Tag: ಆರತಿ

  • ಗಾಯಕಿ ಜೊತೆ ರಿಲೇಷನ್‌ಶಿಪ್‌ನಲ್ಲಿದ್ದಾರಾ ಜಯಂ ರವಿ?- ಸ್ಪಷ್ಟನೆ ನೀಡಿದ ನಟ

    ಗಾಯಕಿ ಜೊತೆ ರಿಲೇಷನ್‌ಶಿಪ್‌ನಲ್ಲಿದ್ದಾರಾ ಜಯಂ ರವಿ?- ಸ್ಪಷ್ಟನೆ ನೀಡಿದ ನಟ

    ಮಿಳು ನಟ ಜಯಂ ರವಿ (Jayam Ravi) ಇತ್ತೀಚೆಗೆ ಆರತಿ (Aarati) ಜೊತೆಗಿನ 15 ವರ್ಷಗಳ ದಾಂಪತ್ಯಕ್ಕೆ ಅಂತ್ಯ ಹಾಡಿದರು. ಈ ಬೆನ್ನಲ್ಲೇ ಅವರ ಡಿವೋರ್ಸ್‌ಗೆ ಕಾರಣವೇನು ಎಂಬುದರ ಬಗ್ಗೆ ಫ್ಯಾನ್ಸ್‌ ತಲೆಕೆಡಿಸಿಕೊಂಡಿದ್ದರು. ಗಾಯಕಿ ಕೆನಿಷಾ (Kenishaa Francis) ಜೊತೆ ಜಯಂ ರವಿ ಸಂಬಂಧದಲ್ಲಿದ್ದಾರೆ ಎಂದು ಗುಸು ಗುಸು ಶುರುವಾಗಿತ್ತು. ಇದಕ್ಕೆ ನಟ ಪ್ರತಿಕ್ರಿಯೆ ನೀಡಿದ್ದಾರೆ. ನಮ್ಮ ಡಿವೋರ್ಸ್ ವಿಚಾರದಲ್ಲಿ ಕೆನಿಷಾರನ್ನು ಎಳೆಯಬೇಡಿ ಎಂದು ಜಯಂ ರವಿ ಗರಂ ಆಗಿದ್ದಾರೆ.

    ಸಿನಿಮಾವೊಂದರ ಪ್ರಚಾರ ಕಾರ್ಯದಲ್ಲಿ ಜಯಂ ರವಿ ಅವರು ಕೆನಿಷಾ ಜೊತೆಗಿನ ರಿಲೇಷನ್‌ಶಿಪ್ ಕುರಿತು ಪ್ರತಿಕ್ರಿಯಿಸಿ, ಬದುಕಿ ಮತ್ತು ಬದಕಲು ಬಿಡಿ. ನನ್ನ ಡಿವೋರ್ಸ್ ವಿಚಾರದಲ್ಲಿ ಅವರನ್ನು ಎಳೆಯಬೇಡಿ. ವೈಯಕ್ತಿಕ ಬದುಕು ವೈಯಕ್ತಿಕವಾಗಿಯೇ ಇರಲಿ, ಕೆನಿಷಾ ವೃತ್ತಿರಂಗದಲ್ಲಿ ಕಷ್ಟಪಟ್ಟು ಮೇಲಕ್ಕೆ ಬಂದಿದ್ದಾರೆ. ಅವರು 600ಕ್ಕೂ ಹೆಚ್ಚು ಸ್ಟೇಜ್‌ ಶೋ ನೀಡಿದ್ದಾರೆ ಎಂದರು. ಇದನ್ನೂ ಓದಿ:ಹರ್ಷಿಕಾ ಬೇಬಿ ಶವರ್ ಸಂಭ್ರಮದಲ್ಲಿ ಸ್ಯಾಂಡಲ್‌ವುಡ್ ಸೆಲೆಬ್ರಿಟಿಸ್

    ಕೆನಿಷಾ ಮನೋವೈದ್ಯೆ ಕೂಡ ಆಗಿದ್ದಾರೆ. ಮುಂದಿನ ದಿನಗಳಲ್ಲಿ ಅವರೊಂದಿಗೆ ಹೀಲಿಂಗ್ ಸೆಂಟರ್ ಆರಂಭಿಸುವ ಯೋಜನೆಯಿದೆ ಎಂದು ಹೇಳಿದ್ದಾರೆ. ಅದನ್ನು ತಡೆಯಲು ಯಾರೋ ಈ ರೀತಿ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ ಎಂದರು. ಆದರೆ ಹಾಗೆ ಮಾಡುವುದು ತಪ್ಪು. ಇದಕ್ಕೆ ಕಾನೂನು ಹೋರಾಟದ ಮೂಲಕ ಸೂಕ್ತ ನ್ಯಾಯ ಸಿಗುತ್ತದೆ ಎಂದು ನಂಬಿದ್ದೇನೆ ಎಂದು ಜಯಂ ರವಿ ಮಾತನಾಡಿದರು.

    ಆರತಿಗೆ ಡಿವೋರ್ಸ್ ವಿಚಾರ ಗೊತ್ತಿರಲಿಲ್ಲ ಎಂಬುದಕ್ಕೆ ಲಾಜಿಕ್ ಇಲ್ಲ, ನಾನು ಈಗಾಗಲೇ 2 ಬಾರಿ ಅವರಿಗೆ ನೋಟಿಸ್ ಕಳುಹಿಸಿದ್ದೇನೆ. ಅದಕ್ಕೆ ಅವರು ಕೂಡ ಪ್ರತಿಕ್ರಿಯೆ ನೀಡಿದ್ದಾರೆ. ಇಷ್ಟೇಲ್ಲಾ ಆದ್ಮೇಲೆ ನನಗೆ ಗೊತ್ತಿಲ್ಲ ಎಂದು ಹೇಳಿರುವುದು ನನಗೆ ಅಚ್ಚರಿ ಮೂಡಿಸಿದೆ ಎಂದಿದ್ದಾರೆ. ಮಕ್ಕಳಿಗಾಗಿ ಶಾಂತವಾಗಿದ್ದೇನೆ. ಕಾನೂನುಬದ್ಧವಾಗಿ ಹೋಗುತ್ತೇನೆ ಎಂದು ನಟ ಮಾತನಾಡಿದ್ದಾರೆ.

  • ನನ್ನ ಗಮನಕ್ಕೆ ತರದೇ ಡಿವೋರ್ಸ್ ಘೋಷಿಸಿದ್ದಾರೆ: ಜಯಂ ರವಿ ವಿರುದ್ಧ ಆರತಿ ಆಕ್ರೋಶ

    ನನ್ನ ಗಮನಕ್ಕೆ ತರದೇ ಡಿವೋರ್ಸ್ ಘೋಷಿಸಿದ್ದಾರೆ: ಜಯಂ ರವಿ ವಿರುದ್ಧ ಆರತಿ ಆಕ್ರೋಶ

    ಮಿಳಿನ ಸ್ಟಾರ್ ನಟ ಜಯಂ ರವಿ (Jayam Ravi) ಸೆ.9ರಂದು ಆರತಿ ಜೊತೆಗಿನ ದಾಂಪತ್ಯ ಅಂತ್ಯವಾಗಿರೋದಾಗಿ ಘೋಷಿಸಿದ್ದರು. ಈ ಬೆನ್ನಲ್ಲೇ, ನಟನ ನಡೆಗೆ ಆರತಿ ಬೇಸರ ವ್ಯಕ್ತಪಡಿಸಿದ್ದಾರೆ. ನನ್ನ ಗಮನಕ್ಕೆ ತರದೇ ಡಿವೋರ್ಸ್ (Divorce) ಘೋಷಿಸಿದ್ದಾರೆ. ಏಕಪಕ್ಷೀಯ ನಿರ್ಧಾರ, ಇದರ ಬಗ್ಗೆ ನನಗೇನು ಹೇಳಿಲ್ಲ ಎಂದು ಸೋಶಿಯಲ್ ಮೀಡಿಯಾದಲ್ಲಿ ಆರತಿ (Aarti) ಆರೋಪಿಸಿದ್ದಾರೆ.

    ಡಿವೋರ್ಸ್ ಕುರಿತು ಸುದೀರ್ಘವಾಗಿ ಆರತಿ ಪತ್ರ ಬರೆದಿದ್ದಾರೆ. ಅದರಲ್ಲಿ, ಇತ್ತೀಚೆಗೆ ನಮ್ಮ ಮದುವೆ ಬಗ್ಗೆ ಸಾರ್ವಜನಿಕವಾಗಿ ಮಾಡಿದ ಘೋಷಣೆಯಿಂದ ನನಗೆ ಶಾಕ್ ಆಗಿದೆ. ಯಾಕೆಂದರೆ ನನಗೆ ಗಮನಕ್ಕೆ ತರದೆ, ನನ್ನ ಅನುಮತಿಯನ್ನು ಪಡೆಯದೆ ಇಂತಹ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. 18 ವರ್ಷಗಳ ಕಾಲ ದಾಂಪತ್ಯದ ಇತಿಹಾಸವಿರುವ ವಿಷಯವನ್ನು ಗೌರವಯುತವಾಗಿ, ಖಾಸಗಿಯಾಗಿ ಹ್ಯಾಂಡಲ್ ಮಾಡಬಹುದಿತ್ತು ಎಂದಿದ್ದಾರೆ. ಇದನ್ನೂ ಓದಿ:ಬಾಲಿವುಡ್‌ ನಟಿ ಮಲೈಕಾ ಅರೋರಾ ತಂದೆ ಆತ್ಯಹತ್ಯೆ

     

    View this post on Instagram

     

    A post shared by Aarti Ravi (@aarti.ravi)

    ಕಳೆದ ಕೆಲವು ದಿನಗಳಿಂದ ನನ್ನ ಪತಿಯೊಡನೆ ಮಾತನಾಡುವುದಕ್ಕೆ ಪ್ರಯತ್ನಪಡುತ್ತಲೇ ಇದ್ದೇನೆ. ನಾವು ನಮ್ಮ ಕುಟುಂಬಕ್ಕಾಗಿ ಮಾಡಿಕೊಂಡಿರುವ ಕಮಿಟ್‌ಮೆಂಟ್‌ಗಳ ಬಗ್ಗೆ ಓಪನ್ ಆಗಿ ಮಾತಾಡುವುದಕ್ಕೆ ಪ್ರಯತ್ನಿಸಿದೆ. ಆದರೆ, ಆ ಅವಕಾಶವನ್ನು ಅವರು ನನಗೆ ಕೊಡಲೇ ಇಲ್ಲ. ನನ್ನ ಹಾಗೂ ನನ್ನ ಮಕ್ಕಳನ್ನು ಕತ್ತಲೆಯಲ್ಲಿಟ್ಟು ಈ ಘೋಷಣೆಯನ್ನು ಮಾಡಲಾಗಿದೆ. ಈ ದಾಂಪತ್ಯದಿಂದ ಹೊರಬರುವುದು ಸಂಪೂರ್ಣ ಏಕಪಕ್ಷೀಯ ನಿರ್ಧಾರವಾಗಿದ್ದು, ಇದು ನಮ್ಮ ಕುಟುಂಬಕ್ಕೆ ಯಾವುದೇ ರೀತಿ ಪ್ರಯೋಜನ ಆಗಿಲ್ಲ ಎಂದು ಜಯಂ ರವಿ ವಿರುದ್ಧ ಆರತಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಒಬ್ಬ ತಾಯಿಯಾಗಿ ತನ್ನ ಇಬ್ಬರು ಮಕ್ಕಳು ಮೊದಲ ಆದ್ಯತೆಯಾಗಿದ್ದು, ಅವರ ಮೇಲೆ ಇಂತಹ ವಿಷಯಗಳು ಪರಿಣಾಮ ಬೀರದಂತೆ ನೋಡಿಕೊಳ್ಳಬೇಕಾಗಿದೆ. ಅಲ್ಲದೆ ತನ್ನ ಮೇಲೆ ಸಾರ್ವಜನಿಕವಾಗಿ ತಪ್ಪನ್ನು ಹೊರಿಸಲಾಗುತ್ತಿದೆ. ನನ್ನ ಕ್ಯಾರೆಕ್ಟರ್ ಮೇಲೆ ಅಟ್ಯಾಕ್ ಮಾಡಲಾಗುತ್ತಿದೆ. ತಮ್ಮ ಕುಟುಂಬದ ಗೌಪ್ಯತೆಯನ್ನು ರಕ್ಷಿಸಲು ಸಹಾಯ ಮಾಡಿ, ಅನಗತ್ಯ ವದಂತಿಗಳನ್ನು ಹಬ್ಬಿಸದಿರುವಂತೆ ಆರತಿ ಮನವಿ ಕೂಡ ಮಾಡಿಕೊಂಡಿದ್ದಾರೆ. ಈಗ ಆರತಿ ಪರವಾಗಿ ಅವರ ಆಪ್ತರು, ಅಭಿಮಾನಿಗಳು ಬೆಂಬಲ ಸೂಚಿಸುತ್ತಿದ್ದಾರೆ.

    ಅಂದಹಾಗೆ, ಜಯಂ ರವಿ ಅವರು ಆರತಿ ಜೊತೆ 2009ರಲ್ಲಿ ಮದುವೆಯಾಗಿದ್ದರು. ಇವರ ದಾಂಪತ್ಯಕ್ಕೆ ಇಬ್ಬರೂ ಗಂಡು ಮಕ್ಕಳು ಸಾಕ್ಷಿಯಾಗಿದ್ದಾರೆ.

  • 15 ವರ್ಷಗಳ ದಾಂಪತ್ಯಕ್ಕೆ ಅಂತ್ಯ- ಡಿವೋರ್ಸ್ ಬಗ್ಗೆ ಅಧಿಕೃತವಾಗಿ ತಿಳಿಸಿದ ಜಯಂ ರವಿ

    15 ವರ್ಷಗಳ ದಾಂಪತ್ಯಕ್ಕೆ ಅಂತ್ಯ- ಡಿವೋರ್ಸ್ ಬಗ್ಗೆ ಅಧಿಕೃತವಾಗಿ ತಿಳಿಸಿದ ಜಯಂ ರವಿ

    ಕಾಲಿವುಡ್ ನಟ ಜಯಂ ರವಿ (Actor Jayam Ravi) ಅವರ ವೈವಾಹಿಕ ಬದುಕಿನಲ್ಲಿ ಬಿರುಕಾಗಿದೆ ಎಂಬ ಸುದ್ದಿ ಕಳೆದ ಕೆಲವು ದಿನಗಳಿಂದ ಚರ್ಚೆ ಗ್ರಾಸವಾಗಿತ್ತು. ಇದೀಗ 15 ವರ್ಷಗಳ ದಾಂಪತ್ಯಕ್ಕೆ ಅಂತ್ಯ ಹಾಡಿರೋದಾಗಿ ಇಂದು (ಸೆ.9) ಸ್ವತಃ ನಟ ಜಯಂ ರವಿ ಸೋಶಿಯಲ್‌ ಮೀಡಿಯಾದಲ್ಲಿ ಮೂಲಕ ತಿಳಿಸಿದ್ದಾರೆ. ಇದನ್ನೂ ಓದಿ:‘ಭೂತ್ ಬಂಗ್ಲಾ’ ಕಥೆ ಹೇಳಲು ಸಜ್ಜಾದ ಅಕ್ಷಯ್ ಕುಮಾರ್

    ಬಹಳ ಯೋಚನೆ ಮತ್ತು ಚರ್ಚೆಗಳ ನಂತರ ಆರತಿ (Aarati) ಜೊತೆಗಿನ ನನ್ನ ವಿವಾಹ ಸಂಬಂಧಕ್ಕೆ ಡಿವೋರ್ಸ್ ನೀಡುವ ನಿರ್ಧಾರವನ್ನು ತೆಗೆದುಕೊಂಡಿದ್ದೇನೆ. ಈ ನಿರ್ಧಾರವನ್ನು ತರಾತುರಿಯಿಂದ ಮಾಡಿಲ್ಲ ಎಂದು ನಟ ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

    ಈ ಸಮಯದಲ್ಲಿ ನಮ್ಮ ಮತ್ತು ಕುಟುಂಬದ ಗೌಪ್ಯತೆಯನ್ನು ಗೌರವಿಸಲು ನಾನು ನಿಮ್ಮೆಲ್ಲರನ್ನು ಕೇಳಿಕೊಳ್ಳುತ್ತೇನೆ. ಈ ನಿಟ್ಟಿನಲ್ಲಿ ಯಾವುದೇ ಊಹೆಗಳು, ವದಂತಿಗಳು, ಅಥವಾ ಆರೋಪಗಳನ್ನು ಮಾಡದಂತೆ ನಿಮ್ಮೆಲ್ಲರಲ್ಲಿ ಮನವಿ ಮಾಡಿಕೊಳ್ಳುತ್ತೇನೆ. ಜೊತೆಗೆ ಈ ವಿಷಯವು ಖಾಸಗಿಯಾಗಿ ಉಳಿಯಲಿ ಎಂದು ನಟ ತಿಳಿಸಿದ್ದಾರೆ.

    ನನ್ನ ಆದ್ಯತೆ ಯಾವಾಗಲೂ ಒಂದೇ ಆಗಿರುತ್ತದೆ. ನನ್ನ ಪ್ರೀತಿಯ ಪ್ರೇಕ್ಷಕರಿಗೆ ಸಿನಿಮಾಗಳ ಮೂಲಕ ಮನರಂಜನೆ ನೀಡಿವುದನ್ನು ಮುಂದುವರೆಸುವುದು ಎಂದು ಜಯಂ ರವಿ ಬರೆದುಕೊಂಡಿದ್ದಾರೆ. ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಡಿವೋರ್ಸ್ ಕುರಿತು ಅಧಿಕೃತವಾಗಿ ತಿಳಿಸಿದ್ದಾರೆ. ಇದು ಅಭಿಮಾನಿಗಳಿಗೆ ಬೇಸರ ಮೂಡಿಸಿದೆ. ಜೊತೆಗಾಗಿ ಇರಿ ಎಂದೆಲ್ಲಾ ಫ್ಯಾನ್ಸ್‌ ನಟನಿಗೆ ಮನವಿ ಮಾಡಿದ್ದಾರೆ.

    ಅಂದಹಾಗೆ, ಆರತಿ ಮತ್ತು ಜಯಂ ರವಿ 2009ರಲ್ಲಿ ಮದುವೆಯಾಗಿದ್ದರು. ಇವರ ದಾಂಪತ್ಯಕ್ಕೆ ಇಬ್ಬರು ಗಂಡು ಮಕ್ಕಳು ಸಾಕ್ಷಿಯಾಗಿದ್ದಾರೆ.

  • ತಮಿಳು ನಟ ಜಯಂ ರವಿ ಬಾಳಲ್ಲಿ ಡಿವೋರ್ಸ್ ಬಿರುಗಾಳಿ?

    ತಮಿಳು ನಟ ಜಯಂ ರವಿ ಬಾಳಲ್ಲಿ ಡಿವೋರ್ಸ್ ಬಿರುಗಾಳಿ?

    ಕಾಲಿವುಡ್ ನಟ ಜಯಂ ರವಿ (Jayam Ravi) ಸದಾ ಸಿನಿಮಾ ವಿಚಾರವಾಗಿ ಸುದ್ದಿಯಾಗಿದ್ದರು. ಈಗ ವೈಯಕ್ತಿಕ ಬದುಕಿನ ವಿಚಾರವಾಗಿ ಸದ್ದು ಮಾಡುತ್ತಿದ್ದಾರೆ. ಜಯಂ ರವಿ ದಾಂಪತ್ಯ (Wedding) ಬದುಕಿನಲ್ಲಿ ಬಿರುಕಾಗಿದೆ. ಇಬ್ಬರೂ ಡಿವೋರ್ಸ್‌ಗೆ (Divorce) ಮುಂದಾಗಿದ್ದಾರೆ ಎಂಬ ಸುದ್ದಿ ಈಗ ಸೋಷಿಯಲ್ ಮೀಡಿಯಾದಲ್ಲಿ ಚರ್ಚೆಗೆ ಗ್ರಾಸವಾಗಿದೆ.

    ಚಿತ್ರರಂಗದಲ್ಲಿ ಈಗ ಡಿವೋರ್ಸ್ ಬಿರುಗಾಳಿ ಜೋರಾಗಿದೆ. ನಾಗಚೈತನ್ಯ ಮತ್ತು ಸಮಂತಾ, ಐಶ್ವರ್ಯಾ ಮತ್ತು ಧನುಷ್ ಡಿವೋರ್ಸ್ ಪಡೆದ ಬೆನ್ನಲ್ಲೇ ಈಗ ಆರತಿ (Aarathi) ಮತ್ತು ಜಯಂ ರವಿ ಡಿವೋರ್ಸ್‌ಗೆ ಮುಂದಾಗಿದ್ದಾರೆ ಎನ್ನಲಾಗ್ತಿದೆ. ಇದನ್ನೂ ಓದಿ:ಮಿಡಲ್ ಕ್ಲಾಸ್ ಮನೆಯ ‘ಮರ್ಯಾದೆ ಪ್ರಶ್ನೆ’ ಎಂದ ರಾಕೇಶ್ ಅಡಿಗ, ಶೈನ್ ಶೆಟ್ಟಿ

    ಇತ್ತೀಚೆಗೆ ಆರತಿ ಪತಿ ಜೊತೆಗಿನ ತನ್ನ ಎಲ್ಲಾ ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಡಿಲೀಟ್ ಮಾಡಿದ್ದಾರೆ. ತನ್ನ ಹೆಸರಿನ ಜೊತೆಯಿದ್ದ ಪತಿಯ ಹೆಸರು ಜಯಂ ರವಿ ಎಂಬುದನ್ನು ಕೂಡ ತೆಗೆದು ಹಾಕಿದ್ದಾರೆ. ಈ ನಡೆ ಡಿವೋರ್ಸ್ ಸುದ್ದಿಗೆ ಪುಷ್ಠಿ ನೀಡಿದೆ. ಮುಂದಿನ ದಿನಗಳಲ್ಲಿ ಈ ಬಗ್ಗೆ ಸ್ಪಷ್ಟನೆ ನೀಡುತ್ತಾರಾ ಎಂದು ಕಾಯಬೇಕಿದೆ.

    ಅಂದಹಾಗೆ, ತಮಿಳು ಕಿರುತೆರೆಯ ಪ್ರಖ್ಯಾತ ನಿರ್ಮಾಪಕರಾದ ಸುಜಾತಾ ವಿಜಯ್ ಕುಮಾರ್ ಅವರ ಪುತ್ರಿ ಆರತಿ. ಪರಸ್ಪರ ಪ್ರೀತಿಸಿ ಜಯಂ ರವಿ ಹಾಗೂ ಆರತಿ 2009ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿರಿಸಿದರು. ಈ ದಂಪತಿಗೆ ಇಬ್ಬರು ಗಂಡು ಮಕ್ಕಳಿದ್ದಾರೆ.

  • ವೇಶ್ಯಾವಾಟಿಕೆ ದಂಧೆ: ಕಿರುತೆರೆ ನಟಿ ಆರತಿ ಅರೆಸ್ಟ್

    ವೇಶ್ಯಾವಾಟಿಕೆ ದಂಧೆ: ಕಿರುತೆರೆ ನಟಿ ಆರತಿ ಅರೆಸ್ಟ್

    ಕಿರುತೆರೆಯ ಖ್ಯಾತ ನಟಿ ಆರತಿ ಹರೀಶ್ ಚಂದ್ರ ಮಿತ್ತಲ್ (Aarti Harish Chandra Mittal) ಅವರನ್ನು ವೇಶ್ಯಾವಾಟಿಕೆ (Prostitution) ಆರೋಪದ ಅಡಿ ಪೊಲೀಸರು (Police)ಬಂಧಿಸಿದ್ದಾರೆ . ಮಾಡೆಲ್ ಗಳನ್ನು ಬಳಕೆ ಮಾಡಿಕೊಂಡು ಆರತಿ ವೇಶ್ಯಾವಾಟಿಕೆ ನಡೆಸುತ್ತಿದ್ದರು ಎಂದು ಗೊತ್ತಾಗಿದೆ. ಮಾಹಿತಿ ಸಿಗುತ್ತಿದ್ದಂತೆಯೇ ಆರತಿಯನ್ನು ಬೆನ್ನತ್ತಿದ್ದ ಪೊಲೀಸರು ರೆಡ್ ಹ್ಯಾಂಡ್ ಆಗಿಯೇ ಹಿಡಿದಿದ್ದಾರೆ.

    ಅಪ್ನಾಪನ್ ಸೇರಿದಂತೆ ಹಲವು ಜನಪ್ರಿಯ ಧಾರಾವಾಹಿಗಳಲ್ಲಿ ನಟಿಸಿರುವ ಆರತಿ, ಕಾಸ್ಟಿಂಗ್ ಡೈರೆಕ್ಟರ್ ಆಗಿಯೂ ಗುರುತಿಸಿಕೊಂಡವರು. ಇವುಗಳ ಜೊತೆಗೆ ಮುಂಬೈನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದರು ಎಂದು ಹೇಳಲಾಗುತ್ತಿದೆ. ಗ್ರಾಹಕರ ಮಾರುವೇಶದಲ್ಲಿ ಆರತಿಯನ್ನು ಸಂಪರ್ಕಿಸಿರುವ ಪೊಲೀಸರು ನಂತರ ಆರತಿಯನ್ನು ಬಂಧಿಸಿದ್ದಾರೆ. ಇವರ ಜೊತೆ ರಾಕೆಟ್ ನಲ್ಲಿ ಇಬ್ಬರು ಮಾಡೆಲ್ ಗಳು ಇದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

    ಪೊಲೀಸ್ ಅಧಿಕಾರಿ ಮನೋಜ್ ಸುತಾರ್ ಅವರಿಗೆ ಆರತಿ ನಡೆಸುತ್ತಿದ್ದ ವೇಶ್ಯಾವಾಟಿಕೆ ದಂಧೆಯ ಬಗ್ಗೆ ಸುಳಿವು ಸಿಕ್ಕಿತ್ತು. ಕೂಡಲೇ ಎಚ್ಚೆತ್ತುಕೊಂಡ ಅಧಿಕಾರಿ ತಮಗೆ ಇಬ್ಬರು ಹುಡುಗಿಯನ್ನು ಕಳುಹಿಸುವಂತೆ ಆರತಿಯನ್ನು ಸಂಪರ್ಕಿಸಿದ್ದಾರೆ. 60 ಸಾವಿರ ಬೇಡಿಕೆ ಇಟ್ಟು, ಹುಡುಗಿಯರನ್ನು ಕಳುಹಿಸುವುದಾಗಿ ಆರತಿ ತಿಳಿಸಿದ್ದರು. ಹಣ ಕೊಡುವುದಾಗಿಯೂ ಅಧಿಕಾರಿ ತಿಳಿಸಿದ್ದರು.

    ಹೋಟೆಲ್ ರೂಮ್ ಗೆ ತೆರಳುವ ಮುನ್ನ ಸ್ವತಃ ಆರತಿಯೇ ಅಧಿಕಾರಿಗಳಿಗೆ ಕಾಂಡೋಮ್ ನೀಡಿದ್ದಾರೆ. ಇವೆಲ್ಲವನ್ನೂ ಪೊಲೀಸರು ರೆಕಾರ್ಡ್ ಮಾಡಿಕೊಂಡೇ ಆರತಿಯನ್ನು ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಆರತಿ ಜೊತೆ ಯಾರೆಲ್ಲ ಇದ್ದಾರೆ ಎನ್ನುವುದರ ಕುರಿತು ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ.

  • ಆರತಿ ಕೊಲೆ ಕೇಸ್‌ – ಹತ್ಯೆಗೈದ ಆರೋಪಿಯ ಶವ ಕೆರೆಯಲ್ಲಿ ಪತ್ತೆ

    ಆರತಿ ಕೊಲೆ ಕೇಸ್‌ – ಹತ್ಯೆಗೈದ ಆರೋಪಿಯ ಶವ ಕೆರೆಯಲ್ಲಿ ಪತ್ತೆ

    ಮಡಿಕೇರಿ: ಯುವತಿ ಆರತಿಯನ್ನು (Arathi) ಕೊಲೆಗೈದ ಆರೋಪಿ ತಿಮ್ಮಯ್ಯ (Thimmaiah) ಆತ್ಮಹತ್ಯೆಗೆ ಶರಣಾಗಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.

    ವಿರಾಜಪೇಟೆ(Virajpet) ತಾಲ್ಲೂಕಿನ ಎರಡನೇ ರುದ್ರಗುಪ್ಪೆ ಗ್ರಾಮದಲ್ಲಿ ಇರುವ ತಿಮ್ಮಯ್ಯ ಅವರ ಮನೆ ಸಮೀಪದ ಕೆರೆಯಲ್ಲಿ ತಿಮ್ಮಯ್ಯನ ಮೃತದೇಹ ಪತ್ತೆಯಾಗಿದೆ.

    ಭಾನುವಾರ ಕತ್ತಿಯಿಂದ ಕಡಿದು ಆರತಿಯನ್ನು ಹತ್ಯೆ ಬಳಿಕ ಕೆರೆಗೆ ಹಾರಿ ತಿಮ್ಮಯ್ಯ ಆತ್ಮಹತ್ಯೆ ‌ಮಾಡಿಕೊಂಡಿರುವ ಬಗ್ಗೆ ಶಂಕೆ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಸೋಮವಾರದಿಂದ ತಿಮ್ಮಯ್ಯನಿಗಾಗಿ ಪೊಲೀಸರು ಹುಡುಕಾಟ ಆರಂಭಿಸಿದ್ದರು.  ಇದನ್ನೂ ಓದಿ: ಬೆಂಗಳೂರಲ್ಲಿ ವಿದ್ಯಾರ್ಥಿನಿಗೆ ಚಾಕು ಇರಿದು ಕೊಲೆ

    ಎರಡು ದಿನಗಳಿಂದ ಕೆರೆಯಲ್ಲಿ ನಿರಂತರವಾಗಿ ಹುಡುಕಾಟ ನಡೆಸಿದರೂ ತಿಮ್ಮಯ್ಯನ ಮೃತದೇಹ ಪತ್ತೆಯಾಗಿರಲಿಲ್ಲ. ಮಂಗಳವಾರ ಮಧ್ಯಾಹ್ನದ ಬಳಿಕ ಕೆರೆಯ ನೀರನ್ನು ಪಂಪ್‌ನಿಂದ ಖಾಲಿ ಮಾಡುತ್ತಿದ್ದಾಗ ತಡರಾತ್ರಿ ಮೃತದೇಹ ಪತ್ತೆಯಾಗಿದೆ.

    ಕೆರೆಯಲ್ಲಿ ಹೆಚ್ಚಾಗಿ ಕೆಸರು ತುಂಬಿದ ಹಿನ್ನೆಲೆಯಲ್ಲಿ ‌ಮೃತದೇಹ ಶೋಧಕಾರ್ಯದ ವೇಳೆ ಸುಲಭವಾಗಿ ಪತ್ತೆಯಾಗಿರಲಿಲ್ಲ. ಈಗ ಮೃತ ತಿಮ್ಮಯ್ಯನ ಮೃತದೇಹವನ್ನು ವಿರಾಜಪೇಟೆ ಸರ್ಕಾರಿ ಅಸ್ಪತ್ರೆಗೆ ಮರಣೋತ್ತರ ಪರೀಕ್ಷೆ ವಿರಾಜಪೇಟೆ ಗ್ರಾಮಾಂತರ ಪೊಲೀಸರು ರವಾನಿಸಿದ್ದಾರೆ.

    ಆರತಿ ಕೊಲೆಯಾದ ಜಾಗದ ಸಮೀಪವೇ ತಿಮ್ಮಯ್ಯನ ಬೈಕ್‌, ಮೊಬೈಲ್, ಚಪ್ಪಲಿ ಪತ್ತೆಯಾಗಿತ್ತು. ಹತ್ಯೆ ಬಳಿಕ ತಿಮ್ಮಯ್ಯ ಕೂಡ ವಿಷ ಸೇವಿಸಿರುವ ಬಗ್ಗೆ ಅನುಮಾನ ಹುಟ್ಟಿತ್ತು. ಇದಕ್ಕೆ ಪುಷ್ಠಿ ನೀಡುವಂತೆ ಮೊಬೈಲ್ ದೊರೆತಿರುವ ಸ್ಥಳದಲ್ಲಿ ವಿಷದ ಬಾಟಲಿಯೂ ಸಿಕ್ಕಿತ್ತು.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ನರ್ಮದಾ ಘಾಟ್‍ನಲ್ಲಿ ಪ್ರಿಯಾಂಕಾ ಗಾಂಧಿ ಜೊತೆ ಆರತಿ ಬೆಳಗಿದ ರಾಹುಲ್ ಗಾಂಧಿ

    ನರ್ಮದಾ ಘಾಟ್‍ನಲ್ಲಿ ಪ್ರಿಯಾಂಕಾ ಗಾಂಧಿ ಜೊತೆ ಆರತಿ ಬೆಳಗಿದ ರಾಹುಲ್ ಗಾಂಧಿ

    ಭೋಪಾಲ್: ಕಾಂಗ್ರೆಸ್‍ನ (Congress) ಭಾರತ್ ಜೋಡೋ ಯಾತ್ರೆ (Bharat Jodo Yatra) ಮಧ್ಯಪ್ರದೇಶಕ್ಕೆ ತಲುಪಿದ್ದು, ಸಂಸದ ರಾಹುಲ್ ಗಾಂಧಿ (Rahul Gandhi) ಸಹೋದರಿ ಪ್ರಿಯಾಂಕಾ ಗಾಂಧಿ (Priyanka Gandhi) ಜೊತೆ ಸೇರಿ ನರ್ಮದಾ (Narmada) ನದಿಗೆ (River) ಆರತಿ (Aarti) ಬೆಳಗಿದ್ದಾರೆ.

    ಮಧ್ಯಪ್ರದೇಶದ ಖಾಂಡ್ವಾ ಜಿಲ್ಲೆಯ ಬ್ರಹ್ಮಪುರಿ ಘಾಟ್‍ನಲ್ಲಿರುವ ನರ್ಮದಾ ನದಿಗೆ ಪ್ರಿಯಾಂಕಾ ಗಾಂಧಿ ಮತ್ತು ರಾಹುಲ್ ಗಾಂಧಿ ಆರತಿ ಬೆಳಗಿ ಬಳಿಕ ಬೆಟ್ಟದ ಮೇಲಿರುವ ಪ್ರಸಿದ್ಧ ಓಂಕಾರೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು. ಇವರಿಗೆ ಕಾಂಗ್ರೆಸ್ ಅಧ್ಯಕ್ಷ ಮತ್ತು ಮಾಜಿ ಮುಖ್ಯಮಂತ್ರಿ ಕಮಲ್ ನಾಥ್, ಪ್ರಿಯಾಂಕಾ ಗಾಂಧಿ ಅವರ ಪತಿ ರಾಬರ್ಟ್ ವಾದ್ರಾ ಮತ್ತು ಅವರ ಮಗ ರೈಹಾನ್ ವಾದ್ರಾ ಸಾಥ್ ನೀಡಿದರು. ಇದನ್ನೂ ಓದಿ: ಕುಕ್ಕೆಯ ಬಳಿಕ ಬೆಂಗಳೂರಿಗೆ ತಟ್ಟಿದ ಧರ್ಮ ದಂಗಲ್

    ಈ ಬಗ್ಗೆ ಟ್ವಿಟ್ಟರ್‌ನಲ್ಲಿ ಭಾರತ್ ಜೋಡೋ ಖಾತೆಯಿಂದ ಪೋಸ್ಟ್ ಮಾಡಲಾಗಿದ್ದು, ದೇಶದಲ್ಲಿ ಶಾಂತಿ ಮತ್ತು ಏಕತೆ ನೆಲೆಸಲಿ. ತಾಯಿ ನರ್ಮದಾ ಎಲ್ಲರಿಗೂ ಶುಭವನ್ನು ತರಲಿ ಎಂದು ಪ್ರಾರ್ಥಿಸಿದ್ದೇವೆ ಎಂದು ಹಲವು ಫೋಟೋಗಳನ್ನು ಪೋಸ್ಟ್ ಮಾಡಿದೆ. ಇದನ್ನೂ ಓದಿ: ಈಗಲೂ ಮೋದಿ ನಂ.1 ಜನಪ್ರಿಯ ನಾಯಕ

    ಪ್ರಿಯಾಂಕಾ ಗಾಂಧಿ ಮೊದಲ ಬಾರಿಗೆ ರಾಹುಲ್ ಗಾಂಧಿ ಜೊತೆ ಭಾರತ್ ಜೋಡೋ ಯಾತ್ರೆಯಲ್ಲಿ ಭಾಗವಹಿಸುತ್ತಿದ್ದು, ಕಳೆದೆರಡು ದಿನಗಳಿಂದ ಭಾರತ್ ಜೋಡೋ ಯಾತ್ರೆಯಲ್ಲಿ ಹೆಜ್ಜೆ ಹಾಕುತ್ತಿದ್ದಾರೆ. ನಿನ್ನೆ ರಾಹುಲ್ ಗಾಂಧಿ ಜೊತೆ ಬಾಕ್ಸರ್ ವಿಜೇಂದರ್ ಸಿಂಗ್ (Vijender Singh) ಕೂಡ ಪಾಲ್ಗೊಂಡಿದ್ದರು. ಇದೀಗ ಯಾತ್ರೆ ಮಧ್ಯಪ್ರದೇಶದಲ್ಲಿ ಸಾಗುತ್ತಿದ್ದು, ಮುಂದೆ ರಾಜಸ್ಥಾನಕ್ಕೆ ಪ್ರವೇಶ ಮಾಡಲಿದೆ.

    Live Tv
    [brid partner=56869869 player=32851 video=960834 autoplay=true]

  • ವಿದ್ಯಾರ್ಥಿಗಳಿಗೆ ಮುಕ್ತ ಅಧ್ಯಯನ ಮಾಡಲು ಬಿಡಿ: ಡಾ.ಆರತಿ

    ವಿದ್ಯಾರ್ಥಿಗಳಿಗೆ ಮುಕ್ತ ಅಧ್ಯಯನ ಮಾಡಲು ಬಿಡಿ: ಡಾ.ಆರತಿ

    ಬೆಳಗಾವಿ: ವಿದ್ಯಾರ್ಥಿಗಳಿಗೆ ಪೋಷಕರು ಮುಕ್ತವಾಗಿ ಅಧ್ಯಯನ ಮಾಡಲು ಬಿಡಬೇಕು ಎಂದು ಡಾ. ಆರತಿ ಪೋಷಕರಿಗೆ ಸಲಹೆ ನೀಡಿದರು.

    ಇಂದು ನಗರದ ಮರಾಠಾ ಮಂದಿರದಲ್ಲಿ ನಡೆದ ಸೊಸೈಟಿ ದಿನಾಚಾರಣೆ ಉದ್ಘಾಟಿಸಿ ಮಾತನಾಡಿದ ಅವರು, ಮಕ್ಕಳು ದೇವರ ಸಮನಾರು ಶೈಕ್ಷಣಿಕ ಕ್ಷೇತ್ರದಲ್ಲಿ ಅವರಿಗೆ ಬೇಕಾದ ಕಲೆಯನ್ನು ಆಯ್ಕೆ ಮಾಡುವುದನ್ನು ಬಿಡಬೇಕು. ಪೋಷಕರು ಇದೇ ಕೋರ್ಸ್ ಮಾಡಿ ಎಂದು ಮಕ್ಕಳಲ್ಲಿ ಒತ್ತಡ ಹಾಕಬಾರದು ಎಂದರು.

    ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಯುಗದಲ್ಲಿ ಸಾಕಷ್ಟು ಸೌಲಭ್ಯದ ಜತೆಗೆ ಅವಕಾಶಗಳು ಇವೆ. ಅದನ್ನು ವಿದ್ಯಾರ್ಥಿಗಳು ಸದುಪಯೋಗ ಪಡೆಸಿಕೊಂಡು ಸಮಾಜಕ್ಕೆ ತಮ್ಮದೆಯಾದ ಕೊಡುಗೆ ನೀಡಬೇಕೆಂದು ಕರೆ ನೀಡಿದರು.

    ಇದೇ ಸಂದರ್ಭದಲ್ಲಿ ಸೊಸೈಟಿಯ ಪುಸ್ತಕವನ್ನು ಲೋಕಾರ್ಪಣೆಗೊಳಿಸಲಾಯಿತು. ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಿಸಲಾಯಿತು. ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು ಸಮಿತಿಯ ಅಧ್ಯಕ್ಷ ಆರ್.ಡಿ.ಶಾನಭಾಗ್, ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

  • ಮಗಳು ಆರತಿ ಮಾಡಿದ್ದಕ್ಕೆ ಟಿವಿ ಒಡೆದಿದ್ದೆ- ಶಾಹಿದ್ ಅಫ್ರಿದಿ

    ಮಗಳು ಆರತಿ ಮಾಡಿದ್ದಕ್ಕೆ ಟಿವಿ ಒಡೆದಿದ್ದೆ- ಶಾಹಿದ್ ಅಫ್ರಿದಿ

    ಇಸ್ಲಾಮಾಬಾದ್: ನನ್ನ ಮಗಳು ಆರತಿ ಮಾಡುವಂತೆ ನಟಿಸುವದನ್ನು ನೋಡಿ ನಾನು ಟಿವಿಯನ್ನೇ ಒಡೆದು ಹಾಕಿದ್ದೆ ಎಂದು ಪಾಕಿಸ್ತಾನ ತಂಡದ ಮಾಜಿ ಕ್ರಿಕೆಟ್ ಆಟಗಾರ ಶಾಹಿದ್ ಅಫ್ರಿದಿ ಹೇಳಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

    ಶಾಹಿದ್ ಅಫ್ರಿದಿ ಈ ಕುರಿತು ಸಂದರ್ಶನವೊಂದರಲ್ಲಿ ಹೇಳಿಕೆ ನೀಡಿರುವ ಹಳೆಯ ವಿಡಿಯೋ ಇದೀಗ ವೈರಲ್ ಆಗಿದೆ. ಟಿವಿ ವಾಹಿನಿಯ ನಿರೂಪಕಿ ಸಂದರ್ಶನವೊಂದರಲ್ಲಿ ನೀವು ಎಷ್ಟು ಬಾರಿ ಟಿವಿ ಒಡೆದಿದ್ದೀರಿ ಎಂದು ಪ್ರಶ್ನಿಸಿದ್ದಾರೆ. ಇದಕ್ಕೆ ಅಫ್ರಿದಿ ಪ್ರತಿಕ್ರಿಯಿಸಿದ್ದು, ನಾನು ಒಂದು ಬಾರಿ ಟಿವಿಯನ್ನು ಒಡೆದಿದ್ದೇನೆ ಎಂದು ತಿಳಿಸಿದ್ದಾರೆ.

    ನನ್ನ ಪತ್ನಿಯ ಕಾರಣದಿಂದಾಗಿ ಒಂದು ಬಾರಿ ಟಿವಿ ಒಡೆದಿದ್ದೇನೆ. ಭಾರತೀಯ ವಾಹಿನಿಯೊಂದರ ಡ್ರಾಮಾ ಶೋ ತುಂಬಾ ಜನಪ್ರಿಯವಾಗಿತ್ತು. ಈ ಶೋವನ್ನು ನನ್ನ ಪತ್ನಿ ನೋಡುತ್ತಿದ್ದಳು, ಆಗ ನೀನೊಬ್ಬಳೆ ನೋಡು ಮಕ್ಕಳು ಇದನ್ನು ನೋಡಲು ಬಿಡಬೇಡ ಎಂದು ಹೇಳಿದ್ದೆ. ಒಂದು ಬಾರಿ ನಾನು ರೂಮಿನಿಂದ ಹೊರಗಡೆ ಬಂದಾಗ ನನ್ನ ಮಕ್ಕಳಲ್ಲಿ ಒಬ್ಬಳು ಟಿವಿ ಶೋ ನೋಡಿಕೊಂಡು ಆರತಿ ಮಾಡುವುದನ್ನು ಅನುಕರಣೆ ಮಾಡುತ್ತಿದ್ದಳು. ಇದನ್ನು ಕಂಡ ತಕ್ಷಣ ಕೋಪ ಬಂತು ಹೀಗಾಗಿ ಟಿವಿಯನ್ನೇ ಒಡೆದು ಹಾಕಿದ್ದೆ ಎಂದು ಹೇಳಿಕೊಂಡಿದ್ದಾರೆ.

    ಟ್ವಿಟ್ಟರ್ ಬಳಕೆದಾರರೊಬ್ಬರು ಈ ಹಳೆಯ ವಿಡಿಯೋವನ್ನು ಪೋಸ್ಟ್ ಮಾಡಿದ್ದು, ಇದೀಗ ಫುಲ್ ವೈರಲ್ ಆಗಿದೆ. ಪಾಕಿಸ್ತಾನದ ಮಾಜಿ ಕ್ರಿಕೆಟ್ ಆಟಗಾರ ಅಫ್ರಿದಿ ಹೇಳಿಕೆ ವಿರುದ್ಧ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಪಾಕಿಸ್ತಾನದ ಮಾಜಿ ಕ್ರಿಕೆಟ್ ಆಟಗಾರರ ದಾನಿಶ್ ಕನೇರಿಯಾ, ಹಿಂದೂ ಆಗಿದ್ದಕ್ಕೆ ತಂಡದಲ್ಲಿ ನನ್ನನ್ನು ಕೀಳಾಗಿ ನೋಡಲಾಗುತಿತ್ತು ಎಂದು ಹೇಳಿಕೆ ನೀಡಿದ ಬೆನ್ನಲ್ಲೇ ಇದೀಗ ಅಫ್ರಿದಿ ವಿಡಿಯೋ ವೈರಲ್ ಆಗಿದೆ.

    ಪಾಕಿಸ್ತಾನ ಕ್ರಿಕೆಟ್ ತಂಡದಲ್ಲಿ ಆಡುತ್ತಿದ್ದ ವೇಳೆ ತಂಡದಲ್ಲಿ ಹಿಂದೂ ಕ್ರಿಕೆಟ್ ಆಟಗಾರರನ್ನು ಎಷ್ಟು ಹೀನಾಯವಾಗಿ ನಡೆಸಿಕೊಳ್ಳುತ್ತಿದ್ದರು ಎಂಬುವುದನ್ನು ಮಾಜಿ ವೇಗದ ಬೌಲರ್ ಶೋಯೆಬ್ ಅಖ್ತರ್ ಬಹಿರಂಗ ಪಡಿಸಿದ್ದರು.

    ಪಾಕ್ ಕ್ರಿಕೆಟ್ ತಂಡದಲ್ಲಿ ಹೆಚ್ಚಿನ ಆಟಗಾರರು ಧರ್ಮ, ಜಾತಿ, ಪ್ರದೇಶದ ಆಧಾರದ ಮೇಲೆ ತಾರತಮ್ಯ ಮಾಡಲಾಗುತ್ತಿದೆ. ಮಾಜಿ ಆಟಗಾರ ದಾನಿಶ್ ಕನೇರಿಯಾ ಅವರು ಸಾಕಷ್ಟು ತಾರತಮ್ಯಕ್ಕೆ ಒಳಗಾಗಿದ್ದಾರೆ. ಅವರೊಂದಿಗೆ ಕುಳಿತು ಊಟ ಮಾಡಲು ಕೂಡ ಆಟಗಾರರು ಇಷ್ಟ ಪಡುತ್ತಿರಲಿಲ್ಲ. ಇಡೀ ತಂಡ ಇದೇ ರೀತಿ ವರ್ತಿಸುತಿತ್ತು. ಅದರಲ್ಲೂ ಹೆಚ್ಚಿನ ಆಟಗಾರರು ಈ ರೀತಿ ಇದ್ದರು ಎಂದು ಅಖ್ತರ್ ಹೇಳಿದ್ದರು.

    ಯಾವಾಗಲೂ ನಿನ್ನ ಧರ್ಮ ಯಾವುದು? ಪ್ರದೇಶ ಯಾವುದು? ಎಂದು ಮಾತನಾಡುತ್ತಿದ್ದರು. ಕರಾಚಿ, ಪಂಜಾಬ್, ಪೇಶಾವರ್ ಪ್ರದೇಶಕ್ಕೆ ಸೇರಿದವರಾ ಎಂದು ಹೆಚ್ಚು ಚರ್ಚೆ ಮಾಡುತ್ತಿದ್ದರು. ಅದರಲ್ಲೂ ಮೂವರು ಆಟಗಾರರು ಹೆಚ್ಚು ಈ ರೀತಿ ವರ್ತಿಸುತ್ತಿದ್ದರು. ಹಿಂದೂ ಎಂಬ ಕಾರಣಕ್ಕೆ ದಾನಿಶ್ ಅವರನ್ನು ಹೀನಾಯವಾಗಿ ನಡೆಸಿಕೊಳ್ಳುತ್ತಿದ್ದರು. ಆದರೆ ಅಂದು ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಆತನಿಂದಲೇ ಗೆಲುವು ಪಡೆದಿದ್ದೆವು. ಆತ ತಂಡದಲ್ಲಿರದಿದ್ದರೆ ಖಂಡಿತಾ ಪಂದ್ಯವನ್ನು ಕಳೆದುಕೊಳ್ಳುತ್ತಿದ್ದೆವು. ಆದರೆ ಆತನಿಗೆ ಸಿಗಬೇಕಾದ ಗೌರವ ಮಾತ್ರ ಸಿಗಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದರು.

    ಶೋಯೆಬ್ ಅಖ್ತರ್ ಹೇಳಿಕೆ ಕುರಿತು ಪ್ರತಿಕ್ರಿಯೆ ನೀಡಿದ್ದ ದಾನಿಶ್ ಕನೇರಿಯಾ, ಅಖ್ತರ್ ಹೇಳಿರುವುದು ಸತ್ಯ. ಆತ ಒಬ್ಬ ಲೆಜೆಂಡ್ ಆಟಗಾರ. ನನಗೆ ಯಾವಾಗಲೂ ಬೆಂಬಲವಾಗಿ ನಿಂತಿರುತ್ತಿದ್ದ. ಆದರೆ ಆ ಸಮಯದಲ್ಲಿ ತಂಡದ ಇತರೆ ಆಟಗಾರರು ತಾರತಮ್ಯ ಮಾಡುತ್ತಿದ್ದರು. ಅಖ್ತರ್ ರೊಂದಿಗೆ ಕೆಲ ಆಟಗಾರರು ಕೂಡ ಬೆಂಬಲ ನೀಡಿದ್ದಾರೆ. ಶೀಘ್ರದಲ್ಲೇ ನನ್ನ ವಿರುದ್ದ ತಾರತಮ್ಯ ನಡೆಸಿದ ಆಟಗಾರರ ಹೆಸರುಗಳನ್ನು ಬಹಿರಂಗ ಪಡಿಸುತ್ತೇನೆ ಎಂದಿದ್ದರು. ಅಲ್ಲದೆ ಪಾಕ್ ಪರ ಆಡುವುದು ಅದೃಷ್ಟವಾಗಿದ್ದು, ಅದನ್ನು ಗೌರವಿಸುತ್ತೇನೆ ಎಂದಿದ್ದರು.

  • ಮಾಜಿ ಪತ್ನಿ ಆರೋಪಕ್ಕೆ ಫೇಸ್‌ಬುಕ್‌ನಲ್ಲೇ ಉತ್ತರಿಸ್ತೀನಿ ಅಂದ್ರು ಗುರುಪ್ರಸಾದ್!

    ಮಾಜಿ ಪತ್ನಿ ಆರೋಪಕ್ಕೆ ಫೇಸ್‌ಬುಕ್‌ನಲ್ಲೇ ಉತ್ತರಿಸ್ತೀನಿ ಅಂದ್ರು ಗುರುಪ್ರಸಾದ್!

    ಬೆಂಗಳೂರು: ಮೀಟೂ ಎಂಬ ಅಭಿಯಾನ ರಾಜ್ಯಕ್ಕೆ ಕಾಲಿಡುತ್ತಿದ್ದಂತೆ ಸ್ಯಾಂಡಲ್ ವುಡ್‍ನಲ್ಲಿ ಬಾಂಬ್‍ಗಳ ಮೇಲೆ ಬಾಂಬ್‍ಗಳು ಸಿಡಿಯುತ್ತಿವೆ. ಇದೀಗ ನಿರ್ದೇಶಕ ಗುರುಪ್ರಸಾದ್ ಅವರು ಮಾಜಿ ಪತ್ನಿ ಆರತಿ ಮೀಟೂ ಆರೋಪಕ್ಕೆ ಫೇಸ್‍ಬುಕ್‍ನಲ್ಲಿ ಉತ್ತರ ಕೊಡುತ್ತೇನೆ ಎಂದು ಹೇಳಿದ್ದಾರೆ.

    ಈ ಮೂಲಕ ನಟಿ ಶೃಇಹರಿಹರನ್, ಸಂಗೀತ ಭಟ್ ತಾವೂ ಪತಿವ್ರತೆಯರು ಅಂತ ಸಾಬೀತು ಮಾಡಲು ಹೊರಟಿದ್ದಾರೆ ಎಂದು ಡೈಲಾಗ್ ಹೊಡೆದು ವಿವಾದ ಸೃಷ್ಟಿಸಿಕೊಂಡಿದ್ದ ನಿರ್ದೇಶಕ ಗುರುಪ್ರಸಾದ್ ಈಗ ಮತ್ತೊಂದು ಬಾಂಬ್ ಸಿಡಿಸಲು ಮುಂದಾಗಿದ್ದಾರೆ.

    ಮಾಜಿ ಪತ್ನಿ ಏನ್ ಹೇಳಿದ್ದರು?:
    ಯಾವುದೇ ವ್ಯಕ್ತಿ ಯಾರ ಬಗ್ಗೆಯೂ ಮಾತನಾಡಿದರೂ ಅದು ಒಪ್ಪುವಂತಹ ವಿಷಯವಲ್ಲ ಅನ್ನೋದು ನನ್ನ ಅಭಿಪ್ರಾಯವಾಗಿದೆ. ನಾನು ಟಿವಿ, ನ್ಯೂಸ್ ಪೇಪರ್ ಓದದೇ ಇರುವುದರಿಂದ ಯಾರಾದ್ರೂ ಹೇಳಿದ್ರೆ ಅಷ್ಟು ಮಾತ್ರ ನನಗೆ ಗೊತ್ತಿರುತ್ತದೆ. ಆದ್ರೆ ನನ್ನ ಮಗಳು ಯೂಟ್ಯೂಬ್ ನಲ್ಲಿ ಬಂದಂತಹ ಲಿಂಕ್ ತೋರಿಸಿದಳು. ಅದನ್ನು ನೋಡಿದಾಗ ಯಾವುದೇ ಒಬ್ಬ ವ್ಯಕ್ತಿಗೆ ಇನ್ನೊಬ್ಬ ಹೆಣ್ಣು ಅಥವಾ ಮಹಿಳೆ ಹಾಗೂ ಟ್ರಾನ್ಸ್ ಜೆಂಡರ್ ಬಗ್ಗೆಯೂ ಈ ತರ ಮಾತನಾಡುವ ಹಕ್ಕು ಇರಲ್ಲ. ಗುರುಗೆ ಸ್ವಂತ ಮಗಳಿದ್ದಾಳೆ. ಹೀಗಾಗಿ ಎಲ್ಲರೂ ಹೆಣ್ಣು ಮಕ್ಕಳು ಸರಿಯಿಲ್ಲ ಅಂತ ಒಬ್ಬ ಅಪ್ಪನಾಗಿ ಹೇಳೋದಕ್ಕೂ ಮುಂಚೆ ಯೋಚನೆ ಮಾಡಬೇಕು. ಆತ ಯೋಚನೆ ಮಾಡುತ್ತಿಲ್ಲ ಅಂದ್ರೆ ಆತ ಅಪ್ಪನಾಗಿ ಬಿಹೇವ್ ಮಾಡ್ತಿಲ್ಲ ಅಂತ ಅರ್ಥ ಎಂದು ಪತಿ ಹೇಳಿಕೆಯ ವಿರುದ್ಧ ಗರಂ ಆಗಿದ್ದರು.

    ಯಾರ ಬಾಯಿಂದ ಹೆಣ್ಣು ಮಗು ಅಂತ ಪದ ಬರುತ್ತಾ ಇದೆ ಅಲ್ವಾ, ಆತ ತನ್ನ ಸ್ವಂತ 14 ವರ್ಷದ ಮಗಳನ್ನು ಹೆಂಡ್ತಿ ಸಮೇತ ಮಧ್ಯರಾತ್ರಿ ಆಚೆ ಹಾಕಿದ್ದರು. ಇದು ನಡೆದಿರುವ ಘಟನೆಯಾಗಿದೆ. ಆದ್ರೆ ನಾನು ಯಾವುದೇ ರಗಳೆ ರಂಪ ಮಾಡದೇ ಹೊರ ಬಂದಿದ್ದೇನೆ. ಒಬ್ಬ ವ್ಯಕ್ತಿಗೆ ನಾವು ಬೇಡ ಅಂತ ಹೇಳಿದ ಬಳಿಕ ಯಾವುದೇ ಗಲಾಟೆ ಮಾಡುವುದು ಬೇಕಿರಲಿಲ್ಲ. ಯಾಕಂದ್ರೆ ಆ ವ್ಯಕ್ತಿ ಬೇಡ ಅಂದ ಬಳಿಕ ರಗಳೆ ಮಾಡಿ ಪ್ರಯೋಜನವೇನು ಅಂತ ಎಲ್ಲೂ ಬರಲಿಲ್ಲ ಅಂತ ಹೇಳಿದ ಅವರು ಇದಾಗಿ 3 ವರ್ಷ ಆಯ್ತು ಅಂತ ಹೇಳಿದ್ದರು.

    ಒಬ್ಬ ಅಪ್ಪನಾಗಿಯೂ ಗುರು ಅವರ ಜವಾಬ್ದಾರಿಯನ್ನು ನಿಭಾಯಿಸುತ್ತಿಲ್ಲ. ಅವರ ಮಗಳನ್ನು ಬಂದು ನೋಡುವುದಿಲ್ಲ. ನಮಗೂ ಅವರಿಗೂ ಯಾವುದೇ ರೀತಿಯ ಸಂಪರ್ಕವೇ ಇಲ್ಲ. ಇಬ್ಬರೂ ಒಪ್ಪಿಕೊಂಡು ವಿಚ್ಛೇದನಕ್ಕೆ ಅಂತ ಹೋಗಿದ್ದೆವು. ಆಗ ಅವರು 2 ಸಲ ಬಂದ್ರು ಆ ನಂತರ ಕೋರ್ಟ್ ಗೂ ಬರುತ್ತಿಲ್ಲ. ಹೀಗಾಗಿ ಅವರ ಯಾವುದೇ ರೀತಿಯ ಸಂಪರ್ಕಕ್ಕೂ ನಾನು ಸಿಗುತ್ತಿಲ್ಲ. ಅವರ ಮನೆ ಹತ್ರ ಹೋದರೂ ಸಿಗುತ್ತಿಲ್ಲ. ಡಿವೋರ್ಸ್ ಪೇಪರ್ ಗೆ ಸಹಿ ಹಾಕಿ ಕೊಡಿ ಅಂದ್ರೂ ಅವರು ಸಿಗ್ತಿಲ್ಲ ಅಂತ ಪಬ್ಲಿಕ್ ಟಿವಿ ಜೊತೆ ಮಾತನಾಡುತ್ತಾ ತಿಳಿಸಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

    https://www.youtube.com/watch?v=P0ht0YhqeXg

    https://www.youtube.com/watch?v=u4enQ9slDcc