Tag: ಆಪಲ್

  • ಬೆಂಗಳೂರಿನಲ್ಲಿ ರಿಟೇಲ್‌ ಸ್ಟೋರ್‌ ತೆರೆಯಲು ಮುಂದಾದ ಆಪಲ್‌

    ಬೆಂಗಳೂರಿನಲ್ಲಿ ರಿಟೇಲ್‌ ಸ್ಟೋರ್‌ ತೆರೆಯಲು ಮುಂದಾದ ಆಪಲ್‌

    ನವದೆಹಲಿ: ಭಾರತದಲ್ಲಿ ಆಪಲ್‌ ಉತ್ಪನ್ನಗಳು (Apple Products) ಜನಪ್ರಿಯತೆಯನ್ನು ಪಡೆದುಕೊಳ್ಳುತ್ತಿರುವ ಬೆನ್ನಲ್ಲೇ ಆಪಲ್‌ ಕಂಪನಿ ಬೆಂಗಳೂರಿನಲ್ಲಿ (Bengaluru) ರಿಟೇಲ್‌ ಸ್ಟೋರ್‌ (Retail Stores) ತೆರೆಯಲು ಮುಂದಾಗಿದೆ.

    ಬೆಂಗಳೂರು ಮತ್ತು ಪುಣೆಯಲ್ಲಿ ರಿಟೇಲ್‌ ಸ್ಟೋರ್‌ ತೆರೆಯಲಾಗುವುದು ಎಂದು ಆಪಲ್‌ ಘೋಷಿಸಿದೆ. ಏಪ್ರಿಲ್‌ 2023 ರಲ್ಲಿ ಆಪಲ್‌ ಕಂಪನಿ ಮುಂಬೈ ಮತ್ತು ದೆಹಲಿಯಲ್ಲಿ ರಿಟೇಲ್‌ ಸ್ಟೋರ್‌ ತೆರೆದಿತ್ತು. ಆಪಲ್‌ ಆಯ್ದ ದೇಶಗಳಲ್ಲಿ ಮಾತ್ರ ರಿಟೇಲ್‌ ಸ್ಟೋರ್‌ ತೆರೆಯುತ್ತದೆ. ಇದನ್ನೂ ಓದಿ: ಜರ್ಮನಿಯಲ್ಲಿ ಒನ್‌ಪ್ಲಸ್‌ ಫೋನ್‌ ಮಾರಾಟ ನಿಷೇಧ

    ವಿಶ್ವಾದ್ಯಂತ 272 ರಿಟೇಲ್‌ ಸ್ಟೋರ್‌ಗಳನ್ನು ಆಪಲ್‌ ತೆರೆದಿದೆ. ಅಮೆರಿಕ 272, ಚೀನಾ 45, ಯುನೈಟೆಡ್‌ ಕಿಂಗ್‌ಡಮ್‌ 39, ಕೆನಡಾ 28, ಆಸ್ಟ್ರೇಲಿಯಾ 22, ಫ್ರಾನ್ಸ್‌ನಲ್ಲಿ 20‌ ರಿಟೇಲ್ ಸ್ಟೋರ್‌ಗಳನ್ನು ಆಪಲ್‌ ತೆರೆದಿದೆ. ಆಪಲ್‌ ಐಫೋನ್‌ಗಳು (iPhone) ಈಗ ಭಾರತದಲ್ಲೇ ತಯಾರಾಗುತ್ತಿದೆ. ಅಷ್ಟೇ ಅಲ್ಲದೇ ವಿದೇಶಗಳಿಗೆ ರಫ್ತು ಸಹ ಮಾಡಲಾಗುತ್ತಿದೆ. ಇದನ್ನೂ ಓದಿ: Apple iPhone 16 Series ಭಾರತದಲ್ಲಿ ಎಷ್ಟು ದರ? ಬೇರೆ ದೇಶಗಳಲ್ಲಿ ಎಷ್ಟು?

    ಜಾಗತಿಕವಾಗಿ ಮಾರಾಟವಾಗುವ ಐಫೋನ್‌ಗಳ ಪೈಕಿ 70% ಐಫೋನ್‌ಗಳನ್ನು ತೈವಾನ್‌ನಲ್ಲಿರುವ ಫಾಕ್ಸ್‌ಕಾನ್‌ ಕಂಪನಿ ಉತ್ಪಾದಿಸುತ್ತದೆ. ಈ ಕಂಪನಿ ಭಾರತ ಅಲ್ಲದೇ ಚೀನಾ, ಇಂಡೋನೇಷ್ಯಾ ಸೇರಿದಂತೆ ಹಲವು ಕಡೆ ತನ್ನ ಘಟಕವನ್ನು ತೆರೆದಿದೆ. ಸದ್ಯ ಒಟ್ಟು ಐಫೋನ್‌ ಉತ್ಪಾದನೆಯಲ್ಲಿ 14% ಫೋನ್‌ಗಳು ಭಾರತದಲ್ಲಿ ತಯಾರಾಗುತ್ತಿದೆ. ಮುಂದಿನ 3-4 ವರ್ಷಗಳಲ್ಲಿ ವಿಶ್ವದಲ್ಲಿ ಮಾರಾಟವಾಗುವ ಐಫೋನ್‌ಗಳ ಪೈಕಿ 25% ಐಫೋನ್‌ಗಳನ್ನು ಭಾರತದಲ್ಲಿ ತಯಾರಿಸುವ ಗುರಿಯನ್ನು ಐಫೋನ್‌ ಹಾಕಿಕೊಂಡಿದೆ.

    ಭಾರತದ ಸ್ಮಾರ್ಟ್‌ಫೋನ್‌ ಮಾರುಕಟ್ಟೆಯಲ್ಲಿ ಕೆಲ ವರ್ಷಗಳ ಹಿಂದೆ ಐಫೋನ್‌ ಟಾಪ್‌ 10ನಲ್ಲಿ ಸಹ ಸ್ಥಾನ ಪಡೆಯುತ್ತಿರಲಿಲ್ಲ. ಆದರೆ ಈಗ ಅತಿ ಹೆಚ್ಚು ಮಾರಾಟ ಮಾಡಿದ ಕಂಪನಿಗಳ ಪಟ್ಟಿಯಲ್ಲಿ 6ನೇ ಸ್ಥಾನಕ್ಕೆ ಜಿಗಿದಿದೆ.

     

  • ನಾಳೆಯಿಂದ ಐಫೋನ್ 16 ಸೀರಿಸ್ ಬುಕಿಂಗ್ ಶುರು

    ನಾಳೆಯಿಂದ ಐಫೋನ್ 16 ಸೀರಿಸ್ ಬುಕಿಂಗ್ ಶುರು

    -ಸೆ.20ರಿಂದ ಮಾರಾಟ ಆರಂಭ

    ಆಪಲ್ ಕಂಪನಿ ಇತ್ತೀಚಿಗಷ್ಟೇ ಬಿಡುಗಡೆಗೊಳಿಸಿದ ಬಹು ನಿರೀಕ್ಷಿತ ಐಫೋನ್ 16 ಸರಣಿಯ (Iphone 16 Series) ಫೋನ್‌ಗಳ ಬುಕ್ಕಿಂಗ್ ಭಾರತದಲ್ಲಿ (India) ನಾಳೆಯಿಂದ (ಸೆ.13) ಶುರುವಾಗಲಿದೆ.

    ಬಹು ನಿರೀಕ್ಷಿತ ಐಫೋನ್ 16 ಸರಣಿಯ ಫೋನ್ ಇತ್ತೀಚಿಗಷ್ಟೇ ಬಿಡುಗಡೆಯಾಗಿತ್ತು. ಅಮೆರಿಕ ಕ್ಯಾಲಿಫೋರ್ನಿಯಾದಲ್ಲಿರುವ ಕೇಂದ್ರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ 4 ಹೊಸ ಐಫೋನ್‌ಗಳನ್ನು ವಿಶ್ವಕ್ಕೆ ಪರಿಚಯಿಸಿತ್ತು. ನಾಳೆಯಿಂದ ಬುಕ್ಕಿಂಗ್ ಶುರುವಾಗಲಿದ್ದು, ಸೆ.20 ರಿಂದ ಮಾರಾಟ ಆರಂಭವಾಗಲಿದೆ.ಇದನ್ನೂ ಓದಿ: Apple iPhone 16 Series Launched – ಭಾರತದಲ್ಲಿ ಎಷ್ಟು ದರ? ಬೇರೆ ದೇಶಗಳಲ್ಲಿ ಎಷ್ಟು?

    ಐಫೋನ್ 16 ಸರಣಿಯ ಬುಕ್ಕಿಂಗ್ ಹೇಗೆ?
    ಸೆ.15 ರಂದು ಆಪಲ್ ಸ್ಟೋರ್ (Apple Store), ಆಪಲ್ ಇಂಡಿಯಾ ವೆಬ್‌ಸೈಟ್ (Apple India Website) ಹಾಗೂ ಅಮೆಜಾನ್ (Amazon), ಫ್ಲಿಪ್‌ಕಾರ್ಟ್‌ನಂತಹ (Flipkart) ಇ-ಕಾಮರ್ಸ್ ಪ್ಲಾಟ್‌ಫಾರ್ಮ್ಗಳಿಂದ ಬುಕ್ ಮಾಡಬಹುದು ಅಥವಾ ಹತ್ತಿರದ ಸ್ಟೋರ್‌ಗಳಿಂದ ಪ್ರೀ ಬುಕ್ ಮಾಡಬಹುದು. ಹೊಸ ಐಫೋನ್‌ಗಳ ಮಾರಾಟವು ಸೆ.20 ರಂದು ಪ್ರಾರಂಭವಾಗುತ್ತದೆ.

    ಭಾರತದಲ್ಲಿ 128 ಜಿಬಿ ಫೋನಿಗೆ ದರ ಎಷ್ಟು?
    ಐಫೋನ್ 16 – 79,900 ರೂ.
    ಐಫೋನ್ 16 ಪ್ಲಸ್ – 89,900 ರೂ.
    ಐಫೋನ್ 16 ಪ್ರೋ – 1,19,900 ರೂ.
    ಐಫೋನ್ 16 ಪ್ರೋ ಮ್ಯಾಕ್ಸ್ -1,44,900 ರೂ. (256 ಜಿಬಿ ಸ್ಟೋರೇಜ್)

    ಭಾರತದಲ್ಲಿ ಐಫೋನ್ ಬೆಲೆ ಜಾಸ್ತಿ ಯಾಕೆ?
    ಭಾರತದಲ್ಲಿ ಐಫೋನ್ ಉತ್ಪಾದನೆಯಾದರೂ ಹಲವು ಬಿಡಿ ಭಾಗಗಳನ್ನು ಆಮದು ಮಾಡಿಕೊಳ್ಳುತ್ತಿದೆ. ಅಬಕಾರಿ ಸುಂಕ ಪಾವತಿ ಮಾಡಿದ ಬಳಿಕ ವಸ್ತುಗಳು ಭಾರತಕ್ಕೆ ಆಮದು ಆಗುತ್ತಿದೆ. ಆಮದು ಮಾಡಿಕೊಳ್ಳುವ ವಸ್ತುಗಳಿಗೆ ತೆರಿಗೆ ಹಾಕುವುದರಿಂದ ಅದನ್ನು ಭರಿಸಲು ಕಂಪನಿಗಳು ದರವನ್ನು ಏರಿಕೆ ಮಾಡಿವೆ. ಫೋನ್‌ಗಳ ಮೇಲೆ ಶೇ.18 ಜಿಎಸ್‌ಟಿ ಇದೆ. ಅಬಕಾರಿ ಸುಂಕವನ್ನು ಕಂಪನಿಗಳು ಹಾಕುವ ಪರಿಣಾಮ ಫೋನ್ ಬೆಲೆ ಶೇ.35 ರಷ್ಟು ಹೆಚ್ಚಿರುತ್ತದೆ.

    ಅಮೆರಿಕ ಮತ್ತು ಯುಎಇಗೆ ಹೋಲಿಸಿದರೆ ಭಾರತದಲ್ಲಿ ಐಫೋನ್ ಬಳಕೆ ಮಾಡುವವರ ಸಂಖ್ಯೆ ಬಹಳ ಕಡಿಮೆ. ಬೇಡಿಕೆ ಜಾಸ್ತಿ ಇದ್ದಾಗ ಫೋನ್‌ಗಳ ಬೆಲೆ ಕಡಿಮೆ ಇರುವುದು ಸಾಮಾನ್ಯ. ಭಾರತದಲ್ಲಿ ಬೇಡಿಕೆ ಕಡಿಮೆ ಇರುವುದರಿಂದ ಬೆಲೆ ಜಾಸ್ತಿ ಇದೆ.

    ಆಪಲ್ ಭಾರತದಲ್ಲಿ ವಿಶೇಷ ಮಾರುಕಟ್ಟೆ ತಂತ್ರವನ್ನು ಬಳಕೆ ಮಾಡುತ್ತಿದೆ. ಹೊಸ ಐಫೋನ್ ಬಿಡುಗಡೆ ಮಾಡುವ ಸಮಯದಲ್ಲಿ ಹಳೆಯ ಐಫೋನ್ ಬೆಲೆಗಳು ಭಾರೀ ಪ್ರಮಾಣದಲ್ಲಿ ಇಳಿಕೆ ಮಾಡುತ್ತದೆ. ಆದರೆ ಬೇರೆ ಕಂಪನಿಗಳ ಫೋನ್ ದರಗಳು ಇಳಿಕೆಯಾದರೂ ಅಷ್ಟೊಂದು ದರ ಇಳಿಕೆಯಾಗುವುದಿಲ್ಲ.ಇದನ್ನೂ ಓದಿ: iPhone Pro, Pro Max | ದುಬಾರಿ ಫೋನ್‌ಗಳು ಫಸ್ಟ್‌ ಟೈಂ ಭಾರತದಲ್ಲೇ ತಯಾರು – ಬೆಲೆ ಎಷ್ಟು ಕಡಿಮೆಯಾಗಬಹುದು?

    ಡಾಲರ್ ಬೆಲೆ ಏರಿಕೆಯಾದಂತೆ ಇಲ್ಲೂ ವಸ್ತುಗಳ ಬೆಲೆ ಏರಿಕೆಯಾಗುತ್ತದೆ. ಈ ಕಾರಣದಿಂದ ಭಾರತದಲ್ಲೂ ಐಫೋನ್ ದರ ಏರುತ್ತದೆ.

    ಯುಎಇಯಲ್ಲಿ ಆಮದು ಸುಂಕ ಮತ್ತು ತೆರಿಗೆ ಕಡಿಮೆ ಇರುವುದರಿಂದ ದುಬೈನಲ್ಲಿ ಐಫೋನ್ ದರ ಭಾರತಕ್ಕೆ ಹೋಲಿಸಿದರೆ ಬಹಳ ಕಡಿಮೆಯಿದೆ.

  • Apple iPhone 16 Series Launched – ಭಾರತದಲ್ಲಿ ಎಷ್ಟು ದರ? ಬೇರೆ ದೇಶಗಳಲ್ಲಿ ಎಷ್ಟು?

    Apple iPhone 16 Series Launched – ಭಾರತದಲ್ಲಿ ಎಷ್ಟು ದರ? ಬೇರೆ ದೇಶಗಳಲ್ಲಿ ಎಷ್ಟು?

    ನವದೆಹಲಿ: ಆಪಲ್‌ (Apple) ಕಂಪನಿ ಬಹು ನಿರೀಕ್ಷಿತ ಐಫೋನ್‌ 16 ಸೀರಿಸ್‌ (iPhone) ಫೋನ್‌ಗಳು ಬಿಡುಗಡೆಯಾಗಿದೆ. ಅಮೆರಿಕ ಕ್ಯಾಲಿಫೋರ್ನಿಯಾದಲ್ಲಿರುವ  ಕೇಂದ್ರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ 4 ಹೊಸ ಐಫೋನ್‌ಗಳನ್ನು ವಿಶ್ವಕ್ಕೆ ಪರಿಚಯಿಸಿದೆ..

    ಭಾರತದಲ್ಲಿ ಸೆ.13 ಸಂಜೆ 5:30ರಿಂದ ಐಫೋನ್‌ ಪ್ರಿ ಆರ್ಡರ್‌ ಆರಂಭವಾಗಲಿದ್ದು ಸೆ.20 ರಿಂದ ಮಾರಾಟ ಶುರುವಾಗಲಿದೆ.

    ಐಫೋನ್‌ 16 ಅಮೆರಿಕ ದರ
    ಐಫೋನ್‌ 16 ಅಮೆರಿಕ ದರ

    ಐಫೋನ್‌ 16 (iPhone 16) ಮತ್ತು ಐಫೋನ್‌ 16 ಪ್ಲಸ್‌ (iPhone 16 Plus) 128 GB, 256GB, 512GB ಆಂತರಿಕ ಮೆಮೊರಿಯಲ್ಲಿ ಬಿಡುಗಡೆಯಾಗಿದೆ. ಐಫೋನ್‌ 16 ಪ್ರೋ (iPhone 16 Pro) 128GB, 256GB, 512GB, 1TB ಆಂತರಿಕ ಮೆಮೊರಿಯಲ್ಲಿ ಬಿಡುಗಡೆಯಾಗಿದ್ದರೆ ಐಫೋನ್‌ 16 ಪ್ರೋ ಮ್ಯಾಕ್ಸ್‌ (iPhone Pro Max) 256GB, 512GB, 1TB ಆಂತರಿಕ ಮೆಮೊರಿಯಲ್ಲಿ ಬಿಡುಗಡೆಯಾಗಿದೆ. ಇದನ್ನೂ ಓದಿ: iPhone Pro, Pro Max | ದುಬಾರಿ ಫೋನ್‌ಗಳು ಫಸ್ಟ್‌ ಟೈಂ ಭಾರತದಲ್ಲೇ ತಯಾರು

    128 ಜಿಬಿ ಫೋನಿಗೆ ದರ ಎಷ್ಟು?
    ಭಾರತ
    ಐಫೋನ್‌ 16 – 79,900 ರೂ.
    ಐಫೋನ್‌ 16 ಪ್ಲಸ್‌ – 89,900 ರೂ.
    ಐಫೋನ್‌ 16 ಪ್ರೋ – 1,19,900 ರೂ.
    ಐಫೋನ್‌ 16 ಪ್ರೋ ಮ್ಯಾಕ್ಸ್‌ -1,44,900 ರೂ. (256 ಜಿಬಿ ಸ್ಟೋರೇಜ್‌)

     

    ಅಮೆರಿಕ
    ಐಫೋನ್‌ 16 – 799 ಡಾಲರ್‌(67,090 ರೂ.)
    ಐಫೋನ್‌ 16 ಪ್ಲಸ್‌ – 899 ಡಾಲರ್‌
    ಐಫೋನ್‌ 16 ಪ್ರೋ – 999 ಡಾಲರ್‌
    ಐಫೋನ್‌ 16 ಪ್ರೋ ಮ್ಯಾಕ್ಸ್‌ – 1,199 ಡಾಲರ್‌ (256 ಜಿಬಿ ಸ್ಟೋರೇಜ್‌)

    ಯುಎಇ
    ಐಫೋನ್‌ 16 – 3,399 ದಿರ್ಹಮ್(77,705 ರೂ)
    ಐಫೋನ್‌ 16 ಪ್ಲಸ್‌ – 3,799 ದಿರ್ಹಮ್‌
    ಐಫೋನ್‌ 16 ಪ್ರೋ – 4,299 ದಿರ್ಹಮ್‌
    ಐಫೋನ್‌ 16 ಪ್ರೋ ಮ್ಯಾಕ್ಸ್‌ – 5,099 ದಿರ್ಹಮ್‌ (256 ಜಿಬಿ ಸ್ಟೋರೇಜ್‌)

    ಚೀನಾ
    ಐಫೋನ್‌ 16 – 5,999 ಯುವಾನ್‌ (70,703 ರೂ.)
    ಐಫೋನ್‌ 16 ಪ್ಲಸ್‌ – 6,999 ಯುವಾನ್‌
    ಐಫೋನ್‌ 16 ಪ್ರೋ – 7,99 ಯುವಾನ್‌
    ಐಫೋನ್‌ 16 ಪ್ರೋ ಮ್ಯಾಕ್ಸ್‌ – 9,999 ಯುವಾನ್‌ (256 ಜಿಬಿ ಸ್ಟೋರೇಜ್‌)

     

    ಭಾರತದಲ್ಲಿ ಐಫೋನ್‌ ಬೆಲೆ ಜಾಸ್ತಿ ಯಾಕೆ?
    ಭಾರತದಲ್ಲಿ ಐಫೋನ್‌ ಉತ್ಪಾದನೆಯಾದರೂ ಹಲವು ಬಿಡಿ ಭಾಗಗಳನ್ನು ಆಮದು ಮಾಡಿಕೊಳ್ಳುತ್ತಿದೆ. ಅಬಕಾರಿ ಸುಂಕ ಪಾವತಿ ಮಾಡಿದ ಬಳಿಕ ವಸ್ತುಗಳು ಭಾರತಕ್ಕೆ ಆಮದು ಆಗುತ್ತಿದೆ. ಆಮದು ಮಾಡಿಕೊಳ್ಳುವ ವಸ್ತುಗಳಿಗೆ ತೆರಿಗೆ ಹಾಕುವುದರಿಂದ ಅದನ್ನು ಭರಿಸಲು ಕಂಪನಿಗಳು ದರವನ್ನು ಏರಿಕೆ ಮಾಡಿವೆ. ಫೋನ್‌ಗಳ ಮೇಲೆ ಶೇ.18 ಜಿಎಸ್‌ಟಿ ಇದೆ. ಅಬಕಾರಿ ಸುಂಕವನ್ನು ಕಂಪನಿಗಳು ಹಾಕುವ ಪರಿಣಾಮ ಫೋನ್‌ ಬೆಲೆ ಶೇ.35 ರಷ್ಟು ಹೆಚ್ಚಿರುತ್ತದೆ.

    ಅಮೆರಿಕ ಮತ್ತು ಯುಎಇಗೆ ಹೋಲಿಸಿದರೆ ಭಾರತದಲ್ಲಿ ಐಫೋನ್‌ ಬಳಕೆ ಮಾಡುವವರ ಸಂಖ್ಯೆ ಬಹಳ ಕಡಿಮೆ. ಬೇಡಿಕೆ ಜಾಸ್ತಿ ಇದ್ದಾಗ ಫೋನ್‌ಗಳ ಬೆಲೆ ಕಡಿಮೆ ಇರುವುದು ಸಾಮಾನ್ಯ. ಭಾರತದಲ್ಲಿ ಬೇಡಿಕೆ ಕಡಿಮೆ ಇರುವುದರಿಂದ ಬೆಲೆ ಜಾಸ್ತಿ ಇದೆ.

    ಆಪಲ್‌ ಭಾರತದಲ್ಲಿ ವಿಶೇಷ ಮಾರುಕಟ್ಟೆ ತಂತ್ರವನ್ನು ಬಳಕೆ ಮಾಡುತ್ತಿದೆ. ಹೊಸ ಐಫೋನ್‌ ಬಿಡುಗಡೆ ಮಾಡುವ ಸಮಯದಲ್ಲಿ ಹಳೆಯ ಐಫೋನ್‌ ಬೆಲೆಗಳು ಭಾರೀ ಪ್ರಮಾಣದಲ್ಲಿ ಇಳಿಕೆ ಮಾಡುತ್ತದೆ. ಆದರೆ ಬೇರೆ ಕಂಪನಿಗಳ ಫೋನ್‌ ದರಗಳು ಇಳಿಕೆಯಾದರೂ ಅಷ್ಟೊಂದು ದರ ಇಳಿಕೆಯಾಗುವುದಿಲ್ಲ.

    ಡಾಲರ್‌ ಬೆಲೆ ಏರಿಕೆಯಾದಂತೆ ಇಲ್ಲೂ ವಸ್ತುಗಳ ಬೆಲೆ ಏರಿಕೆಯಾಗುತ್ತದೆ. ಈ ಕಾರಣದಿಂದ ಭಾರತದಲ್ಲೂ ಐಫೋನ್‌ ದರ ಏರುತ್ತದೆ.

    ಯುಎಇಯಲ್ಲಿ ಆಮದು ಸುಂಕ ಮತ್ತು ತೆರಿಗೆ ಕಡಿಮೆ ಇರುವುದರಿಂದ ದುಬೈನಲ್ಲಿ ಐಫೋನ್‌ ದರ ಭಾರತಕ್ಕೆ ಹೋಲಿಸಿದರೆ ಬಹಳ ಕಡಿಮೆಯಿದೆ.

     

  • ಗೂಗಲ್‌, ಆಪಲ್‌ಗೆ ಜಿಯೋ ಠಕ್ಕರ್‌ – ಕ್ಲೌಡ್‌ ಸ್ಟೋರೇಜ್‌ನಲ್ಲೂ ದರ ಸಮರ ಆರಂಭ?

    ಗೂಗಲ್‌, ಆಪಲ್‌ಗೆ ಜಿಯೋ ಠಕ್ಕರ್‌ – ಕ್ಲೌಡ್‌ ಸ್ಟೋರೇಜ್‌ನಲ್ಲೂ ದರ ಸಮರ ಆರಂಭ?

    ಮುಂಬೈ: ಉಚಿತ ಡೇಟಾ (Free Data Pack) ನೀಡಿ ಭಾರತದಲ್ಲಿ ಡೇಟಾ ಕ್ರಾಂತಿ ಮಾಡಿದ್ದ ಜಿಯೋ ಈಗ ಕ್ಲೌಡ್‌ ಸ್ಟೋರೇಜ್‌ನಲ್ಲೂ (Cloud Storage) ಕ್ರಾಂತಿ ಮಾಡುತ್ತಾ ಎಂಬ ಪ್ರಶ್ನೆ ಎದ್ದಿದೆ.

    ರಿಲಯನ್ಸ್‌ ಇಂಡಸ್ಟ್ರೀಸ್‌ 47ನೇ ವಾರ್ಷಿಕ ಸಭೆಯಲ್ಲಿ ಮುಖ್ಯಸ್ಥ ಮುಖೇಶ್‌ ಅಂಬಾನಿ ಜಿಯೋ ಬಳಕೆದಾರರಿಗೆ ಉಚಿತವಾಗಿ 100 ಜಿಬಿ ಕ್ಲೌಡ್‌ ಸ್ಟೋರೇಜ್‌ ನೀಡುವುದಾಗಿ ಘೋಷಣೆ ಮಾಡಿದ್ದಾರೆ.

    ಜಿಯೋ ಎಐ ಕ್ಲೌಡ್‌ ವೆಲಕಂ ಆಫರ್‌ ಈ ವರ್ಷದ ದೀಪಾವಳಿಗೆ ಬಿಡುಗಡೆ ಮಾಡುತ್ತೇವೆ. ಜಿಯೋ ಬಳಕೆದಾರರು 100 ಜಿಬಿವರೆಗೆ ಡೇಟಾವನ್ನು ಸ್ಟೋರ್‌ ಮಾಡಬಹುದು. ಎಲ್ಲಾ ಫೋಟೋ, ವಿಡಿಯೋ, ಡಾಕ್ಯುಮೆಂಟ್‌, ಡಿಜಿಟಲ್‌ ಕಂಟೆಟ್‌ಗಳನ್ನು ಸುರಕ್ಷಿತವಾಗಿ ಸ್ಟೋರ್‌ ಮಾಡಬಹುದು ಎಂದು ಮುಖೇಶ್‌ ಅಂಬಾನಿ ಹೇಳಿದ್ದಾರೆ. ಇದನ್ನೂ ಓದಿ: ಪ್ರಿಯಕರನೊಂದಿಗೆ ಪತ್ನಿಯ ಖಾಸಗಿ ಕ್ಷಣ ವೀಡಿಯೋ ಮಾಡಿ ಹಂಚಿಕೊಂಡ ಪತಿ!

    ಕ್ಲೌಡ್‌ನಲ್ಲಿ ದರ ಸಮರ:
    ಸದ್ಯ ಗೂಗಲ್‌ ಒನ್‌ನಲ್ಲಿ (Google One) ಉಚಿತವಾಗಿ 15 ಜಿಬಿ ಡೇಟಾವನ್ನು ಸ್ಟೋರ್‌ ಮಾಡಬಹುದು. ಇನ್ನು ಹೆಚ್ಚಿನ ಡೇಟಾವನ್ನು ಸಂಗ್ರಹ ಮಾಡಬೇಕಾದರೆ ಹೆಚ್ಚಿನ ಹಣವನ್ನು ಪಾವತಿಸಬೇಕು. 100 ಜಿಬಿ ಡೇಟಾಗೆ ತಿಂಗಳಿಗೆ 130 ರೂ. ಇದ್ದರೆ 200 ಜಿಬಿ ಡೇಟಾಗೆ ತಿಂಗಳಿಗೆ 210 ರೂ. ದರ ನಿಗದಿಯಾಗಿದೆ.

    ಆಪಲ್‌ ಐಕ್ಲೌಡ್‌ನಲ್ಲಿ (Apple iCloud) 50 ಜಿಬಿ ಡೇಟಾಗೆ ತಿಂಗಳಿಗೆ 75 ರೂ. ಇದ್ದರೆ 200 ಜಿಬಿ ಡೇಡಾಗೆ 219 ರೂ. ದರ ನಿಗದಿ ಮಾಡಿದೆ. ತನ್ನ ಎಲ್ಲಾ ಬಳಕೆದಾರಿಗೆ ಜಿಯೋ 100 ಜಿಬಿ ವರೆಗೆ ಉಚಿತವಾಗಿ ಫ್ರೀ ಸ್ಟೋರೇಜ್‌ ನೀಡಿದ್ದರಿಂದ ಮುಂದಿನ ದಿನಗಳಲ್ಲಿ ಕ್ಲೌಡ್‌ನಲ್ಲೂ ದರ ಸಮರ ಆರಂಭವಾಗುವ ಸಾಧ್ಯತೆಯಿದೆ. ಇದನ್ನೂ ಓದಿ: ಬಿಜೆಪಿಗೆ ಕೋವಿಡ್‌ ಉರುಳು | ಔಷಧ, ವೈದ್ಯಕೀಯ ಉಪಕರಣ ಹಗರಣ – ಇಂದು ಸಿಎಂಗೆ ವರದಿ ಸಲ್ಲಿಕೆ

    ಜಿಯೋ ಸೇವೆ ಆರಂಭವಾಗುವ ಮೊದಲು ಭಾರತದಲ್ಲಿ 1 ಜಿಬಿ ಮೊಬೈಲ್‌ ಇಂಟರ್‌ನೆಟ್‌ ಡೇಟಾಗೆ 250 ರೂ. ದರ ನಿಗದಿಯಾಗಿತ್ತು. ಆದರೆ ಜಿಯೋ ಉಚಿತವಾಗಿ ಡೇಟಾ ನೀಡಿದ್ದರಿಂದ ಡೇಟಾ ಸಮರ ಆರಂಭವಾಗಿತ್ತು. ಪರಿಣಾಮ ಎಲ್ಲಾ ಟೆಲಿಕಾಂ ಕಂಪನಿಗಳು ಡೇಟಾ ದರವನ್ನು ಇಳಿಕೆ ಮಾಡಿದ್ದವು. ಪರಿಣಾಮ ವಿಶ್ವದಲ್ಲೇ ಭಾರತದಲ್ಲಿ ಕಡಿಮೆ ದರದಲ್ಲಿ (1 ಜಿಬಿಗೆ 14 ರೂ.) ಇಂಟರ್‌ನೆಟ್‌ ಸೇವೆ ಲಭ್ಯವಿದೆ.

     

  • iPhone Pro, Pro Max | ದುಬಾರಿ ಫೋನ್‌ಗಳು ಫಸ್ಟ್‌ ಟೈಂ ಭಾರತದಲ್ಲೇ ತಯಾರು – ಬೆಲೆ ಎಷ್ಟು ಕಡಿಮೆಯಾಗಬಹುದು?

    iPhone Pro, Pro Max | ದುಬಾರಿ ಫೋನ್‌ಗಳು ಫಸ್ಟ್‌ ಟೈಂ ಭಾರತದಲ್ಲೇ ತಯಾರು – ಬೆಲೆ ಎಷ್ಟು ಕಡಿಮೆಯಾಗಬಹುದು?

    ನವದೆಹಲಿ: ಆಪಲ್‌ (Apple) ಕಂಪನಿ ಇದೇ ಮೊದಲ ಬಾರಿಗೆ ಬಿಡುಗಡೆಯಾಗಲಿರುವ ಐಫೋನ್‌ ಪ್ರೊ (iPhone Pro) ಮತ್ತು ಪ್ರೊ ಮ್ಯಾಕ್ಸ್‌ (Pro Max) ಫೋನ್‌ಗಳನ್ನು ಭಾರತದಲ್ಲಿ ತಯಾರಿಸುತ್ತಿದೆ.

    ಹೌದು. ಮುಂದಿನ ಸೆಪ್ಟೆಂಬರ್‌ನಲ್ಲಿ ಐಫೋನ್‌ 16 ಫೋನ್‌ಗಳನ್ನು ಆಪಲ್‌ ಬಿಡುಗಡೆ ಮಾಡಲಿದೆ. ಸಾಧಾರಣವಾಗಿ ಬಿಡುಗಡೆಯಾಗಲಿರುವ ತನ್ನ ಫೋನ್‌ಗಳನ್ನು ಹೆಚ್ಚಾಗಿ ಚೀನಾದ ಫ್ಯಾಕ್ಟರಿಗಳಲ್ಲಿ ತಯಾರಿಸುತ್ತಿತ್ತು. ಆದರೆ ಈ ಬಾರಿ ಭಾರತದ ಫಾಕ್ಸ್‌ಕಾನ್‌ ಘಟಕದಲ್ಲಿ ಐಫೋನ್‌ಗಳ ಪೈಕಿ ದುಬಾರಿ ಬೆಲೆ ಇರುವ ಪ್ರೊ ಮಾಡೆಲ್‌ ತಯಾರಿಸುತ್ತಿರುವುದು ವಿಶೇಷ.

    ತಮಿಳುನಾಡಿನಲ್ಲಿರುವ ಫಾಕ್ಸ್‌ಕಾನ್‌ ಘಟಕದಲ್ಲಿ ಐಫೋನ್‌ ಭಾಗಗಳ ಜೋಡಣೆ ಈ ವಾರದಿಂದ ಆರಂಭವಾಗಿದೆ ಎಂದು ಮಾಧ್ಯಮವೊಂದು ವರದಿ ಮಾಡಿದೆ. ಐಫೋನ್ 16 ಪ್ರೊ, ಐಫೋನ್ 16 ಪ್ರೊ ಮ್ಯಾಕ್ಸ್ ಉತ್ಪಾದನೆಗಾಗಿ ಕಾರ್ಮಿಕರಿಗೆ ತರಬೇತಿ ನೀಡಲು ಪ್ರಾರಂಭಿಸಿದೆ. ಭಾರತದಲ್ಲಿ ಫೋನ್‌ ತಯಾರಾಗುವ ಕಾರಣ ಐಫೋನ್‌ಗಳಿಗೆ ಆಮದು ಸುಂಕ ಇರುವುದಿಲ್ಲ. ವಿದೇಶಗಳಿಂದ ಕಚ್ಚಾ ವಸ್ತುಗಳನ್ನು ಆಮದು ಮಾಡಿದ್ದರೂ 10% ಬೆಲೆ ಕಡಿಮೆ ಇರಬಹುದು ಎಂದು ಅಂದಾಜಿಸಲಾಗಿದೆ.  ಇದನ್ನೂ ಓದಿ: ಟೋಕಿಯೋ – ಬೆಂಗಳೂರು ಮಾರ್ಗದ ವಿಮಾನ ಹಾರಾಟ ಹೆಚ್ಚಿಸಿದ BLR

    ಆಪಲ್‌ 2021ರಲ್ಲಿ ಐಫೋನ್‌ ಎಸ್‌ಇ ಮೂಲಕ ಭಾರತದಲ್ಲಿ ಐಫೋನ್‌ ಉತ್ಪಾದನೆ ಆರಂಭಿಸಿತ್ತು. ಕಳೆದ ವರ್ಷ ಐಫೋನ್ 15, ಐಫೋನ್ 15 ಪ್ಲಸ್ ತಯಾರಿಸಿತ್ತು. ಈಗ ಪ್ರೊ ಮಾಡೆಲ್‌ಗಳ ಉತ್ಪಾದನೆಯೊಂದಿಗೆ, ಆಪಲ್ ತನ್ನ ಜಾಗತಿಕ ಉತ್ಪಾದನೆಯಲ್ಲಿ ಭಾರತೀಯ ಉತ್ಪನ್ನಗಳ ಪಾಲನ್ನು ಮತ್ತಷ್ಟು ಹೆಚ್ಚಿಸುವ ಗುರಿಯನ್ನು ಹೊಂದಿದೆ.

    ಜಾಗತಿಕವಾಗಿ ಮಾರಾಟವಾಗುವ ಐಫೋನ್‌ಗಳ ಪೈಕಿ 70% ಐಫೋನ್‌ಗಳನ್ನು ತೈವಾನ್‌ನಲ್ಲಿರುವ ಫಾಕ್ಸ್‌ಕಾನ್‌ ಕಂಪನಿ ಉತ್ಪಾದಿಸುತ್ತದೆ. ಈ ಕಂಪನಿ ಭಾರತ ಅಲ್ಲದೇ ಚೀನಾ,ಇಂಡೋನೇಷ್ಯಾ ಸೇರಿದಂತೆ ಹಲವು ಕಡೆ ತನ್ನ ಘಟಕವನ್ನು ತೆರಿದಿದೆ. ಮುಂದಿನ 3-4 ವರ್ಷಗಳಲ್ಲಿ ವಿಶ್ವದಲ್ಲಿ ಮಾರಾಟವಾಗುವ ಐಫೋನ್‌ಗಳ ಪೈಕಿ 25% ಐಫೋನ್‌ಗಳನ್ನು ಭಾರತದಲ್ಲಿ ತಯಾರಿಸುವ ಗುರಿಯನ್ನು ಐಫೋನ್‌ ಹಾಕಿಕೊಂಡಿದೆ.

    ಮುಂದಿನ ದಿನಗಳಲ್ಲಿ ಟಾಟಾ ಗ್ರೂಪ್ ಐಫೋನ್‌ಗಳನ್ನು ತಯಾರಿಸಲಿದೆ. ಬಹುಪಾಲು ಭಾರತ-ನಿರ್ಮಿತ ಪ್ರೊ ಮತ್ತು ಪ್ರೊ ಮ್ಯಾಕ್ಸ್ ಸಾಧನಗಳನ್ನು ಆಪ್‌ಲ್‌ ಯುರೋಪ್, ಮಧ್ಯಪ್ರಾಚ್ಯ ಮತ್ತು ಅಮೆರಿಕಗೆ ರಫ್ತು ಮಾಡುವ ಸಾಧ್ಯತೆಯಿದೆ.

    ಭಾರತದಲ್ಲಿ ಯಾಕೆ?
    10 ವರ್ಷಗಳ ಹಿಂದೆ ಐಫೋನ್‌ ಬಿಡುಗಡೆಯಾದ 5-6 ತಿಂಗಳ ನಂತರ ಭಾರತದ ಮಾರುಕಟ್ಟೆಗೆ ಐಫೋನ್‌ಗಳನ್ನು ಆಪಲ್‌ ಬಿಡುಗಡೆ ಮಾಡುತ್ತಿತ್ತು. ಆದರೆ ಈಗ ಭಾರತದಲ್ಲಿ ಐಫೋನ್‌ ಕೊಳ್ಳುವವರ ಸಂಖ್ಯೆ ಹೆಚ್ಚಾಗಿದೆ. ಆಪಲ್‌ ಉತ್ಪನ್ನಗಳ ಬೇಡಿಕೆಯೂ ಜಾಸ್ತಿಯಾಗುತ್ತಿದೆ. ಭಾರತದಲ್ಲಿ ಉತ್ಪಾದನೆ ಮಾಡುತ್ತಿರುವ ಕಾರಣ ಬೆಲೆ ಸಹ ಕಡಿಮೆಯಿದೆ. ಹೀಗಾಗಿ ಕೆಲ ವರ್ಷಗಳಿಂದ ಜಾಗತಿಕವಾಗಿ ಬಿಡುಗಡೆಯಾಗುವ ಸಮಯದಲ್ಲೇ ಭಾರತದಲ್ಲೂ ಐಫೋನ್‌ ಬಿಡುಗಡೆಯಾಗುತ್ತಿದೆ.

  • ಐಫೋನ್ ತಯಾರಕ ಫಾಕ್ಸ್‌ಕಾನ್ ಕಂಪನಿ ಮುಖ್ಯಸ್ಥನ ಜೊತೆ ಸಿಎಂ, ಡಿಸಿಎಂ ಡಿನ್ನರ್

    ಐಫೋನ್ ತಯಾರಕ ಫಾಕ್ಸ್‌ಕಾನ್ ಕಂಪನಿ ಮುಖ್ಯಸ್ಥನ ಜೊತೆ ಸಿಎಂ, ಡಿಸಿಎಂ ಡಿನ್ನರ್

    ಬೆಂಗಳೂರು: ತೈವಾನ್ ಮೂಲದ ಆಪಲ್ ಫೋನ್ (Apple Phone) ತಯಾರಿಸುವ ಫಾಕ್ಸ್‌ಕಾನ್ (Foxconn) ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಅಧ್ಯಕ್ಷ ಯಂಗ್ ಲಿಯು (Young Liu) ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಚರ್ಚೆ ನಡೆಸಿದರು.

    ಖಾಸಗಿ ಹೋಟೆಲ್‌ನಲ್ಲಿ ಆಯೋಜಿಸಿದ್ದ ಭೋಜನ ಕೂಟದ ವೇಳೆ ಫಾಕ್ಸ್‌ಕಾನ್ ಕಂಪನಿಗೆ ರಾಜ್ಯದಲ್ಲಿ ಕಾರ್ಯನಿರ್ವಹಿಸಲು ಅಗತ್ಯವಾದ ಎಲ್ಲಾ ರೀತಿಯ ಸಹಕಾರ, ನೆರವು ಒದಗಿಸಲಾಗುವುದು ಎಂದು ಸಿಎಂ ಭರವಸೆ ನೀಡಿದ್ದಾರೆ. ಸಾಂಸ್ಕೃತಿಕವಾಗಿ ಉನ್ನತ ಮೌಲ್ಯಗಳನ್ನು ಆಚರಿಸುತ್ತಿರುವ ರಾಜ್ಯದಲ್ಲಿ ಕೈಗಾರಿಕೆಗಳಿಗೆ ಅತ್ಯಗತ್ಯವಾದ ಕಾನೂನು ಮತ್ತು ಸುವ್ಯವಸ್ಥೆಯೂ ಉತ್ತಮವಾಗಿದೆ ಎಂದರು. ಇದನ್ನೂ ಓದಿ: ರಾಜ್ಯದ 2 ಮೆಟ್ರೋ ಕಾರಿಡಾರ್‌ಗಳಿಗೆ ಕೇಂದ್ರ ಅನುಮೋದನೆ: ಪ್ರಹ್ಲಾದ್ ಜೋಶಿ

    ಡಿಸಿಎಂ ಡಿ.ಕೆ.ಶಿವಕುಮಾರ್, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ, ಬೃಹತ್ ಹಾಗೂ ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್, ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್, ಸರ್ಕಾರದ ಅಪರ ಮುಖ್ಯಕಾರ್ಯದರ್ಶಿ ಎಲ್.ಕೆ.ಅತೀಕ್, ಮಾಹಿತಿ ತಂತ್ರಜ್ಞಾನ ಇಲಾಖೆಯ ಕಾರ್ಯದರ್ಶಿ ಏಕ್ ರೂಪ್ ಕೌರ್ ಸೇರಿದಂತೆ ಕೈಗಾರಿಕೆ ಮತ್ತು ಐಟಿ ಬಿಟಿ ಇಲಾಖೆಯ ಹಿರಿಯ ಅಧಿಕಾರಿಗಳು ಭೋಜನ ಕೂಟದಲ್ಲಿ ಭಾಗವಹಿಸಿದ್ದರು. ಇದನ್ನೂ ಓದಿ: TB Dam| ಮೊದಲ ಎಲಿಮೆಂಟ್ ಅಳವಡಿಸುವ ಕಾರ್ಯ ಯಶಸ್ವಿ

    ಫಾಕ್ಸ್ಕಾನ್ ಕಂಪನಿಗೆ ದೇವನಹಳ್ಳಿ ತಾಲೂಕು, ಕುಂದಾಣ ಹೋಬಳಿಗೆ ಸೇರಿದ ದೊಡ್ಡಗೊಲ್ಲಹಳ್ಳಿ ಮತ್ತು ಚಪ್ಪರದಹಳ್ಳಿ ಗ್ರಾಮಗಳ ವ್ಯಾಪ್ತಿಯಲ್ಲಿ ಕೈಗಾರಿಕೆ ಸ್ಥಾಪನೆಗಾಗಿ 300 ಎಕರೆ ಜಾಗ ಮಂಜೂರಾಗಿದ್ದು, ರಾಜ್ಯದಲ್ಲಿ ದೊಡ್ಡ ಮಟ್ಟದ ಹೂಡಿಕೆಗೆ ಮುಂದಾಗಿದೆ ಎನ್ನಲಾಗಿದೆ. ಇದನ್ನೂ ಓದಿ: ಜವಾಹರಲಾಲ್ ನೆಹರು ತಾರಾಲಯ ಆಧುನಿಕರಣಕ್ಕೆ ಅಗತ್ಯ ಪ್ರಸ್ತಾವನೆ ಸಲ್ಲಿಸಿ: ಬೋಸರಾಜು ಸೂಚನೆ

  • ಆಪಲ್‌ ಐಫೋನ್‌ಗೆ ಭರ್ಜರಿ 16,584 ಕೋಟಿ ರೂ. ದಂಡ

    ಆಪಲ್‌ ಐಫೋನ್‌ಗೆ ಭರ್ಜರಿ 16,584 ಕೋಟಿ ರೂ. ದಂಡ

    ಲಂಡನ್‌: ಐಫೋನ್‌ (iPhone) ಉತ್ಪಾದಿಸುವ ಅಮೆರಿಕದ ಆಪಲ್‌ (Apple) ಕಂಪನಿಗೆ ಯೂರೋಪಿಯನ್‌ ಯೂನಿಯನ್‌ನ (European Union) ಆಂಟಿಟ್ರಸ್ಟ್ ನಿಯಂತ್ರಕ ಭರ್ಜರಿ 1.84 ಬಿಲಿಯನ್‌ ಯುರೋ (ಅಂದಾಜು 16,584 ಕೋಟಿ ರೂ.) ದಂಡವನ್ನು ವಿಧಿಸಿದೆ.

    ಸ್ಪರ್ಧಾತ್ಮಕ ನಿಯಮ ಉಲ್ಲಂಘಿಸಿ ಆ್ಯಪಲ್‌ ತನ್ನ ಉತ್ಪನ್ನಗಳಲ್ಲಿ ಸಂಗೀತ ಸೇವೆ ನೀಡುವ ಹಲವು ಕಂಪನಿಗಳ ಆಪ್‌ಗಳ ಸೇವೆ ನಿರ್ಬಂಧ ಹೇರಿ ತಾನು ಸೂಚಿಸಿದ ಉತ್ಪನ್ನಗಳನ್ನು ಮಾತ್ರ ಗ್ರಾಹಕರು ಬಳಸುವಂತೆ ಮಾಡಿದೆ. ಅನಾರೋಗ್ಯಕರ ಸ್ಪರ್ಧೆಗೆ ಉದಾಹರಣೆ ಎಂದು ಅಭಿಪ್ರಾಯಪಟ್ಟ ಒಕ್ಕೂಟ ಭಾರೀ ಪ್ರಮಾಣದ ದಂಡ ವಿಧಿಸಿದೆ. ಇದನ್ನೂ ಓದಿ: ಶೀಘ್ರವೇ ಭಾರತದಲ್ಲಿ ಪಿಕ್ಸೆಲ್ ಫೋನ್‌ ತಯಾರಿಸಲಿದೆ ಗೂಗಲ್‌

    ಐದು ವರ್ಷದ ಹಿಂದೆ ಡಿಜಿಟಲ್‌ ಮ್ಯೂಸಿಕ್‌ (Digital Music) ಸೇವೆ ನೀಡುವ ಸ್ಪಾಟಿಫೈ (Spotify) ನೀಡಿದ ದೂರಿನ ಬಗ್ಗೆ ಸುದೀರ್ಘ ವಿಚಾರಣೆ ನಡೆಸಿದ ಒಕ್ಕೂಟ ಈಗ ಅಂತಿಮ ನಿರ್ಧಾರ ಪ್ರಕಟಿಸಿದೆ.

    ಒಂದು ದಶಕದವರೆಗೆ, ಆಪ್ ಸ್ಟೋರ್ ಮೂಲಕ ಸಂಗೀತ ಸ್ಟ್ರೀಮಿಂಗ್ ಅಪ್ಲಿಕೇಶನ್‌ಗಳ ವಿತರಣೆಗಾಗಿ ಆಪಲ್ ಮಾರುಕಟ್ಟೆಯಲ್ಲಿ ತನ್ನ ಪ್ರಬಲ ಸ್ಥಾನವನ್ನು ದುರುಪಯೋಗಪಡಿಸಿಕೊಂಡಿದೆ. ಯುರೋಪಿಯನ್‌ ಯೂನಿಯನ್‌ ಆಂಟಿಟ್ರಸ್ಟ್ ನಿಯಮಗಳ ಅಡಿಯಲ್ಲಿ ಈ ರೀತಿ ನಿರ್ಬಂಧ ಹೇರುವುದು ಕಾನೂನುಬಾಹಿರ ಎಂದು ಒಕ್ಕೂಟ ಹೇಳಿದೆ. ಇದನ್ನೂ ಓದಿ: ಎರಡನೇ ಐಫೋನ್‌ ಘಟಕ ತೆರೆಯಲು ಮಾತುಕತೆ ಆರಂಭಿಸಿದ ಟಾಟಾ

    ಯಾವುದೇ ಕಂಪನಿಗೆ ಗ್ರಾಹಕರನ್ನು ನಿಯಂತ್ರಿಸಲು ಸಾಧ್ಯವಿಲ್ಲ. ಗ್ರಾಹಕನಿಗೆ ಏನು ಬೇಕೋ ಅದನ್ನು ಪಡೆಯಲು ಸ್ವಾತಂತ್ರ್ಯ ನೀಡಬೇಕು. ಬೇರೆ ಸೇವೆ ಬಳಸಲು ಅವಕಾಶ ನೀಡದೇ ತಾನು ನೀಡಿದ್ದನ್ನೇ ಬಳಸಬೇಕು ಎಂಬ ನೀತಿಯನ್ನು ಅಳವಡಿಸಿದವರಿಗೆ ಈ ತೀರ್ಪು ಪ್ರಬಲ ಸಂದೇಶವನ್ನು ಕಳುಹಿಸಿದೆ ಎಂದು ಸ್ಪಾಟಿಫೈ ತೀರ್ಪನ್ನು ಸ್ವಾಗತಿಸಿ  ಅಭಿಪ್ರಾಯ ವ್ಯಕ್ತಪಡಿಸಿದೆ.

     

  • ಪ್ರತಿಪಕ್ಷ ನಾಯಕರನ್ನು ಪ್ರಾಂಕ್‌ ಮಾಡಿರಬಹುದು – ಪಿಯೂಷ್ ಗೋಯಲ್ ವ್ಯಂಗ್ಯ

    ಪ್ರತಿಪಕ್ಷ ನಾಯಕರನ್ನು ಪ್ರಾಂಕ್‌ ಮಾಡಿರಬಹುದು – ಪಿಯೂಷ್ ಗೋಯಲ್ ವ್ಯಂಗ್ಯ

    ನವದೆಹಲಿ: ಕೇಂದ್ರ ಸರ್ಕಾರಕ್ಕೆ (Union Government) ಫೋನ್‌ ಕದ್ದಾಲಿಕೆ ಮಾಡುವ ಅವಶ್ಯಕತೆಯಿಲ್ಲ. ಬಹುಶಃ ವಿರೋಧ ಪಕ್ಷಗಳ ನಾಯಕರನ್ನು ಯಾರಾದರೂ ಪ್ರಾಂಕ್‌ ಮಾಡಿರಬಹುದು ಎಂದು ಕೇಂದ್ರ ಸಚಿವ ಪಿಯೂಷ್ ಗೋಯಲ್ (Piyush Goyal) ಅವರು ವ್ಯಂಗ್ಯವಾಡಿದ್ದಾರೆ.

    ಈ ಕುರಿತು ಮಾತನಾಡಿರುವ ಅವರು, ಕೆಲ ಪ್ರತಿಪಕ್ಷ ನಾಯಕರಿಗೆ ಆಪಲ್‌ನಿಂದ (Apple) ಸರ್ಕಾರಿ ಪ್ರಾಯೋಜಕತ್ವದ ದಾಳಿ ನಡೆಯುತ್ತಿದೆ ಎಂಬ ಆರೋಪವನ್ನ ತಳ್ಳಿಹಾಕಿದ್ದಾರೆ. ಬಹುಶಃ ವಿರೋಧ ಪಕ್ಷಗಳ ನಾಯಕರನ್ನು ಯಾರಾದರೂ ಪ್ರಾಂಕ್‌ ಮಾಡಿರಬಹುದು, ಅವರು ಅಧಿಕೃತವಾಗಿ ದೂರು ನೀಡಿದ್ರೆ ಸರ್ಕಾರ ಸೂಕ್ತ ಕ್ರಮ ತೆಗೆದುಕೊಳ್ಳುತ್ತದೆ ಎಂದು ಹೇಳಿದ್ದಾರೆ.

    ಹ್ಯಾಕರ್ಸ್‌ ಸಕ್ರೀಯವಾಗಿದ್ದಾರೆ: ಪ್ರತಿಪಕ್ಷಗಳು ದುರ್ಬಲ ಸ್ಥಿತಿಯನ್ನು ಎದುರಿಸುತ್ತಿವೆ, ಎಲ್ಲದರಲ್ಲೂ ಪಿತೂರಿಯನ್ನ ಹುಡುಕುತ್ತಿದ್ದಾರೆ. ಆಪಲ್‌ ಕಂಪನಿ ಸ್ವತಃ ಸ್ಪಷ್ಟಪಡಿಸಿದೆ. ಸುಮಾರು 150 ದೇಶಗಳ ವ್ಯಕ್ತಿಗಳಿಗೆ ನೋಟಿಫಿಕೇಶನ್‌ ಹೋಗಿದೆ. ಉಗಾಂಡದ ರಾಜಕೀಯ ನಾಯಕರ ಐಫೋನಿಗೆ ಈ ರೀತಿಯ ಎಚ್ಚರಿಕೆ ಸಂದೇಶ ಬಂದಿದೆ. ಈ ದಾಳಿಯನ್ನ ಪತ್ತೆಹಚ್ಚಲು ಸಾಧ್ಯವಿಲ್ಲ ಎಂದು ಹೇಳಿದೆ. ವಿಶ್ವದಾದ್ಯಂತ ಹ್ಯಾಕರ್‌ಗಳು ಸಕ್ರಿಯರಾಗಿದ್ದಾರೆ, ಈ ಬಗ್ಗೆ ಸೂಕ್ತ ತನಿಖೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

    ಪ್ರತಿಪಕ್ಷಗಳ ನಾಯಕರು ತಮ್ಮ ಆಂತರಿಕ ಕಚ್ಚಾಟದಲ್ಲಿ ತೊಡಗಿಸಿಕೊಂಡಿದ್ದಾರೆ. ಅವರ ಪರಿಸ್ಥಿತಿ ಹೇಗಿದೆ ಎಂಬುದು ದೇಶದ ಜನರಿಗೆ ತಿಳಿದಿದೆ. ಮೊದಲು ಅವರು ತಮ್ಮ ದೌರ್ಬಲ್ಯಗಳ ಬಗ್ಗೆ ತಿಳಿದುಕೊಳ್ಳಬೇಕು. ಇದರಲ್ಲಿ ಸರ್ಕಾರದ ಪಾತ್ರ ಏನೂ ಇಲ್ಲ. ಫೋನ್‌ಗಳನ್ನು ಕದ್ದಾಲಿಕೆ ಮಾಡುವ ಅವಶ್ಯಕತೆಯೂ ಸರ್ಕಾರಕ್ಕಿಲ್ಲ ಎಂದು ತಿರುಗೇಟು ನೀಡಿದ್ದಾರೆ.

    ಏನಿದು ಆರೋಪ?
    ತಮ್ಮ ಫೋನ್‌ಗಳ ಮೇಲೆ ಸರ್ಕಾರಿ ಪ್ರಾಯೋಜಕತ್ವದ ದಾಳಿ ನಡೆಯುತ್ತಿದೆ, ಕೇಂದ್ರದಿಂದ ಫೋನ್‌ ಕದ್ದಾಲಿಕೆ ನಡೆಯುತ್ತಿದೆ ಎಂದು ಪ್ರತಿಪಕ್ಷಗಳ ವಿವಿಧ ನಾಯಕರು ಕೇಂದ್ರ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದ್ದರು. ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ, ಕಾಂಗ್ರೆಸ್ ನಾಯಕ ಶಶಿ ತರೂರ್, ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಹಾಗೂ ಶಿವಸೇನಾದ (ಉದ್ಧವ್ ಬಣ) ಪ್ರಿಯಾಂಕಾ ಚತುರ್ವೇದಿ ಅವರು ತಮ್ಮ ಐ-ಫೋನ್‌ಗಳ ಮೇಲೆ ಸರ್ಕಾರಿ ಪ್ರಾಯೋಜಿತ ದಾಳಿಕೋರರು ಟಾರ್ಗೆಟ್ ಮಾಡುತ್ತಿರಬಹುದು ಎಂದು ಆಪಲ್ ಕಂಪೆನಿಯಿಂದ ಫೋನ್ ಹಾಗೂ ಇ-ಮೇಲ್‌ಗಳಿಗೆ ಎಚ್ಚರಿಕೆ ಸಂದೇಶ ಬಂದಿರುವುದಾಗಿ ಹೇಳಿದ್ದಾರೆ.

    ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರ ಕಚೇರಿಯಲ್ಲಿನ ಕೆಲವರಿಗೂ ಈ ಸಂದೇಶ ಬಂದಿದೆ ಎನ್ನಲಾಗಿದೆ. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಸರ್ಕಾರ, ಈ ಸಂದೇಶಗಳ ಬಗ್ಗೆ ಅರಿವಿದೆ. ಐಫೋನ್‌ಗಳಲ್ಲಿ ಬೆದರಿಕೆ ಪತ್ತೆ ಮಾಡುವ ತಂತ್ರಜ್ಞಾನವು ಕೆಲವೊಮ್ಮೆ ಅಸಮಗ್ರ ಹಾಗೂ ಅಪೂರ್ಣವಾಗಿರುತ್ತದೆ ಎಂದು ಹೇಳಿದೆ.

    ಆಪಲ್‌ನಿಂದ ಬಂದ ಸಂದೇಶದಲ್ಲಿ ಏನಿತ್ತು?
    ನೀವು ಸರ್ಕಾರಿ ಪ್ರಾಯೋಜಿತ ದಾಳಿಕೋರರಿಂದ ಗುರಿಯಾಗುತ್ತಿದ್ದೀರಿ. ಅವರು ನಿಮ್ಮ ಆಪಲ್ ಐಡಿಗೆ ಸಂಬಂಧಿಸಿದ ಐಫೋನ್‌ಗೆ ದೂರದಿಂದ ಕದ್ದಾಲಿಕೆ ಮಾಡಲು ಪ್ರಯತ್ನಿಸುತ್ತಿದ್ದಾರೆ ಎಂದು ಆಪಲ್‌ನ ಸಂದೇಶ ಹೇಳಿದೆ.

    ಈ ದಾಳಿಕೋರರು ನೀವು ಯಾರು ಅಥವಾ ನೀವು ಏನು ಮಾಡುತ್ತೀರಿ ಎಂಬ ಆಧಾರದಲ್ಲಿ ನಿಮ್ಮನ್ನು ವ್ಯಕ್ತಿಗತವಾಗಿ ಟಾರ್ಗೆಟ್ ಮಾಡುತ್ತಿರುವ ಸಾಧ್ಯತೆ ಇದೆ. ಇದರಿಂದ ನಿಮ್ಮ ಸೂಕ್ಷ್ಮ ಡೇಟಾ, ಸಂಹವನಗಳು ಅಥವಾ ಕ್ಯಾಮೆರಾ ಮತ್ತು ಮೈಕ್ರೋಫೋನ್‌ಗಳನ್ನು ಕದಿಯಲು ಅವರಿಗೆ ಸಾಧ್ಯವಾಗಲಿದೆ. ಇದು ಸುಳ್ಳು ಎಚ್ಚರಿಕೆಯಾಗುವ ಸಾಧ್ಯತೆ ಇದ್ದರೂ, ಈ ಎಚ್ಚರಿಕೆಯನ್ನು ಗಂಭೀರವಾಗಿ ಪರಿಗಣಿಸಿ ಎಂದು ಸಂದೇಶದಲ್ಲಿದೆ.

    ಆಪಲ್‌ ಪ್ರತಿಕ್ರಿಯೆ ಏನು ಹೇಳಿಕೆಯಲ್ಲಿ ಏನಿದೆ?
    ರಾಜ್ಯ ಪ್ರಾಯೋಜಿತ ದಾಳಿ ಕಾಲಾನಂತರದಲ್ಲಿ ವಿಕಸನಗೊಳ್ಳುತ್ತದೆ. ಈ ದಾಳಿಗಳನ್ನು ಪತ್ತೆಹಚ್ಚುವುದು ಕಷ್ಟ. ಅಪೂರ್ಣವಾಗಿರುವ ಬೆದರಿಕೆ ಗುಪ್ತಚರ ಸಂಕೇತಗಳ ಮೇಲೆ ಅವಲಂಬಿತವಾಗಿದೆ. ಆಪಲ್‌ನ ಕೆಲವೊಂದು ಬೆದರಿಕೆ ಸೂಚನೆಗಳು ತಪ್ಪು ಅಲಾರಂಗಳಾಗಿರಬಹುದು. ಈ ದಾಳಿಗಳು ಪತ್ತೆಯಾಗದಿರುವ ಸಾಧ್ಯತೆಯಿದೆ. ಈ ದಾಳಿಗಳನ್ನು ಪತ್ತೆಹಚ್ಚಲು ಸಾಧ್ಯವಿಲ್ಲ. ನಾವು ಬೆದರಿಕೆ ಅಧಿಸೂಚನೆಗಳನ್ನು ನೀಡಲು ಕಾರಣವೇನು ಎಂಬುದರ ಕುರಿತು ಮಾಹಿತಿಯನ್ನು ಒದಗಿಸಲು ನಮಗೆ ಸಾಧ್ಯವಾಗುತ್ತಿಲ್ಲ ಎಂದು ಹೇಳಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಆಪಲ್‌ನಿಂದ 150 ದೇಶಗಳ ಜನರಿಗೆ ಎಚ್ಚರಿಕೆ ಸಂದೇಶ – ಕದ್ದಾಲಿಕೆ ಆರೋಪಕ್ಕೆ ಕೇಂದ್ರ ಸ್ಪಷ್ಟನೆ

    ಆಪಲ್‌ನಿಂದ 150 ದೇಶಗಳ ಜನರಿಗೆ ಎಚ್ಚರಿಕೆ ಸಂದೇಶ – ಕದ್ದಾಲಿಕೆ ಆರೋಪಕ್ಕೆ ಕೇಂದ್ರ ಸ್ಪಷ್ಟನೆ

    ನವದೆಹಲಿ : ವಿರೋಧ ಪಕ್ಷಗಳ ನಾಯಕರ ಐಫೋನ್‌ಗೆ ಹ್ಯಾಕಿಂಗ್ (iPhone Hack) ಸಂದೇಶ ಬಂದಿರುವ ತಾಂತ್ರಿಕ ಸ್ವರೂಪವನ್ನು ಗಮನದಲ್ಲಿಟ್ಟುಕೊಂಡು ಕೆಲವು ಏಜೆನ್ಸಿಗಳು ಮತ್ತು ಕಾನೂನು ಜಾರಿ ಸಂಸ್ಥೆಗಳಿಗೆ ಈ ಬಗ್ಗೆ ತನಿಖೆ ನಡೆಸಲು ಆದೇಶಿಸಲಾಗಿದೆ ಎಂದು ಕೇಂದ್ರ ಮಾಹಿತಿ ಮತ್ತು ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ (Ashwini Vaishnav) ಹೇಳಿದ್ದಾರೆ.

    ವಿಪಕ್ಷಗಳ ಆರೋಪದ ಬೆನ್ನಲ್ಲೇ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕೆಲವು ಸಂಸದರು ಆಪಲ್‌ನಿಂದ ಎಚ್ಚರಿಕೆ ಸಂದೇಶ ಪಡೆದಿದ್ದಾರೆ ಎಂದು ಆರೋಪಿಸಿದ್ದಾರೆ. ಈ ವಿಷಯದ ಬಗ್ಗೆ ಸರ್ಕಾರಕ್ಕೆ ಕಾಳಜಿ ಇದೆ. ಆ್ಯಪಲ್‌ (Apple) ಭಾರತದಲ್ಲಿ ಮಾತ್ರ ಇಂತಹ ಸಂದೇಶ ಕಳುಹಿಸಿಲ್ಲ ಬದಲಿಗೆ ಸುಮಾರು 150 ದೇಶಗಳ ಜನರಿಗೆ ಎಚ್ಚರಿಕೆ ಸೂಚನೆಗಳನ್ನು ಕಳುಹಿಸಿದೆ. ಈ ನಡುವೆ ಐಫೋನ್ ಹ್ಯಾಕ್ ಮಾಡಲು ಯಾರಿಂದಲೂ ಸಾಧ್ಯವಿಲ್ಲ ಎಂದು ಆ್ಯಪಲ್ ಸ್ಪಷ್ಟೀಕರಣವನ್ನು ನೀಡಿದೆ ಎಂದರು.  ಇದನ್ನೂ ಓದಿ: ಕೇಂದ್ರದಿಂದ ಐಫೋನ್‌ ಕದ್ದಾಲಿಕೆಗೆ ಯತ್ನ – ಎಚ್ಚರಿಕೆ ಸಂದೇಶ ಬಂದಿದ್ದಾಗಿ ಪ್ರತಿಪಕ್ಷ ನಾಯಕರ ಆರೋಪ

     

    ಸರ್ಕಾರದ ವಿರುದ್ಧ ಆರೋಪ ಮಾಡಿದ ಸಂಸದರ ವಿರುದ್ಧ ವಾಗ್ದಾಳಿ ನಡೆಸಿದ ವೈಷ್ಣವ್, ದೇಶದ ಪ್ರಗತಿಯನ್ನು ನೋಡಲು ಬಯಸದ ಜನರು ಇಂತಹ ರಾಜಕೀಯದಲ್ಲಿ ತೊಡಗಿದ್ದಾರೆ. ಸರ್ಕಾರದ ವಿರುದ್ಧ ಮಾತನಾಡುವ ಕೆಲವರು ಅವರ ಕುಟುಂಬ ಅಧಿಕಾರದಲ್ಲಿದ್ದಾಗ ಅವರು ತಮ್ಮ ಬಗ್ಗೆ ಮಾತ್ರ ಯೋಚಿಸುತ್ತಿದ್ದರು ಆದರೆ ನಮ್ಮ ಸರ್ಕಾರವು ಈ ವಿಷಯದ ಬಗ್ಗೆ ಕಾಳಜಿ ವಹಿಸುತ್ತದೆ ಎಂದು ತಿರುಗೇಟು ನೀಡಿದರು.  ಇದನ್ನೂ ಓದಿ: ಕೇಂದ್ರದಿಂದ ಸಂಸದರ ಐಫೋನ್‌ ಕದ್ದಾಲಿಕೆ – ಆಪಲ್‌ ಕಂಪನಿಯಿಂದ ಹೇಳಿಕೆ ಬಿಡುಗಡೆ

    ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ, ಕಾಂಗ್ರೆಸ್ ನಾಯಕ ಶಶಿ ತರೂರ್, ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಹಾಗೂ ಶಿವಸೇನಾದ (ಉದ್ಧವ್ ಬಣ) ಪ್ರಿಯಾಂಕಾ ಚತುರ್ವೇದಿ ಅವರು ತಮ್ಮ ಐ-ಫೋನ್‌ಗಳ ಮೇಲೆ ಸರ್ಕಾರಿ ಪ್ರಾಯೋಜಿತ ದಾಳಿಕೋರರು ಟಾರ್ಗೆಟ್ ಮಾಡುತ್ತಿರಬಹುದು ಎಂದು ಆಪಲ್ ಕಂಪೆನಿಯಿಂದ ಫೋನ್ ಹಾಗೂ ಇ-ಮೇಲ್‌ಗಳಿಗೆ ಎಚ್ಚರಿಕೆ ಸಂದೇಶ ಬಂದಿರುವುದಾಗಿ ಹೇಳಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕೇಂದ್ರದಿಂದ ಸಂಸದರ ಐಫೋನ್‌ ಕದ್ದಾಲಿಕೆ – ಆಪಲ್‌ ಕಂಪನಿಯಿಂದ ಹೇಳಿಕೆ ಬಿಡುಗಡೆ

    ಕೇಂದ್ರದಿಂದ ಸಂಸದರ ಐಫೋನ್‌ ಕದ್ದಾಲಿಕೆ – ಆಪಲ್‌ ಕಂಪನಿಯಿಂದ ಹೇಳಿಕೆ ಬಿಡುಗಡೆ

    ನವದೆಹಲಿ: ಕೇಂದ್ರ ಸರ್ಕಾರ ಸಂಸದರ ಐಫೋನ್‌ಗಳಳನ್ನು (iPhone) ಹ್ಯಾಕ್‌ ಮಾಡಿ ಕದ್ದಾಲಿಕೆ ಮಾಡುತ್ತಿದೆ ಎಂಬ ವಿಪಕ್ಷಗಳ ಆರೋಪದ ಬೆನ್ನಲ್ಲೇ ಆಪಲ್‌ (Apple) ಕಂಪನಿ ಹೇಳಿಕೆಯನ್ನು ಬಿಡುಗಡೆ ಮಾಡಿದೆ.

    ಆಪಲ್‌ ಹೇಳಿಕೆಯಲ್ಲಿ ಏನಿದೆ?
    ರಾಜ್ಯ ಪ್ರಾಯೋಜಿತ ದಾಳಿ ಕಾಲಾನಂತರದಲ್ಲಿ ವಿಕಸನಗೊಳ್ಳುತ್ತದೆ. ಈ ದಾಳಿಗಳನ್ನು ಪತ್ತೆಹಚ್ಚುವುದು ಕಷ್ಟ. ಅಪೂರ್ಣವಾಗಿರುವ ಬೆದರಿಕೆ ಗುಪ್ತಚರ ಸಂಕೇತಗಳ ಮೇಲೆ ಅವಲಂಬಿತವಾಗಿದೆ. ಆಪಲ್‌ನ ಕೆಲವೊಂದು ಬೆದರಿಕೆ ಸೂಚನೆಗಳು ತಪ್ಪು ಅಲಾರಂಗಳಾಗಿರಬಹುದು. ಈ ದಾಳಿಗಳು ಪತ್ತೆಯಾಗದಿರುವ ಸಾಧ್ಯತೆಯಿದೆ. ಈ ದಾಳಿಗಳನ್ನು ಪತ್ತೆಹಚ್ಚಲು ಸಾಧ್ಯವಿಲ್ಲ. ನಾವು ಬೆದರಿಕೆ ಅಧಿಸೂಚನೆಗಳನ್ನು ನೀಡಲು ಕಾರಣವೇನು ಎಂಬುದರ ಕುರಿತು ಮಾಹಿತಿಯನ್ನು ಒದಗಿಸಲು ನಮಗೆ ಸಾಧ್ಯವಾಗುತ್ತಿಲ್ಲ ಎಂದು ಹೇಳಿದೆ.

    ಮಾಧ್ಯಮಗಳಲ್ಲಿ ಬಂದಿರುವ ಮಾಹಿತಿ ಪ್ರಕಾರ ಸುಮಾರು 150 ದೇಶಗಳ ವ್ಯಕ್ತಿಗಳಿಗೆ ನೋಟಿಫಿಕೇಶನ್‌ ಹೋಗಿದೆ. ಉಗಾಂಡದ ರಾಜಕೀಯ ನಾಯಕರ ಐಫೋನಿಗೆ ಈ ರೀತಿಯ ಎಚ್ಚರಿಕೆ ಸಂದೇಶ ಬಂದಿದೆ.  ಇದನ್ನೂ ಓದಿ: ಕೇಂದ್ರದಿಂದ ಐಫೋನ್‌ ಕದ್ದಾಲಿಕೆಗೆ ಯತ್ನ – ಎಚ್ಚರಿಕೆ ಸಂದೇಶ ಬಂದಿದ್ದಾಗಿ ಪ್ರತಿಪಕ್ಷ ನಾಯಕರ ಆರೋಪ

    ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ, ಕಾಂಗ್ರೆಸ್ ನಾಯಕ ಶಶಿ ತರೂರ್, ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಹಾಗೂ ಶಿವಸೇನಾದ (ಉದ್ಧವ್ ಬಣ) ಪ್ರಿಯಾಂಕಾ ಚತುರ್ವೇದಿ ಅವರು ತಮ್ಮ ಐ-ಫೋನ್‌ಗಳ ಮೇಲೆ ಸರ್ಕಾರಿ ಪ್ರಾಯೋಜಿತ ದಾಳಿಕೋರರು ಟಾರ್ಗೆಟ್ ಮಾಡುತ್ತಿರಬಹುದು ಎಂದು ಆಪಲ್ ಕಂಪೆನಿಯಿಂದ ಫೋನ್ ಹಾಗೂ ಇ-ಮೇಲ್‌ಗಳಿಗೆ ಎಚ್ಚರಿಕೆ ಸಂದೇಶ ಬಂದಿರುವುದಾಗಿ ಹೇಳಿದ್ದಾರೆ.

    ಆಪಲ್‌ನಿಂದ ಬಂದ ಸಂದೇಶದಲ್ಲಿ ಏನಿದೆ?
    ನೀವು ಸರ್ಕಾರಿ ಪ್ರಾಯೋಜಿತ ದಾಳಿಕೋರರಿಂದ ಗುರಿಯಾಗುತ್ತಿದ್ದೀರಿ. ಅವರು ನಿಮ್ಮ ಆಪಲ್ ಐಡಿಗೆ ಸಂಬಂಧಿಸಿದ ಐಫೋನ್‌ಗೆ ದೂರದಿಂದ ಕದ್ದಾಲಿಕೆ ಮಾಡಲು ಪ್ರಯತ್ನಿಸುತ್ತಿದ್ದಾರೆ ಎಂದು ಆಪಲ್‌ನ ಸಂದೇಶ ಹೇಳಿದೆ.

    ಈ ದಾಳಿಕೋರರು ನೀವು ಯಾರು ಅಥವಾ ನೀವು ಏನು ಮಾಡುತ್ತೀರಿ ಎಂಬ ಆಧಾರದಲ್ಲಿ ನಿಮ್ಮನ್ನು ವ್ಯಕ್ತಿಗತವಾಗಿ ಟಾರ್ಗೆಟ್ ಮಾಡುತ್ತಿರುವ ಸಾಧ್ಯತೆ ಇದೆ. ಇದರಿಂದ ನಿಮ್ಮ ಸೂಕ್ಷ್ಮ ಡೇಟಾ, ಸಂಹವನಗಳು ಅಥವಾ ಕ್ಯಾಮೆರಾ ಮತ್ತು ಮೈಕ್ರೋಫೋನ್‌ಗಳನ್ನು ಕದಿಯಲು ಅವರಿಗೆ ಸಾಧ್ಯವಾಗಲಿದೆ. ಇದು ಸುಳ್ಳು ಎಚ್ಚರಿಕೆಯಾಗುವ ಸಾಧ್ಯತೆ ಇದ್ದರೂ, ಈ ಎಚ್ಚರಿಕೆಯನ್ನು ಗಂಭೀರವಾಗಿ ಪರಿಗಣಿಸಿ ಎಂದು ಸಂದೇಶದಲ್ಲಿದೆ.

     

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]