Tag: ಆಪ್ ಶಾಸಕ

  • ಅತ್ಯಾಚಾರ ಆರೋಪದಲ್ಲಿ ಬಂಧನ; ಪೊಲೀಸರ ಮೇಲೆ ಗುಂಡು ಹಾರಿಸಿ ಆಪ್ ಶಾಸಕ ಪರಾರಿ

    ಅತ್ಯಾಚಾರ ಆರೋಪದಲ್ಲಿ ಬಂಧನ; ಪೊಲೀಸರ ಮೇಲೆ ಗುಂಡು ಹಾರಿಸಿ ಆಪ್ ಶಾಸಕ ಪರಾರಿ

    ಚಂಡೀಗಢ: ಅತ್ಯಾಚಾರ ಮತ್ತು ವಂಚನೆ ಆರೋಪದ ಮೇಲೆ ಪಂಜಾಬ್‌ನ ಆಪ್ ಶಾಸಕನನ್ನು ಬಂಧಿಸಿ ಕರೆದೊಯ್ಯುವಾಗ ಹರಿಯಾಣದ (Haryana) ಕರ್ನಾಲ್ ಬಳಿ ಪೊಲೀಸರ ಮೇಲೆ ಗುಂಡು ಹಾರಿಸಿ ಪರಾರಿಯಾಗಿದ್ದಾರೆ.

    ಅತ್ಯಾಚಾರ ಆರೋಪದ ಮೇಲೆ ಪಂಜಾಬ್ ಶಾಸಕ ಹರ್ಮೀತ್ ಸಿಂಗ್ ಧಿಲ್ಲೋನ್ ಪಠಾಣಮಜ್ರರನ್ನು (Harmeet Singh Pathanmajra) ಪೊಲೀಸರು ಬಂಧಿಸಿದ್ದರು. ಸ್ಥಳೀಯ ಠಾಣೆಗೆ ಅವರನ್ನು ಕರೆದೊಯ್ಯುತ್ತಿದ್ದಾಗ ಕಾರಿನಲ್ಲಿ ಬಂದ ಅವರ ಬೆಂಬಲಿಗರು ಪೊಲೀಸರ ಮೇಲೆಯೇ ಗುಂಡು ಹಾರಿಸಿದ್ದರು. ಈ ವೇಳೆ ಓರ್ವ ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ. ಬಳಿಕ ಹರ್ಮೀತ್ ಸಿಂಗ್, ತಮ್ಮ ಬೆಂಬಲಿಗರು ಬಂದಿದ್ದ ಸ್ಕಾರ್ಪಿಯೋ, ಎಸ್‌ಯುವಿಯಲ್ಲಿ ಪರಾರಿಯಾಗಿದ್ದಾರೆ. ಇದನ್ನೂ ಓದಿ: ಪ್ರೀಮಿಯಂ ಬ್ರ‍್ಯಾಂಡ್‌ಗಳ ಮದ್ಯದ ದರ ಇಳಿಕೆ ಮಾಡೋ ಚಿಂತನೆ ಇದೆ – ಆರ್.ಬಿ ತಿಮ್ಮಾಪುರ್

     ಇದೀಗ ಪೊಲೀಸರು ಫಾರ್ಚೂನರ್ ಅನ್ನು ವಶಕ್ಕೆ ಪಡೆದಿದ್ದಾರೆ. ಆದರೆ ಶಾಸಕ ಇನ್ನೊಂದು ಕಾರಿನಲ್ಲಿದ್ದಿದ್ದರಿಂದ ಎಸ್ಕೇಪ್ ಆಗಿದ್ದಾರೆ. ಇದೀಗ ಶಾಸಕನ ಪತ್ತೆಗೆ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ. ಜಿರಾಕ್‌ಪುರದ ಮಹಿಳೆಯ ನೀಡಿದ ದೂರಿನಾಧಾರವಾಗಿ ಶಾಸಕ ಹರ್ಮೀತ್ ಸಿಂಗ್ ವಿರುದ್ಧ ಅತ್ಯಾಚಾರ, ವಂಚನೆ ಹಾಗೂ ಜೀವ ಬೆದರಿಕೆ ಪ್ರಕರಣದಡಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದರು. ಇದನ್ನೂ ಓದಿ: ಧರ್ಮಸ್ಥಳದ ವಿರುದ್ಧ ಪಿತೂರಿಗೆ ವಿದೇಶಿ ಫಂಡಿಂಗ್‌ – ತನಿಖೆಗೆ ಇಡಿ ಎಂಟ್ರಿ

    ಹರ್ಮೀತ್ ಸಿಂಗ್, ತಮ್ಮ ವಿರುದ್ಧ ಎಫ್‌ಐಆರ್ ದಾಖಲಾಗುತ್ತಿದ್ದಂತೆ ಫೇಸ್‌ಬುಕ್‌ನಲ್ಲಿ ಲೈವ್ ಬಂದು, ದೆಹಲಿಯಲ್ಲಿರುವ ನಾಯಕತ್ವವು ಪಂಜಾಬ್ ಅನ್ನು ಅಕ್ರಮವಾಗಿ ಆಳುತ್ತಿದೆ ಎಂದು ಆರೋಪಿಸಿದ್ದರು.

    ಕೇಂದ್ರ ನಾಯಕರ ವಿರುದ್ಧ ಧ್ವನಿ ಎತ್ತಿದ್ದಕ್ಕಾಗಿ ನನ್ನನ್ನು ಗುರಿಯಾಗಿಸಿದ್ದಾರೆ. ಅವರು ನನ್ನ ವಿರುದ್ಧ ಎಫ್‌ಐಆರ್ ದಾಖಲಿಸಿ, ನನ್ನನ್ನು ಜೈಲಿಗೆ ಕಳುಹಿಸಬಹುದು. ಆದರೆ ನನ್ನ ಧ್ವನಿಯನ್ನು ನಿಗ್ರಹಿಸಲು ಸಾಧ್ಯವಿಲ್ಲ ಎಂದು ಹೇಳಿದ್ದರು.

  • ಗುಜರಾತ್ ಬಿಜೆಪಿಯಲ್ಲಿ ಭಿನ್ನಮತ ಸ್ಫೋಟ- ಟಿಕೆಟ್ ನಿರಾಕರಿಸಿದ್ದಕ್ಕೆ ಆಪ್ ಸೇರಿದ ಶಾಸಕ

    ಗುಜರಾತ್ ಬಿಜೆಪಿಯಲ್ಲಿ ಭಿನ್ನಮತ ಸ್ಫೋಟ- ಟಿಕೆಟ್ ನಿರಾಕರಿಸಿದ್ದಕ್ಕೆ ಆಪ್ ಸೇರಿದ ಶಾಸಕ

    ಗಾಂಧಿನಗರ: ವಿಧಾನಸಭೆ ಚುನಾವಣೆ (Vidhanasabha Election) ಹಿನ್ನೆಲೆ ಬಿಜೆಪಿ (BJP) ಮೊದಲ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದು, ಈ ಪಟ್ಟಿ ಬಿಡುಗಡೆ ಬೆನ್ನಲ್ಲೇ ಭಿನ್ನಮತ ಶುರುವಾಗಿದೆ. ಟಿಕೆಟ್ ನಿರಾಕರಿಸಿದ ಹಿನ್ನೆಲೆ ಖೇಡಾ ಜಿಲ್ಲೆಯ ಮತರ್ ವಿಧಾನಸಭಾ ಕ್ಷೇತ್ರದ ಶಾಸಕ ಕೇಸರಿಸಿಂಗ್‌ (Kesari Singh Solanki) ಸೋಲಂಕಿ ಆಮ್ ಅದ್ಮಿ (AAP) ಪಕ್ಷವನ್ನು ಸೇರಿದ್ದಾರೆ.

    ಎರಡು ಬಾರಿ ಈ ಕ್ಷೇತ್ರದಿಂದ ಶಾಸಕರಾಗಿದ್ದ ಅವರಿಗೆ ಆಡಳಿತ ವಿರೋಧಿ ಅಲೆ ಹಿನ್ನೆಲೆ ಈ ಬಾರಿ ಟಿಕೆಟ್ ನಿರಾಕರಿಸಲಾಗಿತ್ತು. ಇದರಿಂದ ಆಕ್ರೋಶಗೊಂಡ ಸೋಲಂಕಿ ಆಪ್ ಸೇರಿದ್ದು, ಇದನ್ನು ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ (Arvind Kejriwal), ರಾಜ್ಯ ಘಟಕದ ಅಧ್ಯಕ್ಷ ಗೋಪಾಲ್ ಇಟಾಲಿಯಾ ಟ್ವಿಟ್ಟರ್ ನಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಮೋದಿಯಿಂದ ಏಷ್ಯಾದ ಮೊದಲ ಗಾರ್ಡನ್‌ ಟರ್ಮಿನಲ್‌ ಉದ್ಘಾಟನೆ – ವಿಶೇಷತೆ ಏನು?

    ಕೇಸರಿಸಿಂಗ್‌ ಸೋಲಂಕಿ, ಜನಪ್ರಿಯ, ಶ್ರಮಜೀವಿ, ಮತರ್ ವಿಧಾನಸಭೆ ಕ್ಷೇತ್ರದ ನಿರ್ಭೀತ ಶಾಸಕ, ಅರವಿಂದ್ ಕೇಜ್ರಿವಾಲ್ ಅವರ ಪ್ರಾಮಾಣಿಕ ರಾಜಕೀಯದಿಂದ ಪ್ರೇರಿತರಾಗಿ ಇಂದು ಆಮ್ ಆದ್ಮಿ ಪಕ್ಷಕ್ಕೆ ಸೇರಿದ್ದಾರೆ. ನಾನು ಸೋಲಂಕಿ ಅವರನ್ನು ಆಮ್ ಆದ್ಮಿ ಪಕ್ಷಕ್ಕೆ ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ. ನಾವು ಒಟ್ಟಾಗಿ ಗುಜರಾತ್‍ನಲ್ಲಿ ಪ್ರಾಮಾಣಿಕ ಸರ್ಕಾರವನ್ನು ರಚಿಸುತ್ತೇವೆ ಎಂದು ಇಟಾಲಿಯಾ ಗುರುವಾರ ತಡರಾತ್ರಿ ಟ್ವೀಟ್‍ನಲ್ಲಿ ತಿಳಿಸಿದ್ದಾರೆ.

    2014 ರಲ್ಲಿ ಆಗಿನ ಶಾಸಕ ದೇವುಸಿನ್ಹ ಚೌಹಾಣ್ ಲೋಕಸಭೆ ಚುನಾವಣೆಯಲ್ಲಿ ಗೆದ್ದ ನಂತರ ನಡೆದ ಉಪಚುನಾವಣೆಯಲ್ಲಿ ಸೋಲಂಕಿ ಗೆದ್ದಿದ್ದರು. ಚೌಹಾಣ್ ಪ್ರಸ್ತುತ ಕೇಂದ್ರ ಸಂಪರ್ಕ ಖಾತೆ ರಾಜ್ಯ ಸಚಿವರಾಗಿದ್ದಾರೆ. ಸೋಲಂಕಿ ಅವರು 2017 ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್‍ನಲ್ಲಿ ಕ್ಷೇತ್ರದಿಂದ ಗೆದ್ದಿದ್ದರು.

    Live Tv
    [brid partner=56869869 player=32851 video=960834 autoplay=true]