Tag: ಆರಂಭ

  • ಆರಂಭ ಸಿನಿಮಾದ ಟ್ರೈಲರ್ ಬಿಡುಗಡೆ

    ಆರಂಭ ಸಿನಿಮಾದ ಟ್ರೈಲರ್ ಬಿಡುಗಡೆ

    ಮಂಜುನಾಥ್ ಬಡಿಗೇರ್ (Manjunath Badigere) ಚೊಚ್ಚಲ ಬಾರಿಗೆ ನಿರ್ದೇಶಿಸಿ, ನಾಯಕನಾಗಿ ನಟಿಸಿರುವ ಚಿತ್ರ ‘ಆರಂಭ’. ಶ್ರೀ ಕಾಳಿಕಾ ದೇವಿ ಪ್ರೊಡಕ್ಷನ್ಸ್ ಬ್ಯಾನರ್ ಅಡಿಯಲ್ಲಿ ಸಾಂಭಯ್ಯ ಆಚಾರ್ಯ ನಿರ್ಮಾಣದ ಆರಂಭ (Arambha) ಚಿತ್ರದ ಟ್ರೈಲರ್ (Trailer) ಬಿಡುಗಡೆ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು.

    ನಿರ್ದೇಶಕರು ಮಾತನಾಡಿ ಕೆಲವು ಸಿನಿಮಾಗಳಲ್ಲಿ ನಿರ್ದೇಶನ, ಛಾಯಾಗ್ರಹಣ ತಂಡದಲ್ಲಿ ಕೆಲಸ ಮಾಡಿ ಕಿರುಚಿತ್ರಗಳನ್ನು ನಿರ್ದೇಶಿಸಿದ್ದೇನೆ. ಇದು ನೈಜ ಘಟನೆಗಳಿಂದ ಸ್ಫೂರ್ತಿ ಪಡೆದ ಕಥೆ. ಪಕ್ಷಿಗಳ ರಕ್ಷಣೆಗಾಗಿ ಹೋರಾಡುತಿದ್ದ ಯುವತಿಯ ಮೇಲೆ ಅತ್ಯಾಚಾರ ಹಾಗೂ ಕೊಲೆಯಾಗುತ್ತದೆ. ಆ ಕೊಲೆಯ ಪ್ರತಿಕಾರಕ್ಕೆ ಇಬ್ಬರು ಯುವಕರು ಮುಂದಾಗುತ್ತಾರೆ. ಅವರ ಹೋರಾಟಕ್ಕೆ ಜಯ ಸಿಗುತ್ತಾ ಎಂಬುದರ ಸುತ್ತ ಚಿತ್ರದ ಕಥೆ ಸಾಗುತ್ತದೆ. ಇದನ್ನೂ ಓದಿ:ಯಶ್ ಸಿನಿಮಾಗಾಗಿ ಬೆಂಗಳೂರಿನಲ್ಲಿ ಬೀಡು ಬಿಟ್ಟ ಡೈರೆಕ್ಟರ್- ಇಲ್ಲಿದೆ ಗುಡ್ ನ್ಯೂಸ್

    ಈ ಚಿತ್ರದಲ್ಲಿ ನಾಯಕಿಯಾಗಿ ನಿಶ್ಚಿತಾ ಶೆಟ್ಟಿ ನಟಿಸಿದ್ದು, ಜಗನ್ನಾಥ ದಾಸರು ಬಳಿಕ ನಟಿಸುತ್ತಿರುವ ಎರಡನೇ ಚಿತ್ರವಿದು. ಎರಡನೇ ನಾಯಕನಾಗಿ ಪೃಥ್ವಿರಾಜ್ ಅಭಿನಯಿಸಿದ್ದಾರೆ, ಪೊಲೀಸ್ ಪಾತ್ರದಲ್ಲಿ ಗಣೇಶ್ ರಾವ್ ನಟಿಸಿದ್ದು ಇದುವರೆಗೆ 310 ಸಿನಿಮಾಗಳಲ್ಲಿ ನಟಿಸಿದ್ದೇನೆ ಅವುಗಳಲ್ಲಿ 150ಕ್ಕೂ ಅಧಿಕ ಚಿತ್ರಗಳಲ್ಲಿ ಪೊಲೀಸ್ ಪಾತ್ರದಲ್ಲಿ ಅಭಿನಯಿಸಿದ್ದೇನೆ. ಈ ಚಿತ್ರದಲ್ಲಿ ಮೊದಲು ನೆಗಿಟಿವ್ ಶೇಡ್ ನಲ್ಲಿ ಕಾಣಿಸಿಕೊಂಡು ನಂತರ ನಾಯಕರಿಗೆ ಸಹಾಯ ಮಾಡುವ ಪಾತ್ರ ನನ್ನದಾಗಿರುತ್ತದೆ ಎಂದು ಹೇಳಿಕೊಂಡರು.

     

    ಕುಮಾರ್ ಬೋರಕನವರ್, ರಜತಾದ್ರಿ ಪ್ರಶಾಂತಂ, ಪ್ರಿಯಾಂಕಾ, ಕಾಳಚಾರಿ, ಪ್ರಭು ಹಿರೇಮಠ್ ಪ್ರಮುಖ ತಾರಾಗಣದಲ್ಲಿದ್ದಾರೆ. ಈ ಚಿತ್ರದಲ್ಲಿ ಛಾಯಾಗ್ರಹಣ  ಮುಂಜಾನೆ ಮಂಜು, ಸಂಗೀತ ಅಲೆಕ್ಸ ಮಾಡಿದ್ದು, ಸಂಕಲನ ಆಚಾರ್ಯ ಗುರು ಮಾಡಿದ್ದು ಚಿತ್ರವನ್ನು ಜುಲೈ ನಲ್ಲಿ ಬಿಡುಗಡೆ ಮಾಡಲು ಸಕಲ ಸಿದ್ಧತೆಯನ್ನು ಚಿತ್ರ ತಂಡ ಮಾಡಿಕೊಳ್ಳುತ್ತಿದೆ.

  • ವಾರದಲ್ಲಿ ಐದು ಬಾರಿ ಮೈಸೂರು-ಬೆಂಗಳೂರು ವಿಮಾನಯಾನ ಆರಂಭ

    ವಾರದಲ್ಲಿ ಐದು ಬಾರಿ ಮೈಸೂರು-ಬೆಂಗಳೂರು ವಿಮಾನಯಾನ ಆರಂಭ

    ಮೈಸೂರು: ಇಂದಿನಿಂದ ವಾರಕ್ಕೆ 5 ಬಾರಿ ಮೈಸೂರು-ಬೆಂಗಳೂರು ನಡುವೆ ವಿಮಾನ ಸೇವೆ ಆರಂಭವಾಗಿದೆ.

    ಕೇಂದ್ರ ಸರ್ಕಾರದ ವಿಮಾನಯಾನದಲ್ಲಿ ಪಗ್ರತಿ ಸಾಧಿಸುವ ದೃಷ್ಟಿಯಿಂದ ಜಾರಿ ಮಾಡಿದ ಅಗ್ಗದ ಬೆಲೆಯ ಉಡಾನ್ (ಉಡೇ ದೇಶ್ ಕಾ ಆಮ್ ನಾಗರಿಕ್) ಯೋಜನೆಯ ಭಾಗವಾಗಿ ಈ ಸೇವೆ ಆರಂಭಗೊಂಡಿದೆ. ಈ ಸೇವೆಗೆ ಉನ್ನತ ಶಿಕ್ಷಣ ಸಚಿವ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ ದೇವೇಗೌಡ ಚಾಲನೆ ನೀಡಿದರು.

    ಇಂಡಿಯನ್ ಏರ್‍ಲೈನ್ಸ್ ಸಂಸ್ಥೆಗೆ ಸೇರಿದ ವಿಮಾನ ವಾರದಲ್ಲಿ 5 ದಿನ ಬೆಳಿಗ್ಗೆ 11.15ಕ್ಕೆ ಮೈಸೂರಿಗೆ ಆಗಮಿಸಿ ಮತ್ತೆ ಮಧ್ಯಾಹ್ನ 12 ಗಂಟೆಗೆ ಬೆಂಗಳೂರಿಗೆ ತೆರಳಲಿದೆ. ಆರಂಭವಾದ ಮೊದಲ ದಿನವೇ ಬೆಂಗಳೂರಿಗೆ ಹಲವು ಪ್ರಯಾಣಿಕರು ಪ್ರಯಾಣ ಮಾಡಿದ್ದಾರೆ. ಈಗಾಗಲೇ ಮೈಸೂರು ಹೈದರಾಬಾದ್ ಹಾಗೂ ಚೆನ್ನೈ ನಡುವೆ ಕೂಡ ವಿಮಾನ ಹಾರಾಟ ಶುರುವಾಗಿದೆ.

    ಈ ಕಾರ್ಯಕ್ರಮದಲ್ಲಿ ಮಾತನಾಡಿದ ಜಿ.ಟಿ ದೇವೇಗೌಡರು, ಇಂದು ಮೈಸೂರು ಟು ಬೆಂಗಳೂರು ಎರಡನೇ ವಿಮಾನಯಾನ ಸೇವೆಗೆ ಚಾಲನೆ ನೀಡಲಾಗಿದೆ. ವಿಮಾನ ನಿಲ್ದಾಣಕ್ಕೆ ನಾಲ್ವಡಿ ಕೃಷ್ಣರಾಜ ಒಡೆಯರ್ ಹೆಸರು ನಾಮಕರಣ ವಿಚಾರ ಕುರಿತು ಸರ್ಕಾರದೊಂದಿಗೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುಲಾಗುವುದು. ಏರ್ ಪೋರ್ಟ್ ವಿಸ್ತರಣೆಗೆ 280 ಎಕರೆ ಭೂಸ್ವಾಧೀನ ಮಾಡಿ ಕೈಗಾರಿಕಾ ಇಲಾಖೆಗೆ ನೀಡಿದ್ದೇವೆ ಎಂದು ತಿಳಿಸಿದರು. ಈ ಕಾರ್ಯಕ್ರಮದಲ್ಲಿ ಪ್ರವಾಸೋದ್ಯಮ ಸಚಿವ ಸಾರಾ. ಮಹೇಶ್ ಮತ್ತು ಸಂಸದ ಪ್ರತಾಪ್ ಸಿಂಹ ಭಾಗಿಯಾಗಿದ್ದರು. ಇದನ್ನು ಓದಿ: ದೇಶದ ಸಣ್ಣ ವಿಮಾನ ನಿಲ್ದಾಣಗಳಲ್ಲಿ ಮೊಬೈಲ್ ಎಟಿಸಿ: ಹೇಗೆ ಕಾರ್ಯನಿರ್ವಹಿಸುತ್ತೆ? ವಿಡಿಯೋ ನೋಡಿ

    ಏನಿದು ಉಡಾನ್ ಯೋಜನೆ?
    ಅತ್ಯಂತ ಕಡಿಮೆ ದರದಲ್ಲಿ ಸಣ್ಣ ನಗರಗಳ ನಡುವೆ ವಿಮಾನ ಪ್ರಯಾಣ ಮಾಡಬಹುದಾದ ಉಡಾನ್ ಯೋಜನೆ ಕೇಂದ್ರ ಸರ್ಕಾರ 2017ರ ಏಪ್ರಿಲ್‍ನಲ್ಲಿ ಆರಂಭಿಸಿತ್ತು. ಉಡಾನ್‍ನ ವಿಸ್ತೃತ ರೂಪ ಉಡೇ ದೇಶ್ ಕಾ ಆಮ್ ನಾಗರೀಕ್. ಪ್ರದೇಶಿಕ ಸಂಪರ್ಕ ಯೋಜನೆಯಾದ ಉಡಾನ್ ಯೋಜನೆಯಡಿ ಸದ್ಯಕ್ಕೆ ಹೆಚ್ಚು ಸಂಪರ್ಕವಿರದ ಸಣ್ಣ ನಗರಗಳ ನುಡವೆ ಕಡಿಮೆ ದರದಲ್ಲಿ ಪ್ರಯಾಣ ಮಾಡಬಹುದಾಗಿದೆ.

    2014ರ ಏಪ್ರಿಲ್ 24 ರಂದು ಪ್ರಧಾನಿ ಮೋದಿ ದೆಹಲಿ ಹಗೂ ಶಿಮ್ಲಾ ನಡುವಿನ ವಿಮಾನ ಹಾರಾಟಕ್ಕೆ ಚಾಲನೆ ನೀಡಿದ್ದರು. ಚಾಲನೆ ನೀಡಿ ಮಾತನಾಡಿದ್ದ ಮೋದಿ, ಹವಾಯ್ ಚಪ್ಪಲಿ ಧರಿಸುವಂತಹ ವ್ಯಕ್ತಿಯನ್ನೂ ಕೂಡ ವಿಮಾನದಲ್ಲಿ ನೋಡಬೇಕೆಂಬುದು ನನ್ನ ಆಸೆ ಎಂದು ಹೇಳಿದ್ದರು. ಈ ಯೋಜನೆಯಡಿ 45ಕ್ಕೂ ಹೆಚ್ಚು ಸೇವೆ ಒದಗಿಸದ ವಿಮಾನ ನಿಲ್ದಾಣಗಳನ್ನು ಪುನಾರಂಭ ಮಾಡುವ ಉದ್ದೇಶವನ್ನು ಸರ್ಕಾರ ಹೊಂದಿದೆ.

  • ಕಳೆದ 8 ದಿನಗಳಿಂದ ಸ್ಥಗಿತಗೊಂಡಿದ್ದ ಬಂಡೀಪುರ ಸಫಾರಿ ಇಂದಿನಿಂದ ಆರಂಭ

    ಕಳೆದ 8 ದಿನಗಳಿಂದ ಸ್ಥಗಿತಗೊಂಡಿದ್ದ ಬಂಡೀಪುರ ಸಫಾರಿ ಇಂದಿನಿಂದ ಆರಂಭ

    ಚಾಮರಾಜನಗರ: ಕಾಡಿಗೆ ಬೆಂಕಿ ಬಿದ್ದ ಹಿನ್ನೆಲೆಯಲ್ಲಿ ಬಂಡೀಪುರರ ಹುಲಿರಕ್ಷಿತಾರಣ್ಯದಲ್ಲಿ ಕಳೆದ ಎಂಟು ದಿನಗಳಿಂದ ಸ್ಥಗಿತಗೊಳಿಸಲಾಗಿದ್ದ ಸಫಾರಿ ಇಂದಿನಿಂದ ಪುನರಾರಂಭಗೊಂಡಿದೆ.

    ಒಂದು ವಾರ ಕಾಲ ಧಗಧಗನೆ ಹೊತ್ತಿ ಉರಿದ ಬೆಂಕಿ ಸತತ ಕಾರ್ಯಚರಣೆಯ ಫಲವಾಗಿ ಸಂಪೂರ್ಣವಾಗಿ ನಂದಿದ ಹಿನ್ನಲೆಯಲ್ಲಿ ಇಂದು ಬೆಳಿಗ್ಗೆಯಿಂದ ಸಫಾರಿ ಮತ್ತೆ ಆರಂಭಿಸಲಾಗಿದೆ. ಇನ್ನೊಂದೆಡೆ ಬಂಡೀಪುರದಲ್ಲಿರುವ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಪ್ರವಾಸಿಗರ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ. ಬೆಟ್ಟದ ತಪ್ಪಲಿನಿಂದ ಎಂದಿನಂತೆ ಕೆಎಸ್‍ಆರ್ ಟಿಸಿ ಬಸ್ ಗಳು ಸಂಚಾರ ಆರಂಭಿಸಿವೆ.

    ಬಂಡೀಪುರ ಅರಣ್ಯ ಪ್ರದೇಶಕ್ಕೆ ಕಿಡಿಗೇಡಿಗಳೇ ಬೆಂಕಿ ಹಾಕಿದ್ರಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಕೆಲ ಸಂಘಟನೆಗಳು ಅರಣ್ಯ ಪ್ರದೇಶಕ್ಕೆ ಬೆಂಕಿ ಹಾಕಿ ವಿದೇಶಗಳಿಂದ ಹಣ ಪಡೆಯಲು ಮುಂದಾಗಿದ್ರು ಎಂಬ ಶಂಕೆ ವ್ಯಕ್ತವಾಗಿದೆ.

    ಬಿದ್ದ ಜಾಗದ ಸ್ಯಾಟಲೈಟ್ ಪಿಕ್ಚರ್ ನಲ್ಲೂ ಕೂಡ ಇದು ಮಾನವನಿರ್ಮಿತ ಎಂದು ಬಯಲಾಗಿದೆ. ಗುಂಪು ಗುಂಪುಗಳಾಗಿ ಅಲ್ಲಲ್ಲಿ ಬೆಂಕಿ ಬಿದ್ದಿರೋದು ನೋಡಿದ್ರೆ ಇದು ಮಾನವ ನಿರ್ಮಿತ, ಉದ್ದೇಶಪೂರ್ವಕವಾಗಿ ಬೆಂಕಿ ಹಚ್ಚಿರೋದು ಎಂದು ಅರಣ್ಯ ಇಲಾಖೆಯಿಂದ ಶಂಕೆ ವ್ಯಕ್ತಪಡಿಸಿದೆ. ಈ ಹಿನ್ನೆಲೆಯಲ್ಲಿ ಬಂಡೀಪುರ ಬೆಂಕಿ ಪ್ರಕರಣವನ್ನು ಉನ್ನತ ತನಿಖೆಗಾಗಿ ಆದೇಶಿಸುವ ಸಾಧ್ಯತೆಗಳಿವೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಮಧ್ಯಪ್ರದೇಶ, ಮಿಜೋರಾಂ ಚುನಾವಣೆಗೆ ಮತದಾನ ಆರಂಭ

    ಮಧ್ಯಪ್ರದೇಶ, ಮಿಜೋರಾಂ ಚುನಾವಣೆಗೆ ಮತದಾನ ಆರಂಭ

    ನವದೆಹಲಿ: ಲೋಕಸಭಾ ಚುನಾವಣೆಯ ಸಮರಕ್ಕೆ ದಿಕ್ಸೂಚಿಯೆಂಬಂತೆ ಇಂದು ಮಧ್ಯಪ್ರದೇಶ ಮತ್ತು ಮಿಜೋರಾಂ ವಿಧಾನಸಭೆಗೆ ಚುನಾವನೆಯ ಮತದಾನ ಆರಂಭವಾಗಿದೆ.

    ಮಧ್ಯಪ್ರದೇಶದ 230 ಹಾಗೂ ಮಿಜೋರಾಂ 40 ಸ್ಥಾನಗಳಿಗೆ ವಿಧಾನಸಭಾ ಕ್ಷೇತ್ರಗಳಲ್ಲಿ ಇಂದು ಮತದಾನ ನಡೆಯಲಿದೆ. ಎರಡೂ ರಾಜ್ಯಗಳಲ್ಲಿ ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು ಸೂಕ್ತ ಭದ್ರತೆ ಒದಗಿಸಲಾಗಿದೆ. ಎರಡು ರಾಜ್ಯಗಳು ಕಾಂಗ್ರೆಸ್-ಬಿಜೆಪಿಗೆ ಪ್ರತಿಷ್ಠೆ ಕಣವಾಗಿದ್ದು ಅಧಿಕಾರದ ಚುಕ್ಕಾಣಿ ಹಿಡಿಯಲು ಈಗಾಗಲೇ ಸಾಕಷ್ಟು ಸರ್ಕಸ್ ಮಾಡಿವೆ.

    ಮಧ್ಯಪ್ರದೇಶದಲ್ಲಿ 52 ಜಿಲ್ಲೆಗಳ 230 ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದ್ದು 65,341 ಬೂತ್‍ಗಳಲ್ಲಿ ಮತದಾನ ನಡೆಯಲಿದೆ. 2005ರಲ್ಲಿ ಮುಖ್ಯಮಂತ್ರಿ ಹುದ್ದೆಗೇರಿದ ಹಾಲಿ ಸಿಎಂ ಶಿವರಾಜ್ ಸಿಂಗ್ ಚೌವ್ಹಾನ್ ನಾಲ್ಕನೇ ಬಾರಿ ಮುಖ್ಯಮಂತ್ರಿಯಾಗಲು ಶ್ರಮಿಸುತ್ತಿದ್ದಾರೆ. ಇತ್ತ ಮಿಜೋರಾಂನ 40 ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು ಏಳು ಲಕ್ಷ ಮತದಾರರು 209 ಅಭ್ಯರ್ಥಿಗಳ ಹಣೆ ಬರಹ ನಿರ್ಧರಿಸಲಿದ್ದಾರೆ. ಕಾಂಗ್ರೆಸ್ ತೆಕ್ಕೆಯಲ್ಲಿರುವ ಚಿಕ್ಕ ರಾಜ್ಯ ಮಿಜೋರಾಂ ವಶಪಡಿಸಿಕೊಳ್ಳುವ ಬಿಜೆಪಿ ತಂತ್ರ ರೂಪಿಸಿದೆ.

    ಉಳಿದಂತೆ ರಾಜಸ್ಥಾನ, ಛತ್ತೀಸ್‍ಗಢ ಹಾಗೂ ತೆಲಂಗಾಣ ರಾಜ್ಯಗಳ ಚುನಾವಣೆ ಬಳಿಕ ಅಂದರೆ ಡಿಸೆಂಬರ್ 11 ರಂದು ಫಲಿತಾಂಶ ಘೋಷಣೆಯಾಗಲಿದೆ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಿಜೋರಾಂ, ಮಧ್ಯಪ್ರದೇಶ ವಿಧಾನಸಭೆ ಚುನಾವಣೆ ರಾಷ್ಟ್ರಮಟ್ಟದಲ್ಲಿ ಎಲ್ಲರ ಗಮನ ಸೆಳೆದಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಕುದುರೆಮುಖ-ಮಂಗಳೂರು ಸಂಚಾರ ಆರಂಭ

    ಕುದುರೆಮುಖ-ಮಂಗಳೂರು ಸಂಚಾರ ಆರಂಭ

    ಚಿಕ್ಕಮಗಳೂರು: ರಸ್ತೆ ಮೇಲೆ ಗುಡ್ಡ ಕುಸಿದ ಕಾರಣದಿಂದ ಬೆಳಗ್ಗಿನಿಂದಲೂ ಸಂಚಾರ ಬಂದ್ ಆಗಿದ್ದ ಮಗಳೂರು-ಕುದುರೆಮುಖ ನಡುವಿನ ಸಂಚಾರ ಆರಂಭವಾಗಿದ್ದು, ಏಕಮುಖ ಸಂಚಾರಕ್ಕೆ ಅವಕಾಶ ನೀಡಲಾಗಿದೆ.

    ಮಳೆಯ ಆರ್ಭಟಕ್ಕೆ ರಾಜ್ಯ ಹೆದ್ದಾರಿ 66ರಲ್ಲಿ ನಾಲ್ಕು ಕಡೆ ರಸ್ತೆ ಮೇಲೆ ಮಣ್ಣು ಕುಸಿದಿತ್ತು, ಪರಿಣಾಮ ಬೆಳಗ್ಗಿನಿಂದ ಕಳಸ ಸಂಚಾರ ಸ್ಥಗಿತಗೊಂಡಿತ್ತು. ಇದರಿಂದ ವಾಹನ ಸವಾರರು ದಾರಿ ನಡುವೆಯೇ ಪರದಾಟ ನಡೆಸಿದ್ದರು.

    ಗುಡ್ಡ ಕುಸಿತ ಕುರಿತು ಮಾಹಿತಿ ಪಡೆದು ಮಣ್ಣು ತೆರವು ಕಾರ್ಯಾಚರಣೆ ಆರಂಭಿಸಿದ ಪೊಲೀಸರು ತಾತ್ಕಾಲಿಕವಾಗಿ ರಸ್ತೆ ಮೇಲೆ ಬಿದ್ದಿದ್ದ ಮಣ್ಣು ತೆರವು ಮಾಡಿ ಸಂಜೆ ವೇಳೆಗೆ ಸಂಚಾರಕ್ಕೆ ಅವಕಾಶ ಕಲ್ಪಿಸಿದ್ದಾರೆ. ಚಾರ್ಮಾಡಿ ಘಾಟ್ ನಲ್ಲಿ ಲಾರಿಗಳಿಗೆ ನಿಷೇಧವಾದ ಹಿನ್ನೆಲೆಯಲ್ಲಿ ಶನಿವಾರದಿಂದ ಭಾರೀ ಗಾತ್ರದ ವಾಹನಗಳು ಈ ಮಾರ್ಗವಾಗಿ ಮಂಗಳೂರು ತಲುಪುತ್ತಿದ್ದವು. ಅದ್ದರಿಂದ ಈ ಮಾರ್ಗದಲ್ಲಿ ಹೆಚ್ಚಿನ ಟ್ರಾಫಿಕ್ ಜಾಮ್ ಉಂಟಾಗಿತ್ತು.

    ನಿರಂತರವಾಗಿ ಮಳೆ ಸುರಿಯುತ್ತಿರುವ ಕಾರಣ ಕಾರ್ಯಾಚರಣೆ ನಡೆಲು ಪೊಲೀಸರು ಹೆಚ್ಚು ಶ್ರಮ ವಹಿಸಿದ್ದು, ಮಳೆ ಮುಂದುವರಿದಿರುವ ಕಾರಣ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಸ್ಥಳದಲ್ಲೇ ಬಿಡುಬಿಟ್ಟಿದ್ದಾರೆ. ಇದನ್ನು ಓದಿ:  ಮಲೆನಾಡಲ್ಲಿ ಗುಡ್ಡ ಕುಸಿತ: ಕುದುರೆಮುಖ ಸಂಪೂರ್ಣ ಬಂದ್ 

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv