ನವದೆಹಲಿ: ಮದ್ಯದ ವಿರುದ್ಧ ಧ್ವನಿ ಎತ್ತಿದ್ದ ಕೇಜ್ರಿವಾಲ್ (Arvind Kejriwal) ಹಣಕ್ಕಾಗಿ ನೂತನ ಲಿಕ್ಕರ್ ಪಾಲಿಸಿ ಮಾಡಿದ್ದಾರೆ. ಆಮ್ ಆದ್ಮಿ ಪಕ್ಷವು (AAP) ಮದ್ಯ ನೀತಿಯನ್ನು ಮಾಡಬಾರದಿತ್ತು. ಮದ್ಯದ ವಿರುದ್ಧ ಧ್ವನಿ ಎತ್ತಿದ್ದ ವ್ಯಕ್ತಿ ಇಂದು ಮದ್ಯ ನೀತಿಯನ್ನು ಸಿದ್ಧಪಡಿಸಿದ್ದು ನನಗೆ ಬೇಸರ ತಂದಿದೆ. ಈಗ ಏನಾಗುತ್ತದೆಯೋ ಅದು ಕಾನೂನಿನ ಪ್ರಕಾರ ನಡೆಯಬೇಕು ಎಂದು ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ (Anna Hazare) ಹೇಳಿದ್ದಾರೆ.
ಈ ಹಿಂದೆಯೂ ಅಣ್ಣಾ ಹಜಾರೆ, ಮದ್ಯ ನೀತಿಯ ವಿರುದ್ಧ ಮಾತನಾಡಿದ್ದರು. 2022 ರಲ್ಲಿ ಅರವಿಂದ್ ಕೇಜ್ರಿವಾಲ್ ಅವರಿಗೆ ಪತ್ರ ಬರೆದು ನೀತಿಯ ಬಗ್ಗೆ ತಮ್ಮ ಬೇಸರ ವ್ಯಕ್ತಪಡಿಸಿದ್ದರು. ಪತ್ರದಲ್ಲಿ ನೀವು ಮುಖ್ಯಮಂತ್ರಿಯಾದ ನಂತರ ನಾನು ಇದೇ ಮೊದಲ ಬಾರಿಗೆ ನಿಮಗೆ ಪತ್ರ ಬರೆಯುತ್ತಿದ್ದೇನೆ. ಏಕೆಂದರೆ ನಿಮ್ಮ ಸರ್ಕಾರದ ಮದ್ಯ ನೀತಿಯ ಇತ್ತೀಚಿನ ಸುದ್ದಿ ವರದಿಗಳಿಂದ ನನಗೆ ನೋವಾಗಿದೆ. ಮದ್ಯದಂತೆಯೇ ಅಧಿಕಾರವೂ ಅಮಲೇರಿಸುತ್ತದೆ. ನಿಮಗೆ ಅಧಿಕಾರದ ಅಮಲು ಇದೆ ಎಂದು ತೋರುತ್ತದೆ ಎಂದು ಟೀಕಿಸಿದ್ದರು. ಇದನ್ನೂ ಓದಿ: ದೆಹಲಿ ಮದ್ಯ ಹಗರಣದಲ್ಲಿ ಕೇಜ್ರಿವಾಲ್ ಕಿಂಗ್‌ಪಿನ್: ಇಡಿ
ಬಂಧನದ ಹೊರತಾಗಿಯೂ ಅರವಿಂದ್ ಕೇಜ್ರಿವಾಲ್ ದೆಹಲಿ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ ಎಂದು ಎಎಪಿ ಹೇಳಿದೆ.
ನವದೆಹಲಿ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರೈತರು ಕರೆ ಕೊಟ್ಟಿರುವ ದೆಹಲಿ ಚಲೋ (Delhi Chalo) ಹೋರಾಟಕ್ಕೆ ದೆಹಲಿಯ ಆಮ್ ಆದ್ಮಿ ಸರ್ಕಾರ ಬೆಂಬಲ ನೀಡಿದೆ. ಬವಾನಾ ಸ್ಟೇಡಿಯಂನ್ನು ಜೈಲಾಗಿ ಪರಿವರ್ತಿಸುವ ಕೇಂದ್ರ ಸರ್ಕಾರದ ಪ್ರಸ್ತಾವನೆಯನ್ನು ತಿರಸ್ಕರಿಸಿರುವ ಕೇಜ್ರಿವಾಲ್ ಸರ್ಕಾರ ಅನ್ನದಾತರನ್ನು ಜೈಲಿಗೆ ಹಾಕುವುದು ತಪ್ಪು ಎಂದು ಹೇಳಿದೆ.
ರೈತರ ಪ್ರತಿಭಟನೆಯಲ್ಲಿ (Farmers Protest) ಬಂಧಿತರಾದ ಪ್ರತಿಭಟನಾಕಾರರಿಗೆ ಬವಾನಾ ಕ್ರೀಡಾಂಗಣವನ್ನು ತಾತ್ಕಾಲಿಕ ಜೈಲಾಗಿ ಪರಿವರ್ತಿಸಿ, ವ್ಯವಸ್ಥೆ ಮಾಡಿಕೊಡುವಂತೆ ಸೋಮವಾರ ಕೇಂದ್ರ ಸರ್ಕಾರ ದೆಹಲಿ (Delhi) ಸರ್ಕಾರಕ್ಕೆ ಪತ್ರ ಬರೆದಿತ್ತು. ಇದಕ್ಕೆ ಪ್ರತಿಕ್ರಿಯೆ ನೀಡಿರುವ ದೆಹಲಿ ಸರ್ಕಾರ ರೈತರ ಬೇಡಿಕೆಗಳು ನ್ಯಾಯಸಮ್ಮತವಾಗಿದೆ. ಶಾಂತಿಯುತ ಪ್ರತಿಭಟನೆಯು ಸಂವಿಧಾನದಲ್ಲಿ ಪ್ರತಿಯೊಬ್ಬ ನಾಗರಿಕನ ಹಕ್ಕು ಎಂದು ಹೇಳಿದೆ.
ಇಂದು (ಮಂಗಳವಾರ) ರಾಷ್ಟ್ರ ರಾಜಧಾನಿಯನ್ನು ಪ್ರವೇಶಿಸದಂತೆ ರೈತರ `ದೆಹಲಿ ಚಲೋ’ ಮೆರವಣಿಗೆಯನ್ನು ತಡೆಯಲು ದೆಹಲಿ ಗಡಿಗಳಲ್ಲಿ ಹಲವು ಹಂತದಲ್ಲಿ ಭದ್ರತಾ ವ್ಯವಸ್ಥೆ ಮಾಡಲಾಗಿದೆ. ಬ್ಯಾರಿಕೇಡ್‍ಗಳು, ಕಾಂಕ್ರೀಟ್ ಬ್ಲಾಕ್‍ಗಳು, ಕಬ್ಬಿಣದ ಮೊಳೆಗಳು ಮತ್ತು ಕಂಟೈನರ್‍ಗಳನ್ನು ಬಳಸಿ ಭದ್ರತೆಯನ್ನು ಹೆಚ್ಚಿಸಲಾಗಿದೆ. ರೈತ ಮುಖಂಡರು ಮತ್ತು ಕೇಂದ್ರದ ನಡುವಿನ ಮಾತುಕತೆ ವಿಫಲವಾದ ಬಳಿಕ ರೈತರನ್ನು ಗಡಿಯಲ್ಲಿ ತಡೆಯುವ ಪ್ರಯತ್ನ ಆರಂಭವಾಗಿದೆ.
ಸಿಂಘು, ಟಿಕ್ರಿ ಮತ್ತು ಘಾಜಿಪುರ ಗಡಿಗಳಲ್ಲಿ ಗಲಭೆ ನಿಗ್ರಹ ಪಡೆಗಳಲ್ಲಿ ಪೊಲೀಸರು ಮತ್ತು ಅರೆಸೈನಿಕ ಸಿಬ್ಬಂದಿಯನ್ನು ಭಾರೀ ಸಂಖ್ಯೆಯಲ್ಲಿ ನಿಯೋಜಿಸಲಾಗಿದೆ. ರೈತರ ಪ್ರತಿಭಟನಾ ಮೆರವಣಿಗೆ ಸಲುವಾಗಿ ನಿರ್ದಿಷ್ಟ ಸ್ಥಳಗಳಲ್ಲಿ ತಾತ್ಕಾಲಿಕ ಜೈಲುಗಳನ್ನು ಸಹ ಸ್ಥಾಪಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ನವದೆಹಲಿ: ಆಮ್ ಆದ್ಮಿ (AAP) ಪಕ್ಷವನ್ನು ಕೊನೆಗಾಣಿಸಲು ಪ್ರಯತ್ನಿಸಲಾಗುತ್ತಿದೆ. ಅದಕ್ಕಾಗಿ ಪಕ್ಷದ ನಾಯಕರ ವಿರುದ್ಧ ಸುಳ್ಳು ಪ್ರಕರಣಗಳನ್ನು ದಾಖಲಿಸಲಾಗುತ್ತಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Aravind Kejriwal) ಅವರು ಆರೋಪಿಸಿದರು.
ಎಎಪಿ ಶಾಸಕ ಅಮಾನತುಲ್ಲಾ ಖಾನ್ (Amanatullah Khan) ನಿವಾಸದ ಮೇಲೆ ಇಡಿ (ED) ದಾಳಿ ಅಂತ್ಯವಾದ ಬೆನ್ನಲ್ಲೆ ಅವರ ನಿವಾಸಕ್ಕೆ ತೆರಳಿದ ಸಿಎಂ ಬಿಜೆಪಿ ವಿರುದ್ಧ ಗಂಭೀರ ಆರೋಪ ಮಾಡಿದರು. ಖಾನ್ ಸೇರಿದಂತೆ ಇತರ ಕೆಲವು ನಾಯಕರ ವಿರುದ್ಧ ಅಕ್ರಮ ಹಣ ವರ್ಗಾವಣೆ ತನಿಖೆಯ ಭಾಗವಾಗಿ ತನಿಖೆ ನಡೆಸಲಾಗುತ್ತಿದೆ. ನಮ್ಮ ನಾಯಕರ ವಿರುದ್ಧ ಈವರೆಗೂ 170 ಪ್ರಕರಣಗಳು ದಾಖಲಾಗಿವೆ. ಆದರೆ ಅವುಗಳಲ್ಲಿ 140 ಪ್ರಕರಣಗಳಲ್ಲಿ ತೀರ್ಪುಗಳು ನಮ್ಮ ಪರವಾಗಿವೆ ಎಂದು ಹೇಳಿದರು.
ಕಳೆದ ಕೆಲವು ತಿಂಗಳುಗಳಲ್ಲಿ ನಮ್ಮ ಹಿರಿಯ ನಾಯಕರು ಹಾಗೂ ಸಚಿವರನ್ನು ಬಂಧಿಸಲು ಆರಂಭಿಸಿದ್ದಾರೆ. ಈ ದಾಳಿಗಳು ಎಎಪಿಯನ್ನು ಕೊನೆಗೊಳಿಸುವ ಅಭಿಯಾನದ ಭಾಗವಾಗಿದೆ ಎಂದು ಅವರು ಹೇಳಿದರು. ಬಿಜೆಪಿ (BJP) ಆಡಳಿತವಿರುವ ರಾಜ್ಯಗಳಲ್ಲಿ ಇಡಿ ಅಥವಾ ಕೇಂದ್ರೀಯ ತನಿಖಾ ದಳ ಯಾವುದೇ ವಿಚಾರಣೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಕೇಜ್ರಿವಾಲ್, ಬಿಜೆಪಿ ಭ್ರಷ್ಟಾಚಾರವನ್ನು ಕೊನೆಗೊಳಿಸುವುದಲ್ಲ. ಆದರೆ ಅದರ ಹೆಸರಿನಲ್ಲಿ ವಿರೋಧ ಪಕ್ಷದ ನಾಯಕರಿಗೆ ತೊಂದರೆ ನೀಡುತ್ತದೆ ಎಂದು ಎಂದು ಆರೋಪಿಸಿದರು. ಇದನ್ನೂ ಓದಿ: ಬೆಳ್ಳಂಬೆಳಗ್ಗೆ ಆಪ್ ಶಾಸಕ ಅಮಾನತುಲ್ಲಾ ಖಾನ್ ಮನೆ ಮೇಲೆ ED ದಾಳಿ
ಮೋದಿಯವರಿಂದ ಭ್ರಷ್ಟರೆಂದು ಕರೆಸಿಕೊಂಡವರು ಈಗ ಬಿಜೆಪಿಯ ಭಾಗವಾಗಿದ್ದಾರೆ. ಇದನ್ನು ನಾವು ನೋಡಿದ್ದೇವೆ. ಅವರು ವಿರೋಧ ಪಕ್ಷಗಳ ಭ್ರಷ್ಟರನ್ನು ತಮ್ಮ ತೆಕ್ಕೆಗೆ ಸೇರಿಸಿಕೊಂಡಿದ್ದಾರೆ. ಆಪ್ ದೇಶಭಕ್ತರ ಪಕ್ಷ ಎಂದು ಪುನರುಚ್ಚರಿಸಿದ ಕೇಜ್ರಿವಾಲ್, ದೇಶದಲ್ಲಿ ಭಯದ ವಾತಾವರಣವಿದೆ ಎಂದು ಹೇಳಿದ್ದರು. ಜನರು ಭಾರತವನ್ನು ಬಿಟ್ಟು ಬೇರೆ ದೇಶಗಳಿಗೆ ಹೋಗುತ್ತಿದ್ದಾರೆ ಎಂದು ಆರೋಪಿಸಿದರು.
ದಾವಣಗೆರೆ: ಆಮ್ ಆದ್ಮಿ ಪಕ್ಷದಿಂದ (AAP) ರಾಜ್ಯದ ಎಲ್ಲಾ 224 ಕ್ಷೇತ್ರದಲ್ಲಿ ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆ. ಹಾಗಾಗಿ ಫೆಬ್ರವರಿ 26 ರಂದು ದಾವಣಗೆರೆಯಲ್ಲಿ (Davanagere) ರಾಜ್ಯಮಟ್ಟದ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದ್ದು, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಆಗಮಿಸಲಿದ್ದಾರೆ.
ಈ ಬಗ್ಗೆ ಆಮ್ ಆದ್ಮಿ ಪಕ್ಷದ ರಾಜ್ಯ ಉಪಾಧ್ಯಕ್ಷ ಡಾ.ವಿಶ್ವನಾಥ್ ಸುದ್ದಿಗೋಷ್ಠಿ ನಡೆಸಿ, ಮುಂಬರುವ ರಾಜ್ಯ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಎಲ್ಲಾ ಕ್ಷೇತ್ರಗಳಲ್ಲೂ ಸ್ಪರ್ಧೆ ಮಾಡಲಿದೆ. ಫೆಬ್ರವರಿ 26 ರಂದು ದಾವಣಗೆರೆಯ ಕಾರ್ಯಕ್ರಮದ ನಂತರ ಪಕ್ಷದ ಚುನಾವಣಾ ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಲಾಗುವುದು. ನಗರದ ಎಸ್‍ಎಸ್ ಲೇಔಟ್‍ನಲ್ಲಿರುವ ರಿಂಗ್ ರಸ್ತೆ ಬಳಿ ದಾವಣಗೆರೆಯ ಕಾರ್ಯಾಲಯಕ್ಕೆ ಚಾಲನೆ ನೀಡಲಾಗಿದೆ ಎಂದಿದ್ದಾರೆ. ಇದನ್ನೂ ಓದಿ: ಮೂಡಿಗೆರೆ ಹಾಲಿ ಶಾಸಕನಿಗೆ ಟಿಕೆಟ್ ಇಲ್ಲ – ಗ್ರಂಥಪಾಲಕ ಬಿಜೆಪಿ ಅಭ್ಯರ್ಥಿ?
ಪಕ್ಷದ ರಾಜ್ಯ ಕಾರ್ಯಾಧ್ಯಕ್ಷ ಜಾಫರ್ ಮೋಹಿಯುದ್ದೀನ್ ಮಾತನಾಡಿ, ದಾವಣಗೆರೆಯ ಎಲ್ಲಾ ಕ್ಷೇತ್ರದಲ್ಲಿ ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆ. ಭ್ರಷ್ಟಾಚಾರ ರಹಿತ ಸರ್ಕಾರ ನಿರ್ಮಾಣ ನಮ್ಮ ಕನಸು. ರಾಜ್ಯದಲ್ಲಿ ಬದಲಾವಣೆ ಗಾಳಿ ಬೀಸುತ್ತಿದ್ದು ಆಮ್ ಆದ್ಮಿಗೆ ಜನ ಬೆಂಬಲ ನೀಡುವ ಭರವಸೆ ಇದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಸುದೀಪ್ ಕಾಂಗ್ರೆಸ್ ಸೇರಿದರೆ ಸ್ವಾಗತ : ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ
Live Tv
[brid partner=56869869 player=32851 video=960834 autoplay=true]
ನವದೆಹಲಿ: ಆಮ್ ಆದ್ಮಿ (AAP) ಪಕ್ಷದ ಸಚಿವ ಸತ್ಯೇಂದ್ರ ಜೈನ್ (Sathyendra Jain) ಅವರ ವೈರಲ್ ಆಗಿರುವ ವೀಡಿಯೋದಲ್ಲಿ ಇರುವುದು ಫಿಸಿಯೋಥೆರಪಿಸ್ಟ್ (Physiotherapist) ಅಲ್ಲ, ಅದು ರೇಪಿಸ್ಟ್ ಎಂದು ಇದೀಗ ಬಿಜೆಪಿ (BJP) ಗಂಭೀರ ಆರೋಪ ಮಾಡಿದೆ.
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜೈಲು ಸೇರಿರುವ ಸತ್ಯೇಂದ್ರ ಜೈನ್‍ಗೆ ತಿಹಾರ್ ಜೈಲಿನಲ್ಲಿ ವಿಐಪಿ ಟ್ರೀಟ್‍ಮೆಂಟ್ ನೀಡಲಾಗುತ್ತಿದೆ ಎಂದು ಇತ್ತೀಚೆಗಷ್ಟೇ ಬಿಜೆಪಿ ಆರೋಪಿಸಿತ್ತು. ಈ ಬೆನ್ನಲ್ಲೇ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Aravind Kejriwal) ಅವರು, ಸತ್ಯೇಂದ್ರ ಜೈನ್‍ಗೆ ತಿಹಾರ್ ಜೈಲಿನಲ್ಲಿ ಫಿಸಿಯೋಥೆರಪಿ ಮಾಡಲಾಗುತ್ತಿದೆ ಹೊರತು ಮಸಾಜ್ ಅಲ್ಲ ಎಂದು ಆರೋಪ ತಳ್ಳಿ ಹಾಕಿದ್ದರು.
Rape accused Rinku was giving massage to Satyendra Jain
Rinku
Accused under Pocso and IPC 376
So it was not a physiotherapist but a rapist who was giving maalish to Satyendra Jain! Shocking
ಅತ್ಯಾಚಾರ ಆರೋಪಿ ರಿಂಕು ಸತ್ಯೇಂದ್ರ ಜೈನ್‍ಗೆ ಮಸಾಜ್ ಮಾಡುತ್ತಿರುವುದನ್ನು ಕಾಣಬಹುದಾಗಿದೆ. ಈತ ಐಪಿಸಿ ಸೆಕ್ಷನ್ 376 ಹಾಗೂ ಪೋಕ್ಸೋ ಅಡಿಯಲ್ಲಿ ಬಂಧಿತನಾಗಿರುವ ಆರೋಪಿ. ಹೀಗಾಗಿ ಈತ ಫಿಸಿಯೋಥೆರಪಿಸ್ಟ್ ಅಲ್ಲ, ಬದಲಾಗಿ ರೇಪಿಸ್ಟ್ ಆಗಿದ್ದು, ಈತನಿಂದ ಅತ್ಯೇಂದ್ರ ಜೈನ್ ಮಸಾಜ್ ಮಾಡಿಕೊಳ್ಳುತ್ತಿರುವುದು ನಿಜಕ್ಕೂ ಅಚ್ಚರಿ ಹುಟ್ಟಿಸುತ್ತೆ. ಆದೆ ಇದನ್ನು ಸಮರ್ಥಿಸಿಕೊಳ್ಳುವ ಮೂಲಕ ಕೇಜ್ರಿವಾಲ್ ಅವರು ಫಿಸಿಯೋಥೆರಪಿಸ್ಟ್ ಗಳಿಗೆ ಯಾಕೆ ಅವಮಾನ ಮಾಡುತ್ತಿದ್ದಾರೆ ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ಪೂನಾವಾಲಾ ಆಗ್ರಹಿಸಿದ್ದಾರೆ.
ದೆಹಲಿ ಪೊಲೀಸ್ ಮೂಲಗಳ ಪ್ರಕಾರ, ರಿಂಕು ಅವರ ಅಪ್ರಾಪ್ತ ಮಗಳು ಮಾಡಿದ ಅತ್ಯಾಚಾರದ ಆರೋಪದ ನಂತರ 2021 ರಲ್ಲಿ ಅವರನ್ನು ಬಂಧಿಸಲಾಯಿತು. ಬಳಿಕ ತಿಹಾರ್ ಜೈಲಿಗೆ ಅಟ್ಟಲಾಗಿದೆ.
Live Tv
[brid partner=56869869 player=32851 video=960834 autoplay=true]
ನವದೆಹಲಿ: ಮದ್ಯದಂತೆಯೇ ಅಧಿಕಾರ ಕೂಡ ಅಮಲೇರಿಸುತ್ತದೆ. ನಿಮಗೆ ಅಧಿಕಾರದ ಅಮಲೇರಿದ ಹಾಗೆ ತೋರುತ್ತದೆ ಎಂದು ಅರವಿಂದ್ ಕೇಜ್ರಿವಾಲ್ ವಿರುದ್ಧ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಕಿಡಿಕಾರಿದರು.
ಭ್ರಷ್ಟಾಚಾರ ಪ್ರಕರಣದ ನಂತರ ಸರ್ಕಾರ ಜಾರಿಗೆ ತಂದ ಸರ್ಕಾರಿ ಮದ್ಯದ ಪರವಾನಗಿ ನೀತಿಯ ಕುರಿತು ದೆಹಲಿ ಮುಖ್ಯಮಂತ್ರಿಗೆ ಪತ್ರ ಬರೆದಿದ್ದಾರೆ.
ಪತ್ರದಲ್ಲಿ ಏನಿದೆ?: ನೀವು ಮುಖ್ಯಮಂತ್ರಿಯಾದ ನಂತರ ನಾನು ನಿಮಗೆ ಮೊದಲ ಬಾರಿಗೆ ಪತ್ರ ಬರೆಯುತ್ತಿದ್ದೇನೆ. ನಿಮ್ಮ ಸರ್ಕಾರದ ಮದ್ಯ ನೀತಿಯ ಬಗ್ಗೆ ಇತ್ತೀಚೆಗೆ ವರದಿಗಳಿಂದ ನೋವಾಗಿದೆ ಎಂದು ತಿಳಿಸಿದ್ದಾರೆ.
Anna Hazare writes to Delhi CM Kejriwal over New Liquor Policy
“Had expected a similar policy(like Maharashtra’s). But you didn’t do it.People seem to be trapped in a circle of money for power&power for money. It doesn’t suit a party that emerged from a major movement,”he writes pic.twitter.com/4yTvc0XI5K
ನೀವು ಬರೆದಿರುವ ಪುಸ್ತಕದಲ್ಲಿ ಪ್ರದೇಶದ ನಿವಾಸಿಗಳ ಅನುಮೋದನೆಯಿಲ್ಲದೇ ಯಾವುದೇ ಮದ್ಯದ ಅಂಗಡಿಗಳನ್ನು ತೆರೆಯಬಾರದು ಎಂದು ತಿಳಿಸಿದ್ದೀರಿ. ಆದರೆ ಇದೀಗ ನೀವು ಮುಖ್ಯಮಂತ್ರಿಯಾದ ನಂತರ ಈ ಎಲ್ಲಾ ಆದರ್ಶಗಳನ್ನು ಮರೆತಿದ್ದೀರಿ ಎಂದು ಕಿಡಿಕಾರಿದರು. ಇದನ್ನೂ ಓದಿ:ಮೋದಿ, ಬಿಜೆಪಿಯವರು ಸೇರಿ ದೇಶವನ್ನ ಬರ್ಬಾದು ಮಾಡಿಬಿಟ್ರು – ಸಿದ್ದು ಗುದ್ದು
ನೀವು, ಮನೀಶ್ ಸಿಸೋಡಿಯಾ ಹಾಗೂ ಇತರರು ರಚಿಸಿದ ಆಮ್ ಆದ್ಮಿ ಪಕ್ಷವು ಈಗ ಯಾವುದೇ ಪಕ್ಷಕ್ಕಿಂತ ಭಿನ್ನವಾಗಿಲ್ಲ. ಸದೃಢವಾದ ಲೋಕಪಾಲ್ ಮತ್ತು ಭ್ರಷ್ಟಾಚಾರ-ವಿರೋಧಿ ಕಾನೂನುಗಳನ್ನು ತರುವ ಬದಲು, ನೀವು ಈ ಮದ್ಯದ ನೀತಿಯನ್ನು ತಂದಿದ್ದೀರಿ. ಅದು ಜನವಿರೋಧಿ, ವಿಶೇಷವಾಗಿ ಮಹಿಳಾ ವಿರೋಧಿಯಾಗಿದೆ ಎಂದು ತಿಳಿಸಿದರು.
ಚಂಡೀಗಢ: ಆಮ್ ಆದ್ಮಿ ಪಕ್ಷದ ಪುರಸಭೆ ಸದಸ್ಯನ ಮೇಲೆ ಇಬ್ಬರು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆಗೈದ ಘಟನೆ ಪಂಜಾಬ್‍ನ ಮಲೇರ್ ಕೋಟ್ಲಾ ಜಿಲ್ಲೆಯಲ್ಲಿ ನಡೆದಿದೆ.
ಪುರಸಭೆ ಸದಸ್ಯ ಮೊಹಮ್ಮದ್ ಅಕ್ಬರ್ ಮೃತ ದುರ್ದೈವಿ. ಇಂದು ಮುಂಜಾನೆ ಅಕ್ಬರ್ ಜಿಮ್ ಮಾಡುತ್ತಿದ್ದರು. ಈ ವೇಳೆ ಅಲ್ಲಿಗೆ ಬಂದ ಇಬ್ಬರು ಅಪರಿಚಿತ ಆರೋಪಿಗಳು ಅಕ್ಬರ್ ಮೇಲೆ ಗುಂಡು ಹಾರಿಸಿದ್ದಾರೆ. ಘಟನೆ ಪರಿಣಾಮವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇದಾದ ಬಳಿಕ ದುಷ್ಕರ್ಮಿಗಳು ಅಲ್ಲಿಂದ ಪರಾರಿಯಾಗಿದ್ದಾರೆ.
ಈ ಬಗ್ಗೆ ಸ್ಥಳೀಯ ಪೊಲೀಸ್ ಅಧಿಕಾರಿಗಳು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆಯನ್ನು ಮುಂದುವರಿಸಿದ್ದಾರೆ. ಘಟನೆ ನಡೆದ ನಂತರ ಸ್ಥಳದಿಂದ ಪರಾರಿಯಾಗಿರುವ ಆರೋಪಿಗಳಿಗಾಗಿ ಶೋಧ ನಡೆಸುತ್ತಿದ್ದಾರೆ. ಘಟನೆ ಸಂಬಂಧಿಸಿ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಮಾತನಾಡಿ, ಶೀಘ್ರವೇ ಆರೋಪಿಯನ್ನು ಬಂಧಿಸಲಾಗುವುದು ಎಂದು ಭರವಸೆ ನೀಡಿದ್ದಾರೆ. ಇದನ್ನೂ ಓದಿ: ಗಡಿ ಭಾಗದ ಸರ್ಕಾರಿ ಶಾಲೆಯಲ್ಲಿ ಹ್ಯಾಂಡ್ ಗ್ರೆನೇಡ್ ಪತ್ತೆ- ಬೆಳಗಾವಿ ಜಿಲ್ಲೆಯಲ್ಲಿ ಆತಂಕ
Live Tv
[brid partner=56869869 player=32851 video=960834 autoplay=true]
ನವದೆಹಲಿ: ಆಮ್ ಆದ್ಮಿ ಪಕ್ಷದ ರಾಜ್ಯಸಭಾ ಸಂಸದ ಸಂಜಯ್ ಸಿಂಗ್ ಅವರು ಅಶಿಸ್ತಿನ ವರ್ತನೆ ತೋರಿದ್ದಕ್ಕೆ ಬುಧವಾರ ಸದನದಿಂದ ಅಮಾನತುಗೊಳಿಸಲಾಯಿತು.
ನಿನ್ನೆಯಷ್ಟೇ 19 ವಿರೋಧ ಪಕ್ಷಗಳ ಸಂಸದರನ್ನು ಕಲಾಪಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಸದನದಿಂದ ಅಮಾನತುಗೊಳಿಸಲಾಗಿತ್ತು. ಸಂಜಯ್ ಸಿಂಗ್ ಅವರನ್ನು ಅಮಾನತುಗೊಳಿಸುವ ಪ್ರಸ್ತಾವನೆಯನ್ನು ರಾಜ್ಯಸಭೆ ಬುಧವಾರ ಅಂಗೀಕರಿಸಿದೆ.
ಆಪ್ ಸಂಸದ ನಿನ್ನೆ ಘೋಷಣೆಗಳನ್ನು ಕೂಗಿ, ಕಾಗದಗಳನ್ನು ಹರಿದು ಕುರ್ಚಿಯತ್ತ ಎಸೆದಿದ್ದರು. ಈ ಹಿನ್ನೆಲೆಯಲ್ಲಿ ಪ್ರಸ್ತುತ ವಾರದ ಉಳಿದ ಭಾಗಕ್ಕೆ ರಾಜ್ಯಸಭೆಯಿಂದ ಅಮಾನತುಗೊಂಡಿದ್ದಾರೆ ಎಂದು ರಾಜ್ಯಸಭೆಯ ಉಪಾಧ್ಯಕ್ಷ ಹರಿವಂಶ್ ನಾರಾಯಣ್ ತಿಳಿಸಿದ್ದಾರೆ. ಇದನ್ನೂ ಓದಿ: ಜನನಿಬಿಡ ಪ್ರದೇಶಗಳಲ್ಲಿ ಸಿಸಿ ಕ್ಯಾಮೆರಾ ಕಡ್ಡಾಯ: ಪೊಲೀಸ್ ಇಲಾಖೆ ನೋಟಿಸ್
ಸಂಜಯ್ ಸಿಂಗ್ ಅವರ ಈ ವರ್ತನೆಯು ಸದನದ ನಿಯಮಗಳು ಮತ್ತು ಅಧ್ಯಕ್ಷರ ಅಧಿಕಾರವನ್ನು ಸಂಪೂರ್ಣವಾಗಿ ಕಡೆಗಣಿಸಿದೆ ಎಂದು ರಾಜ್ಯಸಭಾ ಉಪಸಭಾಪತಿ ಹೇಳಿದ್ದಾರೆ. ಈ ಹಿಂದೆ ಕಲಾಪಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ವಿರೋಧ ಪಕ್ಷದ 19 ಸಂಸದರನ್ನು ಸದನದಿಂದ ಅಮಾನತುಗೊಳಿಸಲಾಗಿತ್ತು. ಇದನ್ನೂ ಓದಿ: ಪಿಎಂಎಲ್‌ಎ ಅಡಿ ಬಂಧನ ಮಾಡಬಹುದು – ಇಡಿಗೆ ಸುಪ್ರೀಂನಿಂದ ಸಿಕ್ತು ಪರಮಾಧಿಕಾರ
Live Tv
[brid partner=56869869 player=32851 video=960834 autoplay=true]
ಬೆಂಗಳೂರು: ಪಿಎಸ್‍ಐ ನೇಮಕಾತಿ ಹಗರಣದ ತನಿಖೆಯನ್ನು ಸಿಐಡಿಗೆ ನೀಡಿರುವುದರ ಹಿಂದೆ ಸತ್ಯ ಹೊರಬರುವುದನ್ನು ತಡೆಯುವ ಹುನ್ನಾರವಿದೆ ಎಂದು ಆಮ್ ಆದ್ಮಿ ಪಾರ್ಟಿ ಮುಖಂಡ ಹಾಗೂ ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಹೇಳಿದರು.
ಪ್ರೆಸ್‍ಕ್ಲಬ್‍ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ನಾಯಕರೇ ಆರೋಪಿಗಳಾಗಿರುವ ಹಗರಣವನ್ನು ಬಿಜೆಪಿ ಸರ್ಕಾರದ ಅಡಿಯಲ್ಲಿ ಕಾರ್ಯನಿರ್ವಹಿಸುವ ಸಿಐಡಿಯಿಂದಲೇ ತನಿಖೆ ಮಾಡಿಸುವುದು ಹಾಸ್ಯಾಸ್ಪದ. ಈ ತನಿಖೆಗೆ ಯಾವ ಬೆಲೆಯೂ ಇಲ್ಲ. ಅನುಮಾನಾಸ್ಪದ ಅಭ್ಯರ್ಥಿಯ ತನಿಖೆ ವೇಳೆ ಬಿಜೆಪಿ ನಾಯಕರ ಹೆಸರು ಕೇಳಿಬಂದರೆ, ಆ ಅಭ್ಯರ್ಥಿಯ ವಿಚಾರಣೆಯನ್ನೇ ಕೈಬಿಡಲಾಗುತ್ತಿದೆ. ಇಡೀ ಹಗರಣವನ್ನು ಮುಚ್ಚಿ ಹಾಕಿ, ಬಿಜೆಪಿ ನಾಯಕರನ್ನು ಬಚಾವ್ ಮಾಡಲೆಂದೇ ಸಿಐಡಿ ಮೂಲಕ ತನಿಖೆ ನಡೆಸಲಾಗುತ್ತಿದೆ ಎಂದು ಹೇಳಿದರು.
ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯವರ ಮೇಲ್ವಿಚಾರಣೆಯಲ್ಲಿ ಪಿಎಸ್‍ಐ ಹಗರಣದ ಸಮಗ್ರ ತನಿಖೆ ನಡೆಯಬೇಕು. ಆಗ ಮಾತ್ರ ನಿಷ್ಪಕ್ಷಪಾತ ತನಿಖೆ ನಡೆದು, ಸತ್ಯಾಂಶ ಹೊರಬರುತ್ತದೆ. ಆಗ ಅಕ್ರಮದಲ್ಲಿ ಭಾಗಿಯಾದ ಎಲ್ಲ ರಾಜಕಾರಣಿಗಳ ಮುಖವಾಡ ಕಳಚಿ ಬೀಳುತ್ತದೆ. ಇಲ್ಲದಿದ್ದರೆ, ಸಿಐಡಿ ತನಿಖೆಯ ಗಾಳಕ್ಕೆ ಕೇವಲ ಸಣ್ಣಪುಟ್ಟ ಮೀನುಗಳು ಬಲಿಯಾಗಿ, ದೊಡ್ಡ ತಿಮಿಂಗಿಲಗಳು ತಪ್ಪಿಸಿಕೊಂಡು ಬಿಡುತ್ತವೆ ಎಂದು ಭಾಸ್ಕರ್ ರಾವ್ ಹೇಳಿದರು.
ಬಿಜೆಪಿ ಸರ್ಕಾರದ ಸಚಿವ ಡಾ. ಅಶ್ವತ್ಥ್ ನಾರಾಯಣ್‍ರವರ ಸಹೋದರನೇ ಹಗರಣದಲ್ಲಿ ಭಾಗಿಯಾಗಿರುವ ಆರೋಪವಿದೆ. ಸಚಿವರ ಸಹಕಾರವಿಲ್ಲದೇ ಅವರ ಸಹೋದರನಿಗೆ ಅಕ್ರಮವೆಸಗಲು ಸಾಧ್ಯವೇ? ಬಹುತೇಕ ಬಿಡಿಎ ಕಾಮಗಾರಿಗಳನ್ನು ಅಶ್ವತ್ಥ್ ನಾರಾಯಣ್ ಸಹೋದರರ ಮಾಲೀಕತ್ವದ ಹೊಂಬಾಳೆ ಕನ್‍ಸ್ಟ್ರಕ್ಷನ್ ನಿರ್ವಹಿಸುತ್ತಿದ್ದು, ಪಿಎಸ್‍ಐ ನೇಮಕಾತಿಯಲ್ಲೂ ಅವರು ಮೂಗು ತೂರಿಸಿರುವುದು ಆತಂಕಕಾರಿ. ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆಯವರಿಗೆ ಸಿಐಡಿ ಮೂರು ನೋಟಿಸ್ ನೀಡಿದರೂ ಅವರು ವಿಚಾರಣೆಗೆ ಹಾಜರಾಗಿ ದಾಖಲೆಗಳನ್ನು ಒದಗಿಸಿಲ್ಲ ಎಂದರು.
ಸತ್ಯ ಹೊರಬರುವುದು ಕಾಂಗ್ರೆಸ್‍ಗೂ ಇಷ್ಟವಿಲ್ಲ ಎನ್ನುವುದು ಇದರಿಂದಲೇ ಸ್ಪಷ್ಟವಾಗುತ್ತದೆ. ಇನ್ನು, ಅಶ್ವತ್ಥ್ ನಾರಾಯಣ್‍ರವರು ಈ ಹಿಂದೆಯೂ ನಕಲಿ ಸರ್ಟಿಫಿಕೇಟ್ ನೀಡಿದ್ದರೆಂದು ಜೆಡಿಎಸ್‍ನ ಎಚ್.ಡಿ.ಕುಮಾರಸ್ವಾಮಿಯವರು ಬಹಿರಂಗಪಡಿಸಿದ್ದು, ಅವರು ಕೂಡ ಸಾಕ್ಷಿ ಬಹಿರಂಗ ಪಡಿಸುತ್ತಿಲ್ಲ. ಮೂರೂ ಭ್ರಷ್ಟ ಪಕ್ಷಗಳು ಒಳಒಪ್ಪಂದ ಮಾಡಿಕೊಂಡು ಹಗರಣವನ್ನು ಮುಚ್ಚಿಹಾಕಲು ಯತ್ನಿಸುತ್ತಿವೆ ಎಂದು ಹೇಳಿದರು.
ಮಾಜಿ ಮುಖ್ಯಮಂತ್ರಿಯೊಬ್ಬರ ಪುತ್ರನು ಪಿಎಸ್‍ಐ ನೇಮಕಾತಿ ಪರೀಕ್ಷೆಯಲ್ಲಿ ಭಾರೀ ಅಕ್ರಮ ಮಾಡಿದ್ದಾರೆಂದು ವಕೀಲ ನಿಯೋಗವು ಸಿಐಡಿಗೆ ದೂರು ನೀಡಿದೆ. ಆ ಮುಖ್ಯಮಂತ್ರಿ ಹಾಗೂ ಅವರ ಮಗ ಯಾರೆಂದು ಬಹಿರಂಗವಾಗಬೇಕು. ಪಿಎಸ್‍ಐ ನೇಮಕಾತಿ ಹಗರಣದ ಆರೋಪಿ ದಿವ್ಯಾ ಹಾಗರಗಿ ಕರ್ನಾಟಕ ಸ್ಟೇಟ್ ನರ್ಸಿಂಗ್ ಕೌನ್ಸಿಲ್‍ನಲ್ಲಿನ ಅಕ್ರಮದಲ್ಲೂ ಭಾಗಿಯಾಗಿರುವ ಕುರಿತು ಮಾಧ್ಯಮಗಳಲ್ಲಿ ವರದಿಯಾಗಿದೆ. ಇದು ವೈದ್ಯಕೀಯ ಶಿಕ್ಷಣ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಪ್ರಭಾವಿ ಸಚಿವರು ಕೂಡ ಅಕ್ರಮದ ಪಾಲುದಾರರಾಗಿರಬಹುದು. ಸೂಕ್ತ ತನಿಖೆ ನಡೆದರೆ ಸತ್ಯಾಂಶ ಹೊರಬರಲಿದೆ. ಪಿಎಸ್‍ಐ ನೇಮಕಾತಿ ಹಗರಣದ ಆರೋಪಿ ದಿವ್ಯಾ ಹಾಗರಗಿ ಕರ್ನಾಟಕ ಸ್ಟೇಟ್ ನರ್ಸಿಂಗ್ ಕೌನ್ಸಿಲ್‍ನಲ್ಲಿನ ಅಕ್ರಮದಲ್ಲೂ ಭಾಗಿಯಾಗಿರುವ ಕುರಿತು ಮಾಧ್ಯಮಗಳಲ್ಲಿ ವರದಿಯಾಗಿದೆ. ಇದು ವೈದ್ಯಕೀಯ ಶಿಕ್ಷಣ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಪ್ರಭಾವಿ ಸಚಿವರು ಕೂಡ ಅಕ್ರಮದ ಪಾಲುದಾರರಾಗಿರಬಹುದು. ಸೂಕ್ತ ತನಿಖೆ ನಡೆದರೆ ಸತ್ಯಾಂಶ ಹೊರಬರಲಿದೆ ಎಂದು ತಿಳಿಸಿದರು. ಇದನ್ನೂ ಓದಿ: ಮುಖ್ಯಮಂತ್ರಿಯಾಗಲು ಎರಡೂವರೆ ಸಾವಿರ ಕೋಟಿ ಬೇಕು ಯತ್ನಾಳ್ ಹೇಳಿಕೆ ತನಿಖೆ ಆಗಲಿ: ಡಿ.ಕೆ. ಶಿವಕುಮಾರ್
ಪಿಎಸ್‍ಐ ನೇಮಕಾತಿ ಪರೀಕ್ಷೆ ಮಾತ್ರವಲ್ಲದೇ ಇತರೆ ಹುದ್ದೆಗಳ ನೇಮಕಾತಿಯಲ್ಲೂ ಭಾರೀ ಆಕ್ರಮ ನಡೆದಿದೆ. ಕೆಪಿಎಸ್‍ಸಿ ಪರೀಕ್ಷೆ ಪಾಸ್ ಮಾಡಿಸುವುದಾಗಿ ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್ ಲಂಚ ಪಡೆದು ವಂಚಿಸಿ, ನಂತರ ಹಣ ವಾಪಸ್ ಕೇಳಿದಾಗಿ ಅಭ್ಯರ್ಥಿ ಮೇಲೆ ಗೂಂಡಾಗಿರಿ ಮಾಡಿದ್ದಾರೆಂದು ಅಭ್ಯರ್ಥಿಯೇ ಆರೋಪ ಮಾಡಿದ್ದಾರೆ. ಸಹಾಯಕ ಉಪನ್ಯಾಸಕರ ನೇಮಕಾತಿ ಪರೀಕ್ಷೆಯಲ್ಲಿನ ಅಕ್ರಮವೂ ಬಯಲಾಗಿದೆ. ಪಿಎಸ್‍ಐ ನೇಮಕಾತಿಯಲ್ಲಿ ಅಕ್ರಮವಾಗಿದೆ ಎಂದು ಪಶುಸಂಗೋಪನಾ ಸಚಿವ ಪ್ರಭು ಚವ್ಹಾಣ್‍ರವರೇ ಸರ್ಕಾರಕ್ಕೆ ಪತ್ರ ಬರೆದಿದ್ದರು. ಆದರೆ ಯಾವುದೇ ಅಕ್ರಮವಾಗಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರರವರು ಕಳೆದ ವಿಧಾನಸಭಾ ಅಧಿವೇಶನದಲ್ಲಿ ತಪ್ಪು ಮಾಹಿತಿ ನೀಡಿದರು. ಬೆಂಗಳೂರಿನ 20 ಪರೀಕ್ಷಾ ಕೇಂದ್ರಗಳಲ್ಲೂ ಅಕ್ರಮ ನಡೆದಿದೆ ಎಂದು ಸಿಐಡಿ ಅಧಿಕಾರಿಗಳು ಹೇಳುತ್ತಿದ್ದಾರೆ. ಪೊಲೀಸ್ ನೇಮಕಾತಿ ಮಂಡಳಿಯ ಎಡಿಜಿಪಿ ಅಮೃತ್ ಪಾಲ್ ಅಕ್ರಮದಲ್ಲಿ ಭಾಗಿಯಾಗಿರುವುದು ದುರಂತ ಎಂದು ಭಾಸ್ಕರ್ ರಾವ್ ಹೇಳಿದರು.
ಅದಾನಿ ಜೇಬು ತುಂಬಿಸಲು ಸಾಮಾನ್ಯರ ಲೂಟಿ: ಜೀರೋ ಪರ್ಸೆಂಟ್ ಕಮಿಷನ್ ಆಡಳಿತ ನೀಡುವ ಆಮ್ ಆದ್ಮಿ ಪಾರ್ಟಿಯಿಂದ ಮಾತ್ರ ಕಡಿಮೆ ದರದಲ್ಲಿ ವಿದ್ಯುತ್ ಪೂರೈಸಲು ಸಾಧ್ಯವಾಗುತ್ತದೆ. 40 ಪರ್ಸೆಂಟ್ ಬಿಜೆಪಿ ಸರ್ಕಾರವು ಅದಾನಿ ಜೇಬು ತುಂಬಿಸಿ ಕಮಿಷನ್ ಪಡೆಯುವ ಬಿಜೆಪಿ ಸರ್ಕಾರದಿಂದ ಇದು ಸಾಧ್ಯವೇ ಇಲ್ಲ ಎಂದು ಭಾಸ್ಕರ್ ರಾವ್ ವಾಗ್ದಾಳಿ ನಡೆಸಿದರು. ರಾಜ್ಯ ಸರ್ಕಾರವು ಕಲ್ಲಿದ್ದಲು ಗುತ್ತಿಗೆಯನ್ನು ಅದಾನಿ ಕಂಪನಿಗೆ ನೀಡಿ, ಅಧಿಕ ಬೆಲೆಗೆ ಅದರಿಂದ ವಿದ್ಯುತ್ ಖರೀದಿಸುತ್ತಿದೆ. ಇದರಿಂದ ಸರ್ಕಾರಕ್ಕಾಗುವ ನಷ್ಟವನ್ನು ಭರಿಸಲು ಸಾಮಾನ್ಯ ಜನರ ಜೇಬಿಗೆ ಕತ್ತರಿ ಹಾಕಲಾಗುತ್ತಿದೆ ಎಂದು ಭಾಸ್ಕರ್ ರಾವ್ ಹೇಳಿದರು.
ಬೆಂಗಳೂರು: ಬೆಲೆ ಏರಿಕೆ, ಉದ್ಯೋಗ ನಷ್ಟ ಹಾಗೂ ಲಾಕ್‍ಡೌನ್ ಸಂಕಷ್ಟದಿಂದ ತತ್ತರಿಸಿರುವ ಜನರಿಗೆ ವಿದ್ಯುತ್ ದರ ಏರಿಕೆ ಮೂಲಕ ರಾಜ್ಯ ಸರ್ಕಾರವು ಕರೆಂಟ್ ಶಾಕ್ ನೀಡುತ್ತಿದೆ ಎಂದು ಎಎಪಿ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಟೀಕಿಸಿದ್ದಾರೆ.
ವಿದ್ಯುತ್ ದರ ಏರಿಕೆ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಒಂದೂವರೆ ವರ್ಷದಲ್ಲಿ ವಿದ್ಯುತ್ ದರವನ್ನು ಮೂರನೇ ಸಲ ಏರಿಕೆ ಮಾಡಲಾಗುತ್ತಿದೆ. ಮಹಾರಾಷ್ಟ್ರ ಬಿಟ್ಟರೆ ಕರ್ನಾಟಕವೇ ಅತಿಹೆಚ್ಚು ವಿದ್ಯುತ್ ಉತ್ಪಾದನೆ ಮಾಡುತ್ತಿದೆ. ಆದರೂ ಇಲ್ಲಿ ಪದೇಪದೆ ಬೆಲೆ ಏರಿಕೆ ಮಾಡಿ ಜನಸಾಮಾನ್ಯರನ್ನು ಹೈರಾಣಾಗಿಸಲಾಗುತ್ತಿದೆ. ಅತೀ ಕಡಿಮೆ ವಿದ್ಯುತ್ ಉತ್ಪಾದನೆ ಮಾಡುವ, ಆಮ್ ಆದ್ಮಿ ಪಾರ್ಟಿ ಆಡಳಿತವಿರುವ ದೆಹಲಿಯಲ್ಲಿ ಪ್ರತಿ ಮನೆಗೆ ತಿಂಗಳಿಗೆ 200 ಯೂನಿಟ್ ತನಕ ಉಚಿತ ವಿದ್ಯುತ್ ನೀಡಲು ಸಾಧ್ಯವಾಗಿದೆ. ನಮ್ಮ ರಾಜ್ಯದಲ್ಲಿ ದರ ಏರಿಕೆಗೆ ಕಡಿವಾಣ ಹಾಕಲೂ ಬಿಜೆಪಿ ಸರ್ಕಾರಕ್ಕೆ ಸಾಧ್ಯವಾಗುತ್ತಿಲ್ಲ ಎಂದು ಹೇಳಿದರು. ಇದನ್ನೂ ಓದಿ: ನಾವು ಎಷ್ಟೇ ದೊಡ್ಡವರಾದರೂ ಶಾಲೆ, ಗುರುಗಳು ಅಂದಾಗ ಗೌರವದ ಭಾವ ಮೂಡುತ್ತೆ: ಆರ್.ಅಶೋಕ್
ಕೋವಿಡ್‍ನಿಂದಾಗಿ 2 ವರ್ಷಗಳ ಕಾಲ ಶೇ.40ಕ್ಕಿಂತಲೂ ಹೆಚ್ಚಿನ ಕೈಗಾರಿಕೆಗಳು ಸ್ಥಗಿತಗೊಂಡಿದ್ದವು. ಅವು ವಿದ್ಯುತ್ ಬಳಸದಿದ್ದರೂ ಕನಿಷ್ಠ ವಿದ್ಯುತ್ ದರವನ್ನು ಪಾವತಿಸಿದ್ದವು. ಇದರಿಂದಾಗಿ 2 ವರ್ಷಗಳ ಕಾಲ ವಿದ್ಯುತ್ ಸರಬರಾಜು ಕಂಪನಿಗಳಿಗೆ ಉಚಿತವಾಗಿ ಹಣ ಲಭಿಸಿದೆ. ವಿದ್ಯುತ್ ಪೂರೈಕೆಯಲ್ಲಿ ಅನಗತ್ಯ ವೆಚ್ಚಗಳ ಏರಿಕೆ, ಸರಬರಾಜು ನಿರ್ವಹಣೆಯಲ್ಲಿ ನಿರ್ಲಕ್ಷ್ಯ, ಸರ್ಕಾರಿ ಸಂಸ್ಥೆಗಳಿಂದ ಬರಬೇಕಾದ 511 ಕೋಟಿ ರೂ. ಶುಲ್ಕ ವಸೂಲಿಯಲ್ಲಿ ವಿಫಲ ಸೇರಿದಂತೆ ಅನೇಕ ಕಾರಣಗಳಿಂದ ವಿದ್ಯುತ್ ಸರಬರಾಜು ಕಂಪನಿಗಳು ನಷ್ಟ ಅನುಭವಿಸುತ್ತಿವೆ. ಸರ್ಕಾರದ ತಪ್ಪಿನಿಂದಾಗುತ್ತಿರುವ ಈ ನಷ್ಟವನ್ನು ಗ್ರಾಹಕರ ಮೇಲೆ ಹೊರಿಸುವುದು ಸರಿಯಲ್ಲ ಎಂದರು. ಇದನ್ನೂ ಓದಿ: ಕುಮಾರಸ್ವಾಮಿ ಹೀಗೆ ಮಾತನಾಡಿದ್ರೆ ಹಿಟ್ ವಿಕೆಟ್ ಆಗ್ತೀರಾ: ಆರ್.ಅಶೋಕ್ ತಿರುಗೇಟು
ಆಮ್ ಆದ್ಮಿ ಪಾರ್ಟಿ ಮುಖಂಡರಾದ ಪ್ರಕಾಶ್ ನೆಡುಂಗಡಿ ಮಾತನಾಡಿ, ರಾಜ್ಯದ ಜನರಿಂದ ದುಬಾರಿ ಶುಲ್ಕ ಪಡೆಯುವ ರಾಜ್ಯ ಸರ್ಕಾರವು ಹೊರರಾಜ್ಯಗಳಿಗೆ ಮಾತ್ರ ಅಗ್ಗದ ದರದಲ್ಲಿ ವಿದ್ಯುತ್ ಪೂರೈಸುತ್ತಿದೆ. ಯೂನಿಟ್‍ಗೆ ಕೇವಲ 2.38 ರೂಪಾಯಿಯಂತೆ ಬೇರೆ ರಾಜ್ಯಗಳಿಗೆ ವಿದ್ಯುತ್ ಮಾರಾಟ ಮಾಡಲಾಗುತ್ತಿದೆ. ಜೊತೆಗೆ, ಕೇಂದ್ರ ಸರ್ಕಾರದ ವಿದ್ಯುತ್ ಉತ್ಪಾದನಾ ಘಟಕಗಳಿಂದ ರಾಜ್ಯವು ವಿದ್ಯುತ್ ಖರೀದಿಸದಿದ್ದರೂ ನಿರ್ದಿಷ್ಟ ಶುಲ್ಕವನ್ನು ಪಾವತಿಸಬೇಕಾಗಿದೆ. ಇದರಿಂದಾಗಿ ಗ್ರಾಹಕರು ಹೆಚ್ಚು ದರ ಪಾವತಿಸಬೇಕಾಗಿದೆ. ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರವಾಗುತ್ತಿದ್ದು, ಅದಾನಿ ಪವರ್ ಲಿಮಿಟೆಡ್ ಭಾಗವಾಗಿರುವ ಉಡುಪಿ ಪವರ್ ಲಿಮಿಟೆಡ್‍ಗೆ 2021-22ರಲ್ಲಿ ಶೇ.40ರಷ್ಟು ಅಧಿಕ, ಅಂದರೆ ಯೂನಿಟ್ 6.80 ರೂಪಾಯಿಯನ್ನು ಸರ್ಕಾರ ನೀಡಿದೆ ಎಂದು ಆರೋಪಿಸಿದರು.