Tag: ಆಯುಷ್ಮಾನ್ ಭಾರತ

  • ಆಯುಷ್ಮಾನ್ ಭಾರತ: ಬೀದರ್‌ನ ಸಾಯಿ ಗಣೇಶ ಆಸ್ಪತ್ರೆಗೆ ಪ್ರಶಸ್ತಿ

    ಆಯುಷ್ಮಾನ್ ಭಾರತ: ಬೀದರ್‌ನ ಸಾಯಿ ಗಣೇಶ ಆಸ್ಪತ್ರೆಗೆ ಪ್ರಶಸ್ತಿ

    ಬೀದರ್: ಆಯುಷ್ಮಾನ್ ಭಾರತ (Ayushman Bharat) ಆರೋಗ್ಯ ಕರ್ನಾಟಕ ಯೋಜನೆಯಡಿ ಜಿಲ್ಲೆಯಲ್ಲೇ ಅತಿ ಹೆಚ್ಚು ರೋಗಿಗಳಿಗೆ ವೈದ್ಯಕೀಯ ಸೇವೆ ಒದಗಿಸಿದ್ದಕ್ಕೆ ಚಿದ್ರಿ ರಸ್ತೆಯಲ್ಲಿ ಇರುವ ಸಾಯಿ ಗಣೇಶ ಕಿಡ್ನಿ ಆ್ಯಂಡ್ ಎಂಡ್ರಾಲಜಿ ಆಸ್ಪತ್ರೆಗೆ (Sai Ganesh Kidney And Andrology Hospital) ಪ್ರಶಸ್ತಿ ಲಭಿಸಿದೆ.

    ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಡಾ. ಗಂಜಲಖೇಡ ಪ್ರಶಸ್ತಿ ಪ್ರದಾನ ಮಾಡಿದರು.

     

    ಆಸ್ಪತ್ರೆಯಲ್ಲಿ ಬಿಪಿಎಲ್ ಕಾರ್ಡ್(BPL Card) ಹೊಂದಿದವರಿಗೆ ಯೋಜನೆಯಡಿ ನಿತ್ಯ ಉಚಿತ ಶಸ್ತ್ರಚಿಕಿತ್ಸೆ ಮಾಡಲಾಗುತ್ತಿದೆ. ಯೋಜನೆಯ ಯಶಸ್ವಿ ಅನುಷ್ಠಾನಕ್ಕೆ ಶ್ರಮಿಸಲಾಗುತ್ತಿದೆ ಎಂದು ಪ್ರಶಸ್ತಿ ಸ್ವೀಕರಿಸಿದ ಆಸ್ಪತ್ರೆಯ ಮುಖ್ಯಸ್ಥರೂ ಆದ ಕಿಡ್ನಿ ತಜ್ಞ ಡಾ. ಶಿವಪುತ್ರ ಖಪ್ಲೆ ಹೇಳಿದರು.  ಇದನ್ನೂ ಓದಿ: ಲೋಕಸಮರಕ್ಕೆ ಆಪರೇಷನ್ ಹಸ್ತ – ಕರಾವಳಿಯಿಂದ ಸ್ಪರ್ಧಿಸ್ತಾರಾ ಬಿಜೆಪಿಯ ಆ ಸಂಸದ?

    ಈ ಪ್ರಶಸ್ತಿ ಆಸ್ಪತ್ರೆಯ ಜವಾಬ್ದಾರಿಯನ್ನು ಇನ್ನಷ್ಟು ಹೆಚ್ಚಿಸಿದೆ. ಬರುವ ದಿನಗಳಲ್ಲಿ ಇನ್ನೂ ಹೆಚ್ಚಿನ ರೋಗಗಳಿಗೆ ಯೋಜನೆ ಲಾಭ ದೊರಕಿಸಿಕೊಡುವ ದಿಸೆಯಲ್ಲಿ ಕಾರ್ಯ ನಿರ್ವಹಿಸಲಾಗುವುದು ಎಂದು ತಿಳಿಸಿದರು.

     

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮೋದಿ ಸರ್ಕಾರದ ‘ಆಯುಷ್ಮಾನ್ ಭಾರತ್’ ಯೋಜನೆಗೆ ಬಿಲ್ ಗೇಟ್ಸ್ ಮೆಚ್ಚುಗೆ

    ಮೋದಿ ಸರ್ಕಾರದ ‘ಆಯುಷ್ಮಾನ್ ಭಾರತ್’ ಯೋಜನೆಗೆ ಬಿಲ್ ಗೇಟ್ಸ್ ಮೆಚ್ಚುಗೆ

    ನವದೆಹಲಿ: ಪ್ರಧಾನಿ ಮೋದಿ ಸರ್ಕಾರದ ಮಹತ್ವಾಕಾಂಕ್ಷೆಯ ಆಯುಷ್ಮಾನ್ ಭಾರತ್ ಯೋಜನೆ 100 ದಿನಗಳನ್ನು ಪೂರೈಸಿದ್ದು, ಇದೇ ಸಂದರ್ಭದಲ್ಲಿ ಮೈಕ್ರೋಸಾಫ್ಟ್ ಸಹ ಸಂಸ್ಥಾಪಕ ಬಿಲ್ ಗೇಟ್ಸ್ ಮೆಚ್ಚುಗೆ ಸೂಚಿಸಿದ್ದಾರೆ.

    ಯೋಜನೆ ಜಾರಿಯಾಗಿ 100 ದಿನಗಳನ್ನು ಪೂರೈಸಿದ್ದು, ಇದುವರೆಗೂ 6,85,000 ಮಂದಿಗೆ ಇದರ ಸೌಲಭ್ಯ ತಲುಪಿದೆ. ಈ ಕುರಿತು ಕೇಂದ್ರ ಸರ್ಕಾರದ ಆರೋಗ್ಯ ಸಚಿವ ಜೆಪಿ ನಡ್ಡಾ ಟ್ವೀಟ್ ಮಾಡಿ ಮಾಹಿತಿ ನೀಡಿದ್ದರು.

    ಸಚಿವರ ಟ್ವೀಟ್ ಅನ್ನು ರೀಟ್ವೀಟ್ ಮಾಡಿ ಪ್ರತಿಕ್ರಿಯೆ ನೀಡಿದ ಬಿಲ್ ಗೇಟ್ಸ್, ಆಯುಷ್ಮಾನ್ ಭಾರತ್ ಯೋಜನೆ ಕೇವಲ 100 ದಿನಗಳಲ್ಲಿ ಇಷ್ಟು ಮಂದಿಯನ್ನು ತಲುಪಿರುವುದು ಸಂತಸ ತಂದಿದೆ. ಭಾರತ ಸರ್ಕಾರಕ್ಕೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ಪ್ರಧಾನ ಮಂತ್ರಿಗಳ ಟ್ವಿಟ್ಟರ್ ಖಾತೆ ಹಾಗೂ ಸಚಿವಾಲಯದ ಆಯುಷ್ಮಾನ್ ಭಾರತ್ ಟ್ವಿಟ್ಟರ್ ಖಾತೆಗೆ ಟ್ಯಾಗ್ ಮಾಡಿದ್ದಾರೆ.

    ದಿನದಿಂದ ದಿನಕ್ಕೆ ಯೋಜನೆ ಫಲಾನುಭವಿಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಯೋಜನೆ ಮೂಲಕ ಹಲವು ಮಂದಿ ಆರೋಗ್ಯ ಸೌಲಭ್ಯ ಪಡೆಯುತ್ತಿದ್ದಾರೆ ಎಂದು ಜೆಪಿ ನಡ್ಡಾ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ಬಿಲ್ ಗೇಟ್ಸ್ ಮಾತ್ರವಲ್ಲದೇ ವಿಶ್ವ ಆರೋಗ್ಯ ಸಂಸ್ಥೆ ಮಹಾ ನಿರ್ದೇಶಕರು ಕೂಡ ಆಯುಷ್ಮಾನ್ ಭಾರತ್ ಯೋಜನೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಜನರು ಆರೋಗ್ಯ ಸೇವೆಯನ್ನು ಪಡೆಯಲು ಯೋಜನೆ ಸಹಕಾರಿ ಆಗಿದೆ ಎಂದು ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ಮೋದಿ ಅವರಿಗೆ ಅಭಿನಂಧನೆ ಸಲ್ಲಿಸಿದ್ದರು. ಇದನ್ನೂ ಓದಿ: ಏನಿದು ಆಯುಷ್ಮಾನ್ ಭಾರತ್ ಯೋಜನೆ? ಯಾರಿಗೆ ವಿಮೆ ಸಿಗುತ್ತೆ? ಯಾವೆಲ್ಲಾ ರೋಗಗಳಿಗೆ ಚಿಕಿತ್ಸೆ?

    ಪ್ರಧಾನಿ ನರೇಂದ್ರ ಮೋದಿ ಅವರು 2018 ಸೆ. 23 ರಂದು ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಜನ್ಮದಿನದ ಅಂಗವಾಗಿ ಆಯುಷ್ಮಾನ್ ಭಾರತ್ ಯೋಜನೆಗೆ ಚಾಲನೆ ನೀಡಿದ್ದರು. ಈ ಯೋಜನೆ ದೇಶದ 10 ಕೋಟಿ ಕುಟುಂಬಗಳ 50 ಕೋಟಿ ಜನರಿಗೆ ಆರೋಗ್ಯ ವಿಮೆ ಲಭ್ಯವಾಗಲಿದ್ದು, ಕುಟುಂಬವೊಂದಕ್ಕೆ ವಾರ್ಷಿಕ 5 ಲಕ್ಷ ರೂ. ಖರ್ಚು ಭರಿಸಲಾಗುತ್ತದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಆಯುಷ್ಮಾನ್ ಭಾರತ್ ಯೋಜನೆಯೊಂದಿಗೆ ಆರೋಗ್ಯ ಕರ್ನಾಟಕ ವಿಲೀನ!

    ಆಯುಷ್ಮಾನ್ ಭಾರತ್ ಯೋಜನೆಯೊಂದಿಗೆ ಆರೋಗ್ಯ ಕರ್ನಾಟಕ ವಿಲೀನ!

    ಬೆಂಗಳೂರು: ಕೇಂದ್ರ ಸರ್ಕಾರದ ಮಹತ್ವಕಾಂಕ್ಷಿ ಯೋಜನೆ ಆಯುಷ್ಮಾನ್ ಭಾರತ್ ಯೋಜನೆಯನ್ನು ರಾಜ್ಯ ಸರ್ಕಾರ ಒಪ್ಪಿಕೊಳ್ಳುವತ್ತ ಹೆಜ್ಜೆ ಹಾಕಿದ್ದು, ರಾಜ್ಯದ ಆರೋಗ್ಯ ಕರ್ನಾಟಕ ಯೋಜನೆಯನ್ನ ಆಯುಷ್ಮಾನ್ ಭಾರತ್ ಯೋಜನೆ ಜೊತೆ ವಿಲೀನ ಮಾಡಲು ನಿರ್ಧರಿಸಲಾಗಿದೆ.

    ನಗರದ ಗೃಹ ಕಚೇರಿ ಕೃಷ್ಣದಲ್ಲಿ ಮುಖ್ಯಮಂತ್ರಿ ಎಚ್‍ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ಇಂದು ನಡೆದ ಆರೋಗ್ಯ ಇಲಾಖೆ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಸರ್ಕಾರ ತೆಗೆದುಕೊಂಡಿದೆ. ಸಿಎಂರೊಂದಿಗೆ ನಡೆದ ಸಭೆಯಲ್ಲಿ ಆರೋಗ್ಯ ಕರ್ನಾಟಕ ಯೋಜನೆಯನ್ನ ಆಯುಷ್ಮಾನ್ ಭಾರತ್ ಯೋಜನೆ ಜೊತೆ ವಿಲೀನ ಮಾಡುವ ನಿರ್ಧಾರ ಮಾಡಲಾಗಿದ್ದು, ಇದಕ್ಕೂ ಮುನ್ನ ವೈದ್ಯರೊಂದಿಗೆ ಚರ್ಚೆ ನಡೆಸಿ ತೀರ್ಮಾನ ಮಾಡಲು ಸಿಎಂ ಸೂಚನೆ ನೀಡಿದ್ದಾರೆ.

    ರಾಜ್ಯ ಹಾಗೂ ಕೇಂದ್ರ ಸರ್ಕಾರದ ಎರಡು ಮಹತ್ವದ ಯೋಜನೆಗಳ ವಿಲೀನದಿಂದ ಉಂಟಾಗಬಹುದಾದ ಸಾಧಕ ಬಾಧಕಗಳನ್ನು ಕೂಲಂಕಷವಾಗಿ ಪರಿಶೀಲಿಸಿಲು ಸೂಚನೆ ಸಿಎಂ ಸೂಚನೆ ನೀಡಿದ್ದಾರೆ. ಬಡ ರೋಗಿಗಳಿಗೆ ಹೆಚ್ಚಿನ ಅನುಕೂಲವಾಗುವಂತೆ ಕಾರ್ಯಕ್ರಮ ರೂಪಿಸಲು ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಹೀಗಾಗಿ ಬಹುತೇಕ ಆಯುಷ್ಮಾನ್ ಭಾರತ್ ಯೋಜನೆಯೊಂದಿಗೆ ರಾಜ್ಯ ಸರ್ಕಾರ ಯೋಜನೆ ವಿಲೀನಗೊಳ್ಳುವುದು ಖಚಿತವಾಗಿದೆ. ಇಂದು ನಡೆದ ಸಭೆಯಲ್ಲಿ ಆರೋಗ್ಯ ಸಚಿವ ಶಿವಾನಂದ ಪಾಟೀಲ್ ಹಾಗೂ ಇಲಾಖೆ ಅಧಿಕಾರಿಗಳು ಭಾಗಿಯಾಗಿದ್ದರು. ಇದನ್ನೂ ಓದಿ: ಏನಿದು ಆಯುಷ್ಮಾನ್ ಭಾರತ್ ಯೋಜನೆ? ಯಾರಿಗೆ ವಿಮೆ ಸಿಗುತ್ತೆ? ಯಾವೆಲ್ಲಾ ರೋಗಗಳಿಗೆ ಚಿಕಿತ್ಸೆ?

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

    https://www.youtube.com/watch?v=H6_XYSZLZu8