Tag: ಆಪರೇಷನ್ ಥಿಯೇಟರ್

  • ಚಿತ್ರದುರ್ಗ ಜಿಲ್ಲಾಸ್ಪತ್ರೆಯ ಆಪರೇಷನ್ ಥಿಯೇಟರ್‌ನಲ್ಲಿ ಪ್ರಿ-ವೆಡ್ಡಿಂಗ್ ಶೂಟ್!

    ಚಿತ್ರದುರ್ಗ ಜಿಲ್ಲಾಸ್ಪತ್ರೆಯ ಆಪರೇಷನ್ ಥಿಯೇಟರ್‌ನಲ್ಲಿ ಪ್ರಿ-ವೆಡ್ಡಿಂಗ್ ಶೂಟ್!

    – ವೈದ್ಯ ಜೋಡಿ ವಿರುದ್ಧ ಭಾರೀ ಆಕ್ರೋಶ

    ಚಿತ್ರದುರ್ಗ: ಇತ್ತೀಚಿನ ದಿನಗಳಲ್ಲಿ ಪ್ರಿ-ವೆಡ್ಡಿಂಗ್ ಹಾಗೂ ಪೋಸ್ಟ್ ವೆಡ್ಡಿಂಗ್ ಫೋಟೋಶೂಟ್‍ಗಳು ವಿಭಿನ್ನ ರೀತಿಯಲ್ಲಿ ನಡೆಯುತ್ತವೆ. ಅಂತೆಯೇ ಚಿತ್ರದುರ್ಗದ (Chitradurga) ಜಿಲ್ಲಾಸ್ಪತ್ರೆಯಲ್ಲಿ ವೈದ್ಯರೊಬ್ಬರು ಪ್ರಿ-ವೆಡ್ಡಿಂಗ್ ವೀಡಿಯೋ ಶೂಟ್ ಮಾಡಿ ಎಡವಟ್ಟು ಮಾಡಿಕೊಂಡ ಘಟನೆ ನಡೆದಿರುವ ಬಗ್ಗೆ ಬೆಳಕಿಗೆ ಬಂದಿದೆ.

    ಭರಮಸಾಗರ ಮೂಲದ ಜಿಲ್ಲಾಸ್ಪತ್ರೆಯ ಗುತ್ತಿಗೆ ಅಧಾರಿತ ವೈದ್ಯ ಡಾ.ಅಭಿಷೇಕ್ ಎಡವಟ್ಟು ಮಾಡಿಕೊಂಡವರು. ಚಿತ್ರದುರ್ಗ ತಾಲೂಕಿನ ಭರಮಸಾಗರ ಗ್ರಾಮದಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ. ಆಸ್ಪತ್ರೆಯನ್ನೇ ವೆಡ್ಡಿಂಗ್‌ ಶೂಟ್‌ (Pre-Wedding Shoot in Hospital) ಲೋಕೇಶನ್‌ ಮಾಡಿಕೊಂಡಿರುವ ಅಭಿಷೇಕ್‌, ರೋಗಿಯೊಬ್ಬರನ್ನು ಬೆಡ್‌ ಮೇಲೆ ಮಲಗಿಸಿ, ಆಪರೇಷನ್‌ ಮಾಡುವಂತೆ, ಇನ್ನೊಂದೆಡೆ ಭಾವಿ ಪತ್ನಿ ಅಭಿಷೇಕ್‌ಗೆ ಸಹಾಯ ಮಾಡುವಂತೆ ಚಿತ್ರೀಕರಿಸಿದ್ದಾರೆ. ಅಂತಿಮವಾಗಿ ಆಪರೇಷನ್‌ ಮುಗಿಯಿತು ಅಂದ ಬಳಿಕ ರೋಗಿ ಎದ್ದು ಕುಳಿತುಕೊಳ್ಳುತ್ತಾನೆ. ಈ ಎಲ್ಲಾ ದೃಶ್ಯಗಳನ್ನು ವೀಡಿಯೋದಲ್ಲಿ ಕಾಣಬಹುದಾಗಿದೆ.

    ಸದ್ಯ ಡಾ.ಅಭಿಷೇಕ್ ಜೋಡಿಯ ಪ್ರಿ-ವೆಡ್ಡಿಂಗ್ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ. ಜೊತೆಗೆ ವೈದ್ಯರ ನಡೆಗೆ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ. ಸರ್ಕಾರಿ ಆಸ್ಪತ್ರೆಯ ಆಪರೇಷನ್ ಥಿಯೇಟರ್ ದುರ್ಬಳಕೆ ಬಗ್ಗೆ ಜನ ಕಿಡಿಕಾರುತ್ತಿದ್ದಾರೆ. ಇದನ್ನೂ ಓದಿ: ಕೆರಗೋಡು ಬಂದ್‌ಗೆ ಉತ್ತಮ ಪ್ರತಿಕ್ರಿಯೆ – ಶಾಸಕ ಗಣಿಗ ರವಿ ಮನೆಗೆ ಭದ್ರತೆ ಹೆಚ್ಚಳ

  • ಆಪರೇಷನ್ ಥಿಯೇಟರ್‌ನಲ್ಲಿ ಮಹಿಳೆಯ ಖಾಸಗಿ ಭಾಗಗಳನ್ನು ಮುಟ್ಟಿ ಕಿರುಕುಳ

    ಆಪರೇಷನ್ ಥಿಯೇಟರ್‌ನಲ್ಲಿ ಮಹಿಳೆಯ ಖಾಸಗಿ ಭಾಗಗಳನ್ನು ಮುಟ್ಟಿ ಕಿರುಕುಳ

    ಕೋಲ್ಕತ್ತಾ: ಇಲ್ಲಿನ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಆಪರೇಷನ್ ಥಿಯೇಟರ್‌ನಲ್ಲಿ (Operation Theatre) ಅರೆಪ್ರಜ್ಞಾವಸ್ಥೆಯಲ್ಲಿ ಮಲಗಿದ್ದಾಗ ಆಸ್ಪತ್ರೆ (Hospital) ಸಿಬ್ಬಂದಿಯೊಬ್ಬ ಆಕೆಯ ಖಾಸಗಿ ಭಾಗಗಳನ್ನ ಮುಟ್ಟಿ ಲೈಂಗಿಕ ಕಿರುಕುಳ ನೀಡಿರುವುದಾಗಿ ಮಹಿಳೆಯೊಬ್ಬರು ಆರೋಪಿಸಿ ಫೂಲ್ಬಗಾನ್ ಪೊಲೀಸರಿಗೆ (Police) ದೂರು ನೀಡಿದ್ದಾರೆ.

    CRIME COURT

    ಕೋಲ್ಕತ್ತಾ (Kolkata) ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಹಿಳೆಯೊಬ್ಬರು ಪಿತ್ತಕೋಶದ ಶಸ್ತ್ರ ಚಿಕಿತ್ಸೆಗೆ ದಾಖಲಾಗಿದ್ದರು. ಗುರುವಾರ ಬೆಳಗ್ಗೆ 9 ಗಂಟೆ ವೇಳೆಗೆ ಆಪರೇಷನ್ ಥಿಯೇಟರ್‌ಗೆ ವರ್ಗಾಯಿಸಿ ಅರಿವಳಿಕೆ ನೀಡಿದ್ದಾರೆ. 11 ಗಂಟೆಗೆ ವೇಳೆಗೆಲ್ಲಾ ಶಸ್ತçಚಿಕಿತ್ಸೆ ಮುಗಿದಿದೆ. ಬಳಿಕ ಮಹಿಳೆ ಅರೆ ಪ್ರಜ್ಞಾವಸ್ಥೆಯಲ್ಲಿ ಮಲಗಿದ್ದಾಗ ಯಾರೋ ತನ್ನ ಖಾಸಗಿ ಭಾಗಗಳನ್ನು ಮುಟ್ಟಿ ಕಿರುಕುಳ ನೀಡಿರುವುದಾಗಿ ಮಹಿಳೆ ಲಿಖಿತ ದೂರು ನೀಡಿದ್ದಾರೆ. ಇದನ್ನೂ ಓದಿ: ವಿಧಾನಸೌಧದಲ್ಲಿ 10 ಲಕ್ಷ ಹಣ ಸಿಕ್ಕಿದ ಕೇಸ್ – ಆರೋಪಿ ಜಗದೀಶ್‌ಗೆ ಷರತ್ತುಬದ್ಧ ಜಾಮೀನು

    ಮಹಿಳೆ ಹೇಳಿದ್ದೇನು?
    ನಾನು ನಿಧಾನವಾಗಿ ಪ್ರಜ್ಞಾವಸ್ಥೆಗೆ ಬರುತ್ತಿದ್ದೆ. ಈ ವೇಳೆ ಸ್ವಲ್ಪವೇ ಕಣ್ಣು ತೆರೆದು ನೋಡಿದಾಗ ನನ್ನ ಬಲಭಾಗದಲ್ಲಿ ವ್ಯಕ್ತಿಯೊಬ್ಬ ನಿಂತಿದ್ದ. ಅವನು ನನ್ನನ್ನು ತಬ್ಬಿಕೊಳ್ಳುತ್ತಿದ್ದ. ನನಗೆ ತುಂಬಾ ನೋವಾಗುತ್ತಿತ್ತು. ನನಗೆ ಅರಿವಳಿಕೆ ನೀಡಿದ್ದರಿಂದ ಅವನನ್ನು ತಡೆಯಲು ಸಾಧ್ಯವಾಗಲಿಲ್ಲ. ಆದರೆ ನನಗೆ ಪ್ರಜ್ಞೆ ಬಂದು ನೋಡಿದಾಗ ನನ್ನ ಖಾಸಗಿ ಭಾಗಗಳಲ್ಲಿ ಆಗಿದ್ದ ಗುರುತುಗಳನ್ನು ಗಮನಿಸಿದೆ ಎಂದು ಹೇಳಿದ್ದಾರೆ.

    ಆಪರೇಷನ್ ಥಿಯೇಟರ್‌ನಲ್ಲಿ ನನಗೆ ಏನಾಯಿತು ಅನ್ನೋದು ಸಂಪೂರ್ಣವಾಗಿ ತಿಳಿದಿಲ್ಲ. ಆದ್ರೆ ಅಪರಾಧ ನಡೆಯುವಾಗ ಯಾರೊಬ್ಬರೂ ಮಹಿಳಾ ಸಿಬ್ಬಂದಿ ಇರಲಿಲ್ಲ. ಆದ್ರೆ ನನ್ನ ಬಲ ಎದೆಯ ಮೇಲೆ ಗುರುತುಗಳು ಕಂಡುಬಂದಿವೆ ಎಂದು ಸಂತ್ರಸ್ತೆ ಹೇಳಿಕೊಂಡಿದ್ದಾರೆ. ಇದನ್ನೂ ಓದಿ: ಕನ್ನಡಿಗರಿಗೆ ಕೈಗಾರಿಕೆಗಳ ಉದ್ಯೋಗದಲ್ಲಿ ಶೇ.80 ರಷ್ಟು ಪ್ರಾಶಸ್ತ್ಯ, ಭಾಷಾ ಅಭಿವೃದ್ಧಿಗೆ ಶೀಘ್ರ ಕಾನೂನು ಸ್ವರೂಪ: ಬೊಮ್ಮಾಯಿ

    ಮಹಿಳೆ ನೀಡಿದ ಲಿಖಿತ ದೂರಿನ ಆಧಾರದ ಮೇಲೆ ಫೂಲ್ಬಗಾನ್ ಪೊಲೀಸ್ ಠಾಣೆಯಲ್ಲಿ ಅಪರಿಚಿತ ಆರೋಪಿ ವಿರುದ್ಧ ಐಪಿಸಿ (IPC) ಸೆಕ್ಷನ್ 354ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಮುಂದುವರಿಸಿದ್ದಾರೆ. ಮಹಿಳೆಯ ವೈದ್ಯಕೀಯ ಪರೀಕ್ಷೆಯನ್ನೂ ನಡೆಸಿದ್ದು, ಮೆಡಿಕಲ್ ರಿಪೋರ್ಟ್‌ಗಾಗಿ ಕಾಯುತ್ತಿದ್ದೇವೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಮದ್ವೆಗೂ ಮುನ್ನ ಮಗುವಿಗೆ ಜನ್ಮ – ಆಪರೇಷನ್ ಥಿಯೇಟರ್‌ನಲ್ಲೇ ಅಪ್ರಾಪ್ತೆ ಆತ್ಮಹತ್ಯೆ

    ಮದ್ವೆಗೂ ಮುನ್ನ ಮಗುವಿಗೆ ಜನ್ಮ – ಆಪರೇಷನ್ ಥಿಯೇಟರ್‌ನಲ್ಲೇ ಅಪ್ರಾಪ್ತೆ ಆತ್ಮಹತ್ಯೆ

    – ರಾತ್ರಿ ಒಬ್ಬಳೇ ಆಸ್ಪತ್ರೆಗೆ ಬಂದ 17ರ ಹುಡುಗಿ
    – ಅಪ್ರಾಪ್ತೆ ಗರ್ಭಿಣಿ ಎಂದು ಮನೆಯವರಿಗೂ ಗೊತ್ತಿಲ್ಲ

    ಭೋಪಾಲ್: 17ರ ಅಪ್ರಾಪ್ತೆಯೊಬ್ಬಳು ಮದುವೆಗೂ ಮುನ್ನ ಮಗುವಿಗೆ ಜನ್ಮ ನೀಡಿದ್ದು, ಆಪರೇಷನ್ ಥಿಯೇಟರ್‌ನಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡು ಮೃತಪಟ್ಟಿರುವ ಘಟನೆ ಮಧ್ಯಪ್ರದೇಶದ ರೇವಾ ಜಿಲ್ಲೆಯಲ್ಲಿ ನಡೆದಿದೆ.

    ಪೊಲೀಸರು ಈ ಕುರಿತು ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಗಾಗಿ ಶೋಧಕಾರ್ಯ ನಡೆಸುತ್ತಿದ್ದಾರೆ. ಸದ್ಯ ಮಗು ಆರೋಗ್ಯವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

    ಮಂಗಳವಾರ ರಾತ್ರಿ ಹುಡುಗಿ ಖಾಸಗಿ ಆಸ್ಪತ್ರೆಗೆ ಒಬ್ಬಳೆ ಬಂದಿದ್ದಾಳೆ. ನಂತರ ವೈದ್ಯರು ಹುಡುಗಿಯನ್ನು ದಾಖಲಿಸಿಕೊಂಡು ಹೆರಿಗೆ ಮಾಡಿಸಿದ್ದಾರೆ. ಈ ವೇಳೆ ಅಪ್ರಾಪ್ತೆ ಆರೋಗ್ಯಕರವಾದ ಮಗುವಿಗೆ ಜನ್ಮ ನೀಡಿದ್ದಾಳೆ.

    ಸ್ವಲ್ಪ ಸಮಯದ ನಂತರ ಹುಡುಗಿಯನ್ನು ಸಣ್ಣ ಆಪರೇಷನ್ ಥಿಯೇಟರ್‌ಗೆ ಶಿಫ್ಟ್ ಮಾಡಿದ್ದಾರೆ. ಈಕೆಯ ಜೊತೆ ನರ್ಸ್ ಇದ್ದರು. ಆದರೆ ಅಪ್ರಾಪ್ತೆ ನರ್ಸ್ ಗೆ ಕುಡಿಯಲು ನೀರು ಕೇಳಿದ್ದಾಳೆ. ನೀರು ತರಲು ನರ್ಸ್ ಹೋಗುತ್ತಿದ್ದಂತೆ ಅಪ್ರಾಪ್ತೆ ಆಪರೇಷನ್ ಥಿಯೇಟರ್ ರೂಮಿನ ಬಾಗಿಲು ಹಾಕಿಕೊಂಡು ದುಪ್ಪಟ್ಟದಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

    ನರ್ಸ್ ಬರುವಷ್ಟರಲ್ಲಿ ಹುಡುಗಿ ಮೃತಪಟ್ಟಿದ್ದು, ತಕ್ಷಣ ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ. ವಿಚಾರ ತಿಳಿದ ಪೊಲೀಸರು ಆಸ್ಪತ್ರೆಗೆ ಬಂದು ಪರಿಶೀಲನೆ ನಡೆಸಿದ್ದಾರೆ. ನಂತರ ಆಕೆಯ ಕುಟುಂಬದವರನ್ನು ಪತ್ತೆ ಮಾಡಿ ಮೃತದೇಹವನ್ನು ಹಸ್ತಾಂತರಿಸಿದ್ದಾರೆ. ಆದರೆ ಕುಟುಂಬದವರಿಗೆ ಆಕೆ ಗರ್ಭಿಣಿಯಾಗಿದ್ದಳು ಎಂಬ ವಿಚಾರ ಗೊತ್ತಿರಲಿಲ್ಲ ಎಂದು ವರದಿಯಾಗಿದೆ.

    ಮೃತ ಹುಡುಗಿ ತಮ್ಮ ಗ್ರಾಮದ ಯುವಕನನ್ನು ಪ್ರೀತಿಸುತ್ತಿದ್ದಳು ಎಂದು ತಿಳಿದುಬಂದಿದೆ. ತಮ್ಮ ಪ್ರೀತಿ ವಿಚಾರವೂ ಮನೆಯವರಿಗೆ ಗೊತ್ತಿರಲಿಲ್ಲ. ಸದ್ಯಕ್ಕೆ ಈ ಕುರಿತು ಪ್ರಕರಣ ದಾಖಲಿಸಿಕೊಂಡು ಯುವಕನಿಗಾಗಿ ಶೋಧಕಾರ್ಯ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

  • ದಿಢೀರ್ ಕುಸಿದು ಬಿದ್ದ ಬಳ್ಳಾರಿಯ ವಿಮ್ಸ್ ಆಸ್ಪತ್ರೆಯ ಆಪರೇಷನ್ ಥಿಯೇಟರ್ ಮೇಲ್ಛಾವಣಿ

    ದಿಢೀರ್ ಕುಸಿದು ಬಿದ್ದ ಬಳ್ಳಾರಿಯ ವಿಮ್ಸ್ ಆಸ್ಪತ್ರೆಯ ಆಪರೇಷನ್ ಥಿಯೇಟರ್ ಮೇಲ್ಛಾವಣಿ

    ಬಳ್ಳಾರಿ: ನಗರದ ವಿಜಯನಗರ ಇನ್ಸ್ಟ್ಯೂಟ್ ಆಫ್ ಮೆಡಿಕಲ್ ಸೈನ್ಸ್(ವಿಮ್ಸ್) ಆಸ್ಪತ್ರೆಯ ಆಪರೇಷನ್ ಥಿಯೇಟರ್ ಮೇಲ್ಛಾವಣಿ ಇಂದು ಬೆಳಗ್ಗೆ ಏಕಾಏಕಿ ಕುಸಿದು ಬಿದ್ದಿದೆ.

    ಅದೃಷ್ಟವಶಾತ್ ಇಂದು ಆಪರೇಷನ್ ಥಿಯೇಟರ್ ನಲ್ಲಿ ಯಾವುದೇ ಆಪರೇಷನ್ ನಡೆಯುತ್ತಿರಲಿಲ್ಲ. ಒಂದು ವೇಳೆ ಆಪರೇಷನ್ ನಡೆಯುತ್ತಿದ್ದಲ್ಲಿ ದುರಂತವೊಂದು ಸಂಭವಿಸುವ ಸಾಧ್ಯತೆಗಳಿದ್ದವು. ಛಾವಣಿ ಕುಸಿದು ಬಿದ್ದ ಪರಿಣಾಮ ಇಂದು ನಡೆಯಬೇಕಿದ್ದ ಎಲ್ಲ ಶಸ್ತ್ರಚಿಕಿತ್ಸೆಗಳನ್ನು ರದ್ದು ಮಾಡಲಾಗಿದೆ.

    ಆಸ್ಪತ್ರೆಯ ಆಪರೇಷನ್ ಥಿಯೇಟರ್‍ನಲ್ಲಿಯ ಎಲ್ಲ ಶಸ್ತ್ರಚಿಕಿತ್ಸಾ ಉಪಕರಣಗಳು ನಜ್ಜುಗುಜ್ಜಾಗಿದ್ದು, ಕೋಣೆಗೆ ಬೀಗ ಹಾಕಲಾಗಿದೆ. ಇನ್ನೂ ಕೋಣೆಯ ಕಡೆಗೆ ಯಾರು ತೆರಳದಂತೆ ನಿರ್ಬಂಧ ಹಾಕಲಾಗಿದೆ.

    ಈಗಾಗಲೇ ಅವ್ಯವಸ್ಥೆಗಳಿಂದ ಸುದ್ದಿಯಾಗುತ್ತಿರುವ ಬಳ್ಳಾರಿಯ ವಿಮ್ಸ್ ಮತ್ತೊಮ್ಮೆ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಈ ಹಿಂದೆ ಆಸ್ಪತ್ರೆಯಲ್ಲಿ ಬೆಂಕಿ ಕಾಣಿಸಿಕೊಂಡು ಸಾರ್ವಜನಿಕರನ್ನು ಬೆಚ್ಚಿ ಬೀಳಿಸುತ್ತಿವೆ. ಆಸ್ಪತ್ರೆಯ ಕಟ್ಟಡ ಸುಮಾರು 50 ವರ್ಷಗಳಷ್ಟು ಹಳೆಯದಾಗಿದ್ದರೂ, ಸರ್ಕಾರ ಮಾತ್ರ ಯಾವುದೇ ಮುನ್ನೇಚರಿಕೆ ಕ್ರಮವನ್ನು ಕೈಗೊಂಡಿಲ್ಲ.

    ಈ ಹಿಂದೆ ಆಸ್ಪತ್ರೆಯಲ್ಲಿ ಬೆಂಕಿ  ಕಾಣಿಸಿಕೊಂಡಾಗಿನ ದೃಶ್ಯ:

    https://www.youtube.com/watch?v=AQ6i_sNxAXQ