Tag: ಆಯುಧ

  • ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ- ಕೊಲೆಗೆ ಬಳಸಿದ್ದ ಆಯುಧ ವಶಕ್ಕೆ

    ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ- ಕೊಲೆಗೆ ಬಳಸಿದ್ದ ಆಯುಧ ವಶಕ್ಕೆ

    ಉಡುಪಿ: ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ (Family Murder Case) ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪ್ರವೀಣ್ ಚೌಗಲೆ ಮನೆಯಿಂದ ಕೊಲೆ ಕೃತ್ಯಕ್ಕೆ ಬಳಸಿದ್ದ ಚೂರಿ ಮತ್ತಿತರ ಆಯುಧಗಳನ್ನು (Weapons) ಪೊಲೀಸರು ವಶಪಡಿಸಿಕೊಂಡಿದ್ದಾರೆ.

    ಮಹಜರು ವೇಳೆ ಮಂಗಳೂರಿನ (Mangaluru) ಬಿಜೈ (Bejai) ಅಪಾರ್ಟ್ಮೆಂಟ್‌ನಲ್ಲಿ ಆಯುಧಗಳನ್ನು ಮಲ್ಪೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರಂಭದಲ್ಲಿ ಆರೋಪಿ ಚೂರಿಯನ್ನು ನದಿಗೆ ಎಸೆದಿದ್ದೇನೆ ಎಂದು ಹೇಳಿಕೆ ನೀಡಿದ್ದ. ಇನ್ನು ನಾಲ್ವರ ಕೊಲೆ ಸಂದರ್ಭ ಆರೋಪಿ ತೊಟ್ಟಿದ್ದ ಬಟ್ಟೆ ರಕ್ತಸಿಕ್ತವಾಗಿದ್ದು, ಈ ಬಟ್ಟೆಯನ್ನು ದಾರಿಯಲ್ಲಿ ಸುಟ್ಟುಹಾಕಿರುವ ಸಾಧ್ಯತೆ ಇದೆ ಎಂದು ಶಂಕಿಸಲಾಗಿದೆ. ಇದನ್ನೂ ಓದಿ: ದೂರು ಕೊಟ್ಟ ಪತ್ನಿಗೆ ಠಾಣೆಯಲ್ಲೇ ಇರಿದ ಪಾಪಿ ಪತಿ!

    ಪೊಲೀಸರ ವಿಚಾರಣೆ ವೇಳೆ ಆರೋಪಿ ಪ್ರವೀಣ್ ಚೌಗಲೆ ಈ ಬಗ್ಗೆ ಮಾಹಿತಿ ನೀಡಿದ್ದು, ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಸುರತ್ಕಲ್ ಸಮೀಪ ಬಟ್ಟೆ ಸುಟ್ಟಿರುವ ಸಾಧ್ಯತೆ ಇದೆ. ಈ ಕುರಿತು ಇಂದು ಪೊಲೀಸರು ಸ್ಥಳ ಪರಿಶೀಲನೆ ನಡೆಸಿ ಮಹಜರು ಮಾಡಲಿದ್ದಾರೆ. ಇದನ್ನೂ ಓದಿ: 2 ದಿನದಲ್ಲಿ ಮದುವೆಯಾಗಬೇಕಿದ್ದ ಯುವತಿ ಅನುಮಾನಾಸ್ಪದ ಸಾವು

    ಏನಿದು ಪ್ರಕರಣ?
    ನವೆಂಬರ್ 12ರಂದು ಉಡುಪಿಯ ನೇಜಾರು ಎಂಬಲ್ಲಿ ಆರೋಪಿ ಪ್ರವೀಣ್ ಒಂದೇ ಕುಟುಂಬದ ನಾಲ್ವರನ್ನು ಹತ್ಯೆಗೈದಿದ್ದಾನೆ. ಮೃತರನ್ನು ಹಸೀನಾ, ಅಫ್ನಾನ್, ಅಯ್ನಝ್, ಆಸಿಂ ಎಂದು ಗುರುತಿಸಲಾಗಿದೆ. ನಾಲ್ವರನ್ನೂ ಹರಿತವಾದ ಆಯುಧಗಳಿಂದ ಇರಿದು ಕೊಂದ ಬಳಿಕ ಆರೋಪಿ ಸ್ಥಳದಿಂದ ಪರಾರಿಯಾಗಿದ್ದ. ಹಸೀನಾ ಪತಿ ವಿದೇಶದಲ್ಲಿ ಉದ್ಯೋಗದಲ್ಲಿದ್ದು, ಅವರ ಅನುಪಸ್ಥಿತಿಯಲ್ಲಿ ಹತ್ಯೆ ನಡೆದಿದೆ. ಇದನ್ನೂ ಓದಿ: ವಿಶಾಖಪಟ್ಟಣಂ ಬಂದರಿನಲ್ಲಿ ಬೆಂಕಿ ಅವಘಡ- 40 ದೋಣಿಗಳು ಭಸ್ಮ

    ಘಟನೆಯ ಬಳಿಕ ಆರೋಪಿ ಪ್ರವೀಣ್ ಬೆಳಗಾವಿಯ ರಾಯಭಾಗ ತಾಲೂಕಿನ ಕುಡಚಿಯ ನೀರಾವರಿ ಇಲಾಖೆ ಅಧಿಕಾರಿ ಸಂಬಂಧಿ ಮನೆಯಲ್ಲಿ ತಲೆಮರೆಸಿಕೊಂಡಿದ್ದ. ಅಲ್ಲಿಂದ ಮಹಾರಾಷ್ಟ್ರಕ್ಕೆ ಪ್ರಯಾಣ ಬೆಳೆಸಲು ಮುಂದಾಗಿದ್ದ ವೇಳೆ ಕುಡಚಿ ಪೊಲೀಸರ ಸಹಾಯದಿಂದ ಮಿಂಚಿನ ಕಾರ್ಯಾಚರಣೆ ನಡೆಸಿ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ: ಬೆಸ್ಕಾಂ ನಿರ್ಲಕ್ಷ್ಯಕ್ಕೆ ತಾಯಿ, ಮಗಳು ಬಲಿ- ಐವರು ಅಧಿಕಾರಿಗಳ ಅಮಾನತು

  • ಪತ್ನಿಯ ನಡವಳಿಕೆ ಮೇಲೆ ಸಂಶಯಗೊಂಡು ಚೂಪಾದ ಆಯುಧದಿಂದ ಚುಚ್ಚಿಕೊಂದ ವೃದ್ಧ

    ಪತ್ನಿಯ ನಡವಳಿಕೆ ಮೇಲೆ ಸಂಶಯಗೊಂಡು ಚೂಪಾದ ಆಯುಧದಿಂದ ಚುಚ್ಚಿಕೊಂದ ವೃದ್ಧ

    ಲಕ್ನೋ: ವೃದ್ಧನೊಬ್ಬ ತನ್ನ ಪತ್ನಿಯ ನಡವಳಿಕೆಯ ಮೇಲೆ ಅನುಮಾನಗೊಂಡು ಅವರನ್ನು ಚೂಪಾದ ಆಯುಧದಿಂದ ಚುಚ್ಚಿ ಕೊಲೆ ಮಾಡಿದ ಘಟನೆ ಉತ್ತರ ಪ್ರದೇಶದ ಫತೇಪುರ್ ಜಿಲ್ಲೆಯ ಅಸೋಥರ್ ಪ್ರದೇಶದಲ್ಲಿ ತಡವಾಗಿ ಬೆಳಕಿಗೆ ಬಂದಿದೆ.

    ಲಲಿತಾ ದೇವಿ (66) ಕೊಲೆಗೀಡಾದ ವೃದ್ಧೆ. ಶಿವ ಬರನ್ (75) ಕೊಲೆಗೈದ ವೃದ್ಧ. ದಂಪತಿ ಈ ಒಂದು ವಿಚಾರಕ್ಕಾಗಿ ಕಳೆದ 5 ತಿಂಗಳಿಂದ ಜಗಳವಾಡುತ್ತಿದ್ದರು. ಈ ಹಿನ್ನೆಲೆ ಆರೋಪಿಯು ಲಲಿತಾ ಅವರನ್ನು ಕೊಲೆಗೈದಿದ್ದು, ವರಾಂಡಾದಲ್ಲಿ ಗ್ರಾಮಸ್ಥರು ವೃದ್ಧೆಯ ರಕ್ತವನ್ನು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಈ ವೇಳೆ ಗ್ರಾಮಸ್ಥರು ಮಂಚದ ಕೆಳಗೆ ರಕ್ತದ ಮಡುವಿನಲ್ಲಿ ಬಿದ್ದಿದ್ದ ಸಂತ್ರಸ್ತೆಯ ಶವವನ್ನು ಕಂಡುಕೊಂಡಿದ್ದಾರೆ. ನಂತರದಲ್ಲಿ ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ತಕ್ಷಣ ಸ್ಥಳಕ್ಕೆ ಧಾವಿಸಿ ಆರೋಪಿಯನ್ನು ಬಂಧಿಸಿದ್ದಾರೆ. ಇದನ್ನೂ ಓದಿ: ಮಗನ ಕಾಯಿಲೆ ಗುಣಪಡಿಸ್ತೀನೆಂದು ಮಹಿಳೆ ಮೇಲೆ ಸ್ವಯಂಘೋಷಿತ ದೇವಮಾನವ ರೇಪ್

    ವಿಚಾರಣೆಯ ಸಮಯದಲ್ಲಿ ಆರೋಪಿ ವೃದ್ಧನು ತಪ್ಪೊಪ್ಪಿಕೊಂಡಿದ್ದಾನೆ. ತನಗೆ ಸ್ವಲ್ಪ ಸಮಯದಿಂದ ಲಲಿತಾಳ ನಡುವಳಿಕೆ ಬಗ್ಗೆ ಅನುಮಾನವಿತ್ತು. ಅವಳು ಹೊರಗಡೆ ಹೋದಾಗಲೆಲ್ಲಾ ಒಬ್ಬ ವ್ಯಕ್ತಿ ಜೊತೆ ತಿರುಗುತ್ತಿದ್ದಳು ಎಂದು ಬಹಿರಂಗಪಡಿಸಿದ್ದಾನೆ. ಈ ವಿಷಯದ ಬಗ್ಗೆ ಆಗಾಗ ವೃದ್ಧ ದಂಪತಿಯ ನಡುವೆ ಜಗಳಗಳು ನಡೆಯುತ್ತಿದ್ದವು. ಹಾಗಾಗಿ ಬುಧವಾರ ರಾತ್ರಿ ಲಲಿತಾ ಅವರು ವರಾಂಡಾದಲ್ಲಿ ಗಾಢ ನಿದ್ದೆಯಲ್ಲಿದ್ದಾಗ ಕೊಲೆ ಮಾಡಿದ್ದಾನೆ.ಇದನ್ನೂ ಓದಿ: ವಿಮಾನ ಪತನದ ಸ್ಥಳದಲ್ಲಿ 16 ಮೃತದೇಹ ಪತ್ತೆ- ಪ್ರಯಾಣಿಕರೆಲ್ಲರೂ ಮೃತಪಟ್ಟಿರುವ ಶಂಕೆ

    ಪೊಲೀಸ್ ಅಧೀಕ್ಷಕ (ಎಸ್‍ಪಿ), ರಾಜೇಶ್ ಕುಮಾರ್ ಸಿಂಗ್, ಆರೋಪಿಯು ತನ್ನ ಹೆಂಡತಿಯ ನಡುವಳಿಕೆಯ ಬಗ್ಗೆ ಅನುಮಾನ ಹೊಂದಿದ್ದಕ್ಕಾಗಿ ಹರಿತವಾದ ಆಯುಧದಿಂದ ಕೊಂದಿದ್ದಾನೆ. ಆರೋಪಿಯನ್ನು ಈಗಾಗಲೇ ಬಂಧಿಸಲಾಗಿದ್ದು, ಮುಂದಿನ ಕ್ರಮ ಕೈಗೊಂಡಿದ್ದೇವೆ ಎಂದು ತಿಳಿಸಿದ್ದಾರೆ.

  • ಕುಡಿತ ಬಿಟ್ಟರೆ ಮಾತ್ರ ಮನೆಗೆ ಬರುತ್ತೇನೆ ಎಂದಿದ್ದಕ್ಕೆ ಪತ್ನಿಯನ್ನೇ ಕೊಲೆಗೈದ

    ಕುಡಿತ ಬಿಟ್ಟರೆ ಮಾತ್ರ ಮನೆಗೆ ಬರುತ್ತೇನೆ ಎಂದಿದ್ದಕ್ಕೆ ಪತ್ನಿಯನ್ನೇ ಕೊಲೆಗೈದ

    ವಿಜಯಪುರ: ಪಾಪಿ ಗಂಡನೊಬ್ಬ ಹೆಂಡತಿಯನ್ನು ಕೊಲೆಗೈದ ಘಟನೆ ಜಿಲ್ಲೆಯ ಸಿಂದಗಿ ತಾಲೂಕಿನ ಚಾಂದಕವಠೆ ಗ್ರಾಮದಲ್ಲಿ ನಡೆದಿದೆ.

    ಶೀಲವಂತಿ ಕನ್ನಾಳ ಕೊಲೆಯಾದ ಪತ್ನಿ. ಪತಿ ಗುರುಬಾಳ ಕನ್ನಾಳನು ಹರಿತವಾದ ಆಯುಧದಿಂದ ಪತ್ನಿಗೆ ತಿವಿದು ಹತ್ಯೆಗೈದಿದ್ದಾನೆ. ಗಂಡನ ಕುಡಿತದ ಕಾರಣ ಸಂಸಾರದಲ್ಲಿ ಬಿರುಕು ಉಂಟಾಗಿತ್ತು. ಹೀಗಾಗಿ ಪತ್ನಿಯು ತನ್ನ ತವರು ಮನೆಯಲ್ಲಿದ್ದಳು. ಈ ಸಂದರ್ಭದಲ್ಲಿ ಅವನು ಹೆಂಡತಿಯ ಮನವೊಲಿಸಿ ತನ್ನ ಮನೆಗೆ ಕರೆದುಕೊಂಡು ಹೋಗಲು ಬಂದಿದ್ದನು. ಆಗ ಪತ್ನಿಯು ಕುಡಿತ ಬಿಟ್ಟರೆ ಮನೆಗೆ ಬರುವೆ ಅಂತ ಕರಾರು ಹಾಕಿದ್ದರು. ಇದನ್ನೂ ಓದಿ: ಫುಟ್‍ಪಾತ್ ಮೇಲೆ ಕಾರು ಚಾಲನೆ – ಅಪ್ರಾಪ್ತನ ಹುಚ್ಚಾಟಕ್ಕೆ ನಾಲ್ವರು ಬಲಿ

    ಪತ್ನಿಯ ಕರಾರಿಗೆ ಒಪ್ಪದ ಅವನು, ಶೀಲವಂತಿಯನ್ನು ಕೊಲೆ ಮಾಡಿ ಪರಾರಿಯಾಗಿದ್ದಾನೆ. ಘಟನೆಯು ಸಿಂದಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.