Tag: ಆಯುಬ್ ಖಾನ್

  • ಮಸೀದಿ ಅಧ್ಯಕ್ಷ ಸ್ಥಾನದ ಕಿತ್ತಾಟಕ್ಕೆ ಬಿತ್ತು ಹೆಣ – ಮಾಜಿ ಕಾರ್ಪೋರೇಟರ್ ಪತಿ ಕೊಲೆ ರಹಸ್ಯ ಔಟ್‌

    ಮಸೀದಿ ಅಧ್ಯಕ್ಷ ಸ್ಥಾನದ ಕಿತ್ತಾಟಕ್ಕೆ ಬಿತ್ತು ಹೆಣ – ಮಾಜಿ ಕಾರ್ಪೋರೇಟರ್ ಪತಿ ಕೊಲೆ ರಹಸ್ಯ ಔಟ್‌

    ಬೆಂಗಳೂರು: ಮಾಜಿ ಕಾರ್ಪೋರೇಟರ್ ಪತಿ ಆಯುಬ್ ಖಾನ್ ಕೊಲೆಗೆ ಮಸೀದಿಯೊಂದರ ಅಧ್ಯಕ್ಷಗಿರಿ ಪಟ್ಟಕ್ಕಾಗಿ ನಡೆದ ಘರ್ಷಣೆಯೇ ಕಾರಣ ಎನ್ನುವುದು ಇದೀಗ ಬಯಲಾಗಿದೆ.

    ಆಯೂಬ್ ಖಾನ್ ಕಳೆದ ಕೆಲ ವರ್ಷಗಳಿಂದ ಟಿಪ್ಪುನಗರದ ಖುದಾಯತ್ ಮಸೀದಿಗೆ ಅಧ್ಯಕ್ಷನಾಗಿದ್ದ. ಆದರೆ ಈ ಅಧ್ಯಕ್ಷ ಸ್ಥಾನದ ಮೇಲೆ ಆಯೂಬ್ ಖಾನ್ ಸಹೋದರ ಪ್ಯಾರೂಖಾನ್ ಮಗ ಮಥೀನ್ ಖಾನ್ ಕಣ್ಣಿಟ್ಟಿದ್ದ. ಅಷ್ಟೇ ಅಲ್ಲದೇ ಮಸೀದಿಯ ಪ್ರೆಸಿಡೆಂಟ್ ಹುದ್ದೆ ಬಿಟ್ಟುಕೊಡುವಂತೆ ಆಯೂಬ್ ಖಾನ್ ಬಳಿ ಹಲವು ಬಾರಿ ಕೇಳಿದ್ದ. ಇದಕ್ಕೆ ಆಯೂಬ್ ಖಾನ್ ನಿರಾಕರಿಸಿದ್ದ. ಅಷ್ಟೇ ಅಲ್ಲದೇ ಆಯೂಬ್ ಖಾನ್ ತನ್ನ ಮಗ ಸಿದ್ದಿಕ್ ಖಾನ್‌ನ್ನು ಮಸೀದಿಗೆ ಅಧ್ಯಕ್ಷನಾಗಿ ಮಾಡಲು ಬಯಸಿದ್ದ.

    POLICE JEEP

    ಈ ಹಿನ್ನೆಲೆಯಲ್ಲಿ ಕಳೆದ ಆರು ತಿಂಗಳಿನಿಂದ ಇದೇ ವಿಚಾರಕ್ಕೆ ಆಯೂಬ್ ಹಾಗೂ ಮಥೀನ್ ನಡುವೆ ಜಗಳವಾಗುತ್ತಿತ್ತು. ನಿನ್ನೆ ಇದು ಜಗಳ ಮೀತಿ ಮೀರಿದ್ದು, ಟಿಪ್ಪುನಗರದ ಮಸೀದಿಯಿಂದ ನಮಾಜ್ ಮುಗಿಸಿ ಬರುವ ವೇಳೆ ಆಯೂಬ್‍ಗೆ ಮಥೀನ್‌ ಚಾಕು ಇರಿದು ಮನಸ್ಸೋ ಇಚ್ಛೆ ಥಳಿಸಿದ್ದ. ಅಲ್ಲದೆ ಆಯುಬ್‌ನ ಹೊಟ್ಟೆ ಹಾಗೂ ಮರ್ಮಾಂಗಕ್ಕೆ ಚಾಕುವಿನಿಂದ ಇರಿದಿದ್ದನು. ಚಾಕು ಇರಿದ ಜಾಗದಲ್ಲಿ ಸತತವಾಗಿ ರಕ್ತಸ್ರಾವವಾಗಿತ್ತು. ಆಸ್ಪತ್ರೆಗೆ ದಾಖಲಿಸಿದ್ದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದರು. ಇದನ್ನೂ ಓದಿ: ಎದುರಾಳಿಯ ಒಂದೇ ಒಂದು ಏಟಿಗೆ ಕಿಕ್ ಬಾಕ್ಸರ್ ಪ್ರಾಣವೇ ಹೋಯ್ತು!

    crime

    ಘಟನೆಗೆ ಸಂಬಂಧಿಸಿ ಮೃತ ಆಯೂಬ್ ಖಾನ್ ಪತ್ನಿ ನಜೀಮಾ ಸ್ಥಳೀಯ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಚಾಮರಾಜಪೇಟೆ ಪೊಲೀಸರಿಂದ ಎಫ್.ಐ.ಆರ್ ದಾಖಲಿಸಿ ಆರೋಪಿಗಾಗಿ ಹುಡುಕಾಟ ನಡೆಸಿದ್ದಾರೆ. ಇದನ್ನೂ ಓದಿ: ಹಲ್ಲೆಗೊಳಗಾಗಿದ್ದ ಮಾಜಿ ಕಾರ್ಪೋರೇಟರ್ ಪತಿ ಆಯುಬ್ ಖಾನ್ ನಿಧನ

    Live Tv
    [brid partner=56869869 player=32851 video=960834 autoplay=true]

  • ಹಲ್ಲೆಗೊಳಗಾಗಿದ್ದ ಮಾಜಿ ಕಾರ್ಪೋರೇಟರ್ ಪತಿ ಆಯುಬ್ ಖಾನ್ ನಿಧನ

    ಹಲ್ಲೆಗೊಳಗಾಗಿದ್ದ ಮಾಜಿ ಕಾರ್ಪೋರೇಟರ್ ಪತಿ ಆಯುಬ್ ಖಾನ್ ನಿಧನ

    ಬೆಂಗಳೂರು: ಸಹೋದರನಿಂದಲೇ ಹಲ್ಲೆಗೊಳಗಾಗಿದ್ದ ಮಾಜಿ ಕಾರ್ಪೊರೇಟರ್ ಪತಿ ಆಯುಬ್ ಖಾನ್ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.

    ಬಿಬಿಎಂಪಿ 139 ವಾರ್ಡ್‍ನ ಮಾಜಿ ಕಾರ್ಪೋರೇಟರ್ ನಜೀಮಾ ಪತಿ ಆಯುಬ್ ಖಾನ್ ಮೇಲೆ ಸಹೋದರನಿಂದಲೇ ಮಾರಣಾಂತಿಕ ಹಲ್ಲೆ ನಡೆದಿತ್ತು. ಚಾಕು ಇರಿದು ಮನಸ್ಸೋ ಇಚ್ಛೆ ಥಳಿಸಿದ್ದರು. ಅಲ್ಲದೆ ಆಯುಬ್ ಸಹೋದರ ಹೊಟ್ಟೆ ಹಾಗೂ ಮೂತ್ರ ವಿಸರ್ಜನಾ ಸಂಚಿ ಭಾಗಕ್ಕೆ ಚಾಕುವಿನಿಂದ ಇರಿದಿದ್ದನು. ಚಾಕು ಇರಿದ ಜಾಗದಲ್ಲಿ ಸತತವಾಗಿ ರಕ್ತಸ್ರಾವವಾಗುತ್ತಿತ್ತು.

    ಘಟನೆ ನಡೆದ ಕೂಡಲೇ ಆಯುಬ್ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ ಇದೀಗ ಚಿಕಿತ್ಸೆ ಫಲಕಾರಿಯಾಗದೇ ಅವರು ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳೆದಿದ್ದಾರೆ. ಆಸ್ಪತ್ರೆ ಬಳಿ ಆಯುಬ್ ಖಾನ್ ಸಂಬಂಧಿಕರು ಜಮಾಯಿಸಿದ್ದಾರೆ. ಇದನ್ನೂ ಓದಿ: ಕರಾವಳಿ, ಮಲೆನಾಡಿನಲ್ಲಿ ಮುಂದುವರಿದ ಮಳೆ ಅವಾಂತರ – 10 ದಿನದ ಹಿಂದೆ ಕೊಚ್ಚಿಹೋದ ಬಾಲಕಿ ಸುಳಿವು ಇನ್ನೂ ಸಿಕ್ಕಿಲ್ಲ

    ಸದ್ಯ ಘಟನೆ ಸಂಬಂಧ ಆರೋಪಿ ಪತ್ತೆಗಾಗಿ ಚಾಮರಾಜಪೇಟೆ ಪೊಲೀಸರು ಬಲೆ ಬೀಸಿದ್ದಾರೆ. ಇತ್ತ ಆಯುಬ್ ಖಾನ್ ಸಾವನ್ನಪ್ಪಿರುವ ಹಿನ್ನೆಲೆಯಲ್ಲಿ ವಿಕ್ಟೋರಿಯಾ ಆಸ್ಪತ್ರೆ ಬಳಿ ಪೊಲೀಸರಿಂದ ಬಿಗಿ ಭದ್ರತೆ ಕೈಗೊಂಡಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಮೂರು ಡಿ.ಆರ್ ಪೊಲೀಸ್ ವಾಹನ ಸೇರಿದಂತೆ ನೂರಕ್ಕೂ ಹೆಚ್ಚು ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.

    Live Tv
    [brid partner=56869869 player=32851 video=960834 autoplay=true]