾಚರಣೆ ಮುಂದಿನ ದಿನಗಳಲ್ಲಿ ನೆರವಾಗಲಿದೆ. ಈ ನಿಟ್ಟಿನಲ್ಲಿ ಕುಮ್ಕಿ ಆನೆಗಳ ಹಸ್ತಾಂತರದಿಂದ ರಾಜ್ಯಕ್ಕೂ ಪರೋಕ್ಷವಾಗಿ ಲಾಭವಾಗಲಿದೆ ಎಂದು ಈಶ್ವರ ಖಂಡ್ರೆ ತಿಳಿಸಿದ್ದಾರೆ.

    ದಸರಾ ಆನೆ ಹಸ್ತಾಂತರ ಇಲ್ಲ:
    ಕರ್ನಾಟಕದ ಹೆಮ್ಮೆಯ ದಸರಾ ಮಹೋತ್ಸವದಲ್ಲಿ ಪಾಲ್ಗೊಂಡಿರುವ ಅಥವಾ ದಸರಾ ಮಹೋತ್ಸವಕ್ಕಾಗಿ ಈಗಾಗಲೇ ಗುರುತಿಸಲಾಗಿರುವ ಯಾವುದೇ ಕುಮ್ಕಿ ಆನೆಯನ್ನು ಆಂಧ್ರಪ್ರದೇಶಕ್ಕೆ ನೀಡಲಾಗುತ್ತಿಲ್ಲ ಎಂದೂ ಈಶ್ವರ ಖಂಡ್ರೆ ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡರ ಹುಟ್ಟುಹಬ್ಬ – ಮೋದಿ, ಸಿದ್ದರಾಮಯ್ಯ ಸೇರಿ ಗಣ್ಯರಿಂದ ಶುಭಾಶಯ

  • ಬಿಎಂಟಿಸಿಯನ್ನು ಅಡ್ಡಗಟ್ಟಿದ ಗಜಪಡೆ – ಪ್ರಯಾಣಿಕರು ಶಾಕ್

    ಬಿಎಂಟಿಸಿಯನ್ನು ಅಡ್ಡಗಟ್ಟಿದ ಗಜಪಡೆ – ಪ್ರಯಾಣಿಕರು ಶಾಕ್

    ಬೆಂಗಳೂರು: ಬಿಎಂಟಿಸಿ ಬಸ್ (BMTC Bus) ಅನ್ನು ಸಾಕಾನೆಗಳ ಹಿಂಡು ಅಡ್ಡಗಟ್ಟಿದೆ. ಗಜಪಡೆಯನ್ನು (Elephant) ನೋಡಿದ ಬಸ್‌ನಲ್ಲಿದ್ದ ಪ್ರಯಾಣಿಕರು ಒಂದು ಕ್ಷಣ ಶಾಕ್‌ಗೆ ಒಳಗಾಗಿದ್ದಾರೆ. ಅದೃಷ್ಟವಶಾತ್ ಯಾರಿಗೆ ಏನೂ ಮಾಡದೇ ಗಜಪಡೆ ಅರಣ್ಯದೊಳಗೆ ನುಗ್ಗಿವೆ.

    ಬನ್ನೇರುಘಟ್ಟ (Bannerghatta) ಜೈವಿಕ ಉದ್ಯಾನವನದ ಸಾಕಾನೆಗಳ ಹಿಂಡು ಬೆಂಗಳೂರು (Bengaluru) ಹೊರವಲಯದ ಮುಖ್ಯರಸ್ತೆಗೆ ಲಗ್ಗೆಯಿಟ್ಟಿವೆ. ಪಾರ್ಕಿನ ಸಾಕಾನೆಗಳನ್ನ ಮೇಯಲು ಬಿಡಲಾಗಿತ್ತು. ಈ ವೇಳೆ ಕಾಡಂಚಿನ ಗ್ರಾಮಕ್ಕೆ ಬಂದು ಆತಂಕ ಸೃಷ್ಟಿಸಿತ್ತು. ಬೆಳಗ್ಗೆ 8 ಗಂಟೆ ಸುಮಾರಿಗೆ ಕಗ್ಗಲಿಪುರ ಸಮೀಪದ ಗುಲ್ಲಹಟ್ಟಿ ಕಾವಲ್ ಗ್ರಾಮದ ಮುಖ್ಯ ರಸ್ತೆಯಲ್ಲಿ ಬಿಎಂಟಿಸಿ ಬಸ್‌ಗೆ ಆನೆಗಳು ಅಡ್ಡ ಬಂದಿವೆ. ಇದನ್ನು ನೋಡಿದ ಬಸ್ ಚಾಲಕ, ಬಸ್ ನಿಲ್ಲಿಸಿದ್ದು, ಪ್ರಯಾಣಿಕರು ಒಂದು ಕ್ಷಣ ಗಾಬರಿಗೆ ಒಳಗಾದರು. ಇದನ್ನೂ ಓದಿ: Explainer| ಏನಿದು ಪಬ್ಲಿಕ್‌ ಟಿವಿ ವಿದ್ಯಾಪೀಠ? ವಿದ್ಯಾರ್ಥಿಗಳಿಗೆ ಏನು ಲಾಭ? ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ

    ಕೆಆರ್ ಮಾರ್ಕೆಟ್‌ನಿಂದ ಗುಳ್ಳಹಟ್ಟಿ ಕಾವಲ್‌ಗೆ ಬಸ್ ಹೊರಟಿತ್ತು. ಗುಲ್ಲಹಟ್ಟಿ ಗ್ರಾಮದ ಮುಖ್ಯರಸ್ತೆಯಲ್ಲಿ ಈ ಕಾಡಾನೆಗಳ ದಂಡು ಎಂಟ್ರಿಯಾಗಿತ್ತು. ಗ್ರಾಮದವರು ಕೂಡಲೇ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ತಿಳಿಸಿದ್ದರು. ಸ್ಥಳಕ್ಕೆ ಧಾವಿಸಿದ ಅರಣ್ಯ ಸಿಬ್ಬಂದಿ ಎಂಟು ಸಾಕಾನೆಗಳನ್ನು ಬನ್ನೇರುಘಟ್ಟ ಅರಣ್ಯಕ್ಕೆ ಓಡಿಸಿದರು. ಬನ್ನೇರುಘಟ್ಟ ಕಾಡಿನೊಳಗೆ ಸಾಕಾನೆಗಳನ್ನ ಮೊನ್ನೆರಾತ್ರಿ ಮೇಯಲು ಬಿಡಲಾಗಿತ್ತು. ಅದೇ ಆನೆಗಳ ಹಿಂಡು ಬೆಳಗ್ಗೆ ಕಾಡಂಚಿನ ಗುಲ್ಲಹಟ್ಟಿ ಕಾವಲ್ ಗ್ರಾಮದ ಮುಖ್ಯರಸ್ತೆಗೆ ಬಂದಿವೆ. ಕಾಡಾನೆಗಳು ಅಂತ ಗಾಬರಿಪಟ್ಟಿದ್ದ ಗ್ರಾಮಸ್ಥರು, ಅರಣ್ಯಾಧಿಕಾರಿಗಳು ಮತ್ತೆ ಕಾಡಿಗೆ ಓಡಿಸುತ್ತಿದ್ದಂತೆ ನಿಟ್ಟುಸಿರು ಬಿಟ್ಟಿದ್ದಾರೆ. ಇದೇ ಮೊದಲ ಬಾರಿಗೆ ಮುಖ್ಯರಸ್ತೆಗೆ ಬಂದ ಗಜಪಡೆಯನ್ನ ನೋಡಿ, ಅರ್ಧ ಗಂಟೆಗೂ ಹೆಚ್ಚು ಕಾಲ ಬಿಎಂಟಿಸಿ ಪ್ರಯಾಣಿಕರು, ಗ್ರಾಮಸ್ಥರು ಆತಂಕಕ್ಕೆ ಒಳಗಾಗಿದ್ದರು. ಇದನ್ನೂ ಓದಿ: ಜಡ್ಜ್ ಮನೆಯಲ್ಲಿ ಪತ್ತೆಯಾದ ಕಂತೆ ಕಂತೆ ಹಣದ ಬಗ್ಗೆ ಎಫ್‌ಐಆರ್ ಆಗಿಲ್ಲ ಯಾಕೆ: ಧನಕರ್ ಪ್ರಶ್ನೆ

  • ಜಸ್ಟ್ ಮಿಸ್, ಮರ ಹತ್ತಿ ಆನೆ ದಾಳಿಯಿಂದ ತಪ್ಪಿಸಿಕೊಂಡ ಇಟಿಎಫ್ ಸಿಬ್ಬಂದಿ!

    ಜಸ್ಟ್ ಮಿಸ್, ಮರ ಹತ್ತಿ ಆನೆ ದಾಳಿಯಿಂದ ತಪ್ಪಿಸಿಕೊಂಡ ಇಟಿಎಫ್ ಸಿಬ್ಬಂದಿ!

    ಚಿಕ್ಕಮಗಳೂರು: ಕಾಫಿನಾಡ ಮಲೆನಾಡು ಭಾಗದಲ್ಲಿ ಆನೆ ಹಾವಳಿ ಮುಂದುವರೆದಿದ್ದು ಆನೆ ದಾಳಿಯಿಂದ ಎಲಿಫೆಂಟ್ ಟಾಸ್ಕ್ ಫೋರ್ಸ್ (ETF) ಸಿಬ್ಬಂದಿಯೊಬ್ಬರು ಮರಹತ್ತಿ ಜೀವ ಉಳಿಸಿಕೊಂಡಿರುವ ಘಟನೆ ಎನ್.ಆರ್.ಪುರ ತಾಲೂಕಿನ ಸಾಲೂರು ಅರಣ್ಯದಲ್ಲಿ (Salur Forest) ನಡೆದಿದೆ.

    ಎನ್.ಆರ್.ಪುರ ತಾಲೂಕಿನಲ್ಲಿ ಇತ್ತಿಚೆಗೆ ಆನೆ ಹಾವಳಿ ಮಿತಿ ಮೀರಿದೆ. ಕಾಡಾನೆಗಳು ಪ್ರತಿನಿತ್ಯ ಪುಂಡಾಟ ಮೆರೆಯುತ್ತಿದ್ದು, ಮೂರು ತಿಂಗಳಲ್ಲಿ ಇಬ್ಬರು ಆನೆ ದಾಳಿಗೆ ತುತ್ತಾಗಿದ್ದಾರೆ.‌

     

    View this post on Instagram

     

    A post shared by PUBLiC TV (@publictv)

    ಶುಕ್ರವಾರ ಕೂಡ ಕಾಫಿತೋಟಕ್ಕೆ ಬಂದಿದ್ದ ಪುಂಡಾನೆಯೊಂದನ್ನು ಓಡಿಸಲು ಹೋಗಿದ್ದ ಇಟಿಎಫ್ ಸಿಬ್ಬಂದಿ ಮೇಲೆಯೇ ಆನೆಯೊಂದು ದಾಳಿ ಮಾಡಲು ಮುಂದಾಗಿದೆ. ಇದನ್ನೂ ಓದಿ: ಭಾರತದತ್ತ ಯುರೋಪಿಯನ್ ರಾಷ್ಟ್ರಗಳ ಹೆಜ್ಜೆ – ತಿಂಗಳಾಂತ್ಯಕ್ಕೆ 27 ರಾಷ್ಟ್ರಗಳ ಆಯುಕ್ತರ ತಂಡ ಭೇಟಿ

    ಸಾಲೂರು ಗ್ರಾಮಕ್ಕೆ ಎಂಟ್ರಿ ಕೊಟ್ಟಿದ್ದ ಕಾಡಾನೆಯನ್ನು ಓಡಿಸುವ ವೇಳೆ ಆನೆ ಇಟಿಎಫ್ ಸಿಬ್ಬಂದಿ ಮೇಲೆ ದಾಳಿ ನಡೆಸಲು ಮುಂದಾಗಿದೆ. ತಕ್ಷಣ ಎಚ್ಚೆತ್ತ ಇಟಿಎಫ್ ಸಿಬ್ಬಂದಿ ಮರವನ್ನೇರಿ ಜೀವ ಉಳಿಸಿಕೊಂಡಿದ್ದಾರೆ.

    ಮರವೇರಿ ಕುಳಿತ ನಂತರವೂ ಕಾಡಾನೆ ಮರವನ್ನು ಅಲುಗಾಡಿಸಲು ಮುಂದಾಗಿದ್ದು, ಈ ದೃಶ್ಯವನ್ನು ಮರದ ಮೇಲೆ ಕುಳಿತುಕೊಂಡು ಆನೆ ನಿಗ್ರಹ ದಳದ ಸಿಬ್ಬಂದಿ ತಮ್ಮ ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದಾರೆ.

    ಆನೆ ದಾಳಿ ಹಾಗೂ ಹಾವಳಿಯಿಂದ ಕಂಗೆಟ್ಟಿರುವ ಜನ ಕೂಡಲೇ ಅರಣ್ಯ ಇಲಾಖೆ ಅಧಿಕಾರಿಗಳು ಆನೆ ಹಾವಳಿಗೆ ಶಾಶ್ವತ ಬ್ರೇಕ್ ಹಾಕಬೇಕೆಂದು ಆಗ್ರಹಿಸಿದ್ದಾರೆ.

  • ಜಾತ್ರೆಯಲ್ಲಿ ವ್ಯಕ್ತಿಯನ್ನು ಸೊಂಡಿಲಿನಿಂದ ಎತ್ತಿ ಎಸೆದ ಆನೆ – ಎದ್ನೋ, ಬಿದ್ನೋ ಅಂತ ಓಡಿದ ಜನ

    ಜಾತ್ರೆಯಲ್ಲಿ ವ್ಯಕ್ತಿಯನ್ನು ಸೊಂಡಿಲಿನಿಂದ ಎತ್ತಿ ಎಸೆದ ಆನೆ – ಎದ್ನೋ, ಬಿದ್ನೋ ಅಂತ ಓಡಿದ ಜನ

    – 29 ಮಂದಿಗೆ ಗಾಯ, ಇಬ್ಬರ ಸ್ಥಿತಿ ಗಂಭೀರ

    ತಿರುವನಂತಪುರಂ: ದೇವಸ್ಥಾನದ ಉತ್ಸವದ ವೇಳೆ ಆನೆಯೊಂದು (Elephant) ನಿಯಂತ್ರಣ ಕಳೆದುಕೊಂಡು ಏಕಾಏಕಿ ಜನರ ಗುಂಪಿನ ಮೇಲೆ ದಾಳಿ ನಡೆಸಿದ ಪರಿಣಾಮ 29 ಮಂದಿ ಗಾಯಗೊಂಡಿರುವ ಘಟನೆ ಕೇರಳದ ಮಲಪ್ಪುರಂ (Malappuram) ಜಿಲ್ಲೆಯ ತಿರೂರಿನಲ್ಲಿ ನಡೆದಿದೆ.

    ವಾದ್ಯಗಳ ಸದ್ದು, ಜನರ ಗದ್ದಲದ ನಡುವೆ ನಿಯಂತ್ರಣ ಕಳೆದುಕೊಂಡ ಪಾಕ್ಕಾತು ಶ್ರೀಕುಟ್ಟನ್ (Paakkath Sreekuttan) ಹೆಸರಿನ ಆನೆ, ವ್ಯಕ್ತಿಯೊಬ್ಬನನ್ನ ಎತ್ತಿ ಎಸೆದಿದೆ. ಈ ವೇಳೆ ಗುಂಪಿನಲ್ಲಿದ್ದ ಜನ ಎದ್ನೋ ಬಿದ್ನೋ ಅಂತ ಓಡಿದ್ದಾರೆ. ಕೆಲವರು ದೃಶ್ಯಗಳನ್ನು ಮೊಬೈಲ್‌ನಲ್ಲಿ ಸೆರೆಹಿಡಿದಿದ್ದಾರೆ.

    ನಸುಕಿನ 2:30ರ ಸುಮಾರಿಗೆ ಮಾವುತ ಪರಿಸ್ಥಿತಿಯನ್ನು ಹತೋಟಿಗೆ ತಂದಿದ್ದರಿಂದ ಹೆಚ್ಚಿನ ಹಾನಿ ತಪ್ಪಿದೆ. ಘಟನೆಯಲ್ಲಿ ಸುಮಾರು 29 ಮಂದಿ ಗಾಯಗೊಂಡಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ.

    ತಿರೂರಿನಲ್ಲಿ ನಡೆದ ಪುತಿಯಂಗಡಿ ಉತ್ಸವದಲ್ಲಿ ನೂರಾರು ಮಂದಿ ನೆರೆದಿದ್ದರು. ಉತ್ಸವದಲ್ಲಿ ಕನಿಷ್ಠ ಐದು ಆನೆಗಳು ಅಂಲಕಾರಭೂಷಿತವಾಗಿ ಪಾಲ್ಗೊಂಡಿದ್ದವು. ಈ ವೇಳೆ ಹಠಾತ್ತನೆ ಜನರ ಕಡೆಗೆ ನುಗ್ಗಿದ್ದ ಪಾಕ್ಕಾತು ಶ್ರೀಕುಟ್ಟನ್ ಹೆಸರಿನ ಆನೆ ದಾಳಿ ನಡೆಸಿದೆ. ಈ ಕುರಿತ ವೀಡಿಯೋ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ.

    ಮೂಲಗಳ ಪ್ರಕಾರ, ಆನೆ ದಾಳಿಗೆ ಒಳಗಾದ ವ್ಯಕ್ತಿಯ ಸ್ಥಿತಿ ಚಿಂತಾಜನಕವಾಗಿದ್ದು, ಕೋಟಕ್ಕಲ್‌ನ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ.

  • ಬೆಳಗಾವಿ| ಸಾಕಿದ್ದ ಮಾವುತನನ್ನೇ ತಿವಿದು ಕೊಂದ ಆನೆ

    ಬೆಳಗಾವಿ| ಸಾಕಿದ್ದ ಮಾವುತನನ್ನೇ ತಿವಿದು ಕೊಂದ ಆನೆ

    ಚಿಕ್ಕೋಡಿ: ತಾನೇ ಸಾಕಿ ಸಲುಹುತ್ತಿದ್ದ ಮಾವುತನನ್ನು ಆನೆಯೊಂದು (Elephant) ಸೊಂಡಿಲಿನಿಂದ ತಿವಿದು ಕೊಂದಿರುವ ಮನಕಲಕುವ ಘಟನೆ ಬೆಳಗಾವಿ (Belagavi) ಜಿಲ್ಲೆಯ ರಾಯಬಾಗ ತಾಲೂಕಿನ‌ ಅಲಖನೂರು ಗ್ರಾಮದಲ್ಲಿ ನಡೆದಿದೆ.

    ಅಲಖನೂರ ಗ್ರಾಮದ ಕರಿಯಪ್ಪ ಬೇವನೂರ (30) ಮೃತ ದುರ್ದೈವಿ. ಅಲಖನೂರ ಶ್ರೀ ಕರಿಸಿದ್ದೇಶ್ವ ದೇವಸ್ಥಾನದ 21 ವರ್ಷದ ಧ್ರುವ ಹೆಸರಿನ ಆನೆ ತನ್ನ ಮಾವುತನನ್ನೆ ಸಾಯಿಸಿದೆ. ಇದನ್ನೂ ಓದಿ: ಖ್ಯಾತ ಚಲನಚಿತ್ರ ನಿರ್ಮಾಪಕ ಶ್ಯಾಮ್ ಬೆನಗಲ್ ಇನ್ನಿಲ್ಲ

     

    ಭಾನುವಾರ ರಾತ್ರಿ ಆನೆಗೆ ಮದ ಬಂದಿತ್ತು. ಇಂದು ಬೆಳಗ್ಗೆ ಕರಿಯಪ್ಪ ಮೇವು ಹಾಕಲು ಹೋದಾಗ ಗಂಡಾನೆ ಸೊಂಡಿಲಿನಿಂದ ಹಾಗೂ ದಂತಗಳಿಂದ ತಿವಿದು ಹತ್ಯೆ ಮಾಡಿದೆ.

    ಕಳೆದ 10 ದಿನದ ಹಿಂದೆಯಷ್ಟೇ ಕರಿಯಪ್ಪಗೆ ಗಂಡು ಮಗು ಜನಿಸಿತ್ತು. ಕರಿಯಪ್ಪ ಸಾವಿನ ವಿಷಯ ತಿಳಿದು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಸ್ಥಳಕ್ಕೆ ಹಾರೂಗೇರಿ ಪೊಲೀಸರು ಭೇಟಿ ನೀಡಿ ಪರಶೀಲನೆ ನಡೆಸಿದ್ದು ಹಾರೂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

     

  • ಬಾಂಧವಗಢ ಹುಲಿ ಸಂರಕ್ಷಿತ ಪ್ರದೇಶದಲ್ಲಿ 11 ಕಾಡಾನೆಗಳ ಸಾವಿಗೆ ರಾಗಿ ಕಾರಣವೇ?

    ಬಾಂಧವಗಢ ಹುಲಿ ಸಂರಕ್ಷಿತ ಪ್ರದೇಶದಲ್ಲಿ 11 ಕಾಡಾನೆಗಳ ಸಾವಿಗೆ ರಾಗಿ ಕಾರಣವೇ?

    ಧ್ಯಪ್ರದೇಶದ (Madhya Pradesh) ಬಾಂಧವಗಢ (Bandhavgarh) ಹುಲಿ ಸಂರಕ್ಷಿತ ಪ್ರದೇಶದಲ್ಲಿ ಅನಾರೋಗ್ಯದಿಂದ ಇತ್ತೀಚೆಗೆ ಮೂರು ದಿನಗಳ ಅಂತರದಲ್ಲಿ 11 ಆನೆಗಳು (Elephant) ಸಾವನ್ನಪ್ಪಿವೆ. ಮೀಸಲು ಅರಣ್ಯ ಪ್ರದೇಶದ ವ್ಯಾಪ್ತಿಯ ಕಿತೋಳಿ ವ್ಯಾಪ್ತಿಯ ಸಂಖಾನಿ ಮತ್ತು ಬಾಕೇಲಿಯಲ್ಲಿ ನಾಲ್ಕು ಕಾಡಾನೆಗಳು ಮೃತಪಟ್ಟಿವೆ. ಇನ್ನೂ ಎರಡು ದಿನದ ಅಂತರದಲ್ಲಿ 6 ಆನೆಗಳು ಸಾವನ್ನಪ್ಪಿದ್ದವು. ಇನ್ನೊಂದು ಆನೆ ಭಾನುವಾರ ಚಿಕಿತ್ಸೆ ವೇಳೆ ಸಾವನ್ನಪ್ಪಿದೆ. 

    ಮೃತಪಟ್ಟ 11 ಆನೆಗಳು 13 ಆನೆಗಳ ಹಿಂಡಿನ ಭಾಗವಾಗಿದ್ದವು. ಸಾವಿಗೀಡಾದ ಆನೆಗಳಲ್ಲಿ ಒಂದು ಗಂಡು ಆನೆಯಾಗಿದ್ದು, ಉಳಿದಂತೆ ಎಲ್ಲಾ ಹೆಣ್ಣು ಆನೆಗಳಾಗಿವೆ. ಗುಂಪಿನಲ್ಲಿ ಉಳಿದ 2 ಆನೆಗಳು ಆರೋಗ್ಯವಾಗಿವೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ಆನೆಗಳಿಂದ ಸಂಗ್ರಹಿಸಲಾದ ಅಂಗಾಂಗಗಳ ಮಾದರಿಗಳನ್ನು ಉತ್ತರ ಪ್ರದೇಶದ ಐಸಿಎಆರ್-ಭಾರತೀಯ ಪಶುವೈದ್ಯಕೀಯ ಸಂಶೋಧನಾ ಸಂಸ್ಥೆ ಮತ್ತು ಮಧ್ಯಪ್ರದೇಶದ ಸಾಗರದಲ್ಲಿರುವ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಮೀಸಲು ಸಿಬ್ಬಂದಿ ಸಾವನ್ನಪ್ಪಿದ ಆನೆಗಳ ಬಗ್ಗೆ ಮಾಹಿತಿ ನೀಡಿ, ಆನೆಗಳು ಸಾಯುವ ಮೊದಲು ನೆಲಕ್ಕೆ ಬಿದ್ದು ನಡುಗುತ್ತಿದ್ದವು ಎಂದು ತಿಳಿಸಿದ್ದರು. 

    ಆನೆಗಳ ಮರಣೋತ್ತರ ಪರೀಕ್ಷೆಯ ವರದಿಯ ಆಧಾರದ ಮೇಲೆ ಆನೆಗಳ ಸಾವಿಗೆ ಕೊಡೋ ರಾಗಿ ಕಾರಣ ಎಂದು ಶಂಕಿಸಲಾಗಿದೆ. ಕೊಡೋ ರಾಗಿ ದೇಹದಲ್ಲಿ ಮೈಕೋಟಾಕ್ಸಿನ್‌ಗಳನ್ನು ಉತ್ಪಾದಿಸುತ್ತದೆ. ಇದು ಸೈಕ್ಲೋಪಿಯಾಜೋನಿಕ್ ಆಮ್ಲದ ಉತ್ಪಾದನೆಗೆ ಕಾರಣವಾಗುತ್ತದೆ. ಇದು ದೇಹದಲ್ಲಿ ವಿಷವನ್ನು ಉಂಟುಮಾಡುತ್ತದೆ ಎಂದು ಮಧ್ಯಪ್ರದೇಶದ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮಾಹಿತಿ ನೀಡಿದ್ದಾರೆ. 

    ಈ ಬಗ್ಗೆ ಮಾಹಿತಿ ಕಲೆ ಹಾಕಲು ಅರಣ್ಯ ಅಧಿಕಾರಿಗಳು, ಆನೆಗಳು ಮೃತಪಟ್ಟ ಸಮೀಪದ ಹೊಲಗಳಿಂದ ಸಂಗ್ರಹಿಸಿದ ‘ಕೊಡೋ ರಾಗಿ’ ಮತ್ತು ಆನೆಗಳ ಹೊಟ್ಟೆಯಿಂದ ಸಂಗ್ರಹಿಸಿದ ಮಾದರಿಯನ್ನು ಐಸಿಎಆರ್- ಭಾರತೀಯ ಪಶುವೈದ್ಯಕೀಯ ಸಂಶೋಧನಾ ಸಂಸ್ಥೆ, ಉತ್ತರಪ್ರದೇಶ ಮತ್ತು ಸಾಗರದಲ್ಲಿರುವ ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿದ್ದಾರೆ. ಇನ್ನೂ, ಮೂರು ದಿನಗಳಲ್ಲಿ 11 ಆನೆಗಳು ಸಾವನ್ನಪ್ಪಿರುವುದು ದೇಶದಲ್ಲಿ ಇದೇ ಮೊದಲ ನಿದರ್ಶನ ಎಂದು ಕೆಲವು ವನ್ಯಜೀವಿ ತಜ್ಞರು ಹೇಳಿದ್ದಾರೆ.

    ಆನೆಗಳಿಗೆ ವಿಷಪ್ರಾಶನ?

    ಮಧ್ಯ ಪ್ರದೇಶ ಅರಣ್ಯ ಇಲಾಖೆ ಅಧಿಕಾರಿಗಳ ಪ್ರಾಥಮಿಕ ವರದಿಗಳು, ವಿಷ ಪ್ರಾಶನದಿಂದ ಆನೆಗಳು ಸಾವನ್ನಪ್ಪಿರುವ ಸಾಧ್ಯತೆಯ ಬಗ್ಗೆಯೂ ಶಂಕೆ ವ್ಯಕ್ತಪಡಿಸಿದ್ದಾರೆ. 

    ಕೊಡೋ ರಾಗಿ ಎಂದರೇನು? 

    ಕೊಡೋ ರಾಗಿ (Paspalum scrobiculatum) ಅನ್ನು ಭಾರತದಲ್ಲಿ ಕೊಡ್ರ ಮತ್ತು ವರಗು ಎಂದೂ ಕರೆಯಲಾಗುತ್ತದೆ. ಈ ಬೆಳೆಯನ್ನು ಭಾರತ, ಪಾಕಿಸ್ತಾನ, ಫಿಲಿಪೈನ್ಸ್, ಇಂಡೋನೇಷ್ಯಾ, ವಿಯೆಟ್ನಾಂ, ಥೈಲ್ಯಾಂಡ್ ಮತ್ತು ಪಶ್ಚಿಮ ಆಫ್ರಿಕಾದಲ್ಲಿ ಬೆಳೆಯಲಾಗುತ್ತದೆ.

    ಈ ಕೊಡೋ ರಾಗಿ ಸೇವಿಸಿ 1983ರಲ್ಲಿ ಆನೆಗಳು ಮೃತಪಟ್ಟ ಬಗ್ಗೆ ವರದಿ ಇದೆ. ಇನ್ನೂ 1922 ರಲ್ಲಿ ಉತ್ತರ ಪ್ರದೇಶದಲ್ಲಿ ಕೊಡೋ ರಾಗಿ ಸೇವನೆಯಿಂದ ಕೆಲವು ವ್ಯಕ್ತಿಗಳಲ್ಲಿ ವಿಷದ ಅಂಶ ಪತ್ತೆ ಆಗಿತ್ತು. ಇದಕ್ಕೆ ರಾಗಿಯಲ್ಲಿನ ಮೈಕೋಟಾಕ್ಸಿನ್ ಸೈಕ್ಲೋಪಿಯಾಜೋನಿಕ್ ಆ್ಯಸಿಡ್(CPA) ಎಂಬ ಅಂಶ ಕಾರಣ ಎಂದು ವರದಿಯಾಗಿತ್ತು. 

    ಕೊಡೋ ರಾಗಿ ತೇವಾಂಶವುಳ್ಳ ಸ್ಥಿತಿಯಲ್ಲಿ ಕೊಯ್ಲು ಮಾಡುವಾಗ ಶಿಲೀಂದ್ರಗಳ ಸೋಂಕು ಹೆಚ್ಚಾಗಿ ಇದು ವಿಷಕಾರಿಯಾಗುತ್ತದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಹಿಂದಿನ ಕೆಲವು ಪ್ರಕರಣಗಳಲ್ಲಿ ಮನುಷ್ಯರು ಮತ್ತು ಪ್ರಾಣಿಗಳಲ್ಲೂ ಒಂದೇ ರೀತಿಯ ರೋಗಲಕ್ಷಣ ಪತ್ತೆಯಾಗಿದೆ ಎಂದು ತಜ್ಞರು ತಿಳಿಸಿದ್ದಾರೆ. 

    ಕೊಡೋ ರಾಗಿ ಏಕೆ ವಿಷವಾಗುತ್ತದೆ? 

    ಮುಖ್ಯವಾಗಿ ಒಣ ಮತ್ತು ಅರೆ-ಶುಷ್ಕ ಪ್ರದೇಶಗಳಲ್ಲಿ ಕೊಡೋ ರಾಗಿ ಬೆಳೆಯಲಾಗುತ್ತದೆ. ಈ ರಾಗಿ ಬ್ಯಾಕ್ಟೀರಿಯಾ ಮತ್ತು ಎರ್ಗೋಟ್ ಎಂಬ ಶಿಲೀಂಧ್ರಗಳ ಸೋಂಕಿಗೆ ಹೆಚ್ಚು ಗುರಿಯಾಗುತ್ತದೆ. ಕೊಯ್ಲು ಮಾಡುವಾಗ ಬೀಳುವ  ಮಳೆಯಿಂದ  ಈ ಶಿಲೀಂದ್ರದ ಸೋಂಕು ಉಂಟಾಗುತ್ತದೆ. ಇದನ್ನು ಸ್ಥಳೀಯವಾಗಿ ಮಾತಾವ್ನಾ ಕೊಡು ಅಥವಾ ಮಾಟೋನಾ ಕೊಡೋ ಎಂದು ಕರೆಯಲಾಗುತ್ತದೆ. ಈ ಸೋಂಕಿಗೊಳಗಾದ ರಾಗಿಯ ಸೇವನೆಯಿಂದ ಪ್ರಾಣಿಗಳ ದೆಹಕ್ಕೆ ವಿಷದ ಅಂಶ ಸೇರುತ್ತದೆ. 

    ಪ್ರಾಣಿಗಳ ಮೇಲೆ ಕೊಡೋ ರಾಗಿ ವಿಷಕಾರಿ  ಪ್ರಭಾವ ಏನು? 

    ಕೊಡೋ ವಿಷವು ಮುಖ್ಯವಾಗಿ ನರ ಮತ್ತು ಹೃದಯರಕ್ತನಾಳದ ಮೇಲೆ ಪರಿಣಾಮ ಬೀರುತ್ತದೆ. ಇದರಿಂದ ವಾಂತಿ, ತಲೆತಿರುಗುವಿಕೆ ಮತ್ತು ಪ್ರಜ್ಞೆ ಕಳೆದುಕೊಳ್ಳುವಿಕೆ, ಕೈಕಾಲುಗಳ ನಡುಕ ಉಂಟಾಗಲಿದೆ. ಅಲ್ಲದೇ ಯಕೃತ್‌, ಹೃದಯದಲ್ಲಿ ಕ್ಯಾಲ್ಸಿಯಂ ಅಂಶದ ಮೇಲೆ ಪರಿಣಾಮ ಬೀರುವ ಮೂಲಕ ಹೃದಯವನ್ನು ದುರ್ಬಲಗೊಳಿಸುತ್ತದೆ. ಜಠರ, ಕರುಳಿನ ಅಸ್ವಸ್ಥತೆಗಳನ್ನು ಉಂಟುಮಾಡಬಹುದು ಎಂದು ತಜ್ಞರು ತಿಳಿಸಿದ್ದಾರೆ. 

    ಪರಿಹಾರವೇನು? 

    ಬೆಳೆಗಳ ಮೇಲೆ ಬೆಳೆಯುವ ಶಿಲೀಂದ್ರಗಳನ್ನು ನಾಶಮಾಡಲು ಬೇರೆ ಜೀವಿಗಳ ಬಳಕೆ ಮಾಡುವುದು. ಸಂಶೋಧಕರ ಪ್ರಕಾರ ಅನೇಕ ಸೂಕ್ಷ್ಮಜೀವಿಗಳು ಶಿಲೀಂಧ್ರ ಬೆಳವಣಿಗೆ ಮತ್ತು ಮೈಕೋಟಾಕ್ಸಿನ್ ಸ್ರವಿಸುವಿಕೆಯನ್ನು ಕಡಿಮೆ ಮಾಡುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಅಲ್ಲದೇ ಬೆಳೆ ಕಟಾವಿನ ಬಳಿಕ ಸರಿಯಾದ ಸಂಗ್ರಹಣೆ, ಉತ್ತಮ ಕೃಷಿ ಪದ್ಧತಿಯ ಅಳವಡಿಕೆ ಅಗತ್ಯವಾಗಿದೆ. ತೇವಾಂಶವುಳ್ಳ ವಾತಾವರಣದಲ್ಲಿ ಶಿಲೀಂಧ್ರಗಳು ವೇಗವಾಗಿ ಹರಡುವುದರಿಂದ ಕೊಯ್ಲು ಮಾಡಿದ ರಾಶಿಗಳು ಮಳೆಯಿಂದ ರಕ್ಷಣೆ ಮಾಡಬೇಕು. ಒಣಗಿಸುವ ಮೊದಲು ಸಸ್ಯಗಳನ್ನು ತೇವಗೊಳಿಸಿ ಒಕ್ಕಣೆ ಮಾಡುವ ಹಳೆಯ ಅಭ್ಯಾಸವನ್ನು ನಿಲ್ಲಿಸಬೇಕು. ಸೋಂಕಿತ ಧಾನ್ಯಗಳನ್ನು ತೆಗೆದುಹಾಕುವುದು ಸಹ ರೋಗದ ಹರಡುವಿಕೆಯನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ ಎಂದು ವರದಿಯಾಗಿದೆ. 

  • ಜನರ ಹಸಿವು ನೀಗಿಸಲು 200 ಆನೆಗಳ ಹತ್ಯೆಗೆ ಮುಂದಾದ ಜಿಂಬಾಬ್ವೆ!

    ಜನರ ಹಸಿವು ನೀಗಿಸಲು 200 ಆನೆಗಳ ಹತ್ಯೆಗೆ ಮುಂದಾದ ಜಿಂಬಾಬ್ವೆ!

    ಹರಾರೆ: ಭಾರತದಂತಹ ದೇಶಗಳಲ್ಲಿ ಕಾಡು ಪ್ರಾಣಿಗಳನ್ನು ಕೊಲ್ಲಲು ನಿಷೇಧವಿದೆ. ಆದರೀಗ ನಮೀಬಿಯಾ ಸರ್ಕಾರದ ಬಳಿಕ ಜಿಂಬಾಬ್ವೆ ಸರ್ಕಾರ (Zimbabwe Government) ಕೂಡ ಅಲ್ಲಿನ ಕಾಡು ಪ್ರಾಣಿಗಳನ್ನು ಕೊಲ್ಲಲ್ಲು ಅನುಮತಿ ನೀಡಿದೆ.

    ಹೌದು. ಭೀಕರ ಬರಗಾಲ ಎದುರಿಸುತ್ತಿರುವ ಜಿಂಬಾಬ್ವೆಯಲ್ಲಿ ಜನರಿಗೆ ಆಹಾರ ಒದಗಿಸುವ ಸಲುವಾಗಿ ಪರಿಣಮಿಸಿದೆ. ಆದ್ದರಿಂದ ಆನೆಗಳನ್ನು (Elephants) ಕೊಲ್ಲಲು ಅಲ್ಲಿನ ಅಧಿಕಾರಿಗಳೇ ನಿರ್ಧರಿಸಿದ್ದಾರೆ. 1.63 ಕೋಟಿಯಷ್ಟು ಜನಸಂಖ್ಯೆ ಹೊಂದಿರುವ ಜಿಂಬಾಬ್ವೆ ದೇಶದಲ್ಲಿ ಅರ್ಧದಷ್ಟು ಜನ ಹಸಿವಿನಿಂದ ಬಳಲುತ್ತಿದ್ದಾರೆ. ಅವರ ಹಸಿವನ್ನು ನೀಗಿಸುವ ಉದ್ದೇಶದಿಂದ 200 ಆನೆಗಳನ್ನು ಕೊಲ್ಲಲು ನಿರ್ಧರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿರುವುದಾಗಿ ವರದಿಯಾಗಿದೆ.

    ಜೊತೆಗೆ 55,000 ಆನೆಗಳಿಗೆ ಆಶ್ರಯ ಒದಗಿಸಬಲ್ಲ ನಮ್ಮ ದೇಶದಲ್ಲಿ ಪಸ್ತುತ 84,000 ಆನೆಗಳಿದ್ದು, ಆನೆಗಳ ಸಂಖ್ಯೆಯಲ್ಲಿ ಜಿಂಬಾಬ್ವೆ ವಿಶ್ವದಲ್ಲೇ 2ನೇ ಸ್ಥಾನದಲ್ಲಿದೆ ಎನ್ನುವ ಮೂಲಕ ಆನೆ ಹತ್ಯೆ ಸಮರ್ಥಿಸಿಕೊಂಡಿದ್ದಾರೆ. ಈ ನಡುವೆ ಆನೆಗಳನ್ನು ಕೊಂದು ಅವುಗಳ ಮಾಂಸವನ್ನು ಒಣಗಿಸಿ ಪ್ರೋಟೀನ್ ಅವಶ್ಯಕತೆ ಇರುವವರಿಗೆ ಕೊಡುವ ಬಗ್ಗೆ ಚರ್ಚಿಸಲಾಗುತ್ತಿದೆ ಎಂದು ಜಿಂಬಾಬ್ವೆ ಪರಿಸರ ಸಚಿವ ಸಿತೆಂಬಿಸೋ ನಿಯೋನಿ ಹೇಳಿದ್ದಾರೆ ಎಂದೂ ಸಹ ವರದಿಯಾಗಿತ್ತು. ಇದನ್ನೂ ಓದಿ: ಲೆಬನಾನ್‌ನಲ್ಲಿ ಹಿಜ್ಬುಲ್ಲಾ ಸದಸ್ಯರ ಮೇಲೆ ದಾಳಿ, ಸಾವಿರಾರು ಪೇಜರ್‌ ಸ್ಫೋಟ – 8 ಸಾವು, 2 ಸಾವಿರಕ್ಕೂ ಹೆಚ್ಚು ಮಂದಿ ಗಂಭೀರ ಗಾಯ

    ಅತಿಹೆಚ್ಚು ಆನೆಗಳನ್ನು ಹೊಂದಿರುವ ಟಾಪ್‌-5 ದೇಶಗಳು:
    ಪ್ರತಿ 5 ವರ್ಷಗಳಿಗೊಮ್ಮೆ ಆನೆ ಗಣತಿಯನ್ನು ನಡೆಸಲಾಗುತ್ತದೆ. 2021ರ ಆನೆ ಗಣತಿ ವರದಿ ಪ್ರಕಾರ ಜಿಂಬಾಬ್ವೆ 1 ಲಕ್ಷ ಆನೆಗಳನ್ನು ಹೊಂದಿದ್ದು, ವಿಶ್ವಕ್ಕೆ 2ನೇ ಸ್ಥಾನದಲ್ಲಿತ್ತು. ಆದರೀಗ 84 ಸಾವಿರ ಆನೆಗಳನ್ನಷ್ಟೇ ಹೊಂದಿದೆ ಎಂದು ವರದಿಗಳು ಉಲ್ಲೇಖಿಸಿವೆ. ಇದನ್ನೂ ಓದಿ: 83 ಆನೆ, 30 ಹಿಪ್ಪೋ ಸೇರಿದಂತೆ 723 ಕಾಡು ಪ್ರಾಣಿಗಳನ್ನು ಕೊಂದು ಮಾಂಸವನ್ನು ಜನರಿಗೆ ವಿತರಿಸಲು ಮುಂದಾದ ನಮೀಬಿಯಾ

    2021ರ ಆನೆ ಗಣತಿ ವರದಿ ಅನ್ವಯ ಬೋಟ್ಸ್ವಾನ 1.30 ಲಕ್ಷ ಆನೆಗಳನ್ನು ಹೊಂದಿದ್ದು, ವಿಶ್ವದಲ್ಲೇ ಅತಿಹೆಚ್ಚು ಆನೆಗಳನ್ನು ಹೊಂದಿರುವ ದೇಶವಾಗಿದೆ. ಇನ್ನೂ ಜಿಂಬಾಬ್ವೆ 1 ಲಕ್ಷ, ತಾಂಜಾನಿಯಾ 60 ಸಾವಿರ ಆನೆಗಳನ್ನು ಹೊಂದಿದೆ. 2022ರ ಗಣತಿ ಪ್ರಕಾರ 35 ಸಾವಿರ ಆನೆಗಳನ್ನು ಹೊಂದಿರುವ ಕೀನ್ಯಾ 4ನೇ ಸ್ಥಾನದಲ್ಲಿದ್ದು, 24 ಸಾವಿರ ಆನೆಗಳನ್ನು ಹೊಂದಿರುವ ದಕ್ಷಿಣ ಆಫ್ರಿಕಾ 5ನೇ ಸ್ಥಾನದಲ್ಲಿದೆ.

    ನಮೀಬಿಯಾದಲ್ಲೂ ಬರ:
    ಕೆಲ ದಿನಗಳ ಹಿಂದೆಯಷ್ಟೇ ನಮೀಬಿಯಾ ಸರ್ಕಾರವೂ ಪ್ರಾಣಿಗಳನ್ನು ಕೊಲ್ಲುವ ನಿರ್ಧಾರ ತೆಗೆದುಕೊಂಡಿದೆ. ಬರದಿಂದ (Drought) ತತ್ತರಿಸಿರುವ ನಮೀಬಿಯಾ ಜನರಿಗೆ ಆಹಾರ ಒದಗಿಸುವ ನಿಟ್ಟಿನಲ್ಲಿ 83 ಆನೆಗಳು (Elephants) ಸೇರಿದಂತೆ 723 ಕಾಡು ಪ್ರಾಣಿಗಳನ್ನು ಕೊಲ್ಲುವ ಯೋಜನೆಯನ್ನು ರೂಪಿಸಿದೆ. ತೀವ್ರ ಬರಗಾಲದಿಂದ ಆಹಾರಕ್ಕಾಗಿ ಹೆಣಗಾಡುತ್ತಿರುವವರಿಗೆ ಮಾಂಸವನ್ನು ವಿತರಿಸುವುದಾಗಿ ಸರ್ಕಾರ ಇತ್ತೀಚೆಗೆ ಹೇಳಿತ್ತು. ಇದನ್ನೂ ಓದಿ: ವಿಶ್ವದ ಮೊದಲ ಖಾಸಗಿ ಬಾಹ್ಯಕಾಶ ನಡಿಗೆ ಯಶಸ್ವಿ – ನಾಲ್ವರು ಗಗನಯಾತ್ರಿಗಳು ಭೂಮಿಗೆ ವಾಪಸ್

    ಪ್ರಾಣಿಗಳ ಸಂಖ್ಯೆಯು ಲಭ್ಯವಿರುವ ಹುಲ್ಲುಗಾವಲು ಭೂಮಿ ಮತ್ತು ನೀರಿನ ಸಂಪನ್ಮೂಲಗಳನ್ನು ಮೀರಿದೆ. ಇದರಿಂದಾಗಿ ಜನವಸತಿ ಇರುವ ಸ್ಥಳಗಳಲ್ಲಿ ಕಾಡು ಪ್ರಾಣಿಗಳು ಮತ್ತು ಮಾನವರ ಸಂಘರ್ಷ ಹೆಚ್ಚಾಗಿದೆ. ಈ ಸಂಘರ್ಷವನ್ನು ನಿಯಂತ್ರಿಸಲು ಗುರುತಿಸಲಾದ ಪ್ರದೇಶಗಳಿಂದ 83 ಆನೆಗಳನ್ನು ಕೊಲ್ಲಲಾಗುತ್ತದೆ ಮತ್ತು ಮಾಂಸವನ್ನು ಬರ ಪರಿಹಾರ ಕಾರ್ಯಕ್ರಮಕ್ಕೆ ಬಳಸಲಾಗುತ್ತದೆ. ಆನೆಗಳ ಜೊತೆಗೆ, 30 ಹಿಪ್ಪೋಗಳು, 60 ಎಮ್ಮೆಗಳು, 50 ಇಂಪಾಲಾಗಳು, 100 ನೀಲಿ ಕಾಡುಕೋಣಗಳು, 300 ಜೀಬ್ರಾಗಳು ಮತ್ತು 100 ಎಲ್ಯಾಂಡ್‌ಗಳನ್ನು ಕೊಲ್ಲಲು ಯೋಜಿಸಿದೆ. ವೃತ್ತಿಪರ ಬೇಟೆಗಾರರು ಮತ್ತು ಸರ್ಕಾರದಿಂದ ಗುತ್ತಿಗೆ ಪಡೆದ ಕಂಪನಿಗಳು ಈಗಾಗಲೇ 157 ಪ್ರಾಣಿಗಳನ್ನು ಬೇಟೆಯಾಡಿ, 56,800 ಕೆಜಿ ಮಾಂಸವನ್ನು ಜನರಿಗೆ ನೀಡಲಾಗಿದೆ ಎಂದು ನಮೀಬಿಯಾ ಪರಿಸರ ಸಚಿವಾಲಯ ತನ್ನ ಹೇಳಿಕೆಯಲ್ಲಿ ತಿಳಿಸಿತ್ತು.

  • 83 ಆನೆ, 30 ಹಿಪ್ಪೋ ಸೇರಿದಂತೆ 723 ಕಾಡು ಪ್ರಾಣಿಗಳನ್ನು ಕೊಂದು ಮಾಂಸವನ್ನು ಜನರಿಗೆ ವಿತರಿಸಲು ಮುಂದಾದ ನಮೀಬಿಯಾ

    83 ಆನೆ, 30 ಹಿಪ್ಪೋ ಸೇರಿದಂತೆ 723 ಕಾಡು ಪ್ರಾಣಿಗಳನ್ನು ಕೊಂದು ಮಾಂಸವನ್ನು ಜನರಿಗೆ ವಿತರಿಸಲು ಮುಂದಾದ ನಮೀಬಿಯಾ

    ವಿಂಡ್ಹೋಕ್: ಕಾಡು ಪ್ರಾಣಿಗಳನ್ನು ಭಾರತದಲ್ಲಿ (India) ಕೊಲ್ಲಲು ನಿಷೇಧವಿದೆ. ಅದರೆ ನಮೀಬಿಯಾದಲ್ಲಿ (Namibia) ಸರ್ಕಾರವೇ ಕಾಡುಪ್ರಾಣಿಗಳನ್ನು (Wild Animals) ಕೊಲ್ಲಲು ಆದೇಶಿಸಿದೆ.

    ಬರದಿಂದ (Drought) ತತ್ತರಿಸಿರುವ ನಮೀಬಿಯಾ ಜನರಿಗೆ ಆಹಾರ ಒದಗಿಸುವ ನಿಟ್ಟಿನಲ್ಲಿ 83 ಆನೆಗಳು (Elephants) ಸೇರಿದಂತೆ 723 ಕಾಡು ಪ್ರಾಣಿಗಳನ್ನು ಕೊಲ್ಲುವ ಯೋಜನೆಯನ್ನು ರೂಪಿಸಿದೆ. ತೀವ್ರ ಬರಗಾಲದಿಂದ ಆಹಾರಕ್ಕಾಗಿ ಹೆಣಗಾಡುತ್ತಿರುವವರಿಗೆ ಮಾಂಸವನ್ನು ವಿತರಿಸುವುದಾಗಿ ಸರ್ಕಾರ ಹೇಳಿದೆ.

    ಪ್ರಾಣಿಗಳ ಸಂಖ್ಯೆಯು ಲಭ್ಯವಿರುವ ಹುಲ್ಲುಗಾವಲು ಭೂಮಿ ಮತ್ತು ನೀರಿನ ಸಂಪನ್ಮೂಲಗಳನ್ನು ಮೀರಿದೆ.ಇದರಿಂದಾಗಿ ಜನವಸತಿ ಇರುವ ಸ್ಥಳಗಳಲ್ಲಿ ಕಾಡು ಪ್ರಾಣಿಗಳು ಮತ್ತು ಮಾನವರ ಸಂಘರ್ಷ ಹೆಚ್ಚಾಗಿದೆ. ಈ ಸಂಘರ್ಷವನ್ನು ನಿಯಂತ್ರಿಸಲು ಗುರುತಿಸಲಾದ ಪ್ರದೇಶಗಳಿಂದ 83 ಆನೆಗಳನ್ನು ಕೊಲ್ಲಲಾಗುತ್ತದೆ ಮತ್ತು ಮಾಂಸವನ್ನು ಬರ ಪರಿಹಾರ ಕಾರ್ಯಕ್ರಮಕ್ಕೆ ಬಳಸಲಾಗುತ್ತದೆ ಎಂದು ನಮೀಬಿಯಾ ಪರಿಸರ ಸಚಿವಾಲಯ ತನ್ನ ಹೇಳಿಕೆಯಲ್ಲಿ ತಿಳಿಸಿದೆ.ಇದನ್ನೂ ಓದಿ: ವಿದೇಶಗಳಲ್ಲಿ ಬ್ರಿಟನ್‌ನ ದಾನಿಗಳ ವೀರ್ಯ ಬಳಕೆ ಏಕೆ ಕಳವಳಕಾರಿ? 

    ಆನೆಗಳ ಜೊತೆಗೆ, 30 ಹಿಪ್ಪೋಗಳು, 60 ಎಮ್ಮೆಗಳು, 50 ಇಂಪಾಲಾಗಳು, 100 ನೀಲಿ ಕಾಡುಕೋಣಗಳು, 300 ಜೀಬ್ರಾಗಳು ಮತ್ತು 100 ಎಲ್ಯಾಂಡ್‌ಗಳನ್ನು ಕೊಲ್ಲಲು ಯೋಜಿಸಿದೆ. ವೃತ್ತಿಪರ ಬೇಟೆಗಾರರು ಮತ್ತು ಸರ್ಕಾರದಿಂದ ಗುತ್ತಿಗೆ ಪಡೆದ ಕಂಪನಿಗಳು ಈಗಾಗಲೇ 157 ಪ್ರಾಣಿಗಳನ್ನು ಬೇಟೆಯಾಡಿ, 56,800 ಕೆಜಿ  ಮಾಂಸವನ್ನು ಜನರಿಗೆ ನೀಡಲಾಗಿದೆ.

    ನಮ್ಮ ನೈಸರ್ಗಿಕ ಸಂಪನ್ಮೂಲಗಳನ್ನು ನಾಗರಿಕರ ಅನುಕೂಲಕ್ಕಾಗಿ ಬಳಸಲು ನಮಗೆ ಸಂವಿಧಾನದಲ್ಲಿ ಅನುಮತಿ ಇದೆ ಎಂದು ನಮೀಬಿಯಾ ಸರ್ಕಾರ ಕಾಡು ಪ್ರಾಣಿಗಳ ಭೇಟೆಯಾಡುವ ಕ್ರಮವನ್ನು ಸಮರ್ಥಿಸಿಕೊಂಡಿದೆ. ಇದನ್ನೂ ಓದಿ: 2014ರ ನಂತರ ಮೊದಲ ಬಾರಿಗೆ ರಾಜ್ಯಸಭೆಯಲ್ಲಿ ಎನ್‌ಡಿಎಗೆ ಸ್ಪಷ್ಟ ಬಹುಮತ

    ದಕ್ಷಿಣ ಆಫ್ರಿಕಾವು ಪ್ರಸ್ತುತ ದಶಕಗಳಲ್ಲಿ ಅತ್ಯಂತ ಭೀಕರ ಬರವನ್ನು ಅನುಭವಿಸುತ್ತಿದೆ. ವಿಶ್ವಸಂಸ್ಥೆಯು ವರದಿ ಮಾಡಿದಂತೆ ಜುಲೈನಲ್ಲಿ ನಮೀಬಿಯಾ ಸಂಗ್ರಹಿಸಿಟ್ಟಿದ್ದ ಮೀಸಲು ಆಹಾರದಲ್ಲಿ 84% ರಷ್ಟು ಆಹಾರ ಖಾಲಿಯಾಗಿದೆ. ನಮೀಬಿಯಾದ ಜನಸಂಖ್ಯೆಯ ಅರ್ಧದಷ್ಟು ಜನರು ಮುಂಬರುವ ತಿಂಗಳುಗಳಲ್ಲಿ ಭಾರೀ ಆಹಾರದ ಸಮಸ್ಯೆ ಎದುರಿಸಬಹುದು. ಪರಿಸರ ಸಚಿವಾಲಯವು ಕೂಡಲೇ ಮಧ್ಯಪ್ರವೇಶಿಸದಿದ್ದರೆ ಭೀಕರ ಬರಗಾಲವು ಮಾನವ-ವನ್ಯಜೀವಿ ಸಂಘರ್ಷವನ್ನು ಹೆಚ್ಚಿಸುವ ಸಾಧ್ಯತೆಯಿದೆ ಎಂದು ಎಚ್ಚರಿಸಿತ್ತು.

    ಜಿಂಬಾಬ್ವೆ, ಜಾಂಬಿಯಾ, ಬೋಟ್ಸ್ವಾನಾ, ಅಂಗೋಲಾ ಮತ್ತು ನಮೀಬಿಯಾದಲ್ಲಿ ಅಂದಾಜು 2 ಲಕ್ಷ ಆನೆಗಳು ಇದ್ದು, ವಿಶ್ವದಲ್ಲೇ ಅತಿ ಹೆಚ್ಚು ಪ್ರಮಾಣದ ಆನೆಗಳು ಇಲ್ಲಿ ನೆಲೆಸಿವೆ. ಕಳೆದ ವರ್ಷ ಬೋಟ್ಸ್ವಾನಾ ಮತ್ತು ಜಿಂಬಾಬ್ವೆಯಲ್ಲಿ ನೂರಾರು ಆನೆಗಳು ಬರಗಾಲದಿಂದ ಸಾವನ್ನಪ್ಪಿದ್ದವು.

  • ವಯನಾಡು ಭೂಕುಸಿತ; ಸಂಕಷ್ಟದಲ್ಲಿದ್ದ ಕುಟುಂಬಕ್ಕೆ ಬೆಟ್ಟದಲ್ಲಿ ಕಾವಲಾಗಿ ನಿಂತ ಗಜರಾಜ

    ವಯನಾಡು ಭೂಕುಸಿತ; ಸಂಕಷ್ಟದಲ್ಲಿದ್ದ ಕುಟುಂಬಕ್ಕೆ ಬೆಟ್ಟದಲ್ಲಿ ಕಾವಲಾಗಿ ನಿಂತ ಗಜರಾಜ

    ಕೇರಳ/ವಯನಾಡು: ವಯನಾಡು ಭೀಕರ ಭೂಕುಸಿತದಿಂದ (Wayanad Landslides) ಇಡೀ ಊರಿಗೆ ಊರೇ ಸ್ಮಶಾನವಾಗಿತ್ತು. ಇತ್ತ ಸಾಗಬೇಕಾದ ದಿಕ್ಕು ಗೊತ್ತಿಲ್ಲ. ಸಾವು ಕಣ್ಮುಂದೆ ಕೈಚಾಚಿ ನಿಂತಾಗ ಮನಕಲಕುವ ಸನ್ನಿವೇಶವೊಂದು ನಡೆದಿದೆ. ದೇವರ ರೂಪದಲ್ಲಿ ಬಂದ ಗಜರಾಜ ಮುಂಡಕೈ ನಿವಾಸಿ ಸುಜಾತ ಹಾಗೂ ಕುಟುಂಬಕ್ಕೆ ಇಡೀ ರಾತ್ರಿ ಕಾವಲಾಗಿತ್ತು. ಇದು ಆಶ್ಚರ್ಯ ಎನಿಸಿದರು ಸತ್ಯ. ಈ ಕುರಿತು ಖುದ್ದು ಸುಜಾತ ಅವರೇ ಸ್ಥಳೀಯರೊಬ್ಬರಿಗೆ ಮಾಹಿತಿ ನೀಡಿದ್ದಾರೆ.

    ವಯನಾಡು ಭೂಕುಸಿತದಲ್ಲಿ ಇಡೀ ಊರಿಗೆ ಊರೇ ಮಣ್ಣು ಪಾಲಾದರೂ ಈ ಕುಟುಂಬ ಬದುಕಿದ್ದು ಮಾತ್ರ ರೋಚಕ. ಸಂಕಷ್ಟದಲ್ಲಿದ್ದ ಸಂತ್ರಸ್ತರಿಗೆ ಆ ಕರಾಳ ರಾತ್ರಿ ಬೆಟ್ಟದಲ್ಲಿ ಗಜರಾಜ ಕಾವಲಾಗಿ ನಿಂತಿದ್ದಾನೆ. ಸಾವಿನ ದವಡೆಯಿಂದ ಪಾರಾಗಿ ಬಂದ ವೃದ್ಧೆ ಸುಜಾತ ಈ ಕುರಿತು ಸ್ಥಳೀಯರೊಬ್ಬರಿಗೆ ಮಾಹಿತಿ ಕೊಟ್ಟಿರುವ ಆಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ.

    ಆಡಿಯೋದಲ್ಲಿ ಏನಿದೆ?
    ರಾತ್ರಿ 4 ಗಂಟೆಯಿಂದ ಭಾರೀ ಮಳೆಯಾಗುತ್ತಿದ್ದರಿಂದ, ಮಧ್ಯರಾತ್ರಿ 1:15ಕ್ಕೆ ಎಚ್ಚರವಾಯಿತು. ದೊಡ್ಡ ಶಬ್ದ ಕೇಳಿಸಿದ ಬೆನ್ನಲ್ಲೇ ನಮ್ಮ ಮನೆಗೆ ನೀರು ನುಗ್ಗಿತು. ನಾವೆಲ್ಲರೂ ಹಾಸಿಗೆಯ ಮೇಲೆ ಕುಳಿತೆವು. ಆಗ ನಮ್ಮ ನೆರೆಹೊರೆಯವರ ಮನೆಗಳ ಅವಶೇಷಗಳ ಜೊತೆಗೆ ದೊಡ್ಡ ಮರದ ದಿಮ್ಮಿಗಳು ಮನೆಯ ಮೇಲೆ ಬಡಿಯುತ್ತಿದ್ದವು. ನಮ್ಮ ಮನೆಯ ಮೇಲ್ಛಾವಣಿ ನಮ್ಮ ಮೇಲೆ ಕುಸಿದು ಬಿದ್ದಿದ್ದು, ನನ್ನ ಮಗಳು ಗಂಭೀರವಾಗಿ ಗಾಯಗೊಂಡಿದ್ದಾಳೆ. ಗುಡ್ಡ ಜರಿದು ಮನೆ ಉರುಳಿ ಬಿದ್ದಾಗ ಮನೆಯ ಚಿಮಿಣಿಯಲ್ಲಿ ಸ್ವಲ್ಪ ಜಾಗ ಕಾಣಿಸಿತು. ನಾನು ಇಟ್ಟಿಗೆ ರಾಶಿಯನ್ನು ಸರಿಸಿ ಜಾಗ ಮಾಡಿಕೊಂಡು ಮಗಳು, ಮೊಮ್ಮಗಳು, ಅಳಿಯ ಎಲ್ಲರೂ ಹೊರ ಬಂದು ಬೆಟ್ಟದ ಬಳಿ ಓಡಿದೆವು.

    ಹೇಗೋ ಒದ್ದಾಡಿ ಬೆಟ್ಟದ ಬಳಿಗೆ ಬಂದಾಗ ಅಲ್ಲಿ ದೊಡ್ಡ ಕಾಡಾನೆ ನಿಂತಿತ್ತು. ಆಗ ಆನೆ ಬಳಿ ನಿಂತು ಪ್ರಾರ್ಥನೆ ಮಾಡಿದೆವು. ಒಂದು ದೊಡ್ಡ ದುರಂತದಿಂದ ತಪ್ಪಿಸಿಕೊಂಡು ಬಂದಿದ್ದೇವೆ. ನೀನು ನಮಗೇನೂ ಮಾಡಬೇಡಪ್ಪಾ ಎಂದು ನಾನು ಆನೆಯ ಮುಂದೆ ನಿಂತು ಕಣ್ಣೀರು ಹಾಕಿದೆ. ಆನೆಯ ಕಣ್ಣಿನಿಂದಲೂ ನೀರು ಬಂತು. ರಾತ್ರಿ ಬೆಳಗಾಗುವವರೆಗೆ ನಾವು ಆನೆಯ ಕಾಲಿನ ಹತ್ತಿರವೇ ಸಮಯ ಕಳೆದೆವು. ರಾತ್ರಿ ಪೂರ್ತಿ ಮಳೆ, ಸರಿಯಾಗಿ ನಿಂತುಕೊಳ್ಳಲೂ ಸಾಧ್ಯವಾಗುತ್ತಿರಲಿಲ್ಲ. ಬೆಳಗ್ಗೆ 6 ಗಂಟೆಯಾದಾಗ ಎಲ್ಲಿಂದಲೋ ಜನರು ಬಂದರು. ನಮ್ಮನ್ನು ಕಾಪಾಡಲು ನಮ್ಮ ಊರಿನವರು ಯಾರೂ ಬದುಕುಳಿದಿರಲಿಲ್ಲ. ಆಮೇಲೆ ದೂರದೂರಿನಿಂದ ಬಂದ ಜನರು ನಮ್ಮನ್ನು ಕಾಪಾಡಿ ಸುರಕ್ಷಿತ ಜಾಗಕ್ಕೆ ತಲುಪಿಸಿದರು ಎಂದು ಸುಜಾತ ತಿಳಿಸಿದ್ದಾರೆ.