Tag: ಆಪರೇಷನ್ ಲಂಡನ್ ಕೆಫೆ

  • ಮೇಘಾ ಶೆಟ್ಟಿ ನಟನೆಯ ‘ಆಪರೇಷನ್ ಲಂಡನ್ ಕೆಫೆ’ ಚಿತ್ರದ ಟೀಸರ್ ರಿಲೀಸ್

    ಮೇಘಾ ಶೆಟ್ಟಿ ನಟನೆಯ ‘ಆಪರೇಷನ್ ಲಂಡನ್ ಕೆಫೆ’ ಚಿತ್ರದ ಟೀಸರ್ ರಿಲೀಸ್

    ವೀಶ್ ಶೆಟ್ಟಿ ಮತ್ತು ಮೇಘಾ ಶೆಟ್ಟಿ (Megha Shetty) ಕಾಂಬಿನೇಷನ್ನಿನ ಕನ್ನಡ, ಮರಾಠಿ, ಹಿಂದಿ, ತೆಲುಗು, ತಮಿಳು ಹಾಗೂ ಮಲಯಾಳಂ ಭಾಷೆಗಳಲ್ಲಿ ನಿರ್ಮಾಣವಾಗುತ್ತಿರುವ  ‘ಆಪರೇಷನ್ ಲಂಡನ್ ಕೆಫೆ’ (Operation London Cafe) ಚಿತ್ರದ ಚಿತ್ರೀಕರಣ ಈಗಾಗಲೇ ಮುಕ್ತಾಯಗೊಂಡು ಪೋಸ್ಟ್ ಪ್ರೊಡಕ್ಷನ್ ಕೆಲಸ ಬಿರುಸಿನಿಂದ ಸಾಗಿದೆ. ಆರಂಭದಿಂದಲೂ ಸಾಕಷ್ಟು ಕುತೂಹಲ ಮೂಡಿಸಿರುವ ಈ ಚಿತ್ರದ ಟೀಸರ್ ಬಿಡುಗಡೆಯಾಗಿ ಸೋಷಿಯಲ್ ಮೀಡಿಯಾದಲ್ಲಿ ಪ್ರೇಕ್ಷಕರಿಂದ ಭರ್ಜರಿ ಫಲಿತಾಂಶವನ್ನು ಕಾಣುತ್ತಿದೆ. ಟೀಸರ್ ಬಿಡುಗಡೆ ಮಾಡಿದ ಚಿತ್ರತಂಡ ಇದೆ ಮೊದಲ ಬಾರಿ ಪತ್ರಿಕಾಗೋಷ್ಠಿಯಲ್ಲಿ ಚಿತ್ರದ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿ ಹಂಚಿಕೊಂಡಿದೆ.

    ಮೊದಲು ಮಾತನಾಡಿದ ನಿರ್ದೇಶಕ ಸಡಗರ ರಾಘವೇಂದ್ರ, ನಾನು ಕನ್ನಡದ ಹೆಸರಾಂತ ನಿರ್ದೇಶಕರ ಜೊತೆ ಹಲವಾರು ವರ್ಷಗಳಿಂದ ಕೆಲಸ ಮಾಡಿದ ನಂತರ ಇದೇ ಮೊದಲ ಬಾರಿಗೆ ತನ್ನ ಚೊಚ್ಚಲ ಚಿತ್ರದ ನಿರ್ದೇಶನ ಮಾಡಿದ್ದೇನೆ. ಈ ಚಿತ್ರದ ನಾಯಕನಾಗಿ ನಟಿಸಿರುವ ಕವೀಶ್ ಶೆಟ್ಟಿ ಈ ಅವಕಾಶವನ್ನು ಕಲ್ಪಿಸಿಕೊಟ್ಟಿದ್ದಾರೆ.  ಈ ಸಂದರ್ಭದಲ್ಲಿ ಅವರಿಗೆ ಹಾಗೂ ಚಿತ್ರದ ನಿರ್ಮಾಪಕರಿಗೆ ಧನ್ಯವಾದ ತಿಳಿಸುತ್ತೇನೆ. ಇನ್ನು ಇದೊಂದು ನಕ್ಸಲಿಸಂ ಬೇಸಾಗಿಟ್ಟಿಕೊಂಡು ಹೆಣೆದಿರುವ ಕಥೆ‌.‌ ಹಾಗಂತ ನಕ್ಸಲಿಸಂನ ವೈಭವಿಕರಿಸಿಲ್ಲ. ಯಾವುದೇ ಒಬ್ಬ ವ್ಯಕ್ತಿಯ ಕುರಿತಾದ ಚಿತ್ರವೂ ಇದಲ್ಲ. ಇದು ಆಫ್ಟರ್ “ಆಪರೇಷನ್ ಲಂಡನ್ ಕೆಫೆ”. ನೀವು ಮೊದಲು ನೋಡುವುದು ಚಿತ್ರದ ಪ್ರೀಕ್ವೆಲ್. ಮೊದಲ ಭಾಗ ಆನಂತರ ಬರಲಿದೆ. ಆ ಚಿತ್ರದ ಕುರಿತು ಈಗಾಗಲೇ ಕಾರ್ಯ ಆರಂಭವಾಗಿದೆ. ಕನ್ನಡ ಹಾಗೂ ಮರಾಠಿ ಎರಡೂ ಭಾಷೆಯಲ್ಲಿ ನೇರವಾಗಿ ಚಿತ್ರೀಕರಣ ಮಾಡಲಾಗಿದೆ‌. ಉಳಿದಂತೆ ಹಿಂದಿ, ತೆಲುಗು, ತಮಿಳು ಹಾಗೂ ಮಲೆಯಾಳಂನಲ್ಲೂ ಚಿತ್ರ ಬಿಡುಗಡೆಯಾಗಲಿದೆ. ಕನ್ನಡ ಕಲಾವಿದರು ಮರಾಠಿ ಕಲಿತು, ಮರಾಠಿ ಕಲಾವಿದರು ಕನ್ನಡ ಕಲಿತು ಅಭಿನಯಿಸಿರುವುದು ಈ ಚಿತ್ರದ ವಿಶೇಷ.

    “ಮುಂಗಾರು ಮಳೆ 2” ಚಿತ್ರದಿಂದ ನನ್ನ ಸಿನಿ ಜರ್ನಿ ಆರಂಭವಾಯಿತು. ನಂತರ 2020 ರಲ್ಲಿ “ಜಿಲ್ಕಾ” ಚಿತ್ರದಲ್ಲಿ ನಟಿಸಿದ್ದೆ. ಸಡಗರ ರಾಘವೇಂದ್ರ ಅವರ ಕಾರ್ಯವೈಖರಿಯನ್ನು ಹತ್ತಿರದಿಂದ ಕಂಡಿದ್ದ ನನಗೆ ಅವರ ಮೊದಲ ನಿರ್ದೇಶನದಲ್ಲಿ ನನ್ನದೊಂದು ಚಿತ್ರ ಮಾಡುವ ಆಸೆಯಿತ್ತು. ಈ ಚಿತ್ರದ ಮೂಲಕ ಅದು ಈಡೇರಿದೆ. ವಿಜಯ ಕುಮಾರ್ ಶೆಟ್ಟಿ, ರಮೇಶ್ ಕೊಠಾರಿ, ಹವರಾಲ್ ಹಾಗೂ ದೀಪಕ್ ರಾಣೆ ಈ ಚಿತ್ರ ನಿರ್ಮಾಣ ಮಾಡಿದ್ದಾರೆ. ಮೇಘಾ ಶೆಟ್ಟಿ ನಾಯಕಿಯಾಗಿ ಅಭಿನಯಿಸಿದ್ದಾರೆ ಎಂದು ನಾಯಕ ಕವೀಶ್ ಶೆಟ್ಟಿ ತಿಳಿಸಿದರು

    ನಾನು ಮರಾಠಿ ಕಲಿತು ಈ ಚಿತ್ರದಲ್ಲಿ ಅಭಿನಯಿಸಿದ್ದೇನೆ. ನಿರ್ದೇಶಕರಾಗಿ ಸಡಗರ ರಾಘವೇಂದ್ರ ಅವರು ತಮ್ಮ ಮೊದಲ ನಿರ್ದೇಶನದಲ್ಲೇ ಉತ್ತಮವಾಗಿ ಕೆಲಸ ಮಾಡಿದ್ದಾರೆ. ಒಳ್ಳೆಯ ತಂಡದ ಜೊತೆಗೆ ಕೆಲಸ ಮಾಡಿರುವ ಖುಷಿಯಿದೆ ಎಂದರು ಮೇಘಾ ಶೆಟ್ಟಿ.  ಇಂಡಿಯನ್ ಫಿಲ್ಮ್ ಫ್ಯಾಕ್ಟರಿ ಮತ್ತು ದೀಪಕ್ ರಾಣೆ ಫಿಲಂ ಲಾಂಛನದಡಿಯಲ್ಲಿ ಈ ಚಿತ್ರವನ್ನು ನಿರ್ಮಿಸುತ್ತಿರುವ ವಿಜಯ್ ಕುಮಾರ್ ಶೆಟ್ಟಿ ಹವರಾಲ್, ರಮೇಶ್ ಕೊಠಾರಿ ಮತ್ತು ದೀಪಕ್ ರಾಣೆ ಮಾತನಾಡಿ ಈ ಚಿತ್ರಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡಿ ಎಂದರು. ಛಾಯಾಗ್ರಾಹಕ ಎನ್ ಡಿ ನಾಗಾರ್ಜುನ್, ಸಾಹಸ ನಿರ್ದೇಶಕ ಮಾಸ್ ಮಾದ ಹಾಗೂ ಚಿತ್ರದಲ್ಲಿ ನಟಿಸಿರುವ ಅರ್ಜುನ್ ಕಾಪಿಕ್ಕಾಡ್, ವಿರಾಟ್ ಮಡಕೆ ಮುಂತಾದವರು “ಆಪರೇಷನ್ ಲಂಡನ್ ಕೆಫೆ”  ಹಾಗೂ ತಮ್ಮ ಪಾತ್ರದ ಬಗ್ಗೆ ಮಾತನಾಡಿ, ಚಿತ್ರದ ಮೇಕಿಂಗ್ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

  • ‘ಆಪರೇಷನ್ ಲಂಡನ್ ಕೆಫೆ’ ಶೂಟಿಂಗ್ ಮುಗಿಸಿದ ಮೇಘಾ ಶೆಟ್ಟಿ

    ‘ಆಪರೇಷನ್ ಲಂಡನ್ ಕೆಫೆ’ ಶೂಟಿಂಗ್ ಮುಗಿಸಿದ ಮೇಘಾ ಶೆಟ್ಟಿ

    ವರ್ಷ ತೆರೆ ಕಾಣುತ್ತಿರುವ ಚಿತ್ರಗಳ ಪೈಕಿ ಅತೀ ಹೆಚ್ಚು ಕುತೂಹಲ ಮೂಡಿಸುತ್ತಿರುವ ಆಕ್ಷನ್ ಪ್ಯಾಕೇಜ್ ಚಿತ್ರ ಕವೀಶ್ ಶೆಟ್ಟಿ ಮತ್ತು ಮೇಘಾ ಶೆಟ್ಟಿ (Megha Shetty) ಕಾಂಬಿನೇಷನ್ನಿನ ಕನ್ನಡ ಮರಾಠಿ ಹಿಂದಿ ತೆಲುಗು ತಮಿಳು ಹಾಗೂ ಮಲಯಾಳಂ ಭಾಷೆಯಲ್ಲಿ ತಯಾರಾಗುತ್ತಿರುವ ‘ಆಪರೇಷನ್ ಲಂಡನ್ ಕೆಫೆ’ (Operation London Cafe) ಬಹುತೇಕ ಚಿತ್ರೀಕರಣ ಮುಗಿಸಿದ್ದು. ಚಿತ್ರದ ಡಬ್ಬಿಂಗ್ ಹಂತದ ಚಟುವಟಿಕೆಗಳು ಭರದಿಂದ ಸಾಗುತ್ತಿದೆ.

    ಈಗಾಗಲೇ ಈ ಚಿತ್ರದ ಚಿತ್ರೀಕರಣ ಮುಗಿಸಿರುವ ನಟಿ ಮೇಘಾ ಶೆಟ್ಟಿ ಅದೇ ಖುಷಿಯಲ್ಲಿ ತಮ್ಮ ಹುಟ್ಟುಹಬ್ಬದ ಸಂಭ್ರಮವನ್ನು ಆಚರಿಸಿಕೊಳ್ಳುತ್ತಿದ್ದಾರೆ. ನಾಯಿಗಳೊಂದಿಗೆ ವಿಶ್ ಮಾಡಿಸಿಕೊಂಡಿರುವ ಅವರು ವಿಡಿಯೋ ವೈಲರ್ ಕೂಡ ಆಗಿದೆ. ಇದನ್ನೂ ಓದಿ:‘ಸಂಜೆ ಮೇಲೆ ಸುಮ್ನೆ ಹಂಗೆ’ ಅಂತಿದ್ದಾರೆ ನೀನಾಸಂ ಸತೀಶ್: ಮ್ಯಾಟ್ನಿ ಹಾಡು ವೈರಲ್

    ಇಂಡಿಯನ್ ಫಿಲ್ಮ್ ಫ್ಯಾಕ್ಟರಿ ಮತ್ತು ದೀಪಕ್ ರಾಣೆ ಫಿಲ್ಮ್ಸ್ ಲಾಂಛನದಡಿಯಲ್ಲಿ ವಿಜಯ್ ಕುಮಾರ್ ಶೆಟ್ಟಿ ಹವರಾಲ್ ರಮೇಶ್ ಕೊಠಾರಿ ಮತ್ತು ದೀಪಕ್ ರಾಣೆ ಅದ್ದೂರಿಯಾಗಿ ನಿರ್ಮಿಸುತ್ತಿರುವ ಈ ಚಿತ್ರವನ್ನು ಸಡಗರ ರಾಘವೇಂದ್ರ ನಿರ್ದೇಶಿಸುತ್ತಿದ್ದಾರೆ. ಡಿ ನಾಗಾರ್ಜುನ್ ಛಾಯಾಗ್ರಹಣ ಪ್ರಾನ್ಷು ಝಾ ಸಂಗೀತ ಕೆ. ಎಂ ಪ್ರಕಾಶ್ ಸಂಕಲನ ವರದರಾಜ್ ಕಾಮತ್ ಕಲೆ ವಿಕ್ರಂ ಮೋರ್ ಮಾಸ್ ಮಾದ ಸಾಹಸ ಕವಿರಾಜ್ ವಿ ನಾಗೇಂದ್ರ ಪ್ರಸಾದ್ ಮತ್ತು ಕ್ಷಿತಿಜ್ ಪಟವರ್ಧನ್ ಸಾಹಿತ್ಯವಿರುವ ಈ ಚಿತ್ರದಲ್ಲಿ ಮರಾಠಿಯ ಹೆಸರಾಂತ ಶಿವಾನಿ ಸುರ್ವೆ, ವಿರಾಟ್ ಮಡಕೆ ಸಹಿತ ಅರ್ಜುನ್ ಕಾಪಿಕ್ಕಾಡ್ ಬಿ ಸುರೇಶ್ ಇನ್ನಿತರ ಹೆಸರಾಂತ ಕಲಾವಿದರು ಬಣ್ಣ ಹಚ್ಚಿದ್ದಾರೆ.

    ಸದ್ಯದಲ್ಲೇ ಚಿತ್ರಕ್ಕೆ ಸಂಬಂಧಿಸಿದ ಇನ್ನಷ್ಟೂ ಸಿಹಿ ಸುದ್ಧಿಯನ್ನು ಹಂಚಿಕೊಳ್ಳುವುದಾಗಿ ಹೇಳಿಕೊಂಡ ನಿರ್ದೇಶಕ ಸಡಗರ ರಾಘವೇಂದ್ರ (Sadagara Raghavendra) ಈ ಮೂಲಕ ಹುಟ್ಟುಹಬ್ಬದ ಖುಷಿಯನ್ನು ಆಚರಿಸಿಕೊಳ್ಳುತ್ತಿರುವ ಮೇಘಾ ಶೆಟ್ಟಿಯವರಿಗೆ ಇಡೀ ಚಿತ್ರತಂಡದ ಪರವಾಗಿ ಶುಭಾಶಯವನ್ನು ಕೋರಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಆರು ಭಾಷೆಗಳಲ್ಲಿ ರೆಡಿ ಆಗ್ತಿದೆ ‘ಆಪರೇಷನ್ ಲಂಡನ್ ಕೆಫೆ’ ಚಿತ್ರ

    ಆರು ಭಾಷೆಗಳಲ್ಲಿ ರೆಡಿ ಆಗ್ತಿದೆ ‘ಆಪರೇಷನ್ ಲಂಡನ್ ಕೆಫೆ’ ಚಿತ್ರ

    ವೀಶ್ ಶೆಟ್ಟಿ ಮತ್ತು ಮೇಘಾ ಶೆಟ್ಟಿ ಕಾಂಬಿನೇಷನ್ನಿನ ಸಡಗರ ರಾಘವೇಂದ್ರ ನಿರ್ದೇಶನದ ಆಪರೇಷನ್ ಲಂಡನ್ ಕೆಫೆ ಚಿತ್ರ ತಂಡ ಕೊನೆಯ ಹಂತದ ಚಿತ್ರೀಕರಣಕ್ಕೆ ಸಜ್ಜಾಗುತ್ತಿದೆ. ಅದಕ್ಕೂ ಮೊದಲು ಮರಾಠಿ ಮೂಲದ ಮತ್ತೊಬ್ಬ ಸ್ಟಾರ್ ಕಲಾವಿದ ವಿರಾಟ್ ಮಡಕೆಯ ಮಾಸ್ ಲುಕ್ ಕ್ಯಾರೆಕ್ಟರ್ ಪೋಸ್ಟರ್ ಬಿಡುಗಡೆಗೊಳಿಸುವ ಮೂಲಕ  ಚಿತ್ರದ ಒಂದೊಂದೇ ಮಗ್ಗುಲನ್ನು ಹಂತ ಹಂತವಾಗಿ ಚಿತ್ರ ಪ್ರೇಮಿಗಳಿಗೆ ಪರಿಚಯಿಸುತ್ತಿದ್ದಾರೆ. ಈ ಚಿತ್ರ ಕನ್ನಡ, ಮರಾಠಿ, ಹಿಂದಿ, ತಮಿಳು ತೆಲುಗು ಮತ್ತು ಮಲಯಾಳಂ ಭಾಷೆಯಲ್ಲಿ ತಯಾರಾಗುತ್ತಿದ್ದು ಚಿತ್ರ ರಸಿಕರಿಗೆ ಇಷ್ಟವಾಗುವ ರೀತಿಯಲ್ಲಿ ತೆರೆಯ ಮೇಲೆ ಕಾಣಿಸಿಕೊಳ್ಳಲಿದೆ ಎನ್ನುವುದು ನಿರ್ದೇಶಕ ಸಡಗರ ರಾಘವೇಂದ್ರ ತಮ್ಮ ಅನಿಸಿಕೆಯನ್ನು ಹಂಚಿಕೊಂಡಿದ್ದಾರೆ.

    ತನ್ನ ಮೊದಲನೇ ಚಿತ್ರ ಜಿಲ್ಕಾ ನಂತರ ಕವೀಶ್ ಶೆಟ್ಟಿ ಸಂಪೂರ್ಣ ಮಾಸ್ ಶೈಲಿಯಲ್ಲಿ ಈ ಚಿತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದು ಅದಕ್ಕಾಗಿ ಸಾಕಷ್ಟು ಪೂರ್ವ ತಯಾರಿಯನ್ನು ಮಾಡಿಕೊಂಡು ಅಖಾಡಕ್ಕೆ ಇಳಿದಿದ್ದಾರೆ. ಈ ಚಿತ್ರದ ಇನ್ನೊಂದು ಹೈಲೈಟ್ ಮೇಘಾ ಶೆಟ್ಟಿ. ತಮ್ಮ ಸಹಜ ನಟನೆಯ ಮೂಲಕ ಕನ್ನಡಿಗರ ಮನೆ ಮಾತಾಗಿರುವ ಮೇಘಾ ಶೆಟ್ಟಿ ನಾಯಕಿಯಾಗಿ ಈ ಚಿತ್ರದಲ್ಲಿ ಬಜಾರಿ ಹಳ್ಳಿ ಹುಡುಗಿಯ ಪಾತ್ರದಲ್ಲಿ ತುಂಬಾ ಲವಲವಿಕೆಯಿಂದ ಕಾಣಿಸಿಕೊಂಡಿದ್ದಾರೆ. ಉಳಿದಂತೆ ಮರಾಠಿಯ ಶಿವಾನಿ ಸುರ್ವೆ, ವಿರಾಟ್ ಮಡಕೆ ಮುಂತಾದ ಹೆಸರಾಂತ ಕಲಾವಿದರು ಈ ಚಿತ್ರಕ್ಕಾಗಿ ಬಣ್ಣ ಹಚ್ಚಿದ್ದಾರೆ. ಇದನ್ನೂ ಓದಿ: ಜಪಾನ್ ನಲ್ಲಿ ಕುತ್ಕೊಂಡು ತನಗೀಗ 40 ವರ್ಷ ಎಂದು ಘೋಷಿಸಿಕೊಂಡ ರಮ್ಯಾ

    ಈಗಾಗಲೇ ಉಡುಪಿ ಚಿಕ್ಕಮಗಳೂರು ಸುತ್ತಮುತ್ತ ಭಟ್ಕಳ ಕಳಸ ಕಾಡು ಮತ್ತು ಬೆಂಗಳೂರು ಇತ್ಯಾದಿ ಪ್ರೇಕ್ಷಣೀಯ ಸ್ಥಳಗಳಲ್ಲಿ ಚಿತ್ರೀಕರಿಸಲಾಗಿದ್ದು ಇನ್ನು ಕೆಲವೇ ದಿನಗಳ ಚಿತ್ರೀಕರಣಕ್ಕಾಗಿ ಚಿತ್ರ ತಂಡ ಸಜ್ಜಾಗುತ್ತಿದೆ. ವಿಜಯ್ ಕುಮಾರ್ ಶೆಟ್ಟಿ ಹವರಾಲ್ ದೀಪಕ್ ರಾಣೆ ರಮೇಶ್ ಕೊಠಾರಿ ಮತ್ತು ವಿಜಯ್ ಪ್ರಕಾಶ್ ಇಂಡಿಯನ್ ಫಿಲಂ ಫ್ಯಾಕ್ಟರಿ ಮತ್ತು ದೀಪಕ್ ರಾಣೆ ಫಿಲ್ಮ್ ಲಾಂಛನದಲ್ಲಿ ಅದ್ಧೂರಿಯಾಗಿ ನಿರ್ಮಾಣ ಮಾಡುತ್ತಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ‘ಆಪರೇಷನ್ ಲಂಡನ್ ಕೆಫೆ’ ಚಿತ್ರತಂಡದಿಂದ ಮೇಘಾ ಶೆಟ್ಟಿ ಹುಟ್ಟು ಹಬ್ಬಕ್ಕೆ ಗಿಫ್ಟ್

    ‘ಆಪರೇಷನ್ ಲಂಡನ್ ಕೆಫೆ’ ಚಿತ್ರತಂಡದಿಂದ ಮೇಘಾ ಶೆಟ್ಟಿ ಹುಟ್ಟು ಹಬ್ಬಕ್ಕೆ ಗಿಫ್ಟ್

    ಟಿ ಮೇಘಾ ಶೆಟ್ಟಿ ‘ಆಪರೇಷನ್ ಲಂಡನ್ ಕೆಫೆ’ ಪ್ಯಾನ್ ಇಂಡಿಯಾ ಚಿತ್ರದಲ್ಲಿ ನಾಯಕಿಯಾಗಿ ನಟಿಸುತ್ತಿರುವ ಬಗ್ಗೆ ಈಗಾಗಲೇ ಗೊತ್ತೇಯಿದೆ. ಇದೀಗ ಮುಡಿ ತುಂಬಾ ಮಲ್ಲಿಗೆ ಮುಡಿದು ಮುದ್ದು ಮುದ್ದಾಗಿ ಕಾಣಿಸುವ ಮೇಘಾ ಶೆಟ್ಟಿಯ ಕಲರ್ಫುಲ್ ಪೋಸ್ಟರ್ ಬಿಡುಗಡೆಗೊಳಿಸುವ ಮೂಲಕ ಅವರ ಹುಟ್ಟುಹಬ್ಬಕ್ಕೆ ಇನ್ನಷ್ಟೂ ಮೆರುಗು ನೀಡಿ ಚಿತ್ರತಂಡ ಶುಭಾಶಯ ಕೋರಿದೆ.

    ಇತ್ತೀಚೆಗಷ್ಟೇ ನಾಯಕ ಕವೀಶ್ ಶೆಟ್ಟಿಯ ಔಟ್ ಆಂಡ್ ಔಟ್ ಮಾಸ್ ಆಂಡ್ ಕಮರ್ಷಿಯಲ್ ಪೋಸ್ಟರ್ ಜೊತೆ ಚಿತ್ರದ ಟೈಟಲ್ ಬಿಡುಗಡೆಗೊಳಿಸಿದ ನಿರ್ದೇಶಕ ಸಡಗರ ರಾಘವೇಂದ್ರ ಈಗ ಈ ಪೋಸ್ಟರ್ ಮೂಲಕ ಚಿತ್ರಕ್ಕೆ ಇನ್ನೊಂದು ಸುಂದರವಾದ ಆಯಾಮ ಕೂಡ ಇದೆ ಎನ್ನುವ ಗುಟ್ಟು ಬಿಟ್ಟು ಕೊಟ್ಟಿದ್ದಾರೆ. ಚಿತ್ರದ ಕಥೆ ಮತ್ತು ಮೇಘಾ ಶೆಟ್ಟಿಯ ಪಾತ್ರದ ಬಗ್ಗೆ ಕೇಳಿದಾಗ ಅದಕ್ಕಿನ್ನೂ ಸಮಯವಿದೆ ಈಗಲೇ ಬೇಡ ಎನ್ನುತ್ತಾ ಮುಗುಳ್ನಕ್ಕು ಸುಮ್ಮನಾಗುವ ನಿರ್ದೇಶಕರು ಸದ್ಯದಲ್ಲೇ ಕೊನೆಯ ಹಂತದ ಚಿತ್ರೀಕರಣಕ್ಕೆ ಸಜ್ಜಾಗುತ್ತಿರುವ ಬಗ್ಗೆ ತಿಳಿಸಿದ್ದಾರೆ. ಇದನ್ನೂ ಓದಿ:ಉಗ್ರರಿಂದ ಹತ್ಯೆಯಾಗಿದ್ದ ಕಾಶ್ಮೀರಿ ಗಾಯಕಿಯ ಪಾತ್ರದಲ್ಲಿ ಕಂಗನಾ ರಣಾವತ್

    ಉಡುಪಿಯ ವಿಜಯ್ ಕುಮಾರ್ ಶೆಟ್ಟಿ ಹವರಾಲ್, ರಮೇಶ್ ಕೊಠಾರಿ ಮತ್ತು ಮರಾಠಿಯ ದೀಪಕ್ ರಾಣೆ ನಿರ್ಮಾಣ ಮಾಡುತ್ತಿರುವ ಇಂಡಿಯನ್ ಫಿಲಂ ಫ್ಯಾಕ್ಟರಿ ಮತ್ತು ದೀಪಕ್ ರಾಣೆ ಫಿಲಂಸ್ ಲಾಂಛನದಡಿಯಲ್ಲಿ ಸಿದ್ಧವಾಗುತ್ತಿರುವ ಈ ಅದ್ಧೂರಿ ಬಜೆಟ್ಟಿನ ಬಹುಭಾಷಾ ಚಿತ್ರ ಮುಂದಿನ ವರ್ಷದ ಆರಂಭದಲ್ಲಿ ತೆರೆ ಕಾಣುವ ಎಲ್ಲಾ ನಿರೀಕ್ಷೆಯಿದೆ.

    Live Tv
    [brid partner=56869869 player=32851 video=960834 autoplay=true]