Tag: ಆಪರೇಷನ್ ಡಿ

  • ‘ಆಪರೇಷನ್ ಡಿ’ ಚಿತ್ರದ ಟೀಸರ್ ರಿಲೀಸ್ : ಧ್ರುವ ಸರ್ಜಾ ಸಾಥ್

    ‘ಆಪರೇಷನ್ ಡಿ’ ಚಿತ್ರದ ಟೀಸರ್ ರಿಲೀಸ್ : ಧ್ರುವ ಸರ್ಜಾ ಸಾಥ್

    ಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಇತ್ತೀಚೆಗಷ್ಟೆ ತಮ್ಮ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಇದೇ ಸಂದರ್ಭದಲ್ಲಿ ಅದ್ವಿತ ಫಿಲಂ ಫ್ಯಾಕ್ಟರಿ  ಹಾಗೂ ಮಸ್ಕ್ಯುಲರ್ ಗ್ರೂಪ್ ಲಾಂಛನದಲ್ಲಿ ಭಾರ್ಗವಿ ಮುರಳಿ ಹಾಗೂ ರಂಗನಾಥ್ ಬಿ ನಿರ್ಮಿಸಿರುವ ಹಾಗೂ ತಿರುಮಲೇಶ್ ವಿ ನಿರ್ದೇಶನದ “ಆಪರೇಶನ್ ಡಿ” ಚಿತ್ರದ ಟೀಸರ್ ಅನ್ನು ಬಿಡುಗಡೆ ಶುಭ ಹಾರೈಸಿದ್ದಾರೆ. ಇತ್ತೀಚೆಗೆ ನಡೆದ ಈ ಚಿತ್ರದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಟೀಸರ್ ಬಿಡುಗಡೆ ಮಾಡಿಕೊಟ್ಟ ಧ್ರುವ ಸರ್ಜಾ ಅವರಿಗೆ ಧನ್ಯವಾದ ತಿಳಿಸಿ, “ಆಪರೇಷನ್ ಡಿ” (Operation D) ಕುರಿತು ಮಾತನಾಡಿದರು.

    ಟೀಸರ್ ಬಿಡುಗಡೆ ಮಾಡಿಕೊಟ್ಟ ಧ್ರುವ ಸರ್ಜಾ ಅವರಿಗೆ ಧನ್ಯವಾದ ಎಂದು ಮಾತು ಆರಂಭಿಸಿದ ನಿರ್ದೇಶಕ ತಿರುಮಲೇಶ್ ವಿ, “ಆಪರೇಷನ್ ಡಿ” ಸಸ್ಪೆನ್ಸ್ ಥ್ರಿಲ್ಲರ್ ಹಾಗೂ ಮರ್ಡರ್ ಮಿಸ್ಟರಿ ಕಥೆ ಆಧರಿಸಿದ ಚಿತ್ರ. ಮರ್ಡರ್ ಮಿಸ್ಟರಿ ಆದರೂ, ಒಂದು ಕಡೆ ರಕ್ತ ಕಾಣುವುದಿಲ್ಲ ಹಾಗೂ ಆಕ್ಷನ್ ಸನ್ನಿವೇಶಗಳಿಲ್ಲ. 2018 – 19 ರಲ್ಲಿ ಹುಟ್ಟಿದ ಈ ಕಾಲ್ಪನಿಕ ಕಥೆ, 2022 ರಲ್ಲಿ ಸಿನಿಮಾ ರೂಪ ಪಡೆದುಕೊಂಡಿತ್ತು. ನನ್ನ ಕಥೆಯನ್ನು ಸಿನಿಮಾವಾಗಿಸಲು ಕುಟುಂಬದವರು ಹಾಗೂ ಮಿತ್ರರು ಸಹಕಾರಿಯಾದರು.

    ಸದ್ಯದಲ್ಲೇ ಸೆನ್ಸಾರ್ ಮುಂದೆ ಬರಲಿರುವ ಈ ಚಿತ್ರ ವರ್ಷದ ಕೊನೆಗೆ ತೆರೆಗೆ ಬರಲಿದೆ. ಇಂದು ಟೀಸರ್ ಬಿಡುಗಡೆಯಾಗಿದೆ. ಟೀಸರ್ ನಲ್ಲಿ ಬರುವ ನಾರಾಯಣ, ಲಕ್ಷ್ಮೀ ಹಾಗೂ ನಾರದ ಪಾತ್ರಗಳಿಗೆ  ನಿರ್ದೇಶಕ – ನಟ ಶ್ರೀನಿ, ನಟಿ ಸಂಗೀತಾ ಭಟ್ ಹಾಗೂ ಸುದರ್ಶನ್ ರಂಗಪ್ರಸಾದ್  ಧ್ವನಿ ನೀಡಿದ್ದಾರೆ. ಸಿರಿ ಮ್ಯೂಸಿಕ್ ಯೂಟ್ಯೂಬ್ ಚಾನಲ್ ನಲ್ಲಿ ಬಿಡುಗಡೆಯಾಗಿರುವ ಟೀಸರ್ ಗೆ ಮೆಚ್ಚುಗೆ ವ್ಯಕ್ತವಾಗುತ್ತಿದ್ದು, ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದೆ. ಚಿತ್ರ ಚೆನ್ನಾಗಿ ಮೂಡಿಬರಲು ಚಿತ್ರತಂಡದವರ ಪಾಲು ಹೆಚ್ಚಿದೆ ಎಂದರು.‌

    ಚಿತ್ರದಲ್ಲಿ ನಾಲ್ಕು ಹಾಡುಗಳಿದೆ ಎಂದು ಸಂಗೀತ ನಿರ್ದೇಶಕಿ ವೇದಿಕ ತಿಳಿಸಿದರು. ಕೆಂಪಗಿರಿ ಹಾಗೂ ತಿರುಮಲೇಶ್ ತಲಾ ಒಂದು ಹಾಡು ಬರೆದಿದ್ದಾರೆ ಹಾಗೂ ಎರಡು ಹಾಡನ್ನು ವೇದಿಕ ಅವರೆ ಬರೆದಿದ್ದಾರೆ, ಭಾರ್ಗವಿ ಮುರಳಿ,  ರಂಗನಾಥ್  ಹಾಗೂ ಸುರೇಶ ಅವರು ನಿರ್ಮಾಣದ ಬಗ್ಗೆ ಮಾಹಿತಿ ನೀಡಿದರು. ಚಿತ್ರದಲ್ಲಿ ನಟಿಸಿರುವ ರುದ್ರೇಶ್ ಬೂದನೂರು, ಸುಹಾಸ್ ಆತ್ರೇಯ, ವಿನೋದ್ ದೇವ್, ಸ್ನೇಹ ಭಟ್, ಇಂಚರ ಭರತ್ ರಾಜ್, ಮಹೇಶ್ ಎಸ್ ಕಲಿ, ಶ್ರೀಧರ್, ಪೃಥ್ವಿ ಬನವಾಸಿ, ಶಿವಾನಂದ್,  ಸಂಚಯ ನಾಗರಾಜ್, ವೆಂಕಟಾಚಲ,  ಶಿವಮಂಜು,  ಕ್ರೇಜಿ ನಾಗರಾಜ್,  ಮುಂತಾದವರು ತಮ್ಮ ಪಾತ್ರದ ಬಗ್ಗೆ ಮಾತನಾಡಿದರು. ಸಂಕಲನಕಾರ ವಿಕ್ರಮ್ ಶ್ರೀಧರ್, ಛಾಯಾಗ್ರಾಹಕ ಕಾರ್ತಿಕ್ ಪ್ರಸಾದ್, ನೃತ್ಯನಿರ್ದೇಶಕ  ಜೈಹರಿಪ್ರಸಾದ್,  BGM ನೀಡಿರುವ ರಾಹುಲ್ ಅರ್ಜ ಕಲಾ ಸೇರಿದಂತೆ ಅನೇಕ ತಂತ್ರಜ್ಞರು ಪತ್ರಿಕಾಗೋಷ್ಠಿಯಲ್ಲಿದ್ದರು.

  • ‘ಆಪರೇಷನ್ ಡಿ’ ಚಿತ್ರದ ಟೀಸರ್ ಗೆ ಸಂಗೀತಾ ಭಟ್ ಧ್ವನಿ

    ‘ಆಪರೇಷನ್ ಡಿ’ ಚಿತ್ರದ ಟೀಸರ್ ಗೆ ಸಂಗೀತಾ ಭಟ್ ಧ್ವನಿ

    ದ್ವಿತ ಫಿಲಂ ಫ್ಯಾಕ್ಟರಿ ಲಾಂಛನದಲ್ಲಿ ಭಾರ್ಗವಿ ತಿರುಮಲೇಶ್ ಹಾಗೂ ರಂಗನಾಥ್ ಬಿ ನಿರ್ಮಿಸುತ್ತಿರುವ “ಆಪರೇಶನ್ ಡಿ” (Operation D) ಚಿತ್ರದ ಟೀಸರ್ ಗೆ ಖ್ಯಾತ ನಟಿ ಸಂಗೀತ ಭಟ್ (Sangeeta Bhatt) ಹಾಗೂ ಅವರ ಪತಿ ಸುದರ್ಶನ್ ರಂಗಪ್ರಸಾದ್ (Sudarshan Rangaprasad) ಧ್ವನಿ ನೀಡಿದ್ದಾರೆ. ವಿಭಿನ್ನ ರೀತಿಯಲ್ಲಿ Mythology Concept ಇಟ್ಟುಕೊಂಡು Teaser ಸಿದ್ಧವಾಗುತ್ತಿದ್ದು, ಸದ್ಯದಲ್ಲೇ ಬಿಡುಗಡೆಯಾಗಲಿದೆ.  ಕನ್ನಡದ ಹಲವಾರು ಸಿನಿಮಾಗಳಲ್ಲಿ ನಟನಾಗಿದ್ದ ತಿರುಮಲೇಶ್ ವಿ ಈ ಚಿತ್ರದ ಮೂಲಕ ನಿರ್ದೇಶಕರಾಗಿದ್ದಾರೆ.

    ತಿರುಮಲೇಶ್ ವಿ ಅವರೆ ಕಥೆ, ಚಿತ್ರಕಥೆ ಬರೆದಿದ್ದಾರೆ.  ಸುರೇಶ್ ಬಿ ಈ ಚಿತ್ರದ ಕಾರ್ಯಕಾರಿ ನಿರ್ಮಾಪಕರು ಹಾಗೂ ಕ್ರಿಯೇಟಿವ್ ಹೆಡ್ ಆಗಿ ಕಾರ್ಯ ನಿರ್ವಹಿಸಿದ್ದಾರೆ. ವೇದಿಕ ಹಾಗೂ ಸಂತೋಷ್ ನಾಲ್ಕು ಹಾಡುಗಳಿರುವ ಈ ಚಿತ್ರಕ್ಕೆ ಸಂಗೀತ ನೀಡಿದ್ದಾರೆ. ಕೆಂಪಗಿರಿ ಒಂದು ಹಾಡು ಹಾಗೂ ವೇದಿಕ ಉಳಿದ ಎಲ್ಲಾ ಹಾಡುಗಳನ್ನು ರಚಿಸಿದ್ದಾರೆ. ಅನಿರುದ್ ಶಾಸ್ತ್ರೀ,  ವೇದಿಕ ಹಾಗೂ ಪೃಥ್ವಿ ಭಟ್ ಗಾಯನದಲ್ಲಿ ಈ ಚಿತ್ರದ ಹಾಡುಗಳು ಸುಮಧುರವಾಗಿ ಮೂಡಿಬಂದಿದೆ. ಕಾರ್ತಿಕ್ ಪ್ರಸಾದ್ ಛಾಯಾಗ್ರಹಣ, ವಿಕ್ರಮ್ ಶ್ರೀಧರ್ ಸಂಕಲನ ಹಾಗೂ ತರ್ಮಾಕೋಲ್ ಶ್ರೀನಿವಾಸ್ ಅವರ ಕಲಾ ನಿರ್ದೇಶನ, ಜಯ ಹರಿಪ್ರಸಾದ್(ಜೆರ್ರಿ ಮಾಸ್ಟರ್‌) ನೃತ್ಯ ನಿರ್ದೇಶನ

    ರುದ್ರೇಶ್ ಬೂದನೂರು, ಸುಹಾಸ್ ಆತ್ರೇಯ, ವಿನೋದ್ ದೇವ್,  ಈ ಚಿತ್ರದ ನಾಯಕರಾಗಿ ನಟಿಸಿದ್ದು, ನಾಯಕಿಯರಾಗಿ ಸ್ನೇಹ ಭಟ್, ಇಂಚರ ಬಿ ಚನ್ನಪ್ಳ ಇದ್ದಾರೆ. ವೆಂಕಟಾಚಲ, ಶಿವಮಂಜು, ಜೂ ನರಸಿಂಹರಾಜು, ಮಹೇಶ್ ಎಸ್ ಕಲಿ, ರಂಗನಾಥ ಬಿ, ಶ್ರೀಧರ್ ಟಿ ಎಸ್, ಸುರೇಶ್ ಬಿ, ಸಂಚಯ ನಾಗರಾಜ್,ಕಿರಣ್ ಈಡಿಗ, ರವಿಶಂಕರ್,ಶಿವಾನಂದ, ಸೂರ್ಯವಂಶಿ(ಶಿವು ಅಪ್ಪಾಜಿ), ನಂಜಪ್ಪ ಎಸ್ ದೊಡ್ಡಮದುರೆ, ಆರ್ ಜೆ ಧೀರಜ್, ಪೃಥ್ವಿ ಬನವಾಸಿ, ಪ್ರಶಾಂತ್ ಸಂಗಾಪೂರ್, ರಂಜಿತ್ ರಂಜು, ಆಶಾ, ರೂಪ ಆರ್, ಧನಲಕ್ಷ್ಮೀ, ಅಕ್ಷಯ್, ಕಿರಣ್, ನಾಗರಾಜ್ ದಾವಣಗೆರೆ, ಸಂತೋಷ್,ನಾಗರಾಜ್ ಕೀಲಗೆರೆ, ಖಾದರ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

    ಬಾಣಸವಾಡಿಯ ಅರ್ಜ್ ಕಲ ಸ್ಟುಡಿಯೋ ದಲ್ಲಿ ಟೀಸರ್ ನ ಡಬ್ಬಿಂಗ್ ನಡೆಯುತ್ತಿದ್ದು,  ಸಂಗೀತಾ ಭಟ್ ಹಾಗೂ ಸುದರ್ಶನ್ ರಂಗಪ್ರಸಾದ್ ಈಗಾಗಲೇ ಧ್ವನಿ ನೀಡಿದ್ದಾರೆ. ಚಿತ್ರರಂಗದ ಖ್ಯಾತನಾಮರೊಬ್ಬರು ಸದ್ಯದಲ್ಲೇ ಟೀಸರ್ ಗೆ ಧ್ವನಿ ನೀಡಲಿದ್ದಾರೆ.  ಆ ಧ್ವನಿ ಯಾರದು ಎಂದು ಚಿತ್ರತಂಡ ಗೌಪ್ಯವಾಗಿಟ್ಟಿದೆ.

  • ಸದ್ಯದಲ್ಲೇ ಬರಲಿದೆ ‘ಆಪರೇಶನ್ ಡಿ’ ಟ್ರೈಲರ್

    ಸದ್ಯದಲ್ಲೇ ಬರಲಿದೆ ‘ಆಪರೇಶನ್ ಡಿ’ ಟ್ರೈಲರ್

    ದ್ವಿತ ಫಿಲಂ ಫ್ಯಾಕ್ಟರಿ ಲಾಂಛನದಲ್ಲಿ ಭಾರ್ಗವಿ ತಿರುಮಲೇಶ್ ಹಾಗೂ ರಂಗನಾಥ್ ಬಿ ನಿರ್ಮಿಸಿರುವ “ಆಪರೇಶನ್ ಡಿ” (Operation D) ಚಿತ್ರಕ್ಕೆ ಡಬ್ಬಿಂಗ್, SFX, ಸಂಗೀತ ಸಂಯೋಜನೆ ಮುಕ್ತಯವಾಗಿ VFX ಕೆಲಸ ಆರಂಭವಾಗಿದೆ, ಶೀಘ್ರದಲ್ಲೇ  ಟ್ರೈಲರ್ (Trailer) ಬಿಡುಗಡೆಯಾಗಲಿದೆ.

    ಕನ್ನಡದ ಹಲವಾರು ಸಿನಿಮಾಗಳಲ್ಲಿ ನಟಿಸಿದ್ದ ತಿರುಮಲೇಶ್ ವಿ (Tirumalesh) ಈ ಚಿತ್ರದ ಮೂಲಕ ನಿರ್ದೇಶಕರಾಗಿದ್ದಾರೆ. ನಿರ್ದೇಶಕರೆ ಕಥೆ, ಚಿತ್ರಕಥೆ ಬರೆದಿದ್ದಾರೆ. ಕಾರ್ಯಕಾರಿ ನಿರ್ಮಾಪಕ ಹಾಗೂ ಕ್ರಿಯೇಟಿವ್ ಹೆಡ್ ಆಗಿ ಸುರೇಶ್ .ಬಿ. ಕಾರ್ಯ ನಿರ್ವಹಿಸಿದ್ದಾರೆ. ತಿರಮಲೇಶ್ ಅವರು ರಾಜ ರವಿಶಂಕರ್, ಸಿದ್ದರಾಜು, ಪ್ರಶಾಂತ್  ಜೊತೆಗೂಡಿ  ಸಂಭಾಷಣೆ ಬರೆದಿದ್ದಾರೆ. ಇದನ್ನೂ ಓದಿ:‘ಸಿದ್ದರಾಮಯ್ಯ ಎಂಬ ನಾನು’: ಸಿದ್ದರಾಮಯ್ಯ ಕುರಿತು ಮತ್ತೊಂದು ಸಿನಿಮಾ ಘೋಷಣೆ

    ವೇದಿಕ ಹಾಗೂ ದ್ವೈಪಾಯನ‌  ಸಿಂಗ್ ನಾಲ್ಕು ಹಾಡುಗಳಿರುವ ಈ ಚಿತ್ರಕ್ಕೆ ಸಂಗೀತ ನೀಡಿದ್ದಾರೆ. ಕೆಂಪಗಿರಿ ಒಂದು ಹಾಡು ಹಾಗೂ ವೇದಿಕ ಉಳಿದ ಎಲ್ಲಾ ಹಾಡುಗಳನ್ನು ರಚಿಸಿದ್ದಾರೆ. ಅನಿರುದ್ಧ್ ಶಾಸ್ತ್ರಿ ಮೊದಲ ಬಾರಿಗೆ ಚಿತ್ರದ ನಾಲ್ಕು ಹಾಡುಗಳನ್ನು ಹಾಡಿದ್ದಾರೆ. ಜೊತೆಗೆ ವೇದಿಕ ಹಾಗೂ ಪೃಥ್ವಿ ಭಟ್ ಸಾಥ್ ನೀಡಿದ್ದಾರೆ. ಕಾರ್ತಿಕ್ ಪ್ರಸಾದ್ ಛಾಯಾಗ್ರಹಣ, ವಿಕ್ರಮ್ ಶ್ರೀಧರ್ ಸಂಕಲನ ಹಾಗೂ ತರ್ಮಾಕೋಲ್ ಶ್ರೀನಿವಾಸ್ ಅವರ ಕಲಾ ನಿರ್ದೇಶನ ಈ ಚಿತ್ರಕ್ಕೆ ಇದೆ. ಈ ಚಿತ್ರದ ನೃತ್ಯ ನಿರ್ದೇಶಕರು.  ವಿನೋದ್ ದೇವ್, ಸುಹಾಸ್ ಆತ್ರೇಯ,  ರುದ್ರೇಶ್ ಬೂದನೂರು ಈ ಚಿತ್ರದ ನಾಯಕರಾಗಿ ನಟಿಸಿದ್ದು, ನಾಯಕಿಯರಾಗಿ ಸ್ನೇಹ ಭಟ್, ಇಂಚರ ಬಿ ಚನ್ನಪ್ಪ ಇದ್ದಾರೆ.

    ಶಿವಮಂಜು, ವೆಂಕಟಾಚಲ, ಜೂ ನರಸಿಂಹರಾಜು, ಮಹೇಶ್ ಎಸ್ ಕಲಿ, ರಂಗನಾಥ ಬಿ, ಶ್ರೀಧರ್ ಟಿ ಎಸ್, ಸುರೇಶ್ ಬಿ, ಸಂಚಯ ನಾಗರಾಜ್,ಕಿರಣ್ ಈಡಿಗ, ರವಿಶಂಕರ್,ಶಿವಾನಂದ, ಸೂರ್ಯವಂಶಿ(ಶಿವು ಅಪ್ಪಾಜಿ), ನಂಜಪ್ಪ ಎಸ್ ದೊಡ್ಡಮದುರೆ ಆರ್ ಜೆ ಧೀರಜ್, ಪೃಥ್ವಿ ಬನವಾಸಿ, ಆಶಾ, ರೂಪ ಆರ್, ಧನಲಕ್ಷ್ಮೀ, ಕಿರಣ್, ನಾಗರಾಜ್ ದಾವಣಗೆರೆ, ಸಂತೋಷ್,ನಾಗರಾಜ್ ಕೀಲಗೆರೆ,ಖಾದರ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

  • ಶೂಟಿಂಗ್ ಮುಗಿಸಿದ ‘ಆಪರೇಷನ್ ಡಿ’ ಸಿನಿಮಾ

    ಶೂಟಿಂಗ್ ಮುಗಿಸಿದ ‘ಆಪರೇಷನ್ ಡಿ’ ಸಿನಿಮಾ

    ಕಾಮಿಡಿ ಕ್ರೈಂ ಥ್ರಿಲ್ಲರ್  ಕಥಾಹಂದರದ “ಆಪರೇಶನ್ ಡಿ” ಚಿತ್ರೀಕರಣ ಮುಕ್ತಾಯದ ಹಂತ ತಲುಪಿದೆ. ಒಂದು ಚಿಕ್ಕ ಸನ್ನಿವೇಶದ ಚಿತ್ರೀಕರಣ ಮುಗಿದ ನಂತರ ಕುಂಬಳಕಾಯಿ ಒಡೆಯಲಾಗುವುದು. ಈಗಾಗಲೇ ಚಿತ್ರದ ಹಿನ್ನೆಲೆ ಸಂಗೀತ ಬಿರುಸಿನಿಂದ ಸಾಗಿದ್ದಿ, ಹೊಸ ವರ್ಷದ ಮೊದಲ ವಾರಕ್ಕೆ ಮಾತಿನ ಜೋಡಣೆ ಆರಂಭವಾಗಲಿದೆ ಎಂದಿದೆ ಚಿತ್ರತಂಡ.

    ತಿರುಪತಿ, ಮಸ್ತಿ, ಬಣ್ಣ ಬಣ್ಣದ ಲೋಕ, ರಾಗಶೃಂಗ, ಟೇಕ್ ಇಟ್ ಈಸಿ, ಧನ್ ಧನಾ ಧನ್ ಸೇರಿದಂತೆ ಹಲವು ಚಿತ್ರಗಳಲ್ಲಿ ನಟಿಸಿದ್ದ ತಿರುಮಲೇಶ್ ವಿ ಈಗ ನಿರ್ದೇಶಕರಾಗಿ ಚಿತ್ರರಂಗ ಪ್ರವೇಶ ಮಾಡಿದ್ದಾರೆ. ಭಾರ್ಗವಿ ತಿರುಮಲೇಶ್ ಹಾಗೂ ರಂಗನಾಥ್ ಬಿ ಈ ಸಿನಿಮಾವನ್ನು ನಿರ್ಮಿಸುತ್ತಿದ್ದಾರೆ. ಇದನ್ನೂ ಓದಿ: ಬಿಗ್ ಬಾಸ್ ಫಿನಾಲೆಗೆ 6 ಸ್ಪರ್ಧಿಗಳ ಎಂಟ್ರಿ: ಕಾದಿದೆ ಮತ್ತೊಂದು ಶಾಕ್

    ಕ್ರೈಂ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ನಿರ್ದೇಶಕರೆ ಕಥೆ, ಚಿತ್ರಕಥೆ ಬರೆದಿದ್ದು, ರಾಜ ರವಿಶಂಕರ್, ತಿರುಮಲೇಶ್, ಸಿದ್ದರಾಜು, ಪ್ರಶಾಂತ್ ಸಂಭಾಷಣೆ ಬರೆದಿದ್ದಾರೆ. ವೇದಿಕ, ದ್ವೇಪಾಯನ‌  ಸಿಂಗ ಹಾಗೂ  ಸಂತೋಷ್ ನಾಲ್ಕು ಹಾಡುಗಳಿರುವ ಈ ಚಿತ್ರಕ್ಕೆ ಸಂಗೀತ ನೀಡುತ್ತಿದ್ದಾರೆ. ಕೆಂಪಗಿರಿ ಹಾಗೂ ವೇದಿಕ ಹಾಡುಗಳನ್ನು ರಚಿಸಿದ್ದಾರೆ.

    ಕಾರ್ತಿಕ್ ಪ್ರಸಾದ್ ಛಾಯಾಗ್ರಹಣ, ವಿಕ್ರಮ್ ಶ್ರೀಧರ್ ಸಂಕಲನ ಇರುವ ಸಿನಿಮಾದಲ್ಲಿ ವಿನೋದ್ ದೇವ್, ಸುಹಾಸ್ ಆತ್ರೇಯ,  ರುದ್ರೇಶ್ ಬೂದನೂರು ನಾಯಕರು. ಸ್ನೇಹ ಭಟ್, ಇಂಚರ ಬಿ ಚನ್ನಪ್ಪ ನಾಯಕಿಯರು. ಶಿವಮಂಜು, ವೆಂಕಟಾಚಲ, ಜೂ ನರಸಿಂಹರಾಜು, ರಂಗನಾಥ ಬಿ, ಶ್ರೀಧರ್ ಟಿ ಎಸ್, ಸುರೇಶ್ ಬಿ, ಸಂಚಯ ನಾಗರಾಜ್, ಶಿವಾನಂದ, ಆಶಾ,  ರೂಪ ಆರ್, ಮಹೇಶ್ ಎಸ್ ಕಲಿ, ಕಿರಣ್,  ಸಂತೋಷ್, ಖಾದರ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

    Live Tv
    [brid partner=56869869 player=32851 video=960834 autoplay=true]