Tag: ಆಪರೇಷನ್‌ ಹಸ್ತ

  • ಬಿಜೆಪಿ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್‌ ಮನೆಯಲ್ಲಿ ಡಿಕೆಶಿ ಭರ್ಜರಿ ಊಟ

    ಬಿಜೆಪಿ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್‌ ಮನೆಯಲ್ಲಿ ಡಿಕೆಶಿ ಭರ್ಜರಿ ಊಟ

    ಬೆಂಗಳೂರು: ಆಪರೇಷನ್ ಹಸ್ತದ (Operation Hasta) ಸದ್ದು ಜೋರಾಗಿರುವ ಹೊತ್ತಲ್ಲೇ ಚಿತ್ರದುರ್ಗದ ಹಿರಿಯೂರಿನ ಬಿಜೆಪಿ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ (Poornima Srinivas) ಮನೆಗೆ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಭೇಟಿ ನೀಡಿದ್ದಾರೆ.

    ಕೃಷ್ಣ ಜನ್ಮಾಷ್ಟಮಿ (Krishna Janmashtami) ನೆಪದಲ್ಲಿ ಪೂರ್ಣಿಮಾ ಶ್ರೀನಿವಾಸ್ ಅವರ ಕೆಆರ್ ಪುರಂ ನಿವಾಸಕ್ಕೆ ಡಿಕೆಶಿ ಭೇಟಿ ನೀಡಿ ಪೂಜೆಯಲ್ಲಿ ಪಾಲ್ಗೊಂಡಿದ್ದರು. ಇದನ್ನೂ ಓದಿ: ಮುಂದಿನ ಮೂರ್ನಾಲ್ಕು ದಿನ ರಾಜ್ಯಾದ್ಯಂತ ಮಳೆಯ ಮುನ್ಸೂಚನೆ

     

    ಈ ವಿಚಾರ ಭಾರೀ ಚರ್ಚೆಯಾದ ಬೆನ್ನಲ್ಲೇ ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್‌, ನಮ್ಮದು ಆಪರೇಷನ್ ಅಲ್ಲ, ಕೋ ಅಪರೇಷನ್. ಕೃಷ್ಣ ‌ಜನ್ಮಾಷ್ಟಮಿಗೆ ಕರೆದಿದ್ದರು ಬಂದಿದ್ದೇನೆ. ಆಶೀರ್ವಾದ ಪಡೆದಿದ್ದೇನೆ, ಊಟ ಮಾಡಿದ್ದೇನೆ ಎಂದು ತಿಳಿಸಿದರು.

    ‌ಪೂರ್ಣಿಮಾ ಶ್ರೀನಿವಾಸ್ ಪ್ರತಿಕ್ರಿಯಿಸಿ, ಇವತ್ತು ಡಿ‌ಕೆ ಶಿವಕುಮಾರ್ ಅವರು ಹಬ್ಬದ ಕಾರಣಕ್ಕೆ ಮನೆಗೆ ಬಂದು ಊಟ ಮಾಡಿ ಹೋದರು. ಕಾಂಗ್ರೆಸ್ಸಿನಿಂದ ನನಗೆ ಆಹ್ವಾನ ಇದೆ. ಆದರೆ ನಾನು ಬಿಜೆಪಿಯಲ್ಲಿ ಇದ್ದೇನೆ. ಬಿಜೆಪಿ ಬಿಡುವ ಯೋಚನೆ ಮಾಡಿಲ್ಲ ಎಂದು ಹೇಳಿದರು.

    ಚುನಾವಣೆಗೂ ಮುಂಚಿತವಾಗಿ ಈ ಚರ್ಚೆ ಇತ್ತು. ಆದರೆ ನಾನು ಬಿಜೆಪಿ ಬಿಡುತ್ತೇನೆ ಎಂದು ಎಲ್ಲಿಯೂ ಹೇಳಲಿಲ್ಲ. ಈಗಲೂ ಕೂಡ ಯಾವುದೇ ನಿರ್ಧಾರ ಮಾಡಿಲ್ಲ. ಹೋಗುವುದಾದರೆ ಎಲ್ಲರಿಗೂ ಹೇಳಿಯೇ ಹೋಗುತ್ತೇನೆ. ಕದ್ದು ಮುಚ್ಚಿ ನಾನು ಕಾಂಗ್ರೆಸ್ ಸೇರುವುದಿಲ್ಲ. ಕೆಲ ಶಾಸಕರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಆದರೆ ನನಗೆ ಯಾವುದೇ ಅಸಮಾಧಾನ ಇಲ್ಲ. ಆದಷ್ಟು ಬೇಗ ವಿಪಕ್ಷ ನಾಯಕ ಹಾಗೂ ರಾಜ್ಯಧ್ಯಕ್ಷರನ್ನು ಆಯ್ಕೆ ಮಾಡುತ್ತಾರೆ ಎಂದು ತಿಳಿಸಿದರು.

     

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಆಪರೇಷನ್ ಹಸ್ತ ವದಂತಿ ಬೆನ್ನಲ್ಲೇ ಬಿಜೆಪಿ ನಾಯಕರ ಜೊತೆ ಡಿಕೆಶಿ ಆಪ್ತ ಮಾತುಕತೆ!

    ಆಪರೇಷನ್ ಹಸ್ತ ವದಂತಿ ಬೆನ್ನಲ್ಲೇ ಬಿಜೆಪಿ ನಾಯಕರ ಜೊತೆ ಡಿಕೆಶಿ ಆಪ್ತ ಮಾತುಕತೆ!

    ಬೆಂಗಳೂರು: ಆಪರೇಷನ್ ಹಸ್ತದ (Operation Hasta) ವದಂತಿ ನಡುವೆ ಬಿಜೆಪಿ (BJP) ನಾಯಕರ ಜೊತೆ ಡಿಸಿಎಂ ಡಿಕೆ ಶಿವಕುಮಾರ್‌ (DK Shivakumar) ಆಪ್ತ ಮಾತುಕತೆ ನಡೆಸಿದ ಫೋಟೋ ಈಗ ವೈರಲ್‌ ಆಗಿದ್ದಾರೆ.

    ಖಾಸಗಿ ಹೋಟೆಲಿನಲ್ಲಿ ನಡೆದ ನಟ ಸುದೀಪ್ (Sudeep) ಹುಟ್ಟುಹಬ್ಬದ ಪಾರ್ಟಿಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್, ಮಾಜಿ ಸಚಿವರಾದ ಬಿ.ಸಿ.ಪಾಟೀಲ್ (BC Patil) ಹಾಗೂ ರಾಜೂ ಗೌಡ (Raju Gowda) ಜೊತೆ ಆಪ್ತ ಮಾತುಕತೆ ನಡೆಸಿದ್ದಾರೆ.  ಇದನ್ನೂ ಓದಿ: ಈಶ್ವರಪ್ಪ ವಿರುದ್ಧ ಬಿ.ಸಿ.ಪಾಟೀಲ್ ಗರಂ

     

    ಡಿಕೆಶಿ ಮಾತುಕತೆ ಫೋಟೋ ವೈರಲ್ ಬೆನ್ನಲ್ಲೇ ರಾಜಕೀಯ ವಲಯದಲ್ಲಿ ನಾನಾ ಚರ್ಚೆ ಹುಟ್ಟುಹಾಕಿದೆ. ಈ ವಿಷಯದ ಬಗ್ಗೆ ಪ್ರತಿಕ್ರಿಯಿಸಿದ ಬಿಸಿ ಪಾಟೀಲ್‌, ಕಾಮಾಲೆ ಕಣ್ಣಿಗೆ ಕಾಣವುದೆಲ್ಲ ಹಳದಿ ಅಂತೆ. ಇದೊಂದು ಆಕಸ್ಮಿಕ ಭೇಟಿ ಅಷ್ಟೇ. ಔಪಚಾರಿಕ ಚರ್ಚೆ, ಬೇರೆ ಯಾವುದೇ ಚರ್ಚೆ ಇಲ್ಲ. ಹುಟ್ಟುಹಬ್ಬದ ಪಾರ್ಟಿಗೆ ಹೋಗಿದ್ದೆವು. ಆಗ ಡಿಕೆ ಶಿವಕುಮಾರ್ ಅವರು ಬಂದಿದ್ದರು. ಅವರು ರಾಜ್ಯದ ಉಪಮುಖ್ಯಮಂತ್ರಿ. ಸಹಜವಾಗಿ ಗೌರವ ಕೊಟ್ಟು ಮಾತನಾಡಿಸಬೇಕಾಗುತ್ತದೆ. ಅದೇ ರೀತಿ ಮಾತನಾಡಿಸಿದ್ದೇವೆ ಹೊರತು ಬೇರೆ ಇಲ್ಲ. ಇದು ಆಕಸ್ಮಿಕ ಭೇಟಿ ಅಷ್ಟೇ, ಬೇರೆ ಅರ್ಥ ಬೇಡ ಎಂದು ಸ್ಪಷ್ಟನೆ ನೀಡಿದರು.

    ರಾಜೂ ಗೌಡ ಪ್ರತಿಕ್ರಿಯಿಸಿ, ನಮ್ಮ ಭೇಟಿ ಆಕಸ್ಮಿಕ. ತಮಾಶೆ ಮಾಡಿಕೊಂಡು ಮಾತಾಡಿದ್ದೇವೆ. ನಮ್ಮ ಚರ್ಚೆ ರಾಜಕೀಯ ಹೊರತಾಗಿ ಇತ್ತು ಎಂದು ಪ್ರತಿಕ್ರಿಯಿಸಿದ್ದಾರೆ.

     

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಆಪರೇಷನ್ ಹಸ್ತಕ್ಕೆ ಮುಂದಿನ ವಾರ ನಿರ್ಣಾಯಕ – ಕಾಂಗ್ರೆಸ್ ಸೇರ್ತಾರಾ ಮುನೇನಕೊಪ್ಪ?

    ಆಪರೇಷನ್ ಹಸ್ತಕ್ಕೆ ಮುಂದಿನ ವಾರ ನಿರ್ಣಾಯಕ – ಕಾಂಗ್ರೆಸ್ ಸೇರ್ತಾರಾ ಮುನೇನಕೊಪ್ಪ?

    ಬೆಂಗಳೂರು: ಆಪರೇಷನ್ ಹಸ್ತಕ್ಕೆ (Operation Hasta) ಮುಂದಿನ ವಾರ ನಿರ್ಣಾಯಕ ವಾರ ಎಂದು ಹೇಳಲಾಗುತ್ತಿದೆ. ಸೋಮಶೇಖರ್, ಶಿವರಾಂ ಹೆಬ್ಬಾರ್ ಹೆಸರಿನ ಜೊತೆಗೆ ಶಂಕರ್ ಪಾಟೀಲ್ ಮುನೇನಕೊಪ್ಪ (Shankar Patil Munenakoppa) ಮತ್ತು ಎಸ್‍ಐ ಚಿಕ್ಕನಗೌಡ ಕಾಂಗ್ರೆಸ್‍ಗೆ (Congress) ಬರುತ್ತಾರೆ ಎಂಬ ವದಂತಿ ಹಬ್ಬಿದೆ.

    ಮುನೇನಕೊಪ್ಪ-ಚಿಕ್ಕನಗೌಡ ಬಗ್ಗೆ ಸಚಿವ ಸಂತೋಷ್ ಲಾಡ್ (Santosh Lad) ಸುಳಿವು ಕೊಟ್ಟಿದ್ದಾರೆ. ಇಬ್ಬರು ಪಕ್ಷಕ್ಕೆ ಬಂದರೆ ಧಾರವಾಡ ಜಿಲ್ಲೆಯಲ್ಲಿ (Dharwad District) ಮತ್ತಷ್ಟು ಬಲ ಬರಲಿದೆ ಎಂದಿದ್ದಾರೆ. ಈ ಬಗ್ಗೆ ಮುನೇನಕೊಪ್ಪ ಹುಬ್ಬಳ್ಳಿಯಲ್ಲಿ ಸೋಮವಾರ ಸುದ್ದಿಗೋಷ್ಠಿ ಕರೆದಿದ್ದಾರೆ.  ಇದನ್ನೂ ಓದಿ: ಬಾಡಿಗೆಗೆ ಬಂದವರು ಶವವಾಗಿ ಪತ್ತೆ – ಮೈಸೂರಿನಲ್ಲಿ ಒಂದೇ ಕುಟುಂಬದ ನಾಲ್ವರ ಸಾವು

     

    ಮೋದಿ ಸ್ವಾಗತಕ್ಕೆ ಬಾರದೇ ಅಸಮಾಧಾನಗೊಂಡಿರುವ ಎಸ್ ಟಿ ಸೋಮಶೇಖರ್ (ST Somashekar) ಜೊತೆ ಮಾತನಾಡುವುದಾಗಿ ಮಾಜಿ ಸಿಎಂ ಬೊಮ್ಮಾಯಿ (Basavaraj Bommai) ಹೇಳಿದ್ದಾರೆ. ಶಿವರಾಮ್ ಹೆಬ್ಬಾರ್ ಕಾಂಗ್ರೆಸ್‌ಗೆ ಬರುವುದು ಬೇಡ ಎಂದು ಕೈ ಕಾರ್ಯಕರ್ತರು ಸಭೆಯಲ್ಲಿ ಹೇಳಿರುವ ವಿಡಿಯೋ ವೈರಲ್ ಆಗುತ್ತಿದೆ. ಕಾಂಗ್ರೆಸ್‍ಗೆ ಬಂದರೆ ಶಾಸಕರನ್ನಾಗಿ ಮಾಡುವುದಿಲ್ಲ. ಬೇಕಾದರೆ ಸಂಸದರನ್ನಾಗಿ ಮಾಡುತ್ತೇವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಚಂದ್ರಲೋಕದಲ್ಲಿ ಜೈ ಹಿಂದ್‌ – ಮೊದಲ ಬಾರಿಗೆ ತಾಪಮಾನ ಪರೀಕ್ಷೆ

    ಈ ಮಧ್ಯೆ ಬಿಜೆಪಿ ಶಾಸಕರ ಬಳಿಕ ಜೆಡಿಎಸ್ ಶಾಸಕರಿಗೂ ಡಿಸಿಎಂ ಡಿಕೆ ಶಿವಕುಮಾರ್‌ ಗಾಳ ಹಾಕಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಜೆಡಿಎಸ್‍ಗೂ ಕೂಡ ಆಪರೇಷನ್ ಹಸ್ತದ ಭಯ ಶುರುವಾದಂತೆ ಕಾಣುತ್ತಿದೆ.


    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಆಪರೇಷನ್ ಹಸ್ತ ತಡೆಯಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಎಂಟ್ರಿ?

    ಆಪರೇಷನ್ ಹಸ್ತ ತಡೆಯಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಎಂಟ್ರಿ?

    ಬೆಂಗಳೂರು: ಬಿಜೆಪಿ (BJP) ಶಾಸಕರನ್ನ ಆಪರೇಷನ್ ಹಸ್ತದ (Operation Hasta) ಮೂಲಕ ಸೆಳೆಯುವ ‘ಕೈ’ ಪ್ರಯತ್ನಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಎಂಟ್ರಿಯಾಗುವ ಸಾಧ್ಯತೆ ಇದೆ.

    ಕಾಂಗ್ರೆಸ್ (Congress) ಆಪರೇಷನ್ ಪ್ರಯತ್ನಕ್ಕೆ ಅಮಿತ್ ಶಾ ಅಡ್ಡಿಯಾಗುವ ಸಾಧ್ಯತೆ ಇದೆ. ಶಾಸಕ ಎಸ್.ಟಿ. ಸೋಮಶೇಖರ್ (S.T.Somashekar) ಆಪರೇಷನ್ ಕಮಲಕ್ಕೆ ಒಳಗಾಗಬಹುದು ಎಂಬ ಅನುಮಾನಗಳ ನಡುವೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಎಂಟ್ರಿ ಆಗುವ ಸಾಧ್ಯತೆ ಇದೆ. ಇದನ್ನೂ ಓದಿ: ಮೇಕೆನೂ ಇಲ್ಲ, ದಾಟು ಇಲ್ಲ: ಡಿಕೆಶಿ ವಿರುದ್ಧ ಅಶೋಕ್ ಲೇವಡಿ

    ಸೆಪ್ಟೆಂಬರ್ 2 ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ, ಶಾಸಕ ಎಸ್.ಟಿ. ಸೋಮಶೇಖರ್ ಭೇಟಿಗೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ಶಾಸಕ ಎಸ್.ಟಿ. ಸೋಮಶೇಖರ್ ಸೆಪ್ಟೆಂಬರ್ 2 ರಂದು ಅಮಿತ್ ಶಾ ಭೇಟಿಗೆ ಸಮಯ ನಿಗದಿಯಾಗಿದ್ದು, ದೆಹಲಿಯಲ್ಲಿ ಭೇಟಿಯಾಗಲಿದ್ದಾರೆ ಎನ್ನಲಾಗಿದೆ.

    ಇನ್ನೊಂದು ಕಡೆ ಎಸ್.ಟಿ. ಸೋಮಶೇಖರ್‌ಗೆ ಬಿ.ಎಲ್. ಸಂತೋಷ್ ದೆಹಲಿಗೆ ಬುಲಾವ್ ನೀಡಿದ್ದಾರೆ. ಮಾಜಿ‌ ಶಾಸಕ ನಿರ್ಮಲ್ ಕುಮಾರ್ ಸುರಾನ ಮೂಲಕ ದೆಹಲಿಗೆ ಕರೆತರಲು ಸೂಚನೆ‌ ನೀಡಿದ್ದಾರೆ ಎನ್ನಲಾಗಿದೆ. ನಿರ್ಮಲ್ ಕುಮಾರ್ ಸುರಾನ ಹಾಗೂ ಎಸ್.ಟಿ.ಸೋಮಶೇಖರ್, ಬಿ.ಎಲ್.ಸಂತೋಷ್ ಭೇಟಿಗೆ ದೆಹಲಿಗೆ ತೆರಳಲಿದ್ದಾರೆ. ಆಗಸ್ಟ್ 25 ರಂದು ಭೇಟಿ ‌ಮಾಡಿ‌ ಮಾತುಕತೆ ನಡೆಸಲಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ಡಿಕೆ ಶಿವಕುಮಾರ್ ಲೂಟಿ ಹೊಡೆಯೋದು ಬಿಟ್ಟರೆ ತಮ್ಮನಾಗಿ ಸ್ವೀಕಾರ ಮಾಡ್ತೀನಿ: ಕುಮಾರಸ್ವಾಮಿ ಷರತ್ತು

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ನಾವು ಆಪರೇಷನ್ ಹಸ್ತ ಮಾಡ್ತಿಲ್ಲ‌: ದಿನೇಶ್ ಗುಂಡೂರಾವ್

    ನಾವು ಆಪರೇಷನ್ ಹಸ್ತ ಮಾಡ್ತಿಲ್ಲ‌: ದಿನೇಶ್ ಗುಂಡೂರಾವ್

    ಬೆಂಗಳೂರು: ನಾವೇನು ಒತ್ತಡದ ಮೇಲೆ ಯಾರನ್ನೂ ಸೆಳೆಯುತ್ತಿಲ್ಲ. ಆಪರೇಷನ್ ಹಸ್ತ (Operation Hasta) ಮಾಡುತ್ತಿಲ್ಲ. ಆದರೂ ಕೆಲವರು ನಮ್ಮ ಪಕ್ಷಕ್ಕೆ ಬರಲು ಆಸಕ್ತಿ ಹೊಂದಿದ್ದಾರೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ಹೇಳಿದ್ದಾರೆ.

    ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಐದು ವರ್ಷ ಸ್ಥಿರ ಸರ್ಕಾರ ನೀಡಲಿದೆ ಎಂಬ ನಂಬಿಕೆ ಹೊಂದಿದ್ದಾರೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಡೆ ಬರುತ್ತಿದ್ದಾರೆ. ಯಾರನ್ನು ಪಕ್ಷಕ್ಕೆ ತೆಗೆದುಕೊಳ್ಳಬೇಕೆಂಬುದನ್ನ ಸಿಎಂ, ಡಿಸಿಎಂ ಅಂತಿಮ ತೀರ್ಮಾನ ಮಾಡುತ್ತಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಅಕ್ರಮ ಆಸ್ತಿಗಳಿಕೆ ಪ್ರಕರಣ – ಜಮೀರ್ ಅಹ್ಮದ್ ವಿಚಾರಣೆ ಮುಂದೂಡಿಕೆ

    ರಾಜಕೀಯ, ವೈಯಕ್ತಿಕ ಕಾರಣಗಳಿಂದ ಕಾಂಗ್ರೆಸ್ ಕಡೆ ಬರುವ ಪರಿಸ್ಥಿತಿ ಇರಬಹುದು. ಬಹಳಷ್ಟು ಜನರಿಗೆ ನಮ್ಮ ಜೊತೆಗೆ ಸೇರಿಕೊಳ್ಳಬೇಕು ಎಂಬ ಮನಸ್ಸಿದೆ. ಶಾಸಕರೇ ಇರಬಹುದು ಅಥವಾ ಮುಖಂಡರು ಇರಬಹುದು. ಆದರೆ ಹೇಗಾಗುತ್ತೆ, ಏನಾಗುತ್ತೆ ಎಂಬ ಬಗ್ಗೆ ಈಗಲೇ ಹೇಳಲು ಸಾಧ್ಯವಿಲ್ಲ ಎಂದು ಮಾತನಾಡಿದ್ದಾರೆ.‌

    ಎರಡೂವರೆ ವರ್ಷದ ಬಳಿಕ ಹಿರಿಯರು ಸಚಿವ ಸ್ಥಾನ ಬಿಟ್ಟು ಕೊಡಬೇಕೆಂಬ ಸಚಿವ ಕೆ.ಹೆಚ್. ಮುನಿಯಪ್ಪ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಗುಂಡೂರಾವ್, ಸಚಿವ ಸಂಪುಟ ಪುನಾರಚನೆ ಎಂಬುದು ಸಿಎಂ ಅಧಿಕಾರ. ಪಕ್ಷದ ವರಿಷ್ಠರ ಜೊತೆ ಚರ್ಚಿಸಿ ಸಿಎಂ ನಿರ್ಧಾರ ಮಾಡುತ್ತಾರೆ. ಮುನಿಯಪ್ಪ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇದು ಅವರ ವೈಯಕ್ತಿಕ ಅಭಿಪ್ರಾಯ. ಬೇರೆಯವರಿಗೂ ಅವಕಾಶ ಸಿಗಲಿ ಎಂಬ ಕಾರಣಕ್ಕೆ ಹೇಳಿದ್ದಾರೆ ಅಷ್ಟೇ ಎಂದಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್‍ನಿಂದ್ಲೇ 50 ಜನ ಶಾಸಕರು ಬಿಜೆಪಿಗೆ ಬರ್ತಾರೆ: ಮಾಜಿ ಶಾಸಕ ಅಮೃತ ದೇಸಾಯಿ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಆಪರೇಷನ್ ಹಸ್ತ ಬೆನ್ನಲ್ಲೇ ಯಶವಂತಪುರ ಕ್ಷೇತ್ರಕ್ಕೆ ಬಂಪರ್

    ಆಪರೇಷನ್ ಹಸ್ತ ಬೆನ್ನಲ್ಲೇ ಯಶವಂತಪುರ ಕ್ಷೇತ್ರಕ್ಕೆ ಬಂಪರ್

    ಬೆಂಗಳೂರು: ಆಪರೇಷನ್ ಹಸ್ತ (Operation Hasta) ಬೆನ್ನಲ್ಲೇ ಯಶವಂತಪುರ ವಿಧಾನಸಭಾ ಕ್ಷೇತ್ರಕ್ಕೆ ಸರ್ಕಾರ ಬಂಪರ್ ಆಫರ್ ಕೊಟ್ಟಿದೆ. ಎಸ್.ಟಿ.ಸೋಮಶೇಖರ್ (S.T.Somshekar) ಶಾಸಕರಾಗಿರುವ ಯಶವಂತಪುರ ವಿಧಾನಸಭಾ ಕ್ಷೇತ್ರಕ್ಕೆ 7.63 ಕೋಟಿ ರೂ. ಅನುದಾನ ನೀಡಲಾಗಿದೆ.

    ಶಾಸಕ ಎಸ್.ಟಿ ಸೋಮಶೇಖರ್ ಕಾಂಗ್ರೆಸ್ ಸೇರ್ಪಡೆಯಾಗುತ್ತಾರೆಂಬ ಚರ್ಚೆ ಬೆನ್ನಲ್ಲೇ, ಬಿಬಿಎಂಪಿಯಿಂದ ಅನುದಾನ ಮಂಜೂರಿನ ಆದೇಶ ಬಂದಿದೆ. ಈ ಕ್ಷೇತ್ರಕ್ಕೆ ಕುಡಿಯುವ ನೀರಿಗೆ 7.63 ಕೋಟಿ ರೂ. ಅನುದಾನ ಕಲ್ಪಿಸಲಾಗಿದೆ. ಇದನ್ನೂ ಓದಿ: ಬೆಂಗಳೂರಿನ ಪೋಸ್ಟ್ ಮಾಸ್ಟರ್ ಕೆಲಸಕ್ಕೆ ಬಿಲ್ ಗೇಟ್ಸ್ ಫಿದಾ – ಡಿಜಿಟಲೀಕರಣಕ್ಕೆ ಮನಸೋತ ಪೋಸ್ಟ್ ವೈರಲ್

    ಕಾಂಗ್ರೆಸ್ ಪಕ್ಷಕ್ಕೆ ಬರುವುದಕ್ಕೆ ಬಿಬಿಎಂಪಿ ಮೂಲಕ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಗಿಫ್ಟ್ ನೀಡಿದರೇ ಎಂಬ ಚರ್ಚೆ ಶುರುವಾಗಿದೆ. ಹೇರೋಹಳ್ಳಿ ಹಾಗೂ ಕೆಂಗೇರಿ ಭಾಗಕ್ಕೆ ಕುಡಿಯುವ ನೀರಿಗಾಗಿ ಅನುದಾನ ನೀಡಲಾಗಿದೆ. 1.63 ಕೋಟಿ ರೂ. ನೀರು ಪೂರೈಸುವ ಟ್ಯಾಂಕರ್‌ಗಳಿಗೆ ಮೀಸಲಿಡಲಾಗಿದೆ. ಹೊಸದಾಗಿ ಬೋರ್ವೆಲ್ ಕೊರೆಸಲು 4 ಕೋಟಿ ರೂ. ಹಾಗೂ ನಿರ್ವಹಣೆ ಮಾಡಲು 2 ಕೋಟಿ ರೂ. ಅನುದಾನ ಮೀಸಲಿಡಲಾಗಿದೆ ಎಂದು ತಿಳಿದುಬಂದಿದೆ.

    ಆಪರೇಷನ್ ಹಸ್ತದ ಮೊದಲ ವಿಕೆಟ್‌ಗೆ ಅನುದಾನದ ನೆರವು ಸಿಕ್ಕಿದೆ. 7.63 ಕೋಟಿ ರೂ. ಅನುದಾನ ನೀಡಿ ಎಸ್.ಟಿ. ಸೋಮಶೇಖರ್ ಅವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಪ್ರಯತ್ನವನ್ನು ಡಿ.ಕೆ. ಶಿವಕುಮಾರ್ ಮಾಡಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ‘ಶಕ್ತಿ’ ವಿರೋಧಿಸಿ ಕರ್ನಾಟಕ ಬಂದ್ – ಖಾಸಗಿ ಸಾರಿಗೆ ಒಕ್ಕೂಟದ ಜೊತೆಗಿನ ಸಭೆ ವಿಫಲ

    ಆಪರೇಷನ್ ಹಸ್ತ ಎನ್ನುತ್ತಿದ್ದಂತೆ ಮೊದಲ ಹೆಸರು ಕೇಳಿ ಬಂದಿದ್ದೇ ಯಶವಂತಪುರ ಶಾಸಕ ಎಸ್.ಟಿ. ಸೋಮಶೇಖರ್ ಅವರದ್ದು. ನಿನ್ನೆಯಷ್ಟೆ ಸೋಮಶೇಖರ್ ಬೆಂಬಲಿತ ಮಾಜಿ ಕಾರ್ಪೊರೇಟರ್‌ಗಳು ಕಾಂಗ್ರೆಸ್ ಸೇರಿದ್ದಾರೆ. ಈಗ ಯಶವಂತಪುರ ಕ್ಷೇತ್ರಕ್ಕೆ 7.63 ಕೋಟಿ ಹಣ ಬಿಡುಗಡೆಯಾಗಿದೆ. ಅಧಿಕೃತವಾಗಿ ‘ಕೈ’ ಹಿಡಿಯುವ ಎಸ್.ಟಿ. ಸೋಮಶೇಖರ್ ನಡೆಗೆ ಶೀಘ್ರವಾಗಿ ಮುಹೂರ್ತ ನಿಗದಿಯಾಗುತ್ತಾ ಎಂಬ ಚರ್ಚೆ ರಾಜಕೀಯ ವಲಯದಲ್ಲಿ ನಡೆಯುತ್ತಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಆಪರೇಷನ್‌ ಹಸ್ತ ಭೀತಿ; ವಲಸಿಗರ ಜೊತೆ ಸಮಾಲೋಚನೆ ನಡೆಸಲು ಬಿಎಸ್‌ವೈಗೆ ತಾಕೀತು

    ಆಪರೇಷನ್‌ ಹಸ್ತ ಭೀತಿ; ವಲಸಿಗರ ಜೊತೆ ಸಮಾಲೋಚನೆ ನಡೆಸಲು ಬಿಎಸ್‌ವೈಗೆ ತಾಕೀತು

    – ಸರ್ಕಾರದ ವಿರುದ್ಧದ ಕಮಿಷನ್ ಆರೋಪಕ್ಕೆ ಹೋರಾಟ ತಂತ್ರ
    – ಲೋಕಸಭೆ ಚುನಾವಣೆಗೆ ರಿವರ್ಸ್ ಆಪರೇಷನ್ ಚರ್ಚೆ
    – ಎನ್‌ಇಪಿ ರದ್ದು ಮಾಡುವ ಸರ್ಕಾರದ ಕ್ರಮ ಖಂಡಿಸಿ ಹೋರಾಟಕ್ಕೆ ಪ್ಲ್ಯಾನ್

    ಬೆಂಗಳೂರು: ಲೋಕಸಭೆ ಚುನಾವಣೆ ತಯಾರಿ, ಆಪರೇಷನ್ ಹಸ್ತ, ಪಕ್ಷ ಸಂಘಟನೆ, ಸರ್ಕಾರದ ವಿರುದ್ಧ ಹೋರಾಟ ಸೇರಿದಂತೆ ಅನೇಕ ಪ್ರಮುಖ ವಿಚಾರಗಳ ಬಗ್ಗೆ ಬಿಜೆಪಿ (BJP) ಕೋರ್ ಕಮಿಟಿ ಸಭೆಯಲ್ಲಿ ಚರ್ಚಿಸಲಾಯಿತು.

    ನಗರದ ಬಿಜೆಪಿ ಕಚೇರಿಯಲ್ಲಿ ಹಿರಿಯ ನಾಯಕರು ಸಭೆ ನಡೆಸಿ ಚರ್ಚಿಸಿದರು. ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಆಪರೇಷನ್ ಹಸ್ತದ (Operation Hasta) ಬಗ್ಗೆ ಗಂಭೀರ ಚರ್ಚೆ ನಡೆಯಿತು. ಆಪರೇಷನ್ ಹಸ್ತಕ್ಕೆ ಬ್ರೇಕ್ ಹಾಕುವ ಬಗ್ಗೆ ನಾಯಕರು ಚರ್ಚಿಸಿದರು. ಇದನ್ನೂ ಓದಿ: ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿ ಹೈಕಮಾಂಡ್ ನಿರ್ಧಾರ ಮಾಡುತ್ತದೆ: ಪರಮೇಶ್ವರ್

    ಐದು ವರ್ಷ ಸರ್ಕಾರ ಇವರದ್ದೇ ಇರುತ್ತೆ. 135 ಸ್ಥಾನ ಗೆದ್ದಿದ್ರೂ ನಮ್ಮ ಶಾಸಕರ ಮೇಲೆ ಕಣ್ಣು ಹಾಕಿದ್ದಾರೆ ಎಂದು ಕೆಲ ನಾಯಕರು ಆಕ್ರೋಶ ಹೊರಹಾಕಿದರು. ವಲಸಿಗರಲ್ಲಿ ಯರ‍್ಯಾರು ಹೋಗಬಹುದು? ಅವರನ್ನು ಹೇಗೆ ತಡೆಯಬಹುದು ಎಂಬ ಬಗ್ಗೆ ಮಾತುಕತೆ ನಡೆಸಿದರು. ಈ ವೇಳೆ, ವಲಸಿಗರ ಜೊತೆ ಸಮಾಲೋಚನೆ ಮಾಡುವುದಾಗಿ ಸಭೆಗೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ತಿಳಿಸಿದರು. ನೀವೇ ಅವರ ಜೊತೆ ಮಾತನಾಡುವುದು ಸೂಕ್ತ ಎಂದು ಉಳಿದ ನಾಯಕರು ಯಡಿಯೂರಪ್ಪರಿಗೆ (B.S.Yediyurappa) ತಾಕೀತು ಮಾಡಿದರು.

    ರಾಜ್ಯ ಸರ್ಕಾರದ ಮೇಲೆ ಬಂದಿರುವ ಕಮಿಷನ್ ಆರೋಪ ವಿಚಾರದಲ್ಲಿ ಹೋರಾಟಕ್ಕೆ ತಂತ್ರ, ಗುತ್ತಿಗೆದಾರರು ಮಾಡಿರುವ ಆರೋಪಕ್ಕೆ ರಾಜ್ಯಾದ್ಯಂತ ಹೋರಾಟಕ್ಕೆ ರೂಪುರೇಷೆ, ಎನ್‌ಇಪಿ ರದ್ದು ಮಾಡುವ ರಾಜ್ಯ ಸರ್ಕಾರದ ಕ್ರಮ ಖಂಡಿಸಿ ಹೋರಾಟಕ್ಕೆ ಪ್ಲಾನ್, ರಾಷ್ಟ್ರೀಯ ಶಿಕ್ಷಣ ನೀತಿ ರದ್ದು ಮಾಡುವ ರಾಜ್ಯ ಸರ್ಕಾರದ ನಡೆಗೆ ವಿವಿಧ ಸ್ವರೂಪದ ಹೋರಾಟಕ್ಕೆ ರೂಪುರೇಷೆ, ಕಾಂಗ್ರೆಸ್‌ಗೆ ಮರಳುತ್ತಾರೆ ಎನ್ನಲಾದ ಎಸ್.ಟಿ. ಸೋಮಶೇಖರ್, ಶಿವರಾಮ್ ಹೆಬ್ಬಾರ್, ಬೈರತಿ ಬಸವರಾಜ್ ಮತ್ತಿತರರ ಉಳಿಸಿಕೊಳ್ಳುವ ಬಗ್ಗೆ ಚರ್ಚೆ ಬಿಬಿಎಂಪಿ ಚುನಾವಣೆ, ವಾರ್ಡ್ ಮರುವಿಂಗಡಣೆ ಅವೈಜ್ಞಾನಿಕ ಎಂದು ಕಾನೂನು ಹೋರಾಟದ ಚರ್ಚೆ, ಲೋಕಸಭೆ ಚುನಾವಣಾ ತಯಾರಿ, ಪಕ್ಷ ಸಂಘಟನೆ ಬಗ್ಗೆ ಚರ್ಚೆ, ಲೋಕಸಭೆ ಚುನಾವಣೆಗೆ ರಿವರ್ಸ್ ಆಪರೇಷನ್ ಮೊದಲಾದ ವಿಷಯಗಳ ಬಗ್ಗೆ ಸಮಿತಿ ಸಭೆಯಲ್ಲಿ ಚರ್ಚೆ ನಡೆಸಲಾಯಿತು. ಇದನ್ನೂ ಓದಿ: ತಮಿಳುನಾಡಿಗೆ ನೀರು ಬಿಟ್ಟ ವಿಚಾರಕ್ಕೆ ಬಿಜೆಪಿ ಕೆಂಡ – ಮಂಡ್ಯದ ಹೆದ್ದಾರಿಯಲ್ಲಿ ಹುರುಳಿ ಬಿತ್ತಿ ಪ್ರತಿಭಟನೆ

    ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಮಾಜಿ ಸಿಎಂ ಯಡಿಯೂರಪ್ಪ, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಡಿ.ವಿ. ಸದಾನಂದ ಗೌಡ, ಮಾಜಿ ಸಚಿವರಾದ ಗೋವಿಂದ ಕಾರಜೋಳ, ಆರ್. ಅಶೋಕ್, ಕೆ.ಎಸ್. ಈಶ್ವರಪ್ಪ, ಡಾ. ಸಿ.ಎನ್. ಅಶ್ವತ್ಥ ನಾರಾಯಣ, ಬಿ. ಶ್ರೀರಾಮುಲು, ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಜಿ.ವಿ. ರಾಜೇಶ್ ಸೇರಿ ಅನೇಕರು ಸಭೆಯಲ್ಲಿ ಪಾಲ್ಗೊಂಡಿದ್ದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]