Tag: ಆನೆಗಳು

  • ಜಗನ್ನಾಥ ರಥಯಾತ್ರೆ ಮೆರವಣಿಗೆಯಲ್ಲಿ ದಿಕ್ಕಾಪಾಲಾಗಿ ಓಡಿದ ಆನೆಗಳು – ಬೆಚ್ಚಿಬಿದ್ದ ಭಕ್ತರು

    ಜಗನ್ನಾಥ ರಥಯಾತ್ರೆ ಮೆರವಣಿಗೆಯಲ್ಲಿ ದಿಕ್ಕಾಪಾಲಾಗಿ ಓಡಿದ ಆನೆಗಳು – ಬೆಚ್ಚಿಬಿದ್ದ ಭಕ್ತರು

    ಗಾಂಧೀನಗರ: ಅಹಮದಾಬಾದ್‌ನಲ್ಲಿ (Ahmedabad) ಶುಕ್ರವಾರ ನಡೆದ 148ನೇ ಜಗನ್ನಾಥ ರಥಯಾತ್ರೆಯ (Jagannath Rath Yatra) ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ ಆನೆಗಳು ಗಾಬರಿಗೊಂಡು ದಿಕ್ಕಾಪಾಲಾಗಿ ಓಡಿರುವ ಘಟನೆ ನಡೆದಿದೆ. ಪರಿಣಾಮ ಇಬ್ಬರು ಭಕ್ತರು ಗಾಯಗೊಂಡಿದ್ದಾರೆ.

    ಶುಕ್ರವಾರ ಬೆಳಗ್ಗೆ 10:15 ರ ಸುಮಾರಿಗೆ ರಥಯಾತ್ರೆ ನಗರದ ಖಾದಿಯಾ ಪ್ರದೇಶದ ಮೂಲಕ ಹಾದುಹೋಗುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ ಆನೆಯೊಂದು ಇದ್ದಕ್ಕಿದ್ದಂತೆ ಗುಂಪಿನಿಂದ ದೂರ ಸರಿದು ವಿರುದ್ಧ ದಿಕ್ಕಿನಲ್ಲಿ ಓಡಲು ಪ್ರಾರಂಭಿಸಿತು. ಕಿರಿದಾದ ಬೀದಿಯಾದ್ದರಿಂದ ಜನರು ಭಯಭೀತರಾದರು. ಇದರ ಜೊತೆ ಇನ್ನೆರಡು ಆನೆಗಳು ಸಹ ಓಡಿದವು. ಅವಘಡದಲ್ಲಿ ಇಬ್ಬರು ಗಾಯಗೊಂಡಿದ್ದಾರೆ. ನಂತರ ಮಾವತರು ಆನೆಗಳನ್ನು ನಿಯಂತ್ರಿಸಿದರು. ಆನೆಗಳನ್ನು ಕರೆದೊಯ್ದ ಬಳಿಕ ಮೆರವಣಿಗೆ ಮುಂದುವರಿಯಿತು. ಇದನ್ನೂ ಓದಿ: ಇಂದು ವೈಭವದ ಪುರಿ ಜಗನ್ನಾಥ ರಥಯಾತ್ರೆ

    ಗಾಯಗೊಂಡಿದ್ದ ಮಹಿಳಾ ಪೊಲೀಸ್ ಸಿಬ್ಬಂದಿಗೆ ಸ್ಥಳದಲ್ಲೇ ಪ್ರಥಮ ಚಿಕಿತ್ಸೆ ನೀಡಲಾಯಿತು. ಪುರುಷ ಭಕ್ತನನ್ನು ಚಿಕಿತ್ಸೆಗಾಗಿ ಅಹಮದಾಬಾದ್ ಸಿವಿಲ್ ಆಸ್ಪತ್ರೆಗೆ ಕರೆದೊಯ್ಯಲಾಯಿತು.

    ಖಾಡಿಯಾ ಪ್ರದೇಶದಲ್ಲಿ ಆನೆಗಳು ಗಲಿಬಿಲಿಗೊಂಡ ಕಾರಣ ಅವುಗಳನ್ನು ರಥಯಾತ್ರೆಯಿಂದ ಹೊರಗೆ ಕರೆದೊಯ್ಯಲಾಗಿದೆ. ಮೆರವಣಿಗೆ ವೇಳಾಪಟ್ಟಿಯಂತೆ ಮುಂದುವರೆದಿದೆ ಎಂದು ಅಹಮದಾಬಾದ್ ನಗರ ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಚಾ.ನಗರ| ಹುಲಿಗಳು ಸತ್ತ 10 ಹೆಜ್ಜೆ ದೂರದಲ್ಲಿಯೇ ಹಸು ಕಳೇಬರ ಪತ್ತೆ- ವಿಷಪ್ರಾಶನ ಶಂಕೆ

    148ನೇ ರಥಯಾತ್ರೆಯ 16 ಕಿ.ಮೀ. ಮೆರವಣಿಗೆಯು ಶುಕ್ರವಾರ ಮುಂಜಾನೆ ಆರಂಭವಾಯಿತು. ಮೆರವಣಿಗೆಗೆ ಜಮಾಲ್ಪುರದ ಜಗನ್ನಾಥ ದೇವಸ್ಥಾನದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಂಗಳ ಆರತಿ ಮೂಲಕ ಚಾಲನೆ ಕೊಟ್ಟರು. ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕೂಡ ಪಾಲ್ಗೊಂಡಿದ್ದರು. ರಾಜ್ಯದ ಐತಿಹಾಸಿಕ ಮತ್ತು ದೊಡ್ಡ ರಥಯಾತ್ರೆಯ ಭದ್ರತೆಗಾಗಿ 23,000 ಕ್ಕೂ ಹೆಚ್ಚು ಪೊಲೀಸ್ ಅಧಿಕಾರಿಗಳು ಮತ್ತು ಇತರ ಪಡೆಗಳ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

  • ಭದ್ರಾ ರಿಸರ್ವ್ ಫಾರೆಸ್ಟ್‌ನಲ್ಲಿ ಆನೆ ಹಣೆಗೆ ಗುಂಡು – ದಂತ ಚೋರರ ಕಾಟ ಸಕ್ರಿಯವಾ?

    ಭದ್ರಾ ರಿಸರ್ವ್ ಫಾರೆಸ್ಟ್‌ನಲ್ಲಿ ಆನೆ ಹಣೆಗೆ ಗುಂಡು – ದಂತ ಚೋರರ ಕಾಟ ಸಕ್ರಿಯವಾ?

    ಚಿಕ್ಕಮಗಳೂರು: ಜಿಲ್ಲೆಯ ತರೀಕೆರೆ ತಾಲೂಕಿನ ಭದ್ರಾ ಅಭಯಾರಣ್ಯದ (Bhadra Reserve Forest) ವ್ಯಾಪ್ತಿಯಲ್ಲಿ ಆನೆಯ ಕಳೆಬರ ಪತ್ತೆಯಾಗಿದ್ದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.

    ಭದ್ರಾ ಅಭಯಾರಣ್ಯದ ಹುಲಿ ಮೀಸಲು ಅರಣ್ಯ ವ್ಯಾಪ್ತಿಯ ಲಕ್ಕವಳ್ಳಿ ವಿಭಾಗದ ಅಲ್ದಾರ ಸಮೀಪದ ಬೈರಾಪುರ ಹಿನ್ನೀರಿನ ದಟ್ಟಅರಣ್ಯ ಪ್ರದೇಶದಲ್ಲಿ ಆನೆಯ ಕಳೆಬರಹ ಪತ್ತೆಯಾಗಿದೆ. ಆನೆ ಮೃತಪಟ್ಟು ಸುಮಾರು ಒಂದು ತಿಂಗಳು ಕಳೆದಿದೆ. ಆನೆಯ (Elephant) ಅಸ್ತಿ ಪಂಜರ ಸ್ಥಳೀಯ ಮೀನುಗಾರಿಗೆ ಕಂಡು ಬಂದಿದ್ದು ಅರಣ್ಯ ಇಲಾಖೆ ಅಧಿಕಾರಿಗಳಿಗೆ (Forest Department) ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ಆಫ್ರಿಕಾದ ಮಹಿಳೆಗೆ ಏಕಕಾಲದಲ್ಲೇ ಎರಡು ಹೃದಯ ಕವಾಟ ಬದಲಿ ಶಸ್ತ್ರಚಿಕಿತ್ಸೆ ನಡೆಸಿದ ಬೆಂಗ್ಳೂರು ವೈದ್ಯರು

    ಆನೆ ಹಣೆಯ ಭಾಗಕ್ಕೆ ಗುಂಡು ಹೊಡೆದಿರುವ ಗುರುತು ಪತ್ತೆಯಾಗಿದೆ. ಆನೆ ಹಣೆಯ ಮಧ್ಯ ಭಾಗದಲ್ಲಿ ಸುಮಾರು ಎರಡು ಇಂಚು ಅಗಲದ ಗುಂಡಿನ ರಂಧ್ರ ಎದ್ದು ಕಾಣುತ್ತಿದ್ದು, ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಆನೆ ದಂತಕ್ಕಾಗಿ ದಂತಚೋರರ ಗ್ಯಾಂಗ್‌ ಭದ್ರಾ ಅಭಯಾರಣ್ಯ ಭಾಗದಲ್ಲಿ ಸಕ್ರಿಯವಾಗಿದ್ಯಾ? ಎಂಬ ಪ್ರಶ್ನೆ ಮೂಡಿದೆ. ಈ ನಡುವೆ ಅರಣ್ಯ ಇಲಾಖೆಯ ಅಧಿಕಾರಿಗಳು ಆನೆಯ ಕಳೆಬರವನ್ನ ಸರಿಯಾಗಿ ತಪಾಸಣಾ ಮಾಡಿಲ್ಲ ಎಂದು ಪರಿಸರವಾದಿಗಳು ಆರೋಪಿಸಿದ್ದಾರೆ. ಇದನ್ನೂ ಓದಿ: ಜಿತಿಯಾ ಪವಿತ್ರ ಸ್ನಾನದ ವೇಳೆ ಅವಘಡ – ಬಿಹಾರದಲ್ಲಿ 37 ಮಕ್ಕಳು ಸೇರಿ 46 ಮಂದಿ ನದಿಯಲ್ಲಿ ಮುಳುಗಿ ದುರ್ಮರಣ

    ಆನೆಯನ್ನು ದಂತಕ್ಕಾಗಿ ಹತ್ಯೆ ಮಾಡಿರುವ ಅನುಮಾನ ಸ್ಥಳೀಯರನ್ನ ಕಾಡುತ್ತಿದೆ. ಏಕೆಂದರೆ ಆನೆ ಸತ್ತ ಜಾಗದಲ್ಲಿ ಆನೆಯ ಯಾವುದೇ ದಂತಗಳು ಕಂಡು ಬಂದಿಲ್ಲ. ಅಲ್ಲದೇ ರಾತ್ರಿ ವೇಳೆ ಭದ್ರಾ ಹಿನ್ನೀರಿನಲ್ಲಿ ಬೋಟ್‌ಗಳ ಮೂಲಕ ಅಭಯಾರಣ್ಯಕ್ಕೆ ಕಳ್ಳಸಾಗಣೆ ಮಾಡಲು ಕಾಡ್ಗಳ್ಳರು ಬರುವುದು ಹೆಚ್ಚಾಗಿದೆ ಎಂಬ ಆರೋಪವೂ ಬಲವಾಗಿದೆ. ಇದನ್ನೂ ಓದಿ: Badlapur Encounter | ಆರೋಪಿ ಗುಂಡು ಹಾರಿಸಿದ್ರೆ ಪೊಲೀಸರು ಚಪ್ಪಾಳೆ ತಟ್ಟಬೇಕಾ?: ದೇವೇಂದ್ರ ಫಡ್ನವೀಸ್

    ಭದ್ರಾ ಹಿನ್ನೀರಿನಲ್ಲಿ ಆನೆಗಳ ಹಿಂಡು ವ್ಯಾಪಕವಾಗಿವೆ. ಆನೆ ದಂತಕ್ಕೆ ಭಾರಿ ಬೇಡಿಕೆ ಇದ್ದು ಕಳೆದ ವರ್ಷ ಕೂಡ ಮುತ್ತೋಡಿ ಅರಣ್ಯದ ಜಾಗರ ಗ್ರಾಮದ ಸಮೀಪ ಆನೆ ಕೊಂದು ದಂತ ಅಪಹರಿಸಲಾಗಿತ್ತು. ಆನೆ ಸತ್ತು ತಿಂಗಳಾದರೂ ಅರಣ್ಯ ವ್ಯಾಪ್ತಿಯಲ್ಲಿ ಗಸ್ತುತಿರುಗುವ ಅಧಿಕಾರಿಗಳಿಗೂ ಗೊತ್ತಾಗಲಿಲ್ಲ ಪ್ರಶ್ನೆ ಎಲ್ಲರನ್ನ ಕಾಡತೊಡಗಿದೆ.‌ ಅಧಿಕಾರಿಗಳ ನಿರ್ಲಕ್ಷ್ಯದಿಂದ ಆನೆಗಳ ಮೇಲಿನ ದಾಳಿ ಮುಂದುವರಿದಿದೆ. ಹಿರಿಯ ಅರಣ್ಯಾಧಿಕಾರಿಗಳು ಈ ಸಂಬಂಧ ಸೂಕ್ತ ತನಿಖೆ ನಡೆಸಬೇಕಿದೆ ಎಂದು ಪರಿಸರವಾದಿಗಳು ಹಾಗೂ ಸ್ಥಳಿಯರು ಒತ್ತಾಯಿಸಿದ್ದಾರೆ. ಇದನ್ನೂ ಓದಿ: 21 ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ: ಅರುಣಾಚಲ ಪ್ರದೇಶದ ಹಾಸ್ಟೆಲ್ ವಾರ್ಡನ್‌ಗೆ ಗಲ್ಲು ಶಿಕ್ಷೆ

  • ಕರ್ನಾಟಕ, ಕೇರಳ, ತಮಿಳುನಾಡು, ಆಂಧ್ರದ ಅರಣ್ಯಗಳಲ್ಲಿ ಆನೆ ಗಣತಿ ಶುರು!

    ಕರ್ನಾಟಕ, ಕೇರಳ, ತಮಿಳುನಾಡು, ಆಂಧ್ರದ ಅರಣ್ಯಗಳಲ್ಲಿ ಆನೆ ಗಣತಿ ಶುರು!

    ಚಾಮರಾಜನಗರ: ಇತ್ತೀಚೆಗೆ ಕರ್ನಾಟಕ ಸೇರಿದಂತೆ ದಕ್ಷಿಣದ ರಾಜ್ಯಗಳಲ್ಲಿ (South States) ಆನೆ-ಮಾನವ ಸಂಘರ್ಷದ ಪ್ರಕರಣಗಳು ಹೆಚ್ಚಾಗುತ್ತಿವೆ. ಈ ಹಿನ್ನೆಲೆಯಲ್ಲಿ ವೈಜ್ಞಾಕವಾಗಿ ಪರಿಹಾರೋಪಾಯಗಳನ್ನು ರೂಪಿಸಲು ಕರ್ನಾಟಕ, ಕೇರಳ, ತಮಿಳುನಾಡು ಹಾಗೂ ಆಂಧ್ರ ಪ್ರದೇಶದ ಗಡಿ ಅರಣ್ಯ ಪ್ರದೇಶಗಳಲ್ಲಿ (Forest) ಏಕಕಾಲದಲ್ಲಿ 3 ದಿನಗಳ ಕಾಲ ಆನೆ ಗಣತಿ ನಡೆಸಲು ಅರಣ್ಯ ಇಲಾಖೆ (Forest Department) ಮುಂದಾಗಿದೆ.

    ಹೌದು. ನೀಲಗಿರಿ ಶ್ರೇಣಿಯ ಸಂರಕ್ಷಿತ ಪ್ರದೇಶಗಳಲ್ಲಿ ಇತ್ತೀಚಿನ ವರ್ಷಗಳಲ್ಲಿ ನಿರಂತರವಾಗಿ ಮಾನವ ಆನೆ ಸಂಘರ್ಷ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಮಾನವ ಸಂಘರ್ಷ ತಡೆಗಾಗಿ ಕರ್ನಾಟಕ, ಕೇರಳ ಮತ್ತು ತಮಿಳುನಾಡು ರಾಜ್ಯಗಳ ಅರಣ್ಯ ಇಲಾಖೆಗಳು ಅಂತರರಾಜ್ಯ ಸಮನ್ವಯ ಸಮಿತಿ ರಚಿಸಿಕೊಂಡಿವೆ. ಸೂಕ್ತ ಯೋಜನೆ ರೂಪಿಸಲು ಹಾಗೂ ವೈಜ್ಞಾನಿಕ ಪರಿಹಾರೋಪಾಯ ಕಂಡುಕೊಳ್ಳಲು ಮುಂದಾಗಿವೆ. ಹಾಗಾಗಿ ಕರ್ನಾಟಕ, ಕೇರಳ ಮತ್ತು ತಮಿಳುನಾಡು ಜೊತೆಗೆ ಆಂಧ್ರಪ್ರದೇಶ ಗಡಿ ಭಾಗಗಳಲ್ಲಿನ ಆನೆಗಳ ಸಂಖ್ಯೆ ಪತ್ತೆ ಮಾಡುವ (Elephant Census) ಕಾರ್ಯಕ್ಕೆ ಅರಣ್ಯ ಇಲಾಖೆ ಮುಂದಾಗಿದೆ.

    ಪ್ರಮುಖವಾಗಿ ರಾಜ್ಯದ ಬಂಡೀಪುರ, ನಾಗರಹೊಳೆ, ಕಾವೇರಿ ವನ್ಯಧಾಮ, ಮಲೆಮಹದೇಶ್ವರ ವನ್ಯಧಾಮದಲ್ಲಿ ಆನೆ ಗಣತಿ ನಡೆಯಲಿದೆ. ಅಲ್ಲದೇ, ಬಿಳಿಗಿರಿರಂಗನ ಬೆಟ್ಟ ಹುಲಿ ಸಂರಕ್ಷಿತ ಪ್ರದೇಶ, ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನ, ಮಡಿಕೇರಿ ವನ್ಯಜೀವಿಧಾಮ ಹಾಗೂ ವಿರಾಜಪೇಟೆ ವಿಭಾಗ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಆನೆಗಣತಿ ನಡೆಸಲಾಗುತ್ತದೆ. ಜೊತೆಗೆ ನೆರೆಯ ರಾಜ್ಯಗಳಾದ ಕೇರಳ ಹಾಗೂ ತಮಿಳುನಾಡು ರಾಜ್ಯಗಳಲ್ಲಿ ಸಂಯೋಜಿತ ಆನೆಗಳ ಸಂಖ್ಯೆ ಪತ್ತೆಗೆ ಗಣತಿ ನಡೆಸಲಾಗುತ್ತದೆ.

    ಆನೆ ಗಣತಿ ನಡೆಸುವುದು ಹೇಗೆ?
    ಆನೆ ಗಣತಿಗೆ ವಿವಿಧ ವಿಧಾನಗಳನ್ನು ಅನುಸರಿಲಾಗುತ್ತದೆ. ಆನೆಯ ಲದ್ದಿಯ ಮಾದರಿ ಸಂಗ್ರಹ ಮಾಡೋದು. ಅರಣ್ಯ ಪ್ರದೇಶವನ್ನು ಬ್ಲಾಕ್‌ಗಳನ್ನಾಗಿ ವಿಂಗಡಿಸಿ ಸಿಬ್ಬಂದಿ ನಿಯೋಜಿಸಿ ಗಣತಿ ಮಾಡೋದು. ಗುಂಪಿನಲ್ಲಿ ಕಾಣುವ ಆನೆಗಳ ಛಾಯಾಚಿತ್ರ ತೆಗೆದು ಆನೆಗಣತಿ ಮಾಡೋದು ಹೀಗೆ ನಾನಾ ಮಾರ್ಗಗಳಲ್ಲಿ ಆನೆ ಗಣತಿ ನಡೆಸಲಾಗುತ್ತದೆ.

    ಆನೆ ಗಣತಿ ಕಾರ್ಯದಲ್ಲಿ ಈ ಬಾರಿ ಸ್ವಯಂ ಸೇವಕರಿಗೆ ಅವಕಾಶ ಇಲ್ಲವಾಗಿದ್ದು, ಅರಣ್ಯ ಸಿಬ್ಬಂದಿಗೆ ಮಾತ್ರ ಗಣತಿ ಕಾರ್ಯದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಆನೆಗಳ ಅಂಕಿ-ಅಂಶಗಳ ಪತ್ತೆ ಜೊತೆಗೆ ಆನೆ ಕಾರಿಡಾರ್‌ಗಳನ್ನು ಪುನರ್ ಸ್ಥಾಪಿಸಬೇಕು ಎಂಬುದು ಪರಿಸರವಾದಿಗಳ ಆಗ್ರಹವಾಗಿದೆ.

  • ಆನೆಗಳ ಸಂಖ್ಯೆಯಲ್ಲಿ ಕರ್ನಾಟಕ ನಂ.1 – ರಾಜ್ಯದಲ್ಲಿ ಬಂಡೀಪುರಕ್ಕೆ ಮೊದಲ ಸ್ಥಾನ

    ಆನೆಗಳ ಸಂಖ್ಯೆಯಲ್ಲಿ ಕರ್ನಾಟಕ ನಂ.1 – ರಾಜ್ಯದಲ್ಲಿ ಬಂಡೀಪುರಕ್ಕೆ ಮೊದಲ ಸ್ಥಾನ

    ಚಾಮರಾಜನಗರ: ಹುಲಿ ಸಂರಕ್ಷಿತಾರಣ್ಯ ಬಂಡೀಪುರ (Bandipur Tiger Reserve) ಈಗ ರಾಜ್ಯದಲ್ಲೇ ಅತಿಹೆಚ್ಚು ಆನೆಗಳನ್ನು (Elephants) ಹೊಂದಿದ ಅರಣ್ಯ ಪ್ರದೇಶವಾಗಿಯೂ ಗುರುತಿಸಿಕೊಂಡಿದೆ.

    ಚಾಮರಾಜನಗರ (Chamarajanagar) ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಅರಣ್ಯ ವ್ಯಾಪ್ತಿಯಲ್ಲಿ 1,116 ಆನೆಗಳು ಪತ್ತೆಯಾಗಿದ್ದು, ರಾಜ್ಯದಲ್ಲೇ ನಂ.1 ಅರಣ್ಯ ಪ್ರದೇಶವಾಗಿದೆ. ಜೊತೆಗೆ ವನ್ಯಪ್ರಿಯರ ಹಾಟ್‌ಸ್ಪಾಟ್ ಆಗಿಯೂ ಬಂಡೀಪುರ ಗುರುತಿಸಿಕೊಂಡಿದೆ ಎಂದು ಬಂಡೀಪುರ ಮುಖ್ಯ ಅರಣ್ಯಾಧಿಕಾರಿ ರಮೇಶ್ ಕುಮಾರ್ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಬಿಜೆಪಿ ವಿರುದ್ಧದ 40% ಆರೋಪ ಸತ್ಯ, ಡಿಕೆಶಿ ವಿರುದ್ಧ 15% ಕಮಿಷನ್ ಆರೋಪ ಸುಳ್ಳು: ರಾಮಲಿಂಗಾ ರೆಡ್ಡಿ

    6 ವರ್ಷಗಳಲ್ಲಿ ಆನೆಗಳ ಸಂಖ್ಯೆ ಹೆಚ್ಚಳ:
    ಕಳೆದ 6 ವರ್ಷಗಳ ಅವಧಿಯಲ್ಲಿ ಆನೆಗಳ ಸಂಖ್ಯೆ 3146 ರಷ್ಟು ಹೆಚ್ಚಳವಾಗಿದೆ. ಇದರೊಂದಿಗೆ ದೇಶದಲ್ಲಿ ಈಗಾಗಲೇ ಹುಲಿಗಳ ಸಂಖ್ಯೆಯಲ್ಲಿ 2ನೇ ಸ್ಥಾನದಲ್ಲಿರುವ ಕರ್ನಾಟಕ ಆನೆಗಳ ಸಂಖ್ಯೆಯಲ್ಲಿ ಮೊದಲ ಸ್ಥಾನಕ್ಕೇರಿದೆ. ರಾಜ್ಯದಲ್ಲೀಗ ಒಟ್ಟು 6,395 ಆನೆಗಳಿವೆ. ಇದನ್ನೂ ಓದಿ: ಸ್ಪಿನ್ ಮಾಂತ್ರಿಕ ಮುತ್ತಯ್ಯ ಮುರಳೀಧರನ್ ಹೊಸ ಇನ್ನಿಂಗ್ಸ್ ಆರಂಭ – ಧಾರವಾಡದಲ್ಲಿ 900 ಕೋಟಿ ಹೂಡಿಕೆ

    ಬಂಡೀಪುರ ನಂ.1:
    ರಾಜ್ಯದಲ್ಲಿ ಒಟ್ಟು 23 ಅರಣ್ಯ ಪ್ರದೇಶಗಳಿವೆ. ಈ ಪೈಕಿ ಬಂಡೀಪುರ ಹುಲಿ ಸಂರಕ್ಷಿತಾರಣ್ಯದಲ್ಲಿ 1,116 ಆನೆಗಳಿದ್ದು, ರಾಜ್ಯದಲ್ಲೇ ಅತಿಹೆಚ್ಚು ಆನೆಗಳನ್ನು ಹೊಂದಿರುವ ಅರಣ್ಯವಾಗಿದೆ. ನಾಗರಹೊಳೆ ಅರಣ್ಯ (Nagarahole Forest) ವ್ಯಾಪ್ತಿಯಲ್ಲಿ 831, ಯಲ್ಲಾಪುರ, ಹಳಿಯಾಳ, ಕುದುರೆಮುಖ ಮತ್ತು ಭದ್ರಾವತಿ ಅರಣ್ಯದಲ್ಲಿ ಅತಿ ಕಡಿಮೆ ಆನೆಗಳಿವೆ. ಯಲ್ಲಾಪುರದಲ್ಲಿ 2, ಹಳಿಯಾಳದಲ್ಲಿ 3, ಕುದುರೆಮುಖದಲ್ಲಿ 5 ಮತ್ತು ಭದ್ರಾವತಿಯಲ್ಲಿ 8 ಆನೆಗಳಿವೆ. ಇದರೊಂದಿಗೆ ಮಲೆ ಮಹದೇಶ್ವರ ವನ್ಯಧಾಮದಲ್ಲಿ 706, ಬಿಳಿಗಿರಿ ರಂಗನಬೆಟ್ಟ ಹುಲಿ ಸಂರಕ್ಷಿತಾರಣ್ಯದಲ್ಲಿ 619 ಆನೆಗಳು ಪತ್ತೆಯಾಗಿದ್ದು, ರಾಜ್ಯದಲ್ಲಿರುವ ಒಟ್ಟು 6,395 ಆನೆಗಳಿವೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

     

    ಆನೆ ಗಣತಿ ನಡೆದಿದ್ದು ಹೇಗೆ?
    ಕರ್ನಾಟಕ, ಕೇರಳ ಮತ್ತು ತಮಿಳುನಾಡು ರಾಜ್ಯಗಳ ಮುಂದಾಳತ್ವದೊಂದಿಗೆ 2023ರ ಮೇ 19-19ರ ವರೆಗೆ ಏಕಕಾಲದಲ್ಲಿ ಆನೆಗಳ ಗಣತಿ ನಡೆಸಲಾಯಿತು. ಅದೇ ದಿನಾಂಕದಂದು ಆಂಧ್ರ ಪ್ರದೇಶದಲ್ಲಿಯೂ ಇದೇ ರೀತಿ ಗಣತಿ ಕಾರ್ಯ ನಡೆಸಲಾಯಿತು. ಭಾರತೀಯ ವಿಜ್ಞಾನ ಸಂಸ್ಥೆಯ ತಾಂತ್ರಿಕ ನೆರವಿನೊಂದಿಗೆ ಕರ್ನಾಟಕ ಅರಣ್ಯ ಇಲಾಖೆಯು ಆನೆಗಳ ಗಣತಿ ನಡೆಸಿದೆ. ರಾಜ್ಯದ 32 ವಿಭಾಗಗಳಿಂದ 3,400ಕ್ಕೂ ಹೆಚ್ಚು ಸಿಬ್ಬಂದಿ ಆನೆಗಳ ಗಣತಿ ಕಾರ್ಯದಲ್ಲಿ ಭಾಗವಹಿಸಿದ್ದರು. ಆನೆಗಣತಿಯನ್ನು ನೇರ ಎಣಿಕೆ, ಬ್ಲಾಕ್ ಎಣಿಕೆ, ಲದ್ದಿ ಎಣಿಕೆ ಮತ್ತು ವಾಟರ್ ಹೋಲ್ ಎಣಿಕೆ ಮೂಲಕ ಕೈಗೊಳ್ಳಲಾಗಿತ್ತು.

    ಪ್ರತಿ 5 ವರ್ಷಗಳಿಗೊಮ್ಮೆ ಅರಣ್ಯ ಇಲಾಖೆ ಆನೆ ಗಣತಿ ನಡೆಸಲಿದೆ. ಅದರಂತೆ ಕಳೆದ ಮೇ ತಿಂಗಳಲ್ಲಿ ಆನೆ ಗಣತಿ ನಡೆಸಲಾಗಿತ್ತು. ಗಣತಿಯನ್ವಯ ಬಂಡೀಪುರ ನಂ.1 ಆನೆಗಳ ಆವಾಸಸ್ಥಾನವಾಗಿದೆ. ಹುಲಿಗಳ ಸಂಖ್ಯೆಯಲ್ಲಿ ದೇಶದಲ್ಲೇ 2ನೇ ಸ್ಥಾನ ಪಡೆದಿರುವ ಬಂಡೀಪುರ ರಾಜ್ಯಕ್ಕೆ ನಂ.1 ಸ್ಥಾನದಲ್ಲಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸೇನಾ ಕಂಟೋನ್ಮೆಂಟ್ ಆಸ್ಪತ್ರೆಯಲ್ಲಿ ಆನೆಗಳ ರೌಂಡ್ಸ್ – ವೀಡಿಯೋ ವೈರಲ್

    ಸೇನಾ ಕಂಟೋನ್ಮೆಂಟ್ ಆಸ್ಪತ್ರೆಯಲ್ಲಿ ಆನೆಗಳ ರೌಂಡ್ಸ್ – ವೀಡಿಯೋ ವೈರಲ್

    ಕೋಲ್ಕತ್ತಾ: ಸೇನಾ ಕಂಟೋನ್ಮೆಂಟ್‌ನಲ್ಲಿರುವ ಆಸ್ಪತ್ರೆಯ ವಾರ್ಡ್‌ ಆನೆಗಳು ನುಗ್ಗಿರುವ ಘಟನೆ ಬಂಗಾಳದ ಜಲ್ಪೈಗುರಿ ಜಿಲ್ಲೆಯಲ್ಲಿ ನಡೆದಿದ್ದು, ಇದೀಗ ಈ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

    ವಸತಿ ಪ್ರದೇಶಕ್ಕೆ ಆನೆಗಳು ನುಗ್ಗಿದ ಹಿನ್ನೆಲೆ ಕೆಲಹೊತ್ತು ಅಲ್ಲಿನ ಸ್ಥಳೀಯ ನಿವಾಸಿಗಳಲ್ಲಿ ಆತಂಕ ಸೃಷ್ಟಿಯಾಗಿತ್ತು. ವೀಡಿಯೋದಲ್ಲಿ ಜಲ್ಪೈಗುರಿ ಜಿಲ್ಲೆಯ ಸೇನಾ ಕಂಟೋನ್ಮೆಂಟ್‌ನಲ್ಲಿರುವ ಆಸ್ಪತ್ರೆಯಲ್ಲಿ ಆನೆಗಳು ನಡೆದುಕೊಂಡು ಹೋಗುತ್ತಿರುವುದನ್ನು ಕಾಣಬಹುದಾಗಿದೆ.

    ಕಟ್ಟಡದ ಒಳಗೆ ಆನೆಗಳು ಓಡಾಡುತ್ತಿರುವ ದೃಶ್ಯವನ್ನು ಜನರು ದೂರದಿಂದಲೇ ತಮ್ಮ ಮೊಬೈಲ್ ಫೋನ್‌ಗಳಲ್ಲಿ ಸೆರೆಹಿಡಿಯಲು ಪ್ರಯತ್ನಿಸುತ್ತಿರುವುದನ್ನು ನಾವು ನೋಡಬಹುದು. ಇದನ್ನೂ ಓದಿ: ನಿಮ್ಮ ಸರ್ಕಾರದಲ್ಲಿ ದಿಂಬು, ಚೆಂಬು ಖರೀದಿಯಲ್ಲೂ ನಡೆದ ಭ್ರಷ್ಟಾಚಾರ ನೆನಪಿಸಿಕೊಳ್ಳಿ- ಸಿದ್ದುಗೆ ಸುನಿಲ್ ತಿರುಗೇಟು

    ಇದೀಗ ಈ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದು, ನೆಟ್ಟಿಗರು ಟ್ರೋಲ್ ಮಾಡುತ್ತಿದ್ದಾರೆ. ಕೆಲವರು, ಕಾಡುಗಳನ್ನು ನಾಶಪಡಿಸಿದ ಹಿನ್ನೆಲೆ ಆನೆಗಳು ಜನವಸತಿ ಪ್ರದೇಶಗಳಿಗೆ ನುಗ್ಗಿದೆ. ಇದು ಅರಣ್ಯ ನಾಶದ ಫಲಿತಾಂಶ ಎಂದು ಕಾಮೆಂಟ್ ಮಾಡುತ್ತಿದ್ದಾರೆ. ಇದನ್ನೂ ಓದಿ: 255 ಕೋಟಿ ಡೀಲ್‌ – ಅಮೆರಿಕದ ಕಂಪನಿಯನ್ನು ಖರೀದಿಸಲಿದೆ ರಿಲಯನ್ಸ್‌

    ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಪ್ರತಿಕ್ರಿಯೆಗಳ ಒಂದು ಶ್ರೇಣಿಯನ್ನು ಪ್ರಚೋದಿಸಿತು, ಹೆಚ್ಚಾಗಿ ತಮಾಷೆಯಾಗಿದೆ. ಆದರೆ, ಆನೆಗಳು ಜನವಸತಿ ಪ್ರದೇಶಗಳಿಗೆ ಪ್ರವೇಶಿಸುವುದು ಅರಣ್ಯನಾಶದ ಪರಿಣಾಮವಾಗಿದೆ ಎಂದು ಕೆಲವರು ತಿಳಿಸಿದರು. “ಅರಣ್ಯ ನಾಶ ಮತ್ತು ಅರಣ್ಯ ಮತ್ತು ಅವರ ಮನೆಗಳ ನಾಶದ ಫಲಿತಾಂಶ” ಎಂದು ಬಳಕೆದಾರರು ಬರೆದಿದ್ದಾರೆ.

     

    Live Tv
    [brid partner=56869869 player=32851 video=960834 autoplay=true]

  • ವಿಶ್ವವಿಖ್ಯಾತ ದಸರಾ ಮಹೋತ್ಸವ – ಇಂದು ಗಜ ಪಯಣ ಆರಂಭ

    ವಿಶ್ವವಿಖ್ಯಾತ ದಸರಾ ಮಹೋತ್ಸವ – ಇಂದು ಗಜ ಪಯಣ ಆರಂಭ

    ಮೈಸೂರು: ವಿಶ್ವವಿಖ್ಯಾತ ದಸರಾ ಮಹೋತ್ಸವಕ್ಕೆ ದಿನಗಣನೆ ಪ್ರಾರಂಭವಾಗಿದ್ದು, ಇಂದು ಗಜ ಪಯಣ ಆರಂಭವಾಗಿದೆ.

    ಕಾಡಿನಿಂದ ನಾಡಿಗೆ ಆನೆಗಳು ಹೊರಡಲಿವೆ. ನಾಡಹಬ್ಬದ ಮೊದಲ ಅಧಿಕೃತ ಕಾರ್ಯಕ್ರಮ ಇಂದು ಪ್ರಾರಂಭವಾಗಲಿದ್ದು, ಅಭಿಮನ್ಯು ನೇತೃತ್ವದಲ್ಲಿ ಗಜಪಡೆ ಮೈಸೂರಿಗೆ ಕಾಲಿಡಲಿದೆ. 57 ವರ್ಷದ ಅಭಿಮನ್ಯು, 22 ವರ್ಷದ ಭೀಮ, 38 ವರ್ಷದ ಮಹೇಂದ್ರ ಹಾಗೂ 39 ವರ್ಷದ ಗೋಪಲಸ್ವಾಮಿ, 63 ವರ್ಷದ ಅರ್ಜುನ, 59 ವರ್ಷದ ವಿಕ್ರಮ, 44 ವರ್ಷದ ಧನಂಜಯ, 45 ವರ್ಷದ ಕಾವೇರಿ, 41 ವರ್ಷದ ಗೋಪಿ. ಇದನ್ನೂ ಓದಿ: ಫ್ಲ್ಯಾಶ್‌ಲೈಟ್‌ನಲ್ಲಿ ಇಸಿಜಿ ಟೆಸ್ಟ್ ಮಾಡಿದ ಸರ್ಕಾರಿ ಆಸ್ಪತ್ರೆ ವೈದ್ಯರು 

    40 ವರ್ಷದ ಶ್ರೀರಾಮ ಹಾಗೂ 63 ವರ್ಷದ ವಿಜಯಾ, 49 ವರ್ಷದ ಚೈತ್ರಾ, 21 ವರ್ಷದ ಲಕ್ಷ್ಮಿ ಹಾಗೂ 18 ವರ್ಷದ ಪಾರ್ಥಸಾರಥಿ ಆನೆಗಳು ಆಗಮನವಾಗಲಿದೆ.

    ಇಂದು ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ವೀರಹೊಸಹಳ್ಳಿಯಿಂದ ಗಜಪಯಣ ಆರಂಭವಾಗಲಿದೆ. ಜನಪ್ರತಿನಿಧಿಗಳು ಗಜಪಯಣಕ್ಕೆ ಸ್ವಾಗತ ಕೋರಲಿದ್ದಾರೆ. 9 ಆನೆಗಳು ಮೊದಲ ತಂಡದಲ್ಲಿ ಬರಲಿದ್ದು, 2ನೇ ತಂಡದಲ್ಲಿ 5 ಆನೆಗಳು ಬರಲಿವೆ. ಜಂಬೂ ಸವಾರಿಯಲ್ಲಿ ಒಟ್ಟು 14 ಆನೆಗಳು ಭಾಗಿಯಾಗಲಿದ್ದು, ಸ್ಟ್ಯಾಂಡ್ ಬೈ ರೂಪದಲ್ಲಿ ಇರಿಸಿ ಕೊಳ್ಳಲು 3 ಆನೆಗಳನ್ನು ಹೆಚ್ಚುವರಿಯಾಗಿ ನಾಡಿಗೆ ಕರೆಸಿ ಕೊಳ್ಳಲಾಗುತ್ತಿದೆ. ಇದನ್ನೂ ಓದಿ:  ಮನಬಂದಂತೆ ಗುಂಡಿನ ದಾಳಿ- ಕಿರಾತಕನ ಗುಂಡೇಟಿಗೆ ನಾಲ್ವರು ಬಲಿ, ಆರೋಪಿ ಪರಾರಿ

    Live Tv
    [brid partner=56869869 player=32851 video=960834 autoplay=true]

  • 14 ತಿಂಗಳ ನಂತರ ಭೇಟಿ – ಪಾಲಕನನ್ನು ಸುತ್ತುವರೆದು ಸೊಂಡಿಲಿನಿಂದ ಅಪ್ಪಿಕೊಂಡ ಆನೆಗಳು

    14 ತಿಂಗಳ ನಂತರ ಭೇಟಿ – ಪಾಲಕನನ್ನು ಸುತ್ತುವರೆದು ಸೊಂಡಿಲಿನಿಂದ ಅಪ್ಪಿಕೊಂಡ ಆನೆಗಳು

    ಬ್ಯಾಂಕಾಕ್: ಆನೆಗಳು ಅಸಾಧಾರಣವಾದ ಬುದ್ಧಿವಂತ ಪ್ರಾಣಿಗಳಾಗಿದ್ದು, ಅವುಗಳಿಗೂ ಭಾವನೆಗಳಿವೆ ಎಂದು ಈ ವೀಡಿಯೋ ನೋಡಿದರೆ ಅರ್ಥವಾಗುತ್ತೆ. ಸೋಶಿಯಲ್ ಮೀಡಿಯಾದಲ್ಲಿ ಈ ವೀಡಿಯೋ ನೋಡಿ ನೆಟ್ಟಿಗರು ಭಾವುಕರಾಗಿದ್ದಾರೆ.

    ಟ್ವಿಟ್ಟರ್ ನಲ್ಲಿ ಬ್ಯುಟೆಂಗೆಬೀಡೆನ್ ಅವರು ವೀಡಿಯೋವನ್ನು ಹಂಚಿಕೊಂಡಿದ್ದು, ಆನೆಗಳು 14 ತಿಂಗಳ ನಂತರ ತಮ್ಮ ಪಾಲಕರೊಂದಿಗೆ ಮತ್ತೆ ಒಂದಾಗುತ್ತಿವೆ ಎಂದು ಬರೆದು ಟ್ವೀಟ್ ಮಾಡಿದ್ದಾರೆ. ಪ್ರಸ್ತುತ ಈ ಭಾವನಾತ್ಮಕ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ.

    ಈ ಘಟನೆಯು ಥೈಲ್ಯಾಂಡ್‍ನ ಎಲಿಫೆಂಟ್ ನೇಚರ್ ಪಾರ್ಕ್‍ನಲ್ಲಿ ನಡೆದಿದ್ದು, ಪ್ರಾಣಿಗಳು ಮತ್ತು ಮನುಷ್ಯರ ನಡುವಿನ ವಿಶೇಷ ಬಾಂಧವ್ಯವನ್ನು ಬಿಂಬಿಸುವ ಈ ಹೃದಯಸ್ಪರ್ಶಿ ವೀಡಿಯೋ ನೋಡಿದ ನೆಟ್ಟಿಗರು ಭಾವನಾತ್ಮಕವಾಗಿ ಕಮೆಂಟ್ ಮಾಡುತ್ತಿದ್ದಾರೆ. ಇದನ್ನೂ ಓದಿ: ನನಗೆ ಮೂರು ಬಾರಿ ಕಚ್ಚಿತು : ಹಾವು ಕಡಿತದ ಬಗ್ಗೆ ವಿವರಿಸಿದ ಸಲ್ಲು

    ವೀಡಿಯೋದಲ್ಲಿ, ಥಾಯ್ಲೆಂಡ್‍ನ ಅಭಯಾರಣ್ಯದಲ್ಲಿ ಆನೆಗಳ ಹಿಂಡು 14 ತಿಂಗಳ ನಂತರ ಹಿಂತಿರುಗಿದ್ದು, ಆನೆಗಳನ್ನು ಪಾಲಕ ಡೆರಕ್ ಥಾಂಪ್ಸನ್ ಸಂತೋಷದಿಂದ ಸ್ವಾಗತಿಸುತ್ತಾನೆ. ಆಗ ಎಲ್ಲ ಆನೆಗಳು ಅವನ ಸುತ್ತ ಬಂದು ನಿಂತುಕೊಳ್ಳುತ್ತವೆ. ಆಗ ಥಾಂಪ್ಸನ್ ಅವುಗಳನ್ನು ಅಪ್ಪಿಕೊಳ್ಳುತ್ತಾನೆ. ಆನೆಗಳು ಥಾಂಪ್ಸನ್ ನನ್ನು ತಮ್ಮ ಸೊಂಡಿಲಿನಿಂದ ಅಪ್ಪಿಕೊಂಡು ಅವುಗಳ ಪ್ರೀತಿಯನ್ನು ವ್ಯಕ್ತಪಡಿಸುತ್ತವೆ. ಈ ವೀಡಿಯೋ ನೋಡಿದರೆ ಮನುಷ್ಯ ಮತ್ತೆ ಪ್ರಾಣಿಗಳ ನಡುವೆ ಯಾವ ರೀತಿಯ ಬಾಂಧವ್ಯವಿದೆ ಎಂದು ಸ್ಪಷ್ಟವಾಗಿ ತಿಳಿಯುತ್ತೆ.

    ವೀಡಿಯೋ ನೋಡಿದ ನೆಟ್ಟಿಗರು, ಪ್ರೀತಿಯು ಸಾರ್ವತ್ರಿಕ ಭಾವನೆಯಾಗಿದೆ. ಪ್ರೀತಿ ಮಾಡುವುದನ್ನು ನಾವು ಪ್ರಾಣಿಗಳಿಂದ ಕಲಿಯಬೇಕು ಎಂದು ಕಮೆಂಟ್ ಮಾಡಿದರೆ, ಇನ್ನೊಬ್ಬರು, ದೇವರ ಅತ್ಯಂತ ಅದ್ಭುತ ಸೃಷ್ಟಿ ಎಂದರೆ ವನ್ಯಜೀವಿಗಳು. ನಾನು ಚಿಕ್ಕಂದಿನಿಂದಲೂ ಆನೆಗಳನ್ನು ಪ್ರೀತಿಸುತ್ತೇನೆ. ನಾನು ಪ್ರತಿ ಬಾರಿ ಆನೆಗಳ ವೀಡಿಯೋವನ್ನು ನೋಡುತ್ತೇನೆ. ಅದರಿಂದ ನನಗೆ ಶಾಂತಿ ಸಿಗುತ್ತೆ ಎಂದು ಕಮೆಂಟ್ ಮಾಡಿದ್ದಾರೆ.

  • ಮೈಸೂರು ಅರಮನೆ ಆನೆಗಳು ಗುಜರಾತ್‌ಗೆ ಶಿಫ್ಟ್‌

    ಮೈಸೂರು ಅರಮನೆ ಆನೆಗಳು ಗುಜರಾತ್‌ಗೆ ಶಿಫ್ಟ್‌

    ಮೈಸೂರು: ಅರಮನೆಯ ಆನೆಗಳು ಗುಜರಾತ್‌ಗೆ ಶಿಪ್ಟ್‌ ಆಗಿವೆ. ಆನೆಗಳ ನಿರ್ವಹಣೆ ಕಷ್ಟವಾದ ಹಿನ್ನೆಲೆಯಲ್ಲಿ ಗುಜರಾತ್‌ಗೆ ರವಾನಿಸಲಾಗಿದೆ.

    ರಾಜವಂಶಸ್ಥರಿಗೆ ಸೇರಿದ ಈ ಆನೆಗಳ ನಿರ್ವಹಣೆ ಕಷ್ಟವಾಗಿತ್ತು. ಪ್ರತಿ ತಿಂಗಳು ಆನೆಗಳ ನಿರ್ವಹಣೆಗೆ ಲಕ್ಷ ಲಕ್ಷ ಖರ್ಚಾಗುತ್ತಿತ್ತು. ಹೀಗಾಗಿ ಗುಜರಾತ್‌ನ ಆನೆಗಳ ಪುನರ್ವಸತಿ ಕೇಂದ್ರಕ್ಕೆ ರವಾನಿಸಲಾಗಿದೆ. ಆನೆ ವೈದ್ಯರಿಂದ ತಪಾಸಣೆ ನಡೆಸಿದ್ದ ಅರಣ್ಯ ಇಲಾಖೆಯು ತಪಾಸಣೆ ಬಳಿಕ ಆನೆಗಳನ್ನು ಕಳುಹಿಸಿತು. ಇದನ್ನೂ ಓದಿ: ಶೌರ್ಯ, ಶೌರ್ಯೇತರ ಪ್ರಶಸ್ತಿ ಪಡೆದ ಯೋಧರ ಅನುದಾನ ಹೆಚ್ಚಳಕ್ಕೆ ಸಿಎಂ ಅಸ್ತು

    ಮೂರು ದಿನಗಳ ಕಾಲ ಪ್ರಯಾಣ ಮಾಡಲಿದ್ದು, ಆನೆಗಳು ಮೂರು ದಿನದ ಬಳಿಕ ಗುಜರಾತ್ ತಲುಪಲಿವೆ. ದೊಡ್ಡ ಟ್ರಕ್ ಮೂಲಕ ಗುಜರಾತ್‌ಗೆ ಆನೆಗಳನ್ನು ರವಾನಿಸಲಾಗಿದೆ. ಇದನ್ನೂ ಓದಿ: ಪವರ್ ಸ್ಟಾರ್ ಹೆಸರಲ್ಲಿ ಮಿನಿ ಸ್ಮಾರಕ ನಿರ್ಮಿಸಿದ ಹೊಸೂರು ಗ್ರಾಮಸ್ಥರು

  • ತುಲಾ ಲಗ್ನದಲ್ಲಿ ಮೈಸೂರು ಅರಮನೆ ಪ್ರವೇಶಿಸಿದ ದಸರಾ ಆನೆಗಳು

    ತುಲಾ ಲಗ್ನದಲ್ಲಿ ಮೈಸೂರು ಅರಮನೆ ಪ್ರವೇಶಿಸಿದ ದಸರಾ ಆನೆಗಳು

    ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಸಿದ್ಧತೆ ಭರದಿಂದ ಸಾಗಿದ್ದು, ಇಂದು ತುಲಾ ಲಗ್ನದಲ್ಲಿ ಗಜಪಡೆ ಅರಮನೆಯನ್ನು ಪ್ರವೇಸಿಸಿದೆ. ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಆನೆಗಳನ್ನು ಸ್ವಾಗತಿಸಿದ್ದಾರೆ.

    ಅಂಬಾವಿಲಾಸ ಅರಮನೆಯಂಗಳಕ್ಕೆ ಗಜಪಡೆ ಆಗಮಿಸಿದ್ದು, ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ಎಂಟು ಆನೆಗಳು ಅರಮನೆಗೆ ಬಂದಿವೆ. ಬೆಳಗ್ಗೆ 6:45ಕ್ಕೆ ಮೈಸೂರಿನ ಅಶೋಕಪುರಂನ ಅರಣ್ಯ ಭವನದಲ್ಲಿ ಸಾಂಪ್ರದಾಯಿಕ ಪೂಜೆ ನೆರವೇರಿದ್ದು, ಬಳಿಕ 7:35ಕ್ಕೆ ಅರಣ್ಯ ಭವನದಿಂದ ಅರಮನೆಯತ್ತ ಮೆರವಣಿಗೆ ಮೂಲಕ ಆನೆಗಳು ಆಗಮಿಸಿವೆ. ಇದನ್ನೂ ಓದಿ: 2022ರಲ್ಲಿ ಭಾರತದ ಜಿಡಿಪಿ ಶೇ.6.7 – ವಿಶ್ವದಲ್ಲೇ ಅತ್ಯಂತ ವೇಗದ ಬೆಳವಣಿಗೆ

    ಬೆಳಗ್ಗೆ 8:36 ರಿಂದ 9:11ರ ತುಲಾ ಲಗ್ನದಲ್ಲಿ ಆನೆಗಳು ಅರಮನೆ ಪ್ರವೇಶ ಮಾಡಿವೆ. ಅರಮನೆಯ ಜಯಮಾರ್ತಾಂಡ ದ್ವಾರದ ಬಳಿ ದಸರಾ ಗಜಪಡೆಗೆ ಸಾಂಪ್ರದಾಯಿಕ, ಪೂಜೆ, ಸರ್ಕಾರಿ ಗೌರವಗಳೊಂದಿಗೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಗಜಪಡೆಗೆ ಸ್ವಾಗತ ಕೋರಿದ್ದಾರೆ. ಕಾರ್ಯಕ್ರಮದಲ್ಲಿ ಗಣ್ಯರು ಭಾಗಿಯಾಗಿದ್ದಾರೆ.

    ಬೆಚ್ಚಿದ ಅಶ್ವತ್ಥಾಮ
    ನಗರದ ಸದ್ದುಗದ್ದಲಕ್ಕೆ ಅಶ್ವತ್ಥಾಮ ಬೆಚ್ಚಿದ್ದಾನೆ. ಅಶ್ವತ್ಥಾಮ ಆನೆ ಮೊದಲ ಬಾರಿಗೆ ದಸರಾಗೆ ಬಂದಿದೆ. ಹೀಗಾಗಿ ನಗರದ ಸದ್ದುಗದ್ದಲಕ್ಕೆ ಬೆಚ್ಚಿ ಫುಟ್‍ಪಾತ್ ಏರಿತ್ತು. ಅರಣ್ಯಭವನದಿಂದ ಅರಮನೆಗೆ ಬರುವ ವೇಳೆ ರಸ್ತೆಯಿಂದ ಫುಟ್‍ಪಾತ್ ಮಾರ್ಗಕ್ಕೆ ತೆರಳಿತ್ತು. ಬಳಿಕ ಮಾವುತ, ಕಾವಾಡಿ ಆನೆಯನ್ನು ನಿಯಂತ್ರಿಸಿ, ಫುಟ್‍ಪಾತ್‍ನಿಂದ ಕೆಳಗಿಳಿಸಿ, ರಸ್ತೆಯಲ್ಲಿ ಆನೆಯನ್ನು ಕರೆದುಕೊಂಡು ಅರಮನೆಗೆ ಕರೆತರಲಾಯಿತು.

  • ಕಾಡಾನೆಗಳನ್ನು ಸ್ಥಳಾಂತರಿಸಿ, ಇಲ್ಲವೇ ನಮ್ಮನ್ನೇ ಸ್ಥಳಾಂತರಿಸಿ- ಸರ್ಕಾರಕ್ಕೆ ಮಲೆನಾಡಿಗರ ಆಗ್ರಹ

    ಕಾಡಾನೆಗಳನ್ನು ಸ್ಥಳಾಂತರಿಸಿ, ಇಲ್ಲವೇ ನಮ್ಮನ್ನೇ ಸ್ಥಳಾಂತರಿಸಿ- ಸರ್ಕಾರಕ್ಕೆ ಮಲೆನಾಡಿಗರ ಆಗ್ರಹ

    ಚಿಕ್ಕಮಗಳೂರು: ಕಾಡಾನೆಗಳನ್ನು ಸ್ಥಳಾಂತರಿಸಿ, ಇಲ್ಲವೇ ಬೇರೆ ಭೂಮಿ ಕೊಡಿ, ನಾವು ಬೇರೆ ಕಡೆ ಹೋಗಿ ಬದುಕು ಕಟ್ಟಿಕೊಳ್ಳುತ್ತೇವೆ ಎಂದು ಜಿಲ್ಲೆಯ ಮೂಡಿಗೆರೆ ತಾಲೂಕಿನ ಮೂಲರಹಳ್ಳಿ, ಗುತ್ತಿ, ಭೈರಾಪುರ, ಊರಬಗೆ ಗ್ರಾಮದ ಜನ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

    ಕಳೆದೊಂದು ವಾರದಿಂದ ಮೂರು ಕಾಡಾನೆಗಳು ಹೊಲ-ಗದ್ದೆ, ತೋಟದಲ್ಲಿ ದಾಂಧಲೆ ನಡೆಸುತ್ತಿವೆ. ಬೆಳೆಗಳನ್ನು ಉಳಿಸಿಕೊಳ್ಳುವುದೇ ದೊಡ್ಡ ಸವಾಲಾಗಿದೆ. ಅಡಿಕೆ, ಕಾಫಿ, ಮೆಣಸು, ಬಾಳೆ ಸಂಪೂರ್ಣ ನೆಲಕಚ್ಚುತ್ತಿದೆ. ಹೀಗೇ ಆದರೆ ಬದುಕುವುದಾದರೂ ಹೇಗೆ ಎಂದು ಅರಣ್ಯ ಇಲಾಖೆಗೆ ಪ್ರಶ್ನಿಸಿರುವ ಸ್ಥಳಿಯರು, ಕಾಡಾನೆಗಳನ್ನು ಸ್ಥಳಾಂತರಿಸಿ, ಇಲ್ಲವೇ ನಮ್ಮನ್ನೇ ಸ್ಥಳಾಂತರಿಸಿ ಎಂದು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಸೋನು ಸೂದ್ ಕಚೇರಿ ಮೇಲೆ ಐಟಿ ದಾಳಿ

    ಮೂರು ದಿನಗಳಿಂದ ಕಾಡಾನೆಗಳು ನಿರಂತರ ದಾಳಿ ಮಾಡುತ್ತಿರುವುದರಿಂದ ಲಕ್ಷಾಂತರ ಮೌಲ್ಯದ ಬೆಳೆಗಳು ನಾಶವಾಗಿವೆ. ಕಳೆದ ಒಂದೆರಡು ದಶಕಗಳಿಂದ ಕಾಡಂಚಿನ ಗ್ರಾಮದ ಜನ ಆನೆ ಹಾವಳಿಯಿಂದ ಬಸವಳಿದಿದ್ದಾರೆ. ನಾಲ್ಕೈದು ವರ್ಷಗಳಿಂದ ನಿರಂತರ ಆನೆ ಹಾವಳಿಯಿಂದ ಮಲೆನಾಡಿಗರು ಕಂಗಾಲಾಗಿದ್ದಾರೆ. ಕಳೆದ ನಾಲ್ಕೈದು ವರ್ಷಗಳ ಅವಧಿಯಲ್ಲಿ ಆನೆ ಹಾವಳಿಯಿಂದ ಈಗಾಗಲೇ ನಾಲ್ಕೈದು ಜನ ಪ್ರಾಣ ಕೂಡ ಕಳೆದುಕೊಂಡಿದ್ದಾರೆ. ಇಷ್ಟು ದಿನ ಹೊಲಗದ್ದೆ, ತೋಟಗಳಲ್ಲಿದ್ದ ಆನೆಗಳು ಈಗೀಗ ನಾಡಿಗೂ ಬರುತ್ತಿರುವುದರಿಂದ ಹಳ್ಳಿಗರು ಭಯಗೊಂಡಿದ್ದಾರೆ. ಆನೆಗಳು ಕಂಡಾಕ್ಷಣ ಅರಣ್ಯ ಅಧಿಕಾರಿಗಳಿಗೆ ವಿಷಯ ಮುಟ್ಟಿಸಿದರೂ ಅವರು ಬರೋದು ಒಂದೆರಡು ಗಂಟೆಯ ಬಳಿಕವೇ ಎಂದು ಸ್ಥಳೀಯರು ಆರೋಪಿಸಿದ್ದಾರೆ.

    ಸರ್ಕಾರ ನಮ್ಮ ನೋವಿಗೆ ಸೂಕ್ತ ರೀತಿಯಲ್ಲಿ ಸ್ಪಂದಿಸುತ್ತಿಲ್ಲ. ಕಾಡಾನೆ ಹಾಗೂ ಕಾಡು ಪ್ರಾಣಗಳಿಂದ ರೈತರು ಬೆಳೆ ಕಳೆದುಕೊಂಡಾಗ ಸೂಕ್ತ ರೀತಿಯಲ್ಲಿ ಪರಿಹಾರವನ್ನೂ ನೀಡಲ್ಲ. ಸೂಕ್ತ ಪರಿಹಾರಕ್ಕಾಗಿ ಮೂಡಿಗೆರೆ ಅರಣ್ಯ ಇಲಾಖೆ ಎದುರು ಪ್ರತಿಭಟನೆ ನಡೆಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಕಾಡಾನೆ ಹಾವಳಿ ನಿಂತಿಲ್ಲ, ಸರ್ಕಾರದಿಂದ ಸಮಪರ್ಕಕ ಪರಿಹಾರವೂ ಬರುತ್ತಿಲ್ಲ. ಹೀಗೆ ಮುಂದುವರಿದರೆ ನಾವು ಬದುಕುವುದಾದರೂ ಹೇಗೆಂದು ಹಳ್ಳಿಗರು ಪ್ರಶ್ನಿಸಿದ್ದಾರೆ.

    ತಾಲೂಕಿನ ಸಾರಗೋಡು, ಕುಂದೂರು, ಗೌಡಹಳ್ಳಿಯಲ್ಲೂ ಆನೆ ಹಾವಳಿ ಮಿತಿಮೀರಿದೆ. ಅರಣ್ಯ ಅಧಿಕಾರಿಗಳು ಕಾಡಾನೆ ಹಾವಳಿ ತಪ್ಪಿಸಬೇಕು, ನೆಮ್ಮದಿಯಿಂದ ಬದುಕಲು ಅನುವು ಮಾಡಿಕೊಡಬೇಕೆಂದು ಸ್ಥಳೀಯರು ಸರ್ಕಾರಕ್ಕೆ ಆಗ್ರಹಿಸಿದ್ದಾರೆ.