ರಾಯಚೂರು: ಗುರು ರಾಯರ ಸನ್ನಿಧಿ ಮಂತ್ರಾಲಯ ರಾಘವೇಂದ್ರ ಸ್ವಾಮಿ ಮಠದಲ್ಲಿ ಏಳು ದಿನಗಳ ಕಾಲ ನಡೆದ 354 ನೇ ಆರಾಧನಾ ಮಹೋತ್ಸವಕ್ಕೆ ವಿದ್ಯುಕ್ತ ತೆರೆ ಬಿದ್ದಿದೆ.
ರಾತ್ರಿ ವೇಳೆ ನಡೆದ ಸರ್ವಸಮರ್ಪಣೋತ್ಸವದೊಂದಿಗೆ ರಾಯರ 354 ನೇ ಆರಾಧನಾ ಮಹೋತ್ಸವ ಹಾಗೂ ಸಪ್ತರಾತ್ರೋತ್ಸವ ಮುಕ್ತಾಯವಾಗಿದೆ.
ಮೂಲರಾಮದೇವರ ಪೂಜೆ, ಮಹಾ ಮಂಗಳಾರತಿ, ಮಠದ ಪ್ರಾಕಾರದಲ್ಲಿ ವಾಹನೋತ್ಸವ, ರಥೋತ್ಸವ ಜೊತೆ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಸ್ವಾಮಿ ಎಲ್ಲಾ ಸೇವೆ ಉತ್ಸವಗಳನ್ನ ನೆರೆವೇರಿಸುವ ಮೂಲಕ ಸರ್ವಸಮರ್ಪಣೋತ್ಸವ ಆಚರಿಸಿದರು.
ಕಟ್ಟಿಗೆ ರಥವನ್ನ ಮಠದ ಪ್ರಾಕಾರದಲ್ಲಿ ಎಳೆಯಲಾಯಿತು. ಈ ಮೂಲಕ ಆರಾಧನಾ ಮಹೊತ್ಸವ ಮುಕ್ತಾಯವಾಗಿದ್ದು, ಮಠದಲ್ಲಿ ಎಂದಿನಂತೆ ಪೂಜಾ ಕೈಂಕರ್ಯಗಳು ಮುಂದುವರೆದಿವೆ.
ರಾಯಚೂರು: ಕಲಿಯುಗ ಕಾಮಧೇನು ಮಂತ್ರಾಲಯ (Mantralaya) ಗುರು ರಾಘವೇಂದ್ರ ಸ್ವಾಮಿಗಳು ಸಶರೀರರಾಗಿ ವೃಂದಾವನಸ್ಥರಾಗಿ 354 ವರ್ಷಗಳು ಸಂದಿರುವ ಹಿನ್ನೆಲೆ ಎಲ್ಲೆಡೆ ರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವ (Aradhana Mahotsava) ವಿಜೃಂಭಣೆಯಿಂದ ನಡೆಯುತ್ತಿದೆ.
ಮಂತ್ರಾಲಯದಲ್ಲಿ ಇಂದು ಪೂರ್ವಾರಾಧನೆಯ ಸಡಗರವಿದ್ದು, ಬೆಳಗಿನ ಜಾವದಿಂದಲೇ ನಾನಾ ಪೂಜಾ ಕೈಂಕರ್ಯಗಳು ಆರಂಭಗೊಂಡಿವೆ. ಇಂದು ವಿಶೇಷವಾಗಿ ನಿರ್ಮಾಲ್ಯ ವಿಸರ್ಜನ, ಉತ್ಸವ ರಾಯರ ಪಾದಪೂಜೆ, ಪಂಚಾಮೃತ, ಅಲಂಕಾರ ಸಂತರ್ಪಣ, ಹಸ್ತೋದಕ, ಮಹಾಮಂಗಳಾರತಿ, ತೀರ್ಥ ಪ್ರಸಾದ ನಡೆಯಲಿದೆ. ಮಠದ ಪ್ರಾಕಾರದಲ್ಲಿ ರಜತ ಸಿಂಹ, ಗಜ ವಾಹನೋತ್ಸವ ಪಲ್ಲಕ್ಕಿ ಸೇವೆ ನಡೆದವು. ಶ್ರೀರಂಗದ ರಂಗನಾಥ ಸ್ವಾಮಿ ಹಾಗೂ ಕಂಚಿ ವರದರಾಜ ದೇವರ ವಸ್ತ್ರ ಪ್ರಸಾದವನ್ನ ರಾಯರಿಗೆ ಸಮರ್ಪಿಸಲಾಯಿತು. ಇದನ್ನೂ ಓದಿ: ಮೋದಿ ಹಾಸ್ಯಕ್ಕೆ ಸಿದ್ದು, ಡಿಕೆಶಿಗೆ ನಗುವೋ ನಗು!
ಸಂಜೆ ವೇಳೆಗೆ ಜ್ಞಾನಯೋಗ, ಸ್ವಸ್ತಿ ವಾಚನ, ಹಗಲು ದೀವಟಿಗೆ, ಪ್ರಾಕಾರ ಉತ್ಸವಗಳು ಬೆಳ್ಳಿ ,ಚಿನ್ನದ ರಥೋತ್ಸವ ಸೇರಿದಂತೆ ನಾನಾ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ಮುಖ್ಯವಾಗಿ ರಾಯರು ರಚಿಸಿದ ಪರಿಮಳ ಗ್ರಂಥವನ್ನ ಪಲ್ಲಕ್ಕಿಯಲ್ಲಿಟ್ಟು ಪಲ್ಲಕ್ಕಿ ಉತ್ಸವ ನಡೆಸಲಾಗುತ್ತದೆ. ಇದನ್ನೂ ಓದಿ: ಭಾರತೀಯ ವಿಮಾನಗಳಿಗೆ ನಿರ್ಬಂಧ – ಪಾಕಿಗೆ 1,240 ಕೋಟಿ ನಷ್ಟ
ಸಂಜೆ ವೇಳೆ ಸಭಾ ಮಂಟಪದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಗಣ್ಯರಿಗೆ ಗುರು ರಾಘವೇಂದ್ರ ಅನುಗ್ರಹ ಪ್ರಶಸ್ತಿ ಪ್ರದಾನ ಮಾಡಲಾಗುವುದು. ದೇಶ ಹಾಗೂ ರಾಜ್ಯದ ಮೂಲೆ ಮೂಲೆಯಿಂದ ಭಕ್ತರ ದಂಡು ಹರಿದು ಬಂದಿದೆ. ಸಪ್ತರಾತ್ರೋತ್ಸವ ಹಿನ್ನೆಲೆ ಏಳುದಿನಕಾಲ ಧಾರ್ಮಿಕ ಕಾರ್ಯಕ್ರಮಗಳ ಜೊತೆ ನಾನಾ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಇದನ್ನೂ ಓದಿ: ಬೆಂಗಳೂರು-ಬೆಳಗಾವಿ ವಂದೇಭಾರತ್ ರೈಲಿಗೆ ಮೋದಿ ಹಸಿರು ನಿಶಾನೆ
ಸಣ್ಣನೀರಾವರಿ ಹಾಗೂ ವಿಜ್ಞಾನ ತಂತ್ರಜ್ಞಾನ ಸಚಿವ ಎನ್.ಎಸ್.ಬೋಸರಾಜು ಮಂತ್ರಾಲಯ ಮಠಕ್ಕೆ ಭೇಟಿ ನೀಡಿ ಪೂರ್ವಾರಾಧನೆ ಸಂಭ್ರಮದಲ್ಲಿ ಭಾಗವಹಿಸಿದರು. ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಸ್ವಾಮಿ ಸಚಿವ ಎನ್.ಎಸ್.ಬೋಸರಾಜು ಹಾಗೂ ಭಕ್ತರಿಗೆ ಆಶಿರ್ವಚನ ನೀಡಿದರು. ಇದನ್ನೂ ಓದಿ: ಬೆಂಗಳೂರಿಗೆ ಬಿಜೆಪಿಯ ಯಾವೊಬ್ಬ ನಾಯಕ 10 ರೂ. ಅನುದಾನ ತಂದಿಲ್ಲ: ಡಿಕೆಶಿ ಆಕ್ರೋಶ
– ರಾಯರ ವೃಂದಾವನ ಶಿಲಾ ಸ್ತಂಭಗಳಿಗೆ ಸುವರ್ಣ ಲೇಪಿತ ಕವಚ ಅಳವಡಿಕೆ
ರಾಯಚೂರು: ಮಂತ್ರಾಲಯದಲ್ಲಿ (Mantralaya) ಗುರುರಾಯರ 354ನೇ ಆರಾಧನಾ ಮಹೋತ್ಸವ (Aradhana Mahotsava) ಸಂಭ್ರಮ ಮನೆಮಾಡಿದೆ. ಆರಾಧನಾ ಮಹೋತ್ಸವದ ಎರಡನೇ ದಿನವಾದ ಇಂದು ಮಠದಲ್ಲಿ ವಿಶೇಷ ಪೂಜಾ ಕೈಂಕರ್ಯ ಭಕ್ತಿ ಸಡಗರದಿಂದ ನಡೆದಿವೆ.
ರಾಯರ ವೃಂದಾವನ ಮುಂದಿನ ಎರಡು ಶಿಲಾ ಸ್ತಂಭಗಳಿಗೆ ಸುವರ್ಣ ಲೇಪಿತ ಕವಚ ಅಳವಡಿಸಲಾಗಿದೆ. ಗುರು ರಾಯರ ಭಕ್ತರ ದೇಣಿಗೆಯಿಂದ ತಯಾರಿಸಿದ ಕವಚಗಳು ಮೊದಲ ಬಾರಿಗೆ ಅಳವಡಿಸಲಾಗಿದೆ. ಪ್ರತಿವರ್ಷದಂತೆ ಈ ಬಾರಿಯೂ ತಿರುಪತಿ ತಿರುಮಲ ದೇವಾಲಯದಿಂದ ಶ್ರೀನಿವಾಸ ದೇವರ ಶೇಷವಸ್ತ್ರ ಮಂತ್ರಾಲಯಕ್ಕೆ ಬಂದಿದ್ದು, ಮಠದ ಆಡಳಿತ ಮಂಡಳಿ ಅದ್ಧೂರಿಯಾಗಿ ಸ್ವಾಗತಿಸಿದೆ. ಇದನ್ನೂ ಓದಿ: ದೆಹಲಿಯಲ್ಲಿ ಭಾರೀ ಮಳೆ – ರೆಡ್ ಅಲರ್ಟ್ ಘೋಷಣೆ, 100
ಮಂಚಾಲಮ್ಮದೇವಿಗೆ ಸೀರೆ ಸಮರ್ಪಣೆ ಬಳಿಕ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಸ್ವಾಮಿ ಶೇಷವಸ್ತ್ರ ಸ್ವೀಕರಿಸಿ ರಾಯರ ವೃಂದಾವನಕ್ಕೆ ಸಮರ್ಪಿಸಿದ್ದಾರೆ. ಬೆಳಗಿನ ಜಾವದಿಂದ ವಿಶೇಷ ಪೂಜೆಗಳು ನಡೆಯುತ್ತಿದ್ದು, ಶಾಖೋತ್ಸವ, ರಜಮಂಟಪೋತ್ಸವ ಸೇರಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಮಠದಲ್ಲಿ ಜರುಗುತ್ತಿವೆ. ಆಗಸ್ಟ್ 8 ರಿಂದ 14ರವರೆಗೆ ಏಳು ದಿನಗಳ ಕಾಲ ನಡೆಯಲಿರುವ ಸಪ್ತರಾತ್ರೋತ್ಸವದಲ್ಲಿ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಇದನ್ನೂ ಓದಿ: ಗದಗ | ಐಪಿಎಸ್ ಅಧಿಕಾರಿಯ ಸಹೋದರನ ದರ್ಪ – ಕುಡಿದ ಮತ್ತಲ್ಲಿ ಠಾಣೆಗೆ ನುಗ್ಗಿ ರಂಪಾಟ
ರಾಯಚೂರು: ಶ್ರೀಗುರು ರಾಘವೇಂದ್ರ ಸ್ವಾಮಿಗಳ (Raghavendra Swamy Aradhana Mahotsava) 353ನೇ ಆರಾಧನಾ ಮಹೋತ್ಸವ ಹಿನ್ನೆಲೆ ಮಂತ್ರಾಲಯದಲ್ಲಿ (Mantralaya) ಇಂದು ಪೂರ್ವಾರಾಧನೆ ಸಂಭ್ರಮ ಮನೆ ಮಾಡಿದೆ. ಬೆಳಗ್ಗೆಯಿಂದ ವಿಶೇಷ ಪೂಜಾ ಕೈಂಕರ್ಯಗಳ ಜೊತೆ ಉತ್ಸವಗಳು ನಡೆಯುತ್ತಿವೆ. ಆರಾಧನಾ ವೈಭವವನ್ನು ಭಕ್ತರು ಕಣ್ಮನಗಳಲ್ಲಿ ತುಂಬಿಕೊಳ್ಳುತ್ತಿದ್ದಾರೆ.
ಗುರು ರಾಘವೇಂದ್ರ ಸ್ವಾಮಿಗಳು ಸಶರೀರರಾಗಿ ವೃಂದಾವನಸ್ಥರಾದ ದಿನದ ಮುನ್ನಾ ದಿನವನ್ನು ಪೂರ್ವಾರಾಧನೆಯಾಗಿ ಮಂತ್ರಾಲಯ ಸೇರಿದಂತೆ ದೇಶದ ಎಲ್ಲಾ ರಾಯರ ಮಠಗಳಲ್ಲಿ ಸಂಭ್ರಮದಿಂದ ಆಚರಿಸಲಾಗುತ್ತಿದೆ. ಮಠದ ಪ್ರಾಂಗಣದಲ್ಲಿ ರಾಯರು ರಚಿಸಿರುವ ಪರಿಮಳ ಗ್ರಂಥವನ್ನು ಪಲ್ಲಕ್ಕಿಯಲ್ಲಿ ಇಟ್ಟು ಮಠದ ಪ್ರಾಂಗಣದಲ್ಲಿ ಪಲ್ಲಕ್ಕಿ ಉತ್ಸವ ನೆರವೇರಿಸಲಾಯಿತು. ತಮಿಳುನಾಡಿನ ಶ್ರೀರಂಗಂನ ರಂಗನಾಥ ಸ್ವಾಮಿ ದೇವಾಲಯದಿಂದ ಬಂದ ಶೇಷವಸ್ತ್ರವನ್ನು ಅದ್ಧೂರಿಯಾಗಿ ಸ್ವಾಗತಿಸಿ ರಾಯರಿಗೆ ಶೇಷವಸ್ತ್ರ ಸಮರ್ಪಿಸಲಾಯಿತು. ಇದನ್ನೂ ಓದಿ: ವೈದ್ಯಕೀಯ ವೃತ್ತಿಪರರ ರಕ್ಷಣೆಗೆ ಟಾಸ್ಕ್ ಫೋರ್ಸ್ ರಚಿಸಿದ ಸುಪ್ರೀಂ ಕೋರ್ಟ್
ರಾಯರು 700 ವರ್ಷಕಾಲ ವೃಂದಾವನದಲ್ಲಿರುತ್ತಾರೆ ಅನ್ನೋ ಪ್ರತೀತಿಯಿದೆ. ಈ ಹಿನ್ನೆಲೆ ಪ್ರತಿ ವರ್ಷ ಪೂರ್ವಾರಾಧನೆ ಹಿನ್ನೆಲೆ ವಿಶೇಷ ಧಾರ್ಮಿಕ ಸಾಂಸ್ಕೃತಿಕ ಕಾರ್ಯಕ್ರಮಗಳು ಮಂತ್ರಾಲಯದಲ್ಲಿ ನಡೆಯುತ್ತಿವೆ. ಬೆಳಗ್ಗೆಯಿಂದಲೇ ಮಠದಲ್ಲಿ ಪೂಜಾ ಕೈಂಕರ್ಯಗಳು ನಡೆಯುತ್ತಿದ್ದು, ನಿರ್ಮಾಲ್ಯ ವಿಸರ್ಜನೆ, ಉತ್ಸವರಾಯರ ಪಾದಪೂಜೆ, ಪಂಚಾಮೃತ ಅಭಿಷೇಕ, ರಜತ ಸಿಂಹವಾಹನೋತ್ಸವ ನಡೆಯುತ್ತಿವೆ. ಇದನ್ನೂ ಓದಿ: ಸರ್ಕಾರಿ ಶಾಲೆಯಿಂದ ಹಾಲಿನ ಪುಡಿ ಮನೆಗೆ – ಮೈಸೂರಿನಲ್ಲಿ ಸಿಕ್ಕಿಬಿದ್ದ ಮುಖ್ಯ ಶಿಕ್ಷಕ
ರಾಯರ ಏಳು ದಿನಗಳ ಆರಾಧನಾ ಮಹೋತ್ಸವದಲ್ಲಿ ಇಂದಿನಿಂದ ಮೂರು ದಿನಗಳು ಅತಿ ಮಹತ್ವವಾಗಿವೆ. ರಾಘವೇಂದ್ರ ಸ್ವಾಮಿಗಳು ವೃಂದಾವನಸ್ಥರಾಗಿರುವ ಈ ದಿನಗಳಲ್ಲಿ ರಾಯರ ದರ್ಶನ ಪಡೆದರೆ ಸಕಲ ಸಂಕಷ್ಟಗಳು ದೂರಾಗುತ್ತವೆ ಎಂಬ ನಂಬಿಕೆ ಭಕ್ತರದ್ದಾಗಿದೆ. ಹೀಗಾಗಿ ರಾಜ್ಯದ ಮೂಲೆ ಮೂಲೆಗಳಿಂದ ಭಕ್ತರು, ಭಜನಾ ಮಂಡಳಿಗಳು ಆಗಮಿಸಿ ರಾಯರಿಗೆ ಭಕ್ತಿ ಸೇವೆಯನ್ನ ಸಮರ್ಪಿಸುತ್ತಿದ್ದಾರೆ. ಇದನ್ನೂ ಓದಿ: ಮನೆಯೂಟ ಕೋರಿ ದರ್ಶನ್ ಮನವಿ – ಸೆ.5ರವರೆಗೆ ಜೈಲೂಟವೇ ಗತಿ
ರಾಯಚೂರು: ಗುರು ರಾಘವೇಂದ್ರ ಸ್ವಾಮಿಗಳ (Guru Raghavendra) ಸನ್ನಿಧಿ ಮಂತ್ರಾಲಯದಲ್ಲಿ ಈಗ ರಾಯರ 353ನೇ ಆರಾಧನಾ ಮಹೋತ್ಸವ ಸಂಭ್ರಮ ಮನೆ ಮಾಡಿದೆ. ಇಂದಿನಿಂದ ಏಳು ದಿನಗಳ ಕಾಲ ಧಾರ್ಮಿಕ, ಸಾಂಸ್ಕೃತಿಕ ವೈಭವವೇ ಮಂತ್ರಾಲಯದಲ್ಲಿ ತೆರೆದುಕೊಳ್ಳಲಿದೆ. ಶಿಲಾಮಂಟಪಕ್ಕೆ ಭಕ್ತರು ನಿರ್ಮಿಸುತ್ತಿರುವ ಸ್ವರ್ಣಲೇಪಿತ ಕವಚ ಈ ಬಾರಿಯ ಆಕರ್ಷಣೆಯಾಗಿದ್ದು, ಮದುವಣಗಿತ್ತಿಯಂತೆ ಮಂತ್ರಾಲಯ (Mantralaya) ಸಿಂಗಾರಗೊಳ್ಳುತ್ತಿದೆ.
ಕಲಿಯುಗ ಕಾಮಧೇನು, ಮಂತ್ರಾಕ್ಷತೆ ಮಹಿಮೆಯ ಮಹಾಪುರುಷ ಗುರು ರಾಘವೇಂದ್ರ ಸ್ವಾಮಿಗಳ 353ನೇ ಆರಾಧನಾ ಮಹೋತ್ಸವ ಸಂಭ್ರಮ ಮಂತ್ರಾಲಯದಲ್ಲಿ ಕಳೆಕಟ್ಟಿದೆ. ಇಂದು ಸಂಜೆ ಧ್ವಜಾರೋಹಣ ಮೂಲಕ ರಾಯರ ಆರಾಧನಾ ಮಹೋತ್ಸವಕ್ಕೆ ಶ್ರೀಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಸ್ವಾಮಿ ಚಾಲನೆ ನೀಡಲಿದ್ದಾರೆ. ರಾಯರು ಸಶರೀರವಾಗಿ ವೃಂದಾವನಸ್ಥರಾಗಿ 353 ವರ್ಷಗಳು ಪೂರ್ಣಗೊಳ್ಳುತ್ತಿರುವ ಸಂದರ್ಭವನ್ನು ರಾಯರ ಆರಾಧನಾ ಮಹೋತ್ಸವವಾಗಿ ಆ.18 ರಿಂದ 24 ರವರೆಗೆ ಏಳು ದಿನಗಳ ಕಾಲ ಮಂತ್ರಾಲಯ ಮಠ ಹಾಗೂ ದೇಶ-ವಿದೇಶಗಳಲ್ಲಿರುವ ರಾಯರ ಶಾಖಾ ಮಠಗಳಲ್ಲಿ ಅದ್ದೂರಿಯಾಗಿ ಆಚರಿಸಲಾಗುತ್ತದೆ. ಇದನ್ನೂ ಓದಿ: ಪುಂಡರಿಂದ ವ್ಹೀಲಿಂಗ್ ಹುಚ್ಚಾಟ; ಬೈಕ್‌ಗಳನ್ನು ಕಿತ್ತುಕೊಂಡು ಫ್ಲೈಓವರ್‌ನಿಂದ ಎಸೆದ ಸಾರ್ವಜನಿಕರು
ಏಳು ದಿನಗಳ ಕಾಲ ಬೆಳಗಿನ ಜಾವದಿಂದಲೇ ಪೂಜಾ ಕೈಂಕರ್ಯಗಳು ಆರಂಭಗೊಳ್ಳಲಿದ್ದು, ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಈ ಹಿನ್ನೆಲೆ ರಾಯರ ಮಠ ಸಕಲ ಸಿದ್ದತೆಗಳನ್ನ ಮಾಡಿಕೊಂಡಿದೆ. ಮುಖ್ಯವಾಗಿ ಆ.20 ಕ್ಕೆ ಪೂರ್ವಾರಾಧನೆ, 21 ಕ್ಕೆ ಮಧ್ಯಾರಾಧನೆ, 22 ಕ್ಕೆ ಉತ್ತರಾರಾಧನೆ ನಡೆಯಲಿದ್ದು, ರಥೋತ್ಸವಗಳು, ಮಹಾಪಂಚಾಮೃತ ಅಭಿಷೇಕ, ಮೂಲ ರಾಮದೇವರ ಉತ್ಸವ ಸೇರಿ ಹಲವು ವಿಶೇಷ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ವಿವಿಧ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ಗಣ್ಯರಿಗೆ ಆ.20 ರಂದು ರಾಘವೇಂದ್ರ ಅನುಗ್ರಹ ಪ್ರಶಸ್ತಿ ಪ್ರದಾನ ಮಾಡಲಾಗುವುದು.
ಬಹುಕೋಟಿ ಮೌಲ್ಯದ ಸುವರ್ಣ ಶಿಲಾಮಂಟಪ ಮೆಗಾ ಪ್ರಾಜೆಕ್ಟ್ ಈ ಬಾರಿಯ ಆರಾಧನಾ ಮಹೋತ್ಸವದ ವಿಶೇಷ ಆಕರ್ಷಣೆಯಾಗಿದೆ. ಭಕ್ತರ ದೇಣಿಗೆಯಿಂದ ರಾಯರ ವೃಂದಾವನದ ಶಿಲಾಮಂಟಪಕ್ಕೆ ಚಿನ್ನದ ಕವಚ ತೊಡಿಸುವ ಕಾರ್ಯನಡೆದಿದ್ದು, ಪೂರ್ಣಗೊಂಡಿರುವ ಒಂದು ಭಾಗ ಈ ಬಾರಿ ಲೋಕಾರ್ಪಣೆಯಾಗಲಿದೆ. ಈಗಾಗಲೇ ಶಿಲಾಮಂಟಪದ ಗೋಪುರಕ್ಕೆ ಚಿನ್ನದ ಕವಚ ತೊಡಿಸಲಾಗಿದ್ದು, ಈಗ ಬಹುಕೋಟಿ ವೆಚ್ಚದಲ್ಲಿ ಶಿಲಾಮಂಟಪಕ್ಕೆ ಚಿನ್ನದ ಕವಚ ನಿರ್ಮಿಸಲಾಗುತ್ತಿದೆ. ಇದನ್ನೂ ಓದಿ: TB Dam- ಎಲ್ಲಾ ಸ್ಟಾಪ್ ಲಾಗ್ ಗೇಟ್ ಅಳವಡಿಕೆ ಯಶಸ್ವಿ
ತುಂಗಭದ್ರಾ ನದಿಯಲ್ಲಿ ಈ ಬಾರಿ ನೀರು ಇರುವುದರಿಂದ ಪುಣ್ಯ ಸ್ನಾನಕ್ಕೆ ಭಕ್ತರಿಗೆ ಅನುವುಮಾಡಿಕೊಡಲಾಗುತ್ತಿದೆ. ಸ್ನಾನ ಘಟ್ಟದಲ್ಲಿ ಶವರ್ ವ್ಯವಸ್ಥೆ ಸೇರಿ ಭಕ್ತರಿಗೆ ಅಗತ್ಯ ಸೌಲಭ್ಯ ಒದಗಿಸಲು ಮಠದ ಆಡಳಿತ ಮಂಡಳಿ ಮುಂದಾಗಿದೆ. ಹೀಗಾಗಿ ಮಠಕ್ಕೆ ಆಗಮಿಸುತ್ತಿರುವ ಭಕ್ತರು ಸಹ ಸಂತಸ ವ್ಯಕ್ತಪಡಿಸಿದ್ದಾರೆ. ರಾಯರ ಮಠದ ಆವರಣದಲ್ಲಿ ಪ್ರವಾಸಿ ಮಂದಿರ ಹಾಗೂ ವಿವಿಧ ಅಭಿವೃದ್ಧಿ ಕಾರ್ಯಗಳನ್ನ ಕೈಗೊಂಡಿದ್ದು, ಆ.19 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ. ಏಳು ದಿನ ಕಾಲ ವಿವಿಧ ಕ್ಷೇತ್ರಗಳ ಗಣ್ಯರು, ದೇಶದ ಮೂಲೆ ಮೂಲೆಯಿಂದ ಭಕ್ತರು ಮಂತ್ರಾಲಯಕ್ಕೆ ಆಗಮಿಸಿ ರಾಯರ ಆರಾಧನಾ ಮಹೋತ್ಸವದಲ್ಲಿ ಭಾಗಿಯಾಗಲಿದ್ದಾರೆ.
ರಾಯಚೂರು: ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿಗಳ 350 ನೇ ಆರಾಧನಾ ಮಹೋತ್ಸವ ಹಿನ್ನೆಲೆ ಮಠದ ರಾಜಬೀದಿಯಲ್ಲಿ ಅದ್ಧೂರಿಯಾಗಿ ಮಹಾ ರಥೋತ್ಸವ ನಡೆಯಿತು. ಉತ್ತರಾರಾಧನೆ ಹಿನ್ನೆಲೆ ವಸಂತೋತ್ಸವ ಬಳಿಕ ಮಹಾರಥೋತ್ಸವ ಜರುಗಿಸಲಾಯಿತು.
ರಥೋತ್ಸವ ವೇಳೆ ಹೆಲಿಕ್ಯಾಪ್ಟರ್ ಮೂಲಕ ರಥಕ್ಕೆ ಪುಷ್ಪವೃಷ್ಠಿ ಮಾಡಲಾಯಿತು. ಮಠದ ಶ್ರೀಗಳು ಹೆಲಿಕಾಪ್ಟರ್‍ನಲ್ಲಿ ಕುಳಿತು ರಥಕ್ಕೆ ಪುಷ್ಪ ವೃಷ್ಠಿ ಮಾಡಿದರು. ರಥೋತ್ಸವ ಹಿನ್ನೆಲೆ ನೆರೆದಿದ್ದ ಸಾವಿರಾರು ಭಕ್ತರಿಗೆ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥರು ಆಶೀರ್ವಚನ ನೀಡಿದರು.
ಹಿಂದೂ ಧರ್ಮಕ್ಕೆ ಸಮಾನವಾದ ಧರ್ಮ ಜಗತ್ತಿನಲ್ಲಿ ಎಲ್ಲೂ ಇಲ್ಲ. ಹಿಂದೂ ಧರ್ಮ ಪರಮ ಪವಿತ್ರವಾದುದು. ಜಗತ್ತಿಗೆ ಸಮೃದ್ಧಿ ಹಾಗೂ ಶಾಂತಿಯ ಮಂತ್ರ ಕಲಿಸಿದ ಧರ್ಮವಿದು. ರಾಯರು ಅನೇಕ ಉದ್ಘ್ರಂಥ ಗಳನ್ನು ರಚಿಸುವ ಮೂಲಕ ಸಾರಸ್ವತ ಲೋಕಕ್ಕೆ ಅನನ್ಯ ಕೊಡುಗೆ ನೀಡಿದ್ದಾರೆ. ಭಕ್ತಿ ಮಾರ್ಗದಿಂದ ಮಾತ್ರ ಜೀವನದಲ್ಲಿ ಸಾಧನೆ ಮಾಡಲು ಸಾಧ್ಯ ಎಂದು ರಥದಲ್ಲಿ ಕುಳಿತು ಅನುಗ್ರಹ ಸಂದೇಶ ನೀಡಿದರು..
ವಿಶ್ವದ ಮಹಾಗುರುಗಳು ಸರ್ವ ಜಾತಿ ಜನಾಂಗದವರನ್ನು ಅನುಗ್ರಹಿಸುತ್ತಿದ್ದಾರೆ. ರಾಯರ ಸೇವೆ ಸಲ್ಲಿಸುವ ಮೂಲಕ ಅವರ ಅಂತರ್ಯಾಮಿಯಾದ ಪರಮಾತ್ಮನ ಅನುಗ್ರಹಿಸಬೇಕು.ರಾಯರು ಭಕ್ತಿ ಮಾರ್ಗದಿಂದ ದೇವರ ಅನುಗ್ರಹಕ್ಕೆ ಪಾತ್ರರಾಗುವ ಬಗೆಯನ್ನು ತಿಳಿಸಿಕೊಟ್ಟಿದ್ದಾರೆ. ಅಂಥ ಮಾರ್ಗ ಎಲ್ಲರಿಗೂ ದಾರಿದೀಪ ಎಂದರು.
ಶ್ರೀಮಠವು ಕೊರೊನಾ ಹಿನ್ನೆಲೆ ಆರಾಧನೆಯನ್ನು ಅತ್ಯಂತ ಸರಳವಾಗಿ ಆಚರಿಸಲು ಉದ್ದೇಶಿಸಿತ್ತು. ಆದರೆ ರಾಯರ ಭಕ್ತರು ಕೊರೊನಾಕ್ಕೆ ಹೆದರದೇ ಭಾರಿ ಸಂಖ್ಯೆಯಲ್ಲಿ ಆಗಮಿಸಿರುವುದು ಅವರೆಡೆಗೆ ಭಕ್ತರ ನಂಬಿಕೆ ವಿಶ್ವಾಸ ಬಯಲುಗೊಳಿಸಿದೆ. ರಾಯರು ತಮ್ಮ ಭಕ್ತರಿಗೆ ಬದುಕನ್ನು ಸರಿದಾರಿಯಲ್ಲಿ ನಡೆಸುವ ಶಕ್ತಿ ತುಂಬಲಿ. ಮಂತ್ರಾಲಯವನ್ನು ಮತ್ತಷ್ಟು ಶ್ರೀಮಂತಗೊಳಿಸುವ ಪ್ರಯತ್ನ ನಿರಂತರವಾಗಿ ನಡೆಯಲಿದೆ ಎಂದರು.
350ನೇ ವರ್ಷದ ಆರಾಧನೆ ಅಂಗವಾಗಿ ಭಕ್ತರು ಕೊಡಮಾಡಿದ ದೇಣಿಗೆಯಿಂದ ವಜ್ರದ ಹಾರವನ್ನು ರಾಯರಿಗೆ ಸಮರ್ಪಿಸಲಾಗಿದೆ. ಭಕ್ತರ ಹಣದಿಂದಲೇ ಪಾದ ಕಾಣಿಕೆಯಿಂದ ರಾಮದೇವರ ಪೂಜೆ ಹಾಗೂ ಅಭಿಷೇಕಕ್ಕೆ ಬಳಕೆ ಮಾಡಲು 14 ಕೆಜಿ ತೂಕದ 20 ಕೋಟಿ ಮೌಲ್ಯದ ಚಿನ್ನದ ಎರಡು ಪಾತ್ರೆಗಳನ್ನ ರಾಯರಿಗೆ ಸಮರ್ಪಿಸಲಾಗಿದೆ. ಆರಾಧನೆ ಮೂಲಕ ಜಗತ್ತನ್ನು ಕವಿದಿರುವ ಕೊರೊನಾ ಉಪದ್ರವ ಕಳೆದು ಶಾಂತಿ ನೆಮ್ಮದಿ ನೆಲೆಸಲಿ ಅಂತ ಮಂತ್ರಾಲಯ ಶ್ರೀಗಳು ಹಾರೈಸಿದರು. ಇದನ್ನೂ ಓದಿ: ಮಂತ್ರಾಲಯ ಗುರು ರಾಘವೇಂದ್ರ ಸ್ವಾಮಿ ಮಠದಲ್ಲಿ ರಾಯರ ಉತ್ತರಾರಾಧನೆ
ರಾಯರ ಆರಾಧನಾ ಮಹೋತ್ಸವದ ಸಂಭ್ರಮಕ್ಕೆ ಮಹಾರಥೋತ್ಸವ ಮೂಲಕ ತೆರೆಬಿದ್ದಿದೆ. ಆಗಸ್ಟ್ 27 ರ ವರೆಗೆ ಸಪ್ತರಾತ್ರೋತ್ಸವ ನಡೆಯಲಿದೆ. ಸಪ್ತರಾತ್ರೋತ್ಸವ ಅಂಗವಾಗಿ ಮಠದ ಪ್ರಾಂಗಣ ಹಾಗೂ ಹೊರಗಡೆ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಮುಂದುವರಿಯಲಿವೆ.ಇದನ್ನೂ ಓದಿ: ರಾಯರ ಆರಾಧನೆ- ಪಾದಯಾತ್ರೆ ಮೂಲಕ ಹರಿದು ಬಂತು ಭಕ್ತರ ದಂಡು
ರಾಯಚೂರು: ಮಂತ್ರಾಲಯದಲ್ಲಿ ನಡೆಯುತ್ತಿರುವ ಗುರು ರಾಘವೇಂದ್ರ ಸ್ವಾಮಿಗಳ 350ನೇ ಆರಾಧನಾ ಮಹೋತ್ಸವ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಂದ ಅದ್ದೂರಿಯಾಗಿ ಜರುಗುತ್ತಿದೆ. ಪೂರ್ವಾರಾಧನೆ ಹಿನ್ನೆಲೆ ಇಂದು ನಾನಾ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು.
ರಾಯರು ಸಶರೀರವಾಗಿ ವೃಂದಾವನಸ್ಥರಾಗಿ 350 ವರ್ಷಗಳಾಗಲಿವೆ. ರಾಯರು 700 ವರ್ಷ ಕಾಲ ವೃಂದಾವನದಲ್ಲಿರುತ್ತಾರೆ ಎನ್ನುವ ಪ್ರತೀತಿಯಿದೆ. ಈ ಹಿನ್ನೆಲೆಯಲ್ಲಿ ಈ ವರ್ಷದ 350ನೇ ಆರಾಧನಾ ಮಹೋತ್ಸವಕ್ಕೆ ವಿಶೇಷತೆಯಿದ್ದು, 700 ವರ್ಷ ಅವಧಿಯ ಮಧ್ಯಭಾಗವೇ ಈ ವರ್ಷದ ಮಧ್ಯಾರಾಧನೆಯಾಗಿದೆ. ಮಧ್ಯಾರಾಧನೆ ಹಿನ್ನೆಲೆ ತಿರುಮಲ ತಿರುಪತಿ ದೇವಾಲಯದಿಂದ ರಾಯರಿಗೆ ಶೇಷವಸ್ತ್ರ ಸಮರ್ಪಣೆ ನಡೆಯಲಿದೆ. ಮಠದ ಪ್ರಾಂಗಣದಲ್ಲಿ ಚಿನ್ನದ ರಥೋತ್ಸವ ನಡೆಯಲಿದೆ. ಇದನ್ನೂ ಓದಿ: ಮಂತ್ರಾಲಯ ಶ್ರೀಗಳಿಂದ ಹೊಸ ಸಂಪ್ರದಾಯಕ್ಕೆ ನಾಂದಿ – ಸ್ವಾಮೀಜಿಗಳ ರಕ್ಷಣೆಗೆ ಬೌನ್ಸರ್ಗಳ ನೇಮಕ
ರಾಯಚೂರು: ಗುರುರಾಘವೇಂದ್ರ ಸ್ವಾಮಿ ಮಠ ಮಂತ್ರಾಲಯದಲ್ಲಿ ರಾಯರ 350ನೇ ಆರಾಧನಾ ಮಹೋತ್ಸವ ಆಗಸ್ಟ್ 21 ರಿಂದ 27ರವರೆಗೆ ನಡೆಯಲಿದೆ ಎಂದು ಮಠದ ಪೀಠಾಧಿಪತಿ ಸುಬುಧೇಂದ್ರತೀರ್ಥ ಸ್ವಾಮಿ ಹೇಳಿದ್ದಾರೆ.
ಮಂತ್ರಾಲಯದಲ್ಲಿ ಮಾತನಾಡಿದ ಶ್ರೀಗಳು, ರಾಘವೇಂದ್ರ ಸ್ವಾಮಿಗಳು ಸಶರೀರವಾಗಿ ವೃಂದಾವನಸ್ಥರಾದ ದಿನದ ಹಿನ್ನೆಲೆ ಆರಾಧನಾ ಮಹೋತ್ಸವ ಆಚರಣೆ ಮಾಡಲಾಗುತ್ತದೆ. ಕೋವಿಡ್ ನಿಯಮಗಳನ್ನ ಪಾಲಿಸಿ ಆರಾಧನಾ ಮಹೋತ್ಸವ ನಡೆಸಲು ಸಿದ್ಧತೆ ಮಾಡಿಕೊಂಡಿರುವುದಾಗಿ ತಿಳಿಸಿದ್ದಾರೆ.
ದುಂದುವೆಚ್ಚ ಹಾಗೂ ವಿಜೃಂಭಣೆಯಿಂದ ಮಾಡದೇ ಸಾಂಸ್ಕೃತಿಕವಾಗಿ ಆಚರಿಸಲಾಗುತ್ತದೆ. ಏಳು ದಿನಗಳ ಕಾಲ ಸಪ್ತರಾತ್ರೋತ್ಸವ ನಡೆಯಲಿದೆ. ಈ ಬಾರಿಯೂ ದೇಶದ ವಿವಿಧೆಡೆಯಿಂದ ಹೆಚ್ಚು ಸಂಖ್ಯೆಯಲ್ಲಿ ಭಕ್ತರು ಬರುವ ನಿರೀಕ್ಷೆಯಿದೆ. ಸ್ಯಾನಿಟೈಸೇಷನ್, ಎಲೆಕ್ಟ್ರಾನಿಕ್ ಥರ್ಮಲ್ ಸ್ಕ್ರೀನಿಂಗ್ ಹಾಗೂ ಆಧುನಿಕ ಯಂತ್ರಗಳ ಅಳವಡಿಕೆ ಮಾಡಲಾಗಿದೆ. ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ತೆರೆಯಲಾಗಿದ್ದು, ವೈದ್ಯರ ಸೇವೆಗೆ ವ್ಯವಸ್ಥೆ ಮಾಡಲಾಗಿದೆ. ಕುಡಿಯುವ ನೀರು, ವಸತಿ, ಊಟ, ತಾತ್ಕಾಲಿಕ ಶೌಚಾಲಯ ವ್ಯವಸ್ಥೆ ಮಾಡಲಾಗಿದೆ. ತಿರುಪತಿ ತಿರುಮಲ ದೇವಾಲಯದಿಂದ ಶೇಷ ವಸ್ತ್ರ ಬರಲಿದೆ. ಸಾಂಸ್ಕೃತಿಕ ಹಾಗೂ ಸಂಗೀತ ಕಾರ್ಯಕ್ರಮಗಳು ಹೊರ ಪ್ರಾಂಗಣದಲ್ಲಿ ಏಳುದಿನ ನಡೆಯಲಿವೆ ಎಂದು ನುಡಿದಿದ್ದಾರೆ. ಇದನ್ನೂ ಓದಿ:ವರಮಹಾಲಕ್ಷ್ಮಿ ಹಬ್ಬಕ್ಕೆ ಶಾಪಿಂಗ್ – ಕೊರೊನಾ ನಿಯಮಗಳಿಗೆ ಕ್ಯಾರೇ ಅನ್ನುತ್ತಿಲ್ಲ ಜನ
ಭಕ್ತರ ಕಾಣಿಕೆಯಿಂದ 14 ಕೆ.ಜಿ. ಚಿನ್ನದ ಪೂಜಾ ಪಾತ್ರೆಗಳ ತಯಾರಿಕೆ ನಡೆದಿದೆ. ಭವ್ಯವಾದ ಮ್ಯೂಸಿಯಂ ಸಿದ್ದಗೊಳಿಸಿದ್ದು ಆರಾಧನಾ ಕಾರ್ಯಕ್ರಮ ವೇಳೆ ಲೋಕಾರ್ಪಣೆ ನಡೆಯಲಿದೆ. ಮಿನಿ ಏರ್ಪೋರ್ಟ್ ನಿರ್ಮಾಣಕ್ಕೆ ದಾನಿಗಳು ಮುಂದೆ ಬಂದಿದ್ದು, ಮುಂದಿನ ದಿನಗಳಲ್ಲಿ ಆಗಲಿದೆ. ರಾಯಚೂರಿನಲ್ಲಿ ನಿರ್ಮಾಣವಾಗಲಿರುವ ವಿಮಾನ ನಿಲ್ದಾಣಕ್ಕೆ ರಾಯರ ಹೆಸರನ್ನು ಇಡುವುದು ಸೂಕ್ತ. ವಿಮಾನದಲ್ಲಿ ಬರುವ ಹೆಚ್ಚು ಪ್ರಯಾಣಿಕರು ರಾಯರ ಭಕ್ತರು ಆಗಿರುತ್ತಾರೆ. ಮಂತ್ರಾಲಯಕ್ಕೆ ಬರುವವರೇ ಹೆಚ್ಚು ಇರುತ್ತಾರೆ ಅಂತ ಸುಬುಧೇಂದ್ರತೀರ್ಥ ಸ್ವಾಮಿ ಹೇಳಿದ್ದಾರೆ. ಇದನ್ನೂ ಓದಿ:2 ದಿನ ಹಂಪಿ ವೀಕ್ಷಣೆ ಮಾಡಲಿದ್ದಾರೆ ವೆಂಕಯ್ಯ ನಾಯ್ಡು
ರಾಯಚೂರು: ಮಂತ್ರಾಲಯದಲ್ಲಿ ನಡೆಯುತ್ತಿರುವ ಗುರು ರಾಘವೇಂದ್ರ ಸ್ವಾಮಿಗಳ 349 ನೇ ಆರಾಧನಾ ಮಹೋತ್ಸವಕ್ಕೆ ಇಂದು ಉತ್ತರರಾಧನೆ ಸಂಭ್ರಮದ ಮೂಲಕ ತೆರೆ ಬಿದ್ದಿದೆ.
ಪ್ರತಿ ವರ್ಷ ಉತ್ತರರಾಧನೆ ದಿನ ಮಂತ್ರಾಲಯದಲ್ಲಿ ಮಹಾರಥೋತ್ಸವ ನಡೆಯುತ್ತಿತ್ತು. ಆದ್ರೆ ಈ ಬಾರಿ ಕೊರೊನಾ ಆತಂಕ ಹಿನ್ನೆಲೆ ಮಠದ ಪ್ರಾಂಗಣದಲ್ಲಿ ಮಾತ್ರ ರಥೋತ್ಸವ ನಡೆಯಿತು. ಇಂದು ವಸಂತೋತ್ಸವ, ಮೂಲರಾಮದೇವರ ಪೂಜೆ ಸೇರಿ ನಾನಾ ವಿಶೇಷ ಪೂಜೆ ಹಾಗೂ ಮಹಾಪಂಚಾಮೃತ ಅಭೀಷೇಕದೊಂದಿಗೆ ಉತ್ತರರಾಧನೆ ನಡೆಯಿತು.
ಆಗಸ್ಟ್ 2 ರಿಂದ ಆರಂಭವಾದ ಸಪ್ತರಾತ್ರೊತ್ಸವ ಆಗಸ್ಟ್ 8 ರವರೆಗೆ ನಡೆಯಲಿದೆ. ಶನಿವಾರ ಸರ್ವಸಮರ್ಪಣೋತ್ಸವ ಕಾರ್ಯಕ್ರಮದೊಂದಿಗೆ ಆರಾಧನಾ ಕಾರ್ಯಕ್ರಮ ಸಂಪೂರ್ಣ ಮುಕ್ತಾಯಗೊಳ್ಳಲಿದೆ. ಕೇವಲ ಸೀಮಿತ ಸಿಬ್ಬಂದಿ ಹಾಗೂ ಭಕ್ತಾಧಿಗಳು ಮಾತ್ರ ಆರಾಧನಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಈ ಮೂಲಕ ಅತ್ಯಂತ ಸರಳವಾಗಿ ಈ ಬಾರಿ ರಾಯರ ಆರಾಧನಾ ಮಹೋತ್ಸವ ಮುಕ್ತಾಯಗೊಂಡಿದೆ.
ರಾಯಚೂರು: ಮಂತ್ರಾಲಯದಲ್ಲಿ ಗುರು ರಾಘವೇಂದ್ರ ಸ್ವಾಮಿಯ 349ನೇ ಆರಾಧನಾ ಮಹೋತ್ಸವಕ್ಕೆ ಇಂದು ಚಾಲನೆ ಸಿಕ್ಕಿದ್ದು, ಗೋ ಪೂಜೆ, ಗಜ ಪೂಜೆ ಧ್ವಜಾರೋಹಣದ ಮೂಲಕ ಆರಾಧನಾ ಮಹೋತ್ಸವಕ್ಕೆ ಮಠದ ಪೀಠಾಧಿಪತಿ ಸುಬುಧೇಂದ್ರತೀರ್ಥ ಸ್ವಾಮೀಜಿ ಚಾಲನೆ ನೀಡಿದರು.
ಆಗಸ್ಟ್ 2 ರಿಂದ 8 ರವರೆಗೆ ಆರಾಧನೆ ಹಿನ್ನೆಲೆ ಸಪ್ತರಾತ್ರೋತ್ಸವ ನಡೆಯಲಿದೆ. ಕೊರೊನಾ ಹಿನ್ನೆಲೆ ಈ ಬಾರಿ ಮಂತ್ರಾಲಯ ಮಠಕ್ಕೆ ಭಕ್ತರ ಪ್ರವೇಶಕ್ಕೆ ಅವಕಾಶವಿಲ್ಲ. ಹೀಗಾಗಿ ಮಠದ ಆಡಳಿದ ಮಂಡಳಿ ಆರಾಧನಾ ಸಪ್ತರಾತ್ರೋತ್ಸವದ ಎಲ್ಲ ಕಾರ್ಯಕ್ರಮಗಳನ್ನು ಮಠದ ಅಧಿಕೃತ ಯೂ ಟ್ಯೂಬ್ ಚಾನಲ್ ‘ಮಂತ್ರಾಲಯ ವಾಹಿನಿ’ಯಲ್ಲಿ ನೇರಪ್ರಸಾರ ಮಾಡಲು ನಿರ್ಧರಿಸಿದೆ.
ಮಂತ್ರಾಲಯ ಮಠದ ಪ್ರಾಕಾರದಲ್ಲಿ ಮಾತ್ರ ಕಾರ್ಯಕ್ರಮಗಳು ನಡೆಯುತ್ತಿದ್ದು. ಧಾರ್ಮಿಕ, ಆಧ್ಯಾತ್ಮಿಕ, ಉತ್ಸವ, ಪ್ರವಚನ ಸೇರಿ ಎಲ್ಲ ಕಾರ್ಯಕ್ರಮಗಳನ್ನು ನೇರ ಪ್ರಸಾರ ಮಾಡಲಾಗುವುದು. ನಾಳೆ ಬೆಳಗ್ಗೆಯಿಂದ ನಿರ್ಮಾಲ್ಯ ವಿಸರ್ಜನೆ, ಪಂಚಾಮೃತ ಅಭಿಷೇಕ ಮೂಲ ರಾಮದೇವರಿಗೆ ಪೂಜೆ ಹಾಗೂ ರಥೋತ್ಸವ ಕಾರ್ಯಕ್ರಮಗಳು ನಡೆಯಲಿವೆ. ದೇಶದ ವಿವಿಧೆಡೆಯಿರುವ ಗುರುರಾಘವೇಂದ್ರ ಸ್ವಾಮಿಯ ಶಾಖಾ ಮಠಗಳಲ್ಲೂ ಏಳು ದಿನಗಳ ಕಾಲ ಸಡಗರದಿಂದ ಆರಾಧನಾ ಮಹೋತ್ಸವ ಆಚರಿಸಲಾಗುತ್ತದೆ.