Tag: ಆಪರೇಷನ್ ಗಂಗಾ

  • ಉಕ್ರೇನ್‍ನಿಂದ 22,500 ವಿದ್ಯಾರ್ಥಿಗಳು ವಾಪಸ್- ಆಪರೇಷನ್ ಗಂಗಾ ಪೂರ್ಣ

    ಉಕ್ರೇನ್‍ನಿಂದ 22,500 ವಿದ್ಯಾರ್ಥಿಗಳು ವಾಪಸ್- ಆಪರೇಷನ್ ಗಂಗಾ ಪೂರ್ಣ

    ನವದೆಹಲಿ: ರಷ್ಯಾ, ಉಕ್ರೇನ್ ಯುದ್ಧ ಪ್ರಾರಂಭವಾದಾಗಿನಿಂದ ಈವರೆಗೂ 22,500 ವಿದ್ಯಾರ್ಥಿಗಳನ್ನು ಉಕ್ರೇನ್‍ನಿಂದ ಕರೆ ತರಲಾಗಿದ್ದು, ಆಪರೇಷನ್ ಗಂಗಾ ಮಿಷನ್ ಪೂರ್ಣವಾಗಿದೆ ಎಂದು ಸುಪ್ರೀಂ ಕೋರ್ಟ್‍ಗೆ ಕೇಂದ್ರ ಸರ್ಕಾರ ಮಾಹಿತಿಯನ್ನು ನೀಡಿದೆ.

    ರಷ್ಯಾ, ಉಕ್ರೇನ್ ಹಿನ್ನೆಯಲ್ಲಿ ಉಕ್ರೇನ್‍ನಲ್ಲಿ ಸಿಲುಕೊಂಡಿದ್ದ ಭಾರತೀಯರನ್ನು ವಾಪಸ್ ಕರೆಸಲು ಕೇಂದ್ರ ಸರ್ಕಾರ ಆಪರೇಷನ್ ಗಂಗಾವನ್ನು ಪ್ರಾರಂಭಿಸಿತ್ತು. ರಷ್ಯಾ ಉಕ್ರೇನ್‍ನ ಮೇಲೆ ನಡೆಸುತ್ತಿರುವ ದಾಳಿಯಿಂದಾಗಿ ಅಲ್ಲಿನ ವಿಶ್ವವಿದ್ಯಾಲಯಗಳು ನಾಶವಾಗಿದೆ. ಇದರಿಂದಾಗಿ ಉಕ್ರೇನ್‍ನಿಂದ ವಾಪಸ್ ಆದ ವೈದ್ಯಕೀಯ ವಿದ್ಯಾರ್ಥಿಗಳ ಶಿಕ್ಷಣ ಸಂಬಂಧ ಅರ್ಜಿಗಳನ್ನು ಸುಪ್ರೀಂಕೋರ್ಟ್‍ಗೆ ಸಲ್ಲಿಸಿದ್ದರು. ಈ ಅರ್ಜಿಗೆ ಕೇಂದ್ರ ಸರ್ಕಾರ ಉತ್ತರ ನೀಡಿದೆ.

    ಅಟಾರ್ನಿ ಜನರಲ್  ವೇಣುಗೋಪಾಲ್‌  ಇಲ್ಲಿಯವರೆಗೆ 22,500 ವಿದ್ಯಾರ್ಥಿಗಳು ಸ್ವದೇಶಕ್ಕೆ ಬಂದಿದ್ದು, ಈ ದೊಡ್ಡ ಮಿಷನ್ ಪೂರ್ಣವಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಗುಜರಿ ಅಂಗಡಿಯಲ್ಲಿ ಸಿಲಿಂಡರ್ ಸ್ಫೋಟ – ಇಬ್ಬರು ಸಜೀವ ದಹನ ಓರ್ವ ಗಂಭೀರ

    ಈ ವೇಳೆ ಅವರ ಶಿಕ್ಷಣದ ಬಗ್ಗೆ ಕೇಳಿದ ಮುಖ್ಯ ನ್ಯಾ. ರಮಣ ಅವರು ಕೇಳಿದ ಪ್ರಶ್ನೆಗೆ, ಉಕ್ರೇನ್‍ನಿಂದ ವಾಪಸ್ ಆಗಿರುವ ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಬಗ್ಗೆ ಚರ್ಚಿಸಲಾಗುತ್ತಿದೆ. ಭಾರತದಲ್ಲೇ ಅಧ್ಯಯನ ನಡೆಸಲು ಒತ್ತು ನೀಡಲಾಗುವುದು. ಈ ಬಗ್ಗೆ ತಿರ್ಮಾನ ಕೈಗೊಳ್ಳಲು ಸಮಯ ಬೇಕಾಗಬಹುದು ಎಂದು ಉತ್ತರಿಸಿದರು.

    ರಷ್ಯಾ ಮತ್ತು ಉಕ್ರೇನ್ ಸಂಘರ್ಷದಿಂದ ಭಾರತಕ್ಕೆ ವಾಪಸ್ ಆದ ವಿದ್ಯಾರ್ಥಿಗಳ ಶಿಕ್ಷಣ ಮುಂದುವರಿಕೆಗೆ ಸಂಬಂಧಿಸಿದಂತೆ ವಿದ್ಯಾರ್ಥಿನಿ ಫಾತಿಮಾ ಅಹಾನಾ ಸೇರಿದಂತೆ ಹಲವು ಜನರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿಗಳು ಇತ್ಯರ್ಥ ಪಡಿಸುವ ಸಂಬಂಧ ಇಂದು ಸುಪ್ರೀಂಕೋರ್ಟ್ ಮುಖ್ಯ ನ್ಯಾ ಎನ್.ವಿ ರಮಣ ನೇತೃತ್ವದ ತ್ರಿ ಸದಸ್ಯ ಪೀಠ ವಿಚಾರಣೆ ನಡೆಸಿತು.

    ಇದಕ್ಕೂ ಮುನ್ನ ವಾದ ಮಂಡಿಸಿದ ಅರ್ಜಿದಾರರ ಪರ ವಕೀಲರು, ಉಕ್ರೇನ್ ನಿಂದ ವಾಪಸ್ ಆದ ವಿದ್ಯಾರ್ಥಿಗಳ ಶಿಕ್ಷಣದ ಬಗ್ಗೆ ಕೇಂದ್ರ ಸರ್ಕಾರ ಸ್ಪಷ್ಟತೆ ನೀಡಬೇಕು ಎಂದು ಕೋರಿಕೊಂಡರು. ಇಷ್ಟು ಮಾತ್ರವಲ್ಲದೇ ಆನ್ಲೈನ್ ಶಿಕ್ಷಣದ ಮೂಲಕ ಎಂಬಿಬಿಎಸ್ ಪಡೆದ ಉಕ್ರೇನ್ ವಿದ್ಯಾರ್ಥಿಗಳ ಪದವಿಯನ್ನು ಭಾರತ ಸರ್ಕಾರ ಒಪ್ಪಿಕೊಳ್ಳಲು ಸೂಚಿಸುವಂತೆ ಅವರು ಮನವಿ ಮಾಡಿದ್ದರು.

    ಕಳೆದ ಫೆಬ್ರವರಿ ಅಂತ್ಯದಿಂದ ಇಲ್ಲಿಯವರೆಗೂ ಆಪರೇಷನ್ ಗಂಗಾ ಯೋಜನೆಯಡಿ ಭಾರತೀಯರನ್ನು ರಕ್ಷಣೆ ಮಾಡಿ ತವರಿಗೆ ಕರೆ ತರಲಾಗಿದೆ. ಈ ಪೈಕಿ ಬಹುತೇಕರು ವಿದ್ಯಾರ್ಥಿಗಳೇ ಅನ್ನೋದು ವಿಶೇಷವಾಗಿತ್ತು. ಇದನ್ನೂ ಓದಿ: ರಾಜ್ಯದಲ್ಲಿ ಮೆಡಿಕಲ್ ಸೀಟ್‍ಗಳ ಶುಲ್ಕ ಕಡಿತಕ್ಕೆ ಚಿಂತನೆ – ಏನಿದು ಬೊಮ್ಮಾಯಿ ಎಬಿಸಿ ಸೂತ್ರ?

  • ಅತ್ಯಂತ ಸವಾಲಿನ ಕಾರ್ಯಾಚರಣೆಯಲ್ಲೂ 22,500 ಭಾರತೀಯರು ತಾಯ್ನಾಡಿಗೆ: ಜೈಶಂಕರ್

    ನವದೆಹಲಿ: ಉಕ್ರೇನ್-ರಷ್ಯಾ ಯುದ್ಧದ ಸಂದರ್ಭದಲ್ಲಿ ಭಾರತೀಯರನ್ನು ಮರಳಿ ದೇಶಕ್ಕೆ ಕರೆತರುವ ಕಾರ್ಯಾಚರಣೆ ಅತ್ಯಂತ ಸವಾಲಿನದ್ದಾಗಿದ್ದರೂ 22,500 ಭಾರತೀಯರನ್ನು ಸ್ಥಳಾತರಿಸಲಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಮಂಗಳವಾರ ಸಂಸತ್ತಿನಲ್ಲಿ ತಿಳಿಸಿದರು.

    ಉಕ್ರೇನ್ ರಷ್ಯಾದ ಮೇಲೆ ದಾಳಿ ಮಾಡುವುದಕ್ಕೂ ಮೊದಲು ಅಲ್ಲಿದ್ದ ಭಾರತೀಯರನ್ನು ರಕ್ಷಿಸಲು ಭಾರತ ತೆಗೆದುಕೊಂಡ ಕ್ರಮಗಳನ್ನು ಜೈಶಂಕರ್ ಸಂಸತ್ತಿನಲ್ಲಿ ವಿವರಿಸಿದರು.

    ರಷ್ಯಾ ಉಕ್ರೇನ್ ಮೇಲೆ ಯುದ್ಧ ಸಾರುವ ಬಗ್ಗೆ ಸುಳಿವು ಸಿಗುತ್ತಿದ್ದಂತೆ ಜನವರಿ ತಿಂಗಳಿನಿಂದಲೇ ಉಕ್ರೇನ್‌ನ ಭಾರತೀಯ ರಾಯಭಾರ ಕಚೇರಿ ಅಲ್ಲಿದ್ದ ಭಾರತೀಯ ವಿದ್ಯಾರ್ಥಿಗಳಿಗಾಗಿ ನೋಂದಣಿ ಕಾರ್ಯವನ್ನು ಪ್ರಾರಂಭಿಸಿತು. ಇದರ ಪರಿಣಾಮವಾಗಿ ಉಕ್ರೇನ್‌ನಲ್ಲಿದ್ದ 20 ಸಾವಿರ ಭಾರತೀಯರು ತಮ್ಮ ಹೆಸರನ್ನು ನೋಂದಾಯಿಸಿಕೊಂಡಿದ್ದರು ಎಂಬ ಮಾಹಿತಿ ನೀಡಿದರು. ಇದನ್ನೂ ಓದಿ: ಮಲಯಾಳಂ ಸುದ್ದಿ ವಾಹಿನಿ ನಿಷೇಧಿಸಿ ಕೇಂದ್ರ ಹೊರಡಿಸಿದ್ದ ಆದೇಶಕ್ಕೆ ಸುಪ್ರೀಂ ತಡೆ

    ಸಲಹೆಯ ಹೊರತಾಗಿಯೂ ಸಾವಿರಾರು ವಿದ್ಯಾರ್ಥಿಗಳು ತಮ್ಮ ಹೆಸರನ್ನು ನೋದಾಯಿಸಿಕೊಳ್ಳಲು ಹಿಂದೇಟು ಹಾಕಿದರು. ಉಕ್ರೇನ್ ವಿಶ್ವವಿದ್ಯಾಲಯಗಳು ಆನ್‌ಲೈನ್ ತರಗತಿಗಳ ಬಗ್ಗೆ ವಿದ್ಯಾರ್ಥಿಗಳಿಗೆ ಯಾವುದೇ ಮಾಹಿತಿ ನೀಡಿರದ ಕಾರಣ ಹೆಚ್ಚಿನ ವಿದ್ಯಾರ್ಥಿಗಳು ತಮ್ಮ ಹೆಸರನ್ನು ನೋಂದಾಯಿಸಿಕೊಂಡಿರಲಿಲ್ಲ ಎಂದು ಸ್ಪಷ್ಟನೆ ನೀಡಿದರು.

    ಭೀಕರ ಯುದ್ಧದ ಸಂದರ್ಭದಲ್ಲಿ ಅಲ್ಲಿದ್ದ ಭಾರತೀಯರು ಉಕ್ರೇನ್‌ನಾದ್ಯಂತ ಚದುರಿ ಹೋಗಿದ್ದರು. ಅವರನ್ನು ಒಟ್ಟಾಗಿಸಿ, ಉಕ್ರೇನ್ ಗಡಿ ದಾಟಿಸಿ ದೇಶಕ್ಕೆ ಕರೆತರುವುದು ಅತ್ಯಂತ ಸವಾಲಿನ ಕೆಲಸವೇ ಆಗಿತ್ತು. ಈ ಕಾರ್ಯಕ್ಕಾಗಿ ಆಪರೇಷನ್ ಗಂಗಾ ಯೋಜನೆಯನ್ನು ಕಾರ್ಯ ರೂಪಕ್ಕೆ ತರಲಾಯಿತು ಎಂದು ಜೈಶಂಕರ್ ತಿಳಿಸಿದರು. ಇದನ್ನೂ ಓದಿ: ಹಿಜಬ್‌- ಹೈಕೋರ್ಟ್‌ ತೀರ್ಪು ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ವಿದ್ಯಾರ್ಥಿನಿ

    ಶೆಲ್ ದಾಳಿಗೆ ಮೃತಪಟ್ಟ ಭಾರತೀಯ ವಿದ್ಯಾರ್ಥಿ ನವೀನ್ ಶೇಖರಪ್ಪ ಮೃತದೇಹವನ್ನು ಭಾರತಕ್ಕೆ ತರುವಲ್ಲಿ ಎಲ್ಲಾ ಪ್ರಯತ್ನಗಳೂ ನಡೆಯುತ್ತಿವೆ. ಯುದ್ಧದ ಸಂದರ್ಭದಲ್ಲಿ ಗುಂಡು ತಗುಲಿ ಗಾಯಗೊಂಡಿದ್ದ ವಿದ್ಯಾರ್ಥಿ ಹರ್ಜೋತ್ ಸಿಂಗ್‌ನ ಎಲ್ಲಾ ವೈದ್ಯಕೀಯ ಚಿಕಿತ್ಸೆಗೆ ಸರ್ಕಾರ ಖರ್ಚನ್ನು ಭರಿಸಿದೆ ಹಾಗೂ ಅವರನ್ನು ಕೀವ್‌ನಿಂದ ಪೋಲಿಷ್ ಗಡಿಗೆ ತೆರಳಲು ವ್ಯವಸ್ಥೆ ಮಾಡಿ, ವಿಮಾನದಲ್ಲಿ ಭಾರತಕ್ಕೆ ಕರೆ ತರಲಾಗಿದೆ ಎಂದರು.

  • ಬಾಂಗ್ಲಾ ವಿದ್ಯಾರ್ಥಿಗಳ ರಕ್ಷಣೆ – ಮೋದಿಗೆ ಧನ್ಯವಾದ ತಿಳಿಸಿದ ಹಸೀನಾ

    ಡಾಕಾ: ಯುದ್ಧಪೀಡಿತ ಉಕ್ರೇನ್‌ನಿಂದ ಭಾರತೀಯರನ್ನು ಸ್ಥಳಾಂತರಿಸುವ ಸಂದರ್ಭದಲ್ಲಿ ಬಾಂಗ್ಲಾದೇಶೀಯರನ್ನೂ ಸ್ಥಳಾಂತರಿಸಿದ್ದಕ್ಕೆ ಪ್ರಧಾನಿ ಮೋದಿಗೆ ಬಾಂಗ್ಲಾದೇಶದ ಪ್ರಧಾನಿ ಶೇಕ್ ಹಸೀನಾ ಧನ್ಯವಾದ ತಿಳಿಸಿದ್ದಾರೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ.

    ಭಾರತ ಆಪರೇಷನ್ ಗಂಗಾ ಯೋಜನೆ ಅಡಿಯಲ್ಲಿ ಉಕ್ರೇನ್‌ನ ಸುಮಿಯಿಂದ ಭಾರತೀಯರನ್ನು ಸ್ಥಳಾಂತರಿಸುವ ಕಾರ್ಯ ನಡೆಸುತ್ತಿದೆ. ಕದನ ವಿರಾಮ ಸಂದರ್ಭದಲ್ಲಿ ಕೀವ್, ಸುಮಿ, ಖಾರ್ಕಿವ್, ಚೆರ್ನಿಹಿವ್ ಹಾಗೂ ಮರಿಯೋಪೋಲ್‌ನಿಂದ ಭಾರತೀಯರು ಗಡಿಯೆಡೆಗೆ ಧಾವಿಸುತ್ತಿದ್ದು, ಅಲ್ಲಿಂದ ಅವರನ್ನು ಏರ್‌ಲಿಫ್ಟ್ ಮಾಡಲಾಗುತ್ತಿದೆ. ಇದನ್ನೂ ಓದಿ: ಪ್ರಧಾನಿ, ಭಾರತದ ರಾಯಭಾರಿ ಕಚೇರಿಗೆ ಧನ್ಯವಾದ ತಿಳಿಸಿದ ಪಾಕ್ ಯುವತಿ

    ಈ ಸಂದರ್ಭದಲ್ಲಿ ಬೆಂಗಾವಲು ಪಡೆ 9 ಬಾಂಗ್ಲಾದೇಶದ ವಿದ್ಯಾರ್ಥಿಗಳನ್ನು ಹಾಗೂ ನೇಪಾಳದ ವಿದ್ಯಾರ್ಥಿಗಳನ್ನೂ ಸ್ಥಳಾಂತರಿಸಿದೆ. ಭಾರತೀಯರೊಂದಿಗೆ ಬಾಂಗ್ಲಾದೇಶದ ವಿದ್ಯಾರ್ಥಿಗಳನ್ನೂ ಸ್ಥಳಾಂತರಿಸಿದ್ದಕ್ಕೆ ಶೇಕ್ ಹಸೀನಾ ಮೋದಿಗೆ ಧನ್ಯವಾದ ತಿಳಿಸಿದ್ದಾರೆ. ಈಗಾಗಲೇ ಸುಮಿಯಲ್ಲಿ ಸಿಲುಕಿಕೊಂಡಿದ್ದ 694 ವಿದ್ಯಾರ್ಥಿಗಳನ್ನು ಸ್ಥಳಾಂತರಿಸಲಾಗಿದೆ. ಇದನ್ನೂ ಓದಿ:  ಕಚ್ಚಾ ತೈಲ ಬೆಲೆ ಬ್ಯಾರೆಲ್‍ಗೆ 300 ಡಾಲರ್‌ಗೆ ಏರಬಹುದು: ರಷ್ಯಾ ಎಚ್ಚರಿಕೆ

  • ರಾಹುಲ್ ಗಾಂಧಿ ಟ್ವೀಟ್‍ಗಳು ಸುಳ್ಳಿನಕಂತೆ: ಕೇಂದ್ರ ಸಚಿವ

    ರಾಹುಲ್ ಗಾಂಧಿ ಟ್ವೀಟ್‍ಗಳು ಸುಳ್ಳಿನಕಂತೆ: ಕೇಂದ್ರ ಸಚಿವ

    ಪಾಟ್ನಾ: ರಾಹುಲ್ ಗಾಂಧಿ ಅವರು ಮಾಡಿದ ಟ್ವೀಟ್‍ಗೆ ಅರ್ಥವಿಲ್ಲ ಹಾಗೂ ಇದೊಂದು ಸುಳ್ಳಿನಕಂತೆ ಎಂದು ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ ನಿತ್ಯಾನಂದ ರೈ ಕಿಡಿಕಾರಿದರು.

    ಉಕ್ರೇನ್‍ನಿಂದ ಭಾರತೀಯ ಪ್ರಜೆಗಳನ್ನು ಸ್ಥಳಾಂತರಿಸುವ ಕುರಿತು ರಾಹುಲ್ ಗಾಂಧಿ ಮಾಡಿದ್ದ ಟ್ವೀಟ್‍ಗಳಿಗೆ ಪ್ರತಿಕ್ರಿಯಿಸಿದ ಅವರು, ಪ್ರಧಾನಿ ಮೋದಿ ಅವರು ಉಕ್ರೇನ್‍ನಲ್ಲಿ ಸಿಲುಕಿರುವ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಸ್ಥಳಾಂತರಿಸುತ್ತಿರುವ ಕಾರ್ಯವನ್ನು ಜನರು ಮೆಚ್ಚುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ಎಲ್ಲರೂ ಭಾರತದತ್ತ ನೋಡುತ್ತಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

    ಈ ಹಿಂದೆ ರಾಹುಲ್ ಗಾಂಧಿ ಟ್ವೀಟ್ ಮಾಡಿ, ಉಕ್ರೇನ್‍ನಲ್ಲಿ ನಡೆಯುತ್ತಿರುವ ರಷ್ಯಾ ದಾಳಿಯ ನಡುವೆ ಸಿಲುಕಿರುವ ಭಾರತೀಯರನ್ನು ದೇಶಕ್ಕೆ ಮರಳಿ ತರಲು ಪ್ರಾರಂಭಿಸಲಾದ ಆಪರೇಷನ್ ಗಂಗಾ ಕುರಿತು ಕೇಂದ್ರವನ್ನು ತರಾಟೆಗೆ ತೆಗೆದುಕೊಂಡಿದ್ದರು. ಇದನ್ನೂ ಓದಿ: ಉಕ್ರೇನ್‌ ದೇಶವಾಗಿ ಉಳಿಯುವುದೇ ಅನುಮಾನ: ಪುಟಿನ್‌ ನೇರ ಎಚ್ಚರಿಕೆ

    ಯುದ್ಧ ಪೀಡಿತ ಉಕ್ರೇನ್‍ನಲ್ಲಿ ಶೌಚಾಲಯಗಳನ್ನು ಸ್ವಚ್ಛಗೊಳಿಸುವಂತೆ ಭಾರತೀಯ ವಿದ್ಯಾರ್ಥಿಗಳಿಗೆ ಆದೇಶಿಸಲಾಗಿದೆ. ಅಸಹಾಯಕ ವಿದ್ಯಾರ್ಥಿಗಳ ಜೊತೆಗೆ ಇಂತಹ ನಾಚಿಕೆಗೇಡಿನ ವರ್ತನೆ ಇಡೀ ದೇಶಕ್ಕೆ ಮಾಡಿದ ಅವಮಾನ. ಆಪರೇಷನ್ ಗಂಗಾದ ಈ ಕಹಿ ಸತ್ಯವು ಮೋದಿ ಸರ್ಕಾರದ ನೈಜ ಮುಖವನ್ನು ತೆರೆದಿಟ್ಟಿದೆ ಎಂದು ಟೀಕಿಸಿದ್ದರು.

    ರಷ್ಯಾ ಆಕ್ರಮಣದ ಹಿನ್ನೆಲೆಯಲ್ಲಿ ಉಕ್ರೇನ್ ವಾಯುಪ್ರದೇಶವನ್ನು ಸಂಪೂರ್ಣವಾಗಿ ಮುಚ್ಚಲಾಗಿದೆ. ಈ ಹಿನ್ನೆಲೆಯಲ್ಲಿ ಉಕ್ರೇನ್‍ನ ನೆರೆ ದೇಶಗಳಾದ ನಿಯಾ, ಹಂಗೆರಿ, ಸ್ಲೋವಾಕಿಯಾ ಮತ್ತು ಪೋಲೆಂಡ್‍ನಿಂದ ಭಾರತೀಯರನ್ನು ತೆರವುಗೊಳಿಸಲಾಗುತ್ತಿದೆ. ಈ ಕಾರ್ಯಾಚರಣೆಗೆ ಆಪರೇಷನ್ ಗಂಗಾ ಎಂದು ಹೆಸರಿಡಲಾಗಿದೆ.

    ಉಕ್ರೇನ್‍ನಲ್ಲಿ ಸಿಲುಕಿರುವ ಭಾರತೀಯ ನಾಗರಿಕರನ್ನು ರಕ್ಷಿಸಲು ಆಪರೇಷನ್ ಗಂಗಾ ಅಡಿಯಲ್ಲಿ ವಿಶೇಷ ವಿಮಾನಗಳು ಪ್ರಾರಂಭವಾದಾಗಿನಿಂದ 15,900ಕ್ಕೂ ಹೆಚ್ಚು ಭಾರತೀಯರನ್ನು ಮರಳಿ ಕರೆತರಲಾಗಿದೆ. ಇದನ್ನೂ ಓದಿ: ಉಕ್ರೇನ್‍ನಿಂದ ಮರಳಿದ ವಿದ್ಯಾರ್ಥಿಗಳಿಗೆ ಸೀಟ್ ನೀಡಿ ಶುಲ್ಕವನ್ನು ಸರ್ಕಾರವೇ ಭರಿಸಲಿ: ದಿಗ್ವಿಜಯ್ ಸಿಂಗ್

  • ತುಂಬು ಗರ್ಭಿಣಿ ಪತ್ನಿಯನ್ನು ಬಿಟ್ಟು ಉಕ್ರೇನ್ ಹೇಗೆ ತೊರೆಯಲಿ..?- ಭಾರತೀಯನ ಅಳಲು

    ತುಂಬು ಗರ್ಭಿಣಿ ಪತ್ನಿಯನ್ನು ಬಿಟ್ಟು ಉಕ್ರೇನ್ ಹೇಗೆ ತೊರೆಯಲಿ..?- ಭಾರತೀಯನ ಅಳಲು

    ಕೀವ್: ಯುದ್ಧಗ್ರಸ್ಥ ಉಕ್ರೇನ್ ತೊರೆಯಲು ಭಾರತೀಯರು ಮಾತ್ರವಲ್ಲ, ಇತರ ದೇಶದವರು ಕೂಡಾ ಹರಸಾಹಸ ಪಡುತ್ತಿದ್ದಾರೆ. ಭಾರತದಿಂದ ಆಪರೆಷನ್ ಗಂಗಾ ಭಾರತೀಯರನ್ನು ಕರೆತರಲು ಎಲ್ಲಾ ರೀತಿಯಾಗಿ ಶ್ರಮವಹಿಸುತ್ತಿದೆ. ಆದರೆ ಇಲ್ಲೊಬ್ಬ ವ್ಯಕ್ತಿ ಭೀಕರ ಯುದ್ಧದ ನಡುವೆಯೂ ಉಕ್ರೇನ್ ತೊರೆಯುವುದಿಲ್ಲ ಎಂದು ಪಟ್ಟು ಹಿಡಿದು ಕೂತಿದ್ದಾನೆ.

    ಆಪರೇಷನ್ ಗಂಗಾ ಅಡಿಯಲ್ಲಿ ಉಕ್ರೇನ್‌ನಿಂದ ಭಾರತೀಯರನ್ನು ಕರೆತರಲಾಗುತ್ತಿದೆ. ಭಾರತದ ವ್ಯಕ್ತಿ ಗಗನ್ ಉಕ್ರೇನ್ ಬಿಡಲು ಸಾಧ್ಯವಿಲ್ಲ ಎನ್ನುತ್ತಿದ್ದಾರೆ. ಏಕೆಂದರೆ ನನ್ನ ಪತ್ನಿ ತುಂಬು ಗರ್ಭಿಣಿ. ಆಕೆ ಭಾರತೀಯಳಲ್ಲ. ಇಂತಹ ಪರಿಸ್ಥಿತಿಯಲ್ಲಿ ನಾನು ಆಕೆಯನ್ನು ಉಕ್ರೇನ್‌ನಲ್ಲಿ ಬಿಟ್ಟು ಬರಲು ಸಾಧ್ಯವಿಲ್ಲ ಎಂದು ತಮ್ಮ ಅಳಲು ತೋಡಿಕೊಂಡಿದ್ದಾರೆ. ಇದನ್ನೂ ಓದಿ: ಉಕ್ರೇನ್ ಮೇಲೆ ಮುಗಿಬಿದ್ದ ರಷ್ಯಾ – ಬಾಂಬ್, ಕ್ಷಿಪಣಿ ದಾಳಿಗೆ ಕೀವ್ ನಗರ ತತ್ತರ

    ನಾನೊಬ್ಬ ಭಾರತೀಯ ಪ್ರಜೆ. ಆಪರೇಷನ್ ಗಂಗಾ ಕಾರ್ಯಾಚರಣೆ ಭಾಗವಾಗಿ ನಾನು ಭಾರತ ತಲುಪಬಹುದು. ಆದರೆ ಆಪರೇಷನ್ ಗಂಗಾದಲ್ಲಿ ಕೇವಲ ಭಾರತೀಯರನ್ನು ಮಾತ್ರವೇ ಸ್ಥಳಾಂತರಿಸಲಾಗುವುದು ಎಂದಿದ್ದಾರೆ. ನನ್ನ ಪತ್ನಿ 8 ತಿಂಗಳು ತುಂಬಿರುವ ಗರ್ಭಿಣಿ. ಆಕೆ ಉಕ್ರೇನ್‌ನವಳು. ಈ ಸಂದರ್ಭದಲ್ಲಿ ಆಕೆಯನ್ನು ಬಿಟ್ಟು ನನ್ನ ದೇಶಕ್ಕೆ ಹೇಗೆ ಹೋಗಲಿ ಎಂದು ಗಗನ್ ಮಾಧ್ಯಮಗಳ ಮುಂದೆ ತಮ್ಮ ಸಂಕಷ್ಟವನ್ನು ತಿಳಿಸಿದ್ದಾರೆ.

    ಈ ಭೀಕರ ಯುದ್ಧದ ಸಂದರ್ಭದಲ್ಲಿ ನಾನು ಪತ್ನಿಯನ್ನು ಸುರಕ್ಷಿತ ಪ್ರದೇಶಕ್ಕೆ ಕರೆದುಕೊಂಡು ಹೋಗುವ ಅಗತ್ಯವಿದೆ. ಈಗಾಗಲೇ ನಾವು ಕೀವ್‌ನಿಂದ ಪಾರಾಗಿ ಬಂದಿದ್ದೇವೆ. ಇದೀಗ ಪತ್ನಿಯನ್ನು ಕರೆದುಕೊಂಡು ಪೋಲೆಂಡ್ ಹೋಗಲು ನಿರ್ಧರಿಸಿದ್ದೇನೆ ಎಂದು ಗಗನ್ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಇದನ್ನೂ ಓದಿ: ನವೀನ್ ಕುಟುಂಬಸ್ಥರಿಗೆ 1 ಲಕ್ಷ ರೂ. ಚೆಕ್ ವಿತರಿಸಿದ ಸಲೀಂ ಅಹಮದ್

    ರಷ್ಯಾ ಉಕ್ರೇನ್ ಮೇಲೆ ಫೆಬ್ರವರಿ 24ರಂದು ಯುದ್ಧ ಘೋಷಿಸಿತ್ತು. ಈ ಸಂದರ್ಭದಲ್ಲಿ ಉಕ್ರೇನ್ ಸರ್ಕಾರ ನಾಗರಿಕ ವಿಮಾನಗಳಿಗೆ ವಾಯು ಪ್ರದೇಶವನ್ನು ಮುಚ್ಚಿಹಾಕಿತು. ಭಾರತೀಯರು ಮಾತ್ರವಲ್ಲದೇ ಅನೇಕ ಇತರ ದೇಶಗಳ ಪ್ರಜೆಗಳು ಹಾಗೂ ಬಹುತೇಕ ವೈದ್ಯಕೀಯ ವಿದ್ಯಾರ್ಥಿಗಳು ಉಕ್ರೇನ್‌ನಲ್ಲಿ ಸಿಲುಕಿಕೊಂಡರು. ಈ ಸಂದರ್ಭದಲ್ಲಿ ಭಾರತ ಸರ್ಕಾರ ಭಾರತೀಯರ ರಕ್ಷಣೆಗೆ ಆಪರೇಷನ್ ಗಂಗಾ ಕಾರ್ಯಾಚರಣೆ ಪ್ರಾರಂಭಿಸಿತು. ಇದೀಗ ಸಾವಿರಾರು ಭಾರತೀಯರು ತಮ್ಮ ತಾಯ್ನಾಡು ತಲುಪಿದ್ದು, ಉಕ್ರೇನ್‌ನಲ್ಲಿ ಸಿಲುಕಿರುವ ಎಲ್ಲಾ ಭಾರತೀಯರನ್ನೂ ಕರೆದುಕೊಂಡು ಬರುವಲ್ಲಿ ಆಪರೇಷನ್ ಗಂಗಾ ಕೆಲಸ ಮಾಡುತ್ತಿದೆ.

  • ಆಪರೇಷನ್ ಗಂಗಾ ಯಶಸ್ಸಿಗೆ ಭಾರತದ ಜಾಗತಿಕ ಪ್ರಭಾವವೇ ಕಾರಣ: ಮೋದಿ

    ಆಪರೇಷನ್ ಗಂಗಾ ಯಶಸ್ಸಿಗೆ ಭಾರತದ ಜಾಗತಿಕ ಪ್ರಭಾವವೇ ಕಾರಣ: ಮೋದಿ

    ಮುಂಬೈ: ಯುದ್ಧ ಪೀಡಿತ ಉಕ್ರೇನ್‌ನಲ್ಲಿ ಸಿಲುಕಿರುವ ಭಾರತೀಯರನ್ನು ಸ್ಥಳಾಂತರಿಸುವ ಕಾರ್ಯಾಚರಣೆ ಆಪರೇಷನ್ ಗಂಗಾ ಯಶಸ್ಸಿಗೆ ಜಾಗತಿಕ ರಂಗದಲ್ಲಿ ಭಾರತದ ಹೆಚ್ಚುತ್ತಿರುವ ಪ್ರಭಾವವೇ ಕಾರಣ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

    ಪುಣೆಯಲ್ಲಿ ಸಿಂಬಯಾಸಿಸ್ ವಿಶ್ವವಿದ್ಯಾಲಯದ ಸುವರ್ಣ ಮಹೋತ್ಸವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಮೋದಿ, ಆಪರೇಷನ್ ಗಂಗಾ ಮೂಲಕ ನಾವು ಸಾವಿರಾರು ಭಾರತೀಯರನ್ನು ಯುದ್ಧ ವಲಯದಿಂದ ಸುರಕ್ಷಿತವಾಗಿ ಸ್ಥಳಾಂತರಿಸುತ್ತಿದ್ದೇವೆ ಎಂದು ಹೇಳಿದರು. ಇದನ್ನೂ ಓದಿ: ಭಾರತಕ್ಕೆ ಗಟ್ಸ್ ಇಲ್ಲ ಅನ್ನೋರು ಮೊದಲು ಉಕ್ರೇನ್ ಗಡಿವರೆಗೆ ತಲುಪಿ ಧಮ್ ತೋರಿಸಬೇಕಿತ್ತು: ಸುಜಯ್

    ಹಲವಾರು ದೊಡ್ಡ ದೇಶಗಳು ತಮ್ಮ ನಾಗರಿಕರನ್ನು ಸ್ಥಳಾಂತರಿಸಲು ಕಷ್ಟಪಡುತ್ತಿವೆ. ಆದರೆ ಭಾರತದ ಬೆಳೆಯುತ್ತಿರುವ ಪ್ರಭಾವದಿಂದಾಗಿ ಆಪರೇಷನ್ ಗಂಗಾ ಯೋಜನೆ ಉಕ್ರೇನ್‌ನ ಯುದ್ಧ ವಲಯದಿಂದ ಸಾವಿರಾರು ವಿದ್ಯಾರ್ಥಿಗಳನ್ನು ತಾಯ್ನಾಡಿಗೆ ಮರಳಿ ತರಲು ಸಾಧ್ಯವಾಗುತ್ತಿದೆ ಎಂದರು. ಇದನ್ನೂ ಓದಿ: ಯುದ್ಧವನ್ನು 6 ಗಂಟೆಗಳ ಕಾಲ ನಿಲ್ಲಿಸೋದು ಸಾಮಾನ್ಯದ ಮಾತಾ!: ಹಾಲಪ್ಪ

    ಕಳೆದ ವಾರದಿಂದ ಉಕ್ರೇನ್‌ನಲ್ಲಿ ಸಿಲುಕಿರುವ ಭಾರತೀಯ ವಿದ್ಯಾರ್ಥಿಗಳನ್ನು ಕರೆತರಲು ಆಪರೇಷನ್ ಗಂಗಾ ಕಾರ್ಯಾಚರಣೆ ಪ್ರಾರಂಭಿಸಲಾಯಿತು. ಉಕ್ರೇನ್‌ನಲ್ಲಿ ಸಿಲುಕಿದ್ದ 13,700 ಭಾರತೀಯರನ್ನು ಸುರಕ್ಷಿತವಾಗಿ ಮನೆಗೆ ಮರಳಿಸಲಾಗಿದೆ ಎಂದು ಭಾರತ ಸರ್ಕಾರ ಶನಿವಾರ ತಿಳಿಸಿದೆ.

  • ‘ಆಪರೇಷನ್ ಗಂಗಾ’ ನೆನಪಿಗಾಗಿ ಮಗಳಿಗೆ ಗಂಗಾ ಅಂತ ಹೆಸರಿಡ್ತೀನಿ: ಉಕ್ರೇನ್‍ನಿಂದ ವಾಪಸಾದ ಭಾರತೀಯ

    ‘ಆಪರೇಷನ್ ಗಂಗಾ’ ನೆನಪಿಗಾಗಿ ಮಗಳಿಗೆ ಗಂಗಾ ಅಂತ ಹೆಸರಿಡ್ತೀನಿ: ಉಕ್ರೇನ್‍ನಿಂದ ವಾಪಸಾದ ಭಾರತೀಯ

    ವಾರ್ಸಾ: ಉಕ್ರೇನ್‍ನ ಕೀವ್‌ನಲ್ಲಿ ಸಿಲುಕಿದ್ದ ಕೇರಳದ ವ್ಯಕ್ತಿಯನ್ನು ಹಾಗೂ ಆತನ ಪತ್ನಿಯನ್ನು ʼಆಪರೇಷನ್ ಗಂಗಾʼದಡಿಯಲ್ಲಿ ಭಾರತ ರಕ್ಷಿಸಿದ್ದಕ್ಕೆ ತಮ್ಮ ಮಗುವಿಗೆ ಗಂಗಾ ಎಂಬ ಹೆಸರನ್ನು ಇಡಲು ನಿರ್ಧರಿಸಿದ್ದಾರೆ.

    ಅಭಿಜಿತ್ ಕೇರಳದ ನಿವಾಸಿ. ರಷ್ಯಾ ದಾಳಿಗೆ ಪುಟ್ಟ ರಾಷ್ಟ್ರ ಉಕ್ರೇನ್ ನಲುಗಿ ಹೋಗಿದೆ. ಅಲ್ಲಿನ ಕೀವ್ ನಗರದಲ್ಲಿ ಅಭಿಜಿತ್ ಪುಟ್ಟದಾದ ರೆಸ್ಟೋರೆಂಟ್‍ನ್ನು ಇಟ್ಟುಕೊಂಡಿದ್ದರು. ಆದರೆ ರಷ್ಯಾ ದಾಳಿಯಿಂದಾಗಿ ಅಭಿಜಿತ್ ಹಾಗೂ ಅವರ ಗರ್ಭಿಣಿ ಪತ್ನಿಯು ಉಕ್ರೇನ್‌ಲ್ಲಿ ಸಿಲುಕಿದ್ದರು. ನಂತರ ಅವರನ್ನು ರಕ್ಷಿಸಿ, ಸುರಕ್ಷಿತವಾಗಿ ಪೋಲೆಂಡಿಗೆ ಕರೆತರಲಾಯಿತು.

    ಈ ಬಗ್ಗೆ ಮಾತನಾಡಿದ ಅವರು, ದಾಳಿಯಿಂದ ಸುರಕ್ಷಿತವಾಗಿ ಪಾರಾದ ಬಗ್ಗೆ ಸಂತೋಷ ವ್ಯಕ್ತಪಡಿಸಿ, ನನ್ನ ಪತ್ನಿ ಒಂಬತ್ತು ತಿಂಗಳ ಗರ್ಭಿಣಿ. ಇದರಿಂದಾಗಿ ಪೋಲೆಂಡ್‍ನಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿದ್ದಾಳೆ. ಪತ್ನಿ ಹಾಗೂ ಮಗು ಇಬ್ಬರು ಆರೋಗ್ಯವಾಗಿದ್ದಾರೆ ಎಂದು ಆಸ್ಪತ್ರೆಯಲ್ಲಿ ತಿಳಿಸಿದ್ದಾರೆ. ಮಾರ್ಚ್ 26ಕ್ಕೆ ಮಗು ಜನಿಸುವ ನಿರೀಕ್ಷೆಯಿದೆ ಎಂದರು.

    ಇದೇ ವೇಳೆ ಅವರು ಭಾರತ ಸರ್ಕಾರ ಪ್ರಾರಂಭಿಸಿದ ರಕ್ಷಣಾ ಕಾರ್ಯಾಚರಣೆಯ ಆಪರೇಷನ್ ಗಂಗಾ ಹೆಸರಿನ ನೆನಪಿಗಾಗಿ ನನ್ನ ಮಗುವಿಗೆ ಗಂಗಾ ಎಂದು ಹೆಸರಿಡುತ್ತೇನೆ ಎಂದಿದ್ದಾರೆ. ವೈದ್ಯಕೀಯ ಸುರಕ್ಷತೆಯ ಕಾರಣದಿಂದಾಗಿ ಪೋಲೆಂಡ್‍ನ ಆಸ್ಪತ್ರೆಯಲ್ಲಿ ಪತ್ನಿಯೂ ಇರಬೇಕಾದ ಕಾರಣದಿಂದಾಗಿ ಅವರನ್ನು ಬಿಟ್ಟು ತಾವೊಬ್ಬರೇ ಭಾರತಕ್ಕೆ ಬರುವುದಾಗಿ ತಿಳಿಸಿದರು. ಇದನ್ನೂ ಓದಿ: ನವೀನ್ ಮೃತದೇಹ ಪಡೆಯಲು ಎಲ್ಲ ಪ್ರಯತ್ನ: ಬಸವರಾಜ ಬೊಮ್ಮಾಯಿ

    ನಾನು ಉಕ್ರೇನ್‍ನಿಂದ ಪೋಲೆಂಡ್‍ಗೆ ಬರಲು ಒಂದು ಪೈಸೆ ಖರ್ಚು ಮಾಡಿಲ್ಲ. ಎಲ್ಲವನ್ನು ಭಾರತ ಸರ್ಕಾರವೇ ನೋಡಿಕೊಂಡಿದೆ ಎಂದು ಸಂತಸ ವ್ಯಕ್ತಪಡಿಸಿದರು. ಇದನ್ನೂ ಓದಿ: ಕೈಕೊಟ್ಟಿತೆ ನ್ಯಾಟೋ- ರಷ್ಯಾ ಬಾಂಬ್‌ ದಾಳಿ ತಡೆಗೆ ಉಕ್ರೇನ್‌ ಮನವಿ ತಿರಸ್ಕಾರ

    ಉಕ್ರೇನ್‍ನಲ್ಲಿ ಸಿಲುಕಿರುವ ಭಾರತದ ಪ್ರಜೆಗಳನ್ನು ರಕ್ಷಿಸಲು ಸರ್ಕಾರ ಆಪರೇಷನ್ ಗಂಗಾವನ್ನು ಪ್ರಾರಂಭಿಸಿದೆ. ಭಾರತದ ಏರ್ ಫೋರ್ಸ್‍ನವರು ಇದರಲ್ಲಿ ಪಾಲ್ಗೊಂಡು ಪ್ರಜೆಗಳನ್ನು ರಕ್ಷಿಸುವ ಕಾರ್ಯ ಚುರುಕುಗೊಳಿಸಿದ್ದಾರೆ.