Tag: ಆಯುಷ್ಮಾನ್ ಭಾರತ್

  • ರಾಜ್ಯದಲ್ಲಿ `ಆಯುಷ್ಮಾನ್ ಭಾರತ್’ ಯೋಜನೆ ಜಾರಿಯಾಗದಿರುವುದಕ್ಕೆ ಲೋಕಸಭೆಯಲ್ಲಿ ಕ್ಯಾ.ಚೌಟ ಕಳವಳ

    ರಾಜ್ಯದಲ್ಲಿ `ಆಯುಷ್ಮಾನ್ ಭಾರತ್’ ಯೋಜನೆ ಜಾರಿಯಾಗದಿರುವುದಕ್ಕೆ ಲೋಕಸಭೆಯಲ್ಲಿ ಕ್ಯಾ.ಚೌಟ ಕಳವಳ

    – ರಾಜ್ಯ ಸರ್ಕಾರದಿಂದ ಹಿರಿಯ ನಾಗರಿಕರಿಗೆ ಸಾರ್ವತ್ರಿಕ ಆರೋಗ್ಯ ಸೇವೆ ನಿರಾಕರಣೆ

    ನವದೆಹಲಿ: ದೇಶದಲ್ಲಿ 70 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಉಚಿತ ಚಿಕಿತ್ಸೆ ನೀಡುವ ಕೇಂದ್ರ ಸರ್ಕಾರದ ಮಹತ್ವಕಾಂಕ್ಷಿ ಆಯುಷ್ಮಾನ್ ಯೋಜನೆಗೆ (Ayushman Bharat Yojana) ಕರ್ನಾಟಕ ಸರ್ಕಾರವು ತನ್ನ ಪಾಲು ನೀಡದ ಕಾರಣ ಯೋಜನೆ ಅನುಷ್ಠಾನ ಪ್ರಕ್ರಿಯೆ ಸ್ಥಗಿತಗೊಂಡಿರುವ ಬಗ್ಗೆ ದಕ್ಷಿಣ ಕನ್ನಡ ಸಂಸದ ಕ್ಯಾ.ಬ್ರಿಜೇಶ್ ಚೌಟ (Brijesh Chowta) ಅವರು ಲೋಕಸಭೆಯಲ್ಲಿ ಪ್ರಸ್ತಾಪಿಸಿ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.

    ಈ ಬಗ್ಗೆ ನಿಯಮ 377ರ ಅಡಿಯಲ್ಲಿ ಲೋಕಸಭೆಯಲ್ಲಿ ಈ ಗಂಭೀರ ವಿಷಯವನ್ನು ಪ್ರಸ್ತಾಪಿಸಿರುವ ಸಂಸದರು, ದೇಶಾದ್ಯಂತ 70 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಉಚಿತ ಆರೋಗ್ಯ ಸೇವೆ ಒದಗಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿ (Narendra Modi) ನೇತೃತ್ವದ ಕೇಂದ್ರ ಸರ್ಕಾರವು ಕಳೆದ ವರ್ಷ `ಆಯುಷ್ಮಾನ್ ಭಾರತ್ ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆ’ ಜಾರಿಗೆ ತಂದಿದೆ ಎಂದಿದ್ದಾರೆ. ಇದನ್ನೂ ಓದಿ: ಕರ್ನಾಟಕದಲ್ಲಿ 39,577 ಕೋಟಿ ಜಿಎಸ್‌ಟಿ ವಂಚನೆ, ವರ್ತಕರಿಗೆ ನಾವು ನೋಟಿಸ್‌ ನೀಡಿಲ್ಲ: ಸೀತಾರಾಮನ್‌

    ಆದರೆ ಕರ್ನಾಟಕದಲ್ಲಿರುವ (Karnataka) ಹಿರಿಯ ನಾಗರಿಕರಿಗೆ ಈ ಯೋಜನೆಯ ಫಲಾನುಭವ ಪಡೆಯುವುದಕ್ಕೆ ಸಾಧ್ಯವಾಗುತ್ತಿಲ್ಲ. ಈ ಯೋಜನೆಗೆ ರಾಜ್ಯ ಸರ್ಕಾರ ತನ್ನ ಪಾಲಿನ 40%ರಷ್ಟು ಪಾಲನ್ನು ನೀಡುವುದಕ್ಕೆ ನಿರಾಕರಿಸಿದೆ. ರಾಜ್ಯ ಸರ್ಕಾರದ ನಿರ್ಧಾರದಿಂದ ಈ ಯೋಜನೆಯನ್ನು ಅವಲಂಬಿಸಿಕೊಂಡಿರುವ ಲಕ್ಷಾಂತರ ಹಿರಿಯ ನಾಗರಿಕರಿಗೆ ಅಗತ್ಯ ಜೀವ ರಕ್ಷಕ ಚಿಕಿತ್ಸೆ ಪಡೆಯಲು ಸಾಧ್ಯವಾಗದೆ ಈ ಸೌಲಭ್ಯಗಳಿಂದ ವಂಚಿತರಾಗುತ್ತಿದ್ದಾರೆ ಎಂದು ಕಳಕಳ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ನನ್ನ ವಜಾದ ಹಿಂದೆ ಪಿತೂರಿ, ಷಡ್ಯಂತ್ರವಿದೆ – ಯಾರು ಹಿಂದಿದ್ದಾರೆ ಗೊತ್ತಿದೆ: ರಾಜಣ್ಣ ಬಾಂಬ್‌

    ಮಂಗಳೂರು ಭಾಗದಲ್ಲಿ 70 ವರ್ಷ ದಾಟಿರುವ ಸುಮಾರು 80 ಸಾವಿರ ಹಿರಿಯ ನಾಗರಿಕರಿದ್ದಾರೆ. ಆದರೆ, ಕರ್ನಾಟಕ ಸರ್ಕಾರದ ತೀರ್ಮಾನದಿಂದಾಗಿ ಈ ಆಯುಷ್ಮಾನ್ ಭಾರತ್ ಯೋಜನೆಯಡಿ ವಾರ್ಷಿಕವಾಗಿ 5 ಲಕ್ಷ ರೂ. ವಿಮಾ ಸೌಲಭ್ಯದಡಿ ಆಸ್ಪತ್ರೆಗೆ ದಾಖಲಾಗಿ ಉಚಿತ ಚಿಕಿತ್ಸೆ ಪಡೆದುಕೊಳ್ಳುವುದಕ್ಕೆ ಸಾಧ್ಯವಾಗುತ್ತಿಲ್ಲ. ಮೋದಿ ಅವರು ದೇಶದ ಬಡವರ್ಗದವರಿಗೆ ತಮ್ಮ ವೃದ್ಧಾಪ್ಯ ಜೀವನದಲ್ಲಿ ಎದುರಾಗುವ ಖಾಯಿಲೆಗಳಿಗೆ ಯಾರ ಆಶ್ರಯವೂ ಇಲ್ಲದೆ ಗುಣಮಟ್ಟದ ಚಿಕಿತ್ಸೆ ಪಡೆಯಬೇಕೆಂಬ ಬಹಳ ದೊಡ್ಡ ಆಶಯ, ಕಳಕಳಿಯೊಂದಿಗೆ ಆಯುಷ್ಮಾನ್ ಯೋಜನೆಯನ್ನು ಜಾರಿಗೊಳಿಸಿದ್ದಾರೆ. ಆದರೆ, ಆಯುಷ್ಮಾನ್ ಭಾರತ್ ಯೋಜನೆ ಜಾರಿ ವಿಚಾರದಲ್ಲಿ ಕರ್ನಾಟಕ ಸರ್ಕಾರದ ನಿರ್ಧಾರದಿಂದಾಗಿ ಪ್ರಧಾನಿಯವರ ವಿಷನ್ ನೆರವೇರಿಸುವುದಕ್ಕೆ ಹಿನ್ನಡೆಯಾಗಿದೆ ಎಂದು ಹೇಳಿದ್ದಾರೆ.

    ಈ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರವು ಕೂಡಲೇ ಕರ್ನಾಟಕದಲ್ಲಿರುವ ಹಿರಿಯ ನಾಗರಿಕರ ಆರೋಗ್ಯದ ಹಕ್ಕನ್ನು ಸಂರಕ್ಷಿಸುವುದಕ್ಕೆ ಅಗತ್ಯ ಕ್ರಮ ತೆಗೆದುಕೊಳ್ಳಬೇಕು. ಅಲ್ಲದೆ, ಬಹಳ ಜನಪ್ರಿಯವಾದ ಈ ಆಯುಷ್ಮಾನ್ ಯೋಜನೆ ಮಾನದಂಡಗಳನ್ನು ಪೂರೈಕೆ ಮಾಡುವಂತೆ ಕರ್ನಾಟಕ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಸದನದಲ್ಲಿ ಒತ್ತಾಯಿಸಿದ್ದಾರೆ.

  • ಆಯುಷ್ಮಾನ್ ಭಾರತ್ ವ್ಯಾಪ್ತಿಗೆ ಹೃದಯಾಘಾತ, ಪಾರ್ಶ್ವವಾಯುಗೆ ಚಿಕಿತ್ಸೆ ತರಲು ಹೆಚ್.ಡಿ.ದೇವೇಗೌಡರ ಒತ್ತಾಯ

    ಆಯುಷ್ಮಾನ್ ಭಾರತ್ ವ್ಯಾಪ್ತಿಗೆ ಹೃದಯಾಘಾತ, ಪಾರ್ಶ್ವವಾಯುಗೆ ಚಿಕಿತ್ಸೆ ತರಲು ಹೆಚ್.ಡಿ.ದೇವೇಗೌಡರ ಒತ್ತಾಯ

    – ಗ್ರಾಮೀಣ ವೈದ್ಯರು, ಆಸ್ಪತ್ರೆ ಸಿಬ್ಬಂದಿ, ದಾದಿಯರ ವೇತನ ಹೆಚ್ಚಳಕ್ಕೆ ಸಲಹೆ
    – ರಾಜ್ಯಸಭೆಯಲ್ಲಿ ಆರೋಗ್ಯ ಕ್ಷೇತ್ರದ ಬಗ್ಗೆ ಮಾಜಿ ಪ್ರಧಾನಿಗಳ ಚರ್ಚೆ
    – ಆರೋಗ್ಯ ಕ್ಷೇತ್ರಕ್ಕೆ ಬಜೆಟ್ ಹಂಚಿಕೆ 99,058 ಕೋಟಿಗೆ ಏರಿಕೆ; ಪ್ರಧಾನಿ ಮೋದಿ ಅವರಿಗೆ ಅಭಿನಂದನೆ ಸಲ್ಲಿಸಿದ ಮಾಜಿ ಪ್ರಧಾನಿ

    ನವದೆಹಲಿ: ಆಯುಷ್ಮಾನ್ ಭಾರತ್ ಕಾರ್ಯಕ್ರಮದಡಿಯಲ್ಲಿ ಹೃದಯಾಘಾತ ಮತ್ತು ಪಾರ್ಶ್ವವಾಯುಗೆ ಚಿಕಿತ್ಸೆ ಪಡೆಯಲು ರಾಷ್ಟ್ರವ್ಯಾಪಿ ಯೋಜನೆ ರೂಪಿಸಬೇಕು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಪ್ರಧಾನಿ ನರೇಂದ್ರ ಮೋದಿ ಅವರಲ್ಲಿ ಮನವಿ ಮಾಡಿದರು.

    ರಾಜ್ಯಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಮಾಜಿ ಪ್ರಧಾನಿಗಳು, ಹೃದಯಾಘಾತ ಮತ್ತು ಪಾರ್ಶ್ವವಾಯುನಿಂದ ಮರಣ ಹೊಂದುವವರು ಭಾರತದಲ್ಲಿ ಹೆಚ್ಚುತ್ತಿದ್ದಾರೆ. ಪ್ರತಿ ವರ್ಷ ನಾವು ಲಕ್ಷಾಂತರ ಜನರನ್ನು ಕಳೆದುಕೊಳ್ಳುತ್ತಿದ್ದೇವೆ ಮತ್ತು ದುರದೃಷ್ಟವಶಾತ್ ಶೇ.30 ರಷ್ಟು ಹೃದಯಾಘಾತಗಳು 45 ವರ್ಷಕ್ಕಿಂತ ಕಡಿಮೆ ವಯಸ್ಸಿನ ವ್ಯಕ್ತಿಗಳಲ್ಲಿ ಸಂಭವಿಸುತ್ತವೆ ಎಂದು ಅವರು ಕಳವಳ ವ್ಯಕ್ತಪಡಿಸಿದರು.

    ಗ್ರಾಮೀಣ ಪ್ರದೇಶದಲ್ಲಿ ರೋಗಿಗಳಿಗೆ ಉತ್ತಮ ಚಿಕಿತ್ಸೆ ನೀಡಿರುವ ಸಲುವಾಗಿ ತಾಲ್ಲೂಕು ಆಸ್ಪತ್ರೆಗಳಲ್ಲಿ 18,000 ರೂ.ಗೆ ರಕ್ತ ಹೆಪ್ಪುಗಟ್ಟುವಿಕೆ ಕರಗಿಸುವ ಇಂಜೆಕ್ಷನ್‌ಗಳು ಲಭ್ಯವಾಗುವಂತೆ ಮಾಡಬೇಕೆಂದು ಕೋರಿದರು. ಹೀಗೆ ಮಾಡುವುದರಿಂದ ಗೋಲ್ಡನ್. ಅವರ್ ನಲ್ಲಿಯೇ, ಆರು ಗಂಟೆಗಳ ಒಳಗಾಗಿ ಜೀವಗಳನ್ನು ಉಳಿಸಬಹುದು. ಆರಂಭಿಕವಾಗಿ ಆಯುಷ್ಮಾನ್ ಭಾರತ್ ಅಡಿಯಲ್ಲಿ ಆಂಜಿಯೋಪ್ಲ್ಯಾಸ್ಟಿ ಮತ್ತು ಸ್ಟಂಟ್ ಅಳವಡಿಸುವುದಕ್ಕಾಗಿ ರೋಗಿಗಳನ್ನು ಹತ್ತಿರದ ನಗರಗಳಿಗೆ ಸ್ಥಳಾಂತರಿಸುವ ವ್ಯವಸ್ಥೆ ಮಾಡಬೇಕು ಎಂದು ಹೇಳಿದರು.

    ಆಯುಷ್ಮಾನ್ ಭಾರತ್ ಅಡಿಯಲ್ಲಿ ಆಂಜಿಯೋಪ್ಲ್ಯಾಸ್ಟಿ ಒಳಗೊಳ್ಳಲ್ಪಟ್ಟಿದ್ದರೂ ಜೀವ ರಕ್ಷಕ ಔಷಧಿಗಳನ್ನು ಸಹ ಈ ಯೋಜನೆಯಲ್ಲಿ ಸೇರಿಸಬೇಕು ಎಂದು ಮನವಿ ಮಾಡಿದರು.

    ಕಳೆದ ಹತ್ತು ವರ್ಷಗಳಲ್ಲಿ ರಾಷ್ಟ್ರದಲ್ಲಿ ಆರೋಗ್ಯ ಕ್ಷೇತ್ರದಲ್ಲಿ ತೀವ್ರಗತಿಯ ಸುಧಾರಣೆಗೆಲೈ ಆಗುತ್ತಿವೆ. 2013-14ರಲ್ಲಿ ಆರೋಗ್ಯ ಕ್ಷೇತ್ರಕ್ಕೆ ಬಜೆಟ್ ಹಂಚಿಕೆ ಕೇವಲ 37,000 ಕೋಟಿ ರೂ.ಗಳಷ್ಟಿತ್ತು. ಈಗ ಪ್ರಧಾನಿ ನರೇಂದ್ರ ಮೋದಿ ನಾಯಕತ್ವದಲ್ಲಿ ಈ ಹಂಚಿಕೆ 99,058 ಕೋಟಿ ರೂ.ಗಳಿಗೆ ಏರಿದೆ ಎಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಹೇಳಿದರು. ಎನ್‌ಡಿಎ ಹಾಗೂ ಯುಪಿಎ ಸರ್ಕಾರಗಳ ಅವಧಿಯಲ್ಲಿ ಆರೋಗ್ಯ ಕ್ಷೇತ್ರದಲ್ಲಿ ಆಗಿರುವ ಬೆಳವಣಿಗೆಯನ್ನು ಹೋಲಿಸಿ ಮಾತನಾಡಿದರು.

    ಗ್ರಾಮೀಣ ಆಸ್ಪತ್ರೆಗಳಲ್ಲಿ ವೈದ್ಯರು ಮತ್ತು ದಾದಿಯರ ಕೊರತೆ ನೀಗಿಸಿ
    ಗ್ರಾಮೀಣ ಪ್ರದೇಶಗಳಲ್ಲಿ ಕೆಲಸ ಮಾಡುವ ಎಂಬಿಬಿಎಸ್ ವೈದ್ಯರ ವೇತನ ಹೆಚ್ಚಳಕ್ಕೆ ದೇವೇಗೌಡರು ಬಲವಾಗಿ ಪ್ರತಿಪಾದಿಸಿದರು. ಗ್ರಾಮೀಣ ವೈದ್ಯರು ಪ್ರಸ್ತುತ ತಿಂಗಳಿಗೆ 50,000-60,000 ರೂ. ವೇತನ ಪಡೆಯುತ್ತಿದ್ದಾರೆ. ಕಡಿಮೆ ಸಂಬಳದಿಂದಾಗಿ ವೈದ್ಯರು ಸಹ ಗ್ರಾಮೀಣ ಆಸ್ಪತ್ರೆಗಳಲ್ಲಿ ಸೇವೆ ಸಲ್ಲಿಸಲು ಸಿದ್ಧರಿಲ್ಲ. ಪಿಎಚ್‌ಸಿಗಳು, ಸಿಎಚ್‌ಸಿಗಳು ಮತ್ತು ತಾಲ್ಲೂಕು ಆಸ್ಪತ್ರೆಗಳಿಗೆ ಹೆಚ್ಚಿನ ವೃತ್ತಿಪರರನ್ನು ಆಕರ್ಷಿಸಲು ಸರ್ಕಾರ ಅವರ ವೇತನವನ್ನು ಕನಿಷ್ಠ 80,000-90,000 ರೂ.ಗೆ ಹೆಚ್ಚಿಸಬೇಕು ಎಂದು ಮಾಜಿ ಪ್ರಧಾನಿಗಳು ಒತ್ತಾಯಿಸಿದರು.

    ಗ್ರಾಮೀಣ ಪ್ರದೇಶಗಳಲ್ಲಿ ಸೇವೆ ಸಲ್ಲಿಸುತ್ತಿರುವ ವೈದ್ಯರಿಗೆ ಪ್ರೋತ್ಸಾಹ ಧನ ನೀಡಬೇಕು. ಗ್ರಾಮೀಣ ಆರೋಗ್ಯವನ್ನು ನಾವು ಸುಧಾರಿಸದೇ ಇದ್ದರೆ, ನಮ್ಮ ಹಳ್ಳಿಗಳು ಸರಿಯಾದ ವೈದ್ಯಕೀಯ ಆರೈಕೆಯ ಕೊರತೆಯಿಂದ ಬಳಲುತ್ತಲೇ ಇರುತ್ತವೆ ಎಂದು ಅವರು ಎಚ್ಚರಿಸಿದರು.

    ಅದೇ ರೀತಿ, ಸರ್ಕಾರಿ ಆಸ್ಪತ್ರೆಗಳಲ್ಲಿ ಕರ್ತವ್ಯ ನಿರ್ವಹಿಸುವ ಸಿಬ್ಬಂದಿ ಮತ್ತು ದಾದಿಯರಿಗೆ ಕಡಿಮೆ ಸಂಬಳದ ಬಗ್ಗೆ ಅವರು ಕಳವಳ ವ್ಯಕ್ತಪಡಿಸಿದರು. ಅವರಿಗೆ ಪ್ರಸ್ತುತ ತಿಂಗಳಿಗೆ ಕೇವಲ 13,000 ರೂ. ವೇತನ ನೀಡಲಾಗುತ್ತದೆ. ಈ ವೇತನವು ದೈನಂದಿನ ವೇತನ ಮಾನದಂಡಕ್ಕಿಂತ ಕಡಿಮೆಯಾಗಿದೆ. ದಾದಿಯರು ತಮ್ಮ ಕುಟುಂಬಗಳನ್ನು ಉಳಿಸಿಕೊಳ್ಳಲು ಮತ್ತು ಸಾರ್ವಜನಿಕ ಆಸ್ಪತ್ರೆಗಳಲ್ಲಿ ಸೇವೆ ಸಲ್ಲಿಸುವುದನ್ನು ಮುಂದುವರಿಸಲು ವೇತನವನ್ನು ಕನಿಷ್ಠ 20,000-28,000 ರೂ.ಗೆ ಹೆಚ್ಚಿಸಬೇಕು ಎಂದು ಕೋರಿದರು.

    HPV ಲಸಿಕೆ ಮತ್ತು ಕ್ಯಾನ್ಸರ್ ತಡೆಗಟ್ಟುವಿಕೆ
    ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟಲು ರಾಷ್ಟ್ರೀಯ ರೋಗನಿರೋಧಕ ಕಾರ್ಯಕ್ರಮದಲ್ಲಿ HPV ಲಸಿಕೆಯನ್ನು ಸೇರಿಸಬೇಕೆಂದು ದೇವೇಗೌಡರು ಮನವಿ ಮಾಡಿದರು. ಗರ್ಭಕಂಠದ ಕ್ಯಾನ್ಸರ್ ಮಹಿಳೆಯರಲ್ಲಿ ಸಾಮಾನ್ಯವಾಗಿ ಕಂಡುಬರುವ ಕ್ಯಾನ್ಸರ್‌ಗಳಲ್ಲಿ ಒಂದಾಗಿದೆ. HPV ಲಸಿಕೆಯು ಅದರ ಸಂಭವವನ್ನು ಶೇ.80-90ರಷ್ಟು ಕಡಿಮೆ ಮಾಡುತ್ತದೆ. ರಾಷ್ಟ್ರೀಯ ರೋಗನಿರೋಧಕ ಕಾರ್ಯಕ್ರಮದ ಭಾಗವಾಗಿ ಪ್ರೌಢಶಾಲಾ ಹುಡುಗಿಯರಿಗೆ ಲಸಿಕೆ ಹಾಕುವುದು ಉತ್ತಮ ಪರಿಹಾರೋಪಾಯ ಆಗಿದೆ ಅವರು ಒತ್ತಿ ಹೇಳಿದರು.

    ಗ್ರಾಮೀಣ ಆರೋಗ್ಯ ರಕ್ಷಣೆಯಲ್ಲಿ ಖಾಸಗಿ ವಲಯದ ಹೂಡಿಕೆಯನ್ನು ಪ್ರೋತ್ಸಾಹಿಸಿ
    ಸೇವೆಯಲ್ಲಿ ಹಿಂದುಳಿದ ಪ್ರದೇಶಗಳಲ್ಲಿ ಆರೋಗ್ಯ ಸೇವೆಯನ್ನು ಸುಧಾರಿಸಲು, ಗ್ರಾಮೀಣ ಪ್ರದೇಶಗಳಲ್ಲಿ ಸಣ್ಣ ವಿಶೇಷ ಕೇಂದ್ರಗಳನ್ನು ಸ್ಥಾಪಿಸುವ ಖಾಸಗಿ ಆಸ್ಪತ್ರೆಗಳಿಗೆ ಐದು ವರ್ಷಗಳ ತೆರಿಗೆ ವಿನಾಯಿತಿ ನೀಡುವ ಬಗ್ಗೆ ದೇವೇಗೌಡರು ಕೇಂದ್ರ ಸರ್ಕಾರಕ್ಕೆ ಸಲಹೆ ನೀಡಿದರು.

    ಸಾರ್ವಜನಿಕ ಆರೋಗ್ಯ ಸೇವೆಯಲ್ಲಿ ನಿರ್ಣಾಯಕ ಪಾತ್ರ ವಹಿಸುವ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರಿಗೆ ಉತ್ತಮ ಆರ್ಥಿಕ ನೆರವು ನೀಡಬೇಕೆಂದು ಅವರು ಒತ್ತಾಯಿಸಿದ ಅವರು, ಈ ಕಾರ್ಯಕರ್ತರು ನಮ್ಮ ಗ್ರಾಮೀಣ ಆರೋಗ್ಯ ವ್ಯವಸ್ಥೆಯ ಬೆನ್ನೆಲುಬು. ಜನರಿಗೆ ಸೇವೆ ಸಲ್ಲಿಸಲು ಅವರ ಪ್ರೇರಣೆ ಮತ್ತು ಬದ್ಧತೆಯನ್ನು ಖಚಿತಪಡಿಸಿಕೊಳ್ಳಲು ಅವರ ಗೌರವಧನವನ್ನು ನಿಯತಕಾಲಿಕವಾಗಿ ಪರಿಷ್ಕರಿಸಬೇಕು ಎಂದು ಅವರು ಸರ್ಕಾರದ ಗಮನ ಸೆಳೆದರು.

    ಆಯುಷ್ಮಾನ್ ಭಾರತ್ ಯೋಜನೆ ಬಲಪಡಿಸಿ
    ಆಯುಷ್ಮಾನ್ ಭಾರತ್ ಯೋಜನೆಯ ಯಶಸ್ಸನ್ನು ದೇವೇಗೌಡರು ಶ್ಲಾಘಿಸಿದರು. ಭಾರತದ ಜನಸಂಖ್ಯೆಯ ಶೇ.70ಕ್ಕೂ ಹೆಚ್ಚು ಜನರು ಈ ಯೋಜನೆಯ ಪ್ರಯೋಜನ ಪಡೆಯುತ್ತಿದ್ದಾರೆ. 2018ರಲ್ಲಿ ಪ್ರಧಾನಿ ಮೋದಿಯವರ ನೇತೃತ್ವದಲ್ಲಿ ಪ್ರಾರಂಭಿಸಲಾದ ಈ ಉಪಕ್ರಮವು ಲಕ್ಷಾಂತರ ಜನರಿಗೆ ಆರೋಗ್ಯ ಸೇವೆಯನ್ನು ಕಲ್ಪಿಸಿದೆ. ಬಡ ನಾಗರಿಕರು ಸಹ ಗುಣಮಟ್ಟದ ಆರೋಗ್ಯ ಸೇವೆಯನ್ನು ಪಡೆಯುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ಮತ್ತು ಆರೋಗ್ಯ ಸಚಿವರನ್ನು ಅಭಿನಂದಿಸುತ್ತೇನೆ ಎಂದು ಅವರು ಹೇಳಿದರು.

  • ಆಯುಷ್ಮಾನ್ ಭಾರತ್ ಯೋಜನೆಯಡಿ ಚಿಕಿತ್ಸೆ ಪಡೆದ ವ್ಯಕ್ತಿಯನ್ನೇ ನೋಡಿಲ್ಲ – ಮೋದಿಗೆ ಕೇಜ್ರಿವಾಲ್ ತಿರುಗೇಟು

    ಆಯುಷ್ಮಾನ್ ಭಾರತ್ ಯೋಜನೆಯಡಿ ಚಿಕಿತ್ಸೆ ಪಡೆದ ವ್ಯಕ್ತಿಯನ್ನೇ ನೋಡಿಲ್ಲ – ಮೋದಿಗೆ ಕೇಜ್ರಿವಾಲ್ ತಿರುಗೇಟು

    ನವದೆಹಲಿ: ರಾಜಕೀಯ ಹಿತಾಸಕ್ತಿಗಳ ಕಾರಣದಿಂದ ಆಯುಷ್ಮಾನ್ ಭಾರತ್ (Ayushman Bharat) ಆರೋಗ್ಯ ವಿಮಾ ಯೋಜನೆಯನ್ನು ಜಾರಿಗೊಳಿಸಲು ವಿಫಲವಾಗಿದೆ, ಸಾರ್ವಜನಿಕ ಆರೋಗ್ಯದ ವಿಷಯದಲ್ಲಿ ಪ್ರಧಾನಿ ನರೇಂದ್ರ ಮೋದಿ ರಾಜಕೀಯ ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಹೇಳಿದ್ದಾರೆ.

    ದೆಹಲಿ ಮತ್ತು ಪಶ್ಚಿಮ ಬಂಗಾಳ ಸರ್ಕಾರಗಳು ಆಯುಷ್ಮಾನ್ ಭಾರತ್ ಆರೋಗ್ಯ ವಿಮಾ ಯೋಜನೆಯನ್ನು ಜಾರಿಗೊಳಿಸಲು ವಿಫಲವಾಗಿದೆ ಎಂದು ಟೀಕಿಸಿದ ಪ್ರಧಾನಿ ಮೋದಿಗೆ (Narendra Modi) ಕೇಜ್ರಿವಾಲ್‌ ತಿರುಗೇಟು ನೀಡಿದ್ದಾರೆ. ಇದನ್ನೂ ಓದಿ: Hyderabad | ಮೊಮೊಸ್ ತಿಂದು ಓರ್ವ ಮಹಿಳೆ ಸಾವು ಬೆನ್ನಲ್ಲೇ 20 ಜನರಿಗೆ ಫುಡ್ ಪಾಯ್ಸನ್

    ಈ ಬಗ್ಗೆ ಎಕ್ಸ್‌ ಖಾತೆಯಲ್ಲಿ ಟ್ವೀಟ್‌ ಮಾಡಿರುವ ಅವರು, ಸಾರ್ವಜನಿಕ ಆರೋಗ್ಯದ ವಿಷಯದ ಬಗ್ಗೆ ತಪ್ಪಾಗಿ ಮಾತನಾಡುವುದು ಮತ್ತು ಅದರ ಮೇಲೆ ರಾಜಕೀಯ ಮಾಡುವುದು ಸರಿಯಲ್ಲ. ಪ್ರಧಾನಿ ಮೋದಿ ದೆಹಲಿ ಮಾದರಿಯ ಆರೋಗ್ಯ ರಕ್ಷಣೆ ಯೋಜನೆಯನ್ನು ಅಧ್ಯಯನ ಮಾಡಬೇಕು. ದೆಹಲಿ ಸರ್ಕಾರದ ಯೋಜನೆಯಡಿಯಲ್ಲಿ, ನಗರದ ಪ್ರತಿಯೊಬ್ಬ ವ್ಯಕ್ತಿಯು ಉಚಿತ ವೈದ್ಯಕೀಯ ಚಿಕಿತ್ಸೆಯನ್ನು ಪಡೆಯುತ್ತಾನೆ. 5 ರೂ. ಮಾತ್ರೆ ಅಥವಾ 1 ಕೋಟಿ ರೂ. ಮೌಲ್ಯದ ಚಿಕಿತ್ಸೆಯ ಸಂಪೂರ್ಣ ವೆಚ್ಚವನ್ನು ಸರ್ಕಾರ ಭರಿಸುತ್ತದೆ ಎಂದು ಹೇಳಿದರು. ಇದನ್ನೂ ಓದಿ: Darshan Case File | ಜೂನ್‌ 8 ರಿಂದ ಅ.30ರ ವರೆಗೆ ಏನೆಲ್ಲಾ ಆಯ್ತು?

    ಜನರಿಗೆ ವಾಸ್ತವದಲ್ಲಿ ಆರೋಗ್ಯ ಪ್ರಯೋಜನಕ್ಕಾಗಿ ದೇಶದಾದ್ಯಂತ ದೆಹಲಿಯಂತೆ ಆಯುಷ್ಮಾನ್ ಭಾರತ್ ಆರೋಗ್ಯ ವಿಮಾ ಯೋಜನೆಯನ್ನು ಬದಲಿಸಬೇಕು ಎಂದು ಒತ್ತಾಯಿಸಿದ ಕೇಜ್ರಿವಾಲ್, ಈವರೆಗೂ ಆಯುಷ್ಮಾನ್ ಭಾರತ್ ಯೋಜನೆಯಡಿ ಚಿಕಿತ್ಸೆ ಪಡೆದ ವ್ಯಕ್ತಿಯನ್ನು ತಾನು ಇನ್ನೂ ಭೇಟಿ ಮಾಡಿಲ್ಲ ಎಂದು ಕೇಜ್ರಿವಾಲ್ ವ್ಯಂಗ್ಯ ಮಾಡಿದರು. ಆಯುಷ್ಮಾನ್ ಭಾರತ್ ಯೋಜನೆಯಡಿ ಸಿಎಜಿ ಅದರಲ್ಲಿ ಹಲವಾರು ಅಕ್ರಮಗಳನ್ನು ಕಂಡುಹಿಡಿದಿದೆ ಎಂದು ಹೇಳಿದರು.

    ಆಯುಷ್ಮಾನ್ ಭಾರತ್ ʻವಿಫಲʼ ಯೋಜನೆಯಾಗಿದೆ ಎಂದು ದೆಹಲಿಯ ಆರೋಗ್ಯ ಸಚಿವ ಸೌರಭ್ ಭಾರದ್ವಾಜ್ ಹೇಳಿದ್ದಾರೆ. ಯೋಜನೆಯನ್ನು ಜಾರಿಗೊಳಿಸಿದ ಉತ್ತರ ಪ್ರದೇಶ, ಹರಿಯಾಣ ಮತ್ತು ರಾಜಸ್ಥಾನದಂತಹ ಬಿಜೆಪಿ ಆಡಳಿತ ರಾಜ್ಯಗಳ ಬಡ ರೋಗಿಗಳು ಶಸ್ತ್ರಚಿಕಿತ್ಸೆಗಾಗಿ ದೆಹಲಿಯ ಆಸ್ಪತ್ರೆಗಳಿಗೆ ಭೇಟಿ ನೀಡಿದ್ದಾರೆ ಎಂದು ಅವರು ತಿರಗೇಟು ನೀಡಿದರು. ಇದನ್ನೂ ಓದಿ: ದರ್ಶನ್‌ಗೆ ಜಾಮೀನು – ಪಾಸ್‌ಪೋರ್ಟ್‌ ಒಪ್ಪಿಸುವಂತೆ ಕೋರ್ಟ್‌ ಸೂಚಿಸಿದ್ದೇಕೆ?

  • 3 ಕೋಟಿ ಬಡವರಿಗೆ ಮನೆ, ದೇಶದ 4 ದಿಕ್ಕುಗಳಿಗೂ ಬುಲೆಟ್‌ ಟ್ರೈನ್‌: ಮೋದಿ ಗ್ಯಾರಂಟಿ

    3 ಕೋಟಿ ಬಡವರಿಗೆ ಮನೆ, ದೇಶದ 4 ದಿಕ್ಕುಗಳಿಗೂ ಬುಲೆಟ್‌ ಟ್ರೈನ್‌: ಮೋದಿ ಗ್ಯಾರಂಟಿ

    * ತೃತೀಯಲಿಂಗಿಗಳಿಗೂ ಆಯುಷ್ಮಾನ್‌ ಭಾರತ್‌ ಯೋಜನೆ ವಿಸ್ತರಣೆ
    * ದಿವ್ಯಾಂಗರಿಗೆ ವಿಶೇಷ ಮನೆಗಳ ನಿರ್ಮಾಣ

    ನವದೆಹಲಿ: ಲೋಕಸಭಾ ಚುನಾವಣೆಗೆ ಬಿಜೆಪಿ ʻಸಂಕಲ್ಪ ಪತ್ರʼ (Sankalp Patra) ಹೆಸರಿನಲ್ಲಿ ಬಹುನಿರೀಕ್ಷಿತ ಪ್ರಣಾಳಿಕೆ ಬಿಡುಗಡೆ ಮಾಡಿದೆ. ದೆಹಲಿಯಲ್ಲಿರುವ ಬಿಜೆಪಿ ಕೇಂದ್ರ ಕಚೇರಿಯಲ್ಲಿಂದು ಪ್ರಧಾನಿ ಮೋದಿ ಪ್ರಣಾಳಿಕೆ (BJP Manifesto) ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಅಮಿತ್‌ ಶಾ, ನಿರ್ಮಲಾ ಸೀತಾರಾಮನ್‌, ಜೆ.ಪಿ ನಡ್ಡಾ, ರಾಜನಾಥ್‌ ಸಿಂಗ್‌ ವೇದಿಕೆಯಲ್ಲಿದ್ದರು.

    ಪ್ರಣಾಳಿಕೆ ಬಿಡುಗಡೆಗೊಳಿಸಿದ ಬಳಿಕ ಮಾತನಾಡಿದ ಪ್ರಧಾನಿ ಮೋದಿ (PM Modi), ಇಂದು ಅತ್ಯಂತ ಪವಿತ್ರವಾದ ದಿನ, ದೇಶದ ಹಲವು ರಾಜ್ಯಗಳು ವಿವಿಧ ರೀತಿಯಲ್ಲಿ ಹೊಸವರ್ಷವನ್ನು ಆಚರಿಸುತ್ತಿವೆ. ಇಂದು ಅಂಬೇಡ್ಕರ್‌ ಅವರ ಜಯಂತಿಯ ದಿನವೂ ಆಗಿದೆ ಎಂದು ಸ್ಮರಿಸಿದ್ದಾರೆ. ಇದನ್ನೂ ಓದಿ: 70 ವರ್ಷ ಮೇಲ್ಪಟ್ಟ ಎಲ್ಲರೂ ಆಯುಷ್ಮಾನ್‌ ಭಾರತ್‌ ವ್ಯಾಪ್ತಿಗೆ ಸೇರ್ಪಡೆ – ಬಿಜೆಪಿ ಭರವಸೆಗಳೇನು?

    ಇಡೀ ದೇಶ ಈ ಪ್ರಣಾಳಿಕೆಗಾಗಿ ಕಾಯುತ್ತಿದೆ. ಕಳೆದ 10 ವರ್ಷದಲ್ಲಿ ನೀಡಿದ ಎಲ್ಲ ಭರವಸೆ ಗ್ಯಾರಂಟಿ (Modi Guarantee) ರೂಪದಲ್ಲಿ ತಳಮಟ್ಟದಿಂದ ಜಾರಿ ಮಾಡಿದೆ. ಈ ಬಾರಿ ಯುವಶಕ್ತಿ, ನಾರಿಶಕ್ತಿ, ಬಡವರು ಮತ್ತು ರೈತರಿಗೆ ನಮ್ಮ ಪ್ರಣಾಳಿಕೆ ಶಕ್ತಿ ತುಂಬಲಿದೆ. ಗೌರವಯುತ ಜೀವನ, ಗುಣಮಟ್ಟದ ಜೀವನ, ಅವಕಾಶಗಳ ಸೃಷ್ಟಿ ಮಾಡುವ ಬಗ್ಗೆ ನನ್ನ `ಸಂಕಲ್ಪ’ ಇದೆ. ಮೂಲಸೌಕರ್ಯಗಳ ಅಭಿವೃದ್ಧಿ ಮೂಲಕ ಉದ್ಯೋಗ ಹೆಚ್ಚಿಸುವ ಗುರಿ ಹೊಂದಿದೆ. ಸ್ಟಾರ್ಟ್ಅಪ್‌ಗಳಿಗೆ ಹೆಚ್ಚು ಆದ್ಯತೆ ನೀಡಲಾಗುತ್ತಿದೆ. ಯುವ ಜನರಿಗೆ ಹೆಚ್ಚು ಅವಕಾಶ ಸೃಷ್ಟಿಸಲಾಗುತ್ತಿದೆ. ಕೇಂದ್ರ ಸರ್ಕಾರದ ಉಚಿತ ಪಡಿತರ ಯೋಜನೆ ಮುಂದಿನ 5 ವರ್ಷಗಳ ಕಾಲ ಮುಂದುವರಿಯುತ್ತದೆ ಎಂದು ಗ್ಯಾರಂಟಿ ನೀಡಿದ್ದಾರೆ.

    75 ವರ್ಷ ಮೇಲ್ಪಟ್ಟವರು, ತೃತೀಯ ಲಿಂಗಿಗಳು ʻಆಯುಷ್ಮಾನ್‌ ಭಾರತ್‌ʼ ವ್ಯಾಪ್ತಿಗೆ:
    ಇತ್ತೀಚಿನ ದಿನಗಳಲ್ಲಿ ವೃದ್ಧರು ತಮ್ಮ ಕಾಯಿಲೆಗಳಿಗೆ ಚಿಕಿತ್ಸೆ ಪಡೆದುಕೊಳ್ಳುವುದು ದೊಡ್ಡ ಚಿಂತೆಯಾಗಿದೆ. ಮಧ್ಯಮ ವರ್ಗದ ಜನರಿಗೆ ಇದು ಇನ್ನೂ ಗಂಭೀರ ಚಿಂತನೆಯಾಗಿದೆ. ಹಾಗಾಗಿ 70 ವರ್ಷ ಮೇಲ್ಪಟ್ಟ ಎಲ್ಲಾ ಹಿರಿಯ ನಾಗರಿಕರನ್ನೂ ಆಯುಷ್ಮಾನ್‌ ಭಾರತ್‌ ಯೋಜನೆಯ ವ್ಯಾಪ್ತಿಗೆ ತರಲಾಗುವುದು. ಈ ಮೂಲಕ 5 ಲಕ್ಷ ರೂ. ರೈ.ವೆರೆಗೂ ಉಚಿತ ಚಿಕಿತ್ಸೆ ನೀಡಲಾಗುವುದು. ಅಲ್ಲದೇ ತೃತೀಯ ಲಿಂಗಿಗಳನ್ನೂ ಆಯುಷ್ಮಾನ್‌ ಭಾರತ್‌ ಯೋಜನೆ ವ್ಯಾಪ್ತಿಯಲ್ಲಿ ತರಲು ನಿರ್ಧರಿಸಿದೆ. ಇದರೊಂದಿಗೆ ಜನೌಷಧಿ ಕೇಂದ್ರದಲ್ಲಿ ಮೆಡಿಸನ್‌ಗಳಿಗೆ 80% ರಿಯಾಯಿತಿ ಸಿಗಲಿದೆ ಎಂದಿದ್ದಾರೆ.

    ಮೋದಿ ಭಾಷಣದ ಮುಖ್ಯಾಂಶಗಳು:
    * `ನಾರಿ ಶಕ್ತಿ’ ಯೋಜನೆಯಲ್ಲಿ ಮಹಿಳೆಯರಿಗೆ ವಿವಿಧ ಕ್ಷೇತ್ರಗಳಲ್ಲಿ ಉದ್ಯೋಗ ತರಬೇತಿ. `ನಮೋ ಡ್ರೋನ್’ ಅಡಿ 3 ಕೋಟಿ ಮಹಿಳೆಯರನ್ನು `ಲಕ್ ಪತಿ’ ದೀದಿ ಮಾಡುವ ಗುರಿ. ಮಹಿಳಾ ಕ್ರೀಡಾಪಟುಗಳಿಗೆ ವಿಶೇಷ ಯೋಜನೆ, ಮಹಿಳೆಯರಲ್ಲಿ ಉಂಟಾಗುವ ರೋಗಗಳ ಬಗ್ಗೆ ವಿಶೇಷ ಅಭಿಯಾನ, ಕಿಸಾನ್ ಕಾರ್ಡ್ ಯೋಜನೆ ವಿಸ್ತರಣೆ, `ಪಿಎಂ ಶ್ರೀಅನ್ನ’ ಯೋಜನೆಗೆ ಹೆಚ್ಚಿನ ಒತ್ತು.

    * ದೇಶಾದ್ಯಂತ ಸಂಚರಿಸುತ್ತಿರುವ ಒಂದೇ ಭಾರತ್ ಇನ್ಮುಂದೆ ಸ್ಲೀಪರ್, ಚೇರ ಕಾರ್ ಮತ್ತು ಮೆಟ್ರೋ ಮೂರು ಆಯಾಮದಲ್ಲಿ ಸಂಚಾರ ಮಾಡಲಿದೆ. ಬುಲೆಟ್ ಟ್ರೈನ್ ಕೆಲಸ ಅಂತ್ಯಕ್ಕೆ ಬಂದಿದೆ. ದಕ್ಷಿಣ ಭಾರತಕ್ಕೆ ಬುಲೆಟ್ ಟ್ರೈನ್‌ ಸಮೀಕ್ಷೆ ಶೀಘ್ರದಲ್ಲೇ ಶುರುವಾಗಲಿದ್ದು, ಉತ್ತರ, ದಕ್ಷಿಣ ಮತ್ತು ಈಶಾನ್ಯ ಭಾಗದಲ್ಲಿ ಬುಲೆಟ್ ಟ್ರೈನ್ ಕಾರ್ಯ ಆರಂಭಿಸಲಾಗುವುದು. ಒಂದೇ ಭಾರತ್ ಮೆಟ್ರೋ ಸಹ ಶುರುವಾಗಲಿದೆ. ಇದನ್ನೂ ಓದಿ: ಮೋದಿ ಗ್ಯಾರಂಟಿ-2024; ‘ಸಂಕಲ್ಪ ಪತ್ರ’ ಹೆಸರಿನಲ್ಲಿ ಬಿಜೆಪಿ ಪ್ರಣಾಳಿಕೆ ಬಿಡುಗಡೆ

    * ಇನ್ನೂ ಗ್ರೀನ್ ಎನರ್ಜಿಗೆ ಆದ್ಯತೆ ನೀಡಲಾಗಿದ್ದು, ಎಲೆಕ್ಟ್ರಿಕ್ ವಾಹನಗಳ ಮಾರಾಟ ಹೆಚ್ಚಿಸಲಿದೆ. ಕಳೆದ ವರ್ಷ 17 ಲಕ್ಷ ವಾಹನ ಮಾರಾಟವಾಗಿದೆ. ಪ್ರತಿ ವರ್ಷ 5 ಸಾವಿರ ಕಿಮೀ ರೈಲ್ವೇ ಹಳಿ ಸಂಪರ್ಕ ವಿಸ್ತರಣೆ ಮಾಡಲಾಗಿದೆ. ರೈಲು ಅಪಘಾತ ತಪ್ಪಿಸಲು `ಕವಚ’ ಸಿಸ್ಟಮ್ ವಿಸ್ತರಣೆ ಮಾಡಿದ್ದು, ವಿಶ್ವ ದರ್ಜೆಯ ರೈಲು ನಿಲ್ದಾಣಗಳನ್ನ ನಿರ್ಮಾಣ ಮಾಡಲಾಗಿದೆ.

    * ನಮ್ಮ ಸರ್ಕಾರ ದೇಶಾದ್ಯಂತ 25 ಕೋಟಿ ಜನರನ್ನು ಬಡತನದಿಂದ ಹೊರ ತಂದಿದೆ. ಇಲ್ಲಿಗೆ ಕೆಲಸ ಮುಗಿದಿಲ್ಲ, ಬಡತನದಿಂದ ಹೊರ ಬಂದ ಜನರನ್ನ ಇನ್ನೂ ಮುಂದೆತರುವ ಅನಿವಾರ್ಯತೆ ಇದೆ. ಅದಕ್ಕಾಗಿ `ಗರೀಬ್ ಕಲ್ಯಾಣ್’ ಯೋಜನೆಗಳನ್ನು ಮುಂದಿನ ಐದು ವರ್ಷಕ್ಕೆ ವಿಸ್ತರಿಸಲಿದೆ.

    * ದೇಶಾದ್ಯಂತ 4 ಕೋಟಿ ಮನೆ ಬಡವರಿಗೆ ಕಟ್ಟಿಕೊಡಲಾಗಿದೆ. ಇನ್ನೂ 3 ಕೋಟಿ ಮನೆಗಳನ್ನು ಕಟ್ಟಿ ಕೊಡಲಾಗುವುದು. ಅಂಗವಿಕಲರಿಗೂ ವಿಶೇಷ ಮನೆ ವ್ಯವಸ್ಥೆ ಮಾಡಲಾಗುವುದು. ಕಡಿಮೆ ಬೆಲೆಯಲ್ಲಿ ಸಿಲಿಂಡರ್ ನೀಡಲಾಗಿತ್ತು. ಇನ್ಮುಂದೆ ಪೈಪ್‌ಲೈನ್ ಮೂಲಕ ಗ್ಯಾಸ್ ನೀಡುವ ಯೋಜನೆ ಜಾರಿಗೆ ತರಲಾಗುವುದು. ಮುದ್ರಾ ಯೋಜನೆಯಡಿ ಲಕ್ಷಾಂತರ ಜನರಿಗೆ ಉದ್ಯೋಗ ಸಿಕ್ಕಿದೆ. ಅಲ್ಲದೇ ಈ ಯೋಜನೆಯಡಿ 10 ಲಕ್ಞ ರೂ.ವರೆಗೆ ಪಡೆಯುತ್ತಿದ್ದ ಸಾಲದ ಪ್ರಮಾಣವನ್ನು 20 ಲಕ್ಷ ರೂ. ವರೆಗೆ ಹೆಚ್ಚಿಸಲಾಗುವುದು.

  • 70 ವರ್ಷ ಮೇಲ್ಪಟ್ಟ ಎಲ್ಲರೂ ಆಯುಷ್ಮಾನ್‌ ಭಾರತ್‌ ವ್ಯಾಪ್ತಿಗೆ ಸೇರ್ಪಡೆ – ಬಿಜೆಪಿ ಭರವಸೆಗಳೇನು?

    70 ವರ್ಷ ಮೇಲ್ಪಟ್ಟ ಎಲ್ಲರೂ ಆಯುಷ್ಮಾನ್‌ ಭಾರತ್‌ ವ್ಯಾಪ್ತಿಗೆ ಸೇರ್ಪಡೆ – ಬಿಜೆಪಿ ಭರವಸೆಗಳೇನು?

    – 3 ಕೋಟಿ ಗ್ರಾಮೀಣ ಮಹಿಳೆಯರು ‘ಲಖ್ ಪತಿ ದೀದಿ’
    – ಪ್ರಧಾನಮಂತ್ರಿ ಸೂರ್ಯ ಘರ್‌ ಯೋಜನೆಯಡಿ ಉಚಿತ ವಿದ್ಯುತ್‌
    – ವಿಶ್ವಾದ್ಯಂತ ರಾಮಾಯಣ ಉತ್ಸವ ಆಚರಣೆ

    ನವದೆಹಲಿ: ಲೋಕಸಭಾ ಚುನಾವಣೆಗೆ (Lok Sabha Election 2024) ಬಿಜೆಪಿ ತನ್ನ ಬಹುನಿರೀಕ್ಷಿತ ಪ್ರಣಾಳಿಕೆಯನ್ನು (BJP Manifesto) ಬಿಡುಗಡೆ ಮಾಡಿದೆ. ಪ್ರಧಾನಿ ಮೋದಿ (Narendra Modi) ಅವರು ಬಡವರು, ಮಹಿಳೆಯರು, ರೈತರು, ಮಹಿಳೆಯರ ಅಭಿವೃದ್ಧಿ ಮೇಲೆ ಗಮನ ಕೇಂದ್ರೀಕರಿಸಿದ್ದಾರೆ.

    3 ಕೋಟಿ ಗ್ರಾಮೀಣ ಮಹಿಳೆಯರು ‘ಲಖ್ ಪತಿ ದೀದಿ’
    70 ವರ್ಷ ಮೇಲ್ಪಟ್ಟ ಎಲ್ಲರನ್ನೂ ಹಾಗೂ ತೃತೀಯಲಿಂಗಿಗಳನ್ನು ಆಯುಷ್ಮಾನ್ ಭಾರತ್‌ ವ್ಯಾಪ್ತಿಗೆ ಸೇರ್ಪಡೆ ಮಾಡುವ ಭರವಸೆಯನ್ನು ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ ನೀಡಿದೆ. ಆ ಮೂಲಕ ಹಿರಿಯ ನಾಗರಿಕರಿಗೆ ಉಚಿತ ಚಿಕಿತ್ಸೆ ಸೌಲಭ್ಯ ಒದಗಿಸಲಾಗುವುದು. ಅಲ್ಲದೇ, 3 ಕೋಟಿ ಮನೆ ನಿರ್ಮಾಣ, ಪೈಪ್ ಮೂಲಕ ಮನೆಗೆ ಅಡುಗೆ ಅನಿಲ, 3 ಕೋಟಿ ಗ್ರಾಮೀಣ ಮಹಿಳೆಯರು ‘ಲಖ್ ಪತಿ ದೀದಿ’ ಯೋಜನೆ ಫಲಾನುಭವಿಗಳಾಗಲಿದ್ದಾರೆಂಬ ಭರವಸೆಯನ್ನು ಪ್ರಣಾಳಿಕೆ ನೀಡಿದೆ. ಇದನ್ನೂ ಓದಿ: ಮೋದಿ ಗ್ಯಾರಂಟಿ-2024; ‘ಸಂಕಲ್ಪ ಪತ್ರ’ ಹೆಸರಿನಲ್ಲಿ ಬಿಜೆಪಿ ಪ್ರಣಾಳಿಕೆ ಬಿಡುಗಡೆ

    ಗರ್ಭಕಂಠ ಕ್ಯಾನ್ಸರ್ ತಡೆಗೆ ವಿಶೇಷ ಯೋಜನೆ, ಪರೀಕ್ಷೆ ಪ್ರಶ್ನೆ ಪತ್ರಿಕೆ ಲೀಕ್ ತಡೆಯಲು ಕಠಿಣ ಕಾನೂನು, ಹಿರಿಯ ನಾಗರಿಕರಿಗೆ ಜ್ಞಾನ ಹಂಚಿಕೆ ಪೋರ್ಟಲ್ ಹಾಗೂ ಬಡವರಿಗೆ ಉಚಿತ ಪಡಿತರ, ನೀರು ಮತ್ತು ಗ್ಯಾಸ್ ಸಂಪರ್ಕ ಕಲ್ಪಿಸಲಾಗುವುದು ಎಂದು ತಿಳಿಸಿದೆ.

    ಕಾಲಕ್ಕೆ ತಕ್ಕಂತೆ ಎಂಎಸ್‌ಪಿ ಜಾರಿ
    ಮನೆ ಬಾಗಿಲಿಗೆ ಸರ್ಕಾರಿ ಸೇವೆ ಒದಗಿಸುವುದು, ಅಂಚೆ‌ ಮತ್ತು ಡಿಜಿಟಲ್‌ ನೆಟ್ವರ್ಕ್ ಸಹಯೋಗ, ಹಿರಿಯ ನಾಗರಿಕರಿಗೆ ಯುಪಿಐ ಬಗ್ಗೆ ತರಬೇತಿ – ಮೋಸ ವಂಚನೆಗಳಿಂದ ತಪ್ಪಿಸಲು ಕ್ರಮಕೈಗೊಳ್ಳುವುದು, ಹಿರಿಯ ನಾಗರಿಕರಿಗೆ ಆಯುಷ್ ಕ್ಯಾಂಪ್‌ ಆಯೋಜನೆ, ರಾಜ್ಯ ಸರ್ಕಾರಗಳ ಜೊತೆ ಸೇರಿ ಹಿರಿಯ ನಾಗರಿಕರಿಗೆ ಸುಗಮ ತೀರ್ಥಯಾತ್ರೆ ವ್ಯವಸ್ಥೆ, ಕಾಲಕ್ಕೆ ತಕ್ಕಂತೆ ಎಂಎಸ್‌ಪಿ ಜಾರಿ, ಭಾರತವನ್ನು ಅಂತಾರಾಷ್ಟ್ರೀಯ ನ್ಯೂಟ್ರಿ ಹಬ್ ಮಾಡುವುದು, ಕೃಷಿಗಾಗಿ ಪ್ರತ್ಯೇಕ ಸ್ಯಾಟಲೈಟ್ ಮೊದಲಾದ ಭರವಸೆಗಳನ್ನು ಬಿಜೆಪಿ ಜನರಿಗೆ ನೀಡಿದೆ. ಇದನ್ನೂ ಓದಿ: ಸಿಎಂ ತವರಲ್ಲಿಂದು ನಮೋ ಘರ್ಜನೆ – ಮೈಸೂರಲ್ಲಿ ಎಲ್ಲೆಲ್ಲಿ ಮಾರ್ಗ ಬದಲಾವಣೆ?

    ಶೂನ್ಯ ವಿದ್ಯುತ್ ಬಿಲ್
    ಒಂದು ರಾಷ್ಟ್ರ, ಒಂದು ಚುನಾವಣೆ ಮತ್ತು ಸಾಮಾನ್ಯ ಮತದಾರರ ಪಟ್ಟಿಯನ್ನು ತರುವುದು, ಏಕರೂಪ ನಾಗರಿಕ ಸಂಹಿತೆ (UCC) ಜಾರಿ, ಪ್ರಧಾನಮಂತ್ರಿ ಸೂರ್ಯ ಘರ್ ಉಚಿತ ವಿದ್ಯುತ್ ಯೋಜನೆಯಡಿ ಶೂನ್ಯ ವಿದ್ಯುತ್ ಬಿಲ್, ಮಹಿಳೆಯರಿಗಾಗಿ ಶೌಚಾಲಯಗಳ ಸಂಖ್ಯೆ ಹೆಚ್ಚಳ ಮತ್ತು ಮಹಿಳಾ ಶಕ್ತಿ ವಂದನ್ ಕಾಯ್ದೆಯ ಅನುಷ್ಠಾನ, ವಂದೇ ಭಾರತ್ ರೈಲು ಜಾಲದ ವಿಸ್ತರಣೆ, ಅಮೃತ್ ಭಾರತ್ ಮತ್ತು ನಮೋ ಭಾರತ್ ರೈಲುಗಳು ಬರಲಿವೆ ಎಂದು ಪ್ರಣಾಳಿಕೆಯಲ್ಲಿ ತಿಳಿಸಲಾಗಿದೆ.

    ಹೊಸ ವಿಮಾನ ನಿಲ್ದಾಣ, ಹೆದ್ದಾರಿಗಳು, ಮೆಟ್ರೋ ಮತ್ತು ನೀರಿನ ಮೆಟ್ರೋಗಳು ಬರಲಿವೆ. ಹೆದ್ದಾರಿಗಳಲ್ಲಿ ಟ್ರಕ್ ಚಾಲಕರಿಗೆ ಆಧುನಿಕ ಸೌಲಭ್ಯಗಳು, ವಿಶ್ವಾದ್ಯಂತ ರಾಮಾಯಣ ಉತ್ಸವ ಆಚರಿಸಲಾಗುವುದು ಎಂದು ಪ್ರಣಾಳಿಕೆಯಲ್ಲಿ ಉಲ್ಲೇಖಿಸಲಾಗಿದೆ. ಇದನ್ನೂ ಓದಿ: ಹಾಲಿ, ಮಾಜಿ ಪ್ರಧಾನಿಗಳ ಸಮಾಗಮದಿಂದ ದೊಡ್ಡ ಸಂದೇಶ ರವಾನೆ: ಯದುವೀರ್‌

  • ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಹೆಲ್ತ್ ಕಾರ್ಡ್‌ಗೆ ಹೊಸ ರೂಪ – ಈ ಕಾರ್ಡ್‌ ಇದ್ರೆ ಏನು ಸಿಗುತ್ತೆ?

    ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಹೆಲ್ತ್ ಕಾರ್ಡ್‌ಗೆ ಹೊಸ ರೂಪ – ಈ ಕಾರ್ಡ್‌ ಇದ್ರೆ ಏನು ಸಿಗುತ್ತೆ?

    ಬೆಳಗಾವಿ: ಆಯುಷ್ಮಾನ್ ಭಾರತ್ – ಆರೋಗ್ಯ ಕರ್ನಾಟಕ ಹೆಲ್ತ್ ಕಾರ್ಡ್ ಗಳಿಗೆ ಆರೋಗ್ಯ ಇಲಾಖೆ ಹೊಸ ರೂಪ ನೀಡಿದ್ದು, ಮರುನಾಮಕರಣಗೊಂಡ ನವೀಕೃತ ಹೆಲ್ತ್ ಕಾರ್ಡ್‌ಗಳನ್ನು ಸಿಎಂ ಸಿದ್ದರಾಮಯ್ಯ (CM Siddaramaiah) ಬಿಡುಗಡೆಗೊಳಿಸಿದ್ದಾರೆ.

    “ಆಯುಷ್ಮಾನ್ ಭಾರತ್ (Ayushman Bharat) ಆರೋಗ್ಯ ಕರ್ನಾಟಕ ಹೆಲ್ತ್ ಕಾರ್ಡ್ ಗಳನ್ನ, ಆಯುಷ್ಮಾನ್‌ ಭಾರತ್ – ಪ್ರಧಾನ ಮಂತ್ರಿ ಜನಾರೋಗ್ಯ – ಮುಖ್ಯಮಂತ್ರಿಗಳ ಆರೋಗ್ಯ ಕರ್ನಾಟಕ” ಎಂದು ಹೆಸರಿಸಲಾಗಿದೆ. ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ಆಯುಷ್ಮಾನ್ ಭಾರತ್ – ಆರೋಗ್ಯ ಕರ್ನಾಟಕ ಕಾರ್ಡ್‌ನಲ್ಲಿ ಕೆಲ ಬದಲಾವಣೆ ತರಲಾಗಿದ್ದು, ರಾಜ್ಯದ 5.9 ಕೋಟಿ ಜನರಿಗೆ ಹೆಲ್ತ್ ಕಾರ್ಡ್‌ಗಳನ್ನು ವಿತರಿಸುವ ಗುರಿಯನ್ನ ಆರೋಗ್ಯ ಇಲಾಖೆ ಹಾಕಿಕೊಂಡಿದೆ.‌

    ನೂತನ ಕಾರ್ಡ್ ಗಳನ್ನ ಸಿಎಂ ಸಿದ್ದರಾಮಯ್ಯ ಅವರು ಇಂದು ಚಾಲನೆ ನೀಡಿದ್ದಾರೆ.‌ ರಾಜ್ಯದ ಪ್ರತಿಯೊಬ್ಬ ಜನಸಾಮಾನ್ಯರಿಗೆ ಉತ್ತಮ ಆರೋಗ್ಯ ಸೇವೆ ಹಾಗೂ ಚಿಕಿತ್ಸೆಗಳನ್ನು ಒದಗಿಸಬೇಕು ಎಂಬುದು ನಮ್ಮ ಸರ್ಕಾರದ ಆದ್ಯತೆಗಳಲ್ಲಿ ಒಂದು ಎಂದಿದ್ದಾರೆ.  ಇದನ್ನೂ ಓದಿ: ಬಿಜೆಪಿಯವರಿಗೆ ನನ್ನ ಮೇಲೆ ಅಷ್ಟೊಂದು ದ್ವೇಷವೇ: ಪ್ರಿಯಾಂಕ್ ಖರ್ಗೆ ಪ್ರಶ್ನೆ

    ಆಯುಷ್ಮಾನ್ ಭಾರತ್ ಪ್ರಧಾನಮಂತ್ರಿ ಜನಾರೋಗ್ಯ ನ್ಯಾಷನಲ್ ಪೊರ್ಟಲ್ ಗೆ ನೂತನ ಹೆಲ್ತ್ ಕಾರ್ಡ್ ಗಳನ್ನ ಸಂಯೋಜನೆಗೊಳಿಸಲಾಗಿದ್ದು, ರಾಜ್ಯದ ಬಿಪಿಎಲ್ ಕಾರ್ಡುದಾರರು ದೇಶದ ಇತರೆ ರಾಜ್ಯಗಳಲ್ಲಿ ಹೆಲ್ತ್ ಕಾರ್ಡ್ ನ ಅಡಿ ಚಿಕಿತ್ಸೆ ಪಡೆಯಬಹುದಾಗಿದೆ.

    ರಾಜ್ಯದಲ್ಲಿರುವ ಒಟ್ಟು5.09 ಕೋಟಿ ಫಲಾನುಭವಿಗಳಿಗೆ ಮುಂದಿನ 6 ತಿಂಗಳ ಒಳಗಾಗಿ ಆಯುಷ್ಮಾನ್‌ ಭಾರತ್ – ಪ್ರಧಾನ ಮಂತ್ರಿ ಜನಾರೋಗ್ಯ – ಮುಖ್ಯಮಂತ್ರಿಗಳ ಆರೋಗ್ಯ ಕರ್ನಾಟಕ ಕಾರ್ಡ್‌ ಸೃಜನೆ ಮತ್ತು ವಿತರಣಾ ಗುರಿಯನ್ನು ಹೊಂದಲಾಗಿದೆ.

    ಯೋಜನೆಯ ಒಟ್ಟು ಅನುದಾನದ ಪಾಲಿನಲ್ಲಿ ರಾಜ್ಯ ಸರ್ಕಾರವು 66% ರಷ್ಟು ನೀಡುತ್ತಿದ್ದರೆ, ಕೇಂದ್ರ ಸರ್ಕಾರವು 34% ನೀಡುತ್ತಿದೆ. ಯೋಜನೆಯಡಿಯಲ್ಲಿ ಬಿಪಿಎಲ್‌ ಪಡಿತರ ಚೀಟಿ ಹೊಂದಿರುವ ಬಡ ಕುಟುಂಬಗಳು ವಾರ್ಷಿಕ 5 ಲಕ್ಷ ಮೌಲ್ಯದ ಚಿಕಿತ್ಸೆಯನ್ನು ಕುಟುಂಬದ ಒಬ್ಬರು ಅಥವಾ ಹಲವರು Family Floater ಆಧಾರದ ಮೇಲೆ ಬಳಸಿಕೊಳ್ಳಬಹುದು.‌

    ಎಪಿಎಲ್‌ ಕುಟುಂಬದವರಿಗೂ ಸಹ ಯೋಜನೆಯಲ್ಲಿ ಅವಕಾಶ ಕಲ್ಪಿಸಿರುವ ಮೊದಲ ರಾಜ್ಯ ಕರ್ನಾಟಕವಾಗಿದ್ದು, ಎಪಿಎಲ್‌ ಕುಟುಂಬಗಳಿಗೆ 5 ಲಕ್ಷದ ಮೌಲ್ಯದ ಚಿಕಿತ್ಸೆಯಲ್ಲಿ ಗರಿಷ್ಠ ರೂ.1.5 ಲಕ್ಷ ವೆಚ್ಚವನ್ನ ರಾಜ್ಯ ಸರ್ಕಾರ ಪಾವತಿಸಲಿದೆ. ಎಪಿಎಲ್ ಕಾರ್ಡ್‌ದಾರರು 70% ರಷ್ಟು ಚಿಕಿತ್ಸಾ ವೆಚ್ಚವನ್ನ ಪಾವತಿಸಿದರೆ 30% ರಷ್ಟು ವೆಚ್ಚವನ್ನು  ರಾಜ್ಯ ಸರ್ಕಾರ ಭರಿಸಲಿದೆ.

    ಪ್ರಸ್ತುತ ರಾಜ್ಯದಲ್ಲಿ 3450 ಕ್ಕೂ ಹೆಚ್ಚಿನ ಆರೋಗ್ಯ ಸಂಸ್ಥೆಗಳು“ಆಯುಷ್ಮಾನ್‌ ಭಾರತ್- “ಪ್ರಧಾನ ಮಂತ್ರಿ ಜನಾರೋಗ್ಯ – ಮುಖ್ಯಮಂತ್ರಿಗಳ ಆರೋಗ್ಯ ಕರ್ನಾಟಕ” ಯೋಜನೆಯಲ್ಲಿ ಸೇವೆ ನೀಡಲು ನೊಂದಾಯಿಸಿಕೊಂಡಿರುತ್ತಾರೆ. ಸುಮಾರು 1650 ಚಿಕಿತ್ಸಾ ಪ್ಯಾಕೇಜ್‌ಗಳು ರಾಜ್ಯದ ಎಲ್ಲಾ ಸಾರ್ವಜಿಕ ಆಸ್ಪತ್ರೆ ಮತ್ತು 540 ನೊಂದಾಯಿತ ಖಾಸಗಿ ಆಸ್ಪತ್ರೆಗಳಲ್ಲಿ ಲಭ್ಯವಾಗಲಿದೆ.

    171 ಅತ್ಯಂತ ತುರ್ತು ಚಿಕಿತ್ಸೆಯ ಮತ್ತು ಜೀವ ಉಳಿಸುವ ಪ್ಯಾಕೇಜ್‌ಗಳನ್ನು ಒಳಗೊಂಡಿದೆ. ರಾಜ್ಯದಲ್ಲಿ 1.15 ಕೋಟಿ ಬಿಪಿಎಲ್‌ ಕುಟುಂಬಗಳಿದ್ದು, ಇದರಲ್ಲಿ 69 ಲಕ್ಷ SECC 2011 ಸಮೀಕ್ಷೆಯಂತೆ ಬಡತನ ರೇಖೆಗಿಂತ ಕೆಳಗಿವೆ. ಕೇಂದ್ರ ಸರ್ಕಾರ ಈ ಕುಟುಂಬಗಳಿಗೆ 60:40 ಅನುಪಾತದಲ್ಲಿ ಅನುದಾನ ಒದಗಿಸುತ್ತಿದೆ. ರಾಜ್ಯ ಸರ್ಕಾರವು ಉಳಿದ 46 ಲಕ್ಷ ಬಿಪಿಎಲ್‌ ಹಾಗೂ 19 ಲಕ್ಷ ಎಪಿಲ್‌ ಕುಟುಂಬಗಳಿಗೆ 100% ಅನುದಾನ ಒದಗಿಸುತ್ತಿದೆ.

    ಆಯುಷ್ಮಾನ್‌ ಭಾರತ್‌ – ಪ್ರಧಾನ ಮಂತ್ರಿ ಜನಾರೋಗ್ಯ ಯೋಜನಾ – ಮುಖ್ಯಮಂತ್ರಿಗಳ ಆರೋಗ್ಯ ಕರ್ನಾಟಕ ಯೋಜನೆಯ Co-branded ಗುರುತಿನ ಚೀಟಿಗಳಾಗಿದ್ದು, Co-branded ಗುರುತಿನ ಚೀಟಿಗಳನ್ನು ಉಚಿತವಾಗಿ ನೀಡಲಾಗುವುದು.‌

    ಈ ಗುರುತಿನ ಚೀಟಿಗಳನ್ನು ರಾಷ್ಟ್ರೀಯ ಆರೋಗ್ಯ ID (ABHA ID) ಯೊಂದಿಗೆ ಜೋಡಿಸಲಾಗಿರುತ್ತದೆ. ಇದರಿಂದ ಫಲಾನುಭವಿಗಳ ವ್ಯೆದ್ಯಕೀಯ ದಾಖಲೆಗಳನ್ನು ಸಂರಕ್ಷಿಸಿ ಸುಲಭ ಮತ್ತು ಪರಿಣಾಮಕಾರಿ ಚಿಕಿತ್ಸೆ ನೀಡಲು ನೆರವಾಗುತ್ತದೆ.

    ಪಡಿತರ ಚೀಟಿಯೊಂದಿಗೆ ಜೋಡಿಸಲಾದ ಮೂಲ ಆಧಾರ್‌ ಗುರುತಿನ ಚೀಟಿಯ ಸಹಾಯದಿಂದ ಹತ್ತಿರದ ಗ್ರಾಮ-1 ಕೇಂದ್ರಗಳು ಅಥವಾ ನಾಗರೀಕ ಸೇವಾ “ಆಯುಷ್ಮಾನ್‌ ಭಾರತ್ – ಪ್ರಧಾನ ಮಂತ್ರಿ ಜನಾರೋಗ್ಯ – ಮುಖ್ಯಮಂತ್ರಿಗಳ ಆರೋಗ್ಯ ಕರ್ನಾಟಕ” ಗುರುತಿನ ಚೀಟಿಗಳನ್ನು ಸುಲಭವಾಗಿ ನೊಂದಾಯಿಸಿ ಪಡೆಯಬಹುದಾಗಿರುತ್ತದೆ.

     

  • ಆಯುಷ್ಮಾನ್, ಆರೋಗ್ಯ ಕರ್ನಾಟಕಕ್ಕೆ ಕೇಂದ್ರ 60% ನೆರವು ನೀಡಲಿ – ದಿನೇಶ್ ಗುಂಡೂರಾವ್ ಮನವಿ

    ಆಯುಷ್ಮಾನ್, ಆರೋಗ್ಯ ಕರ್ನಾಟಕಕ್ಕೆ ಕೇಂದ್ರ 60% ನೆರವು ನೀಡಲಿ – ದಿನೇಶ್ ಗುಂಡೂರಾವ್ ಮನವಿ

    ಬೆಂಗಳೂರು: ಆಯುಷ್ಮಾನ್ ಭಾರತ್ (Ayushman Bharat) ಹಾಗೂ ಆರೋಗ್ಯ ಕರ್ನಾಟಕ (Arogya Karnataka) ವಿಮೆ ಯೋಜನೆಗೆ ಕೇಂದ್ರ ಸರ್ಕಾರ 60% ರಷ್ಟು ಅನುದಾನ ನೀಡಬೇಕು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ಕೇಂದ್ರ ಆರೋಗ್ಯ ಸಚಿವರಿಗೆ ಮನವಿ ಸಲ್ಲಿಸಿದ್ದಾರೆ.

    ಡೆಹ್ರಾಡೂನ್ ಸ್ವಾಸ್ಥ್ಯ ಚಿಂತನ ಶಿಬಿರದಲ್ಲಿ ಅವರು ಪಾಲ್ಗೊಂಡಿದ್ದಾರೆ. ಈ ವೇಳೆ ಮಾತನಾಡಿದ ಅವರು ಆಯುಷ್ಮಾನ್ ಭಾರತ್ ಯೋಜನೆಗೆ ಕೇಂದ್ರದಿಂದ ಹೆಚ್ಚಿನ ನೆರವಿನ ಅಗತ್ಯತೆ ಇದೆ. ಯೋಜನೆಗೆ ಕೇಂದ್ರದ ನೆರವಿನ ಕುರಿತು ಕೇಂದ್ರ ಆರೋಗ್ಯ ಸಚಿವ ಮನ್ಸೂಖ್ ಮಂಡೋವಿಯಾ ಅವರ ಗಮನಕ್ಕೆ ತಂದಿದ್ದಾರೆ. ಇದನ್ನೂ ಓದಿ: ಬೆಂಗಳೂರಿನ ಫ್ಲೈಓವರ್‌ನಲ್ಲೇ ಸ್ಕೂಟರ್ ಅಡ್ಡಗಟ್ಟಿ 1.70 ಕೋಟಿ ರೂ. ಮೌಲ್ಯದ ಚಿನ್ನ ದರೋಡೆ

    ABPMJAY ಸ್ಕೀಮ್‍ನಲ್ಲಿ ಕರ್ನಾಟಕವು ಉತ್ತಮ ಪ್ರಗತಿಯನ್ನು ಸಾಧಿಸುತ್ತಿದೆ. ಅದರೂ ಆಯುಷ್ಮಾನ್ ಯೋಜನೆಯಡಿ ಆರೋಗ್ಯ ಕರ್ನಾಟಕ ಫಲಾನುಭವಿಗಳಿಗೆ ಕೇಂದ್ರ ಸರ್ಕಾರದಿಂದ ನೀರಿಕ್ಷಿತ ಹಣಕಾಸಿನ ನೆರವು ದೊರೆಯುತ್ತಿಲ್ಲ. ಪ್ರಸ್ತುತ ರಾಜ್ಯ ಸರ್ಕಾರ 64% ರಷ್ಟು ಹಣಕಾಸಿನ ನೆರವು ನೀಡುತ್ತಿದೆ. ಕೇಂದ್ರ ಸರ್ಕಾರ 36% ರಷ್ಟು ಮಾತ್ರ ಅನುದಾನ ಒದಗಿಸುತ್ತಿದೆ. 64% ರಷ್ಟು ಹಣಕಾಸನ್ನ ರಾಜ್ಯ ಸರ್ಕಾರವೇ ಭರಿಸುತ್ತಿದೆ ಎಂದಿದ್ದಾರೆ.

    ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಗೆ ಕೇಂದ್ರ ಸರ್ಕಾರ 60% ರಷ್ಟು ಹಣಕಾಸಿನ ನೆರವು ನೀಡಿದರೆ ಹೆಚ್ಚಿನ ಜನರಿಗೆ ಯೋಜನೆಯನ್ನ ತಲುಪಿಸಬಹುದು. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ 60% ರಾಜ್ಯ ಸರ್ಕಾರ 40% ದರಗಳಲ್ಲಿ ಕಾರ್ಯನಿರ್ವಹಿಸುವ ಅಗತ್ಯವಿದೆ. ಸಾರ್ವಜನಿಕರ ಆರೋಗ್ಯ ಭದ್ರತೆ ಉದ್ದೇಶದಿಂದ ಆರಂಭ ಆಗಿರುವ ಆಯುಷ್ಮಾನ್ ಭಾರತ್ ಯೋಜನೆ ಬಗ್ಗೆ ಕೇಂದ್ರ ನಿರ್ಣಯ ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.

    ಸ್ವಾಸ್ಥ್ಯ ಚಿಂತನ ಶಿಬಿರದ ಎರಡನೇ ದಿನವಾದ ಶನಿವಾರ ಆಯುಷ್ಮಾನ್ ಭವ ವಿಚಾರ ಸಂಕಿರಣದಲ್ಲಿ ರಾಜ್ಯ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪಾಲ್ಗೊಂಡಿದ್ದರು. ಇದನ್ನೂ ಓದಿ: ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರಕ್ಕೂ ಸೋಮಣ್ಣ ಟವೆಲ್? – ಕಾರ್ಯಕರ್ತರ ಸಭೆಯಲ್ಲಿ ಇಂಗಿತ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕೊರೊನಾ ವೇಳೆ ಜನರಿಂದ ಸುಲಿಗೆ – 577 ಖಾಸಗಿ ಆಸ್ಪತ್ರೆಗಳಿಗೆ ನೋಟಿಸ್

    ಕೊರೊನಾ ವೇಳೆ ಜನರಿಂದ ಸುಲಿಗೆ – 577 ಖಾಸಗಿ ಆಸ್ಪತ್ರೆಗಳಿಗೆ ನೋಟಿಸ್

    ಬೆಂಗಳೂರು: ಕೋವಿಡ್ ಸಂಕಷ್ಟದ ಸಮಯದಲ್ಲಿ ಸಾರ್ವಜನಿಕರಿಂದ ಹೆಚ್ಚುವರಿ ಹಣ ವಸೂಲಿ ಮಾಡಿರುವ ಆರೋಪದ ಮೇಲೆ ಬೆಂಗಳೂರಿನ 577 ಖಾಸಗಿ ಆಸ್ಪತ್ರೆಗಳಿಗೆ ನೋಟಿಸ್ ನೀಡಲಾಗಿದೆ. ಈ ಪೈಕಿ ಈವೆರೆಗೆ ಪ್ರತಿಕ್ರಿಯೆ ನೀಡದ 30 ಆಸ್ಪತ್ರೆಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಆರೋಗ್ಯ ಇಲಾಖೆ ಎಚ್ಚರಿಕೆ ನೀಡಿದೆ.

    ಸಾಂದರ್ಭಿಕ ಚಿತ್ರ

    ಬೆಂಗಳೂರಿನ ಖಾಸಗಿ ಆಸ್ಪತ್ರೆಗಳಲ್ಲಿ ಹೆಚ್ಚುವರಿ ಹಣ ವಸೂಲಿ ಮಾಡಲಾಗುತ್ತಿದೆ ಎಂಬ ಸಾರ್ವಜನಿಕರ ದೂರಿನ ಮೇರೆಗೆ 577 ಆಸ್ಪತ್ರೆಗಳಿಗೆ ಆರೋಗ್ಯ ಇಲಾಖೆ ನೋಟಿಸ್ ನೀಡಿತ್ತು. ಈ ಪೈಕಿ 450ಕ್ಕೂ ಹೆಚ್ಚು ಆಸ್ಪತ್ರೆಗಳು ನೋಟಿಸ್‌ಗೆ ಪ್ರತಿಕ್ರಿಯೆ ನೀಡಿವೆ. ಹೆಚ್ಚುವರಿಯಾಗಿ ವಸೂಲಿ ಮಾಡಿದ್ದ ಹಣವನ್ನೂ ವಾಪಸ್ ನೀಡಿವೆ. ಆದರೆ ಈವರೆಗೆ ಯಾವುದೇ ಪ್ರತಿಕ್ರಿಯೆ ನೀಡದ 30 ಆಸ್ಪತ್ರೆಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಆರೋಗ್ಯ ಇಲಾಖೆ ಎಚ್ಚರಿಕೆ ನೀಡಿದೆ. ಇದನ್ನೂ ಓದಿ: ಸಿದ್ದರಾಮಯ್ಯನವರ ಜನಪ್ರಿಯತೆ ನೋಡಿ ಉರಿ ಶುರುವಾಗಿದೆ: ಡಾ. ಎಚ್.ಸಿ. ಮಹದೇವಪ್ಪ

    ಕೆಲವು ಆಸ್ಪತ್ರೆಗಳು ಕೋವಿಡ್ ಸಮಯದಲ್ಲಿ ರೋಗಿಗಳ ಶುಲ್ಕ ಪಡೆಯುವ ಜೊತೆಗೆ ಸರ್ಕಾರದಿಂದಲೂ ಹಣ ಪಡೆದಿವೆ ಎಂದು ಇಲಾಖೆ ಹೇಳಿದೆ. ಇದನ್ನೂ ಓದಿ: ಆರ್ಯವರ್ಧನ್ ಪಾತ್ರಕ್ಕೆ ಅನಿರುದ್ಧ ಪಡೆದುಕೊಳ್ಳುತ್ತಿದ್ದ ಸಂಭಾವನೆ ಬಹಿರಂಗ

    ಕೋವಿಡ್ ಸಂದರ್ಭದಲ್ಲಿ ರಾಜ್ಯ ಸರ್ಕಾರ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಕಾರ್ಡ್ ಅಡಿಯಲ್ಲಿ ಚಿಕಿತ್ಸೆ ನೀಡಲು ಆದೇಶಿಸಿತ್ತು. ಅದಕ್ಕಾಗಿ ಸಂಬಂಧಪಟ್ಟ ಆಸ್ಪತ್ರೆಗಳಿಗೆ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ನಿಂದ ವೆಚ್ಚ ಬರಿಸಿತ್ತು. ಆದರೂ ಸಾರ್ವಜನಿಕರಿಂದ ಹಣ ವಸೂಲಿ ಮಾಡಲಾಗಿದೆ ಎಂಬ ದೂರು ಕೇಳಿಬಂದ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ನೋಟಿಸ್ ನೀಡಿತ್ತು. ಆದರೆ 30 ಆಸ್ಪತ್ರೆಗಳು ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಅವುಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಆರೋಗ್ಯ ಇಲಾಖೆ ಎಚ್ಚರಿಕೆ ನೀಡಿದೆ.

    Live Tv
    [brid partner=56869869 player=32851 video=960834 autoplay=true]

  • ಬಡವರ ಆರೋಗ್ಯದ ಮೇಲೆ ಕೇಂದ್ರ, ರಾಜ್ಯ ಸರ್ಕಾರ ಹೆಚ್ಚಿನ ಗಮನವಿಟ್ಟಿದೆ: ಸುಧಾಕರ್

    ಬಡವರ ಆರೋಗ್ಯದ ಮೇಲೆ ಕೇಂದ್ರ, ರಾಜ್ಯ ಸರ್ಕಾರ ಹೆಚ್ಚಿನ ಗಮನವಿಟ್ಟಿದೆ: ಸುಧಾಕರ್

    – ವೈದ್ಯಕೀಯ ಶಿಕ್ಷಣದಲ್ಲಿ ಅಭಿವೃದ್ಧಿಗೆ ಸರ್ಕಾರ ಶ್ರಮಿಸುತ್ತಿದೆ

    ಬೆಂಗಳೂರು: ನರೇಂದ್ರ ಮೋದಿಯವರು ಆರಂಭಿಸಿರುವ ಆಯುಷ್ಮಾನ್ ಭಾರತ್ ಯೋಜನೆ ಎಲ್ಲರಿಗೂ ಉಚಿತ ಆರೋಗ್ಯ ವಿಮೆ ನೀಡುತ್ತಿದೆ. ಉಚಿತವಾಗಿ ಆರೋಗ್ಯ ವಿಮೆ ನೀಡುತ್ತಿರುವ ಏಕೈಕ ದೇಶ ಭಾರತವಾಗಿದೆ. ಶೂನ್ಯ ಪ್ರಿಮಿಯಂನಲ್ಲಿ 5 ಲಕ್ಷ ರೂಪಾಯಿ ತನಕ ಶಾಶ್ವತ ಆರೋಗ್ಯ ವಿಮೆಯನ್ನು ಸರ್ಕಾರ ನೀಡುತ್ತಿದೆ. ದೇಶದ ಬಡವರ ಆರೋಗ್ಯದ ಮೇಲೆ ಸರ್ಕಾರ ಹೆಚ್ಚಿನ ಗಮನವಿಟ್ಟಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್ ಹೇಳಿದ್ದಾರೆ.

    ಬೆಂಗಳೂರು ಮೆಡಿಕಲ್ ಕಾಲೇಜ್‍ನ ಪದವಿ ಪ್ರಧಾನ ಸಮಾರಂಭದಲ್ಲಿ ಮಾತನಾಡಿದ ಅವರು, ದೇಶದಲ್ಲಿ ಇಂದು ತಾಂತ್ರಿಕ ಮತ್ತು ವೈದ್ಯಕೀಯ ಶಿಕ್ಷಣದಲ್ಲಿ ಹೆಣ್ಣುಮಕ್ಕಳು ಹೆಚ್ಚಿನ ಸಾಧನೆ ಮಾಡುತ್ತಿದ್ದಾರೆ. ಇದು ದೇಶದಲ್ಲಿ ಮಹಿಳಾ ಸಬಲೀಕರಣದ ಸಂಕೇತ. ಸಮಾಜದಲ್ಲಿ ಬದಲಾವಣೆಗಳು ಆಗುತ್ತಿವೆ. ಬಡವರ ಮಕ್ಕಳು ಕೂಡ ವೈದ್ಯರಾಗಬೇಕೆಂಬ ಕನಸು ಈಡೇರುತ್ತಿದೆ. ಕಳೆದ 7 ವರ್ಷಗಳಲ್ಲಿ ದೇಶದಲ್ಲಿ ವೈದ್ಯಕೀಯ ಶಿಕ್ಷಣ ವ್ಯವಸ್ಥೆ ಬದಲಾವಣೆ ಕಂಡಿದೆ. ಪ್ರತೀ ವರ್ಷ 65,000 ಎಂಬಿಬಿಎಸ್ ವೈದ್ಯರು ಮತ್ತು 30,000 ವೈದ್ಯರು ಸ್ನಾತಕೋತ್ತರ ಪದವಿ ಪಡೆದು ಸೇವೆಗೆ ಲಭ್ಯರಾಗುತ್ತಿದ್ದಾರೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಒಂದು ಲಕ್ಷ ಉದ್ಯೋಗ ಸೃಷ್ಟಿಸುವ FMCG ಕ್ಲಸ್ಟರ್ ಯೋಜನೆ ಇದೇ ವರ್ಷ ಪ್ರಾರಂಭ: ಬೊಮ್ಮಾಯಿ

    ಬೆಂಗಳೂರು ಮೆಡಿಕಲ್ ಕಾಲೇಜು (ಬಿಎಂಸಿ) ದೇಶದ ಹೆಮ್ಮೆಯ ಕಾಲೇಜ್‍ಗಳಲ್ಲಿ ಒಂದು. ಇಲ್ಲಿ ಪ್ರವೇಶ ಪಡೆಯುವ ಕನಸು ಹಲವು ವಿದ್ಯಾರ್ಥಿಗಳಿಗೆ ಇರುತ್ತದೆ. ಇಲ್ಲಿ ಕಲಿತ ವಿದ್ಯಾರ್ಥಿಗಳು ಅದೃಷ್ಟವಂತರಲ್ಲಿ ಅದೃಷ್ಟವಂತರು. ಅತ್ಯುತ್ತಮ ಸಂಸ್ಥೆಯಲ್ಲಿ ಕಲಿತವನ ಅನುಭವ ಜೊತೆಗೆ ಸಮಾಜದಲ್ಲಿ ವಿಭಿನ್ನ ಮತ್ತು ವಿಶಿಷ್ಟ ಗೌರವ ಸಿಗುತ್ತದೆ. ವೈದ್ಯರಿಗೆ ಸಮಾಜದ ಎಲ್ಲಾ ಕಡೆಯೂ ವಿಶಿಷ್ಟ ಗೌರವ ಇದೆ. ವೈದ್ಯ ವಿದ್ಯಾರ್ಥಿಗಳು, ಪದವಿ ಪಡೆದವರು ಈ ಸಮಾಜದ ಹೆಮ್ಮೆ ಎಂದು ತಿಳಿಸಿದರು.

    ಕರ್ನಾಟಕದಲ್ಲಿ ಒಟ್ಟು 65 ಮೆಡಿಕಲ್ ಕಾಲೇಜುಗಳಿವೆ. 4 ಸರ್ಕಾರಿ ಮೆಡಿಕಲ್ ಕಾಲೇಜ್‍ಗಳು ಶೀಘ್ರದಲ್ಲಿ ಆರಂಭವಾಗಲಿವೆ. ಖಾಸಗಿಯಲ್ಲಿ 3 ಹೆಚ್ಚುವರಿ ಮೆಡಿಕಲ್ ಕಾಲೇಜ್‍ಗಳಿಗೆ ಅನುಮತಿ ನೀಡಲಾಗಿದೆ. ಮುಂದಿನ ದಿನಗಳಲ್ಲಿ 9 ಜಿಲ್ಲೆಗಳಲ್ಲಿ ಹೊಸತಾಗಿ 9 ಮೆಡಿಕಲ್ ಕಾಲೇಜ್‍ಗಳು ಆರಂಭ ಮಾಡಲು ತಯಾರಿಗಳು ನಡೆಯುತ್ತಿವೆ. ದೇಶದ ವೈದ್ಯ ವಿದ್ಯಾರ್ಥಿಗಳಲ್ಲಿ ಶೇಕಡಾ 30.5 ರಷ್ಟು ಕೊಡುಗೆ ಕರ್ನಾಟಕದ್ದಾಗಿದೆ. ಮಹಾರಾಷ್ಟ್ರ, ಮಧ್ಯಪ್ರದೇಶ ನಂತರ ಕರ್ನಾಟಕದಲ್ಲಿ ಅತೀ ಹೆಚ್ಚು ವೈದ್ಯ ವಿದ್ಯಾರ್ಥಿಗಳಿಗೆ ಅವಕಾಶ ಮಾಡಿಕೊಡುತ್ತದೆ ಎಂದು ಹೇಳಿದರು. ಇದನ್ನೂ ಓದಿ: ಪಿಎಸ್‌ಐ ನೇಮಕಾತಿಯಲ್ಲಿ ಅಕ್ರಮ – ಮರುಪರೀಕ್ಷೆಗೆ ಸರ್ಕಾರ ತೀರ್ಮಾನ

    corona

    ಪ್ರಧಾನ ಮಂತ್ರಿ ನರೇಂದ್ರ ಮೋದಿ, ವೈದ್ಯಕೀಯ ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ನೀಡುತ್ತಿದ್ದಾರೆ. 2014ಕ್ಕೂ ಮೊದಲು ದೇಶದಲ್ಲಿ ಕೆಲವೇ ಕೆಲವು ಮೆಡಿಕಲ್ ಕಾಲೇಜ್‍ಗಳಿದ್ದವು. ಆದರೆ ಕಳೆದ 7 ವರ್ಷಗಳಲ್ಲಿ ಹೊಸತಾಗಿ 150ಕ್ಕೂ ಅಧಿಕ ಮೆಡಿಕಲ್ ಕಾಲೇಜ್‍ಗಳು ಆರಂಭವಾಗಿವೆ. 65,000 ಎಂಬಿಬಿಎಸ್ ಡಾಕ್ಟರ್‌ಗಳು ಪ್ರತೀ ವರ್ಷ ಹೊರ ಬರುತ್ತಾರೆ. 30,000 ಸ್ನಾತಕೋತ್ತರ ಪದವಿ ಪಡೆದ ವೈದ್ಯರು ಸಮಾಜ ಸೇವೆಗೆ ಲಭ್ಯರಾಗುತ್ತಿದ್ದಾರೆ. ವೈದ್ಯಕೀಯ ಶಿಕ್ಷಣದ ಕ್ಷೇತ್ರ ದುಬಾರಿ ವೆಚ್ಚವನ್ನು ಬಯಸುತ್ತಿದೆ. ಆದರೆ ಇದನ್ನು ಸರ್ಕಾರ ಹಂತ ಹಂತವಾಗಿ ಕಡಿಮೆ ಮಾಡಲು ಯೋಜನೆ ರೂಪಿಸಿದೆ. ಬಡವರಿಗೂ ಸಹ ವೈದ್ಯಕೀಯ ಶಿಕ್ಷಣ ಸಿಗಬೇಕು ಅನ್ನುವುದೇ ಪ್ರಧಾನಿ ನರೇಂದ್ರ ಮೋದಿಯವರ ಕನಸಾಗಿದೆ ಎಂದು ನುಡಿದರು. ಇದನ್ನೂ ಓದಿ: ತಮ್ಮದೇ ಪಕ್ಷದ ಮುಖಂಡರ ಫ್ಲೆಕ್ಸ್ ವಿರುದ್ಧ ಪ್ರತಾಪ್ ಸಿಂಹ ಗರಂ

    ಕೊರೊನಾ ಸಾಂಕ್ರಾಮಿಕ ರೋಗದ ವೇಳೆ ವೈದ್ಯಕೀಯ ವಿದ್ಯಾರ್ಥಿಗಳು ಅನನ್ಯ ಸೇವೆ ಸಲ್ಲಿಸಿದ್ದಾರೆ. ಜೀವನದಲ್ಲಿ ಎದುರಾಗಬಹುದುದಾದ ಸಂಕಷ್ಟಗಳು ಕಲಿಕೆಯ ಹಂತದಲ್ಲೇ ಅನುಭವಕ್ಕೆ ಬಂದಿದೆ. ಇದು ಜೀವನದ ಅಂತ್ಯವಲ್ಲ, ಆರಂಭ ಎಂದು ಪ್ರಧಾನಿಯವರು ಹೇಳಿದರಂತೆ ಎಲ್ಲಾ ವೈದ್ಯಕೀಯ ವಿದ್ಯಾರ್ಥಿಗಳ ಹೊಸ ಜೀವನ ಇಂದಿನಿಂದ ಆರಂಭವಾಗಿದೆ. ಕಳೆದ 5 ವರ್ಷಗಳಲ್ಲಿ ತೋರಿದ ಬದ್ಧತೆ, ಶ್ರದ್ಧೆ ಮತ್ತು ಅಧ್ಯಯನ ಶೀಲತೆಯನ್ನು ಬದುಕಿನ ಉದ್ದಕ್ಕೂ ಅಳವಡಿಸಿಕೊಳ್ಳಬೇಕು ಎಂದು ಆಶಿಸಿದರು.

    ಭಾರತ ವೈದ್ಯಕೀಯ ವಿಜ್ಞಾನಕ್ಕೆ ಅದ್ಭುತ ಇತಿಹಾಸವಿದೆ. ಆಯುರ್ವೇದದಲ್ಲಿ ಚರಕ, ಶುಶ್ರೂತರ ಕೊಡುಗೆ ಅಮೂಲ್ಯವಾದದ್ದು. ಬಿಎಂಸಿ ಕೂಡ ಕೇವಲ ವೈದ್ಯರನ್ನು ಸಮಾಜಕ್ಕೆ ಕೊಡುಗೆಯಾಗಿ ನೀಡುತ್ತಿಲ್ಲ. ಬದಲಾಗಿ ಸಂಶೋಧನೆ ಮತ್ತು ಅಭಿವೃದ್ಧಿ ಕಡೆಗೂ ಗಮನ ಹರಿಸಿದೆ. ಕೊರೊನಾ ಸಾಂಕ್ರಾಮಿಕ ರೋಗದ ಸಮಯದಲ್ಲಿ ಬಿಎಂಸಿಯ ವಿದ್ಯಾರ್ಥಿಗಳು ನೀಡಿದ ಸೇವೆಗೆ ಧನ್ಯವಾಧಗಳು. ಇವರ ಶ್ರಮದಿಂದ ಲಸಿಕೆ ಬರುವ ಹಂತದ ವರೆಗೆ ಕೊರೊನಾವನ್ನು ಕಂಟ್ರೋಲ್ ಮಾಡಲು ಸಾಧ್ಯವಾಯಿತು ಎಂದರು.

    ವೈದ್ಯರ ಸೇವೆ ಸಮಾಜದಲ್ಲಿ ವಿಭಿನ್ನ ಗೌರವವನ್ನು ಹೊಂದಿದೆ. ಮನುಷ್ಯತ್ವ ಮತ್ತುಸೇವೆಯನ್ನು ಒಂದೇ ಕಾಲದಲ್ಲಿ ಅಪೇಕ್ಷೆ ಮಾಡುವ ಕೆಲಸ ಇದಾಗಿದೆ. ಇದರಲ್ಲಿ ಆತ್ಮ ತೃಪ್ತಿಯೂ ಇದೆ. ಎಲ್ಲವನ್ನೂ ಮರೆತು ಸಮಾಜಕ್ಕಾಗಿ, ಇನ್ನೊಬ್ಬರಿಗಾಗಿ ಕೆಲಸ ಮಾಡಬೇಕಾಗುತ್ತದೆ. ಎಲ್ಲಾ ತ್ಯಾಗವನ್ನು ಮಾಡಲು ಸದಾ ಸಿದ್ಧರಿರಬೇಕಾದ ಕೆಲಸ ಇದು. ಎಲ್ಲಾ ಕ್ಷಣದಲ್ಲೂ, ಎಲ್ಲಾ ದಿನವೂ ವೈದ್ಯರು ಸಮಾಜದ ಬಗ್ಗೆ ಮಾತ್ರ ಯೋಚನೆ ಮಾಡಬೇಕು ಎಂದು ಹೇಳಿದರು.

  • ಎಲ್ಲಾ ಪ್ರಜೆಗಳಿಗೆ ಸಿಗಲಿದೆ ಹೆಲ್ತ್ ಐಡಿ ಕಾರ್ಡ್ – ವಿಶೇಷತೆ ಏನು? ಲಾಭ ಏನು?

    ಎಲ್ಲಾ ಪ್ರಜೆಗಳಿಗೆ ಸಿಗಲಿದೆ ಹೆಲ್ತ್ ಐಡಿ ಕಾರ್ಡ್ – ವಿಶೇಷತೆ ಏನು? ಲಾಭ ಏನು?

    ನವದೆಹಲಿ: ಇನ್ನು ಮುಂದೆ ದೇಶದ ಎಲ್ಲ ಪ್ರಜೆಗಳು ಒಂದೇ ಕ್ಲಿಕ್ ನಲ್ಲಿ ತಮ್ಮ ಆರೋಗ್ಯ ಮಾಹಿತಿಯನ್ನು ಪಡೆದುಕೊಳ್ಳಬಹುದು.

    ದೇಶದ ಜನತೆಗೆ ಆಯುಷ್ಮಾನ್ ಭಾರತ್ ಡಿಜಿಟಲ್ ಮಿಷನ್ ಸಮರ್ಪಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಯೊಬ್ಬ ಭಾರತೀಯರು ಈಗ ಡಿಜಿಟಲ್ ಹೆಲ್ತ್ ಐಡಿಯನ್ನು ಪಡೆಯಬಹುದು. ಡಿಜಿಟಲ್ ಆರೋಗ್ಯ ಪರಿಸರ ವ್ಯವಸ್ಥೆಯಲ್ಲಿ ಇದು ಪ್ರಮುಖ ಪಾತ್ರ ವಹಿಸಲಿದೆ. ಹೇಗೆ ಯುಪಿಐ ಕಾರ್ಯನಿರ್ವಹಿಸುತ್ತದೋ ಅದೇ ರೀತಿಯಾಗಿ ಇದು ಕಾರ್ಯ ನಿರ್ವಹಿಸಲಿದೆ ಎಂದು ತಿಳಿಸಿದರು.

    https://twitter.com/PIB_India/status/1442376458509316098

    ಪ್ರತಿಯೊಬ್ಬ ನಾಗರಿಕರ ಆರೋಗ್ಯ ದಾಖಲೆಗಳು ಈಗ ಡಿಜಿಟಲ್ ನಲ್ಲಿ ಸುರಕ್ಷಿತವಾಗಿರುತ್ತದೆ. ಬಡ ಮತ್ತು ಮಧ್ಯಮ ವರ್ಗದ ವೈದ್ಯಕೀಯ ಚಿಕಿತ್ಸೆಯಲ್ಲಿನ ಸಮಸ್ಯೆಗಳನ್ನು ನಿವಾರಿಸುವಲ್ಲಿ ಇದು ದೊಡ್ಡ ಪಾತ್ರವನ್ನು ವಹಿಸುತ್ತದೆ. ಮೂರು ವರ್ಷಗಳ ಹಿಂದೆ, ಪಂಡಿತ್ ದೀನದಯಾಳ್ ಉಪಾಧ್ಯಾಯರ ಜನ್ಮ ದಿನಾಚರಣೆಯಂದು ಆಯುಷ್ಮಾನ್ ಭಾರತ್ ಯೋಜನೆಯನ್ನು ಜಾರಿಗೆ ತರಲಾಯಿತು. ಇಂದಿನಿಂದ ದೇಶಾದ್ಯಂತ ಆಯುಷ್ಮಾನ್ ಭಾರತ್ ಡಿಜಿಟಲ್ ಮಿಷನ್ ಆರಂಭವಾಗುತ್ತಿರುವುದಕ್ಕೆ ನನಗೆ ಸಂತೋಷವಾಗಿದೆ ಎಂದು ಮೋದಿ ಹೇಳಿದರು.

    130 ಕೋಟಿ ಆಧಾರ್ ಐಡಿಗಳು, 118 ಕೋಟಿ ಮೊಬೈಲ್ ಚಂದಾದಾರರು, ಸುಮಾರು 80 ಕೋಟಿ ಇಂಟರ್ನೆಟ್ ಬಳಕೆದಾರರು ಮತ್ತು 43 ಕೋಟಿ ಜನ್ ಧನ್ ಬ್ಯಾಂಕ್ ಖಾತೆಗಳು – ಇಂತಹ ಬೃಹತ್, ಸಂಪರ್ಕಿತ ಮೂಲಸೌಕರ್ಯವನ್ನು ಪ್ರಪಂಚದಲ್ಲಿ ಬೇರೆಲ್ಲಿಯೂ ಕಾಣಲು ಸಾಧ್ಯವಿಲ್ಲ ಎಂದು ಮೋದಿ ಮೆಚ್ಚುಗೆ ವ್ಯಕ್ತಪಡಿಸಿದರು.

    ಆರೋಗ್ಯ ಕಾರ್ಡ್ ನಲ್ಲಿ 14 ಅಂಕಿಗಳ ವಿಶಿಷ್ಟ ಗುರುತಿನ ಸಂಖ್ಯೆ ಇರಲಿದೆ. ಪ್ರತಿ ಪ್ರಜೆಯ ಆರೋಗ್ಯ ಖಾತೆಯಾಗಿ ಇದು ಕೆಲಸ ಮಾಡುತ್ತದೆ. ಈ ಕಾರ್ಡ್ ನಲ್ಲಿ ವ್ಯಕ್ತಿಯ ಆರೋಗ್ಯಕ್ಕೆ ಸಂಬಂಧಿಸಿದ ಎಲ್ಲಾ ಮಾಹಿತಿಗಳ ಸಂಗ್ರಹ ಇರಲಿದೆ. ವೈಯಕ್ತಿಕ ಆರೋಗ್ಯ ದಾಖಲೆಗಳನ್ನು ಮೊಬೈಲ್ ಅಪ್ಲಿಕೇಷನ್ ಸಹಾಯದಿಂದ ಲಿಂಕ್ ಮಾಡಬಹುದು.

    ಕಳೆದ ವರ್ಷ ಘೋಷಣೆ:
    ಕಳೆದ ವರ್ಷದ ಆಗಸ್ಟ್ 15ರ ಸ್ವಾತಂತ್ರ್ಯ ದಿನಾಚರಣೆಯ ಭಾಷಣದಲ್ಲಿ ಆಯುಷ್ಮಾನ್ ಭಾರತ್ ಡಿಜಿಟಲ್ ಮಿಷನ್ ಪ್ರಾಯೋಗಿಕ ಯೋಜನೆಯನ್ನು ಪ್ರಧಾನಿ ಘೋಷಿಸಿದ್ದರು. 6 ಕೇಂದ್ರಾಡಳಿತ ಪ್ರದೇಶದಲ್ಲಿ ಇದನ್ನು ಪ್ರಾಯೋಗಿಕವಾಗಿ ಜಾರಿಗೊಳಿಸಲಾಗುತ್ತದೆ.

    ಲಾಭ ಹೇಗೆ?
    ಈ ಸೇವೆ ದೇಶವ್ಯಾಪಿ ಇರಲಿದೆ. ವ್ಯಕ್ತಿ ಯಾವುದೇ ಮೂಲೆಗೆ ಹೋದಾಗ ಸಮಸ್ಯೆಯಾಗಿ ಆಸ್ಪತ್ರೆ ಸೇರಿದಾಗ ಆತನ ಆರೋಗ್ಯದ ಮಾಹಿತಿ ಕೂಡಲೇ ಸಿಗುವುದಿಲ್ಲ. ಆದರೆ ಈ ಆಪ್‍ನಲ್ಲಿ ವಿವರ ನೀಡಿದ್ದರೆ ಕೂಡಲೇ ವೈದ್ಯರಿಗೆ ಈ ಹಿಂದೆ ರೋಗಿಗೆ ಏನಾಗಿತ್ತು? ಯಾವ ಕಾರಣಕ್ಕೆ ಶಸ್ತ್ರ ಚಿಕಿತ್ಸೆ ನೀಡಲಾಗಿತ್ತು? ಈ ಹಿಂದೆ ಎಲ್ಲಿ ಚಿಕಿತ್ಸೆ ನೀಡಲಾಗಿತ್ತು ಈ ಎಲ್ಲ ವಿವರಗಳು ಕೂಡಲೇ ಸಿಗಲಿದೆ. ಇದರಿಂದಾಗಿ ಕಡಿಮೆ ಅವಧಿಯಲ್ಲಿ ರೋಗಿಗೆ ಸರಿಯಾದ ಚಿಕಿತ್ಸೆ ನೀಡಲು ಸಾಧ್ಯವಾಗುತ್ತದೆ.  ಇದನ್ನೂ ಓದಿ: ಪ್ರತಿಭಟನೆ ವೇಳೆ ಡಿಸಿಪಿ ಮೇಲೆ ಕಾರು ಹತ್ತಿಸಲು ಯತ್ನ

    ಈ ಐಡಿ ಕಾರ್ಡ್ ಎಲ್ಲರಿಗೂ ಕಡ್ಡಾಯವಲ್ಲ. ಜನರು ಸ್ವಇಚ್ಛೆಯಿಂದ ಕಾರ್ಡ್ ಮಾಡಿಸಬಹುದು. ಆರಂಭದಲ್ಲಿ ಹೆಲ್ತ್ ಐಡಿ, ವೈಯಕ್ತಿಕ ಆರೋಗ್ಯ ಮಾಹಿತಿ, ಡಿಜಿ ಡಾಕ್ಟರ್ ಮತ್ತು ಹೆಲ್ತ್ ರಿಜಿಸ್ಟ್ರಿ ಇರಲಿದೆ. ನಂತರದ ದಿನಗಳಲ್ಲಿ ಇ ಫಾರ್ಮಾಸಿ ಮತ್ತು ಟೆಲಿಮೆಡಿಸಿನ್ ಸೇವೆಗಳನ್ನು ಸೇರಿಸಲಾಗುತ್ತದೆ ಎಂದು ವರದಿಯಾಗಿದೆ. ಈಗಾಗಲೇ ಹಲವು ದೇಶಗಳಲ್ಲಿ ಸರ್ಕಾರವೇ ಈ ರೀತಿಯ ಆರೋಗ್ಯ ಕಾರ್ಡ್‍ಗಳನ್ನು ನೀಡಿವೆ.